Tag: Legislative Assembly

  • ಎಸ್‌ಐಟಿ ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಎಲ್ಲರೂ ಕಾಪಾಡಬೇಕು: ಯು.ಟಿ. ಖಾದರ್

    ಎಸ್‌ಐಟಿ ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಎಲ್ಲರೂ ಕಾಪಾಡಬೇಕು: ಯು.ಟಿ. ಖಾದರ್

    ಬೆಂಗಳೂರು: ಧರ್ಮಸ್ಥಳ ಪ್ರಕರಣದಲ್ಲಿ (Dharmasthala Mass Burials) ಎಸ್‌ಐಟಿ (SIT) ತನಿಖೆ ನಡೆಯುತ್ತಿದೆ. ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಎಲ್ಲರೂ ಕಾಪಾಡಬೇಕು ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ (UT Khader) ತಿಳಿಸಿದ್ದಾರೆ.

    ಧರ್ಮಸ್ಥಳ ಪ್ರಕರಣದ ಬಗ್ಗೆ ವಿಧಾನಸೌಧಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಧರ್ಮಸ್ಥಳ ಕೇಸ್ ಬಗ್ಗೆ ಈಗಾಗಲೇ ನಾನು ಪ್ರತಿಕ್ರಿಯೆ ನೀಡಿದ್ದೇನೆ. ಮಂಗಳವಾರ ವಿಪಕ್ಷಗಳು ಚರ್ಚೆಗೆ ಅವಕಾಶ ಕೇಳಿತ್ತು. ಶೂನ್ಯವೇಳೆಯಲ್ಲಿ ಅವಕಾಶ ಕೊಟ್ಟಿದ್ದೆ. ಸರ್ಕಾರವೂ ಅದಕ್ಕೆ ಉತ್ತರ ಕೊಟ್ಟಿದೆ. ಮತ್ತಷ್ಟು ಚರ್ಚೆಗೆ ಅವಕಾಶ ಬೇಕು ಅಂತ ಕೇಳಿದ್ದಾರೆ. ನಾನು ಚರ್ಚೆಗೆ ಅವಕಾಶ ಮಾಡಿಕೊಡುತ್ತೇನೆ ಎಂದರು. ಇದನ್ನೂ ಓದಿ: Delhi | ಈಜು ತರಗತಿಗೆ ಹೋಗಿದ್ದ ವೇಳೆ ಇಬ್ಬರು ಬಾಲಕಿಯರ ಮೇಲೆ ಗ್ಯಾಂಗ್ ರೇಪ್

    ಧರ್ಮಸ್ಥಳ ಕೇಸ್‌ನಲ್ಲಿ ಎಸ್‌ಐಟಿ ತನಿಖೆ ಮಾಡುತ್ತಿದೆ. ಎಸ್‌ಐಟಿ ತನಿಖೆ ಮಾಡೋದಕ್ಕೆ ಬಿಡಬೇಕು. ತನಿಖೆ ಮುಗಿಯೋ ಮುನ್ನವೇ ನಾವೇ ತೀರ್ಪು ಕೊಡೋದು ಸರಿಯಲ್ಲ. ಧಾರ್ಮಿಕ ಸ್ಥಳದ ಪಾವಿತ್ರತೆಯನ್ನ ಕಾಪಾಡೋದು ನಮ್ಮ ಕರ್ತವ್ಯ. ಈ ವಿಚಾರದಲ್ಲಿ ಯಾರೂ ಸ್ವಯಂ ಅಭಿಪ್ರಾಯ ಕೊಡಬಾರದು ಎಂದು ತಿಳಿಸಿದರು. ಇದನ್ನೂ ಓದಿ: ಹರ್ ಘರ್ ತಿರಂಗ ಅಭಿಯಾನ – ಮನೆಯ ಮೇಲೆ ಧ್ವಜಾರೋಹಣ ಮಾಡಿದ ಅಮಿತ್ ಶಾ

    ಎಸ್‌ಐಟಿ ತನಿಖೆ ಆಗೋವರೆಗೂ ಎಲ್ಲರೂ ಸಮಾಧಾನವಾಗಿ ಇರಬೇಕು. ನಾವು ಸಮಾನತೆ, ಸೋದರ ಭಾವನೆಯಲ್ಲಿ ಇರೋರು. ಹೀಗಾಗಿ ತನಿಖೆ ಆಗೋ ಮುನ್ನ ಯಾರೂ ಮಾತಾಡೋದು ಬೇಡ. ಸದನದಲ್ಲಿ ಧರ್ಮಸ್ಥಳದ ವಿಚಾರವಾಗಿ ಚರ್ಚೆಗೆ ಅವಕಾಶ ಕೊಡುತ್ತೇನೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: Karwar | ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇ.ಡಿ ದಾಳಿ

  • ಇನ್ಮುಂದೆ ಖಾಸಗಿ ರಸ್ತೆಯನ್ನು ಸಾರ್ವಜನಿಕ ರಸ್ತೆ ಅಂತ ಘೋಷಣೆ ಮಾಡಲು ಬಿಬಿಎಂಪಿಗೆ ಅಧಿಕಾರ: ವಿಧೇಯಕ ಅಂಗೀಕಾರ

    ಇನ್ಮುಂದೆ ಖಾಸಗಿ ರಸ್ತೆಯನ್ನು ಸಾರ್ವಜನಿಕ ರಸ್ತೆ ಅಂತ ಘೋಷಣೆ ಮಾಡಲು ಬಿಬಿಎಂಪಿಗೆ ಅಧಿಕಾರ: ವಿಧೇಯಕ ಅಂಗೀಕಾರ

    ವಿಧಾನಸಭೆಯಲ್ಲಿ ಅಂಗೀಕಾರವಾದ ವಿಧೇಯಕಗಳು ಯಾವ್ಯಾವು?

    ಬೆಂಗಳೂರು: ಯಾವುದೇ ಖಾಸಗಿ ರಸ್ತೆಯನ್ನು ಸಾರ್ವಜನಿಕ ರಸ್ತೆ ಅಂತ ಘೋಷಣೆ ಮಾಡಲು ಬಿಬಿಎಂಪಿಗೆ ಅಧಿಕಾರ ನೀಡುವ ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ’ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಯಿತು.

    ಹೆಚ್.ಕೆ.ಪಾಟೀಲ್ ಅವರು ವಿಧೇಯಕ ಬಗ್ಗೆ ಮಾಹಿತಿ ನೀಡಿದರು. ನಗರದ ಖಾಸಗಿ ರಸ್ತೆ, ಬೀದಿಗಳು ಇನ್ಮುಂದೆ ಬಿಬಿಎಂಪಿ ವ್ಯಾಪ್ತಿಗೆ ಸೇರ್ಪಡೆ ಮಾಡಲಾಗಿದೆ. ಬಿಬಿಎಂಪಿಯೇ ನಗರದ ಖಾಸಗಿ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಅವಕಾಶ ನೀಡಿದೆ. ಅನಧಿಕೃತ ಕಟ್ಟಡ ಅಥವಾ ಅದರ ಭಾಗ ಬಳಸುವುದರಿಂದ ಮಾಲೀಕ ಅಥವಾ ಇತರೆ ವ್ಯಕ್ತಿಗಳನ್ನು ತಡೆಯಲು ವಿಧೇಯಕದಲ್ಲಿ ಅವಕಾಶ ಇದೆ.

    ಇ-ಸ್ವತ್ತು ತಂತ್ರಾಂಶದಲ್ಲಿ ಕೇವಲ 44 ಲಕ್ಷ ಆಸ್ತಿಗಳು ಮಾತ್ರ ನಮೂದಾಗಿದೆ. ಅಂದರೆ, ಸುಮಾರು 96 ಲಕ್ಷ ಆಸ್ತಿಗಳು ಇ-ಸ್ವತ್ತು ತಂತ್ರಾಂಶದಿಂದ ಹೊರಗಡೆ ಇವೆ. ಇದೀಗ ಈ ಆಸ್ತಿಗಳಿಗೂ ಇ-ಖಾತಾ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇಂತಹ ಅನಧಿಕೃತ ಸ್ವತ್ತುಗಳ ಮೇಲೆ ಶುಲ್ಕ/ದಂಡ ವಿಧಿಸಿ ವಸೂಲಿ ಮಾಡಿ ಹೆಚ್ಚುವರಿ ಸಂಪನ್ಮೂಲವನ್ನು ಕ್ರೋಢೀಕರಿಸಲು ಸರ್ಕಾರ ಮುಂದಾಗಿದೆ. ಭೂ ಪರಿವರ್ತನೆ ಆಗಿರದ ಅಥವಾ ಭೂಪರಿವರ್ತಿತವಾಗಿಯೂ ವಿನ್ಯಾಸ ನಕ್ಷೆ ಅನುಮೋದನೆ ಆಗಿರದ ರೆವಿನ್ಯೂ ಭೂಮಿಯಲ್ಲಿನ ನಿವೇಶನಗಳಿಗೆ ಇ-ಖಾತಾ ನೀಡಲು ತೀರ್ಮಾನಿಸಲಾಗಿದೆ.

    ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕ
    ಇದೇ ವೇಳೆ, ಕರ್ನಾಟಕ ಭೂಕಂದಾಯ ತಿದ್ದುಪಡಿ ವಿಧೇಯಕವನ್ನೂ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ. ನಗರ ಪ್ರದೇಶಗಳಲ್ಲಿ ಭೂನಿರ್ಬಂಧಿತ ಬಿ ಖರಾಬನ್ನು ಸುತ್ತ ಇರೋರಿಗೆ ಮಂಜೂರು ಮಾಡಲು ಅವಕಾಶ ಕೊಟ್ಟಿದ್ರು. ಇದರ ದುರುಪಯೋಗ ಆಗಿರೋದು ಪತ್ತೆಯಾಗಿದೆ. ಬಿ ಖರಾಬು ಭೂಮಿಯನ್ನು ಮಂಜೂರು ಮಾಡುವಲ್ಲಿ ಇರುವ ಲೋಪಗಳನ್ನು ಸರಿಪಡಿಸಲಾಗಿದೆ. 3800 ವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳಾಗಿ ಮಾಡಲಾಗಿದೆ. ಈ ಕಂದಾಯ ಗ್ರಾಮಗಳಿಗೆ ಹೆಸರು ಇಡಲು, ಮರು ನಾಮಕರಣ ಮಾಡಲು ಹೊಸ ಸೆಕ್ಷನ್ ಸೇರಿಸಲಾಗಿದೆ. ಕಂದಾಯ ಕಚೇರಿಗಳ ಹಳೆಯ ದಾಖಲೆಗಳನ್ನು ಸ್ಕ್ಯಾನಿಂಗ್ ಹಾಗೂ ಡಿಜಿಟಲೈಸ್ ಮಾಡಲು ವಿಧೇಯಕದಲ್ಲಿ ತಿದ್ದುಪಡಿ ತಂದು ಅವಕಾಶ ನೀಡಲಾಗಿದೆ. ಡಿಜಿಟಲೀಕರಣಕ್ಕೆ ತಹಸಿಲ್ದಾರರು, ಎಸಿ, ಡಿಸಿಗಳನ್ನು ಉಸ್ತುವಾರಿ ಅಧಿಕಾರಿಗಳಾಗಿ ನೇಮಿಸಲು ವಿಧೇಯಕದಲ್ಲಿ ಅವಕಾಶ ಇದೆ. ರೆವಿನ್ಯೂ ಅಧಿಕಾರಿಗಳ ಸೀಲ್ ಹಾಗೂ ಸ್ಟಾಂಪುಗಳ ದುರುಪಯೋಗ ತಡೆಯಲು ವಿಧೇಯಕದಲ್ಲಿ ಅವಕಾಶ ಇದೆ. ಸೀಲು, ಸ್ಟಾಂಪು ದುರುಪಯೋಗಕ್ಕೆ ಈ ಹಿಂದೆ ಶಿಕ್ಷೆ ಇರಲಿಲ್ಲ, ಈಗ ಶಿಕ್ಷಾರ್ಹ ಅಪರಾಧ ಎಂದು ವಿಧೇಯಕದಲ್ಲಿ ಸೇರಿಸಲಾಗಿದೆ.

    ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕ
    ಜೊತೆಗೆ, ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕಕ್ಕೂ ಅಂಗೀಕಾರ ನೀಡಲಾಯಿತು. ಈ ವಿಧೇಯಕ ಮೂಲಕ ನೋಂದಣಿ ಪ್ರಕ್ರಿಯೆಗಳಲ್ಲಿ ಇನ್ನಷ್ಟು ಸುಧಾರಣೆಯನ್ನು ಸರ್ಕಾರ ತಂದಿದೆ. ಪಂಚಾಯ್ತಿ/ಮುನಿಸಿಪಾಲಿಟಿಗಗಳಲ್ಲಿ ಇ ಖಾತಾ ದಾಖಲೀಕರಣಕ್ಕೆ ಅವಕಾಶ ನೀಡಲಾಗಿದೆ. ನೋಂದಣಿಗಳಲ್ಲಿ ಅಕ್ರಮ ತಡೆಗೂ ಇದರಿಂದ ಕ್ರಮ ವಹಿಸಬಹುದು. ಜಿಪಿಎ ಆಧಾರಿತ ಸೇಲ್ ಡೀಡ್ ಮಾಡಿಕೊಳ್ಳುವಾಗ ಜಿಪಿಎ ಸಹ ನೋಂದಣಿ ಆಗಿರಬೇಕು ಎಂಬ ಷರತ್ತು ಸೇರ್ಪಡೆ ಮಾಡಲಾಗಿದೆ. ಇನ್ಮುಂದೆ ಸೇಲ್ ಡೀಡ್‌ಗೂ ಮುನ್ನ ಜಿಪಿಎ ಅನ್ನು ನೋಂದಣಿ ಮಾಡಿಕೊಂಡಿರಬೇಕು. ಇನ್ಮುಂದೆ ಜಿಪಿಎ ಆಧರಿಸಿ ಮಾಡಿಕೊಳ್ಳುವ ಸೇಲ್ ಡೀಡ್ ಮಾಡಲು ನೋಂದಾಯಿತ ಜಿಪಿಎ ಕಡ್ಡಾಯಗೊಳಿಸಲಾಗಿದೆ. ಸರ್ಕಾರದಿಂದ ಕೊಡುವ ಜಮೀನು, ನಿವೇಶನಗಳನ್ನು ನೋಂದಣಿ ಮಾಡಿಯೇ ಮಂಜೂರು ಮಾಡಲು ವಿದೇಯಕದಲ್ಲಿ ಅವಕಾಶ ನೀಡಲಾಗಿದೆ. ಇದರಿಂದ ದಾಖಲೆ ಕಳೆದುಕೊಳ್ಳುವ ಆತಂಕ ಇರೋದಿಲ್ಲ. ಈ ವೇಳೆ ಜಿಪಿಎ ಆಧಾರಿತ ನೋಂದಣಿಯಲ್ಲೂ ಸಾಕಷ್ಟು ದುರುಪಯೋಗ ಆಗುತ್ತದೆ. ಹಳೆಯ ಜಿಪಿಎಗಳನ್ನೇ ಮತ್ತೆ ಸೃಷ್ಟಿ ಮಾಡ್ತಾರೆ. ಇದನ್ನು ತಡೆಯಲು ಕ್ರಮ ತಗೊಳ್ಳಿ ಅಂತ ಎಸ್.ಆರ್.ವಿಶ್ವನಾಥ್ ಸಲಹೆ ನೀಡಿದ್ದಾರೆ.

    ಕರ್ನಾಟಕ ಭೂಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕ
    ವಿಧಾನಸಭೆಯಲ್ಲಿ ಕರ್ನಾಟಕ ಭೂಕಬಳಿಕೆ ನಿಷೇಧ ತಿದ್ದುಪಡಿ ವಿಧೇಯಕಕ್ಕೂ ಅಂಗೀಕಾರ ನೀಡಲಾಯಿತು. ಕಂದಾಯ ಇಲಾಖೆಯ ಭೂ ಒತ್ತುವರಿ ತೆರವು ಪ್ರಕ್ರಿಯೆಗಳನ್ನು ಸುಲಭ ಮಾಡಲು ಕಾಯ್ದೆಗೆ ಮಹತ್ವದ ತಿದ್ದುಪಡಿ ಇದಾಗಿದೆ. ಭೂ ಒತ್ತುವರಿ ತೆರವು ಪ್ರಕ್ರಿಯೆ ಶುರು ಮಾಡಿದ ಮೇಲೆ ಬಾಧಿತರು ವಿಶೇಷ ಭೂಕಬಳಿಕೆ ಕೋರ್ಟ್ ಗಳಲ್ಲಿ ಪ್ರಶ್ನಿಸಲು ಅವಕಾಶ ನಿರಾಕರಿಸುವ ತಿದ್ದುಪಡಿಯನ್ನು ಸರ್ಕಾರ ತಂದಿದೆ. ಒತ್ತುವರಿ ತೆರವು ಪ್ರಕ್ರಿಯೆ ಮುಗಿದ ಮೇಲೆ ಬಾಧಿತರು ಕೋರ್ಟಿಗೆ ಹೋಗಬಹುದು ಅಥವಾ ಒತ್ತುವರಿ ತೆರವು ಪ್ರಕ್ರಿಯೆ ಆರಂಭಕ್ಕೂ ಮುನ್ನ ಕೋರ್ಟಿಗೆ ಹೋಗಬಹುದು. ಆದರೆ, ಒಮ್ಮೆ ತೆರವು ಕಾರ್ಯ ಶುರುವಾದ ನಂತರ ಕೋರ್ಟುಗಳಿಗೆ ಹೋಗದಂತೆ ತಡೆಯಲು ವಿಧೇಯಕದಲ್ಲಿ ಅವಕಾಶ ಇದೆ. ಇದರಿಂದ ಒತ್ತುವರಿ ತೆರವು ಕಾರ್ಯ ವರ್ಷಗಟ್ಟಲೆ ನನೆಗುದಿಗೆ ಬೀಳುವುದನ್ನು ತಡೆಯಬಹುದು.

    ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ
    ಈ ವಿಧೇಯಕಕ್ಕೂ ಅಂಗೀಕಾರ ಸಿಕ್ಕಿದೆ. ಮಂಡ್ಯದಲ್ಲಿ ಪ್ರತ್ಯೇಕ ಕೃಷಿ ವಿವಿ ಸ್ಥಾಪನೆಗೆ ವಿಧೇಯಕ ಅಂಗೀಕರಿಸಲಾಯಿತು. ಮಂಡ್ಯದ ವಿ.ಸಿ ಫಾರ್ಮ್ನಲ್ಲಿ ಪ್ರತ್ಯೇಕ ಕೃಷಿ ವಿವಿ ಸ್ಥಾಪನೆಗೆ ಈ ಮೂಲಕ ನಿರ್ಧಾರ ಮಾಡಲಾಗಿದೆ. ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ಜಿಲ್ಲೆಗಳ ಬೆಳೆಗಳ ಉತ್ಪಾದನೆ ಕ್ಷೇತ್ರದಲ್ಲಿ ಅಧ್ಯಯನ, ಸಂಶೋಧನೆ ನಡೆಸಲು ಅವಕಾಶ ಸಿಗಲಿದೆ. ಜಿಕೆವಿಕೆ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿವಿಗಳಿಂದ ಕಾಲೇಜುಗಳು, ಸಂಶೋಧನಾ ಸಂಸ್ಥೆಗಳು, ಪ್ರಯೋಗಾಲಯಗಳು, ಹಾಸ್ಟೆಲ್‌ಗಳು, ಗ್ರಂಥಾಲಯಗಳನ್ನು ವರ್ಗಾವಣೆ ಮಾಡುವ ಬಗ್ಗೆಯೂ ವಿಧೇಯಕದಲ್ಲಿ ಉಲ್ಲೇಖ ಮಾಡಲಾಗಿದೆ. ಇದಕ್ಕೆ ಉತ್ತರ ಕರ್ನಾಟಕ ಮೂಲದ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಯಾವುದೇ ಶಿಕ್ಷಣ ಸಂಸ್ಥೆ, ಕಾಲೇಜುಗಳನ್ನು ವರ್ಗಾವಣೆ ಮಾಡದಂತೆ ಒತ್ತಾಯ ಕೇಳಿಬಂದಿದೆ.

  • ಪ್ರಾಯೋಜಕರು ಮಕ್ಕಳಿಗೆ ಬಾತ್, ಹೋಳಿಗೆ ಕೊಟ್ಟಿದ್ದರು, ಇದಕ್ಕೆ ಕ್ರಮ ಆಗಬೇಕು – ನರೇಂದ್ರಸ್ವಾಮಿ

    ಪ್ರಾಯೋಜಕರು ಮಕ್ಕಳಿಗೆ ಬಾತ್, ಹೋಳಿಗೆ ಕೊಟ್ಟಿದ್ದರು, ಇದಕ್ಕೆ ಕ್ರಮ ಆಗಬೇಕು – ನರೇಂದ್ರಸ್ವಾಮಿ

    ಮಂಡ್ಯ/ಬೆಂಗಳೂರು: ಮಳವಳ್ಳಿಯಲ್ಲಿ ಮಕ್ಕಳು ಕಲುಷಿತ ಆಹಾರ ಸೇವನೆ ಪ್ರಕರಣದ ತನಿಖೆ ಅಷ್ಟೆ ಅಲ್ಲ, ಕ್ರಮ ಆಗಬೇಕು ಎಂದು ಶಾಸಕ ನರೇಂದ್ರಸ್ವಾಮಿ (Narendra Swamy) ಒತ್ತಾಯಿಸಿದ್ದಾರೆ.ಇದನ್ನೂ ಓದಿ: ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ಕೇಂದ್ರದ ತಿರಸ್ಕಾರ ಒಳ್ಳೆ ಸುದ್ದಿ – ಅಶ್ವಥ್ ನಾರಾಯಣ್

    ವಿಧಾನಸೌಧದಲ್ಲಿ ಮಾತನಾಡಿದ ಅವರು, ಜಿಲ್ಲಾಡಳಿತ ಪರಿಣಾಮಕಾರಿಯಾಗಿ ತನಿಖೆ ಮಾಡುತ್ತಿದ್ದಾರೆ. ಅವರು ಕೋರ್ಟ್ ಬೇಲ್ ಮೇಲೆ ಹೊರಬಂದಿದ್ದಾರೆ. ಕಲುಷಿತ ಆಹಾರ ಸರಬರಾಜು ಆಗಿದೆ. ಮೆಸ್ ನಡೆಸುವ ವ್ಯಕ್ತಿಯಿಂದ ಆಹಾರ ತಯಾರಿಕೆಯಾಗಿದ್ದು, ಹೋಳಿ ಹಬ್ಬದ ದಿನ ಪ್ರಾಯೋಜಕರು ಮಕ್ಕಳಿಗೆ ಬಾತ್, ಹೋಳಿಗೆ ಕೊಟ್ಟಿದ್ದರು.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಅಷ್ಟೆ ಅಲ್ಲ, ಅವರ ಮೇಲೆ ಕ್ರಮವಾಗಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ರಾಜಕಾರಣಿಗಳ ವಿರುದ್ಧ 193 ಪ್ರಕರಣ, ಎರಡರಲ್ಲಿ ಶಿಕ್ಷೆ – ಇಡಿ ತನಿಖೆಯ ವೈಫಲ್ಯ ಎಂದ ವಿರೋಧ ಪಕ್ಷಗಳು

  • KPSC ಅಕ್ರಮಗಳಿಗೆ ಕಡಿವಾಣ ಹಾಕಲು ಮುಂದಾದ ಸರ್ಕಾರ – ಸದನದಲ್ಲಿ ಲೋಕಸೇವಾ ಆಯೋಗ ತಿದ್ದುಪಡಿ ವಿಧೇಯಕ ಪಾಸ್

    KPSC ಅಕ್ರಮಗಳಿಗೆ ಕಡಿವಾಣ ಹಾಕಲು ಮುಂದಾದ ಸರ್ಕಾರ – ಸದನದಲ್ಲಿ ಲೋಕಸೇವಾ ಆಯೋಗ ತಿದ್ದುಪಡಿ ವಿಧೇಯಕ ಪಾಸ್

    ಬೆಂಗಳೂರು: ಕೆಪಿಎಸ್‌ಸಿ (KPSC) ಅಕ್ರಮ, ಎಡವಟ್ಟುಗಳಿಗೆ ಕಡಿವಾಣ ಹಾಕುವ ಕರ್ನಾಟಕ ಲೋಕಾಸೇವಾ ಆಯೋಗ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

    ಸುದೀರ್ಘ ಚರ್ಚೆಯ ಬಳಿಕ ಕೆಪಿಎಸ್‌ಸಿ ತಿದ್ದುಪಡಿ ವಿಧೇಯಕ ಇಂದು ಅಂಗೀಕಾರಗೊಂಡಿದೆ. ಕೆಪಿಎಸ್‌ಸಿಗೆ ಚಿಕಿತ್ಸೆ ಕೊಡುವ ಉದ್ದೇಶದಿಂದ ಸರ್ಕಾರ ಈ ವಿಧೇಯಕ ತಂದಿದೆ. ಈವರೆಗೆ ಕೆಪಿಎಸ್‌ಸಿ ಕುರಿತು ಯಾವುದೇ ನಿಯಮ ರೂಪಿಸಲು ಸರ್ಕಾರ ಕೆಪಿಎಸ್‌ಸಿ ಜೊತೆ ಸಮಾಲೋಚನೆ ಮಾಡಬೇಕೆಂಬ ನಿಯಮವಿತ್ತು. ಈಗ ಈ ನಿಯಮದಲ್ಲಿ ಬದಲಾವಣೆ ತಂದು ಕೆಪಿಎಸ್‌ಸಿಗೆ ನಿಯಮಾವಳಿ ರೂಪಿಸಲು ಅಥವಾ ತಿದ್ದುಪಡಿ ತರಲು ಸರ್ಕಾರ ಕೆಪಿಎಸ್‌ಸಿ ಜೊತೆ ಸಮಾಲೋಚನೆ ಅಗತ್ಯವಿಲ್ಲ ಎಂದು ಪ್ರಸ್ತಾಪಿಸಲಾಗಿದೆ.ಇದನ್ನೂ ಓದಿ: ಅಂಬೇಡ್ಕರ್ ಸೋಲಿಸುವುದಕ್ಕೆ ಸಾವರ್ಕರ್ ಕಾರಣ – ಪ್ರಿಯಾಂಕ್ ಖರ್ಗೆ, ಅಶ್ವಥ್ ನಾರಾಯಣ್ ನಡುವೆ ದಾಖಲೆ ಜಟಾಪಟಿ

    ಅದರ ಜೊತೆಗೆ, ಕೆಪಿಎಸ್‌ಸಿಯಲ್ಲಿ ಸ್ವಜನಪಕ್ಷಪಾತಕ್ಕೆ ಬ್ರೇಕ್ ಹಾಕಲು ವಿಧೇಯಕದಲ್ಲಿ ಅವಕಾಶ ನೀಡಲಾಗಿದೆ. ಈವರೆಗೆ ಆಯೋಗಕ್ಕೆ ಸಂಬಂಧಿಸಿದ ಯಾವುದೇ ತೀರ್ಮಾನದ ಪ್ರಶ್ನೆ ಬಂದರೂ ಕೆಪಿಎಸ್‌ಸಿ ಅಧ್ಯಕ್ಷರು ಸಭೆ ನಡೆಸಿ ತೀರ್ಮಾನಿಸಬಹುದಿತ್ತು. ಈಗ ಈ ನಿಯಮವನ್ನು ಬದಲಿಸಿ ಆಯೋಗದ ಸಭೆಗೆ ಅಧ್ಯಕ್ಷರನ್ನು ಸೇರಿಸಿ ಒಟ್ಟು ಸದಸ್ಯರ ಶೇ.50 ರಷ್ಟು ಕೋರಂ ಅಗತ್ಯ ಎಂದು ಬದಲಾವಣೆ ಮಾಡಲಾಗಿದೆ.

    ಇನ್ನೂ ಸಭೆಯಲ್ಲಿ ಎಲ್ಲಾ ತೀರ್ಮಾನ ಹಾಗೂ ನಡಾವಳಿಗಳನ್ನು ಕಾರ್ಯದರ್ಶಿಗಳೇ ಖುದ್ದಾಗಿ ದಾಖಲಿಸಬೇಕು ಎಂದೂ ಉಲ್ಲೇಖಿಸಲಾಗಿದೆ. ಆಯೋಗವು ಸದಸ್ಯರ ಆಕ್ಷೇಪದ ಹೊರತಾಗಿಯೂ ಯಾವುದಾದರೂ ತೀರ್ಮಾನ ತೆಗೆದುಕೊಂಡರೆ ಅಂತಹ ತೀರ್ಮಾನದ ಬಗ್ಗೆ ಭಿನ್ನಾಭಿಪ್ರಾಯ ನಮೂದಿಸಲು ಸದಸ್ಯರಿಗೆ ಅವಕಾಶವಿದೆ. ಸಂದರ್ಶನ ನಿಯಮಾವಳಿಗೂ ತಿದ್ದುಪಡಿ ಪ್ರಸ್ತಾಪಿಸಲಾಗಿದೆ. ಈವರೆಗೆ ಆಯೋಗ ನಿಯೋಜಿಸಿದ ಇಬ್ಬರು ಅಥವಾ ಹೆಚ್ಚು ಸದಸ್ಯರು ಅಭ್ಯರ್ಥಿಗಳ ಸಂದರ್ಶನ ನಡೆಸಬಹುದಿತ್ತು. ಈಗ ಇದನ್ನು ಬದಲಿಸಿ, ಸಂದರ್ಶನ ಮಂಡಳಿಯಲ್ಲಿ ಆಯೋಗವು ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಬೇಕು. ಆದರೆ ಗೆಜೆಟೆಡ್ ಪ್ರೊಬೆಷನರ್ಸ್ ನೇಮಕಾತಿ ನಿಯಮದಲ್ಲಿರುವಂತೆ ಸಂದರ್ಶನ ನಡೆಸಬೇಕು ಎಂದು ನಿಯಮ ಬದಲಿಸಲಾಗಿದೆ. ಇದೇ ವೇಳೆ ವಿಪಕ್ಷ ಸದಸ್ಯರು ಕೆಲ ಸಲಹೆಗಳನ್ನು ನೀಡಿದ್ದಾರೆ.ಇದನ್ನೂ ಓದಿ: ಎಲ್ಲಾ ರೈತರಿಗೂ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ ಕೊಡಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

  • ಅಂಬೇಡ್ಕರ್ ಸೋಲಿಸುವುದಕ್ಕೆ ಸಾವರ್ಕರ್ ಕಾರಣ – ಪ್ರಿಯಾಂಕ್ ಖರ್ಗೆ, ಅಶ್ವಥ್ ನಾರಾಯಣ್ ನಡುವೆ ದಾಖಲೆ ಜಟಾಪಟಿ

    ಅಂಬೇಡ್ಕರ್ ಸೋಲಿಸುವುದಕ್ಕೆ ಸಾವರ್ಕರ್ ಕಾರಣ – ಪ್ರಿಯಾಂಕ್ ಖರ್ಗೆ, ಅಶ್ವಥ್ ನಾರಾಯಣ್ ನಡುವೆ ದಾಖಲೆ ಜಟಾಪಟಿ

    ಬೆಂಗಳೂರು: ಅಂಬೇಡ್ಕರ್ ಸೋಲಿಸುವುದಕ್ಕೆ ಸಾವರ್ಕರ್ ಕಾರಣ ಎಂಬ ಹೇಳಿಕೆ ವಿಚಾರವಾಗಿ ಬಿಜೆಪಿ ನಾಯಕರು, ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ನಡುವೆ ಜಟಾಪಟಿ ಮುಂದುವರಿದಿದೆ.

    ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ, ಸಾವರ್ಕರ್ ಅವರು ಅಂಬೇಡ್ಕರ್ ಅವರ ಸೋಲಿಗೆ ಸಂಚು ಮಾಡಿದ್ದರು. ಈ ಕುರಿತು ದಾಖಲೆ ಬಿಡುಗಡೆ ಮಾಡಿದರೆ ಬಿಜೆಪಿಯವರು ರಾಜೀನಾಮೆ ಕೊಡುತ್ತೀವಿ ಎಂದು ಹೇಳಿದ್ದರು. ಈಗ ದಾಖಲೆ ಬಿಡುಗಡೆ ಮಾಡಿದ್ದೇವೆ. ರಾಜೀನಾಮೆ ಕೊಡಲಿ. ಅಂಬೇಡ್ಕರ್ ಅವರು 1952ರಲ್ಲಿ ಅವರ ಸ್ನೇಹಿತರಿಗೆ ಪತ್ರ ಬರೆಯುತ್ತಾರೆ. ನಾನು ಸೋತಿರುವುದು ದಾಂಗೆ ಮತ್ತು ಸಾರ್ವಕರ್ ಅವರಿಂದ ಎಂದು ಪತ್ರದಲ್ಲಿ ಇದೆ. ಅಂಬೇಡ್ಕರ್ ಅವರೇ ಲಿಖಿತವಾಗಿ ಬರೆದಿದ್ದಾರೆ ಎಂದು ಹೇಳಿದರು.ಇದನ್ನೂ ಓದಿ: ಎಲ್ಲಾ ರೈತರಿಗೂ ಶೂನ್ಯ ಬಡ್ಡಿ ದರದಲ್ಲಿ ಬೆಳೆ ಸಾಲ ಕೊಡಲು ಸಾಧ್ಯವಿಲ್ಲ: ಕೆ.ಎನ್.ರಾಜಣ್ಣ

    ಇನ್ನೂ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಮಾತನಾಡಿ, ಅವರು ದಾಖಲೆ ಬಿಡುಗಡೆ ಮಾಡಿದ್ದಾರೆ. ಆದರೆ ನಮ್ಮ ಕಡೆಗೆ ಸಾಕಷ್ಟು ದಾಖಲೆಗಳಿವೆ, ಅದನ್ನು ಬಿಡುಗಡೆ ಮಾಡ್ತೀವಿ. ಪ್ರಿಯಾಂಕ್ ಖರ್ಗೆ ಅವರು ಅಲ್ಪಸ್ವಲ್ಪ ಓದಿರುತ್ತಾರೆ. ಪೂರ್ತಿಯಾಗಿ ನಮ್ಮ ಕಡೆಯಿರುವ ದಾಖಲೆ ಕೊಡ್ತೀವಿ ಎಂದು ತಿರುಗೇಟು ನೀಡಿದರು.

    ಕಾಂಗ್ರೆಸ್ ಅಂಬೇಡ್ಕರ್ ಅವರನ್ನು ಹೇಗೆ ನಡೆಸಿಕೊಂಡಿದ್ದಾರೆ, ಹೇಗೆ ಕಡೆಗಣಿಸಿದ್ದರು ಎನ್ನುವುದನ್ನು ಬಹಿರಂಗ ಮಾಡ್ತೀವಿ. ಅವರನ್ನು ರಾಜಕೀಯವಾಗಿ ಬೆಳೆಯಲು ಬಿಡಲಿಲ್ಲ, ತುಳಿಯುವ ಕೆಲಸ ಮಾಡಿದರು. ಸತ್ಯ ಅಂದ್ರೆ ಕಾಂಗ್ರೆಸ್‌ಗೆ ಯಾವಾಗಲೂ ಕಹಿ. ಸತ್ಯ ಹೇಳಿದರೆ ಅವರಿಗೆ ಮೈ ಉರಿಯುತ್ತದೆ. ಅವರು ಸನಾತನ ಧರ್ಮದ ಬಗ್ಗೆಯೂ ಕೀಳಾಗಿ ಮಾತನಾಡುತ್ತಾರೆ. ನಾವೂ ಎಲ್ಲ ಸವಾಲು ಸ್ವೀಕರಿಸುತ್ತೇವೆ. ಬಾಯಿಗೆ ಬಂದಿದ್ದು ಮಾತನಾಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.ಇದನ್ನೂ ಓದಿ: ಒತ್ತುವರಿ ಆಗಿದ್ರೆ ತೆರವು ಮಾಡಿಕೊಳ್ಳಿ, ನಮ್ಮ ಜಮೀನು ಹುಡುಕಿಕೊಡಿ – ಭೂ ದಾಖಲೆಗಳ ಇಲಾಖೆಗೆ ಹೆಚ್‌ಡಿಕೆ ಪತ್ರ

  • ಹಾವೇರಿ ಸ್ವಾತಿ ಹತ್ಯೆ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ – ಹದಗೆಟ್ಟ ಕಾನೂನು ವ್ಯವಸ್ಥೆ, ಗೂಂಡಾ ರಾಜ್ಯ ಎಂದ ಅಶೋಕ್

    ಹಾವೇರಿ ಸ್ವಾತಿ ಹತ್ಯೆ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರ – ಹದಗೆಟ್ಟ ಕಾನೂನು ವ್ಯವಸ್ಥೆ, ಗೂಂಡಾ ರಾಜ್ಯ ಎಂದ ಅಶೋಕ್

    ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕಾಂಗ್ರೆಸ್ ಸರ್ಕಾರ ಆರೋಪಿಗಳನ್ನು ಬಂಧಿಸುವ ಕೆಲಸ ಮಾಡುತ್ತಿಲ್ಲ. ಕಾನೂನು ಸುವ್ಯವಸ್ಥೆಯ ಮೇಲೆ ಸಚಿವರು ಅಥವಾ ಮುಖ್ಯಮಂತ್ರಿಗೆ ಸ್ವಲ್ಪವೂ ಹಿಡಿತವೇ ಇಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ (R Ashok)  ಆಕ್ರೋಶ ವ್ಯಕ್ತಪಡಿಸಿದರು.

    ವಿಧಾನಸಭೆಯಲ್ಲಿ ಕಾನೂನು ಸುವ್ಯವಸ್ಥೆ ಕುರಿತು ಮಾತನಾಡಿದ ಅವರು, ನಾವೆಲ್ಲರೂ ತಲೆ ತಗ್ಗಿಸುವಂತಹ ಘಟನೆ ರಾಮನಗರದಲ್ಲಿ ನಡೆದಿದೆ. ಬಿಡದಿಯ ಟೊಯೋಟಾ ಕಂಪನಿಯ ಶೌಚಾಲಯದ ಗೋಡೆಯ ಮೇಲೆ ಪಾಕಿಸ್ತಾನ ಜಿಂದಾಬಾದ್ ಎಂದು ಬರೆಯಲಾಗಿದೆ. ಜೊತೆಗೆ ಕನ್ನಡಿಗರ ಬಗ್ಗೆ ಅವಾಚ್ಯವಾಗಿ ನಿಂದಿಸಿ ಬರೆಯಲಾಗಿದೆ. ಇಂತಹ ಕಿಡಿಗೇಡಿಗಳಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದು ಬಹಳ ಪ್ರತಿಷ್ಠಿತ ಕಂಪನಿಯಾಗಿದ್ದು, ಎಲ್ಲ ಕಡೆ ಸಿಸಿಟಿವಿ ಕ್ಯಾಮೆರಾ ಇದೆ. ಆದರೂ ಅದನ್ನು ಪರಿಶೀಲಿಸಿ ತಪ್ಪಿತಸ್ಥರನ್ನು ಬಂಧಿಸುವ ಕೆಲಸವನ್ನು ಪೊಲೀಸರು ಇನ್ನೂ ಮಾಡಿಲ್ಲ ಎಂದರು.ಇದನ್ನೂ ಓದಿ: ‘ಪುಷ್ಪ 2’ ನಿರ್ದೇಶಕನ ಜೊತೆ ಶಾರುಖ್ ಖಾನ್ ಸಿನಿಮಾ

    ಸ್ವಾತಿ ಲವ್ ಜಿಹಾದ್:
    ಹಾವೇರಿ ಜಿಲ್ಲೆಯಲ್ಲಿ ಹೋರಿ ಹಬ್ಬದ ಸ್ನೇಹ ಲವ್ ಜಿಹಾದ್‌ನಲ್ಲಿ ಅಂತ್ಯವಾಗಿದೆ. ಹಾವೇರಿ ಜಿಲ್ಲೆಯ ಯುವತಿ ಸ್ವಾತಿಯನ್ನು ಲವ್ ಜಿಹಾದ್ ಬಲೆಗೆ ಬೀಳಿಸಲಾಗಿತ್ತು. ನಂತರ ಕಿಡಿಗೇಡಿ ಯುವಕರು ಮದುವೆಯ ಪ್ರಸ್ತಾಪ ಮಾಡಿ ಆಕೆಯನ್ನು ನಂಬಿಸಿದ್ದರು. ಬಳಿಕ ಆಕೆಯನ್ನು ಪಾಳು ಬಿದ್ದ ಶಾಲೆಗೆ ಕರೆದುಕೊಂಡು ಹೋಗಿ ಕೇಸರಿ ಟವೆಲ್‌ನಲ್ಲಿ ಸಾಯಿಸಿದ್ದಾರೆ. ಎಫ್‌ಐಆರ್ ಆದ ಬಳಿಕವೂ ತಾಯಿಗೆ ಮಾಹಿತಿ ನೀಡದೆ ಪ್ರಕರಣವನ್ನು ಪೊಲೀಸರು ಮುಚ್ಚಿಹಾಕಿದ್ದಾರೆ. ಈ ಲವ್ ಜಿಹಾದ್ ಪ್ರಕರಣದಲ್ಲಿ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ನೇಹಾ ಲವ್ ಜಿಹಾದ್ ಘಟನೆಯಾದಾಗಲೇ ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕಿತ್ತು. ಲವ್ ಜಿಹಾದ್ ನಡೆಯುತ್ತಿದ್ದರೂ ಅದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ದೂರಿದರು.

    ಸ್ವಾತಿ ಕುಟುಂಬದ ಸ್ಥಿತಿ ಚೆನ್ನಾಗಿಲ್ಲ. ಅವರ ತಂದೆ ವಿದ್ಯುತ್ ಶಾಕ್ ತಗುಲಿ ತೀರಿಕೊಂಡಿದ್ದರು. ಸ್ವಾತಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಈಗ ಅವರ ಕುಟುಂಬ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದೆ ಎಂದರು.

    ಹಂಪಿ ಗ್ಯಾಂಗ್ ರೇಪ್ ಪ್ರಕರಣ:
    ಹಂಪಿಯಲ್ಲಿ ವಿದೇಶಿ ಮಹಿಳೆಯ ಮೇಲಿನ ಅತ್ಯಾಚಾರ ದೊಡ್ಡ ಸುದ್ದಿಯಾಗಿದೆ. ಮೂರು ಯುವಕರು ಒಡಿಶಾ ಮೂಲದ ಒಬ್ಬನನ್ನು ಸಾಯಿಸಿ, ಇಸ್ರೇಲ್ ಮಹಿಳೆ ಹಾಗೂ ಹೋಮ್‌ಸ್ಟೇ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ. ಶೇ.60ಕ್ಕೂ ಅಧಿಕ ಪ್ರವಾಸಿಗರು ಇಸ್ರೇಲ್‌ನಿಂದ ರಾಜ್ಯಕ್ಕೆ ಬರುತ್ತಾರೆ. ಇಲ್ಲಿ ಸುರಕ್ಷತೆ ಇರುವ ಕಾರಣಕ್ಕೆ ವಿದೇಶಿಯರು ಭೇಟಿ ನೀಡುತ್ತಾರೆ. ಈ ಘಟನೆಯಿಂದಾಗಿ ಪ್ರವಾಸಿಗರು ಬರುತ್ತಿಲ್ಲ. ಇದರಿಂದಾಗಿ ಹಂಪಿಗೆ ಕೆಟ್ಟ ಹೆಸರು ಬರುವುದರ ಜೊತೆಗೆ, ಆರ್ಥಿಕತೆ ಕುಸಿದಿದೆ. ಇಷ್ಟೆಲ್ಲ ಆದ ನಂತರವೂ, ವಿದೇಶಿಯರು ನಮ್ಮನ್ನು ಹೊಗಳಿದ್ದಾರೆ ಎಂದು ರಾಜ್ಯಪಾಲರ ಭಾಷಣದಲ್ಲಿ ಹೇಳಿದ್ದಾರೆ ಎಂದರು.

    ತಲೆ ತಗ್ಗಿಸುವಂತಹ ಅಪರಾಧಗಳು ನಡೆಯುತ್ತಿದ್ದರೂ ಸರ್ಕಾರ ಯಾರನ್ನೂ ಬಂಧಿಸಿಲ್ಲ. ಇದರಿಂದಾಗಿ ಸರ್ಕಾರ ಬದುಕಿದೆಯೇ ಸತ್ತಿದೆಯೇ ಎಂಬ ಪ್ರಶ್ನೆ ಬರುತ್ತಿದೆ. ಹೇಳುವವರು, ಕೇಳುವವರು ಯಾರೂ ಇಲ್ಲದೆ ಗೂಂಡಾ ರಾಜ್ಯ ಸೃಷ್ಟಿಯಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂದು ಸಮರ್ಥನೆ ಮಾಡಿಕೊಳ್ಳುತ್ತಾರೆ. ಇಂತಹ ಸ್ಥಿತಿಯನ್ನು ಸೃಷ್ಟಿಸಿದ ಸರ್ಕಾರದ ನಡೆಯನ್ನು ಖಂಡಿಸುತ್ತೇನೆ ಎಂದು ಕಿಡಿಕಾರಿದರು.ಇದನ್ನೂ ಓದಿ: ಜಮೀನು ತೆರವು ವಿಚಾರ; ಮಿಕ್ಕಿದ್ದಕ್ಕೆಲ್ಲಾ ದಾಖಲೆ ಇರುತ್ತೆ, ಇದಕ್ಕೆ ಇರಲ್ವಾ? – ಹೆಚ್‌ಡಿಕೆ ವಿರುದ್ಧ ಪ್ರಿಯಾಂಕ್ ಖರ್ಗೆ ವ್ಯಂಗ್ಯ

  • ಗ್ಯಾರಂಟಿ ಜಾರಿ ಸಮಿತಿ ವಿರುದ್ಧ ಹೋರಾಟ ತೀವ್ರ – ರಾಜ್ಯಪಾಲರಿಗೆ ಬಿಜೆಪಿ ದೂರು

    ಗ್ಯಾರಂಟಿ ಜಾರಿ ಸಮಿತಿ ವಿರುದ್ಧ ಹೋರಾಟ ತೀವ್ರ – ರಾಜ್ಯಪಾಲರಿಗೆ ಬಿಜೆಪಿ ದೂರು

    ಬೆಂಗಳೂರು: ಗ್ಯಾರಂಟಿ ಜಾರಿ ಸಮಿತಿಗಳ ರದ್ದತಿಗೆ ಆಗ್ರಹಿಸಿ ವಿಪಕ್ಷಗಳು ಇಂದು ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸಿದರು.

    ಕಲಾಪ ಆರಂಭಕ್ಕೆ ಮುನ್ನ ವಿಧಾನಸೌಧದ ಕೆಂಗಲ್ ಗೇಟ್ ಬಳಿ ಬಿಜೆಪಿ, ಜೆಡಿಎಸ್ ಶಾಸಕರು ಪ್ರತಿಭಟನೆ ನಡೆಸಿದರು. ಕಲಾಪ ಶುರುವಾದ ಮೇಲೆ ಸದನದ ಬಾವಿಗಿಳಿದು ಧರಣಿ ಮಾಡಿದರು. ಗ್ಯಾರಂಟಿ ಜಾರಿ ಸಮಿತಿಗಳು ಅಸಂವಿಧಾನಿಕ ರದ್ದು ಮಾಡಿ ಎಂಬ ಘೋಷಣೆ ಕೂಗಿದರು. ಇದನ್ನೂ ಓದಿ: ಕೆಪಿಎಸ್‍ಸಿ ಪರೀಕ್ಷೆ ಅವಾಂತರ – ಭಾಷಾಂತರಕಾರರನ್ನು ಕಪ್ಪು ಪಟ್ಟಿಗೆ ಸೇರಿಸಿ ಕ್ರಮ: ಸಿಎಂ

    ಬಿಜೆಪಿ, ಜೆಡಿಎಸ್ ಶಾಸಕರು ವಿಧಾನಸೌಧದಿಂದ ರಾಜಭವನದವರೆಗೆ ಜಾಥ ನಡೆಸಿ, ರಾಜ್ಯಪಾಲರಿಗೆ ದೂರು ನೀಡಿದರು. ಗ್ಯಾರಂಟಿ ಜಾರಿ ಸಮಿತಿಗಳನ್ನು ಬರ್ಖಾಸ್ತು ಮಾಡಲು ಸೂಕ್ತ ನಿರ್ದೇಶನ ನೀಡುವಂತೆ ಕೋರಿದರು. ಅಲ್ಲದೇ, ಹಕ್ಕುಚ್ಯುತಿ ಮಂಡಿಸೋದಾಗಿ ವಿಜಯೇಂದ್ರ ಘೋಷಿಸಿದರು. ವಿಪಕ್ಷಗಳ ಈ ನಡೆಯನ್ನು ಸರ್ಕಾರ ಖಂಡಿಸಿತು.

    ನಾವು ಶಾಸಕರ ಹಾಗೂ ಪರಿಷತ್ ಸದಸ್ಯರ ಹಕ್ಕು ಮೊಟಕು ಮಾಡುತ್ತಿಲ್ಲ. ಗ್ಯಾರಂಟಿ ಸಮಿತಿಗಳ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸಿಎಂ ಸ್ಪಷ್ಟನೆ ನೀಡಿದರು. ಇದೇ ವೇಳೆ, ಸಿದ್ದರಾಮಯ್ಯ ಅವರು 5 ವರ್ಷ ಪೂರೈಸಲಿ ಅಂತ ನಾವು ಬಯಸುತ್ತೇವೆ ಎಂದು ಅಶೋಕ್ ವ್ಯಂಗ್ಯವಾಗಿಡಿದರು. ಇದಕ್ಕೆ, ನಾನೇ ಇರುತ್ತೇನೆ ಎಂದು ಸಿಎಂ ಸ್ಪಷ್ಟಪಡಿಸಿದರು. ಇದನ್ನೂ ಓದಿ: Pakistan Train Hijack | 150ಕ್ಕೂ ಹೆಚ್ಚು ಸೈನಿಕರ ಹತ್ಯೆ – 50ಕ್ಕೂ ಹೆಚ್ಚು ಒತ್ತೆಯಾಳುಗಳು ಗಲ್ಲಿಗೆ

    ಪರಿಷತ್ ಕಲಾಪದಲ್ಲಿ ಸರ್ಕಾರದ ಅಸಲಿ ಬಂಡವಾಳ ಬಯಲಾಗಿದೆ. 2024-25ರ ಸಾಲಿನಲ್ಲಿ ಮೀನುಗಾರಿಕೆ ಇಲಾಖೆಗೆ ಕೊಟ್ಟಿದ್ದ 3,000 ಕೋಟಿ ರೂ. ಅನುದಾನವನ್ನು ವಿವಿಧ ಯೋಜನೆಗಳಿಗೆ ಖರ್ಚು ಮಾಡಲು ಆರ್ಥಿಕ ಇಲಾಖೆ ಸಹಕರಿಸಲಿಲ್ಲ. ಹಣ ಕೊಡದೇ ನಾನು ಹೇಗೆ ಕೆಲಸ ಮಾಡಿಲಿ ಎಂದು ಪ್ರಶ್ನೆಯೊಂದಕ್ಕೆ ಸಚಿವ ಮಂಕಾಳ ವೈದ್ಯ ಗರಂ ಆಗಿದ್ದಾರೆ. ಇದನ್ನೂ ಓದಿ: ಯಾರಾದ್ರೂ ಬಣ್ಣ ಹಚ್ಚಿದ್ರೆ ʻಹೋಳಿ ಮುಬಾರಕ್ʼ ಹೇಳಿ – ಮುಸ್ಲಿಮರಿಗೆ ಅಯೋಧ್ಯೆಯ ಮೌಲ್ವಿ ಸಲಹೆ

    2024-25ನೇ ಸಾಲಿನಲ್ಲಿ ರಾಜ್ಯ ಸರ್ಕಾರ ವಸತಿ ಯೋಜನೆಯಡಿ ಒಂದೇ ಒಂದು ಮನೆ ನಿರ್ಮಿಸಿಲ್ಲ ಎಂಬ ಸತ್ಯವನ್ನು ಸಚಿವ ಜಮೀರ್ ಅಹ್ಮದ್ ಒಪ್ಪಿಕೊಂಡಿದ್ದಾರೆ. ಅಷ್ಟೇ ಅಲ್ಲ, ಬಿಜೆಪಿ ಅವಧಿಯಲ್ಲೂ ಒಂದೇ ಒಂದು ಮನೆ ಕೊಟ್ಟಿಲ್ಲ. ಮನೆ ಕೊಟ್ಟಿರೋದು ಸಾಬೀತು ಮಾಡಿದರೆ ಈಗ್ಲೇ ರಾಜಕೀಯ ನಿವೃತ್ತಿ ತಗೆದುಕೊಳ್ಳುತ್ತೇನೆ ಎಂದು ಸಚಿವ ಜಮೀರ್ ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ಪಾಕ್‌ನಿಂದ ಸ್ನೈಪರ್‌ ದಾಳಿ – ಭಾರತದ ಯೋಧನಿಗೆ ಗಾಯ

    ಇನ್ನು, ಕಳೆದ ಐದು ವರ್ಷಗಳಿಂದ ಸಾರಿಗೆ ನಿಗಮಗಳು ನಷ್ಟದಲ್ಲಿವೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಮಧ್ಯೆಯೇ ಮಾರ್ಚ್ ತಿಂಗಳಿನಿಂದ ಅನ್ನಭಾಗ್ಯದ ಹಣದ ಬದಲು ಅಕ್ಕಿ ಕೊಡುವಂತೆ ಸರ್ಕಾರ ಆದೇಶ ನೀಡಿದೆ. ಫೆಬ್ರವರಿ ತಿಂಗಳ ಅಕ್ಕಿಯನ್ನು ಒಟ್ಟಿಗೆ ಸೇರಿಸಿ ನೀಡಲಿದೆ. ಬೆಂಗಳೂರು ಅರಮನೆ ಬಿಲ್‌ಗೆ ರಾಜ್ಯಪಾಲರ ಅಂಕಿತ ಬಿದ್ದಿದ್ದು, ಸರ್ಕಾರ ಅಧಿಸೂಚನೆ ಹೊರಡಿಸಿದೆ.

  • ಎಸ್‌ಸಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಭೋಜನ ವೆಚ್ಚ ಹೆಚ್ಚಳ ಮಾಡಲು ಪರಿಶೀಲನೆ – ಬೋಸರಾಜು

    ಎಸ್‌ಸಿ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳ ಭೋಜನ ವೆಚ್ಚ ಹೆಚ್ಚಳ ಮಾಡಲು ಪರಿಶೀಲನೆ – ಬೋಸರಾಜು

    ಬೆಂಗಳೂರು: ಪರಿಶಿಷ್ಟ ಜಾತಿ ಹಾಸ್ಟೆಲ್‌ಗಳಲ್ಲಿ ಪ್ರತಿ ವಿದ್ಯಾರ್ಥಿಯ ಮಾಸಿಕ ಭೋಜನ ವೆಚ್ಚ ಜಾಸ್ತಿ ಮಾಡುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ಸಚಿವ ಬೋಸರಾಜು (Bosaraju) ಸಿಎಂ ಸಿದ್ದರಾಮಯ್ಯ (CM Siddaramaiah) ಪರವಾಗಿ ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಮಾತಾ ಮಾಣಿಕೇಶ್ವರಿ ದೇವಸ್ಥಾನವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ – ಹೆಚ್.ಕೆ.ಪಾಟೀಲ್

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಡಿ.ಟಿ. ಶ್ರೀನಿವಾಸ್ ಪ್ರಶ್ನೆಗೆ ಉತ್ತರಿಸಿದ ಅವರು, ಸಿಎಂ ಪರವಾಗಿ ನಾನು ಉತ್ತರ ನೀಡುತ್ತೇನೆ. ಪರಿಶಿಷ್ಟ ಜಾತಿ-ಪಂಗಡ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಹಾಕಿದ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ಗೆ ಪ್ರವೇಶ ಕಲ್ಪಿಸಲಾಗುತ್ತದೆ. ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯಲ್ಲಿ ಒಟ್ಟು 270 ಮೆಟ್ರೋ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿವೆ. 2024-25ನೇ ಸಾಲಿನಲ್ಲಿ 29,867 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದ್ದು, ಒಟ್ಟಾರೆ 23,939 ಮಂಜೂರಾತಿ ಸಂಖ್ಯೆಗೆ ಎದುರಾಗಿ 5,929 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪ್ರವೇಶ ಕಲ್ಪಿಸಲಾಗಿದೆ. ಭೋಜನಾ ವೆಚ್ಚ ಮೊದಲು ಮಾಸಿಕ ಒಂದು ವಿದ್ಯಾರ್ಥಿಗೆ 1,750 ರೂ. ಕೊಡಲಾಗುತ್ತಿತ್ತು. ಈಗ ಅದನ್ನ 100 ರೂ.ಗೆ ಹೆಚ್ಚಳ ಮಾಡಲಾಗಿದ್ದು, 1,850 ರೂಪಾಯಿ ಕೊಡಲಾಗ್ತಿದೆ. ಹೆಚ್ಚುವರಿಯಾಗಿ ಭೋಜನ ವೆಚ್ಚ ಕೊಡುವ ಬಗ್ಗೆ ಪರಿಶೀಲನೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

    ಇದಕ್ಕೂ ಮುನ್ನ ಪ್ರಶ್ನಿಸಿದ್ದ ಡಿ.ಟಿ.ಶ್ರೀನಿವಾಸ್, ರಾಜ್ಯದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಸ್‌ಸಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಪ್ರವೇಶ ದೊರೆಯುತ್ತಿಲ್ಲ. ಇದರಿಂದ ಎಸ್‌ಸಿ ಮಕ್ಕಳಿಗೆ ಹಾಗೂ ಗ್ರಾಮೀಣ ಮಕ್ಕಳಿಗೆ ಅನ್ಯಾಯ ಆಗುತ್ತಿದೆ. ಹೆಚ್ಚುವರಿ ಹಾಸ್ಟೆಲ್ ವ್ಯವಸ್ಥೆಯನ್ನು ಸರ್ಕಾರ ಮಾಡಬೇಕು. ಹಾಸ್ಟೆಲ್‌ಗಳಲ್ಲಿ ಪ್ರತಿ ವಿದ್ಯಾರ್ಥಿಗಳಿಗೆ ಕೊಡುವ ಊಟದ ಖರ್ಚು ಕೂಡಾ ಕಡಿಮೆಯಿದೆ. ಜೈಲಿನ ಖೈದಿಗಳಿಗೆ ಭೋಜನಾ ವೆಚ್ಚ ಜಾಸ್ತಿ ಇದೆ. ಎಸ್ ಮಕ್ಕಳಿಗೆ ಹಾಸ್ಟೆಲ್ ಭೋಜನ ದರ ಜಾಸ್ತಿ ಮಾಡಬೇಕು ಎಂದು ಆಗ್ರಹಿಸಿದರು.ಇದನ್ನೂ ಓದಿ: ಅಂತರಾಷ್ಟ್ರೀಯ ಮಹಿಳಾ ದಿನದಿಂದ ಮಹಿಳಾ ಗ್ರಾಮಸಭೆಗಳಿಗೆ ಚಾಲನೆ: ಪ್ರಿಯಾಂಕ್ ಖರ್ಗೆ 

  • 137 ಅಕ್ರಮ ವಲಸಿಗರು ಪತ್ತೆ, ಕಠಿಣ ಕ್ರಮ ಕೈಗೊಳ್ಳಲಾಗಿದೆ: ಪರಮೇಶ್ವರ್

    137 ಅಕ್ರಮ ವಲಸಿಗರು ಪತ್ತೆ, ಕಠಿಣ ಕ್ರಮ ಕೈಗೊಳ್ಳಲಾಗಿದೆ: ಪರಮೇಶ್ವರ್

    ಬೆಂಗಳೂರು: ರಾಜ್ಯದಲ್ಲಿ ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದ 137 ಅಕ್ರಮ ವಲಸೆಗಾರರನ್ನು ಪತ್ತೆ ಹಚ್ಚಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದರು.ಇದನ್ನೂ ಓದಿ: 1 ಸಾವಿರ ರೂ. ಸಾಲ ವಾಪಸ್ ಕೇಳಿದ್ದಕ್ಕೆ ಕೊಲೆ – ಹಂತಕನಿಗೆ 7 ವರ್ಷ ಶಿಕ್ಷೆ

    ವಿಧಾನಸಭೆಯ ಅಧಿವೇಶನದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಅವರ ಗಮನ ಸೆಳೆಯುವ ಸೂಚನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಕಳೆದ 10 ವರ್ಷಗಳಿಂದ ಅಕ್ರಮವಾಗಿ ನೆಲೆಸಿದ್ದಾರೆ. ವಿಜಯಪುರದಲ್ಲಿ ಸುಮಾರು 27 ಭೂಮಾಫಿಯಾ ಪ್ರಕರಣಗಳು ದಾಖಲಾಗಿದ್ದು, 8 ಪ್ರಕರಣಗಳಲ್ಲಿ ದೋಷಾರೋಪಣೆ ಪ್ರಕರಣ ದಾಖಲಿಸಿದೆ. 9 ಪ್ರಕರಣಗಳ ತನಿಖೆ ಮುಂದುವರಿಸಲಾಗಿದೆ. ಇವರುಗಳು ವಯೋವೃದ್ಧರನ್ನು ಗುರಿಯಾಗಿಟ್ಟುಕೊಂಡು ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ನಕಲು ಮಾಡಿ ಬೇರೆಯವರಿಗೆ ಮಾರಾಟ ಅಥವಾ ಬೇರೆ ಕೆಲಸಕ್ಕೆ ಬಳಸಿಕೊಳ್ಳುತ್ತಿರುವುದು ಕಂಡು ಬಂದಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.

    ಪಡಿತರ ಸರಬರಾಜಿನಲ್ಲೂ ಅವ್ಯವಹಾರ ಕಂಡು ಬಂದಿದ್ದು, ಅವರ ವಿರುದ್ಧವು ಕಠಿಣ ಕ್ರಮಕೈಗೊಳ್ಳಲಾಗಿದೆ. ಕಂಟ್ರಿ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಪಡಿಸಿಕೊಂಡು ಕ್ರಮಕೈಗೊಳ್ಳಲಾಗಿದೆ. ವಿಜಯಪುರದಲ್ಲಿ ಎನ್.ಐ.ಎ ಘಟಕ ಸ್ಥಾಪಿಸುವಂತೆ ಪ್ರಸ್ತಾಪಿಸಿದ್ದು, ಕೇಂದ್ರದವರು ಮಾಡಬಹುದು ಎಂದು ಸದನಕ್ಕೆ ಮಾಹಿತಿ ನೀಡಿದರು.ಇದನ್ನೂ ಓದಿ: ಆಫ್ರಿಕಾ ವಿರುದ್ಧ 50 ರನ್‌ಗಳ ಭರ್ಜರಿ ಜಯ – ಭಾನುವಾರ ನ್ಯೂಜಿಲೆಂಡ್‌ Vs ಭಾರತ ಫೈನಲ್‌

  • ಹೊಸಕೆರೆಹಳ್ಳಿಯಲ್ಲಿ ಮತದಾನ ಮಾಡಿದ ರಾಕಿಂಗ್ ಸ್ಟಾರ್ ಯಶ್

    ಹೊಸಕೆರೆಹಳ್ಳಿಯಲ್ಲಿ ಮತದಾನ ಮಾಡಿದ ರಾಕಿಂಗ್ ಸ್ಟಾರ್ ಯಶ್

    ರಾಕಿಂಗ್ ಸ್ಟಾರ್ ಯಶ್ (Yash) ಬೆಂಗಳೂರಿನ ಹೊಸಕೆರೆಹಳ್ಳಿ (Hoskerehalli) ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಿದರು. ಮತದಾನ (Voting) ವೇಳೆ ಮುಗಿಯುವ ಒಂದೂವರೆ ಗಂಟೆ ಮುಂಚೆ ಮತದಾನ ಕೇಂದ್ರಕ್ಕೆ ಆಗಮಿಸಿದ ಅವರು ತಮ್ಮ ಮತದಾನ ಹಕ್ಕನ್ನು ಚಲಾಯಿಸಿದರು. ಪತ್ನಿ ಬೇರೆ ಮತದಾನ ಕೇಂದ್ರದಲ್ಲಿ ಮತದಾನ ಮಾಡಿದ್ದರಿಂದ ಒಬ್ಬರೇ ಬಂದು ವೋಟ್ ಹಾಕಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಯಶ್, ‘ಜನರಿಗೆ ಎಲ್ಲರಿಗೂ ಗೊತ್ತಿದೆ. ವೋಟು ಮಾಡಬೇಕು ಅಂತ. ಮತದಾನ ಎನ್ನುವುದು ನಮ್ಮ ಹಕ್ಕು ಹಾಗೂ ಕರ್ತವ್ಯ. ಹಾಗಾಗಿ ನಾನು ಮಾಡಿದೆ. ಕಳೆದ ಬಾರಿ ಪ್ರಚಾರಕ್ಕೆ ಹೋಗುವುದಕ್ಕೆ ನನ್ನದೇ ಆದ ಕಾರಣವಿತ್ತು. ಯಶೋಮಾರ್ಗದ ಮೂಲಕ ಕೆಲಸ ಮಾಡುತ್ತಿದ್ದೆ.  ಈ ಬಾರಿ ಹೋಗಲು ಆಗಲಿಲ್ಲ. ಅದಕ್ಕೂ ಕಾರಣವಿದೆ’ ಎಂದರು. ಇದನ್ನೂ ಓದಿ:ವಿಜಯ್ ದೇವರಕೊಂಡ ಹುಟ್ಟು ಹಬ್ಬಕ್ಕೆ ‘ಖುಷಿ’ಯ ಹಾಡು ರಿಲೀಸ್

    ಯುವಕ-ಯುವತಿಯರು ಹೆಚ್ಚಾಗಿ ಮತದಾನ ಮಾಡಿಲ್ಲ ಏಕೆ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಯಶ್, ‘ಯಂಗ್ ಸ್ಟರ್ ಅರ್ಥ ಮಾಡಿಕೊಂಡು ವೋಟು ಮಾಡಬೇಕು. ರಾಜಕಾರಣಗಳು ಬೇಸಿಕ್ ಕೆಲಸವನ್ನೇ ಚೆನ್ನಾಗಿ ಮಾಡಿದರೆ ರಾಜ್ಯ ಅಭಿವೃದ್ಧಿ ಆಗುತ್ತದೆ. ಈ ನಿಟ್ಟಿನಲ್ಲಿ ರಾಜಕಾರಣ ನಡೆಯಬೇಕು’ ಎಂದು ಯಶ್ ಮಾತನಾಡಿದರು.

    ಸಿನಿಮಾ ಕುರಿತಾಗಿ ಈ ಸಂದರ್ಭದಲ್ಲಿ ಯಶ್ ಯಾವುದೇ ಮಾಹಿತಿಯನ್ನು ನೀಡಲಿಲ್ಲ. ಮುಂದಿನ ದಿನಗಳಲ್ಲಿ ಆ ಕುರಿತು ಮಾತನಾಡುವುದಾಗಿ ಹೇಳಿ ಮತದಾನ ಕೇಂದ್ರದಿಂದ ಹೊರ ನಡೆದರು.