Tag: lake water

  • ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆ ನೀರು ಪಾಲಾದ ಯುವಕ

    ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆ ನೀರು ಪಾಲಾದ ಯುವಕ

    ಹುಬ್ಬಳ್ಳಿ: ನೀರಸಾಗರ ಜಲಾಶಯದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಯುವಕನೊಬ್ಬ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.

    ಕಿರಣ್ ರಜಪೂತ(22) ಮೃತ ಯುವಕನಾಗಿದ್ದಾನೆ. ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿಯಾಗಿರುವ ಕಿರಣ್, ಭಾನುವಾರ ತನ್ನ ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದ. ಜಲಾಶಯದ ದಡದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿರುವ ವೇಳೆಯಲ್ಲಿ ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ್ ಕೊಚ್ಚಿ ಹೋಗಿದ್ದಾನೆ. ಇದನ್ನೂ ಓದಿ: ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ

     ಕಳೆದ 24 ಗಂಟೆಯಿಂದ ಕಿರಣ್‍ಗಾಗಿ ಹುಡುಕಾಟ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗೆ ಇದೀಗ ಮೃತದೇಹ ಪತ್ತೆಯಾಗಿದ್ದು, ಕಿರಣ್ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಕ್ಕಿ ಹರಿಯುವ ತುಂಗಭದ್ರಾ ನದಿಯಲ್ಲಿ ಪ್ರವಾಸಿಗರ ಮೋಜುಮಸ್ತಿ – ಮಿತಿಮೀರಿದ ಹುಚ್ಚಾಟ

    Live Tv
    [brid partner=56869869 player=32851 video=960834 autoplay=true]

  • ಕಲುಷಿತಗೊಂಡ ಕುರ್ಕಿ ಕೆರೆ- 3 ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ

    ಕಲುಷಿತಗೊಂಡ ಕುರ್ಕಿ ಕೆರೆ- 3 ಲಕ್ಷಕ್ಕೂ ಅಧಿಕ ಮೀನುಗಳ ಮಾರಣಹೋಮ

    ಕೋಲಾರ: ತಾಲೂಕಿನ ನರಸಾಪುರ ಬಳಿ ಇರುವ ಕುರ್ಕಿ ಕೆರೆ ಕಲುಷಿತಗೊಂಡಿದ್ದು, ಸುಮಾರು 3 ಲಕ್ಷಕ್ಕೂ ಅಧಿಕ ಮೀನುಗಳ ಮಾರಣ ಹೋಮ ನಡೆದಿದೆ.

    ನೀರು ಕಲುಷಿತಗೊಂಡ ಪರಿಣಾಮ ಲಕ್ಷಾಂತರ ಮೀನುಗಳು ಕರೆಯಲ್ಲಿ ಸಾವನ್ನಪ್ಪಿವೆ. ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಒಳಪಡುವ ಕೆರೆ ಇದಾಗಿದ್ದು, ಕೆರೆಯಲ್ಲಿ ಮೀನು ಸಾಕಾಣಿಕೆ ಮಾಡಲು ಸಮೀರ್ ಖಾನ್ ಎಂಬುವವರು ಸುಮಾರು 3 ಲಕ್ಷ ರೂಪಾಯಿಗೆ ಮೀನುಗಾರಿಕೆ ಇಲಾಖೆ ಮೂಲಕ ಟೆಂಡರ್ ಪಡೆದಿದ್ದಾರೆ. ಅದರಂತೆ ತಮಿಳುನಾಡಿನಿಂದ 3 ಲಕ್ಷದಷ್ಟು ವಿವಿಧ ತಳಿಯ ಮೀನು ಮರಿಗಳನ್ನ ಎರಡು ತಿಂಗಳ ಹಿಂದೆಯೆ ಕರೆಯಲ್ಲಿ ತಂದು ಬಿಟ್ಟಿದ್ದಾರೆ. ಆದರೆ ಕಳೆದ 2 ದಿನಗಳಿಂದ ಕೆರೆಯಲ್ಲಿರುವ ಲಕ್ಷಾಂತರ ಮೀನುಗಳು ಒಂದೊಂದಾಗಿ ಮೃತಪಡುತ್ತಿವೆ.

    ಮೀನುಗಳ ಸಾವಿಗೆ ಕೆರೆ ಪಕ್ಕದಲ್ಲಿರುವ ಪ್ರಕಾಶ್ ಬಸ್ ತಯಾರಿಕ ಘಟಕದಿಂದ ಕಲುಷಿತ ನೀರು ಮಿಶ್ರಣವಾಗಿರುವ ಶಂಕೆ ವ್ಯಕ್ತವಾಗಿದ್ದು, ಕಾರ್ಖಾನೆ ತ್ಯಾಜ್ಯ ನೀರು ಕೆರೆ ಸೇರಿರುವ ಪರಿಣಾಮ ಲಕ್ಷಾಂತರ ಮೀನುಗಳ ಸಾವನ್ನಪ್ಪಿರಬಹುದು ಎಂಬ ಅನುಮಾನ ಹುಟ್ಟುಕೊಂಡಿದೆ. ಮೀನುಗಳ ಸಾವಿನಿಂದ ಕೆರೆ ದರ್ವಾಸನೆ ಹೊಡೆಯುತ್ತಿದ್ದು, ಮೃತ ಮೀನುಗಳನ್ನ ಪ್ರಾಣಿ ಪಕ್ಷಿಗಳು ಕೂಡ ಸೇವಿಸದೆ ಇರುವುದು ಯಾರಾದರು ದುಷ್ಕರ್ಮಿಗಳು ವಿಷ ಪ್ರಾಶನ ಮಾಡಿದ್ದಾರ ಅನ್ನೋ ಅನುಮಾನ ಕೂಡ ಮೂಡಿದೆ.

    ಲಕ್ಷಾಂತರ ರೂಪಾಯಿ ಬಂಡವಾಳ ಹೂಡಿದ್ದ ಸಮೀರ್ ಅವರಿಗೆ ಇಲಾಖೆ ಸೂಕ್ತ ಪರಿಹಾರ ಕೊಡಬೇಕು ಎಂಬುದು ಸ್ಥಳೀಯರ ಮನವಿಯಾಗಿದೆ. ಅಲ್ಲದೆ ಮೀನುಗಳ ಸಾವಿಗೆ ನಿಖರವಾದ ಕಾರಣ ತಿಳಿಯದೆ ಇರುವುದರಿಂದ ಕೆರೆಯಲ್ಲಿರುವ ಹಾವು-ಏಡಿ ಸೇರಿದಂತೆ ಜಲಚರಗಳು ಮೃತಪಡುವ ಆತಂಕ ಸ್ಥಳೀಯರಲ್ಲಿ ಶುರುವಾಗಿದೆ. ಮೀನುಗಳ ಸಾವಿಗೆ ನಿಖರವಾದ ಕಾರಣ ಹುಡುಕಿ ಸಮೀರ್ ಅವರಿಗೆ ಸೂಕ್ತ ಪರಿಹಾರ ನೀಡಬೇಕು. ಇದರ ಜೊತೆಗೆ ಮತ್ತಷ್ಟು ಜಲಚರಗಳು ಮೃತಪಡುವ ಮುನ್ನ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ.

  • ರಾಯಚೂರು ನಗರ ಸಭೆಯಿಂದ ಜನರಿಗೆ ಪಾಚಿಗಟ್ಟಿದ ಕೊಳಚೆ ನೀರು ಪೂರೈಕೆ

    ರಾಯಚೂರು ನಗರ ಸಭೆಯಿಂದ ಜನರಿಗೆ ಪಾಚಿಗಟ್ಟಿದ ಕೊಳಚೆ ನೀರು ಪೂರೈಕೆ

    ರಾಯಚೂರು: ಹಸಿರು ಬಣ್ಣದ ಪಾಚಿಗಟ್ಟಿದ ಕೊಳಚೆ ನೀರನ್ನ ಕನಿಷ್ಠ ಪ್ರಮಾಣದ ಶುದ್ಧೀಕರಣವನ್ನೂ ಮಾಡದೇ ನಗರ ಸಭೆ ಕೊಳಾಯಿಗೆ ನೇರವಾಗಿ ಬಿಡುಗಡೆ ಮಾಡುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ.

    ರಾಂಪುರ ಕೆರೆಯಿಂದ ನಗರಕ್ಕೆ ಹರಿಸುವ ನೀರನ್ನ ಶುದ್ದೀಕರಿಸುವ ಕನಿಷ್ಠ ಕೆಲಸವನ್ನೂ ನಗರಸಭೆ ಮಾಡುತ್ತಿಲ್ಲ. ಶುದ್ಧೀಕರಣ ಘಟಕ ಕೆಟ್ಟು ಹೋಗಿ ಸುಮಾರು ವರ್ಷಗಳೇ ಕಳೆದು ಹೋಗಿದೆ. ಇಲ್ಲಿನ ಯಂತ್ರೋಪಕರಗಳು ತುಕ್ಕು ಹಿಡಿದಿದ್ದು ಯಾವೊಬ್ಬ ಸಿಬ್ಬಂದಿಯೂ ಇಲ್ಲಿ ಕೆಲಸದಲ್ಲಿಲ್ಲ. ಹೀಗಾಗಿ ಸಾರ್ವಜನಿಕರು ಕೊಳಚೆ ನೀರನ್ನೇ ಕುಡಿಯಬೇಕಾದ ಅನಿವಾರ್ಯತೆ ಉಂಟಾಗಿದೆ.

    ನೀರಿನಲ್ಲಿ ಹುಳು, ಕಸಕಡ್ಡಿ ಬರುವುದರಿಂದ ವಯಸ್ಸಿನ ಭೇದವಿಲ್ಲದೆ ಸಾರ್ವಜನಿಕರು ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಜಲ ಮೂಲದ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಜಿಲ್ಲೆಯಲ್ಲಿ ಕೃಷ್ಣ, ತುಂಗಾಭದ್ರ ಎರಡು ನದಿಗಳಿದ್ದರೂ ಕೊಳಚೆ ನೀರನ್ನ ಸಾರ್ವಜನಿಕರಿಗೆ ಸರಬರಾಜು ಮಾಡಲಾಗುತ್ತಿದೆ. ಈಗಾಗಲೇ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ರೂ ಪ್ರಯೋಜನವಾಗಿಲ್ಲ. ರಾಯಚೂರು ನಗರ ಶಾಸಕ ಡಾ.ಶಿವರಾಜ್ ಪಾಟೀಲ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸ್ವತಃ ವೈದ್ಯರಾಗಿದ್ದರೂ ಜನರಿಗೆ ಶುದ್ಧ ನೀರನ್ನ ಕೊಡುವ ಕೆಲಸ ಮಾಡುತ್ತಿಲ್ಲ. ಹೀಗಾಗಿ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳು ನಾಯಿಕೊಡೆಯಂತೆ ತಲೆಎತ್ತಿಕೊಳ್ಳುತ್ತಿವೆ.

    ಒಟ್ನಲ್ಲಿ ರಾಯಚೂರಿನ ಜನತೆ ನಿತ್ಯ ನರಕವನ್ನ ನೋಡುತ್ತಿದ್ದು, ಇದೇ ಸ್ವರ್ಗ ಅಂತ ಆಸ್ಪತ್ರೆಯ ಬಿಲ್ಲು ಕಟ್ಟುತ್ತಾ ಬದುಕುತ್ತಿದ್ದಾರೆ. ಇಲ್ಲಿನ ಜನ ಇನ್ನೂ ಬದುಕಿದ್ದಾರೆ ಅಂತ ನಗರಸಭೆ ಹಾಗೂ ಜಿಲ್ಲಾಡಳಿತ ಮಲೀನವಾದ ನೀರನ್ನೇ ಕುಡಿಯಲು ಸರಬರಾಜು ಮಾಡುತ್ತಿವೆ. ಕನಿಷ್ಠ ಈಗಲಾದ್ರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳಬೇಕಿದೆ. ನಗರದ ಜನತೆಗೆ ಶುದ್ಧ ಕುಡಿಯುವ ನೀರನ್ನ ಒದಗಿಸಬೇಕಿದೆ.