Tag: lalbagh

  • ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ

    ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ

    – ಆಗಸ್ಟ್ 18ರವರೆಗೆ ನಡೆಯಲಿರುವ ಫ್ಲವರ್ ಶೋ
    – ಫಲಪುಷ್ಪಗಳಲ್ಲಿ ಅನಾವರಣಗೊಂಡ ಸ್ವಾತಂತ್ರ‍್ಯ ವೀರರ ಜೀವನ ಚರಿತ್ರೆ

    ಬೆಂಗಳೂರು: ಸ್ವಾತಂತ್ರ‍್ಯ ದಿನಾಚರಣೆ ಹಿನ್ನೆಲೆ ಲಾಲ್‌ಬಾಗ್‌ನಲ್ಲಿ ನಡೆಯಲಿರುವ 218ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಸಿಎಂ ಸಿದ್ದರಾಮಯ್ಯ ಅವರು ಚಾಲನೆ ನೀಡಿದ್ದಾರೆ.

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು 218ನೇ ವರ್ಷದ ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನವಾಗಿದೆ. ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣರಿಗೆ ಗೌರವ ಸಲ್ಲಿಸುವ ಕೆಲಸ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ

    ಕಿತ್ತೂರು ರಾಣಿ ಚೆನ್ನಮ್ಮಗೆ ಬ್ರಿಟಿಷರ ವಿರುದ್ಧ ಮೊದಲನೇ ಯುದ್ಧಗಳಲ್ಲಿ ಜಯ ಸಿಕ್ತು. ಎರಡನೇ ಯುದ್ಧದಲ್ಲಿ ಚೆನ್ನಮ್ಮನ ಸೆರೆಯಾಯಿತು. ಚೆನ್ನಮ್ಮನ ಬಲಗೈ ಬಂಟನಾಗಿದ್ದ ರಾಯಣ್ಣನಿಗೆ ನ್ಯಾಯಾಲಯದಲ್ಲಿ ಗಲ್ಲು ಶಿಕ್ಷೆ ಆಯಿತು. ರಾಯಣ್ಣ ಹುಟ್ಟಿದ್ದು ಸ್ವಾತಂತ್ರ‍್ಯ ಸಿಕ್ಕ ದಿನವಾದರೆ, ಗಲ್ಲು ಶಿಕ್ಷೆ ಆಗಿದ್ದು ಗಣರಾಜ್ಯದ ದಿನ. ಇದು ಕಾಕತಾಳೀಯ ಅಂತಾನೇ ಎನ್ನಬಹುದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತದ ಮೇಲೆ ದಾಳಿ ಮಾಡಿ – ಪಾಕ್ ಸೇನಾ ಮುಖ್ಯಸ್ಥನಿಗೆ ಬೆಂಗಳೂರಿನ ಅಲ್‌ಖೈದಾ ಭಯೋತ್ಪಾದಕಿ ಮನವಿ

    ಬ್ರಿಟಿಷರ ವಿರುದ್ಧ ರಾಯಣ್ಣ ವೀರಾವೇಶದಿಂದ ಹೋರಾಡಿದ್ದರು. ಬ್ರಿಟಿಷರನ್ನು ಸೋಲಿಸಿ 200 ವರ್ಷ ಆಯಿತು. ರಾಯಣ್ಣ ಹಿಂದುಳಿದ ಜಾತಿಗೆ ಸೇರಿದವರು, ಎಲ್ಲಾ ಸೈನ್ಯದಲ್ಲಿ ಎಲ್ಲ ಜಾತಿಯವರಿದ್ದರು. ಜಾತ್ಯಾತೀತರಾಗಿ ಎಲ್ಲರನ್ನೂ ಬಳಸಿಕೊಂಡು ಕಿತ್ತೂರು ಪ್ರಾಂತ್ಯ ಆಳಿದ್ದರು. ಚೆನ್ನಮ್ಮ ವೀರ ಮಹಿಳೆ ಹಾಗೂ ವೀರ ವನಿತೆಯೂ ಹೌದು. ಸರ್ಕಾರದಿಂದ ಕಿತ್ತೂರು ರಾಣಿ ಚೆನ್ನಮ್ಮನ ಜಯಂತಿ ಆಚರಣೆ ಮಾಡಲಾಗುತ್ತದೆ. ಸಂಗೊಳ್ಳಿ ರಾಜಣ್ಣ ಅವರ ಪ್ರಾಧಿಕಾರ ಮಾಡಿದ್ದೇವೆ ಎಂದಿದ್ದಾರೆ.

    ಇಂದು ಈ ವೀರರನ್ನ ಸ್ಮರಿಸಬೇಕು. ತೋಟಗಾರಿಕೆ ಇಲಾಖೆಯಿಂದ ಇಂದು ಸ್ವಾತಂತ್ರ‍್ಯ ವೀರರಿಗೆ ಗೌರವ ಸಲ್ಲಿಸಲಾಗಿದೆ. ದೇಶಕ್ಕಾಗಿ ಹೋರಾಡಿದವರನ್ನ ನಾವೆಲ್ಲರೂ ಸ್ಮರಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:  6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಜಾರಿ – ಭಾರೀ ಮಳೆಯಾಗುವ ಸಾಧ್ಯತೆ

    ಬಳಿಕ ಸಿಎಂ ಸಿದ್ದರಾಮಯ್ಯ ಅವರು ಫ್ಲವರ್ ಶೋ ವೀಕ್ಷಣೆ ಮಾಡಿದರು. ಅವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್, ತೋಟಗಾರಿಕೆ ಇಲಾಖೆಯ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಹಾಗೂ ಮತ್ತಿತ್ತರು ಸಾಥ್ ನೀಡಿದರು.

    ಆ.18ರವರೆಗೆ ನಡೆಯಲಿದೆ ಫ್ಲವರ್ ಶೋ
    ಇಂದಿನಿಂದ (ಆ.7) ಆಗಸ್ಟ್ 18ರವರೆಗೆ ಲಾಲ್‌ಬಾಗ್‌ನಲ್ಲಿ ಫ್ಲವರ್ ಶೋ ನಡೆಯಲಿದ್ದು, ಈ ಬಾರಿ ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ವಿಷಯಾಧಾರಿತ ಪುಷ್ಪಮೇಳ ನಡೆಯುತ್ತಿದೆ. ಸ್ವಾತಂತ್ರ‍್ಯ ವೀರರ ಜೀವನ ಚರಿತ್ರೆ ಫಲಪುಷ್ಪಗಳಲ್ಲಿ ಅನಾವರಣಗೊಂಡಿದೆ. 18 ಅಡಿ ಎತ್ತರ, 32 ಅಡಿ ಅಗಲದ ಕಿತ್ತೂರು ಕೋಟೆಯ ಮಾದರಿಯಲ್ಲಿ ನಿರ್ಮಾಣವಾಗಿದೆ. ಅದರ ಒಳಭಾಗದಲ್ಲಿ ಫಲಪುಷ್ಪಗಳ ಮೂಲಕ ಹೋರಾಟದ ಸ್ಮರಣೆ ಮಾಡಲಾಗಿದೆ. ಇದನ್ನೂ ಓದಿ: ಟ್ರಂಪ್‌ ಬೆದರಿಕೆಗೆ ಜಗ್ಗದ ಭಾರತ – ರಷ್ಯಾದ ಜೊತೆ ಮಹತ್ವದ ಒಪ್ಪಂದಕ್ಕೆ ಸಹಿ

    ರಾಣಿ ಅಬ್ಬಕ್ಕದೇವಿ, ರಾಣಿ ಚೆನ್ನಭೈರಾದೇವಿ, ರಾಣಿ ಬೆಳವಾಡಿ ಮಲ್ಲಮ್ಮ, ರಾಣಿ ಕೆಳದಿ ಚೆನ್ನಮ್ಮ, ಒನಕೆ ಓಬವ್ವ ಅವರ ಹೂವಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆ.7ರಿಂದ ಹನ್ನೊಂದು ದಿನಗಳವರೆಗೆ ಫ್ಲವರ್ ಶೋ ನಡೆಯಲಿದೆ.

    ಪ್ರವೇಶ ಶುಲ್ಕ ಎಷ್ಟು?
    ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80 ರೂ., ಮಕ್ಕಳಿಗೆ 30 ರೂ. ಹಾಗೂ ಶನಿವಾರ, ಭಾನುವಾರ ರಜಾದಿನಗಳಲ್ಲಿ ವಯಸ್ಕರಿಗೆ 100 ರೂ., ಮಕ್ಕಳಿಗೆ 30 ರೂ. ಟಿಕೆಟ್ ದರ ನಿಗದಿ ಮಾಡಲಾಗಿದೆ.

  • ಗುರುವಾರದಿಂದ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ – ಹೂವಲ್ಲೇ ಕಿತ್ತೂರಿನ ಕೋಟೆ ಸೃಷ್ಟಿ

    ಗುರುವಾರದಿಂದ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ – ಹೂವಲ್ಲೇ ಕಿತ್ತೂರಿನ ಕೋಟೆ ಸೃಷ್ಟಿ

    -ಆ.7ರಿಂದ 18ರವರೆಗೆ ನಡೆಯಲಿರುವ ಪ್ರದರ್ಶನ

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗುರುವಾರದಿಂದ (ಆ.7) ನಗರದ ಲಾಲ್‌ಬಾಗ್‌ನಲ್ಲಿ (Lalbhag) 218ನೇ ಫಲಪುಷ್ಪ ಪ್ರದರ್ಶನ ನಡೆಯಲಿದೆ.

    ನಾಳೆ (ಗುರುವಾರ) ಬೆಳಿಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) 218ನೇ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಪ್ರದರ್ಶನ ಸಂಪೂರ್ಣವಾಗಿ ಕಿತ್ತೂರು ರಾಣಿ ಚೆನ್ನಮ್ಮನ (Kitturu Chennamma) ಆಸ್ಥಾನದ ಪರಿಕಲ್ಪನೆಯಲ್ಲಿ ಆಯೋಜನೆಯಾಗಲಿದೆ.ಇದನ್ನೂ ಓದಿ: ಗಂಗೆ ನಿಮ್ಮ ಪಾದವನ್ನು ಸ್ಪರ್ಶಿಸುತ್ತಿದ್ದಾಳೆ, ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತೆ – ಯುಪಿ ಸಚಿವ ವಿವಾದಾತ್ಮಕ ಹೇಳಿಕೆ

    ಆಂಧ್ರಪ್ರದೇಶ, ತಮಿಳುನಾಡು, ಪುಣೆ, ಕೇರಳದಿಂದ ಹೂವುಗಳಿಂದ ತರಿಸಲಾಗಿದ್ದು, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರು ಕೋಟೆ, ಕಿತ್ತೂರು ರಾಣಿ ಚೆನ್ನಮ್ಮನವರ ಐಕ್ಯ ಮಂಟಪಗಳು ಸಿದ್ಧಗೊಳ್ಳುತ್ತಿವೆ. 600ಕ್ಕೂ ಹೆಚ್ಚು ಕಾರ್ಮಿಕರು, ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಭರ್ಜರಿಯಿಂದ ತಯಾರಿ ನಡೆಯುತ್ತಿದೆ.

    ಇನ್ನೂ ಪ್ರದರ್ಶನದಲ್ಲಿ ಹೈಡ್ರಾಂಜಿ, ಕ್ಯಾಲಲಿಲಿ, ಆರ್ಕಿಟ್ಸ್, ಟ್ಯೂಬ್ರೆಟ್ಸ್ ಬೆಗೆನಿಯಾ ಸೇರಿದಂತೆ 105ಕ್ಕೂ ವಿಶೇಷವಾದ ವಾರ್ಷಿಕ ಹೂವುಗಳ ಬಳಕೆ ಮಾಡಲಾಗಿದೆ. ಆ.7ರಿಂದ 18ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80 ರೂ. ಹಾಗೂ ರಜಾ ದಿನಗಳಲ್ಲಿ ವಯಸ್ಕರಿಗೆ 100 ರೂ., ಮಕ್ಕಳಿಗೆ 30 ರೂ. ದರ ನಿಗದಿ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ.ಇದನ್ನೂ ಓದಿ: ಕಾಂಗ್ರೆಸ್ ಸಂಸದೆ ಸರ ಕಳವು ಪ್ರಕರಣ – ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸ್

  • ಪ್ರವಾಸಿಗರಿಗೆ ಶಾಕ್‌ – ಲಾಲ್‌ಬಾಗ್‌ ಪ್ರವೇಶ ದರ ಭಾರೀ ಏರಿಕೆ

    ಪ್ರವಾಸಿಗರಿಗೆ ಶಾಕ್‌ – ಲಾಲ್‌ಬಾಗ್‌ ಪ್ರವೇಶ ದರ ಭಾರೀ ಏರಿಕೆ

    ಬೆಂಗಳೂರು: ಲಾಲ್‌ಬಾಗ್‌ಗೆ (Lal bagh) ಭೇಟಿ ನೀಡುವ ಪ್ರವಾಸಿಗರಿಗೆ ತೋಟಗಾರಿಕಾ ಇಲಾಖೆ (Horticulture Department) ಶಾಕ್‌ ನೀಡಿದ್ದು ಪ್ರವೇಶ ದರವನ್ನು (Ticket Price) ಭಾರೀ ಏರಿಕೆ ಮಾಡಿದೆ.

    ಎಷ್ಟು ಏರಿಕೆ?
    12 ವರ್ಷ ಮೇಲ್ಪಟ್ಟವರಿಗೆ ಮೊದಲು 30 ರೂ. ಇತ್ತು. ಈಗ ಈ ದರವನ್ನು 50 ರೂ.ಗೆ ಏರಿಕೆ ಮಾಡಿದೆ.  ಇದನ್ನೂ ಓದಿ: Mandya | ರೈತರ ಜಮೀನು, ಹಿಂದೂ ದೇಗುಲ ಮಾತ್ರವಲ್ಲ ಸರ್ಕಾರಿ ಶಾಲೆಯೂ ವಕ್ಫ್ ಆಸ್ತಿ!

     

    6 ರಿಂದ 12 ವರ್ಷದೊಳಗಿನ ಮಕ್ಕಳ ಪ್ರವೇಶ ಶುಲ್ಕ ಮೊದಲು 10 ರೂ. ಇತ್ತು. ಈಗ ಇದು 20 ರೂ.ಗೆ ಏರಿಕೆ ಮಾಡಲಾಗಿದೆ. ಕಳೆದ ವಾರದಿಂದ ಪ್ರವೇಶ ಶುಲ್ಕ ದರವನ್ನು ತೋಟಗಾರಿಗೆ ಇಲಾಖೆ ಏರಿಕೆ ಮಾಡಿದೆ.

    12 ವರ್ಷ ಮೇಲ್ಪಟ್ಟವರಿಗೆ 2020ರವರೆಗೆ 25 ರೂ. ಶುಲ್ಕ ವಿಧಿಸಲಾಗಿತ್ತು. 2021ರ ಫೆಬ್ರವರಿ ಬಳಿಕ 5 ರೂ. ಏರಿಕೆ ಮಾಡಿ 30 ರೂ. ಶುಲ್ಕವನ್ನು ನಿಗದಿ ಮಾಡಲಾಗಿತ್ತು.

  • ಆ.8ರಿಂದ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ – ಹೂಗಳಲ್ಲಿ ಅಂಬೇಡ್ಕರ್ ಜೀವನಗಾಥೆ ಅನಾವರಣ

    ಆ.8ರಿಂದ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ – ಹೂಗಳಲ್ಲಿ ಅಂಬೇಡ್ಕರ್ ಜೀವನಗಾಥೆ ಅನಾವರಣ

    ಬೆಂಗಳೂರು: ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ತೋಟಗಾರಿಕಾ ಇಲಾಖೆಯು ಲಾಲ್‌ಬಾಗ್‌ನಲ್ಲಿ 216ನೇ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜನೆ ಮಾಡಿದೆ.

    ಈ ಬಾರಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಜೀವನ ಗಾಥೆಯನ್ನ ಹೂಗಳಲ್ಲಿ ಅನಾವರಣಗೊಳಿಸಲಾಗಿದೆ. ಆಗಸ್ಟ್ 8 ರಿಂದ 19ರ ವರೆಗೆ ಈ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಆಗಸ್ಟ್‌ 8ರ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕು‌ಮಾರ್‌ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಇದನ್ನೂ ಓದಿ: Paris Olympics 2024 | ಅನರ್ಹಗೊಂಡ ಕೆಲವೇ ನಿಮಿಷಗಳಲ್ಲಿ ವಿನೇಶ್‌ ಆಸ್ಪತ್ರೆಗೆ ದಾಖಲು

    ಈ ಬಾರಿ ಫಲಪುಷ್ಪ ಪ್ರದರ್ಶನದಲ್ಲಿ 200 ಪ್ರಬೇಧದ ಸುಮಾರು 32 ಲಕ್ಷ ಹೂಗಳನ್ನ ಪ್ರದರ್ಶನಕ್ಕಿಡಲಾಗಿದೆ. ಹೊರ ರಾಜ್ಯದಿಂದ ಆಮದು ಮಾಡಿಕೊಳ್ಳಲಾದ ಗಿಡಗಳನ್ನು ಸಾರ್ವಜನಿಕರ‌ ಪ್ರದರ್ಶನಕ್ಕಿಡಲಾಗಿದೆ. ಪ್ರದರ್ಶನ ವೀಕ್ಷಣೆಗೆ ಬರುವವರಿಗೆ ಟಿಕೆಟ್ ವ್ಯವಸ್ಥೆ ಕೂಡ ಮಾಡಲಾಗಿದೆ. ವಯಸ್ಕರಿಗೆ 100 ರೂ. ಮಕ್ಕಳಿಗೆ 30 ರೂ. ನಿಗದಿಪಡಿಸಲಾಗಿದ್ದು, ಶಾಲಾ ಮಕ್ಕಳಿಗೆ ಉಚಿತ ಪ್ರವೇಶ ಕಲ್ಪಿಸಲಾಗಿದೆ. ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದಕ್ಷಿಣ ಭಾರತ ಕಾಡಿದ ಆ ಮೂರು ದುರಂತಗಳು – ಬಲಿಯಾದ ಜೀವಗಳೆಷ್ಟು? ದುರಂತ ಆಗಿದ್ದು ಏಕೆ?

    ಗಾಜಿನ ಮನೆಯ ಕೇಂದ್ರ ಭಾಗದ ಹಿಂಭಾಗದಲ್ಲಿ ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ ಬಿಂಬಿಸುವ ಮಹಾಡ್ ಸತ್ಯಾಗ್ರಹ, ಕಲಾರಾಮ್ ದೇವಸ್ಥಾನದ ಪ್ರವೇಶ, ಕೊರೆಂಗಾವ್ ವಿಜಯೋತ್ಸವದ ಕಲಾಕೃತಿಗಳನ್ನು ಪ್ರದರ್ಶನಕ್ಕೆ ಇಡಲಾಗಿದೆ. ಭಾರತದ ಭೂಪಟ ಮತ್ತು ಸಂವಿಧಾನ ಪೀಠಿಕೆ ಸೇರಿದಂತೆ ಇನ್ನೂ ಅನೇಕ ಕಲಾಕೃತಿಗಳು, ಸ್ತಬ್ಧ ಚಿತ್ರಗಳು ಪ್ರೇಕ್ಷಕರ ಗಮನ ಸೆಳೆಯಲಿವೆ. ಇದನ್ನೂ ಓದಿ: ನೀವು ಚಾಂಪಿಯನ್‌ಗಳಲ್ಲಿ ಚಾಂಪಿಯನ್: ವಿನೇಶ್‌ಗೆ ಸಮಾಧಾನ ಹೇಳಿದ ಮೋದಿ 

  • ಕ್ಷಮೆ ಕೇಳಿದ ರಚಿತಾ

    ಕ್ಷಮೆ ಕೇಳಿದ ರಚಿತಾ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಲಾಲ್‍ಬಾಗ್ ಫ್ಲವರ್ ಶೋಗೆ ಜನಸಾಗರ- ಹೂವುಗಳಿಂದ ಕೆಂಗಲ್ ಹನುಮಂತಯ್ಯರ ಇತಿಹಾಸ ಅನಾವರಣ

    ಲಾಲ್‍ಬಾಗ್ ಫ್ಲವರ್ ಶೋಗೆ ಜನಸಾಗರ- ಹೂವುಗಳಿಂದ ಕೆಂಗಲ್ ಹನುಮಂತಯ್ಯರ ಇತಿಹಾಸ ಅನಾವರಣ

    ಬೆಂಗಳೂರು: ಸಸ್ಯಕಾಶಿ ಲಾಲ್ ಬಾಗ್ (Lalbagh) ನಲ್ಲಿ ಶುಕ್ರವಾರದಿಂದ ಫ್ಲವರ್ ಶೋ ಆರಂಭವಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಿದರು. ಇಂದಿನಿಂದ ಸಾರ್ಜಜನಿಕರಿಗೆ ಫಲಪುಷ್ಟ ಪರ್ದಶನದ ವೀಕ್ಷಣೆಗೆ ಅವಕಾಶ ಕಲ್ಪಸಲಾಗಿದ್ದು, ವೀಕ್ ಎಂಡ್ ಆಗಿರೋದ್ರಿಂದ ಜನಸಾಗರವೇ ಇಂದು ಫ್ಲವರ್ ಶೋಗೆ (Flower Show) ಬಂದಿತ್ತು.

    ಹೂಗಳಿಂದ ನಿರ್ಮಾಣವಾಗಿರುವ ವಿಧಾನಸೌಧ (Vidhanasoudha), ಕೆಂಗಲ್ ಹನುಮಂತಯ್ಯನವರ ಪ್ರತಿಮೆ, ಸತ್ಯಾಗ್ರಹ ಮಂಟಪ ಇದೆಲ್ಲವೂ ಕಂಡು ಬಂದಿದ್ದು, ಲಾಲ್‍ಬಾಗ್‍ನಾ ಫ್ಲವರ್ ಶೋನಲ್ಲಿ. ಹೌದು, ಸಸ್ಯಕಾಶಿ ಇಂದಿನಿಂದ 214ನೇ ಫ್ಲವರ್ ಶೋ ಆರಂಭವಾಗಿದ್ದು, ಈ ಹೂವಿನ ಲೋಕಕ್ಕೆ ಜನಸಾಗರವೇ ಹರಿದು ಬಂದಿತ್ತು. ಸೆಲ್ಫಿ ತೆಗೆದುಕೊಂಡು ಖುಷಿ ಪಟ್ರು.

    ಹೂವಿನ ಕಲೆಯ ಕಲಾವಿದರಿಗಾಗಿಯೇ ಇಲ್ಲಿ ಇಕೆಬಾನೆ ಮತ್ತು ಕಲೆಗಳ ಸರ್ಧೆಯನ್ನ ಆಯೋಜನೆ ಮಾಡಲಾಗಿತ್ತು. ನಟಿ, ಕಾಂಗ್ರೆಸ್ ನಾಯಕಿ ಉಮಶ್ರೀ ಮತ್ತು ಹೈಕೋರ್ಟ್ ನ್ಯಾಯಮೂರ್ತಿ ಸಂದೀಪ್, ಕೆಂಗಲ್ ಹನುಮಂತಯ್ಯ ಅವ್ರ ಪುತ್ರಿ ಭೇಟಿ ನೀಡಿ ಸಂಭ್ರಮಿಸಿದ್ರು. ಇದನ್ನೂ ಓದಿ: ಮನೆ ಮುಂದೆ ಹೆಚ್ಚಿದ ಕಾರ್ ಪಾರ್ಕಿಂಗ್ – ಸಿಎಂ ನಿವಾಸದ ಎದುರು ಮನೆ ವ್ಯಕ್ತಿ ರಂಪಾಟ

    ಇಂದು ಸರಿಸುಮಾರು 60 ಸಾವಿರಕ್ಕು ಅಧಿಕ ಜನರು ಪ್ಲವರ್ ಶೋ ವೀಕ್ಷಣೆ ಮಾಡಿದ್ದಾರೆ. ಇನ್ನೂ ಆಗಸ್ಟ್ 15 ರವರೆಗೆ ನಡೆಯಲಿರೋ ಈ ಶೋಗೆ ಲಕ್ಷ ಲಕ್ಷ ಸಂಖ್ಯೆಯಲ್ಲಿ ಜನ ಬರುವ ನಿರೀಕ್ಷೆಯಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶುಕ್ರವಾರದಿಂದ ಲಾಲ್‍ಬಾಗ್‍ನಲ್ಲಿ ಫ್ಲವರ್ ಶೋ ಆರಂಭ

    ಶುಕ್ರವಾರದಿಂದ ಲಾಲ್‍ಬಾಗ್‍ನಲ್ಲಿ ಫ್ಲವರ್ ಶೋ ಆರಂಭ

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತವಾಗಿ ಸಸ್ಯಕಾಶಿ ಲಾಲ್‍ಬಾಗ್‍ನಲ್ಲಿ (Lalbagh) ಆಯೋಜಿಸಲಾಗಿರುವ 214ನೇ ಫ್ಲವರ್ ಶೋ ಶುಕ್ರವಾರದಿಂದ ಆರಂಭವಾಗಲಿದೆ.

    ನಾಳೆ ಸಂಜೆ 6 ಗಂಟೆಗೆ ಸಿಎಂ ಸಿದ್ದರಾಮಯ್ಯ (Siddaramaiah) ಲಾಲ್ ಬಾಗ್ ಶೋ ಉದ್ಘಾಟಿಸಲಿದ್ದಾರೆ. ಆ.4ರಿಂದ ಶುರುವಾಗಿ ಆಗಸ್ಟ್ 15ರ ವರೆಗೆ ಫ್ಲವರ್ ಶೋ ನಡೆಯಲಿದೆ. ಜನರಿಗೆ ಯಾವುದೇ ಸಮಸ್ಯೆಗಳಗಾದಂತೆ ಬಿಗಿ ಬಂದೋಬಸ್ತ್ ಮಾಡಲು ತೋಟಗಾರಿಕೆ ಇಲಾಖೆ ನಿರ್ಧರಿಸಿದೆ. ಸಸ್ಯಕಾಶಿ ಲಾಲ್ ಬಾಗ್‍ನಲ್ಲಿ 76ನೇ ಸ್ವತಂತ್ರ ಮಹೋತ್ಸವದ ಹಿನ್ನೆಲೆಯಲ್ಲಿ 214ನೇ ಫ್ಲವರ್ ಶೋ (Flower Show) ಆಯೋಜನೆ ಮಾಡಲಾಗಿದೆ.

    ವಿಧಾನಸೌಧ ಹಾಗೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ ಪರಿಕಲ್ಪನೆಯಲ್ಲಿ ಈ ವರ್ಷದ ಫ್ಲವರ್ ಶೋ ಮೂಡಿ ಬರುತ್ತಿದೆ. ಇನ್ನು ಬರೋಬ್ಬರಿ 2 ಕೋಟಿ ಖರ್ಚು ಮಾಡುತ್ತಿದ್ದು, 69 ಬಗೆಯ ಹೂಗಳು ಈ ಬಾರಿ ಫ್ಲವರ್ ಶೋ ಅಂದವನ್ನ ಹೆಚ್ಚಿಸಲಿವೆ. ಈ ವರ್ಷ 10 ರಿಂದ 12 ಲಕ್ಷದಷ್ಟು ಜನರು ಬರುವ ಸಾಧ್ಯತೆ ಇದೆ. ಫಲಪುಷ್ಪ ಪ್ರದರ್ಶನದಲ್ಲಿ ಹಲವು ಕಲೆಗಳ ಸಾರುವ ಕಾರ್ಯಕ್ರಮ ಆಯೋಜಿಸಲಾಗಿದ್ದು, ಒಟ್ಟು 10 ದಿನಗಳ ಕಾಲ ಫ್ಲವರ್ ಶೋ ಇರಲಿದೆ. ಫ್ಲವರ್ ಶೋಗೆ ಶಾಲಾ ಮಕ್ಕಳಿಗೆ ಫ್ರೀ ಇರಲಿದ್ದು, ಶಾಲಾ ಮಕ್ಕಳಿಗೆ ಕಾಂಪಿಟೇಷನ್ ಆಯೋಜಿಸಲಾಗಿದೆ. ಇದನ್ನೂ ಓದಿ: ಆಯುರ್ವೇದ ಔಷಧಿ ಹೆಸರಿನಲ್ಲಿ ಗಾಂಜಾ ಚಾಕೊಲೇಟ್ ಮಾರಾಟ – ಅಪ್ರಾಪ್ತರನ್ನೇ ಟಾರ್ಗೆಟ್‌ ಮಾಡ್ತಿದ್ದ ಗ್ಯಾಂಗ್‌ ಬಂಧನ

    ಸಾರ್ವಜನಿಕರಿಗೆ ಟ್ರಾಫಿಕ್ ಸಮಸ್ಯೆಯಾಗದಂತೆ ಪಾಕಿರ್ಂಗ್ ವ್ಯವಸ್ಥೆ ಮಾಡಲಾಗಿದ್ದು, ಆದಷ್ಟು ಜನರು ಮೆಟ್ರೋ ಹಾಗೂ ಬಿಎಂಟಿಸಿ ಬಸ್ಸುಗಳಿಂದಲೇ ಬಂದರೆ ಟ್ರಾಫಿಕ್ ಕಡಿಮೆಯಾಗಲಿದೆ ಎಂದು ತೋಟಗಾರಿಕೆ ಇಲಾಖೆ ಮನವಿ ಮಾಡಿದೆ. ಜನರಿಗೆ ಅನುಕೂಲವಾಗುವ ನಿಟ್ಟಿನಿಂದ ಒಟ್ಟು ನಾಲ್ಕೂ ಗೇಟ್ ಗಳಲ್ಲಿ ಜನರಿಗೆ ಎಂಟ್ರಿಗೆ ಅವಕಾಶ ನೀಡಲಾಗಿದೆ. ಫ್ಲವರ್ ಶೋ ಬರುವವರಿಗೆ ಎಂಟ್ರಿ ಫೀಸ್ ದೊಡ್ಡವರಿಗೆ 70 ರೂ. ಹಾಗೂ ಮಕ್ಕಳಿಗೆ 30 ರೂ. ನಿಗದಿ ಮಾಡಿದ್ದು, 200 ಸಿಸಿ ಟಿವಿ ಕ್ಯಾಮರಾಗಳನ್ನ ಅಳವಡಿಕೆ ಮಾಡಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • `ಕಬ್ಬನ್ ಪಾರ್ಕ್ ಉಳಿಸಿ’ ಸಿಎಂಗೆ ಪತ್ರ ಬರೆದು ಮನವಿ

    `ಕಬ್ಬನ್ ಪಾರ್ಕ್ ಉಳಿಸಿ’ ಸಿಎಂಗೆ ಪತ್ರ ಬರೆದು ಮನವಿ

    ಬೆಂಗಳೂರು: ಕಬ್ಬನ್ ಪಾರ್ಕ್ (Cubbon Park) ಹಾಗೂ ಲಾಲ್ ಬಾಗ್ (Lalbagh) ಬೆಂಗಳೂರು (Bengaluru) ಹಸಿರಿನ ಹಾಟ್ ಸ್ಪಾಟ್. ಆದ್ರೆ ಈಗ ಕಬ್ಬನ್ ಪಾರ್ಕ್ ವೈಶಿಷ್ಟ್ಯಕ್ಕೆ ಧಕ್ಕೆ ತರುವ ಕೆಲಸ ಸರ್ಕಾರದ ಇಲಾಖೆಯೊಂದರಿಂದ ಆಗುತ್ತಿದೆ. ಹೀಗಾಗಿ ಖುದ್ದು ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ಪತ್ರ ಬರೆಯಲಾಗಿದೆ.

    ಕಬ್ಬನ್ ಪಾರ್ಕ್ ಬೆಂಗಳೂರಿನ ವಾಯುವಿಹಾರಿಗಳ ಪಾಲಿಗೆ ಸ್ವರ್ಗ. ಹಸಿರ ರಾಶಿಯನ್ನೇ ಹೊದ್ದಿರುವ ಕಬ್ಬನ್ ಪಾರ್ಕ್ ಬೆಂಗಳೂರಿನ ಸೌಂದರ್ಯಕ್ಕೆ ಕಲಶವಿದ್ದಂತೆ. ಅಂದ ಹಾಗೆ ಇದೇ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ಇದೆ. ಈಗ ಈ ಇಲಾಖೆಯವರು, ಇಲ್ಲಿ ಶಾಪ್, ಹೋಟೆಲ್, ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದಾರೆ. ಇದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬಾಡಿಗೆ ಮನೆಗೆ ಅಡ್ವಾನ್ಸ್ ಕೊಡೋ ಮುನ್ನ ಹುಷಾರ್ – ಹಣದ ಜೊತೆಗೆ ಓನರ್ ಎಸ್ಕೇಪ್

    ಕಬ್ಬನ್ ಪಾರ್ಕ್‍ಗೆ ಹೊಂದಿಕೊಂಡಂತೆ ಇರುವ ಲೋಕೋಪಯೋಗಿ ಇಲಾಖೆ ಈ ರೀತಿ ವಾಣಿಜ್ಯ ಚಟುವಟಿಕೆಗಳನ್ನು ಅರಂಭಿಸಲು ಮುಂದಾಗಿದೆ. ಆದ್ರೆ ಇದ್ರಿಂದ ಪಾರ್ಕ್ ಸೌಂದರ್ಯಕ್ಕೆ ಧಕ್ಕೆಯಾಗುತ್ತೆ. ಹೀಗಾಗಿ ಈ ಟೆಂಡರ್ ಪ್ರಕ್ರಿಯೆ ರದ್ದುಗೊಳಿಸಬೇಕು. ಕಬ್ಬನ್ ಪಾರ್ಕ್‍ಗೆ ಇದ್ರಿಂದ ತೊಂದರೆಯಾಗುತ್ತೆ ಎಂದು ಸಿಎಂ ಬೊಮ್ಮಾಯಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಾಕ್ಷ್ಯಚಿತ್ರ ಭಾರತದಲ್ಲಿ ಬ್ಯಾನ್‌ – ಬಿಬಿಸಿ ವಿರುದ್ಧ 302 ಅಧಿಕಾರಿಗಳು ಆಕ್ರೋಶ

    ಈ ಹಿಂದೆ ಕಬ್ಬನ್ ಪಾರ್ಕ್ ಆವರಣದೊಳಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡೋ ವಿಚಾರದಲ್ಲಿ ದೊಡ್ಡ ಮಟ್ಟದ ಗಲಾಟೆ ಸೃಷ್ಟಿಯಾಗಿತ್ತು. ಈಗ ವಾಣಿಜ್ಯ ಮಳಿಗೆಗಳ ನಿರ್ಮಾಣ ವಿಚಾರ ಸಿಎಂ ಅಂಗಳಕ್ಕೆ ತಲುಪಿದ್ದು, ಏನಾಗುತ್ತೆ ಕಾದು ನೋಡಬೇಕು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಲಾಲ್‍ಬಾಗ್‍ನಲ್ಲಿ ಈಗ ಎಲ್ಲೆಲ್ಲೂ ಅಪ್ಪು – ನಗುವಿನ ಒಡೆಯನನ್ನು ನೋಡಲು ಮುಗಿಬಿದ್ದ ಜನ

    ಲಾಲ್‍ಬಾಗ್‍ನಲ್ಲಿ ಈಗ ಎಲ್ಲೆಲ್ಲೂ ಅಪ್ಪು – ನಗುವಿನ ಒಡೆಯನನ್ನು ನೋಡಲು ಮುಗಿಬಿದ್ದ ಜನ

    ಬೆಂಗಳೂರು: ನಗರದ ಲಾಲ್‍ಬಾಗ್‍ನಲ್ಲಿ ನಡೆಯುತ್ತಿರುವ ಫಲಪುಷ್ಪ ಪ್ರದರ್ಶನದಲ್ಲಿ 500ಕ್ಕೂ ಹೆಚ್ಚು ಹೂಗಳಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅರಳಿ ನಗುತ್ತಿದ್ದಾರೆ. ಈ ನಗುವಿನ ಒಡೆಯನನ್ನು ನೋಡಲು ಜನ ಸಾಗರವೇ ಹರಿದು ಬರುತ್ತಿದೆ.

    75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಬೆಂಗಳೂರಿನ ಸಸ್ಯಕಾಶಿ ಲಾಲ್‍ಬಾಗ್‍ನಲ್ಲಿ ಫಲ ಪುಷ್ಪಪ್ರದರ್ಶನ ಮಾಡಲಾಗುತ್ತಿದೆ. ಈ ಬಾರಿ ಅಪ್ಪು ಮತ್ತು ಡಾ.ರಾಜ್‍ಕುಮಾರ್ ಥೀಮ್‍ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯುತ್ತಿದ್ದು, ಮೂರನೇ ದಿನವಾದ ಶನಿವಾರದಂದು ರಾಜ್ಯದ ಮೂಲೆ ಮೂಲೆಗಳಿಂದ ಜನ ಸಾಗರವೇ ಹರಿದು ಬಂದಿತ್ತು. ಹೂವಿನಲ್ಲಿ ಅರಳಿದ ಪುನೀತ್ ರಾಜ್ ಕುಮಾರ್ ಅವರನ್ನು ಕಂಡು ಕೆಲವರು ಭಾವುಕರಾದರೆ, ಇನ್ನೂ ಕೆಲವರು ಫೋಟೋ ಕ್ಲಿಕ್ಕಿಸಿಕೊಂಡು ಖುಷಿಪಟ್ಟರು. ಇದನ್ನೂ ಓದಿ: ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಸಂಭವ – ಉಡುಪಿ, ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್

    ಶನಿವಾರ ಮಳೆಯನ್ನು ಲೆಕ್ಕಿಸದೇ 20 ಸಾವಿರಕ್ಕೂ ಹೆಚ್ಚು ಜನ ಲಾಲ್ ಬಾಗ್‍ಗೆ ಭೇಟಿ ಕೊಟ್ಟು ಸಖತ್ ಎಂಜಾಯ್ ಮಾಡಿದ್ದರು. ಒಟ್ಟು 500 ಬಗೆಯ ವಿವಿಧ ಜಾತಿಯ ಹೂವುಗಳಿಂದ ಹೂವಿನ ಲೋಕವೇ ಅರಳಿದ್ದು, ಆಗಸ್ಟ್ 15ರವರೆಗೆ ಈ ವಿಶೇಷ ಫಲಪುಷ್ಪ ಪ್ರದರ್ಶನ ನಡೆಯಲಿದೆ. ಸಾರ್ವಜನಿಕರು, ಪ್ರವಾಸಿಗರು, ವಿದೇಶಿ ಪ್ರೇಕ್ಷಕರು ಹಾಗೂ ಹೆಚ್ಚಾಗಿ ಶಾಲಾ ಮಕ್ಕಳು ಆಗಮಿಸಿ ಫಲಪುಷ್ಪ ಪ್ರದರ್ಶನದ ಕಳೆಯನ್ನು ಮತ್ತಷ್ಟು ಹೆಚ್ಚಿಸಿದ್ದರು. ಇನ್ನೂ ಇಲ್ಲಿನ ಹೂಗಳ ಲೋಕ, ಶಿಸ್ತು, ಸ್ವಚ್ಛತೆ ಹಾಗೂ ತೋಟಗಾರಿಕೆ ಇಲಾಖೆಯ ಈ ವರ್ಷದ ಥೀಮ್ ಕಂಡು ಪ್ರವಾಸಿಗರು ಫುಲ್ ಫಿದಾ ಆಗಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಲಾಲ್‌ಬಾಗ್‌ನಲ್ಲಿ ಅಪ್ಪು ನೆನಪಿನ ಫಲಪುಷ್ಪ ಪ್ರದರ್ಶನ

    ವೀಕೆಂಡ್ ಇದ್ದಿದ್ದರಿದ ಫ್ಲವರ್ ಶೋಗೆ ಹೆಚ್ಚಿನ ಜನ ಲಾಲ್‍ಬಾಗ್‍ಗೆ ಆಗಮಿಸಿದ್ದರು. ವಿವಿಧ ಜಾತಿಯ ಹಳದಿ, ಪಿಂಕ್ ಶೇಡ್‍ನಲ್ಲಿ ಹೂಗಳು ಕಂಗೊಳಿಸುತ್ತಿದ್ದವು. ಹಚ್ಚ ಹಸಿರಿನಿಂದ ಸೌಂದರ್ಯವನೆಲ್ಲಾ ತಮ್ಮ ಬಳಿಯೇ ಇರಿಸಿಕೊಂಡಿರುವ ಸುಂದರ ಗಿಡಗಳು ಪ್ರವಾಸಿಗರನ್ನು ಕೈ ಬೀಸಿ ಕರೆಯುವಂತಿತ್ತು. ಲಾಲ್‍ಬಾಗ್‍ನಲ್ಲಿರುವ ಈ ಹೂವುಗಳಿಗೆ ಮನಸೋತ ಜನ ಫೋಟೋಗಳನ್ನ ಕ್ಲಿಕ್ಕಿಸಿಕೊಳ್ಳುವ ದೃಶ್ಯಗಳು ಸಾಮಾನ್ಯವಾಗಿದ್ದವು.

    Live Tv
    [brid partner=56869869 player=32851 video=960834 autoplay=true]

  • ನಟ ದಿ. ಪುನೀತ್ ಹೆಸರಲ್ಲಿ ಆಗಸ್ಟ್ 5ರಿಂದ ಲಾಲ್‍ಬಾಗ್‍ನಲ್ಲಿ ಫ್ಲವರ್ ಶೋ: ಮುನಿರತ್ನ

    ನಟ ದಿ. ಪುನೀತ್ ಹೆಸರಲ್ಲಿ ಆಗಸ್ಟ್ 5ರಿಂದ ಲಾಲ್‍ಬಾಗ್‍ನಲ್ಲಿ ಫ್ಲವರ್ ಶೋ: ಮುನಿರತ್ನ

    ಬೆಂಗಳೂರು: ಈ ವರ್ಷ ಬೆಂಗಳೂರಿನ ಲಾಲ್‍ಬಾಗ್ ನಲ್ಲಿ ಫ್ಲವರ್ ಶೋ ನಡೆಯಲಿದೆ. ಆಗಸ್ಟ್ 5 ರಿಂದ 15 ರವರೆಗೆ ಫ್ಲವರ್ ಶೋ ನಡೆಯಲಿದ್ದು, ಆ.5ರಂದು ಸಿಎಂ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಲಿದ್ದಾರೆ ಎಂದು ತೋಟಗಾರಿಕಾ ಸಚಿವ ಮುನಿರತ್ನ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೋವಿಡ್ ನಿಯಮಗಳ ಪಾಲನೆಯೊಂದಿಗೆ ಫ್ಲವರ್ ಶೋ ನಡೆಯಲಿದೆ. ಆಗಸ್ಟ್ 15ರ ಬಳಿಕ ಒಂದೆರಡು ದಿನಗಳ ಕಾಲ ಮುಂದುವರಿಸುವ ಬಗ್ಗೆ ಚರ್ಚೆ ನಡೆದಿದೆ. ದಿ. ನಟ ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ನಡೆಯುತ್ತಿರುವ ಈ ಬಾರಿಯ ಫ್ಲವರ್ ಶೋಗೆ ವಿದೇಶಗಳಿಂದಲೂ ಹೂವುಗಳನ್ನು ತರಿಸಲಾಗಿದೆ ಎಂದರು. ಇದನ್ನೂ ಓದಿ: ಕುದುರೆ ಏರಿ ಫುಡ್ ಡೆಲಿವರಿ ಮಾಡಿದ ವ್ಯಕ್ತಿ ಪತ್ತೆ- ಆದರೆ ಈತ ಸ್ವಿಗ್ಗಿ ಉದ್ಯೋಗಿಯಲ್ಲ!

    ರಾಜ್ಯದಲ್ಲಿ ಮಳೆಯಿಂದ ತೋಟಗಾರಿಕೆ ಬೆಳೆ ನಷ್ಟ ವಿಚಾರಕ್ಕೆ ಪ್ರತಿಕ್ರಿಯಿಸಿ, ಸಂಪೂರ್ಣ ವರದಿ ಅಧಿಕಾರಿಗಳು ತರಿಸುತ್ತಿದ್ದಾರೆ. ವರದಿ ಬಳಿಕ ರೈತರಿಗೆ ಮಾಡಬೇಕಿರುವ ಸಹಾಯವನ್ನು ಖಂಡಿತವಾಗಿಯೂ ಮಾಡುತ್ತೇವೆ. ಏನೇನು ನಷ್ಟ ಉಂಟಾಗಿದೆಯೋ ಅದನ್ನು ಗಮನಿಸುತ್ತೇವೆ. ಪ್ರಾಮಾಣಿಕವಾಗಿ ನಾವು ರೈತರ ಜೊತೆ ಇದ್ದೇವೆ ಎಂದು ತಿಳಿಸಿದರು.

    ಈ ಬಾರಿ ಫಲಪುಷ್ಪ ಪ್ರದರ್ಶನಕ್ಕೆ ಪುನೀತ್ ಹಾಗೂ ಗಾಜನೂರಿನ ಮನೆ ವಿಶೇಷವಾಗಿದೆ. ಲಾಲ್‍ಬಾಗ್ ಫ್ಲವರ್ ಶೋ ಕೋವಿಡ್‍ನಿಂದ ಕಾರ್ಯಕ್ರಮ ಮಾಡಿರಲಿಲ್ಲ. ಆದರೆ ಈ ಬಾರಿ ಆಗಸ್ಟ್ 15ರಂದು ಹಿಂದೆ ಮಾಡುತ್ತಿದ್ದಕ್ಕಿಂತ ಹೆಚ್ಚಾಗಿ ಮಾಡುತ್ತಿದ್ದೇವೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]