Tag: Lawyer Jeeva

  • ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ – ಹೈಕೋರ್ಟ್‌ಗೆ 2,300 ಪುಟಗಳ ಅಂತಿಮ ವರದಿ ಸಲ್ಲಿಕೆ

    ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ – ಹೈಕೋರ್ಟ್‌ಗೆ 2,300 ಪುಟಗಳ ಅಂತಿಮ ವರದಿ ಸಲ್ಲಿಕೆ

    ಬೆಂಗಳೂರು: ಭೋವಿ ನಿಗಮದಲ್ಲಿ (Bhovi Corporation) ನಡೆದ ಅಕ್ರಮದ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 90 ದಿನಗಳ ಕಾಲ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (SIT) 2,300 ಪುಟಗಳ ಅಂತಿಮ ವರದಿಯನ್ನು ಹೈಕೋರ್ಟ್‌ಗೆ (Highcourt) ಸಲ್ಲಿಸಿದೆ.

    ಕೋರ್ಟ್‌ಗೆ ಸಲ್ಲಿಸಿದ ಅಂತಿಮ ವರದಿಯಲ್ಲಿ ಮೃತ ಜೀವಾ (Lawyer Jeeva) ಡೆತ್ ನೋಟ್‌ನಲ್ಲಿದ್ದ ಬಹುತೇಕ ಆರೋಪಗಳು ಸಾಬೀತಾಗಿದೆ. ಅಲ್ಲದೇ ಡಿವೈಎಸ್‌ಪಿ ಕನಕಲಕ್ಷ್ಮಿ ಅವರು ಕಿರುಕುಳ ನೀಡಿರುವುದು ವಿಚಾರಣೆ ವೇಳೆ ಬೆಳಕಿಗೆ ಬಂದಿದೆ ಇದೆಲ್ಲರ ದಾಖಲೆಗಳನ್ನು ಕೋರ್ಟ್‌ಗೆ ಸಲ್ಲಿಸಲಾಗಿದೆ. ಅಲ್ಲದೇ ವಿಧಿವಿಜ್ಞಾನ ಪ್ರಯೋಗಾಲಯ ವರದಿಗಳು, ಮರಣೋತ್ತರ ಪರೀಕ್ಷಾ ವರದಿ, ಡೆತ್‌ನೋಟ್‌ ಫಾರೆನ್ಸಿಕ್ ರಿಪೋರ್ಟ್‌ಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಲು ಮೂವರು ಐಪಿಎಸ್ ಅಧಿಕಾರಿಗಳನ್ನೊಳಗೊಂಡ ಎಸ್‌ಐಟಿ ತಂಡವನ್ನ ರಚಿಸಲಾಗಿತ್ತು. ಇದರಲ್ಲಿ ಸಿಸಿಬಿ ಡಿಸಿಪಿ ಹಕಾಯ್ ಅಕ್ಷಯ್ ಮಚೀಂದ್ರ, ಎಸ್ಪಿ ನಿಶಾ ಜೇಮ್ಸ್, ಸಿಬಿಐ ಎಸ್ಪಿ ವಿನಾಯಕ್ ವರ್ಮ ಅವರನ್ನೊಳಗೊಂಡ ಎಸ್‌ಐಟಿ ತಂಡ 90 ದಿನಗಳ ಕಾಲ ಸುದೀರ್ಘ ತನಿಖೆ ನಡೆಸಿತ್ತು. ಸದ್ಯ ತನಿಖೆ ಪೂರ್ಣಗೊಳಿಸಿರುವ ತಂಡ ಹೈಕೋರ್ಟ್‌ಗೆ ಅಂತಿಮ ವರದಿ ಸಲ್ಲಿಸಿದೆ.

    ಏನಿದು ಪ್ರಕರಣ?
    ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್‌ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್‌ ಕೊಡದೇ ತಮ್ಮನ್ನ ವಿಚಾರಣೆಗೆ ಕರೆದು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಜೀವಾ ಆರೋಪಿಸಿ ಬನಶಂಕರಿಯಲ್ಲಿರುವ ತಮ್ಮ ಮನೆಯಲ್ಲಿ ಜೀವಾ ಆತ್ಮಹತ್ಯೆಗೆ ಶರಣಾಗಿದ್ದರು.

    ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
    ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು.

    ಅಲ್ಲದೇ ಜೀವಾ ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 13 ಪುಟಗಳ ಮರಣಪತ್ರ ಬರೆದಿದ್ದರು. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದರು. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದರು. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದರು ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು.

  • ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ – ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

    ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ – ಡಿವೈಎಸ್ಪಿ ಕನಕಲಕ್ಷ್ಮೀ ಬಂಧನ

    ಬೆಂಗಳೂರು: ಭೋವಿ ನಿಗಮದಲ್ಲಿ (Bhovi Corporation) ನಡೆದ ಅಕ್ರಮ ತನಿಖೆ ಎದುರಿಸಿದ್ದ ವಕೀಲೆ ಹಾಗೂ ಉದ್ಯಮಿ ಜೀವಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಡಿವೈಎಸ್ಪಿ ಕನಕಲಕ್ಷ್ಮೀಯನ್ನು (DYSP Kanakalakshmi) ಎಸ್‌ಐಟಿ (SIT) ಅಧಿಕಾರಿಗಳು ಬಂಧಿಸಿದ್ದಾರೆ.

    ವಕೀಲೆ ಜೀವಾ, ನನ್ನ ಆತ್ಮಹತ್ಯೆಗೆ ಡಿವೈಎಸ್ಪಿ ಕನಕಲಕ್ಷ್ಮೀ ಕಾರಣ ಎಂದು 13 ಪುಟಗಳ ಸುದೀರ್ಘ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಕನಕಲಕ್ಷ್ಮೀ ಎಸ್‌ಐಟಿ ವಿಚಾರಣೆಗೆ ಹಾಜರಾಗಿದ್ದಾಗ ಬಂಧಿಸಲಾಗಿದೆ. ಈ ಹಿಂದೆ ಎರಡು ಬಾರಿ ಕನಕಲಕ್ಷ್ಮೀ ಅವರ ಹೇಳಿಕೆಯನ್ನು ಎಸ್‌ಐಟಿ ದಾಖಲು ಮಾಡಿತ್ತು. ಇಂದು ಬೆಳಗ್ಗೆ ವಿಚಾರಣೆಗೆ ಒಳಪಡಿಸಿ ಬಳಿಕ ಬಂಧಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್‌ನಿಂದ SCSP, TSP ಹಣ ಗ್ಯಾರೆಂಟಿಗೆ ಬಳಕೆ – ಕೋಲಾರ ಬಿಜೆಪಿ ಮುಖಂಡರಿಂದ ಖಂಡನೆ

    ಏನಿದು ಪ್ರಕರಣ?
    ಭೋವಿ ನಿಗಮ ಅಕ್ರಮ ಸಂಬಂಧ ಜೀವಾರನ್ನು ಸಿಐಡಿ ವಿಚಾರಣೆಗೆ ಒಳಪಡಿಸಿತ್ತು. ಆದರೆ ಕಿರುಕುಳದ ಆರೋಪ ಮಾಡಿ ಜೀವಾ ಆತ್ಮಹತ್ಯೆ ಮಾಡಿಕೊಂಡಿದ್ದರು. ಭೋವಿ ನಿಗಮದಲ್ಲಿ ಒಟ್ಟು 34 ಕೋಟಿ ರೂ. ಅಕ್ರಮ ಹಣ ವರ್ಗಾವಣೆಯಾಗಿದೆ. ಇದರಲ್ಲಿ ಜೀವಾ ಮಾಲೀಕತ್ವದ ಸಂಸ್ಥೆ ಅನ್ನಿಕಾ ಎಂಟರ್‌ಪ್ರೆಸಸ್‌ಗೆ 7.16 ಕೋಟಿ ರೂ., ಅವರ ಸಹೋದರಿ ಹೆಸರಲ್ಲಿರುವ ಹರ್ನಿತಾ ಕ್ರಿಯೇಷನ್ಸ್ಗೆ 3.79 ಕೋಟಿ ರೂ. ವರ್ಗಾವಣೆ ಆಗಿತ್ತು. ಇನ್ನುಳಿದ ಹಣ ಮಾಜಿ ಎಂಡಿಗಳ ಆಪ್ತರ ಪಾಲುದಾರಿಕೆಯ ಸಂಸ್ಥೆಗಳಿಗೆ ವರ್ಗವಾಗಿತ್ತು. ಈ ಪ್ರಕರಣದ ಬಗ್ಗೆ ಆಂತರಿಕ ತನಿಖೆ ನಡೆಸಲು ಗೃಹ ಇಲಾಖೆ ಮುಂದಾಗಿತ್ತು. ಇದನ್ನೂ ಓದಿ: ರಾಯಚೂರು| ಎರಡು ಬೈಕ್‌ಗಳಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – ಐವರು ದುರ್ಮರಣ

    ಸಿಐಡಿ ಅಧಿಕಾರಿಗಳ ವಿರುದ್ಧ ಪ್ರಕರಣ:
    ಜೀವಾ ಅವರ ಕಿರಿಯ ಸಹೋದರಿ ಸಂಗೀತಾ ಅವರು ನೀಡಿದ ದೂರಿನಲ್ಲಿ ವಿಚಾರಣೆ ನೆಪದಲ್ಲಿ ಸಿಐಡಿ ಅಧಿಕಾರಿಗಳು ತನ್ನ ಅಕ್ಕ ಜೀವಾಗೆ ಅವಮಾನ ಮಾಡಿದ್ದಾರೆ. ಅಂತೆಯೇ ಹಣಕ್ಕೆ ಬೇಡಿಕೆ ಇರಿಸಿದ್ದಾರೆ ಎಂದು ಆರೋಪಿಸಿದ್ದರು. ಈ ದೂರಿನಮೇರೆಗೆ ಬನಶಂಕರಿ ಠಾಣೆ ಪೊಲೀಸರು ಸಿಐಡಿ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಯಡಿ ಎಫ್‌ಐಆರ್ ದಾಖಲಿಸಿ ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಮಸೀದಿ, ಚರ್ಚ್‌ನಿಂದ ಸರ್ಕಾರಕ್ಕೆ 5 ರೂಪಾಯಿ ತೆರಿಗೆ ಬರ್ತಿದೆಯಾ: ಪ್ರತಾಪ್ ಸಿಂಹ ಪ್ರಶ್ನೆ

    ಆತ್ಮಹತ್ಯೆಗೂ ಮುನ್ನ ಮಹಿಳಾ ಉದ್ಯಮಿ ಜೀವಾ 13 ಪುಟಗಳ ಮರಣಪತ್ರ ಬರೆದಿದ್ದಾರೆ. ಅದರಲ್ಲಿ ಭೋವಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳ ವಿಚಾರಣೆ ವಿಚಾರ ಪ್ರಸ್ತಾಪಿಸಿದ್ದಾರೆ. ಸಿಐಡಿ ವಿಚಾರಣೆಯಿಂದ ನನಗೆ ಅವಮಾನವಾಗಿದ್ದು, ಮಾನಸಿಕವಾಗಿ ನೊಂದಿದ್ದೇನೆ. ಎಂದು ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ. ಅಂತೆಯೆ ನನಗೆ ಅವಿವಾಹಿತ ತಂಗಿ ಇರುವುದರಿಂದ ನನ್ನ ಆತ್ಮಹತ್ಯೆ ಸುದ್ದಿಗೆ ಹೆಚ್ಚು ಪ್ರಚಾರ ನೀಡದಂತೆಯೂ ಜೀವಾ ಮರಣಪತ್ರದಲ್ಲಿ ಮನವಿ ಮಾಡಿದ್ದಾರೆ ಎಂದು ಅಧಿಕಾರಿ ಮೂಲಗಳಿಂದ ತಿಳಿದುಬಂದಿತ್ತು. ಇದನ್ನೂ ಓದಿ: ಹೆಚ್‌ಡಿಕೆಗೆ ಅನಾರೋಗ್ಯ – 3 ದಿನಗಳಿಂದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ