Tag: Landon

  • ಸಲಿಂಗ ವಿವಾಹವಾದ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ಆಟಗಾರ್ತಿಯರು

    ಸಲಿಂಗ ವಿವಾಹವಾದ ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ಆಟಗಾರ್ತಿಯರು

    ಲಂಡನ್: 2017ರ ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಆಟಗಾರ್ತಿಯರಾದ ಕ್ಯಾಥರೀನ್ ಬ್ರಂಟ್ ಮತ್ತು ನ್ಯಾಟ್ ಸೀವರ್ ಸಲಿಂಗ ವಿವಾಹ ಮಾಡಿಕೊಂಡಿದ್ದಾರೆ.

    ವಿವಾಹವಾದ ಕ್ಯಾಥರೀನ್ ಬ್ರಂಟ್ ಮತ್ತು ನ್ಯಾಟ್ ಸೀವರ್ ಅವರಿಗೆ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯು ನಮ್ಮ ಆತ್ಮೀಯ ಅಭಿನಂದನೆಗಳು ಎಂದು ಶುಭ ಹಾರೈಸಿ ಟ್ವೀಟ್ ಮಾಡಿದೆ. ಇದನ್ನೂ ಓದಿ: ಆಡಿದ್ದು ಡೆಲ್ಲಿ ಪರ – ಫೈನಲ್‍ನಲ್ಲಿ ಆ ಒಂದು ಕಾರಣಕ್ಕಾಗಿ ರಾಜಸ್ಥಾನ ತಂಡಕ್ಕೆ ಚಿಯರ್ ಅಪ್ ಮಾಡಿದ್ರು ಚೇತನ್ ಸಕಾರಿಯಾ

    ತಂಡದ ನಾಯಕಿ ಹೀದರ್ ನೈಟ್, ಡ್ಯಾನಿ ವ್ಯಾಟ್, ಇಸಾ ಗುಹಾ, ಜೆನ್ನಿ ಗನ್ ಸೇರಿದಂತೆ ಇಂಗ್ಲೆಂಡ್ ತಂಡದ ಪ್ರಸ್ತುತ ಮತ್ತು ಹಿಂದಿನ ಆಟಗಾರರೆಲ್ಲರೂ ಸಮಾರಂಭದಲ್ಲಿ ಭಾಗವಹಿಸಿದ್ದರು. ಬ್ರಂಟ್ ಮತ್ತು ಸೀವರ್ 2017ರ ವಿಶ್ವಕಪ್ ವಿಜೇತ ತಂಡದ ಆಟಗಾರ್ತಿಯಾರಾಗಿದ್ದಾರೆ. ಇವರಿಬ್ಬರು 2022ರ ಮಹಿಳಾ ವಿಶ್ವಕಪ್‍ನಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಇಂಗ್ಲೆಂಡ್ ರನ್ನರ್-ಅಪ್ ಆಗಿ ಹೊರಹೊಮ್ಮಿತ್ತು. ಇದನ್ನೂ ಓದಿ: ಗುಜರಾತ್‌ಗೆ ಐಪಿಎಲ್‌ ಟ್ರೋಫಿ – ಯಾವ ಆಟಗಾರರಿಗೆ ಏನು ಪ್ರಶಸ್ತಿ?

    corona

    ನ್ಯೂಜಿಲೆಂಡ್‍ನಲ್ಲಿ ಇತ್ತೀಚೆಗೆ ನಡೆದ ಏಕದಿನ ಗ್ಲೋಬಲ್ ಇವೆಂಟ್‍ನಲ್ಲಿ, ಸೀವರ್ 121 ಎಸೆತಗಳಲ್ಲಿ ಅಜೇಯ 148 ರನ್ ಗಳಿಸಿದ್ದರು. ಆದರೆ ಅಂತಿಮವಾಗಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದರು. ಅಕ್ಟೋಬರ್ 2019 ರಲ್ಲಿ ಬ್ರಂಟ್ ಜೊತೆಗಿನ ನಿಶ್ಚಿತಾರ್ಥವನ್ನು ಸೀವರ್ ಘೋಷಿಸಿದ್ದರು. ಸಲಿಂಗ ದಂಪತಿ ಸೆಪ್ಟೆಂಬರ್ 2020ರಲ್ಲಿ ಮದುವೆಯಾಗಬೇಕಿತ್ತು. ಆದರೆ ಕೋವಿಡ್-19 ಸಾಂಕ್ರಾಮಿಕದಿಂದಾಗಿ ಅವರ ಮದುವೆಯನ್ನು ಮುಂದೂಡಲಾಗಿತ್ತು.

  • ತೈಲ ಬಿಕ್ಕಟ್ಟು – ಪೆಟ್ರೋಲ್ ಪಡೆಯಲು ಮುಗಿಬಿದ್ದ ಇಂಗ್ಲೆಂಡ್ ಜನತೆ

    ತೈಲ ಬಿಕ್ಕಟ್ಟು – ಪೆಟ್ರೋಲ್ ಪಡೆಯಲು ಮುಗಿಬಿದ್ದ ಇಂಗ್ಲೆಂಡ್ ಜನತೆ

    ಲಂಡನ್: ಬ್ರಿಟನ್‍ನಲ್ಲಿ ತೈಲ ಬಿಕ್ಕಟ್ಟು ಉಂಟಾಗಿರುವ ಪರಿಣಾಮ ಪೆಟ್ರೋಲ್‍ಗಾಗಿ ಜನರು ಸಾಲುಗಟ್ಟಿ ನಿಲ್ಲುವ ಪರಿಸ್ಥಿತಿ ಎದುರಾಗಿದೆ.

    ಅಗತ್ಯಕ್ಕೆ ತಕ್ಕ ತೈಲ ಸಂಗ್ರಹವಿದ್ದರೂ ಜನರು ಅತಂಕಕ್ಕೆ ಒಳಗಾಗಿ, ಪೆಟ್ರೋಲ್ ಬಂಕ್ ಎದರು ಕಿಲೋಮೀಟರ್ ವರೆಗೂ ನಿಂತು ತೈಲ ಖರೀದಿಗೆ ಮುಗಿಬಿದ್ದಿದ್ದಾರೆ. ಇದಕ್ಕೆ ಕಾರಣ ಪೆಟ್ರೋಲ್ ಡೀಸೆಲ್ ಕೊರೆತೆ ಅಲ್ಲವೇ ಅಲ್ಲ. ಬದಲಾಗಿ ತೈಲ ತುಂಬಿದ ಟ್ರಕ್‍ಗಳನ್ನು ಓಡಿಸಲು ಚಾಲಕರೇ ಸಿಗುತ್ತಿಲ್ಲ ಎಂದು ವರದಿಯಾದ ಹಿನ್ನೆಲೆ ಬ್ರಿಟನ್ ಜನರು ಅತಂಕಕ್ಕೆ ಒಳಗಾಗಿದ್ದಾರೆ. ಇದನ್ನೂ ಓದಿ: 10 ತಿಂಗಳ ಶಿಕ್ಷೆ ತಪ್ಪಿಸಲು 9 ವರ್ಷದಿಂದ ತಲೆ ಮರೆಸಿಕೊಂಡ ಆರೋಪಿ ಅಂದರ್

    ಬ್ರಿಟನ್‍ನಲ್ಲಿ ಚಾಲಕರ ಕೊರತೆ ಎದರುರಾಗಿದ್ದು, ಟ್ರಕ್‍ಗಳನ್ನು ಓಡಿಸಲು ಚಾಲಕರು ಸಿಗುತ್ತಿಲ್ಲ. ಈ ಹಿನ್ನೆಲೆ ದೇಶದ ಶೇ.90 ರಷ್ಟು ಪೆಟ್ರೋಲ್ ಪಂಪ್‍ಗಳಲ್ಲಿ ಡೀಸೆಲ್, ಪೆಟ್ರೋಲ್ ಸಿಗುತ್ತಿಲ್ಲ. ಇದರಿಂದಾಗಿ ಜನರು ಪೆಟ್ರೋಲ್ ಸಿಗುವ ಕಡೆಯಲ್ಲಿ ಕಿಲೋಮೀಟರ್ ವರೆಗೂ ನಿಂತು ತೈಲ ಖರೀದಿಸುತ್ತಿದ್ದಾರೆ.

    ಬ್ರಿಟನ್, ಐರೋಪ್ಯ ಒಕ್ಕೂಟದಿಂದ ಹೊರ ಬಂದ ಬಳಿಕ 13 ಲಕ್ಷಕ್ಕೂ ಅಧಿಕ ವಿದೇಶಿ ಜನರು ದೇಶ ತೊರೆದಿದ್ದಾರೆ. ಇದರಿಂದ ಬ್ರಿಟನ್ ದೇಶದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಚಾಲಕರು ಕೆಲಸ ಬಿಟ್ಟಿದ್ದಾರೆ. ಅಲ್ಲದೆ ಕೊರೊನಾ ಕಾರಣದಿಂದ ಸಾಕಷ್ಟು ಮಂದಿ ತಮ್ಮ ತಮ್ಮ ದೇಶಕ್ಕೆ ಮರಳಿದ್ದಾರೆ. ಹೀಗಾಗಿ ಬ್ರಿಟನ್‍ನಲ್ಲಿ ಹೊಸ ರೀತಿಯ ತೈಲ ಬಿಕ್ಕಟ್ಟು ಉಂಟಾಗಿದೆ. ಇದನ್ನೂ ಓದಿ: ಅವಧಿಗೂ ಮುನ್ನವೇ ಪೂರ್ಣಗೊಳ್ಳಲಿದೆ ಏಷ್ಯಾದ ಉದ್ದ ಸುರಂಗ ರಸ್ತೆ

    ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗುತ್ತಿದಂತೆ ಎಚ್ಚೆತ್ತಾ ಸರ್ಕಾರ, ಸದ್ಯಕ್ಕೆ ಯೋಧರನ್ನು ಚಾಲಕರಾಗಿ ಬಳಸಿಕೊಳ್ಳಲು ಮುಂದಾಗಿದೆ. ಅಲ್ಲದೆ 5000 ಸಾವಿರ ಜನ ವಿದೇಶಿ ಚಾಲಕರಿಗೆ ತುರ್ತು ವೀಸಾ ನೀಡಿ ದೇಶಕ್ಕೆ ಕರೆಸಿಕೊಳ್ಳಲು ನಿರ್ಧಾರ ಮಾಡಿದೆ. ಕಾಂಪಿಟೇಷನ್ ಆಕ್ಟ್ 1998 ತೈಲೊದ್ಯಮಕ್ಕೆ ವಿನಾಯ್ತಿಯನ್ನು ಸಹ ನೀಡಲು ಚಿಂತಿಸಿ, ಘನ ವಾಹನ ಪರವಾನಗಿ ಇರುವವರನ್ನು ಕೆಲಸಕ್ಕೆ ಬರಲು ಮನವಿ ಮಾಡಿದೆ.

  • ನಾಯಕನಾಗಿ ಮತ್ತೊಂದು ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ

    ನಾಯಕನಾಗಿ ಮತ್ತೊಂದು ವಿಶ್ವದಾಖಲೆ ಬರೆದ ವಿರಾಟ್ ಕೊಹ್ಲಿ

    ಲಂಡನ್: ಭಾರತದ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ನಾಯಕನಾಗಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

    ಮಂಗಳವಾರ ಲೀಡ್ಸ್‍ನಲ್ಲಿ ನಡೆದ ವಿರಾಟ್ ಕೊಹ್ಲಿಯ ಕಡಿಮೆ ಪಂದ್ಯಗಳಲ್ಲಿ 3,000 ರನ್ ಗಳ ಗಡಿತಲುಪಿದ ವಿಶ್ವದ ಮೊದಲ ನಾಯಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 16 ರನ್ ಗಳಿಸಿದ್ದಾಗ ಕೊಹ್ಲಿ ಈ ಸಾಧನೆ ನಿರ್ಮಿಸಿದರು.

    ವಿರಾಟ್ ಕೊಹ್ಲಿಯವರು ಒಟ್ಟಾರೆ 49 ಇನ್ನಿಂಗ್ಸ್ ನಲ್ಲಿ 3,000 ಗಡಿ ತಲುಪುವ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದ್ದಾರೆ. ಈ ಮೊದಲು ಭಾರತದ ಮಾಜಿ ಕ್ಯಾಪ್ಟನ್ ಗಳಾದ ಮಹೇಂದ್ರ ಸಿಂಗ್ ಧೋನಿ 70 ಇನ್ನಿಂಗ್ಸ್ ಹಾಗೂ ಸೌರವ್ ಗಂಗೂಲಿ 74 ಇನ್ನಿಂಗ್ಸ್ ಆಡಿ ಈ ಸಾಧನೆಯನ್ನು ಮಾಡಿದ್ದರು. ಈ ಮೊದಲು ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ರವರು 60 ಇನ್ನಿಂಗ್ಸ್ ಮೂಲಕ ಈ ಸಾಧನೆಯನ್ನು ಮಾಡಿದ್ದರು. ದಕ್ಷಿಣ ಆಫ್ರಿಕಾದ ಗ್ರೇಮ್ ಸ್ಮಿತ್ ಮತ್ತು ಪಾಕಿಸ್ತಾನ ಮಿಸ್ಬಾ ಉಲ್ ಹಕ್ 83 ಇನ್ನಿಂಗ್ಸ್ ಗಳಲ್ಲಿ ಈ ಸಾಧನೆ ಮಾಡಿದ್ದರೆ ಶ್ರೀಲಂಕಾದ ಸನತ್ ಜಯಸೂರ್ಯ ಮತ್ತು ಆಸ್ಟ್ರೇಲಿಯಾದ ರಿಕ್ಕಿ ಪಾಟಿಂಗ್ 84 ಇನ್ನಿಂಗ್ಸ್ ನಲ್ಲಿ ಈ ಸಾಧನೆ ನಿರ್ಮಿಸಿದ್ದರು.

    ಮಂಗಳವಾರದ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ 8 ವಿಕೆಟ್ ಗಳಿಂದ ಗೆಲ್ಲುವ ಮೂಲಕ ಪಂದ್ಯವನ್ನು ಜಯಿಸಿದೆ. ಭಾರತ ನಿಗದಿತ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 256ರನ್ ಗಳಿಸಿತ್ತು. ಗುರಿಯನ್ನು ಬೆನ್ನತ್ತಿದ ಇಂಗ್ಲೆಂಡ್ ತಂಡ ಕೇವಲ 44.3 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 260 ರನ್ ಭಾರಿಸಿ ಪಂದ್ಯವನ್ನು ಗೆದ್ದುಕೊಂಡಿತು.