Tag: letter

  • ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಪಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ

    ನಾನು ಸಾಯ್ತೀನಿ, ಮಕ್ಕಳನ್ನು ಚೆನ್ನಾಗಿ ನೋಡ್ಕೊಳ್ಳಿ- ಪತಿಗೆ ನಿಪಾ ವೈರಸ್‍ಗೆ ಬಲಿಯಾದ ಕೇರಳ ನರ್ಸ್ ಪತ್ರ

    ತಿರುವನಂತಪುರಂ: ಬಾವಲಿಗಳ ಮೂಲಕ ಹರಡುವ ನಿಪಾ ವೈರಸ್ ಗೆ ಬಲಿಯಾವುದಕ್ಕೂ ಮುನ್ನ ಪತಿಗೆ ಕೇರಳದ ನರ್ಸ್ ಒಬ್ಬರು ಭಾವನಾತ್ಮಕ ಪತ್ರ ಬರೆದು, ತಾನು ಸಾಯುವುದು ಖಚಿತವಾಗಿದ್ದು, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ ಎಂದು ತಿಳಿಸಿದ್ದಾರೆ.

    31 ವರ್ಷದ ಲಿನಿ ಅವರು ಕೇರಳದ್ಯಾಂತ ಹೆಚ್ಚಿನ ಮಂದಿಯನ್ನು ಬಲಿ ಪಡೆಯುತ್ತಿರುವ ನಿಪಾ ವೈರಸ್ ಸೋಂಕು ತಗಲಿದ್ದ ರೋಗಿಗೆ ಚಿಕಿತ್ಸೆ ನೀಡುವ ವೇಳೆ ವೈರಸ್ ಹರಡಿ ಸಾವನ್ನಪ್ಪಿದ್ದರು.

    ವೈರಸ್ ಸೋಂಕು ತಗಲಿದ ವೇಳೆ ತನ್ನ ಕುಟುಂಬವನ್ನು ನೋಡಲು ಸಾಧ್ಯವಾಗದ ಲಿನಿ ತಮ್ಮ ಪತಿಗೆ ಪತ್ರ ಬರೆದಿದ್ದರು. ಸೋಕಿನಿಂದ ಮೃತ ಪಟ್ಟ ಲಿನಿ ಅವರ ಮೃತ ದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸದೇ ಆಸ್ಪತ್ರೆಯ ಆಡಳಿತ ಮಂಡಳಿ ಶವ ಸಂಸ್ಕಾರವನ್ನು ಮಾಡಿತ್ತು.

    ಲಿನಿ ಅವರಿಗೆ 7 ಹಾಗೂ 2 ವರ್ಷದ ಇಬ್ಬರು ಗಂಡು ಮಕ್ಕಳಿದ್ದಾರೆ. ಕೇರಳದ ಪೇರಾಂಬ್ರ ಆಸ್ಪತ್ರೆಯಲ್ಲಿ ದಾಖಲಾದ ಮೊದಲ ನಿಪಾ ವೈರಸ್ ಸೋಂಕು ತಗುಲಿದ್ದ ರೋಗಿಗೆ ಚಿಕಿತ್ಸೆ ನೀಡಿದ್ದರು. ಈ ವೇಳೆ ಅವರಿಗೂ ಸೋಂಕು ಹರಡಿತ್ತು. ತಮಗೆ ಸೋಂಕು ಹರಡಿರುವುದು ಖಚಿತವಾಗುತ್ತಿದ್ದಂತೆ ಪತಿಗೆ ಪತ್ರ ಬರೆದಿರುವ ಅವರು ನಾನು ಬಹುತೇಕ ಸಾಯುವುದು ಖಚಿತವಾಗಿದ್ದು, ನಿಮ್ಮನ್ನು ಮತ್ತೆ ನೋಡುತ್ತೇನೆ ಎಂದು ಅನ್ನಿಸುತ್ತಿಲ್ಲ. ನಮ್ಮ ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ. ಅವರನ್ನು ನಿಮ್ಮೊಂದಿಗೆ ಗಲ್ಫ್ ಗೆ ಕರೆದುಕೊಂಡು ಹೋಗಿ. ನನ್ನ ತಂದೆಯಂತೆ ಅವರನ್ನು ಇಲ್ಲಿ ಏಕಾಂಗಿಯಾಗಿ ಬಿಡಬೇಡಿ. ನಿಮ್ಮನ್ನು ತುಂಬಾ ಪ್ರೀತಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

    https://twitter.com/deepusebin/status/998573629435727873?

    ಲಿನಿ ಅವರ ಮೃತ ದೇಹವನ್ನು ಕೊನೆಯ ಬಾರಿಗೆ ನೋಡಲು ಸಹ ಯಾರಿಗೂ ಅವಕಾಶ ನೀಡದೇ ಅಂತಿಮ ಸಂಸ್ಕಾರ ನಡೆಸಲಾಗಿದೆ. ಸೋಂಕು ಇತರೇ ವ್ಯಕ್ತಿಗಳಿಗೂ ಹರಡುವ ಕಾರಣದಿಂದ ಆರೋಗ್ಯ ಅಧಿಕಾರಿಗಳು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೇರಳ ಸಿಎಂ ಪಿಣರಾಯಿ ವಿಜಯನ್, ಲಿನಿ ಅವರ ನಿಸ್ವಾರ್ಥ ಸೇವೆಯನ್ನು ಕೇರಳ ಸ್ಮರಿಸುತ್ತದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಬಾವಲಿ ಜ್ವರಕ್ಕೆ ಕರ್ನಾಟಕದಲ್ಲೂ ಹೈಅಲರ್ಟ್ – ಈ ಮಾಹಿತಿ ನಿಮಗೆ ಗೊತ್ತಿರಲಿ..!

    ಮೊದಲ ಬಾರಿಗೆ ನಿಪಾ ವೈರಸ್ ಗೆ ಬಲಿಯಾದ ಮೂವರು ಸಹ ಒಂದೇ ಕುಟುಂಬಕ್ಕೆ ಸೇರಿದ್ದು, ಅದರಲ್ಲಿ ಇಬ್ಬರು ಸಹೋದರರು ಹಾಗೂ ಆನಾರೋಗ್ಯದ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಅವರನ್ನು ನೋಡಿಕೊಳ್ಳುತ್ತಿದ್ದ ಮಹಿಳೆಯೂ ಸಾವನ್ನಪ್ಪಿದ್ದಾರೆ. ಉಳಿದಂತೆ ಕುಟುಂಬದ ಸಹೋದರರ ತಂದೆಗೂ ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೇರಾಂಬ್ರ ಆಸ್ಪತ್ರೆಯ ಮೂಲಗಳು ತಿಳಿಸಿದೆ. ಇದುವರೆಗೂ ಕೇರಳದಲ್ಲಿ 16ಕ್ಕೂ ಹೆಚ್ಚಿನ ಜನ ನಿಪಾ ವೈರಸ್ ಗೆ ಬಲಿಯಾಗಿದ್ದಾರೆ.

  • ಹೆದರಬೇಡಿ, ಮನೆಯವರೊಂದಿಗೆ ಕಾಲ ಕಳೆಯರಿ, ನಿಮಗಾಗಿ ಬದುಕುವುದೇ ನನ್ನ ಬದುಕು: ಬಿಎಸ್‍ವೈ

    ಹೆದರಬೇಡಿ, ಮನೆಯವರೊಂದಿಗೆ ಕಾಲ ಕಳೆಯರಿ, ನಿಮಗಾಗಿ ಬದುಕುವುದೇ ನನ್ನ ಬದುಕು: ಬಿಎಸ್‍ವೈ

    ಬೆಂಗಳೂರು: ಕಳೆದ ಒಂದು ವಾರದಿಂದ ರಾಜ್ಯ ರಾಜಕಾರಣದಲ್ಲಿ ಏರಿಳಿತದಿಂದ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರಲಿಲ್ಲ. ಆದ್ರೆ ಇಂದು ರಾಜೀನಾಮೆ ಬಳಿಕ ಕಾರ್ಯಕರ್ತರನ್ನು ಹುರಿದುಂಬಿಸುವದಕ್ಕಾಗಿ ದೀರ್ಘ ಪತ್ರವೊಂದನ್ನು ಬರೆದಿದ್ದಾರೆ.

    ಎಲ್ಲ ಕಾರ್ಯಕರ್ತರು ಹೆದರಬೇಡಿ, ಸದ್ಯಕ್ಕೆ ಎಲ್ಲರೂ ತಾಳ್ಮೆಯಿಂದಿರಿ, ಮನೆಯವರೊಂದಿಗೆ ಕೆಲವು ದಿನಗಳನ್ನು ಸಂತೋಷದಿಂದ ಕಳೆಯಿರಿ. ಮತ್ತೆ ನಾನು ನಿಮ್ಮೊಂದಿಗೆ ಬೆರೆಯುತ್ತೇನೆ. ನಿಮಗಾಗಿ ಬದುಕುವುದೇ ನನ್ನ ಬದುಕು. ಸತ್ಯದ ಕಮಲ, ಸಜ್ಜನರ ಮೊಗದಲ್ಲಿ ನಗು ಎರಡೂ ಅರಳುವ ಆ ಒಂದು ದಿನ ಬರುತ್ತದೆ ಎಂದು ದೀರ್ಘವಾದ ಪತ್ರವೊಂದನ್ನು ಬರೆದಿದ್ದಾರೆ.

    ಕಾರ್ಯಕರ್ತರಿಗೆ ಯಡಿಯೂರಪ್ಪ ಬರೆದ ಪತ್ರ ಹೀಗಿದೆ:

    ನಿಮಗಾಗಿ ಬದುಕುವುದೇ ನನ್ನ ಬದುಕು!
    ನಾವು ಬದುಕುತ್ತಿರುವುದೇ ಪ್ರಜಾಪ್ರಭುತ್ವದಲ್ಲಿ. ಅರ್ಥಾತ್, ಇಲ್ಲಿ ಪ್ರಜೆಗಳೇ, ಅಂದರೆ ನೀವೇ ಪ್ರಭುಗಳು. ನಿಮ್ಮನ್ನು ಬಿಟ್ಟು ಸಮಾಜ ಇಲ್ಲ. ಆದರೆ ಇಂದು ಆ ಪ್ರಜಾಪ್ರಭುತ್ವಕ್ಕೆ ಕೊಡಲಿ ಏಟು ಬಿದ್ದಿದೆ. 104ಕ್ಕಿಂತ 37 ಮತ್ತು 78 ಕ್ಷೇತ್ರಗಳ ನಿಮ್ಮ ಪ್ರತಿನಿಧಿಗಳೇ ನಿಮ್ಮನ್ನಾಳಲು ತಯಾರಾಗಿದ್ದಾರೆ. ಜನಾದೇಶಕ್ಕೆ, ಜನರ ಅಭಿಪ್ರಾಯಕ್ಕೆ ಬೆಲೆ ಇಲ್ಲ, ಕೇವಲ ಸಂಖ್ಯೆಗಳಿಗಷ್ಟೇ ಮಹತ್ವ ಎಂದು ಸಾಬೀತು ಮಾಡಿದ್ದಾರೆ. ಇದರಿಂದ ಒಂದು ದಕ್ಷ, ಸುಭದ್ರ, ಪಾರದರ್ಶಕ, ಪ್ರಾಮಾಣಿಕ ಆಡಳಿತವನ್ನು ನೀಡುವ ಅವಕಾಶವನ್ನು ನಾನು ಕಳೆದುಕೊಂಡಿದ್ದೇನೆ.

    ಎಲ್ಲರಿಗಿಂತ ಹೆಚ್ಚು ಕ್ಷೇತ್ರಗಳಲ್ಲಿ ಜನರ ಪ್ರೀತಿ ಗೆದ್ದ ಪಕ್ಷವಾಗಿ, ಸರ್ಕಾರವನ್ನು ರಚಿಸಬೇಕಾದ್ದು ನಮ್ಮ ಜವಾಬ್ದಾರಿ. ನಾವು ಏಕೆ ಯಶಸ್ವಿಯಾಗಲಿಲ್ಲವೆಂದು ಜಗತ್ತಿಗೇ ತಿಳಿದಿದೆ. ಜನರಿಂದ ತಿರಸ್ಕೃತಗೊಂಡ ಎರಡು ಪಕ್ಷಗಳು ನಮ್ಮ ವಿರುದ್ಧ ಪಿತೂರಿ ಮಾಡಿವೆ.

    ಆದರೆ ವಾಸ್ತವವಾಗಿ ನಮ್ಮ ಸ್ಥಾನ ಗಳಿಕೆ 104ಕ್ಕೆ ಏರಿದೆ. ಕಾಂಗ್ರೆಸ್ ಬಲವು 122ರಿಂದ 78ರವರೆಗೆ ಇಳಿದಿದೆ ಮತ್ತು ಜೆಡಿಎಸ್ 40 ರಿಂದ 37ಕ್ಕೆ ಇಳಿದಿದೆ. ಇದು ಜನರು ಯಾರ ಪರ ಇದ್ದಾರೆ ಎಂದು ಧ್ವನಿವರ್ಧಕದಲ್ಲಿ ಜಗತ್ತಿಗೆ ಕೂಗಿ ಹೇಳಿದಂತಿದೆ. ಈ ಸಮಾಜದ ಪ್ರಭುಗಳೇ ಈ ತೀರ್ಪನ್ನು ಕೊಟ್ಟಿರುವುದು.

    ನಾನಿನ್ನೂ ದಣಿದಿಲ್ಲ. ದಣಿಯುವುದೂ ಇಲ್ಲ. ಧಣಿ ಎಂದು ನೀವು ಕರೆದಮೇಲೆ ನಿಮ್ಮ ಜೊತೆ ನಿಮ್ಮ ಧ್ವನಿಯಾಗಿ ಇರುವುದೇ ನನ್ನ ಕಾಯಕ. ಈ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಸಾಲು ಸಾಲು ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾಗ ನನಗೆ ಸಹಿಸಲಾಗಲಿಲ್ಲ. ನಮಗೆ ಅಧಿಕಾರವಿಲ್ಲದಿದ್ದರೂ, ರೈತರಿಗೇನಾದರೂ ಆದರೆ ಈಗಲೂ ಅದೇ ಆಕ್ರೋಶ ನನ್ನನ್ನು ಆವರಿಸುತ್ತದೆ. ನಮ್ಮ ರೈತರು ಗರ್ವದಿಂದ ‘ನಾನು ರೈತ’ ಎಂದು ಹೇಳಿಕೊಳ್ಳುವ ಹಾಗೆ ಮಾಡುವುದು ನನ್ನ ಸರ್ಕಾರದ ಆಶಯವಿತ್ತು. ಈಗಲೂ ಹಾಗೇ ಇದೆ. ನಾವು ಖುದ್ದು ಕೆಲಸ ಮಾಡಲಾಗದೇ ಇದ್ದರೂ ವಿರೋಧ ಪಕ್ಷದಲ್ಲಿ ಕುಳಿತು ಮಾಡಿಸುತ್ತೇವೆ. ಏಕೆಂದರೆ, ನಾನು ನಿಮ್ಮವನು, ನಿಮ್ಮಲ್ಲಿ ಒಬ್ಬನು.

    ಯಾವ ಜನ್ಮದ ಪುಣ್ಯವೋ ಏನೋ, ನಿಮ್ಮಂಥ ಕಾರ್ಯಕರ್ತರು, ಬೆಂಬಲಿಗರನ್ನು, ಮನತುಂಬಿ ಹರಸುವ ಜನರನ್ನು ನಾನು ಪಡೆದಿದ್ದೇನೆ. ನಿಮ್ಮ ಪ್ರೀತಿಯನ್ನು ಸಂಪಾದಿಸಿದ್ದೇನೆ. ಗುಮಾಸ್ತನನ್ನು ನಾಯಕನನ್ನಾಗಿ ಮಾಡಿದವರು ನೀವು. ಈಗಲೂ ಅಷ್ಟೇ, ನೀವು ನನ್ನ ಕೈ ಬಿಟ್ಟಿಲ್ಲ. ಇನ್ನಷ್ಟು ಬಲಪಡಿಸಿದ್ದೀರಿ, ಗೆಲ್ಲಿಸಿದ್ದೀರಿ. ಆದರೆ ಪ್ರತಿಪಕ್ಷಗಳ ಪ್ರಜಾಪ್ರಭುತ್ವ ವಿರೋಧಿ ತಂತ್ರ, ಕುತಂತ್ರಗಳಿಂದ ಸರ್ಕಾರ ರಚಿಸಲಾಗಲಿಲ್ಲ. ಆದರೇನಂತೆ? ನಾನು ಬದುಕಿರುವವರೆಗೂ ಹೋರಾಟ ಮಾಡುತ್ತಲೇ ಇರುತ್ತೇನೆ. ರೈತರಿಗಾಗಿ ಶ್ರಮಿಸುತ್ತಲೇ ಇರುತ್ತೇನೆ.

    ಬಂಧುಗಳೇ, ನೀವೆಲ್ಲ ಕೆಲ ತಿಂಗಳು ಮನೆ ಬಿಟ್ಟು ಬಿಜೆಪಿ ಪರವಾಗಿ ಕೆಲಸ ಮಾಡಿ ಎಂದು ನಾನು ಪರಿವರ್ತನಾ ಯಾತ್ರೆಯಲ್ಲಿ ಕೊಟ್ಟ ಕರೆಗೆ ನೀವೆಲ್ಲ ಬಂದಿದ್ದೀರ, ದುಡಿದಿದ್ದೀರ. ಅಂದು ನೀವು ಪಟ್ಟ ಶ್ರಮ, ಇಂದು ನೀವು ಹಾಕಿದ ಕಣ್ಣೀರು ಯಾವುದೂ ವ್ಯರ್ಥವಾಗುವುದಕ್ಕೆ ನಾನು ಬಿಡುವುದಿಲ್ಲ. ನೀವ್ಯಾರೂ ಎದೆಗುಂದ ಬೇಡಿ. ನೀವು ಧೈರ್ಯದಿಂದ ಇದ್ದರೆ ನನ್ನ ಧೈರ್ಯ ನೂರ್ಮಡಿಯಾಗುತ್ತದೆ. ವಿಧಾನಸಭೆಯಲ್ಲಿ ನಾನು ಹೇಳಿದ ಹಾಗೆ, ಬದುಕುವುದಿಲ್ಲ ಎಂದು ದಯನೀಯವಾಗಿ ಅಧಿಕಾರ ಬೇಡುವವನಲ್ಲ ನಿಮ್ಮ ಯಡಿಯೂರಪ್ಪ. ಬದುಕಿರುವವರೆಗೂ ನಿಮಗಾಗಿ, ನಿಮ್ಮ ಸೇವೆಗಾಗಿ ಪರಿಶ್ರಮ ಪಡುವವನು ನಿಮ್ಮ ಯಡಿಯೂರಪ್ಪ. ಬದುಕಿರುವವರೆಗೂ ನಿಮ್ಮ ಅಭಿವೃದ್ಧಿಗಾಗಿ ಧ್ವನಿ ಎತ್ತುತ್ತೇನೆ ಎನ್ನುವವನು ಯಡಿಯೂರಪ್ಪ.

    ಸಧ್ಯಕ್ಕೆ ಸ್ವಲ್ಪ ತಾಳ್ಮೆಯಿಂದಿರಿ. ಮನೆಯವರೊಂದಿಗೆ ಕಾಲ ಕಳೆಯಿರಿ. ಮತ್ತೆ ನಾನು ನಿಮ್ಮೊಂದಿಗೆ ಬರುತ್ತೇನೆ. ಸ್ವಸ್ಥ, ಸದೃಢ, ಸಮರ್ಥ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಒಟ್ಟಾಗಿ ಸಾಗೋಣ. ಮೊದಲೇ ಹೇಳಿದಂತೆ ನಾನು ದಣಿದಿಲ್ಲ. ನಿಮಗಾಗಿ ಕೆಲಸ ಮಾಡುವುದೇ ನನ್ನ ಜೀವನದ ಧ್ಯೇಯವಾಗಿದೆ.

    ಹೆದರದಿರಿ. ನನ್ನ ಚಿಂತೆ ಬಿಡಿ. ಆ ಒಂದು ದಿನ ಬರುತ್ತದೆ. ಸತ್ಯದ ಕಮಲ, ಸಜ್ಜನರ ಮೊಗದಲ್ಲಿ ನಗು ಎರಡೂ ಅರಳುತ್ತದೆ. ಬಿಜೆಪಿ ಬರಲಿದೆ.

    ನಿಮ್ಮವ,
    ಬಿ. ಎಸ್. ಯಡಿಯೂರಪ್ಪ

  • ಮುಂದಿನ ಯಾವುದೇ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ- ಕಿಚ್ಚ ಸುದೀಪ್

    ಮುಂದಿನ ಯಾವುದೇ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ- ಕಿಚ್ಚ ಸುದೀಪ್

    ಬೆಂಗಳೂರು: ನಾನು ಮುಂದಿನ ಯಾವುದೇ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ ಎಂದು ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಸ್ಪಷ್ಟಪಡಿಸಿದ್ದಾರೆ.

    ಈ ಕುರಿತು ಟ್ವೀಟ್ ಮಾಡಿರುವ ಕಿಚ್ಚ, `ಸುಮಾರು ವರ್ಷಗಳ ಪರಿಚಯದ ನನ್ನ ಕೆಲವು ಗೆಳೆಯರಿಗಾಗಿ ನಾನು ಚುನಾವಣಾ ಪ್ರಚಾರಕ್ಕೆ ಸೇರಿದೆ. ಇವರು ಒಂದಲ್ಲ ಒಂದು ರೀತಿ ನನ್ನ ಜೊತೆಯಿದ್ದು, ನನ್ನ ಕಠಿಣ ಸಮಯದಲ್ಲಿ ನನ್ನ ಬೆನ್ನೆಲುಬಾಗಿ ನಿಂತವರು. ಸಣ್ಣದು ಅಥವಾ ದೊಡ್ಡದು ಎಂಬ ವಿಷಯವಲ್ಲ. ಅವರು ಅಂದು ನಿಂತದ್ದು ವಿಷಯ. ಈಗ ಅವರಿಗಾಗಿ ನಾನು ಅಲ್ಲಿರುವುದು ಬಹುಶಃ ಅವರು ನನ್ನಿಂದ ಪಡೆಯುವ ಒಂದು ಸಣ್ಣ ಬೆಂಬಲ. ಇದು ಕನಿಷ್ಟ ನಾನು ಅವರಿಗಾಗಿ ಮಾಡಬಹುದಾದದ್ದು ಕೂಡ. ಅದರಲ್ಲಿ ಯಾವುದೇ ವಿಷಾದವಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಸ್ತೆ ಬದಿ ತಿಂಡಿ ತಿಂದು ಮಾಲಕಿಗೆ 10 ಸಾವಿರ ರೂ. ಕೊಟ್ಟ ಸುದೀಪ್!

    ನನ್ನ ಗೆಳೆಯರ ಹಾಗೂ ಅಭಿಮಾನಿಗಳ ಸಲುವಾಗಿ ನಾನು ಮುಂದಿನ ಪ್ರಚಾರದಲ್ಲಿ ಭಾಗವಹಿಸುವುದಿಲ್ಲ. ಎಲ್ಲರಿಗೂ ನನ್ನ ಅವಶ್ಯಕತೆ ಇದೆ ಹಾಗೂ ನನ್ನ ಉಪಸ್ಥಿತಿಯಿಂದ ಫಲಿತಾಂಶಗಳು ಬದಲಾಗುತ್ತದೆ ಎಂದು ನಾನು ನನ್ನನ್ನು ದೊಡ್ಡ ಮಟ್ಟಕ್ಕೆ ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ ಅಂದಿದ್ದಾರೆ. ಇದನ್ನೂ ಓದಿ: ನಟ ಸುದೀಪ್ ರೋಡ್ ಶೋ ರದ್ದು

    ನಾನು ಒಬ್ಬ ಕಲಾವಿದ ನನ್ನ ಪಯಣದಲ್ಲಿ ನನ್ನ ಜೊತೆ ಇದ್ದಂತಹ ಗೆಳೆಯರು ಹಾಗೂ ಅಭಿಮಾನಿಗಳ ಅಭಿಪ್ರಾಯ ಮುಖ್ಯವಾಗುತ್ತದೆ. ಇದು ನಾನು ತೆಗೆದುಕೊಳ್ಳುತ್ತಿರುವ ಕಠಿಣ ನಿರ್ಧಾರ. ಆದರೂ ಈ ನಿರ್ಧಾರ ನನ್ನ ಜೊತೆಯಿರುವ ನನ್ನ ಅಭಿಮಾನಿಗಳು ಹಾಗೂ ಗೆಳೆಯರ ಸಲುವಾಗಿ ಕೈಗೊಳ್ಳುತ್ತಿದ್ದೇನೆ. ನಾನು ಯಾವುದೇ ರೀತಿ ನನ್ನ ಕ್ರಮಗಳಲ್ಲಿ ಅವರಿಗೆ ನೋವುಂಟು ಮಾಡಲು ಇಚ್ಛಿಸುವುದಿಲ್ಲ ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕಿಚ್ಚ ಸುದೀಪ್‍ರನ್ನು ಭೇಟಿ ಮಾಡಿದ ಸಲ್ಮಾನ್ ಖಾನ್ ಸಹೋದರರು!

    ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ ಅವರು ತನ್ನ ಸ್ನೇಹಿತರ ಪರವಾಗಿ ಇತ್ತೀಚೆಗೆ ಪ್ರಚಾರ ನಡೆಸುತ್ತಿದ್ದರು. ಆದ್ರೆ ಆ ಬಳಿಕ ಕಿಚ್ಚ ನಡೆಗೆ ಅಭಿಮಾನಿಗಳು ಗರಂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಕಿಚ್ಚ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಶ್ರೀರಾಮಲು ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ ಕಿಚ್ಚ ಸುದೀಪ್!

  • ಪ್ರಧಾನಿ ಮೋದಿಯವರಿಗೆ ರಕ್ತದಲ್ಲೇ 6 ಪುಟ ಪತ್ರ ಬರೆದ ಯುವಕ!

    ಪ್ರಧಾನಿ ಮೋದಿಯವರಿಗೆ ರಕ್ತದಲ್ಲೇ 6 ಪುಟ ಪತ್ರ ಬರೆದ ಯುವಕ!

    ವಿಜಯಪುರ: ತಮ್ಮ ಪಟ್ಟಣಕ್ಕೆ ಸರ್ಕಾರಿ ಪ್ರೌಢಶಾಲೆ ಬೇಕು ಎಂದು ತನ್ನದೇ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಯುವಕನೊಬ್ಬ ಪತ್ರ ಬರೆದಿದ್ದಾನೆ.

    ವಿಜಯರಂಜನ ಜೋಶಿ ತನ್ನ ರಕ್ತದಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಯುವಕ. ಈತ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ನಿವಾಸಿಯಾಗಿದ್ದು, 10-15 ಸಾವಿರ ಜನಸಂಖ್ಯೆ ಇರುವ ನಾಲತವಾಡ ಪಟ್ಟಣದಲ್ಲಿ ಸರ್ಕಾರಿ ಪ್ರೌಢ ಶಾಲೆ, ಕಾಲೇಜುಗಳು ಯಾವುದೂ ಇಲ್ಲ. ಆದ್ದರಿಂದ ಶಾಲೆ ನಿರ್ಮಿಸಬೇಕೆಂದು ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾನೆ.

    ಜೋಶಿ ನಾಲತವಾಡದಲ್ಲಿ ಸರ್ಕಾರಿ ಪ್ರೌಢಶಾಲೆ ಮತ್ತು ಕಾಲೇಜು ನಿರ್ಮಿಸುವಂತೆ ಶಿಕ್ಷಣ ಇಲಾಖೆಗೆ, ಶಿಕ್ಷಣ ಸಚಿವರಿಗೆ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ಪ್ರಯೋಜನವಾಗಿಲ್ಲ. ಆದ್ದರಿಂದ ಈಗ ರಾಜ್ಯ ಸರ್ಕಾರ ಸತ್ತು ಶವವಾಗಿದೆ ಎಂದು ಪ್ರಧಾನಿಗೆ ಪತ್ರ ಬರೆಯುವ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾನೆ.

    ಉತ್ತರ ಕರ್ನಾಟಕ ಭಾಗದಲ್ಲಿ ಬಹಳ ವರ್ಷಗಳಿಂದ ಸರ್ಕಾರಿ ಶಾಲಾ-ಕಾಲೇಜುಗಳ ಸಂಖ್ಯೆ ಕಡಿಮೆ ಇವೆ. ಹತ್ತಾರು ಹಳ್ಳಿಗಳಿಂದ ದೂರ ಹೋಗಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮಾಡಲು ಸಾಧ್ಯವಾಗುತ್ತಿಲ್ಲ. ಉತ್ತರ ಕರ್ನಾಕಟಲ್ಲಿ ಬರಗಾಲ, ಬಡತನ ಇರುವುದರಿಂದ ಖಾಸಗಿ ಶಾಲೆಯಲ್ಲಿ ಕಲಿಸುವಷ್ಟು ಶ್ರೀಮಂತರಲ್ಲ ಇಲ್ಲಿನ ಜನರು. ಸರ್ಕಾರಿ ಶಾಲೆ ಇಲ್ಲದೆ, ಶಿಕ್ಷಣ ಸಿಗದ ಕಾರಣ ಬಾಲ್ಯ ವಿವಾಹಗಳು ಹೆಚ್ಚಾಗುತ್ತಿದೆ. ಇದರಿಂದ ನನಗೆ ತುಂಬ ನೋವಾಗಿದೆ, ನೀವಾದರೂ ನಮ್ಮ ಸಮಸ್ಯೆಗೆ ಸ್ಪಂದಿಸುತ್ತೀರಿ ಎಂಬ ನಂಬಿಕೆ ಮೇಲೆ ಪತ್ರ ಬರೆದಿದ್ದೇನೆ ಎಂದು ಯುವಕ ಪತ್ರದಲ್ಲಿ ತಿಳಿಸಿದ್ದಾನೆ.

  • ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಐಪಿಎಸ್ ಅಧಿಕಾರಿಗಳ ಸಂಘ

    ಸಿಎಂ ಸಿದ್ದರಾಮಯ್ಯ ವಿರುದ್ಧ ತೊಡೆ ತಟ್ಟಿದ ಐಪಿಎಸ್ ಅಧಿಕಾರಿಗಳ ಸಂಘ

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆ ಉಲ್ಲೇಖಿಸಿ ಐಪಿಎಸ್ ಅಧಿಕಾರಿಗಳ ಸಂಘ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರತ್ನಪ್ರಭಾ ಅವರಿಗೆ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ರಾಜ್ಯ ಸರ್ಕಾರ ಐಪಿಎಸ್ ಅಧಿಕಾರಿಗಳನ್ನ ಕೀಳು ಮಟ್ಟದಲ್ಲಿ ನೋಡುತ್ತಿದೆ. ಹಲವು ಪ್ರಕರಣಗಳ ತನಿಖೆ ವೇಳೆ ರಾಜಕಾರಣಿಗಳು ಹಸ್ತಕ್ಷೇಪ ಮಾಡುತ್ತಾರೆ. ಅಲ್ಲದೇ ತನಿಖೆಯ ದಿಕ್ಕು ತಪ್ಪಿಸಿ ರಾಜಕೀಯವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿಸಲಾಗಿದೆ.

    ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಬಗ್ಗೆ ಪತ್ರದಲ್ಲಿ ಉಲ್ಲೇಖಸಿರುವ ಐಪಿಎಸ್ ಸಂಘದ ಅಧ್ಯಕ್ಷರಾಗಿರುವ ಎಡಿಜಿಪಿ ಆರ್ ಪಿ ಶರ್ಮಾ ಅವರು, ಲೋಕಾಯುಕ್ತ ನ್ಯಾ. ವಿಶ್ವನಾಥ್ ಶೆಟ್ಟಿ ಮೇಲೆ ಚಾಕು ಇರಿತ ಪ್ರಕರಣ, ಐಪಿಎಸ್ ಅಧಿಕಾರಿಗಳ ಪದೇ ಪದೇ ವರ್ಗಾವಣೆ, ಪೊಲೀಸರ ವರ್ಗಾವಣೆ, ಮೈಸೂರು ಐಎಎಸ್ ಆಧಿಕಾರಿ ರಶ್ಮಿ ಮೇಲೆ ಕಚೇರಿಯಲ್ಲೆ ಹಲ್ಲೆ ಪ್ರಕರಣ, ಮೈಸೂರು ಡಿಸಿ ಶಿಖಾ ಅವರ ಮೇಲಿನ ದಾಳಿ ಹಾಗೂ ಈ ಸಂಬಂಧ ಎಫ್‍ಐಆರ್ ದಾಖಲಿಸಿಕೊಳ್ಳಲು ತಡ ಮಾಡಿರುವ ಘಟನೆ, ಯುಬಿ ಸಿಟಿ ಬಳಿ ದಾಳಿ ಪ್ರಕರಣ, ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚಿಲು ಯತ್ನಿಸಿದ ರಾಜಕಾರಣಿ ಪ್ರಕರಣಗಳನ್ನು ತಮ್ಮ ಪತ್ರದ ಮೂಲಕ ಮುಖ್ಯ ಕಾರ್ಯದರ್ಶಿಗಳ ಗಮನಕ್ಕೆ ತಂದಿದ್ದಾರೆ.

    ಭಾರತೀಯ ಪೊಲೀಸ್ ಇಲಾಖೆಗೆ ತನ್ನದೇ ಸಂಸ್ಕೃತಿ ಇದೆ, ಆದರೆ ಅದಕ್ಕೆ ಈಗ ಕರಿನೆರಳು ಬಿದ್ದಿದೆ. ಪೊಲೀಸ್ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಯಾವುದೇ ತಪ್ಪು ಕಂಡು ಬಂದರೂ ಪೊಲೀಸರನ್ನೇ ಬಲಿಪಶುವಾಗಿ ಮಾಡಲಾಗುತ್ತಿದೆ. ಪೊಲೀಸರು ಮನಸ್ಫೂರ್ತಿಯಾಗಿ ಕೆಲಸ ಮಾಡಲು ಬಿಡುತ್ತಿಲ್ಲ. ಕಳೆದ ನಾಲ್ಕೂವರೆ ವರ್ಷದಲ್ಲಿ ಬೆಂಗಳೂರು ಆರು ಮಂದಿ ಆಯುಕ್ತರನ್ನು ಕಂಡಿದೆ. ಐಪಿಎಸ್ ಅಧಿಕಾರಿಗಳಿಗೆ ಸೇವೆ ಸಲ್ಲಿಸಲು ಸ್ವತಂತ್ರ್ಯ ನೀಡಬೇಕು. ಚುನಾವಣೆಗೆ ಮುನ್ನ ಪೊಲೀಸ್ ಆಧಿಕಾರಿಗಳು ಹಾಗೂ ಮಾಜಿ ಪೊಲೀಸರನ್ನು ಸೇರಿಸಿ ಸಭೆ ಮಾಡಬೇಕು ಎಂದು ಸಂಘದ ಅಧ್ಯಕ್ಷ ಆರ್.ಪಿ.ಶರ್ಮಾ ಪತ್ರದ ಮೂಲಕ ಮನವಿ ಮಾಡಿದ್ದಾರೆ.

     

     

  • SSLC ಪಾಸ್ ಮಾಡು, ಗಂಡನಿಗೆ ಬುದ್ಧಿಕೊಡು, ಪ್ರೇಮಿಯ ಜೀವನ ಹಾಳು ಮಾಡು – ಸವದತ್ತಿ ಯಲ್ಲಮ್ಮನಿಗೆ ಪತ್ರ

    SSLC ಪಾಸ್ ಮಾಡು, ಗಂಡನಿಗೆ ಬುದ್ಧಿಕೊಡು, ಪ್ರೇಮಿಯ ಜೀವನ ಹಾಳು ಮಾಡು – ಸವದತ್ತಿ ಯಲ್ಲಮ್ಮನಿಗೆ ಪತ್ರ

    ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. ಇಲ್ಲಿಗೆ ನಿತ್ಯ ಲಕ್ಷಾಂತರ ಜನ ಭಕ್ತರು ಭೇಟಿ ನೀಡಿ ದೇವರಿಗೆ ಪೂಜೆ ಸಲ್ಲಿಸುತ್ತಾರೆ. ಇಂತಹ ಶಕ್ತಿ ಪೀಠಕ್ಕೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ವಿವಿಧ ಹರಕೆಯನ್ನು ಹೋರುತ್ತಾರೆ.

    ಸವದತ್ತಿ ಯಲ್ಲಮ್ಮ ಜಾತ್ರೆ ವರ್ಷದ 6 ತಿಂಗಳ ಕಾಲ ಇಲ್ಲಿ ನಿತ್ಯವೂ ಜಾತ್ರೆ ನಡೆಯುತ್ತದೆ. ಕರ್ನಾಟಕ, ಮಹಾರಾಷ್ಟ್ರ, ಗೋವಾ ಹಾಗೂ ತೆಲಂಗಾಣ ರಾಜ್ಯಗಳಿಂದಲೂ ಭಕ್ತರು ಬರುತ್ತಾರೆ. ಇಲ್ಲಿಗೆ ಬರುವ ಭಕ್ತಾಧಿಗಳು ತಮ್ಮ ಇಷ್ಟಾರ್ಥಗಳನ್ನು ಪತ್ರದಲ್ಲಿ ಬರೆದು ಹುಂಡಿಗೆ ಹಾಕುತ್ತಾರೆ. ದೇವಸ್ಥಾನದ ಹುಂಡಿಯಲ್ಲಿ ಸಿಕ್ಕ ಪತ್ರಗಳಲ್ಲಿ ಭಕ್ತರು ವಿಭಿನ್ನ ಹರಕೆಯನ್ನು ಹೊತ್ತಿಕೊಂಡಿರುವುದು ಬಹಿರಂಗವಾಗಿದೆ.

    ಕನ್ನಡ, ಇಂಗ್ಲಿಷ್, ಮರಾಠಿ ಹಾಗೂ ಹಿಂದಿ ಭಾಷೆಯಲ್ಲಿ ಭಕ್ತರು ತಮ್ಮ ವೈಯಕ್ತಿಕ ಹರಕೆಗಳನ್ನು ಬರೆದು ದೇವಿಯ ಮುಂದಿಟ್ಟಿದ್ದಾರೆ. ಅಮ್ಮಾ, ಯಲ್ಲಮ್ಮ ನನಗೆ ನೀನು ಸಹಾಯ ಮಾಡಿದ್ದೀಯಾ. ಆದರೆ ನನಗೆ ಕಷ್ಟ ಬಂದಾಗ ಮಾತ್ರ ನೀನು ನೆನಪಾಗ್ತೀಯ ಕ್ಷಮಿಸು. ನನಗೆ ಸಹಾಯ ಮಾಡು. ನನ್ನ ಗಂಡ ಸಿಕ್ಕ ಸಿಕ್ಕವರಿಗೆಲ್ಲಾ ಹಣ ಕೊಡುತ್ತಾನೆ. ಅವನಿಗೆ ಬುದ್ಧಿ ಕೊಡು. ಹಾಗೆಯೇ ನನ್ನ ತಂಗಿಯರು ತಪ್ಪು ಮಾಡಿದರೆ ಅವರನ್ನ ಕ್ಷಮಿಸಿಬಿಡು. ನಂಜನಗೂಡು ನಲ್ಲಿ ಇರುವ ಆಸ್ತಿ ನನಗೆ ಸಿಗೋ ಹಾಗೆ ಮಾಡು ಎಂದು ಒಬ್ಬರು ಬರೆದಿದ್ದಾರೆ.

    ಕೈ ಮುಗಿವೆ ತಾಯಿ, ಎಸ್‍ಎಸ್‍ಎಲ್‍ಸಿ ಪಾಸ್ ಮಾಡಿಸು ಎಂದು ಕೇಳಿದ್ದಾರೆ. ಮತ್ತೊಂದು ಪತ್ರದಲ್ಲಿ ವ್ಯಕ್ತಿ ಸರ್ವನಾಶ ಮಾಡುವಂತೆ ಮಹಿಳೆಯೊಬ್ಬರು ದೇವಿಗೆ ಹರಕೆ ಮಾಡಿದ್ದಾರೆ. ಆತನ ಉದ್ಯೋಗ ಹಾಳು ಮಾಡು. ಆತನ ಆಯುಷ ಕಿತ್ಕೋ. ಈ ಹರಕೆ ಈಡೇರಿದ್ರೆ ನನಗೆ ತಿಂಗಳಿಗೆ ಬರೋ ಆದಾಯದಲ್ಲಿ ಅರ್ಧದಷ್ಟು ನಿನ್ನ ಹುಂಡಿಗೆ ಹಾಕುತ್ತೇನೆ ಎಂದು ಬರೆದಿದ್ದಾರೆ.

    ಈ ಹಿಂದೆ ಬೆಂಗಳೂರಿನ ಬನಶಂಕರಿಯಮ್ಮನಿಗೂ ಇದೆ ರೀತಿ ಚಿತ್ರವಿಚಿತ್ರ ಬೇಡಿಕೆಗಳನ್ನು ಭಕ್ತರು ದೇವಿಯ ಮುಂದಿಟ್ಟಿದ್ದಾರೆ. ಈ ಸಲ ಬೆಳಗಾವಿಯ ಸವದತ್ತಿಯಲ್ಲಿರೋ ಯಲ್ಲಮ್ಮನ ಸರದಿ ಸವದತ್ತಿ ಯಲ್ಲಮ್ಮನಿಗೆ ಬರೆದಿದ್ದಾರೆ. ಇಲ್ಲಿಗೆ ದೂರದೂರುಗಳಿಂದ ಲಕ್ಷಾಂತರ ಜನ ಬಂದು ತಮ್ಮ ಇಷ್ಟಾರ್ಥಗಳನ್ನು ಪತ್ರದಲ್ಲಿ ಬರೆದು ಹುಂಡಿಗೆ ಹಾಕುವುದು ಇಲ್ಲಿನ ವಿಶೇಷ. ಹೀಗೆ ಹರಕೆ ರೂಪದಲ್ಲಿ ಹಾಕಿದ ನೂರಾರು ಪತ್ರಗಳು ಹುಂಡಿಯ ಹಣ ಎಣಿಕೆ ಮಾಡುವಾಗ ಸಿಕ್ಕಿದ್ದು, ಭಕ್ತರ ಈ ಬೇಡಿಕೆ ಪತ್ರಗಳನ್ನ ಕಂಡ ಹುಂಡಿ ಎಣಿಕೆ ಸಿಬ್ಬಂದಿ ಅಚ್ಚರಿಗೊಂಡಿದ್ದಾರೆ.

  • ಐಟಿಯ 108 ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ: ಚಿಂದಿಯಾದ ಪತ್ರದಲ್ಲಿ ಏನಿತ್ತು?

    ಐಟಿಯ 108 ಪ್ರಶ್ನೆಗಳಿಗೆ ಉತ್ತರಿಸಿದ ಡಿಕೆಶಿ: ಚಿಂದಿಯಾದ ಪತ್ರದಲ್ಲಿ ಏನಿತ್ತು?

    ಬೆಂಗಳೂರು: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ 108 ಪ್ರಶ್ನೆಗಳಿಗೆ ಇಂಧನ ಸಚಿವ ಡಿಕೆ ಶಿವಕುಮಾರ್ ಜಾಣತನದಿಂದ ಉತ್ತರ ನೀಡಿದ್ದಾರೆ. ಒಟ್ಟು 102 ಕೊಟಿ ರೂ. ಆಸ್ತಿ ಘೋಷಣೆ ಮಾಡಿರುವ ಡಿಕೆ ಶಿವಕುಮಾರ್, ಮನೆ ಅಥವಾ ಬ್ಯಾಂಕ್‍ಗಳಲ್ಲಿ ಯಾವುದೇ ಲಾಕರ್ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಮಗಳ ಹೆಸರಲ್ಲಿ 74 ಕೋಟಿ ಆಸ್ತಿ ಖರೀದಿ ಮಾಡಿದ್ದು, ಇದಕ್ಕೆ ಸ್ನೇಹಿತರು ಮತ್ತು ಆತ್ಮಿಯರಿಂದ ಸಾಲ ಪಡೆದಿರುವುದಾಗಿ ತಿಳಿಸಿದ್ದಾರೆ. ಮಿನರ್ವ ಮಿಲ್ಸ್‍ನಲ್ಲಿ ತಂದೆ ಹೆಸರಿನಲ್ಲಿ ಪಾಲುದಾರಿಕೆ ಇದೆ. ಆದರೆ ತಂದೆ ಐಟಿ ರಿಟನ್ರ್ಸ್ ಸಲ್ಲಿಸಿಲ್ಲ ಎಂದು ತಿಳಿದುಬಂದಿದೆ.

    ಕಳೆದ ವರ್ಷದ ಆಗಸ್ಟ್ 2ರಂದು ನಡೆದಿದ್ದ ಐಟಿ ದಾಳಿ ಡಿಕೆ ಶಿವಕುಮಾರ್ ಮನೆಯಲ್ಲಿ ಒಟ್ಟು 43 ಕೋಟಿ ನಗದು ಪತ್ತೆಯಾಗಿತ್ತು. ಇದರಲ್ಲಿ 8.83 ಕೋಟಿಗೆ ದಾಖಲೆ ಒದಗಿಸಲು ಡಿಕೆಶಿ ವಿಫಲರಾಗಿದ್ದಾರೆ. ಐಟಿ ಅಧಿಕಾರಿಗಳು ದಾಳಿ ಮಾಡಿದ್ದ ವೇಳೆ ಸಚಿವ ಡಿಕೆ ಶಿವಕುಮಾರ್ ಕಾಗದಗಳನ್ನು ಹರಿಯುತ್ತಾ ಕುಳಿತಿದ್ರು ಎನ್ನಲಾಗಿದೆ. ಇದನ್ನೂ ಓದಿ: ಜನಾಶೀರ್ವಾದ ಯಾತ್ರೆ ಶುರುಮಾಡಿದ್ದಕ್ಕೆ ಐಟಿ ಕಾಟ, ಇಡಿ- ಸಿಬಿಐಗೆ ರೆಫರ್ ಮಾಡ್ಲಿ, ಪರಪ್ಪನ ಅಗ್ರಹಾರಕ್ಕಾದ್ರೂ ಕಳಿಸಲಿ ಹೆದ್ರಲ್ಲ- ಡಿಕೆಶಿ

    ಚಿಂದಿಯಾದ ಪತ್ರದಲ್ಲಿ ಏನಿತ್ತು?
    ಕಾಂಗ್ರೆಸ್ ಹೆಡ್ ಆಫೀಸ್‍ಗೆ 3 ಕೋಟಿ ರೂಪಾಯಿ ಸಂದಾಯ ಮಾಡಿದ್ದಾರೆ ಎನ್ನಲಾದ ಮಾಹಿತಿ ಚಿಂದಿಯಾದ ಪತ್ರದಲ್ಲಿ ಇತ್ತು ಎಂದು ಮೂಲಗಳು ಮಾಹಿತಿ ನೀಡಿವೆ. ಶೈಲೆಂದರ್‍ನಿಂದ ಮೂರು ಬಾರಿ ಒಟ್ಟು 5 ಕೋಟಿ ರೂ.(1 ಕೋಟಿ, 2.5 ಕೋಟಿ, 1.5 ಕೋಟಿ ರೂ.) ಹಣ ಜಮೆ ಮಾಡಿದ್ದು, ಬಿ2/107 ಮನೆಯಲ್ಲಿದ್ದ ಹಣವನ್ನು ಬಿ5/201 ಮನೆಗೆ ತೆಗೆದುಕೊಂಡು ಹೋಗುವಂತೆ ಸೂಚನೆ ನೀಡಲಾಗಿತ್ತು. ಆಗಸ್ಟ್ 1, 2017ರಂದು ದೆಹಲಿಗೆ ವಿಮಾನದಲ್ಲಿ ಹಣ ತೆಗೆದುಕೊಂಡ ಹೋಗಿ ದೆಹಲಿಯ ಖಾಸಗಿ ಹೋಟೆಲ್‍ನ ರೂಂ ನಂಬರ್ 2001ರಲ್ಲಿ ಹಣ ಸಂದಾಯದ ಬಗ್ಗೆ ಮಾಹಿತಿ ಪತ್ರದಲ್ಲಿ ಇತ್ತು.  ಇದನ್ನೂ ಓದಿ: Exclusive: ಡಿಕೆ ಶಿವಕುಮಾರ್ ಮಗಳು ಐಶ್ವರ್ಯಗೆ ಐಟಿ ಕೇಳಿದ ಪ್ರಶ್ನೆಗಳು ಏನು?

    ಯಾವೆಲ್ಲ ಪ್ರಕರಣ ದಾಖಲಾಗಿವೆ?
    ಡಿಕೆಶಿ ವಿರುದ್ಧ ಐಟಿ ಅಧಿಕಾರಿಗಳು ಆದಾಯ ತೆರಿಗೆ ಕಾಯ್ದೆ 276 ಸಿ (ತೆರಿಗೆ ವಂಚನೆ) ಅಡಿಯಲ್ಲಿ ಕೇಸ್ ದಾಖಲು ದಾಖಲಾಗಿದ್ದು, 1 ಲಕ್ಷಕ್ಕಿಂತ ಹೆಚ್ಚು ತೆರಿಗೆ ವಂಚನೆ ಮಾಡಿದ್ದು ಸಾಬೀತಾದ್ರೆ 6 ತಿಂಗಳಿಂದ 7 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ. ಐಪಿಸಿ ಸೆಕ್ಷನ್ 201, 204 (ಸಾಕ್ಷಿ ನಾಶ, ಸುಳ್ಳು ಮಾಹಿತಿ ) ಅಡಿಯಲ್ಲೂ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಐಟಿ ಡ್ರಿಲ್ಲಿಂಗ್: ಅಧಿಕಾರಿಗಳ ಆ ಎಲ್ಲ ಪ್ರಶ್ನೆಗಳಿಗೆ ಡಿಕೆಶಿ ಉತ್ತರಿಸಿದ್ದು ಹೀಗೆ

  • ನನ್ನ ಜಮೀನು ವಶಪಡಿಸಿಕೊಂಡು ಸಾಲ ತೀರಿಸಿ: ಸಿಎಂ, ಮೋದಿ, ರಾಹುಲ್ ಗಾಂಧಿಗೆ ಮಂಡ್ಯ ರೈತ ಮನವಿ

    ನನ್ನ ಜಮೀನು ವಶಪಡಿಸಿಕೊಂಡು ಸಾಲ ತೀರಿಸಿ: ಸಿಎಂ, ಮೋದಿ, ರಾಹುಲ್ ಗಾಂಧಿಗೆ ಮಂಡ್ಯ ರೈತ ಮನವಿ

    ಮಂಡ್ಯ: ನನ್ನ ಜಮೀನನ್ನು ವಶಪಡಿಸಿಕೊಂಡು ಸಾಲವನ್ನು ತೀರಿಸಿ ಎಂದು ರೈತರೊಬ್ಬರು ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಹಲವರಿಗೆ ಕಳೆದೊಂದು ವರ್ಷದಿಂದ ಮನವಿ ಮಾಡುತ್ತಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಬೋಳಾರೆ ಗ್ರಾಮದಲ್ಲಿ ನಡೆದಿದೆ.

    ಗ್ರಾಮದ ರೈತ ಬಿ. ಜವರೇಗೌಡ ಅವರಿಗೆ ಸುಮಾರು ಎರಡು ಎಕರೆ ಹತ್ತು ಗುಂಟೆ ಜಮೀನಿದೆ. ಇವರು ವ್ಯವಸಾಯದ ಜೊತೆಗೆ ತೃತೀಯ ದರ್ಜೆ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು. ಉದ್ಯೋಗ ಖಾತರಿ ಯೋಜನೆಯಡಿ ಮಾಡಿಸಿದ ಕೆಲಸಕ್ಕೆ ಹಣ ಸಂದಾಯವಾಗಿಲ್ಲವಂತೆ. ಅಲ್ಲದೆ ಬರದಿಂದಾಗಿ ಕಳೆದ ಮೂರು ನಾಲ್ಕು ವರ್ಷದಿಂದ ಸರಿಯಾಗಿ ಬೆಳೆಯೂ ಕೈ ಸೇರಿಲ್ಲ. ಇವೆಲ್ಲದರ ನಡುವೆ ಸಾಲ ಮಾಡಿ ಮೂವರು ಹೆಣ್ಣು ಮಕ್ಕಳನ್ನು ಮದುವೆ ಮಾಡಿದ್ದಾರೆ. ಇದರಿಂದಾಗಿ ಅಸಲು ಬಡ್ಡಿ ಎಲ್ಲ ಸೇರಿ ಸುಮಾರು 30 ಲಕ್ಷದಷ್ಟು ಸಾಲವಾಗಿದೆ.

    ಇದನ್ನು ತೀರಿಸಲು ದಾರಿ ಕಾಣದ ರೈತ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಸೇರಿದಂತೆ ಹಲವರಿಗೆ ಪತ್ರ ಬರೆದು ನನ್ನ ಜಮೀನನ್ನು ವಶಕ್ಕೆ ಪಡೆದು ಸಾಲ ತೀರಿಸಿ. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ ಎಂದು ಮನವಿ ಮಾಡಿದ್ದಾರೆ. ಆದರೆ ಕಳೆದೊಂದು ವರ್ಷದಿಂದ ಮನವಿ ಮಾಡುತ್ತಿದ್ದರೂ, ಯಾರೊಬ್ಬರೂ ಸಹಾಯಕ್ಕೆ ಬರುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

  • ಮೋದಿ, ಯುಪಿ ಸಿಎಂಗೆ ರಕ್ತದಲ್ಲಿ ಪತ್ರ ಬರೆದ ರೇಪ್ ಸಂತ್ರಸ್ತೆ!

    ಮೋದಿ, ಯುಪಿ ಸಿಎಂಗೆ ರಕ್ತದಲ್ಲಿ ಪತ್ರ ಬರೆದ ರೇಪ್ ಸಂತ್ರಸ್ತೆ!

    ಲಕ್ನೋ: ರೇಪ್ ಸಂತ್ರಸ್ತೆಯೊಬ್ಬರು ಆರೋಪಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ರಕ್ತದಲ್ಲಿ ಪತ್ರ ಬರೆದು ಮನವಿ ಮಾಡಿಕೊಂಡಿದ್ದಾರೆ.

    ಪತ್ರದಲ್ಲಿ ಉನ್ನತ ಅಧಿಕಾರಿಗಳ ಪರಿಚಯವಿರುವುದರಿಂದ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಅಲ್ಲದೇ ಆರೋಪಿಗಳು ಕೇಸ್ ವಾಪಸ್ ಪಡೆಯುವಂತೆ ನನ್ನ ಮೇಲೆ ಒತ್ತಡ ಹಾಕುತ್ತಿದ್ದಾರೆ. ಹೀಗಾಗಿ ನನಗೆ ನ್ಯಾಯಬೇಕು ಇಲ್ಲವೆಂದಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪತ್ರ ಬರೆದಿದ್ದಾರೆ.

    ಸಂತ್ರಸ್ತೆ ಈ ಪತ್ರವನ್ನು ಜನವರಿ 20ರಂದು ಬರೆದಿದ್ದು, ಈ ಪ್ರಕರಣದಕ್ಕೆ ಸಂಬಂಧಿಸಿದಂತೆ ಅಲ್ಲಿನ ಪೊಲೀಸರನ್ನು ಸಂಪರ್ಕಿಸಿದಾಗ ಅಲ್ಲಿ ಎಎಸ್‍ಪಿ ಶಶಿಶೇಖರ್ ಸಿಂಗ್ ಅವರು, ಸಂತ್ರಸ್ತೆಯ ತಂದೆ ನೀಡಿದ ದೂರಿನಂತೆ 2017ರ ಮಾರ್ಚ್ 24ರಂದು ಆರೋಪಿಗಳಾದ ದಿವ್ಯ ಪಾಂಡೇ ಹಾಗೂ ಅಂಕಿತ್ ವರ್ಮಾ ವಿರುದ್ಧ ಎಫ್‍ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

    ನನ್ನ ಮಗಳ ಮೇಲೆ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಆ ಬಳಿಕ ಆಕೆಗೆ ಬೆದರಿಕೆ ಹಾಕುತ್ತಿದ್ದಾರೆ ಅಂತ ಆಕೆಯ ತಂದೆ ದೂರಿನಲ್ಲಿ ತಿಳಿಸಿದ್ದರು.

    2017ರ ಅಕ್ಟೋಬರ್ ತಿಂಗಳಿನಲ್ಲಿ ರಾಯ್ ಬರೇಲಿಯಲ್ಲಿ ವ್ಯಕ್ತಿಯೊಬ್ಬ ನಕಲಿ ಫೇಸ್‍ಬುಕ್ ಖಾತೆ ತೆರೆದು ಅದರಲ್ಲಿ ಹುಡುಗಿಯೊಬ್ಬಳ ಫೋಟೋ ಹಾಕಿ ಅದರಲ್ಲಿ ಅಶ್ಲೀಲ ಫೋಟೋಗಳನ್ನು ಫೋಸ್ಟ್ ಮಾಡುತ್ತಿದ್ದವನ ವಿರುದ್ಧ ಎಫ್‍ಐಆರ್ ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಯುತ್ತಿದೆ ಅಂತ ಸಿಂಗ್ ಹೇಳಿದ್ದಾರೆ.

  • ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗ ಬ್ರೇಕ್

    ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗ ಬ್ರೇಕ್

    ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ 7 ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿ ಹೊರಡಿಸಿದ್ದ ಆದೇಶಕ್ಕೆ ಚುನಾವಣಾ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ.

    ಚುನಾವಣಾ ಪ್ರಕ್ರಿಯೆ ಮುಗಿಯುವರೆಗೂ ಯಾವುದೇ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ ಎಂದು ಜನವರಿ 17 ರಂದು ರಾಜ್ಯಸರ್ಕಾರಕ್ಕೆ ಚುನಾವಣಾ ಆಯೋಗ ಪತ್ರ ಬರೆದಿತ್ತು. ಅದರೆ ಸರ್ಕಾರ ಸೋಮವಾರ 7 ಜಿಲ್ಲೆಗಳ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಆದೇಶಿದೆ. ಈ ಸಂಬಂಧ ಮಂಗಳವಾರ ವರ್ಗಾವಣೆ ಆದೇಶ ಹೊರಡಿಸಿದ್ದು ಯಾಕೆ ಎಂದು ಪ್ರಶ್ನಿಸಿ ವಿವರಣೆ ನೀಡುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಅವರಿಗೆ ಚುನಾವಣಾ ಆಯೋಗ ಪತ್ರ ಬರೆದಿದೆ. ಇದನ್ನೂ ಓದಿ: ರಾಜಕೀಯದಿಂದ ದೂರ ಉಳಿದು ಉತ್ತಮ ಆಡಳಿತ ನೀಡುವುದಷ್ಟೇ ನನ್ನ ಗುರಿ: ಹಾಸನ ಡಿಸಿ ರೋಹಿಣಿ ಸಿಂಧೂರಿ

    ಆಯೋಗದ ಪತ್ರದಲ್ಲಿ ಏನಿದೆ?
    ಫೆಬ್ರವರಿ 28ಕ್ಕೆ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದ್ದು, ಮತದಾರ ಪಟ್ಟಿ ಪರಿಷ್ಕರಣೆ ಮುಗಿಯುವವರೆಗೆ ವರ್ಗಾವಣೆ ಬೇಡ. ವರ್ಗಾವಣೆ ಆದೇಶ ಜಾರಿಯನ್ನು ಕೂಡಲೇ ನಿಲ್ಲಿಸಬೇಕು. ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವವರನ್ನ ಅದೇ ಸ್ಥಾನದಲ್ಲಿ ಮುಂದುವರಿಸಬೇಕು. ವರ್ಗಾವಣೆ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಗಮನಕ್ಕೆ ತರಬೇಕು. ವರ್ಗಾಯಿತ ಜಿಲ್ಲೆಗಳಿಗೆ ತೆರಳದಂತೆ 7 ಜಿಲ್ಲಾಧಿಕಾರಿಗಳಿಗೂ ಆಯೋಗ ಸೂಚನೆ ನೀಡಿದೆ. ಇದನ್ನೂ ಓದಿ: ಹಣ ಹೊಡೆಯಲು ಬಿಟ್ಟಿಲ್ಲ ಅಂತ ಹೆಣ್ಮಗಳ ವರ್ಗ, ಸಿಎಂ ಜೊತೆ ವೇದಿಕೆ ಏರಲ್ಲ- ಸರ್ಕಾರಕ್ಕೆ ಥೂ ಎಂದು ಉಗಿದ ಹೆಚ್‍ಡಿಡಿ