ಇತ್ತೀಚೆಗಷ್ಟೇ ಮೆಗಾಸ್ಟಾರ್ ಚಿರಂಜೀವಿ ಸಹೋದರ ನಾಗ್‌ಬಾಬು ಪುತ್ರ ನಟ ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ದಂಪತಿಗೆ ಗಂಡು ಮಗು ಜನಿಸಿತ್ತು. ಇದೀಗ ಮಗುವಿಗೆ ವಾಯು ಎಂದು ಹೆಸರಿಡಲಾಗಿದೆ. ಈ ವಿಚಾರವನ್ನು ಅಧಿಕೃತವಾಗಿ ಇನ್ಸ್ಟಾಗ್ರಾಂ ಮೂಲಕ ವರುಣ್ ತೇಜ್ ಘೋಷಣೆ ಮಾಡಿದ್ದಾರೆ. ವಾಯುತೇಜ್ ಕೋನಿಡೇಲಾ ಎಂದು ಮಗುವಿಗೆ ನಾಮಕರಣ ಮಾಡಲಾಗಿದೆ. ಭವಿಷ್ಯದ ಸ್ಟಾರ್‌ಗೆ ಕೋನಿಡೇಲ ಕುಟುಂಬದ ಅಭಿಮಾನಿಗಳು ಶುಭಾಶಯ ತಿಳಿಸುತ್ತಿದ್ದಾರೆ.
ಚಿರಂಜೀವಿ ಕುಟುಂಬದಲ್ಲಿ ಹುಟ್ಟುವ ಗಂಡು ಮಕ್ಕಳೆಲ್ಲರೂ ಸ್ಟಾರ್‌ಗಳೇ ಎಂಬ ಮಾತಿದೆ. ಅದರಂತೆ ಇಡೀ ಕುಟುಂಬವೇ ಸೂಪರ್ ಸ್ಟಾರ್‌ಗಳನ್ನ ಹೊಂದಿದೆ. ಹೀಗಾಗಿ ಮುಂದಿನ ಜನರೇಶನ್‌ಗೆ ಹೀರೋ ಆಗಿ ಮುಂದುವರೆಯಲು ವಾಯು ಎಂಟ್ರಿಯಾಗಿದೆ ಎಂದು ಟ್ರೋಲ್ ಮಾಡುತ್ತಿದ್ದಾರೆ ನೆಟ್ಟಿಗರು.
ಇದೀಗ ವರುಣ್ ತೇಜ್ ಹಾಗೂ ಲಾವಣ್ಯ ತ್ರಿಪಾಠಿ ದಂಪತಿ ತಮ್ಮ ಪುಟಾಣಿ ಪುತ್ರನ ಮೊದಲ ಫೋಟೋವನ್ನೂ ಹಂಚಿಕೊಂಡು ಹೆಸರನ್ನೂ ಪರಿಚಯಿಸಿದ್ದಾರೆ. ನಾಮಕರಣದ ಕೆಲ ಫೋಟೋಗಳನ್ನ ಹಂಚಿಕೊಂಡಿದ್ದಾರೆ.
ಟಾಲಿವುಡ್ ಸಿನಿಮಾ ಇಂಡಸ್ಟ್ರಿಗೆ ಮೆಗಾಸ್ಟಾರ್ ಕುಟುಂಬ ಡಜನ್‌ಗೂ ಹೆಚ್ಚು ಕಲಾವಿದರನ್ನ ಕೊಟ್ಟಿದೆ. ಹೀಗಾಗಿ, ಈ ಕುಟುಂಬದಲ್ಲಿ ಜನಿಸುವ ಪ್ರತಿ ಮಗವೂ ಭವಿಷ್ಯದ ಸ್ಟಾರ್ ಎಂದೇ ಊಹಿಸಲಾಗುತ್ತೆ. ಇದೀಗ ಕುಟುಂಬದಲ್ಲಿ ಸಂತಸ ಮನೆ ಮಾಡಿದ್ದು, ಮೆಗಸ್ಟಾರ್ ಚಿರಂಜೀವಿ (Chiranjeevi) ಮತ್ತೆ ತಾತ ಆಗಿದ್ದಾರೆ. ಚಿರಂಜೀವಿ ಸಹೋದರನ ಪುತ್ರನಿಗೆ ಗಂಡು ಮಗು ಜನಿಸಿದೆ. ಈ ಖುಷಿಯ ಸುದ್ದಿಯನ್ನು ಚಿರಂಜೀವಿ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡು ತಮಗಾದ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸುದ್ದಿಯನ್ನು ಮೊದಲು ಇನ್‌ಸ್ಟಾಗ್ರಾಮ್‌ನಲ್ಲಿ ವರುಣ್ ತೇಜ್ ಸಂತಸ ಹಂಚಿಕೊಡಿದ್ದರು. ಇದೀಗ ಕುಟುಂಬಕ್ಕೆ ಆಗಮಿಸಿರುವ ಹೊಸ ಪುಟ್ಟ ಸದಸ್ಯನ ಕುರಿತು ಮೆಗಾಸ್ಟಾರ್ ಮನಬಿಚ್ಚಿ ಮಾತನಾಡಿದ್ದಾರೆ. ‘ನಮ್ಮ ಜಗತ್ತಿಗೆ ಆಗಮಿಸಿರುವ ಪುಟಾಣಿಗೆ ಸ್ವಾಗತ, ಕೋನಿಡೇಲ ಕುಟುಂಬದ ಹೊಸ ಸದಸ್ಯ ನಿನ್ನ ಮೇಲೆ ನಮ್ಮ ಪ್ರೀತಿ ಆಶೀರ್ವಾದ ಸದಾ ಇರುತ್ತೆ’ ಎಂದು ಹೇಳುವ ಮೂಲಕ ಮಗುವನ್ನು ಎತ್ತಿಕೊಂಡಿರುವ ಫೋಟೋ ಪೋಸ್ಟ್ ಮಾಡಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಕುಟುಂಬದಲ್ಲಿ ಮತ್ತೆ ಸಡಗರ ಮನೆ ಮಾಡಿದೆ. ಮೆಗಾ ಕುಟುಂಬದ ಮನೆ ಮಗ ವರುಣ್ ತೇಜ್ ತಂದೆಯಾಗುತ್ತಿರುವ ಖುಷಿಯಲ್ಲಿದ್ದಾರೆ. ಈ ಸುದ್ದಿಯನ್ನು ವರುಣ್ ತೇಜ್ (Varun Tej) ದಂಪತಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ರಮೇಶ್ ಅರವಿಂದ್ ನಟನೆಯ ‘ದೈಜಿ’ ಚಿತ್ರದಲ್ಲಿ ದಿಗಂತ್
ವರುಣ್ ತೇಜ್ ಮತ್ತು ಲಾವಣ್ಯ ತ್ರಿಪಾಠಿ (Lavanya Tripathi) ಪುಟ್ಟ ಮಗುವಿನ ಶೂ ಹಿಡಿದಿರುವ ಫೋಟೋ ಹಂಚಿಕೊಂಡು ಪೋಷಕರಾಗುತ್ತಿರುವ ಗುಡ್ ನ್ಯೂಸ್ ಹಂಚಿಕೊಂಡಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ‘ಜೀವನದ ಅತೀ ಮುಖ್ಯವಾದ ರೋಲ್ ಶೀಘ್ರದಲ್ಲಿಯೇ ಬರಲಿದೆ’ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ.
2016ರಲ್ಲಿ ತೆರೆಕಂಡ ‘ಮಿಸ್ಟರ್’ ಚಿತ್ರದಲ್ಲಿ ವರುಣ್ ಮತ್ತು ಲಾವಣ್ಯ ಜೊತೆಯಾಗಿ ನಟಿಸಿದ್ದರು. ಅಲ್ಲಿಂದ ಶುರುವಾದ ಸ್ನೇಹ ಪ್ರೀತಿಗೆ ತಿರುಗಿತ್ತು. ಬಳಿಕ ಗುರುಹಿರಿಯರ ಸಮ್ಮತಿ ಪಡೆದು 2023ರಲ್ಲಿ ವರುಣ್ ತೇಜ್ ಮತ್ತು ಲಾವಣ್ಯ ಇಟಲಿಯಲ್ಲಿ ಅದ್ಧೂರಿಯಾಗಿ ಮದುವೆಯಾದರು.
ಮೆಗಾಸ್ಟಾರ್ ಚಿರಂಜೀವಿ (Megastar Chiranjeevi) ಮನೆ ಮಗ ವರುಣ್ ತೇಜ್- ಲಾವಣ್ಯ ತ್ರಿಪಾಠಿ (Lavanya Tripathi) ಜೋಡಿ ನವೆಂಬರ್.1ರಂದು ದಾಂಪತ್ಯ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಇಟಲಿಯಲ್ಲಿ ಅದ್ದೂರಿಯಾಗಿ ಪ್ರೇಮ ಪಕ್ಷಿಗಳು ಮದುವೆಯಾಗಿದ್ದಾರೆ. ಮದುವೆಯ ಸುಂದರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿವೆ.
ಐದಾರು ವರ್ಷಗಳ ಪ್ರೀತಿಗೆ ಮದುವೆಯೆಂಬ ಮುದ್ರೆ ಒತ್ತಿದ್ದಾರೆ. ಕೆಂಪು ಬಣ್ಣದ ಸೀರೆಯಲ್ಲಿ ಲಾವಣ್ಯ ಮಿಂಚಿದ್ರೆ, ಲೈಟ್ ಬಣ್ಣದ ಶೆರ್ವಾನಿಯಲ್ಲಿ ವರುಣ್ (Varun Tej) ಹೈಲೆಟ್ ಆಗಿದ್ದಾರೆ. ಇದನ್ನೂ ಓದಿ:ಕಿಂಗ್ ಖಾನ್ ಹುಟ್ಟು ಹಬ್ಬಕ್ಕೆ ‘ಡಂಕಿ’ ಟೀಸರ್ ರಿಲೀಸ್
ವರುಣ್ ಮದುವೆಯಲ್ಲಿ ಮೆಗಾಸ್ಟಾರ್ ಚಿರಂಜೀವಿ, ಅಲ್ಲು ಅರ್ಜುನ್, ರಾಮ್ ಚರಣ್, ಸಾಯಿ ಧರಂ ತೇಜ್, ಪವನ್ ಕಲ್ಯಾಣ್, ಅಲ್ಲು ಸಿರೀಶ್ ಸೇರಿದಂತೆ ಇಡೀ ಮೆಗಾ ಫ್ಯಾಮಿಲಿ ಭಾಗಿಯಾಗಿದೆ. ಇದೀಗ ನವಜೋಡಿಗೆ ಸಿನಿಮಾ ನಟ-ನಟಿಯರು, ಅಭಿಮಾನಿಗಳು, ಶುಭಹಾರೈಸುತ್ತಿದ್ದಾರೆ.
‘ಮಿಸ್ಟರ್’ ಸಿನಿಮಾ ಚಿತ್ರೀಕರಣಕ್ಕಾಗಿ ಇಟಲಿಯಲ್ಲಿ ಮೊದಲು ಭೇಟಿಯಾಗಿದ್ದ ಈ ಜೋಡಿ, ಇದೀಗ ಇಲ್ಲಿಯೇ ಗ್ರ್ಯಾಂಡ್ ಆಗಿ ಮದುವೆಯಾಗಿದ್ದಾರೆ. ಇಟಲಿಯಲ್ಲಿಯೇ ಹನಿಮೂನ್‌ಗೂ ಪ್ಲ್ಯಾನ್ ಮಾಡಿದ್ದಾರೆ.
ಮೆಗಾಸ್ಟಾರ್ ಕುಟುಂಬದ ಕುಡಿ ವರುಣ್ ತೇಜ್ (Varun Tej) ಅವರು ಬಹುಕಾಲದ ಗೆಳತಿ ಲಾವಣ್ಯ (Lavanya Tripathi) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಇದೀಗ ಆಹ್ವಾನವಿದ್ರೂ ವರುಣ್ ತೇಜ್ ಮದುವೆಗೆ ಹೋಗಲ್ಲ ಎಂದು ಪವನ್ ಕಲ್ಯಾಣ್ (Pawan Kalyan) ಮಾಜಿ ಪತ್ನಿ ನಟಿ ರೇಣು ದೇಸಾಯಿ (Renu Desai) ಮಾತನಾಡಿದ್ದಾರೆ. ಇದನ್ನೂ ಓದಿ:ಅದ್ದೂರಿಯಾಗಿ ನಡೆಯಿತು ವರುಣ್- ಲಾವಣ್ಯ ಪ್ರೀ ವೆಡ್ಡಿಂಗ್ ಪಾರ್ಟಿ
ನವೆಂಬರ್ 1ರಂದು ವರುಣ್-ಲಾವಣ್ಯ ಇಟಲಿಯಲ್ಲಿ ಮದುವೆಯಾಗ್ತಿದ್ದಾರೆ. ಇಡೀ ಮೆಗಾಸ್ಟಾರ್ ಕುಟುಂಬ ಇಟಲಿಯಲ್ಲಿ ಬೀಡು ಬಿಟ್ಟಿದೆ. ಹೀಗಿರುವಾಗ ಮದುವೆಗೆ ಆಹ್ವಾನ ನೀಡಿದ್ರೂ ಕೂಡ ನಟಿ ರೇಣು ದೇಸಾಯಿ ಭಾಗಿಯಾಗ್ತಿಲ್ಲ ಎನ್ನಲಾಗ್ತಿದೆ.
ನನಗೆ ಮದುವೆಗೆ ಆಹ್ವಾನವಿದೆ. ಆದರೆ ನಾನು ಮದುವೆಗೆ ಹೋಗುತ್ತಿಲ್ಲ. ನಾನು ಹೋದರೆ ಅಲ್ಲಿದ್ದವರಿಗೆ ತೊಂದರೆಯಾಗಬಹುದು. ಕಿರಿ ಕಿರಿಯಾಗಬಹುದು. ಹಾಗಾಗಿ ಮದುವೆಗೆ ಹಾಜರಿ ಹಾಕೋದಿಲ್ಲ. ಆದರೆ ನನ್ನ ಹಾರೈಕೆ ಅವರ ಮೇಲಿದೆ ಎಂದು ನಟಿ ಹೇಳಿದ್ದಾರೆ ಎನ್ನಲಾಗುತ್ತಿದೆ.
ಪವನ್ ಕಲ್ಯಾಣ್ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ ಮೇಲೆ ಆ ಕುಟುಂಬದೊಂದಿಗೆ ರೇಣು ದೇಸಾಯಿ ಸಂಬಂಧ ಹೊಂದಿಲ್ಲ.
ಟಾಲಿವುಡ್‌ನ (Tollywood) ಲವ್ ಬರ್ಡ್ಸ್ ವರುಣ್ ತೇಜ್- ಲಾವಣ್ಯ (Lavanya Tripathi) ಜೋಡಿ, ನ.1ರಂದು ದಾಂಪತ್ಯ ಜೀವನಕ್ಕೆ (Wedding) ಕಾಲಿಡಲು ಸಜ್ಜಾಗಿದ್ದಾರೆ. ಹಸೆಮಣೆ ಏರುವ ಮುನ್ನ ಇದೀಗ ಹೊಸ ಜೋಡಿ ಇಟಲಿಯಲ್ಲಿ ಅ.30ರಂದು ಕಾಕ್‌ಟೇಲ್ ಪಾರ್ಟಿ ಮಾಡಿದೆ. ನವಜೋಡಿ ವರುಣ್- ಲಾವಣ್ಯ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದನ್ನೂ ಓದಿ:ರಾಜ್ಯೋತ್ಸವ ಪ್ರಶಸ್ತಿ: ಸಿನಿಮಾ ಕ್ಷೇತ್ರದಿಂದ ಯಾರಿಗೆಲ್ಲ ಅವಾರ್ಡ್
ಬಿಳಿ ಬಣ್ಣದ ಉಡುಗೆಯಲ್ಲಿ ವರುಣ್- ಲಾವಣ್ಯ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಅಲ್ಲು ಅರ್ಜುನ್- ಸಾಯಿ ಧರಂ ತೇಜ್ ಕಪ್ಪು ಬಣ್ಣದ ಉಡುಗೆಯಲ್ಲಿ ಕಾಣಿಸಿಕೊಂಡರೆ, ರಾಮ್ ಚರಣ್ ಬಿಳಿ ಬಣ್ಣದ ಧಿರಿಸಿನಲ್ಲಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಇಂದು (ಅ.31ರಂದು) ನವ ಜೋಡಿಯ ಹಳದಿ ಶಾಸ್ತ್ರ, ಮೆಹೆಂದಿ ಶಾಸ್ತ್ರ ನಡೆಯಲಿದೆ. ವರುಣ್ (Varun Tej) ಮದುವೆಯಲ್ಲಿ ಇಡೀ ಮೆಗಾಸ್ಟಾರ್ ಕುಟುಂಬ ಭಾಗಿಯಾಗಲಿದೆ.
‘ಮಿಸ್ಟರ್’ ಸಿನಿಮಾದ ಚಿತ್ರೀಕರಣದ ಸಮಯದಲ್ಲಿ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, ಹಲವು ವರ್ಷಗಳ ಡೇಟಿಂಗ್ ನಂತರ ಈ ವರ್ಷ ಜೂನ್ 9ರಂದು ಕುಟುಂಬಸ್ಥರ ಸಮ್ಮುಖದಲ್ಲಿ ನಾಗಬಾಬು ಪುತ್ರ ವರುಣ್-ಲಾವಣ್ಯ ಎಂಗೇಜ್‌ಮೆಂಟ್ ಗ್ರ್ಯಾಂಡ್ ಆಗಿ ನೆರವೇರಿತ್ತು.
ಮೊದಲ ಪ್ರೇಮ ನಿವೇದನೆ ಮಾಡಿದ ಸ್ಥಳದಲ್ಲಿಯೇ ಮದುವೆಯಾಗಬೇಕು ಎಂಬ ಮನದಾಸೆಯಂತೆಯೇ ಈಗ ಇಟಲಿಯಲ್ಲಿ ಅದ್ದೂರಿಯಾಗಿ ವರುಣ್- ಲಾವಣ್ಯ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.
ಮೆಗಾಸ್ಟಾರ್ ಚಿರಂಜೀವಿ ಕುಟುಂಬದಲ್ಲಿ ಮದುವೆ ಸಡಗರ ಮನೆ ಮಾಡಿದೆ. ನವೆಂಬರ್ ಮೊದಲ ವಾರದಲ್ಲಿ ವರುಣ್ ತೇಜ್(Varun Tej)- ಲಾವಣ್ಯ ತ್ರಿಪಾಠಿ (Lavanya Tripati) ಹೊಸ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಮದುವೆಗೂ ಮುನ್ನ ಇಡೀ ಕುಟುಂಬ ಒಂದಾಗಿ ಪ್ರಿ ವೆಡ್ಡಿಂಗ್ ಸೆಲೆಬ್ರೆಷನ್ ಮಾಡಿದೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.
ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ರಾಮ್ ಚರಣ್- ಉಪಾಸನಾ (Upasana) ಮುದ್ದು ಮಗಳ ಆಗಮನದ ಖುಷಿಯಲ್ಲಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ನಾಮಕರಣ ಕೂಡ ಮಾಡಿದ್ದಾರೆ. ಈಗ ಮೆಗಾಸ್ಟಾರ್ ಮನೆ ಮಗ ವರುಣ್ ತೇಜ್-ಲಾವಣ್ಯ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ನವೆಂಬರ್ 1ರಂದು ಇಟಲಿಯಲ್ಲಿ (Italy) ಹಸೆಮಣೆಗೆ ಈ ಜೋಡಿ ಏರಲಿದೆಯಂತೆ.
ಮೆಗಾ ಪ್ರಿನ್ಸ್ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, 2017ರಲ್ಲಿ ಇಬ್ಬರು ಮಿಸ್ಟರ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದರು. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ಅಂತರಿಕ್ಷಂ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು. ಅಲ್ಲಿಂದ ಇಬ್ಬರ ಡೇಟಿಂಗ್ ಸುದ್ದಿ ಚಾಲ್ತಿಗೆ ಬಂದಿತ್ತು.
ಆಗಾಗ ವರುಣ್, ಲಾವಣ್ಯ ಇಬ್ಬರೂ ಹಲವು ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ಇದು ಗಾಳಿಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು. ವರುಣ್, ತಮ್ಮ ಪ್ರೀತಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಬಯಸಿದ್ದರು. ಹೀಗಾಗಿ ಡಿಸೆಂಬರ್ 25 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಒಪ್ಪಿದರೂ, ಈ ಜೋಡಿ ಮದುವೆ ಬಗ್ಗೆ ಬಾಯ್ಬಿಟ್ಟಿರಲಿಲ್ಲ.
ಯಂಗ್ ಜೋಡಿ ವರುಣ್- ಲಾವಣ್ಯ ಅವರು ಹೈದರಾಬಾದ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದರು. ಜೂನ್ 9ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದರು. ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅವರ ಇಡೀ ಕುಟುಂಬ, ಅಲ್ಲು ಅರ್ಜುನ್ ಫ್ಯಾಮಿಲಿ, ವೆಂಕಟೇಶ್ವರ ರಾವ್ ಕುಟುಂಬದವರಷ್ಟೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಎಂಗೇಜ್‌ಮೆಂಟ್‌ನಲ್ಲಿ ನಟಿ ಲಾವಣ್ಯ ಗಿಳಿ ಹಸಿರು ಸೀರೆಯಲ್ಲಿ ಮಿಂಚಿದ್ರೆ, ವರುಣ್ ಗೋಲ್ಡನ್ ಬಣ್ಣದ ಶೆರ್ವಾನಿಯಲ್ಲಿ ಹೈಲೆಟ್ ಆಗಿದ್ದರು.
ಟಾಲಿವುಡ್‌ನಲ್ಲಿ ಸದ್ಯ ದಾಂಪತ್ಯ ಜೀವನಕ್ಕೆ ಕಾಲಿಡೋದಕ್ಕೆ ವರುಣ್ ತೇಜ್(Varun Tej)- ಲಾವಣ್ಯ ತ್ರಿಪಾಠಿ (Lavanya Tripati) ರೆಡಿಯಾಗಿದ್ದಾರೆ. ಇದೇ ನವೆಂಬರ್ ಮೊದಲ ವಾರದಲ್ಲಿ ಹೊಸ ಬಾಳಿಗೆ (Wedding) ಈ ಜೋಡಿ ಕಾಲಿಡಲಿದೆ ಎಂದು ಹೇಳಲಾಗುತ್ತಿದೆ. ಮದುವೆ ದಿನ ಹತ್ತಿರ ಬರುತ್ತಿದ್ದಂತೆಯೇ ನಟಿ ಫಿಟ್‌ನೆಸ್‌ಗೆ ಹೆಚ್ಚು ಒತ್ತು ಕೊಡ್ತಿದ್ದಾರೆ. ಈ ಕುರಿತ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಲಾವಣ್ಯ ಶೇರ್ ಮಾಡಿದ್ದಾರೆ.
ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ರಾಮ್ ಚರಣ್- ಉಪಾಸನಾ (Upasana) ಮುದ್ದು ಮಗಳ ಆಗಮನದ ಖುಷಿಯಲ್ಲಿದ್ದಾರೆ. ಇತ್ತೀಚೆಗೆ ಅದ್ದೂರಿಯಾಗಿ ನಾಮಕರಣ ಕೂಡ ಮಾಡಿದ್ದಾರೆ. ಈಗ ಮೆಗಾಸ್ಟಾರ್ ಮನೆ ಮಗ ವರುಣ್ ತೇಜ್-ಲಾವಣ್ಯ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ನವೆಂಬರ್ 1ರಂದು ಇಟಲಿಯಲ್ಲಿ (Italy) ಹಸೆಮಣೆಗೆ ಈ ಜೋಡಿ ಏರಲಿದೆಯಂತೆ.
ಮೆಗಾ ಪ್ರಿನ್ಸ್ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, 2017ರಲ್ಲಿ ಇಬ್ಬರು ಮಿಸ್ಟರ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದರು. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ಅಂತರಿಕ್ಷಂ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು. ಅಲ್ಲಿಂದ ಇಬ್ಬರ ಡೇಟಿಂಗ್ ಸುದ್ದಿ ಚಾಲ್ತಿಗೆ ಬಂದಿತ್ತು.
ಆಗಾಗ ವರುಣ್, ಲಾವಣ್ಯ ಇಬ್ಬರೂ ಹಲವು ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ಇದು ಗಾಳಿಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು. ವರುಣ್, ತಮ್ಮ ಪ್ರೀತಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಬಯಸಿದ್ದರು. ಹೀಗಾಗಿ ಡಿಸೆಂಬರ್ 25 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಒಪ್ಪಿದರೂ, ಈ ಜೋಡಿ ಮದುವೆ ಬಗ್ಗೆ ಬಾಯ್ಬಿಟ್ಟಿರಲಿಲ್ಲ.
ಯಂಗ್ ಜೋಡಿ ವರುಣ್- ಲಾವಣ್ಯ ಅವರು ಹೈದರಾಬಾದ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದರು. ಜೂನ್ 9ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದರು. ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅವರ ಇಡೀ ಕುಟುಂಬ, ಅಲ್ಲು ಅರ್ಜುನ್ ಫ್ಯಾಮಿಲಿ, ವೆಂಕಟೇಶ್ವರ ರಾವ್ ಕುಟುಂಬದವರಷ್ಟೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಎಂಗೇಜ್‌ಮೆಂಟ್‌ನಲ್ಲಿ ನಟಿ ಲಾವಣ್ಯ ಗಿಳಿ ಹಸಿರು ಸೀರೆಯಲ್ಲಿ ಮಿಂಚಿದ್ರೆ, ವರುಣ್ ಗೋಲ್ಡನ್ ಬಣ್ಣದ ಶೆರ್ವಾನಿಯಲ್ಲಿ ಹೈಲೆಟ್ ಆಗಿದ್ದರು.
ಟಾಲಿವುಡ್ (Tollywood) ಯಂಗ್ ಹೀರೋ ವರುಣ್ ತೇಜ್ (Varun Tej) ಅವರು ಇತ್ತೀಚಿಗೆ ಬಹುಕಾಲದ ಗೆಳತಿ ಲಾವಣ್ಯ (Lavanya Tripathi) ಜೊತೆ ಎಂಗೇಜ್ ಆಗುವ ಮೂಲಕ ಫೀಮೆಲ್ ಫ್ಯಾನ್ಸ್‌ಗೆ ಶಾಕ್ ಕೊಟ್ಟಿದ್ದರು. ಈಗ ಭಾವಿ ಪತ್ನಿ ಜೊತೆ ಮೆಗಾಸ್ಟಾರ್ ಮನೆಮಗ ಕಾಫಿ ಡೇಟ್ ಹೋಗಿದ್ದಾರೆ.
ಹಲವು ವರ್ಷಗಳ ಪ್ರೀತಿಗೆ ಉಂಗುರದ ಮುದ್ರೆ ಒತ್ತುವ ಮೂಲಕ ಲಾವಣ್ಯ- ವರುಣ್ ತೇಜ್ ಎಂಗೇಜ್ ಆಗಿದ್ದರು. ಈಗ ಈ ಲವ್ ಬರ್ಡ್ಸ್ ಫಾರಿನ್‌ಗೆ ಹಾರಿದ್ದಾರೆ. ಭಾವಿ ಪತ್ನಿ ಲಾವಣ್ಯ ಜೊತೆ ವರುಣ್ ಕಾಫಿ ಡೇಟ್ ಮಾಡ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇಬ್ಬರ ವೇಕೆಷನ್‌ಗೆ ವರುಣ್ ಸಹೋದರಿ ನಿಹಾರಿಕಾ ಕೂಡ ಸಾಥ್ ನೀಡಿದ್ದಾರೆ.
ಮೆಗಾ ಪ್ರಿನ್ಸ್ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, 2017ರಲ್ಲಿ ಇಬ್ಬರು `ಮಿಸ್ಟರ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು. ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದರು. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ‘ಅಂತರಿಕ್ಷಂ’ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು. ಅಲ್ಲಿಂದ ಇಬ್ಬರ ಡೇಟಿಂಗ್ ಸುದ್ದಿ ಚಾಲ್ತಿಗೆ ಬಂದಿತ್ತು.
ಆಗಾಗ ವರುಣ್, ಲಾವಣ್ಯ ಇಬ್ಬರೂ ಹಲವು ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ಇದು ಗಾಳಿಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು. ವರುಣ್, ತಮ್ಮ ಪ್ರೀತಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಬಯಸಿದ್ದರು. ಹೀಗಾಗಿ ಡಿಸೆಂಬರ್ 15 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಒಪ್ಪಿದರೂ, ಈ ಜೋಡಿ ಮದುವೆ ಬಗ್ಗೆ ಬಾಯ್ಬಿಟ್ಟಿರಲಿಲ್ಲ. ಇದನ್ನೂ ಓದಿ:ಸರ್ಕಾರದಿಂದ ವೆಬ್ ಸೀರೀಸ್ ಪ್ರಶಸ್ತಿ ಘೋಷಿಸಿದ ಸಚಿವ ಅನುರಾಗ್ ಠಾಕೂರ್
ಯಂಗ್ ಜೋಡಿ ವರುಣ್- ಲಾವಣ್ಯ ಅವರು ಹೈದರಾಬಾದ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದಾರೆ. ಜೂನ್ 9ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದರು. ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅವರ ಇಡೀ ಕುಟುಂಬ, ಅಲ್ಲು ಅರ್ಜುನ್ ಫ್ಯಾಮಿಲಿ, ವೆಂಕಟೇಶ್ವರ ರಾವ್ ಕುಟುಂಬದವರಷ್ಟೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಸದ್ಯ ಎಂಗೇಜ್ ಆಗಿರುವ ಈ ಜೋಡಿ ಈ ವರ್ಷದ ಅಂತ್ಯದಲ್ಲಿ ಮದುವೆ ಆಗಲಿದ್ದಾರೆ. ಎಂಗೇಜ್‌ಮೆಂಟ್‌ನಲ್ಲಿ ನಟಿ ಲಾವಣ್ಯ ಗಿಳಿ ಹಸಿರು ಸೀರೆಯಲ್ಲಿ ಮಿಂಚಿದ್ರೆ, ವರುಣ್ ಗೋಲ್ಡನ್ ಬಣ್ಣದ ಶೆರ್ವಾನಿಯಲ್ಲಿ ಹೈಲೆಟ್ ಆಗಿದ್ದಾರೆ. ನನ್ನ ಪ್ರೀತಿಯನ್ನ 2016ರಲ್ಲಿಯೇ ಕಂಡುಕೊಂಡಿದ್ದೆ ಎಂದು ನಟಿ ನಿಶ್ಚಿತಾರ್ಥದ ಫೋಟೋ ಸಮೇತ ಪೋಸ್ಟ್ ಮಾಡಿದ್ದರು.
ಇನ್ನೂ ನಿಹಾರಿಕಾ ಕೊನಿಡೆಲಾ (Niharika Konidela) ಅವರು ಇತ್ತೀಚಿಗೆ ಚೈತನ್ಯ ಜೊತೆಗಿನ ದಾಂಪತ್ಯಕ್ಕೆ ಅಂತ್ಯ ಹಾಡಿದ್ದಾರೆ. ಡಿವೋರ್ಸ್ ಬಗ್ಗೆ ಅಧಿಕೃತವಾಗಿ ಅನೌನ್ಸ್ ಮಾಡಿದ್ದಾರೆ. ಸದ್ಯ ನಿಹಾರಿಕಾ, ಚಿತ್ರರಂಗದಲ್ಲಿ ನಟಿ, ನಿರ್ಮಾಪಕಿಯಾಗಿ ಗುರುತಿಸಿಕೊಳ್ತಿದ್ದಾರೆ.
ಮೆಗಾಸ್ಟಾರ್ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಹಲವು ವರ್ಷಗಳ ಪ್ರೀತಿಗೆ ಟಾಲಿವುಡ್‌ನ ಯಂಗ್ ಕಪಲ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ (Lavanya Tripathi) ಉಂಗುರದ ಮುದ್ರೆ ಒತ್ತಿದ್ದಾರೆ. ಈ ಮೂಲಕ ಎಲ್ಲಾ ಊಹಾಪೋಹಗಳಿಗೂ ಈ ಜೋಡಿ ಬ್ರೇಕ್ ಹಾಕಿದ್ದಾರೆ. ಸದ್ಯ ಯಂಗ್ ಜೋಡಿಯ ಎಂಗೇಜ್‌ಮೆಂಟ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಮೆಗಾ ಪ್ರಿನ್ಸ್ ವರುಣ್-ಲಾವಣ್ಯ ಮೊದಲು ಭೇಟಿಯಾಗಿದ್ದು, 2016ರಲ್ಲಿ ಬಳಿಕ 2017ರಲ್ಲಿ ಇಬ್ಬರು ‘ಮಿಸ್ಟರ್’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಸಿನಿಮಾದ ಶೂಟಿಂಗ್ ವೇಳೆ ವರುಣ್ ತೇಜ್, ಲಾವಣ್ಯ ತ್ರಿಪಾಠಿ ಇಬ್ಬರೂ ಕ್ಲೋಸ್ ಆಗಿದ್ದರು. ಆರಂಭದಲ್ಲಿ ಸ್ನೇಹಿತರಾಗಿದ್ದವರು ಬರಬರುತ್ತಾ ಪ್ರೀತಿಯಲ್ಲಿ ಬಿದ್ದಿದ್ದರು.
ಇಬ್ಬರೂ ಡೇಟಿಂಗ್ ಮಾಡುತ್ತಿದ್ದರೂ, ಅದು ಪಬ್ಲಿಕ್ ಆಗದಂತೆ ನೋಡಿಕೊಂಡಿದ್ದಾರೆ. ಹಲವು ವರ್ಷಗಳವರೆಗೂ ಇಬ್ಬರೂ ಡೇಟಿಂಗ್ ಮಾಡುತ್ತಿರುವ ವಿಷಯ ಗೊತ್ತೇ ಇರಲಿಲ್ಲ. ಆದರೆ, ‘ಅಂತರಿಕ್ಷಂʼ ಸಿನಿಮಾದ ವೇಳೆ ಇಬ್ಬರ ಬಗ್ಗೆ ಮೊದಲ ಬಾರಿಗೆ ಗಾಳಿಸುದ್ದಿ ಹಬ್ಬಿತ್ತು.ಅಲ್ಲಿಂದ ಎಂಗೇಜ್‌ಮೆಂಟ್ ಆಗುವವರೆಗೂ ರೂಮರ್ ಕಪಲ್ ಆಗಿದ್ದರು. ಇದನ್ನೂ ಓದಿ:4 ವರ್ಷಗಳ ದಾಂಪತ್ಯಕ್ಕೆ ಅಂತ್ಯ ಹಾಡಿದ ಸುಶ್ಮಿತಾ ಸೇನ್ ಸಹೋದರ ರಾಜೀವ್
ಆಗಾಗ ವರುಣ್, ಲಾವಣ್ಯ ಇಬ್ಬರೂ ಕಾರ್ಯಕ್ರಮಗಳು ಹಾಗೂ ಪಾರ್ಟಿಗಳಲ್ಲಿ ಭೇಟಿಯಾಗುತ್ತಿದ್ದರು. ಇದು ಗಾಳಿಸುದ್ದಿಗೆ ಮತ್ತಷ್ಟು ತುಪ್ಪ ಸುರಿದಂತಾಗಿತ್ತು. ವರುಣ್, ತಮ್ಮ ಪ್ರೀತಿಯನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಬಯಸಿದ್ದರು. ಹೀಗಾಗಿ ಡಿಸೆಂಬರ್ 15 ಲಾವಣ್ಯ ಹುಟ್ಟುಹಬ್ಬದಂದು ಮದುವೆಗೆ ಪ್ರಪೋಸ್ ಮಾಡಿದ್ದರು. ಎರಡೂ ಮನೆಯವರು ಒಪ್ಪಿದರೂ, ಈ ಜೋಡಿ ಮದುವೆ ಬಗ್ಗೆ ಬಾಯ್ಬಿಟ್ಟಿರಲಿಲ್ಲ.
ಯಂಗ್ ಜೋಡಿ ವರುಣ್- ಲಾವಣ್ಯ ಅವರು ಹೈದರಾಬಾದ್‌ನಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿ ಎಂಗೇಜ್ ಆಗಿದ್ದಾರೆ. ಜೂನ್ ೯ರ ರಾತ್ರಿ ಎರಡು ಕುಟುಂಬದವರು ಆಪ್ತರಷ್ಟೇ ಭಾಗಿಯಾಗಿದ್ದಾರೆ. ಮೆಗಾಸ್ಟಾರ್ ಚಿರಂಜೀವಿ, ರಾಮ್ ಚರಣ್ ಅವರ ಇಡೀ ಕುಟುಂಬ, ಅಲ್ಲು ಅರ್ಜುನ್ ಫ್ಯಾಮಿಲಿ, ವೆಂಕಟೇಶ್ವರ ರಾವ್ ಕುಟುಂಬದವರಷ್ಟೇ ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು. ಸದ್ಯ ಎಂಗೇಜ್ ಆಗಿರುವ ಈ ಜೋಡಿ ಈ ವರ್ಷದ ಅಂತ್ಯದಲ್ಲಿ ಮದುವೆ ಆಗಲಿದ್ದಾರೆ.
ಎಂಗೇಜ್‌ಮೆಂಟ್‌ನಲ್ಲಿ (Engagement) ನಟಿ ಲಾವಣ್ಯ ಗಿಳಿ ಹಸಿರು ಸೀರೆಯಲ್ಲಿ ಮಿಂಚಿದ್ರೆ, ವರುಣ್ ಗೋಲ್ಡನ್ ಬಣ್ಣದ ಶೆರ್ವಾನಿಯಲ್ಲಿ ಹೈಲೆಟ್ ಆಗಿದ್ದಾರೆ. ನನ್ನ ಪ್ರೀತಿಯನ್ನ 2016ರಲ್ಲಿಯೇ ಕಂಡುಕೊಂಡಿದ್ದೆ ಎಂದು ನಟಿ ನಿಶ್ಚಿತಾರ್ಥದ ಫೋಟೋ ಸಮೇತ ಪೋಸ್ಟ್ ಮಾಡಿದ್ದಾರೆ. ಹೊಸ ಜೋಡಿಗೆ ಫ್ಯಾನ್ಸ್ ಶುಭಕೋರಿದ್ದಾರೆ.