ಬೆಂಗಳೂರು: 75 ವರ್ಷಗಳಿಂದ ಚಾಮರಾಜಪೇಟೆಯ ಮೈದಾನದಲ್ಲಿ ತಿರಂಗ ಹಾರಿಸಲು ಹಾಗೂ ಗಣೇಶೋತ್ಸವ ನಡೆಸಲು ಸಾಧ್ಯವಾಗಿರಲಿಲ್ಲ. ಆದರೆ ಈ ಬಾರಿ ನಮ್ಮ ಹೋರಾಟಕ್ಕೆ ಫಲ ಸಿಕ್ಕಿದೆ. ಸೂರ್ಯ ಚಂದ್ರರಿರುವ ತನಕ ಪ್ರತಿ ವರ್ಷವೂ ಇಲ್ಲಿ ಗಣೇಶೋತ್ಸವ ಆಚರಣೆ ಆಗಲಿದೆ ಎಂದು ಲಹರಿ ಆಡಿಯೋ ಸಂಸ್ಥೆಯ ಮಾಲೀಕರಾದ ಲಹರಿ ವೇಲು ಹೇಳಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಹರಿ ವೇಲು, ಈದ್ಗಾ ಮೈದಾನದಲ್ಲಿ ತಿರಂಗ ಹಾರಿಸೋಕೆ ನಾವು ಸತತ ಪ್ರಯತ್ನ ಮಾಡಿದ್ದೇವೆ. ಕೊನೆಗೂ ಶಾಂತಿಯುತವಾಗಿ ಧ್ವಜಾರೋಹಣ ಮಾಡಿದ್ದೇವೆ. ಗಣೇಶೋತ್ಸವ ನಡೆಸಲು ಅರ್ಜಿ ಸಲ್ಲಿಸಿದ್ದೇವೆ. ಈಗಾಗಲೇ ನ್ಯಾಯಾಂಗದಲ್ಲಿ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈಗ ಹೋರಾಟಕ್ಕೆ ಫಲ ಸಿಕ್ಕಿದ್ದು, ಲಹರಿ ಸಂಸ್ಥೆಯಿಂದ ಗಣೇಶ ಮೂರ್ತಿಯನ್ನು ಪ್ರತಿ ವರ್ಷವೂ ಪ್ರತಿಷ್ಠಾಪನೆ ಮಾಡಲಿದ್ದೇವೆ. 16 ನದಿಗಳ ಪವಿತ್ರ ನೀರನ್ನು ಪ್ರೋಕ್ಷಣೆ ಮಾಡಿ, ಶುದ್ಧೀಕರಿಸಿ ಗಣೇಶ ಪ್ರತಿಷ್ಠಾಪನೆ ಮಾಡಲಿದ್ದೇವೆ ಎಂದು ತಿಳಿಸಿದರು.
ಜಮೀರ್ ಸೇರಿದಂತೆ ಎಲ್ಲರೂ ಹಬ್ಬಕ್ಕೆ ಬಂದು ಆರತಿ ತೆಗೆದುಕೊಂಡು ಹೋಗಬಹುದು. ಎಲ್ಲರಿಗೂ ಮುಕ್ತ ಅವಕಾಶ ಇದೆ. ನಮ್ಮ ಮಧ್ಯೆ ಯಾವುದೇ ಒಡಕು ಇಲ್ಲ. ಎಲ್ಲರೂ ಒಗ್ಗಟ್ಟಾಗಿದ್ದೇವೆ. ಯಾರಿಗೆ ಅನುಮತಿ ಕೊಟ್ಟರೂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸುತ್ತೇವೆ ಎಂದರು. ಇದನ್ನೂ ಓದಿ: ಮೈಸೂರು-ಬೆಂಗ್ಳೂರು ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಿ
ಚಾಮರಾಜಪೇಟೆಯ ಗಣೇಶೋತ್ಸವದಲ್ಲಿ ಸಾರ್ವಕರ್ ಫೋಟೋ ಕೂಡಾ ಇಡುತ್ತೇವೆ. ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರರು. ಅವರ ಫೋಟೋ ಇಡುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಈ ಸ್ಥಳವನ್ನು ಸೂಕ್ಷ್ಮ ಪ್ರದೇಶ ಎಂದು ಹೇಳುತ್ತಾರೆ. ಆದರೆ ರಂಜಾನ್, ಬಕ್ರೀದ್ ಮಾಡುವಾಗ ಸೂಕ್ಷ್ಮ ಪ್ರದೇಶ ಎನ್ನುವುದಿಲ್ಲ. ಹೀಗಾಗಿ ಗಣೇಶೋತ್ಸವ ಮಾಡುವಾಗ ಯಾಕೆ ಈ ಸೂಕ್ಷ್ಮ ಪ್ರದೇಶದ ವಿಚಾರ? ಪಾದರಾಯನಪುರ ಸೇರಿದಂತೆ ಚಾಮರಾಜಪೇಟೆಯ ಗಲ್ಲಿಯಲ್ಲಿ ಗಣೇಶೋತ್ಸವ ಮೆರವಣಿಗೆಯನ್ನು ನಾವು ಮಾಡುತ್ತೇವೆ. ಈ ಹಿಂದೆ ರಸ್ತೆಯಲ್ಲಿ ಇಟ್ಟಾಗಲೂ ನಾವು ಅಲ್ಲೇ ಮೆರವಣಿಗೆ ಮಾಡಿದ್ದೇವೆ. ಹೀಗಾಗಿ ಇಲ್ಲೂ ಮೆರವಣಿಗೆಯ ಬಗ್ಗೆ ಈ ವರ್ಷ ಯೋಜನೆ ಇದೆ ಎಂದರು. ಇದನ್ನೂ ಓದಿ: ಚಾಮರಾಜಪೇಟೆ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರ ಸಂಜೆ ನಿರ್ಧಾರ: ಸಿಎಂ ಬೊಮ್ಮಾಯಿ
ಮುಸ್ಲಿಂ ಸಂಘಟನೆ ಸುಪ್ರೀಂ ಕೋರ್ಟ್ ಹೋಗುವುದಾದರೆ ಹೋಗಲಿ. ನಮಗೆ ಯಾವ ಅಭ್ಯಂತರ, ಭಯವೂ ಇಲ್ಲ. ಅವರು ಸುಪ್ರೀಂ ಕೋರ್ಟ್ಗೆ ಹೋದರೆ ನಾವು ಕೂಡಾ ಸುಪ್ರೀಂ ಕೋರ್ಟ್‌ಗೆ ಹೋಗುತ್ತೇವೆ. ನಮ್ಮ ಒಕ್ಕೂಟ ಒಡೆಯಲು ಕೆಲ ಕುತಂತ್ರಿಗಳು ಭಾರೀ ಪ್ರಯತ್ನ ಮಾಡಿದ್ದಾರೆ. ಆದರೆ ನಾವು ಒಗ್ಗಟ್ಟಿನಲ್ಲಿದ್ದೇವೆ. ಇಂದು ಸಂಜೆಯಷ್ಟರಲ್ಲಿ ಸರ್ಕಾರ ಅನುಮತಿ ಕೊಡುವ ನಿರೀಕ್ಷೆ ಇದೆ. ಈ ಪ್ರದೇಶದಲ್ಲಿ ಬಕ್ರೀದ್ ರಂಜಾನ್ ಕೂಡ ಮಾಡಲಿ, ಗಣೇಶೋತ್ಸವವನ್ನೂ ಮಾಡಲಿ ಎಂದರು.
Live Tv
[brid partner=56869869 player=32851 video=960834 autoplay=true]
ಹೊಸಬರೇ ಸೇರಿಕೊಂಡು ಸಿದ್ದಪಡಿಸಿರುವ ’ಅಯುಕ್ತ’ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮವು ಕಲಾವಿದರ ಸಂಘದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಲಹರಿವೇಲು ಮಾತನಾಡಿ ಇವತ್ತು ತುಂಬಾ ಭಾವುಕನಾಗಿದ್ದೇನೆ. ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯವೈಖರಿಯನ್ನು ಮೆಚ್ಚಲೇ ಬೇಕಾಗಿದೆ. ಅನಾಥ ಶವಗಳಿಗೆ ಮುಕ್ತಿ ನೀಡುವ ಸೇವೆಯನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದಾರೆ. ಇಂತಹವರಿಗೆ ಎಲ್ಲರ ಬೆಂಬಲ ಬೇಕಾಗಿದೆ. ಟೀಸರ್ ನೋಡಿದಾಗ ಹೊಸಬರ ಚಿತ್ರ ಅನಿಸಿವುದಿಲ್ಲ. ಒಳ್ಳೆಯದಾಗಲಿ ಎಂದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಬಾ.ಮ.ಹರೀಶ್ ಆಗಮಿಸಿ ತಂಡಕ್ಕೆ ಶುಭ ಹಾರೈಸಿದರು.
ರಚನೆ,ಚಿತ್ರಕಥೆ ಮತ್ತು ನಿರ್ದೇಶನ ಮಾಡಿರುವ ಕನಸು ರಮೇಶ್ ಹೇಳುವಂತೆ ಈ ಹಿಂದೆ ಸುಮಾರು 250 ನಾಟಕಗಳನ್ನು ನಿರ್ದೇಶಿಸಿದ ಅನುಭವವಿದೆ. ಆದ್ದರಿಂದಲೇ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲು ಸುಲಭವಾಯಿತು. ಸಿನಿಮಾದ ಕುರಿತು ಹೇಳುವುದಾದರೆ ಸಂಪಾದನೆಗೋಸ್ಕರ ಪದವಿ ಮಾಡಬೇಡಿ. ಜ್ಞಾನಾರ್ಜನೆಗೋಸ್ಕರ ಡಿಗ್ರಿ ಮಾಡುವುದು ಒಳಿತು. ಪೋಷಕರು ತಮ್ಮ ಧೋರಣೆಯನ್ನು ನೋಡದೆ ಮಕ್ಕಳು ಇಷ್ಟಪಡುವಂತ ಕೆಲಸಕ್ಕೆ ಸ್ವಾತಂತ್ರ ಕೊಡಬೇಕು. ಅದನ್ನು ಅನುಸರಿಸದೆ ಬಲವಂತ ಮಾಡಿದಾಗ, ಮಕ್ಕಳು ಯಾವ ರೀತಿ ದಿಕ್ಕು ತಪ್ಪುತ್ತಾರೆ. ಕೊನೆಗೆ ಏನಾಗುತ್ತಾರೆ ಎಂಬುದನ್ನು ಸೆಸ್ಪನ್ಸ್, ಥ್ರಿಲ್ಲರ್ ಹಾಗೂ ಪ್ರೀತಿಯೊಂದಿಗೆ ಹೇಳಲಾಗಿದೆ. ನೂರಾರು ತಿರುವುಗಳು ಇರಲಿದ್ದು ಒಂದೊಂದು ತಿರುವುಗಳಿಗೂ ಕಥೆ ಇರಲಿದೆ. ಮಂಡ್ಯ, ಕಿರುಗಾವಲು. ಮಳವಳ್ಳಿ, ಬೆಳಕವಾಡಿ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಮಾದ್ಯಮದ ಸಹಕಾರ ಬೇಕೆಂದು ಕೋರಿದರು. ಇದನ್ನೂ ಓದಿ:ಕಿಚ್ಚ ಸುದೀಪ್- ರಕ್ಷಿತ್ ಶೆಟ್ಟಿ ನಡುವೆ ಏನಿದು ಕೋಲ್ಡ್ ವಾರ್!
ಫಯುಸುಪಿಯಾನ್, ಅದ್ದೂರಿಬಸವ, ರಮೇಶ್, ಜಾನ್ಸನ್, ರುತ್ವಿಕಾ, ಸೌಂದರ್ಯಗೌಡ, ಚನ್ನಬಸಪ್ಪ ಮುಂತಾದವರು ಪಾತ್ರದ ಪರಿಚಯ ಮಾಡಿಕೊಂಡು ಅವಕಾಶ ನೀಡಿದ್ದಕ್ಕೆ ಧನ್ಯವಾದ ತಿಳಿಸಿದರು. ಬಾಲಾಜಿ ಕ್ರಿಯೇಶನ್ಸ್ ಅಡಿಯಲ್ಲಿ ವಿಶ್ವಾಸ್ ಆರ್.ಗಂಗಡ್ಕರ್ ನಿರ್ಮಾಣ ಮಾಡಿದ್ದಾರೆ. ಸಂಗೀತ ವಿಲಿಯಂದೃತ್, ಛಾಯಾಗ್ರಹಣ ಅರಸಿಕೆರೆ ದೀಪು, ಸಂಕಲನ ನಿಶಿತ್ ಪೂಜಾರಿ ಅವರದಾಗಿದೆ.
Live Tv
[brid partner=56869869 player=32851 video=960834 autoplay=true]
ತಲೆ ಬಾಚ್ಕೋಳ್ಳಿ ಪೌಡ್ರು ಹಾಕ್ಕೋಳ್ಳಿ ಚಿತ್ರದಲ್ಲಿ ನಟಿಸಿ ನಿರ್ಮಾಣ ಮಾಡಿದ್ದ ವಿಕ್ರಂ ಆರ್ಯ ಗ್ಯಾಪ್ ನಂತರ ಮಿಲಿಟರಿ ಅಧಿಕಾರಿಯಾಗಿ ನಾಯಕ ಮತ್ತು ನಾಮದೇವಭಟ್ಟರ್ ಹೆಸರಿನಲ್ಲಿ ನಿರ್ಮಾಪಕರಾಗಿ ಅಭಿನಯಿಸಿರುವ ’ಪದ್ಮಾವತಿ’ ಚಿತ್ರದ ಧ್ವನಿಸಾಂದ್ರಿಕೆಯನ್ನು ಲಹರಿವೇಲು ಬಿಡುಗಡೆ ಮಾಡಿ ತಂಡಕ್ಕೆ ಶುಭ ಹಾರೈಸಿದರು. ಮತ್ತೊಂದು ಮುಖ್ಯ ಪಾತ್ರದಲ್ಲಿ ದಾಮೋದರ್‌ಪಾರಗೆ ಅಭಿನಯ ಹಾಗೂ ನಿರ್ಮಾಣದಲ್ಲಿ ಪಾಲುದಾರರು. ಹಿರಿಯ ನಿರ್ದೇಶಕರುಗಳ ಗರಡಿಯಲ್ಲಿ ಪಳಗಿರುವ ಮಿಥುನ್ ಚಂದ್ರಶೇಖರ್ ಚಿತ್ರಕತೆ, ಸಂಭಾಷಣೆ ಬರೆದು ಮೊದಲಬಾರಿ ನಿರ್ದೇಶನ ಮಾಡಿದ್ದಾರೆ.
ತಪ್ಪೇ ಮಾಡಬೇಡಿ, ಮಾಡುವ ತಪ್ಪನ್ನು ತಪ್ಪು ತಪ್ಪಾಗಿ ಮಾಡಬೇಡಿ, ತಪ್ಪು ಮಾಡಿದ ಮೇಲೆ ತಪ್ಪದೆ ತಪ್ಪಾಯಿತು ಎಂದು ಒಪ್ಪಿಕೊಳ್ಳಿ. ಎಲ್ಲೋ ಒಂದು ಕಡೆ ತಿಳಿಯದೆ ಇರೋ ವಯಸ್ಸಿನಲ್ಲಿ ತಪ್ಪುಗಳನ್ನು ಮಾಡುವುದು ಸಹಜ. ಅದನ್ನು ಹಲವಾರು ವರ್ಷಗಳ ನಂತರ ಹೆಣ್ಣು ಸರಿಪಡಿಸಿಕೊಳ್ಳುವ ದಾರಿಯಲ್ಲಿ ತನ್ನ ಹಳೆಯ ನೆನಪುಗಳನ್ನು ಕೆದಕಿಕೊಂಡು ಹೋಗುತ್ತಾಳೆ. ಅಲ್ಲಿಂದ ಅವಳ ಹಾದಿ ಯಾವ ಮಟ್ಟಕ್ಕೆ ಹೋಗುತ್ತದೆ ಎಂಬುದನ್ನು ಹೇಳಲಾಗಿದೆ. ಜೊತೆಗೆ ತಾಯಿ ಮಗನ ಸೆಂಟಿಮೆಂಟ್ ಅಂಶಗಳು ಇರಲಿದೆ. ಶಿವಳ್ಳಿಬೆಟ್ಟ, ಸಾಗರ, ಹೊಸನಗರ,ಚಿಕ್ಕಮಗಳೂರು, ಶಿವಮೊಗ್ಗ, ಬೆಂಗಳೂರು ಕಡೆಗಳಲ್ಲಿ 51 ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಇದನ್ನೂ ಓದಿ:ಪಿಂಕ್ ಕಲರ್ ಸೀರೆಯಲ್ಲಿ ಹಾಟ್ ಆಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ
ಯುವತಿ, ಮಧ್ಯವಯಸ್ಸಿನ ಮಹಿಳೆ ಮತ್ತು 46 ವರ್ಷದವಳಾಗಿ ಮೂರು ಶೇಡ್‌ಗಳಲ್ಲಿ ಕಾಣಿಸಿಕೊಂಡಿರುವ ನಾಯಕಿ ಸಾಕ್ಷಿಮೇಘನಾ ಈಗ ಮೇಘನಾರಾಮ್ ಅಂತ ನಾಮಕರಣ ಮಾಡಿಕೊಂಡಿದ್ದಾರೆ. ಉಳಿದಂತೆ ಸುರೇಶ್‌ಸ್ವಾಮಿರಾವ್, ಕವಿತಪ್ರಿಯಾ, ರಾಘವಕುಮಾರ್, ಅಭಿಲಾಶ್.ಬಿ.ಹೊಸನಗರ, ಶಿವಮೊಗ್ಗ ರಾಮಣ್ಣ, ಅರ್ಚನಾಶೆಟ್ಟಿ,ರಾಜೇಶ್ವರಿಪಾಂಡೆ, ಶರಣ್‌ಗಿನಕೇರಿ ಮುಂತಾದವರ ತಾರಗಣವಿದೆ. ಪುಟ್ಟರಾಜಗವಾಯಿ ಆಶ್ರಮದ ವಿದ್ಯಾರ್ಥಿಯಾಗಿದ್ದ ಶರಣ್‌ಕುಮಾರ್ ಗಜೇಂದ್ರಗಡ ನಾಲ್ಕು ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ. ಜ್ಯೂ.ಎಸ್.ಜಾನಕಿ ಎಂದೇ ಖ್ಯಾತರಾಗಿರುವ ಕೊಪ್ಪಳದ ಗಂಗಮ್ಮ ಒಂದು ಗೀತೆಗೆ ಧ್ವನಿಯಾಗಿದ್ದಾರೆ. ಸಂಗೀತ ದಿನೇಶ್‌ಕುಮಾರ್, ಛಾಯಾಗ್ರಹಣ ಕೆ.ಎಂ.ಶೋಯಿಬ್‌ಅಹ್ಮದ್, ಕತೆ ಲತಾ.ಎಸ್, ಸಂಕಲನ ಈಶ್ವರ್, ಸಾಹಸ ಥ್ರಿಲ್ಲರ್‌ಮಂಜು, ನೃತ್ಯ ಸಂಯೋಜಿಸಿರುವ ತ್ರಿಭುವನ್ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.
ಭಾರತದ ಪುಣ್ಯಕ್ಷೇತ್ರಗಳಲ್ಲಿ ಕಾಶಿಗೆ ವಿಶೇಷ ಸ್ಥಾನ. ಕಾಶಿಯನ್ನು “ಬನಾರಸ್” ಅಂತಲೂ ಕರೆಯುವುದು ವಾಡಿಕೆ. ಪರಮಪಾವನೆಯಾದ ಗಂಗೆ “ಬನಾರಸ್” ನಲ್ಲಿ ಹರಿದು ಎಷ್ಟೋ ಜನರ ಪಾಪ ಕಳೆಯುತ್ತಿದ್ದಾಳೆ. ಈ ಪವಿತ್ರ ನಗರದ ಹೆಸರಿನಲ್ಲಿ “ಬನಾರಸ್” ಎಂಬ ಪ್ಯಾನ್ ಇಂಡಿಯಾ ಸಿನಿಮಾ ನಿರ್ಮಾಣವಾಗಿದೆ. ಜಯತೀರ್ಥ ನಿರ್ದೇಶನದಲ್ಲಿ ಝೈದ್ ಖಾನ್ ಹಾಗೂ ಸೋನಾಲ್ ಮೊಂತೆರೊ ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರದ ಮೊದಲ ಹಾಡು “ಮಾಯಾಗಂಗೆ” ಇತ್ತೀಚೆಗೆ ಬಿಡುಗಡೆಯಾಗಿದೆ. ಕನ್ನಡ ಹಾಗೂ ಮಲೆಯಾಳಂ ಭಾಷೆಯ ಹಾಡುಗಳನ್ನು ಏಕಕಾಲಕ್ಕೆ ಬಿಡುಗಡೆ ಮಾಡಲಾಯಿತು.
ವಿ.ನಾಗೇಂದ್ರಪ್ರಸಾದ್ ಬರೆದಿರುವ ಈ “ಮಾಯಾಗಂಗೆ” ಹಾಡಿಗೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಮಲೆಯಾಳಂ ನಲ್ಲಿ ಆದಿ ಈ ಹಾಡನ್ನು ಬರೆದಿದ್ದಾರೆ. ನಿರ್ಮಾಪಕಿ ಶೈಲಜಾನಾಗ್ ಈ ಹಾಡನ್ನು ಬಿಡುಗಡೆ ಮಾಡಿದರು. ಅಭಿಷೇಕ್ ಅಂಬರೀಶ್, ವಿನೋದ್ ಪ್ರಭಾಕರ್ ಹಾಗೂ ಯಶಸ್ ಸೂರ್ಯ, ಲಹರಿ ವೇಲು, ಚಂದ್ರು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಝೈದ್ ಖಾನ್ ಸೇರಿದಂತೆ ಇಡೀ ತಂಡಕ್ಕೆ ಶುಭ ಕೋರಿದರು. ಕಾಶಿ ವೈರಾಗ್ಯದ ಸಂಕೇತ ಅಲ್ಲಿ ಪ್ರೀತಿಯ ಕಥೆ ಬರೆಯಲು ನನ್ನ ಗೆಳೆಯ ಜಯತೀರ್ಥ ನಿಗೆ ಮಾತ್ರ ಸಾಧ್ಯ. ಪಕ್ಕದಲ್ಲೇ ಚಿತೆ ಉರಿಯುತ್ತಿರುತ್ತದೆ. ಅಲ್ಲಿ ನಾಯಕ- ನಾಯಕಿ ಪ್ರೇಮ ಆರಂಭವಾಗುತ್ತದೆ ಈ ಸನ್ನಿವೇಶಕ್ಕೆ ತಕ್ಕ ಹಾಡು ಬರೆಯಬೇಕು. ಇದು ಮಾಮೂಲಿ ಪ್ರೇಮಗೀತೆಯ ತರಹ ಬೇಡ ಎಂದು ಜಯತೀರ್ಥ ವಿವರಿಸಿದಾಗ, ಈ “ಮಾಯಾಗಂಗೆ” ಹಾಡು ಬರೆದೆ. ಅಜನೀಶ್ ಲೋಕನಾಥ್ ಸಂಗೀತ ಹಾಗೂ ಅದ್ವೈತ ಛಾಯಾಗ್ರಹಣ ಹಾಡಿನ ಶ್ರೀಮಂತಿಕೆಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು ನಾಗೇಂದ್ರಪ್ರಸಾದ್. “ಬನಾರಸ್” ನನ್ನ ಮನಸ್ಸಿಗೆ ಹತ್ತಿರವಾದ ಸಿನಿಮಾ. ಇಂತಹ ಅದ್ಭುತ ಹಾಡನ್ನು ಬರೆದಿರುವ ನಾಗೇಂದ್ರಪ್ರಸಾದ್ ಅವರಿಗೆ ಧನ್ಯವಾದ. ಝೈದ್ ಖಾನ್ ಈ ಹಾಡಿನಲ್ಲಿ ತುಂಬಾ ಚೆನ್ನಾಗಿ ಕಾಣುತ್ತಾರೆ. ಜಯತೀರ್ಥ ಅವರ ನಿರ್ದೇಶನ ಉತ್ತಮವಾಗಿದೆ. ಮುಂದೆ ಇನ್ನೂ ಮೂರು ಹಾಡುಗಳು ಬಿಡುಗಡೆಯಾಗಲಿದೆ. ನಿಮ್ಮ ಪ್ರೋತ್ಸಾಹವಿರಲಿ ಎಂದರು ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್. ಇದನ್ನೂ ಓದಿ:ಆ್ಯಸಿಡ್ ಸಂತ್ರಸ್ತೆಗೆ ನಟ ಕಿಚ್ಚ ಸುದೀಪ್ ನೋಡುವಾಸೆ : ನೋವಿನ ನಡುವೆಯೂ ನಾಲ್ಕು ಬಾರಿ ಸುದೀಪ್ ಹೆಸರು ಹೇಳಿದ ಯುವತಿ
ನಾನು ನಾಗೇಂದ್ರಪ್ರಸಾದ್ ಅವರಿಗೆ ಈ ಹಾಡಿನ ಸನ್ನಿವೇಶ ವಿವರಿಸಿದೆ. ನನಗೆ ಮಾಮೂಲಿ ತರಹದ ಪ್ರೇಮಗೀತೆ ಬೇಕಿರಲಿಲ್ಲ. ಇದು ಕೊರಿಯೋಗ್ರಾಫರ್ ಸಾಂಗ್ ಕೂಡ ಅಲ್ಲ. ನಾವೊಂದಿಷ್ಟು ಜನ ಸೇರಿ ಈ ಹಾಡು ಹೀಗೆ ಬರಬೇಕು ಅಂದುಕೊಂಡೆವು. ಅದೇ ರೀತಿ ನಾಗೇಂದ್ರಪ್ರಸಾದ್ ಅದ್ಭುತವಾಗಿ ಹಾಡು ಬರೆದುಕೊಟ್ಟಿದ್ದಾರೆ. ಅಜನೀಶ್ ಅಷ್ಟೇ ಸೊಗಸಾಗಿ ಸಂಗೀತ ನೀಡಿದ್ದಾರೆ. ಅದ್ವೈತ ಅಂದವಾಗಿ ಛಾಯಾಗ್ರಹಣ ಮಾಡಿದ್ದಾರೆ. ಕನ್ನಡ ಹಾಗೂ ಮಲೆಯಾಳಂ ಎರಡು ಭಾಷೆಗಳಲ್ಲಿ ಈ ಹಾಡು ಬಿಡುಗಡೆಯಾಗಿದೆ. ಮಲಯಾಳಂನಲ್ಲಿ ಹಾಡು ಬರೆಸಲು ಆದಿ ಅವರನ್ನು ಪರಿಚಯಿಸಿದ್ದು ನನ್ನ ಗೆಳೆಯ ಚಾರ್ಲಿ ಚಿತ್ರದ ನಿರ್ದೇಶಕ ಕಿರಣ್ ರಾಜ್. ಕಾಶಿಯಲ್ಲಿ ಚಿತ್ರೀಕರಣ ಮಾಡುವುದು ಅಷ್ಟು ಸುಲಭವಲ್ಲ. ಅದನೆಲ್ಲಾ ಸಾಧ್ಯ ಮಾಡಿದ್ದ ನಿರ್ಮಾಪಕ ತಿಲಕ್ ರಾಜ್ ಬಲ್ಲಾಳ್ ಅವರಿಗೆ ಧನ್ಯವಾದ. ಆಲ್ಲಿನ 84 ಘಾಟ್ ಗಳಲ್ಲೂ ನಮ್ಮ ಚಿತ್ರದ ಚಿತ್ರೀಕರಣ ನಡೆದಿದೆ. ಇನ್ನೂ ನಾಯಕ – ನಾಯಕಿ ನನ್ನ ಮಕ್ಕಳಿದಂತೆ. ಝೈದ್ ಖಾನ್ ನನ್ನ ಬಳಿ ಬಂದು ನಿರ್ದೇಶನ ಮಾಡಬೇಕೆಂದರು. ನಾನು ಅವರಿಗೆ ನೀವು ಹೆಸರಾಂತ ರಾಜಕಾರಣಿ ಮಗ. ನಿಮಗೆ ನಾನು ನಟನೆ ಕಲಿಸಬೇಕಾದರೆ ಸ್ವಲ್ಪ ಕಷ್ಟವಾಗಬಹುದು ಅಂದೆ. ಅದಕ್ಕೆ ಅವರು ಚಪ್ಪಲಿ ಬಿಟ್ಟು ಕೆಳಗೆ ಕುಳಿತು, ನೀವು ಹೇಳಿ ಕೊಟ್ಟಿದ್ದನ್ನು ಮಾಡುತ್ತೇನೆ ಎಂದರು .ಹಾಗೆ ಮಾಡಿದರು. ಅವರು ಈ ಕಥೆಯನ್ನು ಆಯ್ಕೆ ಮಾಡಿಕೊಂಡಾಗಲೇ ಗೆದ್ದರು. ಅದರ ಫಲಿತಾಂಶ ಈಗ ಗೊತ್ತಾಗುತ್ತಿದೆ. ಸೋನಾಲ್ ಅವರ ಅಭಿನಯ ಕೂಡ ಚೆನ್ನಾಗಿದೆ. ಸೆನ್ಸಾರ್ ಕೂಡ ಮುಗಿದಿದೆ. ಸದ್ಯದಲ್ಲೇ “ಬನಾರಸ್” ನಿಮ್ಮ ಮುಂದೆ ಬರಲಿದೆ ಎಂದರು ನಿರ್ದೇಶಕ ಜಯತೀರ್ಥ.
ಇದು ನನ್ನ ಡ್ರೀಮ್ ಪ್ರಾಜೆಕ್ಟ್. ಈ ಕನಸನ್ನು ನನಸು ಮಾಡಿಕೊಳ್ಳಲು ತುಂಬಾ ಕಷ್ಟಪಟ್ಟಿದ್ದೇನೆ. ಈ ನನ್ನ ಕನಸಿಗೆ ಆಸರೆಯಾಗಿದ್ದು ನಿರ್ಮಾಪಕ ತಿಲಕ್ ರಾಜ್ ಬಲ್ಲಾಳ್ ಅವರು. ತಿಲಕ್ ಸರ್ ನನ್ನ ಗಾಡ್ ಫಾದರ್. ಬಾಂಬೆಗೆ ನನ್ನ ಕರೆದುಕೊಂಡು ಹೋಗಿ, ಆಕ್ಟಿಂಗ್ ಸ್ಕೂಲ್ ಗೆ ಸೇರಿಸಿ, ನಂತರ ಈ ಚಿತ್ರವನ್ನು ನಿರ್ಮಾಣ ಮಾಡಿದರು. ನಮ್ಮ “ಬನಾರಸ್” ಅನ್ನು ಪ್ಯಾನ್ ಇಂಡಿಯಾ ಚಿತ್ರವಾಗಿಸಿ ಎಲ್ಲಾ ಕಡೆ ಬಿಡುಗಡೆ ಮಾಡುತ್ತಿದ್ದಾರೆ. ನಿರ್ದೇಶಕ ಜಯತೀರ್ಥ ಅವರ ಬಗ್ಗೆ ಎಷ್ಟು ಹೇಳಿದರು ಕಡಿಮೆ. ಸೋನಾಲ್ ಅವರು ಅದ್ಭುತ ನಟಿ. ಇನ್ನು ಇಡೀ ಚಿತ್ರತಂಡದ ಪರಿಶ್ರಮದಿಂದ “ಬನಾರಸ್” ಚೆನ್ನಾಗಿ ಬಂದಿದೆ. ನನ್ನ ಮೊದಲ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದ ನಾಯಕ ಝೈದ್ ಖಾನ್, ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲಾ ಗಣ್ಯರಿಗೂ ಧನ್ಯವಾದ ತಿಳಿಸಿದರು. ನನಗೆ ಇದು ವಿಶೇಷ ಸಿನಿಮಾ. ಧನಿ ಎಂಬ ಪಾತ್ರ ನೀಡಿದ್ದ ಜಯತೀರ್ಥ ಅವರಿಗೆ ಧನ್ಯವಾದ. ಮೋಷನ್ ಪೋಸ್ಟರ್ ರಿಲೀಸ್ ಆದ ಮೇಲೆ ಎಲ್ಲೇ ಹೋದರೂ ಈ ಚಿತ್ರದ ಬಗ್ಗೆ ಕೇಳುತ್ತಿದ್ದಾರೆ. ಝೈದ್ ಅವರ ಅಭಿನಯ ಚೆನ್ನಾಗಿದೆ. ಅವಕಾಶ ಕೊಟ್ಟ ನಿರ್ಮಾಪಕರಿಗೆ ಹಾಗೂ ಇಲ್ಲಿ ಬಂದಿರುವ ಗಣ್ಯರಿಗೆ ಧನ್ಯವಾದ ಎಂದರು ನಾಯಕಿ ಸೋನಾಲ್ ಮೊಂತೆರೊ.
ಬೆಂಗಳೂರು: ಪಬ್ಲಿಕ್ ಟಿವಿ ಪ್ರಸ್ತುತಿಯ ವಿದ್ಯಾಪೀಠ ಎಜುಕೇಷನ್ ಎಕ್ಸ್‌ಪೋ ಇಂದು ವರ್ಣರಂಜಿತ ತೆರೆ ಕಂಡಿದೆ. ಕೊನೆ ದಿನವೂ ನಾನಾ ಕಡೆಗಳಿಂದ ಸಾವಿರಾರು ವಿದ್ಯಾರ್ಥಿಗಳು, ಪೋಷಕರು ಆಮಿಸಿದ್ದರು.
ಕಳೆದ ಮೂರು ದಿನಗಳಿಂದ ಆಯೋಜನೆಗೊಂಡಿದ್ದ ಎಕ್ಸ್‌ಪೋದಲ್ಲಿ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿ ಶೈಕ್ಷಣಿಕ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೆ ವಿವಿಧ ಕ್ರೀಡೆಗಳಲ್ಲೂ ಉತ್ಸಾಹದಿಂದಲೇ ಪಾಲ್ಗೊಂಡು ಎಲೆಕ್ಟ್ರಿಕ್ ಬೈಕ್, ಬೈಸಿಕಲ್ ಬಂಪರ್ ಬಹುಮಾನಗಳನ್ನು ಮುಡಿಗೇರಿಸಿಕೊಂಡಿದ್ದಾರೆ. ಮೂರು ದಿನಗಳಲ್ಲಿ ಸುಮಾರು 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅವರೊಂದಿಗೆ ಪೋಷಕರು ಎಕ್ಸ್ಪೋ ನಲ್ಲಿ ಭಾಗವಹಿಸಿ ಮಕ್ಕಳ ಶೈಕ್ಷಣಿಕ ಬದುಕಿಗೆ ಅಡಿಪಾಯ ಹಾಕಿಕೊಟ್ಟರು.
ಕೊನೆಯ ದಿನದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಅವರು, ಹಲವಾರು ಸವಾಲುಗಳ ನಡುವೆ ಈ ಶೈಕ್ಷಣಿಕ ಉತ್ಸವ ಯಶಸ್ವಿಯಾಗಿ ನಡೆದಿದೆ. 80ಕ್ಕೂ ಹೆಚ್ಚು ಸಂಸ್ಥೆಗಳು ಭಾಗವಹಿಸಿದ್ದು, ಸಂಸ್ಥೆಯ ಪ್ರತಿನಿಧಿಗಳು ಪ್ರತಿಬಾರಿಯಂತೆ ಕೌಟುಂಬಿಕ ವಾತಾವರಣದೊಂದಿಗೆ ಕಾರ್ಯಕ್ರಮ ನಡೆಸಿಕೊಟ್ಟಿದ್ದಾರೆ. ಅವರಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.
ಕೊರೊನಾಕ್ಕೂ ಮುಂಚೆ ಪಬ್ಲಿಕ್ ಟಿವಿ ಆಯೋಜಿಸಿದ್ದ ಶೈಕ್ಷಣಿಕ ಉತ್ಸವದಲ್ಲಿ 72 ಸಂಸ್ಥೆಗಳು ಭಾಗವಹಿಸಿದ್ದವು. ಈ ಬಾರಿ 80ಕ್ಕೂ ಹೆಚ್ಚು ಸಂಸ್ಥೆಗಳು ಶೈಕ್ಷಣಿಕ ಉತ್ಸವದಲ್ಲಿ ಪಾಲ್ಗೊಂಡಿದ್ದವು. ಈ `ವಿದ್ಯಾಪೀಠ’ ಶೈಕ್ಷಣಿಕ ಉತ್ಸವವು, ಕರ್ನಾಟಕದ ಇತಿಹಾಸದಲ್ಲೇ ಅತಿದೊಡ್ಡ ಶೈಕ್ಷಣಿಕ ಉತ್ಸವವಾಗಿದೆ. ಪೋಷಕರಿಂದಲೂ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಈ ಉತ್ಸವವು ಮಕ್ಕಳು ಭಿನ್ನವಾದ ಶೈಕ್ಷಣಿಕ ಮಾಹಿತಿಯನ್ನು ತುಲನೆ ಮಾಡುವುದಕ್ಕೆ ಮಾರ್ಗದರ್ಶನ ನೀಡಿದೆ. ಇದೇ ತೀರ್ಮಾನ ಅಂದುಕೊಳ್ಳಬೇಕಿಲ್ಲ. ಇದು ಮಾರ್ಗದರ್ಶನದ ವೇದಿಕೆ. ಅದು ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೆಲ ತಜ್ಞರು, ಪೋಷಕರು ಮತ್ತು ಮಕ್ಕಳ ಸಂಬಂಧದ ಬಗ್ಗೆಯೂ ಅದ್ಭುತ ಉಪನ್ಯಾಸಗಳನ್ನು ನೀಡಿದ್ದಾರೆ ಎಂದು ಹೇಳಿದ್ದಾರೆ.
ಈ ಕಾಲದಲ್ಲಿ ಪೋಷಕರು ಉತ್ತಮ ಕಾಲೇಜು, ವಿಶ್ವವಿದ್ಯಾಯಲವನ್ನು ಆಯ್ಕೆ ಮಾಡಿ ಸೇರಿಸಿದರೆ ಸಾಲದು. ಮಕ್ಕಳನ್ನು ಮಾನಸಿಕವಾಗಿ ತಯಾರು ಮಾಡಿ ಕಳುಹಿಸಬೇಕಾದ ಜವಾಬ್ದಾರಿ ಪೋಷಕರ ಮೇಲಿದೆ. ಪ್ರಸ್ತುತ ಶಿಕ್ಷಣ ಪರಿಸ್ಥಿತಿಯೂ ಹಾಗೆಯೇ ಇದೆ. ಬಹಳ ಮಂದಿ ಪೋಷಕರು ನನಗೆ ಕರೆ ಮಾಡುತ್ತಾರೆ. ನನ್ನ ಮಗು ಅದ್ಭುತ ಶಿಕ್ಷಣ ಸಂಸ್ಥೆಯಲ್ಲಿದೆ. ಆದರೆ ಇತ್ತೀಚೆಗೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾನೆ, ಬಹಳ ಕಷ್ಟ ಪಡುತ್ತಿದ್ದಾನೆ, ಏನು ಕೇಳಿದರೂ ಉತ್ತರ ಕೊಡುವುದಿಲ್ಲ, ಭಾವನೆಗಳನ್ನು ಹಂಚಿಕೊಳ್ಳುವುದಿಲ್ಲ, ನಿನಗೆ ಅರ್ಥವಾಗಲ್ಲ ಬಿಡು ಎಂದುಬಿಡುತ್ತಾನೆ. ಯಾವಾಗಲೂ ಅವನು ಯಾರನ್ನೋ ಲವ್ ಮಾಡುತ್ತಿದ್ದಾನೆ ಎಂಬುದೇ ನನಗೆ ಅನುಮಾನ, ಈ ರೀತಿಯ ಪ್ರಶ್ನೆಗಳನ್ನು ಕೇಳುತ್ತಾರೆ. ಆದರೆ ನನಗೆ ಅನ್ನಿಸುವುದು ಮಕ್ಕಳಿಗೆ ಕಾಲೇಜನ್ನು ಆಯ್ಕೆ ಮಾಡುವುದು ಸುಲಭ. ಆದರೆ ಪೋಷಕರು ಮಾನಸಿಕವಾಗಿ ತಯಾರು ಮಾಡಿಬೇಕು. ಅದಕ್ಕೆ ಪೂರಕವಾದ ವಾತಾವರಣವನ್ನು ಮನೆಯಲ್ಲಿ ನಿರ್ಮಾಣ ಮಾಡಿಕೊಡಬೇಕು. ಆ ರೀತಿಯ ಮಾರ್ಗದರ್ಶನ ವಿದ್ಯಾಪೀಠದಲ್ಲಿ ಸಿಕ್ಕಿದೆ ಎಂದು ಭಾವಿಸುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲಹರಿ ಆಡಿಯೋ ಸಂಸ್ಥೆಯ ಮಾಲೀಕರಾದ ವೇಲು ಮಾತನಾಡಿ, ನಾನು ಓದಿದ್ದು ಕನ್ನಡ ಮಾಧ್ಯಮದಲ್ಲಿ. ನಾವಿದ್ದಾಗ ಆಯ್ಕೆಗಳು ಇರಲಿಲ್ಲ. ಇಲ್ಲಿನ ಬಹು ಆಯ್ಕೆಗಳನ್ನು ನೋಡಿ ನಾನೂ ಒಂದು ಕಾಲೇಜಿಗೆ ಸೇರಬೇಕು ಅನ್ನಿಸಿತು. ಅದ್ಭುತ ಆಯ್ಕೆಗಳನ್ನು `ಪಬ್ಲಿಕ್ ಟಿವಿ’ ವೇದಿಕೆ ಮೂಲಕ ಅನಾವರಣ ಮಾಡಿತು. ಮಕ್ಕಳಿಗೆ ಓದಲು ಸಾವಿರಾರು ದಾರಿಗಳಿವೆ. ಉತ್ತಮ ದಾರಿಗಳಲ್ಲಿ ಸಾಗಲು ಅವಕಾಶಗಳಿವೆ. ಇದಕ್ಕೆ ಪಬ್ಲಿಕ್ ಟಿವಿ ವೇದಿಕೆ ಮಾಡಿಕೊಟ್ಟಿದ್ದಕ್ಕೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಏನೇನು ವಿಶೇಷತೆ?
ವಿದ್ಯಾಪೀಠ ಎಜುಕೇಶನ್ ಎಕ್ಸ್ಪೋ ಕೊನೆಯ ದಿನದಂದು ಬೆಳಗ್ಗೆ ಹ್ಯಾಂಡ್‌ರೈಟಿಂಗ್ ಅಂಡ್ ಮೆಮೊರಿ ಎಕ್ಸ್‌ಪರ್ಟ್‌ಡಾ.ರಫೀವುಲ್ಲಾ ಬೇಗ್ ಅವರಿಂದ Accelerate Your Career With Super Power Memory ಉಪನ್ಯಾಸ ನಡೆಯಿತು. ವಿದ್ಯಾರ್ಥಿಗಳು ಅತ್ಯಂತ ಉತ್ಸುಕತೆಯಿಂದಲೇ ಭಾಗವಹಿಸಿ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡರು. ಬಳಿಕ ನೀಟ್ ಬಗ್ಗೆ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ದೇಶಕಿ ಡಾ. ಸುಜಾತ ರಾಥೋಡ್ ಮಾಹಿತಿ ನೀಡಿದರು. ಮಧ್ಯಾಹ್ನ ಊಟದ ಬಳಿಕ Global Education Forum- Insights From NEX GEN Educationalist ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು. ಅತಿಥಿಗಳಾದ ಕ್ರಿಸ್ಟಿಯೋ ಜೋಸೆಫ್, ಅದ್ವಿತೀಯ, ಡಾ.ವಿದ್ಯಾಶೆಟ್ಟಿ, ವಿಜೇತ ಕೆಳಮನೆ, ಡಾ.ಶಂಕಪಾಲ್, ಡಾ.ಬಿ.ವಿ.ರವಿಶಂಕರ್ ವಿಶೇಷ ಉಪನ್ಯಾಸ ನಡೆಸಿಕೊಟ್ಟರು. ಇದನ್ನೂ ಓದಿ: ನೈಟ್‍ಕ್ಲಬ್‍ನಲ್ಲಿ 20 ಯುವಕರ ನಿಗೂಢ ಸಾವು
ಮಕ್ಕಳಿಗೆ ಫನ್‌ಗೇಮ್ ಅಚ್ಚುಮೆಚ್ಚು:
ವಿದ್ಯಾಪೀಠ ಕೊನೆ ದಿನವೂ ಹಲವು ಫನ್ ಗೇಮ್ಸ್ ನಡೆದವು. ಸ್ಲೋ ಸೈಕ್ಲಿಂಗ್ ರೇಸ್, ಕಾಲೇಜು ಲೋಗೋ ಹುಡುಕುವ ಸ್ಪರ್ಧೆ, ಬೈಕ್ ಕೀ ಚಾಲೆಂಜ್ ಸೇರಿದಂತೆ ಹಲವು ವಿಶೇಷ ಸ್ಪರ್ಧೆಗಳು ನಡೆದವು. ವಿದ್ಯಾರ್ಥಿಗಳು ಅತ್ಯಂತ ಉತ್ಸುಕತೆಯಿಂದಲೇ ಕ್ರೀಡೆಗಳಲ್ಲಿ ಭಾಗವಹಿಸಿದ್ದರು. ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ಹಾಗೂ ಗಾರ್ಡನ್ ಸಿಟಿ ವಿಶ್ವವಿದ್ಯಾನಿಲಯದ ಮುಖ್ಯಸ್ಥ ಜೋಸೆಫ್ ಅವರು ಎಲೆಕ್ಟ್ರಿಕ್ ಬೈಕ್ ಅನ್ನು ಬಹುಮಾನವಾಗಿ ನೀಡಿ ಅಭಿನಂದಿಸಿದರು. ಜೊತೆಗೆ ಲಕ್ಕಿ ಡಿಪ್ ಮೂಲಕ ವಿದ್ಯಾರ್ಥಿಗಳಿಗೆ ಬೈಸಿಕಲ್ ಬಹುಮಾನವಾಗಿ ನೀಡಲಾಯ್ತು. ಅಲ್ಲದೆ ಅರ್ಧ ಗಂಟೆಗೊಮ್ಮೆ ಆಕರ್ಷಕ ಬಹುಮಾನಗಳನ್ನು ವಿದ್ಯಾರ್ಥಿಗಳಿಗೆ ನೀಡಿದರು.
ಭಾರತೀಯ ಸಂಗೀತ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿರುವ ಲಹರಿ ಸಂಸ್ಥೆಯ ಲಹರಿ ವೇಲು ಈಗಾಗಲೇ ಗಾಯಕರಾಗಿ ಗುರುತಿಸಿಕೊಂಡಿದ್ದಾರೆ. ಇದೀಗ ಗಾಯನದ ಜೊತೆಗೆ ಗೀತರಚನೆ ಕೂಡ ಮಾಡಿದ್ದಾರೆ. ಇವರದ್ದೇ ಗೀತರಚನೆ ಮತ್ತು ಗಾಯನದಲ್ಲಿ ಮೂಡಿ ಬಂದಿರುವ ‘ಹುಟ್ಗುಣ ಸುಟ್ರು ಹೋಗಲ್ಲ’ ಗೀತೆಯು ಜೂನ್ 11 ರಂದು ಲಹರಿ ಯೂಟ್ಯೂಬ್ ಚಾನೆಲ್‌ನಲ್ಲಿ ರಿಲೀಸ್ ಆಗಲಿದೆ. ಅಂದು ಅವರ ಹುಟ್ಟುಹಬ್ಬವೂ ಆಗಿರುವುದರಿಂದ ಸಂಗೀತ ನಿರ್ದೇಶಕ ಅಭಿಮಾನ್ ರಾಯ್ ಅವರು ವೇಲು ಅವರ ಹುಟ್ಟುಹಬ್ಬಕ್ಕೆ ಇದನ್ನು ಗಿಫ್ಟ್ ಆಗಿ ನೀಡಿದ್ದಾರೆ.
ಇದು ಲಹರಿ ವೇಲು ಅವರು ಹಾಡಿರುವ ಎರಡನೇ ಗೀತೆಯಾಗಿದ್ದು, ಇವರು ಗಾಯಕರಾಗಿದ್ದು ವಿಶೇಷ ಸಂದರ್ಭದಲ್ಲಂತೆ. ಕೊರೊನಾ ಲಾಕ್‌ಡೌನ್ ಸಂದರ್ಭದಲ್ಲಿ ಲಹರಿ ಸಂಸ್ಥೆಯು ಅನೇಕರಿಗೆ ಸಹಕಾರ ನೀಡಿದೆ. ಆ ವೇಳೆಯಲ್ಲಿ ಸುಮ್ಮನೆ ತಮ್ಮ ಪಾಡಿಗೆ ತಾವು ವೇಲು ಹಾಡೊಂದನ್ನು ಗುನುಗುತ್ತಿದ್ದರಂತೆ. ಅದನ್ನು ಕೇಳಿಸಿಕೊಂಡ ಅಭಿಮಾನ್ ರಾಯ್ ನೀವ್ಯಾಕೆ ಹಾಡೋಕೆ ಟ್ರೈ ಮಾಡಬಾರದು ಅಂದರಂತೆ. ಮುಜುಗರದಿಂದಲೇ ವೇಲು ಒಪ್ಪಿಕೊಂಡು ಆನಂತರ ‘ಇರುವುದೊಂದೆ ಜನ್ಮ ನೀ ಸಹಾಯ ಮಾಡು ತಮ್ಮ’ ಗೀತೆಯನ್ನು ಹಾಡಿದ್ದಾರೆ. ಆ ಗೀತೆ ಒಂದು ಮಿಲಿಯನ್ ವೀಕ್ಷಣೆ ಪಡೆದಿದೆ. ಇದನ್ನೂ ಓದಿ: ಶ್ರದ್ಧಾ ಶ್ರೀನಾಥ್ ಗುಡ್ ಬೈ ಹೇಳಿದ್ದು ಯಾಕೆ.?
ಹೀಗೆ ಶುರುವಾದ ಗಾಯನ ಪಯಣ ಮುಂದುವರಿದದ್ದು ಮತ್ತದೆ ಅಭಿಮಾನ್ ರಾಯ್ ಸಂಗೀತ ಸಂಯೋಜನೆಯ ಮೂಲಕ. ಅದ್ಭುತ ಮಾತುಗಾರ ಆಗಿರುವ ಲಹರಿ ವೇಲು ಅವರು, ಅಷ್ಟೇ ಚೆನ್ನಾಗಿ ಜನರಿಗೆ ಮಾರ್ಗದರ್ಶನ ಮಾಡಬಲ್ಲರು. ಒಳ್ಳೊಳ್ಳೆ ಉದಾಹರಣಗಳನ್ನು ಕೊಟ್ಟು ತಿದ್ದಬಲ್ಲರು. ಈ ಗುಣವೇ ಅವರನ್ನು ಸಾಹಿತಿಯನ್ನಾಗಿ ಮಾಡಿದೆ. ಒಂದಷ್ಟು ಸಾಲುಗಳನ್ನು ಬರೆದು, ಅಭಿಮಾನ್ ರಾಯ್‌ಗೆ ಕಳುಹಿಸಿದ್ದಾರೆ. ಆ ಸಾಲುಗಳು ಹಾಡಾಗಿ ಜೂ.11 ರಂದು ಕೇಳುಗರ ಕಿವಿಗೂ ತಲುಪಲಿವೆ.
ಈ ಕುರಿತು ʻಪಬ್ಲಿಕ್ ಟಿವಿʼ ಡಿಜಿಟಲ್ ಜೊತೆ ಮಾತನಾಡಿದ ಲಹರಿ ವೇಲು ಅವರು, “ಈಗಾಗಲೇ ಅಭಿಮಾನ್ ರಾಯ್ ಅವರ ಸಂಗೀತ ಸಂಯೋಜನೆಯಲ್ಲಿ ಒಂದು ಗೀತೆಯನ್ನು ಹಾಡಿರುವೆ. ಇದು ಎರಡನೇ ಗೀತೆ. ಸ್ಫೂರ್ತಿ ತುಂಬಬಲ್ಲಂತಹ ಸಾಲುಗಳನ್ನು ಬರೆದು ರಾಯ್ ಅವರಿಗೆ ತೋರಿಸಿದೆ. ಸಾಲುಗಳು ಚೆನ್ನಾಗಿವೆ ಅವುಗಳನ್ನು ಹಾಡಾಗಿಸಿ ಅಂದರು. ಹೀಗೆ ಈ ಹಾಡು ಶುರುವಾಗಿ, ಇದೀಗ ರೆಕಾರ್ಡಿಂಗ್ ಕೂಡ ಆಗಿದೆ. ನಾನು ಕಂಡುಂಡ ಅನುಭವಗಳನ್ನೇ ಹಾಡಾಗಿಸಿದ್ದೇನೆ’ ಎನ್ನುತ್ತಾರೆ ವೇಲು ಅವರು.
ಕನ್ನಡ ಸಿನಿಮಾ ರಂಗಕ್ಕೆ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ನಿರ್ದೇಶಕ ಉಪೇಂದ್ರ ‘ಉಪ್ಪಿ ೨’ ಚಿತ್ರದ ನಂತರ ಯಾವುದೇ ಚಿತ್ರ ನಿರ್ದೇಶನ ಮಾಡಿರಲಿಲ್ಲ. ಉಪೇಂದ್ರ ನಿರ್ದೇಶನದ ಚಿತ್ರಕ್ಕಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆ ಶುಭಘಳಿಗೆ ಈಗ ಬಂದಿದೆ. ಉಪೇಂದ್ರ ನಿರ್ದೇಶಿಸಿ, ನಾಯಕರಾಗೂ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಸುದೀಪ್ ಆರಂಭ ಫಲಕ ತೋರಿದರೆ, ಶಿವರಾಜಕುಮಾರ್ ಕ್ಯಾಮೆರಾ ಚಾಲನೆ ನೀಡಿದರು. ಈ ಸಮಾರಂಭಕ್ಕೆ ಗೀತಾ ಶಿವರಾಜಕುಮಾರ್, ಡಾಲಿ ಧನಂಜಯ, ವಸಿಷ್ಠ ಸಿಂಹ ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು.
ಲಹರಿ ಫಿಲಂಸ್ ಹಾಗೂ VENUS entertainers ಲಾಂಛನದಲ್ಲಿ ಜಿ.ಮನೋಹರನ್ ಹಾಗೂ ಕೆ.ಪಿ.ಶ್ರೀಕಾಂತ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶನದೊಂದಿಗೆ ಉಪೇಂದ್ರ ನಾಯಕರಾಗೂ ನಟಿಸುತ್ತಿದ್ದಾರೆ. ಮೂರುನಾಮದ ಚಿಹ್ನೆಯೊಂದು ಈ ಚಿತ್ರದ ಶೀರ್ಷಿಕೆಯಾಗಿದೆ. ಇದನ್ನು ಕೆಲವರು ಮೂರು ನಾಮ ಅಂದುಕೊಂಡರೆ, ಮತ್ತೆ ಕೆಲವರು ಯು ಮತ್ತು ಐ ಅಂದುಕೊಳ್ಳುತ್ತಾರೆ. ನಾನು ಮತ್ತು ನೀನು ಎಂಬ ಅರ್ಥ ಬರುವ ಹಾಗಿದೆ ಆ ಚಿಹ್ನೆ. ಇದನ್ನೂ ಓದಿ : Exclusive : ರಾಷ್ಟ್ರ ಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯಸ್ಮರಣೆ : ಪುತ್ಥಳಿ ಅನಾವರಣ
ಒಟ್ಟಿನಲ್ಲಿ ತಮ್ಮ ಹಿಂದಿನ ಚಿತ್ರಗಳಲ್ಲಿ ವಿಭಿನ್ನ ಶೀರ್ಷೆಕೆಯಿಟ್ಟು ಎಲ್ಲರ ತಲೆಗೆ ಕೆಲಸ ಕೊಡುತ್ತಿದ್ದ ಉಪೇಂದ್ರ ಅವರು ಈ ಚಿತ್ರದಲ್ಲೂ ಹಾಗೆ ಮಾಡಿದ್ದಾರೆ. ಈ ಕುರಿತು ಮಾತನಾಡಿದ ಉಪೇಂದ್ರ, “ಇಂದಿನಿಂದ ಚಿತ್ರೀಕರಣ ಆರಂಭಿಸಿದ್ದೇವೆ. ಲಹರಿ ಸಂಸ್ಥೆಯವರು ಹಾಗೂ ಕೆ.ಪಿ.ಶ್ರೀಕಾಂತ್ ನಿರ್ಮಾಣ ಮಾಡುತ್ತಿದ್ದಾರೆ. ವಿಭಿನ್ನ ಶೀರ್ಷಿಕೆ ಯಿಟ್ಟಿದ್ದೀನಿ. ನಿಮಗೆಲ್ಲಾ ಏನು ಅನಿಸುತ್ತದಯೋ, ಅದೇ ಶೀರ್ಷಿಕೆ ಆಗಿರುತ್ತದೆ. ನಾನು ಕಥೆ ಸಿದ್ದಮಾಡಿಕೊಂಡಿರುತ್ತೇನೆ. ಮತ್ತೆ ಬೇರೆ ಅಲೋಚನೆ ಬಂದರೆ, ಬದಲಿಸುತ್ತೀನಿ. ಚಿತ್ರದ ಶೀರ್ಷಿಕೆ ಹಾಗೂ ಕುದುರೆ ಪೋಸ್ಟರ್ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದೆ. ಅದರ ಬಗ್ಗೆ ಒಬ್ಬೊಬ್ಬರ ಮನಸ್ಸಿನಲ್ಲಿ ಒಂದೊಂದು ಹೊಳೆಯುತ್ತಿದೆ. ನಿಮ್ಮಗೆಲ್ಲಾ ಏನು ಅನಿಸುವುದೊ, ಅದು ಚಿತ್ರದಲ್ಲಿ ಇರುತ್ತದೆ. ನಾನು ನನ್ನ ನಿರ್ದೇಶಕರ ತಂಡ ಹಾಗೂ ಇನ್ನೂ ಕೆಲವರ ಬಳಿ ಕಥೆಯ ಬಗ್ಗೆ ಹೇಳಿರುತ್ತೇನೆ. ಅವರಿಗೆ ಅದನ್ನು ಹೇಳಲು ಬರುವುದಿಲ್ಲ ಎಂದ ಉಪೇಂದ್ರ ಅವರು ಒಟ್ಟಿನಲ್ಲಿ ಉತ್ತಮ ಚಿತ್ರವೊಂದನ್ನು ನಿಮ್ಮ ಮುಂದೆ ಇಡುತ್ತೇನೆ” ಎಂದಿದ್ದಾರೆ.
ಕಲಾವಿದರು ಹಾಗೂ ತಾಂತ್ರಿಕವರ್ಗದ ಕುರಿತು ಮಾಹಿತಿಯನ್ನು ಮುಂದಿನ ದಿನಗಳಲ್ಲಿ ನೀಡುವುದಾಗಿ ಉಪೇಂದ್ರ ಹೇಳಿದರು.ಉಪೇಂದ್ರ ಅವರು ನಿರ್ದೇಶನಕ್ಕೆ ಒಪ್ಪಿರುವುದು ಖುಷಿಯಾಗಿದೆ. ಶಿವಣ್ಣ ಹಾಗೂ ಗೀತಕ್ಕ ಅವರ ಆಶೀರ್ವಾದದಿಂದ ಮೂರನೇ ಚಿತ್ರ ನಿರ್ಮಾಣ ಮಾಡುತ್ತಿದ್ದೇವೆ. ಖ್ಯಾತ ಲಹರಿ ಫಿಲಂಸ್ ನವರು ನಾವು ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದೇವೆ. ನಿಮ್ಮ ಹಾರೈಕೆ ಇರಲಿ ಎಂದರು ಕೆ.ಪಿ.ಶ್ರೀಕಾಂತ್. ಇದನ್ನೂ ಓದಿ : ಹಾಸ್ಯನಟ ನರಸಿಂಹರಾಜು ಹಿರಿಯ ಪುತ್ರಿ, ನಿರ್ದೇಶಕ ಅರವಿಂದ್ ತಾಯಿ ಧರ್ಮವತಿ ನಿಧನ
ನಾನು ಹಾಗೂ ಉಪೇಂದ್ರ ಅವರು ಸಹಪಾಠಿಗಳು. ತುಂಬಾ ವರ್ಷಗಳಿಂದ ಅವರು ಪರಿಚಯ. ಅವರೊಂದಿಗೆ ಸಿನಿಮಾ ಮಾಡುತ್ತಿರುವುದು ಸಂತೋಷವೆಂದರು ಲಹರಿ ವೇಲು. ಲಹರಿ ಸಂಸ್ಥೆಯ ಮನೋಹರ್ ನಾಯ್ಡು, ನವೀನ್, ಕಾಕ್ರೋಜ್ ಸುಧಿ, ನಟಿ ತ್ರಿವೇಣಿ ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ಅತಿಥಿಗಳಾಗಿ ಹಿರಿಯ ನಟರಾದ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಆಗಮಿಸಿದ್ದರು. ಸಿನಿಮಾ ಮತ್ತು ಉಪೇಂದ್ರ ಕುರಿತಾಗಿ ಅತಿಥಿಗಳು ಮನದುಂಬಿ ಹಾರೈಸಿದರು. ಇದನ್ನೂ ಓದಿ : ನಿತ್ಯಾನಂದ ಕುರಿತು ಸಾಕ್ಷ್ಯಚಿತ್ರ : ದೇವಮಾನವನ ನಿಜಬಣ್ಣ ಬಟಾಬಯಲು
ಶಿವರಾಜ್ ಕುಮಾರ್ ಮಾತನಾಡಿ, “ನಾನು ಉಪ್ಪಿಯನ್ನು ಸಾಕಷ್ಟು ದಿನದಿಂದ ನೋಡಿದ್ದೀನಿ. ಉಪೇಂದ್ರ ಮತ್ತು ನಾನು ಒಂದು ರೀತಿಯಲ್ಲಿ ಬಾಯ್ ಫ್ರೆಂಡ್ ತರಹ. ಉಪೇಂದ್ರ ನಿರ್ದೇಶನದ ನಾನು ನಟಿಸಿರುವ ಓಂ ಸಿನಿಮಾ ನನ್ನ ವೃತ್ತಿ ಬದುಕಿಗೆ ಟರ್ನಿಂಗ್ ಪಾಯಿಂಟ್. ಏಳು ವರ್ಷದ ನಂತರ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಹಾಗಾಗಿ ಸಿನಿಮಾ ವಿಭಿನ್ನವಾಗಿಯೇ ಇರಲಿದೆ’ ಎಂದರು. ಇದನ್ನೂ ಓದಿ : ಉಪೇಂದ್ರ ನಿರ್ದೇಶಿಸಿ, ನಟಿಸಲಿರುವ ಸಿನಿಮಾಗೆ ಮುಹೂರ್ತ : ಹಣೆ ಮೇಲೆ ಟೈಟಲ್ ಹಾಕಿಕೊಂಡು ಬಂದ ಚಿತ್ರತಂಡ
“ನಾನು ಇವತ್ತು ವೇದಿಕೆಯ ಮೇಲೆ ಉಪ್ಪಿ ಅಭಿಮಾನಿಯಾಗಿ ಕೂತಿದ್ದೇನೆ. ಉಪೇಂದ್ರ ಅವರು ಸಿನಿಮಾ ನಿರ್ದೇಶನ ಮಾಡುತ್ತಿರುವುದು ಖುಷಿಯಾಗಿದೆ. ಅದರಲ್ಲೂ ಕುದುರೆ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ಮೆಲೆ ಕುದುರೆ ಓಟು ಶುರು. ಆದಷ್ಟು ಬೇಗ ಸಿನಿಮಾ ಮುಗಿಸಿ, ನಾನಂತೂ ನೋಡಲು ಕಾಯುತ್ತಿದ್ದೇನೆ’ ಎಂದು ಕಿಚ್ಚ ಸುದೀಪ್. ಇದನ್ನೂ ಓದಿ : ಕನ್ನಡದ ಬಹುತೇಕ ದಿಗ್ಗಜರ ಜೊತೆ ನಟಿಸಿರುವ ನಟ ಉದಯ್ ಹುತ್ತಿನಗದ್ದೆ ನಿಧನ
‘ಉಪೇಂದ್ರ ಅವರು ಕಾಮಾನ್ ಮ್ಯಾನ್ ಪರವಾಗಿ ಸಿನಿಮಾ ಮಾಡುತ್ತಲೇ ಅವರನ್ನು ಎಚ್ಚರಿಸುತ್ತಾರೆ. ಈ ಪೋಸ್ಟರ್ ನಲ್ಲಿ ಎವಲ್ಯೂಷನ್ ಥಿಯೇರಿ ಇದೆ. ಅಲ್ಲಿಂದಲೇ ಕತೆ ಶುರುವಾಗುತ್ತೆ ಅನಿಸತ್ತೆ. ಒಳ್ಳೆಯ ಸಿನಿಮಾ ಬರಲಿದೆ’ ಎಂದು ಡಾಲಿ ಧನಂಜಯ್. ಇದನ್ನೂ ಓದಿ : ಕ್ಯಾಪ್ ತೊಟ್ಟು ಬೇಬಿ ಬಂಪ್ ಫೋಟೋಶೂಟ್‌ನಲ್ಲಿ ಮಿಂಚಿದ ಪ್ರಣಿತಾ
ಉಪೇಂದ್ರ ಅವರು ಸಿನಿಮಾಗಳನ್ನು ನೋಡುತ್ತಲೇ ಬಂದವನು ನಾನು. ಬ್ಲಾಕ್ ಟಿಕೆಟ್ ತಗೊಂಡು ಸಿನಿಮಾ ನೋಡುತ್ತಿದ್ದೆ ಎಂದು ಉಪ್ಪಿ ಮೇಲಿನ ಅಭಿಮಾನವನ್ನು ಹೇಳಿಕೊಂಡರು ವಸಿಷ್ಠ ಸಿಂಹ. ಈ ಕಾರ್ಯಕ್ರಮದಲ್ಲಿ ನಿರ್ಮಾಪಕರಾದ ಮನೋಹರ್ ನಾಯ್ಡು, ಲಹರಿ ವೇಲು, ಕೆ.ಪಿ. ಶ್ರೀಕಾಂತ್ ಸೇರಿದಂತೆ ಹಲವರು ಹಾಜರಿದ್ದರು.
ಇಂದು ಬೆಳಗ್ಗೆ ಉಪೇಂದ್ರ ನಟಿಸಿ, ನಿರ್ದೇಶನದ ಮಾಡುತ್ತಿರುವ ಹೊಸ ಸಿನಿಮಾ ಮುಹೂರ್ತ ಬೆಂಗಳೂರಿನ ಬಂಡೆಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಈ ಸಮಾರಂಭಕ್ಕೆ ನಟ ಉಪೇಂದ್ರ, ನಿರ್ಮಾಪಕರಾದ ಜಿ.ಮನೋಹರನ್ ಮತ್ತು ಕೆ.ಪಿ. ಶ್ರೀಕಾಂತ್, ಲಹರಿ ವೇಲು ಮತ್ತು ಸಹ ನಿರ್ಮಾಪಕರಾದ ನವೀನ್ ಮನೋಹರನ್ ಸೇರಿದಂತೆ ಸಿನಿಮಾದ ತಂಡದ ಬಹುತೇಕರು ತಮ್ಮ ಸಿನಿಮಾದ ಟೈಟಲ್ ಅನ್ನು ಹಣೆ ಮೇಲೆ ಹಾಕಿಕೊಂಡು ಆಗಮಿಸಿದ್ದರು.
ಬೆಳಗ್ಗೆ ಎಂಟು ಗಂಟೆಗೆ ಸ್ಪೆಷಲ್ ಗೆಟಪ್ ನಲ್ಲಿ ಉಪೇಂದ್ರ ಮತ್ತು ಟೀಮ್ ಎಂಟ್ರಿ ಕೊಟ್ಟು ಕುತೂಹಲಕ್ಕೆ ಕಾರಣವಾದರು. ಇದೇ ಸಂದರ್ಭದಲ್ಲಿ ದೇವಸ್ಥಾನದ ಮುಂದೆ ಉಪ್ಪಿ ಅಭಿಮಾನಿಗಳು ಸೇರಿಕೊಂಡು, ಅವರು ಕೂಡ ತಮ್ಮ ನೆಚ್ಚಿನ ನಟನ ಸಿನಿಮಾ ಟೈಟಲ್ ಅನ್ನು ಹಣೆ ಮೇಲೆ ಹಾಕಿಕೊಂಡು ಉಪೇಂದ್ರ ಅವರಿಗೆ ಜೈಕಾರ ಹಾಕುತ್ತಿದ್ದರು. ಇದನ್ನೂ ಓದಿ : ಪಠ್ಯಪುಸ್ತಕದಲ್ಲಿ ನಮ್ಮ ರಾಜರ ಬಗ್ಗೆ 2 ಸಾಲು, ಮೊಘಲರ ಬಗ್ಗೆ ಜಾಸ್ತಿ ಉಲ್ಲೇಖ: ಅಕ್ಷಯ್ ಕುಮಾರ್
ಈ ಚಿತ್ರಕ್ಕೆ ವಿಚಿತ್ರ ರೀತಿಯಲ್ಲಿ ಟೈಟಲ್ ಇಟ್ಟಿದ್ದಾರೆ ಉಪೇಂದ್ರ. ಅದನ್ನು ಧಾರ್ಮಿಕ ಚಿಹ್ನೆ (ನಾಮ) ಎಂದಾದರೂ, ಕರೆಯಬಹುದು ‘ಯು’ ಮತ್ತು ‘ಐ’ ಎಂದಾದರು ಅಂದುಕೊಳ್ಳಬಹುದು. ನೀನು ಮತ್ತು ನಾನು ಅಂತಾದರೂ ಊಹಿಸಿಕೊಳ್ಳಬಹುದು. ಈ ಚಿತ್ರಕ್ಕೆ ಏನೆಂದು ಕರೆಯಬಹುದು ಎನ್ನುವುದಕ್ಕೆ ಪ್ರೇಕ್ಷಕರಿಗೆ ಬಿಟ್ಟು ತಮ್ಮ ಪಾಡಿಗೆ ತಾವು ಇಂದು ಚಿತ್ರಕ್ಕೆ ಮುಹೂರ್ತ ಮಾಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ಪತ್ನಿ ವಿರುದ್ಧ ಹೂಡಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಗೆದ್ದ ಹಾಲಿವುಡ್ ಸ್ಟಾರ್ ನಟ ಜಾನಿ ಡೆಪ್ : ನೂರಾರು ಕೋಟಿ ಪರಿಹಾರ
ಈ ಸಮಾರಂಭಕ್ಕೆ ಹಿರಿಯ ನಟ ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಡಾಲಿ ಧನಂಜಯ್ ಮತ್ತು ವಸಿಷ್ಠ ಸಿಂಹ ಅತಿಥಿಗಳಾಗಿ ಆಗಮಿಸಿದ್ದರು. ನೆಚ್ಚಿನ ನಟ ಉಪೇಂದ್ರ ಅವರ ಬಗ್ಗೆ ಅತಿಥಿಗಳೆಲ್ಲ ಮಾತನಾಡಿದರು.
ಬೆಂಗಳೂರು: ವಾಸವಿ ಯುವ ವೇದಿಕೆ ವತಿಯಿಂದ ಆಯೋಜಿಸಿದ್ದ 5ನೇ ವರ್ಷದ ವಾಸವಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಲಾಯಿತು.
ಸಮುದಾಯದ ಯುವಕರನ್ನು ಒಟ್ಟುಗೂಡಿಸುವ ಸಲುವಾಗಿ ಹಾಗೂ ಕ್ರೀಡಾ ಪಟುಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ಆಯೋಜಿಸಿದ್ದ ಕ್ರೀಡಾಕೂಟಕ್ಕೆ ಸಚ್ಚಿದಾನಂದ ಸರಸ್ವತಿ ಶ್ರೀಗಳು ಚಾಲನೆ ನೀಡಿದರು. ಎರಡು ದಿನಗಳ ಕಾಲ ಬಸವನಗುಡಿಯ ಎಪಿಎಸ್ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಟೂರ್ನಮೆಂಟ್‌ನಲ್ಲಿ ನಗರದ ವಿವಿಧ ಭಾಗಗಳ 16 ತಂಡಗಳು ಭಾಗಿಯಾಗಿವೆ.
ಲಹರಿ ಸಂಸ್ಥೆಯ ಮುಖ್ಯಸ್ಥರಾದ ಲಹರಿ ವೇಲು ಮಾತನಾಡಿ, 33 ವರ್ಷದ ನಂತರ ಈ ಮೈದಾನದಲ್ಲಿ ಕ್ರಿಕೆಟ್ ಆಡಲು ಬಂದಿದ್ದೇನೆ. ಈ ಹಿನ್ನೆಲೆಯಲ್ಲಿ ವಾಸವಿ ಗ್ರೂಪ್‍ಗೆ ಅಭಿನಂದನೆ ಹೇಳಲು ಬಯಸುತ್ತೇನೆ. ಇವರು 15 ವರ್ಷಗಳಿಂದ ಪಂದ್ಯಾವಳಿಯನ್ನು ಮಾಡಿಕೊಂಡು ಬರುತ್ತಿದ್ದಾರೆ. ಒಳ್ಳೊಳ್ಳೆ ಆಟಗಾರರಿದ್ದಾರೆ ಎಂದರು. ಇದನ್ನೂ ಓದಿ: ಧರ್ಮವೇ ಮುಖ್ಯ- ಹಾಲ್ ಟಿಕೆಟ್ ಪಡೆದರೂ ಪರೀಕ್ಷೆಗೆ ಬಾರದ ಉಡುಪಿಯ ಅಲ್ಮಾಸ್