Tag: Labour Department

  • ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಲು ಒಪ್ಪದ ರಾಜ್ಯ ಸರ್ಕಾರ

    ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಲು ಒಪ್ಪದ ರಾಜ್ಯ ಸರ್ಕಾರ

    ಬೆಂಗಳೂರು: 1961ರ ಕರ್ನಾಟಕ ಅಂಗಡಿ ಮತ್ತು ಸ್ಥಾಪನೆ ಕಾಯ್ದೆಗೆ ತಿದ್ದುಪಡಿ ತರುವ ಹಾಗೂ ಕಾರ್ಮಿಕರ (Workers) ಕೆಲಸದ ಅವಧಿಯನ್ನ 9 ಗಂಟೆಯಿಂದ 10 ಗಂಟೆಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಲು ಮುಂದಾಗಿದೆ.

    ಪ್ರಸ್ತಾವನೆಗೆ ಕಾರ್ಮಿಕ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ಕೇಂದ್ರ ಕಾರ್ಮಿಕ ಇಲಾಖೆಯ (Centger Labour Department) ಪ್ರಸ್ತಾವನೆಯನ್ನ ರಾಜ್ಯ ಸರ್ಕಾರ ತಿರಸ್ಕಾರ ಮಾಡಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಿನದಲ್ಲಿ 10 ಗಂಟೆ ಕೆಲಸಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡದ ಹಿನ್ನೆಲೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಪ್ರಸ್ತಾವನೆ ತಿರಸ್ಕಾರ ಮಾಡುವ ಸಾಧ್ಯತೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪೊಲೀಸ್ ಕಮಿಷನರ್‌ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR

    ಪ್ರಸ್ತಾವನೆ ತಿರಸ್ಕರಿಸಲು ಕಾರಣ ಏನು?
    ಕೇಂದ್ರ ಕಾರ್ಮಿಕ ಇಲಾಖೆ ಎಲ್ಲಾ ರಾಜ್ಯಗಳಿಗೂ ಈ ಪ್ರಸ್ತಾವನೆಯನ್ನ ಕಳುಹಿಸಿದೆ. ಆದ್ರೆ ಕರ್ನಾಟಕ ಎರಡು ಕಾರಣಗಳಿಗಾಗಿ ಪ್ರಸ್ತಾವನೆಯನ್ನ ತಿರಸ್ಕರಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರವು ಸಮಾನ ನೀತಿ ಅವಕಾಶವನ್ನು ಹೊಂದಿದೆ. ಈಗಾಗಲೇ ಕಾರ್ಮಿಕರು ದಿನಕ್ಕೆ 9 ಗಂಟೆ ಮತ್ತು ವಾರದಲ್ಲಿ 48 ಗಂಟೆಗಳ ಕಾಲ ಕೆಲಸ ಮಾಡ್ತಿದ್ದಾರೆ. ಜೊತೆಗೆ ಹೆಚ್ಚುವರಿ ಅಗತ್ಯಕ್ಕನುಗುಣವಾಗಿ ಹೆಚ್ಚುವರಿ ಅವಧಿ ಕಾರ್ಯದ ನಿಬಂಧನೆ ಕೂಡ ಇದೆ. ನಿತ್ಯ 10 ಗಂಟೆ ಕೆಲಸಕ್ಕೆ ಅವಧಿಗೆ ಈಗಾಗಲೇ ಕಾರ್ಮಿಕ ಸಂಘಟನೆಗಳ ತೀವ್ರ ವಿರೋಧ ಇದೆ. ಹೀಗಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ

    ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಕಾರ, ಕೇಂದ್ರದ ಪ್ರಸ್ತಾವನೆ ಬಂದ ನಂತರ ರಾಜ್ಯವು ತಿದ್ದುಪಡಿಯನ್ನ ತಿರಸ್ಕರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಸಂಪುಟ ಸಭೆಯಲ್ಲಿ ಸಿಎಂ ಹಾಗೂ ಸಚಿವರು ಪ್ರಸ್ತಾವನೆಯನ್ನ ವಿರೋಧಿಸಿದ್ದಾರೆ. ಆದ್ರೆ ಇನ್ನೂ ಅಧಿಕೃತವಾಗಿ ಕೇಂದ್ರಕ್ಕೆ ತಿಳಿಸಿಲ್ಲ. ಸಮಗ್ರ ಚರ್ಚೆ ಬಳಿಕ ಈ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.

    ಈ ಕುರಿತು ಪ್ರತಿಕ್ರಿಯಿಸಿರುವ ಕಾರ್ಮಿಕ ಆಯುಕ್ತರು, ಈ ವಿಷಯದ ಕುರಿತು ಅಂತಿಮ ವರದಿಯನ್ನ ಕಾರ್ಮಿಕ ಸಚಿವರೊಂದಿಗೆ ಚರ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಇಂದು ವಿಶ್ವ ಹುಲಿ ದಿನಾಚರಣೆ – ಚಾಮರಾಜನಗರ ಹುಲಿಗಳ ನಾಡಾಗಿದ್ದು ಹೇಗೆ?

  • ಕಾಲಿಗೆ ಕೋಳ, ಪ್ರತಿನಿತ್ಯ ಚಿತ್ರಹಿಂಸೆ – ಜೀತ ಪದ್ಧತಿಯ ಪ್ರತ್ಯಕ್ಷ ವರದಿ; ʻಪಬ್ಲಿಕ್‌ʼ ವರದಿ ಬೆನ್ನಲ್ಲೇ ಕಾರ್ಮಿಕರ ರಕ್ಷಣೆ!

    ಕಾಲಿಗೆ ಕೋಳ, ಪ್ರತಿನಿತ್ಯ ಚಿತ್ರಹಿಂಸೆ – ಜೀತ ಪದ್ಧತಿಯ ಪ್ರತ್ಯಕ್ಷ ವರದಿ; ʻಪಬ್ಲಿಕ್‌ʼ ವರದಿ ಬೆನ್ನಲ್ಲೇ ಕಾರ್ಮಿಕರ ರಕ್ಷಣೆ!

    ಬೆಳಗಾವಿ: ಅನ್ನ – ನೀರು ನೀಡದೆ ಕಾಲಿಗೆ ಕಬ್ಬಿಣದ ಸರಪಳಿ ಕಟ್ಟಿ ಕೋಳ ತೊಡಿಸಿ ಹೊಟೇಲ್ ಕಾರ್ಮಿಕರಿಗೆ (labourers)  ಪ್ರತಿನಿತ್ಯ ಚಿತ್ರಹಿಂಸೆ ನೀಡುತ್ತಿದ್ದ ಅಮಾನವೀಯ ಘಟನೆ ಬೆಳಗಾವಿಯಲ್ಲಿ ಕಂಡುಬಂದಿದೆ. ಈ ದೃಶ್ಯಗಳನ್ನು ನೋಡಿದರೆ ಜೀತ ಪದ್ಧತಿ ಇನ್ನೂ ಜೀವಂತವಿದೆಯೇ ಎಂಬುದಕ್ಕೆ ಈ ವರದಿ ಪುಷ್ಟಿ ನೀಡಿತ್ತು. ಈ ಕುರಿತು ʻಪಬ್ಲಿಕ್‌ ಟಿವಿʼ (Public TV) ವರದಿ ಪ್ರಸಾರ ಮಾಡಿದ ಕೆಲವೇ ಸಮಯದಲ್ಲಿ ಚಿತ್ರಹಿಂಸೆ ಅನುಭವಿಸುತ್ತಿದ್ದ ಕಾರ್ಮಿಕರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

    ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ಹಾಗೂ ಧಾರವಾಡ ತಾಲೂಕಿನ ತೇಗೂರು ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ-4ರಲ್ಲಿರುವ ಖಾಸಗಿ ಢಾಬಾಗೆ ಗ್ರಾಮೀಣ ಸಿಪಿಐ ಸಮೀರ ಮುಲ್ಲಾ ಭೇಟಿ ನೀಡಿದ್ದಾರೆ. ತಹಶೀಲ್ದಾರ್‌ ಸಹ ಭೇಟಿ ನೀಡಿದ್ದು, ಢಾಬಾ ಮಾಲಿಕ ಹಾಗೂ ಕೆಲಸಗಾರರಿಂದ ಮಾಹಿತಿ ಕಲೆಹಾಕುತ್ತಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ 5 ವರ್ಷ ಅಧಿಕಾರದಲ್ಲಿ ಇರ್ತಾರೋ ಇರಲ್ವೋ ಗೊತ್ತಿಲ್ಲ: ಸಿಎಂ ಆಪ್ತ ಸಲಹೆಗಾರ ಬಿಆರ್ ಪಾಟೀಲ್ ಹೊಸ ಬಾಂಬ್

    ಹೊಟೇಲ್ ಕೆಲಸಕ್ಕೆ ಉತ್ತರ ಭಾರತದ ಯುವಕರನ್ನು ಕರೆತಂದು ಪುಡಿಗಾಸು ಮುಂಗಡವಾಗಿ ನೀಡಿ ಅವರಿಗೆ ಚಿತ್ರಹಿಂಸೆ ಕೊಟ್ಟು ಕಾಲಿಗೆ ಬೇಡಿ ಹಾಕಿ ಕಬ್ಬಿಣದ ಸರಪಳಿಯಿಂದ ಕಟ್ಟಿ ಥಳಿಸುವ ದೃಶ್ಯಗಳು ಕಂಡುಬಂದಿದ್ದವು. ಇದನ್ನೂ ಓದಿ: ಚಾಮರಾಜನಗರ| ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಉಚಿತ ಸಿ.ಟಿ ಸ್ಕ್ಯಾನ್ ಸೌಲಭ್ಯವಿದ್ರೂ ರೋಗಿಗಳ ಪರದಾಟ

    ಮಾಲಿಕನ ಕುಕೃತ್ಯಕ್ಕೆ ರೋಸಿಹೋದ ಹೊಟೇಲ್ ಕೂಲಿ ಕಾರ್ಮಿಕರು ಬಿಡುಗಡೆ ಭಾಗ್ಯ ಯಾವಾಗ ಎಂಬುದನ್ನು ಕಾದು ನೋಡುತ್ತಿದ್ದರು. ಉತ್ತರ ಭಾರತದಿಂದ ಬಂದ ಯುವಕರಿಗೆ ಇಲ್ಲಿಯ ಭಾಷೆ ಬರುವುದಿಲ್ಲ. ಕಾಲಿಗೆ ಕೋಳ ತೊಟ್ಟುಕೊಂಡೇ ರೊಟ್ಟಿ ತಟ್ಟಿ ಜನರ ಹೊಟ್ಟೆ ತುಂಬಿಸುತ್ತಿದ್ದುದ್ದಂತು ವಿಷಾಧನಿಯ.

    ಇದೀಗ ʻಪಬ್ಲಿಕ್‌ ಟಿವಿʼ ವರದಿ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್‌ ಹಾಗೂ ಕಾರ್ಮಿಕ ಇಲಾಖೆ ಅಧಿಕಾರಿಗಳು ಕಾರ್ಮಿಕರನ್ನು ರಕ್ಷಿಸುವ ಕೆಲಸ ಮಾಡಿದ್ದಾರೆ. ಈ ಸಂಬಂಧ ಮಾತನಾಡಿರುವ ಕಾರ್ಮಿಕ ಇಲಾಖೆ ಅಧಿಕಾರಿಗಳು, ಇಷ್ಟೊಂದು ಕಾಯ್ದೆ ಕಾನೂನುಗಳು ಪ್ರಬಲವಾಗಿದ್ದರೂ ಇಂಥ ಅಮಾನವೀಯ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಜೀತ ಪದ್ದತಿ ಸಂಪೂರ್ಣ ಹೊಗಲಾಡಿಸಲು ಕಠಿಣ ಕಾನೂನುಗಳಿದ್ದು ಹೋಟೆಲ್ ಮಾಲಿಕರಿಗೆ ಶಿಕ್ಷೆಯಾಗುತ್ತದೆ ಮತ್ತು ದಂಡ ವಿಧಿಸಲಾಗುತ್ತದೆ ತಿಳಿಸಿದ್ದಾರೆ.

  • ಬಾಗಲಕೋಟೆಯಲ್ಲಿ ಕಾರ್ಮಿಕ ಇಲಾಖೆ ಹಣ ಗುಳುಂ – ಗುತ್ತಿಗೆ ನೌಕರನ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ

    ಬಾಗಲಕೋಟೆಯಲ್ಲಿ ಕಾರ್ಮಿಕ ಇಲಾಖೆ ಹಣ ಗುಳುಂ – ಗುತ್ತಿಗೆ ನೌಕರನ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ

    ಬಾಗಲಕೋಟೆ: ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಹಣ ಅಕ್ರಮ ವರ್ಗಾವಣೆ ಪ್ರಕರಣ ಬೆನ್ನಲ್ಲೇ ಮತ್ತೊಂದು ಅಕ್ರಮ ಬಯಲಾಗಿದೆ. ಕಾರ್ಮಿಕ ಇಲಾಖೆಯ (Labour Department) ಹಣವನ್ನು ಗುತ್ತಿಗೆ ನೌಕರನ ವಿರುದ್ಧ ಹಣ ಡ್ರಾ ಮಾಡಿಕೊಂಡು ಅಕ್ರಮ ಎಸಗಿರುವ ಆರೋಪ ಕೇಳಿಬಂದಿದೆ.

    ಬಾಗಲಕೋಟೆ (Bagalkot) ಜಿಲ್ಲೆಯ ಕಾರ್ಮಿಕ ಇಲಾಖೆಯಲ್ಲಿ ಕಾರ್ಯನಿರ್ವಾಹಕನಾಗಿದ್ದ ದ್ಯಾವಪ್ಪ ತಳವಾರ ಹಾಗೂ ಆತನ ಸಂಬಂಧಿಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2.83 ಕೋಟಿ ರೂ. ಹಣವನ್ನು ಫಲಾನುಭವಿಗಳ ಹೆಸರಲ್ಲಿ ಇತರೆ ಖಾತೆಗಳಿಗೆ ವರ್ಗಾಯಿಸಿ ವಂಚನೆ ಎಸಗಿರುವ ಆರೋಪ ಕೇಳಿಬಂದಿದೆ. ಹಣ ಲೂಟಿ ಮಾಡಿ 8 ತೊಲೆ ಚಿನ್ನಾಭರಣ, 8 ಲಕ್ಷ ಮೌಲ್ಯದ ಆಸ್ತಿ ಖರೀದಿಸಿದ್ದರು ಎಂದು ಆರೋಪಿಸಲಾಗಿದೆ. ಇದನ್ನೂ ಓದಿ: ಹೆಣ್ಮಗಳೊಬ್ಬಳಿಂದ ನಮ್ಮ ವಿರುದ್ಧ ದೂರು ಬರೆಸಿದ ರಾಜ್ಯದ ಡಿಜಿಪಿ ನಾಲಾಯಕ್: ಸದನದಲ್ಲಿ ಹೆಚ್‌.ಡಿ.ರೇವಣ್ಣ ಭಾವೋದ್ವೇಗದ ಮಾತು

    ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ 2.83 ಕೋಟಿ ರೂ. ಹಣದ ಪೈಕಿ 37 ಲಕ್ಷ ಆರೋಪಿ ದ್ಯಾವಪ್ಪ ವಾಪಸ್ ಮಾಡಿದ್ದಾನೆ. ಪೊಲೀಸರು, ಖಾತೆಯಲ್ಲಿನ 76 ಲಕ್ಷ ಪ್ರೀಜ್ ಮಾಡಿದ್ದಾರೆ. 8 ತೊಲೆ ಚಿನ್ನ, 1 ಲಕ್ಷ ರೂ. ಹಣ ಹಾಗೂ ಎಂಟು ಲಕ್ಷ ಮೌಲ್ಯದ ಜಮೀನು ಪತ್ರ ಜಪ್ತಿ ಮಾಡಿದ್ದಾರೆ ಎನ್ನಲಾಗಿದೆ.

    ಆಗಸ್ಟ್ 2023 ರಿಂದ ಪೆಬ್ರುವರಿ 2024 ರ ಮಧ್ಯೆ ಆದ ಅವ್ಯವಹಾರ ಈಗ ಬೆಳಕಿಗೆ ಬಂದಿದೆ. ಕಟ್ಟಡ ಕಾರ್ಮಿಕರ ಮದುವೆ, ವೈದ್ಯಕೀಯ ಸಹಾಯಧನ ಫಲಾನುಭವಿಗಳ ಹಣವನ್ನು ಅಕ್ರಮವಾಗಿ ವರ್ಗಾಯಿಸಿಕೊಳ್ಳಲಾಗಿತ್ತು. ಫಲಾನುಭವಿಗಳ ಬ್ಯಾಂಕ್ ಖಾತೆ ಬದಲು, ಬೇರೆಯವರ ಬ್ಯಾಂಕ್ ಖಾತೆ ನೀಡಿ ಖೊಟ್ಟಿ ಫಲಾನುಭವಿ ಪಟ್ಟಿ ಸಿದ್ಧಪಡಿಸುತ್ತಿದ್ದ. ನಂತರ ಕಾರ್ಮಿಕ ಅಧಿಕಾರಿಗಳ ಸಹಿ ಪಡೆಯುತ್ತಿದ್ದ. ಬೇರೆ ಖಾತೆಗಳಿಗೆ ಅನುದಾನ ಮಂಜೂರು ಮಾಡಿಸಿಕೊಂಡು. ಆ ಹಣವನ್ನು ಡ್ರಾ ಮಾಡಿಸಿಕೊಂಡು ವಂಚನೆ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇದನ್ನೂ ಓದಿ: Valmiki Corporation Scam | ನೈತಿಕ ಹೊಣೆ ಹೊತ್ತು ಸಿಎಂ ರಾಜೀನಾಮೆ ಕೊಡಲಿ – ಆರ್. ಅಶೋಕ್ ಆಗ್ರಹ

    37,12,837 ರೂ. ವಂಚನೆ ಹಿನ್ನೆಲೆ ಎಫ್‌ಐಆರ್ ದಾಖಲಾಗಿದೆ. ಫಲಾನುಭವಿಗಳ ಪಟ್ಟಿಯಲ್ಲಿ ತಮ್ಮ ಸಂಬಂಧಿಕರ, ಆಪ್ತರ ಖಾತೆ ಸೇರಿಸಿ 37,12,837 ರೂ. ವಂಚನೆ ಮಾಡಿರುವುದು ಗೊತ್ತಾಗಿದೆ. ತನ್ನ ಖಾತೆ ಹಾಗೂ ಸಂಬಂಧಿಕರಾದ ಭಾಗೀರಥಿ ತಳವಾರ, ಹನುಮಾನ ತಳವಾರ, ಪಲ್ಲವಿ ತಳವಾರ ಖಾತೆಗೆ ಆರೋಪಿ ಹಣ ಬಿಡುಗಡೆ ಮಾಡಿದ್ದಾನೆ. ನಂತರ ಆ ಹಣ ಪಡೆದು ಕಾರ್ಮಿಕ ಇಲಾಖೆಗೆ ಮೋಸ ಮಾಡಿದ್ದಾನೆ ಎಂದು ಉಪಕಾರ್ಮಿಕ ಆಯುಕ್ತ ಡಿ.ಜಿ.ನಾಗೇಶ್ ದೂರಿದ್ದಾರೆ.

    ದ್ಯಾವಪ್ಪ ಹಾಗೂ ಸಂಬಂಧಿಕರಾದ ಭಾಗೀರಥಿ ತಳವಾರ, ಹನುಮಾನ ತಳವಾರ, ಪಲ್ಲವಿ ತಳವಾರ ವಿರುದ್ಧ ಬಾಗಲಕೋಟೆ ಸಿಇಎನ್ ಠಾಣೆಯಲ್ಲಿ 2024ರ ಫೆಬ್ರುವರಿ 29 ರಂದು ಎಫ್‌ಐಆರ್ ದಾಖಲಾಗಿದೆ. ನಾಲ್ವರೂ ಆರೋಪಿಗಳು ಜಾಮೀನು ಪಡೆದುಕೊಂಡಿದ್ದಾರೆ.

  • ಕಾರ್ಮಿಕ ಇಲಾಖೆಯ ಎಡವಟ್ಟು; ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಕಾರ್ಮಿಕರು

    ಕಾರ್ಮಿಕ ಇಲಾಖೆಯ ಎಡವಟ್ಟು; ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಕಾರ್ಮಿಕರು

    ಹಾವೇರಿ: ಕಾರ್ಮಿಕ ಇಲಾಖೆಯ (Labour Department) ಕಾರ್ಡ್ ಹೊಂದಿದ್ದ ಕಾರ್ಮಿಕರ ಮಕ್ಕಳಿಗೆ ಕಿಟ್ ನೀಡುವುದಾಗಿ ಕರೆಸಿ ವಾಪಾಸ್ ಕಳಿಸಲು ಮುಂದಾದ ಅಧಿಕಾರಿಗಳನ್ನು ಜನ ತರಾಟೆಗೆ ತೆಗೆದುಕೊಂಡ ಘಟನೆ ಹಾವೇರಿಯ ಎಪಿಎಂಸಿ (APMC) ಆವರಣದಲ್ಲಿ ನಡೆದಿದೆ.

    ಹಾವೇರಿ (Haveri), ಸವಣೂರು ಮತ್ತು ಶಿಗ್ಗಾಂವಿ ತಾಲ್ಲೂಕಿನ ಫಲಾನುಭವಿಗಳನ್ನು ಹಾವೇರಿ ಎಪಿಎಂಸಿ ಆವರಣಕ್ಕೆ ಕಿಟ್ ಕೊಡುವುದಾಗಿ ಕರೆಸಲಾಗಿತ್ತು. ನೂರಾರು ಜನ ಬೆಳಗ್ಗಿನಿಂದಲೇ ಕ್ಯೂನಲ್ಲಿ ನಿಂತಿದ್ದರು. ಅದರೆ ಕೇವಲ 150 ಕಿಟ್‍ಗಳಿವೆ. ನಾಳೆ ಬನ್ನಿ ಎಂದು ಅಧಿಕಾರಿಗಳು ವಾಪಾಸ್ ಕಳಿಸಲು ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ಫಲಾನುಭವಿಗಳು ಇಲಾಖೆಯ ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಐದು ತಿಂಗಳ ಬಳಿಕ ದೇಶದಲ್ಲಿ ಮತ್ತೆ ಕೊರೋನಾ ಪ್ರಕರಣದಲ್ಲಿ ಏರಿಕೆ

    ನಾವು ಯಾರೂ ಕಿಟ್ ಕೇಳಿರಲಿಲ್ಲ. ಕಿಟ್ ಕೊಡುವುದಾಗಿ ಕರೆಸಿ, ಈಗ ಕಿಟ್‍ಗಳನ್ನ ಬೇರೆ ಕಡೆ ಸಾಗಿಸಿ ಮಾರಿಕೊಂಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಈ ಬಗ್ಗೆ ಕಾರ್ಮಿಕ ಇಲಾಖೆಯ ಉಪನಿರ್ದೇಶಕ ಮಹೇಶ ಮಾತನಾಡಿ, ಹಾವೇರಿ ಜಿಲ್ಲೆಯಲ್ಲಿ 2.5 ಲಕ್ಷಕ್ಕೂ ಅಧಿಕ ಕಾರ್ಮಿಕರಿದ್ದಾರೆ. ಅದರಲ್ಲಿ 60 ಸಾವಿರಕ್ಕೂ ಹೆಚ್ಚಿನ ಕಾರ್ಮಿಕರ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಸರ್ಕಾರದಿಂದ ಪ್ರತಿಯೊಂದು ತಾಲೂಕಿಗೆ 250 ಕಿಟ್‍ಗಳು ಬಂದಿವೆ. ಈಗಾಗಲೇ ಎರಡು ತಾಲ್ಲೂಕಿನ ಫಲಾನುಭವಿಗಳಿಗೆ ಕಿಟ್ ವಿತರಣೆ ಮಾಡಲಾಗಿದೆ. ಬುಧವಾರ ಸಾವಿರಾರು ಫಲಾನುಭವಿಗಳು ಬಂದಿದ್ದಾರೆ. ಸರ್ಕಾರದ ಗಮನಕ್ಕೆ ತಂದು ಎಲ್ಲರಿಗೂ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು

    ಆದರೂ ಎಪಿಎಂಸಿ ಆವರಣದಲ್ಲಿ ಕಾದು ಕುಳಿತಿದ್ದ ಜನ, ನೀತಿ ಸಂಹಿತೆ ಘೋಷಣೆ ಆಗುತ್ತಿದ್ದಂತೆ ಮನೆ ಕಡೆ ತೆರಳಿದ್ದಾರೆ.

  • ಕಾರ್ಮಿಕ ಇಲಾಖೆಯಿಂದ ಶ್ರಮಿಕ ವರ್ಗಕ್ಕೆ ಭರ್ಜರಿ ಗಿಫ್ಟ್ – ರಾಜ್ಯಾದ್ಯಂತ ಕಾರ್ಮಿಕರಿಗೆ ಉಚಿತ ಬಸ್ ಪಾಸ್

    ಕಾರ್ಮಿಕ ಇಲಾಖೆಯಿಂದ ಶ್ರಮಿಕ ವರ್ಗಕ್ಕೆ ಭರ್ಜರಿ ಗಿಫ್ಟ್ – ರಾಜ್ಯಾದ್ಯಂತ ಕಾರ್ಮಿಕರಿಗೆ ಉಚಿತ ಬಸ್ ಪಾಸ್

    ಬೆಂಗಳೂರು: ಶ್ರಮಿಕ ವರ್ಗದ ಸಂಕ್ಷೇಮಕ್ಕೆ ಶ್ರಮಿಸುತ್ತಿರುವ ಕಾರ್ಮಿಕ ಇಲಾಖೆಯು ಇದೀಗ ಮತ್ತೊಂದು ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ಮುಂದಡಿ ಇರಿಸಿದೆ.

    ಕೋವಿಡ್ 1 ಮತ್ತು 2ನೇ ಅಲೆ ವೇಳೆ ಸಹಾಯಧನ, ಆಹಾರಕಿಟ್, ಲಸಿಕೆ, ತಮ್ಮೂರುಗಳಿಗೆ ತೆರಳಲು ಸಾರಿಗೆ ವ್ಯವಸ್ಥೆ ಮಾಡಿದ್ದ ಇಲಾಖೆಯು ಇದೀಗ ಕಾರ್ಮಿಕರು ತಮ್ಮ ಕೆಲಸದ ಪ್ರದೇಶಗಳಿಗೆ ತೆರಳಲು ಅನುವಾಗುವಂತೆ ಉಚಿತ ಸಾರಿಗೆ ಸೇವೆ ಒದಗಿಸಲು ಮುಂದಾಗಿದೆ. ಬೆಂಗಳೂರು ಮಹಾನಗರದಲ್ಲಿ ಈಗಾಗಲೇ ಈ ಉಚಿತ ಸೇವೆಯನ್ನು ಜಾರಿ ಮಾಡಿರುವ ಕಾರ್ಮಿಕ ಇಲಾಖೆಯ ಕಲ್ಯಾಣ ಮಂಡಳಿಯು ಈ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾಗಿದೆ. ಇದನ್ನೂ ಓದಿ:  ಮತಾಂತರ ನಿಷೇಧ ಕಾಯ್ದೆ ಜಾರಿ ಸರಿಯಿದೆ: ಬಿವೈ ರಾಘವೇಂದ್ರ

    ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಅವರ ಪ್ರಯತ್ನ ಫಲವಾಗಿ ಈ ಸಂಬಂಧ ಸಾರಿಗೆ ಇಲಾಖೆ ಜತೆ ಹಲವಾರು ಸುತ್ತಿನ ಮಾತುಕತೆಗಳು ನಡೆದಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಈಗಾಗಲೇ ಈ ಯೋಜನೆಯನ್ನು ಜಾರಿಗೊಳಿಸಿದೆ. ದಿನ ನಿತ್ಯ ಕೂಲಿಗಾಗಿ ತೆರಳುವ ಕಟ್ಟಡ ಕಾರ್ಮಿಕರಿಗೆ ಈ ಯೋಜನೆ ಲಾಭಕಾರಿಯಾಗಿದ್ದು, ಪ್ರತಿ ನಿತ್ಯ ಅವರು ಕೆಲಸ ನಿರ್ವಹಣೆಗೆ ಒಂದು ಪ್ರದೇಶದಿಂದ ಮತ್ತೊಂದು ಪ್ರದೇಶಕ್ಕೆ ತೆರಳಲು ಕನಿಷ್ಠ 150 ರಿಂದ 200 ರೂ. ವ್ಯಯಿಸಬೇಕಾದ ಪರಿಸ್ಥಿತಿ ಇದೆ. ಇದರಿಂದ ಅವರು ಪಡೆಯುವ ಕೂಲಿ ಮೊತ್ತದ ಬಹುಭಾಗವನ್ನು ಸಾರಿಗೆಗೆ ವ್ಯಯಿಸುತ್ತಿದ್ದರು. ಇದನ್ನು ಮನಗಂಡ ಸಚಿವ ಶಿವರಾಂ ಹೆಬ್ಬಾರ್, ಕಟ್ಟಡ ಕಾರ್ಮಿಕರ ಅನುಕೂಲಕ್ಕಾಗಿ ಉಚಿತ ಸಾರಿಗೆ ವ್ಯವಸ್ಥೆಯ ಯೋಜನೆಗೆ ಚಾಲನೆ ನೀಡಿದರು.

    ಕಾರ್ಮಿಕ ಕಲ್ಯಾಣ ಮಂಡಳಿಯ ನೊಂದಾಯಿತ ಕಾರ್ಮಿಕರು ಈ ಯೋಜನೆ ಲಾಭ ಪಡೆಯಬಹುದಾಗಿದೆ ಎಂದು ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ವಿಸ್ತರಣೆಗೆ ಸಿದ್ಧತೆ: ಈಗಾಗಲೇ ಬೆಂಗಳೂರು ಮಹಾನಗರದಲ್ಲಿ ಜಾರಿ ಆಗಿರುವ ಉಚಿತ ಸಾರಿಗೆ ಸೇವೆಯನ್ನು ರಾಜ್ಯದಾದ್ಯಂತ ವಿಸ್ತರಣೆ ಮಾಡಲು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಮುಂದಡಿ ಇರಿಸಿದ್ದು, ಈ ಸಂಬಂಧ ಸಾರಿಗೆ ಇಲಾಖೆ ಜತೆ ಹಲವು ಸುತ್ತಿನ ಮಾತುಕತೆ ನಡೆಸಿದ್ದಾರೆ, ಕೆಎಸ್‌ಆರ್‌ಟಿಸಿ, ಈಶಾನ್ಯ, ವಾಯುವ್ಯ ಸಾರಿಗೆ ಹೀಗೆ ಎಲ್ಲ ಸಾರಿಗೆ ಸಂಸ್ಥೆಗಳೊಂದಿಗೆ ಯೋಜನೆ ತ್ವರಿತ ಜಾರಿಗೆ ಸಂಬಂಧ ಮಹತ್ವದ ಸಭೆಗಳನ್ನು ನಡೆಸಲಾಗಿದೆ.

    ಅಸಾಧ್ಯವೆಂದ ಸಾರಿಗೆ ಸಂಸ್ಥೆಗಳು – ಶ್ರಮಿಕರ ಕೈಹಿಡಿದ ಕಲ್ಯಾಣ ಮಂಡಳಿ: ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಬಸ್ ಸೇವೆ ಜಾರಿಗೆ ಕಾರ್ಮಿಕ ಇಲಾಖೆ ಮುಂದಡಿ ಇರಿಸಿತ್ತು. ಈ ಸಂದರ್ಭದಲ್ಲಿ ಇಲಾಖೆಯು ಶೇ.80ರಷ್ಟನ್ನು ತಾನು ಭರಿಸುವ ಭರವಸೆ ನೀಡಿತ್ತಲ್ಲದೆ, ಇನ್ನುಳಿದ ಶೇ.20ರಷ್ಟನ್ನು ರಿಯಾಯ್ತಿ ನೀಡುವುದು ಅಥವಾ ಸಾರಿಗೆ ಇಲಾಖೆಯೇ ಭರಿಸುವ ಪ್ರಸ್ತಾವನೆಯನ್ನು ಇರಿಸಿತ್ತು. ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸುದೀಪ್ ಕುಟುಂಬ ಸಮೇತರಾಗಿ ಭೇಟಿ

    ಆರಂಭಿಕ ಹಂತದಲ್ಲಿ ಈ ಪ್ರಸ್ತಾವನೆಗೆ ಮೌಖಿಕ ಸಮ್ಮತಿ ಸೂಚಿಸಿದ್ದ ಸಾರಿಗೆ ಇಲಾಖೆ ಇದೀಗ ತನ್ನ ಆರ್ಥಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಶೇ.20 ರಿಯಾಯ್ತಿ ಅಥವಾ ತಾನು ಭರಿಸುವುದು ಅಸಾಧ್ಯ ಎಂದು ತಿಳಿಸಿದೆ. ಹೀಗಾಗಿ ಶ್ರಮಿಕ ವರ್ಗದ ಏಳಿಗೆಯ ಏಕಮೇವ ಉದ್ದೇಶದಿಂದ ಜಾರಿ ಮಾಡಲಾಗುತ್ತಿರುವ ಈ ಯೋಜನೆ ಅನುಷ್ಠಾನದ ಕಡಕ್ ನಿರ್ಧಾರ ಕೈಗೊಂಡಿರುವ ಕಾರ್ಮಿಕ ಸಚಿವರು, ಶೇ.100ರಷ್ಟು ಮೊತ್ತವನ್ನು ಪಾವತಿಸಿಯಾದರೂ ರಾಜ್ಯದಾದ್ಯಂತ ಜಾರಿ ಮಾಡುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಶೀಘ್ರವೇ ರಾಜ್ಯದಾದ್ಯಂತ ಶ್ರಮಿಕ ವರ್ಗಕ್ಕೆ ಉಚಿತ ಬಸ್ ಪಾಸ್ ನೀಡುವ ಮಹತ್ವಾಕಾಂಕ್ಷಿ ಯೋಜನೆ ಜಾರಿಗೆ ವೇದಿಕೆ ಸಿದ್ಧಗೊಂಡಿದೆ.

    ಜಾಗತಿಕ ಸಾಂಕ್ರಾಮಿಕ ಕೋವಿಡ್-19 ಎರಡೂ ಅಲೆಗಳ ಸಂದರ್ಭದಲ್ಲಿ ಸಂಘಟಿತ- ಅಸಂಘಟಿತ ಸೇರಿದಂತೆ ಎಲ್ಲ ಶ್ರಮಿಕವರ್ಗಕ್ಕೆ ಹಲವು ಯೋಜನೆಗಳ ಮೂಲಕ ಸಾಂತ್ವನ ಕ್ರಮಗಳನ್ನು ಕೈಗೊಳ್ಳಲಾಗಿತ್ತು, ಕೋವಿಡ್ ನಂತರ ಕಾರ್ಮಿಕ ಅದಾಲತ್‍ನಂತಹ ಐತಿಹಾಸಿಕ ಕಾರ್ಯಕ್ರಮ ಜಾರಿ ಮಾಡಿ ಇಲಾಖೆಯು ಶ್ರಮಿಕನಿಗೆ ಇನ್ನಷ್ಟು ಹತ್ತಿರವಾಯಿತು, ಇಲಾಖೆಯು ತನ್ನ ಇದೇ ಧೋರಣೆಯನ್ನು ಮುಂದುವರೆಸಿದ್ದು, ಶ್ರಮಿಕರ ಏಳಿಗೆಗೆ ಅನುವಾಗುವಂತೆ ಉಚಿತ ಸಾರಿಗೆ ಸೇವೆ ಯೋಜನೆ ಜಾರಿಗೆ ಮುಂದಡಿ ಇರಿಸಿದೆ. ಇದನ್ನೂ ಓದಿ:   ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಂಡರೆ 25,000 ಬಹುಮಾನ: ಎಎಪಿ

    ಬಿಎಂಟಿಸಿ ಉಚಿತ ಪಾಸ್ ಪಡೆಯುವುದು ಹೇಗೆ?
    ಅರ್ಹತೆ:
    * ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯನ್ನು ನೊಂದಾಯಿಸಿಕೊಂಡಿರಬೇಕು.
    * ಮಂಡಳಿ ಗುರುತಿನ ಚೀಟಿ
    * ಎರಡು ಸ್ಟಾಂಪ್ ಅಳತೆಯ ಭಾವಚಿತ್ರ
    * ಆಧಾರ್ ಕಾರ್ಡ್ ಪ್ರತಿ

    ಎಲ್ಲೆಲ್ಲಿ ಲಭ್ಯ?
    ಕೆಂಪೇಗೌಡ ಬಸ್ ನಿಲ್ದಾಣ, ಶಿವಾಜಿನಗರ, ವೈಟ್‍ಫೀಲ್ಡ್ ಟಿಟಿಎಂಸಿ, ಯಶವಂತಪುರ, ಬನಶಂಕರಿ, ವಿಜಯನಗರ, ಶಾಂತಿನಗರ, ದೊಮ್ಮಲೂರು, ಕೋರಮಂಗಲ ಬಿಎಂಟಿಸಿ ಘಟಕಗಳು, ಕೆಂಗೇರಿ ಟಿಟಿಎಂಸಿ, ಯಲಹಂಕ ಹಳೆಯ ಬಸ್ ನಿಲ್ದಾಣ, ಹೊಸಕೋಟೆ ಬಸ್ ನಿಲ್ದಾಣ, ಸುಮನಹಳ್ಳಿ ಡಿಪೋ, ಕೆ.ಆರ್.ಪುರ, ಹೆಚ್‍ಎಸ್‍ಆರ್ ಲೇಔಟ್, ಹೆಬ್ಬಾಳ ಬಿಎಂಟಿಸಿ ಘಟಕಗಳು, ನಾಗಮಂಗಲ ಡಿಪೋ, ಬಾಗಲಗುಂಟೆಯಲ್ಲಿ ಕಾರ್ಮಿಕ ಇಲಾಖೆ, ಡೈರಿ ಸರ್ಕಲ್ ಬಳಿಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಕಚೇರಿಗಳನ್ನು ದಾಖಲೆಗಳನ್ನು ಸಲ್ಲಿಸಿ ಪಾಸ್‍ಗಳನ್ನು ಪಡೆದುಕೊಳ್ಳಬಹುದು.

  • ಕಾರ್ಮಿಕ ಇಲಾಖೆ ನೀಡಿದ್ದ ಇಮ್ಯೂನಿಟಿ ಬೂಸ್ಟರ್ ಸೇವಿಸಿ 8 ಜನ ಕಾರ್ಮಿಕರು ಅಸ್ವಸ್ಥ

    ಕಾರ್ಮಿಕ ಇಲಾಖೆ ನೀಡಿದ್ದ ಇಮ್ಯೂನಿಟಿ ಬೂಸ್ಟರ್ ಸೇವಿಸಿ 8 ಜನ ಕಾರ್ಮಿಕರು ಅಸ್ವಸ್ಥ

    ಚಿತ್ರದುರ್ಗ: ಕಾರ್ಮಿಕ ಇಲಾಖೆ ನೀಡಿದ್ದ ಇಮ್ಯೂನಿಟಿ ಬೂಸ್ಟರ್ ಸೇವಿಸಿ 8 ಮಂದಿ ಕಾರ್ಮಿಕರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

    immunity-booster

    ಚಿತ್ರದುರ್ಗ ಜಿಲ್ಲೆಯ ಕಾರ್ಮಿಕ ಇಲಾಖೆಯಿಂದ ನೀಡಿದ್ದ ಇಮ್ಯೂನಿಟಿ ಬೂಸ್ಟರ್ ಸೇವಿಸಿದ್ದ ಕಾರ್ಮಿಕ ಕುಮಾರ್ ಸೇರಿದಂತೆ 8 ಜನ ಕಾರ್ಮಿಕರಿಗೆ ಶನಿವಾರ ಮಧ್ಯಾಹ್ನ ವಾಂತಿ, ಬೇಧಿ ಶುರುವಾಗಿ, 8 ಜನ ಕಾರ್ಮಿಕರು ತೀವ್ರ ಅಸ್ವಸ್ಥರಾಗಿದ್ದರು. ಈ ಹಿನ್ನೆಲೆ ಕಾರ್ಮಿಕರು ತಕ್ಷಣ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಕಾರ್ಮಿಕರ ಶಕ್ತಿ ಹೆಚ್ಚಿಸಲು ಸಹಕಾರಿಯಾಗಬೇಕಿದ್ದ ಬೂಸ್ಟರ್‍ನಿಂದಲೇ ಅನಾರೋಗ್ಯಕ್ಕೀಡಾಗಿರುವ ಕಾರ್ಮಿಕರು ಆತಂಕಗೊಂಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಬ್ರದರ್, ಬ್ರದರ್‌ ಅಂತ ಕತ್ತು ಕೊಯ್ಯೋದು: ಜಮೀರ್ ಅಹ್ಮದ್

    immunity-booster

    ಕಾರ್ಮಿಕ ಇಲಾಖೆ ಅಧಿಕಾರಿಗಳು ನೀಡಿರುವ ಇಮ್ಯೂನಿಟಿ ಬೂಸ್ಟರ್ ಬಾಕ್ಸ್‍ನ ಮೇಲಿನ ಪ್ಲಾಸ್ಟಿಕ್ ಮೇಲೆ ಧೂಳಿನ ಮಿಶ್ರಣ ಅಂಟಿರುವ ಹಿನ್ನೆಲೆಯಲ್ಲಿ ಈ ಅಡ್ಡ ಪರಿಣಾಮವಾಗಿದೆ ಎಂದು ಅಸ್ವಸ್ಥ ಕಾರ್ಮಿಕ ಮುಖಂಡ ವೈ.ಕುಮಾರ್ ಆರೋಪಿಸಿದ್ದಾರೆ. ಇದನ್ನೂ ಓದಿ: ಠಾಣೆ ಮೆಟ್ಟಿಲೇರಿದ ಕಸ ಫೈಟ್ – ಪ್ರೊಡ್ಯೂಸರ್ ಪುತ್ರ, ಪತ್ನಿ ವಿರುದ್ಧ FIR

     

  • ಕಾರ್ಮಿಕ ಇಲಾಖೆಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ಕಾರ್ಮಿಕ ಇಲಾಖೆಗೆ ಸಿದ್ದು ಬಜೆಟ್‍ನಲ್ಲಿ ಸಿಕ್ಕಿದ್ದೇನು?

    ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‍ನಲ್ಲಿ ಕಾರ್ಮಿಕ ಇಲಾಖೆಗೆ ಸಿಕ್ಕಿದ್ದೇನು? ಇಲ್ಲಿದೆ ಅದರ ವಿವರ

    ಒಟ್ಟು ಅನುದಾನ – 469 ಕೋಟಿ

    > ಖಾಸಗಿ ಉದ್ಯೋಗಿಗಳ ನಿವೃತ್ತಿ ವಯಸ್ಸು 58 ರಿಂದ 60ಕ್ಕೆ ಏರಿಕೆ.
    > ಖಾಸಗಿ ವಲಯದ ಉದ್ದಿಮೆಗಳಲ್ಲಿ ಸಿ, ಡಿ ದರ್ಜೆ ನೇಮಕಾತಿಯಲ್ಲಿ ಕನ್ನಡಿಗರಿಗೆ ಶೇಕಡ 100ರಷ್ಟು ಮತ್ತು ವಿಕಲಚೇತನರಿಗೆ ಶೇಕಡ 5 ರಷ್ಟು ಆದ್ಯತೆ.
    > ಖಾಸಗಿ ವಲಯದ ಸಂಸ್ಥೆಗಳಲ್ಲಿ ಎಸ್‍ಸಿ, ಎಸ್‍ಟಿ ಕಾರ್ಮಿಕರಿಗೆ ಉದ್ಯೋಗ ದೊರಕಿಸಲು ಆಶಾದೀಪ ಯೋಜನೆ.
    > ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ – 33 ಕೋಟಿ ರೂ.
    > 61 ಹೊಸ ಇಎಸ್‍ಐ ಚಿಕಿತ್ಸಾಲಯ
    > ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ ಇಎಸ್‍ಐ ಆಸ್ಪತ್ರೆಗಳಲ್ಲಿ ಹಾಸಿಗೆ ಸಾಮರ್ಥ್ಯ 100ಕ್ಕೆ ಏರಿಕೆ.
    > ಇಂದಿರಾನಗರದ ಇಎಸ್‍ಐ ಆಸ್ಪತ್ರೆ ಉನ್ನತೀಕರಣ, ಸೂಪರ್ ಸ್ಪೆಷಾಲಿಟಿ ವಿಭಾಗಗಳ ಆರಂಭ.
    > ಎಲ್ಲಾ ಇಎಸ್‍ಐ ಆಸ್ಪತ್ರೆಗಳಲ್ಲಿ ಆಯುಷ್ ವಿಭಾಗ ಆರಂಭ.
    > ಎಲ್ಲಾ ಇಎಸ್‍ಐ ಆಸ್ಪತ್ರೆಗಳಲ್ಲಿ ಡಯಾಲಿಸಿಸ್, ಐಸಿಯು, ಎಂಐಸಿಯು, ಪಿಐಸಿಯು ವಿಭಾಗಳನ್ನ ಹೊರಗುತ್ತಿಗೆ ಮುಖಾಂತರ ನಿರ್ವಹಣೆ
    > ಹಮಾಲರು, ಬೀದಿ ಬದಿ ವ್ಯಾಪಾರಿಗಳು, ಮನೆಗೆಲಸದವರು, ಚಿಂದಿ ಆಯುವವರಿಗೆ 10 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‍ಕಾರ್ಡ್ ಒದಗಿಸುವ ಮೂಲಕ ಅಪಘಾತ ಪರಿಹಾರ, ಭವಿಷ್ಯ ನಿಧಿ ಪಿಂಚಣಿ.
    > ನೊಂದಾಯಿತ ಕಟ್ಟಡ ಕಾರ್ಮಿಕರಿಗೆ ವಸತಿ ಯೋಜನೆ ಸಮಗ್ರ, ಭವಿಷ್ಯ ನಿಧಿ ಪಿಂಚಣಿ ಯೋಜನೆ.
    > ಅಪಾಯಕಾರಿ ಕೈಗಾರಿಕೆಗಳ ಉಸ್ತುವಾರಿ ಕೋಶ ಸ್ಥಾಪನೆ.