Tag: Lakshmidevi

  • ಅಭಿನಯ ಅತ್ತಿಗೆ ಮನೆಮುಂದೆ ನಟಿ ಸೋನು ಗೌಡ ಹೈಡ್ರಾಮಾ

    ಅಭಿನಯ ಅತ್ತಿಗೆ ಮನೆಮುಂದೆ ನಟಿ ಸೋನು ಗೌಡ ಹೈಡ್ರಾಮಾ

    ಟಿ ಅಭಿನಯ ಅತ್ತಿಗೆ ಲಕ್ಷ್ಮಿದೇವಿ ಮನೆ ಮುಂದೆ ನಿನ್ನೆ ಹೈ ಡ್ರಾಮಾ ನಡೆದಿದೆ. ಲಕ್ಷ್ಮಿದೇವಿ ಅವರು ತಮಗೆ ಹಣ ಪಡೆದು ವಂಚಿಸಿದ್ದಾರೆ ಎಂದು ನಟಿ ಸೋನು ಗೌಡ ಅನ್ನುವವರು ಲಕ್ಷ್ಮಿದೇವಿ ಅವರ ಮನೆ ಮುಂದೆ ಬಂದು ಗಲಾಟೆ ಮಾಡಿದ ಪ್ರಸಂಗ ನಡೆದಿದೆ. ಅವಕಾಶ ಕೊಡಿಸುವುದಾಗಿ ತಮ್ಮಿಂದ 75 ಸಾವಿರ ಹಣ ಪಡೆದು ಮೋಸ ಮಾಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ. ಹಣ ಪಡೆದು ಈವರೆಗೂ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿಸಿಲ್ಲ ಎಂದು ಅವರು ಆರೋಪಿಸಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿರುವ ಸೋನು ಗೌಡ, ‘ಲಕ್ಷ್ಮಿದೇವಿ ಅವರು ಹಣ ಪಡೆದು ನನಗಷ್ಟೇ ಮೋಸ ಮಾಡಿಲ್ಲ. ಅನೇಕ ಹುಡುಗಿಯರಿಗೆ ಈ ರೀತಿ ಮೋಸ ಮಾಡಿದ್ದಾರೆ. ಹೆಣ್ಣುಮಕ್ಕಳನ್ನು ಬುಟ್ಟಿಗೆ ಹಾಕಿಕೊಂಡು ಹೀಗೆ ಹಣ ವಸೂಲಿ ಮಾಡುವ ಖಯಾಲಿ ಅವರದ್ದು. ತಾವು ಹಣ ಪಡೆದದ್ದಕ್ಕೆ ದಾಖಲೆ ಸಮೇತ ಅವರು ಲಕ್ಷ್ಮಿದೇವಿ ಅವರ ಮನೆ ಮುಂದೆ ಹಾಜರಿದ್ದರು. ಇದನ್ನೂ ಓದಿ: ಸಾನ್ಯ ನೆನಪಲ್ಲಿ ಬಿಟ್ಟೋಗ್ಬೇಡ ಎಂದು ಭಾವುಕರಾದ ರೂಪೇಶ್ ಶೆಟ್ಟಿ

    ಸೋನು ಗೌಡ ಅವರು ಮನೆ ಮುಂದೆ ಬಂದ ಗಲಾಟೆ ಮಾಡುತ್ತಿದ್ದಂತೆಯೇ ಹಣವನ್ನು ಸೆಟಲ್ಮೆಂಟ್ ಮಾಡುವುದಾಗಿ ಲಕ್ಷ್ಮಿದೇವಿ ಅವರು ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಸೋನು ಗೌಡ ಅವರ ಜೊತೆ ಫೋನ್ ನಲ್ಲಿ ಮಾತನಾಡಿದ ಲಕ್ಷ್ಮಿದೇವಿ ಅವರು ‘ನಾನು ಸದ್ಯ ಮನೆಯಲ್ಲಿ ಇಲ್ಲ. ಬಂದು ನಿಮ್ಮ ಹಣವನ್ನು ವಾಪಸ್ಸು ನೀಡುವುದಾಗಿ ಹೇಳಿದ್ದಾರೆ’ ಎಂದು ಸೋನು ಗೌಡ ತಿಳಿಸಿದರು.

    ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಕಾರಣಕ್ಕಾಗಿ ನಟಿ ಅಭಿನಯಗೆ ಮೊನ್ನೆಯಷ್ಟೇ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅಭಿನಯ ಅವರ ಸಹೋದರನ ಪತ್ನಿ ಲಕ್ಷ್ಮಿದೇವಿ ಅವರು ಅಭಿನಯ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ವಿಚಾರಣೆ ನಡೆಸಿದ ಹೈಕೋರ್ಟ್ ಅಭಿನಯ ಅವರಿಗೆ 2 ವರ್ಷ ಮತ್ತು ಅವರ ತಾಯಿಗೆ 5 ವರ್ಷ ಜೈಲು ಶಿಕ್ಷೆ ನೀಡಿದೆ. ಈ ಬೆನ್ನಲ್ಲೇ ಲಕ್ಷ್ಮಿದೇವಿ ಅವರ ಮೇಲೆ ಈ ರೀತಿ ಆರೋಪ ಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ: ನಾವೂ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದ ನಟಿ

    ನಟಿ ಅಭಿನಯಗೆ 2 ವರ್ಷ ಜೈಲು ಶಿಕ್ಷೆ: ನಾವೂ ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದ ನಟಿ

    ತ್ತಿಗೆಗೆ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ದೌರ್ಜನ್ಯ ನಡೆಸಿದ್ದಾರೆ ಎನ್ನುವ ಕಾರಣಕ್ಕಾಗಿ ನಟಿ ಅಭಿನಯಗೆ ನಿನ್ನೆಯಷ್ಟೇ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಅಭಿನಯ ಅವರ ಸಹೋದರನ ಪತ್ನಿ ಲಕ್ಷ್ಮಿದೇವಿ ಅನ್ನುವವರು ಅಭಿನಯ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ ವಿಚಾರಣೆ ನಡೆಸಿದ ಹೈಕೋರ್ಟ್ ಅಭಿನಯ ಅವರಿಗೆ 2 ವರ್ಷ ಮತ್ತು ಅವರ ತಾಯಿಗೆ 5 ವರ್ಷ ಜೈಲು ಶಿಕ್ಷೆ ನೀಡಿದೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಅಭಿನಯ, ‘ಇದು ಇಪ್ಪತ್ತು ವರ್ಷದ ಕೇಸು. ಕಳೆದ ಬಾರಿ ತೀರ್ಪು ನಮ್ಮಂತೆ ಆಗಿತ್ತು. ಇದೀಗ ಅವರಂತೆ ಆಗಿದೆ. ನಾವು ಕಾನೂನು ಸಮರವನ್ನು ಮುಂದುವರೆಸುತ್ತೇವೆ. ಲಕ್ಷ್ಮಿದೇವಿ ಮಾಡಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಕಾನೂನು ಹೋರಾಟ ಮುಂದುವರೆಯುತ್ತದೆ, ಮುಂದೇನಾಗತ್ತೋ ನೋಡೋಣ’ ಎಂದಿದ್ದಾರೆ. ಅತ್ತಿಗೆ ಮಾಡಿರುವ ಎಲ್ಲ ಆರೋಪಗಳನ್ನೂ ಈ ಸಂದರ್ಭದಲ್ಲಿ ಅವರು ತಳ್ಳಿ ಹಾಕಿದ್ದಾರೆ.  ಇದನ್ನೂ ಓದಿ: ಜಗ್ಗೇಶ್ ನಟನೆ `ರಾಘವೇಂದ್ರ ಸ್ಟೋರ್ಸ್’ ರಿಲೀಸ್ ಬಗ್ಗೆ ಸ್ಪಷ್ಟನೆ ನೀಡಿದ ಸಂತೋಷ್‌ ಆನಂದ್‌ರಾಮ್

    ಏನಿದು ಪ್ರಕರಣ? : ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು.

    ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

    Live Tv
    [brid partner=56869869 player=32851 video=960834 autoplay=true]

  • ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    ಪರಪುರುಷನನ್ನು ಮನೆಗೆ ಕರೆತರುತ್ತಿದ್ದರು, ಚಿತ್ರಹಿಂಸೆ ನೀಡುತ್ತಿದ್ದರು: ಖ್ಯಾತನಟಿ ಅಭಿನಯ ಅತ್ತಿಗೆ ಕಣ್ಣೀರು

    ಮ್ಮ ಕುಟುಂಬದ ಜೊತೆ ಭಾಗಿಯಾಗಿ ಸಹೋದರನ ಪತ್ನಿಗೆ ಕಿರುಕುಳ ನೀಡಿದರು ಮತ್ತು ವರದಕ್ಷಿಣಿ ತರುವಂತೆ ಪೀಡಿಸಿದರು ಎನ್ನುವ ಕಾರಣಕ್ಕಾಗಿ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಬೇಕಿರುವ ಖ್ಯಾತನಟಿ ಅಭಿನಯ ಅವರ ಕುಟುಂಬದ ಕುರಿತು ಹಲವು ಅಚ್ಚರಿ ಹೇಳಿಕೆಗಳನ್ನು ನೀಡಿದ್ದಾರೆ. ಅಭಿನಯ ಸಹೋದರನ ಪತ್ನಿ ಲಕ್ಷ್ಮಿದೇವಿ. ಮಾಧ್ಯಮಗಳ ಜೊತೆ ಮಾತನಾಡಿರುವ ಅವರು, ‘ಅದೊಂದು ನರಕದ ಮನೆಯಾಗಿತ್ತು’ ಎಂದು ಹೇಳಿಕೊಂಡಿದ್ದಾರೆ.

    ನಾನು ಗಂಡನ ಮನೆಯಲ್ಲಿ ಇದ್ದದ್ದು ಒಂದೇ ವರ್ಷ ಮಾತ್ರ. ಎಲ್ಲ ರೀತಿಯ ನರಕವನ್ನೂ ಅನುಭವಿಸಿದೆ. ತಿನ್ನೋಕೆ ಒಂದ್ ರೊಟ್ಟಿ, ಸ್ನಾನ ಮಾಡೋಕೆ ಒಂದ್ ಬಕೆಟ್ ನೀರು ಜೊತೆಗೆ ಪರಪುರುಷನ ಜೊತೆ ಸಹಕರಿಸು ಅಂತ ಚಿತ್ರಹಿಂಸೆ ಕೊಡುತ್ತಿದ್ದರು. ಪರಪುರುಷನನ್ನು ಮನೆಗೂ ಕರೆದುಕೊಂಡು ಬರುತ್ತಿದ್ದರು. ಅಭಿನಯ ಚಿತ್ರ ನಟಿಯಾದರೂ, ಅವರು ನನ್ನ ನೆರವಿಗೆ ಬರಲಿಲ್ಲ. ಅವರೂ ಕೂಡ ಹಿಂಸೆ ಕೊಟ್ಟರು ಎಂದು ಮಾತನಾಡಿದ್ದಾರೆ ಲಕ್ಷ್ಮಿದೇವಿ. ಇದನ್ನೂ ಓದಿ: ಕೊನೆಗೂ ಹೊರಬಿತ್ತು ಕೆ.ಎಲ್ ರಾಹುಲ್ -ಅಥಿಯಾ ಮದುವೆ ಡೇಟ್

    ಏನಿದು ಪ್ರಕರಣ?
    ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ. ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು.

    ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

    Live Tv
    [brid partner=56869869 player=32851 video=960834 autoplay=true]

  • ಅನುಭವ ಸಿನಿಮಾದ ಖ್ಯಾತನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

    ಅನುಭವ ಸಿನಿಮಾದ ಖ್ಯಾತನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

    ನ್ನಡ ಸಿನಿಮಾ ಮತ್ತು ಕಿರುತೆರೆ ನಟಿ ಅಭಿನಯಗೆ ಹೈಕೋರ್ಟ್ ಏಕಸದಸ್ಯ ಪೀಠವು ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ. ನಟಿ ಅಭಿನಯ ಸಹೋದರ ಶ್ರೀನಿವಾಸ್ ಅವರ ಪತ್ನಿ ಲಕ್ಷ್ಮಿದೇವಿ ಅವರಿಗೆ ವರದಕ್ಷಿಣೆ ಕಿರುಕುಳ ನೀಡಿದರು ಎನ್ನುವ ಕಾರಣಕ್ಕಾಗಿ ವರದಕ್ಷಿಣೆ ಕಿರುಕುಳ ಕೇಸಲ್ಲಿ ಜೈಲು‌ ಶಿಕ್ಷೆ ವಿಧಿಸಿ ಕೋರ್ಟ್ ಆದೇಶಿಸಿದೆ.

    ಅಭಿನಯ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ  2002 ರಲ್ಲಿ ಬೆಂಗಳೂರಿನ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಅಭಿನಯ ಸೇರಿದಂತೆ ಐವರ ಮೇಲೆ ಕೇಸ್ ದಾಖಲಾಗಿತ್ತು. 1998 ರಲ್ಲಿ ಅಭಿನಯ ಅಣ್ಣ ಶ್ರೀನಿವಾಸ್ ಜೊತೆ ಲಕ್ಷ್ಮೀದೇವಿ ವಿವಾಹವಾಗಿದ್ದರು. ಮದುವೆ ವೇಳೆ ಶ್ರೀನಿವಾಸ್ ಅವರು 80 ಸಾವಿರ ನಗದು, 250 ಗ್ರಾಂ ಚಿನ್ನಭರಣ ಪಡೆದಿದ್ದರು ಎಂದು ಹೇಳಲಾಗಿತ್ತು. ನಂತರ ಮತ್ತೆ ಒಂದು ಲಕ್ಷ ಹಣ ತರುವಂತೆ ಅಭಿನಯ ಕುಟುಂಬಸ್ಥರಿಂದ ಕಿರುಕುಳ ನೀಡಲಾಗಿತ್ತು ಎಂದು ದೂರು ದಾಖಲಾಗಿತ್ತು. ಇದನ್ನೂ ಓದಿ: ಮಹಾಲಕ್ಷ್ಮಿ ಮದುವೆಗೆ ಶತದಿನೋತ್ಸವ: ಹೆಂಡ್ತಿಗೆ ಹ್ಯಾಪಿ ಕ್ರೆಡಿಟ್ ಕೊಟ್ಟ ರವೀಂದ್ರ

    ಹಣದ ಬೇಡಿಕೆ ಇಟ್ಟಿದ್ದ ಅಭಿನಯ ಕುಟುಂಬವು  ಲಕ್ಷ್ಮೀದೇವಿಗೆ ಕಿರುಕುಳ ನೀಡಿ ತವರು ಮನೆಗೆ ಕಳುಹಿಸಿದ್ದರು. ಈ ಸಂಬಂಧ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ಲಕ್ಷ್ಮಿದೇವಿ ದೂರು ನೀಡಿದ್ದರು. ಚಂದ್ರಾಲೇಔಟ್ ಪೊಲೀಸರ ಚಾರ್ಜ್ ಶೀಟ್ ಆಧರಿಸಿ ಮ್ಯಾಜಿಸ್ಟ್ರೇಟ್ ಕೋರ್ಟ್ ಐವರು ಆರೋಪಿಗಳಿಗೆ 2012ರಲ್ಲಿ ತಲಾ 2 ವರ್ಷ ಶಿಕ್ಷೆ ಪ್ರಕಟ ಮಾಡಿತ್ತು. ನಂತರ ಜಿಲ್ಲಾ ನ್ಯಾಯಾಲಯ ಐವರೂ ಆರೋಪಿಗಳನ್ನು ಖುಲಾಸೆಗೊಳಿಸಿ ಆದೇಶಿಸಿತ್ತು. ಜಿಲ್ಲಾ ನ್ಯಾಯಾಲಯ ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದ ಲಕ್ಷ್ಮೀದೇವಿ. ಪ್ರಕರಣದಲ್ಲಿ ಶ್ರೀನಿವಾಸ್, ರಾಮಕೃಷ್ಣ, ಸಾವನ್ನಪ್ಪಿದ್ದಾರೆ. ಅಭಿನಯ, ಚಲುವರಾಜ್, ಜಯಮ್ಮ ಎಂಬುವವರಿಗೆ ಎರಡು ವರ್ಷ ಜೈಲು ಶಿಕ್ಷೆ ನೀಡಿದ ಅದೇಶ.

    Live Tv
    [brid partner=56869869 player=32851 video=960834 autoplay=true]

  • ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ನಿಧನ: ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ

    ಅರ್ಜುನ್ ಸರ್ಜಾ ತಾಯಿ ಲಕ್ಷ್ಮೀದೇವಿ ನಿಧನ: ಸರ್ಜಾ ಕುಟುಂಬಕ್ಕೆ ಮತ್ತೊಂದು ಆಘಾತ

    ನ್ನಡ ಸಿನಿಮಾ ರಂಗದ ಹಿರಿಯ ನಟ ಶಕ್ತಿ ಪ್ರಸಾದ್ ಪತ್ನಿ, ಖ್ಯಾತ ನಟ ಅರ್ಜುನ್ ಸರ್ಜಾ ಅವರ ತಾಯಿ ಲಕ್ಷ್ಮೀದೇವಿ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಕಳೆದ ಒಂದು ತಿಂಗಳಿನಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ, ಇಂದು ಮಧ್ಯಾಹ್ನ 12 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

    ಸರ್ಜಾ ಕುಟುಂಬದ ಬೆಳವಣಿಗೆಯಲ್ಲಿ ಲಕ್ಷ್ಮಿದೇವಿ ಅವರ ಪಾತ್ರದ ದೊಡ್ಡದು. ಪತಿಯು ಸಿನಿಮಾ ರಂಗದಲ್ಲಿ ಬ್ಯುಸಿಯಾಗಿದ್ದರೆ, ಮಕ್ಕಳನ್ನು ಬೆಳೆಸುವಲ್ಲಿ ಲಕ್ಷ್ಮಿದೇವಿ ಅವರೇ ಪ್ರಮುಖ ಪಾತ್ರ ವಹಿಸಿದವರು. ಮೂವರು ಮಕ್ಕಳಲ್ಲಿ ಇಬ್ಬರು ಮಕ್ಕಳನ್ನು ಸಿನಿಮಾ ರಂಗದಲ್ಲೇ ಬೆಳೆಯುವಂತೆ ಮಾಡಿದ್ದರು. ಕಿಶೋರ್ ಸರ್ಜಾ ಮತ್ತು ಅರ್ಜುನ್ ಸರ್ಜಾ ಹಾಗೂ ಚಿರು ಸರ್ಜಾ ಅವರ ತಾಯಿ ಅಮ್ಮಾಜಿ ಇವರ ಮೂವರು ಮಕ್ಕಳು. ಮುಂದೆ ಮೊಮ್ಮಕ್ಕಳು ಕೂಡ ಸಿನಿಮಾ ರಂಗಕ್ಕೆ ಎಂಟ್ರಿ ಕೊಟ್ಟಾಗ ಅವರನ್ನು ಪ್ರೋತ್ಸಾಹಿಸಿದವರು.ಇದನ್ನೂ ಓದಿ:ಚಿಕ್ಕಣ್ಣನ ಮದುವೆ ಮುಂದಿನ ವರ್ಷ ಫಿಕ್ಸ್: ಕುಟುಂಬದ ಒತ್ತಡಕ್ಕೆ ಕೊನೆಗೂ ಮಣಿದ ನಟ

    ಕಳೆದ ವರ್ಷವಷ್ಟೇ ಸರ್ಜಾ ಕುಟುಂಬ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದೆ. ಈಗ ಕುಟುಂಬದ ಹಿರಿಯ ಜೀವವನ್ನು ಕಳೆದುಕೊಂಡಿದೆ. ಅರ್ಜುನ್ ಸರ್ಜಾ ಸದ್ಯ ಬೆಂಗಳೂರಿನಲ್ಲೇ ಇದ್ದಾರೆ ಎಂಬ ಮಾಹಿತಿ ಇದೆ. ಧ್ರುವ ಸರ್ಜಾ ಶೂಟಿಂಗ್ ಗಾಗಿ ಹೈದರಾಬಾದ್ ಗೆ ತೆರಳಿದ್ದರು. ಅಲ್ಲಿಂದ ಈಗ ಹೊರಟಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

    Live Tv
    [brid partner=56869869 player=32851 video=960834 autoplay=true]