Tag: KVN

  • ಕೆವಿಎನ್ ತೆಕ್ಕೆಗೆ ‘ಕಲ್ಕಿ’ ಕರ್ನಾಟಕದ ವಿತರಣಾ ಹಕ್ಕು

    ಕೆವಿಎನ್ ತೆಕ್ಕೆಗೆ ‘ಕಲ್ಕಿ’ ಕರ್ನಾಟಕದ ವಿತರಣಾ ಹಕ್ಕು

    ಪ್ರಭಾಸ್ ನಟನೆಯ ಕಲ್ಕಿ ಸಿನಿಮಾದ ರಿಲೀಸ್ (Release) ಡೇಟ್ ಅಧಿಕೃತವಾಗಿ ಘೋಷಣೆಯಾಗಿದೆ. ಇದೇ ಜೂನ್ 27ರಂದು ವಿಶ್ವದಾದ್ಯಂತ ಸಿನಿಮಾ ರಿಲೀಸ್ ಮಾಡುವುದಾಗಿ ಚಿತ್ರತಂಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲಿ ಈ ಸಿನಿಮಾವನ್ನು ವಿತರಿಸಲು (Distribution) ಕೆವಿಎನ್ ಸಂಸ್ಥೆ ಮುಂದಾಗಿದೆ. ಮತ್ತೊಂದು ಖುಷಿ ಸಂಗತಿ ಅಂದರೆ,  ಭಾರತದ ಭಾಷೆಗಳಿಗೆ ಅಷ್ಟೇ ಅಲ್ಲ, ಇಂಗ್ಲಿಷ್ ಗೂ ಈ ಸಿನಿಮಾ ಡಬ್ ಆಗಿ ಹಾಲಿವುಡ್ (Hollywood) ನಲ್ಲೂ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

    ಈ ಸಿನಿಮಾ ಒಂದಿಲ್ಲೊಂದು ಕಾರಣದಿಂದಾಗಿ ಸುದ್ದಿ ಆಗುತ್ತಲೇ ಇದೆ. ಈ ಬಾರಿ ಕಲಾವಿದರಿಗೆ ನೀಡಿರುವ ಸಂಭಾವನೆಯಿಂದಾಗಿ (Remuneration) ಸಖತ್ ಸದ್ದು ಮಾಡುತ್ತಿದೆ. ಮೂಲಗಳ ಪ್ರಕಾರ ಕಲಾವಿದರಿಗಾಗಿಯೇ ಒಟ್ಟು 250 ಕೋಟಿ ರೂಪಾಯಿಗೂ ಅಧಿಕ ಖರ್ಚು ಮಾಡಿದ್ದಾರಂತೆ ನಿರ್ಮಾಪಕರು. ಅದರಲ್ಲಿ ಅತೀ ಹೆಚ್ಚು ಸಂಭಾವನೆ ಪಡೆದಿರೋದು ಚಿತ್ರ ನಾಯಕ ಪ್ರಭಾಸ್.

    ಪ್ರಭಾಸ್‌ (Prabhas) ಈ ಸಿನಿಮಾಗಾಗಿ ಬರೋಬ್ಬರಿ 150 ಕೋಟಿ ರೂಪಾಯಿ ಸಂಭಾವನೆ ಪಡೆದಿದ್ದಾರಂತೆ.  ದೀಪಿಕಾ ಪಡುಕೋಣೆ, ಅಮಿತಾಭ್ ಬಚ್ಚನ್ ಮತ್ತು ಕಮಲ್‌ ಹಾಸನ್‌ ತಲಾ 20 ಕೋಟಿ ರೂಪಾಯಿ ಸಂಭಾವನೆ ಜೇಬಿಗಿಳಿಸಿಕೊಂಡಿದ್ದಾರೆ. ನಾಯಕಿ ದಿಶಾ ಪಟಾಣಿ 5 ಕೋಟಿ ರೂಪಾಯಿಗೆ ತೃಪ್ತಿ ಪಟ್ಟಿದ್ದಾರೆ. ಲಕ್ಷದಲ್ಲಿ ಸಂಭಾವನೆ ಪಡೆಯುವ ಅನೇಕ ನಟರೂ ಈ ಸಿನಿಮಾದಲ್ಲಿ ಇದ್ದಾರೆ.

     

    ನಾಗ್‌ ಅಶ್ವಿನ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಲ್ಕಿ (Kalki 2898 AD) ಸಿನಿಮಾ, ಈಗಾಗಲೇ ಶೂಟಿಂಗ್‌ನಲ್ಲಿ ಬಿಜಿಯಾಗಿದೆ. ಈ ನಡುವೆ ಈಗ ಸೋಷಿಯಲ್‌ ಮೀಡಿಯಾದಲ್ಲಿ ಈ ಸಿನಿಮಾ  ಟ್ರೆಂಡಿಂಗ್‌ನಲ್ಲಿಯೂ ಮುಂದುವರಿದಿದೆ. ಅದಕ್ಕೆ ಕಾರಣ ರಿಲೀಸ್‌ ಆದ ಅಮಿತಾಭ್ ಬಚ್ಚನ್‌ ಅವರ ಹೊಸ ಲುಕ್‌.

  • ಹೋರಾಡುತ್ತಾ ಸತ್ತರೆ ನನಗೇನೂ ಬೇಸರವಿಲ್ಲ : ನಟ ಯಶ್

    ಹೋರಾಡುತ್ತಾ ಸತ್ತರೆ ನನಗೇನೂ ಬೇಸರವಿಲ್ಲ : ನಟ ಯಶ್

    ಮ್ಮ ವಿರುದ್ಧ ಬಾಯಿಗೆ ಬಂದಂತೆ ಮಾತನಾಡುತ್ತಿರುವ ಜನರಿಗೆ ಯಶ್ ಖಡಕ್ಕೆ ಉತ್ತರವನ್ನೇ ಕೊಟ್ಟಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು ಕೆಲವರು ನನ್ನ ವಿರುದ್ಧ ತಮಗೆ ತೋಚಿದಂತೆ ಮಾತನಾಡುತ್ತಿದ್ದಾರೆ. ಆ ಕುರಿತು ನನಗೇನೂ ಬೇಸರವಿಲ್ಲ. ಗೆಲುವನ್ನು ನಿಭಾಯಿಸುವುದಕ್ಕಿಂತ, ಹೊಸ ಹೊಸ ಗೆಲುವನ್ನು ಕಾಣುವುದು ನನಗಿಷ್ಟ. ಹೋರಾಡುತ್ತ ಮೃತಪಟ್ಟರೆ ನನಗೇನೂ ಬೇಸರವಿಲ್ಲ, ನಾನು ಹೋರಾಟದಲ್ಲೇ ಇದ್ದೀನಲ್ಲ ಅದು ಮುಖ್ಯವಾಗಬೇಕು’ ಎಂದಿದ್ದಾರೆ.

    ಕೆಜಿಎಫ್ 2 ಸಿನಿಮಾದ ನಂತರ ಅವರ ಮುಂದೆ ಹಲವಾರು ಪ್ರಶ್ನೆಗಳು ಎದುರಾದವಂತೆ. ಆ ಕುರಿತು ಅವರು ಮಾತನಾಡಿದ್ದಾರೆ. ಕೆಜಿಎಫ್ ಗೆಲುವಿನ ನಂತರ ಯಾಕೆ ನೀವು ಮತ್ತೆ ಸಿನಿಮಾ ಮಾಡುತ್ತಿಲ್ಲ. ಆ ಗೆಲುವನ್ನು ಸರಿಯಾದ ರೀತಿಯಲ್ಲಿ ಉಪಯೋಗಿಸಿಕೊಳ್ಳಬೇಕಿತ್ತು ಅಲ್ಲವಾ? ಕೆಜಿಎಫ್ 3 ಮಾಡದೇ ನಿಮಗೆ ವಿಧಿಯಿಲ್ಲ ಈ ರೀತಿಯ ಮಾತುಗಳನ್ನು ಆಡಿದ್ದಾರಂತೆ. ಆದರೆ, ಈ ಎಲ್ಲ ಪ್ರಶ್ನೆಗಳಿಗೂ ಮುಂದಿನ ದಿನಗಳಲ್ಲಿ ಉತ್ತರ ಸಿಗುವಂತೆ ಮಾಡುವೆ ಎಂದು ಯಶ್ ಹೇಳಿಕೊಂಡಿದ್ದಾರೆ.

    ಯಶ್ ಮುಂದಿನ ಸಿನಿಮಾ ಯಾವುದು ಎನ್ನುವುದರ ಕುರಿತು ಹಲವು ತಿಂಗಳಿಂದ ಚರ್ಚೆ ಮಾಡಲಾಗುತ್ತಿದೆ. ಆದರೆ, ಈ ಕುರಿತು ಅವರು ಯಾವುದೇ ರೀತಿಯ ಕ್ಲ್ಯಾರಿಟಿ ನೀಡಿಲ್ಲ. ಇತ್ತೀಚೆಗೆ ಬರುತ್ತಿರುವ ಸುದ್ದಿಗಳ ಪ್ರಕಾರ ಕೆವಿಎನ್ ಪ್ರೊಡಕ್ಷನ್ ನಿರ್ಮಾಣದ ಸಿನಿಮಾದಲ್ಲಿ ಯಶ್ ನಟಿಸಲಿದ್ದಾರಂತೆ. ಇದೊಂದು ಭಾರೀ ಬಜೆಟ್ ಸಿನಿಮಾವಾಗಿದ್ದು, ನಾಲ್ಕು ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ಚಿತ್ರ ನಿರ್ಮಾಣವಾಗಲಿದೆಯಂತೆ. ಇದನ್ನೂ ಓದಿ:ಅಬ್ಬಬ್ಬಾ ಎನಿಸುವಷ್ಟಿದೆ ಸಮಂತಾ ಧರಿಸಿದ್ದ ಈ ಸೀರೆಯ ಬೆಲೆ?

    ಮೊನ್ನೆಯಷ್ಟೇ ತಮ್ಮ ಹೊಸ ಸಿನಿಮಾದ ಅಪ್ ಡೇಟ್ ಅನ್ನು ಅತೀ ಶೀಘ್ರದಲ್ಲೇ ನೀಡುವುದಾಗಿ ಯಶ್ ತಿಳಿಸಿದ್ದಾರೆ. ಹುಟ್ಟು ಹಬ್ಬದಂದು ಕೆಲವು ಮಾಹಿತಿಗಳನ್ನು ನೀಡಿರುವ ಅವರು, ದೊಡ್ಡ ಮಟ್ಟದಲ್ಲಿ ಪ್ಲ್ಯಾನ್ ಮಾಡಲಾಗುತ್ತಿದೆ. ನಿಮಗೆ ದೊಡ್ಡ ಸುದ್ದಿಯನ್ನೇ ನೀಡುತ್ತೇನೆ ಎಂದು ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆ ದೊಡ್ಡ ಸುದ್ದಿಗಾಗಿ ಅಭಿಮಾನಿಗಳು ಕಾಯುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೋಗಿ ಪ್ರೇಮ್- ಧ್ರುವ ಸರ್ಜಾ ಚಿತ್ರದ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಮೋಹನ್ ಲಾಲ್

    ಜೋಗಿ ಪ್ರೇಮ್- ಧ್ರುವ ಸರ್ಜಾ ಚಿತ್ರದ ಟೈಟಲ್ ಟೀಸರ್ ಕಾರ್ಯಕ್ರಮಕ್ಕೆ ಮೋಹನ್ ಲಾಲ್

    ಜೋಗಿ ಪ್ರೇಮ್ ಮತ್ತು ಧ್ರುವ ಸರ್ಜಾ (Dhruva Sarja) ಕಾಂಬಿನೇಷನ್ ನ ಹೊಸ ಸಿನಿಮಾದ ಟೈಟಲ್ ಟೀಸರ್ (Title Teaser) ಬಿಡುಗಡೆ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಮೋಹನ್ ಲಾಲ್ (Mohanlal) ಬರಲಿದ್ದಾರೆ. ಇದೊಂದು ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ನಾನಾ ಸಿನಿಮಾ ರಂಗದ ಕಲಾವಿದರು ಕೂಡ ಕಾರ್ಯಕ್ರಮದಲ್ಲಿ ಹಾಜರಿರಲಿದ್ದಾರೆ.

    ಮೋಹನ್ ಲಾಲ್ ಅವರನ್ನು ಭೇಟಿ ಮಾಡಿರುವ ಫೋಟೋವನ್ನು ಪ್ರೇಮ್ (Jogi Prem) ಹಂಚಿಕೊಂಡಿದ್ದು, ಇದೊಂದು ಅಪರೂಪದ ಭೇಟಿ ಆಗಿತ್ತು ಎಂದು ಬರೆದುಕೊಂಡಿದ್ದಾರೆ. ಇಂತಹ ಮಹಾನ್ ಕಲಾವಿದನನ್ನು ಭೇಟಿ ಮಾಡಿದ್ದು ಸಂಭ್ರಮ ತಂದಿದೆ ಎಂದಿರುವ ಪ್ರೇಮ್, ಅಕ್ಟೋಬರ್ 20ರ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಸಹಕಾರವಿರಲಿ ಎಂದೂ ಅವರು ಕೋರಿದ್ದಾರೆ. ಇದನ್ನೂ ಓದಿ:ಅಮ್ಜಾದ್ ಖಾನ್ ಧರ್ಮಕ್ಕೆ ಮತಾಂತರ ಆಗಿ ಮದುವೆ ಆಗಿರುವೆ: ನಟಿ ದಿವ್ಯಾ ಶ್ರೀಧರ್

    ಕೆವಿಎನ್ (KVN) ಪ್ರೊಡಕ್ಷನ್ ಲಾಂಛನದಲ್ಲಿ ಈ ಸಿನಿಮಾ ಮೂಡಿ ಬರಲಿದ್ದು, ಈಗಾಗಲೇ ಚಿತ್ರಕ್ಕೆ ಮುಹೂರ್ತ ಮಾಡಲಾಗಿದೆ. ಮೈಸೂರಿನಲ್ಲಿ ಸಿನಿಮಾದ ಮುಹೂರ್ತವಾಗಿದ್ದು, ಅರ್ಜುನ್ ಜನ್ಯ ಈ ಸಿನಿಮಾಗಾಗಿ ಸಂಗೀತ ಸಂಯೋಜನೆಯ ಕೆಲಸವನ್ನೂ ಆರಂಭಿಸಿದ್ದಾರೆ. ಈ ಸಿನಿಮಾದ ಹಾಡುಗಳು ಈಗಾಗಲೇ ದಾಖಲೆಯ ಮೊತ್ತಕ್ಕೆ ಮಾರಾಟವಾಗಿದೆ ಎನ್ನುವ ಮಾತೂ ಇದೆ.

    Live Tv
    [brid partner=56869869 player=32851 video=960834 autoplay=true]

  • ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ಆರ್.ಆರ್.ಆರ್ ಬೈಕಾಟ್ : ಕನ್ನಡ ಪರ ಹೋರಾಟಗಾರರಿಗೇ ಜವಾಬ್ದಾರಿ ಕೊಟ್ಟ ರಾಜಮೌಳಿ ಟೀಮ್

    ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾ ಕನ್ನಡದಲ್ಲಿ ಡಬ್ ಆಗಿದ್ದರೂ, ಅದು ಕರ್ನಾಟಕದಲ್ಲಿ ಪ್ರದರ್ಶನ ಕಾಣುತ್ತಿಲ್ಲ. ಒಂದೇ ಒಂದು ಥಿಯೇಟರ್ ಕೂಡ ಕನ್ನಡ ಡಬ್ಬಿಂಗ್ ಚಿತ್ರಕ್ಕೆ ಕೊಟ್ಟಿಲ್ಲವೆಂದು ಎರಡು ದಿನಗಳಿಂದ ‘ಬೈಕಾಟ್ ಆರ್.ಆರ್.ಆರ್’ ಹೋರಾಟ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ. ಕನ್ನಡ ಪರ ಕೆಲ ಹೋರಾಟಗಾರರು ಮತ್ತು ಸತತವಾಗಿ ಡಬ್ಬಿಂಗ್ ಪರ ಒಲವು ತೋರಿರುವ ಕನ್ನಡಿಗರ ‘ಆರ್.ಆರ್.ಆರ್’ ಸಿನಿಮಾ ಕನ್ನಡದಲ್ಲೇ ಬೇಕು ಎಂದು ಕ್ಯಾಂಪೇನ್ ಶುರು ಮಾಡಿದ್ದರು. ಇದನ್ನೂ ಓದಿ : ಅನಿಲ್ ಕಪೂರ್ ಈ ಫೋಟೋ ಹಾಕಬಾರದಿತ್ತು: ಕಿವಿ ಹಿಂಡಿದ ಅಭಿಮಾನಿಗಳು

    ಸೋಷಿಯಲ್ ಮೀಡಿಯಾದಲ್ಲಿ ಈ ಹೋರಾಟ ಕಾವು ಪಡೆದುಕೊಂಡಿತ್ತು. ಕನ್ನಡದಲ್ಲೇ ಆರ್.ಆರ್.ಆರ್ ನೋಡುತ್ತೇವೆ. ಬೇರೆ ಭಾಷೆಯಲ್ಲಿರುವ ಚಿತ್ರವನ್ನು ತಿರಸ್ಕರಿಸುತ್ತೇವೆ ಎಂದು ಅನೇಕ ಕನ್ನಡಿಗರು ಪೋಸ್ಟ್ ಮಾಡಿದ್ದರು. ಈ ಕಾವು ಮತ್ತಷ್ಟು ಜೋರಾಗುತ್ತಿದ್ದಂತೆಯೇ ಕರ್ನಾಟಕದಲ್ಲಿ ವಿತರಣಾ ಹಕ್ಕು ಪಡೆದಿರುವ ಕೆ.ವಿ.ಎನ್ ಸಂಸ್ಥೆಯು ತುಂಬಾ ಜಾಣ್ಮೆಯ ಉತ್ತರವನ್ನು ಕೊಟ್ಟಿದೆ. ಆರ್.ಆರ್.ಆರ್ ಸಿನಿಮಾವನ್ನು ಕನ್ನಡದಲ್ಲಿ ನೋಡಲು ನೀವೇ ನಮಗೆ ಸಹಾಯ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರರಿಗೆ ಈ ಜವಾಬ್ದಾರಿ ಹೊರೆಸಿದೆ. ಇದನ್ನೂ ಓದಿ : ರಾಜಕೀಯ ದಾಳವಾದ ಪುನೀತ್ ನಟನೆಯ ‘ಜೇಮ್ಸ್’ ಚಿತ್ರ

    ಈ ಕುರಿತು ಡಬ್ಬಿಂಗ್ ಪರ ಹೋರಾಟಗಾರರಿಗೆ ಅದು ಸುದೀರ್ಘವಾಗಿ ಪತ್ರ ಬರೆದು, “ಆರ್.ಆರ್.ಆರ್ ನಾಯಕ ನಟರಾದ ರಾಮ್ ಚರಣ್ ಮತ್ತು ಜ್ಯೂ.ಎನ್.ಟಿ.ಆರ್ ಕನ್ನಡ ಕಲಿಯಲು ವಿಶೇಷ ಪ್ರಯತ್ನಗಳನ್ನು ಮಾಡಿ, ಮೊದಲ ಬಾರಿಗೆ ತಮ್ಮದೇ ಧ್ವನಿಯಲ್ಲಿ ಡಬ್ ಮಾಡಿದ್ದಾರೆ. ನೀವು ಕನ್ನಡ ಭಾಷೆಯಲ್ಲಿ ಈ ಮಹೋನ್ನತ ದೃಶ್ಯಕಾವ್ಯವನ್ನು ನೋಡಲು ಇಷ್ಟಪಡುತ್ತೀರಿ ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ ಆರ್.ಆರ್.ಆರ್ ಸಿನಿಮಾವನ್ನು ಕನ್ನಡದ ಅವತರಣಿಕೆಯನ್ನು ಪ್ರದರ್ಶಿಸಲು ಹಿಂದೇಟು ಹಾಕುತ್ತಿರುವ ಥಿಯೇಟರ್ ಮಾಲೀಕರ ಮನವೊಲಿಸುವ ಕಾರ್ಯ ನಡೆಯುತ್ತಿದೆ. ಕನ್ನಡದ ಅವತರಣಿಕೆಯನ್ನು ಹೆಚ್ಚಿನ ಸ್ಕ್ರೀನ್ ಗಳಲ್ಲಿ ಬಿಡುಗಡೆ ಮಾಡಲು ಎಲ್ಲಾ ಪ್ರಯತ್ನಗಳನ್ನೂ ನಾವು ಸತತವಾಗಿ ಮಾಡುತ್ತಿದ್ದೇವೆ. ಈ ಬಗ್ಗೆ ನಾಳೆಯೊಳಗೆ ಸಂಪೂರ್ಣ ಮಾಹಿತಿ ನೀಡಲಿದ್ದೇವೆ. ಕನ್ನಡ ಅವತರಣಿಕೆಯನ್ನು ವೀಕ್ಷಿಸುವ ಮೂಲಕ ಹಾಗೂ ರಾಜ್ಯದಾದ್ಯಂತ ಹೆಚ್ಚಿನ ಪರದೆಗಳಲ್ಲಿ ಕನ್ನಡದ ಆವೃತ್ತಿಯನ್ನೇ ಬಿಡುಗಡೆ ಮಾಡುವುದಕ್ಕೆ ನಮಗೆ ನೀವು ಸಹಾಯ ಮಾಡುತ್ತೀರಿ, ನಮ್ಮನ್ನು ಬೆಂಬಲಿಸುತ್ತೀರಿ ಎಂದು ಭಾವಿಸುತ್ತೇವೆ’’ ಕನ್ನಡದ ಸಿನಿಮಾವನ್ನು ಗೆಲ್ಲಿಸುವ ಜವಾಬ್ದಾರಿ ನಿಮ್ಮದೇ ಎಂದು ಕೈ ತೊಳೆದುಕೊಂಡಿದೆ. ಇದನ್ನೂ ಓದಿ : ಸ್ವಂತ ಜಮೀನು ಮಾರಿ ಆಸ್ಪತ್ರೆ ಕಟ್ಟಿಸಲು ಮುಂದಾದ ಹಿರಿಯ ನಟಿ ಲೀಲಾವತಿ: ಬಹುಪರಾಕ್ ಹೇಳಿದ ಕನ್ನಡ ಜನತೆ

     

     

    ಇನ್ನೆರಡು ದಿನ ಕಳೆದರೆ ಆರ್.ಆರ್. ಆರ್ ಸಿನಿಮಾ ವಿಶ್ವದಾದ್ಯಂತ ಬಿಡುಗಡೆ ಆಗುತ್ತಿದೆ. ಮಾರ್ಚ್ 25ಕ್ಕೆ ಹತ್ತು ಸಾವಿರಕ್ಕೂ ಹೆಚ್ಚಿನ ಚಿತ್ರಮಂದಿರಗಳಲ್ಲಿ ಈ ಸಿನಿಮಾ ತೆರೆ ಕಾಣುತ್ತಿದೆ.