Tag: leelavathi

  • ಭಾರತ ಕಂಡ ಶ್ರೇಷ್ಠ ಕಲಾವಿದೆ ಲೀಲಾವತಿ: ನಟ ಉಪೇಂದ್ರ

    ಭಾರತ ಕಂಡ ಶ್ರೇಷ್ಠ ಕಲಾವಿದೆ ಲೀಲಾವತಿ: ನಟ ಉಪೇಂದ್ರ

    ನ್ನಡ ಚಿತ್ರರಂಗದ ಖ್ಯಾತ ನಟಿ ಲೀಲಾವತಿ (Leelavathi) ನಿಧನಕ್ಕೆ ಉಪೇಂದ್ರ ಅವರು (Upendra) ಸಂತಾಪ ಸೂಚಿಸಿದ್ದಾರೆ. ಇದೀಗ ಲೀಲಾವತಿ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಲೀಲಾವತಿ ಅವರು ಕನ್ನಡ ಚಿತ್ರರಂಗದ ಶ್ರೇಷ್ಠ ನಟಿ ಎಂದು ಉಪೇಂದ್ರ ಮಾತನಾಡಿದ್ದಾರೆ. ಹಿರಿಯ ನಟಿಯ ನಿಧನದ ಬಗ್ಗೆ ಭಾವುಕರಾಗಿದ್ದಾರೆ.

    ಲೀಲಾವತಿ ಅವರು ಭಾರತಕ್ಕೆ ಗೊತ್ತು ಅವರೆಂತಹ ಶ್ರೇಷ್ಠ ಕಲಾವಿದೆ ಅಂತ. ಅವರನ್ನು ಇಂದು ಕಳೆದುಕೊಂಡಿದ್ದೀವಿ. ತಾನು ಹೋಗ್ತೀನಿ ಅಂತ ಅವರಿಗೆ ಮೊದಲೇ ಗೊತ್ತಿತ್ತು ಅನಿಸುತ್ತೆ. ಆಸ್ಪತ್ರೆ ಕಟ್ಟಿಸೋದು ಸೇರಿದಂತೆ ಸಾಕಷ್ಟು ಸಮಾಜ ಸೇವೆ ಮಾಡಿಯೇ ಹೋಗಿದ್ದಾರೆ. ವಿನೋದ್ ರಾಜ್ ಹೇಳುತ್ತಿದ್ದರು ಅವರಿಗೆ ತುಂಬಾ ಕನಸಿತ್ತು ಅಂತ. ಅದನ್ನ ಈಡೇರಿಸುತ್ತೇನೆ ಎಂದು ಕೂಡ ಹೇಳಿದ್ದರು. ಅದನ್ನೆಲ್ಲಾ ಪೂರೈಸುವ ಶಕ್ತಿ ದೇವರು ಅವರಿಗೆ ಕೊಡಲಿ ಅಂತ ಉಪೇಂದ್ರ ಮಾತನಾಡಿದ್ದಾರೆ.

    ಬೆಳಿಗ್ಗೆಯಿಂದ ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಕಲಾವಿದರು, ಆಪ್ತರು, ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಇಂದು ಸರಕಾರಿ ಸಕಲ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿ ತೋಟದ ಮನೆಯಲ್ಲಿ ಮಧ್ಯಾಹ್ನ 3:30ಕ್ಕೆ ಅಂತ್ಯ ಸಂಸ್ಕಾರ ನೆರವೇರಲಿದೆ. ಇದನ್ನೂ ಓದಿ:ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ

    ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ (ಡಿ.8) ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಡಿಸೆಂಬರ್ 8ರಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ಇಹಲೋಕ ತ್ಯಜಿಸಿದ್ದರು.

  • ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ

    ಮಧ್ಯಾಹ್ನ 3.30ಕ್ಕೆ ಲೀಲಾವತಿ ಅಂತ್ಯ ಸಂಸ್ಕಾರ: ಜಿಲ್ಲಾಧಿಕಾರಿ ಮಾಹಿತಿ

    ಹಿರಿಯ ನಟಿ ಲೀಲಾವತಿ ಅವರ ಅಂತ್ಯ ಸಂಸ್ಕಾರವನ್ನು (Funeral) ಸರಕಾರಿ ಗೌರವದೊಂದಿಗೆ ಸೋಲದೇವನಹಳ್ಳಿಯಲ್ಲಿರುವ (Soladevanahalli) ಅವರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಸರಕಾರ ಮತ್ತು ಲೀಲಾವತಿ ಅವರ ಕುಟುಂಬದೊಂದಿಗೆ ಚರ್ಚಿಸಿ ಈ  ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು. ಬೆಳಗ್ಗೆಯಿಂದ ನೆಲಮಂಗದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನ 3.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದಿದ್ದಾರೆ.

    ಕನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್  ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.

     ದರ್ಶನ ಪಡೆಯಲು ಬಂದ ಮೊಮ್ಮಗ, ಸೊಸೆ

    ಅಗಲಿದ ಹಿರಿಯ ಚೇತನ ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು (Anu) ಮತ್ತು ಲೀಲಾವತಿ (Leelavati) ಮೊಮ್ಮಗ  ಯುವರಾಜ್ (Yuvraj) ಆಗಮಿಸಿದ್ದಾರೆ. ನಿನ್ನೆ ರಾತ್ರಿಯೇ ಅವರು ಚೆನ್ನೈನಿಂದ ಹೊರಟು ನೆಲಮಂಗಲ ತಲುಪಿ, ಇಂದು ಅಂತಿಮ ದರ್ಶನ ಪಡೆದಿದ್ದಾರೆ.

     

    ವಿನೋದ್ ರಾಜ್ (Vinod Raj) ಮದುವೆ ವಿಚಾರವಾಗಿ ಹಲವಾರು ಗೊಂದಲಗಳು ಇದ್ದವು. ತಾಯಿಗಾಗಿ ವಿನೋದ್ ಮದುವೆ ಆಗದೇ, ತಾಯಿಯ ಸೇವೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತೀಚೆಗಷ್ಟೇ ವಿನೋದ್ ರಾಜ್ ಮದುವೆ ಆಗಿರುವ ಸುದ್ದಿಯನ್ನು ನಿರ್ದೇಶಕರೊಬ್ಬರು ಫೋಟೋ ಸಮೇತ ವಿವರಿಸಿದ್ದರು. ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.

  • ತಂದೆ ಕಾರಣನಾಗ್ತಾನೆ, ಆದ್ರೆ ತಾಯಿಯೇ ಸತ್ಯ: ತಾಯಿ ಮಹತ್ವ ಹೇಳಿದ ವಿನೋದ್‌ ರಾಜ್‌

    ತಂದೆ ಕಾರಣನಾಗ್ತಾನೆ, ಆದ್ರೆ ತಾಯಿಯೇ ಸತ್ಯ: ತಾಯಿ ಮಹತ್ವ ಹೇಳಿದ ವಿನೋದ್‌ ರಾಜ್‌

    – ಅಮ್ಮ ಲೀಲಾವತಿ ಪಾರ್ಥಿವ ಶರೀರದ ಮುಂದೆ ಕುಳಿತು ಪುತ್ರ ಕಣ್ಣೀರು

    ನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Leelavathi) ಅವರ ನಿಧನದಿಂದಾಗಿ ಪುತ್ರ ವಿನೋದ್‌ ರಾಜ್‌ (Vinod Raj) ಶೋಕಸಾಗರದಲ್ಲಿ ಮುಳುಗಿದ್ದಾರೆ. ತಾಯಿಯ ಪಾರ್ಥಿವ ಶರೀರದ ಮುಂದೆ ಕುಳಿತು ಕಣ್ಣೀರಿಟ್ಟಿದ್ದಾರೆ. ಈ ವೇಳೆ ತಾಯಿ ಮಹತ್ವ ಏನೆಂದು ಮನಬಿಚ್ಚಿ ಮಾತನಾಡಿದ್ದಾರೆ.

    ತಾಯಿ ಇಲ್ಲದೇ ನಾವಿಲ್ಲ. ನಾವು ದೊಡ್ಡವರಾದ ಮೇಲೆ ನೀನಿಲ್ಲದೇ ನಾವಿಲ್ಲ ಅಂತಾ ಯಾಕೆ ಹೇಳೋಕೆ ಆಗ್ತಿಲ್ಲ? ತಾಯಿಯನ್ನ ಬಿಟ್ಟವರನ್ನ ಯಾವ ಸಮಾಜವೂ ಸಹಿಸಲ್ಲ. ತಾಯಿಯನ್ನ ನೋಡಿಕೊಳ್ಳದ ಮಕ್ಕಳ ಬದುಕು ವ್ಯರ್ಥ ಎಂದು ವಿನೋದ್‌ ರಾಜ್‌ ಹೇಳಿದ್ದಾರೆ. ಇದನ್ನೂ ಓದಿ: ಲೀಲಾವತಿ ಅಂತಿಮ ದರ್ಶನಕ್ಕೆ ಬಂದ ಮೊಮ್ಮಗ ಮತ್ತು ಸೊಸೆ

    ತಾಯಿ ಮಕ್ಕಳನ್ನ ಸಾಕುವಾಗ ಖುಷಿ ಖುಷಿಯಿಂದ ಸಾಕಿರುತ್ತಾಳೆ. ತಾಯಿಯನ್ನೂ ಮಕ್ಕಳು ಖುಷಿಯಿಂದ ನೋಡಿಕೊಳ್ಳಬೇಕು. ತಾಯಿಯ ಸಂತೋಷವೇ ನಮಗೆ ಸ್ವರ್ಗ. ಇದನ್ನ ಯಾರೂ ಮರೆಯಬೇಡ. ತಾಯಿಯನ್ನ ಯಾರೂ ಕೇವಲ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ.

    ತಾಯಿಯನ್ನ ಆಶ್ರಮಗಳಿಗೆ ಸೇರಿಸುವ ಕೆಲಸ ಮಾಡಬೇಡಿ. ತಾಯಿ ಬಿಟ್ಟರೆ ಈ ಭೂಮಿ ಮೇಲೆ ಏನೂ ಇಲ್ಲ. ತಂದೆ ಕಾರಣನಾಗ್ತಾನೆ, ಅದರೆ ತಾಯಿಯೇ ಸತ್ಯ. ತಾಯಿಯನ್ನ ನೋಡಿಕೊಂಡಾಗಲೇ ರಾಮರಾಜ್ಯವಾಗೋದು ಎಂದು ನುಡಿದಿದ್ದಾರೆ. ಇದನ್ನೂ ಓದಿ: ಲೀಲಮ್ಮನ ಫೋಟೋ ಮುಂದೆ ಕುಳಿತು ಮೂಕ ವೇದನೆ – ಕಣ್ಣೀರಿಟ್ಟ ಪ್ರೀತಿಯ ಶ್ವಾನ!

    ಕನ್ನಡದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ಸಂಸ್ಕಾರವನ್ನು (Cremation) ಅವರ ನೆಚ್ಚಿನ ತೋಟದಲ್ಲಿ ಮಾಡುವ ಕುರಿತು ನಿರ್ಧಾರ ತೆಗೆದುಕೊಳ್ಳಲಾಗಿದೆ. ನೆಲಮಂಗಲದ ಸೋಲದೇವನಹಳ್ಳಿ (Soladevanahalli) ಫಾರ್ಮ್ ಹೌಸ್ ನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ನಡೆಯುತ್ತಿದೆ.

  • ಬೆಳಗ್ಗೆ 11ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ಬೆಳಗ್ಗೆ 11ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ

    ನ್ನಡ ಸಿನಿಮಾ ರಂಗದ ಹಿರಿಯ ನಟಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಇಂದು ಬೆಳಗ್ಗೆಯಿಂದ ನೆಲಮಂಗಲದ ಅಂಬೇಡ್ಕರ್  ಮೈದಾನದಲ್ಲಿ ವ್ಯವಸ‍್ಥೆ ಮಾಡಲಾಗಿದೆ. ನೆಲಮಂಗಲ ಸುತ್ತಮುತ್ತಲಿನ ಗ್ರಾಮಸ್ಥರು, ಸಿನಿಮಾ ಅಭಿಮಾನಿಗಳು, ಹಾಗೂ ಕಲಾವಿದರು ಮತ್ತು ತಂತ್ರಜ್ಞರು ಮೈದಾನಕ್ಕೆ ಆಗಮಿಸಿ ಅಗಲಿದ ನೆಚ್ಚಿನ ನಟಿಯ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    ಬೆಳಗ್ಗೆ 10 ಗಂಟೆವರೆಗೂ ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲೇ ಪಾರ್ಥೀವ ಶರೀರ ಇರಿಸಲಾಗುತ್ತಿದ್ದು, ನಂತರ ಬೆಂಗಳೂರಿನತ್ತ (Bangalore) ತಗೆದುಕೊಂಡು ಹೋಗಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿರುವ (Ravindra Kalakshetra) ಸಂಸ ಬಯಲು ರಂಗ ಮಂದಿರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಿಎಂ ಸಿದ್ಧರಾಮಯ್ಯ ಸೇರಿದಂತೆ ಸಚಿವ ಸಂಪುಟದ ಅನೇಕ ಸಚಿವರು ಹಾಗೂ ಚಿತ್ರೋದ್ಯಮದ ಗಣ್ಯರು ಆಗಮಿಸಿ, ಅಂತಿಮ ದರ್ಶನ ಪಡೆಯಲಿದ್ದಾರೆ.

    ಓಡೋಡಿ ಬಂದ ಮೊಮ್ಮಗ, ಸೊಸೆ

    ಅಗಲಿದ ಹಿರಿಯ ಚೇತನ ಲೀಲಾವತಿ ಅವರ ಅಂತಿಮ ದರ್ಶನ ಪಡೆಯಲು ಚೆನ್ನೈನಿಂದ ಲೀಲಾವತಿ ಅವರ ಸೊಸೆ, ಅಂದರೆ ವಿನೋದ್ ರಾಜ್ ಅವರ ಪತ್ನಿ ಅನು (Anu) ಮತ್ತು ಲೀಲಾವತಿ (Leelavati) ಮೊಮ್ಮಗ  ಯುವರಾಜ್ (Yuvraj) ಆಗಮಿಸಿದ್ದಾರೆ. ನಿನ್ನೆ ರಾತ್ರಿಯೇ ಅವರು ಚೆನ್ನೈನಿಂದ ಹೊರಟು ನೆಲಮಂಗಲ ತಲುಪಿ, ಇಂದು ಅಂತಿಮ ದರ್ಶನ ಪಡೆದಿದ್ದಾರೆ.

     

    ವಿನೋದ್ ರಾಜ್ (Vinod Raj) ಮದುವೆ ವಿಚಾರವಾಗಿ ಹಲವಾರು ಗೊಂದಲಗಳು ಇದ್ದವು. ತಾಯಿಗಾಗಿ ವಿನೋದ್ ಮದುವೆ ಆಗದೇ, ತಾಯಿಯ ಸೇವೆಯಲ್ಲಿದ್ದಾರೆ ಎಂದು ಹೇಳಲಾಗಿತ್ತು. ಇತ್ತೀಚೆಗಷ್ಟೇ ವಿನೋದ್ ರಾಜ್ ಮದುವೆ ಆಗಿರುವ ಸುದ್ದಿಯನ್ನು ನಿರ್ದೇಶಕರೊಬ್ಬರು ಫೋಟೋ ಸಮೇತ ವಿವರಿಸಿದ್ದರು. ವಿನೋದ್ ರಾಜ್ ಮದುವೆ ವಿಚಾರವನ್ನು ಸ್ವತಃ ಲೀಲಾವತಿ ಮತ್ತು ವಿನೋದ್ ರಾಜ್ ಕೂಡ ಒಪ್ಪಿಕೊಂಡಿದ್ದರು.

  • ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರ ಸಂತಾಪ

    ಹಿರಿಯ ನಟಿ ಲೀಲಾವತಿ ನಿಧನಕ್ಕೆ ಗಣ್ಯರ ಸಂತಾಪ

    ನ್ನಡ ಚಿತ್ರರಂಗ ಕಂಡ ಮೇರು ನಟಿ ಡಾ. ಲೀಲಾವತಿ (Leelavathi) ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಿಎಂ  ಕುಮಾರಸ್ವಾಮಿ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

    ಕನ್ನಡ ಚಿತ್ರರಂಗ ಕಂಡ ಮೇರು ನಟಿಯರಲ್ಲಿ ಲೀಲಾವತಿ ಅವರೂ ಒಬ್ಬರು. ಅವರೊಬ್ಬ ಕಲಾತಪಸ್ವಿ. ತಮ್ಮ ಮನೋಜ್ಞ ಅಭಿನಯದಿಂದ ಅಮ್ಮ ಎಂದೇ ಖ್ಯಾತಿ ಪಡೆದಿದ್ದರು. ಕಪ್ಪು ಬಿಳುಪು ಚಿತ್ರದಿಂದ ಆಧುನಿಕ ಚಿತ್ರರಂಗದವರೆಗೂ ಕ್ರಿಯಾಶೀಲರಾಗಿ ಕಲಾಸೇವೆ ಸಲ್ಲಿಸಿದ್ದರು ಎಂದು ಲೀಲಾವತಿ ಅವರನ್ನ ಡಿ.ಕೆ ಶಿವಕುಮಾರ್ ಅವರು ಸ್ಮರಿಸಿದ್ದಾರೆ. ಇತ್ತೀಚೆಗೆ ಅನಾರೋಗ್ಯದ ನಡುವೆಯೂ ನನ್ನ ಮನೆಗೆ ಬಂದು ಅವರು ಕಟ್ಟಿರುವ ಆಸ್ಪತ್ರೆ ಉದ್ಘಾಟನೆಗೆ ಆಹ್ವಾನಿಸಿದ್ದರು. ಅವರ ಇಚ್ಛೆಯಂತೆ ನಾನು ಹೋಗಿ ಆಸ್ಪತ್ರೆ ಉದ್ಘಾಟನೆ ಮಾಡಿ, ಆ ತಾಯಿಯ ಆಶೀರ್ವಾದ ಪಡೆದು ಬಂದಿದ್ದೆ. ಲೀಲಾವತಿ ಅಮ್ಮನವರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಈ ನೋವಿನ ಕ್ಷಣದಲ್ಲಿ ನಾವು ಲೀಲಾವತಿ ಅವರ ಪುತ್ರ ವಿನೋದ್ ರಾಜ್ ಅವರ ಜೊತೆ ನಿಲ್ಲುತ್ತೇವೆ ಎಂದು ಶಿವಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ:ಲೀಲಾವತಿ ಖಾಸಗಿ ವಿಷಯ ಹೇಳಿ ತುಂಬಾ ಅತ್ತಿದ್ದರು: ನಟಿ ಸರೋಜಾದೇವಿ

    ಕನ್ನಡ ಚಿತ್ರರಂಗದ ಶ್ರೇಷ್ಠ ನಟಿಯರಲ್ಲಿ ಒಬ್ಬರು, ಬಹುಭಾಷಾ ಕಲಾವಿದರಾದ ಲೀಲಾವತಿ ಅವರ ನಿಧನದ ವಾರ್ತೆ ಕೇಳಿ ಬಹಳ ನೋವುಂಟಾಯಿತು. ನಾಯಕಿಯಾಗಿ ಮಾತ್ರವಲ್ಲದೆ, ಪೋಷಕ ಪಾತ್ರಗಳಿಗೂ ಜೀವ ತುಂಬಿ ಬೆಳ್ಳಿತೆರೆಯ ಮೇಲೆ ಅವುಗಳ ಹೆಜ್ಜೆ ಗುರುತುಗಳು ಮೂಡುವಂತೆ ಮಾಡಿದವರು ಅವರು. ಭಕ್ತ ಕುಂಬಾರ, ವೀರ ಕೇಸರಿ, ಭಾಗ್ಯದೇವತೆ, ಸೋತು ಗೆದ್ದವಳು, ನಂದಾದೀಪ, ವಿಧಿ ವಿಲಾಸ, ಸಂತ ತುಕಾರಾಂ, ರಣಧೀರ ಕಂಠೀರವ ಸೇರಿ ಅವರು ನಟಿಸಿದ್ದ ಅನೇಕ ಚಿತ್ರಗಳು ಕನ್ನಡಿಗರ ಮನೆ ಮನಗಳನ್ನು ತುಂಬಿರುತ್ತವೆ. ಲೀಲಾವತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಪುತ್ರ ವಿನೋದ್ ರಾಜ್ ಅವರಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ.

    ಕನ್ನಡ ಚಿತ್ರರಂಗದ ಕಲಾ ಸರಸ್ವತಿ ಎಂದೇ ಖ್ಯಾತರಾಗಿದ್ದ ಹಿರಿಯ ನಟಿ ಲೀಲಾವತಿ ನಿಧನರಾಗಿರುವ ಸುದ್ದಿ ಕೇಳಿ ಮುನಸ್ಸಿಗೆ ದುಖವಾಯಿತು. ಅವರ ಅಗಲಿಕೆಯಿಂದ ಕನ್ನಡ ನಾಡು ಹಾಗೂ ಕಲಾರಂಗ ಒಬ್ಬ ಮನೆಯ ಹಿರಿಯರನ್ನು ಕಳೆದುಕೊಂಡು ಬಡವಾದಂತಾಗಿದೆ. ಅವರ ಪುತ್ರ ವಿನೋದ್ ರಾಜ್ ಅವರಿಗೆ ತಾಯಿಯ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.

    ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆಯಿಂದ ಕಲಾಪ್ರಪಂಚ ತನ್ನ ಮಾತೃಸದೃಶ ಕಲಾವಿದೆಯನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತಾ, ಅವರ ಕುಟುಂಬ ಹಾಗೂ ಅಭಿಮಾನಿ ವರ್ಗದವರಲ್ಲಿ ಸಂತಾಪಗಳನ್ನು ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

    ಇನ್ನೂ ಲೀಲಾವತಿ ಅವರ ನಿಧನಕ್ಕೆ ಹಿರಿಯ ನಟಿ ಉಮಾಶ್ರೀ, ಬಿ. ಸರೋಜದೇವಿ, ಶಿವಣ್ಣ, ಲಹರಿ ವೇಲು ಸೇರಿದಂತೆ ಹಲವು ಚಿತ್ರರಂಗದ ಕಲಾವಿದರು ಸಂತಾಪ ಸೂಚಿಸಿದ್ದಾರೆ.

  • ನಾನು ಮನೆಯಲ್ಲಿ ಇದ್ದಿದ್ರೆ, ಅಮ್ಮನ ಜೀವ ಉಳಿಯುತ್ತಿತ್ತು: ವಿನೋದ್ ರಾಜ್ ಭಾವುಕ

    ನಾನು ಮನೆಯಲ್ಲಿ ಇದ್ದಿದ್ರೆ, ಅಮ್ಮನ ಜೀವ ಉಳಿಯುತ್ತಿತ್ತು: ವಿನೋದ್ ರಾಜ್ ಭಾವುಕ

    ಹಿರಿಯ ನಟಿ ಲೀಲಾವತಿ (Leelavathi) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ. ತಾಯಿಯ ನಿಧನ ವಿನೋದ್ ರಾಜ್‌ಗೆ ಶಾಕ್ ಕೊಟ್ಟಿದ್ದು, ಲೀಲಾವತಿ ಅವರ ಕಡೆಯ ಕ್ಷಣ ಹೇಗಿತ್ತು ಎಂದು ವಿನೋದ್ ರಾಜ್ (Vinod Raj) ಹೇಳಿದ್ದಾರೆ. ನಾನು ಮನೆಯಲ್ಲಿ ಇದ್ದಿದ್ರೆ, ಅಮ್ಮನ ಜೀವ ಉಳಿಯುತ್ತಿತ್ತು ಎಂದು ತಾಯಿಯ ನಿಧನ ಬಗ್ಗೆ ಭಾವುಕರಾಗಿದ್ದಾರೆ.

    ಲೀಲಾವತಿ ಅವರು ಇಂದು ನಿಧನರಾಗಿದ್ದು, ಈ ಬಗ್ಗೆ ಪುತ್ರ ವಿನೋದ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಸಾವು ಒಪ್ಪಿಕೊಳ್ಳೋಕೆ ಕಷ್ಟ ಆಗ್ತಿದೆ. ಕಷ್ಟಪಟ್ಟು ಬೆಳೆದಿರೋ ಜೀವ ಅದು, ನನಗೆ 56 ವರ್ಷ ಆದ್ರೂ ಅವರ ಸಾವು ಅರಗಿಸಿಕೊಳ್ಳೋಕೆ ಆಗ್ತಿಲ್ಲ. ಇದನ್ನೂ ಓದಿ:ಅಮ್ಮ-ಮಗನ ಬಾಂಧವ್ಯವೇ ಬೇರೆ ತರಹ ಇತ್ತು- ಶಿವರಾಜ್‌ಕುಮಾರ್

    ಅಮ್ಮನಿಗೆ ಆಸ್ಪತ್ರೆ ಕಟ್ಟಿಸಬೇಕು ಅಂತ ಆಸೆಯಿತ್ತು. ಅಲ್ಲಿಯವರೆಗೂ ಬದುಕಿದ್ದಾರೆ. ನಾಲ್ಕು ಸಲ ಅಮ್ಮ ವಿನೋದ್ ಅಂತ ಹೇಳಿದ್ದಾರೆ. ನಾನು ಬರೋವಷ್ಟರಲ್ಲಿ ಅವರಿಲ್ಲ. ಅವರು ಅಲ್ಲಿ ಮಲ್ಕೊಂಡಿದ್ದಾರೆ. ಮತ್ತೆಂದೂ ಅವರನ್ನ ನೋಡೋಕೆ ಆಗಲ್ಲ. ಕಡೆಯದಾಗಿ ಅವರು ನನ್ನ ಹೆಸರು ಹೇಳಿದ್ದಾರೆ. ನಾನು ಇದ್ದಿದ್ರೆ ಅವರು ಹೋಗುತ್ತಿರಲಿಲ್ಲ. ಅಮ್ಮನ ಜೀವ ಉಳಿಯುತ್ತಿತ್ತು ಎಂದು ವಿನೋದ್ ರಾಜ್ ಭಾವುಕರಾಗಿದ್ದಾರೆ.

    ನಾಳೆ (ಡಿ.9) ನೆಲಮಂಗಲದ ಅಂಬೇಡ್ಕರ್ ಮೈದಾನದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ. ದಯವಿಟ್ಟು ಸಾರ್ವಜನಿಕರು ಸಹಕರಿಸಿ. ಎಲ್ಲರಿಗೂ ಅವರ ಅಂತಿಮ ದರ್ಶನ ಸಿಗುವಂತೆ ವ್ಯವಸ್ಥೆ ಮಾಡುತ್ತೇವೆ ಎಂದಿದ್ದಾರೆ. ನೆಲಮಂಗಲ ಪೊಲೀಸರು ಹಾಗೂ ತಹಶಿಲ್ದಾರ್ ಅರುಂಧತಿ ನೇತೃತ್ವದಲ್ಲಿ ಮೈದಾನದಲ್ಲಿ ತಯಾರಿ ಮಾಡಲಾಗುತ್ತಿದೆ.

  • ಅಮ್ಮ-ಮಗನ ಬಾಂಧವ್ಯವೇ ಬೇರೆ ತರಹ ಇತ್ತು- ಶಿವರಾಜ್‌ಕುಮಾರ್

    ಅಮ್ಮ-ಮಗನ ಬಾಂಧವ್ಯವೇ ಬೇರೆ ತರಹ ಇತ್ತು- ಶಿವರಾಜ್‌ಕುಮಾರ್

    ಹಿರಿಯ ನಟಿ ಲೀಲಾವತಿ (Leelvathi) ನಿಧನಕ್ಕೆ ನಟ ಶಿವರಾಜ್‌ಕುಮಾರ್ (Shivarajkumar) ಅವರು ಸಂತಾಪ ಸೂಚಿಸಿದ್ದಾರೆ. ಲೀಲಾವತಿ ಅವರ ನಿಧನ ನಮ್ಮ ಚಿತ್ರರಂಗಕ್ಕೆ ದೊಡ್ಡ ನಷ್ಟ ಆಗಿದೆ. ಅಮ್ಮ ಮತ್ತು ಮಗನ ಬಾಂಧವ್ಯವೇ ಬೇರೆ ತರಹ ಇತ್ತು ಎಂದು ಶಿವಣ್ಣ ಭಾವುಕರಾಗಿದ್ದಾರೆ.

    ಕಳೆದ ವಾರ ಲೀಲಾವತಿ ಅಮ್ಮನವರನ್ನ ಮಾತನಾಡಿಸಿದೆ. ಅವರ ನಿಧನದಿಂದ ನಮ್ಮ ಚಿತ್ರರಂಗಕ್ಕೆ ನಷ್ಟ ಆಗಿದೆ. ಮನಸ್ಸಿಗೆ ತುಂಬಾ ನೋವಾಗಿದೆ ಎಂದಿದ್ದಾರೆ. ವಿನೋದ್ ಯಾವಾಗಲೂ ಹೇಳುತ್ತಿದ್ದರು ಅವರ ಆರೋಗ್ಯದ ಬಗ್ಗೆ ನಾವೆಲ್ಲಾ ಅವರ ಜೊತೆಗೆ ಇರುತ್ತೀವಿ ಎಂದು ಹೇಳಿದ್ದೆ, ಲೀಲಾವತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಶಿವಣ್ಣ ಮಾತನಾಡಿದ್ದಾರೆ. ಇದನ್ನೂ ಓದಿ:ಸನ್ಮಾನ, ಅವಮಾನ ಎರಡೂ ಕಂಡವರು ಲೀಲಾವತಿ : ನಟಿ ಉಮಾಶ್ರೀ

    ಲೀಲಾವತಿ ಅಮ್ಮನ ವಿನೋದ್ ತುಂಬಾ ಹಚ್ಚಿಕೊಂಡಿದ್ದರು. ಅವರಿಬ್ಬರ ಬಾಂಧವ್ಯವೇ ಬೇರೇ ತರಹ ಇತ್ತು. ಈಗ ಅದೆನ್ನೆಲ್ಲಾ ಯೋಚನೆ ಮಾಡಿದಾಗ ಬೇಜಾರಾಗುತ್ತದೆ. ವಿನೋದ್ ಹೇಗೆ ತೆಗೆದುಕೊಳ್ತಾರೋ ಅನಿಸುತ್ತಿದೆ. ವಿನೋದ್ ತಾಯಿನ ಕಳೆದುಕೊಂಡ ನೋವಿನಲ್ಲಿದ್ದಾರೆ. ಇದೆಲ್ಲಾ ಸರಿ ಹೋಗಲಿ ಮತ್ತೆ ವಿನೋದ್ ಅವರನ್ನ ಭೇಟಿ ಮಾಡುತ್ತೇವೆ ಎಂದು ಶಿವಣ್ಣ ಪ್ರತಿಕ್ರಿಯೆ ನೀಡಿದ್ದಾರೆ.

    ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ.

  • ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದ ನಟಿ- ಲೀಲಾವತಿ ನಿಧನದ ಬಗ್ಗೆ ಸಿಎಂ ಸಂತಾಪ

    ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನ ರಂಜಿಸಿದ್ದ ನಟಿ- ಲೀಲಾವತಿ ನಿಧನದ ಬಗ್ಗೆ ಸಿಎಂ ಸಂತಾಪ

    ಹಿರಿಯ ನಟಿ ಲೀಲಾವತಿ (Leelavathi) ನಿಧನಕ್ಕೆ ಸಿಎಂ ಸಿದ್ದರಾಮಯ್ಯ (Cm Siddaramaiah) ಅವರು ಸಂತಾಪ ಸೂಚಿಸಿದ್ದಾರೆ. ಇಂದು ಲೋ ಬಿ ಪಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ವಿಧಿವಶರಾಗಿದ್ದಾರೆ. ಲೀಲಾವತಿ ಅವರ ನಿಧನಕ್ಕೆ ಸಿಎಂ ಸಂತಾಪ ವ್ಯಕ್ತಪಡಿಸಿದ್ದಾರೆ.

    ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ಕನ್ನಡದ ಹೆಸರಾಂತ ನಟಿ ಲೀಲಾವತಿ ನಿಧನ

    ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

  • ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

    ಲೀಲಾವತಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

    ಹಿರಿಯ ನಟಿ ಲೀಲಾವತಿ (Leelavathi) ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಇದೀಗ ಅವರ ಆರೋಗ್ಯ (Health) ಯೋಗ ಕ್ಷೇಮ ವಿಚಾರಿಸಲು ಸಿಎಂ ಸಿದ್ದರಾಮಯ್ಯ (Cm Siddaramiah) ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದಾರೆ.

    87 ವರ್ಷದ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ನಟ ದರ್ಶನ್, ಅಂಬರೀಶ್, ಗಿರಿಜಾ ಲೋಕೇಶ್ ಸೇರಿದಂತೆ ಅನೇಕರು ಆಗಮಿಸಿದ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಅವರು ಕೂಡ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯ ತೋಟ ಮನೆಗೆ ಭೇಟಿ ನೀಡಿ ಲೀಲಾವತಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ:ಬಾಲಿವುಡ್‌ನಲ್ಲಿ ಸ್ಥಾನ ಭದ್ರ ಮಾಡಿಕೊಂಡ ರಶ್ಮಿಕಾ ಮಂದಣ್ಣ

    SIDDARAMAIHA SPOKE

    ಈ ವೇಳೆ ಮಾಧ್ಯಮಕ್ಕೆ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, ನೆಲಮಂಗಲದಲ್ಲಿ ಕಾರ್ಯಕ್ರಮವೊಂದಕ್ಕೆ ಬಂದಿದ್ದೆ ಹಾಗೆ ಲೀಲಾವತಿ ಅವರ ಆರೋಗ್ಯ ವಿಚಾರಿಸಲು ಬಂದಿದ್ದೀನಿ. ಅವರು ಈಗ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ದಾಖಲಿಸಿದ್ರೆ ಎಲ್ಲಾ ಖರ್ಚು ನಾನೇ ನೋಡಿಕೊಳ್ಳುತ್ತೇನೆ. ಲೀಲಾವತಿ ಅವರು ನೈಜ ಕಲಾವಿದೆ ಎಂದು ಮೆಚ್ಚುಗೆ ಸೂಚಿಸಿದ್ದಾರೆ. ಬಳಿಕ ಫಾರೆಸ್ಟ್‌ನವರು ತೊಂದರೆ ಕೊಡುತ್ತಾರೆ ಈ ಭಾಗದವರು ಅಂತಿದ್ದರು ಈ ಬಗ್ಗೆ ಮಾತನಾಡಿದ್ದೇನೆ ಎಂದು ತಿಳಿಸಿದ್ದರು.

    ಅರಣ್ಯಾಧಿಕಾರಿಗಳಿಂದ ತೊಂದರೆಯಾಗಿದ್ದ ವಿಚಾರಕ್ಕೆ ವಿನೋದ್ ರಾಜ್ (Vinod Raj) ಪ್ರತಿಕ್ರಿಯಿಸಿ, ನಮ್ಮದು ಕಂದಾಯ ಭೂಮಿ ಎಂದು ಸೆಟಲ್ಮೆಂಟ್ ಆಗಿತ್ತು. ರೈತರನ್ನು ಅಲೆದಾಡಿಸೋದು ಆಗಬಾರದು. ಕೆಲವರು ರೈತರ ಜಾಗ ಭೂಕಬಳಿಕೆ ಮಾಡ್ತಿದ್ದಾರೆ. ಬಡವರನ್ನ ಕಣ್ಣೀರು ಹಾಕಿಸಬೇಡಿ ಎಂದು ಈ ವೇಳೆ ವಿನೋದ್ ರಾಜ್ ಕಣ್ಣೀರಿಟ್ಟಿದ್ದಾರೆ. ಈ ವಿಚಾರದ ಬಗ್ಗೆ ಸಿಎಂ ಗಮನಕ್ಕೆ ತಂದಿರೋದಾಗಿ ವಿನೋದ್‌ ರಾಜ್ ತಿಳಿಸಿದ್ದಾರೆ. ತಾಯಿನ ಪ್ರೀತಿಯಿಂದ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ ಎಂದು ಹೇಳಿದ್ದಾರೆ.

  • ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟಿಸಿದ ಡಿ.ಕೆ ಶಿವಕುಮಾರ್

    ಲೀಲಾವತಿ ಕನಸಿನ ಪಶು ಆಸ್ಪತ್ರೆ ಉದ್ಘಾಟಿಸಿದ ಡಿ.ಕೆ ಶಿವಕುಮಾರ್

    ಹಿರಿಯ ನಟಿ ಲೀಲಾವತಿ (Leelavathi) ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಬೆಂಗಳೂರು ಹೊರವಲಯದ ಸೋಲದೇವನಹಳ್ಳಿ ನೆಲೆಸಿರುವ ನಟಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ಈ ಬೆನ್ನಲ್ಲೇ ಲೀಲಾವತಿ ಕನಸಿನ ಆಸ್ಪತ್ರೆಯನ್ನ ಡಿ.ಕೆ ಶಿವಕುಮಾರ್ ಅವರು ಉದ್ಘಾಟನೆ ಮಾಡಿದ್ದಾರೆ.

    ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (D.k Shivakumar) ಇಂದು ಲೀಲಾವತಿ ಅವರ ಪಶು ಆಸ್ಪತ್ರೆ (Animal Hospital) ಉದ್ಘಾಟನೆ ಮಾಡಿದ್ದಾರೆ. ಲೀಲಾವತಿ ಆಸೆಗೆ ಸರ್ಕಾರ ಅದಕ್ಕೆ ಸಮ್ಮತಿ ನೀಡಿದೆ. ಉದ್ಘಾಟನೆ ಬಳಿಕ ಡಿಕೆಶಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಕೆಲ ದಿನಗಳ ಹಿಂದೆ ಶ್ರೀಮತಿ ಲೀಲಾವತಿ- ವಿನೋದ್ ರಾಜ್ ನಮ್ಮ ಮನೆಗೆ ಭೇಟಿ ನೀಡಿದ್ದರು. ಪಶು ವೈದ್ಯ ಶಾಲೆ ಕಟ್ಟೀದ್ದೀವಿ ಉದ್ಘಾಟನೆ ಮಾಡಿ ಕೊಡಿ ಎಂದಿದ್ದರು. ಇದನ್ನೂ ಓದಿ:ಪೂಜಾ ಗಾಂಧಿ ಕೈ ಹಿಡಿಯಲಿರೋ ಹುಡುಗ ವಿಜಯ್

    ಒಂದು ದೊಡ್ಡ ಸಂದೇಶ ಇಬ್ಬರು ಕೊಟ್ಟಿದ್ದಾರೆ. ಎಷ್ಟೇ ದುಡ್ಡಿರಬಹುದು ಅವರಿಗೆ ಇರುವ ಮನಸ್ಸು ಯಾರಿಗೂ ಬರಲ್ಲ. ಅವರೇನು ಶ್ರೀಮಂತರೇನು ಅಲ್ಲ. ಆದರೆ ಸಮಾಜಕ್ಕೆ ಕೊಡುಗೆ ಕೊಡ್ಬೇಕು ಅಂತಾ ಎಲ್ಲರಿಗೂ ಮಾರ್ಗದರ್ಶನವಾಗಿದ್ದಾರೆ. ಬೆಂಗಳೂರಿಗೆ ಹತ್ತಿರವಾದ ಸ್ಥಳ ಇದು. ಇದು ಇಡೀ ನಮ್ಮ ಎಲ್ಲಾ ವರ್ಗದ ಜನರಿಗೆ ಮಾದರಿಯಾಗಿದೆ. ಇವರು ವ್ಯವಸಾಯದಲ್ಲೇ ಬದುಕಿದ್ರು ಇಂತಹ ಸೇವೆ ಮಾಡ್ತಿದ್ದಾರೆ. ಅವರ ಸೇವೆ 60 ವರ್ಷಗಳಿಂದ ನಡೆದು ಬರುತ್ತಿದೆ. ಇನ್ನೂ ಕಲಾವಿದರಿಗೆ ಪೆನ್ಶನ್ ಕೊಡಿ ಅನ್ನೋ ಡಿಮ್ಯಾಂಡ್ ವಿನೋದ್ ಕೊಟ್ಟಿದ್ದಾರೆ. ಅದನ್ನ ಈಡೇರಿಸೋ ಪ್ರಯತ್ನ ಮಾಡ್ತೀನಿ ಎಂದು ಡಿ.ಕೆ ಶಿವಕುಮಾರ್ ಮಾತನಾಡಿದ್ದಾರೆ.

    ಅನಾರೋಗ್ಯದಿಂದ ಬಳಲುತ್ತಿರೋ ಲೀಲಾವತಿ ಅವರನ್ನ ನೋಡಲು ಅರ್ಜುನ್ ಸರ್ಜಾ, ದರ್ಶನ್, ಅಭಿಷೇಕ್ ಅಂಬರೀಶ್, ಗಿರಿಜಾ ಲೋಕೇಶ್, ಶಿವಣ್ಣ ಸೇರಿದಂತೆ ಹಲವು ನಟ- ನಟಿಯರು ಮನೆಗೆ ಭೇಟಿ ಆರೋಗ್ಯ ವಿಚಾರಿಸಿದ್ದಾರೆ. ಈ ಸಂದರ್ಭದಲ್ಲಿಯೇ ಲೀಲಾವತಿ ಅವರ ಬಹುದಿನಗಳ ಕನಸನ್ನ ಮಗ ವಿನೋದ್ ರಾಜ್ ನನಸು ಮಾಡಿದ್ದಾರೆ.