– ಅರ್ಥವಾಗದ ವಿಷಯದ ಬಗ್ಗೆ ಅರ್ಥ ಮಾಡಿಸುತ್ತೇನೆಂದು ಸ್ನೇಹ ಸಂಪಾದಿಸಿದ್ದ!
ಶಿವಮೊಗ್ಗ: ಮದುವೆಯಾಗುವುದಾಗಿ ನಂಬಿಸಿ ಖಾಸಗಿ ಕಾಲೇಜಿನ ಉಪನ್ಯಾಸಕನೋರ್ವ (Lecturer) ವಿದ್ಯಾರ್ಥಿನಿ (Student) ಮೇಲೆ ಅತ್ಯಾಚಾರ ನಡೆಸಿರುವ ಆರೋಪ ಶಿವಮೊಗ್ಗ (Shivamogga) ಜಿಲ್ಲೆಯ ಸಾಗರ (Sagara) ಪಟ್ಟಣದಲ್ಲಿ ಕೇಳಿಬಂದಿದೆ.
ಅತ್ಯಾಚಾರ ನಡೆದಿರುವ ಕುರಿತು ವಿದ್ಯಾರ್ಥಿನಿ ಹಾಗು ಆಕೆಯ ಪೋಷಕರು ಶಿವಮೊಗ್ಗದ ಮಹಿಳಾ ಠಾಣೆಗೆ ದೂರು ಸಲ್ಲಿಸಿದ್ದಾರೆ. ದೂರು ಸ್ವೀಕರಿಸಿದ ಪೊಲೀಸರು ಆರೋಪಿ ಉಪನ್ಯಾಸಕ ಪುನೀತ್‌ನನ್ನು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ನಾಪತ್ತೆಯಾಗಿದ್ದ ರಷ್ಯಾದ Mi-8T ಹೆಲಿಕಾಪ್ಟರ್ ಪತನ – 22 ಮಂದಿ ಸಾವು
ಹಾಸನ: ಹೃದಯಾಘಾತದಿಂದ (Heart Attack) ಉಪನ್ಯಾಸಕ ಸಾವನ್ನಪ್ಪಿರುವ ಘಟನೆ ಹಾಸನ (Hassan) ಜಿಲ್ಲೆ, ಹೊಳೆನರಸೀಪುರ ತಾಲೂಕಿನ ಮಲ್ಲಪ್ಪನಹಳ್ಳಿ ಗ್ರಾಮದಲ್ಲಿ ನಡೆದಿದೆ.
ತ್ಯಾಗರಾಜ್ ಎಂಟಿ (56) ಮೃತ ಉಪನ್ಯಾಸಕ. ಹಳೇಕೋಟೆ ಹೋಬಳಿ, ಹರದನಹಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ತ್ಯಾಗರಾಜ್ ರಾತ್ರಿ ಮನೆಯಲ್ಲಿ ಕುರ್ಚಿ ಮೇಲೆ ಕುಳಿತು ಟಿವಿ ನೋಡುತ್ತಿದ್ದರು. ಈ ವೇಳೆ ಹೃದಯಾಘಾತವಾಗಿ ಅವರು ಕುಳಿತಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಅಪಾರ್ಟ್‍ಮೆಂಟ್ ಹೊರಗೆ ನಡೆದುಕೊಂಡು ಹೋಗ್ತಿದ್ದ ಬಿಜೆಪಿ ನಾಯಕನ ಗುಂಡಿಕ್ಕಿ ಹತ್ಯೆ
ತ್ಯಾಗರಾಜ್ ಮಾನಸ ಪದವಿ ಪೂರ್ವ ಕಾಲೇಜು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದರು. ತ್ಯಾಗರಾಜ್ ನಿಧನಕ್ಕೆ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಕಂಬನಿ ಮಿಡಿದಿದ್ದಾರೆ. ಇದನ್ನೂ ಓದಿ: ಉತ್ತರ ಕನ್ನಡದಲ್ಲಿ ಬಂದ್ ಆಗುತ್ತಾ 300ಕ್ಕೂ ಹೆಚ್ಚು ಶಾಲೆ..?
ರಾಯಚೂರು: ಕ್ಲಾಸ್ ರೂಂನಲ್ಲಿಯೇ ಉಪನ್ಯಾಸಕರ ಎದುರೇ ರಾಡ್ ಹಿಡಿದು ವಿದ್ಯಾರ್ಥಿಗಳು (Students) ಹೊಡೆದಾಡಿಕೊಂಡಿರುವ ಘಟನೆ ರಾಯಚೂರಿನ (Raichuru) ನವೋದಯ (Navoodaya) ವಿದ್ಯಾ ಸಂಸ್ಥೆಯಲ್ಲಿ ನಡೆದಿದೆ.
ಆಗಾಗ ಶಂಭುಲಿಂಗ, ಶಂಕರ್ ರೇಗಿಸುತ್ತಿದರೂ ಸಹಿಸಿಕೊಂಡಿದ್ದ ರೋಹಿತ್ ತನ್ನ ತಾಯಿ ಬರ್ತ್‍ಡೇಗೆ ಸ್ಟೇಟಸ್ ಹಾಕಿದ್ದ. ಆದರೆ ರೋಹಿತ್ ತಾಯಿಯ ಫೋಟೋವನ್ನು ಶಂಕರ್ ಮತ್ತು ಶಂಭುಲಿಂಗ ದುರ್ಬಳಕೆ ಮಾಡಿದ ಆರೋಪದಿಂದ ರೊಚ್ಚಿಗೆದ್ದ ರೋಹಿತ್ ಕಾಲೇಜಿನ ಟೆರೆಸ್ ಮೇಲಿದ್ದ ರಾಡ್ (Rod) ತೆಗೆದುಕೊಂಡು ಬಂದು ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾನೆ. ಉಪನ್ಯಾಸಕರ (Lecturer) ಕಣ್ಣೆದುರೇ ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯು ನೇತಾಜಿ ನಗರ ಪೊಲೀಸ್ ಠಾಣಾ (Netaji Nagar Police Station) ವ್ಯಾಪ್ತಿಯಲ್ಲಿ ನಡೆದಿದೆ. ಇದನ್ನೂ ಓದಿ: ಬ್ಯಾಂಕ್‍ಗೆ ರೈಫಲ್ ಹಿಡಿದು ನುಗ್ಗಿದ ಸನ್ಯಾಸಿ – ಸಾಲ ನೀಡದ್ದಕ್ಕೆ ಲೂಟಿ ಮಾಡೋದಾಗಿ ಬೆದರಿಕೆ
Live Tv
[brid partner=56869869 player=32851 video=960834 autoplay=true]
ಚಾಮರಾಜನಗರ: ಖಾಸಗಿ ಕಾಲೇಜಿನ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಚಂದುಳ್ಳಿ ಚೆಲುವೆಯ ಸಾವು ಎಲ್ಲರಿಗೂ ಶಾಕ್ ತಂದುಕೊಟ್ಟಿದೆ. ಈಕೆಯ ಸಾವಿನ ಸುದ್ದಿ ತಿಳಿದು ನೂರಾರು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಎಲ್ಲದಕ್ಕಿಂತ ಹೆಚ್ಚಾಗಿ ಪಾಲಕರು ಮರುಗಿದ್ದಾರೆ.
ಆಕೆ ಬಾಳಿ ಬದುಕಬೇಕಿದ್ದ ಯುವತಿ. ಆದ್ರೆ ಆಕೆಗೆ ಏನಾಯ್ತೋ ಏನೋ ತನ್ನ ಹುಟ್ಟುಹಬ್ಬದ ದಿನವೇ ತನ್ನ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾಳೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಉಪನ್ಯಾಸಕಿ ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ಚೆಲುವೆ. ಚಂದನಾ ಚಾಮರಾಜನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೆಎಸ್‍ಎಸ್ ಕಾಲೇಜಿನ ಹಾಸ್ಟೆಲ್‍ನಲ್ಲೇ ವಾಸ್ತವ್ಯ ಹೂಡಿದ್ದಳು. ಇದನ್ನೂ ಓದಿ: ಪಾಕ್ ರಾಜಕಾರಣಿ ಸಂಬಂಧಿ ಕಾರ್ ಓವರ್‌ಟೇಕ್ – ಹಿಂದೂ ಕುಟುಂಬದ ಮೇಲೆ ದಾಳಿ
ಈಕೆ ಎಲ್ಲರ ಜೊತೆಯಲ್ಲೂ ಉತ್ತಮ ಬಾಂದವ್ಯ ಹೊಂದಿದ್ರು. ಇವತ್ತು ಆಕೆಯ ಹುಟ್ಟುಹಬ್ಬ ಇತ್ತು. ಹೀಗಾಗಿ ಆಕೆಯ ಸ್ನೇಹಿತರು, ವಿದ್ಯಾರ್ಥಿಗಳು ಶುಭಾಶಯ ಕೋರಿದ್ರು. ಆದ್ರೆ ಇದಾದ ನಂತರ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಜೊತೆ ಕೊಠಡಿಯಲ್ಲಿದ್ದ ಸ್ನೇಹಿತರು ಹೊರಹೋದ ನಂತರ ತನ್ನ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಡೆತ್ ನೋಟ್‍ನಲ್ಲಿ ಬಯಲಾದ ಸತ್ಯ
ಆತ್ಮಹತ್ಯೆಗೂ ಮುನ್ನ ಚಂದನಾ ಡೆತ್‍ನೋಟ್ ಬರೆದಿಟ್ಟಿದ್ದು, ಯಾಕೆ ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಪ್ರಾರಂಭಿಸಿದ್ದು, ತನ್ನ ಮನದಾಳದ ನೋವನ್ನು ಅಕ್ಷರ ರೂಪ ನೀಡಿ ಕೊನೆಗೆ ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತನ್ನ ಇಬ್ಬರು ಅಕ್ಕಂದಿರಿಗೆ ಸಾರಿ ಕೇಳಿರುವ ಚಂದನಾ, ತಂಗಿಯನ್ನು ಉದ್ದೇಶಿಸಿ ಯಾವುದೇ ಕಾರಣಕ್ಕೂ ಉಪನ್ಯಾಸಕಿ ಹುದ್ದೆಗೆ ಬರಬೇಡ ಎಂದು ತನ್ನ ಕೊನೆಯ ಸಲಹೆಯನ್ನು ಕೊಟ್ಟಿದ್ದಾರೆ.
ತಂದೆ ಜೊತೆ ಕೊನೆಯ ಬಾರಿ ಪಾನಿಪೂರಿ
ಇಂದು ಚಂದನಾಳ ಹುಟ್ಟುಹಬ್ಬವಾಗಿದ್ದು, ಆಕೆಯ ತಂದೆ ಕೇಕ್ ಕಟ್ ಮಾಡಿಸಲು ಸಕಲ ಸಿದ್ಧತೆಯನ್ನು ನಡೆಸಿದ್ದರು. ಸೋಮವಾರ ಸಂಜೆ ಅಷ್ಟೇ ಮಗಳೊಟ್ಟಿಗೆ ಪಾನಿಪೂರಿ ಸೇವಿಸಿ ಊರಿಗೆ ಬರುವಂತೆ ಹೇಳಿದ್ದರಂತೆ, ಬೆಳಗ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಅವರ ತಂದೆ ಹಾಸ್ಟೆಲ್‍ನ ಸೆಕ್ಯೂರಿಟಿಗೆ ಕರೆ ಮಾಡಿ ಚಂದನಾ ಫೋನ್ ತೆಗೆಯುತ್ತಿಲ್ಲವೆಂದು ತಿಳಿಸಿದ್ದಾರೆ. ಈ ವೇಳೆ ಚಂದನಾ ಕೊಠಡಿ ಬಳಿ ಹೋದ ವಾರ್ಡನ್ ಚಂದನಾ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಇದನ್ನೂ ಓದಿ: ಮೊಹರಂ ಹಬ್ಬದಲ್ಲೂ ಅಪ್ಪು – ಹೊಂಡದಲ್ಲಿ ಪುನೀತ್ ಫೋಟೋ ಹಿಡಿದು ಬಂದ ಬಾಲಕ
ಕೂಡಲೇ ಆತ ಹಾಸ್ಟೆಲ್‍ನ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ರಾಯಚೂರು: ಉಪನ್ಯಾಸಕರೊಬ್ಬರನ್ನು ದೇವದುರ್ಗ-ಶಹಾಪೂರ ನಡು ರಸ್ತೆಯಲ್ಲಿಯೇ ಬರ್ಬರವಾಗಿ ಕೊಲೆ ಮಾಡಲಾಗಿದೆ.
ಮಾನಪ್ಪ ಗೋಪಳಾಪುರ(59) ಕೊಲೆಯಾದ ವ್ಯಕ್ತಿ ರ್ದುದೈವಿ. ಮಾನಪ್ಪ ಅವರು ದೇವದುರ್ಗದ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ನಿರ್ವಯಿಸುತ್ತಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆ ಕೊಲೆ ನಡೆದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಮಹಿಳೆ ಕತ್ತು ಹಿಸುಕಿ ಸಮಾಧಿ ಮಾಡಲು ಹೋಗಿ ತಾನೇ ಸತ್ತ
ಕತ್ತು, ತಲೆ ಭಾಗಕ್ಕೆ ಗಂಭೀರಗಾಯಗಳಾಗಿದ್ದು, ಮಾನಪ್ಪ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಯಾದಗಿರಿಯ ಶಹಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಕೊಲೆಯ ಬಗ್ಗೆ ವಿವರಗಳು ಸಿಕ್ಕಿಲ್ಲ. ಈ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ.
ತುಮಕೂರು: ಹಿಜಬ್ ತೆಗೆದು ತರಗತಿಯೊಳಗೆ ಬರಬೇಕು ಎಂಬ ನಿಯಮ ಜಾರಿಯಾಗಿದ್ದರಿಂದ ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ ಕೊಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ನಗರದ ಪುಟ್ಟಸ್ವಾಮಯ್ಯನ ಪಾಳ್ಯದ ಜೈನ್ ಪಿಯು ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಚಾಂದಿನಿ ನಯಾಜ್ ರಾಜೀನಾಮೆ ಕೊಟ್ಟವರು. ಕಳೆದ ಮೂರು ವರ್ಷಗಳಿಂದ ಜೈನ್ ಕಾಲೇಜು, ವಿದ್ಯಾವಾಹಿನಿ ಕಾಲೇಜು ಸೇರಿದಂತೆ ಹಲವು ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಹಿಜಬ್ ವಿವಾದ: ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!
ಹಿಜಬ್ ವಿವಾದದಿಂದಾಗಿ ತಮ್ಮ ಧರ್ಮಕ್ಕೆ ಹೆಚ್ಚು ಅಧ್ಯತೆ ಕೊಟ್ಟು, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇವರು ಮಾತ್ರವಲ್ಲ ಕಾಲೇಜಿನ ವಿದ್ಯಾರ್ಥಿನಿಯರು ಧರ್ಮವೇ ಮುಖ್ಯ ಎಂದು ಕಾಲೇಜನ್ನೆ ಬಿಟ್ಟು ಹೋಗುತ್ತಿದ್ದಾರೆ. ಆದರೆ ನ್ಯಾಯಾಲಯವು ಮಕ್ಕಳಲ್ಲಿ ಒಂದೇ ರೀತಿ ನಿಯಮವಿರಬೇಕು ಎಂದು ಈ ನಿರ್ಧಾರ ಮಾಡಿದ್ದು, ಇದಕ್ಕೆ ಪರ-ವಿರೋಧ ಕೇಳಿಬರುತ್ತಿದೆ.
ಬೆಂಗಳೂರು: ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಒಂದೆರಡು ದಿನಗಳಲ್ಲಿ ಫಲಿತಾಂಶ ಹೊರಬೀಳಲಿದೆ. ಆದ್ದರಿಂದ ಅತಿಥಿ ಉಪನ್ಯಾಸಕರು ಮುಷ್ಕರ ಕೈಬಿಟ್ಟು, ಬೋಧನೆಗೆ ಹಿಂದಿರುಗಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.
ಅತಿಥಿ ಉಪನ್ಯಾಸಕರ ಬೇಡಿಕೆಗಳ ಈಡೇರಿಕೆ ಮತ್ತು ಸಮಸ್ಯೆಗಳನ್ನು ಕುರಿತು ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಕಚೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮತ್ತು ತಮ್ಮ ನೇತೃತ್ವದಲ್ಲಿ ಮಂಗಳವಾರ ನಡೆದ ಮೂರು ತಾಸುಗಳ ಸಭೆಯ ನಂತರ ಅವರು ಈ ಭರವಸೆ ನೀಡಿದರು. ಸಭೆಯಲ್ಲಿ ಉಪನ್ಯಾಸಕರಿಗೆ ಸಂಬಂಧಿಸಿದ ನಾಲ್ಕೈದು ಸಂಘಗಳ ಪ್ರತಿನಿಧಿಗಳೂ ಭಾಗವಹಿಸಿದ್ದರು.
ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತು ಶೀಘ್ರದಲ್ಲೇ ಸಿಹಿಸುದ್ದಿ ಕೊಡಲಿದ್ದೇವೆ.
ರಾಜ್ಯದಲ್ಲಿರುವ 14 ಸಾವಿರ ಅತಿಥಿ ಉಪನ್ಯಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ಸಂಬಂಧ ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಸಾಕಷ್ಟು ಚರ್ಚಿಸಿದ್ದು, ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಸಭೆಯಲ್ಲಿ ಪಾಲ್ಗೊಂಡಿದ್ದ ವಿಧಾನ ಪರಿಷತ್ತಿನ ಹಲವು ಸದಸ್ಯರೊಂದಿಗೆ ವಿಷಯವನ್ನು ಕುರಿತು ಚರ್ಚಿಸಲಾಯಿತು. ಜೊತೆಗೆ ಅತಿಥಿ ಉಪನ್ಯಾಸಕರ ಸಂಘಗಳ ಪರವಾಗಿ ಸಲ್ಲಿಸಿದ ಅಹವಾಲುಗಳನ್ನು ಕೂಡ ಪರಿಶೀಲಿಸಲಾಯಿತು. ಇದನ್ನೂ ಓದಿ: ಅಯೋಧ್ಯೆಯ ರಾಮಮಂದಿರಕ್ಕೆ 400 ಕೆಜಿಯ ಬೀಗ ದೇಣಿಗೆ!
ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ. ಆದ್ದರಿಂದ ನಮ್ಮ ಮೇಲೆ ನಂಬಿಕೆ ಇಟ್ಟು ಮುಷ್ಕರ ಕೈಬಿಟ್ಟು ಬೋಧನೆಗೆ ಹಿಂದಿರುಗಬೇಕು.
ಸಭೆಯಲ್ಲಿ ವಿಧಾನಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ, ಅತಿಥಿ ಉಪನ್ಯಾಸಕರ ಸಂಘದ ಪ್ರಮುಖರು, ಸಂಬಂಧಪಟ್ಟ ಅಧಿಕಾರಿಗಳು, ಮತ್ತಿತರ ಪ್ರಮುಖರು ಹಾಜರಿದ್ದರು. pic.twitter.com/Y2XxQCvJBk
ನಂತರ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಜತೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ಪ್ರಕಟಿಸಲಾಗುವುದು. ಸಿಎಂ ಅವರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಚಿಕಿತ್ಸೆ ಪಡೆಯುತ್ತಿರುವ ಕಾರಣ ಒಂದೆರಡು ದಿನಗಳಲ್ಲಿ ಸೂಕ್ತ ತೀರ್ಮಾನ ಪ್ರಕಟಿಸಲಾಗುವುದು. ಅತಿಥಿ ಉಪನ್ಯಾಸಕರ ಸಮಸ್ಯೆ ಇತ್ಯರ್ಥದಲ್ಲಿ ಆರ್ಥಿಕ ಹೊರೆ ಮುಂತಾದ ಅಂಶಗಳಿವೆ. ಒಟ್ಟಿನಲ್ಲಿ ವಿಚಾರವನ್ನು ಸಹಾನುಭೂತಿಯಿಂದ ಪರಿಶೀಲಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಬರದನಾಡಲ್ಲಿ ಗ್ರಾಮೀಣ ರಸ್ತೆ, ಅಂತರ್ಜಲ ಮಟ್ಟ ಹೆಚ್ಚಿಸಲು ಒತ್ತು: ತಿಪ್ಪಾರೆಡ್ಡಿ
ಕೊಪ್ಪಳ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ವಿದ್ಯಾರ್ಥಿಗಳ ಜೊತೆ ಹೆಜ್ಜೆ ಹಾಕಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಬಸಣ್ಣಿ ಬಾ ಹಾಡಿಗೆ ದೈಹಿಕ ಶಿಕ್ಷಣ ಉಪನ್ಯಾಸಕಿ ಶೋಭಾ ಹೆಜ್ಜೆ ಹಾಕಿದ್ದರು. ಉಪನ್ಯಾಸಕಿ ತಮ್ಮ ಜೊತೆ ಡ್ಯಾನ್ಸ್ ಮಾಡಿದ್ದಕ್ಕೆ ವಿದ್ಯಾರ್ಥಿಗಳು ಎರಡು ಸ್ಟೆಪ್ಸ್ ಹೆಚ್ಚು ಹಾಕಿ ಸಂಭ್ರಮಿಸಿದ್ದಾರೆ.
ಸದ್ಯ ಈ ವೀಡಿಯೋ ಸ್ಥಳೀಯ ಮಟ್ಟದಲ್ಲಿ ವೈರಲ್ ಆಗಿದ್ದು, ಪರ-ವಿರೋಧ ಚರ್ಚೆಗಳು ನಡೆಯುತ್ತಿವೆ. ವಿದ್ಯಾರ್ಥಿಗಳ ಜೊತೆ ಈ ರೀತಿ ಡ್ಯಾನ್ಸ್ ಮಾಡೋದು ಎಷ್ಟು ಸರಿ ಎಂದು ಕೆಲವರು ಪ್ರಶ್ನೆ ಮಾಡುತ್ತಿದ್ದಾರೆ. ಮತ್ತೊಂದು ವರ್ಗದ ಜನ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುವ ವೀಡಿಯೋಗಳನ್ನ ಶೇರ್ ಮಾಡಿಕೊಳ್ಳುವ ನಾವು ನಮ್ಮಲ್ಲಿ ಈ ರೀತಿ ನಡೆದ್ರೆ ಪ್ರಶ್ನೆ ಮಾಡೋದು ಎಷ್ಟು ಸರಿ ಎಂದು ಶೋಭಾ ಅವರ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಚಿಕ್ಕಬಳ್ಳಾಪುರ: ಹುಣಸೆ ಮರಕ್ಕೆ ನೇಣು ಬಿಗಿದುಕೊಂಡು ಉಪನ್ಯಾಸಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಸೋಮನಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.
ಗ್ರಾಮದ 30 ವರ್ಷದ ಮುರುಳಿ ಆತ್ಮಹತ್ಯೆಗೆ ಶರಣಾದ ಉಪನ್ಯಾಸಕ. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕನಾಗಿ ಕೆಲಸ ಮಾಡ್ತಿದ್ದ ಮುರುಳಿ, ಪಕ್ಕದ ಗ್ರಾಮದ ಯುವತಿಯನ್ನ ಪ್ರೀತಸುತ್ತಿದ್ದರು ಎನ್ನಲಾಗಿದೆ. ಈ ವಿಚಾರ ಯುವತಿ ಪೋಷಕರಿಗೆ ತಿಳಿದು ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿ ಗಲಾಟೆ ಮಾಡಿದ್ರು ಎನ್ನಲಾಗಿದೆ. ಹೀಗಾಗಿ ಇದೇ ವಿಚಾರಕ್ಕೆ ಮನನೊಂದು ಮುರುಳಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಮೃತ ಯುವಕನ ಜೇಬಿನಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ದಿಬ್ಬೂರಹಳ್ಳಿ ಪೊಲೀಸರು ಮೃತದೇಹ ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಶಿಡ್ಲಘಟ್ಟ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ದಿಬ್ಬೂರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿ ಉಪನ್ಯಾಸಕಿ ಮಗ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.
ನಗರದ ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಉಪನ್ಯಾಸಕಿ ಮಗ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ. ಚಂದನ್ ವಿದ್ಯಾರ್ಥಿ ನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ. ಯುವಕನ ತಾಯಿ ಪ್ರತಿಷ್ಠಿತ ಕಾಲೇಜಿನಲ್ಲಿ ಉಪನ್ಯಾಸಕಿಯಾಗಿದ್ದು, ಅದೇ ಕಾಲೇಜಿನಲ್ಲಿ ವಿದ್ಯಾರ್ಥಿನಿ ಓದುತ್ತಿದ್ದಳು. ಈ ವೇಳೆ ವಿದ್ಯಾರ್ಥಿನಿಯನ್ನು ಯುವಕ ಪರಿಚಯ ಮಾಡಿಕೊಂಡಿದ್ದ.
ಉಪನ್ಯಾಸಕಿಯನ್ನು ಭೇಟಿ ಮಾಡಲೆಂದು ಮನೆಗೆ ಆಗಮಿಸಿದಾಗ ವಿದ್ಯಾರ್ಥಿನಿ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಈ ಸಂಬಂಧ ವಿದ್ಯಾರಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಚಂದನ್ ನನ್ನು ಬಂಧಿಸಲಾಗಿದೆ.