Tag: lake

  • ಮಂಜುಗಡ್ಡೆ ಕುಸಿದು ಮಹಿಳೆ ಸೇರಿ ಭಾರತ ಮೂಲದ ಮೂವರು ನೀರುಪಾಲು

    ಮಂಜುಗಡ್ಡೆ ಕುಸಿದು ಮಹಿಳೆ ಸೇರಿ ಭಾರತ ಮೂಲದ ಮೂವರು ನೀರುಪಾಲು

    ವಾಷಿಂಗ್ಟನ್: ಹೆಪ್ಪುಗಟ್ಟಿದ ಸರೋವರದ (Frozen Lake) ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಮಂಜುಗಡ್ಡೆ ಕುಸಿದು ಮಹಿಳೆ ಸೇರಿದಂತೆ ಭಾರತ (India) ಮೂಲದ ಮೂವರು ಸಾವನ್ನಪ್ಪಿದ ಘಟನೆ ಅಮೆರಿಕದ (America) ಅರಿಜೋನಾ (Arizona) ರಾಜ್ಯದಲ್ಲಿ ನಡೆದಿದೆ.

    ಅರಿಜೋನಾದ ಕೊಕೊನಿನೊ ಕೌಂಟಿಯಲ್ಲಿರುವ ಕೆರೆಯಲ್ಲಿ ಈ ಘಟನೆ ಸಂಭವಿಸಿದೆ. ಮೃತರನ್ನು ನಾರಾಯಣ ಮುದ್ದಣ (49) ಗೋಕುಲ್ ಮೆಡಿಸೆಟಿ (47) ಹರಿತಾ ಮುದ್ದಣ ಎಂದು ಗುರುತಿಸಲಾಗಿದೆ. ಈ ಮೂವರು ಮೂಲತಃ ಭಾರತದವರಾಗಿದ್ದು, ಅಮೆರಿಕದ ಅರಿಜೋನಾದ ಚಾಂಡ್ಲರ್‌ನಲ್ಲಿ ನೆಲೆಸಿದ್ದರು.

    ಈ ಮೂವರು ನೀರಿನಲ್ಲಿ ಮುಳುಗಿದ್ದನ್ನು ನೋಡಿದ ಅಲ್ಲಿನ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಪೊಲೀಸರು ಹರಿತಾಳನ್ನು ನೀರಿನಿಂದ ಹೊರತೆಗೆದಿದ್ದಾರೆ. ಆದರೆ ಆಕೆ ಅಷ್ಟರಲ್ಲಾಗಲೇ ಮೃತಪಟ್ಟಿದ್ದಳು. ಇನ್ನೂ ನಾರಾಯಣ ಹಾಗೂ ಗೋಕುಲ್ ಅವರಿಗಾಗಿ ಮಧ್ಯಾಹ್ನದವರೆಗೆ ಹುಡುಕಾಟ ನಡೆಸಿದ್ದು, ಅವರಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ. ಇದನ್ನೂ ಓದಿ: 2 ತಿಂಗಳು ಬೃಂದಾವನದಲ್ಲಿ ಪ್ರತ್ಯಕ್ಷವಾಗುತ್ತಿದ್ದ ಚಿರತೆ ಬೋನಿಗೆ

    ಅಮೆರಿಕಾದಲ್ಲಿ ಈಗಾಗಲೇ ಹಿಮ ಸುನಾಮಿ ಭೀಭತ್ಸ ಸೃಷ್ಟಿಯಾಗಿದ್ದು, ತೀವ್ರ ಶೀತಗಾಳಿಗೆ ಉಷ್ಣಾಂಶ ದೊಡ್ಡ ಪ್ರಮಾಣದಲ್ಲಿ ಬಿದ್ದುಹೋಗ್ತಿದೆ. ಮೈನಸ್ 50 ಡಿಗ್ರಿವರೆಗೂ ತಾಪಮಾನ ಕುಸಿದಿದೆ. ಈ ಈ ಶೀತ ಸುನಾಮಿಯಿಂದಾಗಿ 60ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಇಡೀ ದೇಶದಲ್ಲೇ ಬೊಮ್ಮಾಯಿ ಅಧಿಕಾರವಿಲ್ಲದ ಮುಖ್ಯಮಂತ್ರಿ: ಸಿಎಂ ಇಬ್ರಾಹಿಂ

    Live Tv
    [brid partner=56869869 player=32851 video=960834 autoplay=true]

  • ವರದಕ್ಷಿಣೆ ಕಿರುಕುಳ – ಮಗುವಿನೊಂದಿಗೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ

    ವರದಕ್ಷಿಣೆ ಕಿರುಕುಳ – ಮಗುವಿನೊಂದಿಗೆ ನಾಲೆಗೆ ಹಾರಿ ತಾಯಿ ಆತ್ಮಹತ್ಯೆ

    ಹಾಸನ: ಮಗುವಿನೊಂದಿಗೆ ತಾಯಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ (Holenarasipur) ತಾಲೂಕಿನ ದೊಡ್ಡಕುಂಚೇವುಕೊಪ್ಪಲು ಗ್ರಾಮದಲ್ಲಿ ನಡೆದಿದೆ.

    ಭವ್ಯ (23), ವೇದಾಂತ್ (3) ಮೃತರು. ನ.19 ರಂದು ಭವ್ಯ, ಮಗನ ಜೊತೆ ಪತಿಯ ಮನೆಯಿಂದ ತೆರಳಿದ್ದು ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಚನ್ನರಾಯಪಟ್ಟಣ ತಾಲೂಕಿನ ಗೆಜ್ಜಗಾರನಹಳ್ಳಿ ಬಳಿಯ ನಾಲೆಯಲ್ಲಿ ಮಗುವಿನ ಶವ ದೊರೆತರೆ, ಭವ್ಯ ಶವ ದೊಡ್ಡಕುಂಚೇವು ಗ್ರಾಮದ ಬಳಿಯ ಕೆರೆಯಲ್ಲಿ ಸಿಕ್ಕಿದೆ. ಪತಿ ಶ್ರೀನಿವಾಸ್ ಹಾಗೂ ಅತ್ತೆ ಅಕ್ಕಯಮ್ಮನ ವಿರುದ್ಧ ಮೃತರ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಒಡಿಶಾದಲ್ಲಿ ಹಳಿ ತಪ್ಪಿ, ನಿಲ್ದಾಣಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು – 3 ಸಾವು, ಹಲವರಿಗೆ ಗಾಯ

    ಕಳೆದ ನಾಲ್ಕು ವರ್ಷಗಳ ಹಿಂದೆ ಗೆಜ್ಜಗಾರನಹಳ್ಳಿ ಗ್ರಾಮದ ಭವ್ಯಾಳನ್ನು ದೊಡ್ಡಕುಂಚೇವುಕೊಪ್ಪಲು ಗ್ರಾಮದ ಶ್ರೀನಿವಾಸ್ ಅವರಿಗೆ ಮದುವೆ ಮಾಡಿಕೊಡಲಾಗಿತ್ತು. ಭವ್ಯ ಚೆನ್ನಾಗಿದ್ದ ಕಾರಣ ಶ್ರೀನಿವಾಸ್ ಮನೆಯವರು ವರದಕ್ಷಿಣೆ ಬೇಡ ಎಂದಿದ್ದರು. ಶ್ರೀನಿವಾಸ್ ಟ್ರ್ಯಾಕ್ಟರ್ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದ. ಮದುವೆಯಾದ ಆರಂಭದಲ್ಲಿ ಗಂಡ, ಹೆಂಡತಿ ಅನ್ಯೋನ್ಯವಾಗಿದ್ದರು. ದಂಪತಿಗೆ ಒಂದು ಗಂಡು ಮಗುವಿತ್ತು. ಹೀಗಿರುವಾಗ ಶ್ರೀನಿವಾಸ್ ಹಾಗೂ ಆತನ ತಾಯಿ ಅಕ್ಕಯಮ್ಮ ವರದಕ್ಷಿಣೆ ಹಣ ತರುವಂತೆ ಭವ್ಯಳಿಗೆ ಕಿರುಕುಳ ಕೊಡಲು ಆರಂಭಿಸಿದರು.

    ವರದಕ್ಷಿಣೆ ವಿಚಾರಕ್ಕೆ ಪತಿ, ಪತ್ನಿ ನಡುವೆ ಆಗಾಗ್ಗೆ ಜಗಳ ನಡೆದು ಶ್ರೀನಿವಾಸ್ ಹಲ್ಲೆ ಮಾಡುತ್ತಿದ್ದ. ಗಂಡನ ಮನೆಯಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ಭವ್ಯ ತನ್ನ ತಾಯಿ ಬಳಿ ಹೇಳಿಕೊಂಡಿದ್ದಳು. ಗ್ರಾಮದ ಹಿರಿಯರು, ಸಂಬಂಧಿಕರು ಸೇರಿ ಹತ್ತಕ್ಕೂ ಹೆಚ್ಚು ಬಾರಿ ಪಂಚಾಯ್ತಿ ಮಾಡಿ ರಾಜಿ ಸಂಧಾನ ಮಾಡಿಸಿದ್ದರು. ಆದರೂ ಶ್ರೀನಿವಾಸ್ ತನ್ನ ನೀಚ ಬುದ್ದಿ ಬಿಟ್ಟಿರಲಿಲ್ಲ. ಭವ್ಯಾ ತಾಯಿಗೆ ಫೋನ್ ಮಾಡಿ ದೂರು ಹೇಳುತ್ತಾಳೆ ಎಂದು ಮೊಬೈಲನ್ನು ಕೂಡ ನೀಡಿರಲಿಲ್ಲ. ಶ್ರೀನಿವಾಸ್, ಅಕ್ಕಯಮ್ಮ ಯಾವುದಾದರೂ ಸಮಾರಂಭಕ್ಕೆ ಹೋಗುವಾಗ ಭವ್ಯ ಮತ್ತು ಮಗುವನ್ನು ಮನೆಯಲ್ಲಿ ಕೂಡಿ ಹಾಕಿ ಬೀಗ ಹಾಕಿಕೊಂಡು ಹೋಗುತ್ತಿದ್ದರು. ಅಲ್ಲದೇ ಭವ್ಯಳ ಮೇಲೆ ಪತಿ ಹಾಗೂ ಅತ್ತೆ ಸದಾ ಅನುಮಾನ ಪಡುತ್ತಿದ್ದರು. ಅಲ್ಲದೇ ಶ್ರೀನಿವಾಸ್‍ಗೆ ಅಕ್ರಮ ಸಂಬಂಧವಿತ್ತು ಎನ್ನಲಾಗಿದೆ. ಇದನ್ನೂ ಓದಿ: ಮಹಾನಗರ ಪಾಲಿಕೆ ಚುನಾವಣೆ ಟಿಕೆಟ್ ಮಾರಾಟ – ಆಪ್ ವಿರುದ್ಧ ಬಿಜೆಪಿ ಗಂಭೀರ ಆರೋಪ

    ಕಳೆದ ಒಂದು ವಾರದ ಹಿಂದೆ ಶ್ರೀನಿವಾಸ್ ಹಾಗೂ ಅಕ್ಕಯಮ್ಮ ಸಂಬಂಧಿಕರ ಮನೆಗೆ ತೆರಳಿದ್ದರು. ಈ ವೇಳೆ ಮೂರು ದಿನಗಳ ಕಾಲ ಭವ್ಯ ಹಾಗೂ ಮಗುವನ್ನು ಮನೆಯಲ್ಲಿ ಕೂಡಿ ಹಾಕಿದ್ದರು. ತಿನ್ನಲು ಊಟವಿಲ್ಲದೇ ಭವ್ಯ ಹಾಗೂ ಮಗು ನರಳಾಡಿದ್ದರು. ಕೊನೆಗೆ ಕಿಟಕಿಯಲ್ಲಿ ಗ್ರಾಮದ ಯುವಕನ ಬಳಿ ಬಿಸ್ಕೆಟ್ ತರಿಸಿಕೊಂಡು ಮಗುವಿಗೆ ತಿನ್ನಿಸಿದ್ದಳು. ನ.19 ರಂದು ತಾಯಿಗೆ ಕರೆ ಮಾಡಿ ಅಳಲು ತೊಡಿಕೊಂಡಿದ್ದಳು. ನಂತರ ಮಗುವಿನೊಂದಿಗೆ ದೊಡ್ಡಕುಂಚೇವುಕೊಪ್ಪಲು ಬಳಿ ಹರಿಯುತ್ತಿದ್ದ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೊನ್ನೆಯಿಂದಲೂ ಭವ್ಯ ತಾಯಿ ಹಾಗೂ ಸಂಬಂಧಿಕರು ಎಲ್ಲೆಡೆ ಹುಡುಕಾಟ ನಡೆಸಿದ್ದರು ಸಿಕ್ಕಿರಲಿಲ್ಲ. ಇಂದು ಮಗುವಿನ ಶವ ನಾಲೆಯಲ್ಲಿ ತೇಲಿ ಹೋಗುತ್ತಿದ್ದನ್ನು ಸ್ಥಳೀಯರು ಗಮನಿಸಿ ಹೊರ ತೆಗೆದಿದ್ದಾರೆ. ಇತ್ತ ತಾಯಿ ಭವ್ಯಳ ಶವ ದೊಡ್ಡಕುಂಚೇವುಕೊಪ್ಪಲು ಗ್ರಾಮದ ಕೆರೆಯಲ್ಲಿ ದೊರೆತಿದೆ. ಅಮಾಯಕರ ಸಾವಿಗೆ ಕಾರಣರಾದ ಶ್ರೀನಿವಾಸ್ ಹಾಗೂ ಅಕ್ಕಯಮ್ಮ ವಿರುದ್ಧ ಭವ್ಯಳ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದರು.

    ಒಟ್ಟಾರೆ ಪತಿ ಹಾಗೂ ಅತ್ತೆಯ ವರದಕ್ಷಿಣೆ ದಾಹಕ್ಕೆ ತಾಯಿ, ಮಗು ಪ್ರಾಣ ತೆತ್ತಿದ್ದರೆ, ಇತ್ತ ಪತಿ ಶ್ರೀನಿವಾಸ್ ಹಾಗೂ ಅತ್ತೆ ಅಕ್ಕಯಮ್ಮ ನಾಪತ್ತೆಯಾಗಿದ್ದಾರೆ. ಹೊಳೆನರಸೀಪುರ ನಗರಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಬ್ಬಳೇ ಮಗಳನ್ನು ಕಳೆದುಕೊಂಡ ಭವ್ಯ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ.

    Live Tv
    [brid partner=56869869 player=32851 video=960834 autoplay=true]

  • 42 ಜನರನ್ನು ಹೊತ್ತಿದ್ದ ವಿಮಾನ ಸರೋವರದಲ್ಲಿ ಪತನ

    42 ಜನರನ್ನು ಹೊತ್ತಿದ್ದ ವಿಮಾನ ಸರೋವರದಲ್ಲಿ ಪತನ

    ಡೊಡೊಮಾ: ಹವಾಮಾನ ವೈಪರಿತ್ಯದಿಂದಾಗಿ 42 ಜನರನ್ನು ಹೊತ್ತ ವಿಮಾನವೊಂದು (Plane) ಸರೋವರದಲ್ಲಿ (Lake) ಪತನವಾಗಿರುವ (Crash) ಘಟನೆ ಭಾನುವಾರ ಬೆಳಗ್ಗೆ ಪೂರ್ವ ಆಫ್ರಿಕಾದ ತಾಂಜಾನಿಯಾದಲ್ಲಿ (Tanzania) ನಡೆದಿದೆ.

    ತಾಂಜಾನಿಯಾದ ಬುಕೋಬಾದಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ವಿಮಾನ ಹವಾಮಾನ ವೈಪರಿತ್ಯದಿಂದಾಗಿ ಕೇವಲ 100 ಮೀ. ದೂರದಲ್ಲಿದ್ದ ವಿಕ್ಟೋರಿಯಾ ಸರೋವರಕ್ಕೆ (Lake Victoria) ಅಪ್ಪಳಿಸಿದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಆನ್‍ಲೈನ್ ಎಡವಟ್ಟು- ಟಿಇಟಿ ಪರೀಕ್ಷೆಗೆ ಬಂದ ವಿದ್ಯಾರ್ಥಿ ಪರೀಕ್ಷೆಯಿಂದ ವಂಚಿತ

    39 ಪ್ರಯಾಣಿಕರು, ಇಬ್ಬರು ಪೈಲಟ್‌ಗಳು ಮತ್ತು ಇಬ್ಬರು ಕ್ಯಾಬಿನ್ ಸಿಬ್ಬಂದಿ ಸೇರಿದಂತೆ ಒಟ್ಟು 43 ಜನರನ್ನು ಹೊತ್ತಿದ್ದ ವಿಮಾನ ದಾರ್ ಎಸ್ ಸಲಾಮ್‌ನಿಂದ ಹೊರಟಿತ್ತು. 26 ಜನರನ್ನು ಈಗಾಗಲೇ ರಕ್ಷಿಸಲಾಗಿದ್ದು, ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟಗರು ಗುದ್ದಿ ಕೊಟ್ಟಿಗೆಯಲ್ಲಿ ಲಾಕ್ ಆದ ಚಿರತೆ – ಕೆಆರ್‌ಎಸ್‌ನ ಬೃಂದಾವನದಲ್ಲಿ ಅಂತ್ಯವಾಗದ ಆತಂಕ

    Live Tv
    [brid partner=56869869 player=32851 video=960834 autoplay=true]

  • ಗಂಗೆ ಮುಟ್ಟಿ ಆಣೆ ಮಾಡಲು ಹೋದವರು ನೀರುಪಾಲು

    ಗಂಗೆ ಮುಟ್ಟಿ ಆಣೆ ಮಾಡಲು ಹೋದವರು ನೀರುಪಾಲು

    ಹಾಸನ: ಹಣಕಾಸಿನ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದ ಸ್ನೇಹಿತರಿಬ್ಬರು ಆಣೆ-ಪ್ರಮಾಣ ಮಾಡಲು ಹೋಗಿ ನೀರುಪಾಲಾದ ದುರಂತ ಹಾಸನದಲ್ಲಿ (Hassan) ನಡೆದಿದೆ. ನೀರಿನಲ್ಲಿ ಮುಳುಗಿ ಇಬ್ಬರು ಜಲಸಮಾಧಿಯಾಗಿದ್ದಾರೆ.

    ಹಾಸನ ತಾಲೂಕಿನ ತೇಜೂರು ಗ್ರಾಮದ ಆನಂದ್ ಮತ್ತು ಚಂದ್ರು ಇಬ್ಬರು ಹಾಸನದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲದೇ ಸಮಾರಂಭಗಳಲ್ಲಿ ಸಿಹಿ ತಯಾರಿಸುವ ಕಂಟ್ರ್ಯಾಕ್ಟ್ ಕೂಡ ತೆಗೆದುಕೊಳ್ಳುತ್ತಿದ್ದರು. ಗುರುವಾರ ಎಂದಿನಂತೆ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುವ ಮುನ್ನ, ರಿಂಗ್ ರಸ್ತೆಯ ಬಾರ್ ಒಂದರಲ್ಲಿ ಮದ್ಯಪಾನ ಮಾಡಿದ್ದಾರೆ. ತಮ್ಮ ಬ್ಯುಸಿನೆಸ್‍ನ ಆರ್ಡರ್ ಒಪ್ಪಿಕೊಳ್ಳುವ ವಿಚಾರದಲ್ಲಿ ಇಬ್ಬರ ನಡುವೆ ಜಗಳ ಶುರುವಾಗಿದೆ. ಮಾತಿಗೆ ಮಾತು ಬೆಳೆದು, ಬಾ.. ಗಂಗೆ ಮುಟ್ಟಿ ಸತ್ಯ ಮಾಡೋಣ ಎಂದು ಕುಡಿದ ಮತ್ತಿನಲ್ಲೇ ಇಬ್ಬರು ಕೆರೆಗೆ ಇಳಿದಿದ್ದಾರೆ. ಈ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ನೀರು ಪಾಲಾಗಿದ್ದಾರೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್‌ ಹೊಡೆದು ಬೈಕ್‌ ಸವಾರ ಸಾವು – ಅಪಘಾತ ಜಾಗದಲ್ಲಿ ಬಿದ್ದಿತ್ತು ಮದ್ಯದ ಬಾಟಲಿಗಳು

    ಸಿಹಿ ತಿಂಡಿ ತಯಾರಿಸುವ ಕೆಲಸ ಮಾಡಲೆಂದು ಬೇರೆಯವರಿಂದ ಹಣ ಪಡೆದಿದ್ದರು. ನಂತರ ಕೆಲಸಕ್ಕೆ ಹೋಗಿರಲಿಲ್ಲ. ಈ ಸಂಬಂಧ ಇಬ್ಬರ ನಡುವೆ ಆಗಾಗ ಮಾತುಕತೆ ನಡೆಯುತಿತ್ತು. ಹಲವು ದಿನ ಕಳೆದರು ಹಣ ಪಡೆದಿದ್ದ ಮನಸ್ತಾಪ ತಿಳಿಯಾಗಿರಲಿಲ್ಲ. ಇದೇ ವಿಚಾರಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಆಣೆ-ಪ್ರಮಾಣ ಮಾಡಲು ಹೋಗಿ ನೀರು ಪಾಲಾಗಿದ್ದಾರೆ. ಇದನ್ನೂ ಓದಿ: ಟ್ಯಾಟೂ ಹಾಕಿಸಿಕೊಂಡವರು 6 ತಿಂಗಳು ರಕ್ತದಾನ ಮಾಡ್ಬೇಡಿ – ವೈದ್ಯರ ಎಚ್ಚರಿಕೆ

    ಒಟ್ಟಾರೆ ಸ್ನೇಹಿತರ ಮಧ್ಯೆ ಹಣಕಾಸಿನ ವಿಚಾರ ಅತಿರೇಕಕ್ಕೆ ಹೋಗಿ ದುರಂತ ಸಾವಿನಲ್ಲಿ ಅಂತ್ಯವಾಗಿದೆ. ಚಂದ್ರುವಿಗೆ ಮದುವೆಯಾಗಿದ್ದು, ಈತನನ್ನೇ ನಂಬಿದ್ದ ಕುಟುಂಬ ಈಗ ಕಣ್ಣೀರಿಡುವಂತಾಗಿದೆ. ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕಾಲು ಜಾರಿ ಕೆರೆಗೆ ಬಿದ್ದು ಯುವತಿ ದುರ್ಮರಣ

    ಕಾಲು ಜಾರಿ ಕೆರೆಗೆ ಬಿದ್ದು ಯುವತಿ ದುರ್ಮರಣ

    ಮಡಿಕೇರಿ: ಯುವತಿಯೊಬ್ಬಳು ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿರುವ ಘಟನೆ ಕೊಡಗು (Kodagu) ಜಿಲ್ಲೆಯ ವಿರಾಜಪೇಟೆ (Virajapete) ತಾಲೂಕಿನ ಕೊಣಂಜಗೇರಿ ಪಾರಾಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಿರುಂದಾಡು ಗ್ರಾಮದಲ್ಲಿ ನಡೆದಿದೆ.

    ಪಾರಾಣೆ ಗ್ರಾ.ಪಂ ಸದಸ್ಯೆ ದಾಕ್ಷಾಯಿಣಿ ಹಾಗೂ ಕುಶಾಲಪ್ಪ ಅವರ ಪುತ್ರಿ ಚಸ್ಮಿಕಾ (20) ಮೃತ ದುರ್ದೈವಿ. ಮೂರ್ನಾಡು ಸರ್ಕಾರಿ ಅನುದಾನಿತ ಕಾಲೇಜಿನಲ್ಲಿ ಬಿ.ಕಾಂ. ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಚಸ್ಮಿಕಾ ಇಂದು ಬೆಳಗ್ಗೆ ಗದ್ದೆಯಲ್ಲಿ ದನ ಕಟ್ಟಲು ಕೆರೆಯ ಪಕ್ಕದ ದಾರಿಯಲ್ಲಿ ಹೋಗುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು, ಸಾವನ್ನಪ್ಪಿರುವ ಬಗ್ಗೆ ತಿಳಿದು ಬಂದಿದೆ. ಇದನ್ನೂ ಓದಿ: ಬಂಡೆಮಠ ಸ್ವಾಮೀಜಿ ಆತ್ಮಹತ್ಯೆಗೆ ಟ್ವಿಸ್ಟ್- ಮಹಿಳೆಯ ಜೊತೆಗಿನ ವೀಡಿಯೋ ಕಾಲ್ ವೈರಲ್

    ಇದೀಗ ಮಗಳನ್ನು ಕಳೆದುಕೊಂಡ ತಂದೆ ತಾಯಿಯ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಜಿ.ಬೋಪಯ್ಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ನಾಪೋಕ್ಲುವಿನ ಗ್ರಾಮದ ಯುವಕರು ಅಬ್ದುಲ್ ರಜಾಕ್, ಅಬ್ದುಲ್ ಮಜೀದ್ ಹಾಗೂ ಶಮೀ ಸಹಕರಿಸಿದ್ದಾರೆ. ಘಟನೆ ಸಂಬಂಧಿಸಿದಂತೆ ನಾಪೋಕ್ಲು ಠಾಣಾಧಿಕಾರಿ ಸದಾಶಿವ ಹಾಗೂ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಪಟಾಕಿ ತಂದ ಆಪತ್ತು – ಮಕ್ಕಳ ಬಾಳಲ್ಲಿ ಕತ್ತಲೆ ತಂದ ಬೆಳಕಿನ ಹಬ್ಬ, 78 ಮಂದಿಗೆ ಗಾಯ

    Live Tv
    [brid partner=56869869 player=32851 video=960834 autoplay=true]

  • ಗ್ರಾಮಗಳಿಗೆ ನುಗ್ಗಿತು ನೀರು – ಕೆರೆ ಕಟ್ಟೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿ

    ಗ್ರಾಮಗಳಿಗೆ ನುಗ್ಗಿತು ನೀರು – ಕೆರೆ ಕಟ್ಟೆ ಒಡೆದು ಅಪಾರ ಪ್ರಮಾಣದ ಬೆಳೆ ಹಾನಿ

    ಚಿಕ್ಕಬಳ್ಳಾಪುರ: ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕೆಂಕೆರೆ ಗ್ರಾಮದ (Kenkere) ಕೆರೆ (Lake) ಕಟ್ಟೆ ಒಡೆದು ಅಪಾರ ಪ್ರಮಾಣದ ಕೆರೆಯ ನೀರು (Water), ರೈತರ ಜಮೀನುಗಳಿಗೆ ನುಗ್ಗುತ್ತಿದ್ದು ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.

    200 ಎಕರೆ ವಿಶಾಲವಾದ ಕೆರೆ 22 ವರ್ಷಗಳ ನಂತರ ಇದೇ ಮೊದಲ ಬಾರಿಗೆ 15 ದಿನಗಳಿಂದ ಮೈದುಂಬಿ ಕೋಡಿ ಹರಿದಿದೆ. ಆದರೆ ತಡರಾತ್ರಿ ಕೆರೆ ಕಟ್ಟೆಯ ಮಧ್ಯಭಾಗದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಕೆರೆ ಏರಿ ಕಟ್ಟೆ ಸಂಪೂರ್ಣವಾಗಿ ಒಡೆದು ಹೋಗಿದೆ. ಕೆರೆಯಿಂದ ಅಪಾರ ಪ್ರಮಾಣದ ನೀರು ರಭಸವಾಗಿ ರೈತರ ಜಮೀನುಗಳಿಗೆ ನುಗ್ಗುತ್ತಿದೆ.

    ಮೆಕ್ಕೆಜೋಳ, ರೇಷ್ಮೆ, ಟೊಮೊಟೊ, ಕನಕಾಂಬರ, ಸುಗಂಧ ಹೂವಿನ ತೋಟಗಳು ಸೇರಿದಂತೆ ನೂರಾರು ಎಕರೆ ರೈತರ ಜಮೀನುಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಕೆಂಕೆರೆ ಗ್ರಾಮದ 10-15 ಮನೆಗಳಿಗೂ ನೀರು ನುಗ್ಗಿದ್ದು, ನಿವಾಸಿಗಳು ಮನೆ ಖಾಲಿ ಮಾಡಿ ಎತ್ತರದ ಪ್ರದೇಶಗಳಿಗೆ ಹೋಗಿದ್ದಾರೆ. ಇದನ್ನೂ ಓದಿ: ಭಾರೀ ಮಳೆ- KRS ಡ್ಯಾಂನ ಒಳ, ಹೊರ ಹರಿವು ಹೆಚ್ಚಳ

    ರಭಸವಾಗಿ ನೀರು ಹರಿಯುತ್ತಿರುವ ಕಾರಣ ಏರಿ ಮತ್ತಷ್ಟು ಒಡೆದು ಹೋಗುತ್ತಿದ್ದು ಮತ್ತಷ್ಟು ರಭಸವಾಗಿ ನೀರು ಮುನ್ನುಗ್ಗುವ ಸಾಧ್ಯತೆ ಇದೆ. ಇದರಿಂದ ಕೆಂಕೆರೆ ಗ್ರಾಮದ ಪಕ್ಕದ ಕೆಟಿ ಹಳ್ಳಿಗೆ ನೀರು ನುಗ್ಗುವ ಆತಂಕವಿದ್ದು, ಕೆಟಿ ಹಳ್ಳಿ ಗ್ರಾಮಸ್ಥರು ಎತ್ತರದ ಪ್ರದೇಶಗಳಿಗೆ ಹೋಗುವಂತೆ ತಿಳಿಸಲಾಗಿದೆ.

    22 ವರ್ಷಗಳ ನಂತರ ಮೈದುಂಬಿದ ಕೆರೆ ಕಂಡು ಗ್ರಾಮಸ್ಥರಲ್ಲಿ ಸಂತಸ ಮೂಡಿತ್ತು. ಆದರೆ ಈಗ ಕೆರೆ ಕಟ್ಟೆ ಒಡೆದಿರುವ ಕಾರಣ ಗ್ರಾಮಸ್ಥರಿಗೆ ಎಲ್ಲಿಲ್ಲದ ಆತಂಕ ಶುರುವಾಗಿದೆ. ಕೆರೆ ಬಳಿ ನೂರಾರು ಜನ ಜಮಾಯಿಸಿದ್ದು, ಗೌರಿಬಿದನೂರು ಗ್ರಾಮಾಂತರ ಠಾಣಾ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಕೆರೆ ಏರಿಯತ್ತ ಯಾರು ಕೂಡ ಹೋಗದಂತೆ ತಡೆಯೊಡ್ಡಿದ್ದಾರೆ. ಇದನ್ನೂ ಓದಿ: ಮುಸ್ಲಿಮರಲ್ಲೂ ಜಾತಿ ಪದ್ಧತಿ – ಪಿಂಜಾರ, ನದಾಫ್ ಉಪಜಾತಿಗೆ ವಿಶೇಷ ಮೀಸಲಾತಿ ಕೊಡಲು ಒತ್ತಾಯ

    Live Tv
    [brid partner=56869869 player=32851 video=960834 autoplay=true]

  • ಅಮೃತ ಸರೋವರ ಯೋಜನೆಯಡಿ ಕೆರೆ ಅಭಿವೃದ್ಧಿ- ನಿರ್ಮಾಣಗೊಂಡ 45 ದಿನಕ್ಕೆ ತಡೆಗೋಡೆ ಕುಸಿತ

    ಅಮೃತ ಸರೋವರ ಯೋಜನೆಯಡಿ ಕೆರೆ ಅಭಿವೃದ್ಧಿ- ನಿರ್ಮಾಣಗೊಂಡ 45 ದಿನಕ್ಕೆ ತಡೆಗೋಡೆ ಕುಸಿತ

    ಕೊಪ್ಪಳ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಗ್ರಾಮೀಣ ಭಾಗದಲ್ಲಿರುವ ಕೆರೆ (Lake) ಗಳನ್ನು ಅಭಿವೃದ್ಧಿಪಡಿಸಲು ಅಮೃತ ಸರೋವರ ಯೋಜನೆ (Amruth Sarovara Yojana) ಆರಂಭಿಸಿದೆ. ಆದರೆ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿಪಡಿಸಿದ ಕೆರೆಗಳ ಕಾಮಗಾರಿ ಕಳಪೆಯಿಂದ ಕೂಡಿದೆ ಎಂಬುದಕ್ಕೆ ಇದು ಸಾಕ್ಷಿಯಾಗಿದೆ.

    ಅಮೃತ ಸರೋವರ ಯೋಜನೆಯಡಿ ಕೊಪ್ಪಳ ತಾಲೂಕಿನ ಬಹದ್ದೂರು ಬಂಡಿ ಗ್ರಾಮದಲ್ಲಿರುವ ಕೋಟೆಗೆ ಹೊಂದಿರುವ ಬೆಟ್ಟದ ಕೆಳಗಿನ ಕೆರೆಯನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಕೆರೆಯನ್ನು ಆಗಸ್ಟ್ 15ರಂದು ಲೋಕಾರ್ಪಣೆ ಮಾಡಲಾಗಿದೆ. ಲೋಕಾರ್ಪಣೆಯಾದ ಕೇವಲ 45 ದಿನಗಳಲ್ಲಿ ಈ ಕೆರೆಯ ತಡೆಗೋಡೆ ಬಿದ್ದು ಹೋಗಿರುವುದು ಗ್ರಾಮಸ್ಥರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಈ ಕೆರೆಯನ್ನು ಒಟ್ಟು 42 ಲಕ್ಷ ರೂಪಾಯಿಯಲ್ಲಿ ಅಭಿವೃದ್ಧಿಪಡಿಸಲಾಗಿದೆ. ತಡೆಗೋಡೆ ಕಾಮಗಾರಿ ಕಳಪೆಯಾಗಿದ್ದು, ಇದಕ್ಕೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

    ಈ ಬಗ್ಗೆ ಬಹದ್ದೂರುಬಂಡಿ ಪಿಡಿಒ ಜ್ಯೋತಿರನ್ನು ಕೇಳಿದರೆ ಇತ್ತೀಚಿಗೆ ಭಾರೀ ಮಳೆಯಾಗಿದೆ. ಬೆಟ್ಟದಿಂದ ರಭಸವಾಗಿ ನೀರು ಹರಿದು ಬಂದಿದ್ದರಿಂದ ತಡೆಗೋಡೆ ಕುಸಿದಿದೆ. ಸರಿಪಡಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ನವರಾತ್ರಿ ದಾಂಡಿಯಾ ಉತ್ಸವದಲ್ಲಿ ಶಶಿಕಲಾ ಜೊಲ್ಲೆ ಸಕತ್ ಸ್ಟೆಪ್ಸ್

    ಹಿಂದಿನ ಕಾಲದಲ್ಲಿ ನಮ್ಮ ಹಿರಿಯರು ನಿರ್ಮಿಸಿದ ಅನೇಕ ಕೆರೆಕಟ್ಟೆಗಳು ಏನೂ ಆಗಿಲ್ಲ. ಆದರೆ ಈಗಿನ ಕೆರೆಗಳು ನಿರ್ಮಿಸಿದ ಸ್ವಲ್ಪ ದಿನಕ್ಕೆ ಹಾಳಾಗುತ್ತಿರುವುದಕ್ಕೆ ಕಳಪೆ ಕಾಮಗಾರಿ ಅಲ್ಲದೆ ಮತ್ತಿನ್ನೇನು ಎನ್ನಬೇಕು ಎಂದು ಜನತೆ ಪ್ರಶ್ನಿಸುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೆರೆ ಮಧ್ಯ ತೆಪ್ಪದಲ್ಲಿ ತೆರಳಿ ಬೆಸ್ಕಾಂ ಸಿಬ್ಬಂದಿಯಿಂದ ವಿದ್ಯುತ್ ದುರಸ್ತಿ – ಎಲ್ಲೆಡೆ ಮೆಚ್ಚುಗೆ

    ಕೆರೆ ಮಧ್ಯ ತೆಪ್ಪದಲ್ಲಿ ತೆರಳಿ ಬೆಸ್ಕಾಂ ಸಿಬ್ಬಂದಿಯಿಂದ ವಿದ್ಯುತ್ ದುರಸ್ತಿ – ಎಲ್ಲೆಡೆ ಮೆಚ್ಚುಗೆ

    ಕೋಲಾರ: ಜಿಲ್ಲೆಯಲ್ಲಿ ಇತ್ತೀಚೆಗೆ ಉತ್ತಮ ಮಳೆಯಾಗಿ ಕೆರೆ ಕುಂಟೆಗಳೆಲ್ಲಾ ತುಂಬಿದೆ. ಈ ಮಧ್ಯೆ ಕೆರೆಗಳಲ್ಲಿರುವ (lake) ವಿದ್ಯುತ್ (Electricity)  ಕಂಬಗಳ ದುರಸ್ತಿಗೆ ಬೆಸ್ಕಾಂ (BESCOM) ನೌಕರರು ಜೀವವನ್ನು ಪಣಕ್ಕಿಟ್ಟು ಕೆಲಸ ಮಾಡುವ ಸ್ಥಿತಿ ನಿರ್ಮಾಣವಾಗಿದೆ.

    ಕೋಲಾರ (Kolara) ಜಿಲ್ಲೆಯ ಮಾಲೂರು ತಾಲೂಕು ಲಕ್ಕೂರು ಕೆರೆಯಲ್ಲಿ ಮಾಲೂರು ಬೆಸ್ಕಾಂ ಸಿಬ್ಬಂದಿ ವಿದ್ಯುತ್ ದುರಸ್ತಿಗಾಗಿ ತೆಪ್ಪದಲ್ಲಿ ತೆರಳಿ ಕೆಲಸ ನಿರ್ವಹಿಸಿದ್ದಾರೆ. ವಿದ್ಯುತ್ ಕಂಬಗಳ ದುರಸ್ತಿಗಾಗಿ ಬೆಸ್ಕಾಂ ನೌಕರರು ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಈ ಮೂಲಕ ಜನರಿಗೆ ಬೆಳಕಾಗಿದ್ದು, ತೆಪ್ಪದಲ್ಲಿ ತೆರಳಿ ವಿದ್ಯುತ್ ಕಂಬದಲ್ಲಿ ಕೆಲಸ ಮಾಡಿರುವ ಬೆಸ್ಕಾಂ ಸಿಬ್ಬಂದಿ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಕಾವಾಡಿಗ ಕಲೀಲ್‍ನನ್ನು ಅಟ್ಟಾಡಿಸಿದ ಸಾಕಾನೆ ಮಣಿಕಂಠ

    ಇಬ್ಬರು ತೆಪ್ಪದಲ್ಲಿದ್ದರೆ ಇನ್ನಿಬ್ಬರು ವಿದ್ಯುತ್ ಕಂಬದಲ್ಲಿ ಕೆಲಸ ಮಾಡುವ ಮೂಲಕ ಬೆಸ್ಕಾಂ ಸಿಬ್ಬಂದಿಯ ಸಾಹಸ ಕಾರ್ಯಕ್ಕೆ ವಿದ್ಯುತ್ ನಿಗಮ ಅಧಿಕಾರಿಗಳು ಸೇರಿದಂತೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗೇಟ್ ತೆಗೆಯೋದು ತಡವಾಗಿದ್ದಕ್ಕೆ ಸೆಕ್ಯೂರಿಟಿಗೆ ಕಪಾಳಮೋಕ್ಷ ಮಾಡಿದ ಪ್ರಾಧ್ಯಾಪಕಿ

    Live Tv
    [brid partner=56869869 player=32851 video=960834 autoplay=true]

  • ರೀಲ್ಸ್ ಮಾಡಲು ಹೋಗಿ ಯುವತಿ ಕೆರೆ ಪಾಲು – ಉಪ್ಪು ಸುರಿದು ಬದುಕಿಸಲು ಯತ್ನ

    ರೀಲ್ಸ್ ಮಾಡಲು ಹೋಗಿ ಯುವತಿ ಕೆರೆ ಪಾಲು – ಉಪ್ಪು ಸುರಿದು ಬದುಕಿಸಲು ಯತ್ನ

    ಚಿಕ್ಕಬಳ್ಳಾಪುರ: ಕೆರೆಯ ಬಳಿ ರೀಲ್ಸ್(Reels) ಮಾಡಲು ಹೋದ ಯುವತಿ(Young Women) ಕೆರೆಗೆ ಉರುಳಿ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಗಂಗಾನಹಳ್ಳಿ ಗ್ರಾಮದ ಬಳಿ ನಡೆದಿದೆ.

    ಮೂಲತಃ ಶಿಡ್ಲಘಟ್ಟ ತಾಲೂಕಿನ ಗಾಜಿಲುವಾರುಪಲ್ಲಿ ಗ್ರಾಮದ ಎಂಎ ಪದವೀದರೆ ಅಮೃತ(22)  ಮೃತ ಯುವತಿ. ಅಂದಹಾಗೆ ಜಂಬಿಗೆ ಮರದಹಳ್ಳಿಯ ನೆಂಟರ ಮನೆಯ ಗೃಹಪ್ರವೇಶದ ಕಾರ್ಯಕ್ರಮ ನಿಮಿತ್ತ ಆಗಮಿಸಿದ್ದ ಯುವತಿ ಅಮೃತ(Amrutha) ಗಂಗಾನಹಳ್ಳಿ ಕೆರೆ(Lake) ಕೋಡಿ ಹರಿಯುತ್ತಿರುವ ವಿಚಾರ ತಿಳಿದು ಮತ್ತೋರ್ವ ಯುವತಿಯ ಜೊತೆ ಕೆರೆ ಬಳಿ ತೆರಳಿದ್ದಳು. ಈ ವೇಳೆ ಜೊತೆಯಲ್ಲಿದ್ದ ಯುವತಿಗೆ ವೀಡಿಯೋ ಮಾಡಲು ಹೇಳಿ ಮೊಬೈಲ್(Mobile) ನೀಡಿ ಕೆರೆಯ ಅಂಚಿನ ದಿಂಡಿನ ಮೇಲೆ ತೆರಳಿದ್ದಳು. ಆದರೆ ಈ ವೇಳೆ ಆಕಸ್ಮಿಕ ಕಾಲು ಜಾರಿ ಕೆರೆಗೆ ಅಮೃತಾ ಉರುಳಿಬಿದ್ದು ಸಾವನ್ನಪ್ಪಿದ್ದಾಳೆ. ಗುಡಿಬಂಡೆ ಪೊಲೀಸರು (Police) ಘಟನಾ ಸ್ಥಳಕ್ಕೆ ತೆರಳಿ ಮೃತದೇಹವನ್ನು ಗುಡಿಬಂಡೆ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಇದನ್ನೂ ಓದಿ: ಕಾಮನ್‍ವೆಲ್ತ್ ಕರಾಟೆ ಚಾಂಪಿಯನ್‍ಶಿಪ್‍ನಲ್ಲಿ ಚಿನ್ನದ ಪದಕ ಗೆದ್ದ ಬೆಂಗ್ಳೂರಿನ ಜಾಗೃತ್, ಸಂಭ್ರಮ

    ಇನ್ನೂ ಕೆರೆಯ ನೀರಲ್ಲಿ ಅಮೃತ ಉರುಳಿದ ಘಟನೆಯನ್ನು ಅಕ್ಷತಾ ತೋಟದಲ್ಲಿದ್ದ ಗ್ರಾಮಸ್ಥರಿಗೆ ತಿಳಿಸಿದ್ದು ಅರ್ಧ ಗಂಟೆಯಲ್ಲೇ ಕೆರೆಯಿಂದ ಮೃತ ಅಕ್ಷತಾಳನ್ನು ಸ್ಥಳೀಯರೇ ಮೇಲೆ ಎತ್ತಿದ್ದಾರೆ. ಇನ್ನೂ ಇತ್ತೀಚೆಗೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದವರ ಮೃತದೇಹದ ಮೇಲೆ ಅರ್ಧ ಗಂಟೆಯೊಳಗೆ ಉಪ್ಪು(Salt) ಹಾಕಿ ಮಲಗಿಸಿದರೆ ಬದುಕುತ್ತಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದ ಸುಳ್ಳು ಸಂದೇಶದಂತೆ ಯುವತಿಯನ್ನು ಬದುಕಿಸಬೇಕು ಅಂತ ಆಕೆಯ ಮೇಲೆ ಉಪ್ಪು ಸುರಿದು ಬದುಕಿಸಲು ಗ್ರಾಮಸ್ಥರು ಪ್ರಯತ್ನಿಸಿದ್ದಾರೆ. ಇದನ್ನೂ ಓದಿ: ಹುತಾತ್ಮ ಅರಣ್ಯ ರಕ್ಷಕರ ಕುಟುಂಬಕ್ಕೆ ನೀಡ್ತಿದ್ದ ಪರಿಹಾರದ ಮೊತ್ತ 50 ಲಕ್ಷ ರೂ. ಗೆ ಏರಿಕೆ: ಸಿಎಂ ಘೋಷಣೆ

    Live Tv
    [brid partner=56869869 player=32851 video=960834 autoplay=true]

  • 12 ವರ್ಷಗಳ ಬಳಿಕ ಕೋಡಿ ಬಿದ್ದ ಬೃಹತ್ ಕೆರೆ – ರೈತರ ಮೊಗದಲ್ಲಿ ಮಂದಹಾಸ

    12 ವರ್ಷಗಳ ಬಳಿಕ ಕೋಡಿ ಬಿದ್ದ ಬೃಹತ್ ಕೆರೆ – ರೈತರ ಮೊಗದಲ್ಲಿ ಮಂದಹಾಸ

    ಚಿಕ್ಕಮಗಳೂರು: ಜಿಲ್ಲೆಯ ಅಪ್ಪಟ ಬಯಲುಸೀಮೆ ಭಾಗವಾದ ಕಡೂರು ತಾಲೂಕಿನ ದೇವನೂರು ಗ್ರಾಮದ ಕೆರೆ 12 ವರ್ಷಗಳ ಬಳಿಕ ಕೋಡಿ ಬಿದ್ದಿದ್ದು ದೇವನೂರು ಹಾಗೂ ಸುತ್ತಮುತ್ತಲಿನ ಭಾಗದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ.

    ಕಳೆದ ನಾಲ್ಕೈದು ದಿನಗಳಿಂದ ಜಿಲ್ಲೆಯ ಬಯಲುಸೀಮೆ ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಅಜ್ಜಂಪುರ ಹಾಗೂ ಕಡೂರು ಭಾಗದಲ್ಲೇ ಯತೇಚ್ಛವಾಗಿ ಮಳೆ ಸುರಿದಿದ್ದು ಕೆರೆ-ಕಟ್ಟೆ-ಹಳ್ಳ-ಕೊಳ್ಳಗಳು ಕೋಡಿ ಬಿದ್ದಿದ್ದು ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕಡೂರು ತಾಲೂಕಿನ ದೇವನೂರು ಗ್ರಾಮದ ದೇವನೂರು ಕೆರೆ ಸುಮಾರು 350 ಎಕರೆಗೂ ಅಧಿಕ ಪ್ರದೇಶದಲ್ಲಿ ವಿಸ್ತಾರವಾಗಿದೆ. ಈ ಕೆರೆ ತುಂಬಿದರೆ ನಾಲ್ಕೈದು ವರ್ಷಗಳ ಕಾಲ ಈ ಭಾಗದ ಜನಸಾಮಾನ್ಯರು ಹಾಗೂ ದನಕರುಗಳಿಗೆ ಕುಡಿಯೋ ನೀರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇದನ್ನೂ ಓದಿ: ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

    ಈ ಕೆರೆ ಕೋಡಿ ಬೀಳದೇ ಸುಮಾರು 12 ವರ್ಷಗಳೇ ಕಳೆದಿತ್ತು. ಕೆರೆಯ ತುಂಬಾ ಗಿಡಘಂಟೆಗಳು ಬೆಳೆದಿದ್ದವು. ಆದರೆ, ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಕೆರೆ ತುಂಬಿ ಸಮುದ್ರದಂತೆ ಕೋಡಿ ಬೀಳುತ್ತಿದೆ. ಈ ದೃಶ್ಯವನ್ನು ಸ್ಥಳಿಯರು ಕಣ್ತುಂಬಿಕೊಳ್ಳುತ್ತಿದ್ದಾರೆ. ಆದರೆ, ಕೋಡಿ ಬಿದ್ದ ನೀರು ಎಲ್ಲೆಂದರಲ್ಲಿ ನುಗ್ಗುತ್ತಿರುವ ಪರಿಣಾಮ ಹೊಲ-ಗದ್ದೆ-ತೋಟಗಳು ಕೂಡ ಜಲಾವೃತಗೊಳ್ಳುತ್ತಿವೆ. ತೋಟಗಳಲ್ಲಿ ಎರಡ್ಮೂರು ಅಡಿ ನೀರು ನಿಲ್ಲುತ್ತಿದೆ. ಭತ್ತ, ಹತ್ತಿ, ಈರುಳ್ಳಿ ಎಲ್ಲಾ ಬೆಳೆಗಳು ನೀರಲ್ಲಿ ಕೊಚ್ಚಿ ಹೋಗಿ ಮಣ್ಣು ಪಾಲಾಗಿದೆ. ಇದನ್ನೂ ಓದಿ: ಒಮ್ಮೆ ಕರ್ತವ್ಯ ಪಥ ನೋಡಿ ಭವಿಷ್ಯದ ಭಾರತ ನಿಮಗೆ ಇಲ್ಲಿ ಕಾಣುತ್ತದೆ: ಮೋದಿ

    ಈಗ ಅಡಿಕೆಯನ್ನು ಕೊಯ್ಯುವ ಕಾಲ. ಈಗ ಹೀಗೆ ಧಾರಾಕಾರ ಮಳೆ ಸುರಿಯುತ್ತಿರುವುದರಿಂದ ಅಡಿಕೆ ತೋಟದಲ್ಲೂ ನೀರು ನಿಲ್ಲುತ್ತಿದ್ದು ಶೀತಕ್ಕೆ ಅಡಿಕೆ ಕಾಯಿಗಳೂ ಉದುರುತ್ತಿವೆ. ಮರದಲ್ಲಿರುವ ಕಾಯಿಗಳನ್ನು ಕೊಯ್ಯಲು ಸಾಧ್ಯವಾಗುತ್ತಿಲ್ಲ. ಭಾರೀ ಮಳೆಯಿಂದ ಅಡಿಕೆ ತೋಟಗಳು ಜಲಾವೃತಗೊಂಡು ಬೆಳೆಗಾರರು ಕಂಗಾಲಾಗಿದ್ದಾರೆ. ಬಯಲುಸೀಮೆ ಭಾಗದಲ್ಲಿ ಸುರಿಯುತ್ತಿರೋ ಧಾರಾಕಾರ ಮಳೆಯಿಂದ ರೈತರಿಗೆ ಒಂದೆಡೆ ಖುಷಿ ತಂದಿದೆ, ಮತ್ತೊಂದೆಡೆ ಆತಂಕ ತಂದಿದೆ. ತೋಟಗಳನ್ನೇ ನೆಚ್ಚಿಕೊಂಡು ಬದುಕುತ್ತಿದ್ದ ಸಣ್ಣ ಬೆಳೆಗಾರರು ಸರ್ಕಾರ ನಮಗೆ ಸೂಕ್ತ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]