Tag: Lakshmi Aruna

  • ರೆಡ್ಡಿ, ಪತ್ನಿ ಅರುಣಾಗೆ ಶಾಕ್‌ – 100ಕ್ಕೂ ಹೆಚ್ಚು ಆಸ್ತಿ ಜಪ್ತಿಗೆ ಆದೇಶ

    ರೆಡ್ಡಿ, ಪತ್ನಿ ಅರುಣಾಗೆ ಶಾಕ್‌ – 100ಕ್ಕೂ ಹೆಚ್ಚು ಆಸ್ತಿ ಜಪ್ತಿಗೆ ಆದೇಶ

    ಬೆಂಗಳೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ದನ ರೆಡ್ಡಿ (Janardhan Reddy) ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿ (Lakshmi Aruna Reddy) ಅವರ ಆಸ್ತಿ ಜಪ್ತಿ ಮಾಡುವಂತೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶ ಹೊರಡಿಸಿದೆ.

    ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 100ಕ್ಕೂ ಹೆಚ್ಚು ಆಸ್ತಿಗಳನ್ನು ಜಪ್ತಿ ಮಾಡುವಂತೆ ವಿಶೇಷ ಕೋರ್ಟ್ ಆದೇಶ ಪ್ರಕಟಿಸಿದೆ. ಜನಾರ್ದನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ತನಿಖೆ ವೇಳೆ ಸೈಟ್, ಕಟ್ಟಡ, ಖಾಲಿ ಜಮೀನು ಸೇರಿದಂತೆ ನೂರಕ್ಕೂ ಅಧಿಕ ಆಸ್ತಿಗಳನ್ನು ಸಿಬಿಐ ಪತ್ತೆ ಮಾಡಿತ್ತು.

    ಹಿಂದೆ ಏನಾಗಿತ್ತು?
    ಅಕ್ರಮ ಗಣಿಗಾರಿಕೆ (Illegal Mining) ಹಣದಿಂದ ರೆಡ್ಡಿ ಹೊಸದಾಗಿ ತೆಲಂಗಾಣ ರಾಜ್ಯಗಳಲ್ಲಿ 219 ಕಡೆ ಆಸ್ತಿಗಳನ್ನು ಖರೀದಿ ಮಾಡಿದ್ದಾರೆ. ಈ ಆಸ್ತಿಗಳನ್ನು ಜಪ್ತಿ ಮಾಡಲು ಅನುಮತಿ ನೀಡಬೇಕೆಂದು ಸರ್ಕಾರಕ್ಕೆ 2022ರ ಆಗಸ್ಟ್‌ 30 ರಂದು ಸಿಬಿಐ (CBI) ಮನವಿ ಮಾಡಿತ್ತು. ಇದನ್ನೂ ಓದಿ: ಟ್ವಿಟ್ಟರ್ ಕಂಪನಿ ಮುಚ್ಚುತ್ತೇವೆ, ಉದ್ಯೋಗಿಗಳ ಮೇಲೆ ದಾಳಿ: ಭಾರತದಿಂದ ಬೆದರಿಕೆ ಬಂದಿತ್ತು ಎಂದ ಡಾರ್ಸಿ

    ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಸಿಬಿಐ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಸಿಬಿಐ ಅರ್ಜಿಗೆ ಸರ್ಕಾರ ಯಾವುದೇ ಉತ್ತರ ನೀಡಿರಲಿಲ್ಲ.

    ಆಸ್ತಿ ಜಪ್ತಿ ಅರ್ಜಿ ವಿಚಾರ ತಿಳಿದ ರೆಡ್ಡಿ ಕರ್ನೂಲ್, ರಂಗಾರೆಡ್ಡಿ ಜಿಲ್ಲೆಗಳಲ್ಲಿ ಆಸ್ತಿ ಮಾರಾಟಕ್ಕೆ ಯತ್ನಿಸಿದ್ದರು.  ಈ ವಿಚಾರ ತಿಳಿಯುತ್ತಿದ್ದಂತೆ ಆಸ್ತಿ ಜಪ್ತಿಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು ಅಂತಾ ಸಿಬಿಐ ಹೈಕೋರ್ಟ್‌ನಲ್ಲಿ ವಾದ ಮಂಡಿಸಿತ್ತು.

    ನಿಮ್ಮ ಕಾರ್ಯವೈಖರಿ ಇದೇನಾ? ಐದು ತಿಂಗಳಾದರೂ ಯಾಕೆ ಕ್ರಮ ಕೈಗೊಂಡಿಲ್ಲ? ನಿಮ್ಮ ದೃಷ್ಟಿಯಲ್ಲಿ ನಿರ್ಧಾರ ಕೈಗೊಳ್ಳದೇ ಇರುವುದು ಒಂದು ಕ್ರಮವಿರಬಹುದು. ಈ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ಚಾಟಿ ಬೀಸಿ ನೋಟಿಸ್ ಜಾರಿ ಮಾಡಿತ್ತು. ಹೈಕೋರ್ಟ್‌ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಅಂದಿನ ಬೊಮ್ಮಾಯಿ ಸರ್ಕಾರ ಈ ವರ್ಷದ ಜನವರಿಯಲ್ಲಿ ರೆಡ್ಡಿಯ ಆಸ್ತಿ ಜಪ್ತಿಗೆ ಅನುಮತಿ ನೀಡಿತ್ತು.

  • ರವಿವರ್ಮನ ಕಲ್ಪನೆಯ ಸುಂದರಿಯರಂತೆ ಪತ್ನಿಯ ಫೋಟೋ ಶೂಟ್ ಮಾಡಿಸಿದ ಜನಾರ್ದನ ರೆಡ್ಡಿ

    ರವಿವರ್ಮನ ಕಲ್ಪನೆಯ ಸುಂದರಿಯರಂತೆ ಪತ್ನಿಯ ಫೋಟೋ ಶೂಟ್ ಮಾಡಿಸಿದ ಜನಾರ್ದನ ರೆಡ್ಡಿ

    ‘ರವಿ ವರ್ಮನ ಕುಂಚದ ಕಲೆ ಬಲೆ ಸಾಕಾರವೋ.. ಕವಿಕಲ್ಪನೆ ಕಾಣುವೆ ಚೆಲುವಿನಾ ಜಾಲವೋ..’ ಎಂದು ಸೊಸೆ ತಂದ ಸೌಭಾಗ್ಯ ಚಿತ್ರಕ್ಕಾಗಿ ಆರ್.ಎನ್.ಜಯಗೋಪಾಲ್ ಅವರು ರವಿ ವರ್ಮನ ಕುಂಚದಲ್ಲಿ ಮೂಡಿ ಬಂದ ಕಲೆಯನ್ನು ಬಣ್ಣಿಸಿದ್ದರು. ಮುಂದುವರೆದು ‘ಉಯ್ಯಾಲೆಯಾ ಆಡಿ ನಲಿವಾ ರೂಪಸೀ, ಸುರಲೋಕದಿಂದ ಇಳಿದು ಬಂದ ನಿಜ ಊರ್ವಶೀ’ ಎಂದೆಲ್ಲ ರೂಪಸಿಯನ್ನು ಹಾಡಿ ಅಟ್ಟಕ್ಕೇರಿಸಿದ್ದರು. ಆ ರೂಪಸಿಯೂ ಹಾಗೇ ಇದ್ದಳು. ಇದನ್ನೂ ಓದಿ : ಚಲಿಸುವ ಬೋಟ್ ನಲ್ಲಿ ಚೆಲುವೆ ರಾಧಿಕಾ ಕುಮಾರಸ್ವಾಮಿ

    ರವಿ ವರ್ಮನ ಕುಂಚದಲ್ಲಿ ಮೂಡಿ ಬಂದ ಅಷ್ಟೂ ರೂಪಸಿಯರು ರಸಿಕರ ಕಂಗಳಲ್ಲಿ ಇವತ್ತಿಗೂ ಶಾಶ್ವತ ಸ್ಥಾನ ಪಡೆದಿದ್ದಾರೆ. ಕವಿತೆಯಾಗಿ, ಚಿತ್ರವಾಗಿ, ಕಲ್ಪನೆಯ ರಂಗಾಗಿ ಕಾಡಿದ್ದಾರೆ. ಇಂಥದ್ದೊಂದು ಕಾಡುವಿಕೆಯನ್ನು ತಮ್ಮದೇ ಆದ ರೀತಿಯಲ್ಲಿ ಪ್ರಚುರ ಪಡಿಸಿದ್ದಾರೆ ಮಾಜಿ ಮಂತ್ರಿ ಗಾಲಿ ಜನಾರ್ದನ ರೆಡ್ಡಿ. ಇದನ್ನೂ ಓದಿ: ಗ್ರ್ಯಾಮಿ ಅವಾರ್ಡ್ ಮ್ಯೂಸಿಕ್ ಕೇಳಿದಾಗ ಬಹಳ ಖುಷಿ ಆಯ್ತು: ಸಿಎಂ ಬೊಮ್ಮಾಯಿ

    29 ಏಪ್ರಿಲ್ 1848 ವಿಶ್ವಕಂಡ ಶ್ರೇಷ್ಠ ಚಿತ್ರಕಾರ ರಾಜಾ ರವಿವರ್ಮಾ ಅವರ ಹುಟ್ಟುಹಬ್ಬ. ಅದರ ನೆನಪಿಗಾಗಿ ಜನಾರ್ದನ್ ರೆಡ್ಡಿ ಅವರು ರವಿವರ್ಮಾ ಅವರ ಗ್ರೇಟ್ ಚಿತ್ರಗಳನ್ನು ಹೋಲುವಂತೆ ತಮ್ಮ ಪತ್ನಿಯ ಫೋಟೋಶೂಟ್ ಮಾಡಿಸಿದ್ದಾರೆ. ಈ ಮೂಲಕ ರಾಜ ಮನೆತನದ ಅದ್ಭುತ ಕಲಾವಿದನನ್ನು ಸ್ಮರಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ಭೇಟಿ ಮಾಡಿ ಸಂಭ್ರಮಿಸಿದ ಗ್ರ್ಯಾಮಿ ಅವಾರ್ಡ್ ವಿಜೇತ ರಿಕಿ ಕೇಜ್

    ರವಿ ವರ್ಮಾ ರಾಜಮನೆತನದಲ್ಲಿ ಹುಟ್ಟಿದ್ದರೂ, ಅವರು ಕಲೆಗೆ ಕೊಟ್ಟ ಪ್ರೋತ್ಸಾಹ ಅಪಾರ. ಅಲ್ಲದೇ, ಅನೇಕ ಮಹರಾಜರುಗಳು ಇವರನ್ನು ತಮ್ಮ ಆಸ್ಥಾನಗಳಿಗೆ ಕರೆಯಿಸಿಕೊಂಡು ತಮ್ಮ ಪತ್ನಿಯರ ಸೌಂದರ್ಯವನ್ನು ಇವರ ಕುಂಚದ ಮೂಲ ಇಂಚಿಂಚೂ ಕಂಡವರು. ಅದರಲ್ಲೂ ಸಾಂಪ್ರದಾಯಿಕ ಉಡುಪಿನೊಂದಿಗೆ ರವಿವರ್ಮಾ ಚಿತ್ರಿಸಿದ ಸುಂದರಿಯರು ಜಗತ್ತಿನ ಸುಂದರಿಯರಾಗಿ ಮೆರೆದವರು. ಇಂತಹ ಕೆಲವು ಚಿತ್ರಗಳಲ್ಲಿ ಆಯ್ದ  ಕೆಲವು ಚಿತ್ರಗಳಿಗೆ ತಮ್ಮ ಪತ್ನಿಯ ಫೋಟೋಶೂಟ್ ಮಾಡಿಸಿದ್ದಾರೆ ಜನಾರ್ದನ ರೆಡ್ಡಿ. ಇದನ್ನೂ ಓದಿ: ಜಾನ್ವಿ ಕಪೂರ್ ಡ್ಯಾನ್ಸ್‌ಗೆ ಫ್ಯಾನ್ಸ್ ಫಿದಾ: ಶ್ರೀದೇವಿಗೆ ಹೋಲಿಸಿದ ಅಭಿಮಾನಿಗಳು

    ನಳ-ದಮಯಂತಿ, ಮತ್ಸ್ಯಗಂಧಿ, ರಾಧಾ, ದೇವಕಿ, ಸುಭದ್ರೆ, ಮೇನಕೆ, ತಾರಾಮತಿ, ಸೀತಾ, ಗಂಗೆ ಸೇರಿದಂತೆ 14ಕ್ಕೂ ಹೆಚ್ಚು ತೈಲ ಚಿತ್ರಗಳನ್ನು ರಾಜಾ ರವಿವರ್ಮಾ ಬಿಡಿಸಿದ್ದಾರೆ. ಇವುಗಳಲ್ಲಿ ಆಯ್ದ ಚಿತ್ರಗಳ ಮಾದರಿಯಲ್ಲೇ ಜನಾರ್ದನ ರೆಡ್ಡಿ ಅವರ ಪತ್ನಿ ಫೋಟೋಗೋ ಫೋಸ್ ಕೊಟ್ಟಿರುವುದು ವಿಶೇಷ.  ಇದನ್ನೂ ಓದಿ: ಮಗಳ ನಿರ್ಮಾಣದ ವೆಬ್ ಸೀರಿಸ್‌ನಲ್ಲಿ ಶಿವಣ್ಣ ಆಕ್ಟಿಂಗ್

    ಈ ಹಿಂದೆಯೂ ಹೆಣ್ಣಿನ ಅಂದದ ಜೊತೆ ಆಕೆಯ ಖುಷಿ, ನೋವು, ತಲ್ಲಣಗಳನ್ನು ಅಭಿವ್ಯಕ್ತಿಸುವ ರಾಜಾ ರವಿವರ್ಮರ  ತೈಲ ಚಿತ್ರಗಳನ್ನು ಹೋಲುವಂತೆ ದಕ್ಷಿಣ ಭಾರತದ ನಟಿಯರಾದ ಶ್ರುತಿ ಹಾಸನ್, ಐಶ್ವರ್ಯಾ ರಾಜೇಶ್, ರಮ್ಯಾ ಕೃಷ್ಣ ಮತ್ತು ಸಮಂತಾ ಫೋಟೋ ಶೂಟ್ ಮಾಡಿಸಿದ್ದರು. ಆ ಫೋಟೋಗಳು ಸಖತ್ ವೈರಲ್ ಕೂಡ ಆಗಿದ್ದವು. ಇದೀಗ ಅದೇ ಮಾದರಿಯಲ್ಲೇ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾ ಕಾಣಿಸಿಕೊಂಡಿರುವುದು ವಿಶೇಷ.

  • ಇಷ್ಟಲಿಂಗ ದೀಕ್ಷೆ ಪಡೆದ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ

    ಇಷ್ಟಲಿಂಗ ದೀಕ್ಷೆ ಪಡೆದ ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ

    ಬಳ್ಳಾರಿ: ಮಾಜಿ ಸಚಿವ ಗಣಿಧಣಿ ಜನಾರ್ದನ ರೆಡ್ಡಿ ಅವರ ಪತ್ನಿ ಲಕ್ಷ್ಮಿ ಅರುಣಾ ಕಾಶಿ ಪೀಠದ ಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯರಿಂದ ಇಷ್ಟಲಿಂಗ ದೀಕ್ಷೆ ಪಡೆದುಕೊಂಡಿದ್ದಾರೆ.

    ವಾರಣಾಸಿಯಲ್ಲಿ ಇಷ್ಟಲಿಂಗ ದೀಕ್ಷೆ ಸ್ವೀಕಾರ ಪಡೆಯುವ ವೇಳೆ ಪತಿ ಜನಾರ್ದನ ರೆಡ್ಡಿ, ಪುತ್ರ ಹಾಗೂ ಅರುಣಾ ತಂದೆ-ತಾಯಿ ಜೊತೆಗಿದ್ದರು. ಈ ಹಿಂದೆ ಜನಾರ್ದನ ರೆಡ್ಡಿ ಆಪ್ತ ಶ್ರೀರಾಮುಲು ಅವರು ಕಾಶಿ ಪೀಠದ ಜಗದ್ಗುರುಗಳ ಸಮ್ಮುಖದಲ್ಲಿ ಕಳೆದ 2014 ರ ಮಾರ್ಚ್ ತಿಂಗಳಲ್ಲಿ ಶಿವಲಿಂಗ ದೀಕ್ಷೆ ಪಡೆದಿದ್ದರು. ಈಗ ಲಕ್ಷ್ಮಿ ಅರುಣಾ ದೀಕ್ಷೆ ಪಡೆದುಕೊಂಡಿದ್ದಾರೆ.

    ದೀಕ್ಷೆ ಪಡೆದವರು ಮಾಂಸ ಮತ್ತಿತರ ಪದಾರ್ಥಗಳನ್ನು ಬಿಟ್ಟು, ನಿತ್ಯ ಶಿವಪೂಜೆ, ಗೋಪೂಜೆ ಮತ್ತು ಗಣಾರಾಧನೆ ಮಾಡಬೇಕು. ಶ್ರೀರಾಮುಲು ದೀಕ್ಷೆ ಪಡೆದ ಬಳಿಕ ನಿತ್ಯ ಎರಡು ಗಂಟೆಗಳ ಕಾಲ ಶಿವ ಪೂಜೆ ಮಾಡುತ್ತಾರೆ. ಇಷ್ಟಲಿಂಗ ಪೂಜೆಗೂ ಮುನ್ನ ಗೋಪೂಜೆ, ಶಿವಪೂಜೆ, ಗಣಾರಾಧನೆ, ಪಂಚಾಮೃತ ಅಭಿಷೇಕದ ವಿತರಣೆ ನಂತರವೇ ಉಪಹಾರ ಸೇವನೆ ಮಾಡುತ್ತಾರೆ.

    ದೆಹಲಿ, ಬೆಂಗಳೂರು, ಗದಗ, ರಾಯಚೂರು ಮತ್ತು ಕಲಬುರಗಿಗೆ ತೆರಳಿದರೆ ಅಲ್ಲಿ ಶಿವಪೂಜೆಗಾಗಿ ಒಂದು ತಂಡವನ್ನು ಸಿದ್ಧಮಾಡಿಕೊಂಡಿದ್ದರು. ಇನ್ನೂ ಶ್ರೀರಾಮುಲು ಅವರಂತೆ ಅವರ ಪತ್ನಿಯೂ ಮಾಂಸ ಆಹಾರವನ್ನು ತ್ಯಜಿಸಿದ್ದು, ಮನೆಯಲ್ಲಿ ಈ ಆಹಾರಕ್ಕೆ ನಿಷೇಧ ಮಾಡಿದ್ದಾರೆ.

    ಇಷ್ಟಲಿಂಗ ದೀಕ್ಷೆಯನ್ನು ಯಾರಾದರೂ ತೆಗೆದುಕೊಳ್ಳಬಹುದಾಗಿದೆ. ಇದಕ್ಕೆ ಯಾವುದೇ ನಿಯಮಗಳಿಲ್ಲ ಅನ್ನೊದು ಧಾರ್ಮಿಕ ಪಂಡಿತರ ಅಭಿಪ್ರಾಯವಾಗಿದೆ.