Tag: Lecturer

  • ಕೊರೊನಾಗೆ ಪಿಯು ಉಪನ್ಯಾಸಕ ಬಲಿ

    ಕೊರೊನಾಗೆ ಪಿಯು ಉಪನ್ಯಾಸಕ ಬಲಿ

    ಹಾಸನ: ಕೊರೊನಾ ಸೋಂಕು ತಗುಲಿ ಜಿಲ್ಲೆಯ ಉಪನ್ಯಾಸಕರೊಬ್ಬರು ಸಾವನ್ನಪ್ಪಿದ್ದು, ಇದರಿಂದಾಗಿ ಜಿಲ್ಲೆಯ ಶಿಕ್ಷಕ ಹಾಗೂ ಉಪನ್ಯಾಸಕರಲ್ಲಿ ಆತಂಕ ಹೆಚ್ಚಿದೆ.

    ಜಿಲ್ಲೆಯ ಚನ್ನರಾಯಪಟ್ಟಣದ ಸರ್ಕಾರಿ ಕಾಲೇಜಿನಲ್ಲಿ ಇಂಗ್ಲಿಷ್ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದ ಜಯಂತ್‍ಕುಮಾರ್.ಬಿಬಿ ಅವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 4, 2020 ರಂದು ಕಾಲೇಜಿನಿಂದ ಚುನಾವಣಾ ಕೆಲಸಕ್ಕೆ ನಿಯೋಜನೆಗೊಂಡಿದ್ದರು. ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಕೆಲಸಕ್ಕೆ ಹಾಜರಾಗಿದ್ದರು. ಕರ್ತವ್ಯದ ವೇಳೆಯೇ ಕೊರೊನಾ ಸೋಂಕು ತಗುಲಿತ್ತು ಎನ್ನಲಾಗಿದೆ.

    ಹಾಸನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಲತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಉಪನ್ಯಾಸಕನ ಸಾವಿನಿಂದಾಗಿ ಜಿಲ್ಲೆಯ ಶಿಕ್ಷಕರು ಹಾಗೂ ಉಪನ್ಯಾಸಕರಲ್ಲಿ ಆತಂಕ ಹೆಚ್ಚಿದೆ.

  • ಆನ್‍ಲೈನ್ ಕ್ಲಾಸ್‍ನಲ್ಲಿ ಶಿಕ್ಷಕನಿಗೆ ‘ದಿಸ್ ಮ್ಯಾನ್ ಸೋ ಸೆಕ್ಸಿ’ ಎಂದ ವಿದ್ಯಾರ್ಥಿನಿ

    ಆನ್‍ಲೈನ್ ಕ್ಲಾಸ್‍ನಲ್ಲಿ ಶಿಕ್ಷಕನಿಗೆ ‘ದಿಸ್ ಮ್ಯಾನ್ ಸೋ ಸೆಕ್ಸಿ’ ಎಂದ ವಿದ್ಯಾರ್ಥಿನಿ

    – ಎಲ್ಲ ಕೇಳಿಸ್ತು ಎಂದು ಗೆಸ್ಟ್ ಲೆಕ್ಚರರ್

    ವಾಷಿಂಗ್‍ಟನ್: ಆನ್‍ಲೈನ್ ಕ್ಲಾಸ್‍ನಲ್ಲಿ ವಿದ್ಯಾರ್ಥಿನಿ ಶಿಕ್ಷಕನಿಗೆ ಸೆಕ್ಸಿ ಎಂದು ಕರೆದಿರುವ ವೀಡಿಯೋ ಟಿಕ್‍ಟಾಕ್ ಸೇರಿದಂತೆ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಟಿಕ್‍ಟಾಕ್ ನಲ್ಲಿ 50 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆಯಾಗಿದ್ದು, 8 ಸಾವಿರಕ್ಕೂ ಹೆಚ್ಚು ಕಮೆಂಟ್ ಬಂದಿವೆ.

    ಕೊರೊನಾ ಹಿನ್ನೆಲೆ ಸರ್ಕಾರಗಳು ಆನ್‍ಲೈನ್ ತರಗತಿಗಳಿಗೆ ಹೆಚ್ಚು ಒತ್ತು ನೀಡುತ್ತಿವೆ. ವಿದೇಶಗಳಲ್ಲಿ ಉನ್ನತ ವ್ಯಾಸಂಗದ ವಿದ್ಯಾರ್ಥಿಗಳಿಗೆ ವರ್ಚುವಲ್ ತರಗತಿಗಳು ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಗಳನ್ನು ರೆಕಾರ್ಡ್ ಮಾಡಿಕೊಂಡು ಅಭ್ಯಾಸ ಮಾಡುತ್ತಿದ್ದಾರೆ. ಕಾಲೇಜ್ ಆದ್ರೆ ಕೊನೆ ಬೆಂಚಿನಲ್ಲಿ ಕುಳಿತು ಪಿಸುಗುಟ್ಟಿದರೂ ಅದು ಶಿಕ್ಷಕರಿಗೆ ಕೇಳಿಸಲ್ಲ. ಇದೇ ರೀತಿ ಪಿಸುಗುಟ್ಟ ವಿದ್ಯಾರ್ಥಿನಿಯ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಪಾದರಸದಂತೆ ಹರಿದಾಡುತ್ತಿವೆ.

    ವಿದ್ಯಾರ್ಥಿನಿ ಹೇಳಿದ್ದೇನು?: ಆನ್‍ಲೈನ್ ಕ್ಲಾಸ್ ಆರಂಭವಾದ ಕೂಡಲೇ ಅತಿಥಿ ಉಪನ್ಯಾಸಕ ಎಲ್ಲ ವಿದ್ಯಾರ್ಥಿಗಳು ಹಾಜರಾಗಿರೋದನ್ನ ಖಚಿತ ಪಡಿಸಿಕೊಳ್ಳುತ್ತಿರುತ್ತಾರೆ. ಈ ವೇಳೆ ಕ್ಲಾಸ್‍ಗೆ ಹಾಜರಾದ ವಿದ್ಯಾರ್ಥಿನಿ, ಈ ವ್ಯಕ್ತಿ ತುಂಬಾನೇ ಸೆಕ್ಸಿ ಆಗಿದ್ದಾನೆ. ನೀನು ನನಗೆ ಜೋಕ್ ಮಾಡಿದೆಯಾ? ಎಂದು ಹೇಳಿದ್ದಾಳೆ. ವಿದ್ಯಾರ್ಥಿನಿ ಮಾತು ಕೇಳುತ್ತಲೇ ಒಂದು ಕ್ಷಣ ಶಾಕ್ ಆದ ಲೆಕ್ಚರರ್ ನಿಮ್ಮ ಎಲ್ಲ ಮಾತುಗಳು ಕೇಳಿಸಿತು ಅಂದಾಗ ಯುವತಿಗೆ ತಾನು ಮೈಕ್ರೋಫೋನ್ ಆನ್ ಆಗಿರೋದ ಗಮನಿಸಿ ಆಶ್ಚರ್ಯಗೊಂಡಿದ್ದಾಳೆ.

    ಇನ್ನು ವಿದ್ಯಾರ್ಥಿನಿಯ ಮಾತನ್ನ ಆನ್‍ಲೈನ್ ಕ್ಲಾಸ್ ನಲ್ಲಿ ಬಹುತೇಕರು ಕೇಳಿಸಿಕೊಂಡಿದ್ದಾರೆ. ಯುವತಿ ಅತಿಥಿ ಉಪನ್ಯಾಸಕರ ಬಳಿ ಕ್ಷಮೆ ಕೇಳಿ. ತನ್ನ ಮಾತುಗಳನ್ನು ಹಿಂಪಡೆದುಕೊಳ್ಳುವದಾಗಿ ತಿಳಿಸಿದ್ದಾಳೆ.

  • ಹಾಸಿಗೆ ಹಿಡಿದು 5 ವರ್ಷವಾದ್ರೂ ಸರ್ಕಾರದಿಂದ ಸಿಗದ ಪರಿಹಾರ

    ಹಾಸಿಗೆ ಹಿಡಿದು 5 ವರ್ಷವಾದ್ರೂ ಸರ್ಕಾರದಿಂದ ಸಿಗದ ಪರಿಹಾರ

    -ಸಂಕಷ್ಟದಲ್ಲಿ ಪಾರ್ಶ್ವವಾಯು ಪೀಡಿತ ಉಪನ್ಯಾಸಕರ ಕುಟುಂಬ

    ಧಾರವಾಡ: ಪಾರ್ಶ್ವವಾಯು ಪೀಡಿತ ಉಪನ್ಯಾಸಕರೊಬ್ಬರ ಕುಟುಂಬ ಆರ್ಥಿಕ ಸಂಕಷ್ಟದಲ್ಲಿದ್ದು, ಸರ್ಕಾರ ಸಹಾಯಕ್ಕೆ ಮುಂದಾಗಬೇಕೆಂದು ಕುಟುಂಬಸ್ಥರು ಮನವಿ ಮಾಡಿಕೊಂಡಿದ್ದಾರೆ.

    ಧಾರವಾಡದ ನಿಸರ್ಗ ಲೇಔಟ್ ನಲ್ಲಿರುವ ಮಹಾದೇವ್ ಮಾಳಗಿ ಕಳೆದ 5 ವರ್ಷಗಳಿಂದ ಹಾಸಿಗೆ ಹಿಡಿದಿದ್ದಾರೆ. 1999ರಲ್ಲಿ ಕೆಇಎಸ್ ಪರೀಕ್ಷೆಯಲ್ಲಿ ಪಾಸಾದ ನಂತರ ಶಿಕ್ಷಣ ಇಲಾಖೆಯಲ್ಲಿ 15 ವರ್ಷ ಸರ್ವಿಸ್ ಮಾಡಿದ್ದಾರೆ. ಬಿಇಓ ಆಗಿ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಮಹಾದೇವ್ ಮಾಳಗಿ ಅವರು ಹಿರಿಯ ಉಪನ್ಯಾಸಕರಾಗಿ ಬೆಳಗಾವಿ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದಾಗ ಪಾರ್ಶ್ವವಾಯುಗೆ ತುತ್ತಾಗಿದ್ದರು.

    ಅಂದಿನಿಂದ ಮಹಾದೇವ್ ಮಾಳಗಿ ಅವರಿಗೆ ಸಂಬಳವೂ ಬಂದಿಲ್ಲ ಮತ್ತು ಇಲಾಖೆಯಿಂದ ಯಾವುದೇ ಸಹಾಯ ದೊರೆತಿಲ್ಲ. ಮಹಾದೇವ್ ಅವರ ಚಿಕಿತ್ಸೆಗಾಗಿ ಆಸ್ತಿ ಮಾರಾಟ ಮಾಡಿ ಆಸ್ಪತ್ರೆ ಬಿಲ್ ಪಾವತಿಸುತ್ತಿದ್ದಾರೆ. ಸ್ವಯಂ ನಿವೃತ್ತಿ ಪಡೆಯಲು ಅಂದಿನ ಸಿಎಂ ಸಿದ್ದರಾಮಯ್ಯ ಹಾಗೂ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ರೂ ಕಾನೂನು ತೊಡಕು ಉಂಟಾಗಿದೆ. ಹೀಗಾಗಿ ಈ ಅಧಿಕಾರಿ ಕುಟುಂಬ ಈಗ ಸಮಸ್ಯೆಗೆ ಸಿಲುಕಿಕೊಂಡು ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಚಿಕಿತ್ಸೆ ಹಣ ಇಲ್ಲದೇ ಪರದಾಟ ನಡೆಸಿದೆ. ಸರ್ಕಾರ ವಿಶೇಷ ಪ್ರಕರಣ ಎಂದು ಪರಿಗಣಿಸಿ ಇವರ ಕುಟುಂಬಕ್ಕೆ ಸಹಾಯ ಮಾಡಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

  • ಒಂದು ತಿಂಗ್ಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ

    ಒಂದು ತಿಂಗ್ಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ

    ಮಂಡ್ಯ: ಒಂದು ತಿಂಗಳ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ನಡೆದಿದೆ.

    ಮಳವಳ್ಳಿ ಸರ್ಕಾರಿ ಪದವಿ ಕಾಲೇಜಿನ ಅತಿಥಿ ಉಪನ್ಯಾಸಕರಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಾಣಿಜ್ಯ ವಿಭಾಗದ ಉಪನ್ಯಾಸಕಿ ಕೋಕಿಲ (35) ಮತ್ತು ಇತಿಹಾಸ ಉಪನ್ಯಾಸಕ ಸುರೇಶ್ (29) ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ಮಾನಸಿಕ ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿರಬಹುದು ಎನ್ನಲಾಗಿದೆ. ಮೇ 11ರಂದು ಕೋಕಿಲ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನೂ ಜೂನ್ 4 ರಂದು ಸುರೇಶ್ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿದ್ದಾರೆ.

    ಸರ್ಕಾರಿ ಕೆಲಸ ಸಿಕ್ಕಿಲ್ಲ ಜೊತೆಗೆ ಲಾಕ್‍ಡೌನ್‍ನಿಂದ ಎದುರಾದ ಆರ್ಥಿಕ ಸಂಕಷ್ಟದಿಂದ ಇಬ್ಬರು ಉಪನ್ಯಾಸಕರು ಖಿನ್ನತೆಗೆ ಒಳಗಾಗಿದ್ದರು. ಖಿನ್ನತೆಗೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆಪ್ತ ವಲಯದಿಂದ ತಿಳಿದುಬಂದಿದೆ.

    ಈ ಘಟನೆ ಮಳವಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

  • ಕೊರೊನಾ ಎಫೆಕ್ಟ್ – ಮರದ ಮೇಲೆ ಮನೆ ಮಾಡಿದ ಕರಾವಳಿಯ ಉಪನ್ಯಾಸಕ

    ಕೊರೊನಾ ಎಫೆಕ್ಟ್ – ಮರದ ಮೇಲೆ ಮನೆ ಮಾಡಿದ ಕರಾವಳಿಯ ಉಪನ್ಯಾಸಕ

    ಮಂಗಳೂರು: ಕೊರೊನಾ ಭೀತಿಯಿಂದ ಜನರು ಸಾಮಾಜಿಕ ಅಂತರ ಕಾಯ್ದು ಕೊಳ್ಳುತ್ತಿದ್ದಾರೆ. ಆದರೆ ಇಲ್ಲೊಬ್ಬರು ಸಾಮಾಜಿಕ ಅಂತರದಲ್ಲಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಮರದ ಮೇಲೆಯೇ ಟ್ರೀಹೌಸ್ ನಿರ್ಮಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳುತ್ತಿದ್ದಾರೆ.

    ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದ ವಿವೇಕ್ ಆಲ್ವ ಮರದ ಮೇಲೆ ಮನೆ ನಿರ್ಮಿಸಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕರಾಗಿರುವ ಇವರು, ಕೃಷಿ ಸಂಶೋಧನೆಗಾಗಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ತನ್ನ ಮನೆಯ ಸಮೀಪವಿರುವ ಕೃತಕ ಕಾಡಿನಲ್ಲಿ 7 ದಿನಗಳ ಕಾಲ ಕೆಲಸ ಮಾಡಿ ಮರದ ಮೇಲೆ ಗುಡಿಸಲನ್ನು ನಿರ್ಮಾಣ ಮಾಡಿದ್ದಾರೆ.

    ಇದು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರ ಜೊತೆಗೆ ಅದ್ಭುತ ಪ್ರಕೃತಿ ಸೌಂದರ್ಯದ ಅನುಭವವನ್ನು ನೀಡುತ್ತದೆ. ಈ ಮರದ ಮೇಲಿನ ಗುಡಿಸಲಿನಲ್ಲಿ ಹಕ್ಕಿಗಳ ಚಿಲಿಪಿಲಿ, ಪುಸ್ತಕ ಓದುವುದು, ಏಕಾಂತದಲ್ಲಿ ಸಂಗೀತ ಕೇಳುವುದು, ತಂಪಾದ ಗಾಳಿಯೊಂದಿಗೆ ಪ್ರಕೃತಿ ವೀಕ್ಷಣೆ ಮಾಡಬಹುದು. ಜೊತೆಗೆ ಇಲ್ಲಿ ಇವರು ಹಕ್ಕಿಗಳಿಗಾಗಿ ಕುಡಿಯುವ ನೀರಿನ ವ್ಯವಸ್ಥೆಯನ್ನೂ ಮಾಡಲಾಗಿದೆ ಎಂದು ವಿವೇಕ್ ಆಳ್ವ ಹೇಳಿದ್ದಾರೆ.

    ಈ ಗುಡಿಸಲಿನ ಸುತ್ತ ಬಿಸಿಲು ಹಾಗೂ ಸುರಕ್ಷತೆಯ ದೃಷ್ಟಿಯಿಂದ ಶಾಡೋ ನೆಟ್ ಹಾಕಲಾಗಿದೆ. ಕುಳಿತುಕೊಳ್ಳಲು ಚೇರ್ ಗಳ ವ್ಯವಸ್ಥೆ ಮಾಡಲಾಗಿದೆ. ಸದ್ಯ ಲಾಕ್‍ಡೌನ್ ನಿಂದ ಸಮಯ ಕಳೆಯಲು ಇದು ಉತ್ತಮ ಜಾಗ ಎಂದು ವಿವೇಕ್ ಆಳ್ವ ತಿಳಿಸಿದ್ದಾರೆ.

  • ಸರ್ಕಾರಿ ಪ್ರಾಧ್ಯಾಪಕರಿಗೆ ಗುಡ್ ನ್ಯೂಸ್

    ಸರ್ಕಾರಿ ಪ್ರಾಧ್ಯಾಪಕರಿಗೆ ಗುಡ್ ನ್ಯೂಸ್

    ಬೆಂಗಳೂರು: ರಾಜ್ಯದ ವಿಶ್ವ ವಿದ್ಯಾಲಯ ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಯುಜಿಸಿ ವೇತನ ಪಡೆಯುತ್ತಿರುವ ಸರ್ಕಾರಿ ಪ್ರಾಧ್ಯಾಪಕರುಗಳಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಮಾನದಂಡದಡಿ ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

    ವಿಧಾನಸಭೆಯಲ್ಲಿ ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ವಿಧೇಯಕ ಮಂಡಿಸಿದ್ದಾರೆ. ವಿವಿಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಧ್ಯಾಪಕರು ಯುಜಿಸಿ ವೇತನ ಪಡೆಯುತ್ತಿದ್ದು, ಅದೇ ಮಾದರಿಯಲ್ಲಿ ಪಿಂಚಣಿಯನ್ನೂ ನೀಡುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಪಿಂಚಣಿ ಸೌಲಭ್ಯ ಕಲ್ಪಿಸಲು ಸರ್ಕಾರ ವಿಧೇಯಕ ಮಂಡಿಸಿದೆ.

    ಅಂದಹಾಗೆ ಪಿಂಚಣಿ ವ್ಯವಸ್ಥೆಯು ರಾಜ್ಯ ಸರ್ಕಾರದ ವ್ಯಾಪ್ತಿಗೆ ಒಳಪಡುವುದರಿಂದ ರಾಜ್ಯ ಸರ್ಕಾರ ತನ್ನ ನೌಕರರಿಗೆ ನೀಡುವ ಪಿಂಚಣಿ ಮಾದರಿಯಲ್ಲಿಯೇ ಯುಜಿಸಿ ವೇತನ ಪಡೆಯುತ್ತಿರುವ ಪ್ರಾಧ್ಯಾಪಕರಿಗೂ ಅನ್ವಯವಾಗುವಂತೆ ಸೂಕ್ತ ಕಾನೂನು ರೂಪಿಸಲು ವಿಧೇಯಕ ಮಂಡಿಸಿದೆ. ಇದೇ ಬಜೆಟ್ ಅಧಿವೇಶನದಲ್ಲಿ ವಿಧೇಯಕ ಬಹುತೇಕ ಅಂಗೀಕಾರವಾಗುವ ಸಾಧ್ಯತೆ ಇದೆ. ವಿಧೇಯಕ ಅಂಗೀಕಾರವಾದ್ರೆ ಯುಜಿಸಿ ವೇತನ ಪಡೆಯುತ್ತಿರುವ ಪ್ರಾಧ್ಯಾಪಕರು ಪಿಂಚಣಿ ಪಡೆಯುತ್ತಾರೆ.

  • ಬೀಚ್‍ನಲ್ಲಿ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಉಪನ್ಯಾಸಕನ ಡ್ಯಾನ್ಸ್

    ಬೀಚ್‍ನಲ್ಲಿ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಉಪನ್ಯಾಸಕನ ಡ್ಯಾನ್ಸ್

    ಬಾಗಲಕೋಟೆ: ಇತ್ತೀಚೆಗೆ ಶಿಕ್ಷಕಿಯರು ಡ್ಯಾನ್ಸ್ ಮಾಡಿದ್ದ ಘಟನೆ ಮಾಸುವ ಮುನ್ನವೇ ಕಾಲೇಜು ಉಪನ್ಯಾಸಕರು ವಿದ್ಯಾರ್ಥಿಗಳ ಜೊತೆ ಸೇರಿ ಅಶ್ಲೀಲ ಅರ್ಥದ ಹಾಡಿಗೆ ಹೆಜ್ಜೆ ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.

    ಬಾಗಲಕೋಟೆ ಜಿಲ್ಲೆಯ ಬಾದಾಮಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಎಲ್.ಎಸ್ ನಾಗವಾಡ್ ಎಂಬ ಉಪನ್ಯಾಸಕ, ಶೈಕ್ಷಣಿಕ ಪ್ರವಾಸದ ವೇಳೆ ಬೀಚ್‍ನಲ್ಲಿ ವಿದ್ಯಾರ್ಥಿನಿಯರ ಮೈ, ಕೈ ಮುಟ್ಟಿ ಡ್ಯಾನ್ಸ್ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಲ್ಲದೆ ಶೈಕ್ಷಣಿಕ ಪ್ರವಾಸದ ವೇಳೆ ಅಶ್ಲೀಲ ಹಾಡಿಗೆ ನೃತ್ಯ ಮಾಡಿರುವ ವಿಡಿಯೋ ವೈರಲ್ ಆಗಿದೆ.

    ಎರಡು ದಿನಗಳ ಕಾಲ ಪಿಯುಸಿ ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಕರ ವೃಂದ ಪ್ರವಾಸ ಕಂಡಕ್ಟ್ ಮಾಡಿತ್ತು. ಅದರಂತೆ ಡಿಸೆಂಬರ್ 14ರಿಂದ 16ರವರೆಗೆ ಶಿಕ್ಷಕರ ಜೊತೆಗೆ ವಿದ್ಯಾರ್ಥಿಗಳು ಪ್ರವಾಸ ಕೈಗೊಂಡಿದ್ದರು. ಈ ವೇಳೆ ವಿದ್ಯಾರ್ಥಿನಿಯರ ಜೊತೆ ಪ್ರಾಚಾರ್ಯ ನಾಗವಾಡ ಅಸಭ್ಯವಾಗಿ ವರ್ತಿಸಿದ್ದಾನೆ. ಹಾಗೂ ಅಶ್ಲೀಲ ಅರ್ಥದ ಹಾಡಿಗೆ ಹೆಜ್ಜೆ ಹಾಕಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರವೇ ಕಾರ್ಯಕರ್ತರು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆ ದೂರು ಸಲ್ಲಿಸಿದ್ದರು.

    ಅಹಿತಕರ ಘಟನೆ ಬಗ್ಗೆ ಬೆಂಗಳೂರು ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಮಾಹಿತಿ ರವಾನಿಸಿದ್ದಾರೆ. ಆದರೆ ವಿದ್ಯಾರ್ಥಿ ಶೈಕ್ಷಣಿಕ ಪ್ರವಾಸ ಮುಗಿದು ಒಂದು ತಿಂಗಳಾಗ್ತಾ ಬಂದ್ರೂ ಅಂತಹ ಉಪನ್ಯಾಸಕನ ಬಗ್ಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕ್ರಮಕೈಗೊಂಡಿಲ್ಲ ಎಂದು ಕರವೇ ಕಾರ್ಯಕರ್ತರು ಡಿಡಿಪಿಯು ಕಾರ್ಯವೈಖರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸ್ತಿದ್ದಾರೆ.

  • ಬುದ್ಧಿ ಹೇಳಿದ್ದಕ್ಕೆ ಉಪನ್ಯಾಸಕನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿ

    ಬುದ್ಧಿ ಹೇಳಿದ್ದಕ್ಕೆ ಉಪನ್ಯಾಸಕನ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿ

    ರಾಯಚೂರು: ವಿದ್ಯಾರ್ಥಿಗಳ ಜಗಳಕ್ಕೆ ಪಂಚಾಯತಿ ಮಾಡಿ ಬುದ್ಧಿ ಹೇಳಿದ್ದಕ್ಕೆ ಉಪನ್ಯಾಸಕನ ಮೇಲೆ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತರೊಂದಿಗೆ ಹಲ್ಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ. ನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಉಪನ್ಯಾಸಕ ಪ್ರಾಣೇಶ್ ಕುಲಕರ್ಣಿ ಮೇಲೆ ವಿದ್ಯಾರ್ಥಿಯಿಂದ ಹಲ್ಲೆಯಾಗಿದೆ.

    ಕಾಲೇಜಿನ ಬಿಸಿಎ ವಿದ್ಯಾರ್ಥಿ ರಂಜಿತ್ ಕುಮಾರ್ ಇನ್ನೋರ್ವ ಬಿಎ ವಿದ್ಯಾರ್ಥಿ ಆಂಜಿನೇಯನ ಮೇಲೆ ತನ್ನ ಸ್ನೇಹಿತರೊಂದಿಗೆ ಕಾಲೇಜು ಬಳಿ ಹಲ್ಲೆ ಮಾಡಿದ್ದನು. ಈ ಘಟನೆ ಹಿನ್ನೆಲೆ ಕಾಲೇಜಿನ ಉಪನ್ಯಾಸಕರು ರಂಜಿತ್‍ನನ್ನ ಕರೆದು ತಿಳಿ ಹೇಳಿದ್ದರು. ಆ ವೇಳೆಯೂ ತನ್ನ ಸ್ನೇಹಿತರನ್ನ ಕರೆದುಕೊಂಡು ಬಂದಿದ್ದ ರಂಜಿತ್ ಉಪನ್ಯಾಸಕರ ಮಾತಿಗೂ ಬೆಲೆಕೊಟ್ಟಿರಲಿಲ್ಲ. ಉಪನ್ಯಾಸಕ ಪ್ರಾಣೇಶ್ ಕುಲಕರ್ಣಿ ರಂಜಿತ್ ವರ್ತನೆಯನ್ನ ಖಂಡಿಸಿ ಬೈದಿದ್ದರು. ಇದೇ ಸಿಟ್ಟನ್ನ ಇಟ್ಟುಕೊಂಡು ಕೃಷಿ ವಿವಿ ಹತ್ತಿರ ಬುಲೆಟ್ ನಲ್ಲಿ ಕಾಲೇಜಿಗೆ ಬರುತ್ತಿದ್ದ ಉಪನ್ಯಾಸಕ ಪ್ರಾಣೇಶ್ ಕುಲಕರ್ಣಿಯನ್ನ ತಡೆದು ಮನಸೋಇಚ್ಚೆ ಹಲ್ಲೆ ಮಾಡಿದ್ದಾರೆ.

    ಘಟನೆ ಹಿನ್ನೆಲೆ ರಂಜಿತ್ ಸೇರಿ ಆರು ಜನರ ವಿರುದ್ಧ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗಾಯಗೊಂಡು ಪ್ರಜ್ಞೆತಪ್ಪಿ ರಸ್ತೆಯಲ್ಲಿ ಬಿದ್ದಿದ್ದ ಉಪನ್ಯಾಸಕ ಪ್ರಾಣೇಶ್ ನನ್ನ ಕಂಡು ಅವರ ಹಳೆಯ ವಿದ್ಯಾರ್ಥಿ ಸಮೀರ್ ಪಾಶಾ ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆ ಬಳಿಕ ಉಪನ್ಯಾಸಕ ಪ್ರಾಣೇಶ್ ಚೇತರಿಸಿಕೊಂಡಿದ್ದಾರೆ.

    ಈ ಹಿಂದೆ ವಿದ್ಯಾರ್ಥಿ ರಂಜಿತ್ ಕಾಲೇಜು ಶುಲ್ಕ ಕಟ್ಟದಿದ್ದಾಗ ಪ್ರಾಣೇಶ್ ಸ್ವತಃ ಶುಲ್ಕ ಕಟ್ಟಿ ಪರೀಕ್ಷೆ ಬರೆಯಲು ಅನುಮಾಡಿಕೊಟ್ಟಿದ್ದರಂತೆ. ಆದ್ರೆ ಅದೇ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಉಪನ್ಯಾಸಕನ ಮೇಲೆ ಹಲ್ಲೆ ಮಾಡಿದ್ದಾನೆ. ಅದೃಷ್ಟವಶಾತ್ ಬಸ್ ನಲ್ಲಿ ರಾಯಚೂರಿಗೆ ಬರುತ್ತಿದ್ದ ಹಳೆಯ ವಿದ್ಯಾರ್ಥಿ ಸಮೀರ್ ಪಾಶಾ ಕೂಡಲೇ ಬಸ್ ಇಳಿದು ಪ್ರಜ್ಞೆತಪ್ಪಿ ಬಿದ್ದಿದ್ದ ಉಪನ್ಯಾಸಕರನ್ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾನೆ.

  • ಪ್ರಶ್ನೆ ಕೇಳಿದ ವಿದ್ಯಾರ್ಥಿಗಳಿಗೆ ಚಪ್ಪಲಿಯಿಂದ ಥಳಿಸಿದ ಉಪನ್ಯಾಸಕ

    ಪ್ರಶ್ನೆ ಕೇಳಿದ ವಿದ್ಯಾರ್ಥಿಗಳಿಗೆ ಚಪ್ಪಲಿಯಿಂದ ಥಳಿಸಿದ ಉಪನ್ಯಾಸಕ

    ರಾಯಚೂರು: ಪರೀಕ್ಷೆಯಲ್ಲಿ ಅಂಕ ನೀಡುವ ವಿಚಾರವಾಗಿ ತಾರತಮ್ಯ ಯಾಕೆ ಮಾಡುತ್ತೀರಿ ಅಂತ ಪ್ರಶ್ನಿಸಿದ್ದಕ್ಕೆ ರಾಯಚೂರಿನ ಮಾನ್ವಿಯಲ್ಲಿ ಉಪನ್ಯಾಸಕನೋರ್ವ ವಿದ್ಯಾರ್ಥಿಗಳಿಗೆ ಚಪ್ಪಲಿಯಿಂದ ಥಳಿಸಿರುವ ಘಟನೆ ನಡೆದಿದೆ.

    ಮಾನ್ವಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕ ಚಂದ್ರಶೇಖರ್ ವಿದ್ಯಾರ್ಥಿ ಪೃಥ್ವಿರಾಜ್ ಹಾಗೂ ಇತರರಿಗೆ ಚಪ್ಪಲಿಯಿಂದ ಹೊಡೆದಿದ್ದಾರೆ. ಏಕಾಏಕಿ ವಿದ್ಯಾರ್ಥಿಗಳಿಗೆ ಚಪ್ಪಲಿಯಿಂದ ಹೊಡೆದಿರುವ ದೃಶ್ಯವು ಕಾಲೇಜಿನ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಉಪನ್ಯಾಸಕನ ವರ್ತನೆಯಿಂದ ಬೇಸತ್ತ ವಿದ್ಯಾರ್ಥಿಗಳು ಕೂಡಲೇ ಕ್ರಮ ಕೈಗೊಳ್ಳುವಂತೆ ಪ್ರಾಂಶುಪಾಲರಿಗೆ ದೂರು ನೀಡಿದ್ದಾರೆ.

    ಚಂದ್ರಶೇಖರ್ ಅವರು ಉದ್ದೇಶ ಪೂರ್ವಕವಾಗಿ ಕೆಲ ವಿದ್ಯಾರ್ಥಿಗಳಿಗೆ ಆಂತರಿಕ ಅಂಕಗಳನ್ನು ಕಡಿಮೆ ನೀಡುತ್ತಾರೆ. ಅಷ್ಟೇ ಅಲ್ಲದೆ ವಿದ್ಯಾರ್ಥಿಗಳ ಜೊತೆ ಅನುಚಿವಾಗಿ ವರ್ತಿಸುತ್ತಾರೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾತಿನಲ್ಲೆ ಉತ್ತರ ಕೊಟ್ಟು ಮುಗಿಸಬಹುದಾಗಿದ್ದನ್ನು ಚಪ್ಪಲಿ ಏಟಿನ ಮೂಲಕ ಬೆಳೆಸಿದ್ದಕ್ಕೆ ಎಂದು ಉಪನ್ಯಾಸಕರಿಗೆ ಪ್ರಾಂಶುಪಾಲರು ಛೀಮಾರಿ ಹಾಕಿದ್ದಾರೆ ಎನ್ನಲಾಗಿದೆ. ಜೊತೆಗೆ ವಿದ್ಯಾರ್ಥಿಗಳ ಪೋಷಕರು ಸಹ ಹಲ್ಲೆ ಮಾಡಿದ ಉಪನ್ಯಾಸಕ ಚಂದ್ರಶೇಖರ್ ಅವರ ವರ್ತನೆ ಬಗ್ಗೆ ಕಿಡಿಕಾರಿದ್ದಾರೆ.

    ಕೊನೆಗೆ ಉಪನ್ಯಾಸಕ ಚಂದ್ರಶೇಖರ್ ವಿದ್ಯಾರ್ಥಿಗಳಲ್ಲಿ ಕ್ಷಮೆಯಾಚಿಸಿದ್ದರಿಂದ ವಿದ್ಯಾರ್ಥಿಗಳು ಸುಮ್ಮನಾಗಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಚಪ್ಪಲಿಯಿಂದ ಹೊಡೆದ ವಿಡಿಯೋ ಮಾತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

  • ವಿದ್ಯಾರ್ಥಿನಿಗೆ ಕಾಮಪಾಠ-ಉಪನ್ಯಾಸಕನಿಗೆ ಬಿತ್ತು ಧರ್ಮದೇಟು

    ವಿದ್ಯಾರ್ಥಿನಿಗೆ ಕಾಮಪಾಠ-ಉಪನ್ಯಾಸಕನಿಗೆ ಬಿತ್ತು ಧರ್ಮದೇಟು

    ಕಲಬುರಗಿ: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಉಪನ್ಯಾಸಕನಿಗೆ ವಿದ್ಯಾರ್ಥಿಗಳು ಥಳಿಸಿದ್ದಾರೆ. ಕಲಬುರಗಿ ನಗರದ ಶರಣಬಸವ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.

    ಚೆನ್ನು ಬಿರಾಜಿ ವಿದ್ಯಾರ್ಥಿಗಳಿಂದ ಒದೆ ತಿಂದ ಉಪನ್ಯಾಸಕ. ವಿಶ್ವವಿದ್ಯಾಲಯದ ಎಲೆಕ್ಟ್ರಿಕಲ್ ವಿಭಾಗದ ಉಪನ್ಯಾಸಕನಾಗಿರುವ ಚೆನ್ನು ವಿದ್ಯಾರ್ಥಿನಿಗಳಿಗೇ ಪಾಠ ಮಾಡುವದು ಬಿಟ್ಟು ತನ್ನ ಚಪ್ಪಲ ತೀರಿಸಿಕೊಳ್ಳಲು ಹೋಗಿದ್ದಾನೆ. ವಿದ್ಯಾರ್ಥಿನಿಯರ ಮೊಬೈಲ್ ನಂಬರ್ ಪಡೆದು ಅಸಭ್ಯ ಸಂದೇಶಗಳನ್ನು ಕಳುಹಿಸಿ ಕಿರುಕುಳ ನೀಡಿದ್ದಾನೆ. ಉಪನ್ಯಾಸಕನ ಕಾಟದಿಂದ ಬೇಸತ್ತ ವಿದ್ಯಾರ್ಥಿನಿ ರಹಸ್ಯವಾಗಿ ಮೊಬೈಲ್ ನಲ್ಲಿ ಸಾಕ್ಷ್ಯ ಸಂಗ್ರಹಿಸಿದ್ದಾಳೆ.

    ಈ ವಿಷಯ ವಿದ್ಯಾರ್ಥಿನಿಯ ಪೋಷಕರಿಗೆ ಗೊತ್ತಾಗುತ್ತಿದ್ದಂತೆ ಕಾಲೇಜಿನತ್ತ ಬಂದು ಕಾಮುಕನ ಉಪನ್ಯಾಸಕನ ಗ್ರಹಚಾರ ಬಿಡಿಸಿದ್ದಾರೆ. ವಿದ್ಯಾರ್ಥಿಗಳ ಎದುರೇ ಕ್ಲಾಸ್‌ರೂಂನಲ್ಲಿ ಥಳಿಸಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ವಿದ್ಯಾರ್ಥಿನಿ ಕಡೆಯವರು ಎಲ್ಲಾ ವಿದ್ಯಾರ್ಥಿನಿಯರಿಗೇ ಕ್ಷಮೆ ಕೇಳುವಂತೆ ಬಾರಿಸಿದ್ದಾರೆ. ನಂತರ ಚೆನ್ನು ತರಗತಿ ಕೋಣೆಯಲ್ಲಿ ಎಲ್ಲ ವಿದ್ಯಾರ್ಥಿಗಳ ಬಳಿ ಕ್ಷಮೆ ಕೇಳಿದ್ದಾನೆ.

    ಈ ವಿಷಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಗಮನಕ್ಕೆ ಬರುತ್ತಿದ್ದಂತೆ, ಕೂಡಲೇ ಉಪನ್ಯಾಸಕ ಚೆನ್ನುವಿನ ರಾಜೀನಾಮೆ ಪಡೆದು ಮನೆಗೆ ಕಳುಹಿಸಿದ್ದಾರೆ. ಸದ್ಯ ಈ ಉಪನ್ಯಾಸಕನಿಗೆ ನೀಡಿರುವ ಧರ್ಮದೇಟಿನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.