Tag: land grabbing

  • ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಭೂಕಬಳಿಕೆ ಆರೋಪ – ಗ್ರಾಮಸ್ಥರಿಂದ ದಾಖಲೆ ಬಿಡುಗಡೆ

    ಶಾಸಕ ಇಕ್ಬಾಲ್ ಹುಸೇನ್ ವಿರುದ್ಧ ಭೂಕಬಳಿಕೆ ಆರೋಪ – ಗ್ರಾಮಸ್ಥರಿಂದ ದಾಖಲೆ ಬಿಡುಗಡೆ

    – ನ್ಯಾಯ ಒದಗಿಸದಿದ್ದರೆ ದಯಾಮರಣ ನೀಡುವಂತೆ ಮನವಿ

    ರಾಮನಗರ: ಶಾಸಕ ಇಕ್ಬಾಲ್ ಹುಸೇನ್ (Iqbal Hussain) ವಿರುದ್ಧ ಭೂಕಬಳಿಕೆ (Land Grabbing) ಆರೋಪ ವಿಚಾರ ಕುರಿತು ಕನಕಪುರ (Kanakapura) ತಾಲೂಕಿನ ಹೊಂಗಣಿದೊಡ್ಡಿ ಗ್ರಾಮಸ್ಥರು ಇಂದು ದಾಖಲೆ ಬಿಡುಗಡೆ ಮಾಡಿದ್ದಾರೆ.

    1957ರಲ್ಲಿ ಭೂ ಮಾಲೀಕರು ಗ್ರಾಮಸ್ಥರಿಗೆ ಹಿಂದೆ ಕ್ರಯ ಮಾಡಿಕೊಟ್ಟ ದಾಖಲಾತಿ ಹಾಗೂ 19 ಜನ ಗೇಣಿದಾರರ ಗೇಣಿ ಅರ್ಜಿಯನ್ನ ಬಿಡುಗಡೆ ಮಾಡಿ ಸುದ್ದಿಗೋಷ್ಠಿ ನಡೆಸಿ ಗ್ರಾಮಸ್ಥರು ಮಾತನಾಡಿದರು. ಗ್ರಾಮದ 67 ಎಕರೆ ಜಮೀನನ್ನು ರಾಮನಗರ ಶಾಸಕರು ತಮ್ಮ ಹೆಸರಿಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಇಡೀ ಗ್ರಾಮವೇ ಶಾಸಕರ ಹೆಸರಲ್ಲಿ ಇದೆ ಎಂಬುದನ್ನು ಸ್ವತಃ ಶಾಸಕರೇ ಒಪ್ಪಿಕೊಂಡಿದ್ದಾರೆ. ಈಗ ಗ್ರಾಮವನ್ನ ಮಾತ್ರ ಬಿಟ್ಟುಕೊಡುತ್ತೇನೆ ಎನ್ನುತ್ತಾರೆ. ಕೇವಲ ಗ್ರಾಮದ ಜಮೀನು ಮಾತ್ರವಲ್ಲ ನಮ್ಮ ಕೃಷಿ ಭೂಮಿಯನ್ನೂ ನಮಗೆ ಬಿಟ್ಟುಕೊಡಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ನಾಲ್ವರು ಇಸ್ರೇಲ್‌ ಮಹಿಳಾ ಸೈನಿಕರನ್ನು ಬಿಡುಗಡೆ ಮಾಡಿದ ಹಮಾಸ್‌ ಉಗ್ರರು

    19 ಗೇಣಿದಾರರ ಜಮೀನುಗಳನ್ನು ವಾಪಸ್ ನೀಡಿ. ಸ್ಥಳಕ್ಕೆ ಡಿಸಿ ಭೇಟಿ ನೀಡಿ ನಮ್ಮ ಜಾಗಕ್ಕೆ ಮಂಜೂರಾತಿ ಪತ್ರಗಳ ನೀಡಬೇಕು. ಕಳೆದ 60-70 ವರ್ಷದಿಂದ ನಾವು ಅಲ್ಲಿ ವ್ಯವಸಾಯ ಮಾಡ್ತಿದ್ದೇವೆ. ನಮ್ಮ ಜಮೀನುಗಳನ್ನ ನಮಗೆ ಉಳಿಸಿಕೊಡಿ. ಲೋಕಾಯುಕ್ತ ಅಧಿಕಾರಿಗಳು ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ನ್ಯಾಯ ಒದಗಿಸಲಿಲ್ಲ ಅಂದರೆ ದಯಾಮರಣ ನೀಡುವಂತೆ ಸುದ್ದಿಗೋಷ್ಠಿಯಲ್ಲಿ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಡ್ಡಿ ಹಣಕ್ಕೆ ಮನಬಂದಂತೆ ಹಲ್ಲೆ – ಬೆತ್ತಲೆಗೊಳಿಸಿ ಚಿತ್ರಹಿಂಸೆ

  • ಮಾಜಿ ಡಾನ್ ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್

    ಮಾಜಿ ಡಾನ್ ಜೇಡರಹಳ್ಳಿ ಕೃಷ್ಣಪ್ಪ ಅರೆಸ್ಟ್

    ಬೆಂಗಳೂರು: ಜಮೀನು ವ್ಯಾಜ್ಯ (Land Grabbing) ಸಂಬಂಧ ಮಾಜಿ ಡಾನ್ (Ex Don) ಜೇಡರಹಳ್ಳಿ ಕೃಷ್ಣಪ್ಪನನ್ನು (Jedarahalli Krishnappa) ಪೊಲೀಸರು ಅರೆಸ್ಟ್ ಮಾಡಿದ್ದಾರೆ.

    ಬ್ಯಾಡರಹಳ್ಳಿ ಪೊಲೀಸರು ಜೇಡರಹಳ್ಳಿ ಕೃಷ್ಣಪ್ಪನನ್ನು ಅರೆಸ್ಟ್ ಮಾಡಿದ್ದಾರೆ. ಜಮೀನು ವ್ಯಾಜ್ಯ ಸಂಬಂಧ ಕೃಷ್ಣಪ್ಪ ವಿರುದ್ಧ ದೂರು ದಾಖಲಾಗಿತ್ತು. ಈ ಹಿನ್ನೆಲೆ ಕೃಷ್ಣಪ್ಪನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಅಕ್ರಮ ಪಟಾಕಿ ಕಾರ್ಖಾನೆ ಸ್ಫೋಟ – 11 ಮಂದಿ ದುರ್ಮರಣ, 60 ಮಂದಿಗೆ ಗಾಯ

    16 ಎಕರೆ ಜಮೀನು ಕಬಳಿಸಿದ ಆರೋಪದಡಿ ಅರೆಸ್ಟ್ ಮಾಡಲಾಗಿದೆ. ಬೇರೆಯವರ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ ಕಬಳಿಕೆ ಮಾಡಿದ್ದ ಆರೋಪದಡಿ ಮಾಜಿ ಡಾನ್ ಕೃಷ್ಣಪ್ಪನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ತಿಂಡಿ ಮಾಡದ್ದಕ್ಕೆ ತಾಯಿಯನ್ನು ಹತ್ಯೆಗೈದ ಕೇಸ್‍ಗೆ ಟ್ವಿಸ್ಟ್ – ಕೊಲೆ ಮಾಡಿದ್ದು ಮಗನಲ್ಲ, ತಂದೆಯಿಂದಲೇ ಕೃತ್ಯ

  • ಭೂ ಕಬಳಿಕೆ ಆರೋಪ – ಶಾಸಕ ಜಮೀರ್‌, ಸಹೋದರರ ವಿರುದ್ಧ ಎಫ್‌ಐಆರ್‌

    ಭೂ ಕಬಳಿಕೆ ಆರೋಪ – ಶಾಸಕ ಜಮೀರ್‌, ಸಹೋದರರ ವಿರುದ್ಧ ಎಫ್‌ಐಆರ್‌

    ಬೆಂಗಳೂರು: ಭೂ ಕಬಳಿಕೆ ಆರೋಪದಡಿ ನ್ಯಾಯಾಲಯದ ಆದೇಶದ ಮೇರೆಗೆ ಕಾಂಗ್ರೆಸ್‌ ಶಾಸಕ ಜಮೀರ್‌ ಅಹ್ಮದ್‌ ಹಾಗೂ ಸಹೋದರರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

    ಜಮೀರ್‌ ಹಾಗೂ ಸಹೋದರರ ವಿರುದ್ಧ ಸಂಪಿಗೆಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಕಳೆದ ವರ್ಷ ಶಾಹೀತಾ ನಾಸೀನ್, ತಸ್ನೀಮ್ ಫಾತೀಮಾರಿಂದ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಕೆಯಾಗಿತ್ತು. ಈ ಸಂಬಂಧ ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಾಗಿದೆ. ಜಮೀರ್ ಕುಟುಂಬದ ವಿರುದ್ಧ ಆರೋಪಿಸಿ ಸೈಟ್‌ ಮಾಲೀಕರು ಕೋರ್ಟ್‌ ಮೊರೆ ಹೋಗಿದ್ದರು. ಇದನ್ನೂ ಓದಿ: ಕಾಂಗ್ರೆಸ್ ಮುಖಂಡರ ಮನೆ ಮುಂದೆ ಪ್ರತಿಭಟನೆ ಮಾಡಿದವರ ಮೇಲೆ FIR ದಾಖಲು

    ಚೊಕ್ಕನಹಳ್ಳಿ ಬಡಾವಣೆಯ ಸೈಟ್ ನಂ. 5, 6 ರ ವ್ಯಾಜ್ಯ ಸಂಬಂಧ ಜಮೀರ್ ಕುಟುಂಬಸ್ಥರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. 2015 ರಲ್ಲಿ ಶಾಹಿತಾ ನಾಸೀನ್, ತಸೀಮಾ ಫಾತೀಮಾ ಅವರು ಜಮೀರ್ ಕುಟುಂಬಸ್ಥರಿಂದ ಸೈಟ್ ಖರೀದಿಸಿದ್ದರಂತೆ.‌ ಚಾಮರಾಜಪೇಟೆ ಶಾಸಕ ಜಮೀರ್ ಸಹೋದರ ಹಾಗೂ ಕುಟುಂಬಸ್ಥರೇ ಮಾರಾಟ ಮಾಡಿದ್ದರು. 2018 ರಲ್ಲಿ ಜಮೀರ್ ಕುಟುಂಬಸ್ಥರಿಂದ ಮತ್ತೊಂದು ಸೈಟ್ ಖರೀದಿಸಿದ್ದಾಗಿ ಶಾಹೀತಾ ನಾಸೀನ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

    ಜೆಸಿ ನಗರ ನಿವಾಸಿಗಳಾಗಿದ್ದ ಶಾಹೀತಾ ನಾಸೀನ್ ಸೈಟ್‌ಗಳ ಕಡೆ ಗಮನ ಹರಿಸಿರಲಿಲ್ಲ. ಈ ಮಧ್ಯೆ ಮಾರಾಟ ಮಾಡಿದ್ದ ಜಮೀರ್ ಕುಟುಂಬದಿಂದಲೇ ಸೈಟ್‌ಗಳ ಕಬಳಿಕೆ ಯತ್ನಿಸಿದ್ದಾರೆ. ಅದನ್ನು ಪ್ರಶ್ನಿಸಿದ್ದಕ್ಕೆ ನಮಗೆ ಜೀವ ಬೆದರಿಕೆ ಹಾಕಿದ್ದಾರೆ ಎಂದು ಶಾಹೀತಾ ನಾಸೀನ್ ಗಂಭೀರ ಆರೋಪ ಮಾಡಿದ್ದರು. ಇದನ್ನೂ ಓದಿ: ಬೊಮ್ಮಾಯಿ ಹೇಳಿದ್ದೆ ವೇದ ವಾಕ್ಯನಾ? ಬೊಮ್ಮಾಯಿಗಿಂತ ಹಿರಿಯ ನಾನು: ಸಿದ್ದರಾಮಯ್ಯ

    ಖಾಸಗಿ ದೂರು ವಿಚಾರಣೆ ನಡೆಸಿದ ಕೋರ್ಟ್, ಈ ಸಂಬಂಧ ತನಿಖೆ ನಡೆಸುವಂತೆ ಆದೇಶ ಹೊರಡಿಸಿದೆ. ಕಬಳಿಕೆ ಮಾಡಿರುವ ಸೈಟ್ ಸಂಬಂಧ ಯಥಾಸ್ಥಿತಿ ಕಾಪಾಡಲು ಕೋರ್ಟ್‌ ಆದೇಶಿಸಿದೆ. ಆದರೆ ಕೋರ್ಟ್‌ನಿಂದ ತಡೆಯಾಜ್ಞೆ ಬಂದರೂ ಜಮೀರ್‌ ಕುಟುಂಬಸ್ಥರು ಸೈಟ್‌ ಬಿಟ್ಟುಕೊಟ್ಟಿಲ್ಲ ಎಂದು ಆರೋಪಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ದೂರುದಾರರಿಂದ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

  • ಎಚ್‍ಡಿಕೆ, ಡಿ.ಸಿ.ತಮ್ಮಣ್ಣಗೆ ಮಾನ ಮರ್ಯಾದೆ ಇದ್ದರೆ ಭೂಕಬಳಿಕೆ ಜಾಗವನ್ನ ಮರಳಿಸಲಿ: ಹಿರೇಮಠ್

    ಎಚ್‍ಡಿಕೆ, ಡಿ.ಸಿ.ತಮ್ಮಣ್ಣಗೆ ಮಾನ ಮರ್ಯಾದೆ ಇದ್ದರೆ ಭೂಕಬಳಿಕೆ ಜಾಗವನ್ನ ಮರಳಿಸಲಿ: ಹಿರೇಮಠ್

    ರಾಮನಗರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರಿಗೆ ನಾಚಿಕೆ, ಮಾನ ಮರ್ಯಾದೆ ಇದ್ದರೆ ಭೂಕಬಳಿಕೆ ಜಾಗವನ್ನ ವಾಪಸ್ ಮಾಡಲಿ ಎಂದು ಸಾಮಾಜಿಕ ಹೋರಾಟಗಾರ ಎಸ್.ಆರ್.ಹೀರೇಮಠ್ ಆಗ್ರಹಿಸಿದ್ದಾರೆ.

    ರಾಮನಗರ ತಾಲೂಕಿನ ಬಿಡದಿಯ ಕೇತಗಾನಹಳ್ಳಿಗೆ ಹೋಗಿದ್ದಾಗ ಮೊಟ್ಟೆ ಎಸೆದು ಹಲ್ಲೆ ನಡೆಸಲಾಗಿತ್ತು. ಈ ವಿಚಾರವಾಗಿ ಇಂದು ರಾಮನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್‍ಡಿ ಕುಮಾರಸ್ವಾಮಿ ಹಾಗೂ ಡಿ.ಸಿ.ತಮ್ಮಣ್ಣ ಅವರಿಗೆ ಸಂವಿಧಾನದ ಮೇಲೆ ಗೌರವಿದ್ದರೆ ಕರ್ನಾಟಕದ ಜನರ ಕ್ಷಮೆ ಕೇಳಬೇಕು. ಜೊತೆಗೆ ತಾವು ಯಾರ ಬಳಿ ಜಮೀನು ತೆಗೆದುಕೊಂಡಿದ್ದಾರೋ ಅವರಿಗೆ ಮರಳಿಸಲಿ. ಇಲ್ಲದಿದ್ದರೆ ಪ್ರಭಾವಿಗಳಿಗೆ ಬಂದ ಸ್ಥಿತಿ ಇವರಿಗೂ ಬರಬಹುದು. ನಾವು ಇಷ್ಟಕ್ಕೆ ಇದನ್ನ ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಬಿಡದಿಯಲ್ಲಿ ಎಸ್.ಆರ್ ಹಿರೇಮಠ್, ರವಿಕೃಷ್ಣಾ ರೆಡ್ಡಿ ಮೇಲೆ ಮೊಟ್ಟೆ ಏಟು

    ಬಿಡದಿಯ ಕೇತಗಾನಹಳ್ಳಿ ಸಮೀಪದ ಮಾಜಿ ಸಿಎಂ ಕುಮಾರಸ್ವಾಮಿ ಅವರು 22 ಎಕರೆ ಗೋಮಾಳ ಜಮೀನು ಖರೀದಿಸಿದ್ದಾರೆ. ಅವರ ಚಿಕ್ಕಮ್ಮ ಸಾವಿತ್ರಮ್ಮ 22 ಎಕರೆ ಖರೀದಿಸಿ ದಾನ ನೀಡಿದ್ದು, 56 ಎಕರೆ ಎಚ್‍ಡಿ ಕುಮಾರಸ್ವಾಮಿ ಹೆಸರಿನಲ್ಲಿದೆ. ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಅವರ ತಮ್ಮ ನಂಜುಡ್ಯಯ್ಯ, ತಮ್ಮಣ್ಣನ ಪತ್ನಿ ಹಾಗೂ ಮಕ್ಕಳು 210 ಎಕರೆ ಜಮೀನನ್ನು ಭೂಕಬಳಿಕೆ ಮಾಡಿದ್ದಾರೆ. ವಸ್ತುಸ್ಥಿತಿ ತಿಳಿಯಲು ಗ್ರಾಮಕ್ಕೆ ಹೋಗಿದ್ದೇವು. ಈ ವೇಳೆ ಮೊಟ್ಟೆಯಲ್ಲಿ ಹೊಡೆದು ಅವಾಚ್ಯ ಶಬ್ದಗಳಿಂದ ಎಚ್‍ಡಿಕೆ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಭೂಕಬಳಿಕೆ ವಿಚಾರವಾಗಿ ಇದನ್ನು ಇಷ್ಟಕ್ಕೆ ಬಿಡುವುದಿಲ್ಲ. ಕಾನೂನಾತ್ಮಕ ಹೋರಾಟ ನಡೆಸುವುದಾಗಿ ತಿಳಿಸಿದರು.

    ನಾಚಿಕೆ, ಮಾನ, ಮಾರ್ಯದೆ ಬಿಟ್ಟು ಭೂಕಬಳಿಕೆ ಮಾಡಿದ್ದು ಕರ್ನಾಟಕ ಜನತೆಯ ಕ್ಷಮೆ ಕೇಳಿ ಭೂಮಿ ವಾಪಾಸ್ ನೀಡಲಿ. ಅಲ್ಲದೇ ಈ ವಯಸ್ಸಿನಲ್ಲಾದರೂ ಎಚ್.ಡಿ.ದೇವೇಗೌಡ ಅವರು ವಯಸ್ಸಿಗೆ ತಕ್ಕಂತೆ ನಡೆದುಕೊಳ್ಳಲಿ ಎಂದರು.

    ಪಬ್ಲಿಕ್ ಟಿವಿ ಸಂದರ್ಶನದ ವೇಳೆ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ ಎಂದಿದ್ದೆ. ಅವರಿಗೆ ಒಂದು ಗತಿ ಬಂತು. ಕಾನೂನಿನ ಗಾಲಿಗಳು ಚಲಿಸಿದರೆ ನೂರು ವರ್ಷ ಅವರು ಜೈಲಿನಲ್ಲಿರಬೇಕಾಗುತ್ತದೆ ಎಂದು ಹೇಳಿದರು.

    ಎಚ್.ಡಿ.ಕುಮಾರಸ್ವಾಮಿ ಎರಡು ಬಾರಿ ರಾಜ್ಯದ ಸಿಎಂ ಆಗಿದ್ದವರು. ತಮ್ಮ ಕಾರ್ಯಕರ್ತರಿಗೆ ಬುದ್ಧಿ ಹೇಳಬೇಕು. ತಮ್ಮ ಹೆಸರಿಗೆ ಕಳಂಕ ತರುವ ಕಾರ್ಯಕರ್ತರನ್ನು ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ನಾಚಿಕೆ, ಮರ್ಯಾದೆ ಬಿಟ್ಟು ಭೂಕಬಳಿಕೆ ಮಾಡಿದ್ದಾರೆ. ಮಾನ ಮರ್ಯಾದೆಯಿದ್ದರೆ ಭೂಕಬಳಿಕೆ ಜಾಗವನ್ನು ವಾಪಸ್ ಮಾಡಲಿ ಎಂದರು.

    ಇದೇ ವೇಳೆ ಮಾತನಾಡಿದ ಲಂಚಮುಕ್ತ ಕರ್ನಾಟಕ ವೇದಿಕೆಯ ರವಿಕೃಷ್ಣರೆಡ್ಡಿ ಅವರು, ನಮ್ಮ ಮೇಲೆ ಮೊಟ್ಟೆ ಎಸೆದು ಹಲ್ಲೆ ನಡೆಸಿದ ಘಟನೆ ಎಚ್.ಡಿ.ಕುಮಾರಸ್ವಾಮಿ ಪ್ರೇರಿತವಲ್ಲ. ಆದರೆ ಹಲ್ಲೆ ನಡೆಸಿದವರು ಜೆಡಿಎಸ್ ಕಾರ್ಯಕರ್ತರ ಎಂಬುದು ಸ್ಪಷ್ಟ. ಇಂತಹ ಹುಚ್ಚುನಾಯಿಗಳನ್ನು ಎಚ್‍ಡಿಕೆ ಸಾಕಿಕೊಂಡಿದ್ದಾರೆ ಎಂದು ಹರಿಹಾಯ್ದರು.