Tag: Ladki Bahin scheme

  • 1 ಗ್ಯಾರಂಟಿಗೆ ಅರ್ಧ ಕೊಕ್ – ಬಡ ಮಹಿಳೆಯರಿಗೆ ಮಾತ್ರ ದುಡ್ಡು

    1 ಗ್ಯಾರಂಟಿಗೆ ಅರ್ಧ ಕೊಕ್ – ಬಡ ಮಹಿಳೆಯರಿಗೆ ಮಾತ್ರ ದುಡ್ಡು

    ಮುಂಬೈ: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಮಹಾರಾಷ್ಟ್ರ (Maharatsra) ಸರ್ಕಾರ ಈಗ ಎಚ್ಚರಿಕೆ ಹೆಜ್ಜೆ ಇಡಲು ಆರಂಭಿಸಿದೆ.

    ಕರ್ನಾಟಕದ ಗೃಹ ಲಕ್ಷ್ಮಿ ಯೋಜನೆ ಮಾದರಿಯಲ್ಲಿ ಮಹಾರಾಷ್ಟ್ರದಲ್ಲಿ ಎಲ್ಲಾ ಮಹಿಳೆಯರಿಗೆ ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್ ಮಾಸಾಶನವನ್ನು 1500 ರೂ. ನೀಡಲಾಗುತ್ತಿತ್ತು. ಇದೀಗ ಈ ಯೋಜನೆಯನ್ನು ಬಡ ಮಹಿಳೆಯರಿಗಷ್ಟೇ ಸೀಮಿತಗೊಳಿಸಲು ಬಿಜೆಪಿ ನೇತೃತ್ವದ ಮಹಾಯುತಿ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇದನ್ನೂ ಓದಿ: ‘ಕಿಸ್ಸಿಕ್’ ಬೆಡಗಿಗೆ ಬೇಡಿಕೆ- ಬಹುಭಾಷೆಗಳಲ್ಲಿ ಶ್ರೀಲೀಲಾ ಬ್ಯುಸಿ

    ಇತ್ತೀಚೆಗೆ ಮಂಡನೆಯಾದ ಬಜೆಟ್‌ನಲ್ಲಿ ಯೋಜನೆಗೆ ಪ್ರಸಕ್ತ ವರ್ಷದ ಅನುದಾನವನ್ನೂ ಕಡಿತಗೊಳಿಸಿತ್ತು. ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದಂತೆ ಮಾಸಿಕ ನೆರವಿನ ಪ್ರಮಾಣವನ್ನು 1500 ರೂ.ನಿಂದ 2100 ರೂ.ಗೆ ಹೆಚ್ಚಿಸುವ ಕುರಿತು ಪ್ರಸ್ತಾಪ ಮಾಡಿರಲಿಲ್ಲ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ ವಿಶ್ವದಾಖಲೆ ನಿರ್ಮಿಸಿ ಭೂಮಿಗೆ ಮರಳಿದ ಸುನಿತಾ

    ಈ ಕುರಿತು ವಿಧಾನಸಭೆಯಲ್ಲಿ ರಾಜ್ಯ ವಿತ್ತ ಸಚಿವ, ಡಿಸಿಎಂ ಅಜಿತ್ ಪವಾರ್ ಮಾತನಾಡಿ, ಕೆಲವು ಶ್ರೀಮಂತರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಗಡಿಬಿಡಿ ಹಾಗೂ ಗೊಂದಲದಿಂದ ಹೀಗಾಗಿದೆ. ಲಡ್ಡಿ ಬಹಿನ್ ಯೋಜನೆಯು ಬಡ ಮಹಿಳೆಯರಿಗಷ್ಟೇ ಸೀಮಿತವಾಗಿದ್ದು, ಇದಕ್ಕೆ ಬೇಕಾದ ಬದಲಾವಣೆಯನ್ನು ಮಾಡುತ್ತೇವೆ ಎಂದರು. ಇದನ್ನೂ ಓದಿ: ನಿಶ್ಚಿತಾರ್ಥದ ಸಂಭ್ರಮದಲ್ಲಿ ‘ದೃಷ್ಟಿಬೊಟ್ಟು’ ಸೀರಿಯಲ್ ನಟಿ

    ಲಡ್ಕಿ ಬಹಿನ್ ಯೋಜನೆಯನ್ನು ನಿಲ್ಲಿಸುವುದಿಲ್ಲ. ಅಲ್ಲದೇ ಈಗಾಗಲೇ ಈ ಯೋಜನೆಯ ಫಲಾನುಭವಿಗಳಾಗಿದ್ದ ಶ್ರೀಮಂತರು ಹಣವನ್ನು ಹಿಂದಿರುಗಿಸಬೇಕಾಗಿಲ್ಲ. ಇನ್ನು ಮುಂದೆ ಬಡ ಮಹಿಳೆಯರು ಮಾತ್ರ ಈ ಯೋಜನೆ ಫಲಾನುಭವಿಗಳಾಗಿರುತ್ತಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಶ್ರೀಗಂಧ ಕಳ್ಳತನ – 41 ಕೆಜಿ ಶ್ರೀಗಂಧ ತುಂಡು ಸಮೇತ ಮೂವರ ಬಂಧನ

    ಸಾಮಾಜಿಕ ನ್ಯಾಯ ಮತ್ತು ಬುಡಕಟ್ಟು ಕಲ್ಯಾಣ ಇಲಾಖೆಯಿಂದ 10 ಸಾವಿರ ಕೋಟಿ ರೂ. ಲಡ್ಕಿ ಬಹಿನ್ ಯೋಜನೆಗೆ ಬಳಸಲಾಗುತ್ತಿದೆ ಎಂಬ ಆರೋಪದ ಬಗ್ಗೆ ಅವರು ಪ್ರತಿಕ್ರಿಯಿಸಿದರು. ವಾರ್ಷಿಕ ಯೋಜನೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಶೇ.40ರಷ್ಟು ನಿಧಿಯನ್ನು ಯೋಜನೆಗೆ ಬಳಸುತ್ತಿದೆ. ಲಡ್ಕಿ ಬಹಿನ್‌ಗೆ ಬಳಸಲಾದ ಹಣವನ್ನು ಹೊರತು ಪಡಿಸಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ನಿಧಿಯಲ್ಲಿ ಶೇ.18 ಹಾಗೂ 19ರಷ್ಟು ಏರಿಕೆಯಾಗಿದೆ ಎಂದು ಹೇಳಿದರು.

  • 25 ಲಕ್ಷ ಉದ್ಯೋಗಾವಕಾಶ, 1 ಟ್ರಿಲಿಯನ್ ಡಾಲರ್‌ ಆರ್ಥಿಕ ಗುರಿ, ಉದ್ಯಮಿಗಳಿಗೆ ಬೆಂಬಲ – ಮಹಾರಾಷ್ಟ್ರಕ್ಕೆ ಬಿಜೆಪಿ 25 ಗ್ಯಾರಂಟಿ

    25 ಲಕ್ಷ ಉದ್ಯೋಗಾವಕಾಶ, 1 ಟ್ರಿಲಿಯನ್ ಡಾಲರ್‌ ಆರ್ಥಿಕ ಗುರಿ, ಉದ್ಯಮಿಗಳಿಗೆ ಬೆಂಬಲ – ಮಹಾರಾಷ್ಟ್ರಕ್ಕೆ ಬಿಜೆಪಿ 25 ಗ್ಯಾರಂಟಿ

    ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ (Maharashtra Assembly Election) ಹಿನ್ನೆಲೆ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ಪ್ರಣಾಳಿಕೆ (Manifesto) ಬಿಡುಗಡೆ ಮಾಡಿದ್ದು, 25 ಭರವಸೆಗಳನ್ನು ನೀಡಿದೆ.

    ಮುಂಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಗೃಹಸಚಿವ ಅಮಿತ್‌ ಶಾ (Amit Shah), ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ರಾಜ್ಯ ಬಿಜೆಪಿ ಮುಖ್ಯಸ್ಥ ಚಂದ್ರಶೇಖರ್ ಬವಾಂಕುಲೆ ಸೇರಿದಂತೆ ಪಕ್ಷದ ಹಿರಿಯ ನಾಯಕರು ʻಸಂಕಲ್ಪ ಪತ್ರʼ ಬಿಡುಗಡೆಗೊಳಿಸಿದರು. ಮುಂಬೈ ಬಿಜೆಪಿ ಅಧ್ಯಕ್ಷ ಆಶಿಶ್ ಶೇಲಾರ್ ಮತ್ತು ಕೇಂದ್ರ ಸಚಿವ ಪಿಯೂಷ್ ಗೋಯಲ್ ಉಪಸ್ಥಿತರಿದ್ದರು. ಇದನ್ನೂ ಓದಿ: ಮಹಿಳೆಯರಿಗೆ 3,000 ರೂ., ನಿರುದ್ಯೋಗ ಯುವಕ, ಯುವತಿಯರಿಗೆ 4,000 ರೂ. ಭತ್ಯೆ; ಕಾಂಗ್ರೆಸ್‌ ʻಮಹಾʼ ಗ್ಯಾರಂಟಿ!

    ಏನೇನು ಭರವಸೆ?
    ಮುಂದಿನ 5 ವರ್ಷಗಳಲ್ಲಿ ರಾಜ್ಯದ ಯುವಜನತೆಗೆ 25 ಲಕ್ಷ ಉದ್ಯೋಗ ನೀಡುವುದಾಗಿ ಬಿಜೆಪಿ ಭರವಸೆ ನೀಡಿದೆ. ಅಲ್ಲದೇ ರೈತರ ಸಾಲ ಮನ್ನಾ ಜೊತೆಗೆ ʻಲಡ್ಕಿ ಬೆಹನ್ʼ ಯೋಜನಾ ಭತ್ಯೆಯನ್ನು 1,500 ರಿಂದ 2,100ಕ್ಕೆ ಹೆಚ್ಚಿಸುವುದು ಸೇರಿದಂತೆ 25 ಭರವಸೆಗಳನ್ನು ಈಡೇರಿಸುವುದಾಗಿ ಮೈತ್ರಿಕೂಟವು ಪ್ರತಿಜ್ಞೆ ಮಾಡಿದೆ. ಮುಖ್ಯವಾಗಿ ʻಮಿಷನ್‌ ಒಲಿಂಪಿಕ್ಸ್‌ 36ʼ ನಮ್ಮ ಗುರಿ. ಅಲ್ಲದೇ 1 ಟ್ರೆಲಿಯನ್‌ ಡಾಲರ್‌ ಆರ್ಥಿಕತೆಯ ಗುರಿ ಸಾಧಿಸುವುದು, ನಾಗ್ಪುರ, ಪುಣೆ, ನಾಸಿಕ್‌ನಂತರ ನಗರಗಳನ್ನು ಏರೋಸ್ಪೇಸ್‌ ಹಬ್‌ ಮಾಡುವುದು, 50 ಲಕ್ಷ ಮಹಿಳೆಯರನ್ನು ಲಖ್ಪತಿ ದೀದಿಗಳನ್ನಾಗಿ ಮಾಡುವುದು, ಸರ್ಕಾರಿ ಶಾಲೆಗಳಲ್ಲಿ AI ತರಬೇತಿ, ಕೌಶಲ್ಯ ಗಣತಿ, ಉದ್ಯಮಿಗಳಿಗೆ ಬೆಂಬಲ, ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವುದು. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡುವುದು ನಮ್ಮ ಗುರಿ. ಈ‌ ಭರವಸೆಗಳನ್ನು ಸರ್ಕಾರ ರಚನೆಯಾದ 100 ದಿನಗಳಲ್ಲಿ ಈಡೇರಿಸಲಾಗುತ್ತದೆ ಎಂದು ಘೋಷಿಸಿದ್ದಾರೆ.

    ಪ್ರಣಾಳಿಕೆ ಬಿಡುಗಡೆಗೊಳಿಸಿದ ಬಳಿಕ ಮಾತನಾಡಿದ ಅಮಿತ್‌ ಶಾ, ಬಿಜೆಪಿ ಪ್ರಣಾಳಿಕೆಯು ಮಹಾರಾಷ್ಟ್ರದ ಜನತೆಯ ಆಕಾಂಕ್ಷೆಗಳ ನಿಜವಾದ ಪ್ರತಿಬಿಂಬವಾಗಿದೆ. ಮಹಾರಾಷ್ಟ್ರ ಸಾಮಾಜಿಕ ಸುಧಾರಣೆಗೆ ದಾರಿ ಮಾಡಿಕೊಟ್ಟಿದೆ. ಈ ರಾಜ್ಯದ ಆಕಾಂಕ್ಷೆಗಳು ಪ್ರಣಾಳಿಕೆಯಲ್ಲಿ ಪ್ರತಿಫಲಿಸುತ್ತದೆ. ಛತ್ರಪತಿ ಶಿವಾಜಿ ಮಹರಾಜ್‌ ಕೂಡ ಇಲ್ಲಿಯೇ ತಮ್ಮ ಪ್ರಯಾಣ ಆರಂಭಿಸಿದರು ಎಂದು ಸ್ಮರಿಸಿದ್ದಾರೆ.

    ಪ್ರಣಾಳಿಕೆ ಬಿಡುಗಡೆ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿ, ಮಹಾರಾಷ್ಟ್ರದ ಜನತೆ ಬಿಜೆಪಿ, ಮಹಾಯುತಿ ಮೈತ್ರಿಯನ್ನು ನಂಬುತ್ತಾರೆ. ನಾವು ಘೋಷಣೆ ಮಾಡಿರುವ 25 ಪ್ರಮುಖ ಭರವಸೆಗಳಲ್ಲಿ ʻಲಡ್ಕಿ ಬೆಹೆನ್ʼ, ಕೃಷಿ ಸಾಲ ಮನ್ನಾ ಯೋಜನೆಗಳೂ ಸೇರಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂಗಳ ಮೇಲೆ ದಾಳಿ – ಕೆನಡಾ ರಾಯಭಾರ ಕಚೇರಿ ಎದುರು ಹಿಂದೂ ಸಿಖ್ ಗ್ಲೋಬಲ್ ಫೋರಂ ಪ್ರತಿಭಟನೆ

    ಮಹಾರಾಷ್ಟ್ರದ 288 ಕ್ಷೇತ್ರಗಳಿಗೆ ಇದೇ ನವೆಂಬರ್‌ 20 ರಂದು ಚುನಾವಣೆ ನಡೆಯಲಿದ್ದು, ನವೆಂಬರ್‌ 23ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಪೆರೋಲ್ ಮೇಲೆ ಹೊರಬಂದಿದ್ದ ಕೊಲೆ ಅಪರಾಧಿಗೆ ಗುಂಡಿಕ್ಕಿ ಹತ್ಯೆ – ಗ್ಯಾಂಗ್‌ಸ್ಟರ್‌ ಅರ್ಷದೀಪ್ ಸಹಚರರ ಬಂಧನ