Tag: Legislative Council Elections

  • ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಬೆಂಬಲ: ಅಶ್ವಥ್ ನಾರಾಯಣ್ ಮನವಿ

    ಮೇಲ್ಮನೆ ಚುನಾವಣೆಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿಕೂಟಕ್ಕೆ ಬೆಂಬಲ: ಅಶ್ವಥ್ ನಾರಾಯಣ್ ಮನವಿ

    ಬೆಂಗಳೂರು: ಯುಕವರು, ಪದವೀಧದರು ಮತ್ತು ಶಿಕ್ಷಕರ ಪರವಾಗಿ ಬಿಜೆಪಿ (BJP) ಸದಾ ನಿಂತಿದೆ. ಹಲವಾರು ಸುಧಾರಣೆಗಳನ್ನು ತಂದಿದೆ. ಈ ಬಾರಿ ನಡೆಯುವ ವಿಧಾನಪರಿಷತ್ ಚುನಾವಣೆಯಲ್ಲಿ (Legislative Council Elections) ಬಿಜೆಪಿ- ಜೆಡಿಎಸ್ ಮೈತ್ರಿಕೂಟವನ್ನು ಬೆಂಬಲಿಸಬೇಕು ಎಂದು ಮಾಜಿ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ (CN Ashwath Narayan) ಮನವಿ ಮಾಡಿದರು.

    ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಷಗಳು ಪದವೀಧರರ ವಿಚಾರ, ಶಿಕ್ಷಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಿವೆ. ಹಲವು ಸುಧಾರಣೆ, ಪ್ರಗತಿ, ನೂತನ ಕಾಯ್ದೆ ಕಾನೂನು ಜಾರಿಗೆ ತಂದಿವೆ. ಇವೆರಡು ಪಕ್ಷಗಳು ಶಿಕ್ಷಕರು, ಪದವೀಧರರ ಪರವಾಗಿ ನಿರಂತರವಾಗಿ ಶ್ರಮಿಸುತ್ತಿವೆ ಎಂದು ವಿವರಿಸಿದರು. ಇದನ್ನೂ ಓದಿ: ವಾಲ್ಮೀಕಿ ನಿಗಮದಲ್ಲಿ 94 ಕೋಟಿ ಗೋಲ್ಮಾಲ್‌ – ಯೂನಿಯನ್‌ ಬ್ಯಾಂಕ್‌ನಿಂದಲೇ ವಂಚನೆ, ಕೇಸ್‌ ದಾಖಲು

    ಗುಣಮಟ್ಟದ ಶಿಕ್ಷಣದಲ್ಲಿ ಶಿಕ್ಷಕರ ಪಾತ್ರ ಮತ್ತು ಆಡಳಿತ ನೀತಿ ಮಹತ್ವದ ಪಾತ್ರ ವಹಿಸುತ್ತದೆ. ಶಿಕ್ಷಕರ ಕುರಿತು ಕಾಳಜಿ, ಗೌರವ ನೀಡದೆ ಕಾಂಗ್ರೆಸ್ ಆಡಳಿತ ನಡೆಸಿದೆ. ಕಾಂಗ್ರೆಸ್ ಪಕ್ಷವು ಶಿಕ್ಷಕರ, ಪದವೀಧರರ ವಿರುದ್ಧವಾಗಿ ನೀತಿಗಳನ್ನು ಹೊಂದಿದೆ. ಆದರೆ, ಬಿಜೆಪಿ ಶಿಕ್ಷಕರ ಪರವಾಗಿ ಹಲವಾರು ಸುಧಾರಣೆಗಳನ್ನು, ಅನುದಾನಿತ ಸಂಸ್ಥೆಗಳಲ್ಲಿ ಹುದ್ದೆ ಭರ್ತಿ ಮಾಡುವ ಕಾರ್ಯ ಮಾಡಿದೆ. ಕಾಂಗ್ರೆಸ್ ಪಕ್ಷದ ಆಡಳಿತ ನೇಮಕಾತಿಯನ್ನು ಸಂಪೂರ್ಣವಾಗಿ ನಿಷೇಧಿಸಿತ್ತು. ಯಡಿಯೂರಪ್ಪನವರ ಅವಧಿಯಲ್ಲಿ ಹುದ್ದೆ ಭರ್ತಿಗೆ ಅವಕಾಶ ಮಾಡಿಕೊಡಲಾಯಿತು. ಅನುದಾನ ಕೊಡುವ ವಿಚಾರದಲ್ಲೂ ಅವಕಾಶ, ಆಜ್ಞೆ ಮಾಡಲಾಗಿದೆ. ಜ್ಞಾನ ಆಯೋಗ ಆರಂಭ, ಮೂರನೇ ರಾಷ್ಟ್ರೀಯ ಶಿಕ್ಷಣ ನೀತಿ (NEP) ತರುವ ಮೂಲಕ ದೊಡ್ಡ ಸುಧಾರಣೆ ಮಾಡಲಾಗಿದೆ ಎಂದರು. ಇದನ್ನೂ ಓದಿ: ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗಿಲ್ಲ ಪರಿಷತ್ ಟಿಕೆಟ್

    ಕೌಶಲ್ಯಯುಕ್ತ ಶಿಕ್ಷಣ ನೀಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಜೀ ಅವರು ಮಹತ್ವದ ಕ್ರಮ ತೆಗೆದುಕೊಂಡಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜಕೀಯ ಪ್ರೇರಿತವಾಗಿ ಕಾಂಗ್ರೆಸ್ ಪಕ್ಷವು ವಿರೋಧಿಸಿದೆ. ವೈಜ್ಞಾನಿಕವಾಗಿ ಯೋಚಿಸದೆ, ಚರ್ಚೆ-ವಿಮರ್ಶೆ ಇಲ್ಲದೆ ಏಕಾಏಕಿಯಾಗಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ತೆಗೆದುಹಾಕುತ್ತೇವೆ ಹಾಗೂ ರಾಜ್ಯ ಶಿಕ್ಷಣ ನೀತಿ ತರುವುದಾಗಿ ಮನಬಂದಂತೆ ನಿಲುವು ತೆಗೆದುಕೊಂಡಿದ್ದಾರೆ ಎಂದು ಆಕ್ಷೇಪ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಬಸ್‌ ಕಮರಿಗೆ ಉರುಳಿ 28 ಮಂದಿ ದುರ್ಮರಣ

    7ನೇ ವೇತನ ಆಯೋಗದ ಶಿಫಾರಸು ಜಾರಿ ಮಾಡದ ಈ ಕಾಂಗ್ರೆಸ್ ಸರಕಾರವು ರಾಜ್ಯವನ್ನು ಸಾಲದ ಸುಳಿಯಲ್ಲಿ ಸಿಲುಕಿಸಿದೆ. ಒಪಿಎಸ್ ಕುರಿತು ಸುಳ್ಳು ಭರವಸೆ ಕೊಟ್ಟಿದ್ದಾರೆ. ಇದೇ ಯುಪಿಎ ಸರಕಾರ ಎನ್‌ಪಿಎಸ್ ಜಾರಿಗೊಳಿಸಿತ್ತು. ಶಿಕ್ಷಣ ಕ್ಷೇತ್ರವನ್ನು ಸದಾ ಹಾಳು ಮಾಡುವ ಕೆಲಸದಲ್ಲಿ ಕಾಂಗ್ರೆಸ್ಸಿನವರು ತೊಡಗಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ಅಕ್ರಮ ಗಣಿಗಾರಿಕೆ; ಪಂಜಾಬ್‌ನ 13 ಸ್ಥಳಗಳಲ್ಲಿ ಇ.ಡಿ ಶೋಧ- 3 ಕೋಟಿ ರೂ. ಜಪ್ತಿ

    ಸಿಇಟಿ ಪರೀಕ್ಷೆ ವಿಚಾರ, ಹೊಸದಾಗಿ ಜಾರಿ ಮಾಡಿದ ಪಬ್ಲಿಕ್ ಎಕ್ಸಾಮ್ ವಿಚಾರದಲ್ಲಿ ಗೊಂದಲ, ಸಮಸ್ಯೆಗಳು ಕಾಡುವಂತಾಗಿದೆ. ಶಿಕ್ಷಣ ವಾತಾವರಣವನ್ನು ಹದಗೆಡಿಸಿದ್ದಾರೆ. ಯುವ ನೀತಿಯಲ್ಲೂ ಡೋಂಗಿ ನೀತಿ ಜಾರಿ ಮಾಡಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ

    ನಮ್ಮ ಸರ್ಕಾರ ಪಾಲಿಟೆಕ್ನಿಕ್, ಐಟಿಐ ಗುಣಮಟ್ಟ ಹೆಚ್ಚಿಸಿ ಅಡ್ಮಿಶನ್ ಶೇ.100ಕ್ಕೆ ಹೆಚ್ಚಳವಾಗಿದೆ. ಇಲ್ಲಿ ಕಲಿತ ಎಲ್ಲರಿಗೂ ಉದ್ಯೋಗ ಸಿಗುತ್ತಿದೆ. ಎಲ್ಲ ಸರ್ಕಾರಿ ಕಾಲೇಜುಗಳಲ್ಲಿ 87%ರಷ್ಟು ಅಕ್ರೆಡಿಷನ್ ಕೊಡಿಸಿದ್ದೇವೆ. ಇದೊಂದು ದೊಡ್ಡ ಸಾಧನೆ. ಶಿಕ್ಷಕರ ನೇಮಕಾತಿ ವೇಳೆ ಪಾರದರ್ಶಕ ಕೌನ್ಸೆಲಿಂಗ್ ನಡೆಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

    ಬಡ್ತಿ ಕಾಣದ ಶಿಕ್ಷಕರಿಗೆ ಬಡ್ತಿ ಕೊಡಿಸಿದ್ದೇವೆ. ಸುಧಾರಣೆ ನಡೆಸಿದ್ದು, ನೇಮಕಾತಿ, ಪಾರದರ್ಶಕತೆ, ಕೆರಿಯರ್ ಪ್ರಮೋಷನ್ ನೀಡಿದ್ದೇವೆ. ನಮ್ಮ ಅವಧಿಯಲ್ಲಿ 25ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಕಾಸರಗೋಡಿನಲ್ಲಿ ಲವ್ ಜಿಹಾದ್ ಆರೋಪ- ಹಿಂದೂ ಶಿಕ್ಷಕಿಯ ಮದ್ವೆಯಾದ ಮುಸ್ಲಿಂ ಯುವಕ!

  • ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗಿಲ್ಲ ಪರಿಷತ್ ಟಿಕೆಟ್

    ವಿಧಾನಸಭೆ ಪರಾಜಿತ ಅಭ್ಯರ್ಥಿಗಳಿಗಿಲ್ಲ ಪರಿಷತ್ ಟಿಕೆಟ್

    ನವದೆಹಲಿ: ವಿಧಾನಸಭೆ ಚುನಾವಣೆಯಲ್ಲಿ (Assembly Election) ಪರಾಜಿತಗೊಂಡ ಅಭ್ಯರ್ಥಿಗಳಿಗೆ ಮುಂಬರುವ ವಿಧಾನ ಪರಿಷತ್ ಚುನಾವಣೆಯಲ್ಲಿ (Legislative Council Elections) ಟಿಕೆಟ್ ನೀಡದಿರಲು ಕಾಂಗ್ರೆಸ್ (Congress) ನಿರ್ಧರಿಸಿದೆ. ಕಳೆದ ಬಾರಿಯ ಚುನಾವಣೆಯಲ್ಲಿ ಟಿಕೆಟ್ ವಂಚಿತ ಮತ್ತು ಸಂಘಟನೆಯಲ್ಲಿ ತೊಡಗಿಸಿಕೊಂಡ ನಾಯಕರಿಗೆ ಈ ಬಾರಿ ಅವಕಾಶ ನೀಡಲು ಸಿಎಂ, ಡಿಸಿಎಂ ನಿರ್ಧರಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಪ್ರಬಲ ಪೈಪೊಟಿ ನಡುವೆ ಹಿರಿಯ ನಾಯಕರಿಗೆ ಟಿಕೆಟ್ ನೀಡಲಾಗಿತ್ತು. ಆದರೆ ವಿಧಾನಸಭೆಯಲ್ಲಿ ಸೋಲನ್ನಪ್ಪಿದ್ದಾರೆ. ಈಗ ಮತ್ತೊಂದು ಅವಕಾಶ ನೀಡುವುದು ಕಷ್ಟ. ರಮನಾಥ್ ರೈ, ವಿನಯ್ ಕುಮಾರ್ ಸೊರಕೆ, ಪಿ.ಟಿ ಪರಮೇಶ್ವರ್ ನಾಯ್ಕ್, ರಮೇಶ್ ಕುಮಾರ್ ಸೇರಿದಂತೆ ಹಲವು ಪರಾರ್ಜಿತ ನಾಯಕರು ಪರಿಷತ್ ಟಿಕೆಟ್ ನಿರೀಕ್ಷೆಯಲ್ಲಿದ್ದಾರೆ. ಎಲ್ಲರಿಗೂ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಮೂಲಗಳು ಹೇಳಿವೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಿ: ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ

    ಈ ಹಿನ್ನೆಲೆ ವಿಧಾನಸಭೆಯಲ್ಲಿ ಪರಾಜಿತ ಅಭ್ಯರ್ಥಿಗಳಿಗೆ ಎರಡು ವರ್ಷಗಳ ಕಾಲ ಯಾವುದೇ ಹೊಸ ಅವಕಾಶಗಳನ್ನು ನೀಡದಿರಲು ಸಿಎಂ ಸಿದ್ದರಾಮಯ್ಯ (Siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (DK Shivakumar) ನಿರ್ಧರಿಸಿದ್ದಾರೆ ಎನ್ನಲಾಗಿದೆ. ಪ್ರಬಲ ಪೈಪೊಟಿ ನೀಡಿ ಕಡೆ ಹಂತದಲ್ಲಿ ಟಿಕೆಟ್‌ನಿಂದ ವಂಚಿತರಾದ ನಾಯಕರನ್ನು ಅಭ್ಯರ್ಥಿಗಳನ್ನಾಗಿ ಮಾಡಬಹುದು ಎನ್ನಲಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಜೊತೆಗೂ ಈ ಬಗ್ಗೆ ಚರ್ಚೆ ನಡೆದಿದ್ದು, ಶೀಘ್ರದಲ್ಲಿ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆಗಳಿದೆ. ಇದನ್ನೂ ಓದಿ: ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಪ್ರಜ್ವಲ್ ರೇವಣ್ಣ

  • ಎದುರಾಳಿಯನ್ನು ಎಂದಿಗೂ ಪ್ರಬಲ ಎಂದೇ ಭಾವಿಸಬೇಕು: ಬಿ.ಸಿ.ಪಾಟೀಲ್

    ಎದುರಾಳಿಯನ್ನು ಎಂದಿಗೂ ಪ್ರಬಲ ಎಂದೇ ಭಾವಿಸಬೇಕು: ಬಿ.ಸಿ.ಪಾಟೀಲ್

    ಹಾವೇರಿ: ಯುದ್ಧದಲ್ಲಿ ನಮ್ಮ ಎದುರಾಳಿ ಎಷ್ಟೇ ದುರ್ಬಲವಾಗಿದ್ದರೂ ಮೈಮರೆತು ಕೂರದೇ ಪ್ರಬಲವಾಗಿಯೇ ಇದ್ದಾನೆ ಎಂದು ಭಾವಿಸಿ ಕಣದಲ್ಲಿ ಹೋರಾಡಲೇಬೇಕು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ ನೀಡಿದ್ದಾರೆ.

    ವಿಧಾನ ಪರಿಷತ್ತಿಗೆ ಅ.28 ರಂದು ನಡೆಯಲಿರುವ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿರುವ ಎಸ್.ವಿ.ಸಂಕನೂರು ಅವರು ಹಿರೆಕೆರೂರಿಗೆ ಆಗಮಿಸಿದ ಹಿನ್ನೆಲೆಯಲ್ಲಿ ಪಕ್ಷ ಸಂಘಟನೆ ಹಾಗೂ ಚುನಾವಣಾ ಪ್ರಚಾರ ಕುರಿತು ಬಿ.ಸಿ.ಪಾಟೀಲ್ ನೇತೃತ್ವದಲ್ಲಿ ಚುನಾವಣಾ ಪೂರ್ವಭಾವಿ ಸಿದ್ಧತಾ ಸಭೆ ನಡೆಯಿತು.

    ಸಭೆಯನ್ನು ಉದ್ದೇಶಿಸಿ ಮಾತನಾಡಿದ ಬಿ.ಸಿ.ಪಾಟೀಲ್, ಪಶ್ಚಿಮ ಪದವೀಧರ ಕ್ಷೇತ್ರದ ನಾಲ್ಕು ಜಿಲ್ಲೆಗಳಲ್ಲಿ ಬಿಜೆಪಿಯ 23 ಶಾಸಕರು, ಐವರು ಮಂತ್ರಿಗಳು, ನಾಲ್ವರು ಸಂಸದರಿದ್ದು, ಪಶ್ಚಿಮ ಪದವೀಧರ ಕ್ಷೇತ್ರ ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಿದ್ದರೂ ಸಹ ಎದುರಾಳಿಯನ್ನು ಹಗುರವಾಗಿ, ಗೆಲುವು ಸುಲಭ ಎಂದು ಪರಿಗಣಿಸದೆ ಹೊಸ ಚುನಾವಣೆ ಎಂದು ಅಷ್ಟೇ ಹುಮ್ಮಸ್ಸಿನಿಂದ ಮನೆಮನೆಗೆ ಹೋಗಿ ಪಕ್ಷದ ಪರ ಪ್ರಚಾರ ಮಾಡಬೇಕು. ಶಿಕ್ಷಣ ಸಂಸ್ಥೆಗಳ ಮುಖಂಡರು, ಶಿಕ್ಷಕರ ಸಂಘದವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪ್ರತಿಯೊಬ್ಬರು ದುಡಿಯಬೇಕು. ಕ್ಷೇತ್ರದಲ್ಲಿ ಗ್ರಾಮ ಪಂಚಾಯಿತಿಯಿಂದ ಹಿಡಿದು ಶಾಸಕರವರೆಗೆ ಎಲ್ಲರೂ ಅನುಭವಿಗಳೇ ಇರುವುದರಿಂದ ಈ ಚುನಾವಣೆಯನ್ನು ಗೆಲ್ಲಲೇಬೇಕು ಸಂಕನೂರು ಅವರಿಗೆ ಕ್ಷೇತ್ರದಲ್ಲಿ ಜಯಗಳಿಸಲೇಬೇಕೆಂದು ಚುನಾವಣಾ ನೀತಿ ರೂಪಿಸಬೇಕು ಎಂದು ಕರೆ ನೀಡಿದರು.

    ಅಕ್ಟೋಬರ್ 18 ರಂದು ಹಿರೆಕೆರೂರು ತಾಲೂಕಿಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ ನೀಡುತ್ತಿದ್ದು, ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ. ಶೆಟ್ಟರ್ ಭೇಟಿಗೂ ಮುನ್ನ ಪಕ್ಷ ಸಂಘಟನೆಗೆ ಒತ್ತು ನೀಡಲು ಈ ಪೂರ್ವಭಾವಿ ಸಭೆ ನಡೆಸಲಾಗಿದೆ. ಕ್ಷೇತ್ರದಲ್ಲಿ ಸಂಘಟಿತ ಉತ್ಸಾಹಿ ಬಿಜೆಪಿಯ ಕಾರ್ಯಕರ್ತರ ಪಡೆಯೇ ಇದೆ. ಎಲ್ಲರೂ ಸಂಕನೂರರ ಗೆಲುವಿಗಾಗಿ ಶ್ರಮಿಸಬೇಕು ಎಂದು ಬಿ.ಸಿ.ಪಾಟೀಲ್ ಹೇಳಿದರು.

    ಅಭ್ಯರ್ಥಿ ಎಸ್.ವಿ.ಸಂಕನೂರು ಮಾತನಾಡಿ, ಹಿರೆಕೆರೂರಿನಲ್ಲಿ ಬಿಜೆಪಿಯ ಸಾಹಸಿ ಕಾರ್ಯಪಡೆಯೇ ಇದೆ.ಕೃಷಿ ಸಚಿವರಾದ ಬಿ.ಸಿ.ಪಾಟೀಲರ ನೇತೃತ್ವದಲ್ಲಿ ಒಳ್ಳೆಯ ಅಭಿವೃದ್ಧಿ ಕೆಲಸಗಳು ಆಗುತ್ತಿವೆ. ತಮ್ಮ ಗೆಲುವಿಗೆ ಕ್ಷೇತ್ರದ ಕಾರ್ಯಕರ್ತರು, ಮುಖಂಡರು ಶ್ರಮಿಸುವಂತೆ ಮನವಿ ಮಾಡಿದರು.

    ಸಭೆಯಲ್ಲಿ ತಾಲೂಕು ಬಿಜೆಪಿ ಮಂಡಳ ಅಧ್ಯಕ್ಷ ಷಣ್ಮುಖಯ್ಯ ಮಳಿಮಠ್, ಪಟ್ಟಣ ಪಂಚಾಯಿತಿ ಸದಸ್ಯರಾದ ಗುರುಶಾಂತ ಎತ್ತಿನಹಳ್ಳಿ, ಮಹೇಂದ್ರ ಬಡಳ್ಳಿ, ಶಕ್ತಿಕೇಂದ್ರದ ಪ್ರಮುಖರು ಸೇರಿದಂತೆ ಮತ್ತಿತ್ತರರು ಭಾಗವಹಿಸಿದ್ದರು.

  • ಪ್ರಣಾಳಿಕೆಗೆ ತಕ್ಕಂತೆ ನಡೆಯದಿದ್ದರೆ ಪ್ರತಿಭಟನೆ ಎದುರಿಸಿ: ಶ್ರೀರಾಮುಲು

    ಪ್ರಣಾಳಿಕೆಗೆ ತಕ್ಕಂತೆ ನಡೆಯದಿದ್ದರೆ ಪ್ರತಿಭಟನೆ ಎದುರಿಸಿ: ಶ್ರೀರಾಮುಲು

    ರಾಯಚೂರು: ಪ್ರಣಾಳಿಕೆಯನ್ನು ಕಾರ್ಯರೂಪಕ್ಕೆ ತರಬೇಕು, ಇಲ್ಲದಿದ್ದರೆ ಒಂದು ಕ್ಷಣ ಕೂಡ ನೀವು ಅಧಿಕಾರದಲ್ಲಿ ಉಳಿಯದಂತೆ ಪ್ರತಿಭಟನೆ ಮಾಡುತ್ತೇವೆ ಎಂದು ಶಾಸಕ ಶ್ರೀರಾಮುಲು ಹೇಳಿದ್ದಾರೆ.

    ವಿಧಾನ ಪರಿಷತ್ ಪದವಿಧರ ಕ್ಷೇತ್ರದ ಚುನಾವಣಾ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಜಿಲ್ಲೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿರುವ ರೈತರ ಸಾಲವನ್ನು ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.

    ರೈತರ ಸಾಲ ಮನ್ನಾ ಮಾಡದಿದ್ದರೆ ವಿಧಾನಸಭೆ ಹೊರಗೆ ಹಾಗೂ ಒಳಗೆ ಹೋರಾಟ ಮಾಡುತ್ತೇವೆ. ಹೋರಾಟ ಮಾಡುವ ಹಕ್ಕಿದೆ. ಮುಖ್ಯಮಂತ್ರಿಗಳಾಗಿ ಅವರು ಏನು ಕ್ರಮಬೇಕಾದರೂ ತಗೆದುಕೊಳ್ಳಲಿ. ಬೆಂಗಳೂರು ಹೊರತುಪಡೆಸಿ ರಾಜ್ಯದ ವಿವಿಧೆಡೆ ಬಂದ್ ಕೈಗೊಳ್ಳಲಾಗುವುದು. ರೈತರಿಗಾಗಿ ನಾವು ಹೋರಾಟ ಮಾಡುತ್ತಿದ್ದು ಅವರು ಬೆಂಬಲ ನೀಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಬಿಜೆಪಿಯು ಕಾಂಗ್ರೆಸ್ ಹಾಗೂ ಜೆಡಿಎಸ್ ಗಿಂತ ಹೆಚ್ಚು ಸ್ಥಾನ ಪಡೆದಿತ್ತು. ನಾವು ರೈತರ ಸಾಲ ಮನ್ನಾ ಮಾಡುತ್ತಿದ್ದೇವು. ಅದಕ್ಕೆ ಅವಕಾಶ ಮಾಡಿಕೊಡಲಿಲ್ಲ. ಮುಖ್ಯಮಂತ್ರಿ ಆಗುತ್ತಿದ್ದಂತೆ ಪ್ರಣಾಳಿಕೆ ಕೈಚೆಲ್ಲುತ್ತಿದ್ದಾರೆ ಎಂದು ಎಚ್‍ಡಿಕೆ ವಿರುದ್ಧ ವಾಗ್ದಾಳಿ ನಡೆಸಿದರು.

    ವಾಮಮಾರ್ಗದಿಂದ ರಚನೆಯಾದ ಸರ್ಕಾರಕ್ಕೆ ಮಂತ್ರಿ ಮಂಡಲ ರಚನೆ ಕಷ್ಟವಾಗುತ್ತಿದೆ. ಸಮ್ಮಿಶ್ರ ಸರ್ಕಾರಕ್ಕೆ ಬಹಳ ದಿನ ನಡೆಯುವುದಿಲ್ಲ, ಮುಂದೆ ನಾವೇ ಅಧಿಕಾರಕ್ಕೆ ಬರುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.