Tag: letter

  • ಸ್ಮಾರ್ಟ್ ಸಿಟಿ 15 ಕೋಟಿ ರೂ.ಹಣ ಕಸಾಯಿಖಾನೆಗೆ -ಪ್ರಧಾನಿ ಮೋದಿಗೆ ಖಾದರ್ ಪತ್ರ

    ಸ್ಮಾರ್ಟ್ ಸಿಟಿ 15 ಕೋಟಿ ರೂ.ಹಣ ಕಸಾಯಿಖಾನೆಗೆ -ಪ್ರಧಾನಿ ಮೋದಿಗೆ ಖಾದರ್ ಪತ್ರ

    ಮಂಗಳೂರು: ಕಸಾಯಿಖಾನೆಗೆ 15 ಕೋಟಿ ರೂ. ಅನುದಾನ ನೀಡಿದ ವಿವಾದ ವಿಚಾರವಾಗಿ ಸ್ಪಷ್ಟನೆ ನೀಡಿ ನಗರಾಭಿವೃದ್ಧಿ ಸಚಿವ ಯು.ಟಿ ಖಾದರ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವಾಗಿ ತಿಳಿಸಿದ್ದಾರೆ.

    ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಕಸಾಯಿಖಾನೆಗೆ ನೀಡಿರುವ ಅನುದಾನವನ್ನು ಸುಖಸುಮ್ಮನೆ ವಿವಾದ ಮಾಡಲಾಗಿದೆ. ಇದು ತಮ್ಮ ಮನಸ್ಸಿಗೆ ತುಂಬಾ ನೋವುಂಟು ಮಾಡಿದೆ. ಅದ್ದರಿಂದ ಈ ಕುರಿತು ಸ್ಪಷ್ಟನೆ ನೀಡಿ ಪ್ರಧಾನ ಮಂತ್ರಿ ಮತ್ತು ಕೇಂದ್ರ ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆಯುತ್ತೇನೆ. ಅಲ್ಲಿಂದ ಬರುವ ಪತ್ರಿಕ್ರಿಯೆ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಯು.ಟಿ ಖಾದರ್ ತಿಳಿಸಿದ್ದಾರೆ.

    ನಗರದಲ್ಲಿ ಇರುವ ಕುರಿ, ಆಡು ಕಸಾಯಿಖಾನೆಗೆ ನೀಡುವಂತೆ ನಗರ ಸ್ವಚ್ಛತೆಯ ದೃಷ್ಟಿಯಿಂದ ಅನುದಾನ ಬಿಡುಗಡೆ ಮಾಡಲು ಶಿಫಾರಸ್ಸು ಮಾಡಿದ್ದೇವು. ಆದರೆ ಈ ಕುರಿತು ಚುನಾಯಿತ ಜನಪತ್ರಿನಿಧಿಗಳು, ಕೆಲ ಸಂಸ್ಥೆಗಳು ವಿವಾದ ಉಂಟಾಗಿತ್ತು. ಇದರಿಂದ ಜನರ ನಡುವೆಯೂ ವೈಮನಸ್ಸು ಹೆಚ್ಚಾಗುವುದಕ್ಕೆ ಅವಕಾಶ ಇದೆ. ಅದ್ದರಿಂದ ಪ್ರಧಾನಿ ಮೋದಿ ಅವರಿಂದ ಬರುವ ಉತ್ತರದಂತೆ ಮುಂದೆ ಕ್ರಮಕೈಕೊಳ್ಳುತ್ತೇನೆ. ಈ ವಿವಾದದ ಕುರಿತು ಮತ್ತೆ ಯಾರು ಆರೋಪ, ಪ್ರತ್ಯಾರೋಪ ಮಾಡುವುದು ಬೇಡ ಎಂದು ಮನವಿ ಮಾಡಿದರು.

    ಕಸಾಯಿಖಾನೆಗೆ ಹಣ ಮಂಜೂರು ಮಾಡಲು ಅನುಮತಿ ಕೋರಿ ಮಾತ್ರ ಶಿಫಾರಸ್ಸು ಪತ್ರ ಬರೆಯಲಾಗಿದೆ. ಸ್ವಚ್ಛತೆ ದೃಷ್ಟಿಯಿಂದ ಅನಿವಾರ್ಯವಾಗಿದ್ದು, ಕೆಲವರು ಕಸಾಯಿಖಾನೆ ಬದಲಿಗೆ ಗೋಶಾಲೆಗೆ ಕೊಡಿ ಎಂದು ಬೇಡಿಕೆ ಇಟ್ಟಿದ್ದಾರೆ. ಅದಕ್ಕೆ ನನ್ನ ಸಹಮತ ಇದೆ. ಆದರೆ ಅದಕ್ಕೆ ಅವಕಾಶ ಇದೆಯಾ ಎಂದು ಸ್ಪಷ್ಟನೆ ಬಯಸಿದ್ದೇನೆ. ಈ ಕುರಿತು ಯಾರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸುವುದು ಬೇಡ. ಅದ್ದರಿಂದಲೇ ನಾನು ಈ ಕ್ರಮಕ್ಕೆ ಮುಂದಾಗಿದ್ದೇನೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವುದು ನಮ್ಮ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಈ ಚರ್ಚೆ ಇಲ್ಲಿಗೆ ಮುಗಿಯಬೇಕು: ಅಭಿಮಾನಿಗಳಿಗೆ ಸುದೀಪ್ ಪತ್ರ

    ಈ ಚರ್ಚೆ ಇಲ್ಲಿಗೆ ಮುಗಿಯಬೇಕು: ಅಭಿಮಾನಿಗಳಿಗೆ ಸುದೀಪ್ ಪತ್ರ

    ಬೆಂಗಳೂರು: ಮದಕರಿ ನಾಯಕನ ಚಿತ್ರದ ಕುರಿತಾಗಿ ಎದ್ದಿರುವ ಚರ್ಚೆಯನ್ನು ನಿಲ್ಲಿಸುವಂತೆ ಕಿಚ್ಚ ಸುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಗೂಗಲ್ ಪ್ಲಸ್ ನಲ್ಲಿ ಅಭಿಮಾನಿಗಳಿಗೆ ಪತ್ರ ಬರೆದು ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

    ವಿಷಯ ಸರಳವಾಗಿದೆ. ರಾಕ್ ಲೈನ್ ವೆಂಕಟೇಶ್ ಅವರು ತಮಗೆ ಇಷ್ಟವಿರುವ ಸಿನಿಮಾ ಮಾಡುತ್ತಿದ್ದಾರೆ. ನಾನು ಇಷ್ಟಪಟ್ಟು ಕನಸು ಕಂಡು ಮಾಡಬೇಕೆಂದಿರುವ ಸಿನಿಮಾ ನಾನು ಮುಂದುವರೆಸುತ್ತೇನೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಷಯ ಇಲ್ಲಿಗೆ ಮುಗಿಯಬೇಕು. ಮುಗಿಯದ ಚರ್ಚೆಗಳಿಂದ ಏನೂ ಪ್ರಯೋಜನವಿಲ್ಲ ಎಂದು ಸುದೀಪ್ ಬರೆದುಕೊಂಡಿದ್ದಾರೆ. ಇದನ್ನು ಓದಿ: ಸ್ಯಾಂಡಲ್‍ವುಡ್‍ನಲ್ಲಿ ಜಾತಿ ಜಗಳ – ವೀರ ಮದಕರಿ ಸಿನಿಮಾಗೆ ಮತ್ತೊಂದು ಸಂಕಷ್ಟ!

    ಪತ್ರದಲ್ಲಿ ಏನಿದೆ?
    ಈಗ ಚಾನೆಲ್ಲುಗಳು ಹಾಗೂ ವೇದಿಕೆಗಳಲ್ಲಿ ಚರ್ಚೆಯ ವಿಷಯವಾಗಿರುವ ವಸ್ತು, ಚರ್ಚೆ ಮಾಡುವುದಕ್ಕಾಗಿಯೇ ಹುಟ್ಟಿಕೊಂಡಿರುವಂತಿದೆ. ವಿಷಯ ಸರಳವಾಗಿದೆ. ರಾಕ್ ಲೈನ್ ವೆಂಕಟೇಶ್ ಅವರು ತಮಗೆ ಇಷ್ಟವಿರುವ ಸಿನಿಮಾ ಮಾಡುತ್ತಿದ್ದಾರೆ. ನಾನು ಇಷ್ಟಪಟ್ಟು ಕನಸು ಕಂಡು ಮಾಡಬೇಕೆಂದಿರುವ ಸಿನಿಮಾ ನಾನು ಮುಂದುವರೆಸುತ್ತೇನೆ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಷಯ ಇಲ್ಲಿಗೆ ಮುಗಿಯಬೇಕು. ಮುಗಿಯದ ಚರ್ಚೆಗಳಿಂದ ಏನೂ ಪ್ರಯೋಜನವಿಲ್ಲ. ಇದನ್ನು ಓದಿ: ಒಂದೇ ಕತೆಯ ಸಿನಿಮಾದಲ್ಲಿ ದರ್ಶನ್, ಸುದೀಪ್- ಅಭಿಮಾನಿಗಳಿಗೆ ಪತ್ರ ಬರೆದ ಕಿಚ್ಚ

    ಎಲ್ಲರ ಅಭಿಪ್ರಾಯ, ಆಸೆಗಳು ಹಾಗೂ ಚಿಂತನೆಗಳನ್ನು ಗೌರವಿಸುತ್ತ ಈ ವಿಷಯದ ಬಗೆಗಿನ ಚರ್ಚೆ ಇಲ್ಲಿಗೆ ತಿಳಿಯಾಗಲಿ. ಕ್ರಿಯಾಶೀಲ ಕೆಲಸಗಳಲ್ಲಿ ಎಂದೂ ಜಾತಿಯ ಯೋಚನೆಗಳು ಬರುವುದಿಲ್ಲ, ಬರಕೂಡದು. ಸ್ವಾಮೀಜಿಗಳು, ರಾಕ್ ಲೈನ್ ವೆಂಕಟೇಶ್ ರವರು ಹಾಗು ಚಾನೆಲ್ ರವರ ಅಭಿಪ್ರಾಯಗಳನ್ನು ಗೌರವಿಸುತ್ತೇನೆ. ಆದರೆ ಇದು ನನಗೆ ಚರ್ಚೆಯ ವಿಷಯವೇ ಅಲ್ಲ. ನನ್ನ ಹಿಂದಿನ ಪತ್ರದಲ್ಲೂ ಇದನ್ನು ಸ್ಪಷ್ಟಪಡಿಸಿದ್ದೇನೆ. ಇದನ್ನು ಓದಿ: ವೀರ ಮದಕರಿ ಕಿಚ್ಚ ವೀರ ಸಿಂಧೂರ ಲಕ್ಷ್ಮಣನಾಗೋ ಸೂಚನೆ!

    ಸಿನಿಮಾ ಮಾಡುವುದೇ ಪ್ರೇಕ್ಷಕರಿಗಾಗಿ. ಎರಡೂ ಸಿನಿಮಾಗಳನ್ನು ಅವರಿಗೆ ಕೊಡುಗೆ ಕೊಡೋಣ. ಎರಡೂ ಚಿತ್ರಗಳು ಚರಿತ್ರೆಯ ಆ ಮಹಾಪುರುಷನಿಗೆ ಗೌರವ ಸಲ್ಲಿಸಲಿ. ಈಗ ನಡೆಯುತ್ತಿರುವ ಚರ್ಚೆಗಳಿಗಿಂತ ಏರಡು ಚಿತ್ರಗಳು ಮಾಡಿ ಅವರಿಗೆ ಗೌರವಿಸೋಣ.

    ಗಮನ ಹರಿಸಲು ಇದಕ್ಕಿಂತ ಮುಖ್ಯವಾಗಿ ಸಾಮಾನ್ಯ ಜನರ ಸಮಸ್ಯೆಗಳು ಬಹಳಷ್ಟಿವೆ. ಇದಕ್ಕೆ ಹರಿಬಿಟ್ಟ ಶಕ್ತಿ ಹಾಗು ಶ್ರಮ ಆ ಸಮಸ್ಯೆಗಳಿಗೆ ವ್ಯಯಿಸಿದರೆ ಎಲ್ಲರ ಜೀವನವು ಸ್ವಲ್ಪವಾದರೂ ಹಸನಾದೀತು. ಯೋಚನೆಗಳು ಯಾವಾಗಲೂ ಜನಪರವಾಗಿರಲೆಂದು ನನ್ನ ಈ ಎರಡು ಮಾತುಗಳೇ ಹೊರತು ಯಾರ ಮನಸನ್ನು ನೋಯಿಸಲು ಅಲ್ಲ. ಇದನ್ನು ಓದಿ: ಒಂದೇ ಕತೆಯ ಸಿನಿಮಾದಲ್ಲಿ ದಚ್ಚು, ಕಿಚ್ಚ- ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಹೇಳಿದ್ದೇನು?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಿಎಸ್‍ವೈಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಗಾದಿಯಿಂದ ಕೆಳಗಿಳಿಸಿ- ಅಮಿತ್ ಶಾಗೆ ಕಾರ್ಯಕರ್ತನಿಂದ ಪತ್ರ

    ಬಿಎಸ್‍ವೈಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಗಾದಿಯಿಂದ ಕೆಳಗಿಳಿಸಿ- ಅಮಿತ್ ಶಾಗೆ ಕಾರ್ಯಕರ್ತನಿಂದ ಪತ್ರ

    ಬೀದರ್: ಬಿ.ಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಗಾದಿಯಿಂದ ಕೆಳಗಿಳಿಸುವಂತೆ ಭಾಲ್ಕಿಯ ಕಮಲ ಕಾರ್ಯಕರ್ತರೊಬ್ಬರು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದಾರೆ.

    ಭರತ್ ಖಂಡ್ರೆ ಪತ್ರ ಬರೆದಿದ್ದು, ರಾಜ್ಯದಲ್ಲಿ ಬಿಜೆಪಿ ಆಡಳಿತಕ್ಕೆ ಬಾರದೇ ಇರುವುದಕ್ಕೆ ಯಡಿಯೂರಪ್ಪನವರೇ ಕಾರಣ ಅಂತ ಪತ್ರದಲ್ಲಿ ದೂರಿದ್ದಾರೆ. ರಾಜ್ಯದಲ್ಲಿ ಅಮಿತ್ ಶಾ ಹಾಕಿದ್ದ ಮಿಷನ್ 150 ಸಫಲವಾಗುವ ಎಲ್ಲ ಸಾಧ್ಯತೆಗಳಿದ್ದವು. ಆದರೆ ಕೆಜೆಪಿಯಿಂದ ಬಂದವರಿಗೆ ಟಿಕೆಟ್ ನೀಡಿದ್ದರಿಂದ ಬಿಜೆಪಿ ಅಧಿಕಾರದಿಂದ ವಂಚಿತವಾಯಿತು. ಅಲ್ಲದೇ ಜಿಲ್ಲೆಯಲ್ಲಿ ಕಮಲ ಪಕ್ಷ ಸಂಪೂರ್ಣ ನೆಲಕಚ್ಚಿದೆ ಎಂದು ಆರೋಪಿಸಿದ್ದಾರೆ.

    ಜಿಲ್ಲೆಯಲ್ಲಿ 5 ಸಾಮಾನ್ಯ ಕ್ಷೇತ್ರಗಳಿದ್ದು, ವಿಧಾನಸಭಾ ಚುನಾವಣೆಯಲ್ಲಿ ಒಂದು ಸೀಟು ಗೆಲ್ಲಲು ಆಗಿಲ್ಲ. ಪ್ರಧಾನಿ ಮೋದಿ ಯೋಗಿ ಆದಿತ್ಯನಾಥ್ ಬಂದರೂ ಅದು ಫಲಿಸಿಲ್ಲ. ಜಿಲ್ಲೆಯಲ್ಲಿ ಮೋದಿ ಅಭಿಮಾನಿಗಳ ಸಂಖ್ಯೆ ಜಾಸ್ತಿ ಇದ್ದರೂ ಯಡಿಯೂರಪ್ಪನವರ ಬಂಟರಿಂದಲೇ ಪಕ್ಷ ಪತನದತ್ತ ಸಾಗುತ್ತಿದೆ. ಹೀಗಾಗಿ ಕೂಡಲೇ ಬಿಎಸ್‍ವೈ ಅವರನ್ನು ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿದ್ದಾರೆ.

    ಈಗಾಗಲೇ ಯಡಿಯೂರಪ್ಪ ಅಪರೇಶನ್ ಕಮಲದ ಮೂಲಕ ಸಿಎಂ ಆಗಲು ಹೊರಟಿರುವಾಗ ಬಿಜೆಪಿ ಕಾರ್ಯಕರ್ತ ಈ ರೀತಿ ಪತ್ರ ಬರೆದಿರುವುದು ಎಲ್ಲರ ಅಚ್ಚರಿಗೆ ಕಾರಣವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪಾಸ್ ಮಾಡಮ್ಮ, ನೀನು ಮಾಡಿದ್ರೆ ಆಗುತ್ತದೆ ಮಾಡುತಾಯಿ: ಹುಂಡಿಯಲ್ಲಿ ಸಿಕ್ತು ವಿದ್ಯಾರ್ಥಿಯ ಪತ್ರ

    ಪಾಸ್ ಮಾಡಮ್ಮ, ನೀನು ಮಾಡಿದ್ರೆ ಆಗುತ್ತದೆ ಮಾಡುತಾಯಿ: ಹುಂಡಿಯಲ್ಲಿ ಸಿಕ್ತು ವಿದ್ಯಾರ್ಥಿಯ ಪತ್ರ

    ದಾವಣಗೆರೆ: ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ಅನುಗ್ರಹಿಸು ಎಂದು ಕಾನೂನು ಪದವಿ ಓದುತ್ತಿರುವ ವಿದ್ಯಾರ್ಥಿ ಬರೆದ ಪತ್ರವೊಂದು ತಾಲೂಕಿನ ಮಾರಿಕೊಪ್ಪದ ಹಳದಮ್ಮ ದೇವಿ ದೇವಸ್ಥಾನದ ಹುಂಡಿಯಲ್ಲಿ ಸಿಕ್ಕಿದೆ.

    ಹಳದಮ್ಮ ದೇವಿ ದೇವಸ್ಥಾನದ ಹುಂಡಿಯಲ್ಲಿ ಸಂಗ್ರಹವಾದ ಹಣವನ್ನು ಎಣಿಕೆ ಮಾಡುವ ವೇಳೆ ಈ ಪತ್ರ ಸಿಕ್ಕಿದೆ. ಓಂ ಹಳದಮ್ಮ ನಮಃ ಎಂದು ಶ್ಲೋಕದ ಮೂಲಕ ಪತ್ರ ಪ್ರಾರಂಭವಾಗಿದ್ದು, ದೇವರೇ ಎಲ್‍ಎಲ್‍ಬಿ ಎಲ್ಲ ಪರೀಕ್ಷೆಯು ಪಾಸ್ ಆಗಿಲ್ಲ. ನೀನೆ ಪಾಸ್ ಮಾಡಮ್ಮಾ, ಪಾಸ್ ಮಾಡಬೇಕು. ನೀನು ಮಾಡಿದರೆ ಆಗುತ್ತದೆ ಮಾಡುತಾಯಿ. ನನ್ನಾಸೆಯಂತೆ ಕಾರ್ಯ ನಡೆಸಮ್ಮ ಎಂದು ಬರೆದು ಹುಂಡಿಯಲ್ಲಿ ಹಾಕಲಾಗಿದೆ.

    ಎಣಿಕೆ ವೇಳೆ 9,61,400 ರೂ. ನಗದು, 10 ಲಕ್ಷ ರೂ. ಮೌಲ್ಯದ ಬಂಗಾರ, 10 ಸಾವಿರ ರೂ. ಮೌಲ್ಯದ ಬೆಳ್ಳಿ ಆಭರಣ ಸಿಕ್ಕಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮೇಕೆದಾಟು ಯೋಜನೆಗೆ ಅನುಮತಿ ನೀಡ್ಬೇಡಿ: ಕೇಂದ್ರಕ್ಕೆ ತಮಿಳುನಾಡು ಕ್ಯಾತೆ

    ಮೇಕೆದಾಟು ಯೋಜನೆಗೆ ಅನುಮತಿ ನೀಡ್ಬೇಡಿ: ಕೇಂದ್ರಕ್ಕೆ ತಮಿಳುನಾಡು ಕ್ಯಾತೆ

    ಬೆಂಗಳೂರು: ರಾಜ್ಯದ ಯೋಜನೆ ವಿಚಾರದಲ್ಲಿ ಮತ್ತೆ ತಮಿಳುನಾಡು ಕಾಲು ಕೆದರಿಕೊಂಡು ಜಗಳಕ್ಕೆ ಬಂದಿದೆ. ಕರ್ನಾಟಕದ ಮೇಕೆದಾಟು ಯೋಜನೆಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದೆಂದು ತಮಿಳುನಾಡು ಸರ್ಕಾರ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವ ಮೂಲಕ ಅಡ್ಡಗಾಲು ಹಾಕಿದೆ.

    ಕರ್ನಾಟಕ ರಾಜ್ಯ ಕಾವೇರಿ ನದಿಗೆ ರೂಪಿಸಲು ಹೊರಟಿರುವ ಮೇಕೆದಾಟು ಅಣೆಕಟ್ಟು ನಿರ್ಮಾಣ ಯೋಜನೆಗೆ ಅವಕಾಶ ನೀಡಬಾರದೆಂದು ತಮಿಳುನಾಡು ಮುಖ್ಯಮಂತ್ರಿ ಸಿಎಂ ಯಡಪ್ಪಾಡಿ ಪಳನಿಸ್ವಾಮಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದಾರೆ. ಈ ಕುರಿತು ಎರಡು ಪುಟಗಳ ಪತ್ರ ಬರೆದಿರುವ ಅವರು, ಮೇಕೆದಾಟು ಯೋಜನೆ ಸಂಬಂಧ ಕರ್ನಾಟಕ ಮಾಡಿರುವ ಮನವಿಯನ್ನು ತಿರಸ್ಕರಿಸಬೇಕು. ಹೊಸ ಯೋಜನೆಗಳಿಗೂ ಮುನ್ನ ಹಂಚಿಕೆಯಾಗಿರುವ ನೀರನ್ನು ಸಮಗ್ರವಾಗಿ ಹರಿಯುವಂತೆ ಮಾಡಬೇಕೆಂದು ಪತ್ರದಲ್ಲಿ ಬರೆದಿದ್ದಾರೆ.

     

    ಮೇಕೆದಾಟು ಯೋಜನೆ ಮೂಲಕ ಕಾವೇರಿ ನದಿಯ ನೈಸರ್ಗಿಕ ಹರಿವಿಗೆ ಕರ್ನಾಟಕ ಅಡ್ಡಗಾಲು ಹಾಕುತ್ತಿದೆ. ಈ ಯೋಜನೆಯಿಂದ ಲಕ್ಷಾಂತರ ತಮಿಳುನಾಡಿನ ರೈತರ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಯೋಜನೆಯ ಮನವಿಯನ್ನು ತಿರಸ್ಕರಿಸುವಂತೆ ಕೇಂದ್ರ ಜಲಸಂಪನ್ಮೂಲ ಇಲಾಖೆಗೆ ನಿರ್ದೇಶಿಸುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಪ್ರಧಾನಿ ಮೋದಿಯವರಿಗೆ ಪತ್ರ ಬರೆಯುವ ಮೂಲಕ ಕರ್ನಾಟಕದ ಮೇಕೆದಾಟು ಯೋಜನೆಗೆ ಪ್ರಾರಂಭದಲ್ಲೇ ತಮಿಳುನಾಡು ಖ್ಯಾತೆ ತೆಗೆದಿದ್ದು, ಕೇಂದ್ರ ಸರ್ಕಾರ ಎರಡೂ ರಾಜ್ಯಗಳ ಮನವಿಯನ್ನು ಹೇಗೆ ಬಗೆಹರಿಸುತ್ತದೆ ಎಂಬುದು ಸದ್ಯದ ಕುತೂಹಲಕಾರಿ ವಿಷಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಾಂಜಾ ಸಾಂಗ್ – ಚಂದನ್ ಶೆಟ್ಟಿಗೆ ಬಿಗ್ ರಿಲೀಫ್

    ಗಾಂಜಾ ಸಾಂಗ್ – ಚಂದನ್ ಶೆಟ್ಟಿಗೆ ಬಿಗ್ ರಿಲೀಫ್

    ಬೆಂಗಳೂರು: ಗಾಂಜಾ ಹಾಡಿನಿಂದ ಮಾದಕ ವಸ್ತುಗಳ ಸೇವನೆ ಪ್ರಚೋದನೆ ನೀಡಿದ ಆರೋಪದಡಿ ಬಿಗ್ ಬಾಸ್ ಖ್ಯಾತಿಯ ಚಂದನ್ ಶೆಟ್ಟಿಯನ್ನ ಸಿಸಿಬಿ ವಿಚಾರಣೆ ನಡೆಸಿತ್ತು. ಈಗ ಈ ಪ್ರಕರಣದಲ್ಲಿ ಚಂದನ್ ಶೆಟ್ಟಿ ಬಿಗ್ ರಿಲೀಫ್ ಸಿಕ್ಕಿದೆ.

    ಮಹಿಳೆ ಮತ್ತು ಮಾದಕ ದ್ರವ್ಯದಳ ತನಿಖಾಧಿಕಾರಿ ಬಿ.ಎಸ್ ಮೋಹನ್ ಕುಮಾರ್ ಅವರು ಚಂದನ್ ಗೆ ಹಿಂಬರಹ ಪತ್ರವನ್ನು ಬರೆದಿದ್ದಾರೆ. ಪತ್ರದ ಮೂಲಕ ತಮ್ಮ ವಿಚಾರಣೆ ಮುಗಿದಿದ್ದು, ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಿಚಾರಣೆಗೆ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಈ ಮೂಲಕ ಗಾಂಜಾ ಹಾಡಿನ ಮೂಲಕ ಸಂಕಷ್ಟಕ್ಕೆ ಸಿಲುಕಿದ್ದ ಚಂದನ್ ಶೆಟ್ಟಿಗೆ ರಿಲೀಫ್ ಸಿಕ್ಕಿದಂತಾಗಿದೆ.

    ಪತ್ರದಲ್ಲಿ ಏನಿದೆ?
    “ಈ ಮೂಲಕ ನಿಮಗೆ ತಿಳಿಯಪಡಿಸುವುದೇನೆಂದರೆ, ತಾವು ಅಂತ್ಯ ಎಂಬ ಹೆಸರಿನ ಚಲನಚಿತ್ರದಲ್ಲಿ ಮಾದಕ ವಸ್ತು ಸಂಬಂಧಪಟ್ಟ ಹಾಡನ್ನು ಹಾಡಿದ್ದು, ಈ ಹಾಡಿನಿಂದ ಸಮಾಜಕ್ಕೆ ಕೆಟ್ಟ ಸಂದೇಶ ರವಾನೆಯಾಗುತ್ತದೆ ಎಂಬ ಉದ್ದೇಶದಿಂದ ನಿಮ್ಮನ್ನು ವಿಚಾರಣೆ ಮಾಡಿ, ನಿಮ್ಮ ಹೇಳಿಕೆಯನ್ನು ಪಡೆದು ನಮ್ಮ ವಿಚಾರಣೆಯನ್ನು ಮುಕ್ತಾಯ ಮಾಡಲಾಗಿರುತ್ತದೆ. ಇನ್ನು ಮುಂದೆ ಈ ಸಂಬಂಧ ತಮ್ಮ ವಿಚಾರಣೆಯ ಅವಶ್ಯಕತೆ ಇರುವುದಿಲ್ಲ” ಎಂದು ಬಿ.ಎಸ್. ಮೋಹಲ್ ಕುಮಾರ್ ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಚಂದನ್ ಶೆಟ್ಟಿ ಸಂಗೀತ ಸಂಯೋಜನೆಯ ಅಂತ್ಯ ಸಿನಿಮಾದ ಗಾಂಜಾ ಕಿಕ್ ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸದ್ದು ಮಾಡುತ್ತಿತ್ತು. ಆದರೆ ಗಾಂಜಾ ಕಿಕ್ ಹಾಡಿನಲ್ಲಿ ಮಾದಕ ವಸ್ತುಗಳನ್ನು ಸೇವಿಸುವ ಕುರಿತು ವೈಭವಿಕರಿಸಿ ತೋರಿಸಲಾಗಿದೆ. ಹೀಗಾಗಿ ಖುದ್ದು ಸ್ವಯಂ ದೂರು ದಾಖಲಿಸಿಕೊಂಡಿದ್ದ ಸಿಸಿಬಿ ಪೊಲೀಸರು, ವಿಚಾರಣೆಗೆ ಹಾಜರಾಗುವಂತೆ ಚಂದನ್ ಶೆಟ್ಟಿಗೆ ಸಮನ್ಸ್ ಜಾರಿ ಮಾಡಿದ್ದರು.

    ಚಂದನ್ ಸ್ಪಷ್ಟನೆ
    ನನ್ನದು ಯಾವುದೇ ತಪ್ಪಿಲ್ಲ. ಅಂತ್ಯ ಚಿತ್ರಕ್ಕಾಗಿ ಮುತ್ತು ಎಂಬವರು ಸಾಹಿತ್ಯ ಬರೆದಿದ್ದು, ಕೇವಲ 5 ಸಾವಿರ ರೂ. ಸಂಭಾವನೆಗಾಗಿ ನಾನು ನನ್ನ ಜವಾಬ್ದಾರಿ ಮರೆತು ಸಂಗೀತ ಸಂಯೋಜನೆ ಮಾಡಿ ಹಾಡಿರುವುದಾಗಿ ಸಿಸಿಬಿ ಅಧಿಕಾರಿಗಳಿಗೆ ಮಾಹಿತಿ ನೀಡಿರುವೆ ಎಂದು ತಿಳಿಸಿದ್ದರು.

    ಅದು ನನ್ನ ಪ್ರಾರಂಭದ ಹಂತವಾಗಿತ್ತು. ಕಡಿಮೆ ಸಂಭಾವನೆ ನೀಡಿದರೂ ಹಾಡಬೇಕಾದ ಪರಿಸ್ಥಿತಿ ಇತ್ತು. ಅಂತ್ಯ ಸಿನಿಮಾ ಡ್ರಗ್ಸ್ ವಿಷಯಾಧಾರಿತ ಸಿನಿಮಾ ಆಗಿದ್ದು, ಚಿತ್ರದ ಮೊದಲ ಭಾಗದಲ್ಲಿ ಡ್ರಗ್ಸ್ ಸೇವನೆ, ಅದರಿಂದ ಸಿಗುವ ಮಜಾದ ಬಗ್ಗೆ ಇದೆ. ಆದರೆ ಎರಡನೇ ಭಾಗದಲ್ಲಿ ಡ್ರಗ್ಸ್‍ನಿಂದಾಗುವ ದುಷ್ಪರಿಣಾಮದ ಕಥೆಯಿದೆ. ಸಮಾಜದಲ್ಲಿ ಜಾಗೃತಿ ಮೂಡಿಸುವ ಸಿನಿಮಾ ಆಗಿದ್ದರಿಂದ ನಾನು ಹಾಡಲು ಒಪ್ಪಿಕೊಂಡಿದ್ದೆ. ನಿರ್ಮಾಪಕರಿಗೆ ಹಣಕಾಸಿನ ಸಮಸ್ಯೆಯಾಗಿ ಸಿನಿಮಾ ಬಿಡುಗಡೆ ಆಗಲಿಲ್ಲ. ಹೀಗಾಗಿ ಹಾಡಿನ ಉದ್ದೇಶ ಏನು ಅಂತಾ ಅರ್ಥವಾಗಲಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

    ಯುವಕರು ಯಾವುದೇ ಕಾರಣಕ್ಕೂ ಮಾದಕ ವಸ್ತುಗಳ ಹಿಂದೆ ಹೋಗಬೇಡಿ. ಈ ಪ್ರಕರಣವನ್ನು ಉದಾಹರಣೆಯಾಗಿ ಇಟ್ಟುಕೊಂಡು ಮುಂದೆ ಯಾರೊಬ್ಬರು ಮಾದಕ ವಸ್ತುಗಳ ಸೇವನೆಗೆ ಪ್ರಚೋದನೆ ನೀಡುವ ಹಾಡುಗಳ ನಿರ್ಮಾಣ ಮಾಡಬಾರದು. ಜೊತೆಗೆ ಸಾಮಾಜಿಕ ಜಾಲತಾಣಕ್ಕೆ ಯಾರು ಅಂತ್ಯ ಸಿನಿಮಾ ಚಿತ್ರದ ಹಾಡನ್ನು ಹಾಕಿರುವಿರಿ ಅದನ್ನು ಡಿಲೀಟ್ ಮಾಡಿ ಎಂದು ಚಂದನ್ ಶೆಟ್ಟಿ ಮನವಿ ಮಾಡಿಕೊಂಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=MghU7ApDTBY

  • ಬೆಂಗ್ಳೂರಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡೋರಿಗೆ ಗುಡ್‍ನ್ಯೂಸ್

    ಬೆಂಗ್ಳೂರಿನಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡೋರಿಗೆ ಗುಡ್‍ನ್ಯೂಸ್

    ಬೆಂಗಳೂರು: ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರಿಗೆ ಒಂದು ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ಗಣೇಶ ಹಬ್ಬದ ಪ್ರಯುಕ್ತ ಗಣಪನ ಮೂರ್ತಿ ಪ್ರತಿಷ್ಠಾಪನೆ ಮಾಡುವವರಿಗೆ ಏಕಗಾವಾಕ್ಷಿ ಅಡಿ ನಿರಾಕ್ಷೇಪಣಾ ಪತ್ರ ನೀಡುವಂತೆ ಡಿಸಿಎಂ ಪರಮೇಶ್ವರ್ ಅವರು ಬಿಬಿಎಂಪಿ, ಬೆಸ್ಕಾಂ, ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್ ಕಮಿಷನರ್, ಬಿಬಿಎಂಪಿ ಆಯುಕ್ತರು ಮತ್ತು ಪೊಲೀಸ್ ಇಲಾಖೆಗೆ ಸೂಚನೆ ನೀಡಿ ಪತ್ರ ಬರೆದಿದ್ದಾರೆ.

    ಈ ಹಿಂದೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡುವವರು ಎಲ್ಲಾ ಇಲಾಖೆಗಳಿಗೂ ಪ್ರತ್ಯೇಕವಾಗಿ ಅರ್ಜಿ ಹಾಕಿ ನಿರಾಕ್ಷೇಪಣಾ ಪತ್ರ ಪಡೆಯಬೇಕಿತ್ತು. ಬಿಬಿಎಂಪಿಯ ಎಲ್ಲಾ ವಲಯ ಕಚೇರಿಗಳಲ್ಲಿ ಏಕಗಾವಾಕ್ಷಿ ವ್ಯವಸ್ಥೆ ಅಳವಡಿಸಲು ಡಿಸಿಎಂ ಪರಮೇಶ್ವರ್ ಸೂಚನೆ ನೀಡಿದ್ದಾರೆ. ಈ ಏಕಗಾವಾಕ್ಷಿ ವ್ಯವಸ್ಥೆ ಮಾಡಿದರೆ ಸುಲಭವಾಗಿ ನಾಲ್ಕು ಇಲಾಖೆಗಳ ನಿರಾಕ್ಷೇಪಣಾ ಪತ್ರ ಪಡೆಯಬಹುದಾಗಿದೆ.

    ಪತ್ರದಲ್ಲಿ ಏನಿದೆ?
    ಗಣೇಶೋತ್ಸವ ಸಂದರ್ಭದಲ್ಲಿ ಆಚರಣೆ ಮಾಡಲು ಬೆಂಗಳೂರಿನ ಸಂಘ ಸಂಸ್ಥೆಗಳು ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಬೆಸ್ಕಾಂಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆಯಬೇಕಾಗಿರುತ್ತದೆ. ಈ ಸೌಲಭ್ಯವು ಸಂಘ ಸಂಸ್ಥೆಗಳಿಗೆ ಒಂದೇ ಕಡೆ ದೊರೆಯಲು ಅನುಕೂಲವಾಗುವಂತೆ ಆಯಾ ಇಲಾಖೆಯ ಒಬ್ಬ ನೊಡಲ್ ಅಧಿಕಾರಿಯನ್ನು ಬಿಬಿಎಂಪಿಯ ಎಲ್ಲಾ ವಲಯಗಳ ಜಂಟಿ ಆಯುಕ್ತರ ಕಚೇರಿಗೆ ನಿಯೋಜಿಸಿ, ಏಕ ಗಾವಾಕ್ಷಿಯಡಿಯಲ್ಲಿ ಸೇವೆಯನ್ನು ಒದಗಿಸುವ ವ್ಯವಸ್ಥೆಯನ್ನು ಏರ್ಪಾಡು ಮಾಡಲು ಕೂಡಲೇ ಅಗತ್ಯಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿದ್ದರಾಮಯ್ಯ ಆಯ್ತು ಈಗ ರಾಮಲಿಂಗರೆಡ್ಡಿಯಿಂದ ಎಚ್‍ಡಿಕೆಗೆ ಪತ್ರ

    ಸಿದ್ದರಾಮಯ್ಯ ಆಯ್ತು ಈಗ ರಾಮಲಿಂಗರೆಡ್ಡಿಯಿಂದ ಎಚ್‍ಡಿಕೆಗೆ ಪತ್ರ

    ಬೆಂಗಳೂರು: ಕಳಪೆ ಕಾಮಗಾರಿ ವಿರುದ್ಧ ಮಾಜಿ ಗೃಹ ಸಚಿವ ರಾಮಲಿಂಗರೆಡ್ಡಿ ಅಸಮಾಧಾನ ಹೊರಹಾಕಿದ್ದು, ಈ ಕುರಿತು ತನಿಖೆ ನಡೆಸುವಂತೆ ಸಿಎಂ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ.

    ನಗರೋತ್ಥಾನ ವಿಶೇಷ ಯೋಜನೆ ಅಡಿ ಕೈಗೆತ್ತಿಕೊಂಡಿರುವ 279 ಕೋಟಿ ರೂ. ಮೊತ್ತದ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ. ಗುತ್ತಿಗೆದಾರರು ಹಲವು ಪ್ರದೇಶಗಳಲ್ಲಿ ನಡೆಸಿರುವ ಕಾಮಗಾರಿಗಳು ಕಳಪೆ ಗುಣಮಟ್ಟದಿಂದ ಕೂಡಿದೆ. ಬಿಟಿಎಂ ಲೇಔಟ್ ನ ರಾಜೇಂದ್ರ ನಗರ, ಸಿಲ್ಕ್ ಬೋರ್ಡ್ ಆಫೀಸ್, ಮಡಿವಾಳ ಕೆರೆ, ತಾವರೆಕೆರೆ ಮುಖ್ಯರಸ್ತೆಯ ಕಾಮಗಾರಿಗಳು ನಡೆಯುತ್ತಿದೆ. ಇದರಲ್ಲಿ ರಾಜೇಂದ್ರನಗರದ ಕಾಮಗಾರಿ ಅಲ್ಪ ಪ್ರಮಾಣದಲ್ಲಿ ಮಾತ್ರ ನಿರ್ವಹಿಸಿದ್ದು ಇದರಲ್ಲೂ ಕಳಪೆ ಗುಣಮಟ್ಟದ್ದಾಗಿದೆ ಎಂದು ಪತ್ರದ ಮೂಲಕ ಆರೋಪಿಸಿದ್ದಾರೆ.

    ಸಿಲ್ಕ್ ಬೋರ್ಡ್ ಆಫೀಸ್, ಮಡಿವಾಳ ಕೆರೆ, ತಾವರಕೆರೆ ಮುಖ್ಯರಸ್ತೆಯ ಕಾಮಗಾರಿಗಳು ಕಳೆದ ಒಂದು ವರ್ಷದಿಂದ ಕೈಗೊಳ್ಳದೆ ಸಾರ್ವಜನಿಕರಿಗೆ ಅನಾನುಕೂಲ ಉಂಟುಮಾಡಿದ್ದಾರೆ. ಇಂತಹ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವುದು ಅವಶ್ಯಕವಾಗಿದೆ ಎಂದು ಸಲಹೆ ನೀಡಿದ್ದಾರೆ. ಅಲ್ಲದೇ ಪ್ಯಾಕೇಜ್-4 ರ ಅಡಿಯಲ್ಲಿ ಗುತ್ತಿಗೆದಾರರು ಕೈಗೆತ್ತಿಕೊಂಡಿರುವ ಕಾಮಗಾರಿಗಳ ಸಮಗ್ರ ತನಿಖೆ ನಡೆಸಿ ಅಂತ ಮನವಿ ಮಾಡಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದ ನಂದಮೂರಿ ಹರಿಕೃಷ್ಣ

    ಅಭಿಮಾನಿಗಳಿಗೆ ಭಾವನಾತ್ಮಕ ಪತ್ರ ಬರೆದಿದ್ದ ನಂದಮೂರಿ ಹರಿಕೃಷ್ಣ

    ಹೈದರಾಬಾದ್: ಟಾಲಿವುಡ್ ನಟ, ಆಂಧ್ರಪ್ರದೇಶ ಮಾಜಿ ಸಿಎಂ ನಂದಮೂರಿ ರಾಮಾರಾವ್ ಅವರ ಪುತ್ರ ಹರಿಕೃಷ್ಣರ ಆಕಾಲಿಕ ಮರಣ ಅಭಿಮಾನಿಗಳು ಹಾಗೂ ಕುಟುಂಬಸ್ಥರಿಗೆ ತೀವ್ರ ದು:ಖ ಉಂಟು ಮಾಡಿದ್ದು, ಕಳೆದ ಕೆಲ ದಿನಗಳ ಹಿಂದೆ ಹರಿಕೃಷ್ಣ ಅವರು ಅಭಿಮಾನಿಗಳಿಗೆ ಬರೆದ ಪತ್ರ ಅವರ ವ್ಯಕ್ತಿತ್ವಕ್ಕೆ ಹಿಡಿದ ಕೈಗನ್ನಡಿಯಾಗಿದೆ.

    ಹರಿಕೃಷ್ಣ ಅವರು ಬದುಕಿದ್ದರೆ ಸೆಪ್ಟೆಂಬರ್ 2ರಂದು 62ಕ್ಕೆ ವಸಂತಕ್ಕೆ ಕಾಲಿಡುತ್ತಿದ್ದರು. ಈ ವೇಳೆ ಪ್ರತಿ ವರ್ಷದಂತೆ ಅಭಿಮಾನಿಗಳು ಸಂಭ್ರಮಾಚರಣೆ ಮಾಡಿ ತಮ್ಮ ನೆಚ್ಚಿನ ನಟನ ಹುಟ್ಟಹಬ್ಬ ಆಚರಿಸುತ್ತಿದ್ದರು. ಇದನ್ನು ತಿಳಿದಿದ್ದ ಹರಿಕೃಷ್ಣ ಅವರು ಈ ಬಾರಿ ಕೇರಳದಲ್ಲಿ ಮಳೆಯಿಂದ ಪ್ರವಾಹ ಉಂಟಾಗಿದ್ದು, ಅಭಿಮಾನಿಗಳು ತಮ್ಮ ಹುಟ್ಟು ಹಬ್ಬ ಆಚರಣೆ ಮಾಡದೆ ಆ ಹಣವನ್ನು ಸಂತ್ರಸ್ತರಿಗೆ ನೀಡುವಂತೆ ಮನವಿ ಮಾಡಿದ್ದರು. ಇದನ್ನು ಓದಿ:  ದಯವಿಟ್ಟು ನೈಟ್ ಜರ್ನಿ ವೇಳೆ ಸ್ವಲ್ಪ ಹುಷಾರಾಗಿರಿ ಎಂದು ಹೇಳಿ ನಂದಮೂರಿ ನಿಧನಕ್ಕೆ ಹ್ಯಾಟ್ರಿಕ್ ಹೀರೋ ಸಂತಾಪ

    https://twitter.com/TollyBattel/status/1034655323934535680

    ಈ ಕುರಿತು ತಮ್ಮ ಅಭಿಮಾನಿಗಳಿಗೆ ಸ್ವತಃ ಒಂದು ಪುಟದ ಪತ್ರ ಬರೆದಿದ್ದ ಅವರು, ಆಂಧ್ರಪ್ರದೇಶ ಕೆಲ ಜಿಲ್ಲೆಗಳು ಹಾಗೂ ಕೇರಳದಲ್ಲಿ ಪ್ರವಾಹದಿಂದ ಸಾಕಷ್ಟು ಮಂದಿ ಜೀವ ಕಳೆದುಕೊಂಡಿದ್ದಾರೆ. ಹಲವರು ನಿರಾಶ್ರಿತರಾಗಿದ್ದಾರೆ. ಅದ್ದರಿಂದ ತಮ್ಮ ಹುಟ್ಟುಹಬ್ಬದಂದು ಹಾಕುವ ಫ್ಲೆಕ್ಸ್, ಹೂವಿನ ಹಾರ, ಕೇಕ್‍ಗೆ ವೆಚ್ಚ ಮಾಡುವ ಹಣವನ್ನು ಸಂತ್ರಸ್ತರಿಗೆ ನೀಡುವಂತೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು. ಇದನ್ನು ಓದಿ: ಎನ್‍ಟಿಆರ್ ಕುಟುಂಬಕ್ಕೆ ನಲ್ಗೊಂಡ ಮಾರ್ಗ ಶಾಪವೇ?

    ಸದ್ಯ ಹರಿಕೃಷ್ಣ ಅವರ ಪಾರ್ಥಿಕ ಶರೀರವನ್ನು ಹೈದರಾಬಾದ್‍ನಲ್ಲಿರುವ ಅವರ ನಿವಾಸಕ್ಕೆ ಸಾಗಿಸಲಾಗಿದೆ. ಭಾರತದ ಹಲವು ಚಿತ್ರರಂಗದ ಗಣ್ಯರು ನಿವಾಸಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆಯುತ್ತಿದ್ದಾರೆ. ಹರಿಕೃಷ್ಣ ಅವರ ಅಂತಿಮ ಸಂಸ್ಕಾರಗಳು ನಾಳೆ ನಡೆಯಲಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಈ ಹಿಂದೆ ಕಾರು ಅಪಘಾತದಲ್ಲಿ ಮೃತಪಟ್ಟಿದ್ದ ಜಾನಕಿರಾಮ್‍ರ ಪಕ್ಕದಲ್ಲೇ ಹರಿಕೃಷ್ಣ ಸಂಸ್ಕಾರ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ. ಹರಿಕೃಷ್ಣ ಅವರ ಅಂತಿಮ ಸಂಸ್ಕಾರಕ್ಕೆ ತೆಲಂಗಾಣ ಸರ್ಕಾರ ಸಿದ್ಧತೆ ನಡೆಸುತ್ತಿದ್ದು, ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ. ಇದನ್ನು ಓದಿ: ಡ್ರೈವರಿಂದ ಸ್ಟಾರ್ ವರೆಗೂ ಎಲ್ಲರನ್ನೂ ಒಂದೇ ರೀತಿಯಾಗಿ ನೋಡ್ತಿದ್ರು: ಹರಿಕೃಷ್ಣ ಬಗ್ಗೆ ರವಿಶಂಕರ್ ಮಾತು

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=2283Fb13–Y

     

  • ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಸ್ಕ್ಯಾಂಡಲ್ – ಜುಲೈನಲ್ಲಿ ನಾಪತ್ತೆಯಾಗಿದ್ದ ಮಲ್ಲಿಯಿಂದ ಕುಟುಂಬಕ್ಕೆ ಪತ್ರ

    ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಸ್ಕ್ಯಾಂಡಲ್ – ಜುಲೈನಲ್ಲಿ ನಾಪತ್ತೆಯಾಗಿದ್ದ ಮಲ್ಲಿಯಿಂದ ಕುಟುಂಬಕ್ಕೆ ಪತ್ರ

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಮತ್ತೊಂದು ಸ್ಕ್ಯಾಂಡಲ್ ನಡೆದಿದ್ದು, `ಮೊದಲ ಸಲ’ ನಿರ್ಮಾಪಕ ದರ್ಶನ್ ಆಪ್ತ ಮಲ್ಲಿಕಾರ್ಜುನ್ ಕೋಟಿ ಕೋಟಿ ವಂಚನೆ ಮಾಡಿ ಜುಲೈನಲ್ಲಿ ನಾಪತ್ತೆಯಾಗಿದ್ದು, ಇಂದಿಗೂ ಎಲ್ಲಿದ್ದಾನೆ ಎಂದು ಪತ್ತೆಯಾಗಿಲ್ಲ.

    ತೂಗುದೀಪ ಡಿಸ್ಟ್ರಿಬ್ಯೂಟರ್ಸ್ ಇತ್ತೀಚೆಗೆ ಬಿಡುಗಡೆಗೊಂಡಿದ್ದ `ಪ್ರೇಮ ಬರಹ’ ಸಿನಿಮಾದ ವಿತರಣೆ ಹೊಣೆಯನ್ನು ಹೊತ್ತಿತ್ತು. ಮೊದಲ ವಾರದ ಗಳಿಕೆ 35 ಲಕ್ಷ ರೂ. ಅಂತ ನಿರ್ಮಾಪಕ ಅರ್ಜುನ್ ಸರ್ಜಾಗೆ ಮಲ್ಲಿ ಹೇಳಿದ್ದನು. ಆದರೆ ಮಲ್ಲಿ ಹೇಳಿಕೆ ಮತ್ತು ತೋರಿಸಿದ ಅಂಕಿ ಅಂಶಗಳ ಬಗ್ಗೆ ಅರ್ಜುನ್ ಸರ್ಜಾ ಅವರು ಅನುಮಾನ ವ್ಯಕ್ತಪಡಿಸಿದ್ದರು. ನಂತರ ಮಲ್ಲಿ ಸುಳ್ಳು ಹೇಳಿ ಸಿಕ್ಕಿಬಿದ್ದಿದ್ದಾನೆ. ಕೊನೆಗೆ ಮಲ್ಲಿಕಾರ್ಜುನ್ ಸರ್ಜಾರಿಗೆ 1 ಕೋಟಿ ರೂಪಾಯಿ ಚೆಕ್ ನೀಡಿದ್ದಾನೆ. ಇದನ್ನೂ  ಓದಿ: ದರ್ಶನ್ ಮ್ಯಾನೇಜರ್ ದೋಖಾ ಕಥೆ ಬಯಲಾಗಲು ನಟ ಅರ್ಜುನ್ ಸರ್ಜಾ ಕಾರಣ?

    ಹೀಗೆ ತಾನು ಮಾಡಿದ ಬಂಡವಾಳ ಬಯಲಾದ ಎರಡು ವಾರದಲ್ಲೇ ಯಾರ ಕೈಗೂ ಸಿಗದೇ ಮಲ್ಲಿ ಪರಾರಿಯಾಗಿದ್ದನು. ಜೊತೆಗೆ ತೂಗುದೀಪ ಕುಟುಂಬಕ್ಕೆ ಮಸಿ ಬಳಿಯಲೂ ಯತ್ನಿಸಿದ್ದನು. ಈಗ ಮಲ್ಲಿ ಕಲಬುರಗಿಯಲ್ಲಿರುವ ಕುಟುಂಬಕ್ಕೆ ಚೆನ್ನೈನಿಂದ ಪತ್ರ ಬರೆದು ಕ್ಷೇಮ ಎಂದಿದ್ದಾನೆ. ಆದರೆ ಜುಲೈನಲ್ಲಿ ನಾಪತ್ತೆಯಾದ ಮಲ್ಲಿಕಾರ್ಜುನ್ ಎಲ್ಲಿದ್ದಾನೆ ಅನ್ನೋದು ಇಂದಿಗೂ ಯಾರಿಗೂ ತಿಳಿಯಲಿಲ್ಲ.

    ಮಲ್ಲಿ ತೂಗುದೀಪ ಪ್ರೊಡಕ್ಷನ್ಸ್ ನ ಆರ್ಥಿಕ ವ್ಯವಹಾರದ ಹೊಣೆಯನ್ನು ಹೊತ್ತಿದ್ದನು. ಇದೇ ಅವಕಾಶವನ್ನು ಉಪಯೋಗಿಸಿಕೊಂಡು ಕಂಡ ಕಂಡವರ ಬಳಿ ಸುಮಾರು 10 ಕೋಟಿ ರೂ.ಗೂ ಹೆಚ್ಚು ಸಾಲಮಾಡಿದ್ದಾನೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ. ಅಷ್ಟೇ ಅಲ್ಲದೇ ಅಡ್ಡದಾರಿಯಲ್ಲಿ ದುಡ್ಡುಮಾಡುವ ಚಟಕ್ಕೆ ಬಿದ್ದಿದ್ದನು. ನಂತರ ಕೋಟಿ ಕೋಟಿ ಸಾಲ ಮಾಡಿ ರೈಸ್ ಪುಲ್ಲಿಂಗ್ ದಂಧೆಯಲ್ಲಿ ಎಲ್ಲವನ್ನು ಕಳೆದುಕೊಂಡಿದ್ದನು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv