Tag: leg spinner

  • ಪಠಾಣ್ VS ಮಿಶ್ರಾ ಟ್ವೀಟ್ ವಾರ್ – ನಾನು ಸಂವಿಧಾನ ಅನುಸರಿಸುತ್ತೇನೆ ಎಂದ ಪಠಾಣ್

    ಪಠಾಣ್ VS ಮಿಶ್ರಾ ಟ್ವೀಟ್ ವಾರ್ – ನಾನು ಸಂವಿಧಾನ ಅನುಸರಿಸುತ್ತೇನೆ ಎಂದ ಪಠಾಣ್

    ನವದೆಹಲಿ: ಭಾರತದ ಮಾಜಿ ಕ್ರಿಕೆಟಿಗರಾದ ಇರ್ಫಾನ್ ಪಠಾಣ್ ಹಾಗೂ ಅಮಿತ್ ಮಿಶ್ರಾ ಅವರ ನಡುವೆ ನೆನ್ನೆಯಿಂದಲೂ ಟ್ವೀಟ್ ವಾರ್ ನಡೆಯುತ್ತಿದ್ದು, ಇಂದೂ ಸಹ ಟಾಪ್ ಟ್ರೆಂಡಿಗ್ ಟ್ವೀಟ್ ಆಗಿದೆ.

    ನೆನ್ನೆ ಅಮಿತ್ ಮಿಶ್ರಾ ಅವರು ಮಾಡಿದ್ದ ಟ್ವೀಟ್‌ಗೆ ಮತ್ತೆ ತಿರುಗೇಟು ನೀಡಿರುವ ಇರ್ಫಾನ್ ಪಠಾಣ್ ತಮ್ಮ ಟ್ವೀಟ್‌ನಲ್ಲಿ, ನಾನು ಭಾರತದ ಸಂವಿಧಾನವನ್ನು ಯಾವಾಗಲೂ ಅನುಸರಿಸುತ್ತೇನೆ. ನಮ್ಮ ಸುಂದರ ದೇಶದ ಪ್ರತಿಯೊಬ್ಬ ನಾಗರಿಕನೂ ಇದನ್ನು ಅನುಸರಿಸಬೇಕು ಎಂದು ಒತ್ತಾಯಿಸುತ್ತೇನೆ. ದಯವಿಟ್ಟು ಓದಿ ಮತ್ತೆ ಓದಿ… ಎಂದು ಹೇಳಿದ್ದಾರೆ. ಇದರೊಂದಿಗೆ ಭಾರತ ಸಂವಿಧಾನದ ಪೀಠಿಕೆಯ ಚಿತ್ರವನ್ನು ಹಾಕಿದ್ದಾರೆ. ಇದನ್ನೂ ಓದಿ: ಪಠಾಣ್‌ Vs ಮಿಶ್ರಾ – ಭಾರತ ಶ್ರೇಷ್ಠ ದೇಶವಾಗಬಹುದು ಆದರೆ…

    amit mishra irfan pathan

    ಟ್ವೀಟ್ ವಾರ್‌ನ ಅಸಲಿ ಗುಟ್ಟೇನು?: ಭಾರತದ ವೇಗದ ಬೌಲರ್ ಆಗಿದ್ದ ಇರ್ಫಾನ್ ಪಠಾಣ್ ಯಾವುದೇ ಘಟನೆಯನ್ನು ಉಲ್ಲೇಖಿಸದೇ, ‘ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯವನ್ನು ಹೊಂದಿದೆ. ಆದರೆ…..’ ಎಂದು ಬರೆದು ಟ್ವೀಟ್ ಮಾಡಿದ್ದರು.

    ಈ ಟ್ವೀಟ್‌ಗೆ ಟಾಂಗ್ ಕೊಡುವಂತೆ ಮಾಜಿ ಬಲಗೈ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ, ‘ನನ್ನ ದೇಶ, ನನ್ನ ಸುಂದರ ದೇಶ, ಭೂಮಿಯ ಮೇಲಿನ ಶ್ರೇಷ್ಠ ದೇಶವಾಗುವ ಸಾಮರ್ಥ್ಯ ಹೊಂದಿದೆ. ನಮ್ಮ ಸಂವಿಧಾನವೇ ನಮ್ಮ ಮೊದಲ ಗ್ರಂಥ ಎಂಬುದನ್ನು ಕೆಲವರು ಅರಿತುಕೊಂಡಾಗ ಮಾತ್ರ’ ಎಂದು ಬರೆದಿದ್ದರು. ಇದನ್ನೂ ಓದಿ: ಡೆಲ್ಲಿಯ ಪ್ರವೀಣ್‌ಗೆ ದಂಡದೊಂದಿಗೆ ಒಂದು ಪಂದ್ಯ ಬ್ಯಾನ್

    ಈಗ ಇಬ್ಬರ ಟ್ವೀಟ್‌ಗಳ ಬಗ್ಗೆ ಚರ್ಚೆಗೆ ಗ್ರಾಸವಾಗಿದೆ. ದೇಶದಲ್ಲಿ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿ ಇರ್ಫಾನ್ ಪಠಾಣ್ ಸರಿಯಾದ ಟ್ವೀಟ್ ಮಾಡಿದ್ದಾರೆ ಎಂದು ಕೆಲವು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇನ್ನೂ ಕೆಲವರು ಅಮಿತ್ ಮಿಶ್ರಾ ಸರಿಯಾದ ರೀತಿಯಲ್ಲಿ ಹೇಳಿದ್ದಾರೆ. ಭಾರತದಲ್ಲಿ ಸಂವಿಧಾನವೇ ಮೊದಲಾಗಬೇಕೆ ಹೊರತು, ಧರ್ಮ ಗ್ರಂಥವಲ್ಲ. ಬಲಗೈ ಲೆಗ್ ಸ್ಪಿನ್ನರ್‌ಗೆ ಎಡಗೈ ಬ್ಯಾಟರ್ ಪಠಾಣ್ ಕ್ಲೀನ್ ಬೌಲ್ಡ್ ಆಗಿದ್ದಾರೆ ಎಂದು ಟ್ರೋಲ್ ಮಾಡಿದ್ದಾರೆ.

  • ನಮ್ಮ ಬೆಂಗಳೂರು ಕುಟುಂಬ ರೆಡಿನಾ- ಕನ್ನಡದಲ್ಲೇ ಚಹಲ್ ಟ್ವೀಟ್

    ನಮ್ಮ ಬೆಂಗಳೂರು ಕುಟುಂಬ ರೆಡಿನಾ- ಕನ್ನಡದಲ್ಲೇ ಚಹಲ್ ಟ್ವೀಟ್

    – ಕನ್ನಡಿಗರ ಮನ ಗೆದ್ದ ಆರ್‌ಸಿಬಿ ತಂಡದ ಸ್ಪಿನ್ನರ್

    ಬೆಂಗಳೂರು: ಕ್ರಿಕೆಟ್ ಹಬ್ಬವೆಂದೇ ಕರೆಸಿಕೊಳ್ಳುವ ಇಂಡಿಯನ್ ಪ್ರಿಮಿಯರ್ ಲೀಗ್‍ನ 13ನೇ ಆವೃತ್ತಿ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಈ ಮಧ್ಯೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕನ್ನಡಿಗರ ಮನ ಗೆಲ್ಲಲು ಸಾಮಾಜಿಕ ಜಾಲತಾಣದಲ್ಲಿ ಕನ್ನಡವನ್ನು ಬಳಸುತ್ತಿದೆ. ಇದೇ ಮಾದರಿಯಲ್ಲೇ ತಂಡದ ಲೆಗ್ ಸ್ಪಿನ್ನರ್ ಯಜುವೇಂದ್ರ ಚಹಲ್ ಕನ್ನಡದಲ್ಲೇ ಟ್ವೀಟ್ ಮಾಡಿ ಕನ್ನಡಿಗರ ಮನ ಗೆದ್ದಿದಾರೆ.

    ತಾವು ಬೌಲಿಂಗ್ ಮಾಡುತ್ತಿರುವ ಫೋಟೋವನ್ನು ಟ್ವೀಟ್ ಮಾಡಿರುವ ಚಹಲ್, ‘ನಮ್ಮ ಬೆಂಗಳೂರು ಕುಟುಂಬ ರೆಡಿನಾ’ ಎಂದು ಬರೆದುಕೊಂಡಿದ್ದಾರೆ. ಚಹಲ್ ಅವರ ಟ್ವೀಟ್‍ಗೆ ಪ್ರತಿಕ್ರಿಯಿಸಿರುವ ನೆಟ್ಟಿಗರು ‘ಫಿದಾ ಆಗೋದೇ ಗುರು ನಮ್ಮ ಕನ್ನಡ ಟ್ವಿಟ್ ನೋಡಿ. ಬೇರೆ ರಾಜ್ಯದವರು ನಮ್ಮ ಕನ್ನಡ ಪದಬಳಕೆ ಮಾಡಿದಾಗ ಅದರಲ್ಲಿ ಸಿಗುವ ಮಜಾನೇ ಬೇರೆ. ಲವ್ ಯೂ ಬ್ರೋ. ಜೈ ಆರ್‌ಸಿಬಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಎಬಿ ಡಿವಿಲಿಯರ್ಸ್‌ಗೆ ಹೆಡ್ ಕೋಚ್ ಡೆಡ್‍ಲೈನ್!

    ಚೆನ್ನೈ ಸೂಪರ್ ಕಿಂಗ್ಸ್ ಈಗಾಗಲೇ ತಂಡ ಭರ್ಜರಿ ಅಭ್ಯಾಸ ನಡೆಸಿದೆ. ಅದರಲ್ಲೂ ಕ್ಯಾಪ್ಟನ್ ಮಹೇಂದ್ರ ಸಿಂಗ್ ಧೋನಿ ಸ್ಫೋಟಕ ಬ್ಯಾಟಿಂಗ್‍ಗೆ ಕಠಿಣ ಅಭ್ಯಾಸ ನಡೆಸಿದ್ದಾರೆ. ಅಭ್ಯಾಸದ ವೇಳೆ ಎಂ.ಎಸ್.ಧೋನಿ ಸತತ ಐದು ಸಿಕ್ಸರ್ ಸಿಡಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಸಿಎಸ್‍ಕೆ ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಮಾರ್ಚ್ 3ರಂದು ಚೆನ್ನೈಗೆ ಆಗಮಿಸಿ, ಅಭ್ಯಾಸ ಆರಂಭಿಸಿದ್ದಾರೆ. ಜೊತೆಗೆ ತಂಡದ ಅನುಭವಿ ಆಟಗಾರ ಸುರೇಶ್ ರೈನಾ ಸೇರಿದಂತೆ ಕೆಲ ಆಟಗಾರರು ಈಗಾಗಲೇ ಚೆನ್ನೈನ ಚಿದಂಬರಂ ಮೈದಾನದಲ್ಲಿ ಕ್ರಿಕೆಟ್ ಅಭ್ಯಾಸ ನಡೆಸಿದ್ದಾರೆ. ಈ ಬೆನ್ನಲ್ಲೇ ಆರ್‌ಸಿಬಿ ತಂಡವು ಅಭ್ಯಾಸಕ್ಕೆ ಸಿದ್ಧತೆ ನಡೆಸಿದೆ. ಹೀಗಾಗಿ ಚಹಾಲ್ ನಮ್ಮ ಬೆಂಗಳೂರು ಕುಟುಂಬ ರೆಡಿನಾ ಎಂದು ಕೇಳಿದ್ದಾರೆ ಎನ್ನಲಾಗುತ್ತಿದೆ. ಇದನ್ನೂ ಓದಿ: ಪರಿವರ್ತನೆಯೊಂದೇ ಶಾಶ್ವತವಾದದ್ದು ಎಂದ ವಿರಾಟ್

    ಇಲ್ಲಿವರೆಗೆ ಐಪಿಎಲ್ 12 ಆವೃತ್ತಿಗಳು ನಡೆದಿದ್ದು, ಚೆನ್ನೈ ಸೂಪರ್ ಕಿಂಗ್ಸ್ 3 ಬಾರಿ ಚಾಂಪಿಯನ್‍ಶಿಪ್ ಆಗಿದೆ. ಆದರೆ ಮೂರು ತಂಡಗಳು ಇಲ್ಲಿವರೆಗೂ ಒಂದು ಬಾರಿಯೂ ಟ್ರೋಫಿ ಗೆದ್ದಿಲ್ಲ. ಆರ್‌ಸಿಬಿ, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಕಪ್ ಗೆಲ್ಲದೆ ಇರುವ ತಂಡಗಳಾಗಿದೆ.

    2019ರ ಐಪಿಎಲ್ ಆವೃತ್ತಿಯಲ್ಲಿ ಗೆಲ್ಲುವ ಮೂಲಕ ಮುಂಬೈ ನಾಲ್ಕನೇ ಬಾರಿ ಟ್ರೋಫಿ ತನ್ನದಾಗಿಸಿಕೊಂಡ ತಂಡವಾಗಿ ಹೊರ ಹೊಮ್ಮಿತು. ಈ ಮೂಲಕ ಐಪಿಎಲ್ ಸೀಸನ್‍ನಲ್ಲಿ ಅತಿ ಹೆಚ್ಚು ಟ್ರೋಫಿ ಗೆದ್ದ ತಂಡವಾಗಿ ಮುಂಬೈ ಇಂಡಿಯನ್ಸ್ ಗುರುತಿಸಿಕೊಂಡಿದೆ. ರಾಜಸ್ಥಾನ ರಾಯಲ್ಸ್ ಚೊಚ್ಚಲ ಸೀಸನ್ 2008ರಲ್ಲಿ ಗೆಲುವು ಸಾಧಿಸಿತ್ತು. ಉಳಿದಂತೆ ಚೆನ್ನೈ ಸೂಪರ್ ಕಿಂಗ್ಸ್ 3, ಕೋಲ್ಕತ್ತಾ ನೈಟ್‍ರೈಡರ್ಸ್ 2 ಹಾಗೂ ಸನ್‍ರೈಸರ್ಸ್ ಹೈದರಾಬಾದ್ ಒಂದು ಬಾರಿ ಟ್ರೋಫಿ ಗೆದ್ದುಕೊಂಡಿದೆ. ಇದನ್ನೂ ಓದಿ: ಐಪಿಎಲ್ ನಗದು ಬಹುಮಾನದಲ್ಲಿ ಶೇ.50ರಷ್ಟು ಕಡಿತ- ಬಿಸಿಸಿಐ ಹೇಳಿದ್ದೇನು?

    ಕಳೆದ ಆವೃತ್ತಿಯಲ್ಲಿ ಕೇಳಿ ಬಂದ ‘ಈ ಸಲ ಕಪ್ ನಮ್ದೆ’ ಘೋಷಣೆ ಈಗಾಗಲೇ ಭಾರೀ ಸದ್ದು ಮಾಡುತ್ತಿದೆ. 12 ಆವೃತ್ತಿಯಿಂದ ಒಂದೇ ಒಂದು ಬಾರಿಯೂ ಚಾಂಪಿಯನ್ ಆಗದಿದ್ದರೂ ಅಭಿಮಾನಿಗಳಿಗೆ ಆರ್‌ಸಿಬಿ ಮೇಲಿನ ಅಭಿಮಾನ ಕೊಂಚವೂ ಕೂಡ ಕಡಿಮೆಯಾಗಿಲ್ಲ. ಈ ಬಾರಿ ಆರ್‌ಸಿಬಿ ಕಪ್ ಗೆಲ್ಲುತ್ತದೆ ಎಂಬ ವಿಶ್ವಾಸ ಅಭಿಮಾನಗಳಲ್ಲಿದೆ.

  • ಚಹಲ್ ಸ್ಮರಣೀಯ ದಾಖಲೆಗೆ 1 ವಿಕೆಟ್ ಬಾಕಿ

    ಚಹಲ್ ಸ್ಮರಣೀಯ ದಾಖಲೆಗೆ 1 ವಿಕೆಟ್ ಬಾಕಿ

    ನಾಗ್ಪುರ: ಬಾಂಗ್ಲಾದೇಶದ ವಿರುದ್ಧದ 3 ಪಂದ್ಯಗಳ ಟಿ20 ಸರಣಿಯಲ್ಲಿ ಇತ್ತಂಡಗಳು ತಲಾ 1 ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಸಮಬಲದಲ್ಲಿ ಹೋರಾಟ ಮಾಡುತ್ತಿದ್ದು, ಸರಣಿ ಕೈವಶ ಮಾಡಿಕೊಳ್ಳಲು ಭಾನುವಾರ ನಡೆಯಲಿರುವ ನಾಗ್ಪುರದಲ್ಲಿ ನಡೆಯಲಿರುವ ಫೈನಲ್ ಪಂದ್ಯಕ್ಕೆ ತಂಡಗಳು ಸಿದ್ಧತೆ ನಡೆಸಿದೆ. ಇದೇ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಹಲ್ ವಿಶೇಷ ದಾಖಲೆ ಬರೆಯಲು 1 ವಿಕೆಟ್ ಮಾತ್ರ ಬಾಕಿ ಇದೆ.

    ಅಂತರಾಷ್ಟ್ರೀಯ ಟಿ20 ಕ್ರಿಕೆಟ್ ಪಂದ್ಯದಲ್ಲಿ ಚಹಲ್ ಮತ್ತೊಂದು ವಿಕೆಟ್ ಗಳಿಸಿದರೆ ಭಾರತ ಪರ ಅತ್ಯಧಿಕ ವಿಕೆಟ್ ಪಡೆದ ಲೇಗ್ ಸ್ಪಿನ್ನರ್ ಆಟಗಾರರ ಎಂಬ ಹೆಗ್ಗಳಿಕೆಯನ್ನು ಪಡೆಯಲಿದ್ದಾರೆ. ಟೀಂ ಇಂಡಿಯಾ ಪರ ಆರ್.ಅಶ್ವಿನ್ ಟಿ20 ಮಾದರಿಯಲ್ಲಿ 52 ವಿಕೆಟ್‍ಗಳೊಂದಿಗೆ ಮೊದಲ ಹಾಗೂ ಜಸ್ಪ್ರೀತ್ ಬುಮ್ರಾ 51 ವಿಕೆಟ್ ಗಳಿಂದ 2ನೇ ಸ್ಥಾನದಲ್ಲಿದ್ದು, ಚಹಲ್ ಈ ಸಾಧನೆ ಮಾಡಿದ 3 ಬೌಲರ್ ಎನಿಸಿಕೊಳ್ಳಲಿದ್ದಾರೆ.

    ಬಾಂಗ್ಲಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಚಹಲ್ 1 ವಿಕೆಟ್ ಪಡೆದರೆ, 2ನೇ ಪಂದ್ಯದಲ್ಲಿ 2 ಪ್ರಮುಖ ವಿಕೆಟ್ ಗಳನ್ನು ಉರುಳಿಸಿದ್ದರು. ಸದ್ಯ ನಾಗ್ಪುರದ ಪಂದ್ಯದಲ್ಲಿ ಚಹಲ್ ವಿಶೇಷ ಸಾಧನೆ ಮಾಡುವ ಅವಕಾಶ ಪಡೆದಿದ್ದಾರೆ. ಅಲ್ಲದೇ ಪಂದ್ಯದಲ್ಲಿ 4 ವಿಕೆಟ್ ಪಡೆದರೆ ಅಶ್ವಿನ್‍ರನ್ನು ಹಿಂದಿಕ್ಕಿ ನಂ.1 ಪಟ್ಟ ಪಡೆಯಲಿದ್ದಾರೆ.

    ಇತ್ತ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಳ್ಳವ ಒತ್ತಡ 2 ತಂಡಗಳಿಗಿದ್ದು, ಭಾರತ ವಿರುದ್ಧ ಮೊದಲ ಟಿ20 ಪಂದ್ಯ ಗೆಲುವು ಪಡೆದಿರುವ ಬಾಂಗ್ಲಾ ಸರಣಿಯ ಗೆಲುವಿನ ಲೆಕ್ಕಾಚಾರದಲ್ಲಿದೆ. ಟೀಂ ಇಂಡಿಯಾ ಪರ ಅಂತಿಮ ಪಂದ್ಯಕ್ಕೆ ಆಡುವ 11 ಬಳಗದಲ್ಲಿ ಬದಲಾವಣೆ ಕಂಡು ಬರುವ ಸಾಧ್ಯತೆಗಳಿಲ್ಲ. ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಆಡುತ್ತಿರುವ ಪರಿಣಾಮ ರೋಹಿತ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಈಗಾಗಲೇ 2ನೇ ಪಂದಲ್ಲಿ ಗೆಲ್ಲುವ ಮೂಲಕ ರೋಹಿತ್ ಬಳಗ ಬಾಂಗ್ಲಾ ತಂಡಕ್ಕೆ ತಿರುಗೇಟು ನೀಡಿದೆ. ಕಳೆದ ಪಂದ್ಯದಂತಯೇ ನಾಗ್ಪುರದ ಪಿಚ್ ಬ್ಯಾಟಿಂಗ್ ಗೆ ಸಹಕಾರ ನೀಡುವ ನಿರೀಕ್ಷೆ ಇದ್ದು, ಮತ್ತೊಂದು ರೋಚಕ ಹೋರಾಟ ನಿರೀಕ್ಷಿಸಬಹುದಾಗಿದೆ.