Tag: Labor Organization

  • ಕೃಷಿ ಬಿಲ್, ವಿದ್ಯುತ್ ಬಿಲ್ ಹಿಂಪಡೆಯುವ ಒತ್ತಾಯ – ಕಾರ್ಮಿಕ ಸಂಘಟನೆ ಉಡುಪಿ ತಹಶಿಲ್ದಾರ್ ಕಚೇರಿ ಮುತ್ತಿಗೆ ಎಚ್ಚರಿಕೆ

    ಕೃಷಿ ಬಿಲ್, ವಿದ್ಯುತ್ ಬಿಲ್ ಹಿಂಪಡೆಯುವ ಒತ್ತಾಯ – ಕಾರ್ಮಿಕ ಸಂಘಟನೆ ಉಡುಪಿ ತಹಶಿಲ್ದಾರ್ ಕಚೇರಿ ಮುತ್ತಿಗೆ ಎಚ್ಚರಿಕೆ

    ಉಡುಪಿ: ದೇಶಾದ್ಯಂತ ಕಾರ್ಮಿಕ ಸಂಘಟನೆಗಳು 13 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದ್ದು, ಅದಕ್ಕೆ ಬೆಂಬಲ ಸೂಚಿಸಿ ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಎಐಕೆಎಸ್ ಜಂಟಿಯಾಗಿ ಇವತ್ತು ಪ್ರತಿಭಟನೆ ನಡೆಸಿತು.

    ಉಡುಪಿಯ ಬನ್ನಂಜೆಯಲ್ಲಿರುವ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಸಂಹಿತೆಗಳು ಹಾಗೂ ಜನವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿಯನ್ನು ರದ್ದುಪಡಿಸಬೇಕು. ರೈತರ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಲಾಯ್ತು.

    ರಾಜ್ಯ ಸರ್ಕಾರ ಶ್ರೀಮಂತರಿಗೆ ಅನುಕೂಲವಾಗುವಂತೆ ಭೂ ಸುಧಾರಣೆ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂಬ ಮುಖ್ಯ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮುಂದಿಟ್ಟಿವೆ. ಕಾರ್ಮಿಕರ ಪರವಾಗಿ ನಮ್ಮ ಸಂಘಟನೆ ಪ್ರತಿಭಟನೆ ಮಾಡುತ್ತಿದೆ. ಅಧಿಕಾರದಲ್ಲಿರುವ ನೀವು ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣಬೇಕು. ಕಾರ್ಮಿಕರ ಹಿತ ಕಾಪಾಡುವುದು ಸರ್ಕಾರದ ಪ್ರಮುಖ ಉದ್ದೇಶ ಆಗಬೇಕು ಎಂದು ಒತ್ತಾಯಿಸಲಾಯಿತು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಇದನ್ನೂ ಓದಿ: ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ – ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು

  • ಎರಡು ದಿನ ಭಾರತ್ ಬಂದ್ – ಏನಿರುತ್ತೆ? ಏನಿರಲ್ಲ?

    ಎರಡು ದಿನ ಭಾರತ್ ಬಂದ್ – ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಹಾಗೂ ವಿವಿಧ ಬೇಡಿಕೆ ಈಡೇರಿಕೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಎರಡು ದಿನಗಳ ಬಂದ್‍ಗೆ ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಬಸ್ ಹಾಗೂ ಆಟೋ ಚಾಲಕರು ಬೆಂಬಲ ನೀಡಿದ್ದು, ಎಂದಿನಂತೆ ಓಲಾ, ಊಬರ್ ಸಂಚಾರ ಆಗಲಿದೆ.

    ನಗರದ ಖಾಸಗಿ ಶಾಲೆಗಳ ಸಂಘ ಬಂದ್ ಕಾರಣ ಎಲ್ಲಾ ಶಾಲಾ ಕಾಲೇಜುಗಳಿಗೆ 2 ದಿನಗಳ ರಜೆ ಘೋಷಣೆ ಮಾಡಿದೆ. ಉಳಿದಂತೆ ಸರ್ಕಾರಿ ಶಾಲೆ ಕಾಲೇಜುಗಳ ರಜೆ ಬಗ್ಗೆ ತೀರ್ಮಾನ ಕೈಗೊಳ್ಳಬೇಕಿದೆ. ಉಳಿದಂತೆ ಬಹುತೇಕ ವಿಶ್ವವಿದ್ಯಾಲಯಗಳ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ.

    ಏನಿರುತ್ತೆ?
    ಚಿತ್ರ ಮಂದಿರ, ಮಾಲ್, ಮೆಟ್ರೋ, ಎಸ್‍ಬಿಐ ಬ್ಯಾಂಕ್, ಹೋಟೆಲ್, ಆಸ್ಪತ್ರೆ, ಆಂಬುಲೆನ್ಸ್, ಹಾಲು-ತರಕಾರಿ, ಸರ್ಕಾರಿ ಕಚೇರಿ.

    ಏನಿರಲ್ಲ?
    ಸರ್ಕಾರಿ ಬಸ್, ಆಟೋ ಸಂಚಾರ, ಖಾಸಗಿ ಶಾಲಾ-ಕಾಲೇಜು, ಬ್ಯಾಂಕ್ ಸೇವೆ, ಎಪಿಎಂಸಿ ಮಾರುಕಟ್ಟೆ

    ಬಂದ್‍ಗೆ ಯಾರ್ಯಾರ ಬೆಂಬಲ?
    ಎಐಟಿಯುಸಿ, ಎನ್‍ಐಡಿಯುಸಿ, ಸಿಐಟಿಯು ಸಂಘಟನೆ ಬೆಂಬಲ ನೀಡಿದ್ದು, ಇತ್ತ ಕೆಎಸ್‍ಆರ್‍ಟಿಸಿ, ಬಿಎಂಟಿಸಿ ನೌಕರರ ಸಂಘ, ಬಾಷ್ ಕಾರ್ಮಿಕ ಸಂಘಟನೆ, ಬ್ಯಾಂಕ್ ಫೆಡರೇಷನ್ ಆಫ್ ಇಂಡಿಯಾ, ಪೀಣ್ಯ ಕೈಗಾರಿಕಾ ಕಾರ್ಮಿಕ ಸಂಘಟನೆ, ಟಯೋಟಾ ಕಿರ್ಲೋಸ್ಕರ್ ಕಾರ್ಮಿಕರ ಸಂಘ, ಗಾರ್ಮೆಂಟ್ಸ್ ಸಂಘಟನೆ, ಅಂಗನವಾಡಿ ನೌಕರರು, ಕಟ್ಟಡ ಕಾರ್ಮಿಕ ಸಂಘಟನೆ, ಎಸ್‍ಎಫ್‍ಐ ವಿದ್ಯಾರ್ಥಿ ಸಂಘಟನೆ, 50ಕ್ಕೂ ಹೆಚ್ಚು ರೈತ ಸಂಘಟನೆಗಳು, ಎಪಿಎಂಸಿ ಸಂಘ ಬಂದ್ ಗೆ ಬೆಂಬಲ ನೀಡಿದೆ.

    ಉಳಿದಂತೆ ಎಲ್ಲಾ ಜಿಲ್ಲಾ ಕೇಂದ್ರಗಳದ ಬೆಳಗಾವಿ, ಹಾಸನ, ಮಂಗಳೂರು, ಹುಬ್ಬಳ್ಳಿ, ಕಲಬುರಗಿ, ಉಡುಪಿ, ದಕ್ಷಿಣ ಕನ್ನಡ, ಹುಬ್ಬಳ್ಳಿಯಲ್ಲಿ ಸರ್ಕಾರಿ ಸಾರಿಗೆ ವ್ಯವಸ್ಥೆ ಲಭ್ಯವಿರುವುದಿಲ್ಲ. ಉಳಿದಂತೆ ಆಟೋ, ಟ್ಯಾಕ್ಸಿ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ಅಲ್ಲದೇ ಸರ್ಕಾರಿ ಶಾಲೆಗೆ ರಜೆ ನೀಡುವ ನಿರ್ಧಾರವನ್ನು ಆಯಾ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಬಳ್ಳಾರಿ, ಚಾಮರಾಜನಗರ, ಮೈಸೂರಿನಲ್ಲಿ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದ್ದು, 2 ದಿನಗಳ ಬದಲಾಗಿ ಶನಿವಾರ ಹಾಗೂ ಭಾನುವಾರ ತರಗತಿಗಳು ನಡೆಯಲಿದೆ. ಧಾರವಾಡದಲ್ಲಿ 8 ರಂದು ಮಾತ್ರ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಮಾಹಿತಿ ನೀಡಿದ್ದಾರೆ.

    ದಕ್ಷಿಣ ಕನ್ನಡದಲ್ಲಿ ಖಾಸಗಿ ಬಸ್ ಮಾಲೀಕರು ಬಂದ್ ಗೆ ಬೆಂಬಲ ನೀಡಿಲ್ಲ. ಆದರೆ ಉಡುಪಿ ಜಿಲ್ಲೆಯಲ್ಲಿ ಬಂದ್ ಗೆ ಮಾಲೀಕರು ಬೆಂಬಲ ವ್ಯಕ್ತಪಡಿಸಿದ್ದಾರೆ.

    ತುಮಕೂರು ಜಿಲ್ಲೆಯಲ್ಲಿ ಶಾಲೆ ಕಾಲೇಜುಗಳು ಸರ್ಕಾರಿ ಕಚೇರಿಗಳು ಯಥಾಸ್ಥಿತಿ ಇರಲಿದೆ ಎಂದು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಮಾಹಿತಿ ನೀಡಿದ್ದಾರೆ. ಹಾಸನದಲ್ಲಿಯೂ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮಾಹಿತಿ ನೀಡಿದ್ದಾರೆ.

    ನಾಳೆ ಯಾವ ಪರೀಕ್ಷೆಗಳು ಇರಲ್ಲ?
    ಬೆಳಗಾವಿ ರಾಣಿ ಚೆನ್ನಮ್ಮ ವಿವಿ, ಧಾರವಾಡ ಕರ್ನಾಟಕ ವಿ.ವಿ, ಶಿವಮೊಗ್ಗ ಕುವೆಂಪು ವಿವಿ, ತುಮಕೂರು ವಿವಿ ಮಂಗಳವಾರ ಮತ್ತು ಬುಧವಾರ ನಡೆಯಬೇಕಿದ್ದ ಎಲ್ಲ ಪರೀಕ್ಷೆಗಳು ಮುಂದೂಡಿಕೆಯಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನಾಳೆಯ ಬಂದ್‍ಗೆ ನಮ್ಮ ಬೆಂಬಲವೂ ಇದೆ: ದಿನೇಶ್ ಗುಂಡೂರಾವ್

    ನಾಳೆಯ ಬಂದ್‍ಗೆ ನಮ್ಮ ಬೆಂಬಲವೂ ಇದೆ: ದಿನೇಶ್ ಗುಂಡೂರಾವ್

    ಬೆಂಗಳೂರು: ಕಾರ್ಮಿಕರ ಕಾನೂನು ಹಾಗೂ ವಿವಿಧ ಬೇಡಿಕೆ ಈಡೇರಿಕೆ ಸಂಬಂಧವಾಗಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಬಂದ್‍ಗೆ ನಮ್ಮ ಬೆಂಬಲವೂ ಇದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ. ಆದ್ದರಿಂದ ಕಾರ್ಮಿಕ ಸಂಘಟನೆಗಳು ಕೇಂದ್ರದ ಧೋರಣೆ ವಿರುದ್ಧ ಬಂದ್‍ಗೆ ಕರೆ ನೀಡಿದೆ. ಆದ್ದರಿಂದ ನಮ್ಮ ಬೆಂಬಲವೂ ಬಂದ್‍ಗೆ ಇದೆ ಎಂದು ತಿಳಿಸಿದರು.

    ಬೀದಿ ರಂಪಾಟವಲ್ಲ: ಇದೇ ವೇಳೆ ನಿಗಮ ಮಂಡಳಿ ಅಧ್ಯಕ್ಷರ ನೇಮಕ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, ಎರಡು ಪಕ್ಷದ ಮುಖಂಡರು ಈ ಬಗ್ಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಬೇಕಿದೆ. ಇದನ್ನು ಬಹಿರಂಗವಾಗಿ ಮಾಧ್ಯಮಗಳ ಮೂಲಕ ಚರ್ಚೆ ಮಾಡಿ ಬೀದಿ ರಂಪಾಟ ಮಾಡುವ ವಿಷಯವಲ್ಲ ಎಂದರು. ಇದನ್ನು ಓದಿ: ಮೈತ್ರಿ ಮಾಡೋದ್ರಲ್ಲಿ ಜೆಡಿಎಸ್ ಅವರೇ ಬೆಸ್ಟ್: ಸುಧಾಕರ್ ವ್ಯಂಗ್ಯ

    ನಮ್ಮ ಪಕ್ಷದ ತೀರ್ಮಾನವನ್ನು ಈಗಾಗಲೇ ನಾವು ಹೇಳಿದ್ದೇವೆ. ಮುಂದಿನ ಹಂತದಲ್ಲಿ ಈ ಬಗ್ಗೆ ಸಮನ್ವಯದಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು. ನಿಗಮ ಮಂಡಳಿ ಅಧ್ಯಕ್ಷರ ಆಯ್ಕೆ ವಿಚಾರ ಜನರಿಗೆ ಹಾಗೂ ಸಾರ್ವಜನಿಕರಿಗೆ ಸಂಬಂಧಿಸಿದ ವಿಷಯವಲ್ಲ. ಇದು ಎರಡು ಪಕ್ಷಗಳ ವಿಚಾರವಾಗಿದ್ದು, ಕುಳಿತು ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳುತ್ತೇವೆ. ಆದರೆ ಇದರಿಂದ ಮೈತ್ರಿ ಧರ್ಮಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣಗೊಳಿಸುತ್ತದೆ. ಕಾಂಗ್ರೆಸ್ ಪಕ್ಷ ಮೈತ್ರಿ ಧರ್ಮ ಪಾಲನೆ ಮಾಡದ ಪಕ್ಷವಲ್ಲ. ಸಿಎಂ ಕುಮಾರಸ್ವಾಮಿ ಅವರಿಗೆ ಸಂಪೂರ್ಣ ಬೆಂಬಲ ನೀಡಿದ್ದೇವೆ. ಮುಂದಿನ ಲೋಕಸಭಾ ಚುನಾವಣೆಗೂ ಕೂಡ ಮೈತ್ರಿ ಧರ್ಮದ ಮೂಲವೇ ಸಾಗಿ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಗಮನಿಸಿ, ಎರಡು ದಿನ ಸ್ತಬ್ಧವಾಗಲಿದೆ ಕರುನಾಡು..!

    ಗಮನಿಸಿ, ಎರಡು ದಿನ ಸ್ತಬ್ಧವಾಗಲಿದೆ ಕರುನಾಡು..!

    ಬೆಂಗಳೂರು: ರಸ್ತೆ ಸುರಕ್ಷತಾ ತಿದ್ದುಪಡಿ ಮಸೂದೆ ವಿರೋಧಿಸಿ ಸಾರಿಗೆ ಇಲಾಖೆ ಕಾರ್ಮಿಕ ಸಂಘಟನೆಗಳು ಮಂಗಳವಾರ ಹಾಗೂ ಬುಧವಾರ ಎರಡು ದಿನ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆಕೊಟ್ಟಿದೆ.

    ಎಐಟಿಯುಸಿ, ಸಿಐಟಿಯು, ಐಎನ್‍ಟಿಯುಸಿ, ಎಲ್‍ಪಿಎಫ್ ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಸಾರ್ವತ್ರಿಕ ಮುಷ್ಕರಕ್ಕೆ ಕರೆ ಕೊಟ್ಟಿದ್ದು, 12 ಬೇಡಿಕೆ ಮುಂದಿಟ್ಟು ಕಾರ್ಮಿಕ ಸಂಘಟನೆಗಳು ಜನವರಿ 8 ಮತ್ತು 9 ರಂದು ಬೀದಿಗಿಳಿಯಲಿವೆ. ಬಿಎಂಟಿಸಿ ಹಾಗೂ ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್‍ ಗಳು ಸ್ತಬ್ಧವಾಗಲಿದೆ ಅಂತ ಸಿಐಟಿಯು ಉಪಾಧ್ಯಕ್ಷ ಅನಂತ್ ಸುಬ್ಬರಾವ್ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

    ಮಂಗಳವಾರ ಬೆಳಗ್ಗೆ ಆರು ಗಂಟೆಯಿಂದ ಬುಧವಾರ ಸಂಜೆ ಐದು ಗಂಟೆಯವರೆಗೂ ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ನಡೆಯಲಿದ್ದು, ಈಗಾಗಲೇ ಮೋದಿ ಸರ್ಕಾರದ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಗೆ ರಾಜ್ಯದ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾರವೂ ಬೆಂಬಲ ಕೊಟ್ಟಿದೆ ಎಂದು ತಿಳಿದುಬಂದಿದೆ.

    ಬಂದ್ ಯಾಕೆ?:
    ಮೋಟಾರು ವಾಹನ ತಿದ್ದುಪಡಿ ಮಸೂದೆ -2017ರನ್ನು ಹಿಂಪಡೆಯಲು, ಸಾರಿಗೆ ಉದ್ದಿಮೆಯನ್ನ ರಕ್ಷಿಸಲು ಮತ್ತು ಅಸಂಘಟಿತ ಸಾರಿಗೆ ಕಾರ್ಮಿಕರಿಗೆ ಸಾಮಾಜಿಕ ಸುರಕ್ಷಾ ಕಾಯ್ದೆಯನ್ನು ಜಾರಿಗೊಳಿಸಲು ಬಂದ್‍ಗೆ ಕರೆ ಮಾಡಲಾಗಿದೆ.

     ಮುಷ್ಕರ ದಿನ ಏನಿರಲ್ಲ:
    ಮಂಗಳವಾರ ಮತ್ತು ಬುಧವಾರ ಬಿಎಂಟಿಸಿ, ಕೆಎಸ್‍ಆರ್ ಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮದ ಬಸ್ ಇರಲ್ಲ. ಆಟೋ ಸಂಘಟನೆಯಿಂದ ಬೆಂಬಲ ಇರುವುದರಿಂದ ಆಟೋ ಕೂಡ ಸಿಗಲ್ಲ. ಇತ್ತ ಓಲಾ ಮತ್ತು ಊಬರ್ ಕ್ಯಾಬ್‍ಗಳು ಸಿಗುವುದಿಲ್ಲ. ಮುಷ್ಕರದಲ್ಲಿ ಬ್ಯಾಂಕ್ ನೌಕರರು ಕೂಡ ಪಾಲ್ಗೊಳ್ಳಲಿದ್ದಾರೆ. ಆದ್ದರಿಂದ ಬ್ಯಾಂಕ್ ಸೇವೆಯಲ್ಲೂ ವ್ಯತ್ಯಯವಾಗುವ ಸಾಧ್ಯತೆಗಳು ಇವೆ. ಎಪಿಎಂಸಿ ಲಾರಿ ಸಿಬ್ಬಂದಿ ಪಾಲ್ಗೊಳ್ಳುವುದರಿಂದ ಎಪಿಎಂಸಿ ಸ್ತಬ್ಧಗೊಳ್ಳುವ ಸಾಧ್ಯತೆ ಇದೆ.

    ಏನಿರುತ್ತೆ?:
    ಆಸ್ಪತ್ರೆಗಳು, ಮೆಡಿಕಲ್ ಶಾಪ್, ಅಂಗಡಿ ಮುಂಗಟ್ಟುಗಳು ಇರುತ್ತದೆ. ಜೊತೆಗೆ ಅಂಬುಲೆನ್ಸ್ ಸೇವೆ, ಮೆಟ್ರೋ ಮತ್ತು ರೈಲು ಸೇವೆ ಇರಲಿದೆ.

    50- 50 ಬೆಂಬಲ:
    ನಿರ್ಧಾರ ಪ್ರಕಟಿಸದ ಹೋಟೆಲ್ ಮಾಲೀಕರು ನೈತಿಕ ಬೆಂಬಲದ ಘೋಷಣೆ ಮಾಡಿದ್ದು, ಚಿತ್ರೋದ್ಯಮದ ನೈತಿಕ ಬೆಂಬಲ, ಚಿತ್ರ ಪ್ರದರ್ಶನ ಬಂದ್ ಮಾಡುವ ಬಗ್ಗೆ ಯಾವುದೇ ಫೋಷಣೆ ಮಾಡಿಲ್ಲ. ಇನ್ನೂ ಶಾಲಾ ಕಾಲೇಜುಗಳ ವಾಹನಗಳು ಸ್ತಬ್ಧವಾಗುವುದರಿಂದ ಆಯಾಯ ಜಿಲ್ಲಾಧಿಕಾರಿಗಳು ಶಾಲಾ -ಕಾಲೇಜು ಬಂದ್ ನಿರ್ಣಯ ಕೈಗೊಳ್ಳಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv