Tag: Lakshmi Narasimha Swamy Temple

  • 5 ಕಿ.ಮೀ ದೂರದ ಬೆಟ್ಟದಿಂದ ಅಪರಿಚಿತ ವ್ಯಕ್ತಿಯ ಮೃತ ದೇಹ ಹೊತ್ತು ತಂದ ಸೈನಿಕರು, ಪಿಎಸ್ಐ

    5 ಕಿ.ಮೀ ದೂರದ ಬೆಟ್ಟದಿಂದ ಅಪರಿಚಿತ ವ್ಯಕ್ತಿಯ ಮೃತ ದೇಹ ಹೊತ್ತು ತಂದ ಸೈನಿಕರು, ಪಿಎಸ್ಐ

    ಚಿಕ್ಕಬಳ್ಳಾಪುರ: ಆವಲಗುರ್ಕಿ ಬಳಿಯ ಈಶಾ ಆದಿಯೋಗಿ ಸನ್ನಿಧಾನದ ಬಳಿಯ ಶ್ರೀ ಜಾಲಾರಿ ಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯದ (Jalari Lakshmi Narasimha Swamy Temple) ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

    ಸುಮಾರು 50 ವರ್ಷದ ಪ್ರಾಯದ ಅಪರಿಚಿತ ವ್ಯಕ್ತಿಯಾಗಿದ್ದು ಗುರುತು ಪತ್ತೆಯಾಗಿಲ್ಲ. ಹತ್ತಾರು ಕಿಲೋಮೀಟರ್ ಬೆಟ್ಟದ ಸಾಲಿದ್ದು ಸರಿಸುಮಾರು 5-6 ಕಿಲೋಮೀಟರ್ ದೂರದಲ್ಲಿ ಕುರಚಲು ಕಾಡಿನ ಮಧ್ಯೆ ವ್ಯಕ್ತಿಯ ಮೃತದೇಹ ಸಿಕ್ಕಿದೆ.

    ಬೆಟ್ಟದ ಬಳಿ ಸೈನಿಕರು ಕ್ಯಾಂಪ್ ಹಾಕಿ ಕೂಂಬಿಂಗ್ ನಡೆಸುತ್ತಿದ್ದಾಗ ಬೆಟ್ಟದಲ್ಲಿ ಸೈನಿಕರ ಕಣ್ಣಿಗೆ ಶವ ಕಾಣಿಸಿದೆ. ಈ ವಿಷಯವನ್ನು ಚಿಕ್ಕಬಳ್ಳಾಪುರ ಎಸ್‌ಪಿಯವರ (Chikkaballapura SP) ಗಮನಕ್ಕೆ ತಂದಿದ್ದು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರು ಮೃತದೇಹ ಹೊತ್ತು ಕೆಳಗೆ ತರಲು ಸಾಕಷ್ಟು ಹರಸಾಹಸ ಪಟ್ಟಿದ್ದಾರೆ.

    ಚಿಕ್ಕಬಳ್ಳಾಪುರ ಗ್ರಾಮಾಂತರ ಪಿಎಸ್‌ಐ ಪ್ರದೀಪ್ ಪೂಜಾರಿ ಹಾಗೂ ಅವರ ಸಿಬ್ಬಂದಿ ಸೇರಿದಂತೆ-ಸೈನಿಕರು ಚಟ್ಟದ ಮಾದರಿ ತಯಾರು ಮಾಡಿ 5-6 ಕಿಲೋಮೀಟರ್ ದುರ್ಗಮ ಹಾದಿಯಲ್ಲಿ ಸಾಕಷ್ಟು ಹರಸಾಹಸ ಪಟ್ಟು ಮೃತದೇಹವನ್ನು ಕೆಳಗೆ ಹೊತ್ತು ತಂದಿದ್ದಾರೆ. ಈ ಸಂಬಂಧ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇವದುರ್ಗದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಮುಳುಗಡೆ ಭೀತಿ

    ದೇವದುರ್ಗದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಮುಳುಗಡೆ ಭೀತಿ

    ರಾಯಚೂರು: ಕಳೆದ ವರ್ಷದ ಪ್ರವಾಹಕ್ಕೆ ಮುಳುಗಡೆಯಾಗಿದ್ದ ರಾಯಚೂರಿನ ದೇವದುರ್ಗದ ಐತಿಹಾಸಿಕ ಕೊಪ್ಪರ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಈ ಬಾರಿಯೂ ಮುಳುಗಡೆ ಭೀತಿ ಎದುರಿಸುತ್ತಿದೆ.

    ಈಗಾಗಲೇ ದೇವಾಲಯದ ಆಧಾರ ಸ್ಥಂಬಗಳು ಜಲಾವೃತವಾಗಿವೆ. ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿರುವುದರಿಂದ ಭಕ್ತರ ಸಂಖ್ಯೆಯೂ ಕಡಿಮೆಯಾಗಿದೆ. ಕಳೆದ ವರ್ಷ ದೇವಾಲಯ ಪಕ್ಕದಲ್ಲಿರುವ ಅರ್ಚಕರು ಹಾಗೂ ಗ್ರಾಮದ ಹಲವಾರು ಕುಟುಂಬಗಳು ಪ್ರವಾಹದ ಹೊಡೆತಕ್ಕೆ ನಲುಗಿದ್ದವು. ಈ ಬಾರಿ ನಾರಾಯಣಪುರ ಜಲಾಶಯದಿಂದ ಇನ್ನೂ ಹೆಚ್ಚಿನ ಪ್ರಮಾಣದ ನೀರು ಹರಿಸಿದಲ್ಲಿ ಮತ್ತೆ ದೇವಾಲಯ ಮುಳುಗಡೆಯಾಗಲಿದೆ.

    ನಾರಾಯಣಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು, ಜಲಾಶಯದಿಂದ ಕೃಷ್ಣ ನದಿಗೆ 1.80 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ರಾಯಚೂರಿನ ಲಿಂಗಸೂಗೂರು ತಾಲೂಕಿನ ಕಡದರಗಡ್ಡಿ ನಡುಗಡ್ಡೆ ಗ್ರಾಮಸ್ಥರಿಗೆ ಈ ಬಾರಿಯೂ ಗೋಳು ತಪ್ಪಿಲ್ಲ. ಈ ಪರಿಪ್ರಮಾಣದಲ್ಲಿ ನೀರು ಧಾವಿಸಿದರೂ ನಡುಗಡ್ಡೆ ಜನ ಪ್ರಾಣಪಣಕ್ಕಿಟ್ಟು ತೆಪ್ಪದಲ್ಲಿ ಓಡಾಡುತ್ತಿದ್ದಾರೆ. ಗೋನವಾಟ್ಲ ಗ್ರಾಮದಿಂದ ಕಡದರಗಡ್ಡಿಗೆ ತೆಪ್ಪದಲ್ಲಿಯೇ ಓಡಾಡುತ್ತಿದ್ದಾರೆ.

    ಶೀಲಹಳ್ಳಿ ಸೇತುವೆ ಮುಳುಗಡೆಯಿಂದ ಕಡದರಗಡ್ಡಿ ಗ್ರಾಮಕ್ಕೆ ಸಂಪರ್ಕ ಕಡಿತವಾಗಿದ್ದು, ಕಡದರಗಡ್ಡಿಯಿಂದ ಲಿಂಗಸೂಗೂರಿಗೆ ಸುತ್ತಿಕೊಂಡು ಹೋಗಬೇಕು. ಹೀಗಾಗಿ ನದಿಯಲ್ಲಿ ಹರಸಾಹಸ ಮಾಡಿ, ಜೀವದ ಹಂಗು ತೊರೆದು ತುಂಬು ನದಿಯಲ್ಲಿ ತೆಪ್ಪದಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಚಿಕ್ಕ ಮಕ್ಕಳು, ಮಹಿಳೆಯರನ್ನು ಸಹ ಗ್ರಾಮಸ್ಥರು ತೆಪ್ಪದಲ್ಲಿ ಕರೆದುಕೊಂಡು ಹೋಗುತ್ತಿದ್ದಾರೆ.