Tag: Lalji Tandon

  • ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ ಇನ್ನಿಲ್ಲ

    ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ ಇನ್ನಿಲ್ಲ

    ಲಖನೌ: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಧ್ಯಪ್ರದೇಶ ರಾಜ್ಯಪಾಲ ಲಾಲ್‍ಜಿ ಟಂಡನ್ (85) ಇಂದು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

    ಲಖನೌನ ಮೆದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಜೂನ್ 11 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ತೊಂದರೆ, ಜ್ವರ ಮತ್ತು ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದರು.

    ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಕಾರಣ ಸೋಮವಾರ ಲಾಲ್‍ಜಿ ಟಂಡನ್ ಅವರನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಅಲ್ಲದೇ ಸಣ್ಣ ಶಸ್ತ್ರಚಿಕಿತ್ಸೆಯನ್ನೂ ಮಾಡಲಾಗಿತ್ತು ಎಂಬ ಮಾಹಿತಿ ಲಭಿಸಿದೆ.  ಸದ್ಯ ಉತ್ತರ ಪ್ರದೇಶದ ರಾಜ್ಯಪಾಲರಿಗೆ ಮಧ್ಯಪ್ರದೇಶದ ಗವರ್ನರ್ ಜವಾಬ್ದಾರಿಯನ್ನು ನೀಡಲಾಗಿದೆ.