Tag: KY Nanjegowda

  • ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ರೆ ರಾಜಕೀಯ ಬಿಡುವೆ: ಶಾಸಕ ಕೆವೈ ನಂಜೇಗೌಡ

    – ನ್ಯಾಯಾಲಯ ಅಸಿಂಧು ಮಾಡಿರುವುದು ಸರಿಯಲ್ಲ

    ಕೋಲಾರ: ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ (Manjunath Gowda) ಗೆದ್ದರೆ ರಾಜಕೀಯ ಬಿಡುತ್ತೇನೆ ಎಂದು ಮಾಲೂರು ಶಾಸಕ ಕೆವೈ ನಂಜೇಗೌಡ (KY Nanjegowda) ಸವಾಲು ಹಾಕಿದ್ದಾರೆ.

    2023ರ ಮಾಲೂರು (Malur) ಕ್ಷೇತ್ರದ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ (High Court) ತೀರ್ಪು ನೀಡಿರುವ ಕುರಿತು ಕೋಲಾರದಲ್ಲಿ (Kolar) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪು ಬಂದಿದೆ. ನನ್ನ ವಿರುದ್ಧ ಸೋತ ಅಭ್ಯರ್ಥಿ ಮರು ಎಣಿಕೆಗೆ ನ್ಯಾಯಾಲಯದ ಮೊರೆ ಹೋಗಿದ್ದರು. ರೀ ಕೌಂಟಿಂಗ್ ಕೊಟ್ರೆ ನಾನು ಬದ್ಧ ಎಂದು ಹಲವು ಬಾರಿ ಹೇಳಿದ್ದೆ. ಶಾಸಕ ಸ್ಥಾನವನ್ನು ಅಸಿಂಧುಗೊಳಿಸಲಾಗಿದೆ. ಹೀಗಾಗಿ ನಾನು ಅಪೀಲು ಹಾಕಿದ್ದೇನೆ ಎಂದರು. ಇದನ್ನೂ ಓದಿ: Malur Election | ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಗೆದ್ದವರಿಗೆ ಸೇರಿಸಿದ್ದಾರೆ: ಕೆ.ಎಸ್‌ ಮಂಜುನಾಥ್‌ ಗೌಡ

    ಚುನಾವಣೆ ಪ್ರಕ್ರಿಯೆ ವಜಾ ಮಾಡಿದ ಮೇಲೆ ಚುನಾವಣೆ ಘೋಷಣೆ ಮಾಡಬೇಕಿತ್ತು. ರೀ ಕೌಂಟಿಂಗ್ ಮಾಡಿದ್ದರೆ ನಾನು ತಯಾರಿದ್ದೆ. ನಿಮ್ಮದೇ ಸರ್ಕಾರ, ನಿಮ್ಮದೇ ಮಂತ್ರಿ, ಅಧಿಕಾರಿಗಳು, ನೀವೆ ಕಾವಲಿದ್ದು ಮತ ಎಣಿಕೆ ಮಾಡಿದ್ದು. ವಿವಿ ಪ್ಯಾಟ್ ಕೌಂಟಿಂಗ್ ಮಾಡಿಸಿದ್ರು, ಅವರ ಪ್ರೊಸಿಜರ್ ಪ್ರಕಾರ ಮಾಡಿದ್ರು. ಇವರಿಗೆ ಹುಚ್ವು ಹಿಡಿದಿದೆ, ಜೀವಮಾನದಲ್ಲಿ ಅವರು ಹೊಸಕೋಟೆಯಲ್ಲಿ ಶಾಸಕರಾಗಲು ಸಾಧ್ಯವಿಲ್ಲ. ನ್ಯಾಯಾಲಯ ಅಸಿಂಧು ಮಾಡಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾಲೂರು ಶಾಸಕ ನಂಜೇಗೌಡ ಆಯ್ಕೆ ಅಸಿಂಧು – ಮರು ಮತ ಎಣಿಕೆಗೆ ಹೈಕೋರ್ಟ್ ಆದೇಶ

    ಮಾಲೂರು ತಾಲೂಕು ತಬ್ಬಲಿಯಾಗಿಲ್ಲ, ಮೂವತ್ತು ದಿನ ಸಮಯಾವಕಾಶ ಕೊಟ್ಟಿದ್ದಾರೆ. ಮರು ಎಣಿಕೆಯಲ್ಲಿ ಮಂಜುನಾಥ್ ಗೌಡ ಗೆದ್ದರೆ ರಾಜಕೀಯ ಬಿಡುವೆ. ಮರು ಎಣಿಕೆ ಆಗಲಿ, ಅಸಿಂಧು ವಿರುದ್ಧ ಸುಪ್ರೀಂ ಮೊರೆ ಹೋಗುವೆ. ಅವರ ಪರವಾಗಿ ಕೆಲ ಹುಚ್ಚರಿದ್ದಾರೆ, ಅವರು ಪಟಾಕಿ ಹೊಡೆದು ಸಿಹಿ ಹಂಚಿದ್ದಾರೆ. ಅವರೇನು ಶಾಸಕರಾಗಿದ್ದಾರಾ? ಇಲ್ಲವಲ್ಲಾ, ಯಾರೋ ಕೆಲವರು ಸಂಭ್ರಮ ಮಾಡಿದ್ದಾರೆ. ಮಂಜುನಾಥ್ ಗೌಡ ಹಗಲು ಕನಸು ಕಾಣುತ್ತಿದ್ದಾರೆ, ಭ್ರಮೆಯಲ್ಲಿದ್ದಾರೆ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಚಿತ್ರ ಪ್ರದರ್ಶನ, ರಕ್ತದಾನ ಶಿಬಿರ – ಸಮಾಜಸೇವಾ ಕಾರ್ಯಗಳೊಂದಿಗೆ ಮೋದಿ ಜನ್ಮದಿನಾಚರಣೆ

  • ಶಾಸಕ ನಾರಾಯಣಸ್ವಾಮಿ ಬಿಪಿಎಲ್ ಕಾರ್ಡ್ ಆಗಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಕೆ.ವೈ ನಂಜೇಗೌಡ

    ಶಾಸಕ ನಾರಾಯಣಸ್ವಾಮಿ ಬಿಪಿಎಲ್ ಕಾರ್ಡ್ ಆಗಿದ್ದರೆ ರಾಜಕೀಯ ನಿವೃತ್ತಿ ಪಡೆಯುತ್ತೇನೆ: ಕೆ.ವೈ ನಂಜೇಗೌಡ

    – ಕೋಲಾರದಲ್ಲಿ ಮುಂದುವರಿದ ಕಾಂಗ್ರೆಸ್ ಶಾಸಕರ ವಾಕ್ಸಮರ

    ಕೋಲಾರ: ಕೋಲಾರದಲ್ಲಿ (Kolar) ಕಳೆದೊಂದು ವಾರದಿಂದ ಕಾಂಗ್ರೆಸ್ ಶಾಸಕರ ವಾಕ್ಸಮರ ಜೋರಾಗಿ ನಡೆಯುತ್ತಿದೆ. ಸ್ವಪಕ್ಷೀಯ ಕಾಂಗ್ರೆಸ್ ಶಾಸಕರು ಒಬ್ಬರನ್ನೊಬ್ಬರು ಕಾಲೆಳೆದುಕೊಳ್ಳುವ ಮೂಲಕ ಜಿಲ್ಲಾ ಕಾಂಗ್ರೆಸ್‌ನಲ್ಲಿ ಎಲ್ಲವೂ ಸರಿಯಲ್ಲವೆಂಬುದನ್ನು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ.

    ಭಾನುವಾರ ಬಂಗಾರಪೇಟೆ ಕಾಂಗ್ರೆಸ್ ಶಾಸಕ ಎಸ್.ಎನ್.ನಾರಾಯಣಸ್ವಾಮಿ (SN Naraynaswamy) ನಾನು ಬಿಪಿಎಲ್ ಕಾರ್ಡ್ ಎಂಎಲ್‌ಎ, ಮಾಲೂರು ಶಾಸಕ ಕೆ.ವೈ.ನಂಜೇಗೌಡ (KY Nanjegowda) ಎಪಿಎಲ್ ಶಾಸಕರೆಂದು ಆರೋಪಿಸಿದ್ದರು. ಅಲ್ಲದೇ ಅವರಿಗೆ ಉಸ್ತುವಾರಿ ಸಚಿವರು ಎರಡೂವರೆ ಸಾವಿರ ಕೋಟಿ ಅನುದಾನ ಕೊಟ್ಟಿದ್ರೆ ಅವರ ಸ್ವಾಮಿನಿಷ್ಠೆ ಇರಲಿ ಎಂದು ಶಾಸಕ ನಂಜೇಗೌಡಗೆ ಟಾಂಗ್ ನೀಡಿದ್ದರು. ಈ ಹಿನ್ನೆಲೆ ಮಾಲೂರು ಶಾಸಕ ಕೆ.ವೈ.ನಂಜೇಗೌಡ ಇಂದು ಬಂಗಾರಪೇಟೆ ಶಾಸಕ ನಾರಾಯಣಸ್ವಾಮಿ ಟಾಂಗ್ ಕೊಟ್ಟಿದ್ದು, ಬಿಪಿಎಲ್ ಕಾರ್ಡ್ ಆಗಿದ್ದರೆ ನಾನು ರಾಜಕೀಯ ನಿವೃತ್ತಿ ಪಡೆಯುವುದಾಗಿ ಸವಾಲು ಹಾಕಿದ್ದಾರೆ. ಇದನ್ನೂ ಓದಿ: ದಾವಣಗೆರೆ | ಡಿಜೆಗೆ ಅನುಮತಿ ನಮ್ಮ ಹೋರಾಟಕ್ಕೆ ಸಿಕ್ಕ ಫಲ – ರಾಜಕೀಯ ಮುಖಂಡರಿಂದ ಸುಳ್ಳು ಪೋಸ್ಟ್

    ಕೋಲಾರ ಜಿಲ್ಲೆ ಮಾಲೂರು ಹಾಲು ಒಕ್ಕೂಟದಲ್ಲಿ ಮಾತನಾಡಿದ ಅವರು, ನಾರಾಯಣಸ್ವಾಮಿ ಅವರು ದೊಡ್ಡ ಇನ್‌ಕಮ್ ಟಾಕ್ಸ್ ಹೋಲ್ಡರ್ ಆಗಿದ್ದಾರೆ. ಬಿಪಿಎಲ್ ಕಾರ್ಡ್‌ನವರೆಂದು ಇನ್ನೊಮ್ಮೆ ಮಾತನಾಡಬೇಡಿ. ಬಿಪಿಎಲ್ ಕಾರ್ಡ್ ಅಂತ ನೀವು ಡಿಕ್ಲೇರ್ ಮಾಡಿದರೆ ನಾನು ರಾಜಕೀಯ ನಿವೃತ್ತಿ ಪಡೆಯುವೆ. ನಿಮ್ಮ ತಂದೆ ತಾಯಿ ಅವರು ಆಗ ಬಿಪಿಎಲ್ ಕಾರ್ಡ್ ಹೊಂದಿರಬಹುದು ಆದ್ರೆ ನೀನು ಬುದ್ಧಿವಂತ, ಎಪಿಎಲ್ ಆಗಿದ್ದೀಯಾ. ಈಗಲೂ ನೀನು ಬಿಪಿಎಲ್ ಕಾರ್ಡ್ ಎಂದು ಪ್ರೂವ್ ಮಾಡಿದರೆ ನಾನು ರಾಜಕೀಯದಲ್ಲಿ ಇರುವುದಿಲ್ಲ ಎಂದು ಸವಾಲಾಕಿದ್ದಾರೆ. ನಾನು ನಮ್ಮ ತಾತನವರ ಕಾಲದಿಂದ ಎಪಿಎಲ್ ಕಾರ್ಡ್ ಹೊಂದಿರುವೆ. ನಾವು ಏನು ಮಾಡುತ್ತೀವಿ, ಮಾತನಾಡುತ್ತಿದ್ದೇವೆ ಅಂತ ಜನರು ನೋಡುತ್ತಿದ್ದಾರೆ. ಮೂರು ಬಾರಿ ಶಾಸಕರಾಗಿದ್ದೀರಿ, ಯಾರ ಬಗ್ಗೆ ಮಾತನಾಡುತ್ತಿದ್ದೀರಿ ತಿಳಿದುಕೊಳ್ಳಿ ಎಂದರು. ಇದನ್ನೂ ಓದಿ: ಸರ್ಕಾರಿ ಕೆಲಸಗಳಿಗೆ ಇನ್ಮುಂದೆ ವಾರ್ಷಿಕ ಗುತ್ತಿಗೆ ಆಧಾರದಲ್ಲಿ ಹೆಲಿಕಾಪ್ಟರ್ ಸೇವೆ ಪಡೆಯಲು ನಿರ್ಧಾರ

    ಇನ್ನು ಎಂಎಲ್‌ಸಿ ಅನಿಲ್ ಕುಮಾರ್ ಜಿಲ್ಲೆಯ ಕಾಂಗ್ರೆಸ್ ಶಾಸಕರನ್ನು ಕೆಡಿಸುತ್ತಿದ್ದಾರೆಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ಅನಿಲ್ ಕುಮಾರ್ ಹೇಳಿದೆಲ್ಲ ಕೇಳುವುದಕ್ಕೆ ನಾನು ಮಗುವೆ? ಆಕಸ್ಮಿಕವಾಗಿ ರಾಜಕೀಯಕ್ಕೆ ಬಂದವನಲ್ಲ, ಕೆಳ ಹಂತದಿಂದ ನಾನು ಬಂದಿರುವೆ. ಈ ಹಿಂದೆ ಅನಿಲ್ ಕುಮಾರ್ ಮತ್ತು ನಾರಾಯಣಸ್ವಾಮಿ ಎಷ್ಟು ಒಗ್ಗಟ್ಟು ಆಗಿದ್ದರು. ಅನಿಲ್ ಕುಮಾರ್ ಸಾಮಾನ್ಯ ವ್ಯಕ್ತಿ, ಒಳ್ಳೆತನ ಇಲ್ಲಿ ಇರುತ್ತೆ ಅಲ್ಲಿ ಇರುತ್ತಾರೆ ಎಂದು ಶಾಸಕ ನಾರಾಯಣಸ್ವಾಮಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳ ಪ್ರಕರಣ RSS vs RSS ನಡುವಿನ ಜಗಳ – ಪ್ರಿಯಾಂಕ್ ಖರ್ಗೆ

  • ನನಗೆ ಸಿಎಂ, ಡಿಸಿಎಂ ವಿರುದ್ಧ ಅಸಮಾಧಾನ ಇಲ್ಲ: ಕೆವೈ ನಂಜೇಗೌಡ

    ನನಗೆ ಸಿಎಂ, ಡಿಸಿಎಂ ವಿರುದ್ಧ ಅಸಮಾಧಾನ ಇಲ್ಲ: ಕೆವೈ ನಂಜೇಗೌಡ

    – ನನ್ನ ಅಸಮಾಧಾನ ಜಿಲ್ಲೆಯ ಕೆಲ ಶಾಸಕರ ವಿರುದ್ಧ ಎಂದ ಶಾಸಕ

    ಕೋಲಾರ: ನನಗೆ ಸರ್ಕಾರ, ಮಂತ್ರಿಗಳ ವಿರುದ್ಧ ಬೇಸರ ಇಲ್ಲ. ನನ್ನ ಅಸಮಾಧಾನ ಏನಿದ್ದರೂ ಜಿಲ್ಲೆಯ ಕೆಲ ಶಾಸಕರ ವಿರುದ್ಧ ಎಂದು ಮಾಲೂರು ಶಾಸಕ ಕೆವೈ ನಂಜೇಗೌಡ (KY Nanjegowda) ಹೇಳಿದ್ದಾರೆ.

    ಕೋಲಾರದಲ್ಲಿ (Kolar) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಹಾದಿಯಾಗಿ ಡಿಸಿಎಂ, ಸಚಿವರು ನನಗೆ ಸಾಕಷ್ಟು ಅನುದಾನ ನೀಡಿದ್ದಾರೆ. ಯಾವುದೇ ಮಂತ್ರಿಗಳು ಸಹ ನನಗೆ ಅನುದಾನ ನೀಡದೆ ಇಲ್ಲ. ಸರ್ಕಾರದಲ್ಲಿ ಮಂತ್ರಿ ಮಂಡಲದಲ್ಲಿ ಎಲ್ಲರೂ ನನಗೆ ಸಹಕಾರ ನೀಡಿದ್ದಾರೆ ಎಂದರು. ಇದನ್ನೂ ಓದಿ: ಕೆಆರ್‌ಎಸ್‌ಗೆ ಬಾಗಿನ ಅರ್ಪಿಸಿ ದಾಖಲೆ ಬರೆದ ಸಿದ್ದರಾಮಯ್ಯ

    ನಾಳೆ ಬೆಳಗ್ಗೆ ನನಗೆ ಸುರ್ಜೇವಾಲ ಅವರು ಬುಲಾವ್ ನೀಡಿದ್ದಾರೆ. ಪಕ್ಷಕ್ಕೆ ಡ್ಯಾಮೇಜ್ ಆಗುವ ಕೆಲ ಶಾಸಕರ ವರ್ತನೆ ಜೊತೆಗೆ ಪಕ್ಷಕ್ಕೆ ಡ್ಯಾಮೇಜ್ ಆಗುವ ಬೆಳವಣಿಗೆಗಳ ಕುರಿತು ತಿಳಿಸುವೆ. ಪಕ್ಷಕ್ಕಿಂತ ನಾವ್ಯಾರು ದೊಡ್ಡವರಲ್ಲ, ಪಕ್ಷಕ್ಕೆ ನಾವೆಲ್ಲರೂ ಬದ್ಧ. ಅಂತಹ ವಿಚಾರಗಳನ್ನು ನಾನು ಹೈಕಮಾಂಡ್ ಮುಂದೆ ಪ್ರಸ್ತಾಪ ಮಾಡುವೆ ಎಂದು ಹೇಳಿದರು. ಇದನ್ನೂ ಓದಿ: 60 ವರ್ಷದಿಂದ ಉಳುಮೆ ಮಾಡ್ತಿದ್ದ ರೈತನಿಗೆ ಶಾಕ್ – ತಹಶೀಲ್ದಾರ್ ಸಹಿ ನಕಲಿಸಿ, 8 ಎಕರೆ ಬೇರೆಯವ್ರ ಹೆಸರಿಗೆ ವರ್ಗ

    ಪಕ್ಷ ಇಂತಹ ದೊಡ್ಡ ಅವಕಾಶ ಮಾಡಿಕೊಟ್ಟಿರುವುದು ನನ್ನ ಪುಣ್ಯ. ಹಾಗಾಗಿ ನಾಳೆ ಸುರ್ಜೇವಾಲ ಅವರನ್ನ ಭೇಟಿಯಾಗಿ ಎಲ್ಲಾ ವಿಚಾರಗಳ ಕುರಿತು ಚರ್ಚಿಸುವೆ. ಅಲ್ಲದೇ ಡಿಸಿಸಿ ಬ್ಯಾಂಕ್ ಹಾಗೂ ಕೋಮುಲ್ ಬೆಳವಣಿಗೆಗಳ ಕುರಿತು ಮಾತನಾಡುವೆ ಎಂದು ತಿಳಿಸಿದರು. ಇದನ್ನೂ ಓದಿ: ಹೃದಯಾಘಾತವಲ್ಲ ಟ್ರ್ಯಾಕ್ಟರ್ ಅಪಘಾತದಲ್ಲಿ ಹಾಸನದ ಯೋಧ ಸಾವು

  • ಕೋಲಾರಕ್ಕೆ ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕು, ನಾನು ಅರ್ಹನಿದ್ದೇನೆ: ಕೆವೈ ನಂಜೇಗೌಡ

    ಕೋಲಾರಕ್ಕೆ ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕು, ನಾನು ಅರ್ಹನಿದ್ದೇನೆ: ಕೆವೈ ನಂಜೇಗೌಡ

    – ಹಾಲಿನ ದರ ಏರಿಕೆ ಸುಳಿವು ನೀಡಿದ ಶಾಸಕ

    ಕೋಲಾರ: ಮಂತ್ರಿ ಸ್ಥಾನ ಬೇಕೆಂಬುದು ನಮ್ಮ ಜಿಲ್ಲೆಯ ಜನರ ನೋವಾಗಿದೆ. ಕೋಲಾರ (Kolar) ಜಿಲ್ಲೆಗೆ ಈ ಬಾರಿ ಮಂತ್ರಿ ಸ್ಥಾನ ನೀಡಲೇಬೇಕು. ಮಂತ್ರಿ ಸ್ಥಾನಕ್ಕೆ ನಾನು ಅರ್ಹನಿದ್ದೇನೆ ಎಂದು ಮಾಲೂರು ಶಾಸಕ ಕೆವೈ ನಂಜೇಗೌಡ (KY Nanjegowda) ಹೇಳಿದ್ದಾರೆ.

    ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರಿದ್ದೇವೆ. ಒಬ್ಬರಿಗೆ ಮಂತ್ರಿ ಸ್ಥಾನ ಬೇಕು. ಮಂತ್ರಿ ಸ್ಥಾನ ನೀಡುವಂತೆ ನಾನು ಮನವಿ ಮಾಡಿದ್ದೇನೆ. ಮಾಲೂರು ತಾಲೂಕಿನಲ್ಲಿ ನಾನು ಕಾಂಗ್ರೆಸ್ ಕಟ್ಟಿ ಬೆಳೆಸಿದ್ದೇನೆ. ತುಂಬಾ ಕಷ್ಟದಲ್ಲಿ ಎರಡನೇ ಬಾರಿ ಆಯ್ಕೆಯಾಗಿದ್ದೇನೆ. ಕೋಲಾರ ಜಿಲ್ಲೆಯ ಶಾಸಕರು ಮಂತ್ರಿ ಸ್ಥಾನ ಕೇಳಿದ್ದೇವೆ. ಯಾರಿಗೆ ಕೊಟ್ಟರೂ ನನಗೆ ಒಪ್ಪಿಗೆ. ಮಂತ್ರಿ ಸ್ಥಾನ ನೀಡುವ ನಿರ್ಧಾರ ಸಿಎಂ, ಡಿಸಿಎಂ ಹಾಗು ಹೈಕಮಾಂಡ್‌ಗೆ ಬಿಡುವೆ ಎಂದರು. ಇದನ್ನೂ ಓದಿ: ಭೂ ಪರಿಹಾರ ವಿಳಂಬ – ಸಂತ್ರಸ್ತ ರೈತರಿಂದ ಎಸಿ ಕಚೇರಿ ವಸ್ತುಗಳ ಜಪ್ತಿ

    ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿನ ಗುಂಪುಗಾರಿಕೆ ಕೆಟ್ಟದಾಗಿದೆ. ಬೇರೆ ಯಾವ ರಾಜ್ಯದಲ್ಲೂ ಹೀಗೆ ಗುಂಪುಗಾರಿಕೆ ಇಲ್ಲ. ದೇಶದಲ್ಲಿ ಬಿಜೆಪಿ ಪ್ರಭಾವ ದಿನೇ ದಿನೇ ಕುಸಿಯುತ್ತಿದೆ. ಇತ್ತೀಚಿಗೆ ನಡೆದ ರಾಜ್ಯ ಉಪಚುನಾವಣೆಯಲ್ಲಿ ಬಿಜೆಪಿ ಸೋತಿದೆ. ರಾಜ್ಯಾಧ್ಯಕ್ಷರ ವಿರುದ್ಧವೇ ಸೀನಿಯರ್ ಎಂಎಲ್‌ಎಗಳೇ ಹೋರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸುಭದ್ರ ಸರ್ಕಾರ ಇದೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ಬಲಿಷ್ಠವಾಗಿದೆ. ನಮ್ಮ ಹೈಕಮಾಂಡ್ ಬಲಿಷ್ಠವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ನಿರ್ಮಲಾನಂದನಾಥ ಶ್ರೀಗಳ ಫೋನ್ ಟ್ಯಾಪ್ ಮಾಡಿದಾಗ ಯಾಕೆ ಮಾತಾಡಲಿಲ್ಲ – ಅಶೋಕ್‌ಗೆ ಡಿಕೆಶಿ ಪ್ರಶ್ನೆ

    ರಾಜ್ಯದಲ್ಲಿ ಹಾಲಿನ ದರ ಏರಿಕೆ ವಿಚಾರದ ಕುರಿತು ಮಾತನಾಡಿ, ಸಿಎಂ ಸಿದ್ದರಾಮಯ್ಯ ಆ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತಾರೆ. ರಾಜ್ಯದಲ್ಲಿ 5 ರೂ. ದರ ಏರಿಕೆಗೆ ಒತ್ತಾಯ ಇದೆ. 5 ರೂ. ದರ ಏರಿಸಿ 5 ರೂ. ರೈತರಿಗೆ ನೀಡಬೇಕು ಎಂಬುದು ಒತ್ತಾಯ. ಶೀಘ್ರದಲ್ಲೇ ಹಾಲು ದರ ಏರಿಕೆಯಾಗುವ ಸಾಧ್ಯತೆಯಿದೆ ಎಂದು ದರ ಏರಿಕೆಯ ಸುಳಿವು ನೀಡಿದರು. ಇದನ್ನೂ ಓದಿ: ಓಟದ ಅಭ್ಯಾಸ ಮಾಡುತ್ತಿರುವಾಗ 14ರ ಬಾಲಕ ಹೃದಯಾಘಾತದಿಂದ ಸಾವು

  • ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಲಿಷ್ಠವಾಗಿದೆ, ಬಿಜೆಪಿಯ ತಿರುಕನ ಕನಸು ನನಸಾಗಲ್ಲ: ಕೆವೈ ನಂಜೇಗೌಡ

    ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಬಲಿಷ್ಠವಾಗಿದೆ, ಬಿಜೆಪಿಯ ತಿರುಕನ ಕನಸು ನನಸಾಗಲ್ಲ: ಕೆವೈ ನಂಜೇಗೌಡ

    ಕೋಲಾರ: ಬಿಜೆಪಿ (BJP) ಪಕ್ಷದವರು ಹಗಲು ಕನಸು ಕಾಣುತ್ತಿದ್ದಾರೆ. ಕಾಂಗ್ರೆಸ್ (Congress) ಸರ್ಕಾರ ರಾಜ್ಯದಲ್ಲಿ ಬಲಿಷ್ಠವಾಗಿದೆ ಎಂದು ಮಾಲೂರು (Malur) ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ (K. Y. Nanjegowda) ಕಿಡಿಕಾರಿದ್ದಾರೆ.

    ಸಿಎಂ ಬದಲಾವಣೆ ಕುರಿತು ಬಿಜೆಪಿ ಹೇಳಿಕೆ ಬಗ್ಗೆ ಕೋಲಾರದ ಮಾಲೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಪಕ್ಷಕ್ಕೆ ಭವಿಷ್ಯ ಇಲ್ಲ ಅನ್ನೋದು ಅವರಿಗೆ ಗೊತ್ತಾಗಿದೆ. ಕೇಂದ್ರ ಸರ್ಕಾರ, ರಾಜ್ಯಪಾಲರು ಹಾಗೂ ಇ.ಡಿಯನ್ನು ಬಳಸಿಕೊಳ್ಳುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಇಳಿಸಲು ತೊಂದರೆ ಕೊಡುತ್ತಿದ್ದಾರೆ. ಬಿಜೆಪಿಯ ತಿರುಕನ ಕನಸು ನನಸಾಗೋದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಓಲೈಕೆ ರಾಜಕಾರಣ, ಭ್ರಷ್ಟಾಚಾರ ಸರ್ಕಾರೀಕರಣವಾಗಿದೆ: ಕಾಗೇರಿ ಕಿಡಿ

    ಬಿಜೆಪಿಯವರು ಮೊದಲು ತಮ್ಮ ಉಳುಕು ಸರಿ ಮಾಡಿಕೊಳ್ಳಲಿ. ಬಿಜೆಪಿ ಅಧ್ಯಕ್ಷ ವಿಜಯೇಂದ್ರ ವಿರುದ್ಧವೇ ಅವರ ಪಕ್ಷದವರು ತಿರುಗಿ ಬಿದ್ದಿದ್ದಾರೆ. ನಮ್ಮ ಸಿಎಂ ವಿರುದ್ಧ ಯಾರೂ ಇಲ್ಲ. ಸಿಎಂ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ. ಆರ್.ಅಶೋಕ್ ಹಾಗೂ ವಿಜಯೇಂದ್ರಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ. ಡಿಕೆಶಿ ಹಾಗೂ ಸಿದ್ದರಾಮಯ್ಯ ಇಬ್ಬರು ಜೋಡೆತ್ತುಗಳು. ಕ್ಷೇತ್ರದ ಅಭಿವೃದ್ಧಿ ವಿಚಾರಕ್ಕೆ ಸತೀಶ್ ಜಾರಕಿಹೊಳಿ ಅವರನ್ನು ವಿಜಯೇಂದ್ರ ಭೇಟಿ ಆಗಿದ್ದಾರೆ. ಸಚಿವ ಸತೀಶ್ ಜಾರಕಿಹೊಳಿ ಅವರು ಕೆಳಹಂತಕ್ಕೆ ಹೋಗೋದಿಲ್ಲ ಎಂದು ಹರಿಹಾಯ್ದರು. ಇದನ್ನೂ ಓದಿ: ರೈಲು ಹಳಿ ಮೇಲೆ ಸಿಲಿಂಡರ್‌ ಇರಿಸಿ ಹಳಿತಪ್ಪಿಸಲು ಯತ್ನ – ಲೋಕೋ ಪೈಲಟ್ ಸಮಯಪ್ರಜ್ಞೆಯಿಂದ ಪಾರು

    ಕೋಳಿವಾಡ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಹೇಳಿಕೆ ಕೊಡಬಾರದು. ಪಾಪ ಅವರಿಗೆ ವಯಸ್ಸಾಗಿದೆ. ಮಾನಸಿಕವಾಗಿ ಏನಾಗಿದೆ ಅಂತ ಗೊತ್ತಾಗುತ್ತಿಲ್ಲ. ಕೋಳಿವಾಡ ಅವರನ್ನು ಕಾಂಗ್ರೆಸ್ ಪಕ್ಷ ಲೆಕ್ಕಕ್ಕೆ ತೆಗೆದುಕೊಳ್ಳಬಾರದು. ಮಾಜಿ ಸ್ಪೀಕರ್ ಆಗಿದ್ರು, ಮಗ ಶಾಸಕರಾಗಿದ್ದಾರೆ ಎಂದರು. ಇದನ್ನೂ ಓದಿ: ತಿಂಗಳಿಗೂ ಮೊದಲೇ ಸ್ಕೆಚ್‌, ಶೂಟರ್‌ಗಳಿಗೆ ತಲಾ 50,000 ಕಾಂಟ್ರ್ಯಾಕ್ಟ್‌ – ಸಿದ್ದಿಕಿ ಹಂತಕರ ಪ್ಲ್ಯಾನ್‌ ರೋಚಕ

    ಕೋವಿಡ್ ಹಗರಣ ಎಸ್‌ಐಟಿಗೆ ನೀಡಿರುವ ಕುರಿತು ಮಾತನಾಡಿ, ಕೋವಿಡ್ ವೇಳೆ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದ ಬಗ್ಗೆ ದೊಡ್ಡದಾಗಿ ಮಾತನಾಡುತ್ತಾರೆ. ನಿಜವಾದ ತಿಮಿಂಗಿಲಗಳು ಇರೋದು ಇಲ್ಲಿ. ಆಗಿನ ಸಿಎಂ, ಆರೋಗ್ಯ ಮಂತ್ರಿಗಳು ಸಾವಿರಾರು ಕೋಟಿ ಹಗರಣ ಮಾಡಿದ್ದಾರೆ. ನಿವೃತ್ತ ನ್ಯಾಯಧೀಶರ ವರದಿ ಆಧರಿಸಿ ಎಸ್‌ಐಟಿಗೆ ನೀಡಲಾಗಿದೆ. ಕೋವಿಡ್ ಹಗರಣದಲ್ಲಿ ಇರೋರು ಜೈಲಿಗೆ ಹೋಗುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕೆಲಸ ನಿಂತಿಲ್ಲ- ಪ್ರಿಯಾಂಕ್ ಖರ್ಗೆ

  • ಬಿಜೆಪಿ ಎಂಪಿ, ಕಾಂಗ್ರೆಸ್‌ ಎಂಎಲ್‌ಎ ನಡುವೆ ಜಟಾಪಟಿ

    ಬಿಜೆಪಿ ಎಂಪಿ, ಕಾಂಗ್ರೆಸ್‌ ಎಂಎಲ್‌ಎ ನಡುವೆ ಜಟಾಪಟಿ

    ಕೋಲಾರ: ಸಂಸದ ಮುನಿಸ್ವಾಮಿ ಹಾಗೂ ಮಾಲೂರು ಕಾಂಗ್ರೆಸ್ ಶಾಸಕ ಕೆ.ವೈ.ನಂಜೇಗೌಡ ಮಧ್ಯೆ ಪ್ರತಿಷ್ಠೆಯ ಕಾಳಗ ಮುಂದುವರೆದಿದೆ.

    ಅದರಲ್ಲೂ ಮಾಲೂರು ಪುರಸಭೆ ಅಧ್ಯಕ್ಷ ಚುನಾವಣೆಯಲ್ಲಿ ಪರಸ್ಪರ ನಿಂದಿಸಿಕೊಂಡಿದ್ದ ಇಬ್ಬರು ನಾಯಕರು ಇಂದು ಮತ್ತೆ ಪುರಸಭೆ ಸಾಮಾನ್ಯ ಸಭೆಯಲ್ಲಿ ಇಬ್ಬರ ನಡುವೆ ಜೋರಾಗಿಯೇ ಗದ್ದಲ ನಡೆದಿದೆ. ಸಾಮಾನ್ಯ ಸಭೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಸದಸ್ಯರ ನಡುವೆ ವಾಗ್ವಾದ ನಡೆಯುತಿತ್ತು. ಈ ವೇಳೆ ಶಾಸಕ ನಂಜೇಗೌಡ ಹಾಗೂ ಸಂಸದ ಮುನಿಸ್ವಾಮಿ ನಡುವೆ ಮಾತಿನ ಯುದ್ಧ ಏರ್ಪಟ್ಟಿತ್ತು.

    bjp - congress

    ನಗರೊತ್ಥಾನ ಯೋಜನೆ ಸೇರಿದಂತೆ ಪುರಸಭಾ ಕಾಮಗಾರಿಗಳ ವಿಚಾರದಲ್ಲಿ ಶಾಸಕರ ಸರ್ವಾಧಿಕಾರಿ ಧೋರಣೆ ನಡೆಸುತ್ತಿದ್ದಾರೆ ಎಂದು ಆರೋಪಿಸಿ ಸಂಸದ ಮುನಿಸ್ವಾಮಿ ಶಾಸಕ ನಂಜೇಗೌಡ ಜೊತೆಗೆ ಮಾತು ಬೆಳೆಸಿದರು. ಅಲ್ಲದೆ ಅಧ್ಯಕ್ಷರು ಹಾಗೂ ಬಿಜೆಪಿ ಸದಸ್ಯರ ಗಮನಕ್ಕೆ ತರದೆ ಶಾಸಕರೇ ಕೆಲ ಪುರಸಭೆ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಾರೆ ಎಂದು ಆರೋಪಿಸಿದರು. ಹಾಗಾಗಿ ಇಂದು ನಡೆದ ಮಾಲೂರು ಪುರಸಭಾ ಸಾಮಾನ್ಯ ಸಭೆಯಲ್ಲಿ ಗದ್ದಲ ಹಾಗೂ ಕೋಲಾಹಲ ಸೃಷ್ಟಿಯಾಗಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆಯಿತು. ಇದನ್ನೂ ಓದಿ: ರಾಹುಲ್ ವಿರುದ್ಧ ಹಿಮಂತ ಬಿಸ್ವಾ ವಿವಾದಾತ್ಮಕ ಹೇಳಿಕೆ – ತೆಲಂಗಾಣ ಕಾಂಗ್ರೆಸ್ ನಾಯಕರಿಂದ ದೂರು

    ಇನ್ನೂ ತಾವು ಜವಾಬ್ದಾರಿಯುತ ಜನಪ್ರತಿನಿಧಿಗಳು ಎಂಬುದನ್ನು ಮರೆತು ಇಬ್ಬರು ನಾಯಕರು ಏಕವಚನದಲ್ಲೇ ಪರಸ್ವರ ವಾಗ್ವಾದ ಮಾಡಿಕೊಂಡರು. ಆ ಮೂಲಕ ಮಾಲೂರು ಪುರಸಭೆ ಸಂಸದ ಹಾಗೂ ಶಾಸಕರ ಪ್ರತಿಷ್ಠೆಯ ಕಾಳಗಕ್ಕೆ ವೇದಿಕೆಯಾಗಿತ್ತು. ಇನ್ನೂ ಸಭೆಯಲ್ಲಿದ್ದ ಅಧಿಕಾರಿಗಳು, ಸದಸ್ಯರು ಸೇರಿದಂತೆ ಪೊಲೀಸರು ಮೂಕ ಪ್ರೇಕ್ಷಕರಾಗಿ ಕಾಳಗವನ್ನು ನೋಡಿದರು. ಇದನ್ನೂ ಓದಿ: ಹಿಂದೂಗಳು ಹಣೆಗೆ ಕುಂಕುಮ ಇಡುತ್ತಾರೆ, ನಾವು ಅದನ್ನು ಪ್ರಶ್ನೆ ಮಾಡುತ್ತೇವಾ: ಮುಸ್ಲಿಂ ವಿದ್ಯಾರ್ಥಿಗಳು

  • ಅಯುಧಕ್ಕೆ ಪೂಜೆ ಸಲ್ಲಿಸಿ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಶಾಸಕ

    ಅಯುಧಕ್ಕೆ ಪೂಜೆ ಸಲ್ಲಿಸಿ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಶಾಸಕ

    ಕೋಲಾರ: ವಿಜಯದಶಮಿ ಅಂಗವಾಗಿ ಆಯುಧಗಳಿಗೆ ಪೂಜೆ ಸಲ್ಲಿಸಿದ ಬಳಿಕ ನಾಡ ಬಂದೂಕಿನಿಂದ ಗಾಳಿಯಲ್ಲಿ ಗುಂಡು ಹಾರಿಸುವ ಮೂಲಕ ಮಾಲೂರು ಶಾಸಕ ಕೆ.ವೈ ನಂಜೇಗೌಡ ವಿವಾದಕ್ಕೆ ಕಾರಣರಾಗಿದ್ದಾರೆ.

    ನಂಜೇಗೌಡ ಸ್ವಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲೂಕು ಕೊಮ್ಮನಹಳ್ಳಿಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ನಾಡ ಬಂದೂಕಿನಿಂದ ಗಾಳಿಯಲ್ಲಿ 4 ಸುತ್ತು ಗುಂಡು ಹಾರಿಸಿ ಗ್ರಾಮಸ್ಥರೊಂದಿಗೆ ಹಬ್ಬ ಆಚರಣೆ ಮಾಡಿದ್ದರು. ಮೊದಲು ಬನ್ನಿಮರ, ಶಸ್ತ್ರಾಸ್ತ್ರಗಳಿಗೆ ಪೂಜೆ ಸಲ್ಲಿಸಿದ ಶಾಸಕರ ಕುಟುಂಬ, ನಂತರ ಪೂಜೆಗೆ ಇಡಲಾಗಿದ್ದ ನಾಡ ಬಂದೂಕಿನಿಂದ ನಂಜೇಗೌಡರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಪ್ರತೀ ವರ್ಷದ ಸಂಪ್ರದಾಯದಂತೆ ಗ್ರಾಮದಲ್ಲಿ ದಸರಾ ಆಚರಣೆ ಮಾಡುವಂತೆ ನಂಜೇಗೌಡ, ಪೂಜೆ ಮಾಡಿ ಬಂದೂಕಿನಿಂದ ಗುಂಡು ಹಾರಿಸಿ ಇದೀಗ ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಇದನ್ನೂ ಓದಿ: ದುರ್ಗಾದೇವಿ ಮೆರವಣಿಗೆ ವೇಳೆ ಹರಿದ ಕಾರು 1 ಸಾವು 20 ಜನರಿಗೆ ಗಾಯ

    ಘಟನೆ ಸಂಬಂಧ ಮಾಸ್ತಿ ಪೊಲೀಸ್ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಲೈಸನ್ಸ್ ಪಡೆದವರು ಮಾತ್ರ ಉಪಯೋಗಿಸ ಬೇಕಿರುವ ಬಂದೂಕನ್ನು ಶಾಸಕರು ಉಪಯೋಗಿಸಿದ್ದು ಮತ್ತು ಸಾರ್ವಜನಿಕ ಸ್ಥಳದಲ್ಲಿ ಗುಂಡು ಹಾರಿಸಿದ್ದು ಅಪರಾಧ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಶಾಸಕ ನಂಜೇಗೌಡ ತಮ್ಮ ಈರೇಗೌಡ ಹೆಸರಿನಲ್ಲಿ ಬಂದೂಕಿನ ಪರವಾನಿಗೆ ಇದೆ ಎಂದು ವರದಿಯಾಗಿದೆ. ಇದನ್ನೂ ಓದಿ: 4 ವರ್ಷದ ಬಳಿಕ ಪಾಲಾರ್‌ ಜಲಾಶಯ ಭರ್ತಿ- ಬರದ ನಾಡು ಕೋಲಾರದಲ್ಲಿ ಭಾರೀ ಮಳೆ