Tag: kuwait

  • ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರದಾನ

    ಪ್ರಧಾನಿ ಮೋದಿಗೆ ಕುವೈತ್‌ನ ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಪ್ರದಾನ

    ಕುವೈತ್‌: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಭಾನುವಾರ ಕುವೈತ್‌ನ (Kuwait) ಅತ್ಯುನ್ನತ ಗೌರವ ‘ದಿ ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ (The Order Of Mubarak Al Kabeer) ಸ್ವೀಕರಿಸಿದರು. ಇದು ಪ್ರಧಾನಿ ಮೋದಿಯವರಿಗೆ ದೇಶವೊಂದು ನೀಡಿದ 20ನೇ ಅಂತಾರಾಷ್ಟ್ರೀಯ ಗೌರವವಾಗಿದೆ.

    ‘ಆರ್ಡರ್ ಆಫ್ ಮುಬಾರಕ್ ಅಲ್ ಕಬೀರ್’ ಕುವೈತ್‌ನ ನೈಟ್‌ಹುಡ್ ಆರ್ಡರ್ ಆಗಿದೆ. ಇದನ್ನು ರಾಷ್ಟ್ರದ ಮುಖ್ಯಸ್ಥರು, ವಿದೇಶಿ ಸಾರ್ವಭೌಮರು ಮತ್ತು ವಿದೇಶಿ ರಾಜಮನೆತನದ ಸದಸ್ಯರಿಗೆ ಸ್ನೇಹದ ಸಂಕೇತವಾಗಿ ನೀಡಲಾಗುತ್ತದೆ. ಇದನ್ನೂ ಓದಿ: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ – ಇಂದಿನಿಂದ ಮೋದಿ ಕುವೈತ್‌ ಪ್ರವಾಸ

    ಇದನ್ನು ಹಿಂದೆ ಬಿಲ್ ಕ್ಲಿಂಟನ್, ಪ್ರಿನ್ಸ್ ಚಾರ್ಲ್ಸ್ ಮತ್ತು ಜಾರ್ಜ್ ಬುಷ್‌ರಂತಹ ನಾಯಕರಿಗೆ ನೀಡಲಾಗಿದೆ. ಕುವೈತ್‌ನ ಬಯಾನ್ ಪ್ಯಾಲೇಸ್‌ನಲ್ಲಿ ಪ್ರಧಾನಿ ಮೋದಿಯವರಿಗೆ ಗೌರವ ರಕ್ಷೆಯನ್ನು ನೀಡಲಾಯಿತು. ಕುವೈತ್‌ನ ಅಮೀರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್ ಸಬಾಹ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

    ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಅವರು ಗಲ್ಫ್ ರಾಷ್ಟ್ರಕ್ಕೆ ಎರಡು ದಿನಗಳ ಭೇಟಿ ನೀಡಿದ್ದಾರೆ. 43 ವರ್ಷಗಳ ಬಳಿಕ ಕುವೈತ್‌ಗೆ ಭಾರತದ ಪ್ರಧಾನಿಯೊಬ್ಬರು ನೀಡಿದ ಮೊದಲ ಭೇಟಿ ಇದಾಗಿದೆ. ಇದನ್ನೂ ಓದಿ: 9/11 ದಾಳಿಯಂತೆ ರಷ್ಯಾ ಬಹುಮಹಡಿ ಕಟ್ಟಡಗಳ ಮೇಲೆ ಡ್ರೋನ್‌ ದಾಳಿ

    ಶೇಖ್ ಸಾದ್ ಅಲ್ ಅಬ್ದುಲ್ಲಾ ಇಂಡೋರ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಸಮುದಾಯ ಕಾರ್ಯಕ್ರಮ ‘ಹಲಾ ಮೋದಿ’ನಲ್ಲಿ ಪ್ರಧಾನಿ ಮೋದಿಯವರ ಭಾಷಣಕ್ಕೂ ಮೊದಲು ಕುವೈತ್‌ನಲ್ಲಿರುವ ಭಾರತೀಯ ಸಮುದಾಯವು ಉತ್ಸಾಹದ ಅಲೆಯಲ್ಲಿ ತೇಲಿತು.

  • ಶಾರ್ಟ್ ಸರ್ಕ್ಯೂಟ್‌ನಿಂದ ಕುವೈತ್‌ನ ಫ್ಲ್ಯಾಟ್‌ನಲ್ಲಿ ಬೆಂಕಿ – ಕೇರಳ ಮೂಲದ ದಂಪತಿ, ಇಬ್ಬರು ಮಕ್ಕಳು ದುರ್ಮರಣ

    ಶಾರ್ಟ್ ಸರ್ಕ್ಯೂಟ್‌ನಿಂದ ಕುವೈತ್‌ನ ಫ್ಲ್ಯಾಟ್‌ನಲ್ಲಿ ಬೆಂಕಿ – ಕೇರಳ ಮೂಲದ ದಂಪತಿ, ಇಬ್ಬರು ಮಕ್ಕಳು ದುರ್ಮರಣ

    ಕುವೈತ್: ಶಾರ್ಟ್ ಸರ್ಕ್ಯೂಟ್‌ನಿಂದಾಗಿ (Short Circuit) ಏರ್ ಕಂಡೀಷನರ್‌ನಲ್ಲಿ (Air Conditioner) ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ (Kerala) ಮೂಲದ ದಂಪತಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುವೈತ್‌ನ (Kuwait) ಫ್ಲ್ಯಾಟ್‌ವೊಂದರಲ್ಲಿ ನಡೆದಿದೆ.

    ಕೇರಳದ ಅಲಪ್ಪುಳದ ನೀರತ್ತುಪುರಂನವರಾದ ಮ್ಯಾಥ್ಯೂಸ್ ಮುಲಾಕಲ್, ಪತ್ನಿ ಲಿನಿ ಅಬ್ರಹಾಂ ಮತ್ತು ಇಬ್ಬರು ಮಕ್ಕಳು ಘಟನೆಯಲ್ಲಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೇಸಿಗೆ ರಜೆಗೆಂದು ಕೇರಳಕ್ಕೆ ತೆರಳಿದ್ದ ಕುಟುಂಬ ಶುಕ್ರವಾರ ಕುವೈತ್‌ಗೆ ವಾಪಸ್ ಆಗಿತ್ತು. ಅದೇ ದಿನ ರಾತ್ರಿ 8 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ಇದನ್ನೂ ಓದಿ: ತಮಿಳುನಾಡು ಸರ್ಕಾರಿ ಬಸ್‌ಗೆ ಯುವಕನಿಂದ ಕಲ್ಲೇಟು

    ವರದಿಗಳ ಪ್ರಕಾರ, ಮ್ಯಾಥ್ಯೂಸ್ ಮುಲಾಕಲ್ ಅವರು ಸುದ್ದಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಪತ್ನಿ ಲಿನಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಕರ್ನಾಟಕದ ನೆರೆರಾಜ್ಯ ಕೇರಳದಲ್ಲಿ ನಿಫಾ ವೈರಸ್‌ ಪತ್ತೆ – 14ರ ಬಾಲಕನಿಗೆ ಸೋಂಕು

    ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು, ಘಟನೆಯಲ್ಲಿ ಮೃತಪಟ್ಟ ಕುಟುಂಬಕ್ಕೆ ತೀವ್ರ ಸಂತಾಪ ಸೂಚಿಸಿದೆ. ರಾಯಭಾರ ಕಚೇರಿ ಕೇರಳದಲ್ಲಿರುವ ಮೃತರ ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮೃತದೇಹಗಳನ್ನು ಕೇರಳಕ್ಕೆ ತಲುಪಿಸುವ ತಯಾರಿ ನಡೆಸುತ್ತಿದೆ ಎಂದು ತಿಳಿಸಿದೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರಕ್ಕೆ 115 ಮಂದಿ ಬಲಿ – 1,000ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳು ತವರಿಗೆ ವಾಪಸ್‌

  • ಕುವೈತ್‌ ಅಗ್ನಿ ದುರಂತದಲ್ಲಿ ಕಲಬುರಗಿ ವ್ಯಕ್ತಿ ಸಾವು

    ಕುವೈತ್‌ ಅಗ್ನಿ ದುರಂತದಲ್ಲಿ ಕಲಬುರಗಿ ವ್ಯಕ್ತಿ ಸಾವು

    ಬೆಂಗಳೂರು/ ಕುವೈಟ್‌ ನಗರ: ಕುವೈಟ್‌ ವಸತಿ ಕಟ್ಟಡವೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕಲಬುರಗಿಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.

    ಆಳಂದ ತಾಲೂಕಿನ ವಿಜಯ್ ಕುಮಾರ್ ಪ್ರಸನ್ನ ಮೃತ ವ್ಯಕ್ತಿ. ಅಗ್ನಿ ದುರಂತದಲ್ಲಿ ಒಟ್ಟು 40 ಭಾರತೀಯರು ಸಾವನ್ನಪ್ಪಿದ್ದಾರೆ.

    ಕುವೈತ್‌ನ ದಕ್ಷಿಣದಲ್ಲಿರುವ ಅಹ್ಮದಿ ಆಡಳಿತ ಪ್ರಾಂತ್ಯದ ಮಂಗಾಫ್‌ ಪ್ರದೇಶದ 6 ಮಹಡಿಗಳ ಕಟ್ಟಡವೊಂದರಲ್ಲಿ ಅಡುಗೆ ಮನೆಯಲ್ಲಿ ಬುಧವಾರ ಬೆಂಕಿ ಹೊತ್ತಿಕೊಂಡಿತ್ತು. ಇದು ದುರಂತಕ್ಕೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಈ ಕಟ್ಟಡದಲ್ಲಿ ಒಂದೇ ಕಂಪನಿಯ 160 ಮಂದಿ ಕೆಲಸಗಾರರು ವಾಸಿಸುತ್ತಿದ್ದರು. ಮೃತಪಟ್ಟವರಲ್ಲಿ ಭಾರತೀಯರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

  • ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರ ದುರ್ಮರಣ – ಮೋದಿ ಸಂತಾಪ

    ಕುವೈತ್ ಅಗ್ನಿ ದುರಂತದಲ್ಲಿ 40 ಮಂದಿ ಭಾರತೀಯರ ದುರ್ಮರಣ – ಮೋದಿ ಸಂತಾಪ

    ಕುವೈತ್: ಇಲ್ಲಿನ ಕಾರ್ಮಿಕರ ಶಿಬಿರದಲ್ಲಿ (Labour Camp) ಸಂಭವಿಸಿದ ಅಗ್ನಿ ಅವಘಡದಲ್ಲಿ (Fire Accident) ಸಾವನ್ನಪ್ಪಿದ 40 ಮಂದಿ ಭಾರತೀಯರಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ.

    ಕುವೈತ್ (Kuwait) ಅಗ್ನಿ ದುರಂತದ ಕುರಿತು ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಸಂತಾಪದ ನುಡಿಗಳನ್ನು ಹಂಚಿಕೊಂಡಿದ್ದಾರೆ. ಕುವೈತ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡ ಅತ್ಯಂತ ದುಃಖಕರವಾಗಿದೆ. ದುರಂತದಲ್ಲಿ ತಮ್ಮವರನ್ನು ಕಳೆದುಕೊಂಡ ಕುಟುಂಬದವರೊಂದಿಗೆ ನಾವಿದ್ದೇವೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ ಮತ್ತು ಸಂತ್ರಸ್ತರಿಗೆ ಸಹಾಯ ಮಾಡಲು ಅಲ್ಲಿನ ಅಧಿಕಾರಿಗಳೊಂದಿಗೆ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಅಗ್ನಿ ದುರಂತ – 40 ಮಂದಿ ಭಾರತೀಯರು ಸಾವು

    ಘಟನೆ ಏನು?
    ಕುವೈತ್‌ನ ಮಂಗಾಫ್ ನಗರದಲ್ಲಿ ಕಾರ್ಮಿಕರ ಶಿಬಿರದಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 40 ಮಂದಿ ಭಾರತೀಯರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 43ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಎನ್‌ಕೌಂಟರ್‌; ಸೇನಾ ದಾಳಿಗೆ ಇಬ್ಬರು ಉಗ್ರರು ಬಲಿ

    ಘಟನೆಯ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕುವೈತ್ ನಗರದಲ್ಲಿ ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಜೈಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿಲ್ಲ, ಯಾರೋ ಪಿತೂರಿ ಮಾಡಿದ್ದಾರೆ: ರೇಣುಕಾಸ್ವಾಮಿ ಕೊಲೆ ಕೇಸ್‌ ಎ3 ಆರೋಪಿ ತಾಯಿ

  • ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಅಗ್ನಿ ದುರಂತ – 40 ಮಂದಿ ಭಾರತೀಯರು ಸಾವು

    ಕುವೈತ್‌ನ ಕಾರ್ಮಿಕರ ಶಿಬಿರದಲ್ಲಿ ಅಗ್ನಿ ದುರಂತ – 40 ಮಂದಿ ಭಾರತೀಯರು ಸಾವು

    – 30ಕ್ಕೂ ಹೆಚ್ಚು ಮಂದಿಗೆ ಗಾಯ

    ಕುವೈತ್‌: ಕಾರ್ಮಿಕರ ಶಿಬಿರದಲ್ಲಿ (Labour Camp) ಸಂಭವಿಸಿದ ಅಗ್ನಿ ದುರಂತರದಲ್ಲಿ ಕನಿಷ್ಠ 40 ಮಂದಿ ಭಾರತೀಯರು ಸಾವನ್ನಪ್ಪಿದ ಘಟನೆ ಕುವೈತ್‌ನ (Kuwait) ಮಂಗಾಫ್ ನಗರದಲ್ಲಿ (Mangaf City) ನಡೆದಿದೆ.

    ಸ್ಥಳೀಯ ಕಾಲಮಾನ ಬೆಳಗ್ಗೆ 6 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಅಗ್ನಿ ಅವಘಡದಿಂದ ಗಾಯಗೊಂಡ ಸುಮಾರು 43ಕ್ಕೂ ಹೆಚ್ಚು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುವೈತ್ ಆರೋಗ್ಯ ಸಚಿವಾಲಯ ತಿಳಿಸಿದೆ. ಈ ಅವಘಡದಲ್ಲಿ 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಕುವೈತ್‌ನಲ್ಲಿರುವ ಭಾರತೀಯ ರಾಯಭಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಕೋರ್ಟ್ ಆವರಣದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ

    ಘಟನೆಯ ಕುರಿತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಕುವೈತ್ ನಗರದಲ್ಲಿ ಅಗ್ನಿ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. 40ಕ್ಕೂ ಹೆಚ್ಚು ಸಾವುಗಳು ಸಂಭವಿಸಿದ್ದು, 50ಕ್ಕೂ ಹೆಚ್ಚು ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ನಮ್ಮ ರಾಯಭಾರಿ ಶಿಬಿರಕ್ಕೆ ಹೋಗಿದ್ದಾರೆ. ನಾವು ಹೆಚ್ಚಿನ ಮಾಹಿತಿಗಾಗಿ ಕಾಯುತ್ತಿದ್ದೇವೆ ಎಂದು ಜೈಶಂಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಮೋಸ – ಚೀಟಿಂಗ್‌ ಕತಾರ್‌ ವಿರುದ್ಧ ಅಭಿಮಾನಿಗಳು ಕೆಂಡ

    ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಸಹಾಯವಾಣಿ ಸಂಖ್ಯೆಯನ್ನು ಬಿಡುಗಡೆ ಮಾಡಿದೆ. ಅಲ್ಲದೇ ಅಗ್ನಿ ಅವಘಡದಲ್ಲಿ ಕೆಲವು ಭಾರತೀಯ ಕಾರ್ಮಿಕರು ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ರಾಯಭಾರ ಕಚೇರಿಯು ಸಾಧ್ಯವಿರುವ ಎಲ್ಲಾ ಸಹಾಯವನ್ನು ನೀಡಲಿದೆ ಎಂದಿದ್ದಾರೆ. ಇದನ್ನೂ ಓದಿ: ಬಸವಕಲ್ಯಾಣದಲ್ಲಿ ಭಾರೀ ಮಳೆ – ಕೆರೆ ಒಡೆದು ರೈತರ ಜಮೀನಿಗೆ ನುಗ್ಗಿದ ನೀರು

    ಕಟ್ಟಡದಲ್ಲಿ ಕಾಣಿಸಿಕೊಂಡ ಬೆಂಕಿಯನ್ನು ನಿಯಂತ್ರಿಸಿದ್ದು, ಅಧಿಕಾರಿಗಳು ಘಟನೆಗೆ ಕಾರಣವನ್ನು ಹುಡುಕುತ್ತಿದ್ದಾರೆ ಎಂದು ವರದಿಗಳು ತಿಳಿಸಿದೆ. ಇದನ್ನೂ ಓದಿ: ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು, ಸಚಿವರಾಗಿ ಪವನ್‌ ಕಲ್ಯಾಣ್‌ ಪ್ರಮಾಣವಚನ ಸ್ವೀಕಾರ

  • SAFF Champions Final: ಪೆನಾಲ್ಟಿಯಲ್ಲಿ ರೋಚಕ ಗೆಲುವು – 9ನೇ ಬಾರಿ ಭಾರತ ಚಾಂಪಿಯನ್‌

    SAFF Champions Final: ಪೆನಾಲ್ಟಿಯಲ್ಲಿ ರೋಚಕ ಗೆಲುವು – 9ನೇ ಬಾರಿ ಭಾರತ ಚಾಂಪಿಯನ್‌

    ಬೆಂಗಳೂರು: ರೋಚಕ ಹೋರಾಟದಲ್ಲಿ ಭಾರತ ಫುಟ್‌ಬಾಲ್‌ ತಂಡ (India Football Team) 2023ರ ಸಾಲಿನ ಸ್ಯಾಫ್‌ (SAFF) ಫುಟ್‌ಬಾಲ್‌ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ. ಸಡನ್‌ಡೆತ್‌ ಪೆನಾಲ್ಟಿಯಲ್ಲಿ (Sudden Death Penalty Shootout) ಭಾರತ ಕುವೈಟ್‌ ತಂಡವನ್ನು ಮಣಿಸುವ ಮೂಲಕ 9ನೇ ಬಾರಿ ಪ್ರಶಸ್ತಿ ಜಯಿಸಿತು.

    ಕಂಠೀರವ ಮೈದಾನದಲ್ಲಿ ನಡೆದ ಫೈನಲ್‌ ಪಂದ್ಯದ ನಿಗದಿತ 90 ನಿಮಿಷದ ವೇಳೆಗೆ ಎರಡು ತಂಡಗಳು 1-1 ಗೋಲು ಹೊಡೆದ ಪರಿಣಾಮ ಫಲಿತಾಂಶ ನಿರ್ಧಾರಕ್ಕೆ ಹೆಚ್ಚುವರಿ ಸಮಯ ನೀಡಲಾಯಿತು. 30 ನಿಮಿಷ ಅವಧಿಯ ಆಟದಲ್ಲಿ ಇತ್ತಂಡಗಳ ಪರ ಯಾವುದೇ ಗೋಲು ಸಿಡಿಯದ ಕಾರಣ ಪೆನಾಲ್ಟಿಗೆ ಮೊರೆ ಹೊಗಲಾಯಿತು.  ಇದನ್ನೂ ಓದಿ: ಟೀಂ ಇಂಡಿಯಾ ಬೌಲಿಂಗ್‌ ಯಾವಾಗ್ಲೂ ಕಳಪೆ, ನಾವ್‌ ತಲೆ ಕೆಡಿಸಿಕೊಳ್ಳಲ್ಲ – ಪಾಕ್‌ ಮಾಜಿ ಕ್ರಿಕೆಟಿಗ ವ್ಯಂಗ್ಯ

    5 ಪೆನಾಲ್ಟಿ ಅವಕಾಶದಲ್ಲಿ ಭಾರತ ಮತ್ತು ಕುವೈಟ್‌ ತಲಾ 4 ಗೋಲು ಹೊಡೆದ ಪರಿಣಾಮ ಪಂದ್ಯ ಸಡನ್‌ಡೆತ್‌ನತ್ತ ತಿರುಗಿತು. ಈ ವೇಳೆ ಭಾರತದ ಮಹೇಶ್‌ ಗೋಲು ಹೊಡೆದರೆ ಕುವೈಟ್‌ ಆಟಗಾರ ಹಜಿಯಾ ಹೊಡೆದ ಚೆಂಡನ್ನು ಗೋಲ್‌ ಕೀಪರ್‌ ಗುರುಪ್ರೀತ್‌ ಸಿಂಗ್ ತಡೆಯುವ ಮೂಲಕ ಭಾರತಕ್ಕೆ ಗೆಲುವು ತಂದುಕೊಟ್ಟರು. ಈ ಹಿಂದೆ ಭಾರತ 1993, 1997, 1999, 2005, 2009, 2011, 2015, 2021 ರಲ್ಲಿ ಪ್ರಶಸ್ತಿ ಜಯಿಸಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕುವೈತ್‍ನಲ್ಲಿ ಗೃಹ ಬಂಧನದಲ್ಲಿದ್ದ ಮಹಿಳೆ ಕೊನೆಗೂ ಬಂಧ ಮುಕ್ತ- ಕೊಡಗು ಜಿಲ್ಲಾಡಳಿತದ ಪ್ರಯತ್ನ ಯಶಸ್ವಿ

    ಕುವೈತ್‍ನಲ್ಲಿ ಗೃಹ ಬಂಧನದಲ್ಲಿದ್ದ ಮಹಿಳೆ ಕೊನೆಗೂ ಬಂಧ ಮುಕ್ತ- ಕೊಡಗು ಜಿಲ್ಲಾಡಳಿತದ ಪ್ರಯತ್ನ ಯಶಸ್ವಿ

    ಮಡಿಕೇರಿ: ಕುವೈತ್ (Kuwait) ನಲ್ಲಿ ಗೃಹ ಬಂಧನದಲ್ಲಿದ್ದ ಕೊಡಗು (Kodagu) ಮೂಲದ ಮಹಿಳೆ ಕೊನೆಗೂ ಬಂಧ ಮುಕ್ತರಾಗಿದ್ದಾರೆ.

    ಕೊಡಗು ಜಿಲ್ಲೆಯ ವಿರಾಜಪೇಟೆ (Virajpete) ತಾಲೂಕಿನ ಕರಡಿಗೋಡು ನಿವಾಸಿಯಾದ ಪಾರ್ವತಿ ಎಂಬ ಮಹಿಳೆ ಕುವೈತ್ ದೇಶಕ್ಕೆ ಕೆಲಸಕ್ಕೆಂದು ಏಜೆಂಟ್ ಮುಖಾಂತರ ತೆರಳಿದ್ದರು. ಈ ವೇಳೆ ಅವರನ್ನು ಅಲ್ಲಿಯ ಏಜೆಂಟ್ ಕೂಡಿ ಹಾಕಿದ್ದರು. ಕೊಡಗು ಜಿಲ್ಲಾಡಳಿತಕ್ಕೆ ಈ ಬಗ್ಗೆ ದೂರು ಸ್ವೀಕೃತವಾದ ಕೂಡಲೇ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರಾದ ಆರ್.ಎಂ.ಅನನ್ಯ ವಾಸುದೇವ್ ಅವರಿಗೆ, ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ ಕರೆ ತರುವ ಜವಾಬ್ದಾರಿ ವಹಿಸಿದ್ದರು.

    ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯೊಂದಿಗೆ ಸಂಪರ್ಕ ಸಾಧಿಸಿ, ಅವರಿದ್ದ ಸ್ಥಳವನ್ನು ಗುರುತಿಸಿ ಕುವೈತ್ ಅಲ್ಲಿರುವ ಭಾರತೀಯ ರಾಯಭಾರ ಕಚೇರಿ ಹಾಗೂ ವಿದೇಶಾಂಗ ಸಚಿವಾಲಯಕ್ಕೆ ಮಾಹಿತಿ ನೀಡಿತ್ತು. ನಿರಂತರ ಸಂಪರ್ಕವನ್ನು ಸಾಧಿಸಿ ಸತತ ಪ್ರಯತ್ನದ ಮೂಲಕ ಭಾರತೀಯ ರಾಯಭಾರ ಕಚೇರಿಯ ಸಹಯೋಗದೊಂದಿಗೆ ಕೊಡಗು ಜಿಲ್ಲಾಡಳಿತ ಸಂತ್ರಸ್ತ ಮಹಿಳೆಯನ್ನು ಕ್ಷೇಮವಾಗಿ ಭಾರತಕ್ಕೆ ಕರೆ ತರುವಲ್ಲಿ ಯಶಸ್ವಿಯಾಗಿದೆ.

    ಇಂದು ಬೆಳಗ್ಗೆ ಸಂತ್ರಸ್ತ ಮಹಿಳೆ ಚೆನ್ನೈಗೆ ತಲುಪಿದ್ದಾರೆ. ಅಲ್ಲಿಂದ ಕೊಡಗಿಗೆ ಬರುತ್ತಿದ್ದಾರೆ ಎಂದು ಜಿಲ್ಲಾಡಳಿತ ತಿಳಿಸಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಜೀವಂತ ಇದ್ದಾಗಲೇ ಬಿಜೆಪಿ ಸೇರಿಸಲ್ಲ, ಇನ್ನು ಅವರ ಹೆಣ ಇಟ್ಕೊಂಡು ಏನು ಮಾಡ್ಲಿ?: ಕೆ.ಎಸ್ ಈಶ್ವರಪ್ಪ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನೂಪುರ್ ವಿರುದ್ಧ ಪ್ರತಿಭಟಿಸಿದವರು ಕುವೈತ್‍ನಿಂದ ಗಡಿಪಾರು – ನಮ್ಮಲ್ಲಿ ಕಠಿಣ ಕ್ರಮ ಯಾವಾಗ ಎಂದ ನೆಟ್ಟಿಗರು?

    ನೂಪುರ್ ವಿರುದ್ಧ ಪ್ರತಿಭಟಿಸಿದವರು ಕುವೈತ್‍ನಿಂದ ಗಡಿಪಾರು – ನಮ್ಮಲ್ಲಿ ಕಠಿಣ ಕ್ರಮ ಯಾವಾಗ ಎಂದ ನೆಟ್ಟಿಗರು?

    ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ವಕ್ತಾರೆ ನೂಪುರ್ ಶರ್ಮಾ ವಿರುದ್ಧ ಪ್ರತಿಭಟನೆ ನಡೆಸಿದ್ದ ಅನಿವಾಸಿಗಳನ್ನು ಗಡಿಪಾರು ಮಾಡಲು ಕುವೈತ್ ಸರ್ಕಾರ ಮುಂದಾಗಿದೆ. ಕುವೈತ್ ಸರ್ಕಾರದ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್ ಆಗಿದೆ.

    ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ವಿವಾದತ್ಮಕ ಹೇಳಿಕೆ ನೀಡಿದ್ದ ನೂಪುರ್ ಶರ್ಮಾ ವಿರುದ್ಧ ಶುಕ್ರವಾರ ದೇಶಾದ್ಯಂತ ಮುಸ್ಲಿಮರು ಪ್ರತಿಭಟನೆ ನಡೆಸುತ್ತಿದ್ದರು. ಇದೇ ವೇಳೆ ವಿಶ್ವದ ಹಲವೆಡೆಯೂ ಪ್ರತಿಭಟನೆ ನಡೆದಿದ್ದು, ಕುವೈತ್‍ನಲ್ಲಿ ಪ್ರತಿಭಟನೆ ನಡೆಸಿದ ಅನಿವಾಸಿಗಳನ್ನು ಬಂಧಿಸುವಂತೆ ಕುವೈತ್ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ – ಇಂಟರ್‌ನೆಟ್ ಸ್ಥಗಿತ, 70 ಮಂದಿ ಅರೆಸ್ಟ್

    ಕುವೈತ್‍ನಲ್ಲಿರುವ ಎಲ್ಲಾ ಅನಿವಾಸಿಗಳು ಕುವೈತ್ ಕಾನೂನುಗಳನ್ನು ಗೌರವಿಸಬೇಕು. ಯಾವುದೇ ಅನಿವಾಸಿಗಳು ಕುವೈತ್‍ನಲ್ಲಿ ಪ್ರತಿಭಟನೆ ನಡೆಸುವಂತಿಲ್ಲ ಎಂಬ ಕಾನೂನಿದೆ. ಆದರೆ ಇದನ್ನು ಉಲ್ಲಂಘಿಸಿದ್ದಕ್ಕಾಗಿ ಅವರನ್ನು ಗಡಿಪಾರು ಮಾಡಲಾಗುತ್ತದೆ ಎಂಬ ವಿಚಾರ ಮೂಲಗಳ ಪ್ರಕಾರ ತಿಳಿದುಬಂದಿದೆ. ಅಲ್ಲದೇ ಗಡಿಪಾರು ಮಾಡಿದವರು ಮತ್ತೆ ಕುವೈತ್ ದೇಶವನ್ನು ಪ್ರವೇಶಿಸುವಂತಿಲ್ಲ ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:  ಕ್ಷಮೆ ಕೇಳುವ ಅಗತ್ಯವಿಲ್ಲ, ನೂಪುರ್ ಶರ್ಮಾರನ್ನು ಕಾನೂನಿನ ಪ್ರಕಾರ ಬಂಧಿಸಿ: ಓವೈಸಿ

    ಈಗಾಗಲೇ ಪ್ರತಿಭಟನೆಯಲ್ಲಿ ಭಾಗವಹಿಸಿದ ಹಲವರನ್ನು ಅಧಿಕಾರಿಗಳು ಗುರುತಿಸುವ ಪ್ರಕ್ರಿಯೆ ನಡೆಸುತ್ತಿದ್ದಾರೆ. ಶೀಘ್ರದಲ್ಲಿಯೇ ಪ್ರತಿಭಟನೆ ನಡೆಸಿದವರ ವೀಸಾವನ್ನು ರದ್ದುಗೊಳಿಸಲಾಗುವುದು ಮತ್ತು ಅವರ ದೇಶಗಳಿಗೆ ಗಡಿಪಾರು ಮಾಡಲಾಗುವುದು. ಜೊತೆಗೆ ಕುವೈತ್ ನಾಗರಿಕರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

    ಇದೀಗ ಭಾರತದಲ್ಲಿ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಮುಸ್ಲಿಮರನ್ನು ಭಾರತದಿಂದ ಗಡಿಪಾರು ಏಕೆ ಮಾಡಬಾರದು ಎಂದು ನೆಟ್ಟಿಗರು ಸೋಶಿಯಲ್ ಮೀಡಿಯಾದಲ್ಲಿ ಧನಿ ಎತ್ತಿದ್ದಾರೆ. ಕಳೆದರೆಡು ದಿನಗಳಿಂದ ಭಾರತದಲ್ಲಿ ಪ್ರತಿಭಟನೆ ಹೆಸರಲ್ಲಿ ಅನೇಕ ಮಂದಿ ಪೊಲೀಸರ ಮೇಲೆ ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚುವ ಮೂಲಕ ಹಿಂಸಾಚಾರ ಕೃತ್ಯ ಎಸಗಿದ್ದಾರೆ. ಇದರಿಂದ ಸಾರ್ವಜನಿಕರ ಆಸ್ತಿಪಾಸ್ತಿಗೆ ನಷ್ಟವುಂಟು ಮಾಡಿದ ಕಿಡಿಗೇಡಿಗಳನ್ನು ಭಾರತಿದಿಂದ ಗಡಿಪಾರು ಮಾಡುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ. ವಿಶೇಷವಾಗಿ ಪಶ್ಚಿಮ ಬಂಗಾಳದಲ್ಲಿ ಬಾಂಗ್ಲಾದಿಂದ ಅಕ್ರಮವಾಗಿ ನುಸುಳಿ ಬಂದವರು ಈ ಪ್ರತಿಭಟನೆ, ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪ ಬಂದಿದೆ. ಇವರನ್ನು ಬಂಧಿಸಿ ತನಿಖೆ ನಡೆಸಿ ದೇಶದಿಂದ ಗಡೀಪಾರು ಮಾಡಬೇಕೆಂದು ಜನ ಸಾಮಾಜಿಕ ಜಾಲತಾಣದಲ್ಲಿ ಆಗ್ರಹಿಸುತ್ತಿದ್ದಾರೆ.

  • ಕುವೈತ್‌ನಲ್ಲಿ ದಳಪತಿ ವಿಜಯ್ ನಟನೆಯ `ಬೀಸ್ಟ್’ ಸಿನಿಮಾ ಬ್ಯಾನ್

    ಕುವೈತ್‌ನಲ್ಲಿ ದಳಪತಿ ವಿಜಯ್ ನಟನೆಯ `ಬೀಸ್ಟ್’ ಸಿನಿಮಾ ಬ್ಯಾನ್

    ಕಾಲಿವುಡ್‌ನ ಸೂಪರ್‌ಸ್ಟಾರ್ ದಳಪತಿ ವಿಜಯ್ ನಟನೆಯ `ಬೀಸ್ಟ್’ ಇದೇ ಏಪ್ರಿಲ್ 13ಕ್ಕೆ ತೆರೆಯಲ್ಲಿ ಅಬ್ಬರಿಸಲು ಸಿದ್ದವಾಗಿದೆ. ಈಗಾಗಲೇ ಚಿತ್ರದ ಟ್ರೇಲರ್ ಮೂಲಕ ಸಿಕ್ಕಾಪಟ್ಟೆ ಹೈಪ್ ಕ್ರಿಯೆಟ್ ಮಾಡಿದೆ. ರಿಲೀಸ್‌ಗೂ ಮುಂಚೆನೇ ಒಂದಲ್ಲ ಒಂದು ವಿಚಾರವಾಗಿ ಸೌಂಡ್ ಮಾಡ್ತಿರೋ `ಬೀಸ್ಟ್’ ಇದೀ ಮತ್ತೊಂದು ಕಾರಣಕ್ಕಾಗಿ ಸುದ್ದಿ ಆಗಿದೆ. ಈಗ `ಬೀಸ್ಟ್’ ಚಿತ್ರಕ್ಕೆ ಹೊಸ ಸಂಕಷ್ಟವೊಂದು ಎದುರಾಗಿದ್ದು, ಕುವೈತ್‌ನಲ್ಲಿ ವಿಜಯ್ ನಟನೆಯ `ಬೀಸ್ಟ್’ ಚಿತ್ರದ ರಿಲೀಸ್ ಅನ್ನು ಬ್ಯಾನ್ ಮಾಡಲಾಗಿದೆ.

    ಇತ್ತೀಚಿಗಷ್ಟೇ `ಬೀಸ್ಟ್’ ಚಿತ್ರದ ಟ್ರೇಲರ್‌ ರಿಲೀಸ್ ಆಗಿತ್ತು. ಕಥೆಯ ಕುರಿತು ಚಿತ್ರತಂಡ ಒಂದಿಷ್ಟು ಹಿಂಟ್ ಬಿಟ್ಟುಕೊಟ್ಟಿತ್ತು. ಭಯೋತ್ಪಾದಕರು ಮಾಲ್ ಒಂದನ್ನು ಹೈಜಾಕ್ ಮಾಡುತ್ತಾರೆ. ನಾಯಕ ಮಾಲ್ ಒಳಗಡೆಯಿರುತ್ತಾನೆ. ಹೇಗೆ ಅಲ್ಲಿನ ಜನರನ್ನು ರಕ್ಷಿಸುತ್ತಾನೆ ಅನ್ನುವುದು ಚಿತ್ರದ ತಿರುಳು. ಇದೇ ವಿಚಾರವಾಗಿ ಕುವೈತ್ `ಬೀಸ್ಟ್’ ಸಿನಿಮಾವನ್ನು ಬ್ಯಾನ್ ಮಾಡಿದೆ.

    ಚಿತ್ರದಲ್ಲಿ ಪಾಕಿಸ್ತಾನ ಕುರಿತ ವಿಚಾರಗಳು, ಭಯೋತ್ವಾದನೆಯ ಚಿತ್ರಣ `ಬೀಸ್ಟ್’ನಲ್ಲಿದೆ. ಹಾಗಾಗಿಯೇ ಕುವೈತ್ ಮಾಹಿತಿ ಸಚಿವಾಲಯ ಈ ಚಿತ್ರವನ್ನು ನಿಷೇಧ ಮಾಡಿದೆ. ಕುವೈತ್‌ನಲ್ಲಿ ಬ್ಯಾನ್ ಆಗಿರೋ ಚಿತ್ರಗಳಲ್ಲಿ `ಕುರುಪ್’ ಮತ್ತು `ಎಫ್‌ಐಆರ್’ ಚಿತ್ರಗಳು ಬ್ಯಾನ್ ಆಗಿವೆ. ಕುವೈತ್ ಸೆನ್ಸಾರ್ ಮಂಡಳಿ ಚಿತ್ರಗಳ ವಿಚಾರದಲ್ಲಿ ಕಠಿಣ ಹೆಜ್ಜೆ ಇಟ್ಟಿದೆ. ಭಯೋತ್ಪಾದನೆ ಚಿತ್ರಕಥೆಯಿರೋ ಚಿತ್ರಗಳನ್ನು ಕುವೈತ್ ಪ್ರೋತ್ಸಾಹಿಸೋದಿಲ್ಲ. ಇದನ್ನು ಓದಿ: ತೆರೆ ಮೇಲೆ ಮತ್ತೆ ಒಂದಾಗಲಿದ್ದಾರಂತೆ ಸಮಂತಾ-ನಾಗಚೈತನ್ಯ ಜೋಡಿ!

    ದಳಪತಿ ವಿಜಯ್‌ಗೆ ವಿಶ್ವದ ಮೂಲೆ ಮೂಲೆಯಲ್ಲೂ ಅಭಿಮಾನಿಗಳಿದ್ದಾರೆ. ಹಾಗೆಯೇ ಕುವೈತ್‌ಯಲ್ಲೂ ಕೂಡ. `ಬೀಸ್ಟ್’ ಸಿನಿಮಾವನ್ನ ನೋಡಬೇಕು ಅಂತಾ ಕಾತರದಿಂದ ಕಾಯುತ್ತಿದ ಕುವೈತ್ ಸಿನಿರಸಿಕರಿಗೆ ನಿರಾಸೆಯಾಗಿದೆ.

  • ಕುವೈತ್‍ನಲ್ಲಿ ಅನುಮಾನಾಸ್ಪದ ಸಾವು – ಹುಟ್ಟೂರಿಗೆ ಯುವಕನ ಶವ ಆಗಮನ

    ಕುವೈತ್‍ನಲ್ಲಿ ಅನುಮಾನಾಸ್ಪದ ಸಾವು – ಹುಟ್ಟೂರಿಗೆ ಯುವಕನ ಶವ ಆಗಮನ

    – ಮಗನ ಸಾವಿನ ಬಗ್ಗೆ ಹೆತ್ತವರ ಅನುಮಾನ
    – ನ್ಯಾಯಕ್ಕಾಗಿ ಟ್ವೀಟರ್ ಅಭಿಯಾನ

    ಶಿವಮೊಗ್ಗ : ಕುವೈತ್‍ನಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಯವಕನ ಶವವನ್ನು ಹುಟ್ಟೂರು ಸಾಗರ ತಾಲೂಕಿನ ಚೂರಿಕಟ್ಟೆ ಗ್ರಾಮಕ್ಕೆ ತರಲಾಗಿದೆ.

    ಹಾಶಮ್ ಫರೀದ್ ಸಾಬ್ (28) ಕುವೈತ್‍ನಲ್ಲಿ ಕೆಲಸ ಮಾಡುತ್ತಿದ್ದಾಗ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಮೃತದೇಹ ಹುಟ್ಟೂರಿಗೆ ಬರುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    ಮೃತ ಹಾಶಮ್ ಫರೀದ್ ಸಾಬ್ ಕುವೈತ್‍ನ ಖಾಸಗಿ ಕಂಪನಿಯೊಂದರಲ್ಲಿ ಚಾಲಕನಾಗಿ ಕೆಲಸ ಮಾಡುತ್ತಿದ್ದರು. ಕುವೈತ್‍ನಲ್ಲಿ ಕೆಲಸ ಮಾಡಿಕೊಂಡಿದ್ದ ಫರೀದ್ ವಾರದಲ್ಲಿ ಎರಡು ಮೂರು ದಿನಕ್ಕೊಮ್ಮೆ ಕುಟುಂಬಸ್ಥರಿಗೆ ದೂರವಾಣಿ ಕರೆ ಮಾಡಿ ಯೋಗಕ್ಷೇಮ ವಿಚಾರಿಸುತ್ತಿದ್ದರು. ಆದರೆ ಮೂರ್ನಾಲ್ಕು ದಿನವಾದರೂ ಹಾಶಮ್ ಫೋನ್ ಮಾಡದಿದ್ದರಿಂದ ಕುಟುಂಬಸ್ಥರು ಅವರ ಮೊಬೈಲ್‍ಗೆ ಫೋನ್ ಮಾಡಿದ್ದಾರೆ. ಆದರೆ ಹಾಶಮ್ ಮೊಬೈಲ್ ಫೋನ್‍ಗೆ ಕರೆ ಹೋಗಿಲ್ಲ.

    ಹಾಶಮ್ ಕುಟುಂಬಸ್ಥರು ಆತ ಕೆಲಸ ಮಾಡುತ್ತಿದ್ದ ಕಂಪನಿಯ ಅಧಿಕಾರಿಗೆ ಕರೆ ಮಾಡಿದ್ದಾರೆ. ಈ ವೇಳೆ ಕರೆ ಸ್ವೀಕರಿಸಿದ ಅಧಿಕಾರಿ ನಿಮ್ಮ ಮಗ ಡಿ.25 ರಂದು ಸಮುದ್ರದಲ್ಲಿ ಈಜುತ್ತಿದ್ದಾಗ ಮೃತಪಟ್ಟಿದ್ದಾರೆ ಎಂದು ತಿಳಿಸಿ ಫೋನ್ ಕಟ್ ಮಾಡಿದ್ದಾರೆ. ಹಾಶಮ್ ಮೃತಪಟ್ಟು ಎರಡು ದಿನವಾದರೂ ಆತನ ಕುಟುಂಬಸ್ಥರಿಗೆ ತಿಳಿಸುವ ಪ್ರಯತ್ನ ಮಾಡಿಲ್ಲ. ಇದರಿಂದ ಅನುಮಾನಗೊಂಡ ಹಾಶಮ್ ಮನೆಯವರು ಆತನ ಸ್ನೇಹಿತರಿಗೆ ಕರೆ ಮಾಡಿ ಆತ ಉಳಿದುಕೊಂಡಿದ್ದ ಕೊಠಡಿ ಬಳಿ ಹೋಗಿ ನೋಡುವಂತೆ ತಿಳಿಸಿದ್ದಾರೆ. ಕೊಠಡಿಗೆ ಹೋಗಿ ಗಮನಿಸಿದ ಹಾಶಮ್ ಸ್ನೇಹಿತರು ಆತ ಮಲಗಿದ್ದ ಹಾಸಿಗೆ ಮೇಲೆ ರಕ್ತದ ಕಲೆ ಆಗಿರುವುದಾಗಿ ಹಾಶಮ್ ಕುಟುಂಬದವರಿಗೆ ತಿಳಿಸಿದ್ದಾರೆ.

    ತನ್ನ ಮಗನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಕುಟುಂಬಸ್ಥರು ಈ ಬಗ್ಗೆ ಸಾಗರ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತಮ್ಮ ಮಗನ ಸಾವಿನ ಬಗ್ಗೆ ತನಿಖೆ ನಡೆಸಿ ನ್ಯಾಯ ದೊರಕಿಸಿಕೊಡುವಂತೆ ಕೇಂದ್ರ ಹಾಗೂ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಮೃತ ಯುವಕನ ಸಾವು ಸಹಜ ಸಾವೋ ಅಥವಾ ಕೊಲೆಯೋ ಎಂಬುದು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.