Tag: lavanya suicide case

  • ಲಾವಣ್ಯ ಆತ್ಮಹತ್ಯೆ ಕೇಸ್ ತನಿಖೆ ಸಿಬಿಐ ಹೆಗಲಿಗೆ: ಹೈಕೋರ್ಟ್ ಆದೇಶ

    ಲಾವಣ್ಯ ಆತ್ಮಹತ್ಯೆ ಕೇಸ್ ತನಿಖೆ ಸಿಬಿಐ ಹೆಗಲಿಗೆ: ಹೈಕೋರ್ಟ್ ಆದೇಶ

    ಚೆನ್ನೈ: ದ್ವಿತೀಯ ಪಿಯುಸಿ ಓದುತ್ತಿದ್ದ ತಾಂಜವೂರಿನ ವಿದ್ಯಾರ್ಥಿನಿ ಲಾವಣ್ಯ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಿ ಮದ್ರಾಸ್ ಹೈಕೋರ್ಟ್‍ನ ಮಧುರೈ ಪೀಠ ಮಹತ್ವದ ಆದೇಶ ಪ್ರಕಟಿಸಿದೆ.

    ಲಾವಣ್ಯ (17) ತಂಜಾವೂರು ಜಿಲ್ಲೆಯ ಕ್ರಿಶ್ಚಿಯನ್ ಸಂಸ್ಥೆಯಾದ ಇಮ್ಯಾಕ್ಯುಲೇಟ್ ಹಾರ್ಟ್ ಆಫ್ ಮೇರಿ ಸಂಸ್ಥೆಯಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಅವಳಿಗೆ ಹಾಸ್ಟೆಲ್ ವಾರ್ಡನ್ ಸಗಯಾ ಮೇರಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಹಿಂಸೆ ಹಾಗೂ ಶೋಷಣೆಗೆ ನೀಡುತ್ತಿದ್ದಾರೆ ಎಂದು ವೀಡಿಯೋವೊಂದರಲ್ಲಿ ಹೇಳಿದ್ದಳು. ಈ ವೀಡಿಯೋ ಭಾರೀ ವೈರಲ್ ಆಗಿತ್ತು.

    ಈ ಹಿನ್ನೆಲೆಯಲ್ಲಿ ಲಾವಣ್ಯ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕುಟುಂಬಸ್ಥರು ಒತ್ತಾಯಿಸಿದ್ದರು. ತಮಿಳುನಾಡು ಪೊಲೀಸರ ತನಿಖೆಯ ಮೇಲೆ ನಮಗೆ ನಂಬಿಕೆ ಇಲ್ಲ ಮತ್ತು ಈ ಬಗ್ಗೆ ಸಿಬಿಐ ತನಿಖೆಯಾಗಬೇಕೆಂದು ಲಾವಣ್ಯ ಅವರ ಪೋಷಕರು ಹೇಳಿದ್ದರು. ಪೊಲೀಸರು ಧಾರ್ಮಿಕ ಮತಾಂತರದ ಭಾಗವನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಕುಟುಂಬ ಆರೋಪಿಸಿತ್ತು. ಇದನ್ನೂ ಓದಿ: ಹಾಸ್ಟೆಲ್ ವಾರ್ಡನ್‍ನಿಂದ ಮತಾಂತರ ಕಿರುಕುಳ – ವಿದ್ಯಾರ್ಥಿನಿ ಆತ್ಮಹತ್ಯೆ

    ಜೊತೆಗೆ ಲಾವಣ್ಯ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ನಿರಾಕರಿಸಿದ್ದರಿಂದ ಸದಾ ಕಿರುಕುಳ ನೀಡುತ್ತಿದ್ದರು. ಇದನ್ನು ತಡೆಯಲಾರದೇ ಲಾವಣ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಮಿಳುನಾಡು ಬಿಜೆಪಿ ಆರೋಪಿಸಿತ್ತು. ಈ ವಿಚಾರ ತಮಿಳುನಾಡು ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಇದನ್ನೂ ಓದಿ: ಕುಡಿತ ಬಿಟ್ಟರೆ ಮಾತ್ರ ಮನೆಗೆ ಬರುತ್ತೇನೆ ಎಂದಿದ್ದಕ್ಕೆ ಪತ್ನಿಯನ್ನೇ ಕೊಲೆಗೈದ