ನವದೆಹಲಿ: ಭಾರತದಿಂದ ಓಡಿಹೋಗಿ ತನ್ನದೇ ಆದ ಕೈಲಾಸ ದೇಶ ಸ್ಥಾಪಿಸಿರುವ ನಿತ್ಯಾನಂದ (Nithyananda) ವಿರುದ್ಧ ಭೂ ವಂಚನೆ (Land Scam) ಯತ್ನ ಆರೋಪ ಕೇಳಿ ಬಂದಿದೆ. ದಕ್ಷಿಣ ಅಮೆರಿಕ ಖಂಡದಲ್ಲಿರುವ ಬೊಲಿವಿಯಾ (Bolivia) ದೇಶದಲ್ಲಿ 3,900 ಚದರ ಕಿಲೋಮೀಟರ್ ಭೂ ಕಬಳಿಕೆ ಆರೋಪ ಎದುರಿಸುತ್ತಿದ್ದಾರೆ.
ಬೊಲಿವಿಯಾದ ಅಮೇಜಾನ್ ಪ್ರದೇಶದ ಬುಡಕಟ್ಟು ಜನಾಂಗಕ್ಕೆ ಅಸ್ತಿತ್ವದಲ್ಲಿಲ್ಲದ ಕೈಲಾಸ ದೇಶ ವಂಚನೆ ಮಾಡಿರೋದು ಬೆಳಕಿಗೆ ಬಂದಿದೆ. ಅಮೆಜಾನ್ ಮಳೆ ಕಾಡು ಪ್ರದೇಶದ ಭೂಮಿಯನ್ನು ನಿತ್ಯಾನಂದ ಗ್ಯಾಂಗ್ 1 ಸಾವಿರ ವರ್ಷ ಲೀಸ್‌ಗೆ ಪಡೆದು ವಂಚಿಸಿದ ಆರೋಪ ಕೇಳಿಬಂದಿದೆ.
Nithyananda ‘Global Land’ Loot
– Wanted to ‘Loot’: 3,900 sq kms of Amazonian land.
It’s 2.6 times size of Delhi, 6.5 times size of Mumbai, 5.3 times size of B’luru, 19 times size of Kolkata..: @Swatij14 with more details.@esha__mishra with more inputs. pic.twitter.com/riYikqeFIn
2024ರ ಅಕ್ಟೋಬರ್- ನವೆಂಬರ್ ನಡುವೆ ಈ ಅನಧಿಕೃತ ಭೂವ್ಯವಹಾರ ನಡೆದಿದೆ. 1,08,000 ಡಾಲರ್‌ಗೆ (ವರ್ಷಕ್ಕೆ 8.96 ಲಕ್ಷ ರೂ.) ಈ ಭೂಮಿಯನ್ನು ಅಕ್ರಮವಾಗಿ ಲೀಸ್‌ಗೆ ಪಡೆದಿದೆ. ಪ್ರಕರಣ ಸಂಬಂಧ ಇದೀಗ ನಿತ್ಯಾನಂದನ 20ಕ್ಕೂ ಅಧಿಕ ಅನುಯಾಯಿಗಳನ್ನು ಬೊಲಿವಿಯಾದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿ ಈದ್ ಕಿಟ್
ಈ ಭೂಮಿಯು ದೆಹಲಿಯ ಗಾತ್ರಕ್ಕಿಂತ 2.6 ಪಟ್ಟು, ಮುಂಬೈನ ಗಾತ್ರಕ್ಕಿಂತ 6.5 ಪಟ್ಟು, ಬೆಂಗಳೂರಿನ ಗಾತ್ರಕ್ಕಿಂತ 5.3 ಪಟ್ಟು, ಕೋಲ್ಕತ್ತಾದ ಗಾತ್ರಕ್ಕಿಂತ 19 ಪಟ್ಟು ದೊಡ್ಡದಾಗಿದೆ.
ಬಂಧಿತರ ಪೈಕಿ ಬಹುತೇಕ ಮಹಿಳೆಯರಿದ್ದಾರೆ. 122 ಚೀನಿಯರು, 7 ಜನ ಭಾರತೀಯರಿದ್ದಾರೆ. ಕೆಲವರನ್ನ ಬೊಲಿವಿಯಾದಿಂದ ಗಡೀಪಾರು ಮಾಡಲಾಗಿದೆ. ನಿತ್ಯಾನಂದ ತಂಡ ಆರೋಪ ನಿರಾಕರಿಸಿದೆ. ತಪ್ಪು ವರದಿಯಿಂದ ಹಿಂದು ಸನ್ಯಾಸಿಗಳನ್ನ ಬಂಧಿಸಿ ಹಲ್ಲೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದೆ.
– ಲೋಕಾಯುಕ್ತ, ಇಡಿಗೆ ದೂರು ನೀಡಿದ ಎನ್‌ಆರ್ ರಮೇಶ್ – ಪಿತ್ರೋಡಾ ಸೇರಿ 6 ಮಂದಿ ವಿರುದ್ಧ ದೂರು – ಗುತ್ತಿಗೆ ಅವಧಿ ಮುಕ್ತಾಯವಾಗಿದ್ದರೂ ಇನ್ನೂ ಸರ್ಕಾರದ ವಶಕ್ಕೆ ಬಂದಿಲ್ಲ
ಬೆಂಗಳೂರು: ರಾಹುಲ್ ಗಾಂಧಿ ಅತ್ಯಾಪ್ತ ಹಾಗೂ ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡಾ (Sam Pitroda) ಅವರು ಬೃಹತ್ ಭೂ ಹಗರಣದಲ್ಲಿ (Land Scam) ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡ ಎನ್. ಆರ್. ರಮೇಶ್ (NR Ramesh) ಅವರು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ.
ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ (Forest Department) ಸುಮಾರು 150 ಕೋಟಿ ರೂಪಾಯಿಗಳಿಗೂ ಹೆಚ್ಚು ಮೌಲ್ಯದ ಅತ್ಯಮೂಲ್ಯ ಸರ್ಕಾರಿ ಸ್ವತ್ತನ್ನು ಸ್ಯಾಮ್ ಪಿತ್ರೋಡಾ ರವರು ಕಾನೂನು ಬಾಹಿರವಾಗಿ ಕಳೆದ 14 ವರ್ಷಗಳಿಂದ ತಮ್ಮ ಸ್ವಾಧೀನದಲ್ಲಿಟ್ಟುಕೊಂಡು ಆ ಸ್ವತ್ತಿನಲ್ಲಿ ಪ್ರತೀ ವರ್ಷ ಕೋಟ್ಯಂತರ ರೂಪಾಯಿ ಆದಾಯ ಗಳಿಸುತ್ತಿದ್ದಾರೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೂರಿನಲ್ಲಿ ಏನಿದೆ?
ಒಡಿಶಾ ಮೂಲದ ಸ್ಯಾಮ್ ಪಿತ್ರೋಡಾ ಅಲಿಯಾಸ್ ಸತ್ಯನಾರಾಯಣ್ ಗಂಗಾರಾಂ ಪಿತ್ರೋಡಾ ಮುಂಬೈ ಮಹಾನಗರದ ರಿಜಿಸ್ಟ್ರಾರ್ ಆಫ್ ಕೋ – ಆಪರೇಟಿವ್ ಸೊಸೈಟೀಸ್ ಕಛೇರಿಯಲ್ಲಿ ಅಕ್ಟೋಬರ್ 23, 1991 ರಂದು “Foundation for Revitalisation of Local Health Traditions” (FRLHT) ಎಂಬ ಸಂಸ್ಥೆಯನ್ನು ನೊಂದಣಿ ಮಾಡಿಸುತ್ತಾರೆ ಹಾಗೂ ಖುದ್ದು ಸ್ಯಾಮ್ ಪಿತ್ರೋಡಾ ಅವರ ಲಿಖಿತ ರೂಪದ ಮನವಿಯಂತೆ FRLHT ಸಂಸ್ಥೆಯ ನೊಂದಣಿಯನ್ನು 2010 ರಲ್ಲಿ ರದ್ದುಗೊಳಿಸಲಾಗುತ್ತದೆ.
ಇದಾದ ನಂತರ 2008 ರಲ್ಲಿ ಬೆಂಗಳೂರಿನ ಬ್ಯಾಟರಾಯನಪುರ ಉಪ ನೊಂದಣಾಧಿಕಾರಿಗಳ ಕಛೇರಿಯಲ್ಲಿ “Foundation for Revitalisation of Local Health Traditions”ಹೆಸರಿನ Trust Deed ಅನ್ನು ಸೆಪ್ಟೆಂಬರ್ 05, 2008 ರಂದು ನೊಂದಣಿ ಮಾಡಿಸುತ್ತಾರೆ. ಇದರ ನಡುವೆ – “ಗಿಡ ಮೂಲಿಕೆ ಔಷಧಿ ಸಸಿಗಳ ಸಂರಕ್ಷಣೆ ಮತ್ತು ಸಂಶೋಧನೆ ಕಾರ್ಯ”ಕ್ಕೆ ಮೀಸಲು ಅರಣ್ಯ ಪ್ರದೇಶವನ್ನು ಗುತ್ತಿಗೆಗೆ ನೀಡುವಂತೆ 1996 ರಲ್ಲಿ ಸ್ಯಾಮ್ ಪಿತ್ರೋಡಾ ಮನವಿ ಸಲ್ಲಿಸುತ್ತಾರೆ.
ಸ್ಯಾಮ್ ಪಿತ್ರೋಡಾ ಅವರ ಮನವಿಯಂತೆ ಅವರ ಅಧ್ಯಕ್ಷತೆಯ FRLHT ಸಂಸ್ಥೆಗೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು ಬೆಂಗಳೂರಿನ ಯಲಹಂಕ ಬಳಿಯ ಜಾರಕಬಂಡೆ ಕಾವಲ್‌ನ ‘ಬಿ’ಬ್ಲಾಕ್ ನಲ್ಲಿ 5 ಹೆಕ್ಟೇರ್ (12.35 ಎಕರೆ) ವಿಸ್ತೀರ್ಣದ ಮೀಸಲು ಅರಣ್ಯ ಪ್ರದೇಶವನ್ನು 5 ವರ್ಷಗಳ ಗುತ್ತಿಗೆಗೆ ನೀಡುತ್ತದೆ. ಇದಕ್ಕೆ ಕೇಂದ್ರದ ಅರಣ್ಯ ಮತ್ತು ಪರಿಸರ ವಿಜ್ಞಾನ ಇಲಾಖೆಯೂ ಸಹ ಅನುಮೋದನೆ ನೀಡಿರುತ್ತದೆ.
ಸದರಿ FRLHT ಸಂಸ್ಥೆಗೆ ನೀಡಿದ್ದ 5 ವರ್ಷಗಳ ಗುತ್ತಿಗೆ ಅವಧಿಯು ಮುಕ್ತಾಯವಾಗಿದ್ದರಿಂದ, ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯು 2001 ರಲ್ಲಿ 10 ವರ್ಷಗಳ ಅವಧಿಗೆ ಗುತ್ತಿಗೆಯನ್ನು ಮುಂದುವರೆಸಿ ಆದೇಶಿಸಿರುತ್ತದೆ. ಡಿಸೆಂಬರ್ 02, 2011ಕ್ಕೆ ಸ್ಯಾಮ್ ಪಿತ್ರೋಡಾ ಅವರ FRLHT ಸಂಸ್ಥೆಗೆ ನೀಡಿದ್ದ ಗುತ್ತಿಗೆ ಅವಧಿಯು ಮುಕ್ತಾಯಗೊಂಡಿರುತ್ತದೆ ಹಾಗೂ ಇದಾದ ನಂತರ ಗುತ್ತಿಗೆ ಅವಧಿಯನ್ನು ವಿಸ್ತರಿಸಲಾಗಿರುವುದಿಲ್ಲ.
FRLHT ಸಂಸ್ಥೆಗೆ ನೀಡಿದ್ದ ಗುತ್ತಿಗೆ ಅವಧಿಯು ಮುಕ್ತಾಯಗೊಂಡ ನಂತರ 150 ಕೋಟಿ ರೂ. ಗಳಿಗೂ ಹೆಚ್ಚು ಮೌಲ್ಯದ 12.35 ಎಕರೆ ವಿಸ್ತೀರ್ಣದ ಈ ಅತ್ಯಮೂಲ್ಯ ಸರ್ಕಾರಿ ಸ್ವತ್ತನ್ನು ರಾಜ್ಯ ಅರಣ್ಯ ಇಲಾಖೆಯು ತನ್ನ ವಶಕ್ಕೆ ಪಡೆದುಕೊಳ್ಳಬೇಕಿತ್ತು. ಆದರೆ ಸ್ಯಾಮ್ ಪಿತ್ರೋಡಾ ಎಂಬ ಅತ್ಯಂತ ಪ್ರಭಾವೀ ರಾಜಕಾರಣಿ / ಉದ್ಯಮಿಯಿಂದ ತಿನ್ನಬಾರದ್ದನ್ನು ತಿಂದಿದ್ದ ರಾಜ್ಯ ಅರಣ್ಯ ಇಲಾಖೆಯ ಮುಖ್ಯಸ್ಥರು ಈ ಅತ್ಯಮೂಲ್ಯ ಸರ್ಕಾರಿ ಸ್ವತ್ತನ್ನು ಇಲಾಖೆಯ ವಶಕ್ಕೆ ತೆಗೆದುಕೊಳ್ಳುವ ಸಣ್ಣ ಪ್ರಯತ್ನವನ್ನೂ ಸಹ ಕಳೆದ 14 ವರ್ಷಗಳಿಂದಲೂ ಮಾಡಿಲ್ಲ.
ಪ್ರಸ್ತುತ ಸುಮಾರು 150 ಕೋಟಿ ರೂಪಾಯಿಗಳಿಗೂ ಹೆಚ್ಚು ಮಾರುಕಟ್ಟೆ ಮೌಲ್ಯವನ್ನು ಹೊಂದಿರುವ ಈ ಅತ್ಯಮೂಲ್ಯ ಸರ್ಕಾರಿ ಸ್ವತ್ತನ್ನು ಕಳೆದ 29 ವರ್ಷಗಳಿಂದ ತನ್ನ ಸ್ವಾಧೀನದಲ್ಲಿ ಇಟ್ಟುಕೊಂಡಿರುವ ಸ್ಯಾಮ್ ಪಿತ್ರೋಡಾ ಸಾಮಾನ್ಯ ವ್ಯಕ್ತಿಯಲ್ಲ. ಭಾರತದ ಪ್ರಧಾನಮಂತ್ರಿಗಳಾಗಿದ್ದ ದಿ.ರಾಜೀವ್ ಗಾಂಧಿ ಮತ್ತು ಮನಮೋಹನ್ ಸಿಂಗ್ ಅವರುಗಳಿಗೆ ಭಾರತದ ದೂರ ಸಂಪರ್ಕ ಇಲಾಖೆಯ ಸಲಹೆಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಬೆಂಗಳೂರು ಯಲಹಂಕ ಬಳಿಯ ಜಾರಕಬಂಡೆ ಕಾವಲ್‌ನ 12.35 ಎಕರೆ ವಿಸ್ತೀರ್ಣದ ಮೀಸಲು ಅರಣ್ಯ ಪ್ರದೇಶದಲ್ಲಿ “ಗಿಡಮೂಲಿಕೆ ಔಷಧಿ ಸಸಿಗಳ ಸಂರಕ್ಷಣೆ ಮತ್ತು ಸಂಶೋಧನೆ”ಹೆಸರಿನಲ್ಲಿ ನೂರಾರು ವಿಧದ ಅಪರೂಪದ ಗಿಡಮೂಲಿಕೆ ಸಸಿಗಳನ್ನು ಬೆಳೆಯುತ್ತಿರುವ ಸ್ಯಾಮ್ ಪಿತ್ರೋಡಾ ಅವರ FRLHT ಸಂಸ್ಥೆಯು ಅವುಗಳ ಉತ್ಪನ್ನಗಳ ಮಾರಾಟದಿಂದ ಕಳೆದ 29 ವರ್ಷಗಳಿಂದಲೂ ಪ್ರತೀ ವರ್ಷ ಕೋಟ್ಯಂತರ ರೂಪಾಯಿ ಹಣ ಗಳಿಸುತ್ತಿದ್ದಾರೆ. ಇದನ್ನೂ ಓದಿ: ಮುಸ್ಲಿಮರು ಪುರುಸೊತ್ತಿಲ್ಲದೆ ಮಕ್ಕಳು ಹುಟ್ಟಿಸುತ್ತಾರೆ ಅನ್ನೋದು ಪ್ರಚೋದನೆನಾ? – ಪ್ರತಾಪ್ ಸಿಂಹ
ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸ್ಯಾಮ್ ಪಿತ್ರೋಡಾ ಅವರ ರಾಜಕೀಯ ಮತ್ತು ಆರ್ಥಿಕ ಪ್ರಭಾವಕ್ಕೆ ಒಳಗಾಗಿರುವ ರಾಜ್ಯ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು – FRLHT ಯ ಗುತ್ತಿಗೆ ಅವಧಿ ಡಿಸೆಂಬರ್ 02, 2011ರಲ್ಲೇ ಮುಕ್ತಾಯಗೊಂಡಿರುವ ಮಾಹಿತಿಯನ್ನು ಈವರೆಗೆ ಕೇಂದ್ರದ ಅರಣ್ಯ ಮತ್ತು ಪರಿಸರ ವಿಜ್ಞಾನ ಇಲಾಖೆಗೆ ನೀಡದೇ ಗಂಭೀರ ಅಪರಾಧ ಎಸಗಿದ್ದಾರೆ.
ಸ್ಯಾಮ್ ಪಿತ್ರೋಡಾ ಅವರ ಆರ್ಥಿಕ / ರಾಜಕೀಯ ಪ್ರಭಾವಗಳಿಗೆ ಒಳಗಾಗಿ ಕರ್ನಾಟಕ ರಾಜ್ಯ ಅರಣ್ಯ ಮತ್ತು ಪರಿಸರ ಇಲಾಖೆಯ ಮಾಜಿ ಅಪರ ಮುಖ್ಯ ಕಾರ್ಯದರ್ಶಿಗಳಾದ ಜಾವೇದ್ ಅಖ್ತರ್ ( ಪ್ರಸ್ತುತ ಅಧ್ಯಕ್ಷರು, ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ), ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆರ್.ಕೆ ಸಿಂಗ್ ಮತ್ತು ಸಂಜಯ್ ಮೋಹನ್, ಕರ್ನಾಟಕ ರಾಜ್ಯ ಅರಣ್ಯ ಇಲಾಖೆಯ ಬೆಂಗಳೂರು ನಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿಗಳಾದ ಎನ್. ರವೀಂದ್ರ ಕುಮಾರ್ ಮತ್ತು ಎಸ್‌ಎಸ್ ರವಿಶಂಕರ್ ಅವರುಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS), 2023 ರ ಅಡಿಯಲ್ಲಿ ವಂಚನೆ, ಭ್ರಷ್ಟಾಚಾರ, ಸರ್ಕಾರಿ ಭೂ ಕಬಳಿಕೆ ಮತ್ತು ಅಧಿಕಾರ ದುರುಪಯೋಗ ಪ್ರಕರಣಗಳನ್ನು ದಾಖಲಿಸಿಕೊಂಡು ಕಾನೂನು ರೀತ್ಯಾ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಮನವಿ.
ಬೆಂಗಳೂರು: 4 ಜನರು ಹೇಳಿದಂತೆ ಸಚಿವರಿಗೆ ಗೌರವ ಕೊಟ್ಟು ನಾನು ವಿಪಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ. ಅದೇ ನೈತಿಕತೆಯಲ್ಲಿ ಸಿದ್ದರಾಮಯ್ಯ (Siddaramaiah) ರಾಜೀನಾಮೆಯನ್ನ 4 ಜನ ಮಂತ್ರಿಗಳು ಪಡೆಯಲಿ. ಅಥವಾ ಪರಮೇಶ್ವರ್ (G Parameshwara) ಬಿಟ್ಟು ಉಳಿದ 3 ಜನ ಸಚಿವರು ರಾಜೀನಾಮೆ ಕೊಟ್ಟು ಸಿದ್ದರಾಮಯ್ಯ ಮೇಲಿನ ಪ್ರೀತಿ ಅನಾವರಣ ಮಾಡಲಿ ಅಂತ ವಿಪಕ್ಷ ನಾಯಕ ಆರ್.ಅಶೋಕ್ (R Ashoka) 4 ಜನ ಸಚಿವರಿಗೆ ಸವಾಲ್ ಹಾಕಿದ್ದಾರೆ.
ನಿನ್ನೆ ಅಶೋಕ್ ವಿರುದ್ಧ ಭೂ ಅಕ್ರಮದ ಬಗ್ಗೆ ಪ್ರಸ್ತಾಪ ಮಾಡಿದ್ದ 4 ಜನ ಸಚಿವರಿಗೆ ತಿರುಗೇಟು ಕೊಟ್ಟ ಅಶೋಕ್, ಸಚಿವರಿಗೆ ನಾನು ಕೊಟ್ಟಿರೋ ಸವಾಲನ್ನ 24 ಗಂಟೆ ಒಳಗೆ ಸ್ವೀಕಾರ ಮಾಡಲಿ ಅಂತ ಸವಾಲ್ ಹಾಕಿದ್ರು. ಲೊಟ್ಟೆಗೊಲ್ಲಹಳ್ಳಿ ಭೂಮಿಗೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯ ಮತ್ತು ಹೈಕೋರ್ಟ್‌ನಲ್ಲಿ (Highcourt) ನನ್ನ ಪರ ತೀರ್ಪು ಕೊಟ್ಟಿದೆ. ಸಿದ್ದರಾಮಯ್ಯ ರೀತಿ ತನಿಖೆಗೆ ಆದೇಶ ಮಾಡಿಲ್ಲ. ಹೀಗಿದ್ರೂ ದ್ವೇಷದ ರಾಜಕೀಯಕ್ಕಾಗಿ ನನ್ನ ಮೇಲೆ ಆರೋಪ ಮಾಡೋದು ಸರಿಯಲ್ಲ ಎಂದಿದ್ದಾರೆ. ಇದನ್ನೂ ಓದಿ: ನಾನು ಬಳ್ಳಾರಿ ಹೋಗೋವಾಗ ಪಾದಯಾತ್ರೆ ಮಾಡಿ ಸಿಎಂ ಆದವರು ಮನ:ಶಾಂತಿ ಕಳೆದುಕೊಂಡಿದ್ದಾರೆ: ಜನಾರ್ದನ ರೆಡ್ಡಿ
ಅದು ಬಿಡಿಎ ಜಾಗ ಅಲ್ಲ. ಬಿಡಿಎ ಈ ಸಂಬಂಧ ನನಗೆ NOC ಕೊಟ್ಟಿದೆ. ಮಾಲೀಕರ ರಾಮಸ್ವಾಮಿಗೆ ಅವರ ತಂದೆಯಿಂದ ಜಮೀನು ಬಂದಿದೆ. ನಿಯಮದ ಪ್ರಕಾರವೇ ನಾನು ಹಣ ಬಿಟ್ಟು ರಿಜಿಸ್ಟರ್ ಮಾಡಿಕೊಂಡಿದ್ದೇನೆ. ಇದರಲ್ಲಿ ಯಾವುದೇ ಅಕ್ರಮ ಆಗಿಲ್ಲ. 2 ಕೋರ್ಟ್ ನನ್ನ ಪರ ತೀರ್ಪು ಕೊಟ್ಟಿದೆ. ಅಲ್ಲದೇ 2010 ರಲ್ಲಿ ಅಂದಿನ ರಾಜ್ಯಪಾಲರು ಹಂಸರಾಜ್ ಭಾರದ್ವಾಜ್ ಅವರ ಮುಂದೆ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ಮನವಿ ಮಾಡಿದ್ರು. ಆದರೆ ಕಾಂಗ್ರೆಸ್ ನಿಂದ ನೇಮಕವಾದ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡಲಿಲ್ಲ ಅಂತ ಸಚಿವರಿಗೆ ತಿರುಗೇಟು ನೀಡಿದ್ರು. ಇದನ್ನೂ ಓದಿ: 1 ವರ್ಷ ದೇವಿಯ ಆಶೀರ್ವಾದ ಸಿಗಲಿ ಎನ್ನುತ್ತಾ ಅಧಿಕಾರ ಹಂಚಿಕೆಯ ಸುಳಿವು ನೀಡಿದ್ರಾ? – ಕುತೂಹಲ ಮೂಡಿಸಿದ ಸಿಎಂ ಮಾತು
ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ್ (R Ashoka) ವಿರುದ್ಧ ಗೃಹ ಸಚಿವ ಡಾ.ಜಿ ಪರಮೇಶ್ವರ್ (G Parameshwar) ಅವರು, ನೂರಾರು ಕೋಟಿ ಭೂಹಗರಣದ (Land Scam) ಬಾಂಬ್ ಸಿಡಿಸಿದ್ದಾರೆ.
ಗೃಹ ಸಚಿವ ಡಾ.ಜಿ ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕಂದಾಯ ಸಚಿವರಾದ ಕೃಷ್ಣಭೈರೇಗೌಡ ಅವರ ಸಮ್ಮುಖದಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ವೇಳೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಭೂ ಅಕ್ರಮದ ಆರೋಪ ಮಾಡಿ ದಾಖಲೆ ಬಿಡುಗಡೆ ಮಾಡಿದರು. ಇದನ್ನೂ ಓದಿ: ICC Test Ranking | ಅಶ್ವಿನ್ ಹಿಂದಿಕ್ಕಿ ನಂ.1 ಪಟ್ಟಕ್ಕೇರಿದ ಬುಮ್ರಾ – ಬ್ಯಾಟಿಂಗ್‌ನಲ್ಲಿ ಯಶಸ್ವಿ, ಕೊಹ್ಲಿ ಶೈನ್
ಕಳೆದ ಕೆಲ ದಿನಗಳಿಂದ ಮುಡಾ ಬಗ್ಗೆ ಚರ್ಚೆಯಾಗ್ತಿದೆ. ಮುಖ್ಯಮಂತ್ರಿಗಳ ಪತ್ನಿ ಮುಡಾಗೆ ನಿವೇಶನಗಳನ್ನ ವಾಪಸ್ ಮಾಡಿದ್ದಾರೆ. ಆದರೂ ಬಿಜೆಪಿಯ ಮುಖಂಡರು ವಾಪಸ್ ಕೊಟ್ಟಿರೋದೆ ಸರಿಯಿಲ್ಲ. ತಪ್ಪನ್ನ ಒಪ್ಪಿಕೊಂಡಂತಾಯ್ತು ಅಂತಾ ಬೇರೆ ಬೇರೆ ಅರ್ಥದಲ್ಲಿ ಮಾತಾಡ್ತಿದ್ದಾರೆ. ಆದ್ರೆ ವಿಪಕ್ಷ ನಾಯಕ ಆರ್. ಅಶೋಕ್ ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಮಾಡಿರೋದೆ ತಪ್ಪು. ಸರ್ಕಾರದ ಜಾಗ ಕಬಳಿಸಿ ಒಪ್ಪಿಕೊಂಡಾಯ್ತು ಅಂತಾ ಅವರದೇ ಭಾಷೆಯಲ್ಲಿ ಮಾತಾಡಿದ್ದಾರೆ. ಅವರ ಅವಧಿಯಲ್ಲಾದ ಹಗರಣದ ಬಗ್ಗೆ ರಾಜ್ಯದ ಜನ್ರ ಮುಂದಿಡೋಕೆ ಬಂದಿದ್ದೀವಿ ಎಂದು ಹೇಳಿದರು. ಇದನ್ನೂ ಓದಿ: 200ನೇ ವಿಜಯೋತ್ಸವ ಆಚರಣೆ – ಕಿತ್ತೂರು ಉತ್ಸವ ಜ್ಯೋತಿಗೆ ಸಿಎಂ ಚಾಲನೆ
ಲೊಟ್ಟೆಗೊಲ್ಲಹಳ್ಳಿಯಲ್ಲಿ ನೂರಾರು ಕೋಟಿ ಜಮೀನಿನ ಹಗರಣವಾಗಿದೆ. ದಾಖಲಾತಿ ಸಮೇತ ಮಂಡಿಸೊ ಕೆಲಸ ಮಾಡ್ತಿದ್ದೇವೆ. ಲೊಟ್ಟೆಗಲ್ಲಹಳ್ಳಿ ಸರ್ವೆ ನಂ 11 , ಎಫ್-1 ರಲ್ಲಿ ಬಿಡಿಎ 24-02-77 ಪ್ರಾಥಮಿಕ ಅಧಿಸೂಚನೆ ಹೊರಡಿಸುತ್ತೆ. 31-08-78 ರಲ್ಲಿ ಮತ್ತೊಂದು ಫೈನಲ್ ನೋಟಿಫಿಕೇಷನ್ ಆಗುತ್ತೆ. 26-02-2003 ರಲ್ಲಿ ಹಾಗೂ 2007 ರಲ್ಲಿ ಈ ಜಮೀನನ್ನ ಮೂಲ ಮಾಲೀಕತ್ವ ಯಾರದಿತ್ತು? ಬಿಡಿಎ ಅಧಿಸೂಚನೆ ಹೊರಡಿಸುವ ಮೊದಲು ರಾಮಸ್ವಾಮಿ ಅನ್ನೋರ ಮಾಲೀಕತ್ವದಲ್ಲಿರುತ್ತೆ. 1978 ರಿಂದ 2003ರ ವರಗೆ ಬಿಡಿಎ ಸ್ವಾಧೀನದಲ್ಲಿ ಜಮೀನು ಇತ್ತು. ಆರ್.ಅಶೋಕ್, 2007ರಲ್ಲಿ ಶುದ್ಧಕ್ರಯಕ್ಕೆ ಖರೀದಿ ಮಾಡಿದರು. ರಾಮಸ್ವಾಮಿಯಿಂದ 32 ಕುಂಟೆ ಖರೀದಿ ಮಾಡಿದರು. ಆದ್ರೆ ರಾಮಸ್ವಾಮಿ ಮಾಲೀಕನೆ ಅಲ್ಲ, ಆ ಭೂಮಿ ಬಿಡಿಎ ಸ್ವಾಧೀನದಲ್ಲಿರುತ್ತೆ ಎಂದು ಆರೋಪ ಮಾಡಿದ್ದಾರೆ.
2009ರ ಅಕ್ಟೋಬರ್ 1ಕ್ಕೆ ಡಿನೋಟಿಫೈ ಮಾಡಿಕೊಡಿ ಅಂತಾ ರಾಮಸ್ವಾಮಿಯಿಂದ ಸರ್ಕಾರಕ್ಕೆ ಅರ್ಜಿ ಸಲ್ಲಿಸುತ್ತಾರೆ. ಅಶೋಕ್ ಹಾಗೂ ರಾಮಸ್ವಾಮಿ ಮಾಲೀಕರೇ ಅಲ್ಲ. ಆದ್ರೂ ಅರ್ಜಿ ಸಲ್ಲಿಸ್ತಾರೆ, ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಕೂಡಲೇ ಮಂಡಿಸಿ ಅಂತ ಷರಾ ಬರೀತಾರೆ. ಎರಡೇ ತಿಂಗಳಲ್ಲೇ ಅಂದಿನ ಮುಖ್ಯಮಂತ್ರಿಗಳು ಡಿನೋಟಿಫಿಕೇಷನ್ ಮಾಡಿಕೊಡ್ತಾರೆ. ಆ ನಂತ್ರ ನಿವೃತ್ತ ವಿಂಗ್ ಕಮಾಂಡರ್ ಜಿವಿ ಅತ್ರಿ ಲೋಕಾಯುಕ್ತಕ್ಕೆ ಅರ್ಜಿ ಹಾಕುತ್ತಾರೆ. ವಿಚಾರ ಕೋರ್ಟ್‌ಗೆ ಹೋಗುತ್ತೆ. ಆಗ ಅಶೋಕ್ ವಾಪಸ್ ಕೊಡುವ ತೀರ್ಮಾನ ತಗೊತಾರೆ. 26-08 -2011 ರಂದು ರಿಜಿಸ್ಟರ್ ಗಿಫ್ಟ್ ಮೂಲಕ ಬಿಡಿಎಗೆ ಭೂಮಿ ಹಿಂತಿರುಗಿಸುತ್ತಾರೆ. ಓನರ್‌ಶಿಪ್ ಇಲ್ಲದೇ ಅಶೋಕ್ ಗಿಫ್ಟ್ ಬಿಡಿಎಗೆ ನೀಡಿದ್ದಾರೆ ಎಂದು ಹಳೆಯ ಪ್ರಕರಣವೊಂದನ್ನ ಬಯಲು ಮಾಡಿದರು.
ಆ ನಂತರ ಅತ್ರಿಯವರು ಹೈಕೋರ್ಟ್ ಅರ್ಜಿ ಹಾಕ್ತಾರೆ, ಕ್ರಿಮಿನಲ್ ಕೇಸ್ ಹಾಕಬೇಕು ಅನ್ನೋದು ಬೇಕಾಗಿಲ್ಲ, ಅಂತಾ ಹೈಕೋರ್ಟ್‌ನಿಂದ ತೀರ್ಪು ಬರುತ್ತೆ. ವಾಪಸ್ ಕೊಟ್ಟಿಬಿಟ್ಟರಲ್ಲ ಕೇಸ್ ಬೇಕಾಗಿಲ್ಲ ಅಂತಾ ಜಡ್ಜ್ ಮೆಂಟ್ ಬರುತ್ತೆ. ಈಗ ಸಿಎಂ ಪತ್ನಿ ಸೈಟು ವಾಪಸ್ ಮಾಡಿದಾಗ ಮಾತನಾಡುವವರು ಹಿಂದೆ ಮಾಡಿದ್ದೇನು? ಇದು ಎಷ್ಟರಮಟ್ಟಿಗೆ ನ್ಯಾಯ? ಕಬಳಿಸಿರೋದು, ಕಳ್ಳತನ ಮಾಡಿರೋದು ಅಂತಾ ಹೇಳಿದ್ರಿ, ನಾವು ನಿಮಗೆ ಅವರದ್ದೇ ಭಾಷೆಯಲ್ಲಿ ಹೇಳ್ಬೇಕಾಗುತ್ತೆ ಎಂದು ಸಚಿವ ಪರಮೇಶ್ವರ್ ಬಾಂಬ್ ಸಿಡಿಸಿದರು. ಇದನ್ನೂ ಓದಿ: ‘ಪ್ರೇಮಲು’ ಬ್ಯೂಟಿಗೆ ಜಾಕ್‌ಪಾಟ್- ‘ದಳಪತಿ 69’ ಸಿನಿಮಾದಲ್ಲಿ ಮಮಿತಾ ಬೈಜು
ಬೆಂಗಳೂರು: ಕಾಂಗ್ರೆಸ್ ಪಕ್ಷದ ಮಾಜಿ ಸಚಿವ ಎ ಮಂಜು ಅವರು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಕುಟುಂಬದ ವಿರುದ್ಧ ಭೂ ಹಗರಣ ಆರೋಪ ಮಾಡಿರುವ ಕುರಿತು ಸಿಎಂ ಕುಮಾರಸ್ವಾಮಿ ಅವರು ಏಕೆ ಮಾತನಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಶ್ನೆ ಮಾಡಿದ್ದಾರೆ.
ರಾಜ್ಯಮಟ್ಟದ ಬಿಜೆಪಿ ಪಕ್ಷದ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಮಾಜಿ ಪ್ರಧಾನಿ ದೇವೇಗೌಡ ಹಾಗೂ ಅವರ ಮಕ್ಕಳು ಹಲವು ಹಗರಣಗಳಲ್ಲಿ ಭಾಗಿಯಾಗಿದ್ದಾರೆ. ಈ ಕುರಿತಂತೆ ಇತ್ತೀಚೆಗೆ ಕಾಂಗ್ರೆಸ್ ಮುಖಂಡ ಎ.ಮಂಜು ಅವರು ಹಾಸನದಲ್ಲಿ ರೇವಣ್ಣ ಅವರ ವಿರುದ್ಧ ಭೂ ಹಗರಣದ ಆರೋಪ ಮಾಡಿದ್ದಾರೆ. ಆದರೆ ಈ ಕುರಿತು ಸಿಎಂ ಕುಮಾರಸ್ವಾಮಿ ಅವರು ಇದುವರೆಗೂ ಮಾತನಾಡಿಲ್ಲ. ಆದರೆ ರೇವಣ್ಣ ಅವರು ಪ್ರಕರಣವನ್ನು ತೇಲಿಸುತ್ತಿದ್ದಾರೆ. ರಾಜ್ಯದ ಬೊಕ್ಕಸವನ್ನು ದೇವೇಗೌಡ ಕುಟುಂಬ ಲೂಟಿ ಮಾಡುತ್ತಿದೆ. ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳದಿದ್ದರೆ ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಮಿಷನ್ ಏಜೆಂಟ್ ಸರ್ಕಾರ:
ಇದೇ ವೇಳೆ ಸಮ್ಮಿಶ್ರ ಸರ್ಕಾರ ವಿರುದ್ಧ ಕಿಡಿಕಾರಿದ ಬಿಎಸ್‍ವೈ, ಕಾಂಗ್ರೆಸ್, ಜೆಡಿಎಸ್ ಪಕ್ಷದಲ್ಲಿ ಒಡಕು ಉಂಟಾಗಿದೆ. 37 ಸ್ಥಾನ ಇರುವ ಜೆಡಿಎಸ್, 79 ಸ್ಥಾನ ಇರುವ ಕಾಂಗ್ರೆಸ್ ಪಕ್ಷಗಳು ಅಧಿಕಾರ ನಡೆಸುತ್ತಿವೆ. 104 ಸ್ಥಾನದಲ್ಲಿರುವ ಬಿಜೆಪಿ ವಿರೋಧ ಪಕ್ಷದ ಸ್ಥಾನದಲ್ಲಿ ಕೆಲಸ ಮಾಡುತ್ತಿದೆ. ಆದರೆ ಜನ ಹಿತ ಹಾಗೂ ರಾಜ್ಯದ ಅಭಿವೃದ್ಧಿ ಮರೆತು ರಾಜ್ಯ ಸಮ್ಮಿಶ್ರ ಸರ್ಕಾರ ನಡೆಯುತ್ತಿದೆ. ಹಣಕ್ಕಾಗಿ ಕಮಿಷನ್ ಏಜೆಂಟ್ ರೀತಿ ಸರ್ಕಾರ ವರ್ತಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್ ಒಳಜಗಳದಿಂದ ಸರ್ಕಾರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ಈ ಸರ್ಕಾರದಲ್ಲಿ ಕಮೀಷನ್ ಕೊಡದಿದ್ದರೆ ಯಾವುದೇ ಬಿಲ್ ಪಾಸ್ ಆಗುವುದಿಲ್ಲ ಎಂದು ಹೇಳಿದರು.
ಎದುರಾಳಿ ಇಲ್ಲದೇ ಚೆಸ್: ಕೊಡಗಿನ ಅತಿವೃಷ್ಠಿ ಹಿನ್ನೆಲೆ ವಿಶೇಷ ಪ್ಯಾಕೇಜ್ ನೀಡುವಂತೆ ಕೇಂದ್ರ ಸಚಿವ ರಾಜ್ ನಾಥ್ ಸಿಂಗ್ ಅವರು ರಾಜ್ಯಕ್ಕೆ ಬಂದಾಗ ಅವರ ಬಳಿ ಮನವಿ ಮಾಡಿಕೊಂಡಿದ್ದೇನೆ. ಅಲ್ಲದೇ ಕೇಂದ್ರದ ನಿಯೋಗ ಬರಬೇಕು ಎಂದು ಮನವಿ ಮಾಡಲಾಗಿದೆ. ಕರ್ನಾಟಕದಲ್ಲಿ 13 ಜಿಲ್ಲೆಗಳು ಬರ ಪೀಡಿತ ಎಂದು ಘೋಷಣೆಯಾಗಿದೆ. ರೈತರು ತಾವು ಬೆಳೆದ ಬೆಳೆಗಳು ಕೈ ಸೇರುವಾಗ ಮಳೆ ಕೈ ಕೊಟ್ಟಿದೆ. ಆದರೆ ರೈತರಿಗೆ 8% ರಿಂದ 10% ಕಮಿಷನ್ ಇಲ್ಲದೆ ಯಾವುದೇ ಕೆಲಸ ಆಗಲ್ಲ. ಆದರೆ ಸಚಿವ ಡಿಕೆ ಶಿವಕುಮಾರ್ ಅವರು ಈ ವೇಳೆ ಚೆಸ್ ಗೇಮ್ ಬಗ್ಗೆ ಮಾತನಾಡುತ್ತಿದ್ದಾರೆ. ಹೇಗೆ ಪಾನ್ ಮೂವ್ ಮಾಡಬೇಕು ಎಂದು ಗೊತ್ತಿದೆ ಹೇಳಿದ್ದಾರೆ. ಆದರೆ ಎದುರಾಳಿಗಳೇ ಇಲ್ಲದೆ ಹೇಗೆ ಚೆಸ್ ನಲ್ಲಿ ಪಾನ್ ಮೂವ್ ಮಾಡುತ್ತಿರಾ? ಇಂತಹ ಬೇಜವಾಬ್ದಾರಿ ಹೇಳಿಕೆ ನೀಡುವುದು ಬಿಡಿ ಎಂದು ತಿಳಿಸಿದರು.
ಬಿಜೆಪಿ ಶಾಸಕರಿಗೆ ಆಮಿಷ: ಕಲಬುರಗಿ ಶಾಸಕ ಸುಭಾಷ್ ಗುತ್ತೇದಾರ್ ಅವರಿಗೆ ಮಂತ್ರಿ ಸ್ಥಾನ ನೀಡುವ ಆಮಿಷ ಒಡ್ಡಲಾಗಿದೆ. ಸ್ವತಃ ಕುಮಾರಸ್ವಾಮಿ ಅವರು ನೇರ ಬಿಜೆಪಿ ಶಾಸಕರಿಗೆ ಆಮಿಷ ಒಡ್ಡಿದ್ದಾರೆ. ಅಲ್ಲದೇ ಇನ್ನು ಅನೇಕ ಬಿಜೆಪಿ ಶಾಸಕರನ್ನು ಸಂಪರ್ಕ ಮಾಡುವ ಯತ್ನ ಮಾಡಿದ್ದಾರೆ. ಇದು ರಾಜ್ಯದ ಮುಖ್ಯಮಂತ್ರಿಯಾಗಿ ಎಚ್‍ಡಿಕೆ ಹಾಗೂ ಸರ್ಕಾರ ಎಷ್ಟು ಕೆಳಮಟ್ಟಕ್ಕೆ ಇಳಿದಿದೆ ಎನ್ನುವುದನ್ನು ಸಾಬೀತು ಪಡಿಸುತ್ತದೆ ಎಂದು ಆರೋಪಿಸಿದರು. ಅರಮನೆ ಮೈದಾನದ ಸಿತಾರಾ ಹಾಲ್ ನಲ್ಲಿ ವಿಶೇಷ ಸಭೆಯಲ್ಲಿ ರಾಜ್ಯದ ಬಿಜೆಪಿ ಸಂಸದರು ಹಾಗೂ ಸಚಿವರನ್ನು ಒಳಗೊಂಡಂತೆ ಹಲವು ಮುಖಂಡರು ಭಾಗವಹಿಸಿದ್ದರು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿಯ ರಾಜ್ಯಮಟ್ಟದ ವಿಶೇಷ ಸಭೆಯು ಪಕ್ಷದ ಶಾಸಕರು, ಸಂಸದರು ಹಾಗೂ ಮುಖಂಡರ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ನೆರವೇರಿತು. ರಾಜ್ಯಾದ್ಯಂತ ಪಕ್ಷ ಸಂಘಟನೆ, ಲೋಕಸಭಾ ಚುನಾವಣೆಗೆ ಪೂರ್ವಸಿದ್ಧತೆ ಹಾಗೂ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು. pic.twitter.com/dZFpEMKoNw
ಬೆಂಗಳೂರು: ಬೃಹತ್ ಕಂಪೆನಿಯಿಂದ ನಡೆದಿರುವ ಭೂ ಹಗರಣವೊಂದನ್ನು ತನಿಖೆ ನಡೆಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಅವರು ಆಗ್ರಹಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲದಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಬಿಡಿ) ಬಿಪಿಎಲ್ ಕಂಪನಿ ಕೈಗಾರಿಕೆ ಸ್ಥಾಪನೆ ಮಾಡುವುದಾಗಿ ಭೂಮಿಯನ್ನು ಪಡೆದಿತ್ತು. ಈ ವೇಳೆ ರೈತರಿಗೆ ಪ್ರತಿ ಎಕರೆ ಭೂಮಿಗೆ ಕೇವಲ 1.10 ಲಕ್ಷ ರೂ. ನೀಡಲಾಗಿತ್ತು. ಆದರೆ ಈಗ ಅದೇ ಭೂಮಿಯನ್ನು ಪ್ರತಿ ಎಕರೆಗೆ 1.30 ಕೋಟಿ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಈ ಕುರಿತು ತನಿಖೆಗೆ ಆದೇಶ ನೀಡುವಿರಾ ಎಂದು ಸಿಎಂಗೆ ಸವಾಲು ಹಾಕಿದರು.
ಖರೀದಿಯಾದ ಜಮೀನು ಎಷ್ಟು?
ಕೆಐಎಡಿಬಿ ರೈತರಿಂದ 276 ಎಕರೆ ಭೂಮಿಯನ್ನು ಖರೀದಿ ಮಾಡಿತ್ತು. ಈ ಪೈಕಿ 175 ಎಕರೆ ಭೂಮಿಯನ್ನು ಬಿಪಿಎಲ್ ಕಂಪೆನಿಗೆ ಕೈಗಾರಿಕೆ ಸ್ಥಾಪನೆ ಉದ್ದೇಶದಿಂದ ಮಾರಾಟ ಮಾಡಲಾಗಿತ್ತು. ಆದರೆ ಬಿಪಿಎಲ್ ಕಂಪನಿಯು ಇತರೆ ಕಂಪೆನಿಗಳಿಗೆ 149 ಎಕರೆ ಭೂಮಿಯನ್ನು ಕೋಟ್ಯಂತರ ಹಣ ಪಡೆದು ಅಕ್ರಮವಾಗಿ ಮಾರಾಟ ಮಾಡಿದೆ. ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರು ಕೈಗಾರಿಕೆ ಸಚಿವರಾಗಿದ್ದಾಗ ಈ ಹಗರಣ ನಡೆದಿದೆ ಎಂದು ಆರೋಪಿಸಿದರು.
ಸಿಎಂ ಕುಮಾರಸ್ವಾಮಿ ಅವರು ವಿರೋಧ ಪಕ್ಷದ ನಾಯಕರಾಗಿದ್ದಾಗ ಈ ಕುರಿತು ಸದನದಲ್ಲಿ ಪ್ರಸ್ತಾಪಿಸಿದ್ದರು. ಸದ್ಯ ಅವರೇ ಮುಖ್ಯಮಂತ್ರಿ ಆಗಿದ್ದು, ಹಗರಣದ ಕುರಿತು ತನಿಖೆ ನಡೆಸಿ ರೈತರಿಗೆ ನ್ಯಾಯ ಒದಗಿಸಬೇಕು ಎಂದ ಅವರು, ಬಿಪಿಎಲ್ ಕಂಪನಿಗೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮಾಲೀಕರಾಗಿರುವ ಅನುಮಾನವನ್ನು ವ್ಯಕ್ತ ಪಡಿಸಿದರು.