Tag: lakshmi ashwin gowda

  • ಮಂಡ್ಯದಲ್ಲಿ ಶತಾಯ ಗತಾಯ ಕಮಲ ಅರಳಿಸಲು ಬಿಜೆಪಿ ಪ್ಲಾನ್ – ಲಕ್ಷ್ಮೀ ಅಶ್ವಿನ್ ಗೌಡಗೆ ಗಾಳ

    ಮಂಡ್ಯದಲ್ಲಿ ಶತಾಯ ಗತಾಯ ಕಮಲ ಅರಳಿಸಲು ಬಿಜೆಪಿ ಪ್ಲಾನ್ – ಲಕ್ಷ್ಮೀ ಅಶ್ವಿನ್ ಗೌಡಗೆ ಗಾಳ

    ಮಂಡ್ಯ: ಅಸೆಂಬ್ಲಿ ಚುನಾವಣೆಗೆ ವರ್ಷಗಳು ಬಾಕಿ ಇರುವಂತೆ ಬಿಜೆಪಿ ಪಕ್ಷ ಬಲವರ್ಧನೆಗೆ ಮುಂದಾಗಿದೆ. ಇದೀಗ ಹಳೆ ಮೈಸೂರು ಭಾಗವನ್ನು ಟಾರ್ಗೆಟ್ ಮಾಡಿರುವ ಬಿಜೆಪಿ ನಾಯಕರು ಮಾಜಿ ಐಆರ್‌ಎಸ್ ಅಧಿಕಾರಿ ಅಶ್ವಿನ್ ಗೌಡ ಅವರಿಗೆ ಗಾಳ ಹಾಕಿದೆ.

    ಹಳೆ ಮೈಸೂರು ಭಾಗದಲ್ಲಿ ಪಕ್ಷದ ಶಕ್ತಿ ಬಗ್ಗೆ ಸ್ರೀಕೆಟ್ ರಿಪೋರ್ಟ್ ಪಡೆದಿರುವ ಗೃಹ ಸಚಿವ ಅಮಿತ್ ಶಾ, ರಾಜ್ಯ ನಾಯಕರಿಗೆ ಖಡಕ್ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ಈ ಹಿಂದೆ ಹೊರಬಿದ್ದಿತ್ತು. ಬೆಂಗಳೂರು ನಗರ ಸೇರಿ ಹಳೆ ಮೈಸೂರಿನ 89 ಕ್ಷೇತ್ರಗಳಲ್ಲಿ 10ರಲ್ಲಿ ಅಷ್ಟೇ ಬಿಜೆಪಿ ಸ್ಟ್ರಾಂಗ್ ಇದೆ. ಕ್ಷೀಣವಾಗಿರುವ 43 ಕ್ಷೇತ್ರಗಳಲ್ಲಿ ಪಕ್ಷ ಸುಧಾರಿಸಲು ಬೇರೆ ಪಕ್ಷದವರನ್ನು ಸೆಳೆಯಲು ಬಿಜೆಪಿ ತಯಾರಿ ಆರಂಭಿಸಿದೆ. ರಾಜ್ಯ ಬಿಜೆಪಿ ನಾಯಕರು ಮೈಸೂರು, ಮಂಡ್ಯ, ತುಮಕೂರು, ಕೋಲಾರ, ಚಾಮರಾಜನಗರ, ರಾಮನಗರಲ್ಲಿ ಆಪರೇಷನ್ ಕಮಲ ಆರಂಭಿಸುತ್ತಿರುವ ಬಗ್ಗೆ ಒಂದೊಂದೇ ಮಾಹಿತಿ ಹೊರಬರುತ್ತಿದೆ. ಇದನ್ನೂ ಓದಿ: ರಾಜ್ಯವನ್ನೇ ಹುಡುಕಿದರೂ ಸಿಗದ ಕ್ವೀನ್‌ಪಿನ್ ದಿವ್ಯಾ ಹಾಗರಗಿ ಅರೆಸ್ಟ್ ಆದ ಕಥೆಯೇ ರೋಚಕ

    ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್‍ನ ಭದ್ರಕೋಟೆ ಮಂಡ್ಯ ಮೇಲೆ ಕಣ್ಣಿರಿಟ್ಟಿರುವ ಬಿಜೆಪಿ ನಾಯಕರು ಜೆಡಿಎಸ್‍ನಲ್ಲಿದ್ದ ಲಕ್ಷ್ಮೀ ಅಶ್ವಿನ್ ಗೌಡ ಅವರನ್ನು ಬಿಜೆಪಿಗೆ ಸೆಳೆಯಲು ತಂತ್ರ ಆರಂಭಿಸಿದ್ದು, ಅಶ್ವಿನ್ ಗೌಡ ಜೊತೆ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದಾರೆ ಎಂದು ಮೂಲಗಳಿಂದ ವರದಿಯಾಗಿದೆ. ಕಳೆದ ಎಂಪಿ ಚುನಾವಣೆಯಲ್ಲಿ ಲಕ್ಷ್ಮೀ ಅಶ್ವಿನ್‍ಗೌಡಗೆ ಟಿಕೆಟ್ ಕೊಡುವುದಾಗಿ ಜೆಡಿಎಸ್ ನಾಯಕರು ಹೇಳಿದ್ದರು. ಹಾಗಾಗಿ ಜೆಡಿಎಸ್ ಸೇರ್ಪಡೆಗೊಂಡಿದ್ದರು. ಬಳಿಕ ಲಕ್ಷ್ಮೀ ಅಶ್ವಿನ್‍ಗೌಡ ಬದಲು ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿಗೆ ಟಿಕೆಟ್ ನೀಡಲಾಗಿತ್ತು. ಇದರಿಂದ ಅವಕಾಶ ಕಳೆದುಕೊಂಡ ಲಕ್ಷ್ಮೀ ಅಶ್ವಿನ್ ಗೌಡರನ್ನು ಈ ಬಾರಿ ಬಿಜೆಪಿ ಸೆಳೆಯಲು ಪ್ರಯತ್ನ ಆರಂಭಿಸಿದೆ. ಇದನ್ನೂ ಓದಿ: ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ: ಪ್ರೀತಂ ಸವಾಲು

    ಈಗಾಗಲೇ ಲಕ್ಷ್ಮೀ ಅಶ್ವಿನ್ ಗೌಡ ಜೊತೆ ಬಿಜೆಪಿ ನಾಯಕರು ಮಾತುಕತೆ ನಡೆಸಿದ್ದು, ಕೆಲವೇ ದಿನಗಳಲ್ಲಿ ಬಿಜೆಪಿ ಸೇರಲಿದ್ದಾರೆ ಎಂದು ಆಪ್ತ ಮೂಲಗಳಿಂದ ವರದಿಯಾಗಿದೆ. ಇವರೊಂದಿಗೆ ಮಾಜಿ ಸಚಿವ ಎಸ್.ಟಿ.ಜಯರಾಂ ಪುತ್ರ ಅಶೋಕ್ ಜಯರಾಂಗೂ ಬಿಜೆಪಿ ಗಾಳ ಹಾಕಿದ್ದು, ಬಿಜೆಪಿ ನಾಯಕರೊಂದಿಗೆ ಅಶೋಕ್ ಜಯರಾಂ ಗುರುತಿಸಿಕೊಳ್ಳುತ್ತಿದ್ದಾರೆ.

    ಕೆಲದಿನಗಳ ಹಿಂದೆ ಸುಮಲತಾ ಆಪ್ತ ಇಂಡುವಾಳು ಸಚ್ಚಿದಾನಂದ ಅವರ ಹುಟ್ಟುಹಬ್ಬಕ್ಕೆ ಬಿಜೆಪಿ ನಾಯಕರು ಭೇಟಿ ನೀಡಿ ಶುಭ ಕೋರಿದ್ದರು. ಈ ಮೂಲಕ ಸಚ್ಚಿದಾನಂದ ಬಿಜೆಪಿ ಸೇರ್ಪಡೆಗೊಳ್ಳುತ್ತಿದ್ದಾರೆ ಎಂಬುದಾಗಿ ವರದಿಯಾಗಿತ್ತು. ಈಗಾಗಲೇ ಶ್ರೀರಂಗಪಟ್ಟಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಚ್ಚಿದಾನಂದ ಅವರು ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ ಎನ್ನಲಾಗುತ್ತಿದೆ. ಜೊತೆಗೆ ಸುಮಲತಾ ಕೂಡ ಬಿಜೆಪಿ ಸೇರುತ್ತಾರೆ ಎಂಬ ವದಂತಿ ಹರಿದಾಡುತ್ತಿದೆ.

  • ಲಕ್ಷ್ಮಿ ಅಶ್ವಿನ್ ಗೌಡ ಬಿಜೆಪಿಗೆ ಸೇರ್ಪಡೆ – ದಳಕ್ಕೆ ಕಮಲ ಶಾಕ್

    ಲಕ್ಷ್ಮಿ ಅಶ್ವಿನ್ ಗೌಡ ಬಿಜೆಪಿಗೆ ಸೇರ್ಪಡೆ – ದಳಕ್ಕೆ ಕಮಲ ಶಾಕ್

    ಬೆಂಗಳೂರು: ಮಾಜಿ ಐಆರ್‍ಎಸ್ ಅಧಿಕಾರಿ, ಜೆಡಿಎಸ್ ನಲ್ಲಿ ಗುರುತಿಸಿಕೊಂಡಿದ್ದ ಲಕ್ಷ್ಮಿ ಆಶ್ವಿನ್ ಗೌಡ ಜೆಡಿಎಸ್ ತೊರೆದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ಇಂದು ನಿಗದಿಯಾಗಿದ್ದ ಕಾರ್ಯಕ್ರಮ ಮುಂದೂಡಲಾಗಿದೆ.

    ಲಕ್ಷ್ಮಿ ಅಶ್ವಿನ್ ಗೌಡ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಲಕ್ಷಿ ಅವರಿಗೆ ಬದಲಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಟಿಕಟ್ ನೀಡಲಾಗಿತ್ತು. ವಿಧಾನಸಭಾ ಚುನಾವಣೆಯಲ್ಲಿಯೂ ನಾಗಮಂಗಲದ ಕ್ಷೇತ್ರದ ಟೆಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ ಎರಡೂ ಬಾರಿ ಟಿಕೆಟ್ ಸಿಗದ ಹಿನ್ನೆಲೆ ಲಕ್ಷ್ಮಿ ಅಶ್ವಿನ್ ಗೌಡ ತೆನೆಯ ಹೊರೆ ಇಳಿಸಿ ಕಮಲ ಮುಡಿಯಲಿದ್ದಾರೆ. ಲಕ್ಷ್ಮಿ ಅಶ್ವಿನ್ ಗೌಡ ಜೊತೆಯಲ್ಲಿ ಅಕ್ಷಯ ಗೋಲ್ಡ್ ಸಂಸ್ಥೆಯ ಮಾಲೀಕರಾದ ಸತೀಶ್ ಕೂಡ ಸೇರ್ಪಡೆಯಾಗಲಿದ್ದಾರೆ.

    ಲಕ್ಷ್ಮಿ ಅಶ್ವಿನ್ ಗೌಡರ ನೇತೃತ್ವದಲ್ಲಿಯೇ ಮಂಡ್ಯ ಭಾಗದಲ್ಲಿ ಬಿಜೆಪಿ ಪಕ್ಷ ಸಂಘಟನೆಗೆ ಮುಂದಾಗಲು ಪ್ಲಾನ್ ಮಾಡಿಕೊಂಡಿದೆ. ಮುಂದಿನ ವಿಧಾನಸಭಾ ಚುನಾವಣೆಯನ್ನ ಗಮನದಲ್ಲಿಟ್ಟುಕೊಂಡು ಬಿಜೆಪಿ ಲಕ್ಷ್ಮಿ ಅಶ್ವಿನ್ ಗೌಡರನ್ನ ಬರಮಾಡಿಕೊಳ್ಳಲು ಎಲ್ಲ ಸಿದ್ಧತೆ ನಡೆಸಿದೆ.

  • ಮಂಡ್ಯದ ನಿಜವಾದ ಮನೆಮಗಳು ಯಾರು? – ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

    ಮಂಡ್ಯದ ನಿಜವಾದ ಮನೆಮಗಳು ಯಾರು? – ಸೋಷಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆ

    ಮಂಡ್ಯ: ನಟಿ ಸುಮಲತಾ ಅಂಬರೀಶ್ ಅವರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರೆ ಅನ್ನೋ ವಿಚಾರ ಕೇಳಿ ಬಂದ ಬೆನ್ನಲ್ಲೆ ವಾಟ್ಸಪ್ ನಲ್ಲಿ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಹರಿದಾಡ್ತಿದೆ.

    ಮಂಡ್ಯದ ನಿಜವಾದ ಮನೆ ಮಗಳು ಯಾರು? ಲಕ್ಷ್ಮಿ ಅಶ್ವಿನ್ ಗೌಡ ಅಥವಾ ಸುಮಲತಾ ಎಂಬ ಚರ್ಚೆ ಎದ್ದಿದೆ. ಕಾಂಗ್ರೆಸ್‍ನಿಂದ ಸುಮಲತಾರನ್ನು ಕಣಕ್ಕಿಳಿಸಲು ಪ್ರಯತ್ನಿಸುತ್ತಿರುವ ಬೆನ್ನಲ್ಲೇ ಜೆಡಿಎಸ್‍ನಿಂದ ಲಕ್ಷ್ಮಿ ಅಶ್ವಿನ್ ಗೌಡ ಹೆಸರು ಚಾಲ್ತಿಗೆ ಬಂದಿದ್ದು ಇದೀಗ ಚರ್ಚೆಗೆ ಗ್ರಾಸವಾಗಿದೆ.

    ಲಕ್ಷ್ಮಿ ಅಶ್ವಿನ್ ಗೌಡ ಅವರು ಕಳೆದ ವರ್ಷ ನವಂಬರ್‍ನಲ್ಲಿ ನಡೆದ ಲೋಕಸಭಾ ಉಪಚುನಾವಣೆಯ ಆಕಾಂಕ್ಷಿಯಾಗಿದ್ದರು. ಆದ್ರೆ ವರಿಷ್ಠರು ಎಲ್‍ಆರ್ ಶಿವರಾಮೇಗೌಡರಿಗೆ ಟಿಕೆಟ್ ನೀಡಿದ್ದರು. ಇದೀಗ ಸುಮಲತಾ ಅಂಬರೀಶ್ ಸ್ಪರ್ಧೆ ಮಾಡೋದಾದ್ರೆ ಅವರ ವಿರುದ್ಧ ಜೆಡಿಎಸ್‍ನಿಂದ ಲಕ್ಷ್ಮಿಅಶ್ವಿನ್ ಗೌಡರನ್ನ ನಿಲ್ಲಿಸುತ್ತಾರೆ. ಆ ಮೂಲಕ ಮಂಡ್ಯದ ನಿಜವಾದ ಮಗಳು ಎಂದು ಅಂಬಿ ಅಭಿಮಾನಿಗಳಿಗೆ ಸೆಡ್ಡು ಹೊಡೆಯುತ್ತಾರೆ ಎಂಬ ಚರ್ಚೆ ಸಾಮಾಜಿಕ ಜಾಲತಾಣದಲ್ಲಿ ಆರಂಭವಾಗಿದೆ. ಇದನ್ನೂ ಓದಿ: ಸುಮಲತಾ ಎಂದೂ ಕೂಡ ಮಂಡ್ಯದ ಗೌಡ್ತಿ ಅಲ್ಲ: ಕೆ.ಟಿ.ಶ್ರೀಕಂಠೇಗೌಡ

    ಪರಿಷತ್ ಸದಸ್ಯ ಶ್ರೀಕಂಠೇಗೌಡ ಅವರು ಸುಮಲತಾ ಅವರು ಮಂಡ್ಯದ ಗೌಡ್ತಿ ಅಲ್ಲ ಎಂಬ ಹೇಳಿಕೆ ನೀಡಿದ್ದರು. ಅವರ ಹೇಳಿಕೆಯಿಂದ ಈ ಮನೆ ಮಗಳ ವಾದ ವಿವಾದ ಹುಟ್ಟಿಕೊಂಡಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ಮನೆಮಗಳು ಯಾರು ಎನ್ನುವುದರ ಬಗ್ಗೆ ವ್ಯಾಪಕವಾಗಿ ಚರ್ಚೆಯಾಗುತ್ತಿದೆ. ಇದನ್ನೂ ಓದಿ: ಕಾಂಗ್ರೆಸ್ ಬಿಟ್ಟು ಬಿಜೆಪಿಯಿಂದ ಸ್ಪರ್ಧಿಸಲು ಸುಮಲತಾ ಅವರಿಗೇನು ಹುಚ್ಚು ಇದೆಯಾ: ಡಾ. ಸಿದ್ದರಾಮಯ್ಯ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಟಿಕೆಟ್ ಫೋಷಣೆ ಬೆನ್ನಲ್ಲೇ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಆಕ್ರೋಶ

    ಟಿಕೆಟ್ ಫೋಷಣೆ ಬೆನ್ನಲ್ಲೇ ಮಂಡ್ಯದಲ್ಲಿ ಜೆಡಿಎಸ್ ಕಾರ್ಯಕರ್ತರ ಆಕ್ರೋಶ

    ಮಂಡ್ಯ: ಜಿಲ್ಲೆಯಲ್ಲಿ ಲಕ್ಷ್ಮಿ ಅಶ್ವಿನ್ ಗೌಡಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ.

    ಲೋಕಸಭಾ ಉಪಚುನಾವಣೆ ಫೋಷಣೆಯಾಗುತ್ತಿದ್ದಂತೆ ಮಂಡ್ಯ ಕ್ಷೇತ್ರದಲ್ಲಿ ಲಕ್ಷ್ಮಿ ಅಶ್ವಿನ್ ಗೌಡ ಅವರಿಗೆ ಟಿಕೆಟ್ ಸಿಗುತ್ತದೆ ಎಂದು ಖಚಿತವಾಗಿ ಹೇಳಲಾಗುತ್ತಿತ್ತು. ಆದರೆ ಕೊನೆಯ ಕ್ಷಣದಲ್ಲಿ ಅಶ್ವಿನ್ ಗೌಡ ಅವರಿಗೆ ಟಿಕೆಟ್ ಕೈ ತಪ್ಪಿದ್ದು, ಎಲ್.ಆರ್. ಶಿವರಾಮೇಗೌಡ ಅವರಿಗೆ ಮಂಡ್ಯ ಕ್ಷೇತ್ರದಲ್ಲಿ ಟಿಕೆಟ್ ಸಿಕ್ಕಿದೆ. ಇದರಿಂದ ಜೆಡಿಎಸ್ ಕಾರ್ಯಕರ್ತರು ಲಕ್ಷ್ಮಿ ಅಶ್ವಿನ್ ಗೌಡಗೆ ಟಿಕೆಟ್ ಕೈ ತಪ್ಪಿದ್ದಕ್ಕೆ ಫೇಸ್‍ಬುಕ್ ನಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ.

    “ಲಕ್ಷ್ಮಿ ಅಶ್ವಿನ್ ಗೌಡರಿಗೆ ಟಿಕೆಟ್ ಕೈ ತಪ್ಪಿದ್ದು, ತುಂಬಾ ದುಃಖಕರ ವಿಷಯ. ಒಬ್ಬರು ಐಆರ್‍ಎಸ್ ಅಧಿಕಾರಿಯ ಕೈಯಲ್ಲಿ ನಮ್ಮ ಮಂಡ್ಯ ಜಿಲ್ಲೆ ಅಭಿವೃದ್ದಿಪಡಿಸುವ ಕನಸು ಎಲ್ಲಾ ಜೆಡಿಎಸ್ ಕಾರ್ಯಕರ್ತರಿಗಿತ್ತು. ದೊಡ್ಡವರು ಏನೇ ನಿರ್ಧಾರ ತೆಗೆದುಕೊಂಡರು ಅದು ನಮ್ಮ ಜಿಲ್ಲೆಯ ಒಳಿತಿಗಾಗಿ ಎಂದು ತಿಳಿದು ಅದನ್ನು ಗೌರವಿಸೋಣ. ಮುಂದಿನ ಚುನಾವಣೆಯಲ್ಲಾದರೂ ಲಕ್ಷ್ಮಿ ಅಶ್ವಿನ್ ಗೌಡರಿಗೆ ಟಿಕೆಟ್ ಕೊಡಲಿ ಅನ್ನೋದು ನಮ್ಮೆಲ್ಲರ ಇಚ್ಚೆ” ಎಂದು ಫೇಸ್‍ಬುಕ್ ನಲ್ಲಿ ಬರೆದು ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

    ಮಂಡ್ಯ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಇಂದು ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಅಭ್ಯರ್ಥಿಗಳು ನಾಮ ಪತ್ರ ಸಲ್ಲಿಸಲಿದ್ದಾರೆ. ಆದರೆ ನಾಮಪತ್ರ ಸಲ್ಲಿಸುವ ಮುನ್ನ ಅಭ್ಯರ್ಥಿಗಳು ದೇವರ ಮೊರೆಹೋಗಲಿದ್ದು, ಬಿಜೆಪಿ ಅಭ್ಯರ್ಥಿ ಡಾ. ಸಿದ್ದರಾಮಯ್ಯ ಮಧ್ಯಾಹ್ನ ಮಂಡ್ಯದ ಕಾಳಿಕಾಂಭ ದೇವಾಲಯದಲ್ಲಿ ಪೂಜೆ ಮಾಡಿಸಲಿದ್ದಾರೆ. ಅಲ್ಲಿಂದ ಬಿಜೆಪಿ ಕಚೇರಿಗೆ ಭೇಟಿ ನೀಡಿ ನಂತರ ಕಾರ್ಯಕರ್ತರ ಜೊತೆ ತೆರಳಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಡಾ. ಸಿದ್ದರಾಮಯ್ಯ ಅವರಿಗೆ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಲಿದ್ದಾರೆ.

    ಇನ್ನೂ ಜೆಡಿಎಸ್ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಬೆಳಗ್ಗೆ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಮ ಪತ್ರ ಸಲ್ಲಿಕೆ ಮಾಡಲಿದ್ದಾರೆ. ಇವರಿಗೆ ಜೆಡಿಎಸ್ ಮುಖಂಡರಾದ ಸಚಿವ ಸಿ.ಎಸ್. ಪುಟ್ಟರಾಜು ಹಾಗೂ ಕಾಂಗ್ರೆಸ್ಸಿನ ಕೆ.ಜೆ ಜಾರ್ಜ್ ಸೇರಿದಂತೆ ಹಲವರು ಸಾಥ್ ನೀಡಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಇಬ್ಬರು ಮಹಿಳಾಮಣಿಯರ ಕಾರಣಕ್ಕೆ ಚರ್ಚೆಯಾಗುತ್ತಿದೆ ಮಂಡ್ಯ ಲೋಕಸಭೆ ಉಪಚುನಾವಣೆ!

    ಇಬ್ಬರು ಮಹಿಳಾಮಣಿಯರ ಕಾರಣಕ್ಕೆ ಚರ್ಚೆಯಾಗುತ್ತಿದೆ ಮಂಡ್ಯ ಲೋಕಸಭೆ ಉಪಚುನಾವಣೆ!

    ಮಂಡ್ಯ: ಜಿಲ್ಲೆಯ ಲೋಕಸಭೆ ಉಪಚುನಾವಣೆ ದಿನಾಂಕ ಸದ್ಯದಲ್ಲೇ ಪ್ರಕಟವಾಗುವ ಸಾಧ್ಯತೆಯಿದ್ದು, ಮಂಡ್ಯ ರಾಜಕಾರಣ ಇಬ್ಬರು ಮಹಿಳೆಯರ ಕಾರಣಕ್ಕೆ ಕುತೂಹಲ ಮೂಡಿಸುತ್ತಿದೆ.

    ಒಬ್ಬರು ಮಾಜಿ ಸಂಸದೆ ರಮ್ಯಾ, ಮತ್ತೊಬ್ಬರು ರಾಜಕೀಯದಲ್ಲಿ ಸಕ್ರಿಯರಾಗಲು ತಮ್ಮ ಐಆರ್ ಎಸ್ ಹುದ್ದೆಗೆ ರಾಜೀನಾಮೆ ನೀಡಿ ಬಂದಿರುವ ಲಕ್ಷ್ಮಿ ಅಶ್ವಿನ್ ಗೌಡ. ಇಬ್ಬರು ಮಹಿಳಾಮಣಿಯರಿಗೆ ಮಂಡ್ಯ ಲೋಕಸಭಾ ಉಪಚುನಾವಣೆ ವರವಾಗುತ್ತಾ? ಇಲ್ಲವೇ ಶಾಪವಾಗುತ್ತಾ? ಈ ಬಗ್ಗೆ ಜಿಲ್ಲೆಯ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ.

    ಸಚಿವ ಪುಟ್ಟರಾಜು ಅವರ ರಾಜೀನಾಮೆಯಿಂದ ತೆರವಾಗಿರುವ ಮಂಡ್ಯ ಸಂಸದ ಸ್ಥಾನಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಉಪಚುನಾವಣೆ ನಡೆಯುವ ಸಾಧ್ಯತೆಯಿದೆ. ಈ ಉಪಚುನಾವಣೆ ಕಾಂಗ್ರೆಸ್ ಮುಖಂಡೆ, ಮಾಜಿ ಸಂಸದೆ ರಮ್ಯಾ ಹಾಗೂ ಇತ್ತೀಚೆಗಷ್ಟೇ ಜೆಡಿಎಸ್ ಪಕ್ಷಕ್ಕೆ ಸೇರಿರುವ ಲಕ್ಷ್ಮಿ ಅಶ್ವಿನ್ ಗೌಡ ಅವರ ರಾಜಕೀಯ ಅಳಿವು ಉಳಿವಿನ ಪ್ರಶ್ನೆಯಾಗಿದೆ.

    ರಮ್ಯಾ ಈ ಬಾರಿಯೂ ಮಂಡ್ಯದಿಂದಲೇ ಸ್ಪರ್ಧಿಸುವ ಆಸೆಯಿಟ್ಟುಕೊಂಡಿದ್ದಾರೆ. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮುಂಬರುವ ಲೋಕಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷ ಮೈತ್ರಿ ಮಾಡಿಕೊಂಡು ಒಟ್ಟಾಗಿ ಚುನಾವಣೆ ಎದುರಿಸಲಿವೆ ಎಂಬ ಮಾತು ಕೇಳಿ ಬರುತ್ತಿದೆ. ಮಂಡ್ಯ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ತನಗೆ ಬಿಟ್ಟು ಕೊಡಿ ಅಂತಿದೆ ಎಂಬ ಮಾತು ಕೂಡ ಕೇಳಿ ಬರುತ್ತಿದೆ. ಹಾಗೇನಾದರು ಆದರೆ ಮಂಡ್ಯದಿಂದಲೇ ಸ್ಪರ್ಧಿಸಬೇಕು ಎಂದು ಆಶಾಭಾವನೆಯಿಂದ ಕಾಯುತ್ತಿರುವ ರಮ್ಯಾಗೆ ರಾಜಕೀಯವಾಗಿ ಹಿನ್ನಡೆಯಾಗೋದಂತೂ ಗ್ಯಾರಂಟಿ. ಹೀಗಾಗಿ ರಮ್ಯಾ ತಾಯಿ ರಂಜಿತಾ ಸೇರಿದಂತೆ ರಮ್ಯಾ ಅವರ ಬೆಂಬಲಿಗರು ಮಂಡ್ಯದಲ್ಲಿ ಮೈತ್ರಿಯೇ ಬೇಡ ಅಂತಿದ್ದಾರೆ.

    ಮತ್ತೊಂದು ಕಡೆ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸುವ ಆಶಾಭಾವನೆಯಿಂದ ಜಿಲ್ಲೆಯಾದ್ಯಂತ ಓಡಾಡುತ್ತಿದ್ದಾರೆ. ಮಂಡ್ಯದಲ್ಲಿ ರಮ್ಯಾಗೆ ಟಾಂಗ್ ಕೊಡಲು ಜೆಡಿಎಸ್ ವರಿಷ್ಠರೇ ಲಕ್ಷ್ಮಿ ಅಶ್ವಿನ್ ಗೌಡ ಅವರನ್ನು ರಾಜಕೀಯಕ್ಕೆ ಕರೆತಂದ್ರು ಎಂಬ ಮಾತು ಕೂಡ ಕೇಳಿ ಬಂದಿತ್ತು. ಆದರೆ ಇದೀಗ ಲಕ್ಷ್ಮಿ ಅಶ್ವಿನ್‍ಗೌಡ ಅವರಿಗೆ ಸ್ವಪಕ್ಷದಲ್ಲೇ ವಿರೋಧಿಗಳು ಹುಟ್ಟಿಕೊಂಡಿದ್ದಾರೆ.

    ಲಕ್ಷ್ಮಿ ಅಶ್ವಿನ್‍ಗೌಡ ಅವರಿಗೆ ಟಿಕೆಟ್ ತಪ್ಪಿಸುವ ಸಲುವಾಗೇ ಮಾಜಿ ಪ್ರಧಾನಿ ದೇವೇಗೌಡರು, ಪ್ರಜ್ವಲ್ ರೇವಣ್ಣ ಅವರನ್ನು ಮಂಡ್ಯಕ್ಕೆ ಕರೆತರುವ ಪ್ರಯತ್ನ ಸದ್ದಿಲ್ಲದೆ ಸಾಗುತ್ತಿದೆ. ಮತ್ತೊಂದು ಕಡೆ ಸೋಲಿನ ಮೇಲೆ ಸೋಲು ಕಂಡು ನಿರಾಶರಾಗಿರುವ ಮಾಜಿ ಶಾಸಕ ಶಿವರಾಮೇಗೌಡ ಕೂಡ, ಜೆಡಿಎಸ್ ಪಕ್ಷದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇಷ್ಟೆಲ್ಲ ಸವಾಲುಗಳ ನಡುವೆಯೂ ಲಕ್ಷ್ಮಿ ಅಶ್ವಿನ್‍ ಗೌಡ ತಮ್ಮ ರಾಜಕೀಯ ಅಸ್ತಿತ್ವಕ್ಕಾಗಿ ಹರಸಾಹಸ ಪಡುತ್ತಿದ್ದಾರೆ.

    ಈ ಬಾರಿ ಮಂಡ್ಯ ಲೋಕಸಭೆ ಉಪಚುನಾವಣೆ ಇಬ್ಬರು ಮಹಿಳಾ ಮಣಿಯರಾದ ಮಾಜಿ ಸಂಸದೆ ರಮ್ಯಾ ಮತ್ತು ಲಕ್ಷ್ಮಿ ಅಶ್ವಿನ್ ಗೌಡ ಅವರಿಗೆ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಆದರೆ ಇವರಿಬ್ಬರಿಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪುತ್ತಾ? ಅಥವಾ ಇಬ್ಬರು ಪ್ರತಿಸ್ಪರ್ಧಿಗಳಾಗಿ ಕಣಕ್ಕಿಳಿತಾರ? ಎಂಬುದನ್ನು ಕಾದು ನೋಡಬೇಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಂಡ್ಯ ಲೋಕಸಭಾ ಉಪಚುನಾವಣೆ: ಲಕ್ಷ್ಮಿ ಅಶ್ವಿನ್ ಗೌಡ ಜೆಡಿಎಸ್‍ನಿಂದ ಸ್ಪರ್ಧೆ!

    ಮಂಡ್ಯ ಲೋಕಸಭಾ ಉಪಚುನಾವಣೆ: ಲಕ್ಷ್ಮಿ ಅಶ್ವಿನ್ ಗೌಡ ಜೆಡಿಎಸ್‍ನಿಂದ ಸ್ಪರ್ಧೆ!

    ಮಂಡ್ಯ: ಲೋಕಸಭಾ ಉಪಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಲಕ್ಷ್ಮಿ ಅಶ್ವಿನ್‍ಗೌಡ ಸ್ಪರ್ಧಿಸುತ್ತಿದ್ದು, ಅವರ ಪ್ರತಿಸ್ಪರ್ಧಿಯಾಗಿ ಕಾಂಗ್ರೆಸ್ ಪಕ್ಷದಿಂದ ರಮ್ಯಾ ಸ್ಪರ್ಧಿಸುತ್ತಾರೋ ಇಲ್ಲವೋ ಎನ್ನುವ ಬಗ್ಗೆ ಜಿಲ್ಲೆಯ ರಾಜಕೀಯದಲ್ಲಿ ವಿಶೇಷವಾಗಿ ಚರ್ಚೆಯಾಗುತ್ತಿದೆ.

    ಇತ್ತೀಚೆಗಷ್ಟೇ ತಮ್ಮ ಐಆರ್‍ಎಸ್ ಹುದ್ದೆಗೆ ರಾಜೀನಾಮೆ ನೀಡಿದ್ದ ಲಕ್ಷ್ಮಿ ಅಶ್ವಿನ್‍ಗೌಡ ಜೆಡಿಎಸ್ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದಾರೆ. ಲೋಕಸಭೆ ಉಪಚುನಾವಣೆ ಮತ್ತು ಸಾರ್ವತ್ರಿಕ ಚುನಾವಣೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ನನಗೇ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಲಕ್ಷ್ಮಿ ಅಶ್ವಿನ್‍ಗೌಡ ಈ ಬಗ್ಗೆ ಪಕ್ಷದ ವರಿಷ್ಠರ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ ಅಂತ ಹೇಳಿದ್ದಾರೆ.

    ಇನ್ನು ಕಳೆದೆರೆಡು ಬಾರಿಯಿಂದ ಮಂಡ್ಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ರಮ್ಯಾ, ಜೆಡಿಎಸ್‍ನಿಂದ ಪುಟ್ಟರಾಜು ಎದುರಾಳಿಗಳಾಗಿದ್ದರು. ಆದರೆ ಪುಟ್ಟರಾಜು ಶಾಸಕರಾಗಿ ಆಯ್ಕೆಯಾಗಿದ್ದು, ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮಂಡ್ಯ ಉಪಚುನಾವಣೆ ಮುಖಾಂತರವೇ ರಾಜಕೀಯ ಪ್ರವೇಶಿಸಿದ್ದ ರಮ್ಯಾ ಕಳೆದ ಒಂದೂವರೆ ವರ್ಷದಿಂದ ಮಂಡ್ಯ ಕಡೆ ತಲೆ ಹಾಕಿಲ್ಲ.

    ಅಷ್ಟೇ ಅಲ್ಲದೇ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಜೆಡಿಎಸ್ ಜಯಭೇರಿ ಬಾರಿಸಿದ್ದು ಕಾಂಗ್ರೆಸ್ ಪಕ್ಷ ಸಂಪೂರ್ಣವಾಗಿ ನೆಲಕಚ್ಚಿದೆ. ಇದರಿಂದ ರಮ್ಯಾ ಅವರು ಮಂಡ್ಯ ಲೋಕಸಭೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧೆ ಮಾಡಲು ಧೈರ್ಯ ಮಾಡುತ್ತಾರಾ ಎನ್ನುವ ಚರ್ಚೆ ಜಿಲ್ಲೆಯಲ್ಲಿ ಶುರುವಾಗಿದೆ.

    ಇನ್ನು ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚಿಸಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಲೋಕಸಭೆ ಚುನಾವಣೆಯಲ್ಲೂ ಒಮ್ಮತದ ಅಭ್ಯರ್ಥಿ ನಿಲ್ಲಿಸಲಿದ್ದಾರೆ ಎನ್ನುವ ಚರ್ಚೆ ಕೂಡ ನಡೆಯುತ್ತಿದೆ.

  • ರಮ್ಯಾ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ರಾ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ?

    ರಮ್ಯಾ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ರಾ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ?

    ಮಂಡ್ಯ: ಮಾಜಿ ಸಂಸದೆ ರಮ್ಯಾ ವಿರುದ್ಧ ಮುಂಬರುವ ಚುನಾವಣೆಯಲ್ಲಿ ಐಆರ್‍ಎಸ್ ಅಧಿಕಾರಿ ಲಕ್ಷ್ಮಿ ಅಶ್ವಿನ್ ಗೌಡ ಸ್ಪರ್ಧೆ ಮಾಡುತ್ತಾರೆ ಎಂಬ ಊಹಾಪೋಹಕ್ಕೆ ಪುಷ್ಟಿ ನೀಡುವಂತೆ ಲಕ್ಷ್ಮಿ ಅಶ್ವಿನ್‍ಗೌಡ ತಮ್ಮ ವೃತ್ತಿಗೆ ರಾಜೀನಾಮೆ ನೀಡಿದ್ದಾರೆ.

    ಮುಂಬರುವ ವಿಧಾಸಭೆ ಚುನಾವಣೆಯಲ್ಲಿ ರಮ್ಯಾ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಗುಸುಗುಸು ಜಿಲ್ಲೆಯಲ್ಲಿ ಶುರುವಾಗಿತ್ತು. ಹೀಗಾಗಿ ಮಂಡ್ಯ ಕ್ಷೇತ್ರದ ಶಾಸಕರಾಗಿದ್ದ ಅಂಬರೀಷ್ ಮತ್ತು ರಮ್ಯಾ ನಡುವೆ ಮುಸುಕಿನ ಗುದ್ದಾಟ ಆರಂಭವಾಗಿತ್ತು. ಇದೆಲ್ಲದರ ನಡುವೆಯೇ ಒಂದು ವೇಳೆ ರಮ್ಯಾ ಮಂಡ್ಯ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿದ್ರೆ ಅವರಿಗೆ ಪ್ರತಿಸ್ಪರ್ಧಿಯಾಗಿ ಪ್ರಬಲ ಮಹಿಳಾ ಅಭ್ಯರ್ಥಿಯನ್ನೇ ಕಣಕ್ಕಿಳಿಸಲು ಜೆಡಿಎಸ್ ವಲಯದಲ್ಲೂ ಚರ್ಚೆ ಶುರುವಾಗಿತ್ತು.

    ಐಆರ್‍ಎಸ್ ಅಧಿಕಾರಿಯಾಗಿದ್ದ ಲಕ್ಷ್ಮಿ ಅಶ್ವಿನ್ ಗೌಡ ಅವರು ರಮ್ಯಾ ಅವರಿಗೆ ಪ್ರಬಲ ಪೈಪೋಟಿ ನೀಡಬಲ್ಲ ಮಹಿಳಾ ಅಭ್ಯರ್ಥಿ ಎಂದು ಜಿಲ್ಲೆಯಲ್ಲಿ ಚರ್ಚೆ ಶುರುವಾಗಿತ್ತು. ಪರೋಕ್ಷವಾಗಿ ಜೆಡಿಎಸ್ ವರಿಷ್ಠರ ಜೊತೆ ಸಂಪರ್ಕದಲ್ಲಿದ್ದ ಲಕ್ಷ್ಮಿ ಅಶ್ವಿನ್ ಗೌಡ ಸರ್ಕಾರಿ ಕೆಲಸದಲ್ಲಿದ್ದರಿಂದ ಅವರು ಮಾಜಿ ಸಂಸದೆ ರಮ್ಯಾ ವಿರುದ್ಧ ಸ್ಪರ್ಧಿಸೋದು ಅನುಮಾನ ಎಂಬಂತಾಗಿತ್ತು. ಆದರೆ ಈ ಊಹಾಪೋಹಕ್ಕೆ ತೆರೆ ಎಂಬಂತೆ ಲಕ್ಷ್ಮಿ ಅಶ್ವಿನ್‍ಗೌಡ ಅವರು ತಮ್ಮ ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ.

    ಇಂದು ಜಿಲ್ಲೆಯ ಕೆಆರ್ ಪೇಟೆಯಲ್ಲಿ ನಡೆದ ಜೆಡಿಎಸ್‍ನ ಕುಮಾರಪರ್ವ ಕಾರ್ಯಕ್ರಮದಲ್ಲಿ ಲಕ್ಷ್ಮಿ ಅಶ್ವಿನ್‍ಗೌಡ ಅವರು ಭಾಗವಹಿಸಿದ್ದರು. ಸ್ವತಃ ಅವರೇ ಮಾತನಾಡಿ ಐಆರ್‍ಎಸ್ ಹುದ್ದೆಗೆ ರಾಜೀನಾಮೆ ನೀಡಾಗಿದೆ. ಮುಂದೆ ಇದರ ಬಗ್ಗೆ ಮಾತನಾಡುತ್ತೇನೆ ಎಂದು ತಿಳಿಸಿದರು.

     

  • ಮಂಡ್ಯ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ?

    ಮಂಡ್ಯ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ?

    ಮಂಡ್ಯ: ಜಿಲ್ಲೆಯಲ್ಲಿ ರಾಜಕಾರಣಕ್ಕೆ ಮತ್ತೊಬ್ಬ ಗೌಡ್ತಿ ಎಂಟ್ರಿ ಕೊಡಲಿದ್ದಾರೆ ಅಂತ ಹೇಳಲಾಗಿದೆ. ಮಾಜಿ ಸಂಸದೆ ರಮ್ಯಾ ಬಳಿಕ ಈಗ ಜೆಡಿಎಸ್ ಪಾಳಯದಲ್ಲಿ ಮತ್ತೊಬ್ಬ ಗೌಡ್ತಿ ಕಾಣಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

    ವಿಧಾನಸಭೆ ಚುನಾವಣೆಗೆ ಇನ್ನೂ ಒಂದು ವರ್ಷ ಇರುವಾಗಲೇ ಮಂಡ್ಯದ ನಾಗಮಂಗಲದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಜೆಡಿಎಸ್ ಬಂಡಾಯ ಶಾಸಕ ಚೆಲುರಾಯಸ್ವಾಮಿ ಕಾಂಗ್ರೆಸ್ ಕದ ತಟ್ಟಿದ್ದು, ಅವರ ಎದುರಾಳಿಗಳು, ಮಾಜಿ ಶಾಸಕರು ಆದ ಎಲ್‍ಆರ್ ಶಿವರಾಮೇಗೌಡ ಮತ್ತು ಸುರೇಶ್‍ಗೌಡ ಜೆಡಿಎಸ್ ಟಿಕೆಟ್‍ಗಾಗಿ ಪೈಪೋಟಿ ನಡೆಸಿದ್ದಾರೆ. ಇದರ ಬೆನ್ನಲ್ಲೇ ಮಹಿಳಾ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ ಅನ್ನೋ ಮಾತು ಕೇಳಿ ಬರುತ್ತಿದೆ. ಅವರೇ ಐಆರ್‍ಎಸ್ ಆಫೀಸರ್ ಲಕ್ಷ್ಮಿ ಅಶ್ವಿನ್ ಗೌಡ.

    2012ರ ಬ್ಯಾಚ್‍ನ ಐಆರ್‍ಎಸ್ ಆಫೀಸರ್ ಲಕ್ಷ್ಮಿ ಅಶ್ವಿನ್ ಗೌಡ, ಸದ್ಯ ರೈಲ್ವೆ ಇಲಾಖೆಯಲ್ಲಿ ಸಹಾಯಕ ಹಣಕಾಸು ಅಧಿಕಾರಿ. ಇವರು ನಾಗಮಂಗಲ ಕ್ಷೇತ್ರದಲ್ಲಿ ಕಳೆದ ಕೆಲ ದಿನಗಳಿಂದ ಹೆಚ್ಚಾಗಿ ಕಾಣಿಸಿಕೊಳ್ತಿದ್ದಾರೆ. ತಾಲೂಕಿನ ಸೊಸೆಯೂ ಆಗಿರೋ ಲಕ್ಷ್ಮಿ ಅಶ್ವಿನ್ ಗೌಡ, ತಮ್ಮ ಎನ್‍ಜಿಓ ಮೂಲಕ ಎಲ್ಲಾ ಹಳ್ಳಿಗಳಿಗೂ ಕುಡಿಯುವ ನೀರು ಪೂರೈಸ್ತಿದ್ದಾರೆ. ಹೀಗಾಗಿ ಇವರೇ ಜೆಡಿಎಸ್ ಅಭ್ಯರ್ಥಿ ಆಗ್ತಾರೆ ಅಂತಾ ಜನ ಮಾತಾಡಿಕೊಳ್ತಿದ್ದಾರೆ.

    ಈ ತಾಲೂಕು ಅತ್ಯಂತ ಬರಪೀಡಿತವಾಗಿದೆ. ಜೀವನಾಧಾರ ಒದಗಿಸುತ್ತಿದ್ದೇವೆ. ನನ್ನದೇ ಆದ ಸೇವೆ ಮಾಡಬೇಕು ಅಂತ ಬಂದಿದ್ದೇನೆ ಅಂತಾರೆ ಲಕ್ಷ್ಮಿ ಅಶ್ವಿನ್ ಗೌಡ.

    ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‍ನ ಮಾಜಿ ಶಾಸಕ ಸುರೇಶ್ ಗೌಡ, ಇದು ಪ್ರಜಾಪ್ರಭುತ್ವ. ಇಲ್ಲಿ ಯಾರು ಬೇಕಾದರೂ ಸ್ಪರ್ಧೆ ಮಾಡಬಹುದು ಅಂತಾರೆ. ಅಲ್ಲದೆ ಜೆಡಿಎಸ್ ಅಭ್ಯರ್ಥಿಯಾಗಲು ನಾನೂ ಪ್ರಯತ್ನ ಮಾಡ್ತಿದ್ದೀನಿ ಅಂತ ಹೇಳಿಕೊಂಡಿದ್ದಾರೆ.

    ಒಟ್ಟಾರೆ ನಾಗಮಂಗಲದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಲು ಪೈಪೋಟಿ ಹೆಚ್ಚಿದೆ. ಇವರಲ್ಲಿ ಯಾರಿಗೆ ಟಿಕೆಟ್ ಸಿಗುತ್ತೆ ಅನ್ನೋದು ಇನ್ನೂ ಕೆಲವೇ ದಿನಗಳಲ್ಲಿ ಪಕ್ಕಾ ಆಗುವ ನಿರೀಕ್ಷೆಯಿದೆ.