Tag: laborers

  • Exclusive: ರೇವಣ್ಣ ಕಿಡ್ನ್ಯಾಪ್‌ ಕೇಸ್‌ – ಅಪಹರಿಸಿ ಸಂತ್ರಸ್ತೆಯನ್ನಿರಿಸಿದ್ದ ತೋಟದ ಮನೆ ಪತ್ತೆ; ಕೂಲಿ ಕಾರ್ಮಿಕರಿಂದ ಸ್ಫೋಟಕ ಮಾಹಿತಿ!

    Exclusive: ರೇವಣ್ಣ ಕಿಡ್ನ್ಯಾಪ್‌ ಕೇಸ್‌ – ಅಪಹರಿಸಿ ಸಂತ್ರಸ್ತೆಯನ್ನಿರಿಸಿದ್ದ ತೋಟದ ಮನೆ ಪತ್ತೆ; ಕೂಲಿ ಕಾರ್ಮಿಕರಿಂದ ಸ್ಫೋಟಕ ಮಾಹಿತಿ!

    – ಕೂಲಿ ಕೆಲಸದಾಕೆ ಅಂತ ಹೇಳಿ ನಮಗೆ ಪರಿಚಯಿಸಲಾಗಿತ್ತು ಎಂದ ಕಾರ್ಮಿಕರು
    – ಆಕೆ ಕ್ಷಣಕ್ಕೊಂದು ಮಾತನಾಡುತ್ತಿದ್ದಳು, ಸಾಲದ ಕಥೆ ಹೇಳ್ತಿದ್ದಳು

    ಮೈಸೂರು: ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಮೇಲಿನ ಅಪಹರಣ ಪ್ರಕರಣದ (HD Revanna Kidnap Case) ಸಂತ್ರಸ್ತ ಮಹಿಳೆ ಕಳೆದ 5 ದಿನಗಳಿಂದ ರೇವಣ್ಣನ ಆಪ್ತ ಸಹಾಯಕನ ತೋಟದ ಮನೆಯಲ್ಲಿ ಇದ್ದರು.

    ಈ ತೋಟದ ಮನೆ ಇರೋದು ಮೈಸೂರು ಜಿಲ್ಲೆಯ ಹುಣಸೂರು (Hunsur) ತಾಲ್ಲೂಕಿನ ಕಾಳೇನಹಳ್ಳಿ ಗ್ರಾಮದ ಹೊರ ವಲಯದಲ್ಲಿ. ಈ ತೋಟದ ಮನೆಯಲ್ಲಿ (Farmhouse) ಆಕೆ ಏನು ಮಾಡುತ್ತಿದ್ದರು? ನಿಜವಾಗಿಯೂ ಆಕೆಗೆ ತೊಂದರೆ ಕೊಡುತ್ತಿದ್ರಾ ಅನ್ನೋ? ಬಗ್ಗೆ ಕುತೂಹಲಕಾರಿ ಸಂಗತಿಗಳು ಇಲ್ಲಿವೆ.

    ಕೂಲಿ ಕೆಲಸಕ್ಕೆ ಬಂದಿರೋ ಮಹಿಳೆ ಅಂತಾ ಹೇಳಿದ್ರು:
    ಸಂತ್ರಸ್ತ ಮಹಿಳೆಯನ್ನು ಇಟ್ಟಿದ್ದ ತೋಟದ ಮನೆಯಲ್ಲಿ ಬೇರೆ ಯಾರಿಗೂ ಅನುಮಾನ ಬಾರದಂತೆ ಇರಲು ಸಂತ್ರಸ್ತೆ ಮಹಿಳೆಯನ್ನು ಕೂಲಿಗೆ ಬಂದ ಮಹಿಳೆ ಅಂತಾ ಬಿಂಬಿಸಲಾಗಿತ್ತು. ತೋಟದ ಮನೆಯಲ್ಲಿನ ಕೆಲಸಗಾರರಿಗೆ ಆ ಮಹಿಳೆಯನ್ನು ಹೊಸ ಕೂಲಿಯವಳು ಅಂತಾ ಪರಿಚಯಿಸಲಾಗಿತ್ತು. ಆಕೆ ಕ್ಷಣಕ್ಕೊಂದು ಮಾತಾಡುತ್ತಿದ್ದಳು, ಮಹಿಳೆಯನ್ನು ವಾಪಾಸ್ ಕಳಿಸಿ ಅಂತಾ ಕಾರ್ಮಿಕರು ತೋಟದ ಮಾಲೀಕರಿಗೆ ಹೇಳಿದ್ದರು. ಆದರೆ ಇದಕ್ಕೆ ಮಾಲೀಕ ಒಪ್ಪದೇ ನಿಮಗೆ ಯಾಕೆ ಅಂತ ಸುಮ್ಮನಿರಿಸಿದ್ದರು ಎಂದು ಕಾರ್ಮಿಕರು ಹೇಳಿದ್ದಾರೆ.

    ಅಲ್ಲದೇ ನಾವು ಆಕೆಯನ್ನು ಯಾವ ಊರಿನವರು ಎಂದು ಹೇಳಿದಾಗ ಆಕೆ ಹೆಚ್‌.ಡಿ ಕೋಟೆ ತಾಲೂಕಿನ ಮಹಿಳೆ ಎಂದು ಹೇಳಿಕೊಂಡಿದ್ದಳು. ಅಲ್ಲದೇ 25 ಸಾವಿರ ಸಂಘಕ್ಕೆ ಸಾಲ ಕಟ್ಟಬೇಕು ಅಂತಾ ನಮ್ಮನ್ನೇ ಯಾಮಾರಿಸಿದ್ದಳು. ಇಲ್ಲಿಗೆ ಯಾರು ಕರೆದುಕೊಂಡುಬಂದು ಬಿಟ್ಟರು ಅಂತಾನೂ ಗೊತ್ತಿಲ್ಲ. ಶನಿವಾರ ರಾತ್ರಿ ನೋಡುವಷ್ಟರಲ್ಲಿ ಆಕೆ ಇರಲೇ ಇಲ್ಲ, ಭಾನುವಾರ ಬೆಳಗ್ಗೆ 9:30ರ ವೇಳೆಗೆ ಪೊಲೀಸರೇ ಕರೆತಂದಿದ್ದರು. ಆದ್ರೆ ಇಲ್ಲಿಂದ ಯಾರನ್ನ ಕರೆದುಕೊಂಡು ಹೋಗಿಲ್ಲ. ನಮಗೆ ಮುಂಚೆನೇ ಆಕೆ ಬಗ್ಗೆ ಗೊತ್ತಿದ್ದರೆ ನಾವೇ ಪೊಲೀಸರಿಗೆ ಹಿಡಿದುಕೊಡುತ್ತಿದ್ದೆವು ಎಂದು ಅಲ್ಲಿನ ಕೂಲಿ ಕಾರ್ಮಿಕರು ಮಾಹಿತಿ ನೀಡಿದ್ದಾರೆ.

    ತೋಟದ ಮನೆಗೆ ರೇವಣ್ಣ ಬಂದಿದ್ರಾ?
    ಈ ತೋಟ ರಾಜ್‌ಗೋಪಾಲ್‌ ಅವರದ್ದು, ರೇವಣ್ಣ ಅವರು ಇಲ್ಲಿಗೆ ಬಂದಿಲ್ಲ, ಈವರೆಗೂ ನಾನು ಅವರನ್ನು ಇಲ್ಲಿ ನೋಡಿಲ್ಲ, ನಾವು ಯಾಕೆ ಸುಳ್ಳು ಹೇಳಬೇಕು ಎಂದು ಕಾರ್ಮಿಕರು ಹೇಳಿದ್ದಾರೆ. ಮತ್ತೊಬ್ಬರು ಕಾರ್ಮಿಕರು ಇಲ್ಲಿ ಮಹಿಳೆ ಇದ್ದುದ್ದನ್ನೇ ನಾವು ನೋಡಿಲ್ಲ ಎಂದಿದ್ದಾರೆ.

  • ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ಪಲ್ಟಿ – 16 ಜನರಿಗೆ ಗಾಯ

    ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬೊಲೆರೊ ಪಲ್ಟಿ – 16 ಜನರಿಗೆ ಗಾಯ

    ರಾಯಚೂರು: ಕೃಷಿ ಕೂಲಿ ಕಾರ್ಮಿಕರನ್ನು (Laborers) ಹೊತ್ತೊಯ್ಯುತ್ತಿದ್ದ ಬೊಲೆರೊ (Bolero) ವಾಹನ ಪಲ್ಟಿಯಾಗಿದ್ದು (Overturns), ಅಪಘಾತದಲ್ಲಿ (Accident) 16 ಕಾರ್ಮಿಕರು ಗಾಯಗೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಸಿರವಾರ ಬಳಿ ನಡೆದಿದೆ.

    ವರದಿಗಳ ಪ್ರಕಾರ ಕೃಷಿ ಕಾರ್ಮಿಕರನ್ನು ಜಮೀನು ಕೆಲಸಕ್ಕೆಂದು ಮಸ್ಕಿಯಿಂದ ಕೆರಕಲಮರಡಿ ಗ್ರಾಮಕ್ಕೆ ಕರೆದೊಯ್ಯಲಾಗುತ್ತಿತ್ತು. ಈ ವೇಳೆ ವಾಹನ ಪಲ್ಟಿಯಾಗಿದ್ದು, 16 ಜನರಿಗೆ ಗಾಯಗಳಾಗಿವೆ. ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಕಾರಿನಲ್ಲೇ ನೈಟ್ರೋಜನ್‌ ಸಿಲಿಂಡರ್‌ ಲೀಕ್‌ ಮಾಡ್ಕೊಂಡು ಸೀನಿಯರ್‌ ಟೆಕ್ಕಿ ಆತ್ಮಹತ್ಯೆ

    ಅಪಘಾತ ಸಿರವಾರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಸಿರವಾರ ಪೊಲೀಸರು ಭೇಟಿ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕುಟುಂಬದ, ಆರೋಗ್ಯದ ಹಿತದೃಷ್ಟಿಯಿಂದ ಕಾರ್ಮಿಕರು ಲಸಿಕೆ ಪಡೆದುಕೊಳ್ಳಿ: ಸಿ.ಸಿ.ಪಾಟೀಲ್

    ಕುಟುಂಬದ, ಆರೋಗ್ಯದ ಹಿತದೃಷ್ಟಿಯಿಂದ ಕಾರ್ಮಿಕರು ಲಸಿಕೆ ಪಡೆದುಕೊಳ್ಳಿ: ಸಿ.ಸಿ.ಪಾಟೀಲ್

    ಗದಗ: ಕೋವಿಡ್ 3ನೇ ಅಲೆ ಭೀಕರ ಪ್ರಭಾವ ಬೀರುವ ಸಂಭವವಿದೆ. ಕಟ್ಟಡ ಹಾಗೂ ಇತರೆ ಕಾರ್ಮಿಕರು ತಮ್ಮ ಕುಟುಂಬಕ್ಕೆ ತಾವೇ ಆಧಾರ ಸ್ತಂಭವಾಗಿದ್ದು, ಆರೋಗ್ಯದ ಹಿತದೃಷ್ಟಿಯಿಂದ ಪ್ರತಿಯೊಬ್ಬ ಕಾರ್ಮಿಕ ಲಸಿಕೆ ಪಡೆದುಕೊಳ್ಳಬೇಕು ಎಂದು ರಾಜ್ಯ ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು.

    ನಗರದ ಒಳಾಂಗಣ ಕ್ರೀಡಾಂಗಣದಲ್ಲಿ ಕೋವಿಡ್-19 ಸಂಕಷ್ಟದಲ್ಲಿರುವ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಆಹಾರ ಧಾನ್ಯ ಹಾಗೂ ಸುರಕ್ಷಾ ಕಿಟ್‍ಗಳನ್ನು ವಿತರಿಸಿ ಅವರು ಮಾತನಾಡಿದರು. ಕೋವಿಡ್ ಲಸಿಕೆಯಿಂದ ಯಾವುದೇ ರೀತಿಯ ಅಡ್ಡ ಪರಿಣಾಮಗಳಿರುವುದಿಲ್ಲ, ಲಸಿಕೆಯನ್ನು ಉಚಿತವಾಗಿ ನೀಡಲಾಗುತ್ತಿದೆ. ರಾಜ್ಯ ಸರ್ಕಾರ ಕಟ್ಟಡ, ಇತರೆ ಹಾಗೂ ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದೆ. ಕೋವಿಡ್-19 ಸಂದಿಗ್ದ ಪರಿಸ್ಥಿತಿಯಿಲ್ಲಿ ನೋಂದಾಯಿಸಿದ ಕಟ್ಟಡ ಕಾರ್ಮಿಕರಿಗೆ ಮೂರು ಸಾವಿರ ರೂ.ಗಳ ಸಹಾಯ ಧನ ಒದಗಿಸಲಾಗುತ್ತಿದೆ. ಕಾರ್ಮಿಕ ಇಲಾಖೆಯಲ್ಲಿ ನೋಂದಾಯಿಸಿದ ಕಾರ್ಮಿಕರು ಪ್ರತಿವರ್ಷ ತಮ್ಮ ನೋಂದಣಿಯನ್ನು ನವೀಕರಿಸಿಕೊಳ್ಳಬೇಕು. ನೋಂದಾಯಿಸಿದ ಕಾರ್ಮಿಕರಿಗೆ ಕಿಟ್‍ಗಳ ಕೊರತೆ ಬಿದ್ದಲ್ಲಿ ಪೂರೈಸಲು ಅಗತ್ಯದ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸಿ.ಸಿ.ಪಾಟೀಲ್ ಹೇಳಿದರು.

    ಶಾಸಕ ಎಚ್.ಕೆ.ಪಾಟೀಲ್ ಮಾತನಾಡಿ, ಕೋವಿಡ್ 2ನೇ ಅಲೆ ಪ್ರತಿಯೊಬ್ಬರನ್ನು ಆರೋಗ್ಯ ಹಾಗೂ ಆರ್ಥಿಕವಾಗಿ ಸಂಕಷ್ಟಕ್ಕೆ ದೂಡಿದೆ. ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ ಆಹಾರ ಕಿಟ್‍ಗಳನ್ನು ಒದಗಿಸುತ್ತಿರುವದು ಅನುಕೂಲಕರವಾಗಿದೆ. ಗದಗ ವಿಧಾನಸಭಾ ಮತಕ್ಷೇತ್ರದಲ್ಲಿ 16,500 ನೋಂದಾಯಿತ ಕಾರ್ಮಿಕರು, ಅಸಂಘಟಿತ ಸುಮಾರು ಇಪ್ಪತ್ತೈದು ಸಾವಿರಕ್ಕೂ ಹೆಚ್ಚು ಶ್ರಮ ಜೀವಿಗಳಿದ್ದು, ಎಲ್ಲರಿಗೂ ಆಹಾರ ಕಿಟ್‍ಗಳನ್ನು ಒದಗಿಸಬೇಕು. ಕಾರ್ಮಿಕ ಸಂಘಟನೆಗಳ ಮುಖ್ಯಸ್ಥರು ಪ್ರತಿಯೊಬ್ಬ ಕಾರ್ಮಿಕರು ಲಸಿಕೆ ಹಾಕಿಸಿಕೊಳ್ಳಲು ಮುಂದಾಗುವಂತೆ ನಿಗಾವಹಿಸಲು ಸೂಚಿಸಿದರು.

    ಗದಗ ತಹಶೀಲ್ದಾರ ಕಿಷನ್ ಕಲಾಲ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಬಿ.ಜಿ.ವಿಶ್ವನಾಥ್, ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಮತಿ ಸುಧಾ.ಚಿ.ಗರಗ, ಹಿರಿಯ ಕಾರ್ಮಿಕ ನೀರಿಕ್ಷ ಅಕ್ರಮ ಅಲ್ಲಾಪುರ, ವಿವಿಧ ಕಾರ್ಮಿಕ ಸಂಘಟನೆ ಮುಖಂಡರು, ನೋಂದಾಯಿತ ಕಟ್ಟಡ ಮತ್ತು ಇತರೆ ಕಾರ್ಮಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

  • ರಸ್ತೆಯಲ್ಲಿ ಹೋಗುತ್ತಿದ್ದಾಗ ಹೆಜ್ಜೇನು ಹಿಂಡು ದಾಳಿ- ಓರ್ವ ಸಾವು, ಹಲವರಿಗೆ ಗಾಯ

    ರಸ್ತೆಯಲ್ಲಿ ಹೋಗುತ್ತಿದ್ದಾಗ ಹೆಜ್ಜೇನು ಹಿಂಡು ದಾಳಿ- ಓರ್ವ ಸಾವು, ಹಲವರಿಗೆ ಗಾಯ

    ಮಡಿಕೇರಿ: ರಸ್ತೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ಹೆಜ್ಜೇನುಗಳು ದಾಳಿ ಮಾಡಿದ್ದು, ಓರ್ವ ಮೃತಪಟ್ಟದ್ದಾನೆ.

    ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ನಾಪೋಕ್ಲು ಪಟ್ಟಣದಲ್ಲಿ ಘಟನೆ ನಡೆದಿದೆ. ನಾಪೋಕ್ಲುವಿನ ಕೊಡವ ಸಮಾಜ ರಸ್ತೆಯಲ್ಲಿ ಇಂದು ಸಂಜೆ ರಸ್ತೆಯಲ್ಲಿ ಸಾಗುತ್ತಿದ್ದವರ ಮೇಲೆ ಹೆಜ್ಜೇನುಗಳು ದಾಳಿ ನಡೆಸಿದ್ದು, ಕೂಲಿ ಕಾರ್ಮಿಕ ನಾಪೋಕ್ಲು ಸಮೀಪದ ಅಜ್ಜಿಮುಟ್ಟ ನಿವಾಸಿ ವೇಲಾಯುದನ್ ಸಾವನ್ನಪ್ಪಿದ್ದಾರೆ.

    ಜೇನು ಹುಳುಗಳು ಕಚ್ಚಿದ್ದರಿಂದ ಅನೇಕರಿಗೆ ಗಾಯಗಳಾಗಿವೆ. ವೇಲಾಯುದನ್ ಮೇಲೆ ತೀವ್ರವಾಗಿ ದಾಳಿ ನಡೆಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಡವ ಸಮಾಜದ ಬಳಿ ಹೆಜ್ಜೇನು ದಂಡು ಎಲ್ಲಿಂದ ಬಂದವು ಎಂಬ ಬಗ್ಗೆ ನಾಗರಿಕರಲ್ಲಿ ಕುತೂಹಲ ಮೂಡಿದೆ. ಈ ರೀತಿ ಏಕಾಏಕಿ ಹೆಜ್ಜೇನು ಹಿಂಡು ದಾಳಿ ನಡೆಸಿ ಒಬ್ಬರ ಸಾವಿಗೆ ಕಾರಣವಾಗಿರುವುದು ನಾಪೋಕ್ಲು ಪೇಟೆಯಲ್ಲಿನ ಜನರ ಆತಂಕಕ್ಕೂ ಕಾರಣವಾಗಿದೆ. ಹೆಜ್ಜೇನು ದಾಳಿಗೆ ಒಳಗಾದವರಿಗೆ ನಾಪೋಕ್ಲು ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

  • ಬೆಂಕಿ ನಂದಿಸುವವರ ಬಾಳಿಗೇ ಬೆಂಕಿಯಿಟ್ಟ ಅರಣ್ಯ ಅಧಿಕಾರಿಗಳು

    ಬೆಂಕಿ ನಂದಿಸುವವರ ಬಾಳಿಗೇ ಬೆಂಕಿಯಿಟ್ಟ ಅರಣ್ಯ ಅಧಿಕಾರಿಗಳು

    ಬೆಳಗಾವಿ: ಕಾಡಿನಲ್ಲಿ ಬೆಂಕಿ ನಂದಿಸುವ ಕಾರ್ಮಿಕರ ಬಾಳಿಗೇ ಅರಣ್ಯ ಅಧಿಕಾರಿಗಳು ಬೆಂಕಿಯಿಟ್ಟರಾ ಎಂಬ ಪ್ರಶ್ನೆ ಕಾಡುತ್ತಿದ್ದು, ಒಂದು ಹೊತ್ತು ಊಟಕ್ಕೂ ಗತಿಯಿಲ್ಲದೆ ಬಡ ಕುಟುಂಬಗಳು ಬೀದಿಗೆ ಬಂದಿವೆ.

    ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪೂರ ಜಿಲ್ಲೆಯ ದಿನಗೂಲಿ ಕಾರ್ಮಿಕರನ್ನು ಅರಣ್ಯಾಧಿಕಾರಿಗಳು ಬೀದಿಗೆ ತಳ್ಳಿದ್ದಕ್ಕೆ ಪ್ರತಿಭಟನೆ ನಡೆಸಿದರು. ನರೇಗಾ ಯೋಜನೆಯಲ್ಲಿ ಕನಿಷ್ಟ 150 ದಿನಗಳಾದರೂ ಕೆಲಸ ನೀಡಿ ಮತ್ತು ನಮಗೆ ಜಾಬ್ ಕಾರ್ಡ್ ನೀಡಿ ಎಂಬುದು ಕಾರ್ಮಿಕರ ಬೇಡಿಕೆ. ದಿನಗೂಲಿ ಅರಣ್ಯ ಕಾರ್ಮಿಕರಿಗೆ ಗುರುತಿನ ಚೀಟಿ, ಸಮವಸ್ತ್ರ ನೀಡಿ ಎಂದು ಕಾರ್ಮಿಕ ಸಂಘಟನೆಗಳು ಡಿಸೆಂಬರ್ 23 ರಂದು ಸರ್ಕಾರಕ್ಕೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ಬರೆದಿವೆ. ಹೀಗಾಗಿ ಕೆಲಸದಿಂದ ತೆಗೆಯುತ್ತಿದ್ದಾರೆ ಎಂದು ಕಾರ್ಮಿಕ ಮುಖಂಡರ ಆರೋಪವಾಗಿದೆ. ಇನ್ನೊಂದೆಡೆ ಕೆಲಸವಿದ್ದಾಗ ಮಾತ್ರ ನಾವು ದಿನಗೂಲಿ ನೀಡುತ್ತೇವೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

    ಕಾರ್ಮಿಕರ ತೊಂದರೆ ಏನು ಎಂಬುದು ನನ್ನ ಗಮನಕ್ಕೆ ಬಂದಿದೆ. ಅವರ ಜಾಬ್ ಕಾರ್ಡ್ ಇಲ್ಲ ಎಂಬುದು ಗೊತ್ತಾಗಿದೆ. ಈ ಕುರಿತು ಜಿಲ್ಲಾ ಅರಣ್ಯ ಅಧಿಕಾರಿಗಳನ್ನು ಕರೆದು ಮಾಹಿತಿ ಪಡೆಯುತ್ತೇನೆ. ಕಾರ್ಮಿಕರ ಸಮಸ್ಯೆ ಸುಖಾಂತ್ಯವಾಗುವ ರೀತಿ ಕ್ರಮ ಕೈಗೊಳ್ಳುತ್ತೇನೆ ಎಂದು ಸಿಸಿಎಫ್ ಬಸವರಾಜ್ ಪಾಟೀಲ್ ತಿಳಿಸಿದ್ದಾರೆ.

    ಅರಣ್ಯ ಇಲಾಖೆಯಲ್ಲಿ ತುರ್ತು ಕೆಲಸಕ್ಕಾಗಿ ನಿಯೋಜನೆಗೊಂಡ ದಿನಗೂಲಿ ನೌಕರರು ಕಾಡಿಗೆ ಬೆಂಕಿ ಬಿದ್ದಾಗ ಅಥವಾ ಕಾಡುಪ್ರಾಣಿಗಳು ನಾಡಿಗೆ ಬಂದಾಗ ತುರ್ತು ಕೆಲಸವನ್ನು ನಿರ್ವಹಿಸುವ ಕೌಶಲ ಹೊಂದಿದವರು. ಕಾಡಿಗೆ ಬೆಂಕಿ ಬಿದ್ದಾಗ ತಕ್ಷಣ ಕಾರ್ಯಪ್ರವರ್ತರಾಗುವ ಇವರ ಬಾಳಲ್ಲಿ ಈಗ ಬೆಂಕಿ ಬಿದ್ದಿದೆ. ಕೆಲಸವಿಲ್ಲ ನೀವು ಯಾರು ಎಂಬುದೇ ನಮಗೆ ಗೊತ್ತಿಲ್ಲ ಎಂದು ಅರಣ್ಯ ಅಧಿಕಾರಿಗಳು ಬೇಜವಾಬ್ದಾರಿ ಹೇಳಿಕೆ ನೀಡಿ ಇವರನ್ನು ಕೆಲಸದಿಂದ ವಜಾ ಮಾಡಿದ್ದಾರೆ. ಅಲ್ಲದೆ ಕ್ವಾಟ್ರಸ್ ಖಾಲಿ ಮಾಡಿ ಇಲ್ಲದಿದ್ದರೆ ಪಾತ್ರೆಗಳನ್ನು ಹೊರಕ್ಕೆ ಬೀಸಾಡುತ್ತೇವೆ ಎಂದು ಧಮಕಿ ಹಾಕುತ್ತಿದ್ದಾರೆ.

  • ಕೂಲಿ ಮಾಡಿದ್ದ ಹಣದಲ್ಲಿ ಕಾರ್ಮಿಕರಿಂದ ರಾಷ್ಟ್ರಧ್ವಜ ಸ್ತಂಭ ನಿರ್ಮಾಣ

    ಕೂಲಿ ಮಾಡಿದ್ದ ಹಣದಲ್ಲಿ ಕಾರ್ಮಿಕರಿಂದ ರಾಷ್ಟ್ರಧ್ವಜ ಸ್ತಂಭ ನಿರ್ಮಾಣ

    – ಸೈನಿಕರ ಮೂರ್ತಿಗಳು, ಅಶೋಕ ಸ್ತಂಭ ನಿರ್ಮಾಣ

    ಹಾವೇರಿ: ಗ್ರಾಮದಲ್ಲಿ ಸದ್ಯಕ್ಕೆ ಯಾರೂ ಸೈನ್ಯ ಸೇರಿ ದೇಶ ಸೇವೆ ಮಾಡುತ್ತಿಲ್ಲ. ಆದರೂ ಅಲ್ಲಿನ ಜನರಿಗೆ ದೇಶಪ್ರೇಮದ ಬಗ್ಗೆ ಎಲ್ಲಿಲ್ಲದ ಪ್ರೀತಿ. ಗ್ರಾಮದಲ್ಲಿ ಬಹುತೇಕ ಕೂಲಿ ಕಾರ್ಮಿಕರು ಇದ್ದಾರೆ. ಇದೀಗ ತಾವು ದುಡಿದ ಹಣದಲ್ಲೇ ಕೂಲಿ ಕಾರ್ಮಿಕರು ಹಣ ಸೇರಿಸಿ ದೇಶಪ್ರೇಮ ಮೂಡಿಸುವ ಸೈನಿಕರ ಕಟ್ಟೆ ನಿರ್ಮಿಸಿದ್ದಾರೆ.

    ಜಿಲ್ಲೆಯ ಹಾನಗಲ್ ತಾಲೂಕಿನ ವರ್ದಿ ಗ್ರಾಮದಲ್ಲಿ ಬಹುತೇಕ ಕೂಲಿ ಕಾರ್ಮಿಕರ ಕುಟುಂಬಗಳೇ ಇವೆ. ಹಲವು ವರ್ಷಗಳ ಹಿಂದೆ ಗ್ರಾಮದ ಮೂವರು ದೇಶ ಸೇವೆ ಮಾಡುತ್ತಿದ್ದರು. ಮೂವರು ನಿವೃತ್ತಿಯಾಗಿ ಹಲವು ವರ್ಷಗಳು ಕಳೆದಿವೆ. ಗ್ರಾಮದ ಬಹುತೇಕ ಯುವಕರು ಗಾರೆ ಕೆಲಸ ಮಾಡಿಕೊಂಡಿದ್ದಾರೆ. ಆದರೆ ಈ ಕೂಲಿ ಕಾರ್ಮಿಕರಿಗೆ ಎಲ್ಲಿಲ್ಲದ ದೇಶಪ್ರೇಮ. ಹೀಗಾಗಿ ತಾವು ದುಡಿದ ಹಣದಲ್ಲೇ ಸ್ವಲ್ಪ ಸ್ವಲ್ಪ ಸೇರಿಸಿ ಸೈನಿಕರ ಕಟ್ಟೆ ನಿರ್ಮಿಸಿದ್ದಾರೆ.

    ಸೈನಿಕರ ಕಟ್ಟೆಯಲ್ಲಿ ನಾಲ್ಕೂ ಮೂಲೆಯಲ್ಲಿ ರಾಷ್ಟ್ರಧ್ವಜ ಹಿಡ್ಕೊಂಡು ಸೈನಿಕರು ನಿಂತಿರುವ ಮೂರ್ತಿಗಳಿವೆ. ನಡುವೆ 18 ಅಡಿ ಎತ್ತರದ ಅಶೋಕ ಸ್ಥಂಭ ನಿರ್ಮಿಸಿದ್ದಾರೆ. ಅದರಲ್ಲಿ ರಾಷ್ಟ್ರಧ್ವಜ ಹಾರಿಸಲು 41 ಅಡಿ ಎತ್ತರದ ಧ್ವಜ ಕಂಬವಿದೆ. ಸೈನಿಕರ ಮೂರ್ತಿಗಳು, ಅಶೋಕ ಸ್ತಂಭ, ಸೈನಿಕರ ಕಟ್ಟೆಯನ್ನ ನೋಡಿದರೆ ಸಾಕು ಎಂಥವರಲ್ಲೂ ದೇಶಪ್ರೇಮ ಮೂಡುವಂತಿದೆ. ನೋಡಿದವರಲ್ಲಿ ದೇಶಪ್ರೇಮ ಮೂಡಲಿ ಅನ್ನೋ ಉದ್ದೇಶದಿಂದ ಗ್ರಾಮದ ಯುವಕರು ಇದನ್ನ ನಿರ್ಮಿಸಿದ್ದಾರೆ.

    ಆರಂಭದಲ್ಲಿ ಗ್ರಾಮದ ಕೂಲಿ ಕಾರ್ಮಿಕರು  ತಾವು ದುಡಿದ ಹಣದಲ್ಲಿ ಅಲ್ಪಸ್ವಲ್ಪ ಸೇರಿಸಿ ಸೈನಿಕರ ಕಟ್ಟೆ ನಿರ್ಮಾಣಕ್ಕೆ ಮುಂದಾದರು. ನಂತರ ಗ್ರಾಮದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಸಹ ಸಾಥ್ ನೀಡಿದ್ದಾರೆ. ಗ್ರಾಮದ ಬಹುತೇಕ ಯುವಕರು ಗಾರೆ ಕೆಲಸ ಮಾಡುವುದರಿಂದ ಅವರೆ ಕಟ್ಟೆ ನಿರ್ಮಿಸಿದ್ದಾರೆ. ಕಲಾವಿದರೊಬ್ಬರು ಸೈನಿಕರ ಮೂರ್ತಿಗಳು, ಅಶೋಕ ಸ್ತಂಭ ನಿರ್ಮಿಸಿ ಕೊಟ್ಟಿದ್ದಾರೆ. ನಂತರ ಗ್ರಾಮದವರೇ ಬಣ್ಣ ಬಳಿದು ಸೈನಿಕರ ಕಟ್ಟೆಗೆ ಸುಂದರ ರೂಪ ಕೊಟ್ಟಿದ್ದಾರೆ.

    ಹಗಲು ಹೊತ್ತಿನಲ್ಲಿ ನೋಡುಗರನ್ನ ಸೈನಿಕರ ಕಟ್ಟೆ ತನ್ನತ್ತ ಕೈಬೀಸಿ ಕರೆಯುತ್ತದೆ. ರಾತ್ರಿಯಾದಂತೆ ಸೈನಿಕರ ಕಟ್ಟೆಯಲ್ಲಿ ಜಗಮಗಿಸುವ ವಿದ್ಯುತ್ ದೀಪಾಲಂಕಾರ ನೋಡಿಗರಿಗೆ ದೇಶಪ್ರೇಮ ಮೂಡಿಸೋದರ ಜೊತೆಗೆ ಸಖತ್ ಖುಷಿ ಕೊಡುತ್ತಿದೆ.

    ಯುವಕರಲ್ಲಿ ದೇಶಪ್ರೇಮ ಮೂಡಿಸೋದು, ಗಡಿಯಲ್ಲಿರೋ ಸೈನಿಕರ ಸೇವೆ ಸ್ಮರಿಸೋದು ಸೇರಿದಂತೆ ಹತ್ತು ಹಲವು ದೇಶಪ್ರೇಮ ಕಾರಣಗಳಿಗಾಗಿ ಗ್ರಾಮದ ಯುವಕರು ಸೈನಿಕರ ಕಟ್ಟೆ ನಿರ್ಮಿಸಿದ್ದಾರೆ.

  • ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವು

    ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲೇ ಸಾವು

    ಯಾದಗಿರಿ: ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಕಾಲುವೆಗೆ ಪಲ್ಟಿಯಾದ ಪರಿಣಾಮ ಇಬ್ಬರು ಮಹಿಳಾ ಕಾರ್ಮಿಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಯಾದಗಿರಿ ತಾಲೂಕಿನ ಬಾಡಿಹಾಳ ಗ್ರಾಮದ ಹೊರಭಾಗದಲ್ಲಿ ನಡೆದಿದೆ.

    ಲಲಿತಮ್ಮ ಮತ್ತು ಭಾಗ್ಯಲಕ್ಷ್ಮೀ ಮೃತ ಕಾರ್ಮಿಕರು. ಜಮೀನು ಕೂಲಿ ಕೆಲಸಕ್ಕೆಂದು ತಾಲೂಕಿನ ಬಾಡಿಹಾಳ ಗ್ರಾಮದಿಂದ ಟ್ರ್ಯಾಕ್ಟರ್ ನಲ್ಲಿ ಕಾರ್ಮಿಕರನ್ನು ಕರೆದುಕೊಂಡು ಹೋಗಿಸಸದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಪರಿಣಾಮ ಟ್ರ್ಯಾಕ್ಟರ್ ನಲ್ಲಿದ್ದ ಕೂಲಿಕಾರ್ಮಿಕರಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

    ಅಪಘಾತದಲ್ಲಿ ನಾಲ್ವರು ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಸಮೀಪದ ಸೈದಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ನಡೆದ ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews 

  • ಏಕಾಏಕಿ ಕುಸಿದು ಬಿತ್ತು ನಿರ್ಮಾಣ ಹಂತದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡ!

    ಏಕಾಏಕಿ ಕುಸಿದು ಬಿತ್ತು ನಿರ್ಮಾಣ ಹಂತದಲ್ಲಿದ್ದ ನಾಲ್ಕಂತಸ್ತಿನ ಕಟ್ಟಡ!

    ಚೆನ್ನೈ: ನಿರ್ಮಾಣ ಹಂತದ ಕಟ್ಟಡವೊಂದು ಕುಸಿದ ಪರಿಣಾಮ ಓರ್ವ ಸಾವನ್ನಪ್ಪಿ, 38 ಮಂದಿ ಕಟ್ಟಡ ಅವಶೇಷಗಳಡಿ ಸಿಲುಕಿರುವ ಘಟನೆ ತಮಿಳುನಾಡು ರಾಜಧಾನಿ ಚೆನ್ನೈನ ಕಂದನ್‍ಚವಡಿ ಎಂಬಲ್ಲಿ ಸಂಭವಿಸಿದೆ.

    ಶನಿವಾರ ರಾತ್ರಿ ಕಂದನ್‍ಚವಡಿ ಪ್ರದೇಶದಲ್ಲಿ ನಿರ್ಮಾಣ ಹಂತದ ನಾಲ್ಕಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಕಟ್ಟಡ ಕುಸಿತದಿಂದಾಗಿ ಸ್ಥಳದಲ್ಲೇ ಓರ್ವ ಕೂಲಿ ಕಾರ್ಮಿಕ ಸಾವನ್ನಪ್ಪಿದ್ದು, 38 ಮಂದಿ ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿದ್ದಾರೆ.

    ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ರಕ್ಷಣಾ ಪಡೆಗಳು ತಡರಾತ್ರಿ ಕಾರ್ಯಾಚರಣೆ ನಡೆಸಿವೆ. ಕಾರ್ಯಾಚರಣೆಯಲ್ಲಿ ಸುಮಾರು 28 ಮಂದಿಯನ್ನು ರಕ್ಷಿಸಲಾಗಿದ್ದು, ಉಳಿದವರಿಗಾಗಿ ತೀವ್ರ ಶೋಧ ಕಾರ್ಯ ನಡೆಯುತ್ತಿದೆ. ಕೂಲಿ ಕಾರ್ಮಿಕರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಾಗಿಸಲಾಗಿದೆ. ರಕ್ಷಣಾ ಕಾರ್ಯಾ ಭರದಿಂದ ಸಾಗುತ್ತಿದ್ದು, ಜೆಸಿಬಿಗಳ ಮೂಲಕ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯ ಮುಂದುವರೆದಿದೆ.

    ಘಟನೆ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಡಳಿತ, ಬಹುತೇಕ ಕೂಲಿ ಕಾರ್ಮಿಕರು ದಕ್ಷಿಣ ತಮಿಳುನಾಡು ಪ್ರದೇಶಕ್ಕೆ ಸೇರಿದವರು ಎನ್ನಲಾಗಿದೆ. ಆದರೆ ಕಟ್ಟಡದ ಅವಶೇಷಗಳಡಿ ಇನ್ನೂ ಎಷ್ಟು ಮಂದಿ ಸಿಲುಕಿದ್ದಾರೆ ಎಂಬ ಬಗ್ಗೆ ಸ್ಪಷ್ಟ ಚಿತ್ರಣ ಸಿಕ್ಕಿಲ್ಲ. ಕಟ್ಟಡವು ತಂಜಾವೂರ್ ನ ಆಸ್ಪತ್ರೆಯೊಂದಕ್ಕೆ ಸೇರಿದ್ದಾಗಿದೆ. ಘಟನೆ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿಸಿದೆ.