Tag: lakshmana

  • ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಜಲಧಾರೆ ಯಾವುದು? – ಶ್ರೀರಾಮ ಲಕ್ಷ್ಮಣ ತೀರ್ಥ ಹೆಸರಿಟ್ಟಿದ್ದು ಏಕೆ ಗೊತ್ತಾ?

    ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಜಲಧಾರೆ ಯಾವುದು? – ಶ್ರೀರಾಮ ಲಕ್ಷ್ಮಣ ತೀರ್ಥ ಹೆಸರಿಟ್ಟಿದ್ದು ಏಕೆ ಗೊತ್ತಾ?

    – ಕರ್ನಾಟಕದ ಕೊಡಗಿನಲ್ಲೂ ಇವೆ ಶ್ರೀರಾಮನ ಹೆಜ್ಜೆ ಗುರುತುಗಳು

    ಮಡಿಕೇರಿ: ಅಯೋಧ್ಯೆಯಲ್ಲಿ (Ayodhya) ಶ್ರೀರಾಮನ (Lord Rama) ಭವ್ಯ ಮಂದಿರ ಉದ್ಘಾಟನೆಗೆ ಕೇವಲ ಎರಡು ದಿನಗಳು ಮಾತ್ರ ಬಾಕಿ ಇದೆ. ಈ ಹೊತ್ತಿನಲ್ಲಿ ದೇಶದಾದ್ಯಂತ ರಾಮನ ವಿಶೇಷತೆ ಮತ್ತು ಆತ ಬಿಟ್ಟು ಹೋದ ಹೆಜ್ಜೆಗುರುತುಗಳನ್ನು ಪರಿಚಯಿಸುವ ಕೆಲಸಗಳು ನಡೆಯುತ್ತಿವೆ. ಈ ಹಿನ್ನೆಲೆ ಕೊಡಗು (Kodagu) ಜಿಲ್ಲೆಗೂ ಶ್ರೀರಾಮನಿಗೂ ಅವಿನಾಭಾವ ಸಂಬಂಧವಿದೆ ಎಂದು ತಿಳಿದುಬಂದಿದೆ.

    ವನವಾಸದ ಕಾಲದಲ್ಲಿ ಸೀತೆಯನ್ನು ಅರಸುತ್ತಾ ಕೊಡಗಿಗೆ ಲಕ್ಷ್ಮಣ ಸಹ ಶ್ರೀರಾಮನ ಜೊತೆಗೆ ಬಂದಿದ್ದ ಎಂಬ ಐತಿಹ್ಯ ಇದೆ. ಅಷ್ಟೇ ಅಲ್ಲದೇ ಲಕ್ಷ್ಮಣನ ಬಾಣದಿಂದ ಸೃಷ್ಟಿಯಾದ ಜಲವೇ ಇವತ್ತು ಕೊಡಗಿನಿಂದ ಹರಿದು ಬಂದು ಕಾವೇರಿಯನ್ನು ಸೇರುವ ಲಕ್ಷ್ಮಣ ತೀರ್ಥ ನದಿ ಎಂದು ಜನ ನಂಬಿದ್ದಾರೆ. ಕೊಡಗಿನ ಮಟ್ಟಿಗೆ ಪ್ರಮುಖ ದೈವ ತಾಣ ಮತ್ತು ಪ್ರವಾಸಿ ತಾಣಗಳಲ್ಲೊಂದಾದ ಇರ್ಪು ಕ್ಷೇತ್ರ ರಾಮ ಭೇಟಿ ನೀಡಿದ ತಾಣವಾಗಿದೆ. ಇದನ್ನೂ ಓದಿ: ತಲೆಗೂದಲಿಗೆ ಹಗ್ಗ ಕಟ್ಟಿಕೊಂಡೇ ರಾಮರಥ ಎಳೆದ ಸ್ವಾಮೀಜಿ; ಅಯೋಧ್ಯೆ ಕಡೆಗೆ 566 ಕಿಮೀ ಯಾತ್ರೆ

    ಇಲ್ಲಿ ರಾಮ ಶಿವಲಿಂಗವನ್ನು ಪ್ರತಿಷ್ಠಾಪಿಸಿ ಪೂಜೆ ನೆರವೇರಿಸಿದ್ದನಂತೆ. ಸೀತೆಯನ್ನು ಅರಸುತ್ತಾ ವಾನರಾದಿಯಾಗಿ ಹೊರಟ ರಾಮ-ಲಕ್ಷ್ಮಣರು ಬ್ರಹ್ಮಗಿರಿಯ ತಪ್ಪಲಿಗೆ ಬರುತ್ತಾರೆ. ಈ ಬೆಟ್ಟ ದಾಟಿದರೆ ಕೇರಳ ಸೀಮೆ ಎದುರಾಗುತ್ತದೆ. ಎಲ್ಲರೂ ಬೆಟ್ಟಗುಡ್ಡಗಳನ್ನು ದಾಟಿ ಮುನ್ನಡೆಯುತ್ತಿದ್ದಾರೆ. ಲಕ್ಷ್ಮಣ ಮಾತ್ರ ಮುಂದಕ್ಕೆ ಹೆಜ್ಜೆಯಿರಿಸದೇ ಅಲ್ಲಿಯೇ ಕುಳಿತುಕೊಂಡನಂತೆ. ಎಂದೂ ಕೂರದ ರಾಮ ಅಂದು ಕುಳಿತ ಸ್ಥಳವನ್ನು ಇರ್ಪು ಎನ್ನಲಾಗಿದೆ. ಇದನ್ನೂ ಓದಿ: ಮಂತ್ರಾಕ್ಷತೆ ಬಳಿಕ ಮನೆ ಮನೆಗೂ ಭಗವಾಧ್ವಜ – ಬೀದರ್‌ನ ಮಹಿಳೆಯರ ಅಳಿಲು ಸೇವೆ!

    ಇದಾದ ಬಳಿಕ ತನ್ನ ವರ್ತನೆಗೆ ಬೇಸರಗೊಂಡ ಆತ, ಅಣ್ಣ ಶ್ರೀರಾಮನಿಗೆ ಬೇಸರ ಮಾಡಿಬಿಟ್ಟೆ ಎಂಬ ನೋವಿನಲ್ಲಿ ಅಗ್ನಿಕುಂಡ ನಿರ್ಮಿಸಿ ಅದರಲ್ಲಿ ಆತ್ಮಾಹುತಿ ಮಾಡಲು ನಿರ್ಧರಿಸಿದನಂತೆ. ಇದನ್ನು ಕಂಡ ರಾಮ ಆತನಿಗೆ ಸಮಾಧಾನ ಹೇಳಿದ. ನಂತರ ಸಂತಸಗೊಂಡ ಲಕ್ಷ್ಮಣ ತಾನು ನಿರ್ಮಿಸಿದ ಅಗ್ನಿಕುಂಡವನ್ನು ನಂದಿಸಲು ಬಾಣಬಿಟ್ಟನಂತೆ. ಹಾಗೆ ಬಿಟ್ಟ ಬಾಣ ಜಲಧಾರೆಯನ್ನು ಸೃಷ್ಟಿಸಿ ಅಗ್ನಿಕುಂಡವನ್ನು ನಂದಿಸಿತು ಎಂಬ ಪ್ರತೀತಿಯಿದೆ. ಅಂದು ಲಕ್ಷ್ಮಣ ಸೃಷ್ಟಿಸಿದ ಜಲಧಾರೆಯೇ ಇಂದಿನ ಇರ್ಪು ಜಲಧಾರೆಯಾಗಿದ್ದು, ಇದಕ್ಕೆ ರಾಮನೇ ಲಕ್ಷ್ಮಣತೀರ್ಥವೆಂದು (Lakshmana Theerta) ಹೆಸರಿಸಿದ ಎಂಬುದು ಎಲ್ಲರ ನಂಬಿಕೆಯಾಗಿದೆ. ಇದನ್ನೂ ಓದಿ: ಹಾವೇರಿಯ ಬ್ಯಾಡಗಿ ಪಟ್ಟಣದಲ್ಲಿ ನೈತಿಕ ಪೊಲೀಸ್‌ ಗಿರಿ – 7 ಮಂದಿ ಮುಸ್ಲಿಂ ಯುವಕರು ಅರೆಸ್ಟ್‌

    ಇರ್ಪುವಿನಲ್ಲಿರುವ ರಾಮೇಶ್ವರ ದೇವಾಲಯ (Rameshwara Temple) ಕೇರಳಿಗರ ವಾಸ್ತುಶಿಲ್ಪದೊಂದಿಗೆ ವೃತ್ತಾಕಾರದ ಗರ್ಭಗುಡಿಯನ್ನು ಹೊಂದಿದೆ. ಇಂದಿಗೂ ಕರ್ನಾಟಕ, ಕೇರಳದ ಜನರು ಬಂದು ಈ ದೇವಾಲಯದಲ್ಲಿ ಪೂಜೆ ಸಲ್ಲಿಸುತ್ತಾರೆ. ಇದನ್ನೂ ಓದಿ: ಗಂಡು ಮಗುವಿಗೆ ಜನ್ಮ ಕೊಟ್ಟ 10ನೇ ತರಗತಿ ವಿದ್ಯಾರ್ಥಿನಿ!

  • Special-ಸೈನ್ಯಕ್ಕೆ ಕುಟುಂಬವನ್ನೇ ಅರ್ಪಿಸಿದ್ದರು ಅಗಲಿದ ನಟ ಲಕ್ಷ್ಮಣ

    Special-ಸೈನ್ಯಕ್ಕೆ ಕುಟುಂಬವನ್ನೇ ಅರ್ಪಿಸಿದ್ದರು ಅಗಲಿದ ನಟ ಲಕ್ಷ್ಮಣ

    ಇಂದು ಬೆಳಗ್ಗೆ ಹೃದಯಾಘಾತದಿಂದ ನಿಧನರಾದ ಹಿರಿಯ ನಟ ಲಕ್ಷ್ಮಣ ಅವರ ಕುಟುಂಬವು ಭಾರತೀಯ ಸೈನ್ಯಕ್ಕೆ ತಮ್ಮನ್ನು ತಾವು ಅರ್ಪಿಸಿಕೊಂಡಿದೆ. ಲಕ್ಷ್ಮಣ ಅವರ ತಂದೆಯು ಸೈನ್ಯದಲ್ಲಿದ್ದರು. ಅವರ ಪ್ರೇರಣೆಯಿಂದಾಗಿ ಸ್ವತಃ ಲಕ್ಷ್ಮಣ ಕೂಡ ಸೈನ್ಯವನ್ನು ಸೇರಬೇಕು ಎಂದು ಆಸೆಪಟ್ಟಿದ್ದರು. ಆಯ್ಕೆ ಕೂಡ ಆಗಿದ್ದರು. ಆದರೆ, ತಾಯಿಯು ಒಪ್ಪದ ಕಾರಣಕ್ಕಾಗಿ ಸೈನಿಕನಾಗಲು ಆಗಲಿಲ್ಲ. ತಾವು ಸೈನ್ಯ ಸೇರಲಿಲ್ಲ ಅನ್ನುವ ಕೊರಗು ಸದಾ ಅವರಲ್ಲಿತ್ತು. ಹಾಗಾಗಿ ತಮ್ಮ ಮಕ್ಕಳನ್ನೂ ಮತ್ತೆ ಸೈನ್ಯಕ್ಕೆ ಸೇರಿಸಿದರು.

    ತಂದೆಯು ಆರ್ಮಿಯಲ್ಲಿ ಕೆಲಸ ಮಾಡುತ್ತಿದ್ದರೆ, ಲಕ್ಷ್ಮಣ ಸಹೋದರ ಪೊಲೀಸ್ ಇಲಾಖೆಯಲ್ಲಿದ್ದಾರೆ. ಅಲ್ಲದೇ, ಲಕ್ಷ್ಮಣ ಪುತ್ರ ಭರತ್ ಅವರು ನೌಕಾಪಡೆಯಲ್ಲಿ ಕಮಾಂಡರ್ ಆಗಿ ದೆಹಲಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪುತ್ರಿ ಮಮತಾ ಅವರನ್ನು ಆರ್ಮಿ ಆಫೀಸರ್ ಗೆ ಮದುವೆ ಮಾಡಿಕೊಟ್ಟಿದ್ದಾರೆ. ಇವರು ಪುಣೆಯಲ್ಲಿ ವಾಸವಾಗಿದ್ದಾರೆ. ಹೀಗೆ ಕುಟುಂಬದ ಬಹುತೇಕ ಸದಸ್ಯರು ಖಾಕಿ ಹಾಕಿರುವುದು ಅವರೊಳಗಿನ ದೇಶ ಪ್ರೇಮಕ್ಕೆ ಸಾಕ್ಷಿಯಾಗಿದೆ.

    ಮುನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖಳನಟರಾಗಿ ನಟಿಸಿರುವ ಲಕ್ಷ್ಮಣ ಅವರು ಮಲ್ಲ, ಯಜಮಾನ, ಸೂರ್ಯವಂಶ, ಅಂತ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು. ರೆಬಲ್ ಸ್ಟಾರ್ ಅಂಬರೀಶ್ ಅವರ ನೆಚ್ಚಿನ ನಟ ಎನ್ನುವ ಖ್ಯಾತಿಗೂ ಪಾತ್ರರಾಗಿದ್ದರು. ಡಾ.ರಾಜ್ ಕುಮಾರ್, ಡಾ.ಅಂಬರೀಶ್, ಡಾ.ವಿಷ್ಣುವರ್ಧನ್, ರವಿಚಂದ್ರನ್, ಶಿವರಾಜ್ ಕುಮಾರ್ ಹೀಗೆ ಸಾಕಷ್ಟು ದಿಗ್ಗಜ ನಟರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು.

    ತಂದೆ ಸೈನಿಕರಾಗಿದ್ದರು. ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿದ್ದರು. ಹಾಗಾಗಿ ಸಹಜವಾಗಿಯೇ ಲಕ್ಷ್ಮಣ ಅವರ ಸೆಳೆತ ಖಾಕಿ ಮೇಲೆಯೇ ಇತ್ತು. ಆದರೆ, ತಾಯಿ ಒಪ್ಪದ ಕಾರಣದಿಂದಾಗಿ ಬಣ್ಣದ ಪ್ರಪಂಚಕ್ಕೆ ಬಂದರು. ಕೆಲವು ಕಾಲ ಫ್ಯಾಕ್ಟರಿಯಲ್ಲೂ ಕೆಲಸ ಮಾಡುತ್ತಿದ್ದರು. ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ನಟನರಾಗಿ ಸೇವೆ ಸಲ್ಲಿಸಿ, ಆನಂತರ ಸಿನಿಮಾ ರಂಗಕ್ಕೆ ಬಂದರು. ಸಿನಿಮಾದಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Breaking- 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡದ ಹೆಸರಾಂತ ನಟ ಲಕ್ಷ್ಮಣ ಇನ್ನಿಲ್ಲ

    Breaking- 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಕನ್ನಡದ ಹೆಸರಾಂತ ನಟ ಲಕ್ಷ್ಮಣ ಇನ್ನಿಲ್ಲ

    ಸ್ಯಾಂಡಲ್ ವುಡ್ ಹೆಸರಾಂತ ನಟ ಲಕ್ಷ್ಮಣ (Lakshmana) ಹೃದಯಾಘಾತದಿಂದಾಗಿ ನಿಧನರಾಗಿದ್ದಾರೆ. ಕೆಲ ವರ್ಷಗಳಿಂದ ಅವರು ಅನಾರೋಗ್ಯಕ್ಕೆ ತುತ್ತಾಗಿದ್ದರು. ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ರಸ್ತೆ ಮಧ್ಯೆದಲ್ಲೇ ಲಕ್ಷ್ಮಣ ಕೊನೆಯುಸಿರು ಎಳೆದಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಬೆಂಗಳೂರಿನ ಮೂಡಲಪಾಳ್ಯದ ನಿವಾಸದಲ್ಲಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

    ಮುನ್ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಖಳನಟರಾಗಿ ನಟಿಸಿರುವ ಇವರು ಮಲ್ಲ, ಯಜಮಾನ, ಸೂರ್ಯವಂಶ, ಅಂತ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದರು. ರೆಬಲ್ ಸ್ಟಾರ್ ಅಂಬರೀಶ್ ಅವರ ನೆಚ್ಚಿನ ನಟ ಎನ್ನುವ ಖ್ಯಾತಿಗೂ ಪಾತ್ರರಾಗಿದ್ದರು. ಡಾ.ರಾಜ್ ಕುಮಾರ್, ಡಾ.ಅಂಬರೀಶ್, ಡಾ.ವಿಷ್ಣುವರ್ಧನ್, ರವಿಚಂದ್ರನ್, ಶಿವರಾಜ್ ಕುಮಾರ್ ಹೀಗೆ ಸಾಕಷ್ಟು ದಿಗ್ಗಜ ನಟರೊಂದಿಗೆ ಕೆಲಸ ಮಾಡಿದ ಹೆಗ್ಗಳಿಕೆ ಇವರದ್ದು. ಇದನ್ನೂ ಓದಿ: ಮದುವೆ ಬಳಿಕ ಮಕ್ಕಳನ್ನು ಕರೆದುಕೊಂಡು ಬರುತ್ತೇನೆ, ಪಾಪಾರಾಜಿಗಳಿಗೆ ಸುನೀಲ್ ಶೆಟ್ಟಿ ಅಭಯ

    ತಂದೆ ಸೈನಿಕರಾಗಿದ್ದರು. ಸಹೋದರ ಕೂಡ ಪೊಲೀಸ್ ಇಲಾಖೆಯಲ್ಲಿದ್ದರು. ಹಾಗಾಗಿ ಸಹಜವಾಗಿಯೇ ಲಕ್ಷ್ಮಣ ಅವರ ಸೆಳೆತ ಖಾಕಿ ಮೇಲೆಯೇ ಇತ್ತು. ಆದರೆ, ತಾಯಿ ಒಪ್ಪದ ಕಾರಣದಿಂದಾಗಿ ಬಣ್ಣದ ಪ್ರಪಂಚಕ್ಕೆ ಬಂದರು. ಕೆಲವು ಕಾಲ ಫ್ಯಾಕ್ಟರಿಯಲ್ಲೂ ಕೆಲಸ ಮಾಡುತ್ತಿದ್ದರು. ರಂಗಭೂಮಿಯಲ್ಲಿ ಹಲವು ವರ್ಷಗಳ ಕಾಲ ನಟನರಾಗಿ ಸೇವೆ ಸಲ್ಲಿಸಿ, ಆನಂತರ ಸಿನಿಮಾ ರಂಗಕ್ಕೆ ಬಂದರು. ಸಿನಿಮಾದಲ್ಲಿ ಸಾಕಷ್ಟು ಅವಕಾಶಗಳನ್ನು ಪಡೆದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೀವದ ಹಂಗು ತೊರೆದು ಗ್ರಾಮಸ್ಥರ ರಕ್ಷಣೆ – 7 ಲಕ್ಷ ಕ್ಯೂಸೆಕ್ ನೀರಿನಲ್ಲಿ ಈಜುವ ಧೀರ ಲಕ್ಷ್ಮಣ

    ಜೀವದ ಹಂಗು ತೊರೆದು ಗ್ರಾಮಸ್ಥರ ರಕ್ಷಣೆ – 7 ಲಕ್ಷ ಕ್ಯೂಸೆಕ್ ನೀರಿನಲ್ಲಿ ಈಜುವ ಧೀರ ಲಕ್ಷ್ಮಣ

    ಯಾದಗಿರಿ: ಗದಗ್‍ನ ನೀಲರಾಯನಗಡ್ಡೆ ಬಗ್ಗೆ ಪ್ರತಿ ಪ್ರವಾಹದ ವೇಳೆಯೂ ನೀವು ಕೇಳಿಯೇ ಇರುತ್ತೀರಿ. ಕೃಷ್ಣಾ ನದಿ ಆರ್ಭಟಕ್ಕೆ ಅಲ್ಲಿನ ಸಾಗರದಂತಹ ನೀರಿಗೆ ಭೀತಿ ವ್ಯಕ್ತಪಡಿಸಿರುತ್ತೀರಿ. ಆದರೆ ಅಂತಹ ನೀರಿನಲ್ಲೂ ಈಜಿ ತನ್ನ ಗ್ರಾಮದ ಆಪ್ತರಕ್ಷನಾಗಿರುವ ಮೂಲಕ ಲಕ್ಷ್ಮಣ ಅವರು ಪಬ್ಲಿಕ್ ಹೀರೋ ಎನಿಸಿಕೊಂಡಿದ್ದಾರೆ.

    ಯಾದಗಿರಿ ಸುರಪುರ ತಾಲೂಕಿನ ನೀಲಕಂಠರಾಯನ ಗಡ್ಡಿ ಕೃಷ್ಣಾ ನದಿ ಪ್ರವಾಹಕ್ಕೆ ಸದಾ ತತ್ತರಿಸುವ ನಡುಗಡ್ಡೆ ಗ್ರಾಮ. 400 ನಿವಾಸಿಗಳಿರೋ ಗ್ರಾಮಕ್ಕೆ ನದಿಯಲ್ಲಿ ನೀರು ಇಲ್ಲದಿದ್ದರೂ ಹೋಗುವುದು ಕಷ್ಟವೇ. ಅಂಥದ್ದರಲ್ಲಿ ಬಸವಸಾಗರ ಜಲಾಶಯದಿಂದ ನೀರು ಬಿಟ್ಟರೆ ಸಾಕು ಈ ಗ್ರಾಮಕ್ಕೆ ಜಲದಿಗ್ಬಂಧನವಾಗುತ್ತದೆ. ಇಂತಹ ಸಮಯದಲ್ಲಿ ಲಕ್ಷ್ಮಣ ಅವರು ಆಪತ್ಬಾಂಧವನಂತೆ ಬರುತ್ತಾರೆ.

    ನದಿಯ ಹರಿವು ಹೆಚ್ಚಾದಾಗ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಬೋಟ್‍ನಲ್ಲಿ ಬಂದರೂ ಲಕ್ಷ್ಮಣ ಅವರೇ ಗೈಡ್. ನದಿಯಲ್ಲಿ ಸುಮಾರು 7 ಲಕ್ಷ ಕ್ಯೂಸೆಕ್ ನೀರು ಅಬ್ಬರಿಸುತ್ತಿದ್ದರೂ ಪ್ರಾಣವನ್ನು ಲೆಕ್ಕಿಸದೇ ನದಿಯಲ್ಲಿ ಈಜಿ ಗರ್ಭಿಣಿಯರು, ಚಿಕ್ಕ ಮಕ್ಕಳು, ವಯಸ್ಸಾದವರನ್ನು ದಡಕ್ಕೆ ಸೇರಿಸಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಿಸುತ್ತಾರೆ.

    ಅಕ್ಷರ ಜ್ಞಾನ ಇಲ್ಲದಿದ್ದರೂ ಹಿರಿಯರಿಂದ ಕಲಿತ ಈಜಿನಿಂದ ಗ್ರಾಮಸ್ಥರನ್ನು ಕಾಪಾಡುತ್ತಿದ್ದಾರೆ ಈ ಲಕ್ಷ್ಮಣ. ಹಲವಾರು ವರ್ಷಗಳಿಂದ ನೀಲಕಂಠರಾಯನ ಗಡ್ಡಿಯಲ್ಲಿ ಜೀವನ ನಡೆಸುತ್ತಿರುವ ಈ ಲಕ್ಷ್ಮಣ ಅವರದ್ದು ನಾಲ್ಕು ಜನ ಇರುವ ಚಿಕ್ಕ ಕುಟುಂಬ. ಆದರೆ ಗ್ರಾಮಸ್ಥರೆಲ್ಲರೂ ನನ್ನವರೇ ಅನ್ನೋವಂತೆ ಕಾಪಾಡುತ್ತಾರೆ ಎಂದು ಸಾಮಾಜಿಕ ಹೋರಾಟಗಾರ ಬಸವರಾಜ್ ಹೇಳುತ್ತಾರೆ.

    ತಾನು ಮಾಡುತ್ತಿರುವ ಈ ಕಾರ್ಯ ಎಂತಹ ಮಹತ್ವದ್ದು ಎಂಬುದು ಈ ಅಮಾಯಕ ಲಕ್ಷ್ಮಣನಿಗೆ ಗೊತ್ತೇ ಇಲ್ಲ. ನನ್ನ ಹೆಸರು ಬರೋದು ಬೇಡ. ಬದಲಿಗೆ ನಮ್ಮೂರಿನ ಕಷ್ಟ ನಿವಾರಣೆಯಾದ್ರೆ ಸಾಕು ಅನ್ನುತ್ತೆ ಈ ನಿಸ್ವಾರ್ಥ ಜೀವಿ.