Tag: Lalu Prasad Yadav

  • ನೀವು ಗಡ್ಡ ಟ್ರಿಮ್‌ ಮಾಡಿ ಬೇಗ ಮದುವೆಯಾಗಿ: ರಾಹುಲ್‌ ಗಾಂಧಿಗೆ ಲಾಲು ಯಾದವ್‌ ಸಲಹೆ

    ನೀವು ಗಡ್ಡ ಟ್ರಿಮ್‌ ಮಾಡಿ ಬೇಗ ಮದುವೆಯಾಗಿ: ರಾಹುಲ್‌ ಗಾಂಧಿಗೆ ಲಾಲು ಯಾದವ್‌ ಸಲಹೆ

    ಪಾಟ್ನಾ: ರಾಹುಲ್‌ ಗಾಂಧಿ (Rahul Gandhi) ಅವರು ಗಡ್ಡ ಟ್ರಿಮ್‌ ಮಾಡಿ ಬೇಗ ಮದುವೆ ಆಗಬೇಕು ಎಂದು ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ ಯಾದವ್‌ (Lalu Prasad Yadav) ಸಲಹೆ ನೀಡಿದರು. ಈ ಮಾತು ಕೇಳಿ ರಾಹುಲ್‌ ಗಾಂಧಿ ಹಾಗೂ ಸಭೆಯಲ್ಲಿದ್ದವರೆಲ್ಲ ನಗೆ ಬೀರಿದರು.

    ಪಾಟ್ನಾದಲ್ಲಿ ನಡೆದ ಪ್ರತಿಪಕ್ಷಗಳ ಏಕತಾ ಸಭೆಯಲ್ಲಿ ಭಾಗವಹಿಸಿದ್ದ ಆರ್‌ಜೆಡಿ (RJD) ನಾಯಕ ಲಾಲು ಪ್ರಸಾದ್, ರಾಹುಲ್ ಗಾಂಧಿ ತಮ್ಮ ಭಾರತ್ ಜೋಡೋ ಯಾತ್ರೆಯಿಂದ (Bharat Jodo Yatra) ಒಳ್ಳೆಯ ಕೆಲಸ ಮಾಡಿದ್ದಾರೆ. ಅವರು ನಮ್ಮ ಮಾತು ಕೇಳಿ ಈಗಲೇ ಮದುವೆಯಾಗಬೇಕು ಎಂದು ಹೇಳಿದರು. ಇದನ್ನೂ ಓದಿ: ಮೊದಲ ಬಾರಿಗೆ ಲೈಫ್‌ ಪಾರ್ಟ್ನರ್‌ ಬಗ್ಗೆ ಮಾತನಾಡಿದ ರಾಹುಲ್‌ ಗಾಂಧಿ

    ಈ ವಿಚಾರವಾಗಿ ನಿಮ್ಮ ತಾಯಿ ಯಾವಾಗಲೂ ನಮ್ಮಲ್ಲಿ ದೂರುತ್ತಾರೆ. ನೀವು ಅವರ ಮಾತನ್ನು ಕೇಳುವುದಿಲ್ಲವಂತೆ. ನಮ್ಮ ಮಾತು ಕೇಳಿ, ಈಗಲೇ ಒಂದು ನಿರ್ಧಾರಕ್ಕೆ ಬನ್ನಿ ಎಂದು ಸಲಹೆ ಕೊಟ್ಟರು.

    ಈ ಮಾತಿಗೆ 53 ವಯಸ್ಸಿನ ರಾಹುಲ್‌ ಗಾಂಧಿ ನಗೆ ಬೀರಿದರು. ನಂತರ ಪ್ರತಿಕ್ರಿಯಿಸಿದ ಅವರು, ಈಗ ನೀವು ಹೇಳಿದ್ದೀರಿ. ಖಂಡಿತ ಅದು ಆಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ಗೆ ಸೋಮಣ್ಣ ಮನವಿ

    ಭಾರತ್‌ ಜೋಡೋ ಯಾತ್ರೆ ವೇಳೆ ಸಂದರ್ಶನವೊಂದರಲ್ಲಿ ರಾಹುಲ್‌ ಗಾಂಧಿಗೆ ಮದುವೆ ಕುರಿತು ಪ್ರಶ್ನೆ ಕೇಳಲಾಗಿತ್ತು. ನನ್ನ ಬಾಳ ಸಂಗಾತಿಯಾಗುವವರಿಗೆ ತಾಯಿ ಸೋನಿಯಾ ಗಾಂಧಿ ಮತ್ತು ಅಜ್ಜಿ ಇಂದಿರಾ ಗಾಂಧಿ ಇಬ್ಬರ ಗುಣಗಳು ಇರಬೇಕು. ಅಂತಹ ಸಂಗಾತಿಯೊಂದಿಗೆ ಜೀವನ ನಡೆಸಲು ನಾನು ಬಯಸುತ್ತೇನೆ ಎಂದು ಕಾಂಗ್ರೆಸ್ ನಾಯಕ ಪ್ರತಿಕ್ರಿಯಿಸಿದ್ದರು.

  • ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗಲಭೆಕೋರರನ್ನ ತಲೆಕೆಳಗಾಗಿ ನೇತು ಹಾಕ್ತೀವಿ – ಅಮಿತ್ ಶಾ ಗುಡುಗು

    ಬಿಜೆಪಿ ಅಧಿಕಾರಕ್ಕೆ ಬಂದ್ರೆ ಗಲಭೆಕೋರರನ್ನ ತಲೆಕೆಳಗಾಗಿ ನೇತು ಹಾಕ್ತೀವಿ – ಅಮಿತ್ ಶಾ ಗುಡುಗು

    ಪಾಟ್ನಾ: ನಿತೀಶ್ ಕುಮಾರ್ (Nitish Kumar) ನೇತೃತ್ವದ ಮಹಾಘಟಬಂದನ್ ಸರ್ಕಾರವು ಬಿಹಾರದ ಸಸಾರಾಮ್ ಮತ್ತು ಷರೀಫ್ ಪಟ್ಟಣಗಳಲ್ಲಿ ಕೋಮು ಗಲಭೆ, ಹಿಂಸಾಚಾರ ತಡೆಗಟ್ಟುವಲ್ಲಿ ವಿಫಲವಾಗಿದೆ. ಮುಂದಿನಬಾರಿ ಇಲ್ಲಿ ಬಿಜೆಪಿ ಸರ್ಕಾರವನ್ನು (BJP Government) ಅಧಿಕಾರಕ್ಕೆ ತಂದರೆ ಗಲಭೆಕೋರರನ್ನ ತಲೆಕೆಳಗಾಗಿ ನೇತುಹಾಕುವ ಮೂಲಕ ಗಲ್ಲಿಗೇರಿಸಲಾಗುವುದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಗುಡುಗಿದ್ದಾರೆ.

    ಬಿಹಾರದ (Bihar) ನವಾಡ ಜಿಲ್ಲೆಯ ಹಿಸುವಾದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, 2025ಕ್ಕೆ ಬಿಹಾರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಗಲಭೆಕೋರರನ್ನ ತಲೆಕೆಳಗಾಗಿ ಗಲ್ಲಿಗೇರಿಸಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

    ಈಗಾಗಲೇ 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಎಲ್ಲಾ 40 ಲೋಕಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲ್ಲುವುದು ಖಚಿತವಾಗಿದೆ. ಬಿಹಾರದ ಜನರು ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಲು ನಿರ್ಧರಿಸಿದ್ದಾರೆ. ನರೇಂದ್ರ ಮೋದಿ (Narendra Modi) ಅವರು 3ನೇ ಅವಧಿಗೆ ಪ್ರಧಾನಿಯಾಗಾಬೇಕೆಂದು ದೇಶದ ಜನ ಬಯಸಿದ್ದಾರೆ. ಇದರಿಂದ ನಿತೀಶ್ ಕುಮಾರ್ ಪ್ರಧಾನಿಯಾಗಬೇಕೆಂಬ ಕನಸಿನಿಂದ ದೂರ ಸರಿದಿದ್ದಾರೆ ಎಂದು ಕುಟುಕಿದರು. ಇದನ್ನೂ ಓದಿ: ಮೋದಿ ಹೊರತುಪಡಿಸಿ ಯಾರೊಬ್ಬರು ಶೌಚಾಲಯ ನಿರ್ಮಾಣದ ಅಗತ್ಯತೆ ಬಗ್ಗೆ ಹೇಳಲಿಲ್ಲ – ಕೋವಿಂದ್‌

    ಪ್ರಧಾನಿ ನರೇಂದ್ರ ಮೋದಿ ಅವರು ಭಯೋತ್ಪಾದನೆ ದಮನ ಮಾಡುವ ಉದ್ದೇಶದಿಂದ ಜಮ್ಮು ಮತ್ತು ಕಾಶ್ಮೀರದಲ್ಲಿ ಸಂವಿಧಾನದ 370ನೇ ವಿಧಿ ರದ್ದು ಮಾಡಿದ್ದಾರೆ. ಆದರೆ ಲಾಲುಪ್ರಸಾದ್ ಯಾದವ್ ಹಾಗೂ ನಿತೀಶ್ ಕುಮಾರ್ ಅವರು ಭಯೋತ್ಪಾದನೆಗೆ ಸಹಾಯ ಮಾಡುವ ತುಷ್ಟೀಕರಣದ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

  • ಅನಾರೋಗ್ಯದ ನಡುವೆಯೂ ಸಿಬಿಐ ತನಿಖೆ ಎದುರಿಸಿದ ಲಾಲೂ ಪ್ರಸಾದ್ ಯಾದವ್

    ಅನಾರೋಗ್ಯದ ನಡುವೆಯೂ ಸಿಬಿಐ ತನಿಖೆ ಎದುರಿಸಿದ ಲಾಲೂ ಪ್ರಸಾದ್ ಯಾದವ್

    ನವದೆಹಲಿ: ಬಿಹಾರದ (BJP) ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರನ್ನು ಸಿಬಿಐ (CBI) ಅಧಿಕಾರಿಗಳು 2 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. ದೆಹಲಿಯ ಪಂಡಾರಪಾರ್ಕ್‌ನಲ್ಲಿರುವ ಪುತ್ರಿ ಮೀಶಾ ಯಾದವ್ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಅಲ್ಲಿದ್ದ ಲಾಲೂ ಪ್ರಸಾದ್ ಯಾದವ್ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

    ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಕೋರ್ಟ್‌ಗೆ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿರುವ ಸಿಬಿಐ ವಿಚಾರಣೆ ಮುಂದುವರಿಸಿದೆ. ಸೋಮವಾರ ಪಾಟ್ನಾದಲ್ಲಿರುವ ಮಾಜಿ ಸಿಎಂ ಮತ್ತು ಲಾಲೂ ಯಾದವ್ ಪತ್ನಿ ರಾಬ್ರಿದೇವಿ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ಅವರನ್ನು ಸುದೀರ್ಘ ವಿಚಾರಣೆಗೆ ಒಳಪಡಿಸಿದ್ದರು.

    ರಾಬ್ರಿದೇವಿ ವಿಚಾರಣೆ ಬೆನ್ನಲ್ಲೇ ಮಂಗಳವಾರ ದೆಹಲಿಯಲ್ಲಿ ಲಾಲೂ ಯಾದವ್ ಅವರನ್ನು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ 7 ಅಧಿಕಾರಗಳ ತಂಡ ಮಾಸ್ಕ್ ಧರಿಸಿದ್ದು ದೂರದಿಂದ ಕೂತು ಅವರನ್ನು ಪ್ರಶ್ನಿಸಿದ್ದಾರೆ. ಲಾಲೂ ಯಾದವ್‌ಗೆ ಕಿಡ್ನಿ ಕಸಿಯಾಗಿರುವ ಹಿನ್ನೆಲೆ ಅವರಿಗೆ ಅಲರ್ಜಿ ಮತ್ತು ಸೋಂಕಿನ ಭೀತಿ ಇರುವ ಕಾರಣ ಅಂತರ ಕಾಯ್ದುಕೊಂಡು ವಿಚಾರಣೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸಿಬಿಐ ಬೆನ್ನಲ್ಲೇ ಇಡಿ ಸಂಕಷ್ಟ – ತಿಹಾರ್ ಜೈಲಿನಲ್ಲಿ Manish Sisodia ವಿಚಾರಣೆ

    ಲಾಲು ಪ್ರಸಾದ್ ಯಾದವ್ ಅವರು 2004 ಮತ್ತು 2009ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ.

    ಫೆಬ್ರವರಿ 27 ರಂದು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಪತ್ನಿ ರಾಬ್ರಿದೇವಿ ಮತ್ತು ಇತರ 14 ಜನರಿಗೆ ನ್ಯಾಯಾಲಯವು ಸಮನ್ಸ್ ನೀಡಿತ್ತು. ವಿಶೇಷ ನ್ಯಾಯಾಧೀಶರಾದ ಗೀತಾಂಜಲಿ ಗೋಯೆಲ್ ಅವರು ಆರೋಪಿಗಳಿಗೆ ಮಾರ್ಚ್ 15 ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚಿಸಿದ್ದಾರೆ. ಇದನ್ನೂ ಓದಿ: ಮೇಘಾಲಯ ಸಿಎಂ ಆಗಿ ಕಾನ್ರಾಡ್ ಸಂಗ್ಮಾ ಪ್ರಮಾಣ ವಚನ ಸ್ವೀಕಾರ

  • ಲಾಲು ಪ್ರಸಾದ್ ಯಾದವ್‌ಗೆ ಮಗಳ ಕಿಡ್ನಿ ಕಸಿ – ಶಸ್ತ್ರಚಿಕಿತ್ಸೆ ಯಶಸ್ವಿ

    ಲಾಲು ಪ್ರಸಾದ್ ಯಾದವ್‌ಗೆ ಮಗಳ ಕಿಡ್ನಿ ಕಸಿ – ಶಸ್ತ್ರಚಿಕಿತ್ಸೆ ಯಶಸ್ವಿ

    ಪಾಟ್ನಾ: ರಾಷ್ಟ್ರೀಯ ಜನತಾ ದಳದ (RJD) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರು ಸಿಂಗಾಪುರದಲ್ಲಿ (Singapore) ಯಶಸ್ವಿ ಮೂತ್ರಪಿಂಡ ಕಸಿ (Kidney Transplant) ಶಸ್ತ್ರಚಿಕಿತ್ಸೆ (Surgery) ಒಳಗಾಗಿದ್ದಾರೆ. ಸಿಂಗಾಪುರದಲ್ಲಿ ನೆಲೆಸಿರುವ ತಮ್ಮ ಪುತ್ರಿಯೇ (Daughter) ಲಾಲು ಅವರಿಗೆ ಕಿಡ್ನಿ ದಾನ ಮಾಡಿ ತಂದೆಗೆ ಹೊಸ ಬದುಕು ನೀಡಿದ್ದಾರೆ.

    ಈ ಬಗ್ಗೆ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸೋಮವಾರ ಟ್ವೀಟ್ ಮಾಡಿ, ಆರ್‌ಜೆಡಿ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಸಿಂಗಾಪುರದಲ್ಲಿ ಯಶಸ್ವಿ ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಹಾಗೂ ಅವರನ್ನು ಇದೀಗ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.

    ಲಾಲು ಯಾದವ್ ಅವರು ಕಳೆದ ಹಲವು ತಿಂಗಳುಗಳಿಂದಲೇ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಅವರಿಗೆ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಬಳಿಕ ಲಾಲು ಅವರ ಪುತ್ರಿ ಸಿಂಗಾಪುರ ಮೂಲದ ರೋಹಿಣಿ ಆಚಾರ್ಯ ತಂದೆಗೆ ಕಿಡ್ನಿ ದಾನ ಮಾಡಲು ಮುಂದಾದರು. ಇದನ್ನೂ ಓದಿ: ಮದುವೆಯಲ್ಲಿ ಮೇಳೈಸಿದ ಡಿಜಿಟಲ್ ಇಂಡಿಯಾ

    ಲಾಲು ಅವರು ಮೇವು ಪ್ರಕರಣದಲ್ಲಿ ಭಾಗಿಯಾಗಿ ಜೈಲುಪಾಲಾಗಿದ್ದರು. ಬಳಿಕ ಜಾಮೀನಿನ ಮೇಲೆ ಹೊರಗಿದ್ದು, ಅನಾರೋಗ್ಯದ ಹಿನ್ನೆಲೆ ಚಿಕಿತ್ಸೆಗಾಗಿ ದೆಹಲಿ ಹಾಗೂ ರಾಂಚಿಯಲ್ಲಿ ಹಲವು ಬಾರಿ ಆಸ್ಪತ್ರೆ ಸೇರಿದ್ದರು. ಅವರು ಮಧುಮೇಹ, ರಕ್ತದೊತ್ತಡ, ಮೂತ್ರಪಿಂಡದ ಸಮಸ್ಯೆ ಸೇರಿದಂತೆ ಅನೇಕ ಕಾಯಿಲೆಗಳಿಂದ ಬಳಲುತ್ತಿದ್ದಾರೆ.

    ಕೆಲ ದಿನಗಳ ಹಿಂದೆ ರೋಹಿಣಿ ಅವರು ತಮ್ಮ ತಂದೆಗೆ ಕಿಡ್ನಿ ದಾನ ಮಾಡುವ ನಿರ್ಧಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ತಿಳಿಸಿದ್ದರು. ನಾನು ನನ್ನ ತಂದೆಗೆ ನನ್ನ ದೇಹದ ಒಂದು ಸಣ್ಣ ಮಾಂಸವನ್ನು ನೀಡುತ್ತಿದ್ದೇನೆ. ನಾನು ಅಪ್ಪನಿಗಾಗಿ ಏನು ಬೇಕಾದರೂ ಮಾಡಬಲ್ಲೆ. ಎಲ್ಲವೂ ಚೆನ್ನಾಗಿ ನಡೆಯಲಿ ಎಂದು ಪ್ರಾರ್ಥಿಸುತ್ತೇನೆ ಹಾಗೂ ಅಪ್ಪ ಮತ್ತೊಮ್ಮೆ ಆರೊಗ್ಯವಾಗಿ ಧ್ವನಿ ಎತ್ತುತ್ತಾರೆ ಎಂದು ತಿಳಿಸಿದ್ದರು. ಇದನ್ನೂ ಓದಿ: ಭಾರತ ಜಾತ್ಯತೀತ ರಾಷ್ಟ್ರ ಎಂದ ಸುಪ್ರೀಂ – ಠಾಕೂರ್‌ ಚಂದ್ರರನ್ನು ʼಪರಮಾತ್ಮʼ ಎಂದು ಘೋಷಿಸಲು ಕೋರಿದ್ದ PIL ವಜಾ

    Live Tv
    [brid partner=56869869 player=32851 video=960834 autoplay=true]

  • ಲಾಲುಗೆ ಕಿಡ್ನಿ ನೀಡಲು ಮುಂದಾದ ಪುತ್ರಿ – ನವೆಂಬರ್ ಅಂತ್ಯದಲ್ಲಿ ವಿದೇಶಕ್ಕೆ RJD ಮುಖ್ಯಸ್ಥ

    ಲಾಲುಗೆ ಕಿಡ್ನಿ ನೀಡಲು ಮುಂದಾದ ಪುತ್ರಿ – ನವೆಂಬರ್ ಅಂತ್ಯದಲ್ಲಿ ವಿದೇಶಕ್ಕೆ RJD ಮುಖ್ಯಸ್ಥ

    ಪಾಟ್ನಾ: ಕಳೆದ ಹಲವಾರು ವರ್ಷಗಳಿಂದ ಮೂತ್ರಪಿಂಡ ಕಾಯಿಲೆ (kidney) ಹಾಗೂ ಇತರ ಕಾಯಿಲೆಗಳಿಂದ ಬಳಲುತ್ತಿದ್ದ ಆರ್‌ಜೆಡಿ (ರಜದ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಅವರಿಗೆ ಪುತ್ರಿ ರೋಹಿಣಿ ಆಚಾರ್ಯ (Rohini Aacharya) ತಮ್ಮ ಕಿಡ್ನಿಯಲ್ಲಿ ಒಂದನ್ನು ದಾನ ಮಾಡಲು ನಿರ್ಧರಿಸಿದ್ದಾರೆ. ಇದರಿಂದ ಲಾಲು ಪ್ರಸಾದ್ ಯಾದವ್ ಹೊಸ ಜೀವನವನ್ನು ಪಡೆದುಕೊಳ್ಳಲಿದ್ದಾರೆ.

    ಅಕ್ಟೋಬರ್‌ನಲ್ಲಿ ಸಿಂಗಾಪುರಕ್ಕೆ (Singapore) ಭೇಟಿ ಕೊಟ್ಟ ಲಾಲು ಪ್ರಸಾದ್ ಯಾದವ್ ಅವರಿಗೆ, ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ವೈದ್ಯರು ಸಲಹೆ ನೀಡಿದ್ದರು. ಈ ಬಳಿಕ ರೋಹಿಣಿ ಅವರು ಮೂತ್ರಪಿಂಡವನ್ನು ತನ್ನ ತಂದೆಗೆ ದಾನ ಮಾಡಲು ಮುಂದಾಗಿದ್ದಾರೆ. 

    ತಮ್ಮ ಜೀವವನ್ನು ಉಳಿಸಿಕೊಳ್ಳಲು ಮೊದಲಿಗೆ ರೋಹಿಣಿ ಕಿಡ್ನಿಯನ್ನು ಪಡೆಯಲು ಲಾಲು ಪ್ರಸಾದ್ ಒಪ್ಪಿಕೊಳ್ಳಲಿಲ್ಲ. ಆದರೆ ಆಕೆಯ ಮತ್ತು ಕುಟುಂಬಸ್ಥರ ಒತ್ತಡದ ಮೇರೆಗೆ ಕೊನೆಗೆ ಕಿಡ್ನಿ ಪಡೆಯಲು ಒಪ್ಪಿಕೊಂಡಿದ್ದಾರೆ. ನವೆಂಬರ್ 20 ರಿಂದ 24ರ ಒಳಗೆ ಲಾಲು ಅವರು ಮತ್ತೆ ಸಿಂಗಾಪುರಕ್ಕೆ ಭೇಟಿ ನೀಡುವ ಸಾಧ್ಯತೆಯಿದ್ದು, ಈ ಸಮಯದಲ್ಲಿ ಅವರು ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮುರುಘಾ ಮಠದಲ್ಲಿ ಫೋಟೋ ಕಳವು ಪ್ರಕರಣ – ಮಾಜಿ ಶಾಸಕ ಬಸವರಾಜನ್ ವಶಕ್ಕೆ

    ಲಾಲು ಪ್ರಸಾದ್ ಅವರ ಎರಡನೇ ಪುತ್ರಿಯಾಗಿರುವ ರೋಹಿಣಿ ಅವರು ಸಿಂಗಾಪುರದಲ್ಲಿ ನೆಲೆಸಿದ್ದು, ತಮ್ಮ ತಂದೆಗೆ ಮೂತ್ರಪಿಂಡ ಕಾಯಿಲೆ ಸಮಸ್ಯೆ ಇರುವ ಬಗ್ಗೆ ಬಹಳ ಆತಂಕಕ್ಕೊಳಗಾಗಿದ್ದರು. ನಂತರ ಮೂತ್ರಪಿಂಡ ಕಸಿ ಸಲಹೆ ನೀಡಿದ ವೈದ್ಯರ ತಂಡವನ್ನು ಸಂಪರ್ಕಿಸಲು ಲಾಲು ಪ್ರಸಾದ್ ಅವರು ಸಿಂಗಾಪುರಕ್ಕೆ ಭೇಟಿ ನೀಡಿದ್ದರು.

    ಹಲವು ವರ್ಷಗಳಿಂದ ಕಿಡ್ನಿ ಸಮಸ್ಯೆಗೆ ದೆಹಲಿ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲಾಲು ಪ್ರಸಾದ್‍ಗೆ ಎಐಐಎಂಎಸ್‍ನ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳಲು ಸಲಹೆ ನೀಡಿರಲಿಲ್ಲ. ಆದರೆ ಸಿಂಗಾಪುರಕ್ಕೆ ಭೇಟಿ ನೀಡಿದ ಲಾಲು ಅವರಿಗೆ ಅಲ್ಲಿನ ವೈದ್ಯರು ಕಿಡ್ನಿ ಕಸಿ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಕೊಯಮತ್ತೂರು ಕಾರು ಸ್ಫೋಟ ಪ್ರಕರಣ – 45ಕ್ಕೂ ಹೆಚ್ಚು ಕಡೆ NIA ದಾಳಿ

    Live Tv
    [brid partner=56869869 player=32851 video=960834 autoplay=true]

  • ಭಯ ಬೇಡ, ಲಾಲೂ ಪ್ರಸಾದ್ ಚೇತರಿಸಿಕೊಳ್ಳುತ್ತಿದ್ದಾರೆ: ಪುತ್ರಿ ಮಿಸಾ ಭಾರ್ತಿ

    ಭಯ ಬೇಡ, ಲಾಲೂ ಪ್ರಸಾದ್ ಚೇತರಿಸಿಕೊಳ್ಳುತ್ತಿದ್ದಾರೆ: ಪುತ್ರಿ ಮಿಸಾ ಭಾರ್ತಿ

    ನವದೆಹಲಿ: ಆರ್‌ಜೆಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸುಧಾರಿಸುತ್ತಿದೆ. ಶೀಘ್ರದಲ್ಲೇ ಅವರನ್ನು ಐಸಿಯುನಿಂದ ಖಾಸಗಿ ವಾರ್ಡ್‌ಗೆ ಸ್ಥಳಾಂತರಿಸಲಾಗುವುದು ಎಂದು ಪುತ್ರಿ ಮಿಸಾ ಭಾರ್ತಿ ಮಾಹಿತಿ ನೀಡಿದ್ದಾರೆ.

    ಮಿಸಾ ಭಾರ್ತಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಲಾಲೂ ಪ್ರಸಾದ್ ಅವರ ಚೇತರಿಕೆಯ ಸುದ್ದಿಯನ್ನು ತಿಳಿಸಿದ್ದು, ಆಸ್ಪತ್ರೆಯಲ್ಲಿರುವ ಲಾಲೂ ಅವರ ಕೆಲವು ಭಾವನಾತ್ಮಕ ಫೊಟೋಗಳನ್ನೂ ಹಂಚಿಕೊಂಡಿದ್ದಾರೆ.

    ನಿಮ್ಮೆಲ್ಲರ ಪ್ರಾರ್ಥನೆಯಿಂದ ಹಾಗೂ ದೆಹಲಿಯ ಏಮ್ಸ್ ಆಸ್ಪತ್ರೆಯ ಉತ್ತಮ ವೈದ್ಯಕೀಯ ಆರೈಕೆಯಿಂದ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸಾಕಷ್ಟು ಸುಧಾರಿಸಿದೆ. ಈಗ ಅವರು ಹಾಸಿಗೆಯಿಂದ ಎದ್ದು ಕುಳಿತುಕೊಳ್ಳಲು ಸಾಧ್ಯವಾಗುತ್ತಿದೆ. ಇತರರ ಸಹಾಯದಿಂದ ಎದ್ದು ನಿಲ್ಲಲು ಅವರು ಸಮರ್ಥರಾಗಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಅಬೆಯೊಂದಿಗಿನ ಹಳೆ ಕ್ಷಣ ನೆನೆದ ಮೋದಿ – ಜುಲೈ 9ರಂದು ರಾಷ್ಟ್ರೀಯ ಶೋಕಾಚರಣೆ ಘೋಷಣೆ

    ಪ್ರತಿಯೊಂದು ಸಮಸ್ಯೆಯ ವಿರುದ್ಧ ಹೋರಾಡುವ ಕಲೆ ಲಾಲೂ ಪ್ರಸಾದ್ ಯಾದವ್ ಅವರಿಗಿಂತ ಚೆನ್ನಾಗಿ ಯಾರಿಗೆ ತಿಳಿದಿದೆ? ನಿಮ್ಮೆಲ್ಲರ ಸ್ಥೈರ್ಯ ಹಾಗೂ ಪ್ರಾರ್ಥನೆಗೆ ಧನ್ಯವಾದಗಳು. ಲಾಲೂ ಅವರ ಸ್ಥಿತಿ ಈಗ ಉತ್ತಮವಾಗಿದೆ. ದಯವಿಟ್ಟು ವದಂತಿಗಳಿಗೆ ಗಮನ ಕೊಡಬೇಡಿ. ನಿಮ್ಮೆಲ್ಲರ ಪ್ರಾರ್ಥನೆಯಿಂದ ಲಾಲೂ ಅವರನ್ನು ನೆನೆಸಿಕೊಳ್ಳಿ ಎಂದು ಹೇಳಿದ್ದಾರೆ.

    ಲಾಲೂ ಯಾದವ್ ಅವರ ಆರೋಗ್ಯದ ಬಗ್ಗೆ ತಿಳಿಸಿದ ಏಮ್ಸ್‌ನ ವೈದ್ಯರು, ಲಾಲೂ ಯಾದವ್ ಅವರ ಭುಜ ಹಾಗೂ ತೊಡೆಯಲ್ಲಿ ಸಣ್ಣ ಮೂಳೆ ಮುರಿತವಾಗಿದೆ. ಆದ್ದರಿಂದ ಅವರಿಗೆ ಯಾವುದೇ ರೀತಿಯ ಶಸ್ತ್ರಚಿಕಿತ್ಸೆಯ ಅಗತ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಭಿಕ್ಷೆ ಬೇಡಿದ್ದ ಹಣ ಎಲ್ಲಿ ಹೋಯ್ತು?- ಬೊಮ್ಮಾಯಿ ತಿರುಗೇಟು

    ವಾಸ್ತವವಾಗಿ ಹಲವು ಕಾಯಿಲೆಗಳಿಂದ ಬಳಲುತ್ತಿರುವ ಲಾಲೂ ಯಾದವ್ ಜುಲೈ 3 ರಂದು ತಮ್ಮ ನಿವಾಸದ ಮೆಟ್ಟಿಲುಗಳಿಂದ ಜಾರಿ ಬಿದ್ದಿದ್ದರು. ಇದರಿಂದ ಅವರ ಭುಜ ಹಾಗೂ ತೊಡೆಗಳಲ್ಲಿ ಮೂಳೆ ಮುರಿತವಾಗಿತ್ತು. ಮೊದಲಿಗೆ ಅವರನ್ನು ಪಾಟ್ನಾದ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಉತ್ತಮ ಚಿಕಿತ್ಸೆಗಾಗಿ ಅವರನ್ನು ಬುಧವಾರ ಏರ್ ಆಂಬುಲೆನ್ಸ್ ಮುಖಾಂತರ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. ಅಲ್ಲಿ ಅವರ ಸ್ಥಿತಿ ಗಣನೀಯವಾಗಿ ಚೇತರಿಕೆ ಕಂಡಿದೆ.

    Live Tv
    [brid partner=56869869 player=32851 video=960834 autoplay=true]

  • ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ- ಪಾಟ್ನಾದಿಂದ ದೆಹಲಿಗೆ ಏರ್‌ಲಿಫ್ಟ್

    ಲಾಲೂ ಪ್ರಸಾದ್ ಯಾದವ್ ಆರೋಗ್ಯ ಚಿಂತಾಜನಕ- ಪಾಟ್ನಾದಿಂದ ದೆಹಲಿಗೆ ಏರ್‌ಲಿಫ್ಟ್

    ನವದೆಹಲಿ: ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ. ಆರೋಗ್ಯ ಪರಿಸ್ಥಿತಿ ಗಂಭೀರವಾಗುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ನಿನ್ನೆ ತಡರಾತ್ರಿ ಪಾಟ್ನಾದ ಖಾಸಗಿ ಆಸ್ಪತ್ರೆಯಿಂದ ಏರ್‌ಲಿಫ್ಟ್ ಮಾಡಿ ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿದೆ.

    ಎರಡು ದಿನಗಳ ಹಿಂದೆ ಪತ್ನಿ ರಾಬ್ರಿ ದೇವಿ ನಿವಾಸದ ಮೆಟ್ಟಿಲುಗಳಿಂದ ಲಾಲೂ ಬಿದ್ದಿದ್ದರು. ಇದರಿಂದಾಗಿ ಅವರ ದೇಹವು ಮೂರು ಸ್ಥಳಗಳಲ್ಲಿ ಮುರಿತ ಕಂಡು ಬಂದಿತ್ತು. ಈಗಾಗಲೇ ಅನೇಕ ಖಾಯಿಲೆಗಳೊಂದಿಗೆ ಹೋರಾಡುತ್ತಿದ್ದ ಅವರಿಗೆ ಈ ಮೂಳೆ ಆರೋಗ್ಯ ಪರಿಸ್ಥಿತಿಯನ್ನು ಗಂಭೀರವಾಗಿಸಿದೆ.

    ಲಾಲೂ ಪ್ರಸಾದ್ ಯಾದವ್ ದೆಹಲಿ ತಲುಪಿದ ನಂತರ ಅವರ ಪುತ್ರ ತೇಜಸ್ವಿ ಯಾದವ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದು, ಮೆಟ್ಟಿಲುಗಳಿಂದ ಬಿದ್ದ ಕಾರಣ ಅವರ ದೇಹದ ಮೂರು ಸ್ಥಳಗಳಲ್ಲಿ ಮುರಿತವಾಗಿದೆ. ಇದರಿಂದ ಅವರು ಚಲಿಸಲು ಸಾಧ್ಯವಾಗುತ್ತಿಲ್ಲ. ಏಮ್ಸ್ ವೈದ್ಯರು ಆರೋಗ್ಯ ತಪಾಸಣೆ ನಡೆಸಿದ್ದು, ಮುಂದಿನ ಚಿಕಿತ್ಸೆ ಬಗ್ಗೆ ನಿರ್ಧರಿಸಲಿದ್ದಾರೆ ಎಂದು ಅವರು ಹೇಳಿದ್ದರು. ಇದನ್ನೂ ಓದಿ: ನಿಮ್ಮ ಮದುವೆ ಯಾವಾಗ – ರಾಘವ್ ಚಡ್ಡಾಗೆ ಪ್ರಶ್ನೆ

    ಯಾದವ್ ಕುಟುಂಬದ ಮೂಲಗಳ ಪ್ರಕಾರ ಲಾಲೂ ಪ್ರಸಾದ್ ಯಾದವ್ ಶ್ವಾಸಕೋಶದಲ್ಲಿ ನೀರು ತುಂಬಿದೆ. ಇದರಿಂದ ಅವರ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ. ಅದೇ ಸಮಯದಲ್ಲಿ, ಅವರ ಕ್ರಿಯೇಟಿನೈನ್ ಕೂಡ ನಾಲ್ಕರಿಂದ ಆರು ತಲುಪಿದೆ. ಕಿಡ್ನಿ ಕಸಿ ಬಗ್ಗೆಯೂ ವರ್ಣಿಸಲಾಗುತ್ತಿದೆ. ಲಾಲೂ ಕೊಂಚ ಚೇತರಿಸಿಕೊಂಡ ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಸಿಂಗಾಪುರಕ್ಕೆ ಕರೆದೊಯ್ಯಲು ವೈದ್ಯರೊಂದಿಗೆ ಸಮಾಲೋಚನೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಒಂದು ವಾರದೊಳಗೆ ಅಡುಗೆ ಎಣ್ಣೆ ಬೆಲೆ ಇಳಿಕೆಗೆ ಕೇಂದ್ರ ಸರ್ಕಾರ ಸೂಚನೆ

    ಈ ನಡುವೆ ಲಾಲೂ ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಜನರಿಗೆ ಭಾವನಾತ್ಮಕ ಮನವಿ ಮಾಡಿದ್ದಾರೆ. ಬೇಸರ ಪಡುವುದು ಬೇಡ, ಆತಂಕ ಪಡುವ ಅಗತ್ಯವಿಲ್ಲ, ಅವರು ಚೇತರಿಸಿಕೊಳ್ಳುತ್ತಿದ್ದಾರೆ, ನಮ್ಮೆಲ್ಲರೊಂದಿಗೆ ಅವರು ಇರಲೆಂದು ನೀವೆಲ್ಲರೂ ಅವರಿಗಾಗಿ ಪ್ರಾರ್ಥಿಸಿ ಎಂದು ಅಭಿಮಾನಿಗಳಿಗೆ ಮನವಿ ಮಾಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಐಸಿಯುವಿನಲ್ಲಿ ಲಾಲು ಪ್ರಸಾದ್ ಯಾದವ್‍ಗೆ ಚಿಕಿತ್ಸೆ – ಆರೋಗ್ಯ ವಿಚಾರಿಸಿದ ಮೋದಿ

    ಐಸಿಯುವಿನಲ್ಲಿ ಲಾಲು ಪ್ರಸಾದ್ ಯಾದವ್‍ಗೆ ಚಿಕಿತ್ಸೆ – ಆರೋಗ್ಯ ವಿಚಾರಿಸಿದ ಮೋದಿ

    ಪಾಟ್ನಾ: ಆರ್‌ಜೆಡಿ ಮುಖ್ಯಸ್ಥ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ತಮ್ಮ ನಿವಾಸದಲ್ಲಿ ಜಾರಿ ಬಿದ್ದು, ಅವರ ಬಲ ಭುಜದ ಮೂಳೆ ಮುರಿತಕ್ಕೊಳಗಾಗಿದೆ. ಇದೀಗ ಲಾಲೂ ಪ್ರಸಾದ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

    Lalu Prasad Yadav

    ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು, ಲಾಲು ಪ್ರಸಾದ್ ಯಾದವ್ ಅವರ ಪುತ್ರನಿಗೆ ಮಂಗಳವಾರ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.  ಇದನ್ನೂ ಓದಿ: ಇಬ್ಬರಲ್ಲ, 20ಕ್ಕೂ ಹೆಚ್ಚು ಮಂದಿಯಿಂದ ಸ್ಕೆಚ್‌ – ಗುರೂಜಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಸುಲಿಗೆಗೆ ಇಳಿದಿದ್ದ ಹಂತಕರು

    ಈ ಕುರಿತಂತೆ ಆರ್‌ಜೆಡಿ ವಕ್ತಾರ ಚಿತ್ರರಂಜನ್ ಗಗನ್ ಅವರು ಮಾತನಾಡಿದ್ದು, ಪ್ರಧಾನಿ ಮೋದಿ ಅವರು ಮಂಗಳವಾರ ತೇಜಸ್ವಿ ಯಾದವ್ ಅವರೊಂದಿಗೆ ಕರೆ ಮಾಡಿ ಲಾಲು ಪ್ರಸಾದ್ ಯಾದವ್ ಅವರ ಆರೋಗ್ಯವನ್ನು ವಿಚಾರಿಸಿದ್ದಾರೆ ಮತ್ತು ಅವರು ಶೀಘ್ರವೇ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಮೆಟ್ಟಿಲಿನಿಂದ ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್ – ಭುಜದ ಮೂಳೆ ಮುರಿತ

    ಲಾಲು ಪ್ರಸಾದ್ ಯಾದವ್ ಅವರು ಸೋಮವಾರ ಪಾಟ್ನಾದಲ್ಲಿರುವ ತಮ್ಮ ಪತ್ನಿ ರಾಬ್ರಿ ದೇವಿ ಅವರ ನಿವಾಸದಲ್ಲಿ ತಂಗಿದ್ದರು. ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗದೇ ಎಡವಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಭುಜ ಮತ್ತು ಬೆನ್ನಿಗೆ ಪೆಟ್ಟಾಗಿದೆ. ಬಲ ಭುಜದ ಮೂಳೆ ಮುರಿದಿದೆ ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಕೂಡಲೇ ಅವರನ್ನು ಪಾಟ್ನಾದ ಪಾರಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಲಾಲೂ ಪ್ರಸಾದ್ ಅವರಿ ಐಸಿಯುನಲ್ಲಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎನ್ನಲಾಗಿದೆ.

    ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಿಂದ ಹಲವು ವರ್ಷಗಳಿಂದ ಮೇವು ಹಗರಣ ಪ್ರಕರಣಗಳಲ್ಲಿ ದೋಷಿಯಾಗಿರುವ ಆರ್‍ಜೆಡಿ ಮುಖ್ಯಸ್ಥ ಲಾಲೂ ಈಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮೆಟ್ಟಿಲಿನಿಂದ ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್ – ಭುಜದ ಮೂಳೆ ಮುರಿತ

    ಮೆಟ್ಟಿಲಿನಿಂದ ಎಡವಿ ಬಿದ್ದ ಲಾಲೂ ಪ್ರಸಾದ್ ಯಾದವ್ – ಭುಜದ ಮೂಳೆ ಮುರಿತ

    ಪಾಟ್ನಾ: ಮೆಟ್ಟಿಲು ಇಳಿಯುವಾಗ ಎಡವಿ ಬಿದ್ದು ಮಾಜಿ ಮುಖ್ಯಮಂತ್ರಿ ಹಾಗೂ ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಬಲ ಭುಜದ ಮೂಳೆ ಮುರಿದಿದ್ದು ಚಿಕಿತ್ಸೆ ಪಡೆದುಕೊಂಡಿದ್ದಾರೆ.

    ಲಾಲು ಪ್ರಸಾದ್ ಯಾದವ್ ಅವರು ನಿನ್ನೆ ಪಾಟ್ನಾದಲ್ಲಿರುವ ತಮ್ಮ ಪತ್ನಿ ರಾಬ್ರಿ ದೇವಿ ಅವರ ನಿವಾಸದಲ್ಲಿ ತಂಗಿದ್ದರು. ಮನೆಯಲ್ಲಿ ಮೆಟ್ಟಿಲು ಇಳಿಯುವಾಗ ಸಮತೋಲನ ಕಾಯ್ದುಕೊಳ್ಳಲು ಸಾಧ್ಯವಾಗದೇ ಎಡವಿ ಬಿದ್ದಿದ್ದಾರೆ. ಇದರಿಂದಾಗಿ ಅವರ ಭುಜ ಮತ್ತು ಬೆನ್ನಿಗೆ ಪೆಟ್ಟಾಗಿದೆ. ಬಲ ಭುಜದ ಮೂಳೆ ಮುರಿದಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಇಂಡೀಗೋದ ನೂರಾರು ಸಿಬ್ಬಂದಿಗೆ ಒಂದೇ ದಿನ ಅನಾರೋಗ್ಯ – ತನಿಖೆಗೆ ಡಿಜಿಸಿಎ ಸೂಚನೆ

    ಲಾಲೂ ಪ್ರಸಾದ್ ಅವರನ್ನು MRI ಸ್ಕ್ಯಾನಿಂಗ್‌ಗೆ ಒಳಪಡಿಸಿದಾಗ ಭುಜದ ಭಾಗಕ್ಕೆ ಪೆಟ್ಟಾಗಿರುವುದು ತಿಳಿದುಬಂದಿದೆ. ಬಳಿಕ ಚಿಕಿತ್ಸೆ ನೀಡಿ ಡಿಶ್ಚಾರ್ಜ್ ಮಾಡಲಾಗಿದೆ. ಇದನ್ನೂ ಓದಿ: ಅವರನ್ನು ಸೆರೆಹಿಡಿಯಲು ಬೆಳಗ್ಗೆಯವರೆಗೂ ಕಾದು ಕುಳಿತಿದ್ದೆವು – ಉಗ್ರರನ್ನು ಗ್ರಾಮಸ್ಥರು ಬಂಧಿಸಿದ ಕಥೆ ಓದಿ

    ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯದಿಂದ ಹಲವು ವರ್ಷಗಳಿಂದ ಮೇವು ಹಗರಣ ಪ್ರಕರಣಗಳಲ್ಲಿ ದೋಷಿಯಾಗಿರುವ ಆರ್‌ಜೆಡಿ ಮುಖ್ಯಸ್ಥ ಲಾಲೂ ಈಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಲಾಲೂ ಯಾದವ್ ಪಕ್ಷದ ಬೆಂಬಲದೊಂದಿಗೆ ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್

    ಲಾಲೂ ಯಾದವ್ ಪಕ್ಷದ ಬೆಂಬಲದೊಂದಿಗೆ ಅಗ್ನಿಪಥ್ ವಿರೋಧಿಸಿ ಇಂದು ಬಿಹಾರ್ ಬಂದ್

    ಪಾಟ್ನಾ: ಸಶಸ್ತ್ರ ಪಡೆಗಳಿಗೆ ಕೇಂದ್ರವು ಹೊಸದಾಗಿ ಪರಿಚಯಿಸಿದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಬಿಹಾರ ವಿದ್ಯಾರ್ಥಿ ಸಂಘಟನೆಗಳು ಇಂದು ರಾಜ್ಯವ್ಯಾಪಿ ಬಂದ್‍ಗೆ ಕರೆ ನೀಡಿದ್ದಾರೆ.

    ಆಲ್ ಇಂಡಿಯಾ ಅಸೋಸಿಯೇಷನ್ ನೇತೃತ್ವದ ಸಂಸ್ಥೆಗಳು ಈ ಯೋಜನೆಯನ್ನು ತಕ್ಷಣ ಹಿಂತೆಗೆದುಕೊಳ್ಳುವಂತೆ ಕೋರಿದೆ. ಈ ಬಂದ್ ಕರೆಗೆ ಲಾಲೂ ಪ್ರಸಾದ್ ಯಾದವ್ ಅವರ ಪಕ್ಷ ಆರ್‌ಜೆಡಿ ಬೆಂಬಲವನ್ನು ನೀಡಿದೆ ಎಂದು ಬಿಹಾರ ಘಟಕದ ಅಧ್ಯಕ್ಷ ಜಗದಾನಂದ್ ಸಿಂಗ್ ಘೋಷಿಸಿ, ಅಲ್ಪಾವಧಿಯ ನೇಮಕಾತಿ ಯೋಜನೆಯು ರಾಷ್ಟ್ರದ ಯುವಜನರ ಹಿತಾಸಕ್ತಿಗಳಿಗೆ ಹಾನಿಕಾರಕವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: 2023ರ ಚುನಾವಣೆಗೆ ಬಿಜೆಪಿ ಸಜ್ಜು- ಕೋಟೆನಾಡಿಗೆ ಇಂದು ಜೆ.ಪಿ. ನಡ್ಡಾ ಭೇಟಿ

    ಅಗ್ನಿಪಥ್‌ ನೇಮಕಾತಿ ವಿರೋಧಿಸಿ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವವರನ್ನು ನಾವು ಬೆಂಬಲಿಸುತ್ತೇವೆ. ಸಶಸ್ತ್ರ ಪಡೆಗಳಲ್ಲಿ ಹೊಸ ಅಲ್ಪಾವಧಿ ನೇಮಕಾತಿ ಯೋಜನೆಯು ದೇಶದ ಯುವಕರ ಹಿತಾಸಕ್ತಿಯಲ್ಲ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅಸ್ಸಾಂ, ಮೇಘಾಲಯದಲ್ಲಿ ಪ್ರವಾಹ- 31 ಮಂದಿ ಸಾವು

    ಇದೇ ವೇಳೆ ಪಕ್ಷದ ಕಾರ್ಯಕರ್ತರೊಂದಿಗೆ ಶನಿವಾರ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಿ ಯೋಜನೆ ಹಿಂಪಡೆಯಲು ಮನವಿ ಸಲ್ಲಿಸುವುದಾಗಿ ಲೋಕ ಜನಶಕ್ತಿ ಪಕ್ಷದ (ರಾಮ್ ವಿಲಾಸ್) ಅಧ್ಯಕ್ಷ ಚಿರಾಗ್ ಪಾಸ್ವಾನ್ ಹೇಳಿದರು.

    Live Tv