Tag: Lawyers

  • ಕೆಲ ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿವೆ – ಸಿಜೆಐಗೆ ವಕೀಲರ ಪತ್ರ

    ನವದೆಹಲಿ: ಕೆಲವು ಪಟ್ಟಭದ್ರ ಹಿತಾಸಕ್ತಿ (Vested Interest) ಗುಂಪುಗಳು ನ್ಯಾಯಾಂಗದ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡುತ್ತಿವೆ. ವಿಶೇಷವಾಗಿ ರಾಜಕೀಯ ನಾಯಕರ ಮತ್ತು ಭ್ರಷ್ಟಾಚಾರ ಆರೋಪಗಳನ್ನು ಒಳಗೊಂಡ ಪ್ರಕರಣಗಳಲ್ಲಿ ಹೆಚ್ಚು ಕಂಡುಬರುತ್ತಿದೆ ಎಂದು ಆರೋಪಿಸಿ ಭಾರತದ 600ಕ್ಕೂ ಹೆಚ್ಚು ವಕೀಲರು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ಅವರಿಗೆ ಪತ್ರ ಬರೆದಿದ್ದಾರೆ.

    ಹಿರಿಯ ವಕೀಲರಾದ ಹರೀಶ್ ಸಾಳ್ವೆ ಮತ್ತು ಪಿಂಕಿ ಆನಂದ್ ಸೇರಿದಂತೆ ಹಲವು ಪ್ರಮುಖ ವಕೀಲರು ಈ ಪತ್ರಕ್ಕೆ ಸಹಿ ಮಾಡಿ ನ್ಯಾಯಾಂಗದ ಫಲಿತಾಂಶಗಳ ಮೇಲೆ ಪ್ರಭಾವ ಬೀರಲು ಕೆಲವು ವಕೀಲರ ಗುಂಪು ಒತ್ತಡದ ತಂತ್ರಗಳನ್ನು ಬಳಸುತ್ತಿದೆ ಎಂದು ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಇಂತಹ ಬೆಳವಣಿಗೆ ಪ್ರಜಾಪ್ರಭುತ್ವ ಮತ್ತು ನ್ಯಾಯಾಂಗ ಪ್ರಕ್ರಿಯೆಗಳಲ್ಲಿ ಇರಿಸಲಾಗಿರುವ ನಂಬಿಕೆಗೆ ಅಪಾಯವನ್ನು ಉಂಟುಮಾಡುತ್ತವೆ. ಇದೊಂದು ‘ನ್ಯಾಯಾಂಗಕ್ಕೆ ಬೆದರಿಕೆ’ ಎಂದು ಪತ್ರದಲ್ಲಿ ಉಲ್ಲೇಖಿಸಿದೆ. ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್‌ಗೆ ರಿಲೀಫ್ – ಸಿಎಂ ಸ್ಥಾನದಿಂದ ತೆರವು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

    ಸದ್ಯ ನ್ಯಾಯಾಲಯಗಳನ್ನು ಅಪಖ್ಯಾತಿಗೊಳಿಸುವ ಮತ್ತು ಸಾರ್ವಜನಿಕ ವಿಶ್ವಾಸವನ್ನು ದುರ್ಬಲಗೊಳಿಸುವ ಪ್ರಯತ್ನ ನಡೆಯುತ್ತಿದೆ. ಕೆಲ ವಕೀಲರು ತಮ್ಮ ರಾಜಕೀಯ ಕಾರ್ಯಸೂಚಿಯ ಆಧಾರದ ಮೇಲೆ ನ್ಯಾಯಾಲಯದ ನಿರ್ಧಾರಗಳ ಆಯ್ದ ಟೀಕೆ ಅಥವಾ ಹೊಗಳಿಕೆಯನ್ನು ಒಳಗೊಂಡಿರುವ ಕೆಲವು ತಂತ್ರಗಳನ್ನು ಮಾಡುತ್ತಿದ್ದಾರೆ. ಕೆಲವು ವಕೀಲರು ಹಗಲಿರುಳು ರಾಜಕಾರಣಿಗಳನ್ನು ರಕ್ಷಿಸುತ್ತಿದ್ದಾರೆ. ಮಾಧ್ಯಮಗಳ ಮೂಲಕ ನ್ಯಾಯಾಧೀಶರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿದೆ ಎಂದು ಸಿಜೆಐಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಜೆಡಿಎಸ್‌ನಲ್ಲಿ ಉಳಿದಿರೋ ನಿಷ್ಠಾವಂತರು ‘ಇಂಡಿಯಾ’ ಕೂಟಕ್ಕೆ ಬೆಂಬಲ ಕೊಡ್ತೀವಿ: ಸಿಎಂ ಇಬ್ರಾಹಿಂ

    ಬೆಂಚ್ ಫಿಕ್ಸಿಂಗ್‌ನ ಸಂಪೂರ್ಣ ಸಿದ್ಧಾಂತವನ್ನು ಕೆಲ ಗುಂಪು ನಡೆಸುತ್ತಿದೆ ಎಂದು ಪತ್ರದಲ್ಲಿ ಹೈಲೈಟ್ ಮಾಡಿದೆ ಮತ್ತು ‘ರಾಜಕೀಯ ಫ್ಲಿಪ್-ಫ್ಲಾಪಿಂಗ್’ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ರಾಜಕಾರಣಿಗಳು ಯಾರೋ ಒಬ್ಬರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿ ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳುವುದು ವಿಚಿತ್ರವಾಗಿದೆ. ನ್ಯಾಯಾಲಯದ ತೀರ್ಪಿಗೆ ಮಣಿಯದಿದ್ದರೆ ನ್ಯಾಯಾಲಯದ ಒಳಗೆ ಹಾಗೂ ಮಾಧ್ಯಮಗಳ ಮೂಲಕ ತ್ವರಿತವಾಗಿ ನ್ಯಾಯಾಲಯಗಳನ್ನು ಟೀಕಿಸುತ್ತಾರೆ ಎಂದು ವಕೀಲರು ಹೇಳಿದ್ದಾರೆ. ಇದನ್ನೂ ಓದಿ: ಹಾಸನ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ

    2024ರ ಲೋಕಸಭೆ ಚುನಾವಣೆಗೆ ಮುನ್ನವೇ ಈ ಬೆಳವಣಿಗೆಗಳು ನಡೆಯುತ್ತಿವೆ ಎಂದು ಒತ್ತಿ ಹೇಳಿರುವ ವಕೀಲರ ಗುಂಪು, ಕೆಲವು ಅಂಶಗಳು ನ್ಯಾಯಾಧೀಶರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿವೆ ಮತ್ತು ಅವರ ಪ್ರಕರಣಗಳಲ್ಲಿ ನಿರ್ದಿಷ್ಟ ರೀತಿಯಲ್ಲಿ ತೀರ್ಪು ನೀಡುವಂತೆ ನ್ಯಾಯಾಧೀಶರ ಮೇಲೆ ಒತ್ತಡ ಹೇರಲು ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳುಗಳನ್ನು ಹರಡುತ್ತಿವೆ ಎಂದು ಪತ್ರದಲ್ಲಿ ಆರೋಪಿಸಿದೆ. ಇಂತಹ ದಾಳಿಗಳಿಂದ ನಮ್ಮ ನ್ಯಾಯಾಲಯಗಳನ್ನು ರಕ್ಷಿಸಲು ನಾವು ಬಲವಾಗಿ ನಿಲ್ಲುವಂತೆ ಮತ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾವು ಸುಪ್ರೀಂ ಕೋರ್ಟ್‌ಗೆ ವಿನಂತಿಸುತ್ತೇವೆ ಎಂದು ಪತ್ರದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಭಾರತ ಸಮನ್ಸ್‌ ನೀಡಿದರೂ ಕೇಜ್ರಿವಾಲ್‌ ಬಂಧನ ಬಗ್ಗೆ ಅಮೆರಿಕ ಮತ್ತೆ ಪ್ರತಿಕ್ರಿಯೆ

  • ರಾಮನಗರ ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ – ಐಜೂರು ಠಾಣೆಯ ಪಿಎಸ್ಐ ಅಮಾನತು

    ರಾಮನಗರ ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ – ಐಜೂರು ಠಾಣೆಯ ಪಿಎಸ್ಐ ಅಮಾನತು

    ರಾಮನಗರ: ವಕೀಲರ ಹೋರಾಟಕ್ಕೆ (Lawyers Protest) ಕೊನೆಗೂ ಸರ್ಕಾರ (Karnataka Government) ಮಣಿದಿದ್ದು ಐಜೂರು ಠಾಣೆ ಪಿಎಸ್ಐ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಲಾಗಿದೆ.

    ರಾಮನಗರ (Ramangara) ಜಿಲ್ಲಾಡಳಿತ ಕಚೇರಿಯಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸಿದ ಬಳಿಕ ಗುರುವಾರ ವಿಧಾನಸೌಧ ಚಲೋಗೆ ವಕೀಲರು ಕರೆ ನೀಡಿದ್ದರು. ವಕೀಲರ ಪ್ರತಿಭಟನೆಗೆ ರಾಜ್ಯಾದ್ಯಂತ ಬೆಂಬಲ ವ್ಯಕ್ತವಾಗುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಮುಜುಗರ ತಪ್ಪಿಸಿಕೊಳ್ಳಲು ಪಿಎಸ್ಐ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಿದೆ.

    ಅಮಾನತು ಆದೇಶದ ಬಗ್ಗೆ ಇಂದು ಸದನದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ.  ಇದನ್ನೂ ಓದಿ: ವರ್ತೂರು ಸಂತೋಷ್ ಟೀಮ್ ವಿರುದ್ಧ ಜಗ್ಗೇಶ್ ದೂರು

    40 ವಕೀಲರ ವಿರುದ್ಧ ಸುಳ್ಳು ಎಫ್‌ಐಆರ್‌ ದಾಖಲಿಸಿದ ಸೈಯದ್ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿ ರಾಮನಗರ ವಕೀಲರು ವಾರದಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ಪ್ರತಿಭಟನೆಗೆ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಮತ್ತು ವಿಧಾನಸಭೆಯ ವಿಪಕ್ಷ ನಾಯಕ ಅಶೋಕ್‌ ಬೆಂಬಲ ನೀಡಿ ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ನಡೆಸುವಂತೆ ಕರೆ ನೀಡಿದ್ದರು.

    ಪಿಎಸ್ಐ ಅಮಾನತು ಯಾಕೆ?
    ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ (Gyanvapi Mosque) ನೆಲಮಹಡಿಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಎಸ್​ಡಿಪಿಐ ಕಾರ್ಯಕರ್ತ, ವಕೀಲ ಚಾಂದ್ ಪಾಷಾ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದ. ಇದನ್ನೂ ಓದಿ: ಸುಪ್ರೀಂ ಕೋರ್ಟ್‌ ಖ್ಯಾತ ವಕೀಲ ಫಾಲಿ ನಾರಿಮನ್ ನಿಧನ

    ನ್ಯಾಯಾಧೀಶರ ವಿರುದ್ಧವೇ ಪೋಸ್ಟ್‌ ಹಾಕಿದ್ದಕ್ಕೆ ಹಿಂದೂಪರ ಕಾರ್ಯಕರ್ತರು ಎಸ್‌ಪಿ ಹಾಗೂ ವಕೀಲರ ಸಂಘಕ್ಕೆ ದೂರು ನೀಡಿದ್ದರು. ಈ ಸಂಬಂಧ ವಕೀಲ ಚಾನ್ ಪಾಷಾ ಮೇಲೆ ಎಫ್‌ಐಆರ್‌ ದಾಖಲಾಗಿ ಬಂಧಿಸಲಾಗಿತ್ತು. ನ್ಯಾಯಾಂಗ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಚಾನ್ ಪಾಷಾ ಮೇಲೆ ವಕೀಲರ ಸಂಘ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಈ ವೇಳೆ ಚಾನ್ ಪಾಷಾ ಬೆಂಬಲಿಗರು ವಕೀಲರ ಸಂಘಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದ್ದರು.

    ಮನವಿ ನೀಡುವ ವೇಳೆ ವಕೀಲರ ಸಂಘದ ಆವರಣದಲ್ಲಿ ಚಾನ್ ಪಾಷಾ ಬೆಂಬಲಿಗರು ಹಾಗೂ ವಕೀಲರ ನಡುವೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ಚಾನ್ ಪಾಷಾ ಬೆಂಬಲಿಗರ ವಿರುದ್ಧ ವಕೀಲರು ದೂರು ನೀಡಿದ್ದರು. ಈ ಸಂಬಂಧ ಎಫ್ಐಆರ್ ದಾಖಲಾಗಿತ್ತು. ನಂತರ ಚಾನ್ ಪಾಷಾ ಬೆಂಬಲಿಗರಿಂದ ಪ್ರತಿ ದೂರು ದಾಖಲಾಯಿತು.

    ವಕೀಲರ ಸಂಘಕ್ಕೆ ನಾವು ಮನವಿ ಮಾಡಿಕೊಡಲು ಹೋದ ವೇಳೆ ನಮ್ಮ‌ ಮೇಲೆ ಹಲ್ಲೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಫೀಕ್‌ ಖಾನ್‌ ಎಂಬವರು ದೂರು ನೀಡಿದ್ದರು. ದೂರು ಸ್ವೀಕರಿಸಿ 40 ವಕೀಲರ ಮೇಲೆ ಐಜೂರು ಪಿಎಸ್ ಐ ತನ್ವೀರ್ ಎಫ್ಐಆರ್ ದಾಖಲಿಸಿದ್ದರು.

    ಗಲಾಟೆ ವೇಳೆ ಸ್ಥಳದಲ್ಲಿ ಇಲ್ಲದ ವಕೀಲರ ಮೇಲೂ ಸುಳ್ಳು ಎಫ್‌ಐಆರ್‌ ದಾಖಲು ಮಾಡಲಾಗಿದೆ ಎನ್ನುವುದು ವಕೀಲರ ವಾದ. ನಂತರ ಸುಳ್ಳು ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಆರೋಪಿಸಿ ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯದೇ ಇದ್ದಾಗ ಈಗ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರು ಪ್ರತಿಭಟನೆ ನಡೆಸಿದ್ದರು.

     

  • ವಕೀಲರು Vs ಪೊಲೀಸರು – ಫೇಸ್‌ಬುಕ್‌ ಪೋಸ್ಟ್‌ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?

    ವಕೀಲರು Vs ಪೊಲೀಸರು – ಫೇಸ್‌ಬುಕ್‌ ಪೋಸ್ಟ್‌ನಿಂದ ಅಹೋರಾತ್ರಿ ಧರಣಿಯವರೆಗೆ: ರಾಮನಗರದಲ್ಲಿ ಪ್ರತಿಭಟನೆ ಯಾಕೆ?

    ರಾಮನಗರ: ವಕೀಲರು (Lawyers) ಮತ್ತು ಪೊಲೀಸರ (Police) ಮಧ್ಯೆ ವಾರದಿಂದ ನಡೆಯುತ್ತಿರುವ ಪ್ರತಿಭಟನೆ (Protest) ಈಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಪ್ರತಿಭಟನೆಗೆ ಮೂಲ ಕಾರಣವಾಗಿದ್ದು ಒಂದು ಫೇಸ್‌ಬುಕ್‌ ಪೋಸ್ಟ್‌

    ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ (Gyanvapi Mosque) ನೆಲಮಹಡಿಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಎಸ್​ಡಿಪಿಐ ಕಾರ್ಯಕರ್ತ, ವಕೀಲ ಚಾಂದ್ ಪಾಷಾ ಅವಹೇಳನಕಾರಿಯಾಗಿ ಪೋಸ್ಟ್‌ ಹಾಕಿದ್ದ.

    ನ್ಯಾಯಾಧೀಶರ ವಿರುದ್ಧವೇ ಪೋಸ್ಟ್‌ ಹಾಕಿದ್ದಕ್ಕೆ ಹಿಂದೂಪರ ಕಾರ್ಯಕರ್ತರು ಎಸ್‌ಪಿ ಹಾಗೂ ವಕೀಲರ ಸಂಘಕ್ಕೆ ದೂರು ನೀಡಿದ್ದರು. ಈ ಸಂಬಂಧ ವಕೀಲ ಚಾನ್ ಪಾಷಾ ಮೇಲೆ ಎಫ್‌ಐಆರ್‌ ದಾಖಲಾಗಿ ಬಂಧಿಸಲಾಗಿತ್ತು.  ಇದನ್ನೂ ಓದಿ: ಕರ್ನಾಟಕ, ಜಮ್ಮು- ಕಾಶ್ಮೀರ ಸೇರಿ ದೇಶದ ವಿವಿಗಳ ಅಭಿವೃದ್ಧಿಗೆ 3600 ಕೋಟಿ ರೂ. ಬಿಡುಗಡೆ

    ನ್ಯಾಯಾಂಗ ನಿಂದನೆ ಮಾಡಿದ ಹಿನ್ನೆಲೆಯಲ್ಲಿ ಚಾನ್ ಪಾಷಾ ಮೇಲೆ ವಕೀಲರ ಸಂಘ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಈ ವೇಳೆ ಚಾನ್ ಪಾಷಾ ಬೆಂಬಲಿಗರು ವಕೀಲರ ಸಂಘಕ್ಕೆ ಭೇಟಿ ನೀಡಿ ಕ್ರಮ ಕೈಗೊಳ್ಳದಂತೆ ಮನವಿ ಮಾಡಿದ್ದರು.

     

    ಮನವಿ ನೀಡುವ ವೇಳೆ ವಕೀಲರ ಸಂಘದ ಆವರಣದಲ್ಲಿ ಚಾನ್ ಪಾಷಾ ಬೆಂಬಲಿಗರು ಹಾಗೂ ವಕೀಲರ ನಡುವೆ ಗಲಾಟೆ ನಡೆದಿದೆ. ಗಲಾಟೆ ಬಳಿಕ ಚಾನ್ ಪಾಷಾ ಬೆಂಬಲಿಗರ ವಿರುದ್ಧ ವಕೀಲರು ದೂರು ನೀಡಿದ್ದರು. ಈ ಸಂಬಂಧ ಎಫ್ಐಆರ್ ದಾಖಾಲಾಗಿತ್ತು. ನಂತರ ಚಾನ್ ಪಾಷಾ ಬೆಂಬಲಿಗರಿಂದ ಪ್ರತಿ ದೂರು ದಾಖಲಾಯಿತು.

    ವಕೀಲರ ಸಂಘಕ್ಕೆ ನಾವು ಮನವಿ ಮಾಡಿಕೊಡಲು ಹೋದ ವೇಳೆ ನಮ್ಮ‌ ಮೇಲೆ ಹಲ್ಲೆ, ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿ ರಫೀಕ್‌ ಖಾನ್‌ ಎಂಬವರು ದೂರು ನೀಡಿದ್ದರು. ದೂರು ಸ್ವೀಕರಿಸಿ 40 ವಕೀಲರ ಮೇಲೆ ಐಜೂರು ಪಿಎಸ್ ಐ ತನ್ವೀರ್ ಎಫ್ಐಆರ್ ದಾಖಲಿಸಿದ್ದಾರೆ. ಇದನ್ನೂ ಓದಿ: ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರ ಪ್ರತಿಭಟನೆ

    ಗಲಾಟೆ ವೇಳೆ ಸ್ಥಳದಲ್ಲಿ ಇಲ್ಲದ ವಕೀಲರ ಮೇಲೂ ಸುಳ್ಳು ಎಫ್‌ಐಆರ್‌ ದಾಖಲು ಮಾಡಲಾಗಿದೆ ಎನ್ನುವುದು ವಕೀಲರ ವಾದ. ನಂತರ ಸುಳ್ಳು ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಆರೋಪಿಸಿ ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ಪ್ರತಿಭಟಿಸಿದ್ದರು. ಈ ಪ್ರತಿಭಟನೆಗೆ ಸರ್ಕಾರದಿಂದ ಯಾವುದೇ ಸ್ಪಂದನೆ ದೊರೆಯದೇ ಇದ್ದಾಗ ಈಗ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರು ಪ್ರತಿಭಟನೆ ನಡೆಸುತ್ತಿದ್ದಾರೆ.

     

  • ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರ ಪ್ರತಿಭಟನೆ

    ಪಿಎಸ್‌ಐ ಅಮಾನತಿಗೆ ಆಗ್ರಹಿಸಿ ರಾಮನಗರದಲ್ಲಿ ಅಹೋರಾತ್ರಿ ಡಿಸಿ ಕಚೇರಿ ಮುಂದೆ ವಕೀಲರ ಪ್ರತಿಭಟನೆ

    – ಡಿಸಿ ಕಚೇರಿಗೆ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ
    –  ಡಿಸಿ, ಎಸ್‌ಪಿ ಸೇರಿ ಅಧಿಕಾರಿಗಳಿಗೆ ರಾಜಕೀಯ ಒತ್ತಡ ಇದೆ

    ರಾಮನಗರ: ಪೋಲಿಸರು (Police) ಮತ್ತು ವಕೀಲರ (Lawyers) ನಡುವಿನ ಸಂಘರ್ಷ ಮುಗಿಲುಮುಟ್ಟಿದೆ. 40 ವಕೀಲರ ಮೇಲೆ ಎಫ್‌ಐಆರ್ (FIR) ಖಂಡಿಸಿ ಕಳೆದೊಂದು ವಾರದಿಂದ ವಕೀಲರ ಸಂಘ ಮಾಡುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ.

    ಐಜೂರು ಠಾಣೆ ಪಿಎಸ್‌ಐ ತನ್ವೀರ್ ಹುಸೇನ್ ಅಮಾನತಿಗೆ ಪಟ್ಟು ಹಿಡಿದು ರಾಮನಗರದಲ್ಲಿ (Ramanagara) ಪ್ರತಿಭಟನಾ ಮೆರವಣಿಗೆ ಮಾಡಿದ ಸಾವಿರಾರು ವಕೀಲರು ಸೋಮವಾರ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಇದನ್ನೂ ಓದಿ: ಮಾರ್ಚ್‌ ತಿಂಗಳಲ್ಲಿ ತಮಿಳುನಾಡು ಸರ್ಕಾರಕ್ಕೆ ಜಯಲಲಿತಾ ಒಡವೆ ಹಸ್ತಾಂತರ: ಕೋರ್ಟ್‌ನಿಂದ ದಿನಾಂಕ ನಿಗದಿ

    ಪ್ರತಿಭಟನೆಗೆ ಜಿಲ್ಲಾಧಿಕಾರಿ ಅವಿನಾಶ್ ಮೆನನ್ ಮತ್ತು ಪೊಲೀಸ್‌ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಬಗ್ಗದ ಹಿನ್ನೆಲೆಯಲ್ಲಿ ಅಹೋರಾತ್ರಿ ಡಿಸಿ ಕಚೇರಿಯ ಎರಡೂ ಗೇಟ್‌ಗೆ ಬೀಗ ಜಡಿದು ಹಾಸಿಗೆ ಹಾಸಿ ವಕೀಲರು ಮಲಗಿ ಪ್ರತಿಭಟಿಸಿದ್ದಾರೆ.  ಇದನ್ನೂ ಓದಿ: ರಾಮನಗರ ಎಸ್ಪಿಯನ್ನ ಸಸ್ಪೆಂಡ್ ಮಾಡಿ – ವಕೀಲರ ಬೆಂಬಲಕ್ಕೆ ನಿಂತ ಹೆಚ್‌ಡಿಕೆ

    ತನಿಖೆ ಮಾಡಿ ಕ್ರಮ ಕೈಗೊಳ್ತೇವೆ ಎಂದ ಡಿಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ವಕೀಲರು, ಡಿಸಿ, ಎಸ್‌ಪಿ ಸೇರಿ ಅಧಿಕಾರಿಗಳಿಗೆ ರಾಜಕೀಯ ಒತ್ತಡ ಇದೆ. ಡಿಸಿಎಂ ಡಿಕೆ ಶಿವಕುಮಾರ್‌, ಡಿ.ಕೆ.ಸುರೇಶ್, ಶಾಸಕ ಇಕ್ಬಾಲ್ ಹುಸೇನ್ ಒತ್ತಡಕ್ಕೆ ಮಣಿದಿದ್ದಾರೆ. ಈ ಕಾರಣಕ್ಕೆ ವಿಧಾನಸೌಧ ಚಲೋಗೆ ಕರೆ ನೀಡುತ್ತಿದ್ದೇವೆ. ಈ ವೇಳೆ ಏನೇ ತೊಂದರೆ ಆದರೂ ರಾಮನಗರ ಜಿಲ್ಲಾಡಳಿತ ಹೊಣೆ ಎಂದು ವಕೀಲರ ಪರಿಷತ್ ಅಧ್ಯಕ್ಷ ವಿಶಾಲ್ ರಘು ಎಚ್ಚರಿಕೆ ನೀಡಿದ್ದಾರೆ.

     

    ಮೈತ್ರಿ ನಾಯಕರು ಸಾಥ್‌
    ರಾಮನಗರದಲ್ಲಿ ವಕೀಲರ ಪ್ರತಿಭಟನೆಗೆ ಮೈತ್ರಿ ನಾಯಕರಾದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಮತ್ತು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ (R Ashok) ಸಾಥ್‌ ನೀಡಿದ್ದಾರೆ. ಡಿಕೆ ಬ್ರದರ್ಸ್ (DK Brothers) ವಿರುದ್ಧ ಪರೋಕ್ಷವಾಗಿ ಎಚ್‌ಡಿಕೆ ವಾಗ್ದಾಳಿ ನಡೆಸಿ ಸದನದಲ್ಲಿ ಮಂಗಳವಾರ ಈ ವಿಷಯದ ಬಗ್ಗೆ ಚರ್ಚೆ ನಡೆಸುವುದಾಗಿ ಹೇಳಿದ್ದಾರೆ. ಇನ್ನು ದೊಡ್ಡ ಮಟ್ಟದಲ್ಲಿ ಪ್ರತಿಭಟನೆ ಮಾಡುವಂತೆ ಅಶೋಕ್ ಕರೆ ನೀಡಿದ್ದಾರೆ.

    ವಕೀಲರ ಪ್ರತಿಭಟನೆ ಯಾಕೆ?
    ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿ ನೆಲಮಹಡಿಯಲ್ಲಿ ಪೂಜೆ ಸಲ್ಲಿಸಲು ತೀರ್ಪು ನೀಡಿದ ವಾರಾಣಸಿ ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್​ ಹಾಕಿದ್ದ ಎಸ್​ಡಿಪಿಐ ಕಾರ್ಯಕರ್ತ, ವಕೀಲ ಚಾಂದ್ ಪಾಷಾ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.

    ವಕೀಲ ಚಾಂದ್‌ ಪಾಷಾ ಪ್ರಕರಣವು ಕೋಮು ಸ್ವರೂಪ ಪಡೆದು ವಕೀಲರ ಎರಡು ಬಣಗಳ ನಡುವೆ ಘರ್ಷಣೆಗೆ ಕಾರಣವಾಗಿತ್ತು. ನಂತರ ಚಾಂದ್ ಪಾಷಾರ ಕಡೆಯೊಬ್ಬರು ನೀಡಿದ್ದದೂರಿನ ಆಧಾರದ ಮೇಲೆ ಐಜೂರು ಪೊಲೀಸರು ವಕೀಲರ ಸಂಘದ 40 ವಕೀಲರ ವಿರುದ್ಧ ಎಫ್​ಐಆರ್​ ದಾಖಲಿಸಿದ್ದರು. ಈ ಎಫ್‌ಐಆರ್‌ ರದ್ದುಗೊಳಿಸಬೇಕು ಮತ್ತು ಪಿಎಸ್‌ಐ ತನ್ವೀರ್ ಹುಸೇನ್ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ವಕೀಲರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

     

  • ಆ್ಯಸಿಡ್ ನಾಗನ ಪರ ವಾದಿಸಲು ಮುಂದೆ ಬರುತ್ತಿಲ್ಲ ವಕೀಲರು

    ಆ್ಯಸಿಡ್ ನಾಗನ ಪರ ವಾದಿಸಲು ಮುಂದೆ ಬರುತ್ತಿಲ್ಲ ವಕೀಲರು

    ಬೆಂಗಳೂರು: ಪ್ರೀತಿ ಮಾಡಲು ಒಪ್ಪದ ಯುವತಿಯ ಮೇಲೆ ಆ್ಯಸಿಡ್ (Acid) ಹಾಕಿದ್ದ ಸೈಕೋಪಾತ್ ನಾಗ ಅಲಿಯಾಸ್‌ ನಾಗೇಶ್‌ (Nagesh) ಪರ ವಕಾಲತ್ತು ವಹಿಸಿಕೊಳ್ಳಲು ವಕೀಲರು ಮುಂದೆ ಬರುತ್ತಿಲ್ಲ.

    ನಾಗನ ವಿರುದ್ಧ ದೋಷಾರೋಪ ಪಟ್ಟಿ (Chargesheet) ಈಗಾಗಲೇ ಸಲ್ಲಿಕೆಯಾಗಿದೆ. ಆರೋಪ ಸಾಬೀತಾಗಬೇಕಾದರೆ ನ್ಯಾಯಾಲಯದಲ್ಲಿ(Court) ವಿಚಾರಣೆ ನಡೆಯಬೇಕು. ಇದನ್ನೂ ಓದಿ: ರಾಹುಲ್‌ ಬಾಬಾ ಕೇಳಿ, 2024ರ ಜ.1ಕ್ಕೆ ರಾಮ ಮಂದಿರ ಲೋಕಾರ್ಪಣೆ: ಅಮಿತ್‌ ಶಾ

     

    ವಕೀಲರು ಸಿಗದ ಕಾರಣ ಆರೋಪ ಸಾಬೀತಾಗದೇ ಪ್ರಕರಣ ಮುಂದಕ್ಕೂ ಹೋಗದೇ ಜೈಲಿನಲ್ಲಿಯೇ ನಾಗ ದಿನ ಕಳೆಯುತ್ತಿದ್ದಾನೆ. ಈಗ ಸರ್ಕಾರದಿಂದ ಉಚಿತವಾಗಿ ಸಿಗುವ ವಕೀಲರಿಗಾಗಿ ನಾಗ ಎದುರು ನೋಡುತ್ತಿದ್ದಾನೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನೀವು ಮಮತಾ ಬ್ಯಾನರ್ಜಿ ಏಜೆಂಟ್‌, ಇಲ್ಲಿಂದ ತೊಲಗಿ: ಚಿದಂಬರಂ ವಿರುದ್ಧ ಕಾಂಗ್ರೆಸ್‌ ಮುಖಂಡರು, ವಕೀಲರ ಆಕ್ರೋಶ

    ನೀವು ಮಮತಾ ಬ್ಯಾನರ್ಜಿ ಏಜೆಂಟ್‌, ಇಲ್ಲಿಂದ ತೊಲಗಿ: ಚಿದಂಬರಂ ವಿರುದ್ಧ ಕಾಂಗ್ರೆಸ್‌ ಮುಖಂಡರು, ವಕೀಲರ ಆಕ್ರೋಶ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ ಪರ ವಕಾಲತು ವಹಿಸಲು ಮುಂದಾಗಿ ವಕೀಲರು ಹಾಗೂ ತಮ್ಮ ಪಕ್ಷದ ಕಾರ್ಯಕರ್ತರಿಂದಲೇ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ಮುಖಭಂಗ ಅನುಭವಿಸಿದ ಘಟನೆ ನಡೆದಿದೆ.

    ನೀವು ಮಮತಾ ಬ್ಯಾನರ್ಜಿ ಅವರ ಏಜೆಂಟ್‌. ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ನಿಮ್ಮ ಕಳಪೆ ಪ್ರದರ್ಶನದಿಂದಾಗಿಯೇ ಕಾಂಗ್ರೆಸ್‌ ನೆಲಕಚ್ಚಿತು. ವಾಪಸ್‌ ಹೋಗಿ ಎಂದು ಚಿದಂಬರಂ ವಿರುದ್ಧ ಘೋಷಣೆ ಕೂಗಿ ಕಪ್ಪು ಪಟ್ಟಿ ಪ್ರದರ್ಶಿಸಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ರಕ್ಷಾಕವಚ ಭೇದಿಸುತ್ತಿವೆ ಭಯೋತ್ಪಾದಕರ ಬುಲೆಟ್‌ – ಹೊಸ ಬುಲೆಟ್‌ಪ್ರೂಫ್‌ ಜಾಕೆಟ್‌ ಬೇಕೆಂದ ಭಾರತೀಯ ಸೇನೆ

    ಪಶ್ಚಿಮ ಬಂಗಾಳ ಸರ್ಕಾರದ ಮೆಟ್ರೋ ಡೈರಿ ಷೇರುಗಳನ್ನು ಖಾಸಗಿ ಕಂಪನಿಗಳಿಗೆ ಮಾರಾಟ ಮಾಡುವ ನಿರ್ಧಾರದ ವಿರುದ್ಧ ಬಂಗಾಳ ಕಾಂಗ್ರೆಸ್‌ ಅಧ್ಯಕ್ಷ ಅಧೀರ್‌ ಚೌಧರಿ ಕೋರ್ಟ್‌ ಮೆಟ್ಟಿಲೇರಿದ್ದಾರೆ. ಕಾಂಗ್ರೆಸ್‌ ಹಿರಿಯ ನಾಯಕ ಚಿದಂಬರಂ ಅವರು ತಮ್ಮದೇ ಪಕ್ಷದ ಚೌಧರಿ ವಿರುದ್ಧ ಮಮತಾ ಬ್ಯಾನರ್ಜಿ ಸರ್ಕಾರದ ಪರ ವಾದಿಸುತ್ತಿದ್ದಾರೆ. ಸ್ವತಃ ವಕೀಲರೂ ಆಗಿರುವ ಚಿದಂಬರಂ ಅವರು ಲಾಯರ್ ಕೋಟ್‌ ಧರಿಸಿ ಕೋಲ್ಕತ್ತಾ ಹೈಕೋರ್ಟ್‌ಗೆ ಆಗಮಿಸಿದ್ದರು.‌ ವಾದ ವಿವಾದ ಬಳಿಕ ಕೋರ್ಟ್‌ನಿಂದ ನಿರ್ಗಮಿಸುವ ವೇಳೆ ಕಾಂಗ್ರೆಸ್‌ ವಕೀಲರು ಹಾಗೂ ನಾಯಕರು ಚಿದಂಬರಂ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

    ರಾಜ್ಯದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಲೂಟಿ ಮಾಡಿದೆ. ನೀವು ಟಿಎಂಸಿಯನ್ನು ಉಳಿಸುತ್ತಿದ್ದೀರಿ. ನಿಮ್ಮಂತಹ ನಾಯಕರಿಂದ ನಾವು ಪಶ್ಚಿಮ ಬಂಗಾಳದಲ್ಲಿ ಬಳಲುತ್ತಿದ್ದೇವೆ. ನಿಮ್ಮಂತಹ ಜನರಿಂದ ಬಂಗಾಳದಲ್ಲಿ ಕಾಂಗ್ರೆಸ್ ಪಕ್ಷವು ನರಳುತ್ತಿದೆ. ನೀವು ಮಮತಾ ಬ್ಯಾನರ್ಜಿ ಏಜೆಂಟ್‌, ಇಲ್ಲಿಂದ ತೊಲಗಿ ಎಂದು ಚಿದಂಬರಂ ವಿರುದ್ಧ ಪ್ರತಿಭಟನಾಕಾರರು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ಪಠಿಸಿದ್ದಕ್ಕೆ ಬಂಧಿಸುವುದು ಸರ್ಕಾರದ ಮುರ್ಖತನ: ಫಡ್ನವೀಸ್

    ಇದೊಂದು ಸ್ವತಂತ್ರ ದೇಶ. ನನ್ನ ಬಳಿ ಯಾವುದೇ ಕಾಮೆಂಟ್‌ಗಳಿಲ್ಲ. ನಾನು ಈ ಬಗ್ಗೆ ಏಕೆ ಪ್ರತಿಕ್ರಿಯಿಸಬೇಕು ಎಂದು ಪ್ರತಿಭಟನೆ ಕುರಿತು ಚಿದಂಬರಂ ಅವರು ಪಿಟಿಐ ಸುದ್ದಿಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.

  • ಉತ್ತರ ಪ್ರದೇಶದ ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ

    ಉತ್ತರ ಪ್ರದೇಶದ ಸರ್ಕಾರಿ ನೌಕರರು, ವಕೀಲರಿಗೆ 1 ರೂ.ಗೆ ಸಿಗಲಿದೆ ಮನೆ

    ಲಕ್ನೋ: ಸರ್ಕಾರಿ ನೌಕರರು ಹಾಗೂ ವಕೀಲರಿಗೆ 1 ರೂ.ನಲ್ಲಿ ಮನೆಯನ್ನು ಒದಗಿಸಲು ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.

    2022ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೂ ಮುನ್ನ ಉತ್ತರ ಪ್ರದೇಶ ಸರ್ಕಾರ ರಾಜ್ಯದ ಜನತೆಗೆ ಸಿಹಿ ಸುದ್ದಿಯನ್ನು ನೀಡುತ್ತಿದ್ದು, ಈಗ ಸರ್ಕಾರಿ ನೌಕರರು ಹಾಗೂ ವಕೀಲರ ಸರದಿ ಬಂದಿದೆ.

    ಯೋಗಿ ಆದಿತ್ಯನಾಥ್ ಸರ್ಕಾರದ ಹೊಸ ಯೋಜನೆಯಡಿ, ಗ್ರೂಪ್ ಸಿ ಮತ್ತು ಡಿ ವರ್ಗದ ಸರ್ಕಾರಿ ನೌಕರರು ಮತ್ತು ವಕೀಲರಿಗೆ ಸಹಾಯಧನದ ಮೇಲೆ ಮನೆಗಳನ್ನು ನೀಡಲು ಮುಂದಾಗಿದೆ. ಮನೆ ಖರೀದಿಸುವ ಮಂದಿ ಭೂಮಿ ಶುಲ್ಕವಾಗಿ 1 ರೂಪಾಯಿ ನೀಡಬೇಕಾಗುತ್ತದೆ. ಇದನ್ನೂ ಓದಿ: ನಿರಾಣಿ ಸಿಎಂ ಆಗುವ ಅವಕಾಶವಿದೆ ಅನ್ನೋ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ: ವಿಜಯೇಂದ್ರ

    ಇನ್ನೂ ಈ ಯೋಜನೆ ಅಧಿಕೃತವಾಗಿ ಜಾರಿಯಾಗಿಲ್ಲ. 1 ರೂ.ಗೆ ಯಾವ ರೀತಿ ಮನೆಗಳನ್ನು ನೀಡಬಹುದು ಎಂಬುದರ ಬಗ್ಗೆ ಹಿರಿಯ ಅಧಿಕಾರಿಗಳು ಕರಡನ್ನು ತಯಾರಿ ಮಾಡಿದ್ದಾರೆ. ಈ ಕರಡಿಗೆ ಉನ್ನತ ಮಟ್ಟದಲ್ಲಿ ಅನುಮೋದನೆ ಸಿಕ್ಕಿದ ಬಳಿಕ ಕ್ಯಾಬಿನೆಟ್‍ನಲ್ಲಿ ಒಪ್ಪಿಗೆ ಪಡೆದು ಯೋಜನೆ ಜಾರಿಯಾಗಲಿದೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಈ ಯೋಜನೆಯಲ್ಲಿ ಮನೆ ಖರೀದಿಸುವ ಮಂದಿಗೆ ಹಲವು ಷರತ್ತುಗಳನ್ನು ವಿಧಿಸಲಾಗುತ್ತದೆ. ಇದರಲ್ಲಿ ಮುಖ್ಯವಾಗಿ ಖರೀದಿಸಿದ ಮನೆಯನ್ನು 10 ವರ್ಷಗಳವರೆಗೆ ಮಾರಾಟ ಮಾಡಬಾರದು ಎಂಬ ಷರತ್ತನ್ನು ಇರಲಿದೆ ಎನ್ನಲಾಗುತ್ತದೆ.

    ಗ್ರೂಪ್ ಸಿ ಮತ್ತು ಡಿ ವರ್ಗದ ಸರ್ಕಾರಿ ನೌಕರರ ಸಂಬಳ ಕಡಿಮೆಯಿದೆ. ಹಲವರ ಬಳಿ ಮನೆ ಇಲ್ಲದ ಹಿನ್ನೆಲೆಯಲ್ಲಿ ಸರ್ಕಾರ ಚುನಾವಣಾ ಸಮಯದಲ್ಲೇ ಈ ಮಹತ್ವದ ಯೋಜನೆಯನ್ನು ಜಾರಿಗೊಳಿಸಲು ಮುಂದಾಗಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ – ಭಾರತದ ಅಂತರರಾಷ್ಟ್ರೀಯ ವಿಮಾನ ಪುನರಾರಂಭ ಮುಂದೂಡಿಕೆ

    ಈ ಯೋಜನೆ ಕುರಿತು ಅಧಿಕಾರಿ ಮತ್ತು ಸರ್ಕಾರದ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಶೀಘ್ರವೇ ಕ್ಯಾಬಿನೆಟ್‍ನಲ್ಲಿ ಯೋಜನೆಗೆ ಒಪ್ಪಿಗೆ ಸಿಗುವ ಸಾಧ್ಯತೆಯಿದೆ.

     

  • ಆ.14 ರಂದು ಚಿಕ್ಕೋಡಿಯಲ್ಲಿ ಬೃಹತ್ ಲೋಕ ಅದಾಲತ್

    ಆ.14 ರಂದು ಚಿಕ್ಕೋಡಿಯಲ್ಲಿ ಬೃಹತ್ ಲೋಕ ಅದಾಲತ್

    ಚಿಕ್ಕೋಡಿ: ಆಗಸ್ಟ್ 14 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಬೃಹತ್ ಲೋಕ ಅದಾಲತ್ ನಡೆಯಲಿದೆ. ಈ ಲೋಕ ಅದಾಲತ್‍ನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಿ ಎಂದು ಏಳನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಲ್ ಚವ್ಹಾಣ್ ಅವರು ಕರೆ ನೀಡಿದ್ದಾರೆ.

    ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಆಗಸ್ಟ್ 14 ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಬೃಹತ್ ಲೋಕ ಅದಾಲತ್ ನಡೆಯಲಿದೆ.

    ಈ ಕುರಿತು ಜಿಲ್ಲಾ ನ್ಯಾಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಚವ್ಹಾಣ್ ಅವರು, ಕೋವಿಡ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ಕೋರ್ಟ್ ಕಲಾಪಗಳು ನಡೆಯದೇ ಅನೇಕ ವ್ಯಾಜ್ಯಗಳು ಇತ್ಯರ್ಥ ಆಗದೇ ಉಳಿದುಕೊಂಡಿವೆ. ಹೀಗಾಗಿ ಲೋಕ ಅದಾಲತ್, ನೆನೆಗುದಿಗೆ ಬಿದ್ದಿರುವ ವ್ಯಾಜ್ಯಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ. ಲೋಕ ಅದಾಲತ್ ಮೂಲಕ ಸಾರ್ವಜನಿಕರು, ಕಕ್ಷಿದಾರರು, ಬ್ಯಾಂಕ್ ಮತ್ತು ವಿವಿಧ ಸಂಸ್ಥೆಗಳು ತಮ್ಮ ವ್ಯಾಜ್ಯಗಳಿಂದ ರಾಜೀಯಾಗಬಹುದು ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ದೇಶದ್ರೋಹ ಕಾನೂನು ಈಗಲೂ ಅಸ್ತಿತ್ವದಲ್ಲಿರಬೇಕೆ? – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ

    ಲೋಕ ಅದಾಲತ್‍ನಲ್ಲಿ ವ್ಯಾಜ್ಯ ಪೂರ್ವ ಹಾಗೂ ಬಾಕಿ ಇರುವ ಪ್ರಕರಣಗಳನ್ನು ಅಂದರೆ ಚೆಕ್ ಅಮಾನ್ಯ ಪ್ರಕರಣ, ವಾಹನ ಅಪಘಾತ ಪರಿಹಾರ, ಸಾಲ ವಸೂಲಾತಿ, ಕೌಟುಂಬಿಕ ಮತ್ತು ಜೀವನಾಂಶ (ವಿಚ್ಛೇದನ ಹೊರತುಪಡಿಸಿ) ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಗೊಳಿಸಿ ಪರಿಹಾರ ಪಡೆದುಕೊಳ್ಳಲು ಅದಾಲತ್ ಒಂದು ಸುವರ್ಣ ಅವಕಾಶ ಆಗಿರುತ್ತದೆ. ಸಾರ್ವಜನಿಕರು ಲೋಕ ಅದಾಲತ್ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಟಿ.ಶ್ರೀಕಾಂತ್, ವಿಜಯ ಕುಮಾರ್ ಬಾಗಡೆ, ಆಶೋಕ ಆರ್.ಎಚ್, ನಾಗರ ಪಾಟೀಲ್, ಸರಕಾರಿ ಅಭಿಯೋಜಕ ವೈ.ಜಿ.ತುಂಗಳ, ಎಜೆಪಿ ಆರ್.ಐ.ಖೋತ, ಎಲ್.ವಿ.ಬೋರನ್ನವರ ಭಾಗಿಯಾಗಿದ್ದರು.

  • ಮಂಗಳೂರು ವಕೀಲರ ಸಂಘದಿಂದ 500ಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನ್

    ಮಂಗಳೂರು ವಕೀಲರ ಸಂಘದಿಂದ 500ಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನ್

    ಮಂಗಳೂರು: ಜಿಲ್ಲಾ ಆರೋಗ್ಯ ಇಲಾಖೆ ಹಾಗೂ ಜಿಲ್ಲಾಡಳಿತದ ಸಹಯೋಗದಲ್ಲಿ ಮಂಗಳೂರು ವಕೀಲರ ಸಂಘದಿಂದ ಇಂದು ಬೃಹತ್ ಲಸಿಕಾ ಅಭಿಯಾನ ನಡೆಯಿತು. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮುರಳೀಧರ ಪೈ ಅವರ ಮಾರ್ಗದರ್ಶನದಲ್ಲಿ ಬೃಹತ್ ಲಸಿಕಾ ಅಭಿಯಾನ ನಡೆಸಲಾಯಿತು.

    ನಗರದ ನ್ಯಾಯಾಲಯ ಸಂಕೀರ್ಣದಲ್ಲಿ ನಡೆದ ನಾಲ್ಕನೇ ಅಭಿಯಾನ ಇದಾಗಿದ್ದು, ದೊಡ್ಡ ಸಂಖ್ಯೆಯಲ್ಲಿ ಫಲಾನುಭವಿಗಳು ಲಸಿಕೆ ಪಡೆದರು. 18 ವಯಸ್ಸಿನ ಮೇಲ್ಪಟ್ಟ ವಕೀಲರಿಗೆ, 45 ವರ್ಷ ಮೇಲ್ಪಟ್ಟ ವಕೀಲರಿಗೆ ಇದುವರೆಗೆ ಲಸಿಕಾ ಅಭಿಯಾನ ಯಶಸ್ವಿಯಾಗಿ ನಡೆದಿತ್ತು. ಈ ಬಾರಿ ವಕೀಲರ ಕುಟುಂಬ ಸದಸ್ಯರು ಮತ್ತು ವಕೀಲರ ಕಚೇರಿ ಸಿಬ್ಬಂದಿಗೆ ಲಸಿಕೆ ನೀಡಲು ಅವಕಾಶ ಒದಗಿಸಲಾಗಿತ್ತು.

    ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸತತವಾಗಿ ಲಸಿಕೆ ನೀಡಲಾಗಿದ್ದು, 500ಕ್ಕೂ ಅಧಿಕ ಮಂದಿ ವಕೀಲರು, ಕುಟುಂಬಸ್ಥರು ಮತ್ತು ಸಿಬ್ಬಂದಿಗೆ ಲಸಿಕೆ ನೀಡಲಾಯಿತು. ಈ ಲಸಿಕಾ ಅಭಿಯಾನದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅವಿರತವಾಗಿ ಭಾಗವಹಿಸಿದ್ದರು. ವಕೀಲರ ಸಂಘದ ಅಧ್ಯಕ್ಷ ಎನ್.ನರಸಿಂಹ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಎಚ್.ವಿ.ರಾಘವೇಂದ್ರ, ಖಜಾಂಚಿ ಅರುಣಾ ಬಿ.ಪಿ., ಕಾರ್ಯದರ್ಶಿ ಶರ್ಮಿಳಾ ಇದ್ದರು.

  • ಜ. 27ರಂದು ಬೆಳಗ್ಗೆಯೇ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಿಂದ ಬಿಡುಗಡೆ

    ಜ. 27ರಂದು ಬೆಳಗ್ಗೆಯೇ ಜಯಲಲಿತಾ ಆಪ್ತೆ ಶಶಿಕಲಾ ಜೈಲಿನಿಂದ ಬಿಡುಗಡೆ

    ಬೆಂಗಳೂರು: ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮಾಜಿ ನಾಯಕಿ ಹಾಗೂ ದಿವಂಗತ ಜಯಲಲಿತಾ ಆಪ್ತೆ ವಿ.ಕೆ ಶಶಿಕಲಾ ಜನವರಿ 27 ರಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾಗಲಿದ್ದಾರೆ ಎಂದು ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ.

    2014 ರಲ್ಲಿ ಅಪಾರ ಸಂಪತ್ತು, ಅಕ್ರಮ ಆಸ್ತಿ ಹೊಂದಿರುವುದಕ್ಕಾಗಿ ಸುಪ್ರಿಂಕೋರ್ಟ್ ಮೆಟ್ಟಿಲೇರಿದ ಈ ವಿಚಾರವಾಗಿ ದಿವಂಗತ ಜೆ. ಜಯಲಲಿತಾ ಸೇರಿದಂತೆ ನಾಲ್ವರಿಗೆ ಶಿಕ್ಷೆ ವಿಧಿಸಲಾಗಿತ್ತು. ಇದೀಗ ಪರಪ್ಪನ ಅಗ್ರಹಾರದಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಶಿಕಲಾ, ಜನವರಿ 27 ರಂದು ಬಿಡುಗಡೆಯಾಗಲಿದ್ದಾರೆ ಎಂದು ಶಶಿಕಲಾ ಪರ ವಕೀಲ ಎನ್ ರಾಜಾ ಸೆಂಥೂರ್ ಪಾಂಡಿಯನ್ ತಿಳಿಸಿದ್ದಾರೆ.

    2017 ರಲ್ಲಿ ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ 2017 ಫೆಬ್ರವರಿ 15 ರಂದು ಶಶಿಕಲಾ ಕಾರಾಗೃಹ ಅಧಿಕಾರಿಗಳ ಎದುರು ಹಾಜರಾಗಿದ್ದರು. ಈ ವೇಳೆ ಶಶಿಕಲಾ ನೀಡಬೇಕಾದ ದಂಡವನ್ನು ನೀಡಿದರೆ ಇದೇ ತಿಂಗಳ 27 ರಂದು ಬಿಡುಗಡೆ ಮಾಡುತ್ತೆವೆ ಎಂದು ನ್ಯಾಯಾಲಯ ತಿಳಿಸಿತ್ತು. ಅದರಂತೆ ಅವರ ಕುಟುಂಬ 10 ಕೋಟಿ ರೂಪಾಯಿಗಳನ್ನು ನ್ಯಾಯಾಲಯಕ್ಕೆ ನೀಡಿದೆ ಎಂದು ತಿಳಿಸಿದ್ದಾರೆ.

    ನಾಲ್ಕು ವರ್ಷಗಳ ನಂತರ ಬಿಡುಗಡೆಯಾಗಿ ಬರುತ್ತಿರುವ ಶಶಿಕಲಾ ಅವರಿಗೆ ಉಳಿದುಕೊಳ್ಳಲು ಅವರ ಕುಟುಂಬ ವ್ಯವಸ್ಥೆಯನ್ನು ಮಾಡಿದೆ. ಚೆನ್ನೈನಲ್ಲಿ 2 ಬಂಗಲೆಯನ್ನು ಈಗಾಗಲೇ ಹುಡುಕಿಟ್ಟಿದೆ ಎಂದು ತಿಳಿಸಿದ್ದಾರೆ.