Tag: lake

  • ಈಜು ಬಾರದೇ ಯುವಕ ಕೆರೆಯಲ್ಲಿ ಮುಳುಗಿ ಸಾವು

    ಈಜು ಬಾರದೇ ಯುವಕ ಕೆರೆಯಲ್ಲಿ ಮುಳುಗಿ ಸಾವು

    ಚಿಕ್ಕಮಗಳೂರು: ಸ್ನೇಹಿತರ ಜೊತೆ ಕೆರೆಗೆ ಇಳಿದಿದ್ದ ಯುವಕ ಈಜು ಬಾರದೇ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು (Chikkamagaluru) ತಾಲೂಕಿನ ನಲ್ಲೂರು (Nallur) ಗ್ರಾಮದಲ್ಲಿ ನಡೆದಿದೆ.

    ಮೃತನನ್ನು ನಗರದ ಕೋಟೆ ನಿವಾಸಿಯಾದ ಹರ್ಷ (20) ಎಂದು ಗುರುತಿಸಲಾಗಿದೆ. ಮೃತ ಯುವಕ ನಗರದ ಐಡಿಎಸ್‌ಜಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಬಿಕಾಂ ಓದುತ್ತಿದ್ದ. ಹರ್ಷ ತನ್ನ ಸ್ನೇಹಿತರ ಜೊತೆ ಕೆರೆಗೆ ತೆರಳಿದ್ದ. ಈ ವೇಳೆ ಈಜು ಬಾರದೇ ಹರ್ಷ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

    ಈ ವೇಳೆ ಜೊತೆಯಲ್ಲಿದ್ದ ಸ್ನೇಹಿತರು ಹರ್ಷನನ್ನು ಉಳಿಸಲು ಪ್ರಯತ್ನಿಸಿದರು. ಆದರೆ ಅದು ಸಾಧ್ಯವಾಗಿಲ್ಲ. ಸ್ನೇಹಿತರ ಕಣ್ಣೆದುರೇ ಹರ್ಷ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ನಂತರ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದಾರೆ. ವಯಸ್ಸಿಗೆ ಬಂದಿದ್ದ, ಎದೆಮಟ್ಟಕ್ಕೆ ಬೆಳೆದ ಮಗನ ಶವ ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಮಂಗಳೂರಿನ ಲೇಡಿಹಿಲ್‌ನಲ್ಲಿ ಕಾರು ಹಿಟ್ & ರನ್ – ಓರ್ವ ಯುವತಿ ಸಾವು, ನಾಲ್ವರಿಗೆ ಗಾಯ

    ಘಟನೆ ಸಂಬಂಧ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೇ ಕೆರೆಯಲ್ಲಿ ಕಳೆದ 15 ದಿನಗಳ ಹಿಂದಷ್ಟೇ ಕೂಲಿ ಕೆಲಸದ ಜೊತೆ ಉಪ ವೃತ್ತಿಯಾಗಿ ಡ್ಯಾನ್ಸ್ ಮಾಸ್ಟರ್ ಕೆಲಸ ಮಾಡುತ್ತಿದ್ದ ಸಂತೋಷ್ ಎಂಬ ಯುವಕ ಕೂಡ ಕುಡಿದ ಮತ್ತಿನಲ್ಲಿ ಇದೇ ಕೆರೆಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ. ಇದನ್ನೂ ಓದಿ: ಡಿಕೆಶಿ ಹಸ್ತಕ್ಷೇಪಕ್ಕೆ ಸತೀಶ್ ಕಿಡಿ – ಕಾಂಗ್ರೆಸ್‌ಗೂ ಬೆಳಗಾವಿ ರಾಜಕೀಯ ಕಂಟಕನಾ?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 5 ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ!

    5 ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ಕೆರೆಗೆ ಹಾರಿದ ತಾಯಿ!

    ದಾವಣಗೆರೆ: ಐದು ವರ್ಷದ ಮಗಳನ್ನು ಸೊಂಟಕ್ಕೆ ಕಟ್ಟಿಕೊಂಡು ತಾಯಿ ಕೆರೆಗೆ ಹಾರಿದ ಘಟನೆ ದಾವಣಗೆರೆಯಲ್ಲಿ (Davanagere) ನಡೆದಿದೆ.

    ಕವಿತಾ (27) ಹಾಗೂ ನಿಹಾರಿಕಾ (05) ಆತ್ಮಹತ್ಯೆ ಮಾಡಿಕೊಂಡ ತಾಯಿ-ಮಗಳು. ಮೃತ ಕವಿತಾ ಚನ್ನಗಿರಿ ತಾಲೂಕಿನ ಹೊನ್ನೆಬಾಗಿ ಗ್ರಾಮದ ನಿವಾಸಿ ಮಂಜುನಾಥ್ ಪತ್ನಿ. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೆರೆಬಿಳಚಿ ಬಳಿ ಇರುವ ಐತಿಹಾಸಿಕ ಪ್ರವಾಸಿ ತಾಣ ಸೂಳೆಕೆರೆಯಲ್ಲಿ ಈ ಘಟನೆ ನಡೆದಿದೆ.

    ಕಳೆದ ಶುಕ್ರವಾರ ಮಗಳು ನಿಹಾರಿಕಾಳೊಂದಿಗೆ ಕವಿತಾ ಕಾಣೆಯಾಗಿದ್ದಳು. ಈ ಬಗ್ಗೆ ಪತಿ ಮಂಜುನಾಥ್ ಪೊಲೀಸರಿಗೆ ದೂರು ಕೊಟ್ಟಿದ್ದರು. ಇಂದು ಸೂಳೆಕೆರೆಯಲ್ಲಿ ತಾಯಿ-ಮಗಳ ಶವ ಪತ್ತೆಯಾಗಿದೆ. ಸೂಳೆಕೆರೆಗೆ ಹಾರುವ ಮುನ್ನ ಮಗಳನ್ನ ವೇಲ್ ನಿಂದ ಕಟ್ಟಿಕೊಂಡು ಕವಿತಾ ಕೆರೆಗೆ ಹಾರಿದ್ದಾರೆ.

    ಮೂಲತಃ ಎರೇಹಳ್ಳಿಯ ನಿವಾಸಿಯಾದ ಕವಿತಾ ಅವರು ಆರು ವರ್ಷದ ಹಿಂದೆ ಹೊನ್ನೆಬಾಗಿ ಮಂಜುನಾಥ್‍ನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ಐದು ವರ್ಷದ ನಿಹಾರಿಕಾ ಎಂಬ ಓರ್ವ ಮಗಳಿದ್ದಳು. ಬಳಿಕ ವರದಕ್ಷಿಣೆ ಕಿರುಕಳ ಆರೋಪ ಕೇಳಿಬಂದಿತ್ತು. ಇದನ್ನೂ ಓದಿ: ಮಹಿಳೆಗೆ ಚಪಲಿ ಹಾರ ಹಾಕಿ ಮೆರವಣಿಗೆ ಪ್ರಕರಣ- 13 ಜನರ ಬಂಧನ

    ಕಳೆದ ಕೆಲ ವರ್ಷಗಳಿಂದ ಪತಿ ಹಾಗೂ ಅವರ ಮನೆಯವರು ನಿರಂತರ ವರದಕ್ಷಿಣೆ ಕಿರುಕಳ ನೀಡುತ್ತಿದ್ದರು. ಪತಿ ಹಾಗೂ ಪತಿ ಮನೆಯವರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಕವಿತಾ ಕುಟುಂಬಸ್ಥರು ಆರೋಪಿಸಿದ್ದಾರೆ.

    ಕವಿತಾಳ ಮನೆಯವರು ಪೊಲೀಸರಿಗೆ ದೂರು ನೀಡಿದ್ದು, ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ (Channagiri Police Station) ಪ್ರಕರಣ ದಾಖಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆ

    ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಶವ ಕೆರೆಯಲ್ಲಿ ಪತ್ತೆ

    ಚಿಕ್ಕಬಳ್ಳಾಪುರ: ಕೆರೆಯಲ್ಲಿ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ (SSLC Student) ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಬಾಗೇಪಲ್ಲಿ (Bagepally) ಪಟ್ಟಣ ಹೊರವಲಯದ ಕೊಂಡವಾರಪಲ್ಲಿಯಲ್ಲಿ ನಡೆದಿದೆ.

    ಚಿಕ್ಕಬಳ್ಳಾಪುರ ತಾಲೂಕಿನ ಈರೇನಹಳ್ಳಿ ಗ್ರಾಮದ ನಿವಾಸಿ ಶಂಕರ್ ಹಾಗೂ ನಾಗಮ್ಮ ದಂಪತಿಯ ಪುತ್ರಿ ನಯನ (15) ಮೃತ ವಿದ್ಯಾರ್ಥಿನಿ. ಶನಿವಾರ ಗ್ರಾಮದಿಂದ ಚಿಕ್ಕಬಳ್ಳಾಪುರದ ಖಾಸಗಿ ಶಾಲೆಗೆ ಹೋಗುವುದಾಗಿ ಹೇಳಿದ ವಿದ್ಯಾರ್ಥಿನಿ ಶಾಲೆಗೆ ಹೋಗಿಲ್ಲ. ಬದಲಾಗಿ ಚಿಕ್ಕಬಳ್ಳಾಪುರ ನಗರದಿಂದ ಕೆಎಸ್‌ಆರ್‌ಟಿಸಿ ಬಸ್ ಮೂಲಕ ಬಾಗೇಪಲ್ಲಿಗೆ ತೆರಳಿ ಅಲ್ಲಿಂದ ಬಾಗೇಪಲ್ಲಿ ಪಟ್ಟಣ ಹೊರವಲಯದ ಕೊಂಡ್ರವಾರಪಲ್ಲಿ ಕೆರೆ ಬಳಿ ಹೋಗಿದ್ದಾಳೆ.

    ಕೆರೆಯ ದಡದಲ್ಲಿ ವಿದ್ಯಾರ್ಥಿನಿಯ ಶೂ, ಬ್ಯಾಗ್ ಪತ್ತೆಯಾಗಿದ್ದು ಕೆರೆಯಲ್ಲಿ ವಿದ್ಯಾರ್ಥಿನಿ ಶವ ತೇಲಿ ಬಂದಿದೆ. ಇದನ್ನು ಗಮನಿಸಿದ ಸ್ಥಳೀಯ ಕುರಿಗಾಹಿಗಳು ಪೊಲೀಸರಿಗೆ ವಿಷಯವನ್ನು ತಿಳಿಸಿದ್ದಾರೆ. ಬ್ಯಾಗ್ ಪರಿಶೀಲನೆ ನಡೆಸಿದಾಗ ವಿದ್ಯಾರ್ಥಿನಿಯ ವಿಳಾಸ ತಿಳಿದುಬಂದಿದೆ. ಬಳಿಕ ಪೋಷಕರು ಹಾಗೂ ಶಾಲೆಗೆ ಕರೆ ಮಾಡಿ ಘಟನೆ ಬಗ್ಗೆ ತಿಳಿಸಿದ್ದಾರೆ. ಇದನ್ನೂ ಓದಿ: ಬೈಕ್‌ಗಳ ಅಪಘಾತದಲ್ಲಿ ನೆಲಕ್ಕೆ ಬಿದ್ದ ಸವಾರರ ಮೇಲೆ ಹರಿದ ಲಾರಿ – ಮೂವರು ಸ್ಥಳದಲ್ಲೇ ಸಾವು

    ವಿದ್ಯಾರ್ಥಿನಿಯ ಮೃತದೇಹವನ್ನು ಬಾಗೇಪಲ್ಲಿ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಕಳುಹಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಆದರೆ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೋ ಎಂಬುದು ಇನ್ನೂ ಖಚಿತವಾಗಿಲ್ಲ. ಆಕೆಯ ಪೋಷಕರು ಸಹ ಯಾವುದೇ ಅನುಮಾನ ವ್ಯಕ್ತಪಡಿಸಿಲ್ಲ. ವಿದ್ಯಾರ್ಥಿನಿ ಚಿಕ್ಕಬಳ್ಳಾಪುರದಿಂದ ಬಾಗೇಪಲ್ಲಿಗೆ ಹೋಗಿ ಕೆರೆಗೆ ಬಿದ್ದು ಸಾವನ್ನಪ್ಪಿರುವ ಬಗ್ಗೆ ಹಲವು ಅನುಮಾನಗಳು ಮೂಡಿವೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಬೇಕಾಗಿದ್ದ ಮೋಸ್ಟ್‌ ವಾಂಟೆಡ್‌ ಉಗ್ರ ಕರಾಚಿಯಲ್ಲಿ ಗುಂಡೇಟಿಗೆ ಬಲಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವು

    ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂ ಕೀಳಲು ಕೆರೆಗೆ ಇಳಿದ ತಂದೆ-ಮಗ ಸಾವು

    ಚಿಕ್ಕಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬಕ್ಕೆ ತಾವರೆ ಹೂವು ಕೀಳಲು ಹೋಗಿ ಕೆರೆಗೆ ಇಳಿದಿದ್ದ ತಂದೆ ಹಾಗೂ ಮಗ (Father-Son) ಸಾವನ್ನಪ್ಪಿರುವ ದಾರುಣ ಘಟನೆ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಭೂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.

    ತಂದೆ ಪುಟ್ಟರಾಜು (42) ಹಾಗೂ ಮಗ ಕೇಶವ (14) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ದುರ್ದೈವಿಗಳು. ಮೃತರು ದೊಡ್ಡಬಳ್ಳಾಪುರದ ಶಾಂತಿನಗರದ ನಿವಾಸಿಗಳು. ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆ ವ್ಯಾಪಾರಕ್ಕಾಗಿ ಬುಧವಾರ ಸಂಜೆ ಭೂಚನಹಳ್ಳಿ ಬಳಿಯ ಕೆರೆಗೆ ತಾವರೆ ಹೂ ಕೀಳಲು ಹೋಗಿದ್ದರು.

    ಕೆರೆಯ ದಡದಲ್ಲಿ ಮೊಬೈಲ್, ಚಪ್ಪಲಿ ಬಿಟ್ಟು ತಾವರೆ ಹೂ ಕೀಳಲು ತಂದೆ, ಮಗ ಮುಂದಾದಾಗ ಅವಘಡ ಸಂಭವಿಸಿದೆ. ಮತ್ತೊಬ್ಬ ತಾವರೆ ಹೂ ಮಾರಾಟಗಾರ ಕೆರೆಯ ಬಳಿ ಹೋದಾಗ ಇಬ್ಬರು ಕೆರೆಯಲ್ಲಿ ಮುಳುಗಿರುವುದು ತಿಳಿದುಬಂದಿದೆ. ಇದನ್ನೂ ಓದಿ: ಹೃದಯಾಘಾತದಿಂದ ಪೊಲೀಸ್ ಕಾನ್ಸ್‌ಟೇಬಲ್ ಸಾವು

    ಇದೀಗ ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಿಂದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಘಟನೆ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವೈದ್ಯರ ನಿರ್ಲಕ್ಷ್ಯ ಆರೋಪ- 5 ವರ್ಷದ ಬಾಲಕಿ ಸಾವು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ- ಟ್ರಾಫಿಕ್ ಕಾನ್ಸ್‌ಸ್ಟೇಬಲ್ ಕಾರ್ಯಕ್ಕೆ ಮೆಚ್ಚುಗೆ

    ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ರಕ್ಷಣೆ- ಟ್ರಾಫಿಕ್ ಕಾನ್ಸ್‌ಸ್ಟೇಬಲ್ ಕಾರ್ಯಕ್ಕೆ ಮೆಚ್ಚುಗೆ

    ಬೆಳಗಾವಿ: ಜೀವನದಲ್ಲಿ ಜೀಗುಪ್ಸೆ ಹೊಂದಿ ಕೆರೆಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆಯನ್ನ ಟ್ರಾಫಿಕ್ ಕಾನ್ಸ್‌ಸ್ಟೇಬಲ್‌ (Traffic Constable) ರಕ್ಷಣೆ ಮಾಡಿರೋ ಘಟನೆ ಬೆಳಗಾವಿಯಲ್ಲಿ (Belagavi) ನಡೆದಿದೆ.

    ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ 44 ವರ್ಷದ ಶಿವಲೀಲಾ ಪರ್ವತಗೌಡ್ರ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದರು. ಸ್ಥಳೀಯರಿಂದ ಉತ್ತರ ಸಂಚಾರ ಠಾಣೆ ಪಿಸಿ ಕಾಶಿನಾಥ್ ಈರಿಗಾರ ಎಂಬವರಿಗೆ ವಿಷಯ ತಿಳೀತ್ತಿದ್ದಂತೆ ಕೆರೆಗೆ ಹಾರಿ ಮಹಿಳೆಯನ್ನು ರಕ್ಷಿಸಿದ್ದಾರೆ. ಇದನ್ನೂ ಓದಿ: ಪತ್ನಿಯ ಕಣ್ಣೆದುರೇ ಗಂಡನ ಕೊಲೆ ಪ್ರಕರಣಕ್ಕೆ ಟ್ವಿಸ್ಟ್- ಐನಾತಿ ಹೆಂಡತಿ ಅರೆಸ್ಟ್

    ಲೆಕ್‍ವ್ಯೂ ಆಸ್ಪತ್ರೆ ಪಾಯಿಂಟ್‍ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ವಿಷಯ ತಿಳಿದಿದೆ. ಈ ವೇಳೆ 5 ಅಡಿ ಎತ್ತರದ ಬ್ಯಾರಿಕೇಡ್ ಮೇಲಿಂದ ಜಿಗಿದು ಮಹಿಳೆಯರ ಪ್ರಾಣ ಕಾಪಾಡಿದ್ದಾರೆ. ಈ ಹಿಂದೆ ಮಾರ್ಕೆಟ್ ಠಾಣೆಯ ಪಿಸಿ ಆಗಿದ್ದಾಗಲೂ ಇದೆ ಕೆರೆಗೆ ಹಾರಿದ್ದ ಇಬ್ಬರನ್ನು ರಕ್ಷಿಸಿದ್ದರು. ಇದನ್ನೂ ಓದಿ: 210 ಕೆಜಿ ಭಾರ ಎತ್ತುವಾಗ ಕುತ್ತಿಗೆಗೆ ಬಿದ್ದು ಫಿಟ್‌ನೆಸ್‌ ಟ್ರೈನರ್‌ ಸಾವು

    ಕಾಶಿನಾಥರ ಕಾರ್ಯಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಮೆಚ್ಚುಗೆ ವ್ಯಕ್ತಪಡಿಸಿದ್ದು 5 ಸಾವಿರ ನಗದು ಬಹುಮಾನ ಘೋಷಿಸಿದ್ದಾರೆ. ಮುಖ್ಯಮಂತ್ರಿ ಪದಕಕ್ಕೂ ಕಾಶಿನಾಥ ಹೆಸರು ಶಿಫಾರಸು ಮಾಡುವುದಾಗಿ ಕಮೀಷ್ನರ್ ಮಾಹಿತಿ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಯುವತಿಯ ಶವ ಕೆರೆಯಲ್ಲಿ ಪತ್ತೆ- ಆತ್ಮಹತ್ಯೆ ಶಂಕೆ

    ಯುವತಿಯ ಶವ ಕೆರೆಯಲ್ಲಿ ಪತ್ತೆ- ಆತ್ಮಹತ್ಯೆ ಶಂಕೆ

    ಮಂಡ್ಯ: ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಯುವತಿಯೋರ್ವಳ ಶವ ಕೆರೆಯಲ್ಲಿ ಪತ್ತೆಯಾಗಿದೆ.

    ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದ ಚಾಂದಿನಿ (22) ಮೃತ ಯುವತಿ. ಈಕೆ ನಂಜನಗೂಡು (Nanjangud) ಮೂಲದ ಯುವತಿ ಎಂದು ಗುರುತು ಪತ್ತೆಯಾಗಿದ್ದು, ಬೂದನೂರು (Budanur) ಗ್ರಾಮದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಕೆರೆಯಲ್ಲಿ (Lake) ಶವವಾಗಿ ಪತ್ತೆಯಾಗಿದ್ದಾಳೆ. ಭಾನುವಾರ ಮಧ್ಯಾಹ್ನ ಯುವಕನೊಬ್ಬನೊಂದಿಗೆ ಬೈಕಿನಲ್ಲಿ ಬಂದ ಯುವತಿ ಕೆಲಕಾಲ ಕೆರೆಯ ಬಳಿ ಕುಳಿತುರುವುದಾಗಿ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಟಿಪ್ಪರ್, ಕಾರು ಮಧ್ಯೆ ಭೀಕರ ಅಪಘಾತ – ಇಬ್ಬರು ಸಾವು, ಇಬ್ಬರಿಗೆ ಗಂಭೀರ ಗಾಯ

    ಬಳಿಕ ಯುವತಿ ತನ್ನ ಬ್ಯಾಗ್, ಚಪ್ಪಲಿ ಕೆರೆ ದಡದ ಮೇಲಿರಿಸಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸಂಜೆ ಕೆರೆ ದಡದಲ್ಲಿದ್ದ ಬ್ಯಾಗ್ ಗಮನಿಸಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುವತಿಯ ಮೃತದೇಹವನ್ನು ಕೆರೆಯಿಂದ ಮೇಲಕ್ಕೆತ್ತಿ ಮಂಡ್ಯ (Mandya) ಮಿಮ್ಸ್ ಶವಗಾರಕ್ಕೆ ರವಾನೆ ಮಾಡಿದ್ದಾರೆ. ಇದನ್ನೂ ಓದಿ: ಎಣ್ಣೆ ಹೊಡಿಯೋ ವಿಚಾರಕ್ಕೆ ಗಲಾಟೆ- ಬಾರ್ ಕ್ಯಾಶಿಯರ್ ಹತ್ಯೆ

  • ಕುಡಿಯಲು ನೀರು ತರಲು ಹೋದಾಗ ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಮಗ ಸಾವು

    ಕುಡಿಯಲು ನೀರು ತರಲು ಹೋದಾಗ ಕೆರೆಯಲ್ಲಿ ಮುಳುಗಿ ಚಿಕ್ಕಪ್ಪ, ಮಗ ಸಾವು

    ರಾಯಚೂರು: ಕುಡಿಯಲು ನೀರು ತರಲು ಹೋಗಿ ಕೆರೆಯಲ್ಲಿ (Lake) ಮುಳುಗಿ ಚಿಕ್ಕಪ್ಪ (Uncle) ಹಾಗೂ ಮಗ (Son) ಸಾವನ್ನಪ್ಪಿರುವ ಘಟನೆ ರಾಯಚೂರು (Raichur) ತಾಲೂಕಿನ ಕೊರ್ತಕುಂದಾ ಗ್ರಾಮದ ಹೊರವಲಯದಲ್ಲಿ ನಡೆದಿದೆ.

    ಚಿಕ್ಕಪ್ಪ ಸಲೀಂ ಹುಸೇನಸಾಬ್ (32) ಹಾಗೂ ಅಣ್ಣನ ಮಗ ಯಾಸೀನ್ ರಫಿ (13) ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ನರೇಗಾ ಕೆಲಸಕ್ಕೆ ಚಿಕ್ಕಪ್ಪನ ಜೊತೆಯಲ್ಲಿ ಹೋಗಿದ್ದ ಬಾಲಕ ಕೆರೆಯಲ್ಲಿ ಕುಡಿಯಲು ನೀರು ತುಂಬಿಕೊಂಡು ಬರಲು ಹೋಗಿದ್ದಾಗ ಕಾಲು ಜಾರಿ ಬಿದ್ದಿದ್ದಾನೆ. ಬಾಲಕನ ಚೀರಾಟ ಕೇಳಿ ರಕ್ಷಣೆಗೆ ಹೋದ ಚಿಕ್ಕಪ್ಪನೂ ಕೆರೆಯಲ್ಲಿ ಮುಳಗಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅವಳಿ ಮಕ್ಕಳನ್ನು ಉಸಿರುಗಟ್ಟಿಸಿ ಕೊಂದು ಶವವನ್ನು ಕಾರಿನಲ್ಲೇ ತಂದಿದ್ದ ಪಾಪಿ ತಂದೆ!

    ಯಾಪಲದಿನ್ನಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: 20 ಟನ್ ಅಕ್ಕಿ ಕದ್ದೊಯ್ದ ಪ್ರಕರಣ – ಕಳುವಾದ ಲಾರಿಯಲ್ಲಿ ಇರಲೇ ಇಲ್ಲ GPS

  • ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಕಲುಷಿತ ಅಂತ ಕೆರೆ ನೀರು ಖಾಲಿ ಮಾಡಿದ ಗ್ರಾಮಸ್ಥರು

    ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಕಲುಷಿತ ಅಂತ ಕೆರೆ ನೀರು ಖಾಲಿ ಮಾಡಿದ ಗ್ರಾಮಸ್ಥರು

    ಹುಬ್ಬಳ್ಳಿ: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಕಾರಣಕ್ಕೆ ಗ್ರಾಮದ ಕೆರೆ ನೀರನ್ನೇ (Lake Water) ಗ್ರಾಮಸ್ಥರು ಖಾಲಿ ಮಾಡುತ್ತಿದ್ದಾರೆ. ಗ್ರಾಮ ಪಂಚಾಯ್ತಿ ಅಧಿಕಾರಿಗಳು ಎಷ್ಟೇ ಕೇಳಿಕೊಂಡರು ಕೆರೆ ನೀರು ಬೇಡವೇ ಬೇಡ ಅಂತ ಪಟ್ಟು ಹಿಡಿದ ಗ್ರಾಮಸ್ಥರು ಕೆರೆ ನೀರನ್ನು ಯಂತ್ರಗಳ ಮೂಲಕ ಹೊರ ಹಾಕುತ್ತಿದ್ದಾರೆ. ಸತತ ಮೂರು ದಿನಗಳಿಂದ ನೀರನ್ನು ಹೊರ ಹಾಕುತ್ತಿದ್ದರು ಕೆರೆ ಮಾತ್ರ ಖಾಲಿ ಆಗ್ತಿಲ್ಲ.

    ಧಾರವಾಡ (Dharwad) ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಉಮಚಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಲ್ಲಿಗೆವಾಡ ಗ್ರಾ.ಪಂ ವ್ಯಾಪ್ತಿಯ ಉಮಚಗಿ ಗ್ರಾಮದಲ್ಲಿ 500 ಕ್ಕೂ ಹೆಚ್ಚು ಮನೆಗಳಿದ್ದು, 3,500ಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದೆ. ಇದೇ ತಿಂಗಳು ಮೊದಲ ವಾರದಲ್ಲಿ ಸಾಲಬಾಧೆ ತಾಳಲಾರದೆ ಶಂಕರಪ್ಪ ಹುರಳಿ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದರು. ಆತ್ಮಹತ್ಯೆ ಮಾಡಿಕೊಂಡ ನಾಲ್ಕು ದಿನಗಳ ನಂತರ ಕೆರೆಯಲ್ಲಿ ಶಂಕರಪ್ಪನ ಶವ ತೇಲಿತ್ತು. ಕೊಳೆತ ಮತ್ತು ಮೀನುಗಳು ತಿಂದ ಸ್ಥಿತಿಯಲ್ಲಿ ಶವ ಸಿಕ್ಕಿತ್ತು. ಇದರಿಂದಾಗಿ ನೀರು ಕಲುಷಿತಗೊಂಡಿದೆ ಎಂದು ಜನ ವಾದಿಸುತ್ತಿದ್ದಾರೆ. ಇನ್ನೂ ಕೆಲವರು ಕೆರೆ ಮೈಲಿಗೆ ಆಗಿದೆ ಅಂತ ನೀರು ಖಾಲಿ ಮಾಡಿಸುವಂತೆ ಗ್ರಾಮ ಪಂಚಾಯತ್‍ಗೆ ಒತ್ತಾಯ ಮಾಡಿದ್ದರು. ಇದನ್ನೂ ಓದಿ: 1 ಲಕ್ಷದ ಮೊಬೈಲ್‍ಗಾಗಿ ಡ್ಯಾಂನ 21 ಲಕ್ಷ ಲೀ. ನೀರನ್ನೇ ಖಾಲಿ ಮಾಡಿಸಿದ ಅಧಿಕಾರಿ!

    ಜನರ ಮನವಿಗೆ ಮೊದಲು ಒಪ್ಪದ ಅಧಿಕಾರಿಗಳು ನೀರನ್ನು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ನೀರು ಕಲುಷಿತಗೊಂಡಿಲ್ಲ ಅಂತ ಮಾಹಿತಿ ನೀಡಿದ್ರು. ಆದ್ರ್ರೂ ಜನ ಕೇಳ್ತಿಲ್ಲ. ಕೆರೆ ನೀರನ್ನು ಖಾಲಿ ಮಾಡಿಸುವಂತೆ ಪಟ್ಟು ಹಿಡಿದಿದ್ದಾರೆ. ಗ್ರಾಮಸ್ಥರ ತೀವ್ರ ಒತ್ತಾಯಕ್ಕೆ ಮಣಿದ ಪಂಚಾಯಿತಿ ಅಧಿಕಾರಿಗಳು ಯಂತ್ರಗಳ ಮೂಲಕ ಹಗಲು – ರಾತ್ರಿ ನೀರು ಹೊರ ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಐದಾರು ದಿನಗಳಲ್ಲಿ ಕೆರೆ ಸಂಪೂರ್ಣ ಖಾಲಿಯಾಗೋ ನಿರೀಕ್ಷೆಯಿತ್ತು. ಕೆರೆಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ಇರುವ ಕಾರಣ ಕೆರೆ ಸದ್ಯಕ್ಕೆ ಖಾಲಿಯಾಗುವ ಲಕ್ಷಣಗಳು ಕಾಣುತ್ತಿಲ್ಲ. ಆದ್ರೆ ನೀರು ಖಾಲಿ ಮಾಡಿಸಲೇ ಬೇಕೆಂದು ಗ್ರಾಮಸ್ಥರು ಹಠಕ್ಕೆ ಬಿದ್ದಿದ್ದಾರೆ.

    ಲಕ್ಷಾಂತರ ರೂಪಾಯಿ ವ್ಯಯಿಸಿ ನೀರು ಹೊರ ಹಾಕ್ತಿರೋದಾಗಿ ಗ್ರಾ.ಪಂ. ಸಿಬ್ಬಂದಿ ಕೈ ತೊಳೆದು ಕೊಂಡಿದೆ. ಇನ್ನೂ ಚೆನ್ನಾಗಿರುವ ಕೆರೆ ನೀರು ಬಿಟ್ಟು ಅನಿವಾರ್ಯವಾಗಿ ಜನ ಐದಾರು ಕಿಲೋಮೀಟರ್ ಗಟ್ಟಲೆ ತೆರಳಿ ಫಿಲ್ಟರ್ ನೀರು ತರುವಂತಾಗಿದೆ.

  • ಆಯತಪ್ಪಿ ಕೆರೆಗೆ ಬಿದ್ದು 4 ವರ್ಷದ ಬಾಲಕ ಸಾವು

    ಆಯತಪ್ಪಿ ಕೆರೆಗೆ ಬಿದ್ದು 4 ವರ್ಷದ ಬಾಲಕ ಸಾವು

    ಬೆಂಗಳೂರು: ಕೆರೆಯ ಬಳಿ ಆಟ ಆಡುತ್ತಿದ್ದ ಸಂದರ್ಭ ಆಯತಪ್ಪಿ ನೀರಿಗೆ ಬಿದ್ದು 4 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್‌ನಲ್ಲಿ (Anekal) ನಡೆದಿದೆ.

    ಆನೇಕಲ್ ತಾಲೂಕಿನ ಗಟ್ಟಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಶಕ್ತಿ (4) ಮೃತ ಬಾಲಕ. ಬಾಲಕನ ಪೋಷಕರು ಮಾಗಡಿ ರಸ್ತೆಯ ಅಗ್ರಹಾರ ಮೂಲದವರಾಗಿದ್ದಾರೆ. ಬಾಲಕ ಪರಪ್ಪನ ಅಗ್ರಹಾರ ಸಮೀಪದ ನಾಗನಾಥಪುರಕ್ಕೆ (Naganathapura) ತನ್ನ ಅಜ್ಜಿ ಮನೆಗೆಂದು ಬಂದಿದ್ದು, ಕೆರೆ (Lake) ಬಳಿ ಆಟವಾಡುತ್ತಿದ್ದಾಗ ಆಯತಪ್ಪಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿದ್ದಾನೆ. ಇದನ್ನೂ ಓದಿ: ಕೋಲಾರದಲ್ಲಿ ಹಳಿ ತಪ್ಪಿದ ಡಬಲ್‌ಡೆಕ್ಕರ್ ರೈಲು – ತಪ್ಪಿದ ಭಾರೀ ದುರಂತ

    ಘಟನೆ ನಡೆದ ಬಳಿಕ ಅಗ್ನಿಶಾಮಕ ದಳ (Fire Brigade) ಸಿಬ್ಬಂದಿ ಶೋಧಕಾರ್ಯ ನಡೆಸಿದ್ದು, ಸುಮಾರು 24 ಗಂಟೆಗಳ ಕಾಲ ಬಾಲಕನಿಗಾಗಿ ಕಾರ್ಯಾಚರಣೆನಡೆಸಿ ಬಾಲಕನ ಮೃತದೇಹವನ್ನು ಹೊರತೆಗೆದಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡುವ ಸಂದರ್ಭ ಪೋಷಕರು ಅಡ್ಡಿಪಡಿಸಿದ್ದಾರೆ. ಕೊನೆಗೆ ಅವರ ಮನವೊಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಹಣವಿಲ್ಲದ್ದಕ್ಕೆ 5 ತಿಂಗಳ ಮಗುವಿನ ಶವವನ್ನು ಬ್ಯಾಗ್‍ನಲ್ಲಿ ತುಂಬಿಕೊಂಡು ಬಸ್‍ನಲ್ಲೇ ಕ್ರಮಿಸಿದ ತಂದೆ

    ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಹೆಬ್ಬುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕಲ್ಲಿನಿಂದ ಜಜ್ಜಿ ಮಹಿಳೆಯ ಬರ್ಬರ ಹತ್ಯೆ

  • ನದಿಗಳು ಆಯ್ತು, ಈಗ ಕೆರೆಗಳ ಸರದಿ- ಬೆಂಗಳೂರಿನಲ್ಲಿ 70ಕ್ಕೂ ಹೆಚ್ಚು ಕೆರೆಗಳು ಕಲುಷಿತ!

    ನದಿಗಳು ಆಯ್ತು, ಈಗ ಕೆರೆಗಳ ಸರದಿ- ಬೆಂಗಳೂರಿನಲ್ಲಿ 70ಕ್ಕೂ ಹೆಚ್ಚು ಕೆರೆಗಳು ಕಲುಷಿತ!

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru Lakes) ಕೆರೆಗಳ ನಾಡು ಅಂತಾನೇ ಫೇಮಸ್. ಸುಮಾರು 400ಕ್ಕೂ ಹೆಚ್ಚು ಕೆರೆಗಳಿವೆ. ಬೆಂಗಳೂರಿನ ಕೆರೆಗಳನ್ನ ಒತ್ತುವರಿ ಮಾಡಿ ಕಟ್ಟಡಗಳನ್ನ ಕಟ್ಟಿ ಕಾಂಕ್ರಿಟ್ ನಾಡಾಗಿ ಮಾಡಿದ್ದಾರೆ. ಕಾರ್ಖಾನೆ ಮತ್ತು ಫ್ಯಾಕ್ಟೆರಿಗಳಿಂದ ಮಾಲಿನ್ಯ ಆಗ್ತಾ ಇದೆ. ಆದರೆ ಈಗ ಇದೆ ಫ್ಯಾಕ್ಟರಿಗಳಿಂದ ಮಾಲಿನ್ಯ ಆಗುತ್ತಿದೆ ಅಂತಾ ಮಾಲಿನ್ಯ ನಿಯಂತ್ರಣ ಮಂಡಳಿ ಸಂಶೋಧನೆ ಮಾಡಿದೆ.

    ಹೌದು. ಸುಮಾರು 70ಕ್ಕೂ ಹೆಚ್ಚು ಕೆರೆಗಳು ಮಾಲಿನ್ಯ ಆಗಿರೋದು ಬಯಲಾಗಿದೆ. ಜನ ನೇರವಾಗಿ ಕುಡಿಯಲು ಮತ್ತು ಸ್ನಾನ ಮಾಡಲು ಸಾಧ್ಯವಿಲ್ಲ ಅಂತಾ ಹೇಳ್ತಾ ಇದ್ದಾರೆ. ಕಳೆದ ಡಿಸೆಂಬರ್ ನಿಂದ ಜನವರಿವರೆಗೂ ನಡೆಸಿದ ಸಂಶೋಧನೆಯಲ್ಲಿ ಕಲುಷಿತ ಆಗಿದೆ ಅಂತಾ ವರದಿಯಾಗಿದೆ.

    ಬಿಬಿಎಂಪಿ (BBMP) ವ್ಯಾಪ್ತಿಯ 8 ವಲಯಗಳಲ್ಲೂ ಕೆರೆಗಳು ಕಲುಷಿತ ಆಗಿದೆ ಅಂದರೆ ಆತಂಕ ಪಡುವಂತಹ ವಿಚಾರವಾಗಿದೆ. ಡಿ ಗ್ರೇಡ್‍ನಲ್ಲಿ ಇದ್ದಂತಹ ಕೆರೆಗಳು ಈ ಗ್ರೇಡ್‍ಗೆ ಕುಸಿದಿವೆ ಪ್ರತಿ ವರ್ಷಕ್ಕೆ ಈ ರೀತಿ ಮಾಲಿನ್ಯ ಆಗ್ತಾ ಇವೆ. ಮಾಲಿನ್ಯತೆಗೆ ಕಾರಣ ಆಗಿರೋ ಫ್ಯಾಕ್ಟರಿಗಳ ವಿರುದ್ಧ ಕ್ರಮ ಜರುಗಿಸಿದ್ದೇವೆ ಅಂತಾ ಇದ್ದಾರೆ. ಇದನ್ನೂ ಓದಿ: ಕಾವೇರಿ, ಕಬಿನಿ, ಕಾಳಿ ಸೇರಿ ರಾಜ್ಯದ 17 ನದಿಗಳ ನೀರು ನೇರವಾಗಿ ಕುಡಿಯೋಕೆ ಯೋಗ್ಯವಲ್ಲ- ವರದಿ ಸ್ಫೋಟ

    84 ಕೆರೆಗಳ ಪೈಕಿ ಟಾಪ್ 15 ನಲ್ಲಿ ಕಲುಷಿತ ಆಗಿರೋ ಕೆರೆಗಳ ಪಟ್ಟಿ ಇಲ್ಲಿದೆ: ಬೆಳ್ಳಂದೂರು ಕೆರೆ, ಹುಳಿಮಾವು ಕೆರೆ, ಕೆಂಪಾಬುದಿ ಕೆರೆ, ಉತ್ತರಹಳ್ಳಿ ಕೆರೆ, ಹೊಸಕೆರೆ ಹಳ್ಳಿ ಕೆರೆ, ಪರಪ್ಪನ ಅಗ್ರಹಾರ ಕೆರೆ, ಕಸವನಹಳ್ಳಿ ಕೆರೆ, ವರ್ತೂರು ಕೆರೆ, ಕಾಳೇನ ಅಗ್ರಹಾರ ಕೆರೆ, ಸಾರಕ್ಕಿ ಕೆರೆ, ಹಲಸೂರು ಕೆರೆ, ಸ್ಯಾಂಕಿ ಕೆರೆ, ಪುಟ್ಟೇನಹಳ್ಳಿ ಕೆರೆ, ವೈಟ್ ಫೀಲ್ಡ್ ಕೆರೆ, ಲಾಲ್ ಬಾಗ್ ಟ್ಯಾಂಕ್.

    ಒಟ್ಟಾರೆ ಮಾಲಿನ್ಯ ನಿಯಂತ್ರಣ ಮಂಡಳಿಯ ಸಂಶೋಧನೆಯಲ್ಲಿ ಕೆರೆಗಳು ಕಲುಷಿತ ಆಗಿರೋದು ಆತಂಕ ಪಡುವ ವಿಚಾರ. ಕಲುಷಿತ ನೀರು ಜನರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು, ಮಾಲಿನ್ಯತೆ ತಡೆಗಟ್ಟಲು ಸರ್ಕಾರ ಮತ್ತು ಮಾಲಿನ್ಯ ನಿಯಂತ್ರಣ ಮಂಡಳಿ ಯಾವ ರೀತಿ ಕ್ರಮ ಜರುಗಿಸುತ್ತೋ ಕಾದು ನೋಡಬೇಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k