ನೆಲಮಂಗಲ: ಬಟ್ಟೆ ಒಣಗಿಸುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ನೆಲಮಂಗಲ ತಾಲೂಕಿನ ಬಿಲ್ಲಿನಕೋಟೆಯಲ್ಲಿ ನಡೆದಿದೆ.
ಉತ್ತರಪ್ರದೇಶದ ಮೂಲದ ಅಜಯ್ ಚೌಹಾಣ್ (35) ಮೃತ ಕಾರ್ಮಿಕ. ಸಹದ್ಯೋಗಿ ಸುನಿಲ್ ಚೌಹಾಣ್ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಬಿಲ್ಲಿನಕೋಟೆಯ ವಿ.ಆರ್.ಎಲ್ ಗೋಧಾಮಿನಲ್ಲಿ ಕೆಲಸದಲ್ಲಿದ್ದ ಕಾರ್ಮಿಕರು, ಭಾನುವಾರ ರಜೆಯಾದ್ದರಿಂದ ಸ್ವಚ್ಛತೆಯಲ್ಲಿ ತೊಡಗಿದ್ದ ವೇಳೆಯಲ್ಲಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಲವ್ ಜಿಹಾದ್ ಬದಲಿಗೆ `ಲವ್ ಕೇಸರಿ’ ಟ್ರೆಂಡ್ ಸೃಷ್ಟಿಸಲು ಶ್ರೀರಾಮಸೇನೆ ಕರೆ
ಗುತ್ತಿಗೆದಾರ ಗುಲಾಬ್, ಈ ಕಾರ್ಮಿಕರಿಗೆ ಆಶ್ರಯ ನೀಡಿದ್ದ ಎನ್ನಲಾಗಿದ್ದು, ಮೂಲಭೂತ ಸೌಕರ್ಯ ಸೂಕ್ತವಾಗಿ ಒದಗಿಸದೇ ಇದ್ದ ಹಿನ್ನಲೆಯಲ್ಲಿ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ. ಡಾಬಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತನ ಶವವನ್ನು ಡಾಬಸ್ ಪೇಟೆ ಶವಾಗಾರದಲ್ಲಿ ಇರಿಸಿದ್ದು, ಮರಣೋತ್ತರ ಪರೀಕ್ಷೆ ನಂತರ ಮೃತ ದೇಹ ಹಸ್ತಾಂತರಿಸಲಿದ್ದಾರೆ. ಇದನ್ನೂ ಓದಿ: ಲವ್ ಕೇಸರಿಗೆ ಕರೆಕೊಟ್ಟು ಪ್ರಚೋದನಕಾರಿ ಭಾಷಣ ಪ್ರಕರಣ – ಇಬ್ಬರು ಆರೋಪಿಗಳ ಬಂಧನ
ಮಡಿಕೇರಿ: ಮನೆಯ ಸುತ್ತಲೂ ಕಂದಕ ತೋಡಿ ಕಾರ್ಮಿಕನಿಗೆ ಹಿಂಸೆ ನೀಡುತ್ತಿರುವ ತೋಟದ ಮಾಲೀಕರ ಕ್ರಮದಿಂದ ಬೇಸತ್ತು ಕಾರ್ಮಿಕನ ಕುಟುಂಬದ ಸದಸ್ಯರು ದಯಾಮರಣ ನೀಡಬೇಕೆಂದು ರಾಷ್ಟ್ರಪತಿಗೆ ಪತ್ರ ಬರೆದಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ.
ಹೌದು, ಕೊಡಗು ಜಿಲ್ಲೆಯ ವಿರಾಜಪೇಟೆ ತಾಲ್ಲೂಕಿನ ಪಾಲಿಬೆಟ್ಟ ಗ್ರಾಮದಲ್ಲಿ ದುಬಾರಿ ಗ್ರೂಪ್‌ಗೆ ಸೇರಿದ ಮಸ್ಕಲ್ ಕಾಫಿ ತೋಟದಲ್ಲಿ ವಾಸವಿರುವ ಕಾರ್ಮಿಕ ಸುಬ್ರಮಣಿ ಎಸ್ ಕಳೆದ 25 ವರ್ಷದಿಂದ ಚಾಲಕನಾಗಿ ಸೇವೆ ಸಲ್ಲಿಸುತ್ತಿದ್ದರು. 2016ರಲ್ಲಿ ಯಾವುದೇ ನೋಟೀಸ್ ನೀಡದೇ ತೋಟದ ಮಾಲೀಕರು ಸುಬ್ರಮಣಿಯನ್ನು ಕೆಲಸದಿಂದ ತೆಗೆದುಹಾಕಿದ್ದರು. ಈ ಬಗ್ಗೆ ಜಿಲ್ಲಾ ಕಾರ್ಮಿಕ ನ್ಯಾಯಾಲಯದಲ್ಲಿ ದೂರು ನೀಡಿದ್ದರು.
ನ್ಯಾಯಾಲಯದ ತೀರ್ಪು ಬರುವವರೆಗೂ ಕಾಫಿ ತೋಟದ ಮನೆಯಲ್ಲೇ ವಾಸವಿದ್ದ ಸುಬ್ರಮಣಿ ಕುಟುಂಬಕ್ಕೆ ಇದೀಗ ಮಾಲೀಕರು ತೊಂದರೆ ನೀಡುತ್ತಿದ್ದಾರೆ. ತೋಟದ ಮನೆಯಿಂದ ಕಾರ್ಮಿಕ ಹಾಗೂ ಅವರ ಕುಟುಂಬ ಹೊರಬರದಂತೆ ಮನೆಯ ಸುತ್ತಲೂ ಕಂದಕ ತೋಡಿದ್ದಾರೆ. ಈ ಬಗ್ಗೆ ಸುಬ್ರಮಣಿ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮನನೊಂದ ಕಾರ್ಮಿಕ ರಾಷ್ಟ್ರಪತಿಗೆ ದಯಾಮರಣ ಕೋರಿ ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸೇನಾ ಹೆಲಿಕಾಪ್ಟರ್ ಪತನ – ಪೈಲಟ್‌ಗಳ ಸ್ಥಿತಿ ಚಿಂತಾಜನಕ
ಕಾರ್ಮಿಕ ಸುಬ್ರಮಣಿಗೆ ತೋಟದ ವತಿಯಿಂದ ನೀಡಿದ್ದ ಮನೆಯಲ್ಲಿ ಪತ್ನಿ, ಮಗಳೊಂದಿಗೆ ವಾಸವಾಗಿದ್ದಾರೆ. ಮೊದಲ ಮಹಡಿಯಲ್ಲಿ ಮನೆ ಇದ್ದು, ಕೆಳಭಾಗದಲ್ಲಿ ತೋಟದ ಸಾಮಗ್ರಿಗಳ ಕೊಠಡಿ ಇದೆ. ತೋಟದ ಮನೆಯನ್ನು ಬಿಟ್ಟು ತೆರಳಬೇಕೆಂದು ತೋಟದ ಮಾಲೀಕರು ಹಾಗೂ ವ್ಯವಸ್ಥಾಪಕರು ಆಗಿಂದಾಗ್ಗೆ ಕಿರುಕುಳ ನೀಡುತ್ತಿದ್ದರು ಎಂದು ಸುಬ್ರಮಣಿ ಆರೋಪಿಸಿದ್ದಾರೆ.
ಸುಬ್ರಮಣಿ ಹಾಗೂ ಅವರ ಕುಟುಂಬ ಮನೆ ಖಾಲಿ ಮಾಡದ ಹಿನ್ನೆಲೆಯಲ್ಲಿ ಮಾಲೀಕರು 2 ಹಿಟಾಚಿ ಹಾಗೂ 2 ಜೆಸಿಬಿ ಬಳಸಿ ಮನೆಯ ಸುತ್ತಲೂ ಕಂದಕ ನಿರ್ಮಾಣ ಮಾಡಿದ್ದಾರೆ. ಇದೀಗ ಸುಬ್ರಮಣಿ ಮನೆಗೆ ತೆರಳುವ ರಸ್ತೆಯಲ್ಲಿ ಗುಂಡಿ ತೋಡಲಾಗಿದ್ದು, ಮನೆಯಿಂದ ಹೊರಬರಲು ಹಾಗೂ ಒಳಗೆ ಪ್ರವೇಶಿಸಲು ಸಾಧ್ಯವಾಗುತ್ತಿಲ್ಲ. ಇದನ್ನೂ ಓದಿ: ಹೃದಯ ಸಂಬಂಧಿ ಸಮಸ್ಯೆಯಿಂದ ತೆಲಂಗಾಣ ಸಿಎಂ ಆಸ್ಪತ್ರೆಗೆ ದಾಖಲು
ಈ ಬಗ್ಗೆ ಜಿಲ್ಲಾಧಿಕಾರಿ, ಮುಖ್ಯಮಂತ್ರಿ ಸೇರಿದಂತೆ ವಿವಿಧ ಅಧಿಕಾರಿಗಳಿಗೆ ಸುಬ್ರಮಣಿ ಮನವಿ ಸಲ್ಲಿಸಿದ್ದರು. ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ನೀಡಿದ ದೂರಿನನ್ವಯ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.
ಮನೆಯ ಸುಮಾರು 15 ಅಡಿ ಕೆಳಕ್ಕೆ ಕಂದಕ ನಿರ್ಮಾಣ ಮಾಡಿರುವ ಕಾರಣ ಮನೆಗೆ ತೆರಳಲು ಹಾಗೂ ಮನೆಯಿಂದ ಹೊರಹೋಗಲು ಸುಬ್ರಮಣಿ ಕುಟುಂಬಕ್ಕೆ ಸಾಧ್ಯವಾಗದೇ ಗೃಹಬಂಧನದಲ್ಲಿ ಇದ್ದಾರೆ. ಇದೀಗ ಏಣಿಯ ಸಹಾಯದಿಂದ ಸುಬ್ರಮಣಿ ಹಾಗೂ ಮಗಳು ಅಗತ್ಯ ಸಾಮಗ್ರಿಗಳ ಖರೀದಿಗೆ ತೆರಳುತ್ತಿದ್ದಾರೆ. ಆದರೆ ಗ್ಯಾಸ್ ಸೇರಿದಂತೆ ಭಾರವಾದ ವಸ್ತುಗಳನ್ನು ಮನೆಗೆ ಸಾಗಿಸುವುದು ಅಸಾಧ್ಯವಾಗಿದೆ. ಇದನ್ನೂ ಓದಿ: ಕೋವಿಡ್ ರೋಗಿಗಳಿಂದ ಪಡೆದ ಹೆಚ್ಚುವರಿ ಶುಲ್ಕ ಮರು ಪಾವತಿಗೆ ಜಿಲ್ಲಾಧಿಕಾರಿ ಆದೇಶ
ಇನ್ನೂ ತನಗೆ ಸಿಗಬೇಕಾದ ಬೋನಸ್, ವೇತನ ಸೇರಿದಂತೆ ಅಂದಾಜು 19 ಲಕ್ಷ ರೂ. ಹಣ ತೋಟದ ಮಾಲೀಕರಿಂದ ಸಿಗಬೇಕು. ನ್ಯಾಯಾಲಯದಲ್ಲಿ ಈ ಬಗ್ಗೆ ದಾವೆ ಕೂಡ ಹೂಡಲಾಗಿದೆ. ಹೀಗಿರುವಾಗ ಏಕಾಏಕಿ ಮನೆಯ ಸುತ್ತಲೂ ಕಂದಕ ನಿರ್ಮಿಸಿ ನಿತ್ಯ ಕಿರುಕುಳ ನೀಡುತ್ತಿದ್ದಾರೆ. ಅನಾರೋಗ್ಯದಲ್ಲಿರುವ ಪತ್ನಿ, ಮಗಳ ಮುಖ ನೋಡಿ ಆತ್ಮಹತ್ಯೆಗೂ ಮನಸ್ಸು ಬರುತ್ತಿಲ್ಲ. ಹೀಗಾಗಿ ದಯಾಮರಣ ನೀಡಬೇಕೆಂದು ರಾಷ್ಟ್ರಪತಿಗಳಿಗೆ ಈ ಕುಟುಂಬ ಮನವಿ ಮಾಡಿದೆ.
ವಿಜಯಪುರ: ಕಾರ್ಮಿಕರೊಬ್ಬರು ಆಕಸ್ಮಿಕ ವಿದ್ಯುತ್ ತಗುಲಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ಶಿವಾಜಿ ಗಲ್ಲಿಯ ನಿವಾಸಿ ಚಂದ್ರಕಾಂತ್ ಭೀಮಪ್ಪಾ ಗೋಡೆಕಟ್ಟಿ (45) ಮೃತ ಕಾರ್ಮಿಕ. ವ್ಯಕ್ತಿಯು ಪಟ್ಟಣದ ನಂದಿ ತರಕಾರಿ ಮಾರುಕಟ್ಟೆಯ ಪಕ್ಕದ ವಾಣಿಜ್ಯ ಸಂಕೀರ್ಣದಲ್ಲಿ ಕಟ್ಟಡ ಕಾಮಗಾರಿ ಮಾಡುತ್ತಿದ್ದರು. ಈ ವೇಳೆ ಆಯ ತಪ್ಪಿ ಸರ್ವಿಸ್ ವಯರ್ ಮೇಲೆ ಬಿದ್ದ ಪರಿಣಾಮ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bulldozer is Back – ಟ್ರೆಂಡ್ ಆಯ್ತು ಬುಲ್ಡೋಜರ್, ಬುಲ್ಡೋಜರ್ ಏರಿ ಬಿಜೆಪಿಯಿಂದ ಸಂಭ್ರಮಾಚರಣೆ
ಜನರು ಮೃತ ವ್ಯಕ್ತಿಯನ್ನು ನೋಡಲು ಮುಗಿಬಿದ್ದಿದ್ದಾರೆ. ಸಿಪಿಐ ಬಸವರಾಜ ಪಾಟೀಲ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೀದರ್: ಸ್ನಾನ ಮಾಡಲೆಂದು ಚುಳಕಿ ನಾಲಾ ಜಲಾಶಯಕ್ಕೆ ಇಳಿದ ಕಾರ್ಮಿಕ ನೀರುಪಾಲಾದ ಘಟನೆ ಬೀದರ್ ಜಿಲ್ಲೆಯ ಹುಲಸೂರು ತಾಲೂಕಿನ ಚುಳುಕಿನಾಲಾ ಜಲಾಶಯದಲ್ಲಿ ಇಂದು ನಡೆದಿದೆ.
38 ವರ್ಷದ ವಿಲಾಶ್ ಜಾಧವ್ ನೀರು ಪಾಲಾದ ಕಾರ್ಮಿಕ. ವಿಲಾಶ್ ಬಸವಕಲ್ಯಾಣ ತಾಲೂಕಿನ ಘಾಟಭೊರಾಳ ಗ್ರಾಮದ ಮೂಲ ನಿವಾಸಿಯಾಗಿದ್ದು, ಗುತ್ತಿಗೆ ಆಧಾರದ ಮೇಲೆ ಚುಳಕಿ ನಾಲಾ ಜಲಾಶಯದಲ್ಲಿ ಕೆಲಸ ಮಾಡುತ್ತಿದ್ದರು. ವಿಲಾಶ್ ಇಂದು ಬೆಳಗ್ಗೆ ನೀರು ಪಾಲಾಗಿದ್ದು, ಅಗ್ನಿಶಾಮಕ ದಳದವರು ಶೋಧ ಕಾರ್ಯ ಮುಂದುವರೆಸಿದ್ದಾರೆ. ಇದನ್ನೂ ಓದಿ: ಹೆಬ್ಬೆಟ್‍ಗಿರಾಕಿ ಮೋದಿ ತನ್ನ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ: ಕಾಂಗ್ರೆಸ್
ಸ್ಥಳಕ್ಕೆ ಬಸವಕಲ್ಯಾಣ ಶಾಸಕ ಶರಣು ಸಲಗಾರ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳುತ್ತಿದ್ದಾರೆ. ಜೊತೆಗೆ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‍ಐ ಕಿರಣ್ ಹಾಗೂ ಹುಲಸೂರು ತಾಲೂಕಿನ ತಹಸಿಲ್ದಾರ್ ಶಿವಾನಂದ ಮೆತ್ರೆ ಮತ್ತು ಬಸವಕಲ್ಯಾಣದ ತಹಸಿಲ್ದಾರ್ ಸಾವಿತ್ರಿ ಸಲಗರ್ ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ.
ಮಂಗಳೂರು: ರಾಜ್ಯ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ ನೀಡುವ ಆಹಾರದ ಕಿಟ್‍ನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಡೊಂಗರಕೇರಿ ಭುವನೇಂದ್ರ ಸಭಾಂಗಣದಲ್ಲಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ರಾಜ್ಯ ಕಾರ್ಮಿಕ ಇಲಾಖೆಯಿಂದ ನೀಡುವ ಕಾರ್ಮಿಕ ಕಾರ್ಡಿನಿಂದ ಅನೇಕ ಉಪಯೋಗಗಳಿವೆ. ಇದನ್ನು ಅರಿತು ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರೂ ಕೂಡ ಕಾರ್ಡಿಗೆ ಅರ್ಜಿ ಸಲ್ಲಿಸಬೇಕೆಂದು ಹೇಳಿದರು. ಇದನ್ನೂ ಓದಿ: ಬೇವು ತಲೆಹೊಟ್ಟಿಗೆ ಮದ್ದು
ಈ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ, ರೂಪ ಶ್ರೀ ಪೂಜಾರಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ರೂಪಾ ಡಿ. ಬಂಗೇರ, ಸುರೇಂದ್ರ ಜಪ್ಪಿನಮೊಗರು, ಕಾರ್ಮಿಕ ಅಧಿಕಾರಿ ವಿಲ್ಮಾ, ಮೇರಿ ಡಯಾಸ್, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಜ್ಯೂನಿಯರ್ ಚಿರುವಿನ ಹೊಸ ಫೋಟೋಗಳು ವೈರಲ್
ಯಾದಗಿರಿ: ಜಿಲ್ಲೆ ಸಂಪೂರ್ಣ ಲಾಕ್‍ಡೌನ್ ಹಿನ್ನೆಲೆ, ಜಿಲ್ಲಾಡಳಿತ ಮತ್ತು ಕಾರ್ಮಿಕ ಇಲಾಖೆಯಿಂದ ವಿಶೇಷ ಲಸಿಕೆ ಅಭಿಯಾನ ಆರಂಭಿಸಲಾಗಿದೆ. ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕರಿಗೆ ಮನೆಯ ಬಳಿಗೆ ತೆರಳಿ ಲಸಿಕೆ ವಿತರಣೆ ಮಾಡಲಾಗುತ್ತಿದೆ.
ಹೊಲಿಗೆ ಯಂತ್ರ ನಡೆಸುವವರು, ಮಡಿವಾಳ, ಸವಿತಾ ಸಮಾಜ ಮತ್ತು ಕಟ್ಟಡ ಕಾರ್ಮಿಕರಿಗೆ ಈ ಸೌಲಭ್ಯ ನೀಡಿದ್ದು, ಕಾರ್ಮಿಕರು ಇದ್ದಲ್ಲಿಗೇ ಹೇಳಿದ ಸಮಯಕ್ಕೆ ವ್ಯಾಕ್ಸಿನೇಷನ್ ಮಾಡಲಾಗುತ್ತಿದೆ. ಲಸಿಕೆ ಪಡೆಯಲು ಕಾರ್ಮಿಕರ ವರ್ಗ ಹಿಂದೇಟು ಹಾಕುತ್ತಿರುವ ಹಿನ್ನೆಲೆ ಅವರ ಮನವೊಲಿಸಿ ಅವರು ಇದ್ದ ಸ್ಥಳಕ್ಕೆ ತೆರಳಿ ಲಸಿಕೆ ಹಾಕಿಸಲು ಕಾರ್ಮಿಕ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
ಕಾರ್ಮಿಕ ಇಲಾಖೆ ಉಪ ನಿರ್ದೇಶಕಿ ಕುಮಾರಿ ಶ್ವೇತ ಮತ್ತು ಇನ್‍ಸ್ಪೆಕ್ಟರ್ ಗಂಗಾಧರ್ ಪ್ರತಿ ತಾಲೂಕು ಮತ್ತು ಗ್ರಾಮಗಳಿಗೆ ತೆರಳಿ ಕಾರ್ಮಿಕರ ಮನವೊಲಿಸಿ ಲಸಿಕೆ ಹಾಕಿಸುತ್ತಿದ್ದಾರೆ.
ಕಾರವಾರ: ಲಾಕ್‍ಡೌನ್ ಇರುವುದರಿಂದ ಬಹಳಷ್ಟು ಜನರು ಮನೆಯಲ್ಲೇ ಇದ್ದು ಸಮ್ಮನೆ ಕಾಲ ಹರಣ ಮಾಡುತ್ತಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಮಂಜುಗುಣಿಯ ಕೂಲಿ ಕಾರ್ಮಿಕ ಏಕಾಂಗಿಯಾಗಿ ಬಾವಿ ತೋಡಿ ಊರಿನ ಕುಡಿಯುವ ನೀರಿನ ದಾಹ ನೀಗಿಸಿದ್ದಾರೆ.
ಗುದ್ದಲಿ ಹಿಡಿದು ಕಲ್ಲಿನ ನೆಲ ಅಗೆಯುತ್ತಿರುವ ವ್ಯಕ್ತಿ ಹೆಸರು ಮಹಾದೇವ ಮಂಕಾಳುನಾಯ್ಕ್. ಅಂಕೋಲದ ಮಂಜಗುಣಿ ಊರಿನ ನಿವಾಸಿ. ಪ್ರತಿ ವರ್ಷ ಬೇಸಿಗೆ ಬಂತೆಂದರೆ ಈ ಊರಿನಲ್ಲಿ ಕುಡಿಯುವ ನೀರಿನ ಸಮಸ್ಯೆ. ಗ್ರಾಮಪಂಚಾಯ್ತಿಯಿಂದ ಇರುವ ಒಂದು ಬಾವಿಯಲ್ಲಿ ಅರವತ್ತಕ್ಕೂ ಹೆಚ್ಚು ಮನೆಯಿರುವ ಜನರು ನೀರು ತರಬೇಕು. ಜೂನ್ ತಿಂಗಳು ಬರುವುದರೊಳಗೆ ಇದ್ದ ಒಂದು ಬಾವಿ ಅಂತರ್ಜಲ ಇಳಿದು ಕುಡಿಯುವುದಕ್ಕೆ ಗ್ರಾಮಪಂಚಾಯ್ತಿಯಿಂದ ವಾರಕ್ಕೆ ಒಂದು ಬಾರಿ ಬರುವ ನೀರೇ ಗತಿ.
ಗ್ರಾಮದಲ್ಲಿ ಕೆಲವರ ಮನೆಯಲ್ಲಿ ಬಾವಿ ಇದ್ದರೂ ಹೆಚ್ಚು ನೀರು ಇರದ ಕಾರಣ ಹಾಗೂ ಪಕ್ಕದಲ್ಲೇ ಸಮುದ್ರ ಇರುವುದರಿಂದ ಬಿರು ಬೇಸಿಗೆಯಲ್ಲಿ ತಳ ಹಿಡಿದ ನೀರು ಉಪ್ಪು ನೀರಾಗಿ ಪರಿವರ್ತಿತವಾಗುತ್ತದೆ. ಹೀಗಾಗಿ ಊರ ಮಂದಿಯಲ್ಲಾ ಖಾಲಿ ಕೊಡ ಹಿಡಿದು ಟ್ಯಾಂಕರ್ ಬರುವ ದಾರಿಯನ್ನು ಕಾಯುವುದೇ ದಿನದ ಕೆಲಸವಾಗುತಿತ್ತು. ಮಹಾದೇವ ಮಂಕಾಳುನಾಯ್ಕ್ ರವರು ಪ್ರತಿ ದಿನ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಇದೇ ಜೀವನದ ಆಧಾರ ಕೂಡ. ಹೀಗಿರುವಾಗ ಲಕ್ಷಾಂತರ ರೂಪಾಯಿ ಸುರಿದು ಬಾವಿ ತೋಡಿಸಲು ಸಾಧ್ಯವೇ? ಹೀಗೆ ಅಂದುಕೊಂಡಿದ್ದ ಇವರಿಗೆ ಕಳೆದ ವರ್ಷದ ಲಾಕ್‍ಡೌನ್ ಕೂಲಿ ಕೆಲಸವಿಲ್ಲದೇ ಮನೆಯಲ್ಲೇ ಕೂರುವಂತೆ ಮಾಡಿತು.
ಹೀಗೆ ಮನೆಯಲ್ಲಿದ್ದ ಇವರು ಪತ್ನಿ ಹಾಗೂ ಊರಿನ ಮಹಿಳೆಯರು ನೀರು ತರಲು ಪಡುವ ಕಷ್ಟವನ್ನು ನೋಡಿ ತಾವೇ ಒಂದು ಬಾವಿ ತೋಡಿದರೆ ಹೇಗೆ ಎಂದು ಯೋಚಿಸಿ ಕಾರ್ಯಪ್ರವೃತ್ತರಾದರು. ಅದಕ್ಕಾಗಿ ತಮ್ಮ ಮನೆಯ ಹಿತ್ತಲನ್ನು ಆಯ್ಕೆ ಮಾಡಿಕೊಂಡರು. ಆದರೆ ಬಾವಿ ತೋಡುವುದು ಸುಲಭದ ಕೆಲಸವಾಗಿರಲಿಲ್ಲ. ಹಿತ್ತಲ ಜಾಗ ಕಲ್ಲಿನ ಅರೆಯಿಂದ ಆವೃತವಾಗಿತ್ತು. ಆದರೂ ಛಲ ಬಿಡದ ಇವರು ಗುದ್ದಲಿ, ಪಿಕಾಸಿ ಹಿಡಿದು ಕಲ್ಲಿನ ಅರೆಯನ್ನು ಅಗೆಯತೊಡಗಿದರು. ಸರಿ ಸುಮಾರು ಎಂಟು ತಿಂಗಳ ಪ್ರಯತ್ನ 32 ಅಡಿಗಳ ಆಳದ ಬಾವಿ ನಿರ್ಮಾಣವಾಯಿತು. ಆದರೆ ಅಲ್ಪ ಜಲಬಂದರೂ ಬಳಸಲು ಹೆಚ್ಚು ಅನುಕೂಲವಾಗಿರಲಿಲ್ಲ. ಇನ್ನು ಅಷ್ಟರಲ್ಲಾಗಲೇ ಲಾಕ್‍ಡೌನ್ ಸಹ ಸಡಿಲಿಕೆ ಆದ್ದರಿಂದ ಹೊಟ್ಟೆ ಪಾಡಿಗಾಗಿ ಕೂಲಿಗೆ ಹೊರಟರು.
ಕೊರೊನಾ ಎರಡನೇ ಅಲೆ ಬಂದಿದ್ದರಿಂದ ಮತ್ತೆ ಲಾಕ್‍ಡೌನ್ ಆಗಿದ್ದರಿಂದ ಮತ್ತೆ ಬಾವಿ ತೋಡಲು ಪ್ರಾರಂಭಿಸಿದರು. ಈ ಬಾರಿ ಅವರ ಅದೃಷ್ಟ ಕುಲಾಯಿಸಿತ್ತು. ಕಡು ಕಲ್ಲನ್ನ ಕಷ್ಟಪಟ್ಟು ಕೊರೆದ ಇವರಿಗೆ ನಾಲ್ಕು ಅಡಿ ಹೋಗುತಿದ್ದಂತೆ ಬರಪೋರ ಅಂತರಗಂಗೆ ಚಿಮ್ಮಿ ಬರತೊಡಗಿದಳು. ಇವರ ಭಗೀರಥ ಪ್ರಯತ್ನಕ್ಕೆ ನಾಲ್ಕು ಅಡಿ ಕಲ್ಲನ್ನು ಕೊರೆದ ಫಲವಾಗಿ ಹತ್ತು ಅಡಿ ಜಲ ಮೇಲೆದ್ದು ಬಂದಿತ್ತು. ಇವರ ಶ್ರಮಕ್ಕೆ ಕುಟುಂಬ ಸಹ ಖುಷಿ ಪಟ್ಟು ತಮ್ಮ ನೀರಿನ ಸಮಸ್ಯೆ ನೀಗಿತು ಎಂದು ನಿಟ್ಟುಸಿರು ಬಿಡುವಂತಾಯಿತು. ಜೊತೆಗೆ ಊರಿನ ಜನರ ಖಾಲಿ ಕೊಡ ಸಹ ಬಾವಿಯ ಮುಂದೆ ಸರತಿ ಸಾಲು ನಿಲ್ಲುತ್ತಿದ್ದು ಜನರಿಗೆ ಮಹಾದೇವ ಮಂಕಾಳುನಾಯ್ಕ ಜಲಾಮೃತವನ್ನು ತುಂಬಿ ಕೊಡುತಿದ್ದಾರೆ. ಇದನ್ನೂ ಓದಿ: ಲಾಕ್‍ಡೌನ್ ಸಮಯ ಸದುಪಯೋಗ-25 ಅಡಿ ಬಾವಿ ತೋಡಿದ ಪವರ್ ಲಿಫ್ಟರ್ ಅಕ್ಷತಾ ಪೂಜಾರಿ
ಬೆಂಗಳೂರು: ನಾಯಿ ಕಾರ್ಮಿಕನ ಮೇಲೆ ದಾಳಿ ನಡೆಸಿದ್ದು, ತೀವ್ರ ರಕ್ತಸ್ರಾವದಿಂದ ಕಾರ್ಮಿಕ ಸಾವನ್ನಪ್ಪಿದ್ದಾನೆ. ನಾಯಿಯ ಒಡತಿ ವಿರುದ್ಧ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ನಗರದ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ನಾಯಿ ದಾಳಿಗೆ ಒಳಗಾಗಿ 36 ವರ್ಷದ ಕಾರ್ಮಿಕ ನರಸಿಂಹ ಸಾವನ್ನಪ್ಪಿದ್ದಾರೆ. ಹೀಗಾಗಿ ಪಿಟ್‍ಬುಲ್ ನಾಯಿಯ ಒಡತಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಅಟ್ಟೂರು ಲೇಔಟ್‍ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಮೇಲೆ ನಾಯಿ ದಾಳಿ ಮಾಡಿದ್ದು, ಕಾರ್ಮಿಕ ಸಾವನ್ನಪ್ಪಿದ್ದಾನೆ. ನಿರ್ಮಾಣ ಹಂತದ ಕಟ್ಟದ ಮೆಟ್ಟಿಲುಗಳ ಕೆಳಗೆ ಕಾರ್ಮಿಕ ಮಲಗಿದ್ದ. ನಾಯಿ ತನ್ನ ಮನೆಯೊಡತಿಯಿಂದ ತಪ್ಪಿಸಿಕೊಂಡು ಬಂದು ಕಾರ್ಮಿಕನ ಮೇಲೆ ದಾಳಿ ನಡೆಸಿದೆ.
ನಾಯಿ ಕಾರ್ಮಿಕನ ಮೇಲೆ ಹಾರಿ ಕುತ್ತಿಗೆಗೆ ಬಾಯಿ ಹಾಕಿದ್ದು, ಬಳಿಕ ಅಪಾರ ಪ್ರಮಾಣದ ರಕ್ತಸ್ರಾವವಾಗಿದೆ. ಈ ವೇಲೆ ಒಡತಿ ನಾಯಿಯನ್ನು ಹಿಡಿಯಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಅವರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
ಗಾಯಗೊಂಡ ಕಾರ್ಮಿಕ ನರಳಾಡುತ್ತಿರುವುದನ್ನು ಕಂಡು ಸ್ಥಳೀಯರು ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದು, ರಕ್ತಸ್ರಾವವಾಗುತ್ತಿರುವುದನ್ನು ಕಂಡು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ವೈದ್ಯರು ಸಾವನ್ನಪ್ಪಿರುವ ಕುರಿತು ಖಚಿತಪಡಿಸಿದ್ದಾರೆ. ನಿರ್ಲಕ್ಷದಿಂದಾಗಿ ಸಾವಿಗೆ ಕಾರಣರಾಗಿದ್ದಾರೆ ಎಂದು ಸಂಬಂಧಿಸಿದ ಐಪಿಸಿ ಸೆಕ್ಷನ್ ಅಡಿಯಲ್ಲಿ ನಾಯಿಯ ಒಡತಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಚಿಕ್ಕಮಗಳೂರು: ರಸ್ತೆ ಮಧ್ಯೆ ಕಾರಿಗೆ ಅಡ್ಡ ಬಂದ ಕರುವನ್ನ ತಪ್ಪಿಸಲು ಹೋಗಿ ಇನ್ನೋವಾ ಕಾರು ಪಲ್ಟಿಯಾಗಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಗ್ರಾಮದ ಬಳಿ ನಡೆದಿದೆ.
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಕರು ಕೂಡ ಸ್ಥಳದಲ್ಲೇ ಸಾವನ್ನಪ್ಪಿದೆ, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಮೂಡಿಗೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಮೂಲದ ಕೃಷ್ಣಮೂರ್ತಿ, ವೀಣಾ ಹಾಗೂ ಚಾಲಕ ಮೂವರು ಧರ್ಮಸ್ಥಳಕ್ಕೆ ಹೋಗುತ್ತಿದ್ದರು. ಕಾರು ಹೊಂಡಕ್ಕೆ ಪಲ್ಟಿಯಾದ ರಭಸಕ್ಕೆ ಕೃಷ್ಣಮೂರ್ತಿ ಅವರಿಗೆ ಕಾಲು ಮುರಿದಿದ್ದು, ಮೂವರಿಗೂ ಗಂಭೀರ ಗಾಯಗಳಾಗಿವೆ. ಬಣಕಲ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಜಿಲ್ಲೆಯ ಕಳಸ ತಾಲೂಕಿನಲ್ಲಿ ಬಾವಿ ಅಗೆಯುವಾಗ ಮಣ್ಣು ಕುಸಿದು ಕಾರ್ಮಿಕ ಸ್ಥಳದಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿನನ್ನು 45 ವರ್ಷದ ಮನೋಜ್ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಕಳಸ ತಾಲೂಕಿನ ಯಡೂರು ಬಳಿ ಬಾವಿ ಅಗೆಯುವಾಗ ದುರಂತ ಸಂಭವಿಸಿದೆ. ನಿನ್ನೆ ಕಳಸ ಸುತ್ತಮುತ್ತ ಭಾರೀ ಮಳೆ ಸುರಿದಿತ್ತು. ಈ ಹಿನ್ನೆಲೆ ಮಣ್ಣು ತೇವಾಂಶದಿಂದ ಕೂಡಿದ್ದು, ಇಂದು ಬಾವಿ ಪಕ್ಕದಲ್ಲಿ ಮಣ್ಣು ಅಗೆಯುವಾಗ ಏಕಾಏಕಿ ಮಣ್ಣು ಕುಸಿದು ಬಿದ್ದಿದ್ದರಿಂದ ಮೇಲೆ ಏಳಲು ಸಾಧ್ಯವಾಗದೇ ಉಸಿರುಗಟ್ಟಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಡುಪಿ: ಕಸ ವಿಲೇವಾರಿಗೆ ಬಂದ ನಗರಸಭೆ ಪೌರಕಾರ್ಮಿಕನಿಗೆ ಥಳಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ನಗರಸಭೆ ಖಂಡನಾ ನಿರ್ಣಯ ತೆಗೆದುಕೊಂಡು, ಎಲೆಕ್ಟ್ರಾನಿಕ್ಸ್ ಶಾಪ್ ಮಾಲೀಕನ ಪರವಾನಿಗೆಯನ್ನು ರದ್ದುಗೊಳಿಸಿದೆ.
ಜಿಲ್ಲೆಯ ನಗರಸಭೆ ಕಸ ವಿಲೇವಾರಿ ಕಾರ್ಮಿಕನ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಗಳ ವಿರುದ್ಧ ಉಡುಪಿ ನಗರಸಭೆ ಖಡಕ್ ನಿರ್ಣಯ ತೆಗದುಕೊಂಡಿದೆ. ಉಡುಪಿ ನಗರಸಭೆಯಲ್ಲಿ ನಡೆದ ತುರ್ತು ಖಂಡನಾ ನಿರ್ಣಯ ಸಭೆಯಲ್ಲಿ ಆರೋಪಿಗಳಿಗೆ ಸಂಬಂಧಿಸಿದ ಆಸ್ಮಾ ಕ್ಯಾಸೆಟ್ ಕಾರ್ನರ್ ಅಂಗಡಿಯ ವ್ಯಾಪಾರ ಪರವಾನಿಗೆ ರದ್ದು ಮಾಡಲು ನಿರ್ಣಯಿಸಲಾಗಿದೆ.
ಅಧಿಕಾರಿಗಳು, ಸಿಬ್ಬಂದಿ, ಸ್ವಚ್ಛತಾ ಸಿಬ್ಬಂದಿ, ಗುತ್ತಿಗೆ ನೌಕರರ ರಕ್ಷಣೆಗೆ ಆಡಳಿತ ವಿಭಾಗ ಬದ್ಧವಾಗಿದ್ದು, ಕೆಲವರು ಅನಗತ್ಯವಾಗಿ ನಗರಸಭೆ ವಿರುದ್ಧ ಪೌರಕಾರ್ಮಿಕರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಷಡ್ಯಂತ್ರಕ್ಕೆ ಅವಕಾಶ ಇಲ್ಲ ಎಂದು ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್ ಹೇಳಿದ್ದಾರೆ.
ಈ ಸಂದರ್ಭದಲ್ಲಿ ಶಾಸಕ ರಘುಪತಿ ಭಟ್ ಮಾತನಾಡಿ, ಸರ್ಕಾರಿ ಅಧಿಕಾರಿಗಳ ವಿರುದ್ಧ ದುವರ್ತನೆ ತೋರಿದರೆ ಪಕ್ಷ ಭೇದವಿಲ್ಲದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳನ್ನು ರಕ್ಷಿಸುವ ಪ್ರಶ್ನೆಯೇ ಇಲ್ಲ. ವಿರೋಧ ಪಕ್ಷದ ಸದಸ್ಯರು ಬೀದಿಯಲ್ಲಿ ನಿಂತು ಮಾತನಾಡುವ ಬದಲು ಅಧಿವೇಶನಕ್ಕೆ ಬಂದು ತಮ್ಮ ಅಭಿಪ್ರಾಯ ಮಂಡಿಸಬೇಕಿತ್ತು ಕಿಡಿಕಾರಿದರು.