Tag: League

  • ಮಾ.12ರಿಂದ ಕಿರುತೆರೆ ತಾರೆಯರ ಕ್ರಿಕೆಟ್: ಯಾರ ತಂಡದಲ್ಲಿ ಯಾರಿದ್ದಾರೆ?

    ಮಾ.12ರಿಂದ ಕಿರುತೆರೆ ತಾರೆಯರ ಕ್ರಿಕೆಟ್: ಯಾರ ತಂಡದಲ್ಲಿ ಯಾರಿದ್ದಾರೆ?

    ಎನ್ 1 ಕ್ರಿಕೆಟ್ (Cricket) ಅಕಾಡೆಮಿ ಆಯೋಜಿಸುವ ಕಿರುತೆರೆ ತಾರೆಯರ ಟೆಲಿವಿಷನ್ (Television) ಪ್ರೀಮಿಯರ್ ಲೀಗ್ (Leagu) ಸೀಸನ್ -2 ಇದೇ ತಿಂಗಳು ನಡೆಯುತ್ತಿದೆ. ಈಗಾಗಲೇ ತಂಡದ ನಾಯಕರು, ಆಟಗಾರರ ಪಟ್ಟಿ ಬಿಡುಗಡೆ ಮಾಡಿರುವ ಆಯೋಜಕರು ಇದೀಗ ಸೀಸನ್ -2 ಟ್ರೋಫಿ ಹಾಗೂ ಜೆರ್ಸಿ ಅನಾವರಣ ಮಾಡಿದ್ದಾರೆ.

    ಟಿಪಿಎಲ್ ಟ್ರೋಫಿ ಹಾಗೂ ಜೆರ್ಸಿ ಅನಾವರಣ ಕಾರ್ಯಕ್ರಮದಲ್ಲಿ ನಟ ವಿನೋದ್ ಪ್ರಭಾಕರ್, ರಣಜಿ ಆಟಗಾರರಾದ ಶರತ್ ಶ್ರೀನಿವಾಸ್, ಅರ್ಜುನ್ ಹೊಯ್ಸಳ, ದೇಗ ನಿಶ್ಚಲ್, ಬಿ.ಯು.ಶಿವಕುಮಾರ್, ಅನಿರುದ್ಧ್ ಜೋಶಿ ಹಾಗೂ ಭಾರತ ತಂಡವನ್ನು ಪ್ರತಿನಿಧಿಸಿರುವ ಮತ್ತು ರಣಜಿ ಆಟಗಾರ ಅಭಿಮನ್ಯು ಮಿಥುನ್ ಭಾಗಿಯಾಗಿ ಟಿಪಿಎಲ್ ಸೀಸನ್-2ಗೆ ಶುಭ ಹಾರೈಸಿದ್ದಾರೆ. ಇದನ್ನೂ ಓದಿ: ಖುಷಿ ದಾಂಪತ್ಯದ ಬಗ್ಗೆ ಸೀಕ್ರೆಟ್ ಬಿಚ್ಚಿಟ್ಟ ನಟಿ ರಾಧಿಕಾ ಪಂಡಿತ್

    ಮಾರ್ಚ್ 12ರಿಂದ 15ರ ವರೆಗೆ ಒಟ್ಟು ನಾಲ್ಕು ದಿನಗಳ ಕಾಲ ಟಿಪಿಎಲ್ ಸೀಸನ್ -2 ನಡೆಯುತ್ತಿದೆ. ಮೊದಲ ಸೀಸನ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದರಿಂದ ಸೀಸನ್ -2 ನಡೆಸಲು ಎನ್ 1 ಕ್ರಿಕೆಟ್ ಅಕಾಡೆಮಿ ಆಯೋಜಕ ಸುನೀಲ್ ಕುಮಾರ್.ಬಿ.ಆರ್ ನಿರ್ಧರಿಸಿದ್ದು, ಈ ಬಾರಿಯೂ ಅದ್ದೂರಿಯಾಗಿ, ಕಲರ್ ಫುಲ್ ಆಗಿ ಟಿಪಿಎಲ್ ಸೀಸನ್ -2 ನಡೆಯಲಿದೆ.

    ಟಿಪಿಎಲ್ ಸೀಸನ್ -2 ಬೆಂಗಳೂರಿನ ಅಶೋಕ ರೈಸಿಂಗ್ ಸ್ಟಾರ್ ಕ್ರಿಕೆಟ್ ಗ್ರೌಂಡ್ ನಲ್ಲಿ ನಡೆಯಲಿದೆ. ದಿ ಪರ್ಪಲ್ ರಾಕ್ ಪ್ಯಾಂಥರ್ಸ್, ಅಶ್ವಸೂರ್ಯ ರಿಯಾಲಿಟೀಸ್, ಎನಿಎಲ್ಪ್ ಟೂರ್ನಿವಲ್, ಇನ್ಸೇನ್ ಕ್ರಿಕೆಟ್ ಟೀಂ, ದಿ ಬುಲ್ ಸ್ಕ್ವಾಡ್, ಆಕ್ಸ್ ಫರ್ಡ್ ವಿನ್ ಟೀಂ ಎಂಬ ಆರು ತಂಡಗಳಿದ್ದು, ಲೂಸ್ ಮಾದ ಯೋಗಿ, ಮಂಜು ಪಾವಗಡ, ಹರ್ಷ ಸಿ.ಎಂ ಗೌಡ, ರವಿಶಂಕರ್ ಗೌಡ, ಶರತ್ ಪದ್ಮನಾಭ್, ಸಾಗರ್ ಬಿಳಿಗೌಡ  ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ.

    ಪ್ರತಿತಂಡಕ್ಕೂ ಓನರ್ ಹಾಗೂ ಸೆಲೆಬ್ರೆಟಿ ಅಂಬಾಸಿಡರ್ ಇರಲಿದ್ದು, ‘ದಿ ಪರ್ಪಲ್ ರಾಕ್ ಪ್ಯಾಂಥರ್ಸ್’ ತಂಡದ ಮಾಲಿಕತ್ವವನ್ನು ಗಣೇಶ್ ಪಾಪಣ್ಣ, ಯತೀಶ್ ವೆಂಕಟೇಶ್ ವಹಿಸಿಕೊಂಡಿದ್ದು, ರಂಜಿತ್ ಕುಮಾರ್ ‘ಅಶ್ವಸೂರ್ಯ ರಿಯಾಲಿಟೀಸ್’, ಮೊಹಮ್ಮದ್ ಜಾಕೀರ್ ಹುಸೇನ್ ಮತ್ತು ಪೂಜಾ ಶ್ರೀ ‘ಎನಿಎಲ್ಪ್ ಟೂರ್ನಿವಲ್’, ಫೈಜಾನ್ ಖಾನ್ ‘ಇನ್ಸೇನ್ ಕ್ರಿಕೆಟ್ ಟೀಂ’, ಮೊನೀಶ್ ‘ದಿ ಬುಲ್ ಸ್ಕ್ವಾಡ್’, ಅನಿಲ್ ಬಿ.ಆರ್,ದೇವನಾಥ್.ಡಿ, ರವಿ.ಜಿ.ಎಸ್  ‘ಆಕ್ಸ್ ಫರ್ಡ್ ವಿನ್ ಟೀಂ’ ಮಾಲಿಕತ್ವ ವಹಿಸಿಕೊಂಡಿದ್ದಾರೆ. ಐಶ್ವರ್ಯ ಸಿಂದೋಗಿ, ವಿರಾನಿಕ ಶೆಟ್ಟಿ, ರಾಶಿಕ ಶೆಟ್ಟಿ, ಸೊಹಾರ್ಧ, ಗಾನವಿ ಸುರೇಶ್, ಸೀಮಾ ವಸಂತ್, ಅದ್ವಿತಿ ಶೆಟ್ಟಿ, ಶ್ವೇತ ಪ್ರಸಾದ್, ಲಿಖಿತಾ ಅನಂತ್, ಯಶಸ್ವಿನಿ, ಆಶಿಕಾ ಗೌಡ, ಶ್ವೇತ ಕೊಗ್ಲೂರ್ ಟಿಪಿಎಲ್ ಸೀಸನ್ -2 ಅಂಬಾಸಿಡರ್ ಪಟ್ಟಿಯಲ್ಲಿದ್ದಾರೆ.

  • ಮಾರ್ಚ್ ನಲ್ಲಿ ಟೆಲಿವಿಷನ್ ಪ್ರಿಮಿಯರ್ ಲೀಗ್ -2

    ಮಾರ್ಚ್ ನಲ್ಲಿ ಟೆಲಿವಿಷನ್ ಪ್ರಿಮಿಯರ್ ಲೀಗ್ -2

    ಹಿರಿಯ ಕಲಾವಿದರು, ತಂತ್ರಜ್ಞರ ಬದುಕಿಗೆ ಆಸೆಯಾಗಬೇಕೆನ್ನುವ ಉದ್ದೇಶದಿಂದ ಎನ್ 1 ಕ್ರಿಕೆಟ್ ಅಕಾಡೆಮಿಯ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ಟೆಲಿವಿಷನ್ ಪ್ರಿಮಿಯರ್ ಲೀಗ್ -2 ಲೋಗೋ ಬಿಡುಗಡೆ ಹಾಗೂ ಸುದ್ದಿಗೋಷ್ಟಿ ಗುರುವಾರ ರಾತ್ರಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಪುನೀತ್ ರಾಜ್‍ಕುಮಾರ್ ಅವರನ್ನು ಸ್ಮರಿಸಿ ಆ ಬಳಿಕ ಆ ತಂಡಗಳ ಮಾಲೀಕರು ಹಾಗೂ ಅಂಬಾಸಿಡರ್ ಗಳ ಸಮ್ಮುಖದಲ್ಲಿ ಲೋಗೋ ಬಿಡುಗಡೆ ಮಾಡಲಾಯಿತು.

    ಆರು ತಂಡದ ಮಾಲೀಕರು ಮಾತನಾಡಿ, ಈ ರೀತಿಯ ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ಕ್ರಿಕೆಟ್ ಆಯೋಜನೆ ಮಾಡುವ ಸುನೀಲ್ ಕುಮಾರ್ ಅವರಿಗೆ ಅಭಿನಂದನೆ ಎಂದರು. ಎನ್ 1 ಕ್ರಿಕೆಟ್ ಅಕಾಡೆಮಿಯ, ಟೆಲಿವಿಷನ್ ಪ್ರಿಮಿಯರ್ ಲೀಗ್ ನ ಆಯೋಜಕರಾದ ಸುನೀಲ್ ಕುಮಾರ್ ಅವರು ಮಾತನಾಡಿ,  “ಕಳೆದ ಸೀಸನ್ ನಂತೆ ಈ ಸೀಸನ್ ನಲ್ಲೂ ಎಲ್ಲಾ ಮಾಲೀಕರು ನಮ್ಮೊಂದಿಗೆ ಸಹಕರಿಸಿದ್ದಾರೆ. 4ನೇ ತಾರೀಖು ಆಟಗಾರರ ಹರಾಜು ಪ್ರಕ್ರಿಯೆ ಇರುತ್ತದೆ. ಆ ಬಳಿಕ ಜೆರ್ಸಿ ಲಾಂಚ್ ಇರುತ್ತದೆ. 4 ದಿನ ಪಂದ್ಯಾವಳಿ ನಡೆಯುತ್ತದೆ. ಫೈನಲ್ ಪಂದ್ಯ ಹೊನಲು ಬೆಳಕಿನಲ್ಲಿ ನಡೆಯಲಿದೆ.  ಗೆದ್ದ ತಂಡಕ್ಕೆ  4 ಲಕ್ಷ ನಗದು ಬಹುಮಾನ ಹಾಗೂ ‌ಮ್ಯಾನ್ ಆಫ್ ದಿ ಸಿರೀಸ್ ಗೆ ಬೈಕ್ ಇರುತ್ತದೆ. ಪ್ರತಿ ಪಂದ್ಯಕ್ಕೂ‌ ಆರೇಂಜ್ ಕ್ಯಾಪ್, ಪರ್ಪಲ್ ಕ್ಯಾಪ್ ಪಡೆದವರಿಗೆ ಕ್ಯಾಶ್ ಪ್ರೈಸ್ ಕೂಡ ಇರುತ್ತದೆ. ಮುಂದಿನ ದಿನಗಳಲ್ಲಿ  ಪಂದ್ಯಾವಳಿಯ ದಿನಾಂಕವನ್ನು ಹೇಳುತ್ತೇನೆ.

    ಪ್ರತಿ ತಂಡದಲ್ಲೂ ಇಬ್ಬರು ಅಂಬಾಸಿಡರ್ ಗಳಿರುತ್ತಾರೆ. ರಿವ್ಯೂ ಸಿಸ್ಟಂ, ಎಲ್ ಬಿಡಬ್ಲ್ಯೂ ಇರುತ್ತದೆ.12 ಓವರ್ ನ ಮ್ಯಾಚ್ ಆಗಿರುತ್ತದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೇಗಿರುತ್ತದೆ ಹಾಗೆಯೇ ನಮ್ಮಲ್ಲೂ ಬಹುತೇಕ ಎಲ್ಲಾ ವ್ಯವಸ್ಥೆಗಳಿರುತ್ತದೆ ಎಂದರು. ಇದನ್ನೂ ಓದಿ: ಆದಿಲ್ ಬೇರೆ ಹುಡುಗಿ ಜೊತೆ ಸಂಬಂಧ ಇಟ್ಟುಕೊಂಡಿದ್ದಾನೆ : ಕಣ್ಣೀರಿಟ್ಟ ನಟಿ ರಾಖಿ ಸಾವಂತ್

    ಎಂ.ಎಸ್‌.ಪಾಳ್ಯದ ಬಳಿಯಿರುವ ಅಶೋಕ್ ಇಂಟರ್ ನ್ಯಾಶನಲ್ ಮೈದಾನದಲ್ಲಿ ಪಂದ್ಯಗಳು ನಡೆಯುತ್ತದೆ. ಒಂದು ತಂಡದಲ್ಲಿ 13 ಸದಸ್ಯರಿರುತ್ತಾರೆ. ಪಂದ್ಯಗಳ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯಗಳು ‌ಇರುತ್ತದೆ ಎಂದರು. ಫೈನಲ್ ದಿನ ಅಪ್ಪು ಅವರ ಹಾಡುಗಳ ಕಾರ್ಯಕ್ರಮವಿರುತ್ತದೆ. ಅದೇ ದಿನ ನಾವು ಈ ಬಾರಿ ಯಾವ ಕಲಾವಿದರಿಗೆ ಆರ್ಥಿಕವಾಗಿ ನೆರವಾಗುತ್ತೇವೆ ಎನ್ನುವುದನ್ನು ಹೇಳುತ್ತೇವೆ ಎಂದು ಆಯೋಜಕ ಸುನೀಲ್ ಕುಮಾರ್ ” ಟೆಲಿವಿಷನ್ ಪ್ರೀಮಿಯರ್ ಲೀಗ್ ಸೀಸನ್ 2″ರ ಬಗ್ಗೆ ಸಂಪೂರ್ಣ ವಿವರಣೆ ನೀಡಿದರು.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k