Tag: Leaders

  • ದಲಿತರ ಮನೆಯಲ್ಲಿ ಬಿಜೆಪಿ ನಾಯಕರಿಂದ ಸಹಪಂಕ್ತಿ ಭೋಜನ

    ದಲಿತರ ಮನೆಯಲ್ಲಿ ಬಿಜೆಪಿ ನಾಯಕರಿಂದ ಸಹಪಂಕ್ತಿ ಭೋಜನ

    ತುಮಕೂರು: ಕಳೆದ ವಿಧಾನಸಭಾ ಚುನಾವಣೆ ವೇಳೆ ಹೋಟೆಲ್‍ನಿಂದ ತಿಂಡಿ ತರಿಸಿ ದಲಿತರ ಮನೆಯಲ್ಲಿ ತಿಂದು ಎಡವಟ್ಟು ಮಾಡಿಕೊಂಡಿದ್ದ ಬಿಜೆಪಿ ನಾಯಕರು ಈಗ ಮತ್ತೆ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ ಶುರು ಮಾಡಿಕೊಂಡಿದ್ದಾರೆ.

    ಕಳೆದ ಬಾರಿಯಂತೆ ಈ ಬಾರಿ ಆಗಬಾರದು ಎಂಬ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆ ಇಟ್ಟ ಬಿಜೆಪಿ ನಾಯಕರು ದಲಿತರ ಮನೆಯಲ್ಲೇ ಅಡುಗೆ ತಯಾರಿಸಿ ಸಹಪಂಕ್ತಿ ಭೋಜನ ಮಾಡಿದ್ದಾರೆ. ಏಪ್ರಿಲ್ 14ರಂದು ಅಂಬೇಡ್ಕರ್ ಜಯಂತಿ ಪ್ರಯುಕ್ತ ತುಮಕೂರು ಜಿಲ್ಲೆಯಲ್ಲಿ ದಲಿತರ ಮನೆಯಲ್ಲಿ ಸಹಪಂಕ್ತಿ ಭೋಜನ ಇಂದಿನಿಂದ ಆರಂಭವಾಗಿದೆ. ಇದನ್ನೂ ಓದಿ: ಮಹಿಳಾ ದಿನಾಚರಣೆ – ಪತ್ನಿ ಜೊತೆ ಬಿಂದಾಸ್ ಸ್ಟೆಪ್ಸ್ ಹಾಕಿದ ಶಾಸಕ

    ತುಮಕೂರು ನಗರ ಜೈಪುರದ ದಲಿತ ಮುಖಂಡ ನವೀನ್ ಎನ್ನುವವರ ಮನೆಯಲ್ಲಿ ಬಿಜೆಪಿ ಮುಖಂಡರು ಸಹಪಂಕ್ತಿ ಭೋಜನ ಮಾಡಿದ್ದಾರೆ. ನಗರ ಶಾಸಕ ಜ್ಯೋತಿಗಣೇಶ್, ಜಿಲ್ಲಾಧ್ಯಕ್ಷ ಲಕ್ಷ್ಮೀಶ್, ಮುಖಂಡರಾದ ಓಂಕಾರ್ ಸೇರಿ ಹಲವು ಪ್ರಮುಖರು ನವೀನ್ ಕುಟುಂಬದ ಜೊತೆ ಕುಳಿತು ಊಟ ಮಾಡಿದ್ದಾರೆ.  ಈ ಮೂಲಕ ಮುಂದಿನ ವಿಧಾನಸಭಾ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ. ಇದನ್ನೂ ಓದಿ: ಮೂರು ವರ್ಷದ ಮಗಳನ್ನೇ ಕೊಡಲಿಯಿಂದ ಕೊಚ್ಚಿ ಕೊಂದ ತಂದೆ

  • ಬಿಎಸ್‍ವೈ ಸಿಎಂ ಅಷ್ಟೇ, ಮೋದಿ, ಅಮಿತ್ ಶಾ, ನಡ್ಡಾ ನಮ್ಮ ನಾಯಕರು: ಯತ್ನಾಳ್

    ಬಿಎಸ್‍ವೈ ಸಿಎಂ ಅಷ್ಟೇ, ಮೋದಿ, ಅಮಿತ್ ಶಾ, ನಡ್ಡಾ ನಮ್ಮ ನಾಯಕರು: ಯತ್ನಾಳ್

    – ಯಾರ ಮಾತು ಕೇಳೋ ಅವಶ್ಯಕತೆ ನನಗಿಲ್ಲ

    ಬೆಂಗಳೂರು: ಬಿಎಸ್ ಯಡಿಯೂರಪ್ಪ ನಮ್ಮ ಸಿಎಂ ಅಷ್ಟೇ. ಆದರೆ ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ ನಮ್ಮ ನಾಯಕರು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.

    ಇಂದು ಬಂಡಾಯದ ವಿಚಾರವಾಗಿ ಮಾಧ್ಯಮಗಳ ಜೊತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರು ನನ್ನನ್ನು ಕರೆದಿದ್ದು ನಿಜ. ನಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸ ಆಗಿಲ್ಲ ಎಂದು ಹೇಳಿದ್ದೇನೆ. ಜೊತೆಗೆ ಹಣ ಬಿಡುಗಡೆ ಆಗಿಲ್ಲ ಎಂದು ಬೇಜಾರ್ ಆಗಿದೆ ಎಂದು ಸಿಎಂ ಅವರಲ್ಲಿ ಹೇಳಿದ್ದೇನೆ. ಅದಕ್ಕೆ ಅವರು ಕರೆದಿದ್ದರು. ಆದರೆ ನಾನು ಪದೇ ಪದೇ ಅವರ ಬಳಿ ಹೋಗುವುದಿಲ್ಲ. ಅವರು ಕೊರೊನಾ ಸಂಬಂಧ ಕೆಲಸ ಮಾಡುತ್ತಿರುತ್ತಾರೆ ಎಂದರು.

    ಹೈಕಮಾಂಡ್ ಸಿಎಂ ಆಗಿರಬೇಕು ಅಂದರೆ ಅವರೇ ಇರಲಿ. ಬೇರೆ ಅವರು ಸಿಎಂ ಆಗಬೇಕು ಎಂದರೂ ನಮಗೆ ಓಕೆ. ಹೈಕಮಾಂಡ್ ಆದೇಶವೇ ನಮಗೆ ಅಂತಿಮ. ನನ್ನ ಕೇಳಿದರೆ ನನ್ನ ಅಭಿಪ್ರಾಯವನ್ನು ಹೈಕಮಾಂಡ್‍ಗೆ ಹೇಳುತ್ತೇನೆ. ನಮ್ಮ ನಾಯಕರು ಮೋದಿ, ಅಮಿತ್ ಶಾ ಮತ್ತು ಜೆಪಿ ನಡ್ಡಾ. ಯಡಿಯೂರಪ್ಪ ನಮ್ಮ ಮುಖ್ಯಮಂತ್ರಿಗಳು ಅಷ್ಟೆ. ಹೀಗಾಗಿ ಮತ್ತೆ ನಾನು ಸಿಎಂ ಬಿಎಸ್‍ವೈ ಬಳಿ ಹೋಗಲ್ಲ ಎಂದು ಯತ್ನಾಳ್ ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು.

    ಕ್ಷೇತ್ರದ ವಿಚಾರದಲ್ಲಿ ನನಗೆ ಅಸಮಾಧಾನವಿದೆ. ಹೀಗಾಗಿ ಯಡಿಯೂರಪ್ಪ ಕರೆದಿದ್ದರೂ ನಾನು ಹೋಗಿಲ್ಲ. ನಾನು ಯಾರ ಪರವೂ ಶಿಫಾರಸು, ಲಾಭಿ ಮಾಡುವುದಿಲ್ಲ. ನಮಗೆ ಊಟ ಮಾಡಲು ಅಧಿಕಾರವಿದೆ. ಕತ್ತಿ ಮನೆಗೆ ಹೋಗಿ ಊಟ ಮಾಡಿಕೊಂಡು ಬಂದಿದ್ದೇವೆ. ಯಡಿಯೂರಪ್ಪ ಅವರ ಬಗ್ಗೆ ಚರ್ಚೆಯೂ ಆಗಿಲ್ಲ, ನನ್ನ ಹಿಂದೆ ಯಾರೂ ಇಲ್ಲ. ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಬಗ್ಗೆ ಎಲ್ಲಿ ಹೇಳಬೇಕು ಅಲ್ಲಿ ಹೇಳುತ್ತೇನೆ ಎಂದು ಯತ್ನಾಳ್ ತಿಳಿಸಿದ್ದಾರೆ.

    ಸಿದ್ದರಾಮಯ್ಯ, ಕುಮಾರಸ್ವಾಮಿ ಅವರನ್ನು ರಾಜಕೀಯ ವಿಚಾರವಾಗಿ ನಾನು ಯಾವತ್ತೂ ಭೇಟಿಯಾಗಿಲ್ಲ. ಮುಂದೆಯೂ ಆಗುವುದಿಲ್ಲ. ವೈಯಕ್ತಿಕವಾಗಿ ಬೇಕಿದ್ದರೆ ಭೇಟಿ ಆಗುತ್ತೇನೆ. ಆದರೆ ರಾಜಕೀಯಕ್ಕೆ ಯಾವತ್ತೂ ಭೇಟಿ ಆಗಲ್ಲ. ನಾನು ಯಾರ ಬತ್ತಳಿಕೆಯ ಬಾಣ ಅಲ್ಲ. ನನಗೆ ಸ್ವಂತ ಅನುಭವ ಇದೆ. ನನಗೆ ನನ್ನದೇ ಆದ ಬುದ್ಧಿ ಇದೆ. ಯಾರ ಮಾತು ಕೇಳುವ ಅವಶ್ಯಕತೆ ನನಗೆ ಇಲ್ಲ ಎಂದು ಯತ್ನಾಳ್ ಗುಡುಗಿದ್ದಾರೆ.

    ಇದೇ ವೇಳೆ ಬಿ ಎಲ್ ಸಂತೋಷ್ ಬಗ್ಗೆ ನಾನು ಮಾತನಾಡುವುದಿಲ್ಲ ಎಂದ ಯತ್ನಾಳ್, ಯಾರನ್ನು ಬೇಕಾದರೂ ಮಂತ್ರಿ ಮಾಡಬಹುದು. ಏನು ಸ್ಥಾನ ಬೇಕಾದರೂ ಕೊಡಬಹುದು ಅದು ಸಿಎಂಗೆ ಬಿಟ್ಟ ವಿಚಾರ. ರಾಜ್ಯಸಭೆ ಸಲುವಾಗಿ ನಾವು ಅಲ್ಲಿಗೆ ಹೋಗಿಲ್ಲ. ಉಮೇಶ್ ಕತ್ತಿಯನ್ನು ಮಂತ್ರಿ ಮಾಡುತ್ತೇನೆ ಎಂದು ಸಿಎಂ ದೇವರ ಮುಂದೆ ಪ್ರಮಾಣ ಮಾಡಿದ್ದಾರೆ. ನಾನು ಮಂತ್ರಿ ಮಾಡಿ ಎಂದು ಕೇಳಿಲ್ಲ. ಬಿಎಸ್‍ವೈ ಜೊತೆ ಪಕ್ಷ ಕಟ್ಟಿದ್ದೇನೆ, ಅವರ ವಿರುದ್ಧ ಬಂಡಾಯ ಮಾಡಲ್ಲ ಎಂದು ತಿಳಿಸಿದರು.

  • ಪೌರ ಕಾರ್ಮಿಕರಿಗೆ ಬಿರಿಯಾನಿ ನೀಡಿ, ಪಾದ ಪೂಜೆ ಸಲ್ಲಿಸಿದ ಬಿಜೆಪಿ ಮುಖಂಡರು

    ಪೌರ ಕಾರ್ಮಿಕರಿಗೆ ಬಿರಿಯಾನಿ ನೀಡಿ, ಪಾದ ಪೂಜೆ ಸಲ್ಲಿಸಿದ ಬಿಜೆಪಿ ಮುಖಂಡರು

    ಕೋಲಾರ: ಜಿಲ್ಲೆಯ ಬಿಜೆಪಿ ಮುಖಂಡರು ಕೊರೊನಾ ವಾರಿಯರ್ಸ್ ಪೌರಕಾರ್ಮಿಕರಿಗೆ ಚಿಕನ್ ಬಿರಿಯಾನಿ ವಿತರಿಸುವುದರ ಜೊತೆಗೆ ಪಾದ ಪೂಜೆ ಮಾಡಿ ಗೌರವ ಸಲ್ಲಿಸಿದರು.

    ಕೆಜಿಎಫ್ ನಗರದಲ್ಲಿ ಪೌರಕಾರ್ಮಿಕರಿಗೆ ತಾಲೂಕು ಬಿಜೆಪಿ ಘಟಕದ ವತಿಯಿಂದ ಹೀಗೆ ವಿಭಿನ್ನವಾಗಿ ಗೌರವ ಸಲ್ಲಿಸಲಾಯಿತು. ಕಳೆದ ಒಂದು ತಿಂಗಳಿನಿಂದ ಪ್ರತಿನಿತ್ಯ ಸಾರ್ವಜನಿಕರಿಗೆ ಆಹಾರ ಪದಾರ್ಥ ಹಾಗೂ ಊಟವನ್ನ ನೀಡುತ್ತಿದ್ದ ತಾಲೂಕು ಬಿಜೆಪಿ ಮುಖಂಡರು ಮಂಗಳವಾರ ಪೌರಕಾರ್ಮಿಕರಿಗೆ ಪಾದ ಪೂಜೆ ಸಲ್ಲಿಸಿ, ಆಹಾರ ಪದಾರ್ಥಗಳೊಂದಿಗೆ ಚಿಕನ್ ಬಿರಿಯಾನಿ ನೀಡಿದರು.

    ಕೆಜಿಎಫ್ ನಗರವನ್ನ ಸ್ವಚ್ಛಗೊಳಿಸುವ ಮೂಲಕ ಮಾರಕ ಕೊರೊನಾ ವೈರಸ್ ತಡೆಗಟ್ಟುವಲ್ಲಿ ಪೌರ ಕಾರ್ಮಿಕರು ಶ್ರಮವಹಿಸುತ್ತಿದ್ದಾರೆ. ಹೀಗಾಗಿ ಅವರ ಪಾದ ಪೂಜೆ ಮಾಡಿದ್ದೇವೆ ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

    ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ನಾರಾಯಣ್ ಹಾಗೂ ಬಿಜೆಪಿ ತಾಲೂಕು ಅಧ್ಯಕ್ಷ ಕಮಲ್ ನಾಥ್ ನೇತೃತ್ವದಲ್ಲಿ ಬಿರಿಯಾನಿ ಹಂಚಿಕೆ ಮಾಡಿದ್ದು, ಕೆಜಿಎಫ್ ಬಿಜೆಪಿ ತಾಲೂಕು ಘಟಕದ ಕಾರ್ಯಕರ್ತರು ಹಾಜರಿದ್ದರು.

  • ಲಾಕ್‍ಡೌನ್ ವಿಸ್ತರಣೆ – ವಿಪಕ್ಷಗಳ ಜೊತೆ ಮೋದಿ ಸಭೆ

    ಲಾಕ್‍ಡೌನ್ ವಿಸ್ತರಣೆ – ವಿಪಕ್ಷಗಳ ಜೊತೆ ಮೋದಿ ಸಭೆ

    – ಏಪ್ರಿಲ್ 11ಕ್ಕೆ ನಿರ್ಣಾಯಕ ಸಭೆ

    ನವದೆಹಲಿ: ಕೊರೊನಾ ವೈರಸ್ ಭೀತಿ ಹಿನ್ನಲೆ ಭಾರತ ಲಾಕ್‍ಡೌನ್ ಮಾಡಲಾಗಿದ್ದು, ಇದನ್ನು ಮುಂದುವರಿಸುವ ಬಗ್ಗೆ ಇಂದು ಪ್ರಧಾನಿ ನರೇಂದ್ರ ಮೋದಿ ವಿಪಕ್ಷಗಳ ಜೊತೆ ಸಭೆ ನಡೆಸಿದ್ದಾರೆ.

    ದೆಹಲಿಯ ಲೋಕ ಕಲ್ಯಾಣ್ ಮಾರ್ಗ್‍ನಲ್ಲಿರುವ ತಮ್ಮ ನಿವಾಸದಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಪ್ರಧಾನಿ ಮೋದಿ, ಲೋಕಸಭಾ ಮತ್ತು ರಾಜ್ಯಸಭೆಯ ವಿಪಕ್ಷ ನಾಯಕರು ಹಾಗೂ ಸಂಸದೀಯ ನಾಯಕರ ಜೊತೆ ಚರ್ಚೆ ನಡೆಸಿದರು.

    ಸಭೆಯಲ್ಲಿ ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. ಲಾಕ್‍ಡೌನ್ ಮುಂದುವರಿಸುವ ಮತ್ತು ನಿಯಮಗಳನ್ನು ಸಡಿಲಿಕೆ ಮಾಡುವ ಬಗ್ಗೆ ಚರ್ಚೆ ನಡೆದಿದ್ದು, ಹಲವು ನಾಯಕರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

    ಇದಲ್ಲದೇ ಲಾಕ್‍ಡೌನ್ ಹಿನ್ನೆಲೆ ದೇಶದ ಆರ್ಥಿಕತೆ ಮೇಲಾಗಿರುವ ಪರಿಣಾಮದ ಬಗ್ಗೆ ಮೋದಿ ಅವರು ವಿವರಿಸಿದ್ದು, ಈ ವೇಳೆ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಕೂಡ ಎಲ್ಲಾ ನಾಯಕರಿಗೆ ತಿಳಿಸಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಜನರ ನೆರವಿಗೆ ಸರ್ಕಾರ ಘೋಷಿಸಿರುವ ಪ್ಯಾಕೇಜ್, ಸಹಾಯದ ಬಗ್ಗೆ ಪ್ರಧಾನಿ ಮೋದಿ ಗಮನ ಸೆಳೆದಿದ್ದಾರೆ. ಇದಲ್ಲದೇ ಲಾಕ್‍ಡೌನ್ ಮುಂದುವರಿದರೆ ಸರ್ಕಾರಕ್ಕೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

    ಮೋದಿ ಅವರು ಮನವಿಗೆ ಹಲವು ಸಂಸದೀಯ ನಾಯಕರು ಬೆಂಬಲ ವ್ಯಕ್ತಪಡಿಸಿದ್ದು, ರಾಜ್ಯವಾರು ಗಮನ ಸೆಳೆಯುವ ಪ್ರಯತ್ನ ಮಾಡಿದ್ದಾರೆ. ಪಿಪಿಇ ಕಿಟ್‍ಗಳು, ಮಾಸ್ಕ್, ಹ್ಯಾಂಡ್ ಗ್ಲೋಸ್ ಹಾಗೂ ವೆಂಟಿಲೇಟರ್ ಗಳನ್ನು ಪೂರೈಕೆ ಮಾಡುವಂತೆ ನಾಯಕರು ಮನವಿ ಮಾಡಿದ್ದು, ಇದಕ್ಕೆ ಸರ್ಕಾರ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವ ಭರವಸೆಯನ್ನು ಮೋದಿ ಅವರು ನೀಡಿದ್ದಾರೆ.

    https://twitter.com/ANI/status/1247776117710147584

    ಏಪ್ರಿಲ್ 11ಕ್ಕೆ ಸಿಎಂಗಳ ಸಭೆ:
    ಲಾಕ್‍ಡೌನ್ ಮುಂದುವರಿಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಜೊತೆ ಸಭೆ ನಡೆಸಲಿದ್ದಾರೆ. ಏಪ್ರಿಲ್ 11ಕ್ಕೆ ಈ ಸಭೆ ನಡೆಯಲಿದ್ದು, ಈ ವೇಳೆ ಎಲ್ಲಾ ಮುಖ್ಯಮಂತ್ರಿಗಳ ಅಭಿಪ್ರಾಯ ಪಡೆಯಲಿದ್ದಾರೆ. ಈಗಾಗಲೇ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಜಾರ್ಖಂಡ್, ಪುದುಚೇರಿ ಸೇರಿ 8 ರಾಜ್ಯಗಳು ಲಾಕ್‍ಡೌನ್ ವಿಸ್ತರಣೆಗೆ ಆಸಕ್ತಿ ತೋರಿದ್ದು ಉಳಿದ ರಾಜ್ಯಗಳ ಅಭಿಪ್ರಾಯವನ್ನು ಮೋದಿ ಅವರು ಸಂಗ್ರಹಿಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.

  • ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಬಂಡೆ ಭೇಟಿ

    ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಬಂಡೆ ಭೇಟಿ

    ರಾಮನಗರ: ನೂತನ ಕೆಪಿಸಿಸಿ ಅಧ್ಯಕ್ಷ ಕನಕಪುರ ಬಂಡೆ, ಮಾಜಿ ಸಚಿವ ಡಿಕೆ ಶಿವಕುಮಾರ್ ಭಾನುವಾರ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಆಗಮಿಸಲಿದ್ದಾರೆ.

    ಕೊರೊನಾ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಸ್ವಕ್ಷೇತ್ರ ಕನಕಪುರದ ಭಾನುವಾರದ ಕಾರ್ಯಕ್ರಮವನ್ನು ರದ್ದು ಮಾಡಿದ್ದರು. ಭಾನುವಾರ ಕನಕಪುರಕ್ಕೆ ಡಿಕೆಶಿ ಬರುತ್ತಿಲ್ಲ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಡಿಕೆಶಿಯವರನ್ನು ನೋಡಿ ವಿಶ್ ಮಾಡಲು ಬೆಂಗಳೂರಿನ ನಿವಾಸಕ್ಕೆ ರಾಮನಗರ ಜಿಲ್ಲೆಯ ಕೈ ಮುಖಂಡರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಂಖ್ಯೆ ಹೆಚ್ಚಳವಾಗಿತ್ತು.

    ಅಲ್ಲದೆ ನಾಳೆ ಕೂಡ ಅಭಿಮಾನಿಗಳ ದಂಡೇ ಬೆಂಗಳೂರಿನ ಸದಾಶಿವನಗರದ ಮನೆಯತ್ತ ಮುಖ ಮಾಡಬಹುದಾದ ಹಿನ್ನೆಲೆಯಲ್ಲಿ ಡಿಕೆಶಿ ಭಾನುವಾರ ಕನಕಪುರಕ್ಕೆ ಆಗಮಿಸುತ್ತಿದ್ದಾರೆ. ಹಿಂದೆಯೇ ಕನಕಪುರಕ್ಕೆ ನಾನೇ ಬರುತ್ತೇನೆ. ನೀವು ಯಾರು ಬೆಂಗಳೂರಿಗೆ ಬರಬೇಡಿ ಎಂದು ತಿಳಿಸಿದ್ದ ಡಿಕೆಶಿಯವರು ಇದೀಗ ಅಭಿಮಾನಿಗಳ ಸಂಖ್ಯೆ ಹಿನ್ನೆಲೆಯಲ್ಲಿ ಕನಕಪುರಕ್ಕೆ ಭೇಟಿ ನೀಡುತ್ತಿದ್ದಾರೆ.

    ಭಾನುವಾರ ಬೆಳಗ್ಗೆ 11 ಗಂಟೆಗೆ ಆಗಮಿಸಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ 4 ಗಂಟೆವರೆಗೂ ಕನಕಪುರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ತಮ್ಮ ನೆಚ್ಚಿನ ನಾಯಕ ಬರುವಿಕೆಯ ವೇಳೆ ಅದ್ಧೂರಿ ಸ್ವಾಗತ ಕೋರಲು ಕೈ ಕಾರ್ಯಕರ್ತರು, ಮುಖಂಡರು, ಅಭಿಮಾನಿಗಳು ಸಿದ್ಧರಾಗಿದ್ದಾರೆ.

  • ಅವರೆಲ್ಲಾ ಇಲ್ಲಿ, ಆದ್ರೆ ಇವರು ಎಲ್ಲಿ?

    ಅವರೆಲ್ಲಾ ಇಲ್ಲಿ, ಆದ್ರೆ ಇವರು ಎಲ್ಲಿ?

    ಬೆಂಗಳೂರು: ಅವತ್ತು ಅವರು ಬಂದಾಗ ಇವರೇ ಎಲ್ಲಾ ಆಗಿ ಮುಂದೆ ನಿಂತು ಎಲ್ಲರನ್ನೂ ಕಾಪಾಡಿದ್ದರು. ಆದರೆ ಈ ಕಷ್ಟ ಕಾಲದಲ್ಲಿ ಅವರೆಲ್ಲಿ ಹೋದರು? ಏನು ಮಾಡುತ್ತಿದ್ದಾರೆ? ಯಾಕಾಗಿ ಈ ಮೌನ? ಪಕ್ಷಕ್ಕೆ ಏನೇ ಸಂಕಷ್ಟ ಎದುರಾದರೂ ಪಕ್ಷದ ಪಾಲಿಗೆ ಅವರೆ ಟ್ರಬಲ್‍ಶೂಟರ್. ಆದರೆ ಇಂತಹ ಸಂಕಷ್ಟದ ಸಂದರ್ಭದಲ್ಲೂ ಆ ನಾಯಕನ ಮೌನವೇಕೆ? ಇದು ಕಾಂಗ್ರೆಸ್‍ನ ಟ್ರಬಲ್ ಶೂಟರ್, ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಬಗ್ಗೆ ಕಾಂಗ್ರೆಸ್ ವಲಯದಲ್ಲೇ ಕೇಳಿಬರುತ್ತಿರುವ ಮಾತು.

    ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರ ಕೆಡವಲು ಬಿಜೆಪಿ ನಾಯಕರು ಆಪರೇಷನ್ ಕಮಲಕ್ಕೆ ಮುದಾಗಿದ್ದಾರೆ. ಈ ನಿಟ್ಟಿನಲ್ಲಿ ಬಿಜೆಪಿಯ ನಾಯಕರು ಮಧ್ಯಪ್ರದೇಶದ ನಾಲ್ವರು ಶಾಸಕರನ್ನ ಬೆಂಗಳೂರಿಗೆ ತಂದಿಟ್ಟುಕೊಂಡಿದ್ದಾರೆ. ಸಹಜವಾಗಿಯೇ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದೆ. ಈ ಸಂದರ್ಭದಲ್ಲಿ ಕೈ ನಾಯಕರಿಗೆ ನೆನಪಾಗುವುದೇ ಡಿ.ಕೆ.ಶಿವಕುಮಾರ್. ಅಂದು ಗುಜರಾತ್ ಶಾಸಕರನ್ನು ರಾಜ್ಯಕ್ಕೆ ತಂದಿಟ್ಟುಕೊಂಡು ಪ್ರಧಾನಿ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಸೆಡ್ಡು ಹೊಡೆದವರು ಡಿ.ಕೆ.ಶಿವಕುಮಾರ್. ಸಮ್ಮಿಶ್ರ ಸರ್ಕಾರ ಉಳಿಸಲು ಬಿಜೆಪಿ ಆಡಳಿತದ ಮಹರಾಷ್ಟ್ರದ ಮುಂಬೈಗೆ ಹೋಗಿ ಕಾಂಗ್ರೆಸ್ ಶಾಸಕರನ್ನು ಕರೆತರುವ ಯತ್ನಿಸಿದ್ದರು. ಇದನ್ನೂ ಓದಿ: ಆಪರೇಷನ್ ಮಧ್ಯಪ್ರದೇಶಕ್ಕೆ ಕರ್ನಾಟಕವೇ ಹೆಡ್ ಆಫೀಸ್

    ಆದರೆ ಈಗ ಮಧ್ಯ ಪ್ರದೇಶದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ತಂದಿಟ್ಟುಕೊಂಡಿದ್ದರೂ ಡಿ.ಕೆ.ಶಿವಕುಮಾರ್ ಸೈಲೆಂಟಾಗಿದ್ದಾರೆ. ಅದಕ್ಕೆ ಅವರು ಎದುರಿಸುತ್ತಿರುವ ಕಾನೂನಿನ ತೊಡಕಿನ ಕಾರಣವಿರಬಹುದು. ಆದರೆ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಅಂತ ಪದೇ ಪದೇ ಹೇಳುವ ಡಿಕೆಶಿ ಪಕ್ಷ ಸಂಕಷ್ಟಕ್ಕೆ ಸಿಲುಕಿದಾಗಲೆಲ್ಲಾ ನೆರವಿಗೆ ಬಂದವರು. ಈಗ ವಿರೋಧಿ ಪಾಳಯ ಸ್ವಪಕ್ಷಿಯ ಶಾಸಕರನ್ನು ಬೆಂಗಳೂರಿಗೆ ಕರೆತಂದು ಬಚ್ಚಿಟ್ಟರು ಟ್ರಬಲ್ ಶೂಟರ್ ಮಾತ್ರ ಮೌನಕ್ಕೆ ಶರಣಾಗಿರುವುದು ಅಚ್ಚರಿಯೇ ಸರಿ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿವೆ.

  • ಶನಿಪಥ ಬದಲಾವಣೆ – ರಾಜಕೀಯ ನಾಯಕರ ಮೇಲೆ ಶನಿಕಾಟ ಶುರು

    ಶನಿಪಥ ಬದಲಾವಣೆ – ರಾಜಕೀಯ ನಾಯಕರ ಮೇಲೆ ಶನಿಕಾಟ ಶುರು

    ಬೆಂಗಳೂರು: ಮೂವತ್ತು ವರ್ಷದ ಬಳಿಕ ಶನಿ ತನ್ನ ಪಥವನ್ನ ಬದಲಾವಣೆ ಮಾಡುತ್ತಿದ್ದಾನೆ. ಧನಸ್ಸು ರಾಶಿಯಿಂದ ಮಕರ ರಾಶಿಗೆ ಬದಲಾವಣೆ ಮಾಡುತ್ತಿದ್ದು, ಧನಸ್ಸು, ಮಕರ ಮತ್ತು ಕುಂಭ ರಾಶಿಗಳ ಮೇಲೆ ಗಾಢ ಪರಿಣಾಮ ಬೀರಲಿದೆ.

    ಜೊತೆಗೆ ರಾಜಕೀಯ ನಾಯಕರಾದ ನರೇಂದ್ರ ಮೋದಿ, ಯಡಿಯೂರಪ್ಪ, ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಡಿ.ಕೆ ಶಿವಕುಮಾರ್ ಮತ್ತು ಕುಮಾರಸ್ವಾಮಿ ಸೇರಿದಂತೆ ಈ ನಾಯಕರ ಶನಿಪಥ ಬದಲಾವಣೆ ಸಂದರ್ಭದಲ್ಲಿ ಇವರ ರಾಶಿಗಳಿಗೆ ಯಾವ ರೀತಿ ಪರಿಣಾಮ ಬೀರಲಿದೆ ಎಂದು ರೇಣುಕಾರಾಧ್ಯ ಅವರು ರಾಶಿ ಫಲಾಫಲವನ್ನ ತಿಳಿಸಿದ್ದಾರೆ. ಇದನ್ನೂ ಓದಿ: ಮಕರ, ಕುಂಭ, ಧನಸ್ಸು ರಾಶಿ ಮೇಲೆ ಶನಿಯ ಗಾಢ ಪ್ರಭಾವ- ರೇಣುಕಾರಾಧ್ಯ ಗುರೂಜಿ ಭವಿಷ್ಯ

    ನರೇಂದ್ರ ಮೋದಿ, ಯಡಿಯೂರಪ್ಪ, ಸಿದ್ದರಾಮಯ್ಯ, ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ, ಡಿ.ಕೆ ಶಿವಕುಮಾರ್ ಮತ್ತು ಕುಮಾರಸ್ವಾಮಿಯವರ ರಾಶಿಗಳ ಮೇಲೆ ಶನಿಕಾಟ ಯಾವ ರೀತಿ ಇದೆ ಅನ್ನೋದನ್ನ ಇಲ್ಲಿ ತಿಳಿಸಲಾಗಿದೆ.

    * ದೇವೇಗೌಡ: ಮಾಜಿ ಪ್ರಧಾನಿ ದೇವೇಗೌಡರಿಗೆ ಏಳೂವರೆ ವರ್ಷಗಳ ಕಾಲ ಶನಿ ಕಾಟ ಇರಲಿದೆ. ದೇವೇಗೌಡರದ್ದು ಕುಂಭ ರಾಶಿ. ಈ ಹಿನ್ನೆಲೆಯಲ್ಲಿ ಕುಂಭ ರಾಶಿಯ ಮೇಲೆ ಶನಿ ಕಾಟ ಗಾಢವಾಗಿ ಬೀರಲಿದೆ. ಶನಿಕಾಟದಿಂದ ಪ್ರಮುಖ, ಮುಖ್ಯವಾದದನ್ನ ದೇವೇಗೌಡರು ಕಳೆದುಕೊಳ್ಳಲಿದ್ದಾರೆ. ಆರೋಗ್ಯ ಸಮಸ್ಯೆ ಮತ್ತು ಜನವಿರೋಧಿ ಆಗಲಿದೆ. ಪಕ್ಷದಲ್ಲಿ ಸಮಸ್ಯೆ, ಹೊಂದಾಣಿಕೆ ಇರಲ್ಲ. ವೈಯಕ್ತಿಕ ಜಾತಕ ಚೆನ್ನಾಗಿದ್ದರೆ ಶನಿಕಾಟದಿಂದ ಪಾರಾಗಬಹುದು. ಪರಿಹಾರಕ್ಕಾಗಿ ಕಾಲ ಭೈರವೇಶ್ವರ, ಶನೇಶ್ವರ ಆರಾಧನೆ ಮತ್ತು ಹನುಮನ ಆರಾಧನೆ ಮಾಡಬೇಕು. ವೃದ್ಧರಿಗೆ ಮತ್ತು ಅನಾಥರಿಗೆ ಸಹಾಯ ಮಾಡಬೇಕು.

    * ಪ್ರಧಾನಿ ನರೇಂದ್ರ ಮೋದಿ ಭವಿಷ್ಯ: ಮೋದಿ ಅವರದ್ದು ವೃಶ್ಚಿಕ ರಾಶಿ. ಶನಿಬಲ ಚೆನ್ನಾಗಿದ್ದು, ಗ್ರಹಗತಿಗಳು ಚೆನ್ನಾಗಿವೆ. ಕಠಿಣ ಕ್ರಮ ತೆಗೆದುಕೊಳ್ಳಲು ಸಾಧ್ಯ. ಯಾವುದೇ ಹಿನ್ನಡೆ ಇಲ್ಲ.

    * ಸಿಎಂ ಯಡಿಯೂರಪ್ಪ: ಯಡಿಯೂರಪ್ಪನವರದ್ದು ವೃಶ್ಚಿಕ ರಾಶಿ. ಶನಿ ಬಲ ಇದೆ, ಸುಭದ್ರವಾದ ಸರ್ಕಾರ ಕೊಡುತ್ತಾರೆ. ಅಭಿವೃದ್ಧಿ ಕಾರ್ಯ ಮಾಡುವುದಕ್ಕೆ ಆಗಲ್ಲ.

    * ಕುಮಾರಸ್ವಾಮಿ: ಮಿಥುನ ರಾಶಿ ಇರುವುದರಿಂದ ಕುಮಾರಸ್ವಾಮಿಗೆ ಅಷ್ಟಮ ಶನಿ ಕಾಟ ಇದೆ. ಅಷ್ಟಮ ಶನಿಕಾಟದಿಂದ ಆರೋಗ್ಯದ ಸಮಸ್ಯೆ, ಸೋಲು, ನಷ್ಟ, ನಿರಾಸೆ, ಅನಗತ್ಯ ಮಾತುಗಳಿಂದ ಹಿನ್ನಡೆ. ಶನಿಕಾಟದಿಂದ ಜನವಿರೋಧಿ ಇದೆ. ಪರಿಹಾರಕ್ಕಾಗಿ ಮಾತನ್ನ ಹಿಡಿತದಲ್ಲಿ ಇಟ್ಟುಕೊಂಡು ಮಾತಾಡಬೇಕು ಹಾಗೂ ಗಣಪತಿ ಹೋಮ ಮಾಡಬೇಕು.

    * ಡಿ.ಕೆ ಶಿವಕುಮಾರ್: ಡಿಕೆ ಶಿವಕುಮಾರ್ ಅವರದ್ದು ಮೇಷ ರಾಶಿ, ಅವರಿಗೆ ದಶಮ ಶನಿ ಇದೆ. ಅನುಕೂಲಕರ ವಾತಾವರಣ ಇರಲಿದೆ. ಮೂಲಜಾತಕದ ಸಮಸ್ಯೆ, ಮೂಲನಜಾತಕದಲ್ಲಿ ವಿಘ್ನ, ಕಾನೂನು ಸಮಸ್ಯೆಗಳು ತೊಡಕುಗಳು ಎದುರಾಗಲಿದೆ. ಹಿತ ಶತ್ರುಕಾಟವಾಗಲಿದೆ. ಪರಿಹಾರಕ್ಕಾಗಿ ಮೂಲ ಜಾತಕದ ಪರಿಣಾಮ ಸರಿ ಮಾಡಿಕೋಬೇಕು.

    * ಸಿದ್ದರಾಮಯ್ಯನ ಭವಿಷ್ಯ: ತುಲಾ ರಾಶಿ ಮೂಲ ಜಾತಕದ ಬಲ ಇದೆ. ನಂಬಿದವರು ಕೈ ಬಿಟ್ಟು ಹೋಗುತ್ತಾರೆ. ಪಕ್ಷ ವಿರೋಧಿ ಚಟುವಟಿಕೆಗಳು ಎದುರಾಗಲಿವೆ. ಪರಿಹಾರಕ್ಕಾಗಿ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಮಾಡಿದರೆ ಉತ್ತಮ.

  • ಬಿಜೆಪಿ, ಕಾಂಗ್ರೆಸ್ಸಿಗೆ ಹೋಗ್ತಾರಾ ಅಸಮಾಧಾನಿತರು- ಜೆಡಿಎಸ್ ಸಭೆಯಲ್ಲಿ ನಿರ್ಧಾರ

    ಬಿಜೆಪಿ, ಕಾಂಗ್ರೆಸ್ಸಿಗೆ ಹೋಗ್ತಾರಾ ಅಸಮಾಧಾನಿತರು- ಜೆಡಿಎಸ್ ಸಭೆಯಲ್ಲಿ ನಿರ್ಧಾರ

    ಬೆಂಗಳೂರು: ವರಿಷ್ಠರ ಮೇಲೆ ಸಿಟ್ಟಾಗಿರೋ ಜೆಡಿಎಸ್ ಅಸಮಾಧಾನಿತ ಮುಖಂಡರು ಇಂದು ಮಹತ್ವದ ಸಭೆ ನಡೆಸಲಿದ್ದಾರೆ.

    ಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಯಲಿದೆ. ಅಸಮಾಧಾನಿತ ಶಾಸಕರು, ಮಾಜಿ ಶಾಸಕರು, ಪರಿಷತ್ ಸದಸ್ಯರು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸರ್ಕಾರ ಇದ್ದಾಗ ನಮ್ಮನ್ನು ಸರಿಯಾಗಿ ನಡೆಸಿಕೊಂಡಿಲ್ಲ. ಸರ್ಕಾರ ಹೋದ ನಂತರವೂ ಸರಿಯಾಗಿ ಸ್ಪಂದನೆ ನೀಡುತ್ತಿಲ್ಲ. ಗೌರವ ಕೊಡ್ತಿಲ್ಲ ಎಂದು ಆಕ್ರೋಶಗೊಂಡಿದ್ದಾರೆ.

    ಹೀಗಾಗಿ ಮುಂದಿನ ರಾಜಕೀಯ ಭವಿಷ್ಯದ ಬಗ್ಗೆ ನಿರ್ಧಾರ ಮಾಡಲು ಸಭೆ ಸೇರುತ್ತಿದ್ದಾರೆ. ಜೆಡಿಎಸ್‍ನಲ್ಲೇ ಮುಂದುವರಿಯಬೇಕಾ ಅಥವಾ ಬೇರೆ ಪಕ್ಷಕ್ಕೆ ಹೋಗಬೇಕಾ ಎಂಬುದರ ಕುರಿತು ಇಂದಿನ ಸಭೆಯಲ್ಲಿ ಚರ್ಚೆ ಮಾಡಿದ್ದಾರೆ. ಇಂದಿನ ಸಭೆ ಬಳಿಕ ನವೆಂಬರ್ ನಲ್ಲಿ ಮತ್ತೊಂದು ಸಭೆ ಸೇರಲು ನಿರ್ಧಾರ ಮಾಡಿದ್ದಾರೆ.

    ಬಹುತೇಕ ಅಸಮಾಧಾನಿತ ಮುಖಂಡರು ಉಪ ಚುನಾವಣೆ ಬಳಿಕ ಮಹತ್ವ ನಿರ್ಧಾರ ತೆಗೆದುಕೊಳ್ಳುವ ಚಿಂತನೆಯಲ್ಲಿ ಇದ್ದಾರೆ. ಕಾಂಗ್ರೆಸ್ ಅಥವಾ ಬಿಜೆಪಿಗೆ ಸೇರಲಿದ್ದಾರೆ ಅನ್ನೋ ಮಾತುಗಳು ಜೆಡಿಎಸ್ ವಲಯದಲ್ಲಿ ಕೇಳಿ ಬರುತ್ತಿವೆ. ಇದೆಲ್ಲ ನಿಜನಾ ಅನ್ನೋದು ಇಂದಿನ ಸಭೆಯಲ್ಲಿ ಗೊತ್ತಾಗಲಿದೆ.

  • ನನ್ನ ಕೆಣಕಿದ್ರೆ ಹುತ್ತದಲ್ಲಿರೋ ನಾಗರಹಾವನ್ನು ಕೆಣಕಿದಂತೆ – ಎಂಟಿಬಿ ಗುಡುಗು

    ನನ್ನ ಕೆಣಕಿದ್ರೆ ಹುತ್ತದಲ್ಲಿರೋ ನಾಗರಹಾವನ್ನು ಕೆಣಕಿದಂತೆ – ಎಂಟಿಬಿ ಗುಡುಗು

    ಬೆಂಗಳೂರು: ನನ್ನ ಕೆಣಕಿದರೆ ಹುತ್ತದಲ್ಲಿರೋ ನಾಗರಹಾವನ್ನು ಕೆಣಕಿದಂತೆ. ಮಲಗಿರೋ ಹಾವನ್ನು ಕೆಣಕಿದರೆ ಕಚ್ಚೋದು ಗ್ಯಾರಂಟಿ ಎಂದು ಹೊಸಕೋಟೆಯಲ್ಲಿ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಗುಡುಗಿದ್ದಾರೆ.

    ತನ್ನ ಜನ್ಮದಿನ ಪ್ರಯುಕ್ತ ಮಹಿಳೆಯರಿಗೆ ಸೀರೆ ಹಂಚುತ್ತಿರುವ ಎಂಟಿಬಿ ನಾಗರಾಜ್ ಕಾರ್ಯಕ್ರಮದಲ್ಲಿ ಮಾತನಾಡಿ, ನಾನು ಯಾರಿಗೂ ಭಯ ಬೀಳಲ್ಲ, ದೇವರಿಗೆ ಮತ್ತು ಮತದಾರರಿಗೆ ಮಾತ್ರ ಭಯ ಬೀಳುತ್ತೇನೆ ಎಂದು ಹೇಳಿದರು.

    5 ರಿಂದ 10 ಬಾರಿ ಮಂತ್ರಿ ಆಗಿ ಲೂಟಿ ಹೊಡೆದಿರುವ ದಾಖಲೆ ನನ್ನ ಹತ್ತಿರ ಇದೆ. ಅಧಿಕಾರವಿದ್ದಾಗ ಎಷ್ಟು ಆಸ್ತಿ ಮಾಡಿದ್ದೀರಿ ಎಂಬ ದಾಖಲೆ ಕೂಡ ಇದೆ. ನನ್ನ ಬಗ್ಗೆ ದಾಖಲೆ ಇದ್ದರೆ ಮಾಧ್ಯಮಗಳ ಮುಂದೆ ತಗೊಂಡು ಬನ್ನಿ. ಐಟಿ ಅಧಿಕಾರಿಗಳಿಗೆ ಮತ್ತು ಮೀಡಿಯಾಗೆ ಭಯ ಬಿದ್ದು ಎಂಟಿಬಿ ರಾಜೀನಾಮೆ ಕೊಟ್ಟ ಎನ್ನುತ್ತಾರೆ. ಆದರೆ ನಾನು ಯಾರಿಗೂ ಭಯ ಬೀಳಲ್ಲ, ದೇವರು ಮತ್ತು ಮತದಾರರಿಗೆ ಮಾತ್ರ ಭಯ ಬೀಳುತ್ತೇನೆ ಎಂದು ತಿಳಿಸಿದರು.

    30 ಕೋಟಿ ತಗೊಂಡು ಬಿಜೆಪಿಗೆ ಹೋದ, ಮಗನ ಉದ್ಧಾರ ಮಾಡೋಕೆ ಹೋದ ಎಂದು ದೊಡ್ಡ ದೊಡ್ಡ ನಾಯಕರು ಹೇಳುತ್ತಾರೆ. ಆದರೆ ನಾನು ಆ ದೊಡ್ಡ ನಾಯಕರ ಕಥೆ ತೆಗೆದರೆ ಅವರ ಕಥೆ ಮುಗಿಯುತ್ತೆ. ನಾನು ಯಾವ ಪುರುಷಾರ್ಥಕ್ಕೆ ಸುಳ್ಳು ಹೇಳಬೇಕು. ನನಗೆ ರಾಜಕೀಯದಿಂದ ಬೇಸರ ಆಗಿದೆ. ಕಳಪೆ, ಕಲ್ಮಶ ಮತ್ತು ಸುಳ್ಳು ರಾಜಕೀಯದಿಂದ ಬೇಸತ್ತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

  • ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಬಿಜೆಪಿಯಿಂದ ಅದ್ಧೂರಿ ಸ್ವಾಗತ

    ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಬಿಜೆಪಿಯಿಂದ ಅದ್ಧೂರಿ ಸ್ವಾಗತ

    ಬೆಂಗಳೂರು: ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ನಾಯಕರು ಅದ್ಧೂರಿ ಸ್ವಾಗತ ಕೋರಿದ್ದಾರೆ.

    ಸಂಸದರಾದ ಬಿ.ಎನ್ ಬಚ್ಚೇಗೌಡ, ಮುನಿಸ್ವಾಮಿ, ಪ್ರತಾಪ ಸಿಂಹ, ಶಾಸಕರಾದ ಅಂಗಾರ, ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ವಿಮಾನ ನಿಲ್ದಾಣಕ್ಕೆ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಳ್ಳಲು ಆಗಮಿಸಿದ್ದರು. ವೀರಗಾಸೆ, ಡೊಳ್ಳು ಕುಣಿತದೊಂದಿಗೆ ನಳಿನ್ ಕುಮಾರ್ ಅವರನ್ನು ಸ್ವಾಗತಿಸಲಾಯಿತು.

    ಈ ವೇಳೆ ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ತಮ್ಮ ನೂತನ ರಾಜ್ಯಾಧ್ಯಕ್ಷರಿಗೆ ಸ್ವಾಗತ ಕೋರಿದರು. ಈ ವೇಳೆ ಇಡೀ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವೇ ಬಿಜೆಪಿ ಮಯವಾಗಿತ್ತು. ಅಲ್ಲದೆ ಬಿಜೆಪಿ ಮಹಿಳಾ ಕಾರ್ಯಕರ್ತರು ಅವರಿಗೆ ಆರತಿ ಬೆಳಗಿ ಪ್ರೀತಿಯಿಂದ ಸ್ವಾಗತಿಸಿದರು. ತೆರೆದ ವಾಹನದಲ್ಲಿ ನಳಿನ್ ಕುಮಾರ್ ಅವರು ಮೆರವಣಿಗೆ ನಡೆಸಲಿದ್ದು, ಅವರಿಗೆ ಬಿಜೆಪಿ ಶಾಸಕರು ಹಾಗೂ ಸಂಸದರು ಸಾಥ್ ನೀಡಲಿದ್ದಾರೆ.

    ನೂತನ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪದಗ್ರಹಣ ಸಮಾರಂಭ ಇಂದು ಬೆಳಗ್ಗೆ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆಯಲಿದೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಸಿಎಂ ಬಿ.ಎಸ್.ಯಡಿಯೂರಪ್ಪ ನೂತನ ರಾಜ್ಯಾಧಕ್ಷರಿಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ 3ನೇ ಬಾರಿಗೆ ಆಯ್ಕೆಯಾಗಿರುವ ಕಟೀಲ್ 12 ವರ್ಷಗಳ ಕಾಲ ಆರ್‍ಎಸ್‍ಎಸ್‍ನ ಪೂರ್ಣಾವಧಿ ಪ್ರಚಾರಕರಾಗಿ ಕೆಲಸ ಮಾಡಿದ್ದಾರೆ. ಭಾನುವಾರವೇ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಬೇಕಿತ್ತು. ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ ನಿಧನದಿಂದ ಕಾರ್ಯಕ್ರಮ ಮುಂದೂಡಲಾಗಿತ್ತು.