Tag: Lepcha

  • ಸೇನೆ ಗಡಿಯಲ್ಲಿ ಹಿಮಾಲಯದಂತೆ ಅಚಲವಾಗಿ ನಿಂತಿರುವವರೆಗೂ ಭಾರತ ಸುರಕ್ಷಿತ: ಮೋದಿ

    ಸೇನೆ ಗಡಿಯಲ್ಲಿ ಹಿಮಾಲಯದಂತೆ ಅಚಲವಾಗಿ ನಿಂತಿರುವವರೆಗೂ ಭಾರತ ಸುರಕ್ಷಿತ: ಮೋದಿ

    ನವದೆಹಲಿ: ನಮ್ಮ ಸೇನೆಯು (Army) ಗಡಿಯಲ್ಲಿ ಹಿಮಾಲಯದಂತೆ (Himalaya) ಅಚಲವಾಗಿ ನಿಂತಿರುವವರೆಗೂ ಭಾರತ ಸುರಕ್ಷಿತವಾಗಿರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಈ ವರ್ಷದ ದೀಪಾವಳಿಯನ್ನು (Deepavali) ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾದಲ್ಲಿ (Lepcha) ಸೈನಿಕರೊಂದಿಗೆ (Soldiers) ಆಚರಿಸಿದ ಮೋದಿ ಅಲ್ಲಿನ ಸೈನಿಕರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಪ್ರಪಂಚದಾದ್ಯಂತ ಘರ್ಷಣೆಗಳ ನಡುವೆ ಗಡಿಗಳನ್ನು ಭದ್ರಪಡಿಸುವಲ್ಲಿ ಸೇನೆಯ ಪಾತ್ರವನ್ನು ಪ್ರಧಾನಿ ಶ್ಲಾಘಿಸಿದರು. ಇಂದಿನ ಪ್ರಪಂಚದ ಪರಿಸ್ಥಿತಿಯನ್ನು ಗಮನಿಸಿದರೆ, ಭಾರತದಿಂದ ನಿರೀಕ್ಷೆಗಳು ನಿರಂತರವಾಗಿ ಹೆಚ್ಚುತ್ತಿವೆ. ಅಂತಹ ಪರಿಸ್ಥಿತಿಯಲ್ಲಿ ಭಾರತದ ಗಡಿಗಳು ಸುರಕ್ಷಿತವಾಗಿರುವುದು ಮುಖ್ಯವಾಗಿದೆ. ನಾವು ದೇಶದಲ್ಲಿ ಶಾಂತಿಯ ವಾತಾವರಣವನ್ನು ನಿರ್ಮಿಸುತ್ತಿದ್ದೇವೆ ಮತ್ತು ಇದರಲ್ಲಿ ನಿಮ್ಮ ಪಾತ್ರ ದೊಡ್ಡದಾಗಿದೆ. ಭಾರತದ ಸೇನೆ ಮತ್ತು ಭದ್ರತಾ ಪಡೆಗಳು ರಾಷ್ಟ್ರ ನಿರ್ಮಾಣಕ್ಕೆ ನಿರಂತರವಾಗಿ ಕೊಡುಗೆ ನೀಡಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಟವರ್ ಏರಿದ ಯುವತಿಯನ್ನು ‘ಮಗಳೇ ಕೆಳಗಿಳಿ’ ಎಂದ ಪ್ರಧಾನಿ ಮೋದಿ!

    ಸೇನಾ ಯೋಧರೊಂದಿಗೆ ದೀಪಾವಳಿ ಆಚರಿಸುವ ತಮ್ಮ ಸಂಪ್ರದಾಯದ ಬಗ್ಗೆ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ಕಳೆದ 30 ರಿಂದ 35 ವರ್ಷಗಳಿಂದ ದೀಪಾವಳಿಯನ್ನು ಆಚರಿಸುತ್ತಾ ಬಂದಿದ್ದೇನೆ. ಗುಜರಾತ್‌ನ ಮುಖ್ಯಮಂತ್ರಿ, ದೇಶದ ಪ್ರಧಾನಿಯಾಗುವುದಕ್ಕಿಂತ ಮುಂಚೆಯೇ ಇದನ್ನು ಆಚರಿಸಿಕೊಂಡು ಬಂದಿರುವ ಸಂಪ್ರದಾಯ ಇದಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಲೆಪ್ಚಾದಲ್ಲಿ ಸೈನಿಕರೊಂದಿಗೆ ಪ್ರಧಾನಿ ದೀಪಾವಳಿ ಆಚರಣೆ

    ದೀಪಾವಳಿಯನ್ನು ಕುಟುಂಬದಿಂದ ದೂರವಿಟ್ಟಿದ್ದಕ್ಕಾಗಿ ಸೈನಿಕರನ್ನು ಶ್ಲಾಘಿಸಿದ ಅವರು, ಕುಟುಂಬ ಇರುವಲ್ಲಿ ಮಾತ್ರ ಹಬ್ಬವನ್ನು ಆಚರಿಸಲಾಗುತ್ತದೆ ಎಂದು ಹೇಳಲಾಗುತ್ತದೆ. ಆದರೆ ಇಂದು ನೀವು ಕುಟುಂಬದಿಂದ ದೂರವಿದ್ದು, ಗಡಿಯಲ್ಲಿ ಠಿಕಾಣಿ ಹೂಡಿದ್ದೀರಿ. ಇದು ಕರ್ತವ್ಯದ ಮೇಲಿನ ನಿಮ್ಮ ಭಕ್ತಿಯ ಪರಾಕಾಷ್ಠೆಯನ್ನು ತೋರಿಸುತ್ತದೆ. ಭದ್ರತಾ ಪಡೆಗಳನ್ನು ನಿಯೋಜಿಸುವ ಸ್ಥಳ ಯಾವುದೇ ದೇವಾಲಯಕ್ಕಿಂತ ಕಡಿಮೆಯಿಲ್ಲ ಎಂದರು. ಇದನ್ನೂ ಓದಿ: ಕಾಮಗಾರಿ ವೇಳೆ ಭೂಕುಸಿತ- ಸುರಂಗದಡಿ ಸಿಲುಕಿದ 36 ಕಾರ್ಮಿಕರು

    ಭಾರತವು ಈಗ ರಕ್ಷಣಾ ವಲಯದಲ್ಲಿ ಜಾಗತಿಕ ಆಟಗಾರನಾಗಿ ಹೊರಹೊಮ್ಮುತ್ತಿದೆ ಮತ್ತು ದೇಶದ ರಕ್ಷಣಾ ಅಗತ್ಯಗಳನ್ನು ಪೂರೈಸುವುದು ಮಾತ್ರವಲ್ಲ, ಸ್ನೇಹಪರ ದೇಶಗಳ ಅಗತ್ಯಗಳನ್ನೂ ಪೂರೈಸುತ್ತಿದೆ. 2016ರ ದೀಪಾವಳಿ ಮತ್ತು ಈ ವರ್ಷದ ನಡುವೆ, ಭಾರತದ ರಕ್ಷಣಾ ರಫ್ತು ಎಂಟು ಪಟ್ಟು ಹೆಚ್ಚಾಗಿದೆ ಮತ್ತು ದೇಶೀಯ ರಕ್ಷಣಾ ಉತ್ಪಾದನೆಯು ಈಗ 1 ಲಕ್ಷ ಕೋಟಿ ರೂ. ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಕೇರಳ ಸ್ಫೋಟ – ಮಹಿಳೆ ಸಾವು, ಸಾವಿನ ಸಂಖ್ಯೆ 5ಕ್ಕೆ ಏರಿಕೆ

  • ಲೆಪ್ಚಾದಲ್ಲಿ ಸೈನಿಕರೊಂದಿಗೆ ಪ್ರಧಾನಿ ದೀಪಾವಳಿ ಆಚರಣೆ

    ಲೆಪ್ಚಾದಲ್ಲಿ ಸೈನಿಕರೊಂದಿಗೆ ಪ್ರಧಾನಿ ದೀಪಾವಳಿ ಆಚರಣೆ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಪ್ರತಿವರ್ಷದಂತೆ ಈ ವರ್ಷವೂ ದೀಪಾವಳಿಯನ್ನು (Deepavali) ಸೈನಿಕರೊಂದಿಗೆ (Soldiers) ಆಚರಿಸಲು ಚೀನಾ (China) ಗಡಿಗೆ ಹೊಂದಿಕೊಂಡಿರುವ ಹಿಮಾಚಲ ಪ್ರದೇಶದ (Himachal Pradesh) ಲೆಪ್ಚಾಗೆ (Lepcha) ತೆರಳಿದ್ದಾರೆ.

    ಭಾನುವಾರ ಬೆಳಗ್ಗೆ ದೂರದ ಗ್ರಾಮವನ್ನು ತಲುಪಿದ ಪ್ರಧಾನಿ ಮೋದಿ, ನಮ್ಮ ವೀರ ಭದ್ರತಾ ಪಡೆಗಳೊಂದಿಗೆ ದೀಪಾವಳಿಯನ್ನು ಆಚರಿಸಲು ಹಿಮಾಚಲ ಪ್ರದೇಶದ ಲೆಪ್ಚಾವನ್ನು ತಲುಪಿದ್ದೇನೆ ಎಂದು ಎಕ್ಸ್‌ನಲ್ಲಿ (X) ಬರೆದುಕೊಂಡಿದ್ದಾರೆ. ಇದಕ್ಕೂ ಮೊದಲು ಪ್ರಧಾನಿ ಮೋದಿ, ದೇಶದ ಜನರಿಗೆ ಒಳ್ಳೆಯ ಆರೋಗ್ಯ ಲಭಿಸಲಿ ಎಂದು ದೀಪಾವಳಿಯ ಶುಭಾಶಯಗಳನ್ನು ಕೋರಿದ್ದಾರೆ. ಇದನ್ನೂ ಓದಿ: Ayodhya Deepotsav: ಶ್ರೀರಾಮ ಜನ್ಮಭೂಮಿಯಲ್ಲಿ ದೀಪೋತ್ಸವ – ಅಯೋಧ್ಯೆ ಬೆಳಗಿದ 24 ಲಕ್ಷ ಹಣತೆಗಳು

    ಎಲ್ಲರಿಗೂ ದೀಪಾವಳಿಯ ಶುಭಾಶಯಗಳು. ಈ ವಿಶೇಷ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಂತೋಷ, ಸಮೃದ್ಧಿ ಮತ್ತು ಒಳ್ಳೆಯ ಆರೋಗ್ಯವನ್ನು ತರಲಿ ಎಂದು ಟ್ವೀಟ್ ಮಾಡುವ ಮೂಲಕ ಜನತೆಗೆ ದೀಪಾವಳಿಯ ಸಂದೇಶವನ್ನು ಸಾರಿದ್ದಾರೆ. ಇದನ್ನೂ ಓದಿ: ಕೇರಳ ಸ್ಫೋಟ – ಮಹಿಳೆ ಸಾವು, ಸಾವಿನ ಸಂಖ್ಯೆ 5ಕ್ಕೆ ಏರಿಕೆ

    ಪ್ರಧಾನಿ ನರೇಂದ್ರ ಮೋದಿಯವರು ದೇಶದ ಗಡಿ ಕಾಯುವ ಸೈನಿಕರೊಂದಿಗೆ ದೀಪಾವಳಿಯನ್ನು ಆಚರಿಸುವ ಸಂಪ್ರದಾಯವನ್ನು ಹಿಂದಿನಿಂದಲೂ ಹೊಂದಿದ್ದಾರೆ. 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ, ಅವರು ಸಶಸ್ತ್ರ ಪಡೆಗಳೊಂದಿಗೆ ಬೆಳಕಿನ ಹಬ್ಬವನ್ನು ಕಳೆಯಲು, ಅವರ ತ್ಯಾಗಕ್ಕೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ದೂರದ ಸ್ಥಳಗಳಿಗೆ ಪ್ರಯಾಣಿಸುವುದನ್ನು ರೂಢಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಧ್ಯಪ್ರದೇಶ ಚುನಾವಣೆ – 450 ರೂ.ಗೆ ಎಲ್‌ಪಿಜಿ, ಹೆಣ್ಣುಮಕ್ಕಳಿಗೆ ಉಚಿತ ಶಿಕ್ಷಣ ಘೋಷಿಸಿದ ಬಿಜೆಪಿ