ಬಾಗಲಕೋಟೆ: ಭೂಸ್ವಾಧೀನ (Land Acquisition) ಮಾಡಿ ಪರಿಹಾರದ ಹಣವನ್ನು ನೀಡದ್ದಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ ಕಚೇರಿಯಲ್ಲಿನ (Bagalkote DC Office) ವಸ್ತುಗಳನ್ನು ಜಪ್ತಿ ಮಾಡಲಾಗಿದೆ.
ಜಮೀನು ವಶಪಡಿಸಿಕೊಂಡರೂ ರೈತರಿಗೆ ಪರಿಹಾರ ಹಣ ವಿತರಣೆಯಾಗಿರಲಿಲ್ಲ. ಹೀಗಾಗಿ 2ನೇ ಕಂತಿನ ಪರಿಹಾರಕ್ಕೆ 5ನೇ ಹೆಚ್ಚುವರಿ ನ್ಯಾಯಾಲಯದಲ್ಲಿ (Court) ರೈತರು ದೂರು ದಾಖಲಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪರಿಹಾರ ಕೊಡಬೇಕು ಎಂದು ಆದೇಶಿಸಿತ್ತು.
ಕೋರ್ಟ್ ಆದೇಶವಿದ್ದರೂ ಜಿಲ್ಲಾಡಳಿತ ಹಣವನ್ನು ನೀಡದ್ದಕ್ಕೆ ಇಂದು ಕಚೇರಿಯಲ್ಲಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟು ಮೂರು ಪ್ರಕರಣಗಳ 1.80 ಕೋಟಿ ರೂ.ಗಳನ್ನು ಪರಿಹಾರವಾಗಿ ನೀಡಬೇಕಿದೆ ಎಂದು ವಕೀಲರು ತಿಳಿಸಿದರು.
ಬೆಂಗಳೂರು: 3 ವರ್ಷಗಳಿಂದ ನಡೆಯುತ್ತಿದ್ದ ದೇವನಹಳ್ಳಿಯ ಚನ್ನರಾಯಪಟ್ಟಣ ಜಮೀನು ಭೂಸ್ವಾಧೀನ ವಿವಾದ ಕೊನೆಗೂ ಅಂತ್ಯವಾಗಿದೆ. 1,777 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಹೊರಡಿಸಿದ್ದ ಫೈನಲ್ ನೋಟಿಫಿಕೇಶನ್‌ಅನ್ನು ರಾಜ್ಯ ಸರ್ಕಾರ ರದ್ದು ಮಾಡೋದಾಗಿ ಘೋಷಣೆ ಮಾಡಿದೆ.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ರೈತರು, ಹೋರಾಟಗಾರರು, ಸಂಘಟನೆಗಳ ಸಭೆಯಲ್ಲಿ ನೋಟಿಫಿಕೇಶನ್ ರದ್ದು ಮಾಡುವ ಬಗ್ಗೆ ಘೋಷಣೆ ಮಾಡಿದರು. ಸಭೆ ಬಳಿಕ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, 1,777 ಎಕರೆ ಜಮೀನು ಭೂಸ್ವಾಧೀನಕ್ಕೆ ಸರ್ಕಾರ ನೋಟಿಫಿಕೇಶನ್ ಹೊರಡಿಸಿತ್ತು. ಕೃಷಿ ಭೂಮಿ ಭೂಸ್ವಾಧೀನ ಮಾಡದಂತೆ ರೈತರು ಹೋರಾಟ ಮಾಡುತ್ತಿದ್ದರು. ಕೃಷಿ ಚಟುವಟಿಕೆಗಳು ಮುಂದುವರೆಸುವ ದೃಷ್ಟಿಯಿಂದ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನ ರದ್ದು ಮಾಡುತ್ತಿರೋದಾಗಿ ತಿಳಿಸಿದರು.ಇದನ್ನೂ ಓದಿ: ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು
ಒಂದು ವೇಳೆ ರೈತರು ಸ್ವಯಂ ಪ್ರೇರಿತರಾಗಿ ಜಮೀನು ಕೊಟ್ಟರೆ ಆ ಭೂಮಿ ಸರ್ಕಾರ ಪಡೆಯಲಿದೆ. ಜೊತೆಗೆ ಸೂಕ್ತ ಪರಿಹಾರ ಕೊಡುವ ಜೊತೆಗೆ ಅಭಿವೃದ್ಧಿಪಡಿಸಿದ 50% ಭೂಮಿಯನ್ನು ಜಮೀನು ಕೊಡುವ ರೈತರಿಗೆ ಕೊಡಲಾಗುತ್ತದೆ. ಸರ್ಕಾರದ ಈ ನಿರ್ಧಾರ ದೇವನಹಳ್ಳಿ ಜಮೀನಿಗೆ ಮಾತ್ರ ಅನ್ವಯ ಆಗಲಿದೆ ಎಂದು ಸ್ಪಷ್ಟಪಡಿಸಿದರು.
ಸರ್ಕಾರದ ನಿರ್ಧಾರದ ಬಗ್ಗೆ ಮಾತನಾಡಿದ ನಟ ಪ್ರಕಾಶ್ ರಾಜ್, ಇದು 3 ವರ್ಷಗಳ ಪ್ರತಿಭಟನೆಗೆ ಸಿಕ್ಕ ಜಯ. ಇದು ರೈತರ ಜಯ ಇದು. ಸಂಘಟನೆಗಳ ಜಯ. ಐತಿಹಾಸಿಕ ಚಳುವಳಿಯ ಜಯ ಇದು. ಸರ್ಕಾರಕ್ಕೆ, ಸಿಎಂಗೆ ಧನ್ಯವಾದಗಳನ್ನು ಹೇಳ್ತೀನಿ. ದೇವನಹಳ್ಳಿ ಹೋರಾಟಕ್ಕೆ ಜಯವಾಗಿದೆ. ಮುಂದಿನ ಹೋರಾಟದ ಬಗ್ಗೆ ಮುಂದೆ ನೋಡೋಣ ಎಂದರು.
ರೈತ ನಾಯಕ ಬಡಗಲಪುರ ನಾಗೇಂದ್ರ ಮಾತಾಡಿ, ಇದೊಂದು ಸಂಘಟಿತ ಹೋರಾಟ. ಎಲ್ಲರು ಒಟ್ಟಾಗಿ ಹೋರಾಟ ಮಾಡಿದ್ವಿ. ಇದೊಂದು ಐತಿಹಾಸಿಕ ಜಯ. ಯಾವುದೇ ಕೃಷಿ ಭೂಮಿಗೆ ಸಮಸ್ಯೆ ಮಾಡಿದ್ರೆ ಹೋರಾಟ ಮಾಡ್ತೀವಿ. ಫಲವತ್ತಾದ ಭೂಮಿ ಸ್ವಾಧೀನ ಮಾಡಿಕೊಳ್ಳಬಾರದು. ಭೂಮಿ ಬಲಾತ್ಕಾರವಾಗಿ ವಶ ಮಾಡಿಕೊಂಡರೇ ಹೋರಾಟ ಮಾಡ್ತೀವಿ. ಇದು ರೈತರ ಹೋರಾಟಕ್ಕೆ ಸಿಕ್ಕ ಜಯ ಇದು. ಇಲ್ಲಿ ಯಾವುದೇ ಮಾಫಿಯಾದ ಕೈಗಳು ಇಲ್ಲ. ಇದು ರೈತರು, ಮಹಿಳೆಯರ ಹೋರಾಟಕ್ಕೆ ಸಿಕ್ಕ ಜಯ ಎಂದರು. ಇದನ್ನೂ ಓದಿ: ಭಾರತಕ್ಕೆ ಟೆಸ್ಲಾ ಎಂಟ್ರಿ | ಮೈಲೇಜ್ ಎಷ್ಟು? ಬೇರೆ ದೇಶದಲ್ಲಿ ದರ ಎಷ್ಟಿದೆ? ಭಾರತದಲ್ಲಿ ದುಬಾರಿ ಯಾಕೆ?
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳಲ್ಲಿ 1,777 ಎಕೆರೆ ಭೂಸ್ವಾಧೀನಕ್ಕೆ ಕೆಐಎಡಿಬಿ ಮುಂದಾಗಿದ್ದು, ಸರ್ಕಾರದ ಕ್ರಮ ಖಂಡಿಸಿ ಈ ಭಾಗದ ರೈತರು (Farmers) ತಮ್ಮ ಜಮೀನು ಕೊಡೋದಿಲ್ಲ ಅಂತ ನಿರಂತರ 4 ವರ್ಷಗಳಿದ ಅನಿರ್ಧಾಷ್ಟವಧಿ ಧರಣಿ ನಡೆಸುತ್ತಿದ್ದಾರೆ.
ಇಂದು ಸಹ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ದೇವನಹಳ್ಳಿ ಶಾಸಕ ಕೆ.ಹೆಚ್ ಮುನಿಯಪ್ಪ (KH Muniyappa) ನಿವಾಸಕ್ಕೆ ಮುತ್ತಿಗೆ ಹಾಕಲು ತೀರ್ಮಾನ ಮಾಡಿದ್ರು. ಅಂತೆಯೇ ಎರಡು ಬಸ್‌ಗಳ ಮೂಲಕ ಬೆಂಗಳೂರಿಗೆ ಹೊರಟಿದ್ದ ರೈತರ ಬಸ್‍ನ್ನ ಪೊಲೀಸರು ತಡೆಯೊಡ್ಡಿದ್ದರು. ಇದ್ರಿಂದ ರೈತರು ಹಾಗೂ ಪೊಲೀಸರು ನಡುವೆ ವಾಗ್ವಾದ ಮಾತಿನ ಚಕಮಕಿ ನಡೆದಿದೆ. ಇದನ್ನೂ ಓದಿ: ಬಾಂಬ್ ದಾಳಿಗೂ ಜಗ್ಗಲ್ಲ – ಮುಂಬೈ ದಾಳಿಕೋರನನ್ನ ಕರೆತರಲು ಸಿದ್ಧವಾಯ್ತು NIA ಬುಲೆಟ್ ಪ್ರೂಫ್ ಕಾರು
ಬೆಂಗಳೂರು: ಮಿಕ್ಕಿದ್ದಕ್ಕೆಲ್ಲಾ ದಾಖಲೆ ಇರುತ್ತೆ, ಇದಕ್ಕೆ ಇರಲ್ವಾ? ಸರ್ಕಾರದ ತಪ್ಪಿದ್ದರೆ ನಮಗೆ ಶಿಕ್ಷೆಯಾಗುತ್ತೆ. ನಿಮ್ಮ ತಪ್ಪಿದ್ದರೆ ನಿಮಗೆ ಶಿಕ್ಷೆ ಆಗುತ್ತೆ. ಕೋರ್ಟ್‌ನಲ್ಲಿ ತೀರ್ಮಾನ ಆಗಿದೆ ಎಂದು ಜಮೀನು ತೆರವು (Land Acquisition) ವಿಚಾರವಾಗಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವ್ಯಂಗ್ಯವಾಡಿದ್ದಾರೆ.
ಕೇಂದ್ರ ಸಚಿವ ಕುಮಾರಸ್ವಾಮಿ ಜಮೀನು ತೆರವು ವಿಚಾರವಾಗಿ ವಿಧಾನಸೌಧದಲ್ಲಿ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು. ಈ ವೇಳೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ಒತ್ತುವರಿ ಮಾಡಿದವರನ್ನೇ ಕೇಂದ್ರ ಸಚಿವರನ್ನಾಗಿ ಮಾಡಿಕೊಂಡಿದ್ದಾರಲ್ಲ? ಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕು. ಬಿಜೆಪಿಯವರು ಏನು ಹೇಳುತ್ತಾರೆ ಎಂದು ಇವರಿಗೆ ಕೇಳಬೇಕು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾರ್ಕಳದ ಎರ್ಲಪಾಡಿ ಕ್ಷೇತ್ರಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ
ಇನ್ನು ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಮಾತನಾಡಿ, ಹೈಕೋರ್ಟ್ ಆದೇಶದ ಮೇರೆಗೆ ಸರ್ವೆ ಕಾರ್ಯ ಮಾಡಲಾಗಿದೆ. ಕುಮಾರಸ್ವಾಮಿ ಜಮೀನು ಒತ್ತುವರಿ ಮಾಡಿದ್ದಾರೆ, ತೆರವು ಕಾರ್ಯಾಚರಣೆ ನಡೆಯುತ್ತಿದೆ. ಸರ್ವೆ ರಿರ್ಪೋಟ್ ಬಂದ ಬಳಿಕ ಅವರೇ ತೆರವು ಮಾಡಬೇಕಿತ್ತು. ಈಗ ಸರ್ಕಾರಿ ಜಮೀನನ್ನು ಹಿಂದಕ್ಕೆ ಪಡೆಯುವ ಕೆಲಸ ಮಾಡುತ್ತಿದ್ದೇವೆ. ಯಾವುದೇ ಕಾರಣಕ್ಕೂ ಸಾರ್ವಜನಿಕ ಜೀವನದಲ್ಲಿ ನೈತಿಕತೆ ಕಾಪಾಡಿಕೊಳ್ಳಬೇಕು. ಅವರು ಸರ್ಕಾರಿ ಜಮೀನನ್ನ ವಶದಲ್ಲಿ ಇಟ್ಟುಕೊಳ್ಳಬಾರದಿತ್ತು. ಒತ್ತುವರಿಗಳನ್ನು ಸರ್ಕಾರ ತೆರವು ಮಾಡಲೇಬೇಕು. ದೊಡ್ಡವರು, ಶ್ರೀಮಂತರು, ಸಾರ್ವಜನಿಕ ಜೀವನದಲ್ಲಿ ಇರುವವರ ಮೇಲೆ ಕ್ರಮ ಆಗಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್
ಬೆಂಗಳೂರು: ಹೇಗಾದರೂ ಮಾಡಿ ಒಂದು ಸೂರು ಮಾಡಿಕೊಂಡು ನೆಮ್ಮದಿಯಾಗಿ ಬದುಕಬೇಕು ಎನ್ನುವುದು ಬೆಂಗಳೂರಿಗೆ ಬರುವ ಹಲವರ ಕನಸು. ಹೀಗೆ ಕನಸನ್ನು ನನಸು ಮಾಡಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದವರಿಗೆ ಕಳೆದ ಒಂದು ವಾರದಿಂದ ಆತಂಕವೊಂದು ಶುರುವಾಗಿದೆ. ಬಿಡಿಎನಿಂದ (BDA) ಬಂದಿರುವ ನೋಟಿಸ್ ನೋಡಿ ಆಕಾಶವೇ ತಲೆಮೇಲೆ ಬಿದ್ದಂತೆ ಆಗಿದ್ದಾರೆ.
ಬೆಂಗಳೂರು ಉತ್ತರ (Bengaluru North) ತಾಲೂಕಿನ ದಾಸನಪುರ (Dasanapura) ಹೋಬಳಿಯ 15 ಕ್ಕೂ ಹೆಚ್ಚು ಗ್ರಾಮದ ಜಾಗದಲ್ಲಿ ಫೆರಿಫೆರಲ್ ರಸ್ತೆ, ಬಿಎಂಟಿಸಿ ಬಸ್ ಡಿಪೋ ಹಾಗೂ ಟ್ರಕ್ ಟರ್ಮಿನಲ್ ನಿರ್ಮಾಣ ಸಂಬಂಧ 2006ರ ನೋಟಿಫಿಕೇಶನ್ ಉಲ್ಲೇಖಿಸಿ ಭೂ ಸ್ವಾಧೀನಕ್ಕೆ ಭೂಮಿಯ ಮಾಲೀಕರಿಗೆ ಬಿಡಿಎ ನೋಟಿಸ್ ನೀಡಿದೆ.
ದಾಸನಪುರ ಹೋಬಳಿಯ ಆಲೂರು, ಅಡಕಮಾರನಹಳ್ಳಿ, ದೊಂಬರಹಳ್ಳಿ, ಲಕ್ಷ್ಮಿಪುರ ಮಾದವಾರ, ದಾಸನಪುರ, ಚಿಕ್ಕಬಿದರಕಲ್ಲು, ಭೋವಿ ಪಾಳ್ಯ ಹೀಗೆ ದಾಸನಪುರ ಹೋಬಳಿಯ ಸಾವಿರಾರು ಸರ್ವೆ ನಂಬರ್ ಗಳಿಗೆ ನೋಟಿಸ್ ನೀಡಲಾಗಿದೆ.
20 ವರ್ಷಗಳಿಂದ ಯಾವುದೇ ರೀತಿಯ ಉಲ್ಲೇಖ ಮಾಡದೇ ಈಗ ಜಮೀನುಗಳೆಲ್ಲ ಮನೆಗಳಾಗಿದ್ದು, ಜಮೀನು ಮಾಲೀಕರು ಸೈಟ್ ಮಾಡಿ ಮಾರಾಟ ಮಾಡಿ ಹೋಗಿದ್ದಾರೆ. ಸಾವಿರಾರು ಮನೆಗಳು ಈ ಜಾಗದಲ್ಲಿ ಈಗ ನಿರ್ಮಾಣವಾಗಿದ್ದು ಬಿಡಿಎ ನೋಟಿಸ್ ನೋಡಿದ ಜನ ನಾವು ಏನ್ ತಪ್ಪು ಮಾಡಿದ್ದೇವೆ ಎಂದು ಪ್ರಶ್ನೆ ಮಾಡುತ್ತಿದ್ದಾರೆ.
ಬಿಡಿಎ ಪ್ರಾಥಮಿಕ ನೋಟಿಸ್ ನೀಡಿದ್ದು ನಿಮಗೆ ಅಕ್ಷೇಪವಿದ್ದರೆ ಆಕ್ಷೇಪಣೆ ಸಲ್ಲಿಸಿ ಎಂದು ಹೇಳಿದೆ. ಇಷ್ಟು ವರ್ಷ ಸುಮ್ಮನಿದ್ದ ಬಿಡಿಎ ಈಗ ಯಾಕೇ ಹೀಗೆ ಮಾಡುತ್ತಿದೆ? ನಮಗೆ ಮನೆ ಕಟ್ಟಲು ಅನುಮತಿ ನೀಡಿದ್ದಾರೆ. ಮನೆಗಳಿಗೆ ನೀರು ವಿದ್ಯುತ್ ಎಲ್ಲವನ್ನು ಕಾನೂನಿನ ಅಡಿಯಲ್ಲೇ ನೀಡಲಾಗಿದೆ. ನಾವು ಕಂದಾಯ ಸಹ ಕಟ್ಟಿದ್ದೇವೆ. ಈಗ ಜಮೀನನ ಮಾಲೀಕರಿಗೆ ನೋಟಿಸ್ ನೀಡಿದ್ದಾರೆ. ಆದರೆ ಅವರೆಲ್ಲ ಜಮೀನು ಮಾರಾಟ ಮಾಡಿದ್ದಾರೆ. ಈಗ ನಾವು ಏನು ಮಾಡಬೇಕು ಎಂದು ಗ್ರಾಮಸ್ಥರು ದಿಕ್ಕು ತೋಚದೇ ಆತಂಕದಲ್ಲಿದ್ದಾರೆ.
ಸರ್ಕಾರ 2006 ರಲ್ಲೇ ಇಲ್ಲಿ ರಸ್ತೆ, ಡಿಪೋ, ಮತ್ತು ಟ್ರಕ್ ಟರ್ಮಿನಲ್ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿದ್ದರೆ ಈ ಸರ್ವೆ ನಂಬರ್ ಬ್ಲಾಕ್ ಮಾಡಬೇಕಿತ್ತು. ಈಗ ನೋಟಿಸ್ ನೀಡುವ ಮೂಲಕ ಗೊಂದಲ ಸೃಷ್ಟಿಸಿದೆ. ನಾವು ಕಷ್ಟ ಪಟ್ಟು ಇಲ್ಲಿ ಮನೆಗಳನ್ನು ಕಟ್ಟಿಕೊಂಡಿದ್ದೇವೆ. ಈಗ ಹೋರಾಟ ಮಾಡುವ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ ಎನ್ನುತ್ತಿದ್ದಾರೆ ಜನರು.
ನಾವು ಈ ಜಾಗದಿಂದ ಕದಲುವುದಿಲ್ಲ. ಸರ್ಕಾರ ನಮ್ಮನ್ನು ಸಾಯಿಸಿ ಅಮೇಲೆ ನಮ್ಮ ಜಾಗವನ್ನು ಸ್ವಾಧೀನಕ್ಕೆ ಪಡೆಯಲಿ. ಇದು ನಮ್ಮ ಜಾಗ. ನಮ್ಮ ನೋವನ್ನು ಯಾರೂ ಕೇಳುತ್ತಿಲ್ಲ. ಮುಂದೆ ದಾಸನಪುರ ಹೋಬಳಿಯಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಮಾಡಿ, ಹೋರಾಟ ಮಾಡುವುದಾಗಿ ಹೇಳಿದ್ದಾರೆ.
ಚಿಕ್ಕಬಳ್ಳಾಪುರ: ಅದು ಸರ್ಕಾರಿ ಕಚೇರಿ ಅದ್ರಲ್ಲೂ ಎಸಿ ಕಚೇರಿ (AC Office), ಎಸಿ ಸೇರಿದಂತೆ ಅಧಿಕಾರಿ ಸಿಬ್ಬಂದಿ ಎಂದಿನಂತೆ ತಮ್ಮ ಕರ್ತವ್ಯಕ್ಕೆ ಹಾಜರಾಗಿ ತಮ್ಮ ಚೇರ್ ಗಳಲ್ಲಿ ಕೂತು ಬೆಳ್ಳಂಬೆಳಗ್ಗೆ ತಮ್ಮ ಕೆಲಸ ಕಾರ್ಯ ನಿರ್ವಹಿಸುತ್ತಿದ್ರು… ಆದ್ರೆ ಆ ಕಚೇರಿಗೆ ಬಂದ 10 ಮಂದಿ ಎಸಿ ಕೂತಿದ್ದ ಚೇರ್ ಸೇರಿದಂತೆ ಅಧಿಕಾರಿ ಸಿಬ್ಬಂದಿ ಕೂತಿದ್ದ ಚೇರ್‌ಗಳನ್ನೇ ಹೊತ್ತೊಯಿದ್ದರು… ಅಂದಹಾಗೆ ಇಂತಹ ಘಟನೆ ನಡೆದಿದ್ದು ಚಿಕ್ಕಬಳ್ಳಾಪುರ (Chikkaballapura) ಎಸಿ ಕಚೇರಿಯಲ್ಲಿ.
ಯಾಕೆ ಅಂದ್ರೆ 2011 ರಲ್ಲಿ ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆಯಾದ ಡಿವಿಜಿ ರಸ್ತೆಯನ್ನ ಅಗಲೀಕರಣ ಮಾಡಲಾಗಿತ್ತು. ಹಾಗಾಗಿ ಅಂದು ನೂರಾರು ಮಂದಿ ಮುಖ್ಯರಸ್ತೆಯಲ್ಲಿದ್ದ ಅಂಗಡಿಗಳನ್ನ ಜಾಗಗಳನ್ನ ಕಳೆದುಕೊಂಡಿದ್ರು. ಆದ್ರೆ ಸರ್ಕಾರ ಅಂದು ಭೂ ಸ್ವಾಧೀನ ಮಾಡಿಕೊಂಡ ಜಾಗಕ್ಕೆ ಅಡಿಗೆ 240 ರೂ. ಪರಿಹಾರ ನೀಡಿ ಕೈತೊಳೆದುಕೊಂಡಿತ್ತು. ಆದ್ರೆ ಈ ಪರಿಹಾರದ ಹಣ ನಮಗೆ ಸಾಕಾಗಲ್ಲ ಅಂತ ನೂರಾರು ಮಂದಿ ನ್ಯಾಯಾಲಯದ ಮೆಟ್ಟಿಲೇರಿದ್ರು. ಈಗ ನ್ಯಾಯಾಲಯ ಅಂದು ನೀಡಿದ್ದ 240 ರೂ. ಬದಲು ಅಡಿಗೆ 890 ರೂ. ಪರಿಹಾರ ನೀಡುವಂತೆ ಎಸಿಯವರಿಗೆ ಆದೇಶ ಮಾಡಿತ್ತು. ಆದ್ರೆ ಆದೇಶ ನೀಡಿ 2 ತಿಂಗಳು ಕಳೆದಿದ್ದರೂ ಪರಿಹಾರ ನೀಡದ ಹಿನ್ನೆಲೆಯಲ್ಲಿ ಇಂದು ನ್ಯಾಯಾಲಯದ ಆದೇಶದ ಮೇರೆಗೆ ಎಸಿ ಕಚೇರಿ ಪಿಠೋಪಕರಣ ಜಪ್ತಿ ಮಾಡಲಾಯಿತು. ಇದನ್ನೂ ಓದಿ: ಅಮೆರಿಕದಲ್ಲಿ 10 ಶತಕೋಟಿ ಡಾಲರ್ ಹೂಡಿಕೆಗೆ ಬದ್ಧ, 15,000 ಉದ್ಯೋಗ ಸೃಷ್ಟಿ ಗುರಿ: ಅದಾನಿ
ಇನ್ನೂ ಎಸಿ ಕಚೇರಿಗೆ ಆಗಮಿಸಿದ ನ್ಯಾಯಾಲಯದ ದಾವೆ ಹೂಡಿದ್ದ ಶ್ರೀನಿವಾಸ್ ರೆಡ್ಡಿ, ಸತೀಶ್ ಬಾಬು, ನರಸಿಂಹನಾಯಡು, ಸೇರಿದಂತೆ 10ಕ್ಕೂ ಹೆಚ್ಚು ಮಂದಿ ಕೂಲಿಯಾಳುಗಳ ಸಮೇತ ಆಗಮಿಸಿ ಎಸಿ ಕಚೇರಿಯಲ್ಲಿ ಕೈಗೆ ಸಿಕ್ಕ ಸಿಕ್ಕ ಚೇರ್, ಟೇಬಲ್ ಕಂಪ್ಯೂಟರ್ ಸೇರಿದಂತೆ ಪಿಠೋಪಕರಣಗಳನ್ನ ಎತ್ತೊಯ್ದರು, ಇದ್ರಿಂದ ಇರುಸು ಮುರಾಸಾದ ಎಸಿ ಅಶ್ವಿನ್ ಕೂರಲು ಚೇರ್ ಇಲ್ಲದೆ ಪ್ರತ್ಯೇಕ ಕೊಠಡಿ ಸೇರಿದ್ರೆ ಇತ್ತ ಅಧಿಕಾರಿ ಸಿಬ್ಬಂದಿ ನಿಂತಲ್ಲೇ ನಿಲ್ಲುವಂತಾಯಿತು. ಇದನ್ನೂ ಓದಿ: ಉದ್ಧವ್ ಠಾಕ್ರೆ ಬ್ಯಾಗ್ ಗದ್ದಲದ ನಡುವೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಹೆಲಿಕಾಪ್ಟರ್ ತಪಾಸಣೆ
ಇನ್ನೂ ಎರಡು ತಿಂಗಳ ಹಿಂದೆಯೇ ನ್ಯಾಯಾಲಯ ಆದೇಶ ಮಾಡಿದ್ರೂ ಎಸಿಯವರು ಪರಿಹಾರ ನೀಡಿಲ್ಲ, ಹೀಗಾಗಿ ಪಿಠೋಪಕರಣ ಜಪ್ತಿ ಮಾಡಲಾಗಿದ್ರೆ ಕೊನೆಗೆ ಮತ್ತೆ ಎಸಿಯವರು ಎರಡು ತಿಂಗಳು ಕಾಲಾವಕಾಶ ಗಡುವು ನೀಡುವಂತೆ ಮನವಿ ಮಾಡಿಕೊಂಡಿರೋದ್ರಿಂದ ಪುನಃ ಚೇರ್ ಹಾಗೂ ಪಿಠೋಪಕರಣ ವಾಪಾಸ್ ನೀಡಲಾಗಿದೆ. ಜಾಗ ಕಳೆದುಕೊಂಡವರು ಪರಿಹಾರಕ್ಕಾಗಿ ಎಸಿ ಕಚೇರಿ ಪಿಠೋಪಕರಣಗಳು ಸೇರಿದಂತೆ ಸ್ವತಃ ಎಸಿಯವರ ಚೇರನ್ನೇ ಹೊತ್ತೊಯ್ದದ್ದರಿಂದ ಸಾರ್ವಜನಿಕರ ಎದುರು ಸ್ವತಃ ಎಸಿ ಹಾಗೂ ಸರ್ಕಾರಿ ಅಧಿಕಾರಿಗಳು ಮುಜುಗರಕ್ಕೊಳಗಾಗಿ ನಗೆಪಾಟೀಲಿಗೀಡಾದರು.
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರದ ಕಾನೂನು ಬಾಹಿರ ಚಟುವಟಿಕೆಗಳ ವಿರುದ್ಧ ಸದನದ ಒಳಗೂ ಹೊರಗೂ ನಾನು ಮತ್ತು ಬೊಮ್ಮಾಯಿ ಒಟ್ಟಾಗಿ ಹೋರಾಟ ಮಾಡ್ತೀವಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಶಪಥ ಮಾಡಿದ್ದಾರೆ.
ಮಾಜಿ ಸಿಎಂಗಳಾದ ಹೆಚ್.ಡಿ ಕುಮಾರಸ್ವಾಮಿ ಹಾಗೂ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಜೆಡಿಎಸ್ (JDS) ಶಾಸಕಾಂಗ ಪಕ್ಷದ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ಉಗ್ರರನ್ನು ಕಾಂಗ್ರೆಸ್ ರಕ್ಷಿಸುತ್ತಿದೆ: ಶೋಭಾ ಕರಂದ್ಲಾಜೆ ವಾಗ್ದಾಳಿ
ಕಾಂಗ್ರೆಸ್‌ನವರಿಗೆ ಸರ್ಕಾರ ಬೇಕಿಲ್ಲ. ಭೂಮಿ ಲಪಟಾಯಿಸೋದು ಬೇಕು. ಇದು ಒಂದು ರೀತಿ ಈಸ್ಟ್ ಇಂಡಿಯಾ ಕಂಪನಿಯ ಆಡಳಿತ. ಸರ್ಕಾರಕ್ಕೆ ನಿಜಕ್ಕೂ ಜನತೆಗೆ, ರೈತರಿಗೆ ಒಳ್ಳೆಯದು ಮಾಡಬೇಕು ಅನ್ನೋ ಮನಸ್ಸಿದ್ದರೆ ಸರ್ಕಾರ ಸುಪರ್ದಿಗೆ ಬರಬೇಕಾದ ಭೂಮಿಯನ್ನ ಸ್ವಾಧೀನಪಡಿಸಿಕೊಳ್ಳಿ. ನನ್ನ ಪಕ್ಷದವ ಆಸ್ತಿ ಇದ್ದರೂ ಮುಟ್ಟುಗೋಲು ಹಾಕಿಕೊಳ್ಳಿ ಎಂದರಲ್ಲದೇ ಅಕ್ರಮ ಭೂಕಬಳಿಕೆ ಬಯಲಿಗೆಳೆಯಬೇಕಾದ್ರೆ ಈ ತನಿಖೆಯನ್ನ ಸಿಬಿಐಗೆ ವಹಿಸುವಂತೆ ಒತ್ತಾಯಿಸಿದ್ದಾರೆ
ಮುಂದುವರಿದು, ಸದನ ಹೇಗೆ ನಡೆಯುತ್ತಿದೆ ಅನ್ನೋದನ್ನ ಗಮನಿಸಿದ್ದೀರಿ. ಸದನದ ಕಲಾಪದ ಮೌಲ್ಯಗಳು ಕುಸಿಯುತ್ತಿವೆ. ಶಿಷ್ಟಾಚಾರದ ಹೆಸರಲ್ಲಿ ಅಧಿಕಾರಿಗಳ ದುರುಪಯೋಗ ಆಗಿದೆ. ಐಎಎಸ್ ನಿವೃತ್ತ ಅಧಿಕಾರಿ ಮದನ್ ಗೋಪಾಲ್ ಅವರೂ ಇದನ್ನೇ ಹೇಳಿದ್ದಾರೆ ಎಂದು ಟೀಕಿಸಿದ್ದಾರೆ.
ನೈಸ್ ವಿಚಾರದಲ್ಲಿ ಸುದೀರ್ಘ ಚರ್ಚೆ ಮಾಡಲು ಅವಕಾಶ ಕೇಳಿದ್ದೆವು, ಸದನದಲ್ಲಿ ನಮಗೆ ಅವಕಾಶವೇ ಕೊಡಲಿಲ್ಲ. ನೈಸ್ ರಸ್ತೆ ಪ್ರಾಜೆಕ್ಟ್ ಬಗ್ಗೆ ಜಯಚಂದ್ರ ಅವರು ಮಾತನಾಡಿದ್ದಾರೆ. ಹಿಂದೆ ಜಯಚಂದ್ರ ನೇತೃತ್ವದ ಸದನ ಸಮಿತಿ ನೈಸ್ ಸಂಬಂಧ ವರದಿ ಕೊಟ್ಟಿದೆ. ನೈಸ್ ಸದನ ಸಮಿತಿಯ ವರದಿ ಜಾರಿ ಮಾಡಿ ನೈಸ್ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ನಾನು ಮೈತ್ರಿ ಸರ್ಕಾರದಲ್ಲಿದ್ದಾಗ ಏಕೆ ಮಾಡಲಿಲ್ಲ ಅಂತ ಕೇಳಬಹುದು. ಅಲ್ಲಿ ನನ್ನನ್ನ ಕಟ್ಟಿ ಹಾಕಿದ್ದರು. ಒಳಗೆ ಯರ‍್ಯಾರು ಏನೇನು ಅಡ್ಜಸ್ಟ್ ಮಾಡಿಕೊಂಡಿದ್ದಾರೋ ಗೊತ್ತಿಲ್ಲ ಎಂದು ಕಿಡಿ ಕಾರಿದ್ದಾರೆ.
ಮೊನ್ನೆ ಕಲಾಪದಲ್ಲಿ ನಡೆದ ಘಟನೆಯನ್ನ 2 ನಿಮಿಷದಲ್ಲಿ ಮುಗಿಸಬಹುದಿತ್ತು. ಒಂದು ಹಂತದಲ್ಲಿ ಪ್ರಮಾದ ಆಯ್ತು. ಆದ್ರೆ ಮಧ್ಯಾನದ ಊಟಕ್ಕೆ ಬಿಡದೆ ಬುದ್ದಿ ಕಲಿಸುತ್ತೇನೆ ಎಂದು ಶಾಲಾ ಮಕ್ಕಳಿಗೆ ಹೆದರಿಸಿದಂತೆ ಹೆಸರಿಸೋದು ಸರಿಯಲ್ಲ. ಹಾಲಿ ಉಪ ಮುಖ್ಯಮಂತ್ರಿಗಳೂ ಹಿಂದೆ ಪೇಪರ್ ಎಸೆದಿಲ್ವಾ..? ಮೈಕ್ ಕಿತ್ತು ಎಸೆದಿಲ್ವಾ..? ಧರ್ಮೆಗೌಡರಿಗೆ ಏನು ಮಾಡಿದರು? ಎಂದು ಪ್ರಶ್ನೆ ಮಾಡಿದರು.
ನಿನ್ನೆ ಮುಖ್ಯಮಂತ್ರಿಗಳು ಖಾಲಿ ಬೇಂಚ್‌ಗೆ ಭಾಷಣ ಮಾಡಿದ್ದಾರೆ. ಕೃಷಿ ಸನ್ಮಾನ್‌ನಿಂದ ರಾಜ್ಯದ ರೈತರಿಗೆ ಬರುತ್ತಿದ್ದ 4 ಸಾವಿರ ರೂ. ನಿಲ್ಲಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಸರ್ಕಾರ ಅನ್ನದಾತರನ್ನ ಬೀದಿಗೆ ತಂದು ನಿಲ್ಲಿಸಿದೆ. ಬರದ ಬಗ್ಗೆ ಮಾತಾಡಬೇಕಿತ್ತು ಅದಕ್ಕೆ ಅವಕಾಶ ಕೊಡಲಿಲ್ಲ. ನಮ್ಮಿಂದ ಹೋದವರು ಟವೆಲ್, ಕೊಡವಿ ಮಾತನಾಡುವವರು ದಲಿತ ಉಪಾಧ್ಯಕ್ಷ ಅಂತಾರೆ. ಅವರು ಹಾಗೆ ಹೇಳಬಹುದು ನಾವು ಮಾಡಿದ್ದು ತಪ್ಪು ಅಂತಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ.
ಬೊಮ್ಮಾಯಿ ಅವ್ರನ್ನ ಅಪ್ರಿಶಿಯೇಟ್ ಮಾಡ್ತೀನಿ: ಜಂಟಿ ಸುದ್ದಿಗೋಷ್ಠಿಯಲ್ಲಿ ಬೊಮ್ಮಾಯಿ ಅವರನ್ನ ಅಪ್ರಿಶಿಯೇಟ್ ಮಾಡ್ತೀನಿ ಅವರ ಅವಧಿಯಲ್ಲಿ ಸರ್ಕಾರ ಆಸಕ್ತಿ ವಹಿಸಿ ಕೇಸು ನಡೆಸಿದ ಕಾರಣ ನೈಸ್ ಸಂಸ್ಥೆಗೆ ಹಿನ್ನಡೆಯಾಗಿದೆ ಎಂದರು.
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆಗಳ (Industry) ಸ್ಥಾಪನೆಗಾಗಿ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂಮಿಯನ್ನು ಸ್ವಾಧೀನ (Land Acquisition) ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ (Bengaluru) 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸೇರಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murgesh Nirani) ಹೇಳಿದರು.
ವಿಧಾನ ಪರಿಷತ್ತಿನ (Legislative Council) ಪ್ರಶ್ನೋತ್ತರದಲ್ಲಿ ಸದಸ್ಯರಾದ ಸಲೀಂ ಅಹಮ್ಮದ್, ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ (KKRDB) ಮಂಜೂರಾದ ನಿವೇಶನ ಅಥವಾ ಭೂಮಿಯಲ್ಲಿ ಎಷ್ಟು ಸಮಯದಲ್ಲಿ ಕೈಗಾರಿಕೆ ಸ್ಥಾಪನೆ ಮಾಡಬೇಕು. ಒಂದು ವೇಳೆ ಉದ್ಯಮ ಸ್ಥಾಪನೆಯಾಗದೇ ಇದ್ದರೆ ಯಾವ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಉರ್ಫಿಗೆ ತಂದ ಸಿಮ್ ಕಾರ್ಡ್ ಸಂಕಷ್ಟ: ಸಿಮ್ ಕಾರ್ಡ್ ಕಾಸ್ಟ್ಯೂಮ್ ಕಂಡು ಮನೆಗೆ ಬಂದ ಪೊಲೀಸ್
ಕೈಗಾರಿಕೆ ಇಲಾಖೆಯಿಂದ 188 ಕೈಗಾರಿಕಾ ಪ್ರದೇಶ ಸ್ಥಾಪಿಸಲಾಗಿದೆ. ಅದಕ್ಕಾಗಿ 1.60 ಲಕ್ಷ ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿತ್ತು. ಅದರಲ್ಲಿ 52,008 ಎಕರೆಯನ್ನು ಅಭಿವೃದ್ಧಿಪಡಿಸಲಾಗಿದೆ. ಉಳಿದ ಭೂಮಿಯನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದು ನಿರಾಣಿ ಹೇಳಿದರು.
ಯೋಜನೆಯ ಅಂದಾಜು ಗಾತ್ರ ಆಧರಿಸಿ ಉದ್ಯಮ ಆರಂಭಿಸಲು ಕಾಲಮಿತಿ ನಿಗದಿ ಪಡಿಸಲಾಗುತ್ತದೆ. ಉಕ್ಕು ಉದ್ಯಮಗಳಿಗೆ 5 ವರ್ಷಗಳವರೆಗೂ ಸಮಯ ಬೇಕಾಗುತ್ತದೆ. ಒಟ್ಟಾರೆ ಉದ್ಯಮ ಆರಂಭಕ್ಕೆ ಗರಿಷ್ಠ 10 ವರ್ಷಗಳ ಕಾಲಾವಕಾಶ ನೀಡಲಾಗುತ್ತದೆ. ಅದರ ಒಳಗೆ ಉದ್ಯಮ ಆರಂಭವಾಗದಿದ್ದರೆ ನೋಟಿಸ್ ನೀಡಿ ಭೂಮಿ ಹಿಂಪಡೆಯುವ ಪ್ರಕ್ರಿಯೆ ನಡೆಸಲಾಗುವುದು. ಈವರೆಗೂ 117 ಉದ್ದಿಮೆದಾರರಿಗೆ ನೋಟಿಸ್ ನೀಡಲಾಗಿದೆ. ಕೆಲವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಇನ್ನೂ ಮುಂದೆ ಕೆವಿಯಟ್ ಹಾಕಿ ಭೂಮಿ ಹಿಂಪಡೆಯಲು ಮುಂದಿನ ಕ್ರಮ ಜರುಗಿಸಲಾಗುವುದು ಎಂದು ನಿರಾಣಿ ಉತ್ತರಿಸಿದರು.
ನವೆಂಬರ್ ಮೊದಲ ವಾರದಲ್ಲಿ ರಾಜ್ಯದಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದೆ. ವಿದೇಶ ಬಂಡವಾಳ ಹೂಡಿಕೆಯಲ್ಲಿ ನಮ್ಮ ರಾಜ್ಯ ಸತತ ನಾಲ್ಕನೇ ತ್ರೈಮಾಸಿಕದಲ್ಲೂ ಮೊದಲ ಸ್ಥಾನದಲ್ಲಿದೆ. ದೇಶದ ಹೂಡಿಕೆಯಲ್ಲಿ ಶೇ.38ರಷ್ಟು ಪಾಲನ್ನು ನಾವು ಹೊಂದಿದ್ದೇವೆ ಎಂದು ನಿರಾಣಿ ಹೇಳಿದರು.
Live Tv
[brid partner=56869869 player=32851 video=960834 autoplay=true]
ಕೊಪ್ಪಳ: ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಅಂಜನಾದ್ರಿ ಪರ್ವತದ ಅಭಿವೃದ್ಧಿ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಒಪ್ಪಿಗೆ ನೀಡುವ ಮೂಲಕ ಅಭಿವೃದ್ಧಿ ಕಾಮಗಾರಿಗಳಿಗೆ ಹಸಿರು ನಿಶಾನೆಯನ್ನು ತೋರಿಸಿದರು.
ಶ್ರೀರಾಮಚಂದ್ರನ ಜನ್ಮಭೂಮಿಯಾಗಿರುವ ಅಯೋಧ್ಯೆಯಷ್ಟೇ ಪ್ರಾಮುಖ್ಯತೆಯನ್ನು ಪಡೆದುಕೊಂಡಿರುವ ಅಂಜನಾದ್ರಿ ಪರ್ವತದ ಅಭಿವೃದ್ಧಿಯ ಕುರಿತು ರಾಜ್ಯ ಸರ್ಕಾರ ಬಜೆಟ್‍ನಲ್ಲಿ ಒಟ್ಟು 120 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿತ್ತು.
ಅನುದಾನ ಬಿಡುಗಡೆಯಾಗಿ ಒಂದು ವರ್ಷ ಕಳೆದರೂ ಸಹ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಮುಂದಾಗಿರಲಿಲ್ಲ. ಆದರೆ ಈ ಕುರಿತು ಖುದ್ದು ಬೊಮ್ಮಾಯಿ ಅವರೇ ಸಭೆಯನ್ನು ನಡೆಸಿ, ಅಭಿವೃದ್ಧಿಯ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಈ ಹಿನ್ನೆಲೆ ಬೆಂಗಳೂರಿನಲ್ಲಿ ಸಿಎಂ ತಮ್ಮ ಕಚೇರಿಯಲ್ಲಿ ಜೂನ್ 25 ರಂದು ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದಾರೆ. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಕೆಲವೇ ದಿನ – ಗಡಿಯಲ್ಲಿ ಶೋಧ ಕಾರ್ಯ ಚುರುಕು
ಸಭೆಯಲ್ಲಿ ಬೊಮ್ಮಾಯಿ ಅವರು ಜಿಲ್ಲಾಡಳಿತ, ಧಾರ್ಮಿಕ ದತ್ತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ಹಂಪಿ ಅಭಿವೃದ್ಧಿ ಪ್ರಾಧಿಕಾರ ಇಲಾಖೆ ಅಧಿಕಾರಿಗಳು ಜಂಟಿ ಸಭೆ ನಡೆಸಿ, ಸಿದ್ಧಪಡಿಸಿದ ನೀಲನಕ್ಷೆಯನ್ನು ಪರಿಶೀಲನೆ ಮಾಡಿದರು. ಅಷ್ಟೇ ಅಲ್ಲದೆ ರಾಜ್ಯ ಸರ್ಕಾರ 120 ಕೋಟಿ ರೂ. ಅನುದಾನ ನೀಡುವ ಜೊತೆಗೆ ಕೇಂದ್ರದ ಸ್ವದೇಶಿ ದರ್ಶನ ಯೋಜನೆ ಅಡಿಯಲ್ಲಿ 100 ಕೋಟಿ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲು ಒಪ್ಪಿಗೆಯನ್ನು ನೀಡಿದ್ದಾರೆ.
ಏನೇನು ಇರಲಿದೆ?
ದೇಶ ಸೇರಿದಂತೆ ವಿದೇಶಗಳಿಂದ ಪ್ರವಾಸಿಗರನ್ನು ಸೆಳೆಯುತ್ತಿರುವ ಅಂಜನಾದ್ರಿ ಪರ್ವತ ಅಭಿವೃದ್ಧಿಗೆ ಸಂಬಂಧಪಟ್ಟ ಸಭೆಯಲ್ಲಿ 600 ಕೊಠಡಿಗಳ ಪ್ರವಾಸಿ ಮಂದಿರಕ್ಕೆ 10 ಎಕರೆ ಭೂಮಿ ಬಳಕೆ, 5 ಎಕರೆಯಲ್ಲಿ ಅಡುಗೆ ಕೋಣೆ ನಿರ್ಮಾಣ, 3 ಎಕರೆಯಲ್ಲಿ ಸಮುದಾಯ ಭವನ, 8 ಎಕರೆಯಲ್ಲಿ ಪಾರ್ಕಿಂಗ್ ಸ್ಥಳ, 4 ಎಕರೆ 16 ಗುಂಟೆಯಲ್ಲಿ ಶಾಪಿಂಗ್ ಕಾಂಪ್ಲೆಕ್ಸ್, 2 ಎಕರೆಯಲ್ಲಿ ಪ್ರದರ್ಶನ ಪಥ, 1 ಎಕರೆಯಲ್ಲಿ ಸ್ನಾನಘಟ್ಟ ನಿರ್ಮಾಣ, 3 ಎಕರೆಯಲ್ಲಿ ರೋಪ ವೇ ಸೇರಿದಂತೆ ಕಚೇರಿ ಕೊಠಡಿ, ಪೊಲೀಸ್ ಹೊರಠಾಣೆ, ಆಡಿಯೋ ಸೌಂಡ್ ಶೋ, ರಾಮಾಯಣ ಕುರಿತ ಪೇಂಟಿಂಗ್, ಧ್ವನಿ ಮತ್ತು ಬೆಳಕು ಕಾರ್ಯಕ್ರಮಕ್ಕೆ ಜಾಗ ಸೇರಿದಂತೆ ಇತರ ಒಟ್ಟು 24 ಕಾಮಗಾರಿಗಳ ದಾಖಲೆಗಳನ್ನು ಬೊಮ್ಮಾಯಿ ಅವರು ಪರಿಶೀಲನೆ ನಡೆಸಿ, ಎಲ್ಲ ಅಭಿವೃದ್ಧಿ ಕಾರ್ಯಗಳಿಗೆ ಒಪ್ಪಿಗೆ ಸೂಚಿಸಿದ್ದಾರೆ.
76 ಎಕರೆ ಭೂಸ್ವಾಧೀನಕ್ಕೆ ಒಪ್ಪಿಗೆ
ದೇವಸ್ಥಾನ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಜಾಗದ ಅವಶ್ಯಕತೆ ಇದ್ದು, ಅದಕ್ಕೆ ಭೂಸ್ವಾಧೀನ ಮಾಡಿಕೊಳ್ಳಲು ಬೊಮ್ಮಾಯಿ ಅವರು ಒಪ್ಪಿಗೆಯನ್ನು ನೀಡಿದ್ದಾರೆ. ಬೆಟ್ಟ ಸಮೀಪದ ಚಿಕ್ಕರಾಂಪೂರ, ಹನುಮನಹಳ್ಳಿ ಗ್ರಾಮ ಸಮೀಪದ 76 ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 60 ಎಕರೆಯನ್ನು, ಎರಡನೇ ಹಂತದಲ್ಲಿ 16 ಎಕರೆಯನ್ನು ಸ್ವಾಧೀನ ಮಾಡಿಕೊಳ್ಳಲು ಸೂಚಿಸಲಾಗಿದೆ. ಭೂಮಿ ನೀಡಲು ರೈತರು ವಿರೋಧ ಇರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ರೈತರೊಂದಿಗೆ ಚರ್ಚೆ ನಡೆಸಿ, ಸಮಸ್ಯೆ ಬಗೆಹರಿಸಲು ಸೂಚಿಸಿದ್ದಾರೆ.
ಹೆಲಿಪ್ಯಾಡ್ ನಿರ್ಮಾಣದ ಚರ್ಚೆ
ಅಯೋಧ್ಯೆಯಷ್ಟೇ ಪ್ರಾಮುಖ್ಯತೆ ಇರುವ ಅಂಜನಾದ್ರಿ ಪರ್ವತಕ್ಕೆ ದೇಶ ಸೇರಿದಂತೆ ವಿದೇಶಗಳಿಂದ ಗಣ್ಯ ವ್ಯಕ್ತಿಗಳು ಆಗಮಿಸುತ್ತಾರೆ. ಅವರಿಗೆ ಅನುಕೂಲವಾಗಲಿ ಎನ್ನುವ ಉದ್ದೇಶದಿಂದ ಅಂಜನಾದ್ರಿ ಪರ್ವತದ ಸಮೀಪದಲ್ಲಿ ಅಥವಾ ಬೆಟ್ಟದ ಮೇಲುಗಡೆ ಹೆಲಿಪ್ಯಾಡ್ ನಿರ್ಮಾಣ ಮಾಡುವ ಕುರಿತು ಕೂಡ ಬೊಮ್ಮಾಯಿ ಅವರು ಅಧಿಕಾರಿಗಳೊಂದಿಗೆ ಚರ್ಚೆಯನ್ನು ನಡೆಸಿದರು. ಇದನ್ನೂ ಓದಿ: ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ
ಬೆಟ್ಟದ ಮೇಲೆ ನಿರ್ಮಿಸಿದರೆ ಅದರಿಂದ ಎದುರಾಗುವ ಅನಾನುಕೂಲಗಳು ಹಾಗೂ ಅನುಕೂಲಗಳ ಬಗ್ಗೆ ಚರ್ಚೆಯನ್ನು ನಡೆಸಲಾಗಿದೆ. ಅದೇ ರೀತಿಯಾಗಿ ವಾಹನಗಳ ಮೂಲಕ ಆಗಮಿಸುವ ಭಕ್ತರಿಗೆ ಅನುಕೂಲವಾಗಲು ಗಂಗಾವತಿಯಿಂದ ಹುಲಿಗಿ ಸಮೀಪದ ಹೆದ್ದಾರಿಯವರೆಗೆ ಒಟ್ಟು 35 ಕಿ.ಮೀ ರಸ್ತೆಯನ್ನು ಚತುಷ್ಪಥ ರಸ್ತೆ ನಿರ್ಮಾಣ ಮಾಡುವ ಕುರಿತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಜೊತೆಗೆ ಚರ್ಚಿಸಿ, ರಸ್ತೆ ನಿರ್ಮಾಣಕ್ಕೂ ಒಪ್ಪಿಗೆ ನೀಡಲಾಗಿದೆ.
ಬೆಂಗಳೂರು: ದೇವರಾಜ್ ಅರಸು ಟ್ರಕ್ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸಲು ರಸ್ತೆ ನಿರ್ಮಾಣಕ್ಕಾಗಿ ಭೂ ಸ್ವಾಧಿನ ಪಡಿಸಿಕೊಂಡ ಸರ್ಕಾರ ರೈತರಿಗೆ ಪರಿಹಾರ ವಿತರಣೆ ಮಾಡಿಲ್ಲ ಎಂದು ರೈತರು ಆಕ್ರೋಶ ಹೊರ ಹಾಕಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರ ಗ್ರಾಮದಲ್ಲಿ ರೈತರು ಸಿಡಿದೆದ್ದಿದ್ದಾರೆ. 2012ರಲ್ಲಿ ದೇವರಾಜ್ ಅರಸು ಟ್ರಕ್ ಟರ್ಮಿನಲ್‌ಗೆ ಸಂಪರ್ಕ ಕಲ್ಪಿಸುವ ಸಲುವಾಗಿ ಗ್ರಾಮದ ರೈತರ ಕೆಲ ಭೂಮಿಯನ್ನು ಸ್ವಾಧೀನ ಪಡಿಸಿಕೊಂಡಿದ್ದರು. ಆದರೆ ಇದುವರೆಗೂ ಯಾವುದೇ ಪರಿಹಾರ ನೀಡದೆ ಗುರುವಾರ ಭೂ ಸ್ವಾಧೀನ ಅಧಿಕಾರಿಗಳು ಆಗಮಿಸಿ ಸ್ಥಳ ವೀಕ್ಷಣೆ ಮಾಡಿದ್ದಾರೆ. ಇದರಿಂದ ರೈತರು ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ತಾಕತ್ತಿದ್ದರೆ ನನ್ನನ್ನು ತುಂಡು, ತುಂಡು ಮಾಡಲಿ ನೋಡೋಣ: ಆಂದೋಲಾ ಶ್ರೀ ಕಿಡಿ
ಭೂ ಸ್ವಾಧೀನ ಅಧಿಕಾರಿಗಳು ರೈತರಿಗೆ ಯಾವುದೇ ಮಾಹಿತಿ ನೀಡದೆ ಭೂಮಿ ಸರ್ವೆಗೆ ಏಕಾಏಕಿ ಪೊಲೀಸರ ಜೊತೆಗೆ ಆಗಮಿಸಿದ್ದಾರೆ. ಇದರಿಂದ ರೈತರು ಹಾಗೂ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದೆ.
2012ರಲ್ಲಿ ಸ್ವಾಧೀನ ಪಡೆದುಕೊಂಡು ಪರಿಹಾರ ನೀಡದೆ ಸತಾಯಿಸುತ್ತಿದ್ದಾರೆ. ಸುಪ್ರಿಂ ಕೋರ್ಟ್ ಆದೇಶದಂತೆ 1:3 ಹಣವನ್ನು ಪರಿಹಾರವಾಗಿ ನೀಡಬೇಕು. ಆದರೆ ಇಲ್ಲಿ ಕೆಲ ಸ್ಥಳೀಯ ಏಜೆಂಟ್ ಜೊತೆಗೆ ಅಧಿಕಾರಿಗಳು ಶಾಮೀಲಾಗಿರುವುದರಿಂದ ಯಾವುದೇ ಪರಿಹಾರ ನೀಡುತ್ತಿಲ್ಲ ಎಂದು ರೈತರು ಆರೋಪಿಸಿದ್ದಾರೆ. ಇದನ್ನೂ ಓದಿ: ಸ್ಥಳೀಯರಿಗೆ ಖಾಸಗಿ ವಲಯದಲ್ಲಿ ಶೇ.75ರಷ್ಟು ಉದ್ಯೋಗವಕಾಶ – ಸುಪ್ರೀಂನಲ್ಲಿ ಹರ್ಯಾಣಕ್ಕೆ ಜಯ
ಇದೀಗ ರೈತರು ಸೂಕ್ತ ಪರಿಹಾರ ನೀಡಿ ನಂತರ ಭೂಮಿ ಸ್ವಾಧೀನ ಪಡಿಸಿಕೊಳ್ಳುವಂತೆ ಆಗ್ರಹಿಸಿದ್ದಾರೆ.