Tag: Laxman Sawadi

  • ಹಿಂದೂ ದೇವಸ್ಥಾನ ಕೆಡವಿ ನಿರ್ಮಾಣವಾದ ಒಂದೇ ಒಂದು ಮಸೀದಿಯನ್ನೂ ಬಿಡೋದಿಲ್ಲ: ಈಶ್ವರಪ್ಪ

    ಹಿಂದೂ ದೇವಸ್ಥಾನ ಕೆಡವಿ ನಿರ್ಮಾಣವಾದ ಒಂದೇ ಒಂದು ಮಸೀದಿಯನ್ನೂ ಬಿಡೋದಿಲ್ಲ: ಈಶ್ವರಪ್ಪ

    ಚಿಕ್ಕೋಡಿ: ಹಿಂದೂ ದೇವಸ್ಥಾನಗಳನ್ನು ಕೆಡವಿ ಅದರ ಮೇಲೆ ಕಟ್ಟಿರುವ ಒಂದೇ ಒಂದು ಮಸೀದಿಯನ್ನೂ ಬಿಡುವುದಿಲ್ಲ ಎಂದು ಕೆ.ಎಸ್.ಈಶ್ವರಪ್ಪ ಎಚ್ಚರಿಕೆ ನೀಡಿದ್ದಾರೆ.

    KS ESHWARAPPA

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೆಲಸಂಗ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಳಲಿ ಮಸೀದಿ ಒಂದೇ ಅಲ್ಲ. ದೇಶದಲ್ಲಿ 36 ಸಾವಿರ ದೇವಸ್ಥಾನಗಳನ್ನ ಪುಡಿ ಮಾಡಿ ಮಸೀದಿಗಳನ್ನು ನಿರ್ಮಿಸಲಾಗಿದೆ. ದೇವಸ್ಥಾನಗಳ ಮೇಲೆ ಕಟ್ಟಿರುವ ಒಂದೇ ಒಂದು ಮಸೀದಿಯನ್ನೂ ಬಿಡುವುದಿಲ್ಲ. ಅಂತಹ ಮಸೀದಿಗಳನ್ನು ಒಡೆದು 36 ಸಾವಿರ ದೇವಸ್ಥಾನವನ್ನು ಮತ್ತೆ ಕಟ್ಟುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಹಿಜಬ್ ಧರಿಸಿ ಬಂದ ವಿದ್ಯಾರ್ಥಿನಿಯರು – ಕ್ಲಾಸ್ ಬಹಿಷ್ಕರಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

    ಈಗಾಗಲೇ ಸರ್ಕಾರದಿಂದ ಸರ್ವೆ ಕಾರ್ಯ ನಡೆಯುತ್ತಿದೆ. ಕಾಶಿಯಲ್ಲೂ ಸರ್ವೆ ಕಾರ್ಯ ಆರಂಭವಾಗಿದೆ. ಕಾನೂನು ಬದ್ಧವಾಗಿ ಕೋರ್ಟ್ ಆದೇಶ ಪಡೆದು ಎಲ್ಲವನ್ನೂ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ರಸ್ತೆ ಅಪಘಾತಕ್ಕೆ 5ರ ಮಗು ಬಲಿ – ಸಾವಿನ ಸಂಖ್ಯೆ 11ಕ್ಕೆ ಏರಿಕೆ

    ಇದೇ ವೇಳೆ ಪರಿಷತ್ ಚುನಾವಣೆ ಕುರಿತು ಮಾತನಾಡಿದ ಈಶ್ವರಪ್ಪ, ಲಕ್ಷ್ಮಣ ಸವದಿ ನನ್ನ ಆತ್ಮೀಯ ಸ್ನೇಹಿತ ಅವರು ಉಪಮುಖ್ಯಮಂತ್ರಿ ಆಗಲಿ ಎಂಬುದು ನನ್ನ ಆಸೆ. ಭಗವಂತ ಬಯಸಿದಾಗ ನಾನು ಮತ್ತೆ ಮಂತ್ರಿಯಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

  • ಏಪ್ರಿಲ್ 7ಕ್ಕೆ ಸಾರಿಗೆ ನೌಕರರ ಮುಷ್ಕರ – ರಾಜ್ಯಾದ್ಯಂತ ಬಸ್ ಬಂದ್

    ಏಪ್ರಿಲ್ 7ಕ್ಕೆ ಸಾರಿಗೆ ನೌಕರರ ಮುಷ್ಕರ – ರಾಜ್ಯಾದ್ಯಂತ ಬಸ್ ಬಂದ್

    ಬೆಂಗಳೂರು: ಆರನೇ ವೇತನ ಜಾರಿಗೆ ಆಗ್ರಹಿಸಿ ಏಪ್ರಿಲ್ ಏಳರಂದು ಸಾರಿಗೆ ಬಂದ್ ಗೆ ಕರೆ ಕೊಡಲಾಗಿದೆ. ಇಡೀ ರಾಜ್ಯಾದ್ಯಂತ ಬಸ್ ಗಳು ರಸ್ತೆಗಿಳಿಯಲ್ಲ ಎಂದು ಸಾರಿಗೆ ನೌಕರರು ಸರ್ಕಾರಕ್ಕೆ ಖಡಕ್ ವಾರ್ನಿಂಗ್ ನೀಡಿದ್ದಾರೆ. ಇತ್ತ ನೌಕರರಿಗೆ ಸೆಡ್ಡು ಹೊಡೆಯಲು ಸಚಿವರು ಖಾಸಗಿ ವಾಹನಗಳನ್ನು ಇಳಿಸುವ ಮಾಸ್ಟರ್ ಪ್ಲಾನ್ ಮಾಡಿದ್ದಾರೆ.

    ಏಪ್ರಿಲ್ 6 ರೊಳಗೆ 6 ನೇ ವೇತನ ಆಯೋಗ ಜಾರಿ ಆಗಬೇಕು ಇಲ್ಲದಿದ್ರೆ ಏಪ್ರಿಲ್ 7ರಂದು ಮುಷ್ಕರ ನಡೆಸುವುದಾಗಿ ಸರ್ಕಾರಕ್ಕೆ ಸಾರಿಗೆ ನೌಕರರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಇನ್ನೇನು ಪ್ರತಿಭಟನೆಗೆ ಒಂದು ದಿನವಷ್ಟೇ ಬಾಕಿ ಉಳಿದಿದ್ದು, ಈ ವಿಚಾರವಾಗಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಮಹತ್ವದ ಸುದ್ದಿಗೋಷ್ಟಿ ನಡೆಸಿದರು. ವೇತನ ಹೆಚ್ಚಳ ಮಾಡಲು ನೀತಿ ಸಂಹಿತೆ ಅಡ್ಡಿಯಿದೆ. ನೀತಿ ಸಂಹಿತೆ ಮುಗಿದ ಬಳಿಕ ವೇತನ ಹೆಚ್ಚಳ ಮಾಡುವ ಖಾತ್ರಿ ಕೊಡುತ್ತೇವೆ. ಚುನಾವಣಾ ಆಯೋಗ ಅದಕ್ಕೂ ಮುನ್ನ ಅನುಮತಿ ನೀಡಿದರೆ ಚರ್ಚಿಸಿ ಘೋಷಣೆ ಮಾಡ್ತೇವೆ. ಖಾಸಗಿ ಬಸ್ ನವರಿಗೆ ಸ್ಪಂದಿಸುವಂತೆ ಆಹ್ವಾನ ಕೊಟ್ಟಿದ್ದೇವೆ. ಮಿನಿ ಬಸ್, ಟೆಂಪೋ ಟ್ರಾವೆಲರ್ ಗಳನ್ನೂ ಬಳಸಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

    ಬಂದ್ ಬಗ್ಗೆ ಮಾತನಾಡಿದದ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್, ನಾವು ಸರ್ಕಾರಕ್ಕೆ ಮೂರೂವರೆ ತಿಂಗಳು ಗಡುವು ಕೊಟ್ಟಿದ್ದೇವು. ಅಂದಿನಿಂದ ಇಲ್ಲಿಯವರೆಗೂ ಸರ್ಕಾರಕ್ಕೆ ಕಾಲಾವಕಾಶ ಇತ್ತು. ಈಗ ಸರ್ಕಾರ ನೀತಿ ಸಂಹಿತೆ ನೆಪ ಹೇಳುತ್ತಿದೆ. ನಾಡಿದ್ದು ಬಸ್ ಬಂದ್ ಇದ್ದೇ ಇರುತ್ತೆ. ಕೊರೊನಾ ನಿಯಮಗಳನ್ನು ಮೀರಲ್ಲ. ಅಸಹಕಾರ ಚಳುವಳಿಯಂತೆ ಬಸ್ ನಿಲ್ಲಿಸಿ ಪ್ರತಿಭಟನೆ ನಡೆಸುತ್ತೇವೆ. ಕೊರೊನಾ ಕಡಿಮೆ ಇರೋ ಕಡೆ ಮುಷ್ಕರ ನಡೆಸಿ ಉಪವಾಸ ಕೈಗೊಳ್ಳತ್ತೇವೆ ಎಂದು ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.

    ಸಾರಿಗೆ ನೌಕರರ ಮುಷ್ಕರಕ್ಕೆ ಸೆಡ್ಡು ಹೊಡೆಯುವ ಸಲುವಾಗಿ ಖಾಸಗಿ ವಾಹನಗಳನ್ನ ರಸ್ತೆಗಿಳಿಸಲು ಸರ್ಕಾರ ಸಜ್ಜಾಗಿದೆ. ಹೀಗಾಗಿ ಇಂದು ಟ್ಯಾಕ್ಸಿ, ಮಿನಿ ಕ್ಯಾಬ್ ಮತ್ತು ಬಸ್ ಮಾಲೀಕರೊಂದಿಗೆ ಸಾರಿಗೆ ಸಚಿವರು ಚರ್ಚಿಸಿ ಸಭೆ ನಡೆಸಿದ್ದಾರೆ. ಈ ಹಿಂದೆ ಖಾಸಗಿ ವಾಹನಗಳ ಮಾಲೀಕರು ಸರ್ಕಾರದ ಮುಂದೆ ಇಟ್ಟಿದ್ದ ಆರು ಬೇಡಿಕೆಗಳನ್ನ ಈಡೇರಿಸುವ ಜೊತಗೆ ಒಂದು ತಿಂಗಳ ಟ್ಯಾಕ್ಸ್ ರಿಲ್ಯಾಕ್ಸ್ಲೇಷನ್ ನೀಡುವುದಾಗಿ ಭರವಸೆ ನೀಡಿದ್ದು, ಖಾಸಗಿ ವಾಹನಗಳನ್ನ ರಸ್ತೆಗೆ ಇಳಿಸುವಂತೆ ತಿಳಿಸಲಾಗಿದೆ. ಇದಕ್ಕೆ ಖಾಸಗಿ ವಾಹನಗಳ ಮಾಲೀಕರು ಒಪ್ಪಿಕೊಂಡಿದ್ದು ಮುಷ್ಕರದ ದಿನ ವಾಹನಗಳನ್ನ ರಸ್ತೆಗೆ ಇಳಿಸುವುದಾಗಿ ತಿಳಿಸಿದ್ದಾರೆ.

  • ಸಾರಿಗೆ ನೌಕರರ 10 ಬೇಡಿಕೆಯಲ್ಲಿ 9 ಈಡೇರಿಸುತ್ತೇವೆ: ಸವದಿ

    ಸಾರಿಗೆ ನೌಕರರ 10 ಬೇಡಿಕೆಯಲ್ಲಿ 9 ಈಡೇರಿಸುತ್ತೇವೆ: ಸವದಿ

    – ಸಿಬ್ಬಂದಿಗೆ ಧನ್ಯವಾದದ ಜೊತೆಗೆ ಮನವಿ

    ಬೆಂಗಳೂರು: ಸಾರಿಗೆ ನೌಕರರು ಹತ್ತು ಬೇಡಿಕೆಗಳನ್ನು ಇಟ್ಟಿದ್ದಾರೆ. ಇವಿಗಳಲ್ಲಿ ನಾವು 9 ಬೇಡಿಕೆಯನ್ನು ಈಡೇರಿಸುತ್ತೇವೆ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರನ್ನಾಗಿ ಮಾಡುವುದರಿಂದ ಸರ್ಕಾರಕ್ಕೆ ಬಹಳಷ್ಟು ಹಣಕಾಸಿನ ಹೊಡೆತ ಬರುತ್ತದೆ. 30 ರಿಂದ 40 ನಿಗಮಗಳಿವೆ, ಅವರೆಲ್ಲರೂ ಬೇಡಿಕೆ ಇಡುತ್ತಾರೆ. ಆಗ ಭಾರೀ ಪ್ರಮಾಣದ ಹಣಕಾಸಿನ ಹೊಡೆತ ಬಿದ್ದು ಅಭಿವೃದ್ಧಿಯು ನಿಂತು ಹೋಗುತ್ತದೆ. ಸರ್ಕಾರಿ ನೌಕರನ್ನಾಗಿ ಮಾಡುವುದು ಸಾಧ್ಯವಿಲ್ಲ ಎಂದರು.

    ಕೋಡಿಹಳ್ಳಿ ಚಂದ್ರಶೇಖರ್ ಅವರಿಗು ನಮಗೂ ಸಂಬಂಧ ಇಲ್ಲ. ನಾವು ನಮ್ಮ ಸಾರಿಗೆ ನೌಕರರೊಂದಿಗೆ ಚರ್ಚೆ ಮಾಡುತ್ತವೆ. ಈಗಾಗಲೇ ಅನೇಕ ಕಡೆಗಳಲ್ಲಿ ಬಸ್ ಪ್ರಾರಂಭವಾಗಿವೆ. ನಮ್ಮ ಸಾರಿಗೆ ನೌಕರರು ನಮ್ಮ ಮಾತಿಗೆ ಬೆಲೆ ಕೊಟ್ಟು ಪ್ರಾರಂಭಿಸಿದ್ದಾರೆ. ಹೀಗಾಗಿ ನಾನು ಅವರಿಗೆ ಅಭಿನಂದನೆ ಹೇಳುತ್ತೇನೆ. ಯಾರ ಮಾತಿಗೂ ಕಿವಿ ಕೊಡಬೇಡಿ ನಿಮ್ಮ ಕೆಲಸವನ್ನು ನೀವು ಕಾರ್ಯಾರಂಭ ಮಾಡಿ. ಸರ್ಕಾರ ನಿಮ್ಮ ಜೊತೆಗೆ ಇದೆ ಎಂದು ಸಾರಿಗೆ ಕಾರ್ಮಿಕರಲ್ಲಿ ಮನವಿ ಮಾಡಿದರು.

    ಮುಷ್ಕರವನ್ನು ವಾಪಸ್ ಪಡೆಯಬೇಕು ಎಂದು ನಿರ್ಧಾರ ಮಾಡಿರುವುದು ನನಗೆ ಮಾಧ್ಯಮದ ಮುಖಾಂತರ ತಿಳಿಯಿತು. ಅಧಿಕೃತವಾಗಿ ಘೋಷಣೆ ಮಾಡುವವರೆಗೆ ನಾನು ಯಾವುದೇ ಪ್ರತಿಕ್ರಿಯೆ ಕೊಡುವುದಿಲ್ಲ. ನಿನ್ನೆ ನಮ್ಮ ಹತ್ತಿರ ಬಂದು ವಾಪಸ್ ಪಡೆಯುತ್ತೇವೆ ಮುಷ್ಕರವನ್ನು ಎಂದು ಮಾತು ಕೊಟ್ಟು ಮತ್ತೆ ಮಾತು ಬದಲಾಯಿಸಿದ್ದಾರೆ. ನಾನು ಈ ವಿಷಯವಾಗಿ ಯಾವುದೇ ಹೇಳಿಕೆ ಕೊಡುವುದಾಗಲಿ ಅಥವಾ ಟೀಕೆ ಟಿಪ್ಪಣಿ ಮಾಡುವುದಾಗಲಿ ಮಾಡುವುದಿಲ್ಲ. 11 ಗಂಟೆಗೆ ಅವರ ನಿರ್ಧಾರವನ್ನು ಹೇಳುತ್ತೇವೆ ಎಂದು ಹೇಳಿದ್ದಾರೆ ಎಂದರು.

    ಎಸ್ಮಾ ಜಾರಿ ಮಾಡುವಂತ ಸಂದರ್ಭ ಬರುವುದಿಲ್ಲ. ಈ ಬ್ರಹ್ಮಾಸ್ತ್ರವನ್ನು ನಾವು ಉಪಯೋಗಿಸುವುದಿಲ್ಲ. ಕೋಡಿಹಳ್ಳಿ ಚಂದ್ರಶೇಖರ್ ಬಂದಿರುವುದು ರಾಜಕೀಯ ಪ್ರೇರಿತ ಎಂದು ಎಲ್ಲರಿಗೂ ಎನ್ನಿಸುತ್ತದೆ ಎಂದರು.

  • ಬಿಎಸ್‍ವೈ ಟಿಕೆಟ್ ಕೊಡಲ್ಲ, ನನ್ನ ದಾರಿ ನನಗೆ: ರಾಜು ಕಾಗೆ

    ಬಿಎಸ್‍ವೈ ಟಿಕೆಟ್ ಕೊಡಲ್ಲ, ನನ್ನ ದಾರಿ ನನಗೆ: ರಾಜು ಕಾಗೆ

    – ಕಾಂಗ್ರೆಸ್ ನಾಯಕರು ನನ್ನ ಜೊತೆ ಸಂಪರ್ಕದಲ್ಲಿದ್ದಾರೆ

    ಬೆಳಗಾವಿ(ಚಿಕ್ಕೋಡಿ): ಕಾಗವಾಡ ಮತ್ತು ಅಥಣಿ ಎರಡು ಮತಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಬಿಜೆಪಿಯ ಹಿರಿಯ ಮುಖಂಡ ರಾಜು ಕಾಗೆ ಅವರು ನೇರವಾಗಿಯೇ ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ.

    ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿ ನಾಯಕರ ವಿರುದ್ಧ ಬಹಿರಂಗವಾಗಿ ಹರಿಹಾಯ್ದಿದ್ದಾರೆ. ಸಿಎಂ ಯಡಿಯೂರಪ್ಪನವರು ನನಗೆ ಟಿಕೆಟ್ ಕೊಡುವದಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಹೀಗಾಗಿ ನನ್ನ ದಾರಿ ನಾನು ನೋಡಿಕೊಳ್ಳುತ್ತೇನೆ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು.

    ಹುಬ್ಬಳ್ಳಿಯಲ್ಲಿ ನಡೆದ ಬಿಜೆಪಿ ಸಭೆಯಲ್ಲಿ ಬಿಎಸ್‍ವೈ ನನಗೆ ಬಿಜೆಪಿ ಟಿಕೆಟ್ ಕೊಡಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಕಾಂಗ್ರೆಸ್ ನಾಯಕರು ನನ್ನ ಜೊತೆಯಲ್ಲಿ ನಿರಂತರ ಸಂಪರ್ಕದಲ್ಲಿದ್ದಾರೆ. ಆದರೆ ಸುಪ್ರೀಂ ಕೋರ್ಟ್ ತೀರ್ಪನ್ನು ಗಮನದಲ್ಲಿಟ್ಟುಕೊಂಡು ನಾನು ಮುಂದುವರಿಯುತ್ತೇನೆ. ಕೋರ್ಟ್ ತೀರ್ಪು ಅನರ್ಹರ ಪರವಾಗಿ ಬಂದರೆ, ನಾನು ಅಥಣಿಗೆ ಹೋಗಿ ಸ್ಪರ್ಧೆ ಮಾಡುತ್ತೇನೆ. ಅವರ ವಿರೋಧವಾಗಿ ಬಂದರೆ ನಾನು ಕಾಗವಾಡದಿಂದಲೇ ಸ್ಪರ್ಧೆ ಮಾಡುತ್ತೇನೆ ಎಂದು ರಾಜು ಕಾಗೆ ತಿಳಿಸಿದರು.

    ಡಿಸಿಎಂ ಲಕ್ಷ್ಮಣ ಸವದಿಯವರು ನಿಮಗೆ ಅಥಣಿ ಪ್ರವೇಶಕ್ಕೆ ಅವಕಾಶ ನೀಡ್ತಾರಾ ಎಂಬ ಪ್ರಶ್ನೆಗೆ ಉತ್ತರಿಸಿದ ರಾಜು ಕಾಗೆ, ರಾಜಕಾರಣದಲ್ಲಿ ಸ್ನೇಹಿತ, ಅಣ್ಣ, ತಮ್ಮ, ಮಾವ, ಅಳಿಯ ಯಾವುದು ಲೆಕ್ಕಕ್ಕೆ ಬರೋದಿಲ್ಲ. ನನ್ನ ಸ್ವಂತ ಸಹೋದರನೇ ನನ್ನ ವಿರುದ್ಧ ಒಂದು ಬಾರಿ ಚುಣಾವಣೆಯಲ್ಲಿ ಕೆಲಸ ಮಾಡಿದ್ದನು. ಹೀಗಾಗಿ ರಾಜಕಾರಣದಲ್ಲಿ ಯಾವುದೇ ಸಂಬಂಧ ಲೆಕ್ಕಕ್ಕೆ ಬರೋದಿಲ್ಲ. ಹೀಗಾಗಿ ಶ್ರೀಮಂತ ಪಾಟೀಲ್ ಅನರ್ಹರಾದರೆ ಕಾಗವಾಡದಲ್ಲಿ ಚುನಾವಣೆಗೆ ನಿಲ್ಲುತ್ತೇನೆ ಎಂದರು.

  • ನಾನು ಬಳ್ಳಾರಿ ಉಸ್ತುವಾರಿ ಕೇಳಿರುವೆ, ಹೊಸ ರಾಜ್ಯಪಾಲರು ಬಂದ್ಮೇಲೆ ನೇಮಕಾತಿ: ಶ್ರೀರಾಮುಲು

    ನಾನು ಬಳ್ಳಾರಿ ಉಸ್ತುವಾರಿ ಕೇಳಿರುವೆ, ಹೊಸ ರಾಜ್ಯಪಾಲರು ಬಂದ್ಮೇಲೆ ನೇಮಕಾತಿ: ಶ್ರೀರಾಮುಲು

    – ರಾಮ ಇದ್ದ ಕಡೆ ಲಕ್ಷ್ಮಣ ಬರುತ್ತಿದ್ದಾರೆ

    ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ಪಟ್ಟಿಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿ ಕೊಡಲಾಗಿದೆ. ಆದರೆ ಹೊಸ ರಾಜ್ಯಪಾಲರ ಆಗಮನವಾಗದ ಹಿನ್ನೆಲೆಯಲ್ಲಿ ಉಸ್ತುವಾರಿ ಸಚಿವರ ನೇಮಕಾತಿಯಾಗಿಲ್ಲವೆಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ.

    ಬಳ್ಳಾರಿಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಮ್ಸ್ ಆಸ್ಪತ್ರೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಿ ಮಾತನಾಡಿದ ಆರೋಗ್ಯ ಸಚಿವ ಶ್ರೀರಾಮುಲು, ನಾನು ಬಳ್ಳಾರಿ ಉಸ್ತುವಾರಿ ಕೇಳಿರುವೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿರುವೆ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತ. ಪಕ್ಷ ತಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಹೇಳಿದರು.

    ನಾನು ಬಳ್ಳಾರಿಯಿಂದ ಯಾವತ್ತೂ ದೂರವಾಗಿಲ್ಲ. ನಾನು ಯಾದಗಿರಿಯಲ್ಲಿ ಹೈದ್ರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಧ್ವಜಾರೋಹಣ ಮಾಡುತ್ತಿರುವೆ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಬಳ್ಳಾರಿಯಲ್ಲಿ ಧ್ವಜಾರೋಹಣ ಮಾಡುತ್ತಿದ್ದಾರೆ. ರಾಮ ಇದ್ದ ಕಡೆ ಲಕ್ಷ್ಮಣ ಬರುತ್ತಿದ್ದಾರೆ. ಇದಕ್ಕೆ ಬೇರೆಯ ಅರ್ಥ ಕಲ್ಪಿಸಬೇಕಾಗಿಲ್ಲವೆಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. ಅಲ್ಲದೇ ಪ್ರವಾಹ ಪರಿಸ್ಥಿತಿ ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿಲ್ಲ. ಅಭಿವೃದ್ಧಿ ವಿಷಯದಲ್ಲಿ ಕುಂಠಿತ ಆಗಿಲ್ಲವೆಂದು ಶ್ರೀರಾಮುಲು ಹೇಳಿದರು.