Tag: Lakshmi Hebbaklar

  • ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ – ಕೃತ್ಯ ಎಸಗಿದ್ದ ಲಾರಿ ಚಾಲಕ ಅರೆಸ್ಟ್

    ಲಕ್ಷ್ಮಿ ಹೆಬ್ಬಾಳ್ಕರ್ ಕಾರು ಅಪಘಾತ ಪ್ರಕರಣ – ಕೃತ್ಯ ಎಸಗಿದ್ದ ಲಾರಿ ಚಾಲಕ ಅರೆಸ್ಟ್

    ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಕಾರು ಅಪಘಾತ ಎಸಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಕಿತ್ತೂರು ಪೊಲೀಸರು (Kittur Police) ಯಶಸ್ವಿಯಾಗಿದ್ದಾರೆ.

    ಪ್ರಕರಣದಲ್ಲಿ ಅಪಘಾತ ಎಸಗಿ ಲಾರಿ ಚಾಲಕ ಪರಾರಿಯಾಗಿದ್ದ. ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಕ್ರಾರವಾಡಿ ಗ್ರಾಮದ ಮಧುಕರ ಸೋಮವಂಶಿ ಅಪಘಾತ ಎಸಗಿ ಪರಾರಿಯಾಗಿದ್ದ ಲಾರಿ ಚಾಲಕ. ಅಪಘಾತ ಎಸಗಿದ ಲಾರಿಯನ್ನೂ ಸಹ ಕಿತ್ತೂರು ಠಾಣೆ ಪೊಲೀಸರು ಜಪ್ತಿ ಮಾಡಿದ್ದಾರೆ. ಇದನ್ನೂ ಓದಿ: ಜಾತಿಗಣತಿ ವರದಿ ಯಾರನ್ನೋ ಕೂರಿಸಿ ಬರೆಸಿದಂತೆ ಇದೆ: ಸೂರಜ್ ರೇವಣ್ಣ ಕಿಡಿ

     

    ಜ.14 ರಂದು ಬೆಳಗ್ಗಿನ ಜಾವ ಹೆಬ್ಬಾಳ್ಕರ್ ಕಾರಿಗೆ ತಾಗಿಸಿ ಲಾರಿ ಚಾಲಕ ಪರಾರಿಯಾಗಿದ್ದ. ಬೆಂಗಳೂರಿನಿಂದ ಬೆಳಗಾವಿಗೆ ಬರುವಾಗ ಕಿತ್ತೂರು ಸಮೀಪದ ಅಂಬಡಗಟ್ಟಿಯಲ್ಲಿ ಅಪಘಾತ ಸಂಭವಿಸಿತ್ತು. ಘಟನೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆನ್ನಿಗೆ ಗಂಭೀರ ಗಾಯವೂ ಸಹ ಆಗಿತ್ತು. ಈ ಕುರಿತು ಸಚಿವೆ ಹೆಬ್ಬಾಳ್ಕರ್ ಅವರ ಕಾರು ಚಾಲಕ ಶಿವಪ್ರಸಾದ್ ಕಿತ್ತೂರು ಠಾಣೆಯಲ್ಲಿ ದೂರು ದಾಖಲಿಸಿದ್ದ ದೂರಿನ ಅನ್ವಯ ಪ್ರಕರಣದ ವಿಚಾರಣೆ ಆರಂಭಿಸಿದ್ದ ಕಿತ್ತೂರು ಠಾಣೆ ಪೊಲೀಸರು ಹಿರೇಬಾಗೇವಾಡಿ ಟೋಲ್ ಬಳಿಯ ಸಿಸಿಟಿವಿ ದೃಶ್ಯಾವಳಿ ಆಧರಿಸಿ 69 ಲಾರಿ ಚಾಲಕರ ವಿಚಾರಣೆ ನಡೆಸಿದ್ದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆ – ಕೆಲವು ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

    ಮೊದಲಿಗೆ ಅಪಘಾತ ಎಸಗಿಲ್ಲ ಎಂದು ಲಾರಿ ಚಾಲಕ ಮಧುಕರ ಸೋಮವಂಶಿ ಹೇಳಿದ್ದಾನೆ. ಬಳಿಕ ಅಪಘಾತದಲ್ಲಿ ಭಾಗಿಯಾದ ವಾಹನದ ಬಣ್ಣ ಎಫ್‌ಸ್‌ಎಲ್‌ಗೆ ರವಾನೆ ಮಾಡಿದ್ದರು. ಅಲ್ಲದೇ ಘಟನೆ ವೇಳೆ ಫೋನ್ ಕಾಲ್ ಡೀಟೇಲ್ಸ್ ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಿತ್ತೂರು ಪೊಲೀಸರ ಕಾರ್ಯಕ್ಕೆ ಎಸ್ಪಿ ಭೀಮಾಶಂಕರ ಗುಳೇದ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕ್ಲೈಮ್ಯಾಕ್ಸ್ ಹಂತಕ್ಕೆ ಬಂದ ಜಾತಿ ಜಿದ್ದಾಜಿದ್ದಿ – ಸಿಎಂ ಮುಂದಿರುವ ಆಯ್ಕೆ ಏನು?

  • ಸಿದ್ದರಾಮಯ್ಯ ಎಲ್ಲಿಯವರೆಗೆ ಇರ್ತಾರೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಸಿದ್ದರಾಮಯ್ಯ ಎಲ್ಲಿಯವರೆಗೆ ಇರ್ತಾರೋ ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

    ಬೆಳಗಾವಿ: ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಹಾದಿ, ಬೀದಿಯಲ್ಲಿ ಚರ್ಚೆ ಮಾಡುವಂತಹದಲ್ಲ. ಧೀಮಂತ ಮತ್ತು ಗಟ್ಟಿ ನಾಯಕತ್ವ ಸಿದ್ದರಾಮಯ್ಯನವರಿಗೆ (CM Siddaramaiah) ಇದೆ. ಹಾಗಾಗಿ, ಅವರು ಎಲ್ಲಿಯವರೆಗೆ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೇನೆ ಎನ್ನುತ್ತಾರೋ, ಅಲ್ಲಿಯವರೆಗೆ ನಮ್ಮ ಶಾಸಕರ ಬೆಂಬಲ ಇರುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalakr) ಹೇಳಿದರು.

    ರಾಜ್ಯದ ಮೊದಲ ಮಹಿಳಾ ಮುಖ್ಯಮಂತ್ರಿ ತಾವಾಗಬೇಕೆಂದು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಗಿರುವ ಕುರಿತು ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಅವರು, ಸದ್ಯಕ್ಕೆ ಆ ಚರ್ಚೆ ಎಲ್ಲಾ ನಗಣ್ಯ. ಮುಡಾ ಹಗರಣದಲ್ಲಿ (MUDA Scam) ಬಿಜೆಪಿಯವರು ಸುಳ್ಳು ದಾಖಲೆ ಹುಟ್ಟಿಸಿ ಏನೋ ಮಾಡುತ್ತಿದ್ದಾರೆ. ಇಂಥ ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ, 135 ಶಾಸಕರು ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ಗಟ್ಟಿಯಾಗಿ ನಿಂತ ಸಂದರ್ಭದಲ್ಲಿ, ಇದೆಲ್ಲಾ ಬಾಲಿಷ. ಈ ವಿಚಾರದಲ್ಲಿ ನಾನು ಹೆಚ್ಚಿಗೆ ಏನೂ ಮಾತನಾಡುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಇದನ್ನೂ ಓದಿ: ಗೋಕರ್ಣ ಬೀಚ್‌ನಲ್ಲಿ ಮುಳುಗಿ ಬೆಂಗ್ಳೂರಿನ ಯುವಕ ದುರ್ಮರಣ – ಐವರು ಅಸ್ವಸ್ಥ

    ನಾವೂ ಸಿಎಂ ಸ್ಥಾನದ ಆಕಾಂಕ್ಷಿ ಎಂಬ ‘ಕೈ’ ನಾಯಕರ ಹೇಳಿಕೆ ಬಗ್ಗೆ ಮಾತನಾಡಿ, ನಾನು ಓರ್ವ ಜವಾಬ್ದಾರಿಯುತ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೇಳುತ್ತಿದ್ದೇನೆ. ನಮ್ಮದು ಶಿಸ್ತಿನ ಪಕ್ಷ. ಪಕ್ಷದ ಹೈಕಮಾಂಡ್ ಮತ್ತು ಶಾಸಕರು ಇದನ್ನು ನಿರ್ಣಯಿಸುತ್ತಾರೆ. ಅಲ್ಲಿ, ಇಲ್ಲಿ, ಗಲ್ಲಿಯಲ್ಲಿ ಮಾತನಾಡುವ ವಿಷಯಗಳು ಇವಲ್ಲ ಎಂದು ಪರೋಕ್ಷವಾಗಿ ತಮ್ಮದೇ ನಾಯಕರಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಟಾಂಗ್ ಕೊಟ್ಟರು. ಇದನ್ನೂ ಓದಿ: ಪ್ರಕೃತಿಯಿಂದ ಲಾಭ ಪಡೆಯುತ್ತಿರುವ ಎಲ್ಲರಿಗೂ ಪ್ರಕೃತಿ ರಕ್ಷಣೆಯ ಹೊಣೆ ಇದೆ: ಸಿದ್ದರಾಮಯ್ಯ

    ಧೀಮಂತ ಮತ್ತು ಗಟ್ಟಿ ನಾಯಕತ್ವ ನಮಗಿದೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ಬಹಳ ಒಳ್ಳೆಯ ಕೆಲಸ ಮಾಡುತ್ತಿದೆ. ನಾವೆಲ್ಲಾ ಅವರ ಜೊತೆಗಿದ್ದೇವೆ. ಬೇರೆ ಏನೇ ಇದ್ದರೂ ಅದನ್ನು ಹೈಕಮಾಂಡ್ ವಿಚಾರ ಮಾಡುತ್ತದೆ. ಎಲ್ಲಿಯವರೆಗೆ ಹೈಕಮಾಂಡ್ ಸಿದ್ದರಾಮಯ್ಯ ಅವರೇ ರಾಜ್ಯದ ಮುಖ್ಯಮಂತ್ರಿಯಾಗಿ ಇರಬೇಕು ಎಂದು ಬಯಸುತ್ತದೆಯೋ, ಅಲ್ಲಿಯವರೆಗೆ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತಾರೆ ಎಂದು ಸಿದ್ದರಾಮಯ್ಯ ಪರ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿದರು. ಇದನ್ನೂ ಓದಿ: ಯಾವುದೇ ಬೆಂಬಲವನ್ನು ನೀಡಿಲ್ಲ- ಪಿ.ಟಿ.ಉಷಾ ವಿರುದ್ಧ ಫೋಟೋ ಕ್ಲಿಕ್ಕಿಸಿದ ಬಗ್ಗೆ ಫೋಗಟ್ ಕಿಡಿ

  • ಬೆಂಗ್ಳೂರಲ್ಲಿ ರಮೇಶ್ ಜಾರಕಿಹೊಳಿಯನ್ನು ಏಕಾಂಗಿಯಾಗಿ ಭೇಟಿಯಾದ್ರು ಡಿಕೆ ಸುರೇಶ್!

    ಬೆಂಗ್ಳೂರಲ್ಲಿ ರಮೇಶ್ ಜಾರಕಿಹೊಳಿಯನ್ನು ಏಕಾಂಗಿಯಾಗಿ ಭೇಟಿಯಾದ್ರು ಡಿಕೆ ಸುರೇಶ್!

    ಬೆಂಗಳೂರು: ದಿನದಿಂದ ದಿನಕ್ಕೆ ಪೌರಾಡಳಿತ ಮತ್ತು ಒಂದು ಒಳನಾಡು ಸಾರಿಗೆ ಸಚಿವ ರಮೇಶ್ ಜಾರಕಿಹೊಳಿ ಮತ್ತು ಸಚಿವ ಡಿ.ಕೆ. ಶಿವಕುಮಾರ್ ಅವರ ನಡುವಿನ ವಾದ-ವಿವಾದ ನಡೆಯುತ್ತಿದ್ದು, ಈಗ ಅಣ್ಣನ ಪರವಾಗಿ ಸಂಸದ ಡಿ.ಕೆ ಸುರೇಶ್ ಅವರು ಸಂಧಾನ ಮಾಡಿದ್ದಾರೆ ಎಂದು ತಿಳಿದುಬಂದಿದೆ.

    ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಹೋಗುವ ಮುನ್ನ ಸಂಧಾನ ಮಾಡುವ ಸಲುವಾಗಿ ಬೆಂಗಳೂರಿನಲ್ಲೇ ಜಾರಕಿಹೊಳಿಯನ್ನು ಡಿ.ಕೆ. ಸುರೇಶ್ ಏಕಾಂಗಿಯಾಗಿ ಭೇಟಿಯಾಗಿದ್ದಾರೆ. ಭೇಟಿಯ ವೇಳೆ ಬೆಳಗಾವಿ ರಾಜಕೀಯದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

    ನಿಮ್ಮ ಜಿಲ್ಲೆಯ ವಿವಾದದಲ್ಲಿ ಡಿ.ಕೆ.ಶಿವಕುಮಾರ್ ಹಸ್ತಕ್ಷೇಪ ಮಾಡಿಲ್ಲ. ನೀವು ಅವರನ್ನು ತಪ್ಪಾಗಿ ತಿಳಿದುಕೊಂಡಿದ್ದೀರಿ. ಡಿ.ಕೆ. ಶಿವಕುಮಾರ್ ಯಾರ ವಕಾಲತ್ತೂ ವಹಿಸಿಲ್ಲ. ಬೆಳಗಾವಿ ರಾಜಕೀಯ ನಿಮ್ಮ ಆಂತರಿಕ ವಿಚಾರವಾಗಿದೆ. ನೀವು ರಾಜೀನಾಮೆ ನೀಡುತ್ತೀರಿ ಅಂತ ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ವಿವಾದದಿಂದ ಸರ್ಕಾರ ಕೂಡ ಬಿದ್ದು ಹೋಗುತ್ತೆ ಅಂತಿದ್ದಾರೆ. ತಾವು ಯಾವುದೇ ದುಡುಕಿನ ನಿರ್ಧಾರ ಕೈಗೊಳ್ಳುವುದು ಬೇಡ. ಸರ್ಕಾರ ಅಸ್ಥಿರಗೊಳಿಸಿದ ಅಪಖ್ಯಾತಿ ನಮಗೂ ಬೇಡ, ನಿಮಗೂ ಬೇಡ ಎಂದು ಸಂಧಾನದಲ್ಲಿ ಮಾತುಕತೆ ವೇಳೆ ಸಂಸದ ಡಿ.ಕೆ. ಸುರೇಶ್ ಜಾರಕಿಹೊಳಿಯವರಿಗೆ ಮನದಟ್ಟು ಮಾಡಿದ್ದಾರೆ ಎಂದು ಪಕ್ಷದ ಮೂಲಗಳಿಂದ ಮಾಹಿತಿ ತಿಳಿದುಬಂದಿದೆ.

    ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಜಾರಕಿಹೊಳಿ ಸಹೋದರರ ನಡುವಿನ ಹಗ್ಗ ಜಗ್ಗಾಟದಲ್ಲಿ ಡಿ.ಕೆ.ಶಿವಕುಮಾರ್ ಪಾತ್ರವಿದೆ ಎಂಬ ಆರೋಪದಿಂದ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಪಾರು ಮಾಡಲು ಡಿ.ಕೆ.ಸುರೇಶ್ ಎಂಟ್ರಿ ಕೊಟ್ಟಿದ್ದಾರೆ. ಈ ಮೂಲಕ ಬೆಳಗಾವಿ ವಿವಾದದಲ್ಲಿ ಸಹೋದರ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ತಡೆಯುವ ಪ್ರಯತ್ನವನ್ನು ಸಂಸದ ಡಿ.ಕೆ.ಸುರೇಶ್ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=iXC65Yt-Jp8