Tag: Lahari Films

  • ಇಂದು ಕಿಚ್ಚ ಸುದೀಪ್ ಕುಟುಂಬದ ಕುಡಿ ಸಂಚಿತ್ ನಟನೆಯ ಟೀಸರ್ ರಿಲೀಸ್

    ಇಂದು ಕಿಚ್ಚ ಸುದೀಪ್ ಕುಟುಂಬದ ಕುಡಿ ಸಂಚಿತ್ ನಟನೆಯ ಟೀಸರ್ ರಿಲೀಸ್

    ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ (Kiccha Sudeep) ಅವರ ಸಹೋದರಿಯ ಪುತ್ರ ಸಂಚಿತ್ (Sanchit Sanjeev) ನಟಿಸಿ, ನಿರ್ದೇಶನ ಮಾಡುತ್ತಿರುವ ಸಿನಿಮಾದ ಟೀಸರ್ (Teaser) ಇಂದು ಬೆಂಗಳೂರಿನಲ್ಲಿ ರಿಲೀಸ್ ಆಗುತ್ತಿದೆ. ಈ ವರ್ಣರಂಜಿತ ಸಮಾರಂಭಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್, ಶಿವರಾಜ್ ಕುಮಾರ್ ಮತ್ತು ಕಿಚ್ಚ ಸುದೀಪ್ ಅತಿಥಿಗಳಾಗಿ ಆಗಮಿಸಲಿದ್ದಾರೆ. ಸಂಜೆ 7ಕ್ಕೆ ಟೀಸರ್ ಬಿಡುಗಡೆ ಆಗಲಿದೆ.

    ಸಕಲ ತಯಾರಿಯೊಂದಿಗೆ ಸಂಚಿತ್ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ವಿಶೇಷ ಅಂದ್ರೆ ತಾವು ನಟಿಸುವ ಚೊಚ್ಚಲ ಚಿತ್ರವನ್ನು ತಾವೇ ನಿರ್ದೇಶನ ಕೂಡ ಮಾಡುತ್ತಿದ್ದಾರೆ. ಕಿಚ್ಚ ಕ್ರಿಯೇಷನ್ಸ್ ಬ್ಯಾನರ್ ಜೊತೆ ಕೆ.ಪಿ ಶ್ರೀಕಾಂತ್, ಮನೋಹರ್ ನಾಯ್ಡು ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಶ್ರೀಕಾಂತ್ ಮಾಹಿತಿ ನೀಡಿದ್ದರು. ಸಂಚಿತ್ ಸಿನಿಮಾ ಬಗ್ಗೆ ಅಧಿಕೃತವಾಗಿ ಜೂನ್ 14ರಂದು ಘೋಷಣೆ ಮಾಡಿದ್ದರು.

    ತಮ್ಮ ಮೊದಲ ಸಿನಿಮಾದಲ್ಲೇ ನಟನೆಯ ಜೊತೆ ನಿರ್ದೇಶನ (Direction) ಕೂಡ ಸಂಚಿತ್ ಮಾಡ್ತಿದ್ದಾರೆ. ಈ ಮೂಲಕ ಚಿತ್ರರಂಗಕ್ಕೆ ಯುವನಟ ಸಂಚಿತ್ ಹೊಸ ಹೆಜ್ಜೆ ಇಟ್ಟಿದ್ದಾರೆ. ಇದೊಂದು ಕ್ರೈಂ ಡ್ರಾಮಾ ಆಧರಿಸಿದ ಸಿನಿಮಾವಾಗಿದ್ದು, ತಂದೆ-ಮಗನ ಬಾಂಧವ್ಯವನ್ನು ಸಾರುವ ಕಥೆಯನ್ನು ಈ ಚಿತ್ರದ ಮೂಲಕ ತೋರಿಸಲಿದ್ದಾರೆ. ಇದನ್ನೂ ಓದಿ:Exclusive: ಅರ್ಜುನ್ ಸರ್ಜಾ ನಿರ್ದೇಶನದ ಚಿತ್ರದಲ್ಲಿ ಉಪ್ಪಿ ಅಣ್ಣನ ಮಗ ನಟಿಸುತ್ತಾರಾ? ನಿರಂಜನ್ ಸ್ಪಷ್ಟನೆ

    ಲಹರಿ ಸಂಸ್ಥೆಯ (Lahari Films) ಮನೋಹರ್ ನಾಯ್ಡು, ವೀನಸ್ ಮೂವಿಸ್‌ನ ಕೆ. ಪಿ ಶ್ರೀಕಾಂತ್ ಈಗಾಗಲೇ 2 ಸಿನಿಮಾ ನಿರ್ಮಿಸ್ತಿದ್ದಾರೆ. ಉಪೇಂದ್ರ ನಟನೆಯ ‘ಯುಐ’ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಇನ್ನು ಸೆಟ್ಟೇರಿ ನಿಂತೇ ಹೋಗಿದ್ದ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಮರುಜೀವ ಕೊಟ್ಟಿದ್ದಾರೆ. ನಂತರ ಸಂಚಿತ್ ನಟನೆಯ ಚಿತ್ರಕ್ಕೆ ಈ ಜೋಡಿ ಬಂಡವಾಳ ಹೂಡಿದೆ.

    ಸಂಚಿತ್ ಸಂಜೀವ್ ನಿರ್ದೇಶನ ಹಾಗೂ ನಾಯಕನಾದ ಜಿಮ್ಮಿ (Jimmy) ಚಿತ್ರದ ಟೀಸರ್ ಇಂದು ಅನಾವರಣವಾಗಲಿದೆ. ಇದಾದ ಎರಡು ದಿನಕ್ಕೆ ಕಿಚ್ಚ 46 ಧಗಧಗಿಸಲಿದೆ. ಆ ದಿನವೇ ಕಿಚ್ಚನ ಹೊಸ ಸಿನಿಮಾದ ವಿವರಗಳು ಹೊರ ಬೀಳಲಿವೆ. ಟೈಟಲ್ ಹೇಳ್ತಾರಾ? ರಿಲೀಸ್ ಡೇಟ್ ಅನೌನ್ಸ್ ಮಾಡ್ತಾರಾ? ಟೀಸರ್ ಬಿಡ್ತಾರಾ? ಯಾವುದೂ ಗೊತ್ತಿಲ್ಲ. ಏನಾದರಾಗಲಿ. ಕೊನೆಗೂ ಸುದೀಪ್ ಮತ್ತೆ ಅಖಾಡಕ್ಕೆ ಇಳಿದರಲ್ಲ ಅಷ್ಟು ಸಾಕು ಅಂತಿದ್ದಾರೆ ಅಭಿಮಾನಿ ಬಳಗ.

    ಸುದೀಪ್ ಕೊನೆಗೂ ಸಿಹಿ ಸುದ್ದಿ ಕೊಟ್ಟಿದ್ದಾರೆ. ನಲವತ್ತಾರನೇ ಸಿನಿಮಾದ ಬಗ್ಗೆ ಅಪ್‌ಡೇಟ್ ಕೊಡಲು ಒಂದು ದಿನಾಂಕ ಫೀಕ್ಸ್ ಮಾಡಿದ್ದಾರೆ. ಮೂರು ಚಿತ್ರಗಳನ್ನು ಒಪ್ಪಿಕೊಂಡಿರುವ ಕಿಚ್ಚ ಮೊದಲಿಗೆ ಇದಕ್ಕೆ ಕ್ಯಾಮೆರಾ ಮುಂದೆ ನಿಲ್ಲಲಿದ್ದಾರೆ. ಯಾವುದು ಸಿನಿಮಾ ? ರಿಲೀಸ್ ಯಾವಾಗ ? ಟೈಟಲ್ ಏನು ? ಕಿಚ್ಚನ ಮೆರವಣಿಗೆ ಇಲ್ಲಿದೆ..

    ವಿಕ್ರಾಂತ್ ರೋಣ. ಅದೇ ಕೊನೆ. ಮತ್ತೆ ಬಣ್ಣ ಹಚ್ಚಿಲ್ಲ ಸುದೀಪ್. ಅದು ಬಿಟ್ಟು ಇದು ಬಿಟ್ಟು ಮತ್ಯಾವುದು? ಫ್ಯಾನ್ಸ್ ಪ್ರಶ್ನೆ ಕೇಳುತ್ತಿದ್ದರು. ಸುದೀಪ್ ಮಾತ್ರ ಮೌನಂ ಶರಣ ಗಚ್ಚಾಮಿ. ಕೆಲವು ದಿನಗಳ ಹಿಂದೆ ಕೊನೆಗೂ ಸಿನಿಮಾ ವಿಷಯ ಹರವಿಟ್ಟಿದ್ದರು. ಮೂರು ಚಿತ್ರಗಳನ್ನು ಒಪ್ಪಿಕೊಂಡಿದ್ದು, ಅದರಲ್ಲಿ ಮೊದಲಿಗೆ ನಟಿಸುವ ಸಿನಿಮಾದ ವಿವರ ಹೇಳುತ್ತೇನೆ ಎಂದಿದ್ದರು. ಅದಕ್ಕೀಗ ಡೇಟ್ ಫಿಕ್ಸ್ ಮಾಡಿದ್ದಾರೆ. ಇದೇ 27ರಂದು ಟ್ವೀಟರ್‌ನಲ್ಲಿ ಸಕಲ ಮಾಹಿತಿ ಕೊಡಲಿದ್ದಾರೆ.

  • ವಿನಯ್ ರಾಜಕುಮಾರ್ ಅಭಿನಯದ ‘ಗ್ರಾಮಾಯಣ’ ಚಿತ್ರಕ್ಕೆ ಚಾಲನೆ

    ವಿನಯ್ ರಾಜಕುಮಾರ್ ಅಭಿನಯದ ‘ಗ್ರಾಮಾಯಣ’ ಚಿತ್ರಕ್ಕೆ ಚಾಲನೆ

    ಜಿ.ಮನೋಹರನ್ (Lahari Films) ಹಾಗೂ ಕೆ.ಪಿ ಶ್ರೀಕಾಂತ್ ನಿರ್ಮಾಣದ, ದೇವನೂರು ಚಂದ್ರು ನಿರ್ದೇಶನದ ಹಾಗೂ ವಿನಯ್ ರಾಜಕುಮಾರ್ (Vinay Rajkumar) ನಾಯಕರಾಗಿ ನಟಿಸುತ್ತಿರುವ ‘ಗ್ರಾಮಾಯಣ’ (Gramayana) ಚಿತ್ರದ ಮುಹೂರ್ತ (Muhurta) ಸಮಾರಂಭ ಇತ್ತೀಚಿಗೆ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ರಿಯಲ್ ಸ್ಟಾರ್ ಉಪೇಂದ್ರ ಆರಂಭ ಫಲಕ ತೋರಿದರು. ಅಶ್ವಿನಿ ಪುನೀತ್ ರಾಜಕುಮಾರ್ ಕ್ಯಾಮೆರಾ ಚಾಲನೆ ಮಾಡಿದರು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ದುನಿಯಾ ವಿಜಯ್, ಧ್ರುವ ಸರ್ಜಾ, ರಾಜ್ ಬಿ ಶೆಟ್ಟಿ, ಆರ್ ಚಂದ್ರು, ಪವನ್ ಒಡೆಯರ್, ಸಿಂಪಲ್ ಸುನಿ ಸೇರಿದಂತೆ ಅನೇಕ ಗಣ್ಯರು ಮುಹೂರ್ತ ಸಮಾರಂಭಕ್ಕೆ ಆಗಮಿಸಿ ಶುಭ ಕೋರಿದರು.

    ಗ್ರಾಮಾಯಣ ಇದು ಗ್ರಾಮದಲ್ಲೇ ನಡೆಯುವ ಕಥೆ.  ಸಿಂಪಲ್ ಸುನಿ ಅವರ ಮದುವೆ ಸಂದರ್ಭದಲ್ಲಿ ವಿನಯ್ ರಾಜಕುಮಾರ್ ಅವರನ್ನು ಭೇಟಿ ಮಾಡಿದ್ದೆ. ಅವರನ್ನು ನೋಡಿದ ಕೂಡಲೆ ಈ ಕಥೆಗೆ ಇವರೆ ಸೂಕ್ತ ನಾಯಕ ಅಂದುಕೊಂಡೆ. ಅವರು ಕಥೆ ಒಪ್ಪಿದರು. ನೀವು ಈವರೆಗೂ ನೋಡಿರದ ವಿನಯ್ ರಾಜಕುಮಾರ್ ಅವರನ್ನು ಈ ಚಿತ್ರದಲ್ಲಿ ನೋಡಬಹುದು. ಚಿಕ್ಕಮಗಳೂರು, ದೇವರಾಯಸಮುದ್ರ, ಅರಸಿಕೆರೆ, ಕಡೂರು ಸುತ್ತಮುತ್ತ ಚಿತ್ರೀಕರಣ ಮಾಡಲಿದ್ದೇವೆ. ಯಶಸ್ವಿನಿ ಅಂಚಲ್  ಛಾಯಾಗ್ರಹಣ ಹಾಗೂ ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ. ಅಚ್ಯುತಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಅರುಣ್ ಸಾಗರ್, ಅಪರ್ಣ(ನಿರೂಪಕಿ), ಸೀತಾ ಕೋಟೆ, ಶ್ರೀನಿವಾಸ ಪ್ರಭು, ಮಂಜುನಾಥ್ ಹೆಗೆಡೆ ಮುಂತಾದವರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ನಿರ್ಮಾಪಕರಾದ ಮನೋಹರನ್ ಹಾಗೂ ಕೆ.ಪಿ. ಶ್ರೀಕಾಂತ್ ಅವರಿಗೆ ಧನ್ಯವಾದ ಎಂದರು ನಿರ್ದೇಶಕ ದೇವನೂರು ಚಂದ್ರು.

    ಈಗಿನ ಯುವಕರ ದೃಷ್ಟಿಕೋನದಲ್ಲಿ ಹಳ್ಳಿ ಹೇಗೆ ಕಾಣಿಸುತ್ತದೆ ಎನ್ನುವುದೇ “ಗ್ರಾಮಾಯಣ. ನಾನು ಈವರೆಗೂ ಮಾಡಿರದ ಪಾತ್ರವಿದು. ಚಂದ್ರು ಅವರು ಕಥೆ ಚೆನ್ನಾಗಿ ಮಾಡಿಕೊಂಡಿದ್ದಾರೆ. ನಿರ್ಮಾಪಕರಿಗೆ ನನ್ನ ಧನ್ಯವಾದಗಳು ಎಂದರು ವಿನಯ್ ರಾಜಕುಮಾರ್.  ಇದನ್ನೂ ಓದಿ:ಮುಂಬೈನಿಂದ ಸ್ಯಾಂಡಲ್ ವುಡ್ ಗೆ ಬಂದ ಪ್ರಾಚಿ ಶರ್ಮಾ

    ಯುಐ ಚಿತ್ರದ ಸೆಟ್ ನಲ್ಲಿ ಗ್ರಾಮಾಯಣ ಚಿತ್ರದ ಟೀಸರ್ ನೋಡಿದೆ. ಟೀಸರ್ ಗೆ ತುಂಬಾ ಪಾಸಿಟಿವ್ ಕಾಮೆಂಟ್ಸ್ ಗಳು ಬಂದಿದ್ದವು. ಇಂತಹ ಒಳ್ಳೆಯ ಚಿತ್ರ ನಿಲ್ಲಬಾರದು ಎಂದು ಲಹರಿ ಫಿಲಂಸ್ ಜೊತೆ ಸೇರಿ ನಿರ್ಮಾಣ ಮಾಡುತ್ತಿದ್ದೇನೆ ಎನ್ನುತ್ತಾರೆ ಕೆ.ಪಿ.ಶ್ರೀಕಾಂತ್.

    ನಾನು ಗ್ರಾಮಾಯಣದ ಹಾಡೊಂದು ಕೇಳಿ ತುಂಬಾ ಖುಷಿಪಟ್ಟಿದೆ. ಈಗ ನಮ್ಮ ಅಣ್ಣ ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಸೇರಿ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರ ಚೆನ್ನಾಗಿ ಬರಲಿದೆ. ನಿಮ್ಮೆಲ್ಲರ ಪ್ರೋತ್ಸಾವಿರಲಿ ಎಂದರು ಲಹರಿ ವೇಲು. ಸಹ ನಿರ್ಮಾಪಕ ನವೀನ್ ಮನೋಹರನ್, ಕಲಾವಿದರಾದ ಅರುಣ್ ಸಾಗರ್, ಗೋಪಾಲಕೃಷ್ಣ ದೇಶಪಾಂಡೆ ಗ್ರಾಮಾಯಣದ ಕುರಿತು ಮಾತನಾಡಿದರು.  ಮುಹೂರ್ತ ಸಮಾರಂಭಕ್ಕೆ ಆಗಮಿಸಿದ್ದ ಅಷ್ಟು ಗಣ್ಯರು ಗ್ರಾಮಾಯಣ, ರಾಮಾಯಣ ದಷ್ಟೇ ಕೀರ್ತಿ ಪಡೆಯಲಿ ಎಂದು ಹಾರೈಸಿದರು.

  • Special- ಯುಐ ಗ್ಲೋಬಲ್ ಸಿನಿಮಾ : ಏನಿದೆ ಅದರಲ್ಲಿ ವಿಶೇಷ?

    Special- ಯುಐ ಗ್ಲೋಬಲ್ ಸಿನಿಮಾ : ಏನಿದೆ ಅದರಲ್ಲಿ ವಿಶೇಷ?

    ಕನ್ನಡದ ಮತ್ತೊಂದು ಸಿನಿಮಾ ವಿಶ್ವ ಪರ್ಯಟನೆಗೆ ಸಜ್ಜಾಗಿದೆ. ಕನ್ನಡದ ಮತ್ತೊಂದು ಸಿನಿಮಾ ಸಿನಿ ಪ್ರೇಕ್ಷಕರನ್ನು ಬೆಚ್ಚಿ ಬೀಳಿಸಲಿದೆ. ಅದು ಬೇರಾವುದೂ ಅಲ್ಲ. ಒನ್ ಆನ್ ಓನ್ಲಿ ಉಪ್ಪಿ ನಿರ್ದೇಶನ ಮಾಡಿ, ನಟಿಸುತ್ತಿರುವ ಯುಐ (UI). ಯಾವಾಗ ಜನರು ಟೈಟಲ್ ಕೇಳಿದರೋ ತಲೆ ಕೆಡಿಸಿಕೊಂಡರು. ಅದಕ್ಕೆ ಉಪ್ಪಿ (Upendra) ಉತ್ತರ ಕೊಡುತ್ತಾರೆ. ಆದರೆ ಅದು ಸಿನಿಮಾ ಬಿಡುಗಡೆಯಾದ ಮೇಲೆ. ಹಾಗಿದ್ದರೆ ಏನು ನಡೆಯುತ್ತಿದೆ ಯುಐ ಅಡ್ಡದಲ್ಲಿ? ಏನು ಸ್ಪೆಶಾಲಿಟಿ ಹೊಂದಿದೆ ಈ ಸಿನಿಮಾ? ಇದನ್ನು ಗ್ಲೋಬಲ್ ಸಿನಿಮಾ ಎಂದಿದ್ದೇಕೆ ರಿಯಲ್‌ಸ್ಟಾರ್? ಆ ಕಥನ ನಿಮ್ಮ ಮುಂದೆ.

    ಉಪ್ಪಿಇದೊಂದು ಹೆಸರು ಕನ್ನಡಿಗರಿಗೆ ಮಾತ್ರ ಅಲ್ಲ, ದಕ್ಷಿಣ ಭಾರತದ ಜನರಲ್ಲಿ ಕಿಚ್ಚು ಮೂಡಿಸುತ್ತದೆ. ಹುಚ್ಚು ಹಿಡಿಸುತ್ತದೆ. ಅದರಲ್ಲೂ ಇವರೇ ನಿರ್ದೇಶಕ ಅದರಂತೂ ಕೇಳಬೇಕೆ? ಇಲ್ಲಿವರೆಗೆ ಉಪ್ಪಿ ನಿರ್ದೇಶನ ಮಾಡಿದ ಸಿನಿಮಾಗಳದ್ದು ಒಂದು ತೂಕವಾದರೆ, ಈ ಯುಐ ಇದೆಯಲ್ಲ ಅದು ಭೂಮಿ ತೂಕ. ಭರ್ತಿ ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಹಲವಾರು ಗ್ರೇಟ್ ಸ್ಪೆಶಾಲಿಟಿಗಳಿವೆ. ಭಾರತದಲ್ಲೇ ಮೊದಲ ಬಾರಿ ಎನ್ನುವಂಥ ವಿಷಯ ಹಾಗೂ ತಾಂತ್ರಿಕ ಕೆಲಸಗಳಿವೆ. ಅದಕ್ಕಾಗಿಯೇ ಬೆಂಗಳೂರು ಸಮೀಪ ಹತ್ತು ಎಕರೆ ಜಾಗದಲ್ಲಿ ಹಿಂದೆಂದೂ ಕಾಣದಂಥ ಸೆಟ್ ಹಾಕಲಾಗಿದೆ. ಇದನ್ನೂ ಓದಿ:ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    ಉಪ್ಪಿ ನಿರ್ದೇಶನ ಅಂದರೆ ಅಲ್ಲಿ ಗ್ರಾಫಿಕ್ಸ್ ಗೆ ಕೆಲಸ ಅಷ್ಟೇನೂ ಇರುತ್ತಿರಲಿಲ್ಲ. ಆದರೆ ಈ ಬಾರಿ ಉಪ್ಪಿ ಹಳೇ ಸ್ಟೈಲ್ ಮರೆತು ಅತ್ಯದ್ಭುತ ನಯಾ ತಂತ್ರಜ್ಞಾನಕ್ಕೆ ಕೈ ಹಾಕಿದ್ದಾರೆ. ಕಂಪ್ಯೂಟರೈಸ್ಡ್ ಕ್ಯಾಮೆರಾ ಬಳಸುತ್ತಿದ್ದಾರೆ. ಮೊಕೊ ಬೋಟ್ ಹೆಸರಿನ ಈ ಕ್ಯಾಮೆರಾದಲ್ಲಿ ಇಲ್ಲಿವರೆಗೆ ಭಾರತದ ಯಾವುದೇ ಸಿನಿಮಾ ಚಿತ್ರೀಕರಣ ಮಾಡಿಲ್ಲ. ಅದರ ಜೊತೆಗೆ ವರ್ಚುವಲ್ ಗ್ರಾಫಿಕ್ಸ್ ಕೂಡ ಕೆಲಸ ಮಾಡಲಿದೆ. ಕೆಲವೊಂದು ತಾಂತ್ರಿಕ ವಿಷಯ ಈಗ ಅರ್ಥವಾಗುವುದಿಲ್ಲ. ಅದನ್ನು ಸಿನಿಮಾ ನೋಡಿದ ಮೇಲೆಯೇ ಅನುಭವಿಸಬೇಕು. ಈ ಹೊಸ ತಂತ್ರಜ್ಞಾನಕ್ಕೆ ನಿರ್ಮಾಪಕರಲ್ಲಿ ಒಬ್ಬರಾದ ನವೀನ್ ಮನೋಹರ್ ನಾಯ್ಡು ಬರೀ ಹೆಗಲು ಕೊಟ್ಟಿಲ್ಲ ಜೀವವನ್ನೇ ತೇಯುತ್ತಿದ್ದಾರೆ. ಉಪ್ಪಿ ಇದಕ್ಕೆ ಹೆಮ್ಮೆ ಪಡುತ್ತಾರೆ.

    `ಇದೊಂದು ಗ್ಲೋಬಲ್ ಸಿನಿಮಾ’ ಎನ್ನುತ್ತಾರೆ ಉಪ್ಪಿ. ಯಾರೇ ನೋಡಿದರೂ ಇದನ್ನು ಒಪ್ಪಿಕೊಳ್ಳಬೇಕು. ಹಾಗಿರುತ್ತದೆ ಕತೆ ಹಾಗೂ ಮೇಕಿಂಗ್ ಎನ್ನುವುದು ಇವರ ಷರಾ. ಇದುವರೆಗೆ ಮನಸಿಗೆ ಸಂಬಂಧಿಸಿದ ವಿಷಯ ಹೆಣೆಯುತ್ತಿದ್ದ ಉಪ್ಪಿ ಈ ಬಾರಿಯೂ ಹಾಗೆಯೇ ಮಾಡಿರುತ್ತಾರೆ. ಆದರೆ ವಿಷಯ ಮಾತ್ರ ಇಡೀ ವಿಶ್ವಕ್ಕೆ ಮೆಚ್ಚುಗೆಯಾಗುತ್ತದೆ ಎನ್ನುವುದು ಇವರ ನಂಬಿಕೆ. ಇದರ ಜೊತೆಗೆ ಅಪ್‌ಡೇಟ್ ತಂತ್ರಜ್ಞಾನವನ್ನು ದಿಕ್ಕೆಡಿಸುವಂತೆ ಬಳಸಿಕೊಳ್ಳಲಿದ್ದಾರೆ. ಅದಕ್ಕಾಗಿಯೇ ಹಗಲು ರಾತ್ರಿ ಬೆವರು ಸುರಿಸುತ್ತಿದ್ದಾರೆ. ಇನ್ನೇನು ಮುಕ್ತಾಯ ಹಂತಕ್ಕೆ ಬಂದಿದೆ. ಬಿಡುಗಡೆ ಬಗ್ಗೆ ಸದ್ಯಕ್ಕೆ ಮಾತಾಡೋದು ಬೇಡ.

    ಅದ್ಭುತ ತಂಡವನ್ನು ಕಟ್ಟಿಕೊಂಡು ಉಪ್ಪಿ ಹೊಸ ಯುದ್ಧಕ್ಕೆ ಸಜ್ಜಾಗಿದ್ದಾರೆ. ಎಲ್ಲರೂ ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ. ಅದಕ್ಕೇ ಇದನ್ನು ಮಾಡುತ್ತಿದ್ಧಾರೆ ಎಂದು ತಿಳಿಯಬೇಡಿ. ಈಗ ಆಗಬೇಕಿತ್ತು. ಆಗುತ್ತಿದೆ ಅಷ್ಟೇ. ಇದಕ್ಕೆ ಲಹರಿ ಆಡಿಯೋ ಸಂಸ್ಥೆ ಮಾಲೀಕರ ಮಗ ಮನೋಹರ್ ನಾಯ್ಡು ಮಕ್ಕಳಾದ ಚಂದ್ರು, ನವೀನ್ ಹಾಗೂ ಸಲಗ ಕೆ.ಪಿ.ಶ್ರೀಕಾಂತ್ ಬಂಡವಾಳ ಹಾಕಿದ್ದಾರೆ. ಎಲ್ಲರೂ ಒಂದೊಂದೆ ಕೆಲಸವನ್ನು ಹಂಚಿಕೊಂಡಿದ್ದಾರೆ.

  • ‘ಮೇಮ್ ಫೇಮಸ್’ ಮೆಚ್ಚಿದ ರಾಜಮೌಳಿ : ಲಹರಿ ಫಿಲ್ಮ್ಸ್ ನಿರ್ಮಾಣದ ತೆಲುಗಿನ 2ನೇ ಚಿತ್ರವೂ ಹಿಟ್

    ‘ಮೇಮ್ ಫೇಮಸ್’ ಮೆಚ್ಚಿದ ರಾಜಮೌಳಿ : ಲಹರಿ ಫಿಲ್ಮ್ಸ್ ನಿರ್ಮಾಣದ ತೆಲುಗಿನ 2ನೇ ಚಿತ್ರವೂ ಹಿಟ್

    ನ್ನಡದ ಹೆಸರಾಂತ ಲಹರಿ ಸಂಸ್ಥೆಯ ಲಹರಿ ಫಿಲ್ಮ್ಸ್ (Lahari Films)  ಹಾಗೂ ಚಾಯ್ ಬಿಸ್ಕೆಟ್ ಫಿಲ್ಮ್ಸ್ ಜಂಟಿಯಾಗಿ ನಿರ್ಮಾಣ ಮಾಡಿದ್ದ ತೆಲುಗಿನ (Telugu) ‘ಮೇಮ್ ಫೇಮಸ್’ (Meme Famous) ಸಿನಿಮಾ ಬಗ್ಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಬಾಹುಬಲಿ ಖ್ಯಾತಿಯ ರಾಜಮೌಳಿ (Rajamouli), ಖ್ಯಾತನಟ ಮಹೇಶ್ ಬಾಬು, ರಾಜಮೌಳಿ ಪುತ್ರ ಎಸ್.ಎಸ್ ಕಾರ್ತೀಕೇಯ ಕೂಡ ಸಿನಿಮಾ ಮೆಚ್ಚಿ ಮಾತನಾಡಿದ್ದಾರೆ.

    ‘ತುಂಬಾ ದಿನಗಳ ನಂತರ ಥಿಯೇಟರ್‍ ಹೋಗಿ ಸಿನಿಮಾವೊಂದನ್ನು ಎಂಜಾಯ್ ಮಾಡಿದೆ. ಪ್ರತಿಭಾವಂತ ಟೀಮ್ ಸೇರಿಕೊಂಡು ಮಾಡಿರುವ ಸಿನಿಮಾ ಮೇಮ್ ಫೇಮಸ್. ಸಹಜ ಅಭಿನಯ, ಹೊಸದಾದ ನಿರೂಪಣೆ. ಸಖತ್ ಮನರಂಜನೆಯನ್ನು ಈ ಸಿನಿಮಾ ನೀಡಿದೆ. ಈ ಸಿನಿಮಾದ ನಟ ಹಾಗೂ ನಿರ್ದೇಶಕರಿಗೆ ಉತ್ತಮ ಭವಿಷ್ಯವಿದೆ. ಅದರಲ್ಲೂ ಅಂಜಿ ಮಾಮಾ ತುಂಬಾ ಕಾಡುತ್ತಾನೆ’ ಎಂದು ರಾಜಮೌಳಿ ಟ್ವೀಟ್ ಮಾಡಿದೆ.

    ಸ್ಟಾರ್ ನಟ ಮಹೇಶ್ ಬಾಬು (Mahesh Babu) ಕೂಡ ಸಿನಿಮಾ ಬಗ್ಗೆ ಮೆಚ್ಚಿ ಟ್ವೀಟ್ ಮಾಡಿದ್ದು, ‘ಈಗ ತಾನೆ ಮೇಮ್ ಫೇಮಸ್ ಸಿನಿಮಾ ನೋಡಿದೆ. ಪ್ರತಿಭಾವಂತ ಪಡೆಯೇ ಸಿನಿಮಾದಲ್ಲಿದೆ. ಬರಹಗಾರರು, ನಿರ್ದೇಶಕ, ನಟ ಎಲ್ಲರೂ ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ಹಿನ್ನೆಲೆ ಸಂಗೀತ, ದೃಶ್ಯ ಎಲ್ಲವೂ ಸಿನಿಮಾಗೆ ಮತ್ತಷ್ಟು ಶಕ್ತಿ ತುಂಬಿವೆ. ಪ್ರತಿಭಾವಂತರೇ ಈ ಸಿನಿಮಾಗಾಗಿ ಒಂದಾಗಿದ್ದಾರೆ’ ಎಂದು ಬರೆದಿದ್ದಾರೆ. ಇದನ್ನೂ ಓದಿ:ಸರಕಾರದ ಮುಂದೆ ಹಳೆ ಬೇಡಿಕೆ ಇಟ್ಟ ರಿಷಬ್ ಶೆಟ್ಟಿ

    ಯೂಟ್ಯೂಬ್ ಮೂಲಕ ಮನೆಮಾತಾಗಿದ್ದ ಸುಮತ್ ಪ್ರಭಾಸ್ ನಟನೆಯ ಸಿನಿಮಾ ಇದಾಗಿದ್ದು, ಕನ್ನಡದ ಹೆಸರಾಂತ ಸಂಗೀತ ಸಂಸ್ಥೆ ಲಹರಿ ಸಂಸ್ಥೆಯ ಚಂದ್ರು ಮನೋಹರನ್ (Chandru Manoharan) ಹಾಗೂ ಚಾಯ್ ಬಿಸ್ಕೆಟ್ ಫಿಲ್ಮ್ಸ್ ಜೊತೆಯಾಗಿ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಲಹರಿ ಫಿಲ್ಮಸ್ ನಿಂದ ಮೂಡಿ ಬರುತ್ತಿರುವ ತೆಲುಗಿನ ಎರಡನೇ ಸಿನಿಮಾವಾಗಿದೆ. ಈ ಹಿಂದೆ ‘ರೈಟರ್ ಪದ್ಮಭೂಷಣ್’ ಸಿನಿಮಾವನ್ನು ಲಹರಿ ಸಂಸ್ಥೆ ತೆಲುಗಿನಲ್ಲಿ ನಿರ್ಮಾಣವಾಗಿತ್ತು. ಹತ್ತು ದಿನದಲ್ಲಿ ಈ ಸಿನಿಮಾ 10.1 ಕೋಟಿ ರೂಪಾಯಿ ಬಾಕ್ಸ್ ಆಫೀಸ್ ಕಲೆಕ್ಷನ್ ಮಾಡಿ ಅಚ್ಚರಿ ಮೂಡಿಸಿತ್ತು.

    ಮೂರು ದಿನಗಳ ಹಿಂದೆ ರಿಲೀಸ್ ಆಗಿರುವ ‘ಮೇಮ್ ಫೇಮಸ್’ ಸಿನಿಮಾ ಕೂಡ ತೆಲುಗು ಚಿತ್ರೋದ್ಯಮದಲ್ಲಿ ಭಾರೀ ಸದ್ದು ಮಾಡುತ್ತಿದೆ. ಬಿಡುಗಡೆಯಾದ ಮೂರೇ ದಿನಕ್ಕೆ 3.1 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಹಾಗಾಗಿ ತೆಲುಗು ಚಿತ್ರೋದ್ಯಮ ಅನೇಕರು ಸಿನಿಮಾ ಮೆಚ್ಚಿ ಮಾತನಾಡುತ್ತಾರೆ. ಸೋಷಿಯಲ್ ಮೀಡಿಯಾಗಳಲ್ಲಿ ಚಿತ್ರತಂಡದ ಬಗ್ಗೆ ಅಭಿಮಾನದ ನುಡಿಗಳನ್ನು ಬರೆಯುತ್ತಿದ್ದಾರೆ.

  • ಉಪೇಂದ್ರ `ಯುಐ’ ಸಿನಿಮಾಗೆ ಕೊಡಗಿನ ಕುವರಿ ರೀಷ್ಮಾ ನಾಯಕಿ

    ಉಪೇಂದ್ರ `ಯುಐ’ ಸಿನಿಮಾಗೆ ಕೊಡಗಿನ ಕುವರಿ ರೀಷ್ಮಾ ನಾಯಕಿ

    ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶಿಸುತ್ತಿರುವ ಸಿನಿಮಾ `ಯುಐ’ (Ui) ಚಿತ್ರತಂಡದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಉಪ್ಪಿಗೆ ನಾಯಕಿಯಾಗಿ ಕನ್ನಡದ ನಟಿ ರೀಷ್ಮಾ (Reeshma Nanaih) ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ.

    ಉಪೇಂದ್ರ ನಟನೆಯ ನಿರೀಕ್ಷಿತ ಸಿನಿಮಾ `ಯುಐ’ ಚಿತ್ರವು ಒಂದಲ್ಲಾ ಒಂದು ವಿಚಾರವಾಗಿ ಸುದ್ದಿ ಮಾಡುತ್ತಿದೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಈ ಚಿತ್ರಕ್ಕೆ ನಾಯಕಿ ಯಾರೆಂಬುದು ಇದೀಗ ಫೈನಲ್ ಆಗಿದೆ. ಸಾಕಷ್ಟು ಬಾಲಿವುಡ್ (Bollywood) ನಟಿಮಣಿಯರ ಹೆಸರು ಸುದ್ದಿಯಾಗಿದ್ದ ಬೆನ್ನಲ್ಲೇ ನಟಿ ರೀಷ್ಮಾ, ನಾಯಕಿಯಾಗಿ ಫಿಕ್ಸ್ ಆಗಿದ್ದಾರೆ. ಈ ಮೂಲಕ ಕನ್ನಡದ ಪ್ರತಿಭಾನ್ವಿತ ನಟಿಗೆ ಚಿತ್ರತಂಡ ಅವಕಾಶ ಕೊಟ್ಟಿದೆ.

    ಇನ್ನೂ ಕೊಡಗಿನ ಬ್ಯೂಟಿ ರೀಷ್ಮಾ ನಾಣಯ್ಯ ಅವರು ಸಖತ್ ಸ್ಕೋಪ್ ಇರುವ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾಗಿರುವ ಈ ಚಿತ್ರಕ್ಕೆ ಲಹರಿ ಫಿಲ್ಮ್ಸ್‌(Lahari Films), ನಿರ್ಮಾಪಕ ಶ್ರೀಕಾಂತ್ (Srikanth) ಅವರು ಬಂಡವಾಳ ಹೂಡಿದ್ದಾರೆ. ಇದನ್ನೂ ಓದಿ: ಪ್ರಶಾಂತ್ ನೀಲ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಅಬ್ಬರಿಸಲಿದ್ದಾರೆ ಆಮೀರ್ ಖಾನ್

    ಉಪ್ಪಿ ಚಿತ್ರದ ಮೇಲೆ ಫ್ಯಾನ್ಸ್‌ಗೆ ನಿರೀಕ್ಷೆ ಬೆಟ್ಟದಷ್ಟಿದೆ. ಸ್ಟಾರ್ ಕಲಾವಿದರ ದಂಡೇ ಈ ಸಿನಿಮಾದಲ್ಲಿದೆ. `ಯುಐ’ (Ui) ಸಿನಿಮಾ ತೆರೆಯ ಮೇಲೆ ಅಬ್ಬರಿಸೋದನ್ನ ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಹೊಸ ಸಿನಿಮಾದ ಲುಕ್ ಟೆಸ್ಟ್ : ಹೈದರಾಬಾದ್ ನಲ್ಲಿದ್ದಾರೆ ಉಪ್ಪಿ

    ಹೊಸ ಸಿನಿಮಾದ ಲುಕ್ ಟೆಸ್ಟ್ : ಹೈದರಾಬಾದ್ ನಲ್ಲಿದ್ದಾರೆ ಉಪ್ಪಿ

    ತ್ತೆ ನಿರ್ದೇಶಕನ ಕ್ಯಾಪ್ ಧರಿಸಿ ಅಭಿಮಾನಿಗಳ ಮುಂದೆ ನಿಂತಿದ್ದಾರೆ ಉಪೇಂದ್ರ. ಈ ಬಾರಿಯೂ ಅವರು ಪ್ರೇಕ್ಷಕನ ಮೆದುಳಿಗೆ ಕೈ ಹಾಕಿದ್ದು, ಈಗಾಗಲೇ ರಿಲೀಸ್ ಆದ ಚಿತ್ರದ ಟೈಟಲ್ ಮತ್ತು ಫಸ್ಟ್ ಲುಕ್ ಮೂಲಕ ಕುತೂಹಲ ಮೂಡಿಸಿದ್ದಾರೆ. ಸಿನಿಮಾದ ಟೈಟಲ್ ಇಂಥದ್ದೇ ಅಂತ ಹೇಳುವುದು ಕಷ್ಟ. ಅಲ್ಲದೇ, ನಾನಾ ರೀತಿಯ ಅರ್ಥಗಳು ಹುಟ್ಟುವಂತೆ ಫಸ್ಟ್ ಲುಕ್ ಇತ್ತು. ಇದನ್ನೂ ಓದಿ : ಪ್ರಭುದೇವ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ

    ಇದೀಗ ಅದೇ ಸಿನಿಮಾದ ಮುಹೂರ್ತ ಬೆಂಗಳೂರಿನ ಬನ್ನಿ ಮಹಾಂಕಾಳಿ ದೇವಸ್ಥಾನವೊಂದರಲ್ಲಿ ಜೂ.3 ರಂದು ನಡೆಯಲಿದೆ. ಅಂದು ಹಲವು ವಿಚಾರಗಳನ್ನು ಹಂಚಿಕೊಳ್ಳಲಿದ್ದಾರಂತೆ ಉಪ್ಪಿ. ಈ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ನಲ್ಲೇ ತಯಾರಾಗುತ್ತಿರುವುದರಿಂದ ಭಾರೀ ಬಜೆಟ್ ನಲ್ಲೇ ನಿರ್ಮಾಣವಾಗಲಿದೆಯಂತೆ. ಎಲ್ಲ ಭಾಷೆಯ ನೋಡುಗರಿಗೂ ಕನೆಕ್ಟ್ ಆಗುವಂತಹ ಕಥೆಯನ್ನೇ ಈ ಚಿತ್ರಕ್ಕೂ ಆಯ್ಕೆ ಮಾಡಿಕೊಂಡಿದ್ದಾರಂತೆ. ಇದನ್ನೂ ಓದಿ : ಅಕ್ಟೋಬರ್ 3ಕ್ಕೆ ಅಭಿಷೇಕ್ ಅಂಬರೀಶ್ ಹೊಸ ಸಿನಿಮಾಗೆ ಮುಹೂರ್ತ

    ಮುಹೂರ್ತದ ದಿನದಂದು ಸರ್ಪ್ರೈಸ್ ಕೊಡುವುದಕ್ಕಾಗಿ ಉಪ್ಪಿಯ ಲುಕ್ ಟೆಸ್ಟ್ ಕೂಡ ನಡೆದಿದ್ದು, ಸದ್ಯ ಉಪೇಂದ್ರ ಅವರು ಹೈದರಾಬಾದ್ ನಲ್ಲಿ ಬೀಡುಬಿಟ್ಟಿದ್ದಾರೆ. ಲುಕ್ ಟೆಸ್ಟ್ ಮತ್ತು ಫೋಟೋ ಶೂಟ್ ನಲ್ಲಿ ಅವರು ಪಾಲ್ಗೊಂಡಿದ್ದಾರೆ. ಈ ಸಿನಿಮಾದಲ್ಲೂ ಉಪ್ಪಿಯದ್ದು ವಿಭಿನ್ನ ರೀತಿಯ ಗೆಟಪ್ ಇರಲಿದೆಯಂತೆ. ಹಾಗಾಗಿ ಹಲವು ಬಗೆಯಲ್ಲಿ ಲುಕ್ ಟೆಸ್ಟ್ ನಡೆದಿದೆಯಂತೆ. ಇದನ್ನೂ ಓದಿ : ‘ಮಾ ಇಷ್ಟಂ’ ಸಿನಿಮಾಗೆ ತಡೆಯಾಜ್ಞೆ ತಂದವರ ವಿರುದ್ಧವೇ ನಕಲಿ ಸಹಿ ದೂರು ನೀಡಿದ ವರ್ಮಾ

    ಲಹರಿ ಫಿಲ್ಮ್ಸ್‍ ಮತ್ತು ಕೆ.ಪಿ. ಶ್ರೀಕಾಂತ್ ಜಂಟಿಯಾಗಿ ಈ ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದು, ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ ಮತ್ತು ಇಂಗ್ಲಿಷ್ ನಲ್ಲೂ ಈ ಸಿನಿಮಾ ತಯಾರಾಗಲಿದೆಯಂತೆ. ಉಪೇಂದ್ರ ಅವರ ಹೊರತಾಗಿ, ಸಿನಿಮಾದಲ್ಲಿ ಯಾರೆಲ್ಲ ತಾರೆಯರು ಇರಲಿದ್ದಾರೆ ಎನ್ನುವುದು ಜೂ.3 ರನಂತರ ಗೊತ್ತಾಗಲಿದೆ. ಅಷ್ಟೂ ಭಾಷೆಗೂ ಸಲ್ಲುವಂತಹ ಕಲಾವಿದರ ಆಯ್ಕೆ ಕೂಡ ಆಗಿದೆಯಂತೆ. ಸಿನಿಮಾ ಮುಹೂರ್ತದ ದಿನದಂದು ಹಲವು ವಿಚಾರಗಳನ್ನು ಉಪ್ಪಿ ಹಂಚಿಕೊಳ್ಳಲಿದ್ದಾರೆ.