Tag: Lalu Prasad Yadav

  • ರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ – ಮೊದಲ ದಿನವೇ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

    ರಾಷ್ಟ್ರಪತಿ ಸ್ಥಾನಕ್ಕೆ ಪೈಪೋಟಿ – ಮೊದಲ ದಿನವೇ 11 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

    ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣಾ ಕಣ ರಂಗೇರಿದ್ದು, ಆಡಳಿತ ಹಾಗೂ ವಿರೋಧ ಪಕ್ಷಗಳ ನಡುವೆ ಸಂಖ್ಯಾಬಲದ ಜಟಾಪಟಿ ನಡೆಯುತ್ತಿದೆ. ಈವೆರೆಗೆ ರಾಷ್ಟ್ರಪತಿ ಚುನಾವಣೆಗೆ 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಅವರಲ್ಲಿ ದಾಖಲೆಗಳ ಕೊರತೆಯಿಂದಾಗಿ ಓರ್ವ ಅಭ್ಯರ್ಥಿಯ ನಾಮಪತ್ರವನ್ನು ತಿರಸ್ಕರಿಸಲಾಗಿದೆ.

    ದೇಶದ ಅತ್ಯುನ್ನತ ಸಾಂವಿಧಾನಿಕ ಹುದ್ದೆ ರಾಷ್ಟ್ರಪತಿಯಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿ ಮುಗಿಯಲಿದ್ದು, ಆ ಸ್ಥಾನಕ್ಕೆ ಚುನಾವಣೆಗಾಗಿ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದೆ. ನಾಮನಿರ್ದೇಶನ ಪ್ರಕ್ರಿಯೆಯೂ ಪ್ರಾರಂಭವಾಗಿದೆ. ಜುಲೈ 18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು, ಜೂನ್ 29ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿದೆ. ಚುನಾವಣೆಯ ಭದ್ರತಾ ಠೇವಣಿ 15 ಸಾವಿರ ರೂ. ಇದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲ್ಲ ಎಂದ ಶರದ್ ಪವಾರ್

    ಅಭ್ಯರ್ಥಿಯು ಮತದಾರರಾಗಿ ನೋಂದಾಯಿಸಿಕೊಂಡಿರುವ ಪಟ್ಟಿಯಲ್ಲಿ ತನ್ನ ಹೆಸರನ್ನು ತೋರಿಸುವ ನಮೂನೆಯ ಪ್ರಮಾಣೀಕೃತ ಪ್ರತಿಯನ್ನು ಲಗತ್ತಿಸದ ಕಾರಣ ಒಬ್ಬ ಅಭ್ಯರ್ಥಿಯ ನಾಮನಿರ್ದೇಶನವನ್ನು ತಿರಸ್ಕರಿಸಲಾಗಿದೆ. ಇದನ್ನೂ ಓದಿ: 4 ದಿನ, 80 ಅಡಿ ಕೊಳವೆ ಬಾವಿಯಲ್ಲೇ ಸಿಲುಕಿದ್ದ ಹುಡುಗ – 104 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ

    ತಮಿಳುನಾಡಿನ ಕೆ.ಪದ್ಮರಾಜನ್ ಮೊದಲು ನಾಮಪತ್ರ ಸಲ್ಲಿಸಿದ್ದಾರೆ. ಆ ನಂತರ ಎ.ಮಣಿಥನ್, ದೆಹಲಿಯಿಂದ ಜೀವನ್ ಕುಮಾರ್ ಮಿತ್ತಲ್, ದಯಾ ಶಂಕರ್ ಅಗರ್ವಾಲ್, ಓಂಪ್ರಕಾಶ್ ಖರಬಂದ, ಮಹಾರಾಷ್ಟ್ರದ ಮೊಹಮ್ಮದ್ ಎ.ಹಮಿದ್ ಪಟೇಲ್, ನಾಮಕ್ಕಲ್‌ನಿಂದ ಟಿ. ರಮೇಶ್, ಬಿಹಾರದಿಂದ ಶ್ಯಾಮ್ ನಂದನ್ ಪ್ರಸಾದ್, ಲಾಲೂ ಪ್ರಸಾದ್ ಯಾದವ್ ಹಾಗೂ ಆಂಧ್ರಪ್ರದೇಶದಿಂದ ಮಂದತಿ ತಿರುಪತಿ ರೆಡ್ಡಿ ನಾಮಪತ್ರ ಸಲ್ಲಿಸಿದ್ದಾರೆ.

    ರಾಷ್ಟ್ರಪತಿ ಚುನಾವಣೆಗೆ NCP ನಾಯಕ ಶರದ್ ಪವಾರ್ ಅವರನ್ನು ಒಮ್ಮತದ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಉದ್ದೇಶಿಸಲಾಗಿತ್ತು. ಕಾಂಗ್ರೆಸ್, ಜೆಡಿಎಸ್, ಟಿಎಂಸಿ, ಆರ್‌ಜೆಡಿ ಸೇರಿದಂತೆ ಮೊದಲಾದ ಪಕ್ಷಗಳೂ ಇದಕ್ಕೆ ಬೆಂಬಲ ಸೂಚಿಸಿದ್ದವು. ಇದಕ್ಕಾಗಿ ನಿನ್ನೆ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸುಮಾರು 18 ರಾಜಕೀಯ ಪಕ್ಷದ ನಾಯಕರು ಪಾಲ್ಗೊಂಡಿದ್ದರು. ಈ ವೇಳೆ ತಾವು ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸುವುದಿಲ್ಲವೆಂದು ಪವಾರ್ ಸ್ಪಷ್ಟಪಡಿಸಿದ್ದಾರೆ.

    Live Tv

  • ರಾಷ್ಟ್ರಪತಿ ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ

    ರಾಷ್ಟ್ರಪತಿ ಚುನಾವಣೆಗೆ ಲಾಲೂ ಪ್ರಸಾದ್ ಯಾದವ್ ಸ್ಪರ್ಧೆ

    ಪಾಟ್ನಾ: ಮುಂದಿನ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಕಣಕ್ಕಿಳಿಯಲು ಲಾಲೂ ಪ್ರಸಾದ್ ಯಾದವ್ ಸಿದ್ಧತೆ ನಡೆಸಿದ್ದಾರೆ. ಆದರೆ ಇವರು ರಾಷ್ಟ್ರೀಯ ಜನತಾ ದಳದ (RJD) ಮುಖ್ಯಸ್ಥರಲ್ಲ.

    ಇವರು ಬಿಹಾರದ ಸರನ್ ಜಿಲ್ಲೆಯ ನಿವಾಸಿಯಾಗಿದ್ದಾರೆ. ಜೂನ್ 15ರಂದು ನಾಮಪತ್ರ ಸಲ್ಲಿಸುವ ಸಲುವಾಗಿ ದೆಹಲಿಗೆ ತೆರಳಲು ವಿಮಾನದ ಟಿಕೆಟ್ ಸಹ ಬುಕ್ ಮಾಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಸತತ 2ನೇ ದಿನ ಪಾಸಿಟಿವಿಟಿ ದರ ಏರಿಕೆ – ರಾಜ್ಯದಲ್ಲಿಂದು 463 ಮಂದಿಗೆ ಕೊರೊನಾ

    ಲಾಲೂ ಪ್ರಸಾದ್ ಯಾದವ್ ಚುನಾವಣೆಗೆ ಸ್ಪರ್ಧಿಸುತ್ತಿರುವುದು ಇದೇ ಮೊದಲೇನಲ್ಲ. 2017ರಲ್ಲಿಯೂ ಅವರು ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದರು. ಅಂದಿನ ಬಿಹಾರದ ರಾಜ್ಯಪಾಲ ರಾಮನಾಥ ಕೋವಿಂದ್ ಹಾಗೂ ಬಿಹಾರದವರೇ ಆದ ಲೋಕಸಭೆಯ ಮಾಜಿ ಸ್ಪೀಕರ್ ಮೀರಾ ಕುಮಾರ್ ಮಧ್ಯೆ ಪೈಪೋಟಿ ಏರ್ಪಟ್ಟಿತ್ತು. ಈ ಪೈಕಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು. ಇದನ್ನೂ ಓದಿ: ದೈನಂದಿನ ಜೀವನದ ಭಾಗವಾಗಲಿ ಯೋಗ – ಪ್ರಧಾನಿ ಮೋದಿ ಕರೆ

    ರಾಜಕೀಯ ಇತಿಹಾಸದಲ್ಲಿ ಸತತವಾಗಿ ಚುನಾವಣೆಗಳಲ್ಲಿ ಸ್ಫರ್ಧಿಸುತ್ತಿದ್ದೂ ಸೋಲುತ್ತಲೇ ಇರುವುದರಿಂದ ಕೆಲವರು ಪ್ರಚಾರದ ಸಲುವಾಗಿಯೇ ಚುನಾವಣಾ ಕಣಕ್ಕೆ ಧುಮುಕುತ್ತಾರೆ. ಅಂಥವರ ಸಾಲಿಗೆ ಲಾಲೂ ಪ್ರಸಾದ್ ಸೇರಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ. ಆದರೆ ತಮ್ಮ ವಿರುದ್ಧದ ಟೀಕೆಗಳಿಗೆ ತಲೆಕೆಡಿಸಿಕೊಳ್ಳದ ಯಾದವ್ ಸತತ ಒಂದಿಲ್ಲೊಂದು ಚುನಾವಣೆಯಲ್ಲಿ ಸ್ಪರ್ಧಿಸುತ್ತಲೇ ಇದ್ದಾರೆ.

    ಇಷ್ಟಾದರೂ ಅವರು ಚುನಾವಣೆಯ ಆಸಕ್ತಿ ಕಳೆದುಕೊಂಡಿರಲಿಲ್ಲ. 2019ರ ಚುನಾವಣೆಯಲ್ಲಿ ಮತ್ತೆ ಕಣಕ್ಕಿಳಿದಿದ್ದರು. ಆಗ ಸುಮಾರು 6 ಸಾವಿರ ಮತಗಳನ್ನು ಪಡೆದುಕೊಂಡಿದ್ದರು. ಇದೀಗ ಮತ್ತೆ ರಾಷ್ಟ್ರಪತಿ ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಲಾಲೂ ಪ್ರಸಾದ್ ಯಾದವ್, ಕಳೆದ ಬಾರಿ ನನ್ನ ನಾಮಪತ್ರ ತಿರಸ್ಕೃತವಾಗಿತ್ತು. ನನ್ನ ಉಮೇದುವಾರಿಕೆಯನ್ನು ಬೆಂಬಲಿಸಲು ಸಾಕಷ್ಟು ಸಂಖ್ಯೆಯ ಅನುಮೋದಕರೂ ಇರಲಿಲ್ಲ. ಆದರೆ ಈ ಬಾರಿ ನಾನು ಉತ್ತಮ ತಯಾರಿ ನಡೆಸಿದ್ದೇನೆ ಎಂದಿದ್ದಾರೆ.

  • ಲಾಲೂ ಪ್ರಸಾದ್ ಯಾದವ್‌ಗೆ 6,000 ರೂ. ದಂಡ ವಿಧಿಸಿದ ನ್ಯಾಯಾಲಯ

    ಲಾಲೂ ಪ್ರಸಾದ್ ಯಾದವ್‌ಗೆ 6,000 ರೂ. ದಂಡ ವಿಧಿಸಿದ ನ್ಯಾಯಾಲಯ

    ರಾಂಚಿ: 13 ವರ್ಷಗಳ ಹಿಂದಿನ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್‌ಗೆ ಜಾರ್ಖಂಡ್‌ನ ಪಲಾಮು ವಿಶೇಷ ನ್ಯಾಯಾಲಯ ಬುಧವಾರ 6,000 ರೂಪಾಯಿ ದಂಡ ವಿಧಿಸಿದೆ.

    2009ರಲ್ಲಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಾಲೂ ಪ್ರಸಾದ್ ಯಾದವ್‌ರನ್ನು ಸಂಸದ ಮತ್ತು ಶಾಸಕರ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಈ ವೇಳೆ ಲಾಲೂ ಪ್ರಸಾದ್ ಯಾದವ್ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರಿಗೆ 6,000 ರೂ. ದಂಡ ವಿಧಿಸುವ ಮೂಲಕ ಪ್ರಕರಣ ಇತ್ಯರ್ಥಗೊಂಡಿದ್ದು, ಅವರು ಈಗ ಆರೋಪ ಮುಕ್ತರಾಗಿದ್ದಾರೆ ಎಂದು ಲಾಲೂ ಅವರ ವಕೀಲ ಧೀರೇಂದ್ರ ಕುಮಾರ್ ಸಿಂಗ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಧೀಮಂತ ಜನ ನಾಯಕ: ಪ್ರಚಾರ ಸಮಯದಲ್ಲಿ ತಂದೆ ಸಾಧನೆಯನ್ನು ಗುಣಗಾನ ಮಾಡಿದ ವಿಜಯೇಂದ್ರ

    ಕಳೆದ ತಿಂಗಳು, ಕೇಂದ್ರೀಯ ತನಿಖಾ ದಳ (ಸಿಬಿಐ) ಲಾಲೂ ಯಾದವ್ ಅವರ ಪತ್ನಿ, ಪುತ್ರಿಯರು ಮತ್ತು ಇದಕ್ಕೆ ಸಂಬಂಧಿಸಿದ ಇತರರನ್ನು ಪ್ರಕರಣದಲ್ಲಿ ಆರೋಪಿಗಳೆಂದು ಹೆಸರಿಸಲಾಗಿತ್ತು. ರೈಲ್ವೆ ಉದ್ಯೋಗಕ್ಕಾಗಿ ಭೂಮಿ ಎಂಬ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ದೆಹಲಿ ಮತ್ತು ಬಿಹಾರದಲ್ಲಿ ಲಾಲೂ ಯಾದವ್ ಮತ್ತು ಅವರ ಕುಟುಂಬ ಸದಸ್ಯರಿಗೆ ಸೇರಿದ ಒಟ್ಟು 17 ಸ್ಥಳಗಳಲ್ಲಿ ಸಿಬಿಐ ಶೋಧ ನಡೆಸಿದೆ. ಯಾದವ್ 2004 ರಿಂದ 2009 ರ ಅವಧಿಯಲ್ಲಿ ರೈಲ್ವೆ ಸಚಿವರಾಗಿದ್ದಾಗ ಈ ಹಗರಣ ನಡೆದಿದೆ.

    ಕಿಡ್ನಿ ಕಸಿ ಮಾಡಿಸಿಕೊಳ್ಳಲು ವಿದೇಶಕ್ಕೆ ತೆರಳಬೇಕಾಗಿರುವುದರಿಂದ ಪಾಸ್‌ಪೋರ್ಟ್ ನವೀಕರಣಕ್ಕಾಗಿ ಬಿಡುಗಡೆ ಮಾಡುವಂತೆ ಕೋರಿ ಲಾಲೂ ಯಾದವ್ ರಾಂಚಿಯ ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದನ್ನೂ ಓದಿ: ಬಿಜೆಪಿಯಲ್ಲಿ 75 ವರ್ಷಕ್ಕೆ ಮನೆಗೆ ಕಳಿಸ್ತಾರೆ, ಕಾಂಗ್ರೆಸ್‌ನಲ್ಲಿ 90 ಆದ್ರೂ ಚುನಾವಣೆಗೆ ನಿಲ್ಲಿಸ್ತಾರೆ: ಕತ್ತಿ

    ಲಾಲೂ ಯಾದವ್ ಅವರು ಕಿಡ್ನಿ ಕಸಿಗಾಗಿ ಸಿಂಗಾಪುರಕ್ಕೆ ಹೋಗುವ ಸಾಧ್ಯತೆ ಇದೆ. ಈ ಮಧ್ಯೆ ಪಾಸ್‌ಪೋರ್ಟ್ ನವೀಕರಿಸಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ನವೀಕರಿಸಿದ ಪಾಸ್‌ಪೋರ್ಟ್‌ ಅನ್ನು ಮತ್ತೆ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ಯಾದವ್ ಪರ ಮತ್ತೊಬ್ಬ ವಕೀಲ ಪ್ರಭಾತ್ ಕುಮಾರ್ ತಿಳಿಸಿದ್ದಾರೆ.

  • ಲಾಲು ಪ್ರಸಾದ್ ಯಾದವ್‍ಗೆ ಶಾಕ್ ಕೊಟ್ಟ ಸಿಬಿಐ – ಲಾಲು, ಪುತ್ರಿ ನಿವಾಸದ ಮೇಲೆ ದಾಳಿ

    ಲಾಲು ಪ್ರಸಾದ್ ಯಾದವ್‍ಗೆ ಶಾಕ್ ಕೊಟ್ಟ ಸಿಬಿಐ – ಲಾಲು, ಪುತ್ರಿ ನಿವಾಸದ ಮೇಲೆ ದಾಳಿ

    ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಆರ್‌ಜೆಡಿ ನಾಯಕ ಲಾಲು ಪ್ರಸಾದ್ ಯಾದವ್ ಹಾಗೂ ಅವರ ಮಗಳ ನಿವಾಸ, ಕಚೇರಿ ಮೇಲೆ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಲಾಲುಗೆ ಸಂಬಂಧಿಸಿದ 15 ಸ್ಥಳಗಳಲ್ಲಿ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಶೋಧ ನಡೆಸಿದೆ. ಮೇವು ಹಗರಣ ಪ್ರಕರಣದಲ್ಲಿ ಜಾಮೀನು ಪಡೆದ ಕೆಲವೇ ವಾರಗಳಲ್ಲಿ, ಲಾಲು ಪ್ರಸಾದ್ ಯಾದವ್ ಅವರು ಬಿಹಾರ ಮುಖ್ಯಮಂತ್ರಿಯಾಗಿದ್ದ ವೇಳೆ ನೇಮಕಾತಿಯಲ್ಲಿ ಅಕ್ರಮ ನಡೆಸಿದ್ದಾರೆ ಎಂಬ ಆರೋಪದಡಿ ಭ್ರಷ್ಟಾಚಾರ ಆರೋಪವನ್ನು ಹೊರಿಸಲಾಗಿದೆ. ಇದನ್ನೂ ಓದಿ: ಮುಂದುವರಿದ ಮಳೆ ಅಬ್ಬರ: ಉಡುಪಿ, ಶಿವಮೊಗ್ಗ, ದಾವಣಗೆರೆ, ಹಾವೇರಿಯಲ್ಲಿ ಶಾಲೆಗಳಿಗೆ ರಜೆ

    ಇದು ಲಾಲು ಯಾದವ್ ಮತ್ತು ಅವರ ಮಗಳ ವಿರುದ್ಧದ ಹೊಸ ಪ್ರಕರಣವಾಗಿದೆ. ಪ್ರಾಥಮಿಕ ತನಿಖೆಯನ್ನು ಸಿಬಿಐ ಆರಂಭಿಸಿದ್ದು ಅದನ್ನು ಈಗ ಎಫ್‍ಐಆರ್ ಆಗಿ ಪರಿವರ್ತಿಸಲಾಗಿದೆ. ಕೇಂದ್ರೀಯ ತನಿಖಾ ದಳ (ಸಿಬಿಐ) ಇಂದು ರಾಷ್ಟ್ರೀಯ ಜನತಾ ದಳದ ಮಠಾಧೀಶರ ನಿವಾಸ ಸೇರಿದಂತೆ 15 ಸ್ಥಳಗಳಲ್ಲಿ ಶೋಧ ಆರಂಭಿಸಿದೆ. ಇದನ್ನೂ ಓದಿ: ಕೆಂಪೇಗೌಡ ಏರ್‌ಪೋರ್ಟ್‍ಗೆ ಬಾಂಬ್ ಬೆದರಿಕೆ ಕರೆ

  • ಮೇವು ಹಗರಣ – ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು

    ಮೇವು ಹಗರಣ – ಲಾಲೂ ಪ್ರಸಾದ್‌ ಯಾದವ್‌ಗೆ ಜಾಮೀನು

    ರಾಂಚಿ: ಮೇವು ಹಗರಣಕ್ಕೆ ಸಂಬಂಧಿಸಿದ 5ನೇ ಪ್ರಕರಣದಲ್ಲಿ (ಡೊರಂಡ ಖಜಾನೆ ಪ್ರಕರಣ) ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್‌ ಯಾದವ್‌ ಅವರಿಗೆ ಜಾರ್ಖಂಡ್‌ ಹೈಕೋರ್ಟ್‌ ಶುಕ್ರವಾರ ಜಾಮೀನು ನೀಡಿದೆ.

    ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐ ವಿಶೇಷ ನ್ಯಾಯಾಲಯ ಯಾದವ್‌ ಅವರನ್ನು ದೋಷಿ ಎಂದು ಪರಿಗಣಿಸಿ 5 ವರ್ಷ ಜೈಲು ಶಿಕ್ಷೆ, ದಂಡ ವಿಧಿಸಿತ್ತು. ಆದರೆ ಅವರ ಆರೋಗ್ಯ ಸ್ಥಿತಿ ಸರಿಯಿಲ್ಲದ ಕಾರಣ ಜಾರ್ಖಂಡ್‌ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ – ನವಾಬ್‌ ಮಲಿಕ್‌ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ

    ಆರೋಗ್ಯ ಸಮಸ್ಯೆ ಕಾರಣದಿಂದಾಗಿ ಅವರಿಗೆ ಜಾಮೀನು ನೀಡಲಾಗಿದೆ. ಶೀಘ್ರದಲ್ಲೇ ಬಿಡುಗಡೆಯಾಗಲಿದ್ದಾರೆ. 1 ಲಕ್ಷ ರೂ. ಶ್ಯೂರಿಟಿ ಮೊತ್ತ ಮತ್ತು 10 ಲಕ್ಷ ರೂ. ದಂಡವಾಗಿ ಠೇವಣಿ ಮಾಡಬೇಕಾಗುತ್ತದೆ ಎಂದು ಯಾದವ್‌ ಪರ ವಕೀಲ ತಿಳಿಸಿದ್ದಾರೆ.

    ಅವಿಭಜಿತ ಬಿಹಾರದಲ್ಲಿ ನಡೆದಿದ್ದ 950 ಕೋಟಿ ರೂ. ಮೊತ್ತದ ಮೇವು ಹಗರಣದಲ್ಲಿ, ವಿವಿಧ ಜಿಲ್ಲೆಗಳಲ್ಲಿನ ಸರ್ಕಾರಿ ಖಜಾನೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿತ್ತು. ಡೊರಂಡ ಜಿಲ್ಲಾ ಸರ್ಕಾರಿ ಖಜಾನೆಯಿಂದ 139 ಕೋಟಿ ರೂ. ಕ್ರಮವಾಗಿ ಪಡೆಯಲಾಗಿತ್ತು. ಇದನ್ನೂ ಓದಿ: ಎಲೆಕ್ಟ್ರಿಕ್ ವಾಹನಗಳ ಕಂಪನಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟ ನಿತಿನ್ ಗಡ್ಕರಿ

    ಇದೇ ಮೇವು ಹಗರಣದ ದುಮ್ಕಾ, ದಿಯೋಘರ್ ಮತ್ತು ಚೈಬಾಸಾ ಖಜಾನೆಗಳಿಂದ ಹಣ ಪಡೆದುಕೊಂಡ ನಾಲ್ಕು ಪ್ರಕರಣಗಳಲ್ಲೂ ಲಾಲೂ ಅವರಿಗೆ ಜೈಲು ಶಿಕ್ಷೆ, ದಂಡ ವಿಧಿಸಲಾಗಿತ್ತು.

  • ಮುಂಜಾನೆ 3.30ಕ್ಕೆ ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ಮುಂಜಾನೆ 3.30ಕ್ಕೆ ಲಾಲೂ ಪ್ರಸಾದ್ ಯಾದವ್ ಆಸ್ಪತ್ರೆಯಿಂದ ಡಿಸ್ಚಾರ್ಜ್

    ನವದೆಹಲಿ: ಏಕಾಏಕಿ ಆರೋಗ್ಯದಲ್ಲಿ ಏರುಪೇರು ಕಂಡ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ರಾಷ್ಟ್ರೀಯ ಜನತಾ ದಳ (ಆರ್‍ಜೆಡಿ) ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಇಂದು ಡಿಸ್ಚಾರ್ಜ್ ಆಗಿದ್ದಾರೆ.

    73 ವರ್ಷದ ಲಾಲೂಗೆ ಸದ್ಯ ಚಿಕಿತ್ಸೆ ಮುಂದುವರಿದಿದೆ. ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪುತ್ರ ತೇಜಸ್ವಿ ಯಾದವ್ ಮಾಹಿತಿ ನೀಡಿದ್ದಾರೆ.

    ಮೇವು ಹಗರಣ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ರಾಂಚಿಯ ರಾಜೇಂದ್ರ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ನಲ್ಲಿ (RIMS) ಲಾಲೂ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕಳೆದ ಎರಡು ದಿನಗಳಿಂದ ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಟ್ಟ ಪರಿಣಾಮ ಮಂಗಳವಾರ ರಾತ್ರಿ 9 ಗಂಟೆ ಸುಮಾರಿಗೆ ದೆಹಲಿಯ ಏಮ್ಸ್ ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಎಮೆರ್ಜೆನ್ಸಿ ವಾರ್ಡ್ ನಲ್ಲಿ ಚಿಕಿತ್ಸೆ ಕೊಡಲಾಗಿತ್ತು. ಇದನ್ನೂ ಓದಿ: 2ನೇ ಅವಧಿಗೆ ಪುಷ್ಕರ್ ಸಿಂಗ್ ಧಾಮಿ ಪ್ರಮಾಣವಚನ ಸ್ವೀಕಾರ

    ರಾಂಚಿಯ ರಾಜೇಂದ್ರ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲೂ ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆ ಎದುರಿಸುತ್ತಿದ್ದು, ಅಲ್ಲದೇ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಹಾಗಾಗಿ ಅವರ ವಯಸ್ಸನ್ನು ಪರಿಗಣಿಸಿ, ಇನ್ನಷ್ಟು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ನಾವು ಅವರನ್ನು ರಿಮ್ಸ್‍ನಿಂದ ದೆಹಲಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ರಿಮ್ಸ್ ನಿರ್ದೇಶಕ ಡಾ.ಕಾಮೇಶ್ವರ್ ಪ್ರಸಾದ್ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದರು.

  • ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು – ದೆಹಲಿಯ ಏಮ್ಸ್‌ಗೆ ಶಿಫ್ಟ್‌

    ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು – ದೆಹಲಿಯ ಏಮ್ಸ್‌ಗೆ ಶಿಫ್ಟ್‌

    ನವದೆಹಲಿ: ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಲಾಲೂ ಪ್ರಸಾದ್ ಯಾದವ್ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನೆಲೆ ಅವರನ್ನು ದೆಹಲಿಯ ಏಮ್ಸ್‌ಗೆ  ಸ್ಥಳಾಂತರಿಸಲಾಗಿದೆ.

    ಲಾಲೂ, ಮೇವು ಹಗರಣ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿ ರಾಂಚಿಯ ರಾಜೇಂದ್ರ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ (RIMS) ಬಹು ಕಾಯಿಲೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಎರಡು ದಿನಗಳಿಂದ ಆರೋಗ್ಯ ಸ್ಥಿತಿ ಇನ್ನಷ್ಟು ಹದಗೆಟ್ಟ ಪರಿಣಾಮ ದೆಹಲಿಯ ಏಮ್ಸ್‌ಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಇದನ್ನೂ ಓದಿ: ಲಾಲೂ ಪ್ರಸಾದ್ ಯಾದವ್ ಕಿರುಕುಳ ಎದುರಿಸುತ್ತಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

    ರಾಂಚಿಯ ರಾಜೇಂದ್ರ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಲಾಲೂ ಹೃದಯ ಮತ್ತು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಎರಡು ದಿನಗಳಿಂದ ಉಸಿರಾಟದ ತೊಂದರೆ ಎದುರಿಸುತ್ತಿದ್ದು, ಅಲ್ಲದೇ ನ್ಯುಮೋನಿಯಾ ಕೂಡ ಕಾಣಿಸಿಕೊಂಡಿತ್ತು. ಹಾಗಾಗಿ ಅವರ ವಯಸ್ಸನ್ನು ಪರಿಗಣಿಸಿ, ಇನ್ನಷ್ಟು ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರ ಸಲಹೆಯ ಮೇರೆಗೆ ನಾವು ಅವರನ್ನು ರಿಮ್ಸ್‌ನಿಂದ ದೆಹಲಿಗೆ ಸ್ಥಳಾಂತರಿಸಲು ನಿರ್ಧರಿಸಿದ್ದೇವೆ ಎಂದು ರಿಮ್ಸ್ ನಿರ್ದೇಶಕ ಡಾ.ಕಾಮೇಶ್ವರ್ ಪ್ರಸಾದ್ ಸ್ಥಳೀಯ ಮಾಧ್ಯಮವೊಂದಕ್ಕೆ ತಿಳಿಸಿದ್ದಾರೆ. ಇದನ್ನೂ ಓದಿ: ಆರ್ಥಿಕ ಅವನತಿಯತ್ತ ಶ್ರೀಲಂಕಾ – ಸಕ್ಕರೆ, ಬೇಳೆಗೆ ಚಿನ್ನದ ಬೆಲೆ, 1 ಟೀಗೆ 100 ರೂ.

    ಬಹುಕೋಟಿ ಮೇವು ಹಗರಣದಲ್ಲಿ ಶಿಕ್ಷೆಗೆ ಗುರಿಯಾದ ಲಾಲೂ ಪ್ರಸಾದ್ ಯಾದವ್ ಅವರಿಗೆ ವಿಶೇಷ ಸಿಬಿಐ ನ್ಯಾಯಾಲಯ ಈಗಾಗಲೇ 5 ವರ್ಷ ಕಾರಾಗೃಹ ಶಿಕ್ಷೆ ಮತ್ತು 60 ಲಕ್ಷ ರೂ. ದಂಡ ವಿಧಿಸಿದೆ. ಫೆಬ್ರ್ರವರಿ 21ರಂದು ತೀರ್ಪು ಹೊರಬಿದ್ದ ಬಳಿಕ ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಮೇವು ಖರೀದಿಗಾಗಿ ಇರಿಸಿದ್ದ 139 ಕೋಟಿ ರೂ. ಹಣವನ್ನು ದುರ್ಬಳಕೆ ಮಾಡಿಕೊಂಡ ಒಂದು ಪ್ರಕರಣದಲ್ಲಿ ಫೆಬ್ರುವರಿ 21ರಂದು ತೀರ್ಪು ಪ್ರಕಟವಾಗಿತ್ತು.

  • ಬಿಜೆಪಿ ಸೋಲಿಸಲು 25 ವರ್ಷಗಳ ಬಳಿಕ ಒಂದಾದ ಸಹೋದರರು

    ಬಿಜೆಪಿ ಸೋಲಿಸಲು 25 ವರ್ಷಗಳ ಬಳಿಕ ಒಂದಾದ ಸಹೋದರರು

    ನವದೆಹಲಿ: ಕೇಂದ್ರದ ಮಾಜಿ ಸಚಿವ ಶರದ್ ಯಾದವ್ ಅವರು ತಮ್ಮ ಪಕ್ಷ ಲೋಕತಾಂತ್ರಿಕ್ ಜನತಾ ದಳವನ್ನು (ಎಲ್‍ಜೆಡಿ) ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಪಕ್ಷದೊಂದಿಗೆ ವಿಲೀನಗೊಳಿಸಿದ್ದಾರೆ.

    ಶರದ್ ಯಾದವ್ ಅವರ ದೆಹಲಿಯ ನಿವಾಸದಲ್ಲಿ ಪಕ್ಷಗಳ ವಿಲೀನದ ಬಗ್ಗೆ ಭಾನುವಾರ ಘೋಷಿಸಿದ್ದಾರೆ.

    Lalu Prasad Yadav

    ಲಾಲು ಪ್ರಸಾದ್ ಯಾದವ್ ಹಾಗೂ ಶರದ್ ಯಾದವ್ ಬಿಜೆಪಿಯನ್ನು ಮಣಿಸಲು 25 ವರ್ಷಗಳ ನಂತರ ಒಂದಾಗಿದ್ದಾರೆ. 1997ರಲ್ಲಿ ಬೇರೆಯಾಗಿದ್ದರು. ಇದಾದ ನಂತರ 2018ರಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಶರದ್ ಯಾದವ್, ನಂತರ ಎಲ್‍ಜೆಡಿ ರಚಿಸಿದ್ದರು. 2019ರ ಲೋಕಸಭಾ ಚುನಾವಣೆಯಲ್ಲಿ ಎಲ್‍ಜೆಡಿಯಿಂದ ಮಾಧೇಪುರ ಕ್ಷೇತ್ರದಲ್ಲಿ ಪ್ರತಿನಿಧಿಸಿದ್ದರು. ಇದೀಗ ಮತ್ತೆ ರಾಷ್ಟ್ರೀಯ ಜನತಾ ದಳದೊಂದಿಗೆ ತಮ್ಮ ಪಕ್ಷವನ್ನು ವಿಲೀನಗೊಳಿಸಿದ್ದಾರೆ. ಇದನ್ನೂ ಓದಿ:  ಭಿಕ್ಷುಕನ ಜೊತೆ ಪತ್ನಿ ರೋಮ್ಯಾನ್ಸ್ ನೋಡಿ ಬೆಚ್ಚಿಬಿದ್ದ ಪತಿ 

    ಈ ಕುರಿತು ಮಾತನಾಡಿರುವ ಶರದ್ ಯಾದವ್, ನಮ್ಮ ಪಕ್ಷವನ್ನು ವಿಲೀನಗೊಳಿಸಿರುವುದು ಪ್ರತಿಪಕ್ಷಗಳು ಒಗ್ಗಟ್ಟಾಗುವುದರ ಮೊದಲ ಹಂತ. ಬಿಜೆಪಿಯನ್ನು ಸೋಲಿಸುವುದಕ್ಕಾಗಿ ಭಾರತದಾದ್ಯಂತ ಎಲ್ಲ ಪ್ರತಿಪಕ್ಷಗಳು ಒಗ್ಗಟ್ಟಾಗಬೇಕಿದೆ. ಸದ್ಯಕ್ಕೆ ಇದು ನಮ್ಮ ಆದ್ಯತೆಯಾಗಿದೆ. ಆಮೇಲೆ ಪ್ರತಿಪಕ್ಷಗಳ ಮೈತ್ರಿಕೂಟವನ್ನು ಯಾರು ಮುನ್ನಡೆಸಬಹುದು ಎಂಬ ಬಗ್ಗೆ ಯೋಚಿಸಬಹುದು ಎಂದು ಹೇಳಿದ್ದಾರೆ.

  • ಮೇವು ಹಗರಣ – ಲಾಲು ಪ್ರಸಾದ್‌ ಯಾದವ್‌ಗೆ 5 ವರ್ಷ ಜೈಲು, 60 ಲಕ್ಷ ದಂಡ

    ಮೇವು ಹಗರಣ – ಲಾಲು ಪ್ರಸಾದ್‌ ಯಾದವ್‌ಗೆ 5 ವರ್ಷ ಜೈಲು, 60 ಲಕ್ಷ ದಂಡ

    ನವದೆಹಲಿ: ಬಹುಕೋಟಿ ಮೇವು ಹಗರಣದ ಪ್ರಮುಖ ಅಪರಾಧಿ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ನಾಯಕ ಹಾಗೂ ಬಿಹಾರ್‌ ಮಾಜಿ ಸಿಎಂ ಲಾಲು ಪ್ರಸಾದ್‌ ಯಾದವ್‌ ಅವರಿಗೆ ಕೇಂದ್ರ ತನಿಖಾ ದಳ (ಸಿಬಿಐ)ದ ವಿಶೇಷ ನ್ಯಾಯಾಲಯವು 5 ವರ್ಷ ಜೈಲು ಶಿಕ್ಷೆ ಹಾಗೂ 60 ಲಕ್ಷ ರೂ. ದಂಡ ವಿಧಿಸಿದೆ.

    ಫೆ.15 ರಂದು ಆರ್‌ಜೆಡಿ ಮುಖ್ಯಸ್ಥರನ್ನು ಈ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲಾಗಿದ್ದು, ಶಿಕ್ಷೆಯ ಪ್ರಮಾಣವನ್ನು ಇಂದು ಪ್ರಕಟಿಸಲು ನಿರ್ಧರಿಸಲಾಗಿತ್ತು. ಯಾದವ್‌ ಅವರು ಡೊರಾಂಡಾ ಖಜಾನೆಯಿಂದ 139 ಕೋಟಿ ಹಣವನ್ನು ಅಕ್ರಮವಾಗಿ ಪಡೆದಿದ್ದರು. ಇದನ್ನೂ ಓದಿ: ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್‌ ದೋಷಿ – CBI ಕೋರ್ಟ್‌

    ಮೇವು ಹಗರಣದ ಐದನೇ ಪ್ರಕರಣದಲ್ಲಿ ಯಾದವ್‌ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಕಳೆದ ವಾರ ಅನಾರೋಗ್ಯದ ಕಾರಣದಿಂದಾಗಿ ಯಾದವ್‌ ಅವರನ್ನು ಹೊತ್ವಾರ್‌ ಜೈಲಿನಿಂದ ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ಅವರನ್ನು ಸ್ಥಳಾಂತರಿಸಲಾಗಿತ್ತು. ದುಮ್ಕಾಗೆ ಸಂಬಂಧಿಸಿದ ಇತರ ನಾಲ್ಕು ಪ್ರಕರಣಗಳಲ್ಲಿ ಈ ಹಿಂದೆ 14 ವರ್ಷ ಜೈಲು ಶಿಕ್ಷೆಗೆ ಗುರಿಯಾಗಿದ್ದರು.

    jail

    ಡೊರಾಂಡಾ ಖಜಾನೆ ಹಗರಣ ಪ್ರಕರಣದಲ್ಲಿ ಒಟ್ಟು 170 ಜನರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಇವರಲ್ಲಿ 55 ಮಂದಿ ಸಾವನ್ನಪ್ಪಿದ್ದಾರೆ. 7 ಮಂದಿ ಸರ್ಕಾರಿ ಸಾಕ್ಷಿಗಳಾಗಿದ್ದಾರೆ. 6 ಮಂದಿ ತಲೆಮರೆಸಿಕೊಂಡಿದ್ದಾರೆ. ಇಬ್ಬರು ತಮ್ಮ ವಿರುದ್ಧದ ಆರೋಪಗಳನ್ನು ಒಪ್ಪಿಕೊಂಡಿದ್ದಾರೆ. ಯಾದವ್‌ ಸೇರಿದಂತೆ ಉಳಿದ 99 ಆರೋಪಿಗಳಲ್ಲಿ 24 ಮಂದಿ ಖುಲಾಸೆಗೊಂಡಿದ್ದಾರೆ. ಉಳಿದ 46 ಮಂದಿಯನ್ನು ದೋಷಿಗಳು ಎಂದು ಘೋಷಿಸಿ, ಶಿಕ್ಷೆ ವಿಧಿಸಲಾಗಿದೆ. ಇದನ್ನೂ ಓದಿ: ನಾನು ಇಂತಹ ರಾಜಕೀಯದ ವಿರುದ್ಧ ಸತ್ತಿದ್ದೇನೆ: ಕಮಲ್ ಹಾಸನ್

  • ಲಾಲೂ ಪ್ರಸಾದ್ ಯಾದವ್ ಕಿರುಕುಳ ಎದುರಿಸುತ್ತಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

    ಲಾಲೂ ಪ್ರಸಾದ್ ಯಾದವ್ ಕಿರುಕುಳ ಎದುರಿಸುತ್ತಿದ್ದಾರೆ: ಬಿಜೆಪಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ

    ರಾಂಚಿ: ಬಿಜೆಪಿ ಮುಂದೆ ತಲೆ ಬಾಗದವರು ಕಿರುಕುಳ ಎದುರಿಸುತ್ತಾರೆ ಎಂದು ಹೇಳುವ ಮೂಲಕ ಮೇವು ಹಗರಣದಲ್ಲಿ ದೋಷಿಯಾಗಿರುವ ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಬೆಂಬಲಕ್ಕೆ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ನಿಂತಿದ್ದಾರೆ.

    ಪ್ರಿಯಾಂಕಾ ಗಾಂಧಿ ಅವರು ಬಿಜೆಪಿ ಎಂಬ ರಾಜಕೀಯ ಬ್ರಾಂಡ್ ಮುಂದೆ ಬಾಗದವರು ಕಿರುಕುಳವನ್ನು ಎದುರಿಸುತ್ತಾರೆ. ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕರಿಗೆ ಅಂತಿಮವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ ಎಂದು ತಮ್ಮ ಟ್ವಿಟ್ಟರ್‌ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಬಹುಕೋಟಿ ಮೇವು ಹಗರಣ, ಲಾಲೂ ಪ್ರಸಾದ್ ಯಾದವ್‌ ದೋಷಿ – CBI ಕೋರ್ಟ್‌

    ಬಿಜೆಪಿ ಬ್ರಾಂಡ್ ರಾಜಕಾರಣದ ಪ್ರಮುಖ ಅಂಶವೆಂದರೆ, ತಲೆಬಾಗದವರು (ಪಕ್ಷದ ಮುಂದೆ) ಕಿರುಕುಳವನ್ನು ಎದುರಿಸಬೇಕಾಗುತ್ತದೆ. ಲಾಲು ಪ್ರಸಾದ್ ಯಾದವ್ ಅವರು ರಾಜಕೀಯದಲ್ಲಿ ರಾಜಿ ಮಾಡಿಕೊಳ್ಳದ ರೀತಿಯಲ್ಲಿ ದಾಳಿ ನಡೆಸುತ್ತಿದ್ದಾರೆ. ಅವರಿಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ನನಗಿದೆ ಎಂದು ತಿಳಿಸಿದ್ದಾರೆ.

    ಮಂಗಳವಾರ ಜಾರ್ಖಂಡ್ ರಾಜಧಾನಿ ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು ಡೊರಾಂಡಾ ಮೇವು ಹಗರಣದ ಪ್ರಕರಣದಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಕೂಡಾ ದೋಷಿ ಎಂದು ಘೋಷಿಸಿದೆ. ಇದನ್ನೂ ಓದಿ: ಕೋರ್ಟ್ ತೀರ್ಪು ಬರುವವರೆಗೂ ಮಗಳು ಮನೆಯಲ್ಲೇ ಇರಲಿ: ಮಂಡ್ಯ ಪೋಷಕರು