Tag: Kuvempu

  • ವಧುವಾದ ಗಾಯಕಿ ಸುಹಾನಾ ಸಯ್ಯದ್ – ʻಭಲೇ ಜೋಡಿʼ ಎಂದ ಫ್ಯಾನ್ಸ್‌

    ವಧುವಾದ ಗಾಯಕಿ ಸುಹಾನಾ ಸಯ್ಯದ್ – ʻಭಲೇ ಜೋಡಿʼ ಎಂದ ಫ್ಯಾನ್ಸ್‌

    ‘ಸರಿಗಮಪ’ ಖ್ಯಾತಿಯ ಗಾಯಕಿ ಸುಹಾನಾ ಸಯ್ಯದ್ ಅವರು ತಮ್ಮ 16 ವರ್ಷಗಳ ಸ್ನೇಹಿತ, ರಂಗಭೂಮಿ ಕಲಾವಿದ ನಿತಿನ್ ಶಿವಾಂಶ್ ಅವರನ್ನು ವರಿಸುತ್ತಿದ್ದಾರೆ. ಈ ಜೋಡಿ ಕುವೆಂಪು ಅವರ ಮಂತ್ರ ಮಾಂಗಲ್ಯದ ಆಶಯದಂತೆ ಸರಳವಾಗಿ ಅಂತರ್ ಧರ್ಮೀಯ ವಿವಾಹವಾಗುತ್ತಿದ್ದಾರೆ.

    ಅಂತರ್‌ಧರ್ಮೀಯ ಸರಳ ವಿವಾಹ ಕಾರ್ಯಕ್ರಮದಲ್ಲಿ ಆಪ್ತ ವರ್ಗದವರಷ್ಟೇ ಪಾಲ್ಗೊಳ್ಳುತ್ತಿದ್ದಾರೆ. ರಂಗಭೂಮಿ ಕಲಾವಿದ ನಿತಿನ್ ಜೊತೆ ಸುಹಾನಾ ಹೊಸ ಮನ್ವಂತರಕ್ಕೆ ಹೆಜ್ಜೆ ಇಡುತ್ತಿದ್ದಾರೆ. ಮದುವೆಗೂ ಮುನ್ನ ಭಾವಿ ಪತಿ ಜೊತೆ ಫೋಟೋಗೆ ಫೋಸ್ ಕೊಡುವಾಗ ಫೋಟೋಗಳು ರಿವೀಲ್ ಆಗಿದೆ. ಇದನ್ನೂ ಓದಿ: ರಘು ದೀಕ್ಷಿತ್, ವಾರಿಜಶ್ರೀ ಮದುವೆ ಡೇಟ್ ಫಿಕ್ಸ್

    ವಧುವಾಗಿ ಮಿಂಚುತ್ತಿರುವ ಸುಹಾನಾ ಫೋಟೋಗಳು ʻಪಬ್ಲಿಕ್ ಟಿವಿʼಗೆ ಲಭ್ಯವಾಗಿದೆ. ಸುಹಾನಾ ಗೋಲ್ಡನ್‌ ಬಾರ್ಡರ್‌ ಇರುವ ರೆಡ್‌ ಸೀರೆಯಲ್ಲಿ ಕಂಗೊಳಿಸಿದ್ರೆ, ನಿತಿನ್ ಶಿವಾಂಶ್ ಶೇರ್ವಾನಿಯಲ್ಲಿ ಶೈನ್‌ ಆಗ್ತಿದ್ದಾರೆ. ಇದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರೋ ಸುಹಾನಾ ಅಭಿಮಾನಿಗಳು ʻಸೂಪರ್‌ ಜೋಡಿʼ ಎಂದು ಹೊಗಳಿದ್ದಾರೆ. ಇದನ್ನೂ ಓದಿ: ವೃಷಭ ಟೈಟಲ್ ಸಮಸ್ಯೆ – ದಿಕ್ಕು ತೋಚದಂತೆ ಕೂತಿರುವ ಟೀಮ್

    ಹಿಜಬ್ (Hijab) ಧರಿಸಿ ಹಿಂದೂ ಭಜನೆ ಹಾಡುವ ಸುಹಾನಾಗೆ ತೀವ್ರ ವಿರೋಧ ವ್ಯಕ್ತವಾಗಿತ್ತು, ಆದರೀಗ ಎಲ್ಲಾ ಅಡೆತಡೆಗಳನ್ನ ದಾಟಿ ತಾವು ಬಹುವರ್ಷಗಳಿಂದ ಪ್ರೀತಿಸುತ್ತಿರುವ ಅಂತರ್ ಧರ್ಮದ ಹುಡುಗನ ಜೊತೆ ಮದುವೆಯಾಗಲು ಹೊರಟಿದ್ದಾರೆ. ಈ ಅಂತರ್‌ಧರ್ಮೀಯ ಮದುವೆ ವಿಶೇಷವಾಗಿದ್ದು ಅನೇಕ ಕಲಾವಿದರು ಗಾಯಕರು ಸಾಕ್ಷಿಯಾಗಲಿದ್ದಾರೆ. ಆಮಂತ್ರಣ ಪತ್ರಿಕೆಯಲ್ಲಿ, ಪ್ರೀತಿ ವಿಶ್ವದ ಭಾಷೆ, ಹೃದಯದಿಂದ ಹೊರಹೊಮ್ಮಿದ ಈ ಪ್ರೇಮ ಕಾವ್ಯ ದೇವ ವಿರಚಿತ. ಶ್ರೀ ಕುವೆಂಪುರವರ ಮಂತ್ರ ಮಾಂಗಲ್ಯದ ಆಶಯದಂತೆ ಸುಹಾನಾ ಹಾಗೂ ನಿತಿನ್ ಮದುವೆಯಾಗುತ್ತಿದ್ದೇವೆ. ನಮ್ಮ ನಡೆ ವಿಶ್ವಮಾನವತ್ವದೆಡೆಗೆ ಎಂದು ಹೇಳಿಕೊಂಡಿದ್ದಾರೆ.

  • ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’ಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು

    ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ‘ಭಾರತ ರತ್ನ’ಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಶಿಫಾರಸು

    ಬೆಂಗಳೂರು: ರಾಷ್ಟ್ರಕವಿ ಕುವೆಂಪುಗೆ ಮರಣೋತ್ತರ ಭಾರತ ರತ್ನ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

    ನಗರದಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆಸಲಾಯಿತು. ರಾಷ್ಟçಕವಿ ಕುವೆಂಪು ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಶಿಫಾರಸು ಮಾಡಲು ನಿರ್ಧರಿಸಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.

    ಕುವೆಂಪು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಹಿರಿಯ ಸಾಹಿತಿಗಳು ಈ ಹಿಂದೆಯೇ ಮನವಿ ಮಾಡಿದ್ದರು. ಅದರಂತೆ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

    ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ ಅವರು ಕನ್ನಡದ ಮೇರುಕವಿ, ನಾಟಕಕಾರ ಮತ್ತು ವಿಮರ್ಶಕ. ಕನ್ನಡ ಸಾಹಿತ್ಯಕ್ಕೆ ಕುವೆಂಪು ಕೊಡುಗೆಯನ್ನು ಗುರುತಿಸಿ ಕರ್ನಾಟಕ ಸರ್ಕಾರ ‘ರಾಷ್ಟ್ರಕವಿ’ ಬಿರುದನ್ನು 1964ರಲ್ಲಿ ನೀಡಿ ಗೌರವಿಸಿತು. ಅವರ ‘ಶ್ರೀ ರಾಮಾಯಣ ದರ್ಶನಂ’ ಕೃತಿಗೆ ಜ್ಞಾನಪೀಠ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಪ್ರಶಸ್ತಿ ಪಡೆದ ಮೊದಲ ಕನ್ನಡ ಸಾಹಿತಿ ಎಂಬ ಹೆಗ್ಗಳಿಕೆಗೆ ಕುವೆಂಪು ಪಾತ್ರರಾಗಿದ್ದಾರೆ.

  • ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ವಿವಾದ – ಪಬ್ಲಿಕ್ ಟಿವಿ ಫಟಾಫಟ್ ಇಂಪ್ಯಾಕ್ಟ್ : ಮುದ್ರಣ ದೋಷ ಎಂದ ತಂಗಡಗಿ

    ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ ವಿವಾದ – ಪಬ್ಲಿಕ್ ಟಿವಿ ಫಟಾಫಟ್ ಇಂಪ್ಯಾಕ್ಟ್ : ಮುದ್ರಣ ದೋಷ ಎಂದ ತಂಗಡಗಿ

    ಬೆಂಗಳೂರು: ಮುದ್ರಣ ದೋಷದಿಂದಾಗಿ ನಾಡಗೀತೆ (Nada Geethe) ವಿಚಾರದಲ್ಲಿ ಗೊಂದಲವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆಯ ಸಚಿವ ಶಿವರಾಜ್‌ ತಂಗಡಗಿ (Shivaraj Tangadagi) ಸ್ಪಷ್ಟನೆ ನೀಡಿದ್ದಾರೆ.

    ಖಾಸಗಿ ಶಾಲೆಗಳಲ್ಲಿ (Private School) ನಾಡಗೀತೆ ಕಡ್ಡಾಯವಲ್ಲ ಎಂಬ ವಿವಾದಾತ್ಮಕ ಆದೇಶ ಹೊರಡಿಸಿದ ಸುದ್ದಿಯನ್ನು ಪಬ್ಲಿಕ್‌ ಟಿವಿ ಪ್ರಸಾರ ಮಾಡಿದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು ಪ್ರಿಂಟ್ ಮಿಸ್ಟೇಕ್ ಆಗಿದೆ. ಆದೇಶ ಮಾಡುವಾಗ ಎಲ್ಲಾ ಶಾಲೆ ಎಂದು ಬದಲಾಗಲಿದೆ ಎಂದು ತಿಳಿಸಿದರು.  ಇದನ್ನೂ ಓದಿ: ಕೆರಗೋಡು ಹನುಮಧ್ವಜ ವಿವಾದ – ಅಯೋಧ್ಯೆ ರಾಮ ಮಂದಿರ ಮುಂದೆ ಪಣ ತೊಟ್ಟ ಹಿಂದೂ ಕಾರ್ಯಕರ್ತರು

     

    ಮನುಷ್ಯ ನಡೆಯುವಾಗ ಎಡವುತ್ತಾನೆ. ಹಾಗೆಯೇ ಇಲ್ಲಿ ಸಹಾ ಸಣ್ಣ ತಪ್ಪಾಗಿದೆ. ಅಧಿಕಾರಿಗಳು ಮನಸ್ಸೋ ಇಚ್ಛೆ ನಡೆದುಕೊಂಡಿಲ್ಲ. ಅಧಿಕಾರಿಗಳ ಮೇಲೆ ಸರ್ಕಾರದ ಲಂಗು ಲಗಾಮು ಎಲ್ಲಾ ಇದೆ. ಆದರೆ ಸಣ್ಣ ತಪ್ಪಿನಿಂದ ಈ ಗೊಂದಲ ಆಗಿದೆ. ಎಲ್ಲವನ್ನೂ ಸರಿಪಡಿಸಿ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದರು.

    ನಾಡಗೀತೆ ವಿವಾದ ಕೋರ್ಟ್‌ನಲ್ಲಿ ಇತ್ತು. ಸಿ ಅಶ್ವಥ್ ಅವರ ಧ್ವನಿಯಲ್ಲಿ ನಾಡಗೀತೆ ಪ್ರಸಾರವಾಗಬೇಕು. ಮೈಸೂರು ಅನಂತ ಸ್ವಾಮಿ ಅವರ ಧ್ವನಿಯಲ್ಲಿ ಅಲ್ಲ ಎಂದು ಕಿಕ್ಕೇರಿ ಕೃಷ್ಣ ಮೂರ್ತಿ ಅವರು ಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯಕ್ಕೆ ನಾವು ಮಾಹಿತಿ ನೀಡುವಾಗ ಈ ಆದೇಶ ಆಗಿದ್ದು ಅದರಲ್ಲಿ ಸಣ್ಣ ಮುದ್ರಣ ದೋಷವಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ರಾಮನಗರ ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ – ಐಜೂರು ಠಾಣೆಯ ಪಿಎಸ್ಐ ಅಮಾನತು

     

    ನಮ್ಮ ಸರ್ಕಾರಕ್ಕೆ ಕನ್ನಡದ ಬಗ್ಗೆ ಕಾಳಜಿ ಇದೆ. ಈ ವಿಚಾರದಲ್ಲಿ ಬಹಳ ಸ್ಪಷ್ಟವಾಗಿ ಇದ್ದೇವೆ. ಮಾಧ್ಯಮ ಮಿತ್ರರಿಗೆ ಇದರ ಬಗ್ಗೆ ತಿಳಿಸಲೆಂದೇ ಬಂದಿದ್ದೇನೆ. ಸಹಜವಾಗಿ ನೋಟ್ ಶೀಟ್ ಒಳಗಡೆ ಸಣ್ಣಪುಟ್ಟ ಸಮಸ್ಯೆಯಾಗಿದೆ ಎಂದರು.

  • ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಸರ್ಕಾರದಿಂದ ಆದೇಶ

    ಖಾಸಗಿ ಶಾಲೆಗಳಲ್ಲಿ ನಾಡಗೀತೆ ಕಡ್ಡಾಯವಲ್ಲ: ಸರ್ಕಾರದಿಂದ ಆದೇಶ

    ಬೆಂಗಳೂರು: ಖಾಸಗಿ ಶಾಲೆಗಳಲ್ಲಿ (Private School) ಇನ್ನು ಮುಂದೆ ನಾಡಗೀತೆ (Nada Geethe) ಹಾಡುವುದು ಕಡ್ಡಾಯವಲ್ಲ ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.

    ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ ಸರ್ಕಾರಿ ಶಾಲೆಗಳು (Govt Schools) ಮತ್ತು ಅನುದಾನಿತ ಶಾಲೆಗಳಲ್ಲಿ (Aided school) ಮಾತ್ರ ನಾಡಗೀತೆ ಹಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿವಾದಿತ ಆದೇಶವನ್ನು ಹೊರಡಿಸಿದೆ. ಇದನ್ನೂ ಓದಿ: ವರ್ತೂರು ಸಂತೋಷ್ ಟೀಮ್ ವಿರುದ್ಧ ಜಗ್ಗೇಶ್ ದೂರು

    ಈ ಹಿಂದೆ ಎಲ್ಲಾ ಶಾಲೆಗಳಲ್ಲಿ ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ನಾಡಗೀತೆಯನ್ನು ಹಾಡಬೇಕಿತ್ತು. ಇದಲ್ಲದೆ ಸರ್ಕಾರಿ ಇಲಾಖೆ, ಕಚೇರಿ, ಪ್ರಾಧಿಕಾರಗಳು, ಸರ್ಕಾರದ ಸಂಸ್ಥೆಗಳ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಮುನ್ನ ನಾಡಗೀತೆ ಹಾಡಬೇಕು ಎಂದು ಆದೇಶಿಸಲಾಗಿತ್ತು. ಇದನ್ನೂ ಓದಿ: ರಾಮನಗರ ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ – ಐಜೂರು ಠಾಣೆಯ ಪಿಎಸ್ಐ ಅಮಾನತು

    ಹಿಂದಿನ ಆದೇಶವನ್ನು ಬದಲಾವಣೆ ಮಾಡಿದ ರಾಜ್ಯ ಸರ್ಕಾರ ಈಗ ಎಲ್ಲಾ ಶಾಲೆಗಳು ಎಂಬುದರ ಬದಲಾಗಿ ಸರ್ಕಾರಿ ಶಾಲೆಗಳು ಎಂದು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

     

  • ಕುವೆಂಪು ಘೋಷವಾಕ್ಯ ತೆಗೆದುಹಾಕಲು ಸರ್ಕಾರ ಆದೇಶಿಸಿಲ್ಲ: ಸಚಿವ ಮಹದೇವಪ್ಪ

    ಕುವೆಂಪು ಘೋಷವಾಕ್ಯ ತೆಗೆದುಹಾಕಲು ಸರ್ಕಾರ ಆದೇಶಿಸಿಲ್ಲ: ಸಚಿವ ಮಹದೇವಪ್ಪ

    – `ಜ್ಞಾನದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’; ಇದನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು
    – ಇದೊಂದು ವಿವಾದದ ಅಂಶವೇ ಅಲ್ಲ ಎಂದ ಸಚಿವರು

    ಬೆಂಗಳೂರು: `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಸರ್ಕಾರ ಹೊರಡಿಸಿಲ್ಲ. ಆದ್ರೆ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥ ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಸಚಿವ ಹೆಚ್‌.ಸಿ ಮಹದೇವಪ್ಪ (HC Mahadevappa) ತಿಳಿಸಿದ್ದಾರೆ.

    `ಜ್ಞಾನದೇಗುಲವಿದು ಕೈಮುಗಿದು ಒಳಗೆ ಬನ್ನಿ’ ವಸತಿ ಶಾಲೆಗಳ (Residential Schools) ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರು ಪ್ರಕಟಣೆ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

    ಸಚಿವರ ಪ್ರಕಟಣೆಯಲ್ಲಿ ಏನಿದೆ?
    ಇನ್ನೂ ಈ ಬಗ್ಗೆ ಅಧಿಕೃತ ಪ್ರಕಟಣೆಯನ್ನೂ ಹೊರಡಿಸಿರುವ ಸಚಿವರು, ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ. ಆದರೆ ಸೃಜನಾತ್ಮಕ ಕಲಿಕೆಯ ದೃಷ್ಟಿಯಿಂದ, ಮಕ್ಕಳಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಮೂಡಿಸಿ ಅವರಲ್ಲಿ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದ ಗುಂಪಿನಲ್ಲಿ ಚರ್ಚೆಯನ್ನು ನಡೆಸಿದ್ದು, `ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ’ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ? ಎಂಬ ಆಲೋಚನೆಯನ್ನು ಕೆಲವರು ಮುಂದಿಟ್ಟಾಗ, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ಸರ್ಕಾರದ ಮುಟ್ಟಾಳತನ: ಜೋಶಿ ಆಕ್ರೋಶ

    ಉತ್ತಮ ಆಲೋಚನೆಯನ್ನು ಹೊಂದಿದ ಈ ಸಾಲನ್ನು ಕೆಲವರು ಶಾಲೆಗಳಲ್ಲೂ ಬಳಸಿರುತ್ತಾರೆ. ಅಂದಹಾಗೆ ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ ಎಂದರೆ ಅದು ಕುವೆಂಪು ಅವರು ಹೇಳುವ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯವೇ ಆಗಿದ್ದು, ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದವು ಇಲ್ಲಿ ಜರುಗಿರುವುದಿಲ್ಲ. ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯ ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಮಕ್ಕಳು ಅನ್ಯಾಯ ಆದಾಗ ಪ್ರಶ್ನೆ ಮಾಡ್ಬೇಕು, ದೌರ್ಜನ್ಯ ಆದಾಗ ಪ್ರತಿಭಟನೆ ಮಾಡಬೇಕು. ಅನ್ಯಾಯ ಆದವರ ಪರ ದನಿ ಎತ್ತಬೇಕು. ಆ ಸಾಲಿನಲ್ಲಿ ಏನು ಧೈರ್ಯ ತುಂಬಬೇಕು? ಅದನ್ನು ಮಾಡುತ್ತೇವೆ. ಕುವೆಂಪು ಜಾಗೃತಿ ಮೂಡಿಸಿದ್ದಾರೆ, ಸಂವಿಧಾನ ಕಾನೂನು ಮಾತನಾಡುವ ಹಕ್ಕು ಕೊಟ್ಟಿದೆ. ಸುಮ್ಮ-ಸುಮ್ಮನೆ ಇದನ್ನೆಲ್ಲ ಕಾಂಟ್ರವರ್ಸಿ ಮಾಡೋದು ಬೇಡ ಎಂದು ಮನವಿ ಮಾಡಿದ್ರು.

    ಬಿಜೆಪಿಯವರು ಕಾಂಟ್ರವರ್ಸಿ ಮಾಡ್ತಿದ್ದಾರಾ ಅನ್ನೋ ಪ್ರಶ್ನೆಗೆ ಉತ್ತರಿಸಿ, ಬಿಜೆಪಿಯವರು ಕಾಂಟ್ರವರ್ಸಿ ಮಾಡದ ವಿಷಯ ಯಾವುದಿದೆ? ಅಭಿವೃದ್ಧಿ ಬಿಟ್ಟು, ಸಂವಿಧಾನದ ಆಶಯ ಬಿಟ್ಟು, ಕುವೆಂಪು ಅವರ ವೈಚಾರಿಕತೆ ನಿಲುವುಗಳನ್ನ ಬಿಟ್ಟು, ಬಸವಣ್ಣನ ಜಾತಿ ವಿನಾಶ ಬಿಟ್ಟು, ಸುಖಿ ರಾಜ್ಯ ಬಿಟ್ಟು ಮಾಡೋಕೆ ಇನ್ನೇನಿದೆ ಎಂದು ಕಿಡಿಕಾರಿದ್ದಾರೆ.

    ಏನಿದು ವಿವಾದ?
    ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ. ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಆಡಳಿತ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಚರ್ಚಗೆ ಗ್ರಾಸವಾಗಿದೆ. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ

  • ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

    ʻಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿʼ – ಬರಹ ಬದಲಾವಣೆ ಸಮರ್ಥಿಸಿಕೊಂಡ ಲಕ್ಷ್ಮಿ ಹೆಬ್ಬಾಳ್ಕರ್‌

    – ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು ಎಂದ ಸಚಿವೆ
    – ಪ್ರಹ್ಲಾದ್‌ ಜೋಶಿ ಸೋಲಿಸಲು ಸೂಕ್ತ ಅಭ್ಯರ್ಥಿ ನಿಲ್ಲಿಸುತ್ತೇವೆ

    ಹುಬ್ಬಳ್ಳಿ: ಬಿಜೆಪಿಯವರು ಅಗತ್ಯವಿದ್ದಾಗ ಮಾತ್ರ ಜಾತ್ಯತೀತತೆ ಬಗ್ಗೆ ಮಾತನಾಡ್ತಾರೆ. ʻಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿʼ ಅನ್ನೋದು ಎರಡೂ ಒಂದೇ ಅಂತ ಹೇಳುವ ಮೂಲಕ ವಸತಿ ಶಾಲೆಗಳ (Residential Schools) ದ್ವಾರದಲ್ಲಿದ್ದ ಬರಹ ಬದಲಾವಣೆಯನ್ನು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಸಮರ್ಥಿಸಿಕೊಂಡರು.

    ಹುಬ್ಬಳ್ಳಿಯಲ್ಲಿ (Hubballi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜ್ಞಾನ ದೇಗುಲಕ್ಕೆ ಜ್ಞಾನ ತೆಗೆದುಕೊಳ್ಳಲು ಬನ್ನಿ. ಆತ್ಮವಿಶ್ವಾಸ ಹೆಚ್ಚಿಸಿಕೊಂಡು ಧೈರ್ಯದಿಂದ ಜೀವನ ಸಾಗಿಸಿ, ಇದರ ಬಗ್ಗೆ ನಾನು ಜಾಸ್ತಿ ಹೇಳಿದ್ರೆ ಪರ ವಿರುದ್ಧದ ಹೇಳಿಕೆಗಳು ಹೆಚ್ಚಾಗುತ್ತೆ ಎಂದು ಹೇಳಿದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು- ಚರ್ಚೆಗೆ ಗ್ರಾಸವಾಯ್ತು ವಸತಿ ಶಾಲೆಗಳಲ್ಲಿನ ಬರಹ

    ಏನಿದು ವಿವಾದ?
    ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Morarji Residential School) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ಬರಹವನ್ನು ಬದಲಿಸಿ ಹಾಕಿ ವಿವಾದಕ್ಕೀಡಾದ ಘಟನೆ ನಡೆದಿದೆ. ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಆಡಳಿತ ಸರ್ಕಾರ ಹಾಗೂ ಪ್ರತಿಪಕ್ಷಗಳ ನಡುವೆ ಚರ್ಚಗೆ ಗ್ರಾಸವಾಗಿದೆ. ಇದನ್ನೂ ಓದಿ: ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ

    ರಾಮರಾಜ್ಯದ ಪರಿಕಲ್ಪನೆ ಕಾಂಗ್ರೆಸ್‌ನದ್ದು:
    ಇನ್ನೂ ಸುಪ್ರೀಂ ಕೋರ್ಟ್ ಸೂಚಿಸಿದ ಜಾಗದಲ್ಲಿ ರಾಮಮಂದಿರ ಕಟ್ಟಿಲ್ಲ ಎಂಬ ಲಾಡ್ ಹೇಳಿಕೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ಸೂಕ್ತ ಉತ್ತರ ಸಿಗಬೇಕಂದ್ರೆ ನೀವು ಸಂತೋಷ್ ಲಾಡ್ ಅವರನ್ನೇ ಕೇಳಿ. ನಾವು ರಾಮ ರಾಜ್ಯದ ಪರಿಕಲ್ಪನೆ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದೇವೆ. ಮನುಷ್ಯ ನಿಧನವಾದ ನಂತರ ರಾಮ ನಾಮ ಜಪಿಸುತ್ತೇವೆ. ಆ ಸದ್ಗತಿ ಸಿಗಲಿ ಅನ್ನೋದೇ ರಾಮರಾಜ್ಯ ಪರಿಕಲ್ಪನೆ. ರಾಮ ರಾಜ್ಯದಲ್ಲಿ ಎಲ್ಲರೂ ಸಂತೋಷವಾಗಿರಬೇಕು. ಈ ಪರಿಕಲ್ಪನೆ ತಂದವರೇ ಕಾಂಗ್ರೆಸ್‌ನವರು ಎಂದು ಬೀಗಿದರು.

    ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಹೆಸರು ಪ್ರಕಟಿಸುವ ಕುರಿತು ಮಾತನಾಡಿ, ಶೀಘ್ರವೇ ಅಭ್ಯರ್ಥಿಯ ಹೆಸರು ಅಂತಿಮವಾಗಲಿದೆ. ನಮ್ಮ ಎದುರಾಳಿ ಪ್ರಹ್ಲಾದ್ ಜೋಶಿ ಈಗಾಗಲೇ ಪ್ರಚಾರ ಆರಂಭಿಸಿದ್ದಾರೆ. ಜೋಶಿ ಹಿಂದೆ 4 ಬಾರಿ ಆಯ್ಕೆಯಾದವರು ಮತ್ತು ಕೇಂದ್ರದಲ್ಲಿ ಸಚಿವರಾದವರು. ಅವರನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತೇವೆ ಎಂದರು.

    ಹೆಬ್ಬಾಳ್ಕರ್ ಅಳಿಯ ರಜತ್ ಉಳ್ಳಾಗಡ್ಡಿ ಮಠ ಶಕ್ತಿ ಪ್ರದರ್ಶನ ವಿಚಾರ ಕುರಿತು ಮಾತನಾಡಿ, ರಜತ್ ನನ್ನ ಅಳಿಯ ಅನ್ನೋ ಕಾರಣಕ್ಕೆ ಅರ್ಜಿ ಹಾಕಿಲ್ಲ. ಹೈಕಮಾಂಡ್ ಎಲ್ಲವನ್ನೂ ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಎಲ್ಲರ ಅಭಿಪ್ರಾಯ ಪಡೆದ ನಂತರವೇ ಅಭ್ಯರ್ಥಿಯನ್ನ ಅಂತಿಮಗೊಳಿಸಲಾಗುತ್ತೆ. ಇಡೀ ರಾಜ್ಯದಲ್ಲಿ ಯುವಕರಿಗೆ ಮತ್ತು ಹಿರಿಯರಿಗೆ ಇಬ್ಬರಿಗೂ ಅವಕಾಶ ಕೊಡಲಾಗುತ್ತೆ.

    ಮುಂದಿನ ಲೋಕಸಭಾ ಚುನಾವಣೆಗೆ ನನ್ನ ಮಗನೂ ಟಿಕೆಟ್ ಆಕಾಂಕ್ಷಿಯಾಗಿ ಅರ್ಜಿ ಕೊಟ್ಟಿದ್ದಾನೆ. ಟಿಕೆಟ್ ಕೊಡಲೇಬೇಕು ಅಂತ ನಾನು ಎಲ್ಲಿಯೂ ಒತ್ತಾಯಿಸಿಲ್ಲ ಹೈಕಮಾಂಡ್ ಮತ್ತು ಜಿಲ್ಲೆಯ ಮುಖಂಡರ ತೀರ್ಮಾನಕ್ಕೆ ನಾನು ಬದ್ಧ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: 6 ಅಡಿ ಎತ್ತರದ ಟಿಪ್ಪುಸುಲ್ತಾನ್ ಕಟೌಟ್ ತೆರವಿಗೆ ನೋಟಿಸ್- DYFI ಮುಖಂಡರು ಆಕ್ರೋಶ

  • ಪಬ್ಲಿಕ್‌ ಟಿವಿ ಇಂಪ್ಯಾಕ್ಟ್- ವಸತಿ ಶಾಲೆಯ ಘೋಷವಾಕ್ಯ ಯಥಾಸ್ಥಿತಿ

    ಪಬ್ಲಿಕ್‌ ಟಿವಿ ಇಂಪ್ಯಾಕ್ಟ್- ವಸತಿ ಶಾಲೆಯ ಘೋಷವಾಕ್ಯ ಯಥಾಸ್ಥಿತಿ

    ವಿಜಯಪುರ: ವಸತಿ ಶಾಲೆಯ ಘೋಷವಾಕ್ಯ ಸಂಬಂಧ ಪಬ್ಲಿಕ್ ಟಿವಿಯಲ್ಲಿ ವರದಿಯಾದ ಬಳಿಕ ಬರಹವನ್ನು ಮೊದಲಿನಂತೆಯೇ ಬದಲಾವಣೆ ಮಾಡಲಾಗಿದೆ.

    ಈ ಕುರಿತು ಶಾಲೆಯ ಪ್ರಿನ್ಸಿಪಾಲ್ ದುಂಡಪ್ಪ ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿ, ಮುಖ್ಯ ಕಾರ್ಯದರ್ಶಿಗಳ ಮೌಖಿಕ ಸೂಚನೆಯಂತೆ ಘೋಷವಾಕ್ಯ ಬದಲಾಯಿಸಿದ್ದೆವು. ಪಬ್ಲಿಕ್ ಟಿವಿಯಲ್ಲಿ ವರದಿಯಾದ ಬಳಿಕ ಘೋಷವಾಕ್ಯ ಮೊದಲಿನಂತೆಯೇ ಬದಲಾವಣೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ವಿಧಾನಸೌಧದಲ್ಲೇ ಶಾಸಕರಿಗೆ ಮಧ್ಯಾಹ್ನದ ಬಿಸಿಯೂಟ- ಖಾದರ್ ಘೋಷಣೆ

    ಆಗಿದ್ದೇನು..?: ವಿಜಯಪುರ (Vijayapur) ಜಿ. ಮುದ್ದೇಬಿಹಾಳ ತಾ. ಘಾಳಪೂಜೆ ಮೊರಾರ್ಜಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಭಾರೀ ಚರ್ಚೆಗೆ ಗ್ರಾಸವಾಗಿತ್ತು.

    ಕೇವಲ ವಿಜಯಪುರ ಮಾತ್ರವಲ್ಲ, ರಾಯಚೂರು ಜಿಲ್ಲೆಯ 36 ವಸತಿ ಶಾಲೆಗ ಪೈಕಿ ಬಹುತೇಕ ಕಡೆಗಳಲ್ಲಿ ಕುವೆಂಪು ವಾಕ್ಯವನ್ನ ಬದಲಾಯಿಸಿ ಬರೆಯಲಾಗಿದೆ. ರಾಯಚೂರು ನಗರದ ಆಶಾಪುರ ರಸ್ತೆಯಲ್ಲಿರುವ ಮುರಾರ್ಜಿ ದೇಸಾಯಿ ವಸತಿ ಶಾಲೆ, ಮಸ್ಕಿ, ಲಿಂಗಸುಗೂರಿನ ಅಡವಿಬಾವಿ ಸೇರಿ ಜಿಲ್ಲೆಯ ಹಲವೆಡೆ ವಾಕ್ಯ ಬದಲಾವಣೆ ಮಾಡಲಾಗಿದೆ.

  • ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ಸರ್ಕಾರದ ಮುಟ್ಟಾಳತನ: ಜೋಶಿ ಆಕ್ರೋಶ

    ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ: ಸರ್ಕಾರದ ಮುಟ್ಟಾಳತನ: ಜೋಶಿ ಆಕ್ರೋಶ

    – ರಾಷ್ಟ್ರಕವಿ ಕುವೆಂಪು ಅವರಿಗೆ ಸರ್ಕಾರದಿಂದ ಅವಮಾನ

    ಹುಬ್ಬಳ್ಳಿ: ಶಾಲೆ, ಹಾಸ್ಟೆಲ್ ಗಳಲ್ಲಿ ‘ಜ್ಞಾನ ದೆಗುಲವಿದು ಧೈರ್ಯವಾಗಿ ಪ್ರಸ್ನಿಸಿ ಎಂಬುದನ್ನು ಬರೆಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ (Congress) ಮುಟ್ಟಾಳತನವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್‌ ಜೋಶಿ (Pralhad Joshi) ಕಿಡಿಕಾರಿದ್ದಾರೆ.

    ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಿರುವುದು ಕಾಂಗ್ರೆಸ್‌ನ ತುಷ್ಟೀಕರಣದ ಪರಮಾವಧಿ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಕಲ್ಕಿಧಾಮ ದೇಗುಲಕ್ಕೆ ಮೋದಿ ಶಂಕುಸ್ಥಾಪನೆ- ಇದು ನನ್ನ ಸೌಭಾಗ್ಯವೆಂದ ಪ್ರಧಾನಿ

     

    ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬುದು ರಾಷ್ಟ್ರಕವಿ ಕುವೆಂಪು (Kuvempu) ಅವರ ಘೋಷವಾಕ್ಯ. ಇದನ್ನು ತಿದ್ದುಪಡಿ ಮಾಡುವ ಮೂಲಕ ಕುವೆಂಪು ಅವರಿಗೂ ಈ ಸರ್ಕಾರ ಅವಮಾನ ಮಾಡಿದೆ ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದರು.

    ಈ ಸರ್ಕಾರ, ಕುವೆಂಪು ಅವರ ಘೋಷ ವಾಕ್ಯವನ್ನೇ ಬದಲಾಯಿಸಿದೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ದೃಷ್ಟಿಯಲ್ಲಿ ಕುವೆಂಪು ಜಾತ್ಯಾತೀತರಲ್ಲವೇ (Secular) ಎಂದು ಪ್ರಶ್ನಿಸಿದರು. ಹಿಂದೂ ವಿರೋಧಿ ನಡೆ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂದಿರುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿರುವ ಜೋಶಿ ಅವರು, ಇದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

    ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ಪರಾಕಾಷ್ಠೆ ತಲುಪಿದೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಎಷ್ಟರ ಮಟ್ಟಿಗೆ ಹಿಂದೂ ವಿರೋಧಿ ನಡೆ ಅನುಸರಿಸುತ್ತಿದೆ ಮತ್ತು ಯಾವ ಹಂತಕ್ಕೆ ತುಷ್ಟೀಕರಣ ಮಾಡುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಸಚಿವ ಜೋಶಿ ಕಿಡಿಕಾರಿದರು.

    ವಿಧಾನಸಭೆ, ವಿಧಾನ ಪರಿಷತ್ ನಲ್ಲಿ ಚರ್ಚೆ
    ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬುದನ್ನು ಅಳಿಸಿ ಹಾಕಿ ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ತಿದ್ದುಪಡಿ ಮಾಡಿರುವ ಬಗ್ಗೆ ಬಹುತೇಕ ಇಂದು ವಿಧಾನಸಭೆ ಮತ್ತು ವಿಧಾನ ಪರಿಷತ್ ಅಲ್ಲಿ ಬಿಜೆಪಿ ಚರ್ಚೆ ಮಾಡಲಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.

  • ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ

    ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ- ಕುವೆಂಪು ಬರಹ ಬದಲಿಕೆಗೆ ಪ್ರಿಯಾಂಕ್ ಖರ್ಗೆ ಸಮರ್ಥನೆ

    ಬೆಂಗಳೂರು: ವಸತಿ ಶಾಲೆಗಳಲ್ಲಿ ಘೋಷವಾಕ್ಯ (School Tagline) ಬದಲಾವಣೆ ವಿಚಾರ ಭಾರೀ ಚರ್ಚೆಯ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸಮರ್ಥನೆ ಮಾಡಿಕೊಂಡಿದ್ದಾರೆ.

    ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಸ್ಥಿತಿಗಳ ತಕ್ಕಂತೆ ಬದಲಾವಣೆ ಆಗಬೇಕು. ಧೈರ್ಯವಾಗಿ ಪ್ರಶ್ನಿಸಿ ಅಂದಿದ್ದು ತಪ್ಪಿಲ್ಲ. ಕುತೂಹಲ ಇಲ್ಲ ಅಂದರೆ ಕಲಿಕೆ ಬರಲ್ಲ. ಕಲಿಗೆ ಬರಲ್ಲ ಅಂದರೆ ಜ್ಞಾನ ಬರಲ್ಲ. ಸಮಾಜದಲ್ಲಿ ಪ್ರಬುದ್ಧತೆ ಇರಲ್ಲ. ಪ್ರಬುದ್ಧ ಭಾರತ, ಪ್ರಬುದ್ಧ ಸಮಾಜ ಕಟ್ಟಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಅದು ಬೆಳೆಯಬೇಕು ಅಂದ್ರೆ ಪ್ರಶ್ನೆ ಮಾಡಲೇಬೇಕು ಅಲ್ವಾ ಎಂದು ಹೇಳಿದರು.

    ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಯಬೇಕು. ಅದಕ್ಕೆ ಪ್ರಶ್ನೆ ಕೇಳುವುದು ಮುಖ್ಯ. ಎಲ್ಲದಕ್ಕೂ ಉತ್ತರ ಸಿಗಲ್ಲ, ಪ್ರಶ್ನೆ ಮಾಡಿದ್ರೆ ವೈಜ್ಞಾನಿಕ ಮನೋಭಾವ ಬೆಳೆಯುತ್ತೆ. ಶಿಕ್ಷಕರಿಗೆ ಹೊಸ ರೂಪದಲ್ಲಿ ಕಲಿಕೆ ಆಗುತ್ತೆ ಎಂದರು. ಇದನ್ನೂ ಓದಿ: ಕುವೆಂಪು ಬರಹ ಬದಲಾವಣೆ ವಿಚಾರ- ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸ್ಪಷ್ಟನೆ

    ಇದೇ ವೇಳೆ ಹಿಂದೂ ಪರ ಸಂಘಟನೆಗಳು ಟೀಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಾವೇನು ಬೇರೆ ವಿಚಾರ ಹೇಳಿಲ್ಲ. ಜ್ಞಾನಕ್ಕೆ ನಾವು ತಲೆಬಾಗಲೇ ಬೇಕು. ಲೈಬ್ರರಿಗಳಿಗೆ ಅರಿವು ಕೇಂದ್ರ ಬದಲಾವಣೆ ಮಾಡಿದ್ದೇವೆ. ಅರಿವೇ ಗುರು ಅಂತ ಬಸವಣ್ಣ ಹೇಳಿದ್ದಾರೆ ಇದು ತಪ್ಪಾ?. ಅರಿವು ಮೂಡಿಸಲು ಏನು ಮಾಡಬೇಕು ಅದನ್ನು ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.

    ನಾಲೆಡ್ಜ್ ಬೇಸ್ ಸೊಸೈಟಿ ಕ್ರಿಯೆಟ್ ಮಾಡುತ್ತಿದ್ದೇವೆ. ವಿಶ್ವಗುರು ಆಗಬೇಕು ಅಂದ್ರೆ ನಾಲೆಡ್ಜ್ ಅಗ್ರಸ್ಥಾನ ನೀಡಬೇಕು. ಹಾಸ್ಟೆಲ್ ಗಳು ಎಲ್ಲ ವಸತಿ ಶಾಲೆಗಳು ಜ್ಞಾನ ಕೇಂದ್ರವಾಗಬೇಕು. ಆಗ ಪ್ರಬುದ್ಧ ಮತ್ತು ಸಮೃದ್ಧ ಭಾರತ ಕಟ್ಟಬಹುದು ಎಂದು ಹೇಳುವ ಮೂಲಕ ಪ್ರಿಯಾಂಕ್ ಖರ್ಗೆ ಸಮರ್ಥಿಸಿಕೊಂಡರು.

    ಆಗಿದ್ದೇನು..?; ರಾಜ್ಯದ ಹಲವು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸದ್ಯ ಭಾರೀ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಬರಹವನ್ನು ಮತ್ತೆ ಬದಲಾವಣೆ ಮಾಡಲಾಗುತ್ತಿದೆ.

  • ಕುವೆಂಪು ಬರಹ ಬದಲಾವಣೆ ವಿಚಾರ- ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸ್ಪಷ್ಟನೆ

    ಕುವೆಂಪು ಬರಹ ಬದಲಾವಣೆ ವಿಚಾರ- ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಸ್ಪಷ್ಟನೆ

    ವಿಜಯಪುರ: ರಾಷ್ಟ್ರಕವಿ ಕುವೆಂಪು (Kuvempu) ಅವರ ಬರಹ ಬದಲಾಯಿಸಿರುವ ಕುರಿತು ರಾಜ್ಯಾದ್ಯಂತ ಆಕ್ರೋಶ ಎದ್ದ ಬೆನ್ನಲ್ಲೇ ಸಮಾಜ ಕಲ್ಯಾಣ ಇಲಾಖೆ (Social Welfare Department) ಡಿಡಿ ಪುಂಡಲೀಕ ಮಾನವರ ಸ್ಪಷ್ಟನೆ ನೀಡಿದ್ದಾರೆ.

    ಈ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯೆ ನಿಡಿದ ಅವರು, ನನಗೆ ಯಾವುದೇ ಲಿಖಿತ ಆದೇಶ ಬಂದಿಲ್ಲ. ವಸತಿ ಶಾಲೆಯ ಪ್ರಾಂಶುಪಾಲರ ಟೆಲಿಗ್ರಾಮ ಗ್ರೂಪ್‍ನಲ್ಲಿ ಹಾಕಿದ್ದಾರೆ. ಅದನ್ನ ಆಧರಿಸಿ ಎರಡು ವಸತಿ ಶಾಲೆಯಲ್ಲಿ ಬದಲಾಯಿಸಲಾಗಿದೆ ಎಂದರು. ಇದನ್ನೂ ಓದಿ: ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸು- ಚರ್ಚೆಗೆ ಗ್ರಾಸವಾಯ್ತು ವಸತಿ ಶಾಲೆಗಳಲ್ಲಿನ ಬರಹ

    ಒಟ್ಟು 23 ವಸತಿ ಶಾಲೆಯಲ್ಲಿ ಎರಡು ವಸತಿ ಶಾಲೆಯಲ್ಲಿ ಮಾತ್ರ ಬದಲಾವಣೆ ಮಾಡಲಾಗಿದೆ. ನಮ್ಮ ಪ್ರಿನ್ಸಿಪಾಲ್ ಸೆಕ್ರೆಟ್ರಿ ಮಣಿವಣ್ಣನ್ ಅವರ ಟೆಲಿಗ್ರಾಮ ಮೆಸೇಜ್‍ನ ಆದೇಶದ ಮೇಲೆ ಬದಲಿಸಲಾಗಿದೆ. ಇದರ ಬಗ್ಗೆ ಪರಿಶೀಲನೆ ನಡೆಸಿ ಮುಂದಿನ ಕ್ರಮಕೈಗೊಳ್ಳುತ್ತೇನೆ. ಶಾಲೆಯಲ್ಲಿ ಸಮಸ್ಯೆಗಳ ಬಗ್ಗೆ ಪ್ರಶ್ನಿಸುವ ಹಕ್ಕಿದೆ ಎನ್ನುವ ಹಿನ್ನೆಲೆ ಈ ರೀತಿ ಬದಲಾವಣೆ ಮಾಡಲಾಗಿದೆ ಎಮದು ಅವರು ಸ್ಪಷ್ಟಪಡಿಸಿದರು.

    ಆಗಿದ್ದೇನು..?; ವಿಜಯಪುರ ಜಿಲ್ಲೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ (Vijayapur School Tagline) ಪ್ರವೇಶ ದ್ವಾರದಲ್ಲಿ ಕುವೆಂಪು ಅವರ ‘ಜ್ಞಾನ ದೇಗುಲವಿದು ಕೈಮುಗಿದು ಬಳಗೆ ಬಾ’ ಎಂಬ ಸಾಲುಗಳ ಬದಲಾಗಿ ‘ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ’ ಎಂದು ಬದಲಾಯಿಸಿ ಶಾಲೆಯ ಪ್ರವೇಶ ದ್ವಾರದಲ್ಲಿ ಬರೆಯಲಾಗಿದೆ. ಇದು ಸದ್ಯ ಭಾರೀ ಚರ್ಚೆಗೆ ಗ್ರಾಸವಾಗಿದೆ.