Tag: Labour Protest

  • ಇಂದು ಭಾರತ್ ಬಂದ್ – ಬೀದರ್‌ನಲ್ಲಿ ಸಾವಿರಾರು ಕಾರ್ಮಿಕರಿಂದ ಬೃಹತ್ ಪ್ರತಿಭಟನಾ ರ‍್ಯಾಲಿ

    ಇಂದು ಭಾರತ್ ಬಂದ್ – ಬೀದರ್‌ನಲ್ಲಿ ಸಾವಿರಾರು ಕಾರ್ಮಿಕರಿಂದ ಬೃಹತ್ ಪ್ರತಿಭಟನಾ ರ‍್ಯಾಲಿ

    ಬೀದರ್: ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ಬುಧವಾರ ಭಾರತ್ ಬಂದ್‌ಗೆ 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ. ಈ ಹಿನ್ನೆಲೆ ಗಡಿಜಿಲ್ಲೆ ಬೀದರ್‌ನಲ್ಲಿ ಸಾವಿರಾರು ಕಾರ್ಮಿಕರು ಸೇರಿ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ್ದಾರೆ.

    ನಗರದ ಅಂಬೇಡ್ಕರ್ ವೃತದಿಂದ ಡಿಸಿ ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಿದ್ದು, ವಿವಿಧ ಚಾಲಕರು, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಸಾವಿರಾರು ಕಾರ್ಮಿಕರು ಪ್ರತಿಭಟನಾ ರ‍್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಈ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ.ಇದನ್ನೂ ಓದಿ: ಹೊಸ ಗೆಟಪ್‌ನಲ್ಲಿ ಶಿವಣ್ಣನ ಫಸ್ಟ್ ಲುಕ್ ರಿಲೀಸ್

    ಸಾವಿರಾರು ಕಾರ್ಮಿಕರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದು, ಡಿಸಿ ಕಚೇರಿ ಮುಂಭಾಗದಲ್ಲಿ ಧರಣಿ ನಡೆಸಿದ್ದಾರೆ. ಮಹಿಳಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದು, ಧರಣಿ ಬಳಿಕ ಡಿಸಿಗೆ ಮನವಿ ಸಲ್ಲಿಸಲಿದ್ದಾರೆ.

    ಬೇಡಿಕೆಗಳೇನು?
    * ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು
    * ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ತಿರಸ್ಕರಿಸಬೇಕು
    * ಕನಿಷ್ಠ ವೇತನ ಜಾರಿಗೊಳಿಸಬೇಕು
    * ಕೇಂದ್ರ ತಂದಿರುವ ನಿಯಮದಲ್ಲಿ ಸಂಘ ರಚಿಸುವ ಹಕ್ಕು ಕಸಿದುಕೊಳ್ಳಲಾಗಿದೆ
    * ಇದನ್ನು ರಾಜ್ಯ ಸರ್ಕಾರ ವಾಪಸ್ ಪಡೆಯಬೇಕು
    * ಹೊಸ ಸಂಘ ರಚಿಸಲು ಅನುಮತಿ ನೀಡಬೇಕು
    * ಕೆಲಸದ ಅವಧಿಯನ್ನು 12 ಗಂಟೆಯಿಂದ 8ಗಂಟೆಗೆ ಕಡಿತಗೊಳಿಸಬೇಕು
    * ಗುತ್ತಿಗೆ ನೌಕರಿ ರದ್ದುಗೊಳಿಸಿ ಖಾಯಂ ನೌಕರಿ ಜಾರಿಯಾಗಬೇಕು. ಇದನ್ನೂ ಓದಿ: ಡಿಕೆ ಬ್ರದರ್ಸ್ ಹೆಸ್ರಲ್ಲಿ ವಂಚನೆ ಕೇಸ್; ಸಿನಿಮಾ ನಿರ್ಮಾಣಕ್ಕೆ ಪ್ಲ್ಯಾನ್ ಮಾಡಿದ್ದ `ಬಂಗಾರಿ’ ಗೌಡ!

  • ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವೈಟಿಪಿಎಸ್‌ನ 1,500 ಗುತ್ತಿಗೆ ನೌಕರರಿಂದ ಉಗ್ರ ಹೋರಾಟ

    ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ವೈಟಿಪಿಎಸ್‌ನ 1,500 ಗುತ್ತಿಗೆ ನೌಕರರಿಂದ ಉಗ್ರ ಹೋರಾಟ

    ರಾಯಚೂರು: ಜಿಲ್ಲೆಯ ಯರಮರಸ್‌ನಲ್ಲಿರುವ ವೈಟಿಪಿಎಸ್ ವಿದ್ಯುತ್ ಕೇಂದ್ರದ 1,500 ಗುತ್ತಿಗೆ ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕೆಲಸಕ್ಕೆ ಗೈರಾಗಿ ಪ್ರತಿಭಟನೆ ನಡೆಸಿದ್ದಾರೆ.

    ಸಂಬಳ ಹೆಚ್ಚಳ, ಭತ್ತೆ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಟಾವಧಿ ಹೋರಾಟಕ್ಕೆ ಮುಂದಾಗಿದ್ದು, ವಿದ್ಯುತ್ ಕೇಂದ್ರದ 1500 ಗುತ್ತಿಗೆ ಕಾರ್ಮಿಕರು ಪಾಳೆಯ ಪ್ರಕಾರ ಕೆಲಸಕ್ಕೆ ಗೈರಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಹೀಗಾಗಿ ಪ್ರತಿಭಟನೆ ವಿದ್ಯುತ್ ಉತ್ಪಾದನೆ ಮೇಲೆ ಗಂಭೀರ ಪರಿಣಾಮ ಬೀಳಲಿದೆ.ಇದನ್ನೂ ಓದಿ: ಜೋರಾಯ್ತು ಛತ್ರಿ ಪಾಲಿಟಿಕ್ಸ್ – ನನಗೆ ಅಧಿಕಾರದ ಮದ, ಕಮ್ಮಿ ಮಾಡಲಿ : ಡಿಕೆಶಿ ತಿರುಗೇಟು

    ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಭೀತಿ ನಡುವೆಯೇ ವಿದ್ಯುತ್ ಕೇಂದ್ರದ ಕಾರ್ಮಿಕರು ಹೋರಾಟಕ್ಕೆ ಮುಂದಾಗಿದ್ದಾರೆ. ಹೋರಾಟ ಮುಂದುವರೆದರೆ ವಿದ್ಯುತ್ ಉತ್ಪಾದನೆಗೆ ಖಂಡಿತ ಬ್ರೇಕ್ ಬೀಳಲಿದೆ. ವಿದ್ಯುತ್ ಕೇಂದ್ರದ ವಿವಿಧ ವಿಭಾಗಗಳ ಕಾರ್ಮಿಕರು, ನೌಕರರು ಕೆಲಸಕ್ಕೆ ಗೈರಾಗಿದ್ದಾರೆ. ಗುತ್ತಿಗೆ ಪಡೆದಿರುವ ಪವರ್ ಮೇಕ್ ಕಂಪನಿ ವಿರುದ್ಧ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಬಳವನ್ನ ಸರಿಯಾಗಿ ಕೊಡದೇ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

    1,600 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ವೈಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಸದ್ಯ ಕೇವಲ 839 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ. ಈಗಾಗಲೇ ತಾಂತ್ರಿಕ ಸಮಸ್ಯೆ, ದುರಸ್ತಿ ಕಾರಣಕ್ಕೆ ರಾಜ್ಯದಲ್ಲಿ ನಡೆದಿರುವ ಲೋಡ್ ಶೆಡ್ಡಿಂಗ್ ಈ ಹೋರಾಟದಿಂದ ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.

    ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿರುವ ಹೊತ್ತಲ್ಲೇ ಆರ್‌ಟಿಸಿಎಲ್ ಹಾಗೂ ವೈಟಿಪಿಎಸ್ ಗುತ್ತಿಗೆ ಕಾರ್ಮಿಕ ಸಂಘದ ನೇತೃತ್ವದಲ್ಲಿ ಅನಿರ್ಧಿಷ್ಟಾವಧಿ ಹೋರಾಟ ನಡೆದಿದೆ. ಕಾರ್ಮಿಕರು ಹಾಗೂ ನೌಕರರ ಹೋರಾಟದಿಂದ ವಿದ್ಯುತ್ ಉತ್ಪಾದನೆ ಮೇಲೆ ಪರಿಣಾಮ ಸಾಧ್ಯತೆಯಿದೆ.ಇದನ್ನೂ ಓದಿ: ರಾಮನಗರವನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಹೇಗೆ ಮಾಡಬೇಕು ಅನ್ನೋದು ನನಗೆ ಗೊತ್ತಿದೆ: ಡಿಕೆಶಿ