Tag: Lalu Prasad Yadav

  • I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ – ಮಿಸಾ ಭಾರತಿ

    I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ್ರೆ ಮೋದಿ ಜೈಲಿಗೆ – ಮಿಸಾ ಭಾರತಿ

    ಪಾಟ್ನಾ: I.N.D.I.A ಒಕ್ಕೂಟ ಅಧಿಕಾರಕ್ಕೆ ಬಂದ ಬಳಿಕ ಕೇಂದ್ರೀಯ ತನಿಖಾ ಏಜೆನ್ಸಿಗಳ ದುರ್ಬಳಕೆ ಹಾಗೂ ಚುನಾವಣಾ ಬಾಂಡ್ ಮೂಲಕ ಅಕ್ರಮ ಹಣ ಸಂಗ್ರಹಿಸಿದ ಕಾರಣಕ್ಕೆ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನ ಜೈಲಿಗೆ ಹಾಕಲಾಗುತ್ತದೆ ಎಂದು ಆರ್‌ಜೆಡಿ ಮುಖ್ಯಸ್ಥ ಲಾಲು ಯಾದವ್ ಅವರ ಪುತ್ರಿ ಮಿಸಾ ಭಾರತಿ (Misa Bharti) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

    ಪಾಟಲಿಪುತ್ರ ಕ್ಷೇತ್ರದ ಆರ್‌ಜೆಡಿ ಅಭ್ಯರ್ಥಿ (RJD Candidate) ಮಿಸಾ ಭಾರತಿ ಪಾಟ್ನಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ವೇಳೆ, ಪ್ರಧಾನಿ ಮೋದಿ ಬಿಹಾರಕ್ಕೆ ಬಂದಾಗಲೆಲ್ಲಾ ಅವರು ನಮ್ಮ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ ಮಾಡುತ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಜೆಡಿಎಸ್‌ಗೆ ಬಿಗ್ ಶಾಕ್- ಕಾಂಗ್ರೆಸ್‌ನಿಂದ ಮಿಡ್‍ನೈಟ್ ಆಪರೇಷನ್

    ಭ್ರಷ್ಟಾಚಾರ ಎಷ್ಟು ದೊಡ್ಡದು ಎಂದು ನಿಮಗೆ ತಿಳಿದಿದೆಯೇ? ಬಿಜೆಪಿಯು ಕೇಂದ್ರೀಯ ತನಿಖಾ ಸಂಸ್ಥೆಗಳ ದುರ್ಬಳಕೆ ಮಾಡಿಕೊಂಡಿದೆ. ಚುನಾವಣಾ ಬಾಂಡ್‌ಗಳ ಮೂಲಕ ಬಿಜೆಪಿ ನಿಜವಾಗಿಯೂ ಭ್ರಷ್ಟಾಚಾರ ಮಾಡಿದೆ. ಹಾಗಾಗಿ ದೇಶದ ಜನ ಇಂಡಿಯಾ ಮೈತ್ರಿ ಕೂಟಕ್ಕೆ ಅಧಿಕಾರದ ಅವಕಾಶ ಮಾಡಿಕೊಟ್ಟರೆ, ಪ್ರಧಾನಿಯಿಂದ ಹಿಡಿದು ಎಲ್ಲ ಬಿಜೆಪಿ ನಾಯಕರೂ ಜೈಲು ಪಾಲಾಗುತ್ತಾರೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ ಎಫ್‌ಐಆರ್‌

    ಜೆಪಿ ನಡ್ಡಾ ಕೌಂಟರ್‌ ಅಟ್ಯಾಕ್‌:
    ಮಿಸಾ ಭಾರತಿ ಹೇಳಿಕೆ ತೀಕ್ಷ್ಮವಾಗಿ ಪ್ರತಿಕ್ರಿಯಿಸಿದ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಭ್ರಷ್ಟಾಚಾರದ ಆರೋಪದ ಮೇಲೆ ತನಿಖೆ ಎದುರಿಸುತ್ತಿರುವವರು ಮತ್ತು ಜಾಮೀನಿನ ಮೇಲೆ ಹೊರಗಿರುವವರು ಲಾಲು ಕುಟುಂಬದವರು. ಲಾಲು ಪ್ರಸಾದ್‌ ಹಾಗೂ ಮಿಸಾ ಭಾರತಿ ವಿವಿಧ ಹಗರಣದಲ್ಲಿ ಆಪಾದಿತರು. ಕಳಂಕರಹಿತ ರಾಜಕೀಯ ಜೀವನವನ್ನು ಹೊಂದಿರುವ ಮೋದಿ ಮೇಲೆ ಆರೋಪ ಮಾಡುವುದು ಖಂಡನಾರ್ಹ. ಇಂತಹವರಿಗೆ ಜನ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕು ಎಂದು ಜನತೆಗೆ ಮನವಿ ಮಾಡಿದ್ದಾರೆ.

  • ಕಿಡ್ನಾಪ್ ಉದ್ಯಮಕ್ಕೆ ಹೆಸರಾದವ್ರು ರಾಜ್ಯದಲ್ಲಿ ರಸ್ತೆ ನಿರ್ಮಿಸಲು ಬಿಡ್ಲಿಲ್ಲ- RJD ವಿರುದ್ಧ ಮೋದಿ ವಾಗ್ದಾಳಿ

    ಕಿಡ್ನಾಪ್ ಉದ್ಯಮಕ್ಕೆ ಹೆಸರಾದವ್ರು ರಾಜ್ಯದಲ್ಲಿ ರಸ್ತೆ ನಿರ್ಮಿಸಲು ಬಿಡ್ಲಿಲ್ಲ- RJD ವಿರುದ್ಧ ಮೋದಿ ವಾಗ್ದಾಳಿ

    – ಬಿಹಾರದಲ್ಲಿ ಪ್ರಧಾನಿ ಚುನಾವಣಾ ಪ್ರಚಾರ

    ಪಾಟ್ನಾ: ಅವರ ಕಾಲದಲ್ಲಿ ಬಡವರಿಗೆ ಉದ್ಯೋಗ ಕೊಡಿಸುವ ಹೆಸರಿನಲ್ಲಿ ಭೂಮಿ ಕಸಿದುಕೊಳ್ಳಲಾಯಿತು. ಕಿಡ್ನಾಪ್ ಉದ್ಯಮಕ್ಕೆ ಹೆಸರಾದವರು ರಾಜ್ಯದಲ್ಲಿ ರಸ್ತೆಗಳನ್ನು ನಿರ್ಮಿಸಲು ಬಿಡಲಿಲ್ಲ. ಬಿಹಾರವನ್ನು (Bihar) ಲ್ಯಾಂಟರ್ನ್ ಯುಗದಲ್ಲಿ ಇರಿಸಲು ಅವರು ಬಯಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಆರ್‌ಜೆಡಿ (RJD) ಪಕ್ಷದ ಹಿರಿಯ ನಾಯಕ ಲಾಲೂ ಪ್ರಸಾದ್ ಯಾದವ್ (Lalu Prasad Yadav) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಬಿಹಾರದ ಜಮುಯಿಯಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗಿಯಾದ ಅವರು ವಿಪಕ್ಷಗಳ ವಿರುದ್ಧ ಭ್ರಷ್ಟಾಚಾರದ (Corruption) ಆರೋಪ ಮಾಡಿದರು. ಬಿಹಾರದ 85 ಲಕ್ಷಕ್ಕೂ ಹೆಚ್ಚು ರೈತರು ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಪ್ರಯೋಜನವನ್ನು ಪಡೆಯುತ್ತಿದ್ದಾರೆ. ಜಮುಯಿಯಲ್ಲಿ ಮಾತ್ರ ಈ ಯೋಜನೆಯಡಿ ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ 850 ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಪಡೆದಿದ್ದಾರೆ. ದುರಹಂಕಾರಿ ಸಮ್ಮಿಶ್ರ ಸರ್ಕಾರವಾಗಿದ್ದಲ್ಲಿ ನೇರವಾಗಿ ಅಕೌಂಟ್‌ಗೆ ಹಣ ಕಳುಹಿಸುವ ಯೋಜನೆ ಇತ್ತೇ? ಇವರು ನಿಮ್ಮ ಹಣ ಲೂಟಿ ಮಾಡಿ ಹಣ ಸಿಕ್ಕಿದೆ ಎಂದು ಸಹಿ ಹಾಕುತ್ತಿದ್ದರು.

    ಒಬ್ಬರನ್ನೊಬ್ಬರು ಜೈಲಿಗೆ ಹಾಕಲು ಆಗ್ರಹಿಸುವವರು ಇಂದು ಮೋದಿ ಬಂದಿದ್ದಾರೆ ಎಂದು ಹೆದರಿಸುತ್ತಿದ್ದಾರೆ. ಭ್ರಷ್ಟರು ತೆರೆದ ಕಿವಿಯಿಂದ ಕೇಳಬೇಕು. ಮೋದಿ ಬಂದಿಲ್ಲ ಬದಲಿಗೆ 140 ಕೋಟಿ ದೇಶವಾಸಿಗಳ ಕೋಪ ಹೊರಬಂದಿದೆ. ನಾವು ನಿತೀಶ್ ಕುಮಾರ್ ಅವರೊಂದಿಗೆ ಇದ್ದು ಬಿಹಾರದಲ್ಲಿ ರಸ್ತೆಗಳು ಮತ್ತು ಹೆದ್ದಾರಿಗಳನ್ನು ನಿರ್ಮಿಸುತ್ತಿದ್ದೇವೆ. ಬಿಹಾರದ ಅಭಿವೃದ್ದಿಗೆ ಪಣ ತೊಟ್ಟಿದ್ದೇವೆ ಎಂದರು. ಇದನ್ನೂ ಓದಿ: ಸಿಎಂ ಸ್ಥಾನದಿಂದ ಕೇಜ್ರಿವಾಲ್ ಕೆಳಗಿಳಿಸುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ವಜಾ

    ಜಂಗಲ್ ರಾಜ್‌ನಲ್ಲಿ ಹೆಣ್ಣು ಮಕ್ಕಳು ಹೊರಗೆ ಹೋಗಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿತ್ತು. ಇಲ್ಲಿ ಅಪಹರಣವೇ ಉದ್ಯಮವಾಗಿತ್ತು. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಬಗ್ಗೆ ಪ್ರಸ್ತಾಪಿಸಿದ ಪ್ರಧಾನಿ, ರಾಮ ಮಂದಿರ ನಿರ್ಮಾಣವನ್ನು ತಡೆಯಲು ಆರ್‌ಜೆಡಿ-ಕಾಂಗ್ರೆಸ್ ತನ್ನೆಲ್ಲ ಶಕ್ತಿಯನ್ನು ಹಾಕಿದೆ. ಇಂದಿಗೂ ಈ ಜನರು ರಾಮಮಂದಿರವನ್ನು ಗೇಲಿ ಮಾಡುತ್ತಾರೆ. ಇದೇ ಜನರು ಕರ್ಪೂರಿ ಠಾಕೂರ್ ಅವರನ್ನು ಅವಮಾನಿಸುತ್ತಿದ್ದರು. ನಮ್ಮ ಸರ್ಕಾರ ಬಿಹಾರದ ಗೌರವ್ ಕರ್ಪೂರಿ ಠಾಕೂರ್ ಅವರಿಗೆ ಭಾರತ ರತ್ನ ನೀಡಿದಾಗ ಈ ಜನರು ಪ್ರತಿಭಟಿಸಿದರು. ರಾಮನಾಥ್ ಕೋವಿಂದ್ ಅವರನ್ನು ರಾಷ್ಟ್ರಪತಿ ಮಾಡುವುದನ್ನು ಇದೇ ಜನರು ವಿರೋಧಿಸಿದರು. ಬುಡಕಟ್ಟು ಮಹಿಳೆ ದ್ರೌಪದಿ ಮುರ್ಮು ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದನ್ನು ವಿರೋಧಿಸಿದರು ಎಂದು ಆರೋಪಿಸಿದರು.

  • ಮೋದಿ ಕುಟುಂಬದ ಬಗ್ಗೆ ಹೇಳಿಕೆ ನೀಡಿರುವ ಲಾಲು ವಿರುದ್ಧ ಬಿಜೆಪಿ ವಾಗ್ದಾಳಿ

    ಮೋದಿ ಕುಟುಂಬದ ಬಗ್ಗೆ ಹೇಳಿಕೆ ನೀಡಿರುವ ಲಾಲು ವಿರುದ್ಧ ಬಿಜೆಪಿ ವಾಗ್ದಾಳಿ

    – ʼಮೋದಿ ಕಾ ಪರಿವಾರ್ʼ ಎಂದ ಬಿಜೆಪಿ ದಿಗ್ಗಜರು

    ನವದೆಹಲಿ: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ ಬಳಿಕ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಬಿಜೆಪಿಯ ಉನ್ನತ ನಾಯಕರು ಇಂದು ತಮ್ಮ ಸೋಶಿಯಲ್‌ ಮೀಡಿಯಾ ಖಾತೆಗಳಲ್ಲಿ “ಮೋದಿ ಕಾ ಪರಿವಾರ್” ಅನ್ನು ಸೇರಿಸಿದ್ದಾರೆ.

    ಪಾಟ್ನಾದಲ್ಲಿ ನಡೆದಿದ್ದ ಸಮಾವೇಶದಲ್ಲಿ ಮೋದಿ (Narendra Modi) ಕುಟುಂಬದ ಬಗ್ಗೆ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್, ನಮ್ಮದು ಕುಟುಂಬ ರಾಜಕಾರಣ ಅಂತ ಮೋದಿ ಹೇಳುತ್ತಾರೆ. ಮೋದಿಗೆ ಸ್ವಂತ ಕುಟುಂಬ ಇಲ್ಲದಿದ್ದರೆ ನಾವೇನು ಮಾಡೋಕೆ ಸಾಧ್ಯ?, ಅವರಿಗೇಕೆ ಮಕ್ಕಳಿಲ್ಲ?. ರಾಮಮಂದಿರದ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುತ್ತಾರೆ. ಅವರು ನಿಜವಾದ ಹಿಂದೂ ಕೂಡ ಅಲ್ಲಾ. ಹಿಂದೂ ಸಂಪ್ರದಾಯದಲ್ಲಿ ತಂದೆ-ತಾಯಿ ಸತ್ತರೆ ತಲೆ ಕೂದಲು ಬೋಳಿಸಬೇಕು. ಆದರೆ ತಾಯಿ ಮೃತಪಟ್ಟಾಗ ಮೋದಿ ಆ ರೀತಿ ಮಾಡಲಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ಯಾರ ಅನುಮತಿ ಪಡೆದು ಪರೀಕ್ಷೆ ಮಾಡಿದ್ದಾರೆ- ಖಾಸಗಿ ಎಫ್‌ಎಸ್‌ಎಲ್‌ ವರದಿಗೆ ಪರಮೇಶ್ವರ್‌ ಗರಂ

    ಸದ್ಯ ಲಾಲು ಹೇಳಿಕೆಗೆ ಬಿಜೆಪಿ ತಿರುಗೇಟು ನೀಡುತ್ತಿದ್ದು, ಅಮಿತ್‌ ಶಾ, ನಡ್ಡಾ, ಪುಷ್ಕರ್ ಸಿಂಗ್ ಧಾಮಿ, ಮನ್ಸುಕ್ ಮಾಂಡವೀಯ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಸೇರಿದಂತೆ ಹಲವು ನಾಯಕರು ತಮ್ಮ ಹೆಸರ ಮುಂದೆ ʼಮೋದಿ ಪರಿವಾರ್ʼ ಎಂದು ಬರೆದುಕೊಂಡಿದ್ದಾರೆ. ಮೋದಿ ಕಾ ಪರಿವಾರ್ ಅಭಿಯಾನವು 2019 ರ ಸಾರ್ವತ್ರಿಕ ಚುನಾವಣೆಗೆ ಮುಂಚಿತವಾಗಿ “ಮೈನ್ ಭಿ ಚೌಕಿದಾರ್” (ನಾನೂ ಸಹ ಕಾವಲುಗಾರ) ಚಾಲನೆಯ ರೀತಿಯಲ್ಲಿದೆ.

    ಬಿಹಾರ ಉಪಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಅವರು ಲಾಲು ಹೇಳಿಕೆಯನ್ನು ಆಕ್ಷೇಪಾರ್ಹ ಮತ್ತು ಅಗೌರವ ಎಂದು ಬಣ್ಣಿಸಿದ್ದಾರೆ. ನಮ್ಮ ಪ್ರಧಾನಿ ವಿರುದ್ಧ ಲಾಲು ಪ್ರಸಾದ್ ಬಳಸಿರುವ ಭಾಷೆ ಅವರ ಮನಸ್ಥಿತಿಯನ್ನು ತೋರಿಸುತ್ತದೆ. ಆರ್‌ಜೆಡಿ ಸನಾತನ ಧರ್ಮದ ವಿರುದ್ಧ ಮತ್ತು ಶತಮಾನಗಳ ಹಳೆಯ ಸಂಪ್ರದಾಯವನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಅವರು ಆರೋಪಿಸಿದರು.

  • ಕಸ ಮತ್ತೆ ಡಸ್ಟ್‌ಬಿನ್‌ಗೆ ಹೋಗಿದೆ – ಪಕ್ಷ ತೊರೆದ ನಿತೀಶ್ ಕುಮಾರ್‌ಗೆ ಲಾಲೂ ಪುತ್ರಿ ಟಾಂಗ್

    ಕಸ ಮತ್ತೆ ಡಸ್ಟ್‌ಬಿನ್‌ಗೆ ಹೋಗಿದೆ – ಪಕ್ಷ ತೊರೆದ ನಿತೀಶ್ ಕುಮಾರ್‌ಗೆ ಲಾಲೂ ಪುತ್ರಿ ಟಾಂಗ್

    ಪಟ್ನಾ: ಮಹಾಘಟಬಂಧನ್ ಮೈತ್ರಿ ತೊರೆದು ಹೋಗಿರುವ ನಿತೀಶ್ ಕುಮಾರ್  (Nitish Kumar) ವಿರುದ್ಧ ಲಾಲೂ ಪ್ರಸಾದ್ (Lalu Prasad Yadav) ಅವರ ಪುತ್ರಿ ಹಾಗೂ ಆರ್‌ಜೆಡಿ ನಾಯಕಿ ರೋಹಿಣಿ ಆಚಾರ್ಯ (Rohini Acharya) ಆಕ್ರೋಶ ಹೊರಹಾಕಿದ್ದಾರೆ. ನಿತೀಶ್ ಕುಮಾರ್ ಅವರನ್ನು ಕಸಕ್ಕೆ ಹೋಲಿಸಿ ಅವರು ಟ್ವೀಟ್ ಮಾಡಿದ್ದಾರೆ. `ಕಸವು ಮತ್ತೆ ಡಸ್ಟ್‌ಬಿನ್‌ಗೆ ಹೋಗಿದೆ. ಗಬ್ಬು ನಾರುವ ಕಸವನ್ನು ಪಡೆದ ಡಸ್ಟ್‌ಬಿನ್‌ಗೆ ಅಭಿನಂದನೆಗಳು’ ಎಂದು ಅವರು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

    ಬಿಹಾರದಲ್ಲಿ (Bihar) ಮಹಾಘಟಬಂಧನ್ ಮೈತ್ರಿಯೊಂದಿಗೆ ಸಂಬಂಧವನ್ನು ಕಡಿದುಕೊಂಡು ನಿತೀಶ್ ಕುಮಾರ್ ಆರ್‌ಜೆಡಿ ತ್ಯಜಿಸುತ್ತಿದ್ದಂತೆ ರೋಹಿಣಿ ಅವರು ಈ ಪೋಸ್ಟ್ ಮಾಡಿದ್ದಾರೆ. ಇದೀಗ ರಾಜ್ಯದಲ್ಲಿ ಬಿಜೆಪಿ-ಜೆಡಿ(ಯು) ಸರ್ಕಾರದ ಮುಖ್ಯಮಂತ್ರಿಯಾಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಲು ಅವರು ಸಜ್ಜಾಗಿದ್ದಾರೆ. ಈ ಮೂಲಕ ಅವರು 9ನೇ ಬಾರಿಗೆ ಮುಖ್ಯಮಂತ್ರಿಯಾಗಲಿದ್ದಾರೆ. ಇದನ್ನೂ ಓದಿ: ಇಂದು ಸಂಜೆ 5 ಕ್ಕೆ ಬಿಹಾರ ಸಿಎಂ ಆಗಿ ನಿತೀಶ್‌ ಕುಮಾರ್‌ ಪ್ರಮಾಣ ವಚನ – BJPಯ ಇಬ್ಬರು ಡಿಸಿಎಂ

    ಲಾಲೂ ಪ್ರಸಾದ್ ಅವರ ಹಳೆಯ ಪೋಸ್ಟ್‌ನ್ನು ಸಹ ರೋಹಿಣಿಯವರು ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನಲ್ಲಿ `ನಿತೀಶ್ ಒಂದು ಹಾವು, ಹಾವು ಪೊರೆ ಕಳಚಿದಂತೆ, ಅವರು ಸಹ ಎರಡು ವರ್ಷಕ್ಕೊಮ್ಮೆ ಪೊರೆ ಕಳಚುತ್ತಾರೆ. ಈ ಬಗ್ಗೆ ಯಾರಿಗಾದರೂ ಅನುಮಾನವಿದೆಯೇ? ಎಂದು ಬರೆಯಲಾಗಿದೆ.

    ಬಿಹಾರ ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಬಿಜೆಪಿ ಶಾಸಕರ ಬೆಂಬಲದ ಪತ್ರವನ್ನು ರಾಜ್ಯಪಾಲರಿಗೆ ನೀಡಿದ್ದಾರೆ. ಇಂದೇ ಸಂಜೆ 5 ಗಂಟೆಗೆ ಬಿಹಾರ ಸಿಎಂ ಆಗಿ ಮತ್ತೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಪ್ರಮಾಣ ವಚನ ಸಮಾರಂಭದಲ್ಲಿ ಬಿಜೆಪಿಯ ಇಬ್ಬರು ಉಪಮುಖ್ಯಮಂತ್ರಿಗಳೊಂದಿಗೆ ನಿತೀಶ್ ಕುಮಾರ್ 9ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಡಿಸಿಎಂ ಆಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ ನಂತರ ರಾಜಕೀಯ ಪ್ರಕ್ಷುಬ್ಧತೆಯ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿದ ನಿತೀಶ್ ಕುಮಾರ್, ಒಂದೂವರೆ ವರ್ಷಗಳ ಹಿಂದೆ ರಚಿಸಲಾದ `ಮಹಾಘಟಬಂಧನ್’ (ಮಹಾಮೈತ್ರಿಕೂಟ) ಪರಿಸ್ಥಿತಿಯು ಉತ್ತಮವಾಗಿಲ್ಲ ಎಂದು ಹೇಳಿದ್ದರು. ಇದನ್ನೂ ಓದಿ: ರಾಷ್ಟ್ರ ಧ್ವಜ ಹಾರಿಸೋ ಬದಲು ಹನುಮ ಧ್ವಜ ಹಾರಿಸಿದ್ದು ಸರಿಯಲ್ಲ – ಸಿದ್ದರಾಮಯ್ಯ

  • ರಾಮ ನನ್ನ ಕನಸಲ್ಲಿ ಬಂದು ಅಯೋಧ್ಯೆಗೆ ಹೋಗಲ್ಲವೆಂದ: ತೇಜ್‌ ಪ್ರತಾಪ್‌ ಯಾದವ್

    ರಾಮ ನನ್ನ ಕನಸಲ್ಲಿ ಬಂದು ಅಯೋಧ್ಯೆಗೆ ಹೋಗಲ್ಲವೆಂದ: ತೇಜ್‌ ಪ್ರತಾಪ್‌ ಯಾದವ್

    ಪಾಟ್ನಾ: ಬಿಹಾರ ಸಚಿವ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ (Tej Pratap Yadav) ಅವರು ಅಯೋಧ್ಯೆಯ ರಾಮ ಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮಕ್ಕೂ (Pran Prathistha Ceremony)  ಮುನ್ನ ಹೇಳಿಕೆಯೊಂದನ್ನು ನೀಡಿ ಭಾರೀ ಚರ್ಚೆಗೆ ಗ್ರಾಸವಾಗಿದ್ದಾರೆ.

    ಬಿಹಾರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಶ್ರೀರಾಮನು ತನ್ನ ಕನಸಿನಲ್ಲಿ ಬಂದಿದ್ದಾನೆ. ಜನವರಿ 22 ರಂದು ಅಯೋಧ್ಯೆಗೆ ಹೋಗುವುದಿಲ್ಲ ಎಂದು ನನ್ನ ಬಳಿ ಹೇಳಿದ ಎಂದು ತೇಜ್‌ ಪ್ರತಾಪ್‌ ಹೇಳಿದ್ದಾರೆ. ಇದೀಗ ಇವರ ಹೇಳಿಕೆಯ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ತೇಜ್‌ ಪ್ರತಾಪ್‌ ವಿರುದ್ಧ ನೆಟ್ಟಿಗರು ಕಿಡಿಕಾರಿದ್ದಾರೆ.ಇದನ್ನೂ ಓದಿ: 60 ವರ್ಷಗಳಿಂದ ಮಾಡಿದ ಅನ್ಯಾಯಕ್ಕೆ ಕಾಂಗ್ರೆಸ್ಸಿಗರು ಈಗ ನ್ಯಾಯ ಕೇಳಲು ಹೊರಟಿದ್ದಾರೆ: ಮುನಿಸ್ವಾಮಿ ವ್ಯಂಗ್ಯ

    ವೀಡಿಯೋದಲ್ಲೇನಿದೆ..?: ಅಯೋಧ್ಯೆಯಲ್ಲಿ ರಾಮಮಂದಿರದ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮದ ಬಗ್ಗೆ ಮಾತನಾಡುತ್ತಾ ಬಿಜೆಪಿ (BJP) ಪಕ್ಷವನ್ನು ಗೇಲಿ ಮಾಡಿದ್ದಾರೆ. ಚುನಾವಣೆಗಳು ಮುಗಿದ ನಂತರ ರಾಮನ ಮಹತ್ವವು ಮಸುಕಾಗುತ್ತದೆ ಎಂದರು. ಮಾತು ಮುಂದುವರಿಸಿ, ಶ್ರೀರಾಮ ಜನವರಿ 22 ರಂದು ಮಾತ್ರ ಅಯೋಧ್ಯೆಗೆ ಬರುವುದು ಅಗತ್ಯವೇ?, ಅವನು ಬರುವುದಿಲ್ಲ. ಯಾಕೆಂದರೆ ಈ ಕುರಿತು ನಾನು ಕನಸು ಕಂಡಿದ್ದೇನೆ. ಭಗವಾನ್ ರಾಮ ನನ್ನ ಕನಸಲ್ಲಿ ಬಂದು ಬಿಜೆಪಿಯವರು ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದ. ಅಲ್ಲದೆ ಆ ದಿನ ನಾನು ಅಯೋಧ್ಯೆಗೆ ಬರುವುದಿಲ್ಲ ಎಂದು ಕೂಡ ರಾಮ ಹೇಳಿದ ಎಂದು ತಿಳಿಸಿದ್ದಾರೆ.

    ತೇಜ್ ಪ್ರತಾಪ್ ಯಾದವ್ ಅವರ ಕನಸುಗಳು ಈ ಹಿಂದೆಯೂ ಚರ್ಚೆಯಲ್ಲಿವೆ. ಕಳೆದ ವರ್ಷವೂ ಇಂಥದ್ದೇ ಹೇಳಿಕೆ ನೀಡಿದ್ದರು. ಮುಲಾಯಂ ಸಿಂಗ್ ಯಾದವ್ ಕನಸಿನಲ್ಲಿ ಬಂದಿದ್ದಾರೆ. ಮುಲಾಯಂ ಸಿಂಗ್ ಜೊತೆ ಸಾಕಷ್ಟು ಮಾತನಾಡಿದ್ದಲ್ಲದೇ ಅವರು ನನ್ನನ್ನು ಅಪ್ಪಿಕೊಂಡರು. ಜೊತೆಗೆ ಕನಸಿನಲ್ಲಿ ಮುಲಾಯಂ ಸಿಂಗ್ ಜೊತೆ ಸೈಕಲ್ ಓಡಿಸಿದ್ದೇನೆ ಎಂದು ಹೇಳಿದ್ದರು. ಇದು ನನ್ನನ್ನು ಸೈಕಲ್‌ನಲ್ಲಿ ಕಚೇರಿಗೆ ಹೋಗಲು ಪ್ರೇರೇಪಿಸಿತು ಎಂದು ಹೇಳುತ್ತಾ ಕಳೆದ ವರ್ಷ ಸೈಕಲ್‌ನಲ್ಲಿಯೇ ಕಚೇರಿಗೆ ಹೋಗಿದ್ದರು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗಿತ್ತು.

  • ರೈಲ್ವೆಯಲ್ಲಿ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ – ಲಾಲು ಕುಟುಂಬಕ್ಕೆ ಜಾಮೀನು

    ರೈಲ್ವೆಯಲ್ಲಿ ಉದ್ಯೋಗಕ್ಕಾಗಿ ಭೂಮಿ ಹಗರಣ ಪ್ರಕರಣ – ಲಾಲು ಕುಟುಂಬಕ್ಕೆ ಜಾಮೀನು

    ನವದೆಹಲಿ: ಭಾರತೀಯ ರೈಲ್ವೆಯಲ್ಲಿ ಉದ್ಯೋಗಕ್ಕಾಗಿ ಭೂಮಿ ನೀಡುವ ಹರಗಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಆರೋಪಿಗಳಾದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ (Lalu Prasad Yadav), ರಾಬ್ರಿ ದೇವಿ, ಬಿಹಾರ ಡಿಸಿಎಂ ತೇಜಸ್ವಿ ಯಾದವ್ ಮತ್ತು ಸಂಸದೆ ಮೀಸಾ ಭಾರತಿಗೆ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ ಜಾಮೀನು (Bail) ನೀಡಿದೆ.

    ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಸಿಬಿಐ ನ್ಯಾಯಾಧೀಶೆ ಗೀತಾಂಜಲಿ ಗೋಯೆಲ್ ಅವರು ಆದೇಶ ಹೊರಡಿಸಿದ್ದಾರೆ. ಜುಲೈ 3 ರಂದು ಸಿಬಿಐ ಹೊಸ ಚಾರ್ಜ್ಶೀಟ್ ಸಲ್ಲಿಸಿದ ಬಳಿಕ ನ್ಯಾಯಾಲಯವು ಸೆಪ್ಟೆಂಬರ್ 22 ರಂದು ತೇಜಸ್ವಿ ಯಾದವ್, ಲಾಲು ಯಾದವ್, ರಾಬ್ರಿ ದೇವಿ ಮತ್ತು ಇತರ 14 ಆರೋಪಿಗಳಿಗೆ ಸಮನ್ಸ್ ಜಾರಿ ಮಾಡಿತ್ತು.

    ಲಾಲು ಪ್ರಸಾದ್ ಅವರು 2004 ರಿಂದ 2009 ರವರೆಗೆ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ರೈಲ್ವೆಯಲ್ಲಿ ನೇಮಕಾತಿಗಳನ್ನು ಮಾಡಲು ಬದಲಿಯಾಗಿ ಅವರ ಕುಟುಂಬಕ್ಕೆ ಆಕಾಂಕ್ಷಿಗಳು ಭೂಮಿ ನೀಡಿದ್ದರು ಎಂದು ಆರೋಪಿಸಲಾಗಿದೆ. ಕೇಂದ್ರೀಯ ತನಿಖಾ ದಳ (CBI) ರೈಲ್ವೆಯಲ್ಲಿ ಮಾಡಿದ ನೇಮಕಾತಿಗಳು ಭಾರತೀಯ ರೈಲ್ವೆ ಸ್ಥಾಪಿಸಿದ ಮಾನದಂಡಗಳು ಮತ್ತು ಮಾರ್ಗಸೂಚಿಗಳಿಗೆ ಅನುಗುಣವಾಗಿಲ್ಲ ಎಂದು ಹೇಳಿಕೊಂಡಿದೆ. ಇದನ್ನೂ ಓದಿ: ಮಹಿಷಾ ದಸರಾ ದಿನವೇ ಚಾಮುಂಡಿ ಬೆಟ್ಟಕ್ಕೆ ಬಿಜೆಪಿಯಿಂದ ಜಾಥಾ – 5 ಸಾವಿರ ಮಂದಿ ಭಾಗಿ

    2022 ರ ಮೇ 18 ರಂದು ಸಿಬಿಐ ಪ್ರಕರಣವನ್ನು ದಾಖಲಿಸಿಕೊಂಡು, 2022 ರ ಅಕ್ಟೋಬರ್ 7 ರಂದು ಚಾರ್ಜ್ಶೀಟ್ ಸಲ್ಲಿಸಿತ್ತು. 2023 ರ ಫೆಬ್ರವರಿ 27 ರಂದು ನ್ಯಾಯಾಲಯವು ಮೊದಲ ಚಾರ್ಜ್ಶೀಟ್ ಗಮನಹರಿಸಿತು. ನಂತರ ಅದು ಮಾರ್ಚ್ 15 ರೊಳಗೆ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತು. ಯಾವುದೇ ಬಂಧನವಿಲ್ಲದೆ ಆರೋಪಪಟ್ಟಿಯನ್ನು ಸಲ್ಲಿಸಲಾಗಿದೆ. ಇದನ್ನೂ ಓದಿ: ಸಿಕ್ಕಿಂನಲ್ಲಿ ಮೇಘಸ್ಫೋಟ – ಹಠಾತ್ ಪ್ರವಾಹದಲ್ಲಿ 23 ಸೈನಿಕರು ನಾಪತ್ತೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂಡಿಯಾ, ಭಾರತದ ನಡುವಿನ ವ್ಯತ್ಯಾಸ ವಿವರಿಸಿದ್ದ ಲಾಲೂ ಹಳೆಯ ವೀಡಿಯೋ ವೈರಲ್

    ಇಂಡಿಯಾ, ಭಾರತದ ನಡುವಿನ ವ್ಯತ್ಯಾಸ ವಿವರಿಸಿದ್ದ ಲಾಲೂ ಹಳೆಯ ವೀಡಿಯೋ ವೈರಲ್

    ಪಾಟ್ನಾ: ದೇಶದಲ್ಲಿ ಸದ್ಯ ಮರುನಾಮಕರಣದ್ದೇ ಬಹುಚರ್ಚಿತ ವಿಷಯವಾಗಿದೆ. ‘ಇಂಡಿಯಾ’ ಎಂಬ ಹೆಸರನ್ನು ‘ಭಾರತ್’ ಎಂಬುದಾಗಿ ಬದಲಾಯಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ಪರ- ವಿರೋಧ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಆರ್ ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರ ಹಳೆಯ ವೀಡಿಯೋ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

    ಹೌದು. ಲಾಲೂ ಅವರು ಈ ಹಿಂದೆ ಇಂಡಿಯಾ (India) ಹಾಗೂ ಭಾರತ್ (Bharat) ನಡುವಿನ ವ್ಯತ್ಯಾಸದ ಕುರಿತು ವಿವರಿಸಿದ್ದರು. ಸದ್ಯ ಹಲವು ವರ್ಷಗಳ ಹಿಂದಿನ ಲಾಲೂ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ. ಇದನ್ನೂ ಓದಿ: ದೇಶಕ್ಕೆ ಭಾರತ ಎಂಬ ಹೆಸರೇಕೆ ಬಂತು? ಇಂಡಿಯಾ ಹೆಸರು ಹೇಗೆ ಬಂತು?

    ವೀಡಿಯೋದಲ್ಲೇನಿದೆ..?: ಬಬೂಲ್ ಕಡ್ಡಿಯಲ್ಲಿ ಹಲ್ಲು ಸ್ವಚ್ಛಗೊಳಿಸುತ್ತಾ, ಇದು ನಮ್ಮ ಊರಿಗೆ ಬಂದರೆ ಮಾತ್ರ ಸಿಗಲಿದೆ, ದೆಹಲಿಯಲ್ಲಿ ಸಿಗದು. ಯಾಕೆಂದರೆ ದೆಹಲಿ ಇಂಡಿಯಾ ಅಲ್ವಾ, ನಮ್ಮದು ಭಾರತ. ಹೀಗಾಗಿ ಇದು ಇಲ್ಲಿ ಮಾತ್ರ ಇದು ಸಿಗುತ್ತದೆ ಎಂದಿರುವುದು ಈಗ ಚರ್ಚೆಗೆ ಮತ್ತಷ್ಟು ಪುಷ್ಠಿ ನೀಡಿದೆ.

    ಜಿ20 ಶೃಂಗದಲ್ಲಿ ಪಾಲ್ಗೊಳ್ಳಲಿರುವ ವಿಶ್ವದ ಪ್ರಮುಖ ನಾಯಕರಿಗೆ ರಾಷ್ಟ್ರಪತಿ ದೌಪದಿ ಮುರ್ಮು ಅವರು ಭೋಜನಕೂಟಕ್ಕೆ ಆಹ್ವಾನಿಸಿದ್ದಾರೆ. ಅವರ ಆಹ್ವಾನ ಪತ್ರಿಕೆಯಲ್ಲಿ ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ನಮೂದಿಸಿರುವುದು ಆಡಳಿತ ಮತ್ತು ವಿರೋಧ ಪಕ್ಷಗಳ ನಾಯಕರ ವಾಕ್ ಸಮರಕ್ಕೆ ಕಾರಣವಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಭಾನುವಾರದ ಬಾಡೂಟಕ್ಕೆ ರಾಹುಲ್ ಗಾಂಧಿ ಸ್ಪೆಷಲ್ ಚಂಪಾರಣ್ ಮಟನ್ ರೆಸಿಪಿ

    ಭಾನುವಾರದ ಬಾಡೂಟಕ್ಕೆ ರಾಹುಲ್ ಗಾಂಧಿ ಸ್ಪೆಷಲ್ ಚಂಪಾರಣ್ ಮಟನ್ ರೆಸಿಪಿ

    ನವದೆಹಲಿ: ರಾಜಕೀಯ ಜೀವನದಲ್ಲಿ ಸದಾ ಬ್ಯುಸಿಯಾಗಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವೈಯಕ್ತಿಕ ಜೀವನವನ್ನು ಅಷ್ಟೇ ಚೆನ್ನಾಗಿ ಎಂಜಾಯ್ ಮಾಡುತ್ತಾರೆ. ಬೈಕ್ ರೇಡ್, ಸ್ಟ್ರೀಟ್ ವಾಕ್, ಫ್ರೆಂಡ್ಸ್ ಪಾರ್ಟಿ, ಸಂಡೇ ವಿಸಿಟ್ ಅಂತಾ ಎಂಜಾಯ್ ಮಾಡ್ತಿರ್ತಾರೆ. ಇದೀಗ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರೊಂದಿಗೆ ಸೇರಿ ಸ್ಪೆಷಲ್ ಚಂಪಾರಣ್ ಮಟನ್ (Champaran Mutton) ಅಡುಗೆ ಮಾಡಿ ಉಣಬಡಿಸಿದ್ದಾರೆ.

    ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಖತ್ ಸದ್ದು ಮಾಡುತ್ತಿದೆ. 6.44 ನಿಮಿಷಗಳ ಈ ವೀಡಿಯೋದಲ್ಲಿ ಲಾಲು ಪ್ರಸಾದ್ ಯಾದವ್ ಅವರೊಂದಿಗೆ ರಾಹುಲ್ ಗಾಂಧಿಯೂ ವಿಶೇಷ ಖಾದ್ಯಗಳನ್ನ ತಯಾರಿಸಿ ಉಣಬಡಿಸಿದ್ದಾರೆ. ಈ ವೀಡಿಯೋ ಸದ್ದು ಮಾಡುತ್ತಿದ್ದಂತೆ ನೆಟ್ಟಿಗರು ಇದು ಭಾನುವಾರದ ಬಾಡೂಟಕ್ಕೆ ರಾಹುಲ್ ಗಾಂಧಿ ಅವರ ಸ್ಪೆಷಲ್ ರೆಸಿಪಿ ಎಂದು ಹಾಸ್ಯ ಮಾಡಿದ್ದಾರೆ. ಇದನ್ನೂ ಓದಿ: ಗರ್ಭಿಣಿಗೆ ಥಳಿಸಿ ಬೆತ್ತಲೆ ಮೆರವಣಿಗೆ ಮಾಡಿದ ಪತಿ – ರಾಜಸ್ಥಾನದಲ್ಲಿ ಮಹಿಳೆಯರ ಸುರಕ್ಷತೆ ನಿರ್ಲಕ್ಷ್ಯ ಎಂದು ನಡ್ಡಾ ಟೀಕೆ

    ಇನ್ನೂ ಈ ವೀಡಿಯೋ ಕುರಿತು ಪ್ರತಿಕ್ರಿಯಿಸಿರುವ ರಾಗಾ, ನಾನು ಯುರೋಪ್‌ನಲ್ಲಿ ಕೆಲಸ ಮಾಡುತ್ತಿದ್ದಾಗ ಒಬ್ಬಂಟಿಯಾಗಿರುತ್ತಿದ್ದೆ. ಹಾಗಾಗಿ ಅಡುಗೆ ಕಲಿಯಬೇಕಾದ ಅನಿವಾರ್ಯತೆ ಇತ್ತು. ನನಗೆ ಅಡುಗೆ ಮಾಡುವುದು ಗೊತ್ತಿದೆ. ಆದ್ರೆ ಹೆಚ್ಚು ನಿಪುಣನಲ್ಲ. ಲಾಲು ಯಾದವ್ ಜೀ ಅವರು ಬೆಸ್ಟ್ ಕುಕ್, ಉತ್ತಮವಾಗಿ ಅಡುಗೆ ಮಾಡ್ತಾರೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ: ಎಂ.ಕೆ ಸ್ಟಾಲಿನ್ ಪುತ್ರನಿಂದ ವಿವಾದಾತ್ಮಕ ಹೇಳಿಕೆ

    ನೀವು ಯಾವಾಗ ಅಡುಗೆ ಕಲಿತಿರಿ ಎಂಬ ರಾಹುಲ್ ಗಾಂಧಿ ಪ್ರಶ್ನೆಗೆ ಉತ್ತರಿಸಿದ ಲಾಲು ಪ್ರಸಾದ್ ಯಾದವ್, ನಾನು 6 ಅಥವಾ 7ನೇ ತರಗತಿಯಲ್ಲಿದ್ದೆ. ಆಗ ನನ್ನ ಸಹೋದರ ಪಾಟ್ನಾದಲ್ಲಿ ಕೆಲಸ ಮಾಡಿಕೊಂಡಿದ್ದ, ನನ್ನನ್ನೂ ಕರೆದಿದ್ದ. ನಾನು ಅವನನ್ನು ಭೇಟಿ ಮಾಡಲು ಹೋದಾಗ ಅಲ್ಲಿ ನನಗೆ ಅಡುಗೆ ಮಾಡುವುದು, ಮಸಾಲೆ ಪುಡಿ ಮಾಡುವುದು, ಪಾತ್ರೆ ತೊಳೆಯುವುದು ಎಲ್ಲವನ್ನೂ ಕಲಿಸಿಕೊಟ್ಟ ಎಂದು ಹೇಳಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಅನಾರೋಗ್ಯದಿಂದ ಜಾಮೀನು ಪಡೆದಿದ್ದ ಲಾಲೂ ಪ್ರಸಾದ್‌ ಯಾದವ್‌ ಬ್ಯಾಡ್ಮಿಂಟನ್‌ ಆಟದಲ್ಲಿ ಬ್ಯುಸಿ

    ಅನಾರೋಗ್ಯದಿಂದ ಜಾಮೀನು ಪಡೆದಿದ್ದ ಲಾಲೂ ಪ್ರಸಾದ್‌ ಯಾದವ್‌ ಬ್ಯಾಡ್ಮಿಂಟನ್‌ ಆಟದಲ್ಲಿ ಬ್ಯುಸಿ

    – ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ ಮೊರೆ ಹೋದ ಸಿಬಿಐ

    ಪಾಟ್ನಾ: ಮೇವು ಹಗರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿದ್ದ ರಾಷ್ಟ್ರೀಯ ಜನತಾ ದಳ (RJD) ನಾಯಕ ಲಾಲೂ ಪ್ರಸಾದ್‌ ಯಾದವ್‌ (Lalu Prasad Yadav) ಅನಾರೋಗ್ಯ ಕಾರಣಕ್ಕಾಗಿ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು, ಆದರೀಗ ಬ್ಯಾಡ್ಮಿಂಟನ್‌ (Badminton) ಆಡೋದ್ರಲ್ಲಿ ಅವರು ಬ್ಯುಸಿ ಆಗಿದ್ದಾರೆ.

    ಅನಾರೋಗ್ಯದ ಕಾರಣಕ್ಕಾಗಿ ಜಾರ್ಖಂಡ್ ಹೈಕೋರ್ಟ್ (Jharkhand High Court) ಲಾಲೂ ಪ್ರಸಾದ್‌ ಯಾದವ್‌ ಅವರಿಗೆ ಜಾಮೀನು ನೀಡಲಾಗಿತ್ತು. ಆದ್ರೆ ಜಾಮೀನು ಪಡೆದು ಜೈಲಿನಿಂದ ಹೊರಬಂದ ಲಾಲೂ ಪ್ರಸಾದ್ ಯಾದವ್ ಬ್ಯಾಡ್ಮಿಂಟನ್ ಆಟ ಆಡದಲ್ಲಿ ಬ್ಯುಸಿಯಾಗಿದ್ದಾರೆ ಎಂದು ಹೇಳಿರುವ ಸಿಬಿಐ (CBI), ಲಾಲೂ ಯಾದವ್ ಅವರ ಜಾಮೀನು ರದ್ದು ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಸಲ್ಲಿಸಿದೆ. ಆದ್ರೆ ಲಾಲೂ ಪ್ರಸಾದ್ ಯಾದವ್ ಪರ ವಕೀಲರು, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದು, ಅವರ ಜಾಮೀನು ರದ್ದು ಮಾಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ’ತುಕ್ರ-ತನಿಯ’ ಕಥೆ ಹೇಳ್ತಿದ್ದಾರೆ ರಾಘು ಶಿವಮೊಗ್ಗ: ಟೈಟಲ್ ಲಾಂಚ್ ಮಾಡಿದ ದುನಿಯಾ ವಿಜಯ್

    ಮೇವು ಹಗರಣ ಸಂಬಂಧ ಬಿಹಾರದ ದೊರಾಂಡಾ ಖಜಾನೆಯಲ್ಲಿ ಇದ್ದ ಹಣವನ್ನು ದುರ್ಬಳಕೆ ಮಾಡಿಕೊಂಡ ಆರೋಪ ಸಾಬೀತಾಗಿದ್ದ ಹಿನ್ನೆಲೆಯಲ್ಲಿ ಲಾಲೂ ಪ್ರಸಾದ್ ಯಾದವ್ ಅವರಿಗೆ ನ್ಯಾಯಾಲಯ 5 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿತ್ತು. ಆ ಬಳಿಕ ಆರೋಗ್ಯ ಸಂಬಂಧಿ ಕಾರಣಗಳಿಂದಾಗಿ ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ಸಿಕ್ಕಿತ್ತು. ಜಾಮೀನು ಪಡೆದು ಹೊರ ಬಂದ ಬಳಿಕ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ ಎಂದಿರುವ ಸಿಬಿಐ ಪರ ವಕೀಲರು, ಲಾಲೂ ಅವರ ಜಾಮೀನು ಏಕೆ ರದ್ದು ಮಾಡಬಾರದು? ಎಂದು ಸುಪ್ರೀಂ ಕೋರ್ಟ್‌ಗೆ ಕೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಹೊಸ ʻಎಲಿವೇಟೆಡ್ ವಾಕ್‌ವೇʼ ಆರಂಭ

    ಸಿಬಿಐ ಪರವಾಗಿ ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್.ವಿ ರಾಜು, ಲಾಲೂ ಪ್ರಸಾದ್ ಯಾದವ್ ಅವರಿಗೆ ಜಾಮೀನು ನೀಡಿದ ಜಾರ್ಖಂಡ್ ಹೈಕೋರ್ಟ್‌ ಆದೇಶವು ದೋಷಪೂರಿತ ಹಾಗೂ ಕಾನೂನಾತ್ಮಕವಾಗಿ ಕೆಟ್ಟದ್ದು ಎಂದು ವಾದಿಸಿದ್ದಾರೆ. ಸಿಬಿಐನ ಈ ಮನವಿ ವಿರುದ್ಧ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್ ಸಿಬಲ್, ಇತ್ತೀಚೆಗಷ್ಟೇ ಲಾಲೂ ಪ್ರಸಾದ್ ಯಾದವ್ ಅವರು ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಇದನ್ನು ಪರಿಗಣಿಸಿ ಜಾಮೀನು ಮುಂದುವರೆಸಿ ಎಂದು ಮನವಿ ಮಾಡಿದರು. ಅಷ್ಟೇ ಅಲ್ಲ, ಲಾಲೂ ಪ್ರಸಾದ್ ಯಾದವ್ ಅವರು ಈಗಾಗಲೇ 42 ತಿಂಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದಾರೆ ಎಂದೂ ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ. ಇದನ್ನೂ ಓದಿ: Chandrayaan-3 ಲ್ಯಾಂಡರ್‌ನಿಂದ ಚಂದ್ರನ ಮೇಲೆ ಇಳಿಯುತ್ತಿರುವ ರೋವರ್ – ವೀಡಿಯೋ ರಿಲೀಸ್ ಮಾಡಿದ ಇಸ್ರೋ

    ಇದಕ್ಕೆ ತಿರುಗೇಟು ನೀಡಿದ ಸಿಬಿಐ ಪರ ವಕೀಲರು, ಲಾಲೂ ಪ್ರಸಾದ್ ಯಾದವ್ ಅವರು 3.5 ವರ್ಷ ಜೈಲಿನಲ್ಲಿ ಇದ್ದರು. ಆದರೆ ಅವರಿಗೆ ವಿಧಿಸಿರುವ 5 ವರ್ಷಗಳ ಜೈಲು ಶಿಕ್ಷೆ ನಿರಂತರವಾಗಿ ಇರಬೇಕು. ಜೈಲಿನಿಂದ ಆರೋಗ್ಯ ಸಮಸ್ಯೆ ಕಾರಣಕ್ಕೆ ಹೊರ ಬಂದಿರುವ ಲಾಲೂ ಯಾದವ್ ಬ್ಯಾಡ್ಮಿಂಟನ್ ಆಡುತ್ತಿದ್ದಾರೆ. ಇದನ್ನು ಗಮನಿಸಿದರೆ ನ್ಯಾಯಾಲಯ ಜಾಮೀನು ನೀಡಿರುವ ಆದೇಶವು ದೋಷಪೂರಿತ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು. ಬಳಿಕ ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳಾದ ಎ. ಎಸ್. ಬೋಪಣ್ಣ ಹಾಗೂ ಎಂ. ಎಂ. ಸುಂದರೇಶ್ ಅವರಿದ್ದ ಪೀಠವು ಪ್ರಕರಣದ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿದರು.

    ಕೆಲ ದಿನಗಳ ಹಿಂದೆಯಷ್ಟೇ ಲಾಲೂ ಪ್ರಸಾದ್‌ ಯಾದವ್‌ ಅವರ ಮನೆ ಮೇಲೆ ದಾಳಿ ನಡೆದ್ದ ಜಾರಿ ನಿರ್ದೇಶನಾಲಯ ಲಾಲೂ ಪ್ರಸಾದ್‌ ಹಾಗೂ ಅವರ ಕುಟುಂಬಸ್ಥರಿಗೆ ಸೇರಿದ್ದ 6 ಕೋಟಿ ರೂ. ಮೌಲ್ಯದ ಆಸ್ತಿಯನ್ನ ಮುಟ್ಟುಗೋಲುಹಾಕಿಕೊಂಡಿತ್ತು.

    ಏನಿದು ಮೇವು ಹಗರಣ?
    1992 ರಿಂದ 1995ರ ಅವಧಿಯಲ್ಲಿ ಮೇವು ಹಗರಣ ನಡೆದಿತ್ತು. 950 ಕೋಟಿ ರೂ. ಮೊತ್ತದ ಭಾರೀ ಹಗರಣ ಇದಾಗಿದ್ದು, ಈ ಹಗರಣದಲ್ಲಿ ಲಾಲೂ ಪ್ರಸಾದ್‌ ಯಾದವ್‌ ಅವರನ್ನ ದೋಷಿ ಎಂದು ಪರಿಗಣಿಸಿ 5 ವರ್ಷಗಳ ಕಾಲ ಶಿಕ್ಷೆ ವಿಧಿಸಲಾಗಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಡಿಯಿಂದ ಲಾಲು ಪ್ರಸಾದ್ ಯಾದವ್ ಕುಟುಂಬದ ಆಸ್ತಿ ಜಪ್ತಿ

    ಇಡಿಯಿಂದ ಲಾಲು ಪ್ರಸಾದ್ ಯಾದವ್ ಕುಟುಂಬದ ಆಸ್ತಿ ಜಪ್ತಿ

    ಪಾಟ್ನಾ: ರಾಷ್ಟ್ರೀಯ ಜನತಾ ದಳ (RJD) ಹಿರಿಯ ನಾಯಕ ಲಾಲು ಪ್ರಸಾದ್ ಯಾದವ್ (Lalu Prasad Yadav) ಮತ್ತು ಅವರ ಕುಟುಂಬದ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿ ಮಾಡಿದೆ.

    ನ್ಯೂ ಫ್ರೆಂಡ್ಸ್ ಕಾಲೋನಿಯಲ್ಲಿರುವ ವಸತಿ ಗೃಹ ಸೇರಿದಂತೆ ಯಾದವ್ ಕುಟುಂಬದ ದೆಹಲಿ ಮತ್ತು ಪಾಟ್ನಾದ ಒಟ್ಟು 6 ಕೊಟಿ ಆಸ್ತಿಯನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಯುಪಿಎ-1 ಸರ್ಕಾರದಲ್ಲಿ ಲಾಲು ಪ್ರಸಾದ್ ರೈಲ್ವೇ ಸಚಿವರಾಗಿದ್ದಾಗ ನಡೆದ ಉದ್ಯೋಗ ಹಗರಣಕ್ಕೆ ಸಂಬಂಧಿಸಿ ಈ ದಾಳಿ ನಡೆದಿದೆ ಎನ್ನಲಾಗಿದೆ. ಇದನ್ನೂ ಓದಿ: ಲೋಕಸಭಾ ಚುನಾವಣೆ ಬಗ್ಗೆ ದೆಹಲಿಯಲ್ಲಿ ಸಭೆ: ಡಿ.ಕೆ ಶಿವಕುಮಾರ್

    ಲಾಲು ಪ್ರಸಾದ್ ಯಾದವ್ ಅವರ ಪತ್ನಿ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್, ಪುತ್ರಿಯರಾದ ಮಿಸಾ ಭಾರತಿ (ರಾಜ್ಯಸಭೆಯಲ್ಲಿ ಆರ್‍ಜೆಡಿ ಸಂಸದ), ಚಂದಾ ಯಾದವ್ ಮತ್ತು ರಾಗಿಣಿ ಯಾದವ್ ಅವರ ಹೇಳಿಕೆಗಳನ್ನು ಇಡಿ ದಾಖಲಿಸಿದೆ ಎಂದು ಸಂಸ್ಥೆ ವರದಿ ಹೇಳಿದೆ.

    ಲಾಲು ಪ್ರಸಾದ್ ಯಾದವ್ ಅವರು ಭಾನುವಾರ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲುತ್ತೆ. ಆ ನಂತರ ನರೇಂದ್ರ ಮೋದಿ ವಿದೇಶದಲ್ಲಿ ನೆಲೆಸುತ್ತಾರೆ ಎಂದು ವ್ಯಂಗ್ಯವಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]