ಪತ್ರದಲ್ಲೇನಿದೆ?
ರುದ್ರೇಶ್ ಆತ್ಮಹತ್ಯೆ ಮಾಡಿಕೊಂಡಿಲ್ಲ ಇದು ಕೊಲೆ. ತಹಶೀಲ್ದಾರ್ ಆಪ್ತ ಡ್ರೈವರ್ ಯಲ್ಲಪ್ಪ ಬಡಸದ ಈ ಕೊಲೆಯ ಸೂತ್ರಧಾರ. ತಹಶೀಲ್ದಾರ್ ಜೀಪ್ ಚೆಕ್ ಮಾಡಿದರೆ ಎಲ್ಲಾ ಸತ್ಯ ಹೊರಬರುತ್ತದೆ. ಅದು ಸೂಸೈಡ್ ಎಂದು ಹೇಳುತ್ತಿದ್ದಾರೆ ಆದರೆ ಅದು ಸೂಸೈಡ್ ಅಲ್ಲ. ಯಲ್ಲಪ್ಪನ ಹೆಂಡತಿ ಅನೈತಿಕ ಸಂಬಂಧ ಇಟ್ಟುಕೊಂಡು ಅವನ ಎಲ್ಲ ದುಡ್ಡು ಹೊಡೆದಿರುತ್ತಾಳೆ. ಡ್ರೈವರ್ ಯಲ್ಲಪ್ಪನನ್ನು ವಿಚಾರಣೆ ಮಾಡಿದರೆ ಕೊಲೆ ರಹಸ್ಯ ಹೊರಗೆ ಬರುತ್ತದೆ. ಸತ್ತವನಿಗೆ ನ್ಯಾಯ ಸಿಗಬೇಕು ಕೇಸ್ ಮುಚ್ಚಿ ಹಾಕಬಾರದು ಎಂದು ಉಲ್ಲೇಖಿಸಲಾಗಿದೆ.
ಅನಾಮಧೇಯ ಪತ್ರದಲ್ಲಿನ ಅಂಶಗಳನ್ನು ಕಂಡು ಖಾಕಿಯೇ ಶಾಕ್ ಆಗಿದ್ದು, ಪತ್ರದಲ್ಲಿನ ಎಲ್ಲ ಅಂಶಗಳ ಕುರಿತು ಖಡೇಬಜಾರ್ ಪೊಲೀಸರು ತನಿಖೆ ನಡೆಸುತ್ತಾರಾ? ಮುಂದೆ ಈ ಪ್ರಕರಣ ಯಾವ ರೀತಿ ತಿರುವು ಪಡೆದುಕೊಳ್ಳುತ್ತದೆ ಎನ್ನುವ ಕುತೂಹಲ ಹೆಚ್ಚಾಗಿದೆ
ಏನಿದು ಪ್ರಕರಣ?
ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಎ (ದ್ವಿತೀಯ ದರ್ಜೆ ಸಹಾಯಕ) ರುದ್ರೇಶ್ (ರುದ್ರಣ್ಣ) ಯಡಣ್ಣನವರ್ ನವೆಂಬರ್ 5 ರಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಅವರು, ತನ್ನ ಸಾವಿಗೆ ಇವರೇ ಕಾರಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು, ತಹಶಿಲ್ದಾರ್ ಬಸವರಾಜ ನಾಗರಾಳ, ಸಹೊದ್ಯೋಗಿ ಅಶೋಕ ಕಬ್ಬಲಿಗೇರ್ ಹೆಸರು ಉಲ್ಲೇಖಿಸಿ ವಾಟ್ಸಪ್ ಗ್ರೂಪಿನಲ್ಲಿ ಸಂದೇಶ ಕಳುಹಿಸಿದ್ದರು.ಇದನ್ನೂ ಓದಿ: ಕೌಟುಂಬಿಕ ಜಗಳ- ಅತ್ತಿಗೆಯ ಕುತ್ತಿಗೆಗೆ ಚಾಕು ಇರಿದು ಕೊಲೆಗೈದ ಮೈದುನ
ಧಾರವಾಡ: ಒಂದು ವರ್ಷದ ಹಿಂದೆಯೇ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ವಿಚಾರವಾಗಿ ಸಾಮಾಜಿಕ ಕಾರ್ಯಕರ್ತರೊಬ್ಬರು ಪ್ರಧಾನಿ ಮೋದಿ (PM Narendra Modi) ಗಮನ ಸೆಳೆಯಲು ಯತ್ನಿಸಿರುವ ಸನ್ನಿವೇಶ ತಡವಾಗಿ ಬೆಳಿಕಿಗೆ ಬಂದಿದೆ.
ಉಪ್ಪಿನಬೆಟಗೇರಿ ಗ್ರಾಮದ ಅನೇಕ ರೈತರ ಪಹಣಿಯಲ್ಲಿ ವಕ್ಫ್ ಆಸ್ತಿ ಎಂದು ಹೆಸರು ಉಲ್ಲೇಖಿಸಲಾಗಿತ್ತು. ಇದಕ್ಕಾಗಿ ರೈತರು ಕಚೇರಿಯಿಂದ ಕಚೇರಿಗೆ ಅಲೆದಾಡಿದ್ದರು. ಆದರೆ ಯಾವುದೇ ಪ್ರಯೋಜನವಾಗಿರಲಿಲ್ಲ. ಇದರಿಂದಾಗಿ ಕೃಷ್ಣಪ್ಪ ಪ್ರಧಾನಿ ಮೋದಿ ಗಮನಕ್ಕೆ ತರಬೇಕೆಂಬ ನಿಟ್ಟಿನಲ್ಲಿ ಪ್ರಧಾನಿ ಕಚೇರಿಗೆ ಪತ್ರ ಬರೆದಿದ್ದರು.
ರೈತರ ಪಹಣಿಯಲ್ಲಿ ವಕ್ಫ್ ಬೋರ್ಡ್ ಹೆಸರು ಬರುವುದನ್ನು ತಡೆಯುವಂತೆ ಆಗ್ರಹಿಸಿ ಹಾಗೂ ಯಾವ ಮಾನದಂಡದ ಮೇಲೆ ಹೀಗೆ ಮಾಡುತ್ತಿದ್ದಾರೆ ಎಂದು ಪ್ರಶ್ನಿಸಿ ಕೃಷ್ಣಪ್ಪ ಪತ್ರ ಬರೆದಿದ್ದರು. 2023ರ ನ.28ರಂದು ಪ್ರಧಾನಿಗೆ ಪತ್ರ ಕಳುಹಿಸಿದ್ದರು. ಡಿ.2ರಂದು ಪತ್ರ ಪ್ರಧಾನಿ ಕಚೇರಿ ತಲುಪಿದ್ದು, ಡಿ.8ರಂದು ಕೃಷ್ಣಪ್ಪಗೆ ಪಿಎಂ ಕಚೇರಿಯಿಂದ ಕರೆ ಬಂದಿತ್ತು. ಪತ್ರ ಬರೆದು, ದೂರು ಕೊಡುತ್ತಿರುವುದು ನೀವೆನಾ? ಎಂದು ಸಿಬ್ಬಂದಿ ಪ್ರಶ್ನಿಸಿ, ಖಚಿತಪಡಿಸಿಕೊಂಡಿದ್ದರು. ಜೊತೆಗೆ ನಿಮ್ಮ ದೂರು ಪ್ರಧಾನಿಗಳ ಗಮನಕ್ಕೆ ತರುವುದಾಗಿ ಸಿಬ್ಬಂದಿ ತಿಳಿಸಿದ್ದರು.
ರಾಮನಗರ: ಜಿಲ್ಲೆಯ ಹೆಸರು ಮರುನಾಮಕರಣ ವಿಚಾರಕ್ಕೆ ಬೆಂಗಳೂರು ಗ್ರಾಮಾಂತರ ಸಂಸದ ಡಾ.ಸಿ.ಎನ್ ಮಂಜುನಾಥ್ (Dr CN Manjunath) ವಿರೋಧ ವ್ಯಕ್ತಪಡಿಸಿದ್ದಾರೆ. ಹೆಸರು ಬದಲಿಸದಂತೆ ಸಿಎಂ ಸಿದ್ದರಾಮಯ್ಯಗೆ (Siddaramaiah) ಪತ್ರ ಬರೆದಿದ್ದಾರೆ.
ರಾಮನಗರಕ್ಕೆ (Ramanagara) ಭಾವನಾತ್ಮಕ, ಐತಿಹಾಸಿಕ ಹಿನ್ನೆಲೆಯಿದೆ. ಅಭಿವೃದ್ಧಿ ಮಾಡಬೇಕಾದರೆ ಮರುನಾಮಕರಣ ಮಾಡುವ ಬದಲು ರಾಮನಗರವನ್ನೇ ಬ್ರ್ಯಾಂಡ್ ರಾಮನಗರವನ್ನಾಗಿ ಮಾಡಿ. ಹಾಗಿದ್ದಾಗ ಮಾತ್ರ ಜಿಲ್ಲೆಯನ್ನು ಸಮಗ್ರವಾಗಿ ಅಭಿವೃದ್ಧಿ ಮಾಡಬಹುದಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಅನಂತ್ ಅಂಬಾನಿ-ರಾಧಿಕಾ ಮರ್ಚೆಂಟ್ ವಿವಾಹ; ತೆಂಡೂಲ್ಕರ್, ಜಾನ್ ಸೀನಾ ಭಾಗಿ
ಈಗಾಗಲೇ ಬೆಂಗಳೂರು ಮಹಾನಗರವು ಬಹಳಷ್ಟು ವಿಸ್ತಾರವಾಗಿ ಬೆಳೆದಿದೆ. ಇಲ್ಲಿ ವಾಸಿಸುತ್ತಿರುವ ನಾಗರೀಕರಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದೇ ದುಸ್ತರವಾಗಿದೆ. ಈ ಪರಿಸ್ಥಿತಿಯಲ್ಲಿ ಸುಂದರವಾಗಿ ಬೆಳೆಯುತ್ತಿರುವ ರಾಮನಗರವನ್ನು ನಗರ ಪ್ರದೇಶಕ್ಕೆ ಸೇರ್ಪಡೆ ಮಾಡುವ ನಿರ್ಧಾರ ಅವೈಜ್ಞಾನಿಕ ಎಂದಿದ್ದಾರೆ. ಇದನ್ನೂ ಓದಿ: ಅದಿರು ಕೊರತೆ ಆಗದಿರಲಿ; NMDC ಅಧಿಕಾರಿಗಳಿಗೆ ಕೇಂದ್ರ ಸಚಿವ ಹೆಚ್‌ಡಿಕೆ ನಿರ್ದೇಶನ
ರಾಮನಗರ ಜಿಲ್ಲೆ ರೈತರ ಜಿಲ್ಲೆಯಾಗಿ ಉಳಿಯಬೇಕು. ಅದನ್ನ ಬಿಟ್ಟು ರಿಯಲ್ ಎಸ್ಟೇಟ್ ಬಿಲ್ಡರ್‌ಗಳ ತಾಣವಾಗಬಾರದು. ರೈತರ ಬಾಳು ಹಸನಾಗಬೇಕಾದರೆ ಭೂಮಿ ಬೆಲೆ ಅಧಿಕಕ್ಕಿಂತ ರೈತರ ಬೆಳೆಯ ಬೆಲೆ ಅಧಿಕವಾಗಬೇಕು. ಈ ಪ್ರಸ್ತಾವನೆಯನ್ನು ತಿರಸ್ಕರಿಸುವಂತೆ ಸಿಎಂಗೆ ಪತ್ರದ ಮೂಲಕ ಮಂಜುನಾಥ್ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಮುಡಾ ಅಕ್ರಮ: ಸಿಎಂ ರಾಜೀನಾಮೆ ಕೊಡುವವರೆಗೂ ಬಿಜೆಪಿಯಿಂದ ಹೋರಾಟ – ವಿಜಯೇಂದ್ರ
ನವದೆಹಲಿ: ಆಪ್ ನಾಯಕಿ, ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ (Swati Maliwal) ರಾಹುಲ್ ಗಾಂಧಿ (Rahul Gandhi) ಸೇರಿದಂತೆ ಇಂಡಿಯಾ (INDIA) ಒಕ್ಕೂಟದ ಪ್ರಮುಖ ನಾಯಕರಿಗೆ ಪತ್ರ ಬರೆದು ಭೇಟಿಗೆ ಸಮಯ ನೀಡುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಖುದ್ದು ಅವರೇ ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ನಾನು ಕಳೆದ 18 ವರ್ಷಗಳಿಂದ ತಳಹಂತದಲ್ಲಿ ಜನರ ನಡುವೆ ಕೆಲಸ ಮಾಡಿದ್ದೇನೆ. ಕಳೆದ ಒಂಬತ್ತು ವರ್ಷಗಳಲ್ಲಿ ಮಹಿಳಾ ಆಯೋಗದಲ್ಲಿ 1.7 ಲಕ್ಷ ಪ್ರಕರಣಗಳನ್ನು ಆಲಿಸಿದ್ದೇನೆ. ಮಹಿಳಾ ಆಯೋಗವನ್ನು ಅತ್ಯಂತ ಉನ್ನತ ಸ್ಥಾನಕ್ಕೆ ಏರಿಸಿದೆ. ಮುಂದೆಯೂ ನಾನು ಯಾರಿಗೂ ಹೆದರುವುದಿಲ್ಲ, ಯಾರ ಮುಂದೆಯೂ ತಲೆಬಾಗುವುದಿಲ್ಲ ಎಂದರು. ಇದನ್ನೂ ಓದಿ: ಪ್ರಿಯಾಂಕಾ ಗಾಂಧಿ ವಯನಾಡಿನಿಂದ ಸ್ಪರ್ಧಿಸುತ್ತಿರುವುದು ನನಗೆ ಖುಷಿ ತಂದಿದೆ: ರಾಬರ್ಟ್ ವಾದ್ರಾ
ಆದರೆ ನನಗೆ ಮುಖ್ಯಮಂತ್ರಿಗಳ ಮನೆಯಲ್ಲಿ ಮೊದಲು ಕೆಟ್ಟದಾಗಿ ಥಳಿಸಲಾಯಿತು. ನಂತರ ನನ್ನ ಚಾರಿತ್ರ್ಯಹರಣ ಮಾಡಿರುವುದು ತುಂಬಾ ದುಃಖಕರವಾಗಿದೆ. ಇಂದು ನಾನು ಈ ವಿಷಯದ ಬಗ್ಗೆ ಮಾತನಾಡಲು ಇಂಡಿಯಾ ಒಕ್ಕೂಟದ ಎಲ್ಲಾ ದೊಡ್ಡ ನಾಯಕರಿಗೆ ಪತ್ರ ಬರೆದಿದ್ದೇನೆ. ನಾನು ಎಲ್ಲರಿಗೂ ಭೇಟಿಗೆ ಸಮಯ ಕೇಳಿದ್ದೇನೆ ಎಂದು ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆಗೆ ಕಾನೂನಾತ್ಮಕವಾಗಿ ನ್ಯಾಯ ಸಿಗುತ್ತದೆ ಎಂಬ ಭರವಸೆಯಿದೆ: ರಚಿತಾ ರಾಮ್
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಆಪ್ತ ಸಹಾಯಕ ಬಿಭವ್ ಕುಮಾರ್ ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದ ಸ್ವಾತಿ ಮಲಿವಾಲ್ ದೂರು ದಾಖಲಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿರುವ ದೆಹಲಿ ಪೊಲೀಸರು ಬಿಭವ್ ಕುಮಾರ್ ಬಂಧಿಸಿದ್ದು, ನ್ಯಾಯಂಗ ಬಂಧನಕ್ಕೆ ನೀಡಿದ್ದಾರೆ. ಈ ನಡುವೆ ಆಪ್ ನಾಯಕರು ಸ್ವಾತಿ ಮಲಿವಾಲ್ ವಿರುದ್ಧ ತಿರುಗಿ ಬಿದಿದ್ದಾರೆ. ಇದನ್ನೂ ಓದಿ: ರೀಲ್ಸ್‌ಗಾಗಿ ಡ್ರೈವಿಂಗ್ ಮಾಡಲು ಹೋಗಿ ಆಕ್ಸಿಲರೇಟರ್ ಒತ್ತಿದ ಯುವತಿ- ಮುಂದೇನಾಯ್ತು..?
ಬಾಗಲಕೋಟೆ: ಪ್ರಧಾನಿ ಮೋದಿ (Narendra Modi) ತಮ್ಮ ಭಾಷಣದ ವೇಳೆ ಫೋಟೋ (Photo) ಹಿಡಿದು ನಿಂತಿದ್ದ ಯುವತಿಯನ್ನು ಕಂಡು ತಮ್ಮ ಅಂಗರಕ್ಷಕ ಅಧಿಕಾರಿಗಳಿಂದ ಯುವತಿಯ ಫೋಟೊ ತರಿಸಿಕೊಂಡು, ಪತ್ರ ಬರೆಯುವುದಾಗಿ ತಿಳಿಸಿದ್ದರು. ಇದೀಗ ಕೊಟ್ಟ ಮಾತಿನಂತೆ ಪ್ರಧಾನಿ ಮೋದಿ ಯುವತಿಗೆ ಪತ್ರ (Letter) ಬರೆದಿದ್ದಾರೆ.
ಪ್ರಧಾನಿ ಮೋದಿ ಹಾಗೂ ಅವರ ತಾಯಿ ಹೀರಾಬೆನ್ ಅವರ ಚಿತ್ರ ಬಿಡಿಸಿ, ಸ್ಕೆಚ್ ನೀಡಿದ್ದ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಬಾಗಲಕೋಟೆಯ (Bagalkote) ಯುವತಿ ನಾಗರತ್ನ ಮೇಟಿ ಎಂಬ ಯುವತಿಗೆ ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಏ.29 ರಂದು ಪ್ರಧಾನಿ ಮೋದಿ ಲೋಕಸಭಾ ಚುನವಣಾ (Lok Sabha Election) ಪ್ರಚಾರಾರ್ಥವಾಗಿ ಬಾಗಲಕೋಟೆಗೆ ಆಗಮಿಸಿದ್ದರು. ಭಾಷಣ ಮಾಡುವ ವೇಳೆಗೆ ವೇದಿಕೆ ಎದುರಿಗೆ ತಮ್ಮ (ಮೋದಿ) ಹಾಗೂ ತಾಯಿಯ ಚಿತ್ರ ಬಿಡಿಸಿದ ಫೋಟೋ ಹಿಡಿದು ನಿಂತಿದ್ದ ಯುವತಿಯನ್ನು ಗಮನಿಸಿದ ಮೋದಿ, ಭಾಷಣದ ಮಧ್ಯೆಯೇ ಎಸ್‌ಪಿಜಿ ಸಿಬ್ಬಂದಿಗೆ ಹೇಳಿ ಆ ಫೋಟೋವನ್ನು ತರಿಸಿಕೊಂಡಿದ್ದರು. ಅಲ್ಲದೇ ಅದರಲ್ಲಿ ನಿನ್ನ ಹೆಸರು, ವಿಳಾಸ ಬರೆದು ಕಳುಹಿಸು ಮಗಳೇ, ನಾನು ನಿನಗೆ ಖಂಡಿತವಾಗಿಯೂ ಪತ್ರ ಕಳುಹಿಸುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ದೇವರಾಜೇಗೌಡ, ಪೀತಂ ಗೌಡ ಆಪ್ತರ ಮನೆ ಸೇರಿದಂತೆ ಹಾಸನದ 6 ಕಡೆ ಎಸ್‌ಐಟಿ ದಾಳಿ
ಯುವತಿಗೆ ಕೊಟ್ಟ ಮಾತಿನಂತೆ ಮೇ 5 ರಂದು ಪ್ರಧಾನಿ ಮೋದಿ ಪತ್ರ ಬರೆದಿದ್ದಾರೆ. ಯುವತಿಗೆ ಮೋದಿಯವರ ಪತ್ರ ಪೋಸ್ಟ್ ಮೂಲಕ ತಲುಪಿದೆ. ಮೋದಿಯವರ ಪತ್ರದಲ್ಲಿ ಸುಂದರವಾದ ಭಾವಚಿತ್ರ ಉಡುಗೊರೆಯಾಗಿ ನೀಡಿದ್ದಕ್ಕೆ ನಾನು ನಿಮಗೆ ಧನ್ಯವಾದ ತಿಳಿಸುತ್ತೇನೆ. ಈ ಕಲಾತ್ಮಕ ಕೆಲಸವು ಮಾನವ ಭಾವನೆಗಳ ಪ್ರಾಮುಖ್ಯತೆಯನ್ನು ತೋರಿಸುತ್ತದೆ. ನಿಮ್ಮ ವರ್ಣಚಿತ್ರ ರೋಮಾಂಚಕ ಪ್ರದರ್ಶನವು ಯುವಶಕ್ತಿಯ ಸಾರವನ್ನು ಒಳಗೊಂಡಿರುತ್ತದೆ. ಹೊಸ ಭಾರತವನ್ನು ರೂಪಿಸುವ ಮತ್ತು ನಮ್ಮ ಯುವಕರಿಗೆ ಭರವಸೆಯ ಭವಿಷ್ಯವನ್ನು ಭದ್ರಪಡಿಸುವ ನನ್ನ ಬದ್ಧತೆಯನ್ನು ಪ್ರೇರೇಪಿಸುತ್ತದೆ. ನಿಮ್ಮ ಸೃಜನಶೀಲ ಪ್ರತಿಭೆ ಮತ್ತು ಕೌಶಲ್ಯಗಳನ್ನು ನಿಮ್ಮ ಕೆಲಸಕ್ಕೆ ಅನ್ವಯಿಸುವಲ್ಲಿ ನೀವು ನಿರಂತರವಾಗಿರಿ. ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಕೆಗಳು. ಇಂತಿ, ನಿಮ್ಮ ನರೇಂದ್ರ ಮೋದಿ ಎಂದು ಉಲ್ಲೇಖ ಮಾಡಿ ಮೋದಿ ಪತ್ರ ಬರೆದಿದ್ದಾರೆ. ಸದ್ಯ ಈ ಯುವತಿಗೆ ಮೋದಿ ಬರೆದಿರುವ ಪತ್ರ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ. ಇದನ್ನೂ ಓದಿ: ಪಿಒಕೆಯಲ್ಲಿ ಹಿಂಸಾಚಾರ, ಗುಂಡಿನ ದಾಳಿಗೆ ಮೂವರು ಬಲಿ – ಮದರಸಾದ ಒಳಗಡೆ ಟಿಯರ್ ಗ್ಯಾಸ್ ಸಿಡಿಸಿದ ಸೇನೆ
ಬೆಂಗಳೂರು: ಎಸ್‌ಐಟಿ (SIT) ತನಿಖೆ ನಡೆಯುತ್ತಿರುವ ಸಂಬಂಧ ಪ್ರಜ್ವಲ್ ರೇವಣ್ಣನನ್ನು (Prajwal Revanna) ಈ ದೇಶಕ್ಕೆ ವಾಪಸ್ ಕರೆತರಬೇಕು. ದೇಶದ ಕಾನೂನಿನ ಪ್ರಕಾರ ತನಿಖೆ ಹಾಗೂ ವಿಚಾರಣೆ ನಡೆಸಬೇಕು. ಹಾಗಾಗಿ ಪ್ರಜ್ವಲ್ ರೇವಣ್ಣನ ರಾಜತಾಂತ್ರಿಕ ಪಾಸ್‌ಪೋರ್ಟ್ (Passport) ರದ್ದುಗೊಳಿಸಿ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಪ್ರಧಾನಿ ಮೋದಿಯವರಿಗೆ (Narendra Modi) ಪತ್ರ ಬರೆದಿದ್ದಾರೆ.
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿರುವ ಕುರಿತು ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ, ಪ್ರಜ್ವಲ್ ರೇವಣ್ಣ ಹಾಸನದ ಸಂಸದ ಮತ್ತು ಎನ್‌ಡಿಎ ಅಭ್ಯರ್ಥಿ. ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ. ಈ ಗಂಭೀರ ಪ್ರಕರಣದ ಬಗ್ಗೆ ನಿಮಗೂ ತಿಳಿದಿರಬಹುದು. ಅವರ ವಿರುದ್ಧದ ಆರೋಪಗಳು ಭಯಾನಕ ಮತ್ತು ನಾಚಿಗೇಡಿನದ್ದು. ಇದು ದೇಶದ ಆತ್ಮ ಸಾಕ್ಷಿಯನ್ನೆ ಅಲ್ಲಾಡಿಸಿದ ಪ್ರಕರಣ. ನಾವು ಎಸ್‌ಐಟಿ ರಚಿಸಿದ್ದೇವೆ. ಎಸ್‌ಐಟಿ ತಂಡ ಈಗಾಗಲೇ ತನಿಖೆಯನ್ನು ಪ್ರಾರಂಭಿಸಿದೆ. ಇದು ಹೊರ ಬಿದ್ದ ಕೂಡಲೆ ಪ್ರಜ್ವಲ್ ವಿದೇಶಕ್ಕೆ ತೆರಳಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸೇರಿ ದೇಶದ ಹಲವೆಡೆ ಮೇ ತಿಂಗಳಲ್ಲಿ ಸಾಮಾನ್ಯ ಮಳೆ
ಪ್ರಜ್ವಲ್ ತಮ್ಮ ರಾಜತಾಂತ್ರಿಕ ಪಾಸ್‌ಪೋರ್ಟ್‌ನಲ್ಲಿ ವಿದೇಶಿ ಪ್ರವಾಸ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ಮಾಹಿತಿ ತಿಳಿದು ಬಂದಿದೆ. ಎಸ್‌ಐಟಿ ತನಿಖೆ ನಡೆಯುತ್ತಿರುವ ಸಂಬಂಧ ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಿ. ಅಲ್ಲದೆ ಅಂತರಾಷ್ಟ್ರೀಯ ಏಜೆನ್ಸಿ ಮೂಲಕ ಪ್ರಜ್ವಲ್ ರೇವಣ್ಣ ಕರೆತರಲು ಸಹಕರಿಸಿ. ಈ ಬಗ್ಗೆ ವಿದೇಶಾಂಗ ಸಚಿವಾಲಯಕ್ಕೆ ಸೂಚನೆ ನೀಡಬೇಕು. ಪ್ರಜ್ವಲ್ ಕರೆತರಲು ಬೇಕಾದ ಎಲ್ಲಾ ರೀತಿಯ ನೆರವು ಹಾಗೂ ಮಾಹಿತಿಯನ್ನ ನಮ್ಮ ಎಸ್‌ಐಟಿ ತಂಡ ಒದಗಿಸಲಿದೆ, ಸಹಕರಿಸಲಿದೆ ಎಂದು ಸಿದ್ದರಾಮಯ್ಯ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಅಧಿಕಾರದಿಂದ ಕೆಳಗಿಳಿಯಲಿ, 24 ಗಂಟೆಗಳಲ್ಲಿ ಪ್ರಜ್ವಲ್‌ನ ಕಸ್ಟಡಿಗೆ ತೆಗೆದುಕೊಳ್ತೀವಿ: ಅಶೋಕ್
ಪತ್ರದಲ್ಲಿ ಏನಿದೆ?
2024ರ ಲೋಕಸಭೆ ಚುನಾವಣೆಗೆ ಇದೇ ಕ್ಷೇತ್ರಕ್ಕೆ ಹಾಲಿ ಹಾಸನ ಲೋಕಸಭಾ ಸದಸ್ಯ ಮತ್ತು ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಅಸಂಖ್ಯಾತ ಮಹಿಳೆಯರ ಮೇಲೆ ಲೈಂಗಿಕ ಶೋಷಣೆ ಮಾಡಿದ್ದಾರೆ ಎಂಬ ಗಂಭೀರ ಪ್ರಕರಣದ ಬಗ್ಗೆ ನಿಮಗೆ ತಿಳಿದಿರಲೇಬೇಕು. ಸಂಸದ ಹಾಗೂ ಹಾಸನ ಲೋಕಸಭೆಯ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ಎದುರಿಸುತ್ತಿರುವ ಆರೋಪಗಳು ಭಯಾನಕ ಮತ್ತು ನಾಚಿಕೆಗೇಡಿನಾಗಿದ್ದು, ಇದು ದೇಶದ ಆತ್ಮಸಾಕ್ಷಿಯನ್ನು ಅಲ್ಲಾಡಿಸಿದೆ. ಇದನ್ನೂ ಓದಿ: ವಿಚಾರಣೆಗೆ ಹಾಜರಾಗಲು 7 ದಿನ ಅವಕಾಶ ನೀಡಿ – ಪ್ರಜ್ವಲ್ ರೇವಣ್ಣ ಮನವಿ
ನಮ್ಮ ಸರ್ಕಾರವು ಏ.28ರಂದು ಕ್ರಿಮಿನಲ್ ಇನ್ವೆಸ್ಟಿಗೇಶನ್ ಡಿಪಾರ್ಟ್ಮೆಂಟ್ ಅಡಿಯಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್‌ಐಟಿ) ರಚಿಸಿದೆ ಮತ್ತು ತನಿಖೆಯನ್ನು ಸರಿಯಾದ ಶ್ರದ್ಧೆಯಿಂದ ಪ್ರಾರಂಭಿಸಿದೆ. ಹಲವಾರು ಮಹಿಳೆಯರ ವಿರುದ್ಧದ ಆಪಾದಿತ ಅಪರಾಧಗಳ ನಿಜ ಸ್ವರೂಪ ಹೊರಬಿದ್ದ ಕೂಡಲೇ, ಸಂತ್ರಸ್ತರು ಪ್ರಜ್ವಲ್ ರೇವಣ್ಣ ವಿರುದ್ಧ ದೂರು ದಾಖಲಿಸಲು ಮುಂದಾದ ಕೂಡಲೇ ಎಸ್‌ಐಟಿ ರಚನೆ ಮಾಡಲಾಗಿದ್ದು, ಏ.28ರಂದು ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ದೇವೇಗೌಡರು ಪ್ಲಾನ್ ಮಾಡಿ ಪ್ರಜ್ವಲ್‌ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ
ಈ ನಿಟ್ಟಿನಲ್ಲಿ, ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸಲು ಮತ್ತು ಭಾರತ ಸರ್ಕಾರದ ರಾಜತಾಂತ್ರಿಕ ಮತ್ತು ಪೊಲೀಸ್ ಚಾನೆಲ್‌ಗಳನ್ನು ಬಳಸಿಕೊಂಡು ಅಂತಹ ಇತರ ಕ್ರಮಗಳನ್ನು ಕೈಗೊಳ್ಳಲು ವಿದೇಶಾಂಗ ವ್ಯವಹಾರಗಳು ಮತ್ತು ಗೃಹ ವ್ಯವಹಾರಗಳ ಸಚಿವಾಲಯಗಳನ್ನು ದಯೆಯಿಂದ ಒತ್ತಾಯಿಸಲು ಇದು ನಿಮ್ಮನ್ನು ಒತ್ತಾಯಿಸುತ್ತದೆ. ಕಾನೂನಿನ ಸಂಪೂರ್ಣ ಬಲವನ್ನು ಎದುರಿಸಲು ಪರಾರಿಯಾದ ಸಂಸತ್ತಿನ ಸದಸ್ಯನ ಶೀಘ್ರ ಮರಳುವಿಕೆಯನ್ನು ಖಚಿತಪಡಿಸಿಕೊಳ್ಳಲು ಅಂತರರಾಷ್ಟ್ರೀಯ ಪೊಲೀಸ್ ಏಜೆನ್ಸಿಗಳು, ಕರ್ನಾಟಕದ ಎಸ್‌ಐಟಿ ಎಲ್ಲಾ ಅಗತ್ಯ ವಿವರಗಳನ್ನು ಒದಗಿಸುತ್ತದೆ ಮತ್ತು ಈ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲಾ ಕಾನೂನು ಔಪಚಾರಿಕತೆಗಳನ್ನು ಪೂರೈಸುತ್ತದೆ. ಇದನ್ನೂ ಓದಿ: ತೀವ್ರ ಬಿಸಿಲಿನಿಂದ ರಸ್ತೆಯಲ್ಲೇ ಕುಸಿದು ಬಿದ್ದ ಸಂಸದ ಡಾ.ಉಮೇಶ್ ಜಾಧವ್
ಬಹುಕೋಟಿ ವಂಚನೆ ಆರೋಪಿ ಸುಕೇಶ್ ಚಂದ್ರಶೇಖರ್ ತಮಗೆ ಜೈಲಿನಿಂದ ಪತ್ರ ಹಾಗೂ ವಾಟ್ಸಪ್ ಸಂದೇಶ ಕಳುಹಿಸುತ್ತಿದ್ದಾನೆ ಎಂದು ಖ್ಯಾತ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಆರೋಪ ಮಾಡಿದ್ದರು. ಈ ಕುರಿತಂತೆ ಕೋರ್ಟಿಗೆ ಮೊರೆ ಹೋಗುವುದಾಗಿ ತಿಳಿಸಿದ್ದರೆ. ಈ ಘಟನೆಯ ಬೆನ್ನಲ್ಲೇ ಸುಕೇಶ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ತಾವು ಯಾವುದೇ ಕಾರಣಕ್ಕೂ ಪತ್ರವನ್ನು ಮತ್ತು ಸಂದೇಶವನ್ನು ಕಳುಹಿಸಿಲ್ಲ. ಯಾರೂ ಈ ಕೃತ್ಯ ಮಾಡುತ್ತಿದ್ದಾರೆ. ನಾನು ಈ ಕುರಿತಂತೆ ಯಾವುದೇ ತನಿಖೆಗೆ ಸಿದ್ಧ ಎಂದು ಹೇಳಿದ್ದಾರೆ.
ಸುಕೇಶ್ ಚಂದ್ರಶೇಖರ್ ಜೈಲಿನಿಂದಲೇ (Jail) ತಮಗೆ ಬೆದರಿಕೆ ಹಾಕುತ್ತಿದ್ದಾನೆ ಎಂದು ಜಾಕ್ವೆಲಿನ್ ಆರೋಪ ಮಾಡಿದ್ದರು. ಜೈಲಿನಿಂದ ಪ್ರೇಮ ಪತ್ರ ಕಳುಹಿಸುತ್ತಿದ್ದರು, ಇದೀಗ ಬೆದರಿಕೆಯ ಪತ್ರ ಬರೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದರು. ಈ ಕುರಿತಂತೆ ಸುಕೇಶ್ ತನ್ನ ವಿರುದ್ಧ ಕ್ರಮಕ್ಕೆ ಮುಂದಾದರೆ, ನಿನ್ನ ಬಣ್ಣ ಬಯಲು ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಹೇಳಿದ್ದರು.
ಅಷ್ಟಕ್ಕೂ ಸುಕೇಶ್ ಇಷ್ಟೊಂದು ಗರಂ ಆಗೋಕೆ ಕಾರಣ, ಜಾಕ್ವೆಲಿನ್ ಕಾನೂನು ಕ್ರಮಕ್ಕೆ ಮುಂದಾಗಿರೋದು. ಮೊನ್ನೆಯಷ್ಟೇ ಬಹುಕೋಟಿ ವಂಚನೆ ಆರೋಪಕ್ಕೆ ಸಂಬಂಧಿಸಿದಂತೆ ತಮ್ಮ ಮೇಲಿನ ಮೊಕದ್ದಮೆಯನ್ನು ಹಿಂಪಡೆಯಬೇಕು ಎಂದು ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಕೋರ್ಟ್ ಮೆಟ್ಟಿಲು ಏರಿದ್ದರು. ಸುಕೇಶ್ ಚಂದ್ರಶೇಖರ್ (Sukesh Chandrasekhar) ಮಾಡಿದ್ದಾರೆ ಎನ್ನಲಾದ ಬಹುಕೋಟಿ ವಂಚನೆ ಪ್ರಕರಣಕ್ಕೂ ತಮಗೂ ಸಂಬಂಧವಿಲ್ಲ ಎಂದು ಅವರು ಹೇಳಿಕೊಂಡಿದ್ದರು. ಇದೀಗ ಸುಕೇಶ್ ವಿರುದ್ಧ ಮತ್ತೆ ಜಾಕ್ವೆಲಿನ್ ಕೋರ್ಟ್ ಮೆಟ್ಟಿಲು ಏರುತ್ತಿದ್ದಾರೆ.
ಜಾಕ್ವೆಲಿನ್ ಗೆ ಸಂಬಂಧಿಸಿದಂತೆ ಸುಕೇಶ್ ತಿಂಗಳಿಗೊಂದಾದರೂ ಮಾಧ್ಯಮ ಹೇಳಿಕೆಯನ್ನು ನೀಡುತ್ತಿದ್ದಾನೆ. ಇನ್ನೂ ಜಾಕ್ವೆಲಿನ್ ಅನ್ನು ಪ್ರೀತಿಸುತ್ತಿರುವುದಾಗಿ ಸುಕೇಶ್ ಹೇಳಿಕೊಂಡಿದ್ದಾರೆ. ಹುಟ್ಟು ಹಬ್ಬಕ್ಕೆ, ಹಬ್ಬ ಹರಿದಿನಗಳಿಗೆ ಪ್ರೇಮ ಸಂದೇಶವನ್ನು ಕಳುಹಿಸುತ್ತಲೇ ಇದ್ದಾನೆ. ಇದನ್ನು ತಡೆಗಟ್ಟಬೇಕು ಎಂದು ನಟಿ ಕೋರ್ಟಿಗೆ ಮನವಿ ಮಾಡಿಕೊಂಡಿದ್ದಾರೆ.
ಮಾಧ್ಯಮಗಳಿಗೆ ತಮ್ಮ ಬಗ್ಗೆ ಯಾವುದೇ ಹೇಳಿಕೆಯನ್ನು ಸುಕೇಶ್ ನೀಡದಂತೆ ಆದೇಶ ನೀಡಬೇಕು ಎಂದು ಜಾಕ್ವೆಲಿನ್ ಮನವಿ ಮಾಡಿದ್ದಾರೆ. ಈ ಮೂಲಕ ಸುಕೇಶ್ ಗೂ ತಮಗೂ ಯಾವುದೇ ಸಂಬಂಧವಿಲ್ಲ ಎನ್ನುವುದನ್ನು ಸಾಬೀತು ಪಡಿಸುವ ಯತ್ನಕ್ಕೆ ಜಾಕ್ವೆಲಿನ್ ಕೈ ಹಾಕಿದ್ದಾರೆ.
ನವದೆಹಲಿ: ದೇಶದ ಭದ್ರತೆಯ ದೃಷ್ಟಿಯಿಂದ ಅಂಚೆ ಕಚೇರಿಗೆ (Post Office) ಬರುವ ಪತ್ರಗಳನ್ನು (Letters) ಯಾವುದೇ ಸರ್ಕಾರಿ ಅಧಿಕಾರಿಗಳು ತೆರೆದು ನೋಡುವ ಹಾಗೂ ಮುಟ್ಟುಗೋಲು ಹಾಕುವ ಅಧಿಕಾರ ನೀಡುವ ಮಸೂದೆಗೆ ಲೋಕಸಭೆ ಒಪ್ಪಿಗೆ ನೀಡಿದೆ.
ಪತ್ರಗಳು ಮಾತ್ರವಲ್ಲದೇ ಖಾಸಗಿ ಕೊರಿಯರ್‌ಗಳನ್ನೂ (Courier) ಇದೇ ಮೊದಲ ಬಾರಿಗೆ ಮಸೂದೆ ವ್ಯಾಪ್ತಿಗೆ ತರಲಾಗಿದೆ. ಇದರ ಪ್ರಕಾರ ಕೊರಿಯರ್ ಅಂಗಡಿಗೆ ಬರುವ ಶಾಂಕಾಸ್ಪದ ಪತ್ರಗಳನ್ನು ಅಥವಾ ಯಾವುದೇ ವಸ್ತುಗಳನ್ನು ತೆರೆದು ನೋಡಿ ಮುಟ್ಟುಗೋಲು ಹಾಕುವ ಅಧಿಕಾರ ಇದೀಗ ಸರ್ಕಾರಕ್ಕೆ ಲಭಿಸಿದೆ.
ಈ ಮಸೂದೆಗೆ ರಾಜ್ಯಸಭೆಯಲ್ಲಿ ಡಿಸೆಂಬರ್ 4 ರಂದೇ ಅಂಗೀಕಾರ ದೊರೆತಿದೆ. ಸಂಸತ್‌ನಲ್ಲಿ ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಉತ್ತರ ನೀಡಬೇಕು ಎಂದು ವಿಪಕ್ಷಗಳು ಗದ್ದಲ ನಡೆಸಿದ ಸಂದರ್ಭದಲ್ಲಿಯೇ ಈ ಮಸೂದೆಯನ್ನು ಅಂಗೀಕರಿಸಲಾಗಿದೆ. ಈ ಹೊಸ ಕಾಯ್ದೆ 125 ವರ್ಷಗಳಷ್ಟು ಹಳೆಯ ಪೋಸ್ಟಾಫೀಸ್ ಕಾಯ್ದೆಯನ್ನು (1898) ಬದಲಿಸಿದೆ. ಇದನ್ನೂ ಓದಿ: ಇವಿಎಂ ಬಗ್ಗೆ ಮತ್ತೆ ವಿಪಕ್ಷಗಳಿಗೆ ಅನುಮಾನ – ವಿವಿಪ್ಯಾಟ್ ಸ್ಲಿಪ್ ಮತದಾರರ ಕೈಗೆ ನೀಡಬೇಕು
– ಬರ ಪರಿಹಾರ ಕೋರಿ ಮತ್ತೊಮ್ಮೆ ಕೇಂದ್ರಕ್ಕೆ ರಾಜ್ಯದಿಂದ ಪತ್ರ
ಮೈಸೂರು: ಎಲ್ಲಾ ಜಿಲ್ಲಾ ಮಂತ್ರಿಗಳು ನವೆಂಬರ್ 15 ರೊಳಗೆ ಜಿಲ್ಲೆಯ ಎಲ್ಲಾ ತಾಲೂಕುಗಳಿಗೆ ಭೇಟಿ ನೀಡಿ ಬರ (Drought) ಪರಿಸ್ಥಿತಿಯ ಅಧ್ಯಯನ ಹಾಗೂ ಜನರನ್ನು ಭೇಟಿ ಮಾಡಿ ವರದಿ (Report) ನೀಡುವಂತೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ಮೈಸೂರಿನಲ್ಲಿ (Mysuru) ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರ ಪರಿಹಾರ ಕಾರ್ಯಗಳಿಗೆ 900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದ್ದು, ಪರಿಹಾರ ಕಾರ್ಯಗಳು ಪ್ರಾರಂಭವಾಗಿವೆ. ಕೇಂದ್ರ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂದು ಯಾವುದೇ ಕೆಲಸ ನಿಲ್ಲಿಸಿಲ್ಲ ಎಂದರು. ಕುಡಿಯುವ ನೀರು, ಉದ್ಯೋಗ ನೀಡುವುದು ಯಾವುದೂ ನಿಂತಿಲ್ಲ ಎಂದು ಹೇಳಿದರು. ಇದನ್ನೂ ಓದಿ: ವರಿಷ್ಠರೇ ಎಲ್ಲಾ ಮಾಡೋದಾದ್ರೆ ನೀವೇನು ಬೆರಳು ಚೀಪ್ತಿದ್ರಾ – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ 600 ಕೋಟಿ ರೂ. ಬಿಡುಗಡೆ:
ನಾವು ಪತ್ರ ಬರೆದ ಮೇಲೆ 600 ಕೋಟಿ ರೂ.ಗಳನ್ನು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಶನಿವಾರ ಬಿಡುಗಡೆ ಮಾಡಿದ್ದಾರೆ. 33 ಕೋಟಿ ರೂ.ಗಳಷ್ಟು ಹಾನಿಯಾಗಿದ್ದು, ಮಾರ್ಗಸೂಚಿ ಪ್ರಕಾರ 17,900 ಕೋಟಿ ರೂ.ಗಳನ್ನು ಬಿಡುಗಡೆ ಮಾಡಬೇಕೆಂದು ಕೋರಿದ್ದೇವೆ. ಇವತ್ತಿನವರೆಗೆ ನಮ್ಮ ರಾಜ್ಯದ ಮಂತ್ರಿಗಳಿಗೆ ಕೇಂದ್ರ ಸಚಿವರು ಭೇಟಿಗೆ ಅವಕಾಶವನ್ನೇ ನೀಡಿಲ್ಲ. ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಸಚಿವರನ್ನು ಕಳುಹಿಸಲಾಗಿತ್ತು. ಮೂವರಿಗೂ ಭೇಟಿಗೆ ಅವಕಾಶ ನೀಡಿಲ್ಲ. ಪ್ರಧಾನಮಂತ್ರಿಗಳೂ ಸಮಯಾವಕಾಶ ನೀಡಿಲ್ಲದ ಕಾರಣ ಅವರು ಕೃಷಿ, ಕಂದಾಯ ಹಾಗೂ ಗೃಹ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಬಂದಿದ್ದಾರೆ ಎಂದರು.
ಭೇಟಿಗೆ ಅವಕಾಶ ನೀಡದಿರುವುದು ಕೇಂದ್ರಕ್ಕೆ ಕರ್ನಾಟಕದ ಬಗ್ಗೆ ಇರುವ ನಿರ್ಲಕ್ಷ್ಯ ಹಾಗೂ ಮಲತಾಯಿ ಧೋರಣೆಯನ್ನು ಕೇಂದ್ರ ಸರ್ಕಾರ ತೋರಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿರುವುದು ಸಹಿಸಲು ಸಾಧ್ಯವಾಗುತ್ತಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ 135 ಸ್ಥಾನ ಗಳಿಸುತ್ತದೆ ಎಂದು ಅವರು ನಿರೀಕ್ಷಿಸಿರಲಿಲ್ಲ. ಬಿಜೆಪಿ ಕೇಂದ್ರಕ್ಕೆ ತಪ್ಪುಚಿತ್ರಣ ನೀಡಿದ್ದರು. ಅದಕ್ಕಾಗಿ ನರೇಂದ್ರ ಮೋದಿಯವರು ಕರ್ನಾಟಕದಲ್ಲಿ ಬದಲಾವಣೆ ಮಾಡಿಬಿಡುತ್ತೇವೆ ಎಂದು ಸಾಕಷ್ಟು ಬಾರಿ ಭೇಟಿ ನೀಡಿದ್ದರು. ಕೇಂದ್ರಕ್ಕೆ ಪುನಃ ಪತ್ರ ಬರೆಯಲಾಗಿದೆ. ಪರಿಹಾರಕ್ಕಾಗಿ ಒತ್ತಾಯ ಮಾಡಲು ಪ್ರಧಾನಮಂತ್ರಿಗಳಿಗೆ ಹಾಗೂ ಗೃಹ ಸಚಿವರಿಗೆ ಪುನಃ ಪತ್ರ ಬರೆಯಲಾಗಿದೆ ಎಂದು ನುಡಿದರು. ಇದನ್ನೂ ಓದಿ: ಭಯಾನಕ ಹವಾಮಾನ ಘಟನೆ, ಭಯೋತ್ಪಾದಕ ದಾಳಿಗಳಲ್ಲಿ ಹೆಚ್ಚಳ: 2024 ಕ್ಕೆ ಬಾಬಾ ವಂಗಾ ಭವಿಷ್ಯವಾಣಿ
ಬಿಜೆಪಿಗೆ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ:
ಬಿಜೆಪಿ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಶಾಸಕರು ಇಲ್ಲಿ ಪ್ರವಾಸ ಮಾಡಿ ಏನು ಮಾಡುತ್ತಾರೆ? ಅವರಿಗೆ ಕರ್ನಾಟಕದ ರೈತರ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ದೆಹಲಿಗೆ ತೆರಳಿ ಹಣ ಬಿಡುಗಡೆ ಮಾಡಿಸಲಿ ಎಂದರು.
ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ:
ಇಲ್ಲಿಯ ತನಕ ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕಿಸುತ್ತಿದ್ದ ಮೋದಿ ಅವರು ಪಂಚ ರಾಜ್ಯಗಳ ಚುನಾವಣೆಯಲ್ಲಿ ಆಶ್ವಾಸನೆ ಕೊಡುತ್ತಿರುವ ಬಗ್ಗೆ ಮಾತನಾಡಿ ರಾಜಕೀಯವಾಗಿ ಟೀಕೆ ಮಾಡಿದ್ದಾರೆ. ರಾಜ್ಯ ದಿವಾಳಿಯಾಗುತ್ತದೆ, ಕೊಡಲಾಗುವುದಿಲ್ಲ ಎಂದು ರಾಜಕೀಯವಾಗಿ ಹೇಳಿದ್ದಾರೆ. ಬಡವರಿಗೆ ಗ್ಯಾರಂಟಿ ಯೋಜನೆ ನೀಡುವುದು ಟೀಕಿಸುವ ವಿಚಾರವಲ್ಲ. ಅವರು ಗ್ಯಾರಂಟಿಗಳನ್ನು ಕೊಟ್ಟರೆ ಅದು ಬಡವರ ಕಾರ್ಯಕ್ರಮ. ನಾವು ನೀಡಿದರೆ ರಾಜ್ಯ ದಿವಾಳಿಯಾಗುತ್ತದೆ ಎನ್ನುತ್ತಾರೆ. ಅವರೇನೇ ಹೇಳಿದರೂ ನಾವು ಬಡವರ, ಸಾಮಾನ್ಯ ಜನರ, ಹಳ್ಳಿಗಾಡಿನ, ಎಲ್ಲಾ ಜಾತಿಯ ಬಡವರ ಪರವಾಗಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ತೀವ್ರ ಸ್ಥಿತಿಯಲ್ಲಿ ಗಾಳಿ ಗುಣಮಟ್ಟ – ನ.10 ರವರೆಗೆ ದೆಹಲಿಯ ಪ್ರಾಥಮಿಕ ಶಾಲೆಗಳು ಕ್ಲೋಸ್
ಬಿಜೆಪಿ, ಜೆಡಿಎಸ್ ಹತಾಶರಾಗಿದ್ದಾರೆ:
ಮುಖ್ಯಮಂತ್ರಿಗಳ ಕುರ್ಚಿ ಇವತ್ತು ನಾಳೆ ಬೀಳಲಿದೆ ಎಂದು ಬಿಜೆಪಿ, ಜೆಡಿಎಸ್ ಹೇಳಿಕೆ ನೀಡುತ್ತಿರುವ ಬಗ್ಗೆ ಮಾತನಾಡಿ, ಅವರು ಹತಾಶರಾಗಿದ್ದಾರೆ. ಅವರು ಸರ್ಕಾರ ರಚಿಸುವುದಾಗಿ ಭಾವಿಸಿದ್ದರು. ಅದಾಗದೆ ಇದ್ದುದರಿಂದ ಹತಾಶರಾಗಿದ್ದಾರೆ ಎಂದರು.
ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಲು ಮಂತ್ರಿಗಳಿಗೆ ಸೂಚನೆ:
ಸಿಎಂ ಕುರ್ಚಿ ಬಗ್ಗೆ ಬಿಜೆಪಿ ಚರ್ಚೆ ಮಾಡುತ್ತಿದ್ದಾರೆ. ನಮ್ಮ ಶಾಸಕರು, ಸಚಿವರು ಈ ಬಗ್ಗೆ ಮಾತನಾಡಕೂಡದು ಎಂದು ತಿಳಿಸಲಾಗಿದೆ. ಲೋಕಸಭೆ ಚುನಾವಣೆ ಬಗ್ಗೆ ಚರ್ಚೆ ಮಾಡಲಾಗಿದ್ದು, ಇನ್ನು ಮುಂದೆ ಮುಖ್ಯಮಂತ್ರಿಗಳ ಸ್ಥಾನದ ಬಗ್ಗೆ ಮಾತನಾಡಬಾರದು. ಏನಿದ್ದರೂ ನಿಮ್ಮ ಕ್ಷೇತ್ರಗಳ ಸಾಧನೆಗಳ ಬಗ್ಗೆ ಮಾತನಾಡಿ ಎಂದು ಸೂಚಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ನಾಳೆಯೇ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳಾದರೆ ತಮ್ಮ 17 ಶಾಸಕರ ಬೆಂಬಲ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಅದು ವ್ಯಂಗ್ಯವಾಗಿ ಹೇಳಿರುವುದು. ಕುಮಾರಸ್ವಾಮಿ ಅವರಿಗೆ ವ್ಯಂಗ್ಯವಾಗಿ ಹೇಳುವುದೂ ಬರುತ್ತದೆ ಎನ್ನುವುದೇ ನಮಗೆ ಖುಷಿ ಎಂದರು. ಮೊದಲು ಎನ್‌ಡಿಎ ಬಿಟ್ಟು ಹೊರಬರಲಿ ಎಂದಿದ್ದರು ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಆಗಿ ಹುಟ್ಟಿದ್ದೇನೆ ಹಿಂದೂ ಆಗೇ ಸಾಯುತ್ತೇನೆ: ಸಿ.ಟಿ ರವಿ
ಈಶ್ವರಪ್ಪ ಸವಕಲು ನಾಣ್ಯ:
ಕಾಂತರಾಜು ವರದಿ ಸುಟ್ಟುಹಾಕಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕಾಂತರಾಜು ವರದಿ ಜಾರಿಮಾಡಿ ಎಂದು ಈಶ್ವರಪ್ಪ ಭಾಷಣ ಮಾಡಿದ್ದರು. ಅವರ ಮಾತಿಗೆ ಬೆಲೆ ಇದೆಯೇ? ಅವರೆಲ್ಲಾ ಸವಕಲು ನಾಣ್ಯಗಳು. ಬಿಜೆಪಿಯಲ್ಲಿಯೇ ಅವರು ಸವಕಲು ನಾಣ್ಯ ಎಂದು ಟಿಕೆಟ್ ನೀಡಿಲ್ಲ. ಅವರ ಮಾತುಗಳಿಗೆ ಏನು ಬೆಲೆ ಇದೆ? ವರದಿ ನೀಡಿದರೆ ಅದನ್ನು ಸ್ವೀಕರಿಸುತ್ತೇವೆ ಎಂದರು. ವರದಿಯಲ್ಲಿ ಏನಿದೆ ಎಂದು ನಮಗೆ ತಿಳಿದಿಲ್ಲ ಎಂದರು. ಇದನ್ನೂ ಓದಿ: ಡಿಕೆಶಿ ಸಿಎಂ ಆಗೋಕೆ ಕುಮಾರಸ್ವಾಮಿ ಬೆಂಬಲ ಕೊಡೋದಾದ್ರೆ ಕೊಡಲಿ: ಪರಮೇಶ್ವರ್ ಲೇವಡಿ
ಮಂಗಳೂರು: ಇಸ್ರೇಲ್‌ನಲ್ಲಿ (Israel) ಕರಾವಳಿಯ (Karavali) ಐದು ಸಾವಿರಕ್ಕೂ ಅಧಿಕ ಮಂದಿ ಇದ್ದಾರೆ. ಈಗಾಗಲೇ ವಿದೇಶಾಂಗ ಇಲಾಖೆ ಸಚಿವರಿಗೆ (Minister of External Affairs) ಪತ್ರ (Letter) ಬರೆದು ಯಾರಿಗೂ ಅಪಾಯ ಆಗದಂತೆ ರಕ್ಷಣೆ ಒದಗಿಸಲು ವಿನಂತಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ (Mangaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಸ್ರೇಲ್‌ನಲ್ಲಿರುವ ಎಲ್ಲರನ್ನೂ ಸುರಕ್ಷಿತವಾಗಿ ಕರೆ ತರುವ ಕೆಲಸ ನಮ್ಮ ಕೇಂದ್ರ ಸರ್ಕಾರ ಮಾಡಲಿದೆ. ಈಗಾಗಲೇ ಸಚಿವ ಮುರಳೀಧರನ್ ಅವರೊಂದಿಗೂ ಮಾತನಾಡಿದ್ದೇನೆ. ಯುದ್ಧದ ಪರಿಸ್ಥಿತಿ ಇರುವಾಗ ಅವರ ಮನೆಯವರಿಗೆ ಭಯದ ವಾತಾವರಣ ಇರುತ್ತದೆ. ಈಗಲೂ ಇಸ್ರೇಲ್‌ನಲ್ಲಿ ಸುರಕ್ಷಿತವಾಗಿ ಇದ್ದರೂ ಭಯದ ವಾತಾವರಣ ಇದೆ ಎಂದು ಹೇಳಿದರು. ಇದನ್ನೂ ಓದಿ: ಎಮರ್ಜೆನ್ಸಿ ಅಲರ್ಟ್- ಲಕ್ಷಾಂತರ ಫೋನ್‌ಗಳಿಗೆ ಸರ್ಕಾರದಿಂದ ಬಂತು ಮೆಸೇಜ್
ರಷ್ಯಾ-ಉಕ್ರೇನ್ ಯುದ್ಧ ಆದಾಗಲೂ ಇದೇ ಪರಿಸ್ಥಿತಿ ಇತ್ತು. ಆಗಲೂ ಎಲ್ಲರ ಮನೆಗೆ ತೆರಳಿ ಸಮಾಧಾನ ಹೇಳಿದ್ದೇವೆ. ಮೋದಿ ಸರ್ಕಾರ ಆಗಲೂ ಅಲ್ಲಿದ್ದವರ ರಕ್ಷಣೆ ಮಾಡಿತ್ತು. ಈಗಲೂ ನಾನು ರಾಯಭಾರಿ ಕಚೇರಿ ಜೊತೆಗೆ ಸಂಪರ್ಕದಲ್ಲಿದೇನೆ. ಯಾರೂ ಭಯ ಪಡುವ ಅಗತ್ಯ ಇಲ್ಲ. ಏನೇ ಆತಂಕ ಇದ್ದರೂ ನನ್ನನ್ನು ನೇರವಾಗಿ ಸಂಪರ್ಕಿಸಿ ಎಂದರು. ಇದನ್ನೂ ಓದಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ದಂಪತಿ ಸಾವು- ಅನಾಥವಾದ ವೃದ್ಧಾಶ್ರಮ