ಸ್ಟಾರ್ ನಟರ ಜೊತೆ ದೊಡ್ಡ ದೊಡ್ಡ ಸಿನಿಮಾಗಳ ನಿರ್ಮಾಣದಲ್ಲಿ ಕೆವಿಎನ್ ಸಂಸ್ಥೆ (KVN Productions) ಹೆಸರು ಮಾಡಿದೆ. ‘ಟಾಕ್ಸಿಕ್’, ‘ಕೆಡಿ’, ‘ಜನ ನಾಯಗನ್’ ಮುಂತಾದ ಬಹುನಿರೀಕ್ಷಿತ ಸಿನಿಮಾಗಳು ಈ ಸಂಸ್ಥೆಯಿಂದ ಮೂಡಿಬರುತ್ತಿವೆ. ಆ ಮೂಲಕ ದಕ್ಷಿಣ ಭಾರತ ಚಿತ್ರರಂಗದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಕೆವಿಎನ್ ಪ್ರೊಡಕ್ಷನ್ಸ್’ ತೆಲುಗು ಚಿತ್ರರಂಗಕ್ಕೂ ಎಂಟ್ರಿ ಕೊಟ್ಟಿದೆ. ಇದೀಗ ಈ ಸಂಸ್ಥೆಯು ಶಿವಣ್ಣ (Shivarajkumar) ಜೊತೆ ಕೈ ಜೋಡಿಸಿದೆ.

ದಕ್ಷಿಣ ಚಿತ್ರರಂಗದ ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಮೊದಲ ಬಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆಯಾಗಿದೆ. ಈ ಚಿತ್ರಕ್ಕೆ ಖ್ಯಾತ ನಿರ್ದೇಶಕ ಪವನ್ ಒಡೆಯರ್ ಸಾರಥಿ. ಸ್ಯಾಂಡಲ್‌ವುಡ್‌ನಲ್ಲಿ (Sandalwood) ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪವನ್ ಒಡೆಯರ್ ಪುನೀತ್ ರಾಜ್‌ಕುಮಾರ್‌ಗೆ ಎರಡು ಸಿನಿಮಾಗಳನ್ನು ಮಾಡಿದ್ದಾರೆ. ಶಿವರಾಜ್‌ಕುಮಾರ್‌ಗೆ ಇದೇ ಮೊದಲ ಬಾರಿಗೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ಸೆಪ್ಟೆಂಬರ್ 3ರಿಂದ ಆರಂಭವಾಗಲಿದೆ. ಇದನ್ನೂ ಓದಿ: ಕಿರುತೆರೆಯಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಮಹಾತ್ಮೆ

ಶಿವಣ್ಣ ಅವರಿಗೆ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಪವನ್ ಒಡೆಯರ್ ಈ ಚಿತ್ರಕ್ಕೆ ಬಂಡವಾಳ ಕೂಡ ಹೂಡುತ್ತಿದ್ದಾರೆ. ಖ್ಯಾತ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ ಕೂಡ ಈ ಸಿನಿಮಾಗೆ ನಿರ್ಮಾಣ ಮಾಡುತ್ತಿದೆ. ವೆಂಕಟ್ ಕೊನಂಕಿ ಅವರ ಕೆವಿಎನ್ ಸಂಸ್ಥೆ ಹಾಗೂ ಪವನ್ ಒಡೆಯರ್ ಅವರ ಒಡೆಯರ್ ಮೂವೀಸ್ ಜಂಟಿಯಾಗಿ ಚಿತ್ರ ನಿರ್ಮಾಣ ಮಾಡಲಿದೆ. ಇದನ್ನೂ ಓದಿ: ಚೌಕಿದಾರ್ ಸಿನಿಮಾದ `ಓ ಮೈ ಬ್ರೋ’ ಹಾಡಿಗೆ ಭರ್ಜರಿ ರೆಸ್ಪಾನ್ಸ್
ಶಿವಣ್ಣ-ಪವನ್ ಕಾಂಬಿನೇಷನ್ ಸಿನಿಮಾದ ಚಿತ್ರೀಕರಣ ದೇಶದ ನಾನಾ ಭಾಗಗಳಲ್ಲಿ ನಡೆಯಲಿದೆ. ಸೆಪ್ಟೆಂಬರ್ ಮೂರರಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಶೂಟಿಂಗ್ ಆರಂಭವಾಗಲಿದೆ. ಆ ಬಳಿಕ ಮಂಡ್ಯ, ಹಿಮಾಚಲ ಪ್ರದೇಶ, ಮುಂಬೈ ಹಾಗೂ ಹೈದರಾಬಾದ್ ನಲ್ಲಿ ಚಿತ್ರೀಕರಣ ನಡೆಸಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ. ಇದನ್ನೂ ಓದಿ: ಅಭಿಮಾನ್ ಸ್ಟುಡಿಯೋ ಮುಟ್ಟುಗೋಲಿಗೆ ಸರ್ಕಾರ ಆದೇಶ – ಅನಿರುದ್ಧ ರಿಯಾಕ್ಷನ್ ಏನು?
ಶಿವವರಾಜ್ ಕುಮಾರ್ ನಾಯಕನಾಗಿ ನಟಿಸುತ್ತಿರುವ ಈ ಚಿತ್ರವನ್ನು ದೊಡ್ಡ ಮಟ್ಟದಲ್ಲಿ ತೆರೆಗೆ ತರಲು ಚಿತ್ರತಂಡ ಸಜ್ಜಾಗಿದೆ. ಅದರಂತೆ ತಾರಾ ಬಳಗದಲ್ಲಿ ಜಯರಾಮ್, ಸಾಯಿ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಪ್ರಕಾಶ್ ಬೆಳವಾಡಿಯಂತಹ ದಿಗ್ಗಜರ ಜೊತೆ ಸಂಜನಾ ಆನಂದ್ ಹಾಗೂ ದೀಕ್ಷಿತ್ ಶೆಟ್ಟಿಯಂತ ಪ್ರತಿಭಾನ್ವಿತ ಕಲಾದಂಡು ಚಿತ್ರದಲ್ಲಿ ಇರಲಿದೆ. ಒಂದೊಳ್ಳೆ ಕಮರ್ಷಿಯಲ್ ಎಂಟರ್ಟೈನ್ಮೆಂಟ್ ಕಥಾಹಂದರ ಹೊಂದಿರುವ ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ, ಶಶಾಂಕ್ ನಾರಾಯಣ್ ಸಂಕಲನ ಒದಗಿಸಲಿದ್ದಾರೆ. ಶಿವಣ್ಣ , ಪವನ್ ಒಡೆಯರ್ ಹಾಗೂ ಕೆವಿಎನ್ ಮೊದಲ ಬಾರಿಗೆ ಒಂದಾಗುತ್ತಿರುವುದು ಚಿತ್ರದ ಮೇಲಿನ ನಿರೀಕ್ಷೆಯನ್ನು ಸಹಜವಾಗಿ ಹೆಚ್ಚು ಮಾಡಿದೆ.













ಬರೋಬ್ಬರಿ 11 ವರ್ಷಗಳ ನಂತರ ಡಿಬಾಸ್‌ಗೆ ಮತ್ತೆ ಪ್ರೇಮ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ‘ಕರಿಯ’ ಜೋಡಿ ಮತ್ತೆ ಒಂದಾಗಿರೋದು ಸಹಜವಾಗಿ ಫ್ಯಾನ್ಸ್‌ಗೆ ಖುಷಿ ಕೊಟ್ಟಿದೆ. ದರ್ಶನ್ ಹುಟ್ಟುಹಬ್ಬದಂದು (ಫೆ.16) ಈ ಸಿನಿಮಾದ ಮೋಷನ್ ಪೋಸ್ಟರ್ ಅನ್ನು ಚಿತ್ರತಂಡ ರಿಲೀಸ್ ಮಾಡಿದೆ. ದರ್ಶನ್- ಪ್ರೇಮ್ ಕಾಂಬೋ ಸಿನಿಮಾವನ್ನು ಕೆವಿಎನ್ ಸಂಸ್ಥೆ ನಿರ್ಮಾಣ ಮಾಡುತ್ತಿದ್ದಾರೆ. ಇದನ್ನೂ ಓದಿ:




ಇದು ನೆಕ್ಸ್ಟ್ ಲೆವೆಲ್ ಸಿನಿಮಾ. ಹೀಗಂತಿದೆ ಇದೀ ಯಶ್ ಬಳಗ. ಈಗಾಗಲೇ ಫಸ್ಟ್ ಲುಕ್ ಕೂಡ ಜನರ ಮುಂದೆ ಬರಲು ಸಜ್ಜಾಗಿದೆ. ಅದನ್ನು ನೋಡಿದವರು ಬೆಚ್ಚಿ ಬಿದ್ದಿದ್ದಾರೆ. ಇದೇನಿದು ಯಶ್ ಅವತಾರ? ಬರೀ ಫಸ್ಟ್ ಲುಕ್ ಈ ರೇಂಜ್‌ಗಿದ್ದರೆ ಇನ್ನು ಸಿನಿಮಾ ಹೇಗಿರಬಹುದು? ಇನ್ಯಾವ ಹೊಸ ಲೋಕಕ್ಕೆ ನಮ್ಮನ್ನು ಕರೆದುಕೊಂಡು ಹೋಗಬಹುದು? ಇಡೀ ಜಗತ್ತೇ ನಮ್ಮ ಕನ್ನಡ ನಾಡನ್ನು ಬರೀ ಮೆರೆಸುವುದಲ್ಲ. ತಲೆ ಮೇಲಿಟ್ಟುಕೊಂಡು ಪೂಜೆ ಮಾಡುತ್ತದೆ. ಇದು ಯಶ್ 19 ಸಿನಿಮಾದ ಅಸಲಿ ಸಮಾಚಾರ. ಇನ್ನೇನು ಕೆಲವೇ ಕೆಲವು ದಿನ. ಖುದ್ದು ಯಶ್ ನಿಮ್ಮ ಮುಂದೆ ಹಾಜರಾಗಿ ಎಲ್ಲವನ್ನೂ ಹಂಚಿಕೊಳ್ಳಲಿದ್ದಾರೆ.







