Tag: Lakshmi Hebalkar

  • ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

    ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಳಿಗೆ ಒಂದೊಂದು ಕೋಟಿ ಪರಿಹಾರ ಕೊಡಬೇಕು – ಲಕ್ಷ್ಮಿ ಹೆಬ್ಬಾಳ್ಕರ್‌ ಆಗ್ರಹ

    ಬೆಳಗಾವಿ: ಕಾಲ್ತುಳಿತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಳಿಗೆ ತಲಾ ಒಂದೊಂದು ಕೋಟಿ ಪರಿಹಾರ ಕೊಡಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebbalkar) ಆಗ್ರಹಿಸಿದ್ದಾರೆ.

    ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಇನ್ನೂ ಹೆಚ್ಚಿನ ಪರಿಹಾರ ಕೊಡಬೇಕು ಅಂತಾ ನಾನು ಕೂಡ ಒತ್ತಾಯ ಮಾಡ್ತೀನಿ. ಸರ್ಕಾರ ಅಷ್ಟೇ ಅಲ್ಲ ಆರ್‌ಸಿಬಿ‌ ಫ್ರಾಂಚೈಸಿ (RCB Franchise), ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ (KSCA) ಅವರೂ ಕೊಡಬೇಕು. ಬರೀ ಹತ್ತು ಲಕ್ಷ ಅಲ್ಲ ಒಂದೊಂದು ಕೋಟಿ ಪರಿಹಾರ ಕೊಡಬೇಕು ಅಂತ ಒತ್ತಾಯಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪರಾರಿಯಾಗುತ್ತಿದ್ದ ಆರ್‌ಸಿಬಿಯ ನಿಖಿಲ್‌ ಸೋಸಲೆ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌

    ಎಷ್ಟೇ ಪರಿಹಾರ ಕೊಟ್ರೂ ಸತ್ತ ಜೀವ ವಾಪಸ್ ತರಲು ಆಗಲ್ಲ. ವಿಪಕ್ಷದವರು ಜನರ ದಿಕ್ಕು ತಪ್ಪಿಸಲು ಏನು ಮಾಡಬೇಕೋ ಅದನ್ನ ಮಾಡ್ತಾರೆ. ನಮ್ಮ ಹಿರಿಯರು ಏನೇನೋ ಉತ್ತರ ಕೊಡಬೇಕು ಕೊಡ್ತಾರೆ. ಘಟನೆಯಲ್ಲಿ ಇಂಟಲಿಜೆನ್ಸ್ ತಪ್ಪಾಗಿದ್ರೇ ತನಿಖೆಯಿಂದ ಗೊತ್ತಾಗುತ್ತೆ ಅಂತ ಹೇಳಿದ್ದಾರೆ. ಇದನ್ನೂ ಓದಿ:  ತನ್ನ ಬಾಯ್‌ಫ್ರೆಂಡ್‌ನಿಂದ ಮಗಳ ಮೇಲೆಯೇ ರೇಪ್‌ ಮಾಡಿಸಿದ್ದ ಬಿಜೆಪಿ ನಾಯಕಿ ಅರೆಸ್ಟ್‌

    ಏನಿದು ಪ್ರಕರಣ?
    ರಾಯಲ್ ಚಾಲೆಂಜರ್ಸ್ ಬೆಂಗಳೂರು 18 ವರ್ಷಗಳ ಬಳಿಕ ಐಪಿಎಲ್ ಚಾಂಪಿಯನ್ ಪಟ್ಟವನ್ನೇನೋ ಅಲಂಕರಿಸಿದೆ. ಆದರೆ, ಆರ್‌ಸಿಬಿ ಫ್ಯಾನ್ಸ್ ಐತಿಹಾಸಿಕ ಕ್ಷಣದ ಸಂಭ್ರಮದಲ್ಲಿ ದುರಂತ ಸಂಭವಿಸಿದೆ. 10ಕ್ಕೂ ಹೆಚ್ಚು ಅಭಿಮಾನಿಗಳು ಸಾವನ್ನಪ್ಪಿ ಸೂತಕವಾಗಿ ಆಗಿಬಿಟ್ಟಿದೆ. ಪಂಜಾಬ್ ವಿರುದ್ಧ ಬೆಂಗಳೂರು 6 ರನ್‌ಗಳ ಭರ್ಜರಿ ಜಯ ಸಾಧಿಸ್ತಿದ್ದಂತೆಯೇ ಸಿಲಿಕಾನ್ ಸಿಟಿಯಲ್ಲಿ ನಿನ್ನೆ ರಾತ್ರಿಯೇ ದೀಪಾವಳಿಯಂಥಹ ಸಂಭ್ರಮ ಇತ್ತು. ಇವತ್ತು ಇಡೀ ದಿನ ಹೆಚ್‌ಎಎಲ್ ಏರ್‌ಪೋರ್ಟ್ ರೋಡ್, ತಾಜ್ ವೆಸ್ಟ್ ಎಂಡ್ ಹೊಟೇಲ್ ರೋಡ್, ವಿಧಾನಸೌಧ, ಚಿನ್ನಸ್ವಾಮಿ ಸ್ಟೇಡಿಯಂ ರಸ್ತೆ ಸುತ್ತ ಮುತ್ತ ರೆಡ್ ಆರ್ಮಿ ಎಲ್ಲಾ ಕಡೆ ಆರ್‌ಸಿಬಿ ತಂಡಕ್ಕೆ ತಮ್ಮ ಅಭಿಮಾನ ತೋರಿದರು.

    ಇವತ್ತು ದಿಢೀರನೆ ವಿಜಯೋತ್ಸವ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದರಿಂದ ಅಭಿಮಾನಿಗಳ ಸುನಾಮಿಯೇ ಸೃಷ್ಟಿ ಆಯ್ತು… ಉಚಿತ ಪ್ರವೇಶ ಆಗಿದ್ದರಿಂದ ಕ್ರೀಡಾಂಗಣಕ್ಕೆ ಫ್ಯಾನ್ಸ್ ಹರಿದುಬಂದಿತ್ತು. ಗೇಟ್ ನಂಬರ್ 18, 19, 20ರ ಬಳಿ ಅಭಿಮಾನಿ ಸಾಗರ ತಡೆಯಲು ಪೊಲೀಸರು ಹೈರಾಣಾಗಿ ಹೋದರು. ಒಂದು ಹಂತದಲ್ಲಿ ಲಾಠಿಯನ್ನೂ ಬೀಸಿದರು. ಕ್ಷಣ ಕ್ಷಣಕ್ಕೂ ಆರ್‌ಸಿಬಿ ಅಭಿಮಾನಿಗಳ ಸುನಾಮಿ ಹೆಚ್ಚುತ್ತಲೇ ಇತ್ತು. ಆದರೆ, ಗೇಟ್ ನಂ.12ರ ಬಳಿ ಗೇಟ್ ತೆಗೆಯುತ್ತಿದ್ದಂತೆಯೇ ಭಾರೀ ಪ್ರಮಾಣದಲ್ಲಿ ನೂಕು ನುಗ್ಗಲು ನಡೀತು. ಒಬ್ಬರ ಮೇಲೋಬ್ಬರು ಬಿದ್ದರು, ಉಸಿರಾಡೋಕೂ ಕೂಡ ಸಾಧ್ಯವಾಗಲಿಲ್ಲ. ತಕ್ಷಣವೇ ಹತ್ತಿರದ ಬೌರಿಂಗ್ ಆಸ್ಪತ್ರೆ, ವೈದೇಹಿ ಆಸ್ಪತ್ರೆ (ಮಲ್ಯ ರಸ್ತ್ರೆ), ಮಣಿಪಾಲ್‌ಗೆ ದಾಖಲಿಸಲಾಯಿತು. ಆದರೆ, ಬೌರಿಂಗ್ ಆಸ್ಪತ್ರೆಯಲ್ಲಿ 6, ವೈದೇಹಿ ಆಸ್ಪತ್ರೆಯಲ್ಲಿ 4 ಹಾಗೂ ಮಣಿಪಾಲ ಆಸ್ಪತ್ರೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ.

  • ಕುಮಾರಸ್ವಾಮಿ ಬಹಳ ಅನುಭವಸ್ಥರು: ಲಕ್ಷ್ಮಿ ಹೆಬ್ಬಾಳ್ಕರ್‌

    ಕುಮಾರಸ್ವಾಮಿ ಬಹಳ ಅನುಭವಸ್ಥರು: ಲಕ್ಷ್ಮಿ ಹೆಬ್ಬಾಳ್ಕರ್‌

    ಉಡುಪಿ: ಕುಮಾರಸ್ವಾಮಿ (HD Kumaraswamy) ಬಹಳ ಅನುಭವಸ್ಥರು, ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದವರು. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುತ್ತಿಲ್ಲ ಎಂದು ಹೇಳುತ್ತಾರೆ. ಧೈರ್ಯವಿದ್ದರೆ ಮುಂದೆ ಬಂದು ಹೇಳಲಿ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ (Lakshmi Hebalkar) ಗುಡುಗಿದ್ದಾರೆ.

    ಉಡುಪಿಯಲ್ಲಿ ಗೃಹಜ್ಯೋತಿ ಯೋಜನೆಗೆ (Gruhajyothi Scheme) ಸಾಂಕೇತಿಕವಾಗಿ ಚಾಲನೆ ನೀಡಿದ ಸಚಿವರು ಮಾಧ್ಯಮಗಳೊಂದಿಗೆ ಮಾತನಾಡಿ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪಗಳಿಗೆ ತಿರುಗೇಟು ನೀಡಿದರು. ಕುಮಾರಸ್ವಾಮಿ ಕಾಂಗ್ರೆಸ್ ಸರ್ಕಾರ (Congress Government) ನುಡಿದಂತೆ ನಡೆಯುತ್ತಿಲ್ಲ ಎಂದು ಹೇಳುತ್ತಾರೆ. ಧೈರ್ಯವಿದ್ದರೆ ಮುಂದೆ ಬಂದು ಹೇಳಲಿ. ಕುಮಾರಸ್ವಾಮಿ ಅವರ ಬಗ್ಗೆ ಬಹಳ ಗೌರವವಿದೆ. ಅವರು ಸಿಎಂ ಆಗಿದ್ದಾಗ ನಾನೂ ಶಾಸಕಿಯಾಗಿ ಕೆಲಸ ಮಾಡಿದ್ದೇನೆ. ಹೆಚ್‌ಡಿಕೆ ಹಿಟ್ ಅಂಡ್ ರನ್ ಕೇಸ್ ಮಾಡೋದಕ್ಕೆ ಹೋಗ್ಬಾರದು. ನಾವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುತ್ತೇವೆ. ಜನರಿಗೆ ಇದ್ರಿಂದ ಲಾಭ ಇಲ್ಲ, ಮುಚ್ಚಿಬಿಡಿ ಎಂದು ಮುಂದೆ ಬಂದು ಹೇಳಲಿ ಎಂದು ಸವಾಲ್ ಹಾಕಿದ್ದಾರೆ.

    ಗೃಹಲಕ್ಷ್ಮಿ ಯೋಜನೆ ಕುರಿತು ಮಾತನಾಡುತ್ತಾ, 1.28 ಕೋಟಿ ಕುಟುಂಬಗಳ ಫಲಾನುಭವಿಗಳಿದ್ದಾರೆ. ಅದರಲ್ಲಿ 1 ಕೋಟಿ ಕುಟುಂಬಗಳು ನೋಂದಣಿಯಾಗಿದೆ. ಆಗಸ್ಟ್ 18 ಅಥವಾ ಆಗಸ್ಟ್ 20ರಂದು ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ. ಡಿಬಿಟಿ ಮೂಲಕ ಮನೆ ಯಜಮಾನಿ ಖಾತೆಗೆ ಹಣ ಹಾಕುವ ಮೂಲಕ ಯೋಜನೆಗೆ ಚಾಲನೆ ನಿಡಲಾಗುತ್ತದೆ ಎಂದರು. ಇದನ್ನೂ ಓದಿ: ಹರಿಯಾಣದಲ್ಲಿಯೂ ಘರ್ಜಿಸಿದ ಬುಲ್ಡೋಜರ್- ಅಕ್ರಮವಾಗಿ ನಿರ್ಮಿಸಿದ್ದ ಎರಡು ಡಜನ್‌ ಕಟ್ಟಡಗಳ ತೆರವು

    ಉಡುಪಿ ವೀಡಿಯೋ ಚಿತ್ರೀಕರಣ ಕೇಸ್ ಕುರಿತು ಮಾತನಾಡಿ, ಕಾನೂನು ಚೌಕಟ್ಟಿನಲ್ಲಿ ಪೊಲೀಸರು ಕಾರ್ಯನಿರ್ವಹಿಸುತ್ತಿದ್ದಾರೆ. ನಿಷ್ಪಕ್ಷಪಾತವಾಗಿ ತನಿಖೆ ಆಗುವಂತೆ ಜಿಲ್ಲಾ ಉಸ್ತುವಾರಿ ಸಚಿವೆಯಾಗಿ ನೋಡಿಕೊಳ್ಳುತ್ತೇನೆ. ಒಬ್ಬ ಮಹಿಳೆಯಾಗಿ ಯಾವುದೇ ಹೆಣ್ಣು ಮಕ್ಕಳ ಮೇಲೆ ಅನ್ಯಾಯವಾದರೂ ಸಹಿಸಲು ಸಾಧ್ಯವಿಲ್ಲ. ವಿದ್ಯಾರ್ಥಿನಿಯರ ಭವಿಷ್ಯದ ಪ್ರಶ್ನೆ ಇದೆ. ಆದ್ದರಿಂದ ತನಿಖೆ ಆಗುವವರೆಗೂ ಕಾಯ್ದಿರಿ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದಿಂದ ಬಂದ ಭಯೋತ್ಪಾದಕರು ನಮ್ಮ ದೇಶದ ಸೈನಿಕರನ್ನು ಹತ್ಯೆ ಮಾಡಿದ್ದಾರೆ: ಓವೈಸಿ ಕಿಡಿ

    ಇನ್ನೂ ಪ್ರತಿಭಟನಾಕಾರರ ಮೇಲೆ ಕೇಸ್ ಹಾಕಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಪ್ರತಿಭಟನೆ ವೇಲೆ ತಪ್ಪಾಗಿ ಮಾತನಾಡಿದ್ದಕ್ಕಾಗಿ ಕೇಸ್ ಆಗಿದೆ. ಪ್ರತಿಭಟನೆ ಮಾಡುವುದು ತಪ್ಪಲ್ಲ, ಆದ್ರೆ ಪ್ರಚೋದನಕಾರಿಯಾಗಿ ಮಾತನಾಡುವುದು ತಪ್ಪು. ಈ ಬಗ್ಗೆ ಎಸ್ಪಿ ಜೊತೆಗೂ ಮಾತನಾಡಿದ್ದೇನೆ. ಎಲ್ಲಾ ಜಾತಿ ಧರ್ಮದವರು ಒಟ್ಟಿಗೆ ಇರೋಣ. ಬಿಜೆಪಿಯವರು ರಾಮ ರಾಜ್ಯದ ಪರಿಕಲ್ಪನೆ ಹೇಳುತ್ತಾರೆ. ರಾಮ ರಾಜ್ಯದಲ್ಲಿ ಎಲ್ಲರೂ ಸೌಹಾರ್ದಯುತವಾಗಿ ಇರಬೇಕು ಅನ್ನುವುದು ಕಾಂಗ್ರೆಸ್ ಸಿದ್ಧಾಂತ ಎಂದು ತಿರುಗೇಟು ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು

    KPCC ಸಭೆಗೆ ಶಾಸಕಿ ಹೆಬ್ಬಾಳ್ಕರ್, ನಿಂಬಾಳ್ಕರ್ ಗೈರು

    ಬೆಳಗಾವಿ: ವಾಯುವ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಡೆದ ಸಭೆಗೆ ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅಂಜಲಿ ನಿಂಬಾಳ್ಕರ್ ಗೈರಾಗಿದ್ದಾರೆ.

    ನಗರದ ಸಂಕಂ ಹೋಟೆಲ್‌ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯಲ್ಲಿ ಮಾಜಿ ಸಚಿವ ಎ.ಬಿ.ಪಾಟೀಲ್, ವೀರಕುಮಾರ್ ಪಾಟೀಲ್ ಹಾಜರಾಗಿದ್ದು, ಶಾಸಕರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಹಾಗೂ ಮಹಾಂತೇಶ ಕೌಜಲಗಿ ಗೈರಾಗಿದ್ದಾರೆ. ಇದನ್ನೂ ಓದಿ: ನಮ್ಮಲ್ಲಿ ಯಾವುದೇ ಬಣ ಇಲ್ಲ, ಹೈಕಮಾಂಡ್‌ ಹೇಳಿದ್ದೇ ಅಂತಿಮ: ಪರಿಷತ್‌ ಟಿಕೆಟ್‌ ಬಗ್ಗೆ ಡಿಕೆಶಿ ಮಾತು

    ಕಾಂಗ್ರೆಸ್ ಪಕ್ಷದಲ್ಲೂ ಬಣ ರಾಜಕೀಯ ಶುರುವಾಗಿರುವ ಅನುಮಾನ ಮೂಡುತ್ತಿದೆ. ಇನ್ನೂ ಕಾಂಗ್ರೆಸ್ ಪಕ್ಷದಿಂದ ಮೇ 25ಕ್ಕೆ ನಾಮಪತ್ರ ಸಲ್ಲಿಕೆಗೆ ನಿರ್ಧರಿಸಲಾಗಿದೆ. ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ, ಪದವೀಧರ ಕ್ಷೇತ್ರದ ಅಭ್ಯರ್ಥಿ ಸುನಿಲ್ ಸಂಕ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಇದನ್ನೂ ಓದಿ: ಸದ್ಗುರು ಜೊತೆ ಮಂಡಿ ನೋವಿನ ಬಗ್ಗೆ ಹೇಳಿಕೊಂಡ ಸಿಎಂ

    ಇನ್ನು ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಳ್ಳುವಂತೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಆಹ್ವಾನ ನೀಡಲಾಗುತ್ತದೆ. ಇಂದಿನ ಸಭೆಯಲ್ಲಿ ಮತದಾರರನ್ನು ಸೆಳೆಯಲು ಏನೆಲ್ಲಾ ರೂಪು ರೇಷೆಗಳನ್ನು ಸಿದ್ಧಪಡಿಸಬೇಕು ಎಂಬುದರ ಬಗ್ಗೆ ಚರ್ಚಿಸಲಾಯಿತು.

  • ಸಚಿವ ರೇವಣ್ಣ ದಾರಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

    ಸಚಿವ ರೇವಣ್ಣ ದಾರಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

    ಬೆಳಗಾವಿ: ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ದಾರಿಯಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೋಗುತ್ತಿದ್ದಾರೆ. ನಾನು ವಾಸ್ತು ಹಾಗೂ ಭವಿಷ್ಯವನ್ನು ನಂಬುತ್ತೇನೆ ಎಂದು ಹೇಳಿದ್ದಾರೆ.

    ನಾನೂ ಕೂಡಾ ವಾಸ್ತು ಫಾಲೋ ಮಾಡುತ್ತೀನಿ. ಯಾವುದೇ ಕ್ಷೇತ್ರಕ್ಕೆ ಭೇಟಿ ನೀಡುವಾಗ ಸ್ವಲ್ಪ ಸಮಯ ನೋಡುತ್ತೇನೆ. ದಿನಾಲು ರಾಶಿ ಭವಿಷ್ಯ ನೋಡುತ್ತೇನೆ. ರಾಶಿ ಭವಿಷ್ಯದ ಮೇಲೆ ಅಪಾರ ನಂಬಿಕೆ ಹೊಂದಿದ್ದೇನೆ. ಉಡುಗೆ ತೊಡುಗೆಯಲ್ಲಿ ನಾನು ವಾಸ್ತು ನೋಡುತ್ತೀನಿ. ಯಾವ ದಿನ ಯಾವ ಬಣ್ಣದ ಬಟ್ಟೆ ಧರಿಸಬೇಕು ಅಂತ ನೋಡುತ್ತೀನಿ. ಮನೆಯಲ್ಲಿ ಹಿರಿಯರಿಂದ ದೇವರ ಭಕ್ತಿ, ವಾಸ್ತು, ಸಂಪ್ರದಾಯದ ಚಾಲ್ತಿಯಲ್ಲಿದೆ. ಹೀಗಾಗಿ ನಾನೂ ಕೂಡಾ ವಾಸ್ತು ಫಾಲೋ ಮಾಡುವದರ ಜೊತೆಗೆ ರಾಹುಕಾಲ ನಂಬುತ್ತೇನೆ ಎಂದರು.

    ವಾಸ್ತು ಫಾಲೋ ಮಾಡುವುದ್ದಕ್ಕೆ ಸಚಿವ ರೇವಣ್ಣ ಅವರು ನಿಮಗೆ ಪ್ರೇರೆಣೆ ನಾ? ಎಂದು ಪ್ರಶ್ನಿಸಿದ್ದಕ್ಕೆ, ನಗುತ್ತ ನನಗೆ ರೇವಣ್ಣ ಅವರು ಪ್ರೇರಣೆ ಅಲ್ಲ. ನನಗೆ ನನ್ನ ತಂದೆ- ತಾಯಿ ಪ್ರೇರಣೆ ಎಂದು ತಿಳಿಸಿದರು.

    ಸಚಿವ ಸಂಪುಟ ವಿಸ್ತರಣೆಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿಲ್ಲ. ಅಂಜಲಿ ನಿಂಬಾಳ್ಕರ್ ಅವರಿಗೆ ಸಂಸದೀಯ ಸ್ಥಾನ ನೀಡಿದ್ದಕ್ಕೆ ಸಂತೋಷವಿದೆ. ಬೆಳಗಾವಿಗೆ ಎರಡು ಸಂಸದೀಯ ಸ್ಥಾನ ಮತ್ತು ಒಂದು ಮಂತ್ರಿ ಸ್ಥಾನ ನೀಡಿದ್ದಾರೆ. ನಾನು ಎಲ್ಲೂ ಕೂಡ ಮಂತ್ರಿ ಪದವಿ ಬೇಕು ಅಂತ ಹೇಳಿಲ್ಲ. ಹೈಕಮಾಂಡ್ ಹೇಗೆ ಹೇಳುತ್ತೆ ಅದೇ ರೀತಿ ನಡೆದುಕೊಳ್ಳುತ್ತೇನೆ. ಅದರ ಚೌಕಟ್ಟಿನಲ್ಲಿ ನಾನಿದ್ದೀನಿ. ಅವರು ಏನು ಹೇಳುತ್ತಾರೋ ಅದು ನನಗೆ ಪ್ರಸಾದ. ನಾನು ನನ್ನ ಪಕ್ಷದ ಸಿಪಾಯಿಯಾಗಿ ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದ್ರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv