Tag: Laksha Deepotsava

  • ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕೆ ಅದ್ದೂರಿ ತೆರೆ – ಲಕ್ಷಾಂತರ ಭಕ್ತರು ಸಾಕ್ಷಿ

    ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷ ದೀಪೋತ್ಸವಕ್ಕೆ ಅದ್ದೂರಿ ತೆರೆ – ಲಕ್ಷಾಂತರ ಭಕ್ತರು ಸಾಕ್ಷಿ

    – ದೀಪಗಳಿಂದ ಕಂಗೊಳಿಸಿದ ಶ್ರೀಕ್ಷೇತ್ರ ಧರ್ಮಸ್ಥಳ

    ಮಂಗಳೂರು: ದಕ್ಷಿಣ ಭಾರತದ ಪವಿತ್ರ ‌ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಐದು ದಿನಗಳ ಕಾಲ ನಡೆದ ಲಕ್ಷ ದೀಪೋತ್ಸವಕ್ಕೆ ತೆರೆ ಬಿದ್ದಿದೆ. ದೀಪೋತ್ಸವದ ಸಂಭ್ರಮದಲ್ಲಿ ಲಕ್ಷಾಂತರ ಭಕ್ತರು ದೇಗುಲಕ್ಕೆ ಆಗಮಿಸಿ ಮಂಜುನಾಥ ದೇವರ ದರ್ಶನ ಪಡೆದರು. ಜಗಮಗಿಸುವ ದೀಪಾಲಂಕಾರವನ್ನು ಕಣ್ತುಂಬಿಕೊಂಡರು.

    ಕಾರ್ತಿಕ ಮಾಸದ ಲಕ್ಷ ದೀಪದ ಸಂಭ್ರಮ ಸಡಗರ ಶ್ರೀ ಕ್ಷೇತ್ರ‌ ಧರ್ಮಸ್ಥಳದಲ್ಲಿ ಐದು ದಿ‌ನಗಳ ಕಾಲ ಮೇಳೈಸಿತ್ತು. ಧರ್ಮಸ್ಥಳ ಕ್ಷೇತ್ರ ದೀಪಾಲಂಕಾರದಿಂದ ಕಂಗೊಳಿಸುತ್ತಿತ್ತು. ಭಕ್ತ ಸಾಗರವೇ ಕ್ಷೇತ್ರದಲ್ಲಿ ಶಿನ ಸ್ಮರಣೆ ಮಾಡಿದರು. ಹೌದು, ಕಳೆದ ಐದು ದಿನಗಳಿಂದ ಪವಿತ್ರ ಪುಣ್ಯಕ್ಷೇತ್ರ ಶ್ರೀ‌ ಕ್ಷೇತ್ರ ಧರ್ಮಸ್ಥಳದಲ್ಲಿ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿದೆ ಲಕ್ಷ ದೀಪೋತ್ಸವ ನಡೆಯಿತು. ದೀಪೋತ್ಸವ ಹಿನ್ನೆಲೆ ದೇಗುಲದ ಮುಂಭಾಗವನ್ನು ಹೂವಿನಿಂದ ಅಲಂಕರಿಸಲಾಗಿತ್ತು.

    ಮಂಜುನಾಥ ಸ್ವಾಮಿಯ ಹೊಸಕಟ್ಟೆ ಉತ್ಸವ, ಕೆರೆಕಟ್ಟೆ ಉತ್ಸವ, ಲಲಿತೋದ್ಯಾನ ಉತ್ಸವ, ಕಂಚಿಮಾರುಕಟ್ಟೆ ಉತ್ಸವ, ಗೌರಿ ಮಾರುಕಟ್ಟೆ ಉತ್ಸವದ ಜೊತೆಗೆ ಸರ್ವ ಧರ್ಮ ಸಮ್ಮೇಳನ, ಸಾಹಿತ್ಯ ಸಮ್ಮೇಳನ ಹೀಗೆ ವಿವಿಧ ಸಮ್ಮೇಳನಗಳು ನಡೆಯಿತು. ದೇವಸ್ಥಾನ, ಅನ್ನ ಛತ್ರ ರಾಜಬೀದಿಗಳು ದೀಪಾಲಂಕಾರದಿಂದ ಕಂಗೊಳಿಸಿತ್ತು.

    ಐದು ದಿನಗಳ ಕಾಲ ನಡೆದ ಲಕ್ಷ ದೀಪದ‌ ಸಂಭ್ರಮದಲ್ಲಿ ಕರಾವಳಿ ಮಾತ್ರವಲ್ಲದೇ ನಾಡಿನ ಮೂಲೆ ಮೂಲೆಗಳಿಂದ ಆಗಮಿಸಿದ ಲಕ್ಷಾಂತರ ಭಕ್ತರು ದೇವರ ದರ್ಶನ ಪಡೆದು ಪುನೀತರಾದರು.

  • ಸಿಎಂ ತವರಲ್ಲಿ ಶ್ರೀರಾಮನ ಸಂಭ್ರಮಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿ – 24 ದಿನ ಉರಿಯುವ ಅಗರಬತ್ತಿಗೆ 2 ತಾಸು ಅನುಮತಿ

    ಸಿಎಂ ತವರಲ್ಲಿ ಶ್ರೀರಾಮನ ಸಂಭ್ರಮಕ್ಕೆ ಹೆಜ್ಜೆ ಹೆಜ್ಜೆಗೂ ಅಡ್ಡಿ – 24 ದಿನ ಉರಿಯುವ ಅಗರಬತ್ತಿಗೆ 2 ತಾಸು ಅನುಮತಿ

    – ಸಿಎಂ ತವರಲ್ಲಿ ಶ್ರೀರಾಮನ ಸಂಭ್ರಮಾಚರಣೆಗೆ ಹೆಜ್ಜೆ-ಹೆಜ್ಜೆಗೂ ಅಡ್ಡಿ

    ಮೈಸೂರು: ಸಿಎಂ ತವರಿನಲ್ಲಿ ಶ್ರೀರಾಮನ (Sri Rama) ಸಂಭ್ರಮಾಚರಣೆಗೆ ಹೆಜ್ಜೆ-ಹೆಜ್ಜೆಗೂ ಅಡ್ಡಿಯುಂಟಾಗುತ್ತಿದೆ ಎಂದು ರಾಮಭಕ್ತರಿಂದ ಆಕ್ಷೇಪ ವ್ಯಕ್ತವಾಗುತ್ತಿದೆ. ಶ್ರೀರಾಮನಿಗಾಗಿ ಮೈಸೂರಿನಲ್ಲಿ 24 ದಿನ ಉರಿಯುವ 111 ಅಡಿ ಉದ್ದದ ಅಗರ ಬತ್ತಿ ತಯಾರಾಗಿದೆ. ಆದ್ರೆ ಈ ಅಗರಬತ್ತಿಯನ್ನಿಡಲು ಮೈಸೂರು ಪೊಲೀಸರು (Mysuru Police) ಕೇವಲ 2 ತಾಸು ಅನುಮತಿ ಕೊಟ್ಟಿದ್ದಾರೆ.

    ಮೈಸೂರು ಅರಮನೆಯ (Mysore Palace) ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ಈ ಅಗರಬತ್ತಿಯನ್ನಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಆದ್ರೆ 24 ದಿನ ಉರಿಯುವ ಅಗರಬತ್ತಿಗೆ ಪೊಲೀಸರು 2 ತಾಸಿನ ಅನುಮತಿ ನೀಡಿದ್ದಾರೆ. ಇದನ್ನೂ ಓದಿ: ರಾಮಮಂದಿರ ಉದ್ಘಾಟನೆಗೆ ರಜೆ ಕೊಡೋ ಬಗ್ಗೆ ಬಿಜೆಪಿಯವ್ರು ಹೇಳಿಕೊಡಬೇಕಿಲ್ಲ: ಡಿಕೆ ಶಿವಕುಮಾರ್

    ಸಾಮ್ರಾಣಿ, ದೇವದಾರು, ಶ್ರೀಗಂಧ ಸೇರಿದಂತೆ ದಶಾಂಗಗಳನ್ನ ಬಳಸಿ ಅಗರಬತ್ತಿ ಮಾಡಿದ್ದೇವೆ. ಗಾಳಿ ಬೀಸಿದಾಗಲೂ ಕಿಡಿ ಹಾರುವುದಿಲ್ಲ. ಉತ್ತಮ ಸುವಾಸನೆ ಬೀರುತ್ತದೆ ಅನ್ನೋದ್ರಲ್ಲಿ ಎರಡು ಮಾತಿಲ್ಲ ಎಂದು ಆಯೋಕಜರು ತಿಳಿಸಿದ್ದಾರೆ.

    ಲಕ್ಷ ದೀಪೋತ್ಸವಕ್ಕೂ ಅನುಮತಿ ರದ್ದು: ಸಿಎಂ ತವರಲ್ಲಿ ಶ್ರೀರಾಮನ ವಿಚಾರದಲ್ಲಿ ಮತ್ತೆ ಪಾಲಿಟಿಕ್ಸ್ ಶುರುವಾಗಿದೆ ಎಂಬ ಆರೋಪ ಕೇಳಿಬಂದಿದೆ. ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆ ಹಮ್ಮಿಕೊಳ್ಳಲಾಗಿದ್ದ ಶ್ರೀರಾಮನ ಹೆಸರಿನ ಲಕ್ಷದೀಪೋತ್ಸವಕ್ಕೆ ಮೈಸೂರು ಪೊಲೀಸರು ಇದ್ದಕ್ಕಿದ್ದಂತೆ ಅನುಮತಿಯನ್ನ ರದ್ದುಗೊಳಿಸಿದ್ದಾರೆ. ಕಳೆದ 10 ದಿನಗಳ ಹಿಂದೆಯಷ್ಟೇ ಲಕ್ಷ ದೀಪೋತ್ಸವಕ್ಕೆ ಅನುಮತಿ ಕೊಟ್ಟಿದ್ದ ಪೊಲೀಸರು, ಶನಿವಾರ ಇದ್ದಕ್ಕಿದ್ದಂತೆ ಅನುಮತಿ ರದ್ದುಪಡಿಸಿದ್ದೇವೆ ಎಂದು ಪತ್ರ ನೀಡಿದ್ದಾರೆ.

    ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆ ಧಕ್ಕೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅನುಮತಿ ರದ್ದು ಮಾಡಿದ್ದೇವೆ ಎಂದು ನಗರ ಪೊಲೀಸ್ ಉಪ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಲಕ್ಷದೀಪೋತ್ಸವ ಆಯೋಜಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಸಮಯಕ್ಕೆ ಮೈಸೂರಿನಲ್ಲೂ ವಿಶೇಷ ಪೂಜೆ – ಶ್ರೀರಾಮನಿಗೆ ಸಪ್ತ ನದಿಗಳ ನೀರಿನಿಂದ ಜಲಾಭೀಷೇಕ! 

  • ಸಿಎಂ ತವರಲ್ಲಿ ಶ್ರೀರಾಮನ ಹೆಸರಿನ ಲಕ್ಷ ದೀಪೋತ್ಸವಕ್ಕೆ ಅನುಮತಿ ರದ್ದು – ರಾಮಭಕ್ತರಿಂದ ಆಕ್ಷೇಪ

    ಸಿಎಂ ತವರಲ್ಲಿ ಶ್ರೀರಾಮನ ಹೆಸರಿನ ಲಕ್ಷ ದೀಪೋತ್ಸವಕ್ಕೆ ಅನುಮತಿ ರದ್ದು – ರಾಮಭಕ್ತರಿಂದ ಆಕ್ಷೇಪ

    ಮೈಸೂರು: ಸಿಎಂ ತವರಲ್ಲಿ ಶ್ರೀರಾಮನ ವಿಚಾರದಲ್ಲಿ ಮತ್ತೆ ಪಾಲಿಟಿಕ್ಸ್ ಶುರುವಾಗಿದೆ ಎಂಬ ಆರೋಪ ಕೇಳಿಬಂದಿದೆ. ಜನವರಿ 22ರಂದು ರಾಮಲಲ್ಲಾ ಪ್ರಾಣಪ್ರತಿಷ್ಠೆ ಹಿನ್ನೆಲೆ ಹಮ್ಮಿಕೊಳ್ಳಲಾಗಿದ್ದ ಶ್ರೀರಾಮನ ಹೆಸರಿನ ಲಕ್ಷದೀಪೋತ್ಸವಕ್ಕೆ (Laksha Deepotsava) ಮೈಸೂರು ಪೊಲೀಸರು ಇದ್ದಕ್ಕಿದ್ದಂತೆ ಅನುಮತಿಯನ್ನ ರದ್ದುಗೊಳಿಸಿದ್ದಾರೆ.

    ಲಕ್ಷ ದೀಪೋತ್ಸವ ನಡೆಸಿದರೇ ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂಬ ಕಾರಣ ನೀಡಿ ಅನುಮತಿ ರದ್ದುಗೊಳಿಸಿರುವುದಾಗಿ ಪೊಲೀಸರು (Mysuru Police) ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಾಣಪ್ರತಿಷ್ಠೆ ಮತ್ತೊಂದು ದೀಪಾವಳಿ, ಕ್ರಿಶ್ಚಿಯನ್ ಮಹಿಳೆಯಾದ್ರೂ ನಾನು ಆಚರಿಸುತ್ತೇನೆ – ಮೇರಿ ಮಿಲ್ಬೆನ್ ಸಂತಸ

    ಕಳೆದ 10 ದಿನಗಳ ಹಿಂದೆಯಷ್ಟೇ ಲಕ್ಷ ದೀಪೋತ್ಸವಕ್ಕೆ ಅನುಮತಿ ಕೊಟ್ಟಿದ್ದ ಪೊಲೀಸರು, ಶನಿವಾರ ಇದ್ದಕ್ಕಿದ್ದಂತೆ ಅನುಮತಿ ರದ್ದುಪಡಿಸಿದ್ದೇವೆ ಎಂದು ಪತ್ರ ನೀಡಿದ್ದಾರೆ. ಇದನ್ನೂ ಓದಿ: ಬಾಲರಾಮನ ಪ್ರಾಣಪ್ರತಿಷ್ಠೆಗೆ ಒಂದೇ ದಿನ ಬಾಕಿ – ಝಗಮಗಿಸಲು ಬೆಂಗ್ಳೂರಿನಲ್ಲಿ ಭರ್ಜರಿ ತಯಾರಿ

    ಸಂಚಾರಕ್ಕೆ ಅಡ್ಡಿ, ಕಾನೂನು ಸುವ್ಯವಸ್ಥೆ ಧಕ್ಕೆ ಆಗುವ ಸಾಧ್ಯತೆ ಹಿನ್ನೆಲೆಯಲ್ಲಿ ಅನುಮತಿ ರದ್ದು ಮಾಡಿದ್ದೇವೆ ಎಂದು ನಗರ ಪೊಲೀಸ್ ಉಪ ಆಯುಕ್ತರು ತಿಳಿಸಿದ್ದಾರೆ. ಈ ಬಗ್ಗೆ ಲಕ್ಷದೀಪೋತ್ಸವ ಆಯೋಜಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಎಲ್ಲೆಲ್ಲೂ ರಾಮಜಪ, ಜೈಶ್ರೀರಾಮ್ ಉದ್ಘೋಷ – ಇಟ್ಟಿಗೆಯಲ್ಲೇ ಸಾಕ್ಷಾತ್ ಶ್ರೀರಾಮನ ಕಂಡ ಕುಟುಂಬ!

  • ಧರ್ಮಸ್ಥಳಕ್ಕೆ ಬಸ್ಸಿಲ್ಲ – ಮಧ್ಯರಾತ್ರಿ ಚಿಕ್ಕಮಗಳೂರಿನಲ್ಲಿ ಪ್ರಯಾಣಿಕರಿಂದ ಪ್ರತಿಭಟನೆ

    ಧರ್ಮಸ್ಥಳಕ್ಕೆ ಬಸ್ಸಿಲ್ಲ – ಮಧ್ಯರಾತ್ರಿ ಚಿಕ್ಕಮಗಳೂರಿನಲ್ಲಿ ಪ್ರಯಾಣಿಕರಿಂದ ಪ್ರತಿಭಟನೆ

    ಚಿಕ್ಕಮಗಳೂರು: ಧರ್ಮಸ್ಥಳಕ್ಕೆ (Dharmasthala) ಬಸ್ಸಿಲ್ಲ ಎಂದು ನೂರಾರು ಪ್ರಯಾಣಿಕರು ಶನಿವಾರ ಮಧ್ಯರಾತ್ರಿ ದಿಢೀರ್‌ ಪ್ರತಿಭಟನೆ (Protest) ನಡೆಸಿರುವ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲಾ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

    ಡಿಸೆಂಬರ್ 12ರಂದು ಮಂಜುನಾಥ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ (Laksha Deepotsava) ನಡೆಯಲಿದೆ. ಈ ವಿಶೇಷ ಸಂದರ್ಭದಲ್ಲಿ ಶ್ರೀ ಕ್ಷೇತ್ರಕ್ಕೆ ತೆರಳಲು ರಾಜ್ಯದ ನಾನಾ ಭಾಗಗಳಿಂದ ಸಾವಿರಾರು ಪ್ರಯಾಣಿಕರು ನಿತ್ಯ ಸಂಚರಿಸುತ್ತಿದ್ದಾರೆ.

    ಕಳೆದ ರಾತ್ರಿ ಚಿಕ್ಕಮಗಳೂರು ಬಸ್ ನಿಲ್ದಾಣಕ್ಕೆ ಬಂದಿದ್ದ ನೂರಾರು ಪ್ರಯಾಣಿಕರು ಬಸ್ಸು (Bus) ಇಲ್ಲದ್ದರಿಂದ ನಿಲ್ದಾಣದ ಒಳಗಡೆಯೇ ಪ್ರತಿಭಟನೆಗೆ ಮುಂದಾಗಿದ್ದಾರೆ. ಸಂಜೆ 7 ಗಂಟೆಗೆ  ನಿಲ್ದಾಣಕ್ಕೆ ಬಂದರೂ ಕೂಡ ಧರ್ಮಸ್ಥಳಕ್ಕೆ ಬಸ್ ಇರಲಿಲ್ಲ. ಇದನ್ನೂ ಓದಿ: ಕಡಲಾಮೆಗಳಿಗಾಗಿ 3 ತಿಂಗಳು ಕ್ಷಿಪಣಿ ಪರೀಕ್ಷೆ ಬಂದ್

    ಬೇರೆ-ಬೇರೆ ಮಾರ್ಗಗಳಿಂದ ಬಸ್ ಬಂದರೂ ಕೂಡ ಶಕ್ತಿ ಯೋಜನೆಯಿಂದಾಗಿ ಬಸ್ಸಿನಲ್ಲಿ ನಿಲ್ಲುವುದಕ್ಕೂ ಜಾಗ ಇರಲಿಲ್ಲ. ಹಾಗಾಗಿ ಪ್ರಯಾಣಿಕರು ಬೇರೆ ಬಸ್ಸಿನಲ್ಲಿ ಹೋಗೋಣ ಎಂದು ಕಾದು ಕುಳಿತಿದ್ದಾರೆ. ಬಸ್‌ ಸಿಗದ ಕಾರಣ ದೂರದ ಊರಿನಿಂದ ಬಂದಿದ್ದಂತಹ ನೂರಾರು ಮಹಿಳೆಯರು ಹಾಗೂ ಮಕ್ಕಳು ಸರ್ಕಾರಿ ಬಸ್ ನಿಲ್ದಾಣದೊಳಗಡೆ ಮಲಗಿದ್ದರು. ಪ್ರಯಾಣಿಕರ ಆಕ್ರೋಶ ಹೆಚ್ಚಾಗುತ್ತಿದ್ದಂತೆ ಬಸ್ ಡಿಪೋ ಅಧಿಕಾರಿಗಳು ಬೇಲೂರು ಡಿಪೋದ ಬಸ್ಸುಗಳ ಮೂಲಕ ಪ್ರಯಾಣಿಕರನ್ನು ಧರ್ಮಸ್ಥಳಕ್ಕೆ ಕಳುಹಿಸಿದ್ದಾರೆ.

    ಇಂದಿನಿಂದ ಧರ್ಮಸ್ಥಳಕ್ಕೆ ಬಸ್ : ಲಕ್ಷ ದೀಪೋತ್ಸವ ಇರುವುದರಿಂದ ಸಾವಿರಾರು ಭಕ್ತರು ಧರ್ಮಸ್ಥಳಕ್ಕೆ ತೆರಳುತ್ತಿದ್ದಾರೆ. ಹಾಗಾಗಿ ಇಂದಿನಿಂದ ಮೂರು ದಿನಗಳ ಕಾಲ ಚಿಕ್ಕಮಗಳೂರಿನ ಆರು ಡಿಪೋಗಳಿಂದಲೂ ಕೂಡ ಧರ್ಮಸ್ಥಳಕ್ಕೆ ಬಸ್ಸುಗಳನ್ನು ಬಿಡಲು ಬಿಡಲು ಅಧಿಕಾರಿಗಳು ತೀರ್ಮಾನಿಸಿದ್ದಾರೆ.

    ಇಂದಿನಿಂದ ಮೂರು ದಿನಗಳ ಕಾಲ ಸಂಜೆಯ ಬಳಿಕ ಐದು ಬಸ್ ಗಳು ನಿತ್ಯ ಧರ್ಮಸ್ಥಳಕ್ಕೆ ತೆರಳಲಿವೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಶನಿವಾರವೇ ಬಸ್ಸುಗಳನ್ನು ಬಿಡುತ್ತಿದ್ದೆವು. ಆದರೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಪ್ರಯಾಣಿಕರು ಬರುತ್ತಾರೆ ಎಂದು ಊಹಿಸಿರಲಿಲ್ಲ. ಹಾಗಾಗಿ ಸಮಸ್ಯೆಯಾಗಿದೆ. ಇಂದಿನಿಂದ ಬಸ್ಸುಗಳು ಓಡಾಡಲಿದ್ದು ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

     

  • ಮಂತ್ರಾಲಯದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ – ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

    ಮಂತ್ರಾಲಯದಲ್ಲಿ ಲಕ್ಷ ದೀಪೋತ್ಸವ ಸಂಭ್ರಮ – ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಭಾಗಿ

    ರಾಯಚೂರು: ಗುರುರಾಯರ ಸನ್ನಿಧಿ ಮಂತ್ರಾಲಯ (Mantralaya) ಶ್ರೀರಾಘವೇಂದ್ರ ಸ್ವಾಮಿ ಮಠದಲ್ಲಿ ಕಾರ್ತಿಕ ದೀಪೋತ್ಸವ ಸಂಭ್ರಮ ಮನೆ ಮಾಡಿದೆ. ಶ್ರೀ ಮಠದ ಮದ್ವ ಮಾರ್ಗ ಕಾರಿಡಾರ್‌ನಲ್ಲಿ ಲಕ್ಷ ದೀಪೋತ್ಸವ (Laksha Deepotsava) ವೈಭವದಿಂದ ನಡೆಯಿತು.

    ಶ್ರೀ ಮಠ ಮಂತ್ರಾಲಯದ ಸಹಯೋಗದಲ್ಲಿ ಬನ್ನಂಜೆ ರಾಘವೇಂದ್ರ ತೀರ್ಥ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಾವಿರಾರು ಭಕ್ತರರಿಂದ ಲಕ್ಷ ದೀಪೋತ್ಸವ ಅನಾವರಣಗೊಂಡಿತು. ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ದೀಪ ಬೆಳಗಿಸುವ ಮೂಲಕ ಲಕ್ಷ ದೀಪೋತ್ಸವಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: ಧರೆಗುರುಳಿದ್ದ 2,000 ವರ್ಷದ ಹುಣಸೆ ಮರ – ಚಿಕಿತ್ಸೆ ಬಳಿಕ ಮರುಜೀವ

    ಲಕ್ಷ ದೀಪೋತ್ಸವ ಕಾರ್ಯಕ್ರಮದಲ್ಲಿ ತೆಲಂಗಾಣ ಹಣಕಾಸು ವಿಶೇಷ ಮುಖ್ಯ ಕಾರ್ಯದರ್ಶಿ ರಾಮಕೃಷ್ಣ ರಾವ್ ಸೇರಿದಂತೆ ಹಲವು ಗಣ್ಯರು ವಿವಿಧ ರಾಜ್ಯಗಳಿಂದ ಆಗಮಿಸಿದ್ದ ಸಹಸ್ರಾರು ಭಕ್ತರು ಭಾಗವಹಿಸಿದ್ದರು. ಇದನ್ನೂ ಓದಿ: ಮಂಗಳವಾರ ನಿಗಮ ಮಂಡಳಿ ಪಟ್ಟಿ ಫೈನಲ್‌ ಸಾಧ್ಯತೆ

  • ವೀಕೆಂಡ್ ಕರ್ಫ್ಯೂ – ಶ್ರೀರಂಗನಾಥ ದೇವಾಲಯದಲ್ಲಿ ಲಕ್ಷ ದೀಪೋತ್ಸವ ರದ್ದು

    ವೀಕೆಂಡ್ ಕರ್ಫ್ಯೂ – ಶ್ರೀರಂಗನಾಥ ದೇವಾಲಯದಲ್ಲಿ ಲಕ್ಷ ದೀಪೋತ್ಸವ ರದ್ದು

    ಮಂಡ್ಯ: ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಶ್ರೀರಂಗನಾಥ ದೇವಾಲಯದ ಲಕ್ಷ ದೀಪೋತ್ಸವವನ್ನು ರದ್ದು ಮಾಡಲಾಗಿದೆ.

    ಕಳೆದ 24 ವರ್ಷಗಳಿಂದ ಲಕ್ಷ ದೀಪೋತ್ಸವವನ್ನು ಆಚರಿಸಲಾಗುತ್ತಿತ್ತು. ಮಕರ ಸಂಕ್ರಾಂತಿಯಂದು ರಾತ್ರಿ ಭಾರೀ ವಿಜೃಂಭಣೆಯಿಂದ ನಡೆಯುತ್ತಿದ್ದ ಲಕ್ಷ ದೀಪೋತ್ಸವ ಇದೇ ಮೊದಲ ಬಾರಿಗೆ ರದ್ದಾಗಿದೆ ಎನ್ನಲಾಗುತ್ತಿದೆ. ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಶ್ರೀರಂಗನಾಥ ದೇವಾಲಯವನ್ನು ಮುಚ್ಚಲಾಗಿದ್ದು, ಭಕ್ತರು ಹೊರಾಂಗಣದಲ್ಲೇ ಕೈ ಮುಗಿದು ತೆರಳುತ್ತಿದ್ದಾರೆ. ಇದನ್ನೂ ಓದಿ: ಉಡುಪಿ ಕೃಷ್ಣ ಮಠದಲ್ಲಿ ಹಗಲು ಉತ್ಸವ – ಅಷ್ಟಮಠಾಧೀಶರು ಭಾಗಿ

    ದೇವಾಲಯದ ಆಡಳಿತ ಮಂಡಳಿ ಲಕ್ಷ ದೀಪೋತ್ಸವದ ಬದಲು ಲಘು ದೀಪೋತ್ಸವ ಆಚರಿಸಲು ನಿರ್ಧರಿಸಿದೆ. ಹೀಗಾಗಿ ದೇವಾಲಯದ ಪ್ರಾಂಗಣದಲ್ಲಿ ಲಘು ದೀಪೋತ್ಸವ ನಡೆಯಲಿದೆ. ದೇವಾಲಯದಲ್ಲಿ ಸಾವಿರ ದೀಪಗಳನ್ನು ಬೆಳಗಿ ದೇವರಿಗೆ ವಿಶೇಷ ಪೂಜೆ ಸಲ್ಲಲಿದೆ. ಹಾಗೆಯೇ ಕರ್ಫ್ಯೂ ಹಿನ್ನೆಲೆಯಲ್ಲಿ ಈ ವರ್ಷ ಭಕ್ತರಿಗೆ ಇದರ ಭಾಗ್ಯ ಲಭಿಸದೇ ಹೋಗಿದೆ. ಕೇವಲ ದೇವಸ್ಥಾನದ ಅರ್ಚಕರು ಸ್ವಾಮಿಯ ಸೇವೆ ಮಾಡಲಿದ್ದಾರೆ. ಇದನ್ನೂ ಓದಿ: ಶಬರಿಮಲೆ ಅಯ್ಯಪ್ಪನಿಗೆ ವಜ್ರದ ಕಿರೀಟ ಕಾಣಿಕೆ ಕೊಟ್ಟ ಭಕ್ತ

  • ಧರ್ಮಸ್ಥಳ ಲಕ್ಷ ದೀಪೋತ್ಸವ – ಕ್ಷೇತ್ರಾದ್ಯಂತ ಝಗಮಗಿಸ್ತಿದೆ ವಿದ್ಯುತ್ ದೀಪಗಳು

    ಧರ್ಮಸ್ಥಳ ಲಕ್ಷ ದೀಪೋತ್ಸವ – ಕ್ಷೇತ್ರಾದ್ಯಂತ ಝಗಮಗಿಸ್ತಿದೆ ವಿದ್ಯುತ್ ದೀಪಗಳು

    ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ಈಗ ಲಕ್ಷ ದೀಪೋತ್ಸವದ ಸಂಭ್ರಮ. ಶುಕ್ರವಾರದಿಂದ ಧರ್ಮಸ್ಥಳ ಕ್ಷೇತ್ರಾದ್ಯಂತ ವಿದ್ಯುತ್ ದೀಪಗಳು ಝಗಮಗಿಸುತ್ತಿದ್ದು, ವರ್ಷಂಪ್ರತಿಯಂತೆ ಕ್ಷೇತ್ರದ ಪರಿಸರ ದೀಪಗಳಿಂದ ಕಂಗೊಳಿಸಲಿದೆ.

    ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ಆಗಮಿಸಲಿದ್ದು, ಮಂಜುನಾಥನ ದರ್ಶನ ಪಡೆಯಲಿದ್ದಾರೆ. ಇದೇ ವೇಳೆ, ಸರ್ವ ಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನವೂ ಜರಗಲಿದೆ. ನ.25ರಂದು 84ನೇ ವರ್ಷದ ಸರ್ವ ಧರ್ಮ ಸಮ್ಮೇಳನ ಹಾಗೂ 26ರಂದು ಸಾಹಿತ್ಯ ಸಮ್ಮೇಳನ ಜರುಗಲಿದ್ದು ಸರ್ವ ಧರ್ಮಗಳ ಸಾಹಿತ್ಯಾಸಕ್ತರನ್ನು ಆಕರ್ಷಿಸಲಿದೆ.

    ಈ ಬಾರಿಯ ಸರ್ವ ಧರ್ಮ ಸಮ್ಮೇಳನವನ್ನು ಮಾಜಿ ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ ಉದ್ಘಾಟಿಸಲಿದ್ದಾರೆ. ಪ್ರತಿ ವರ್ಷ ಕಾರ್ತಿಕ ಮಾಸದಲ್ಲಿ ನಡೆಯುವ ಈ ಲಕ್ಷ ದೀಪೋತ್ಸವದ ವಿಶೇಷ ಎಂದರೆ, ಉತ್ಸವದ ಕೊನೆಯ ದಿನ ದೇವರ ಮೂರ್ತಿಯನ್ನು ಹೊತ್ತು ಭಕ್ತರ ದರ್ಶನಕ್ಕಾಗಿ ಮೆರವಣಿಗೆ ನಡೆಯಲಿದೆ.

    ಮಂಜುನಾಥನ ಮೂರ್ತಿಯೊಂದಿಗೆ ಕ್ಷೇತ್ರದ ಆವರಣದಲ್ಲಿ ಮೆರವಣಿಗೆ ನಡೆದು, ಐದು ಕಟ್ಟೆಗಳಲ್ಲಿ ಪೂಜೆ ನಡೆಯಲಿದೆ. ಹಿಂದಿನ ಕಾಲದಲ್ಲಿ ಲಕ್ಷ ದೀಪಗಳಿಂದಲೇ ಕ್ಷೇತ್ರವನ್ನು ಝಗಮಗಿಸುತ್ತಿದ್ದರೆ, ಈಗಿನ ಕಾಲದಲ್ಲಿ ವಿದ್ಯುತ್ ದೀಪಗಳಿಂದ ಧರ್ಮಸ್ಥಳ ಕ್ಷೇತ್ರ ಕಂಗೊಳಿಸುವಂತೆ ಮಾಡಲಾಗುತ್ತಿದೆ.